Tag: ವಿದ್ವತ್

  • ಅಂಬಿ ಪಾರ್ಥಿವ ಶರೀರ ವೀಕ್ಷಣೆಗೆ ನಲಪಾಡ್‍ಗೆ ಅವಕಾಶ ನೀಡಿ ಮುಜುಗರಕ್ಕೆ ಒಳಗಾದ ಪೊಲೀಸರು

    ಅಂಬಿ ಪಾರ್ಥಿವ ಶರೀರ ವೀಕ್ಷಣೆಗೆ ನಲಪಾಡ್‍ಗೆ ಅವಕಾಶ ನೀಡಿ ಮುಜುಗರಕ್ಕೆ ಒಳಗಾದ ಪೊಲೀಸರು

    ಬೆಂಗಳೂರು: ನಟ ಅಂಬರೀಶ್ ಪಾರ್ಥಿವ ಶರೀರವನ್ನು ಎಚ್‍ಎಎಲ್ ನಲ್ಲಿ ವೀಕ್ಷಿಸಲು ವಿದ್ವತ್ ಮೇಲಿನ ಹಲ್ಲೆ ಪ್ರಕರಣದ ಆರೋಪಿಯಾಗಿರುವ ನಲಪಾಡ್‍ಗೆ ಅವಕಾಶ ಕೊಟ್ಟು ಬೆಂಗಳೂರು ಪೊಲೀಸರು ಈಗ ಮುಜುಗರಕ್ಕೆ ಒಳಗಾಗಿದ್ದಾರೆ.

    ಸೋಮವಾರ ಬೆಳಗ್ಗೆ ಮಂಡ್ಯದ ವಿಶ್ವೇಶ್ವರಯ್ಯ ಸ್ಟೇಡಿಯಂನಿಂದ ವಾಯುಸೇನೆಯ ಹೆಲಿಕಾಪ್ಟರ್ ನಲ್ಲಿ ಅಂಬಿ ಪಾರ್ಥಿವ ಶರೀರವನ್ನು ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ತರಲಾಗಿತ್ತು. ಈ ಸಂದರ್ಭದಲ್ಲಿ ನಲಪಾಡ್ ಎಚ್‍ಎಎಲ್ ಪ್ರವೇಶಿಸಿದ್ದಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಗರಂ ಆಗಿದ್ದಾರೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

    ಕಾನೂನು ಪ್ರಕಾರ ನಲಪಾಡ್ ಒಳ ಪ್ರವೇಶಿಸಲು ಅವಕಾಶ ಇಲ್ಲ. ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದ್ದು, ಕೊಲೆ ಯತ್ನದ ಆರೋಪಿಯನ್ನು ಎಚ್‍ಎಎಲ್ ಒಳಗಡೆ ಬಿಟ್ಟಿದ್ದು ಭದ್ರತಾ ವೈಫಲ್ಯ. ಈ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳು ಗರಂ ಆಗಿದ್ದು, ಸ್ಥಳದಲ್ಲಿದ್ದ ಕಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದ್ದಾರೆ.

     ನಲಪಾಡ್‍ ಎಚ್‍ಎಎಲ್ ಪ್ರವೇಶಿಸಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳು ಕೇಳಿದ್ದಕ್ಕೆ ಕುಟುಂಬದ ಸದಸ್ಯರ ಜೊತೆ ಒಳಗಡೆ ಹೋಗಿದ್ದಾರೆ ಪೊಲೀಸರು ಹಾರಿಕೆಯ ಉತ್ತರ ನೀಡಿದ್ದರು. ವಿಐಪಿಗಳಿಗೆ ಮತ್ತು ಕುಟುಂಬಸ್ಥರಿಗೆ ಮಾತ್ರ ಅವಕಾಶ ನೀಡಿದ್ದರೂ ನಲಪಾಡ್ ಪ್ರವೇಶಿಸಿದ್ದು ಹೇಗೆ ಉತ್ತರ ನೀಡುವಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಈಗ ಸೂಚಿಸಿದ್ದಾರೆ. ಕೆಲವು ಪೊಲೀಸ್ ಅಧಿಕಾರಿಗಳ ಮುಂದೆಯೇ ನಲಪಾಡ್ ಎಚ್‍ಎಎಲ್ ಒಳಗಡೆ ಹೋಗಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ.

    ನಲಪಾಡ್ ಮೇಲೆ ಯಾವೆಲ್ಲ ಕೇಸ್ ಹಾಕಲಾಗಿದೆ?
    ಐಪಿಸಿ ಸೆಕ್ಷನ್ 307(ಕೊಲೆ ಯತ್ನ), 341(ಅಕ್ರಮ ಬಂಧನ), 504(ಅವ್ಯಾಚ್ಯ ಶಬ್ಧಗಳಿಂದ ನಿಂದನೆ), 143, 144- 146, 147, 149 (ಅಕ್ರಮ ಗುಂಪುಗಾರಿಕೆ), 326(ಗಂಭೀರ ಗಾಯ), 506 ಬಿ (ಪ್ರಾಣಬೆದರಿಕೆ) ಕೇಸ್ ಹಾಕಲಾಗಿದೆ.

  • ವಿದೇಶಕ್ಕೆ ಹೋಗೋಕೆ ನಲಪಾಡ್ ಕೋರ್ಟ್ ಗೆ ಮನವಿ

    ವಿದೇಶಕ್ಕೆ ಹೋಗೋಕೆ ನಲಪಾಡ್ ಕೋರ್ಟ್ ಗೆ ಮನವಿ

    ಬೆಂಗಳೂರು: ವಿದೇಶಕ್ಕೆ ತೆರಳಲು ತನಗೆ ಅನುಮತಿ ನಿಡಿ ಅಂತ ಶಾಸಕ ಹ್ಯಾರೀಸ್ ಪುತ್ರ ನಲಪಾಡ್ ಹೈಕೋರ್ಟ್ ಮೊರೆ ಹೋಗಿದ್ದಾನೆ. ವಿದ್ವತ್ ಮೇಲೆ ನಲಪಾಡ್ ಮತ್ತು ಗ್ಯಾಂಗ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತುಗಳ ಸಡಿಲಿಕೆ ಕೋರಿ ನಲಪಾಡ್ ಈ ಅರ್ಜಿ ಸಲ್ಲಿಸಿದ್ದಾನೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ವೇಳೆ ನಗರ ಬಿಟ್ಟು ತೆರಳದಂತೆ ನಲಪಾಡ್ ಗೆ ಕೋರ್ಟ್ ಷರತ್ತು ವಿಧಿಸಿತ್ತು. ಇದೀಗ ನನ್ನ ಸಹೋದರ ಲಂಡನ್ ನಲ್ಲಿ ವಾಸವಾಗಿದ್ದಾನೆ. ಹೀಗಾಗಿ ತಮ್ಮನನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಿ. 15 ದಿನಗಳ ಕಾಲ ವಿದೇಶಕ್ಕೆ ಪ್ರಯಾಣ ಬೆಳೆಸಲು ಅವಕಾಶ ನೀಡಿ ಅಂತ ಮನವಿ ಮಾಡಿಕೊಂಡಿದ್ದಾನೆ.

    ಈ ಸಂಬಂಧ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆಯನ್ನು ಆಗಸ್ಟ್ 27 ಕ್ಕೆ ಮುಂದೂಡಿದೆ. ಇದನ್ನೂ ಓದಿ: ಕಷ್ಟ ಅಂದ್ರೆ ಏನು ಅನ್ನೋದು ಗೊತ್ತಾಗಿದೆ, ರಾತ್ರಿ 9 ಗಂಟೆಯ ನಂತ್ರ ಎಲ್ಲಿಗೂ ಬರಲ್ಲ: ನಲಪಾಡ್

    ಏನಿದು ಪ್ರಕರಣ?:
    ನಗರದ ಫರ್ಜಿ ಕೆಫೆ ಯಲ್ಲಿ ಫೆಬ್ರವರಿ 17ರ ರಾತ್ರಿ ನಡೆದ ಪಾರ್ಟಿ ಆಯೋಜನೆಗೊಂಡಿತ್ತು. ನಗರದ ಶ್ರೀಮಂತ ಮನೆತನದ ಯುವಕ, ಯುವತಿಯರು ಪಾಲ್ಗೊಂಡಿದ್ದ ಕೆಫೆಯಲ್ಲಿ ಗಾಯಗೊಂಡಿದ್ದ ವಿದ್ವತ್ ಕಾಲು ಚಾಚಿ ಕುಳಿತಿದ್ದರು. ಇದನ್ನು ಕಂಡ ನಲಪಾಡ್ ನನ್ನ ಮುಂದೆ ದರ್ಪದಿಂದ ಕಾಲು ಚಾಚಿಕೊಂಡು ಕೂತಿದ್ದೀಯಾ ಎಂದು ವಿದ್ವತ್ ಮೇಲೆ ಜಗಳಕ್ಕೆ ನಿಂತಿದ್ದಾನೆ. ನಂತರ ಕ್ಷಮೆ ಕೇಳುವಂತೆ ಹೇಳಿದ್ದಕ್ಕೆ ವಿದ್ವತ್ ನಿರಾಕರಿಸಿದ್ದಾರೆ. ಇದರಿದ ರೊಚ್ಚಿಗೆದ್ದ ನಲಪಾಡ್ ಮೊದಲು ವಿದ್ವತ್ ಹೊಟ್ಟೆ ಮತ್ತು ಮುಖದ ಭಾಗಕ್ಕೆ ಏಟು ಕೊಟ್ಟಿದ್ದಾನೆ. ನಲಪಾಡ್ ಹೊಡೆದ ಬಳಿಕ ಆತನ ಗ್ಯಾಂಗ್ ನವರು ವಿದ್ವತ್ ಮೇಲೆ ಮನಸೋ ಇಚ್ಚೇ ಹಲ್ಲೆ ನಡೆಸಿದ್ದಾರೆ. ನಂತರ ಚಿಕಿತ್ಸೆಗೆಂದು ವಿದ್ವತ್ ಮಲ್ಯ ಆಸ್ಪತ್ರೆಗೆ ತೆರಳಿದಾಗ ಅಲ್ಲಿಗೂ ಹೋಗಿ ನಲಪಾಡ್ ಮತ್ತು ತಂಡ ಹಲ್ಲೆ ಮಾಡಿತ್ತು.  ಇದನ್ನೂ ಓದಿ: ನಮ್ಮ ಅಣ್ಣನಿಗೆ ಹೊಡೆದಿದ್ದೆ ಸಾಕು, ನನ್ನ ಬಿಟ್ಬಿಡಿ- ನಲಪಾಡ್ ಸಹೋದರ

    ನಲಪಾಡ್ ಮೇಲೆ ಯಾವೆಲ್ಲ ಕೇಸ್ ಹಾಕಲಾಗಿತ್ತು?
    ಐಪಿಸಿ ಸೆಕ್ಷನ್ 307(ಕೊಲೆ ಯತ್ನ) ಜಾಮೀನು ರಹಿತ ಕೇಸಾಗಿದ್ದು ಉಳಿದ ಸೆಕ್ಷನ್ ಗಳಾದ 341(ಅಕ್ರಮ ಬಂಧನ), 504(ಅವ್ಯಾಚ್ಯ ಶಬ್ಧಗಳಿಂದ ನಿಂದನೆ), 143, 144- 146, 147, 149 (ಅಕ್ರಮ ಗುಂಪುಗಾರಿಕೆ), 326(ಗಂಭೀರ ಗಾಯ), 506 ಬಿ (ಪ್ರಾಣಬೆದರಿಕೆ) ಜಾಮೀನು ಸಿಗುವ ಕೇಸುಗಳಾಗಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಮ್ಮ ಅಣ್ಣನಿಗೆ ಹೊಡೆದಿದ್ದೆ ಸಾಕು, ನನ್ನ ಬಿಟ್ಬಿಡಿ- ನಲಪಾಡ್ ಸಹೋದರ

    ನಮ್ಮ ಅಣ್ಣನಿಗೆ ಹೊಡೆದಿದ್ದೆ ಸಾಕು, ನನ್ನ ಬಿಟ್ಬಿಡಿ- ನಲಪಾಡ್ ಸಹೋದರ

    ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ನಲಪಾಡ್ ಗೆ ಇಂದು ಹೈ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ನಲಪಾಡ್ ಸಹೋದರ ಉಮರ್ ನಲಪಾಡ್ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

    ನಮ್ಮ ಅಣ್ಣನಿಗೆ ಹೊಡೆದಿದ್ದೆ ಸಾಕು, ನನ್ನ ಬಿಟ್ಬಿಡಿ ಅಂತ ಮಾಧ್ಯಮಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಅಲ್ಲದೇ ಮೊಹಮ್ಮದ್ ನಲಪಾಡ್ ಗೆ ಜಾಮೀನು ಸಿಕ್ಕಿದ್ದಕ್ಕೆ ಹರ್ಷ ವ್ಯಕ್ತಪಡಿಸಿ, ಮನೆಯ ಬಳಿ ಇದ್ದ ಸ್ನೇಹಿತರಿಗೆ ದೂರದಿಂದಲೇ ಶುಭಕೋರಿದ್ರು.  ಇದನ್ನೂ ಓದಿ: ಮೊಹಮ್ಮದ್ ನಲಪಾಡ್ ಸೆರೆವಾಸ ಅಂತ್ಯ – ವಕೀಲ ಶ್ಯಾಮ್ ಸುಂದರ್ ಹೇಳಿದ್ದು ಹೀಗೆ

    ಇತ್ತ ಮಗನಿಗೆ ಜಾಮೀನು ಮಂಜೂರಾಗುತ್ತಿದ್ದಂತೆ ಹ್ಯಾರೀಸ್ ಮನೆಯಲ್ಲಿ ವಿಶೇಷ ಪ್ರಾರ್ಥನೆ ಮಾಡಿದ್ದಾರೆ. ಮಗನಿಗಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಮೊಹಮ್ಮದ್ ನಲಪಾಡ್‍ಗೆ ಜಾಮೀನು ಮಂಜೂರು – ಹೈಕೋರ್ಟ್ ನಿಂದ ಷರತ್ತು ಬದ್ಧ ಬೇಲ್

    ನಲಪಾಡ್ ಮನೆಗೆ ಬಂದಾಗ ಹೆಚ್ಚು ಜನ ಸೇರಬಾರದು. ಹೆಚ್ಚು ಜನ ಸೇರಿದ್ರೆ ಗಲಾಟೆಯಾಗ್ಬಹುದು. ಹೀಗಾಗಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಕಬ್ಬನ್ ಪಾರ್ಕ್ ಎಸಿಪಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

  • ಮೊಹಮ್ಮದ್ ನಲಪಾಡ್‍ಗೆ ಜಾಮೀನು ಮಂಜೂರು – ಹೈಕೋರ್ಟ್ ನಿಂದ ಷರತ್ತು ಬದ್ಧ ಬೇಲ್

    ಮೊಹಮ್ಮದ್ ನಲಪಾಡ್‍ಗೆ ಜಾಮೀನು ಮಂಜೂರು – ಹೈಕೋರ್ಟ್ ನಿಂದ ಷರತ್ತು ಬದ್ಧ ಬೇಲ್

    ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್ ಗೆ ಕೊನೆಗೂ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

    ಇಬ್ಬರ ಶ್ಯೂರಿಟಿಯೊಂದಿಗೆ ಜಾಮೀನು ಮಂಜೂರು ಮಾಡಲಾಗಿದ್ದು, ತನಿಖೆಗೆ ಸಹಕರಿಸಬೇಕು. ಅಲ್ಲದೇ ವಿಚಾರಣೆಗೆ ಕರೆದಾಗಲೆಲ್ಲಾ ಬರಬೇಕು. ಅಧೀನ ನ್ಯಾಯಾಲಯ ನೀಡುವ ಷರತ್ತಿಗೂ ಬದ್ಧವಾಗಿರಬೇಕು ಎಂದು ಹೈಕೋರ್ಟ್ ನ್ಯಾಯಾಧೀಶ ಮೈಕಲ್ ಡಿ.ಕುನ್ಹಾ ಆದೇಶ ನೀಡಿದ್ದಾರೆ.

    ಜಾಮೀನು ಮಂಜೂರು ಮಾಡಿದ ನಂತರದ ಪ್ರಕ್ರಿಯೆಗಳನ್ನು ನಲಪಾಡ್ ವಕೀಲರು ಆರಂಭಿಸಿದ್ದು, ಇಂದು ಸಂಜೆಯೊಳಗೆ ನಲಪಾಡ್ ಜೈಲಿನಿಂದ ಹೊರ ಬರುವ ಸಾಧ್ಯತೆಗಳಿವೆ. ಇತ್ತ ಪರಪ್ಪನ ಅಗ್ರಹಾರದಲ್ಲಿರುವ ನಲಪಾಡ್, ಜಾಮೀನು ಸಿಕ್ಕಿರುವ ಸುದ್ದಿ ತಿಳಿಯುತ್ತಿದ್ದಂತೆ ನಿಟ್ಟುಸಿರು ಬಿಟ್ಟಿದ್ದಾನೆ ಎಂದು ಪಬ್ಲಿಕ್ ಟಿವಿಗೆ ಮೂಲಗಳು ತಿಳಿಸಿವೆ.

    ಏನಿದು ಪ್ರಕರಣ?
    ನಗರದ ಫರ್ಜಿ ಕೆಫೆ ಯಲ್ಲಿ ಫೆಬ್ರವರಿ 17ರ ರಾತ್ರಿ ನಡೆದ ಪಾರ್ಟಿ ಆಯೋಜನೆಗೊಂಡಿತ್ತು. ನಗರದ ಶ್ರೀಮಂತ ಮನೆತನದ ಯುವಕ, ಯುವತಿಯರು ಪಾಲ್ಗೊಂಡಿದ್ದ ಕೆಫೆಯಲ್ಲಿ ಗಾಯಗೊಂಡಿದ್ದ ವಿದ್ವತ್ ಕಾಲು ಚಾಚಿ ಕುಳಿತಿದ್ದರು. ಇದನ್ನು ಕಂಡ ನಲಪಾಡ್ ನನ್ನ ಮುಂದೆ ದರ್ಪದಿಂದ ಕಾಲು ಚಾಚಿಕೊಂಡು ಕೂತಿದ್ದೀಯಾ ಎಂದು ವಿದ್ವತ್ ಮೇಲೆ ಜಗಳಕ್ಕೆ ನಿಂತಿದ್ದಾನೆ. ನಂತರ ಕ್ಷಮೆ ಕೇಳುವಂತೆ ಹೇಳಿದ್ದಕ್ಕೆ ವಿದ್ವತ್ ನಿರಾಕರಿಸಿದ್ದಾರೆ. ಇದರಿದ ರೊಚ್ಚಿಗೆದ್ದ ನಲಪಾಡ್ ಮೊದಲು ವಿದ್ವತ್ ಹೊಟ್ಟೆ ಮತ್ತು ಮುಖದ ಭಾಗಕ್ಕೆ ಏಟು ಕೊಟ್ಟಿದ್ದಾನೆ. ನಲಪಾಡ್ ಹೊಡೆದ ಬಳಿಕ ಆತನ ಗ್ಯಾಂಗ್ ನವರು ವಿದ್ವತ್ ಮೇಲೆ ಮನಸೋ ಇಚ್ಚೇ ಹಲ್ಲೆ ನಡೆಸಿದ್ದಾರೆ. ನಂತರ ಚಿಕಿತ್ಸೆಗೆಂದು ವಿದ್ವತ್ ಮಲ್ಯ ಆಸ್ಪತ್ರೆಗೆ ತೆರಳಿದಾಗ ಅಲ್ಲಿಗೂ ಹೋಗಿ ನಲಪಾಡ್ ಮತ್ತು ತಂಡ ಹಲ್ಲೆ ಮಾಡಿತ್ತು.

    ನಲಪಾಡ್ ಮೇಲೆ ಯಾವೆಲ್ಲ ಕೇಸ್ ಹಾಕಲಾಗಿದೆ?
    ಐಪಿಸಿ ಸೆಕ್ಷನ್ 307(ಕೊಲೆ ಯತ್ನ) ಜಾಮೀನು ರಹಿತ ಕೇಸಾಗಿದ್ದು ಉಳಿದ ಸೆಕ್ಷನ್ ಗಳಾದ 341(ಅಕ್ರಮ ಬಂಧನ), 504(ಅವ್ಯಾಚ್ಯ ಶಬ್ಧಗಳಿಂದ ನಿಂದನೆ), 143, 144- 146, 147, 149 (ಅಕ್ರಮ ಗುಂಪುಗಾರಿಕೆ), 326(ಗಂಭೀರ ಗಾಯ), 506 ಬಿ (ಪ್ರಾಣಬೆದರಿಕೆ) ಜಾಮೀನು ಸಿಗುವ ಕೇಸುಗಳಾಗಿವೆ.

  • ಹೈಕೋರ್ಟ್ ನಲ್ಲಿ ವಾದ-ಪ್ರತಿವಾದ ಮುಕ್ತಾಯ- ಇಂದು ನಲಪಾಡ್ ಜಾಮೀನು ಅರ್ಜಿ ತೀರ್ಪು

    ಹೈಕೋರ್ಟ್ ನಲ್ಲಿ ವಾದ-ಪ್ರತಿವಾದ ಮುಕ್ತಾಯ- ಇಂದು ನಲಪಾಡ್ ಜಾಮೀನು ಅರ್ಜಿ ತೀರ್ಪು

    ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರೀಸ್ ಪುತ್ರ ನಲಪಾಡ್‍ಗೆ ಜೈಲಾ ಅಥವಾ ಬೇಲಾ ಎಂಬುದು ಇಂದು ತೀರ್ಮಾನವಾಗುತ್ತದೆ.

    ಹೈಕೋರ್ಟ್ ನಲ್ಲಿ ವಾದ-ಪ್ರತಿವಾದ ಇಂದು ಮುಕ್ತಾಯ ಹಂತಕ್ಕೆ ತಲುಪಲಿದೆ. ಎರಡು ಕಡೆಯ ವಾದ-ಪ್ರತಿವಾದ ಆಲಿಸಿ ಹೈಕೋರ್ಟ್ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಹಾಗಾಗಿ ನಲಪಾಡ್‍ನ ಜಾಮೀನು ಅರ್ಜಿಯ ಭವಿಷ್ಯ ಇಂದು ನಿರ್ಧಾರವಾಗಲಿದೆ.

    ಚಾರ್ಜ್ ಶೀಟ್ ಸಲ್ಲಿಕೆಯಾಗೋವರೆಗೂ ಕಾದು ನಲಪಾಡ್ ಸೆಷನ್ ಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದನು. ಚಾರ್ಜ್ ಶೀಟ್ ಸಲ್ಲಿಸಿರೋ ಹಿನ್ನೆಲೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇಲ್ಲ. ಹಾಗಾಗಿ ಜಾಮೀನು ನೀಡಿ ಅಂತ ನಲಪಾಡ್ ಪರ ವಕೀಲ ಬಿ.ವಿ.ಆಚಾರ್ಯರ ಪ್ರಬಲ ವಾದವಾಗಿದೆ .

    ವಿದ್ವತ್- ಹಲ್ಲೆಗೊಳಗಾದ ಯುವಕ.

    ಏನಿದು ಪ್ರಕರಣ?
    ನಗರದ ಫರ್ಜಿ ಕೆಫೆ ಯಲ್ಲಿ ಫೆಬ್ರವರಿ 17ರ ರಾತ್ರಿ ನಡೆದ ಪಾರ್ಟಿ ಆಯೋಜನೆಗೊಂಡಿತ್ತು. ನಗರದ ಶ್ರೀಮಂತ ಮನೆತನದ ಯುವಕ, ಯುವತಿಯರು ಪಾಲ್ಗೊಂಡಿದ್ದ ಕೆಫೆಯಲ್ಲಿ ಗಾಯಗೊಂಡಿದ್ದ ವಿದ್ವತ್ ಕಾಲು ಚಾಚಿ ಕುಳಿತಿದ್ದರು. ಇದನ್ನು ಕಂಡ ನಲಪಾಡ್ ನನ್ನ ಮುಂದೆ ದರ್ಪದಿಂದ ಕಾಲು ಚಾಚಿಕೊಂಡು ಕೂತಿದ್ದೀಯಾ ಎಂದು ವಿದ್ವತ್ ಮೇಲೆ ಜಗಳಕ್ಕೆ ನಿಂತಿದ್ದಾನೆ. ನಂತರ ಕ್ಷಮೆ ಕೇಳುವಂತೆ ಹೇಳಿದ್ದಕ್ಕೆ ವಿದ್ವತ್ ನಿರಾಕರಿಸಿದ್ದಾರೆ. ಇದರಿದ ರೊಚ್ಚಿಗೆದ್ದ ನಲಪಾಡ್ ಮೊದಲು ವಿದ್ವತ್ ಹೊಟ್ಟೆ ಮತ್ತು ಮುಖದ ಭಾಗಕ್ಕೆ ಏಟು ಕೊಟ್ಟಿದ್ದಾನೆ. ನಲಪಾಡ್ ಹೊಡೆದ ಬಳಿಕ ಆತನ ಗ್ಯಾಂಗ್ ನವರು ವಿದ್ವತ್ ಮೇಲೆ ಮನಸೋ ಇಚ್ಚೇ ಹಲ್ಲೆ ನಡೆಸಿದ್ದಾರೆ. ನಂತರ ಚಿಕಿತ್ಸೆಗೆಂದು ವಿದ್ವತ್ ಮಲ್ಯ ಆಸ್ಪತ್ರೆಗೆ ತೆರಳಿದಾಗ ಅಲ್ಲಿಗೂ ಹೋಗಿ ನಲಪಾಡ್ ಮತ್ತು ತಂಡ ಹಲ್ಲೆ ಮಾಡಿತ್ತು.

    ನಲಪಾಡ್ ಮೇಲೆ ಯಾವೆಲ್ಲ ಕೇಸ್ ಹಾಕಲಾಗಿದೆ?
    ಐಪಿಸಿ ಸೆಕ್ಷನ್ 307(ಕೊಲೆ ಯತ್ನ) ಜಾಮೀನು ರಹಿತ ಕೇಸಾಗಿದ್ದು ಉಳಿದ ಸೆಕ್ಷನ್ ಗಳಾದ 341(ಅಕ್ರಮ ಬಂಧನ), 504(ಅವ್ಯಾಚ್ಯ ಶಬ್ಧಗಳಿಂದ ನಿಂದನೆ), 143, 144- 146, 147, 149 (ಅಕ್ರಮ ಗುಂಪುಗಾರಿಕೆ), 326(ಗಂಭೀರ ಗಾಯ), 506 ಬಿ (ಪ್ರಾಣಬೆದರಿಕೆ) ಜಾಮೀನು ಸಿಗುವ ಕೇಸುಗಳಾಗಿವೆ.

  • ವಿದ್ವತ್ ಮೇಲೆ ಹಲ್ಲೆ ಪ್ರಕರಣ- ಇಂದು ನಲಪಾಡ್ ಜಾಮೀನು ಅರ್ಜಿಯ ಭವಿಷ್ಯ ನಿರ್ಧಾರ

    ವಿದ್ವತ್ ಮೇಲೆ ಹಲ್ಲೆ ಪ್ರಕರಣ- ಇಂದು ನಲಪಾಡ್ ಜಾಮೀನು ಅರ್ಜಿಯ ಭವಿಷ್ಯ ನಿರ್ಧಾರ

    ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹ್ಯಾರೀಸ್ ಪುತ್ರ ನಲಪಾಡ್‍ಗೆ ಜೈಲಾ..? ಬೇಲಾ..? ಎಂಬುದು ಇಂದು ಗೊತ್ತಾಗಲಿದೆ.

    ಹೌದು. ಶಾಸಕ ಹ್ಯಾರಿಸ್ ಮಗ ನಲಪಾಡ್ ಜಾಮೀನು ಅರ್ಜಿಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ಸೋಮವಾರ ನಲಪಾಡ್ ಪರ ವಕೀಲ ಉಸ್ಮಾನ್ ವಾದ ಮುಕ್ತಾಯ ಮಾಡಿದ್ದಾರೆ. ಹೀಗಾಗಿ ಇಂದು ಎಸ್ ಪಿಪಿ ಅವರಿಂದ ಪ್ರತಿವಾದ ನಡೆಯಲಿದೆ.

    ಪ್ರತಿವಾದ ಬೇಗ ಮುಗಿದ್ರೆ ಇಂದೇ ತೀರ್ಪು ಸಿಗುವ ಸಾಧ್ಯತೆಗಳಿವೆ. 63 ನೇ ಸಿಸಿಎಚ್ ಕೋರ್ಟ್ ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ವಿದ್ವತ್ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಈಗಾಗಲೇ ಜಾರ್ಜ್ ಶೀಟ್ ಸಲ್ಲಿಸಲಾಗಿದೆ.

    ಈ ಹಂತದಲ್ಲಿ ಸಾಕ್ಷಿಗಳ ಮೇಲೆ ಯಾವುದೇ ಪ್ರಭಾವ ಬೀರಲು ಸಾಧ್ಯವಿಲ್ಲ. ಹಾಗಾಗಿ ಜಾಮೀನು ನೀಡುವಂತೆ ನಲಪಾಡ್ ಪರ ವಕೀಲರಿಂದ ವಾದ ಮಂಡಿಸಲಾಗಿತ್ತು. ಇಂದು ಕೂಡ ಸ್ಪೆಷಲ್ ಪ್ರಾಸಿಕ್ಯೂಟರ್ ಶ್ಯಾಮ್ ಸುಂದರ್ ಅವರಿಂದ ವಾದ ಮಂಡನೆ ನಡೆಯಲಿದೆ.

    ಏನಿದು ಪ್ರಕರಣ?: ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರ ಮಗ ಮಹಮ್ಮದ್ ನಲಪಾಡ್ ಯುಬಿ ಸಿಟಿ ರೆಸ್ಟೊರೆಂಟ್ ನಲ್ಲಿ ಕಿರಿಕ್ ತೆಗೆದು ವಿದ್ವತ್ ಮೇಲೆ ಹಲ್ಲೆ ನಡೆಸಿದ್ದನು. ಫೆಬ್ರವರಿ 17ರ ರಾತ್ರಿ ಸುಮಾರು 11 ಗಂಟೆಗೆ ವಿದ್ವತ್ ಊಟಕ್ಕೆಂದು ಯುಬಿ ಸಿಟಿ ರೆಸ್ಟೊರೆಂಟ್ ಗೆ ತೆರಳಿದ್ದರು. ಈ ವೇಳೆ ವಿದ್ವತ್ ಮತ್ತು ಮಹಮ್ಮದ್ ನಲಪಾಡ್ ನಡುವೆ ಜಗಳ ನಡೆದಿತ್ತು. ಈ ಜಗಳ ತಾರಕಕ್ಕೇರಿ ನಲಪಾಡ್ ಮತ್ತು ಆತನ ಸ್ನೇಹಿತರು ವಿದ್ವತ್ ಮುಖಕ್ಕೆ ಪಂಚ್ ಕೊಟ್ಟು, ಮನಸ್ಸೋ ಇಚ್ಛೆ ಥಳಿಸಿದ್ದರು. ನಂತರ ಚಿಕಿತ್ಸೆಗೆಂದು ವಿದ್ವತ್ ಮಲ್ಯಾ ಆಸ್ಪತ್ರೆಗೆ ತೆರಳಿದಾಗ ಅಲ್ಲಿಗೂ ಹೋಗಿ ನಲಪಾಡ್ ಮತ್ತು ತಂಡ ಹಲ್ಲೆ ಮಾಡಿತ್ತು.

                                                                                      ವಿದ್ವತ್- ಹಲ್ಲೆಗೊಳಗಾದ ಯುವಕ.
  • ನಲಪಾಡ್ ವಿರುದ್ಧ ಕೋರ್ಟ್ ಗೆ 600 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

    ನಲಪಾಡ್ ವಿರುದ್ಧ ಕೋರ್ಟ್ ಗೆ 600 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

    ಬೆಂಗಳೂರು: ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ಶಾಸಕ ಹ್ಯಾರೀಸ್ ಮಗ ನಲಪಾಡ್ ಹಾಗೂ ಆತನ ಸ್ನೇಹಿತರ ವಿರುದ್ಧ ಸಿಸಿಬಿ ತನಿಖಾಧಿಕಾರಿಗಳು ಕೋರ್ಟ್ ಗೆ 600 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

    ಫೆಬ್ರವರಿ 17ರಂದು ನಗರದ ಯುಬಿ ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಶಾಸಕ ಹ್ಯಾರೀಸ್ ಪುತ್ರ ನಲಪಾಡ್ ಗ್ಯಾಂಗ್ ಗಂಭೀರವಾಗಿ ಹಲ್ಲೆ ಮಾಡಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಸಿಸಿಬಿ ತನಿಖಾಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

    ಚಾರ್ಜ್ ಶೀಟ್‍ನಲ್ಲಿ ಏನಿದೆ?: ಆರೋಪಿಗಳ ಮತ್ತು ವಿದ್ವತ್ ವೈದ್ಯಕೀಯ ವರದಿ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಹಾಗೂ ಕೆಫೆ, ಆಸ್ಪತ್ರೆಯ ಸಿಸಿಟಿವಿ ದೃಶ್ಯಗಳನ್ನು ಲಗತ್ತಿಸಲಾಗಿದೆ. ಆರೋಪಕ್ಕೆ ಸಂಬಂಧಿಸಿದಂತೆ ವಿದ್ವತ್ ಆತನ ಸ್ನೇಹಿತರು, ಫರ್ಜಿ ಕೆಫೆ ಸಿಬ್ಬಂದಿ, ಮಲ್ಯ ಆಸ್ಪತ್ರೆ ಸಿಬ್ಬಂದಿ ಸೇರಿದಂತೆ 60 ಸಾಕ್ಷಿಗಳಿಂದ ಹೇಳಿಕೆಗಳನ್ನು ಚಾರ್ಜ್ ಶೀಟ್‍ನಲ್ಲಿ ದಾಖಲಿಸಲಾಗಿದೆ ಎಂದು ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ.

    ನಲಪಾಡ್, ಅರುಣ್ ಬಾಬು, ಶ್ರೀಕೃಷ್ಣ, ಮಂಜುನಾಥ್, ಅಶ್ರಫ್, ಬಾಲಕೃಷ್ಣ, ಅಭಿಷೇಕ್ ಮತ್ತು ನಾಸಿರ್ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆಯಾಗಿದೆ. ಸದ್ಯ ಎಲ್ಲ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿದೆ. ಆರೋಪಿ ಕೃಷ್ಣ 2004 ರಿಂದಲೂ ಮೊಬೈಲ್ ಬಳಕೆ ಮಾಡುತ್ತಿಲ್ಲ. ಅವನು ವಿದೇಶಕ್ಕೆ ಹೋಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ ಎಂದು ಹೇಳಲಾಗ್ತಿದೆ.

  • ನಲಪಾಡ್ ಪ್ರಕರಣ: ಶಾಸಕ ಆರ್.ವಿ.ದೇವರಾಜ್ ಪುತ್ರ ಯುವರಾಜ್ ವಿಚಾರಣೆ

    ನಲಪಾಡ್ ಪ್ರಕರಣ: ಶಾಸಕ ಆರ್.ವಿ.ದೇವರಾಜ್ ಪುತ್ರ ಯುವರಾಜ್ ವಿಚಾರಣೆ

    ಬೆಂಗಳೂರು: ವಿದ್ವತ್ ಮೇಲೆ ನಲಪಾಡ್ ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಆರ್.ವಿ ದೇವರಾಜ್ ಪುತ್ರ ಯುವರಾಜ್ ಸಿಸಿಬಿ ಪೋಲಿಸರ ಮುಂದೆ ಹಾಜರಾಗಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೇಳಿಕೆಯನ್ನು ನೀಡಿದ್ದಾರೆ.

    ಮಂಗಳವಾರ ಸಚಿವ ಮಹದೇವಪ್ಪ ಪುತ್ರ ಸುನಿಲ್ ಬೋಸ್ ಸಿಸಿಬಿ ಕಚೇರಿಗೆ ಆಗಮಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆಯನ್ನು ದಾಖಲಿಸಿದ್ರು. ಈ ವೇಳೆ ಸುನಿಲ್ ಬೋಸ್ ಮೂವರು ಪ್ರಭಾವಿ ರಾಜಕಾರಣಿಗಳ ಪುತ್ರರು ಹಲ್ಲೆ ನಡೆದ ದಿನದಂದು ಫರ್ಜಿ ಕೆಫೆಯಲ್ಲಿ ಇದ್ದರೆಂದು ಹೇಳಿಕೆ ನೀಡಿದ್ದರು ಎಂದು ತಿಳಿದು ಬಂದಿದೆ. ಘಟನೆ ವೇಳೆ ಆರ್.ವಿ.ದೇವರಾಜ್ ಪುತ್ರ ಯುವರಾಜ್ ಸಹ ಇದ್ದರು ಎಂಬುದು ಸಿಸಿಬಿ ಪೊಲೀಸರಿಗೆ ತಿಳಿದು ಬಂದಿದೆ. ಇದನ್ನೂ ಓದಿ: ಹ್ಯಾರಿಸ್ ಪುತ್ರ ನಲಪಾಡ್ ಪ್ರಕರಣದಲ್ಲಿ ಸಚಿವ ಮಹದೇವಪ್ಪ ಪುತ್ರ ಸುನಿಲ್ ಬೋಸ್ ವಿಚಾರಣೆ

    ಈ ಸಂಬಂಧ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆ ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ಯುವರಾಜ್ ದೌಡಾಯಿಸಿ ಫರ್ಜಿ ಕೆಫೆಯಲ್ಲಿ ಗಲಾಟೆ ನಡೆಯುವ ಅರ್ಧ ಗಂಟೆ ಮುಂಚೆ ಊಟ ಮಾಡಲೆಂದು ಸ್ನೇಹಿತರ ಜೊತೆ ತೆರಳಿದ್ದೆ. ಗಲಾಟೆ ಗದ್ದಲ ನಡೆಯುತ್ತಿದ್ದಂತೆ ಅಲ್ಲಿಂದ ಹೊರ ಬಂದೆವು. ನಾನು ಫರ್ಜಿ ಕೆಫೆಗೆ ಹೋಗುವ ಮೊದಲೆ ಗಲಾಟೆ ನಡೆದಿತ್ತು. ನಾನು ಕೆಫೆಗೆ ಹೋದಾಗ ಗಲಾಟೆ ವಿಚಾರ ನನಗೆ ತಿಳಿಸಿದ್ದು ಅಂಬರೀಶ್ ಮಗ ಅಭಿಷೇಕ್. ಒಂದು ವೇಳೆ ಗಲಾಟೆ ವೇಳೆ ತಾನು ಅಲ್ಲೆ ಇದ್ದಿದ್ದರೆ ಗಲಾಟೆ ನಡೆಯಲು ಬಿಡುತ್ತಿರಲಿಲ್ಲಾ ಎಂದು ಯುವರಾಜ್ ಹೇಳಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

    ಯುವರಾಜ್ ಸದ್ಯ ಸುದಾಮನಗರ ವಾರ್ಡ್ ನ ಕಾರ್ಪೋರೇಟರ್ ಆಗಿದ್ದಾರೆ. ಹೇಳಿಕೆ ಪಡೆದ ಸಿಸಿಬಿ ಪೊಲೀಸರು ಯುವರಾಜ್‍ರನ್ನು ವಾಪಾಸ್ಸು ಕಳುಹಿಸಿದ್ದಾರೆ.

  • ಹ್ಯಾರಿಸ್ ಪುತ್ರ ನಲಪಾಡ್ ಪ್ರಕರಣದಲ್ಲಿ ಮತ್ತೊಬ್ಬ ಪ್ರಭಾವಿ ಸಚಿವರ ಪುತ್ರನ ವಿಚಾರಣೆ

    ಹ್ಯಾರಿಸ್ ಪುತ್ರ ನಲಪಾಡ್ ಪ್ರಕರಣದಲ್ಲಿ ಮತ್ತೊಬ್ಬ ಪ್ರಭಾವಿ ಸಚಿವರ ಪುತ್ರನ ವಿಚಾರಣೆ

    ಬೆಂಗಳೂರು: ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿ ನಗರ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಈಗಾಗಲೇ ಜೈಲಿನಲ್ಲಿದ್ದಾನೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಲೋಕೋಪಯೋಗಿ ಸಚಿವ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಅವರನ್ನು ವಿಚಾರಣೆ ನಡೆಸಿದ್ದಾರೆ.

    ಫೆಬ್ರವರಿ 17ರಂದು ನಗರದ ಫರ್ಜಿ ಕೆಫೆಯಲ್ಲಿ ನಲಪಾಡ್ ಕ್ಷುಲಕ ಕಾರಣಕ್ಕಾಗಿ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದನು. ಹಲ್ಲೆ ನಡೆದ ವೇಳೆ ಫರ್ಜಿ ಕಫೆಯಲ್ಲಿ ಸಚಿವರ ಪುತ್ರ ಸುನೀಲ್ ಬೋಸ್ ಅಲ್ಲಿಯೇ ಪಾರ್ಟಿ ಮಾಡ್ತಿದ್ರು ಎಂಬುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಹಿನ್ನೆಲೆಯಲ್ಲಿ ನಲಪಾಡ್ ಪ್ರಕರಣದ ತನಿಖಾಧಿಕಾರಿ ಅಶ್ವಥ್ ಗೌಡ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕೇಂದ್ರ ಕಚೇರಿಯಲ್ಲಿ ಸುನಿಲ್ ಬೋಸ್ ಅವರ ವಿಚಾರಣೆಯನ್ನು ನಡೆಸಿದ್ದಾರೆ.

    ಏನಿದು ಪ್ರಕರಣ?: ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರ ಮಗ ಮಹಮ್ಮದ್ ನಲಪಾಡ್ ಯುಬಿ ಸಿಟಿ ರೆಸ್ಟೊರೆಂಟ್ ನಲ್ಲಿ ಕಿರಿಕ್ ತೆಗೆದು ವಿದ್ವತ್ ಮೇಲೆ ಹಲ್ಲೆ ನಡೆಸಿದ್ದನು. ಫೆಬ್ರವರಿ 17ರ ರಾತ್ರಿ ಸುಮಾರು 11 ಗಂಟೆಗೆ ವಿದ್ವತ್ ಊಟಕ್ಕೆಂದು ಯುಬಿ ಸಿಟಿ ರೆಸ್ಟೊರೆಂಟ್ ಗೆ ತೆರಳಿದ್ದರು. ಈ ವೇಳೆ ವಿದ್ವತ್ ಮತ್ತು ಮಹಮ್ಮದ್ ನಲಪಾಡ್ ನಡುವೆ ಜಗಳ ನಡೆದಿತ್ತು. ಈ ಜಗಳ ತಾರಕಕ್ಕೇರಿ ನಲಪಾಡ್ ಮತ್ತು ಆತನ ಸ್ನೇಹಿತರು ವಿದ್ವತ್ ಮುಖಕ್ಕೆ ಪಂಚ್ ಕೊಟ್ಟು, ಮನಸ್ಸೋ ಇಚ್ಛೆ ಥಳಿಸಿದ್ದರು. ನಂತರ ಚಿಕಿತ್ಸೆಗೆಂದು ವಿದ್ವತ್ ಮಲ್ಯಾ ಆಸ್ಪತ್ರೆಗೆ ತೆರಳಿದಾಗ ಅಲ್ಲಿಗೂ ಹೋಗಿ ನಲಪಾಡ್ ಮತ್ತು ತಂಡ ಹಲ್ಲೆ ಮಾಡಿತ್ತು.

    ಕೆಲವು ದಿನಗಳ ಹಿಂದೆ ಸಚಿವ ಮಹದೇವಪ್ಪ ಈ ಬಾರಿ ಚುನಾವಣೆಯಲ್ಲಿ ಪುತ್ರ ಸುನಿಲ್ ಬೋಸ್ ಗೆ ಟಿಕೆಟ್ ನೀಡಬೇಕೆಂದು ಕಾಂಗ್ರೆಸ್ ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿದ್ದರು ಅಂತಾ ಹೇಳಲಾಗಿತ್ತು. ಆದ್ರೆ ಹೈಕಮಾಂಡ್ ಇಬ್ಬರಿಗೆ ಟಿಕೆಟ್ ನೀಡಿದ್ರೆ ಬೇರೆ ನಾಯಕರು ಅಸಮಾಧಾನಗೊಳ್ಳುವ ಸಾಧ್ಯತೆಗಳಿವೆ ಅಂತಾ ಹೇಳಿ ಟಿಕೆಟ್ ನೀಡಲು ನಿರಾಕರಿಸಿತ್ತು ಎಂಬ ಮಾಹಿತಿಗಳು ಕಾಂಗ್ರೆಸ್ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿತ್ತು. ಚುನಾವಣೆಯ ಸಮಯದಲ್ಲಿ ಸುನಿಲ್ ಬೋಸ್ ವಿಚಾರಣೆ ನಡೆಯುತ್ತಿರುವುದು ಮುಂದೆ ರಾಜಕೀಯ ತಿರುವು ಪಡೆದುಕೊಳ್ಳುವ ಸಾಧ್ಯತೆಗಳಿವೆ ಅಂತಾ ವಿಶ್ಲೇಷಣೆ ಮಾಡಲಾಗ್ತಿದೆ.

  • ನಲಪಾಡ್ ಜಾಮೀನು ಅರ್ಜಿ ವಜಾಗೊಂಡಿದ್ದು ಯಾಕೆ? ನ್ಯಾಯಾಧೀಶರು ಕೊಟ್ಟ ಕಾರಣಗಳು ಇಲ್ಲಿದೆ

    ನಲಪಾಡ್ ಜಾಮೀನು ಅರ್ಜಿ ವಜಾಗೊಂಡಿದ್ದು ಯಾಕೆ? ನ್ಯಾಯಾಧೀಶರು ಕೊಟ್ಟ ಕಾರಣಗಳು ಇಲ್ಲಿದೆ

    ಬೆಂಗಳೂರು: ಯುವಕ ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿನಗರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಜಾಮೀನು ಅರ್ಜಿ ಹೈಕೋರ್ಟ್ ನಲ್ಲಿ ವಜಾ ಆಗಿದೆ.

    ಯಾವೆಲ್ಲ ಅಂಶಗಳನ್ನು ಪರಿಗಣಿಸಿ ನ್ಯಾ. ಶ್ರೀನಿವಾಸ್ ಹರೀಶ್ ಅವರಿದ್ದ ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿತು ಎನ್ನುವುದನ್ನು ವಿಶೇಷ ಅಭಿಯೋಜಕ ಶ್ಯಾಮ್ ಸುಂದರ್ ಅವರು ಸುದ್ದಿಗಾರರಿಗೆ ತಿಳಿಸಿದರು.

    ಕೋರ್ಟ್ ಹೇಳಿದ್ದು ಏನು?
    ವಿದ್ವತ್ ಮೇಲೆ ಹಲ್ಲೆಯಾದಾಗ ನಲಪಾಡ್ ಅಲ್ಲಿ ಇರಲೇ ಇಲ್ಲ. ಅವರು ಹೊಡೆದಿಲ್ಲ. 10-15 ಜನ ಹೊಡೆದಿದ್ದಾರೆ ಅಂತ ಎಫ್‍ಐಆರ್ ನಲ್ಲಿದೆ ಬಿಟ್ಟರೇ ಅವರೇ ಹೊಡೆದಿದ್ದಾರೆ ಎಂದು ನೇರವಾದ ಹೇಳಿಕೆಯಿಲ್ಲ ಅಂತ ಆರೋಪಿ ನಲಪಾಡ್ ಪರ ವಕೀಲ ವಾದ ಮಾಡಿದ್ದಾರೆ. ಆದ್ರೆ ಸಿಸಿಟಿವಿ ದೃಶ್ಯಾವಳಿ ನೋಡಿದಾಗ ವಿದ್ವತ್ ಮೇಲೆ ಘೋರ ಹಾಗೂ ಭಯಾನಕವಾಗಿ ಹಲ್ಲೆ ನಡೆದಿರುವುದು ನ್ಯಾಯಾಧೀಶರ ಗಮನಕ್ಕೆ ಬಂದಿದೆ. ಹಲ್ಲೆ ಮಾಡುತ್ತಿದ್ದ ಸಂದರ್ಭದಲ್ಲಿ ಎಲ್ಲರೂ ನೋಡುತ್ತಿದ್ದರೇ ವಿನಃ ಯಾರು ವಿದ್ವತ್ ಸಹಾಯಕ್ಕೆ ಬರಲಿಲ್ಲ. ನಲಪಾಡ್ ಅವರು ಅಲ್ಲಿ ತೋರಿದ ದರ್ಪದಿಂದಾಗಿ ಭಯಗೊಂಡು ಯಾರೊಬ್ಬರೂ ಸಹಾಯಕ್ಕೆ ಬರದಿರುವುದು ಕಾರಣವಾಗಿದೆ. ಹೀಗಾಗಿ ಇದೊಂದು ಘೋರವಾದ ಪ್ರಕರಣವಾಗಿದೆ.

     

    ಘಟನೆ ನಡೆದಂದೇ ರಾತ್ರಿ 11.45ರ ಸುಮಾರಿಗೆ ದೂರು ದಾಖಲಾದ್ರೂ ಕೂಡ ಬೆಳಗ್ಗಿನ ಜಾವ 3.30ರವರೆಗೂ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿಲ್ಲ. ಮಾರಣಾಂತಿಕ ಹಲ್ಲೆ ನಡೆದರೂ ಎಫ್‍ಐಆರ್ ದಾಖಲಿಸಲು ವಿಳಂಬ ಮಾಡಿದ್ದು ಯಾಕೆ ಎನ್ನುವುದಕ್ಕೆ ಪೊಲೀಸರು ಯಾವುದೇ ಕಾರಣವನ್ನೂ ಕೂಡ ಕೊಟ್ಟಿಲ್ಲ. ಹೀಗಾಗಿ ಇದು ಆರೋಪಿ ತನ್ನ ಪ್ರಭಾವ ಬಳಸಿ ಎಫ್‍ಐಆರ್ ದಾಖಲಿಸಿಕೊಳ್ಳಲು ತಡಮಾಡಿರಬಹುದೆಂದು ನ್ಯಾಯಾಲಯ ಗಮನಿಸಿದೆ.

    ಇಷ್ಟು ಮಾತ್ರವಲ್ಲದೇ ಅರುಣ್ ಬಾಬು ಎಂಬ ವ್ಯಕ್ತಿಯ ಕೈಯಿಂದ ಪ್ರತಿ ದೂರು ನೀಡಿ ಬೆಳಗ್ಗೆ 5.30 ಸುಮಾರಿಗೆ ಕೇಸ್ ದಾಖಲಿಸಿಕೊಂಡು, ನಂತರ 6 ಗಂಟೆ ಸುಮಾರಿಗೆ ಬೌರಿಂಗ್ ಆಸ್ಪತ್ರೆಗೆ ಅವರನ್ನು ಕರೆದುಕೊಂಡು ಹೋಗಿ ಮೆಡಿಕಲ್ ಸಮ್ಮರಿ ಮಾಡಿಸಿದ್ದನ್ನು ನ್ಯಾಯಾಲಯ ಗಮನಕ್ಕೆ ತೆಗೆದುಕೊಂಡಿದೆ.

    ಈ ಪ್ರಕರಣವನ್ನು ಏನಾದ್ರೂ ಮಾಡಿ ಮುಚ್ಚಿಹಾಕಲು ಮಾಡಿದಂತಹ ಪ್ರಯತ್ನವಾಗಿದೆ. ಮಲ್ಯ ಆಸ್ಪತ್ರೆಯ ವೈದ್ಯ ಡಾ. ಆನಂದ್ ಅವರು ಕೂಡ ವಿದ್ವತ್ ಡಿಸ್ಚಾರ್ಜ್ ಸಮ್ಮರಿಯನ್ನು ಅಪಾದಿತರಿಗೆ ಅನುಕೂಲವಾಗುವಂತೆ ಅಸಾಮಾನ್ಯವಾಗಿ ಸೃಷ್ಟಿಸಿದ್ದಾರೆ ಎಂಬ ನಿಲುವನ್ನು ನ್ಯಾಯಾಲಯ ತೆಗೆದುಕೊಂಡಿದೆ. ಈ ಎಲ್ಲಾ ವಿಚಾರಗಳ ಆಧಾರದ ಮೇಲೆ ಹಾಗೂ ಸುಪ್ರೀಂ ಕೋರ್ಟ್ 2, 3 ತೀರ್ಪುಗಳನ್ನು ಉಲ್ಲೇಖಿಸಿ, ಒಂದು ವೇಳೆ ಜಾಮೀನು ಮಂಜೂರು ಮಾಡಿದ್ದಲ್ಲಿ ಆರೋಪಿ ಸಾಕ್ಷ್ಯವನ್ನು ನಾಶ ಮಾಡುವ ಸಾಧ್ಯತೆಯಿದೆ ಎನ್ನುವುದನ್ನು ಗಂಭೀರವಾಗಿ ಪರಿಗಣಿಸಿ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ ಎಂದು ಶ್ಯಾಮ್‍ಸುಂದರ್ ತಿಳಿಸಿದರು.

    https://www.youtube.com/watch?v=1Lfn0Ovd27U

    https://www.youtube.com/watch?v=tGbMJgI45Dc