Tag: ವಿದ್ವತ್

  • ಜಾಮೀನು ಅರ್ಜಿ ತಿರಸ್ಕೃತ- ಹ್ಯಾರಿಸ್ ಪುತ್ರನಿಗೆ ಜೈಲೇ ಗತಿ

    ಜಾಮೀನು ಅರ್ಜಿ ತಿರಸ್ಕೃತ- ಹ್ಯಾರಿಸ್ ಪುತ್ರನಿಗೆ ಜೈಲೇ ಗತಿ

    ಬೆಂಗಳೂರು: ನಗರದ ಯುಬಿ ಸಿಟಿಯ ಫರ್ಜಿಕೆಫೆ ಯಲ್ಲಿ ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕೃತ ಗೊಳಿಸಿದೆ.

    ಸಿಸಿಟಿವಿನಲ್ಲಿ ಹಲ್ಲೆ ನಡೆಸಿರೋದು ಸ್ಪಷ್ಟವಾಗಿದೆ. ತನಿಖಾಧಿಕಾರಿಗಳಿಗೆ ಸಿಗದ ಡಿಸ್ಚಾರ್ಜ್ ಸಮ್ಮರಿ ಆರೋಪಿಯ ತಂದೆಗೆ ಸಿಕ್ಕಿರುವುದು ಸಿಕ್ಕಿರೋದು ಅನುಮಾನ ಮೂಡುತ್ತದೆ ಅಂತ ನ್ಯಾ. ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಪೀಠ ನಲಪಾಡ್ ಜಾಮೀನು ಅರ್ಜಿ ವಜಾಗೊಳಿಸಿದೆ. ಇದನ್ನೂ ಓದಿ: ನಲಪಾಡ್‍ಗೆ ಜೈಲೇ ಗತಿ: ಆರೋಪಿಯ ಪರ ವಕೀಲರ ವಾದ ಏನಿತ್ತು? ಕೋರ್ಟ್ ಕಲಾಪದ ಡಿಟೇಲ್ ಇಲ್ಲಿದೆ

    ದೂರು ದಾಖಲಿಸಿದ್ದರೂ, ಎಫ್‍ಐಆರ್ ಹಾಕುವಲ್ಲಿ ವಿಳಂಬ, ಸಿಸಿಟಿವಿಯಲ್ಲಿ ಮೊದಲು ನಲಪಾಡ್ ಹಲ್ಲೆ ನಡೆಸಿರುವ ದೃಶ್ಯ ಸೆರೆ, ವಿದ್ವತ್ ವೈದ್ಯಕೀಯ ವರದಿ ಹ್ಯಾರಿಸ್ ಕೈ ಸೇರಿದ್ದು, ಈ ಹಿಂದೆ ಈ ರೀತಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರಕರಣಗಳನ್ನು ಉಲ್ಲೇಖಿಸಿ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

  • ನಲಪಾಡ್ ಹಲ್ಲೆ ಪ್ರಕರಣ- ಕಬ್ಬನ್ ಪಾರ್ಕ್ ಎಸಿಪಿ ಮಂಜುನಾಥ್ ತಳವಾರ್ ಅಮಾನತು ವಾಪಸ್

    ನಲಪಾಡ್ ಹಲ್ಲೆ ಪ್ರಕರಣ- ಕಬ್ಬನ್ ಪಾರ್ಕ್ ಎಸಿಪಿ ಮಂಜುನಾಥ್ ತಳವಾರ್ ಅಮಾನತು ವಾಪಸ್

    ಬೆಂಗಳೂರು: ಕರ್ತವ್ಯಲೋಪದಡಿ ಅಮಾನತಾಗಿದ್ದ ಕಬ್ಬನ್ ಪಾರ್ಕ್ ಎಸಿಪಿ ಮಂಜುನಾಥ್ ತಳವಾರ್ ಅವರ ಅಮಾನತು ವಾಪಸ್ ಪಡೆಯಲಾಗಿದೆ.

    ನಲಪಾಡ್ ಗೂಂಡಾಗಿರಿ ಪ್ರಕರಣದಲ್ಲಿ ಪೊಲೀಸ್ ಆಯುಕ್ತರು ಮಂಜುನಾಥ್ ತಳವಾರ್ ರನ್ನು ಅಮಾನತುಗೊಳಿಸಿದ್ರು. ಇದೀಗ ಅಮಾನತು ವಾಪಸ್ ಪಡೆಯಲಾಗಿದ್ದು, ಗೃಹಸಚಿವ ರಾಮಲಿಂಗಾರೆಡ್ಡಿ ಹ್ಯಾರಿಸ್ ಒತ್ತಡಕ್ಕೆ ಮಣಿದರಾ ಎಂಬಂತಹ ಅನುಮಾನಗಳು ವ್ಯಕ್ತವಾಗಿದೆ.

    ನಲಪಾಡ್ ಗ್ಯಾಂಗ್ ಗೆ ಇಂದು ಜೈಲು ಭವಿಷ್ಯ ನಿರ್ಧಾರವಾಗಲಿದೆ. ಜಾಮೀನು ಕೋರಿ ನಲಪಾಡ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಏಕಸದಸ್ಯ ಪೀಠದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನಲಪಾಡ್ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಲಿದ್ದಾರೆ. ಆರೋಪಿ ನಲಪಾಡ್ ಗೆ ಜೈಲಾ ಅಥವಾ ಬೇಲಾ ಇಂದು ನಿರ್ಧಾರವಾಗಲಿದೆ.

  • ವಿದ್ವತ್ ಮೆಡಿಕಲ್ ರಿಪೋರ್ಟ್ ಹ್ಯಾರಿಸ್ ಕೈ ಸೇರಿದ್ದು ಹೇಗೆ? – ಸಿಸಿಬಿಯಿಂದ ಮಲ್ಯ ಆಸ್ಪತ್ರೆ ವೈದ್ಯರಿಗೆ ನೋಟಿಸ್

    ವಿದ್ವತ್ ಮೆಡಿಕಲ್ ರಿಪೋರ್ಟ್ ಹ್ಯಾರಿಸ್ ಕೈ ಸೇರಿದ್ದು ಹೇಗೆ? – ಸಿಸಿಬಿಯಿಂದ ಮಲ್ಯ ಆಸ್ಪತ್ರೆ ವೈದ್ಯರಿಗೆ ನೋಟಿಸ್

    ಬೆಂಗಳೂರು: ಶಾಂತಿನಗರದ ಕಾಂಗ್ರೆಸ್ ಶಾಸಕ ಎನ್‍ಎ ಹ್ಯಾರಿಸ್ ಮಗ ನಲಪಾಡ್ ಗೂಂಡಾಗಿರಿ ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ. ಆರೋಪಿ ನಲಪಾಡ್ ನಿಂದ ಹಲ್ಲೆಗೊಳಗಾದ ವಿದ್ವತ್‍ಗೆ ಚಿಕಿತ್ಸೆ ನೀಡಿದ ಮಲ್ಯ ಆಸ್ಪತ್ರೆ ವೈದ್ಯರಿಗೆ ಇದೀಗ ನೋಟಿಸ್ ಬಂದಿದೆ.

    ಆಸ್ಪತ್ರೆಯ ವೈದ್ಯರಾದ ಡಾ. ಆನಂದ್‍ಗೆ ಸಿಸಿಬಿ ಪೊಲೀಸರು ಈ ನೋಟಿಸ್ ನೀಡಿದ್ದು, ತನಿಖಾಧಿಕಾರಿಗೆ ಸಿಗದ ವಿದ್ವತ್ ಡಿಸ್ಚಾರ್ಜ್ ವರದಿ ಆರೋಪಿಯ ಅಪ್ಪ ಶಾಸಕ ಹ್ಯಾರಿಸ್‍ಗೆ ಸಿಕ್ಕಿದ್ದು ಹೇಗೆ? ಇದಕ್ಕೆ ಸೂಕ್ತ ಉತ್ತರ ನೀಡುವಂತೆ ನೋಟೀಸ್ ಜಾರಿ ಮಾಡಲಾಗಿದೆ.

    ಶುಕ್ರವಾರದಂದು ಹೈಕೋರ್ಟ್‍ನಲ್ಲಿ ಡಾ. ಆನಂದ್ ಮೇಲೆ ಆರೋಪ ಕೇಳಿಬಂದಿತ್ತು. ವಿಶೇಷ ಸರ್ಕಾರಿ ಅಭಿಯೋಜಕರಾದ ಶ್ಯಾಂ ಸುಂದರ್ ಆನಂದ್ ಮೇಲೆ ಆರೋಪ ಮಾಡಿದ್ದರು. ನಾಗರಾಜ್ ರೆಡ್ಡಿ ಕಡೆಯಿಂದ ಡಿಸ್ಚಾರ್ಜ್ ರಿಪೋರ್ಟ್ ಸಿಕ್ಕಿತ್ತು ಎಂಬ ಆರೋಪ ಇತ್ತು. ಈ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಮತ್ತು ವೈದ್ಯರ ಹೆಸರು ಸೂಚಿಸಿ ನೋಟಿಸ್ ನೀಡಲಾಗಿದ್ದು, ಸಿಸಿಬಿ ಮೂರು ದಿನಗಳ ಕಾಲಾವಕಾಶ ನೀಡಿದೆ. ಸೋಮವಾರದ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

    ಡಿಸ್ಚಾರ್ಜ್ ವರದಿಯನ್ನು ಮುಖ್ಯ ವೈದ್ಯಾಧಿಕಾರಿ ಬರೆಯಬೇಕಿತ್ತು. ಆದ್ರೆ ಡಾ. ಆನಂದ್ ಇದನ್ನು ಬರೆದಿದ್ದಾರೆ. ಅಲ್ಲದೇ ಅವರು ಆಸ್ಪತ್ರೆಯಲ್ಲಿ ಗಲಾಟೆಯಾಗಿಲ್ಲ, ವಿದ್ವತ್ ನಾಟಕ ಆಡ್ತಿದ್ದಾನೆ ಎಂದು ವೈದ್ಯಕೀಯ ವರದಿಯಲ್ಲಿ ಉಲ್ಲೇಖಿಸಿದ್ದಾರೆ. ರೋಗಿಯ ಅರೋಗ್ಯ ಸ್ಥಿತಿಯನ್ನಷ್ಟೇ ಬರೆಯೋದು ಬಿಟ್ಟು ರೋಗಿಯ ಬೇರೆಲ್ಲಾ ವಿಚಾರ ಬರೆದಿರೋದ್ರಿಂದ ವೈಯುಕ್ತಿಕ ಹಿತಾಸಕ್ತಿ ಸಾಬೀತಾಗಿದೆ. ಮೇಲ್ನೋಟಕ್ಕೆ ವೈಯುಕ್ತಿಕ ಹಿತಾಸಕ್ತಿ ಗೊತ್ತಾಗಿರೋ ಹಿನ್ನೆಲೆಯಲ್ಲಿ ನೋಟೀಸ್ ಜಾರಿ ಮಾಡಲಾಗಿದೆ ಎಂದು ಸಿಸಿಬಿ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ.

  • ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ: ವಾದ, ಪ್ರತಿವಾದ ಹೀಗಿತ್ತು

    ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ: ವಾದ, ಪ್ರತಿವಾದ ಹೀಗಿತ್ತು

    ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಹೈಕೋರ್ಟ್ ಗೆ ಸಲ್ಲಿಸಿರುವ ಜಾಮೀನು ಅರ್ಜಿಯ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

    ಜಾಮೀನು ಅರ್ಜಿಯ ಸುದೀರ್ಘ ವಿಚಾರಣೆಯ ಸಂದರ್ಭದಲ್ಲಿ ವಿಶೇಷ ಅಭಿಯೋಜಕ ಶ್ಯಾಮ್ ಸುಂದರ್ ಅವರು ನಲಪಾಡ್ ಜಾಮೀನು ನೀಡಬಾರದು ಎಂದು ವಾದ ಮಂಡಿಸಿದರು. ಈ ವೇಳೆ ನ್ಯಾಯಮೂರ್ತಿಗಳ ಮುಂದೇ ವಿಶೇಷ ಅಂಶವನ್ನು ಪ್ರಸ್ತಾಪಿಸಿದ ಅವರು, ಜೀವ ಭಯವಿರುವುದು ಹಲ್ಲೆಗೊಳಗಾದ ವಿದ್ವತ್ ಅವರಿಗೆ ಅಲ್ಲ. ಬದಲಾಗಿ ವಿದ್ವತ್‍ಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಎಂದು ವಾದ ಮಾಡಿದರು.

    ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು, ಪ್ರಕರಣದಲ್ಲಿ ಉದ್ದೇಶ ಪೂರ್ವಕವಾಗಿ ನನ್ನ ನಲಪಾಡ್ ನನ್ನು ಸಿಕ್ಕಿಹಾಕಿಸುವ ಪ್ರಯತ್ನ ನಡೆದಿದೆ ಎಂದು ವಾದಿಸಿದರು. ಎರಡು ಕಡೆ ವಾದ ಆಲಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನ ಸೋಮವಾರಕ್ಕೆ ಮುಂದೂಡಿತು.

    ನಲಪಾಡ್ ಪರ ವಕೀಲ ಸಿ.ವಿ.ನಾಗೇಶ್ ವಾದ ಹೀಗಿತ್ತು:
    ವಿದ್ವತ್ ಆಸ್ಪತ್ರೆಯಲ್ಲಿದ್ದಾಗ ಪ್ರಜ್ಞೆ ತಪ್ಪಿರಲಿಲ್ಲ. ಐಸಿಯು ನಲ್ಲಿ ಚಿಕಿತ್ಸೆ ನೀಡುವ ವೇಳೆಯೂ ಆತ ಚೆನ್ನಾಗಿಯೇ ಮಾತನಾಡುತ್ತಿದ್ದ. ತನಿಖಾಧಿಕಾರಿಗಳಿಗೆ ವಿದ್ವತ್ ಪ್ರಜ್ಞೆ ತಪ್ಪಿದ್ದಾನೆ ಎನ್ನುವ ಸುಳ್ಳು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಬಾಟಲ್ ನಿಂದ ಹೊಡೆದಿದ್ದಾರೆ ಹೇಳಿದ್ದಾರೆ. ಆದರೆ ಇಲ್ಲಿ ಬಾಟಲ್ ಮಾರಕಾಸ್ತ್ರ ಅಲ್ಲ. ವಿದ್ವತ್ ಚೆನ್ನಾಗಿಯೇ ಇದ್ದರೂ, ತೀವ್ರವಾಗಿ ಹಲ್ಲೆಯಾಗಿದೆ ಎಂದು ಬಿಂಬಿಸಿಕೊಂಡಿದ್ದಾನೆ. ವಿದ್ವತ್ ಡಿಸ್ಚಾರ್ಜ್ ವರದಿಯಲ್ಲಿ ಯಾವುದೇ ರೊಟೀನ್ ಚಿಕಿತ್ಸೆ ನೀಡಿರುವ ಬಗ್ಗೆ ಉಲ್ಲೇಖಿಸಿಲ್ಲ. ಆತನನ್ನು ಸುಮ್ಮನೆ ಆಸ್ಪತ್ರೆಯಲ್ಲಿ ಇಟ್ಟುಕೊಂಡಿದ್ದರು. ವೈದ್ಯರು ಮನೆಗೆ ಹೋಗುವಂತೆ ಸೂಚನೆ ನೀಡಿದ್ದರೂ ವಿದ್ವತ್ ಮನೆಗೆ ಹೋಗಿಲ್ಲ. ಪದೆ ಪದೆ ತಲೆನೋವು, ಎದೆನೋವು ಎಂದು ನಾಟಕ ಮಾಡಿದ್ದಾರೆ. ನಲಪಾಡ್ ತಾನಾಗಿಯೇ ಬಂದು ಕಾನೂನಿಗೆ ತಲೆಬಾಗಿದ್ದಾನೆ. ಬೆದರಿಕೆ ಹಾಕುವ ಉದ್ದೇಶ ಇದ್ದಿದ್ದಾರೆ ನಲಪಾಡ್ ಶರಣಾಗತನಾಗುತ್ತಿರಲಿಲ್ಲ.

    ವಿಶೇಷ ಅಭಿಯೋಜಕ ಶ್ಯಾಮ್ ಸುಂದರ್ ವಾದ ಹೀಗಿತ್ತು:
    ವೈದ್ಯಕೀಯ ದಾಖಲೆಗಳು ನಲಪಾಡ್ ಪರ ವಕೀಲರಿಗೆ ಸಿಕ್ಕಿದ್ದು ಹೇಗೆ? ಇದರಲ್ಲೆ ನಲಪಾಡ್ ಎಷ್ಟು ಪ್ರಭಾವಿ ಆಗಿದ್ದಾನೆ ಎನ್ನುವುದು ತಿಳಿಯುತ್ತದೆ. ವೈದ್ಯರು ನಮಗೆ ಸಹಕಾರ ನೀಡಿಲ್ಲ ಬದಲಾಗಿ ನಲಪಾಡ್ ಪರ ವಕೀಲರಿಗೆ ಸಹಕಾರ ನೀಡಿದ್ದಾರೆ. ವೈದ್ಯಕೀಯ ದಾಖಲೆ ಅರೋಪಿ ಪರ ವಕೀಲರಿಗೆ ಸಿಕ್ಕ ಬಗ್ಗೆ ತನಿಖೆ ಆಗಬೇಕು. ಮಲ್ಯ ಆಸ್ಪತ್ರೆಯ ವೈದ್ಯ ಆನಂದ್ ಮೇಲೆ ಸಾಕಷ್ಟು ಅನುಮಾನ ಇದೆ. ಇದೆ ಅನಂದ್ ಮೊದಲು ಸರ್ಜರಿ ಮಾಡಬೇಕು ಎಂದು ಹೇಳಿದರು. ಈಗ ಸರ್ಜರಿ ಅವಶ್ಯಕತೆ ಇಲ್ಲ ಎಂದು ವರದಿ ನೀಡಿದ್ದಾರೆ. ಇದು ಹೇಗೆ ಸಾಧ್ಯ. ಘಟನೆ ನಡೆದ ದಿನ ಕೊಟ್ಟ ಮೆಡಿಕಲ್ ರಿಪೋರ್ಟ್‍ನಲ್ಲಿ ಎಂಟು ಕಡೆ ಮೂಳೆ ಮುರಿದಿರುವುದಾಗಿ ಹೇಳಿದ್ದರು. ಆದರೆ ಇದೀಗ ಇದಕ್ಕೆ ವಿರುದ್ಧವಾಗಿ ವರದಿ ನೀಡಿದ್ದಾರೆ. ಇಲ್ಲಿ ವಿದ್ವತ್‍ಗೆ ಜೀವ ಬೆದರಿಕೆ ಬದಲು ವೈದ್ಯ ಆನಂದ್‍ಗೆ ಜೀವ ಬೆದರಿಕೆ ಇದೆ. ಹಾಗಾಗಿ ವೈದ್ಯ ಆನಂದ್ ಅವರು ವೈದ್ಯಕೀಯ ರಿಪೋರ್ಟ್ ತಿರುಚಿ ನೀಡಿದ್ದಾರೆ.

    ಘಟನೆ ನಡೆದು ಮಾರನೇ ದಿನವೇ ವಿದ್ವತ್ ವಿರುದ್ಧ ಕೌಂಟರ್ ಕೇಸ್ ದಾಖಲಾಗಿದೆ. ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುವವನ ವಿರುದ್ಧವೇ ಎಫ್‍ಐಆರ್ ದಾಖಲಿಸಲಾಗಿದೆ. ಈ ಬೆಳವಣಿಗೆ ಗಮನಿಸಿದರೆ ಸಮಾಜ ಎತ್ತ ಕಡೆ ಸಾಗುತ್ತಿದೆ ಎಂಬುದು ಗೊತ್ತಾಗಲಿದೆ. ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‍ಗೆ ಸಿಡಿ ನೀಡುತ್ತೇವೆ. ಅದನ್ನು ಒಮ್ಮೆ ನೋಡಿದರೆ ನಲಪಾಡ್ ಎಷ್ಟು ಕ್ರೂರ ಎಂಬುವುದು ತಿಳೀಯುತ್ತದೆ ಎಂದು ತಮ್ಮ ವಾದ ಮಂಡಿಸಿದರು.

    ಎರಡು ಕಡೆಯ ವಾದ ಪ್ರತಿವಾದ ಕೇಳಿದ ನ್ಯಾಯಾಮೂರ್ತಿಗಳು ಕೋರ್ಟ್‍ನ ಸಮಯ ಮುಗಿದಿದ್ದರಿಂದ ಪ್ರಕರಣವನ್ನ ಸೋಮವಾರಕ್ಕೆ ಮುಂದೂಡಿದರು. ಸೋಮವಾರ ವಿಶೇಷ ಅಭಿಯೋಜಕರು ಹಲ್ಲೆಯ ಸಿಸಿಟಿವಿ ದೃಶ್ಯಗಳನ್ನು ಕೋರ್ಟ್ ಗೆ ನೀಡಲಿದ್ದಾರೆ.

  • ವಿದ್ವತ್ ಡಿಸ್ಚಾರ್ಜ್‍ನಿಂದ ಶಾಸಕ ಹ್ಯಾರಿಸ್, ಮಗ ನಲಪಾಡ್ ಫುಲ್ ಖುಷ್

    ವಿದ್ವತ್ ಡಿಸ್ಚಾರ್ಜ್‍ನಿಂದ ಶಾಸಕ ಹ್ಯಾರಿಸ್, ಮಗ ನಲಪಾಡ್ ಫುಲ್ ಖುಷ್

    ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ನಿಂದ ಹಲ್ಲೆಗೊಳಗಾಗಿದ್ದ ವಿದ್ವತ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬೆನ್ನಲ್ಲೇ ಶಾಸಕರು ಹರ್ಷ ವ್ಯಕ್ತಪಡಿಸಿದ್ದಾರೆ.

    ಹಲ್ಲೆಗೊಳಗಾದ ವಿದ್ವತ್ ನಗರದ ಮಲ್ಯ ಆಸ್ಪತ್ರೆಯಿಂದ ಭಾನುವಾರ ರಾತ್ರಿ ಡಿಸ್ಚಾರ್ಜ್ ಆಗಿದ್ದಾರೆ. ಈ ಕುರಿತು ಸಂತಸ ವ್ಯಕ್ತಪಡಿಸಿದ ಹ್ಯಾರಿಸ್, ದೇವರ ದಯೆಯಿಂದ ವಿದ್ವತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆ ಬಳಿಕ ಆತ ಈಗಾಗಲೇ ಡಿಸ್ಚಾರ್ಜ್ ಆಗಿದ್ದು ಖುಷಿತಂದಿದೆ. ವೈದ್ಯರ ಡಿಸ್ಚಾರ್ಜ್ ಶೀಟ್ ನಲ್ಲಿ ವಿದ್ವತ್ ಸಂಪೂರ್ಣವಾಗಿ ಗುಣಮುಖನಾಗಿದ್ದಾನೆ ಅಂತ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಆತ ಚೇತರಿಸಿಕೊಳ್ಳುವಂತೆ ಶ್ರಮಿಸಿದ ಮಲ್ಯ ಆಸ್ಪತ್ರೆ ವೈದ್ಯರಿಗೂ ಮತ್ತು ಸಿಬ್ಬಂದಿಗೂ ಧನ್ಯವಾದ ಎಂದು ಹ್ಯಾರಿಸ್ ಹೇಳಿದ್ದಾರೆ. ವಿದ್ವತ್ ಮತ್ತು ಆತನ ಕುಟುಂಬಸ್ಥರಲ್ಲಿ ಸಂತೋಷ ನೆಲೆಸಲಿ ಅಂತ ಹ್ಯಾರಿಸ್ ಹಾರೈಸಿದ್ದಾರೆ. ಇದನ್ನೂ ಓದಿ: ನಲಪಾಡ್ ಹಲ್ಲೆ ಪ್ರಕರಣ- ಹಲ್ಲೆಗೊಳಗಾಗಿದ್ದ ವಿದ್ವತ್ ಮಲ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್

    ವಿದ್ವತ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಹಿನ್ನೆಲೆಯಲ್ಲಿ ಪ್ರಮುಖ ಆರೋಪಿಯಾಗಿರೋ ನಲಪಾಡ್ ಕೂಡ ಸಂತಸದಿಂದಿದ್ದಾನೆ. ಯಾಕಂದ್ರೆ ಪ್ರಕರಣ ಸಂಬಂಧ ನಾಳೆ ಹೈಕೋರ್ಟ್‍ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಜಾಮೀನು ಸಿಕ್ಕೇ ಸಿಗುತ್ತೆ ಅನ್ನೋ ಖುಷಿಯಲ್ಲಿದ್ದಾನೆ. ನಿನ್ನೆ ರಾತ್ರಿ ತಂದೆ ಹ್ಯಾರಿಸ್‍ಗೆ ಫೋನ್ ಮಾಡಿ ಖುಷಿಯಿಂದ ಮಾತನಾಡಿದ್ದಾನೆ. ಅಲ್ಲದೇ ನಾಳೆ ಯಾವುದೇ ಕಾರಣಕ್ಕೂ ಬೇಲ್ ಮಿಸ್ ಆಗದಂತೆ ಎಚ್ಚರಿಕೆ ನೀಡಿದ್ದಾನೆ ಅಂತ ಜೈಲಿನ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಜಾಮೀನಿಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಅಪ್ಪನಿಗೆ ರೌಡಿ ನಲಪಾಡ್ ಸೂಚನೆ!

  • ನಲಪಾಡ್ ಹಲ್ಲೆ ಪ್ರಕರಣ- ಹಲ್ಲೆಗೊಳಗಾಗಿದ್ದ ವಿದ್ವತ್ ಮಲ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್

    ನಲಪಾಡ್ ಹಲ್ಲೆ ಪ್ರಕರಣ- ಹಲ್ಲೆಗೊಳಗಾಗಿದ್ದ ವಿದ್ವತ್ ಮಲ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರ ರೌಡಿ ನಲಪಾಡ್ ನಿಂದ ಹಲ್ಲೆಗೊಳಗಾಗಿದ್ದ ವಿದ್ವತ್ ಮಲ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಕಳೆದ ರಾತ್ರಿ 2 ಗಂಟೆಗೆ ವಿದ್ವತ್ ಅವರನ್ನ ಡಿಸ್ಚಾರ್ಜ್ ಮಾಡಲಾಗಿದೆ. ಕಳೆದ 17 ದಿನಗಳಿಂದ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ವತ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ಕಳೆದ ರಾತ್ರಿ ವಿದ್ವತ್‍ರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಇದನ್ನೂ ಓದಿ: ರೌಡಿ ನಲಪಾಡ್ ಗೂಂಡಾಗಿರಿ ಪ್ರಕರಣ- ವಿದ್ವತ್ ಅಣ್ಣನ ಹೇಳಿಕೆ ಪಡೆದ ಸಿಸಿಬಿ

    ವಿದ್ವತ್ ಕಣ್ಣಿಗೆ ಚಿಕಿತ್ಸೆ ಆಗತ್ಯವಿದ್ದು, ಆಯುರ್ವೇದಿಕ್ ಔಷಧಿ ಕೊಡಿಸಲು ಕೇರಳಕ್ಕೆ ಶಿಫ್ಟ್ ಮಾಡುವ ಪ್ಲಾನ್ ನಲ್ಲಿದ್ದೆವೆ ಅಂತ ಕುಟುಂಬಸ್ಥರು ಹೇಳಿದ್ದಾರೆ.ಇದನ್ನೂ ಓದಿ:  ಜಾಮೀನಿಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಅಪ್ಪನಿಗೆ ರೌಡಿ ನಲಪಾಡ್ ಸೂಚನೆ!

  • ರೌಡಿ ನಲಪಾಡ್ ಗೂಂಡಾಗಿರಿ ಪ್ರಕರಣ- ವಿದ್ವತ್ ಅಣ್ಣನ ಹೇಳಿಕೆ ಪಡೆದ ಸಿಸಿಬಿ

    ರೌಡಿ ನಲಪಾಡ್ ಗೂಂಡಾಗಿರಿ ಪ್ರಕರಣ- ವಿದ್ವತ್ ಅಣ್ಣನ ಹೇಳಿಕೆ ಪಡೆದ ಸಿಸಿಬಿ

    ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್, ಯುವಕನ ಮೇಲೆ ನಡೆಸಿದ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಗಾಯಾಳು ವಿದ್ವತ್ ಅಣ್ಣ ಸಾತ್ವಿಕ್ ಹೇಳಿಕೆಯನ್ನು ಪಡೆದಿದ್ದಾರೆ.

    ವಿದ್ವತ್ ಅಲ್ಲದೆ ತನ್ನ ಮೇಲೂ ನಲಪಾಡ್ ಹಲ್ಲೆ ಮಾಡಿದ್ದಾನೆ. ಆಸ್ಪತ್ರೆಗೆ ಬಂದಾಗ ನನ್ನ ಮೇಲೂ ಕೈ ಮಾಡಿದ್ದ ಎಂದು ಸಿಸಿಬಿ ಪೊಲೀಸರ ಮುಂದೆ ಆಸ್ಪತ್ರೆಯಲ್ಲಿ ನಡೆದ ಘಟನೆ ಬಗ್ಗೆ ಸಾತ್ವಿಕ್ ಇಂಚಿಂಚೂ ಮಾಹಿತಿ ನೀಡಿದ್ದಾರೆ. ಹೀಗಾಗಿ ಇದೀಗ ಸಿಸಿಬಿ ಪೊಲೀಸರು ಸಾತ್ವಿಕ್ ಹೇಳಿಕೆಯನ್ನು ಕೂಡ ಪರಿಗಣಿಸಿದ್ದಾರೆ.

    ವಿದ್ವತ್ ಮೇಲೆ ಹಲ್ಲೆ ನಡೆದ ಬಳಿಕ ಆತನ ಸ್ನೇಹಿತರು ಫೋನ್ ಮಾಡಿ ನನಗೆ ವಿಷಯ ತಿಳಿಸಿದ್ದರು. ನಾನು ಸ್ಥಳಕ್ಕೆ ಬರುವಷ್ಟರಲ್ಲಿ ವಿದ್ವತ್ ನನ್ನು ಮಲ್ಯ ಅಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಗೆ ಬಂದಾಗ ನಲಪಾಡ್ ಹಾಗೂ ಅವನ ಗ್ಯಾಂಗ್ ಇಲ್ಲಿಗೂ ಬಂದಿದ್ದರು. ಈ ವೇಳೆ ಅವರು ಆಸ್ಪತ್ರೆಯಲ್ಲಿ ಗಲಾಟೆ ಮಾಡುತ್ತಿದ್ದಾಗ ನನ್ನ ಮೇಲೂ ಕಿರುಚಾಡಿದ್ದರು. ಇದಕ್ಕೆ ನಾನು ಪ್ರತಿರೋಧ ತೋರಿದಾಗ ನನ್ನ ಮೇಲೆ ಕೈ ಮಾಡಿದರು ಎಂದು ಸಾತ್ವಿಕ್ ಹೇಳಿದ್ದಾರೆ. ಇದನ್ನೂ ಓದಿ: ಜಾಮೀನಿಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಅಪ್ಪನಿಗೆ ರೌಡಿ ನಲಪಾಡ್ ಸೂಚನೆ!

    ಸಿಸಿಬಿ ಪೊಲೀಸರು ಫೆಬ್ರವರಿ 17ರ ರಾತ್ರಿ ಆಸ್ಪತ್ರೆಯಲ್ಲಿ ನಡೆದ ಘಟನೆ ಬಗ್ಗೆ ಸಾತ್ವಿಕ್ ಹೇಳಿಕೆ ಪಡೆದಿದ್ದು, ಆಸ್ಪತ್ರೆಯಲ್ಲಿ ವಿದ್ವತ್ ಮೇಲಿನ ಹಲ್ಲೆಯನ್ನು ಸಾತ್ವಿಕ್ ಪ್ರಶ್ನೆ ಮಾಡಿದ್ದನು. ಪ್ರಶ್ನೆ ಮಾಡಿದ್ದಕ್ಕೆ ವಿದ್ವತ್ ನನ್ನ ಆಸ್ಪತ್ರೆಗೆ ದಾಖಲಿಸಬೇಡ ಎಂದು ಸಾತ್ವಿಕ್ ಮೇಲೆ ನಲಪಾಡ್ ಹಲ್ಲೆ ಮಾಡಿದ್ದನು ಎಂಬುದಾಗಿ ವರದಿಯಾಗಿತ್ತು. ಇದನ್ನೂ ಓದಿ: ಜಾಮೀನು ಅರ್ಜಿ ತಿರಸ್ಕೃತ- ನಲಪಾಡ್ ಗೆ ಜೈಲೇ ಗತಿ

    ಶನಿವಾರ ಸಿಸಿಬಿ ಪೊಲೀಸರು ಮಲ್ಯ ಆಸ್ಪತ್ರೆಗೆ ಭೇಟಿ ನೀಡಿ ಸಾತ್ವಿಕ್ ಹೇಳಿಕೆಯನ್ನು ಪಡೆದಿದ್ದಾರೆ. ಸಾತ್ವಿಕ್ ನನ್ನು ಈ ಪ್ರಕರಣದ ಸಾಕ್ಷಿಯನ್ನಾಗಿ ಪರಿಗಣಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಜೈಲಿಂದ ಹೊರಬಂದ ಮೇಲೆ ನಿಂಗೆ ಇದೆ ನೋಡು- ತಂದೆ ಹ್ಯಾರಿಸ್ ಗೆ ಫೋನ್ ಮಾಡಿ ನಲಪಾಡ್ ಕ್ಲಾಸ್

  • ನನ್ನ ಹಣೆ ಬರಹವೇ ಸರಿ ಇಲ್ಲ- ಜಾಮೀನು ಅರ್ಜಿ ವಜಾ ಆಗುತ್ತಿದ್ದಂತೆ ಜೈಲಿನಲ್ಲಿ ಗೋಳಾಡಿದ ನಲಪಾಡ್

    ನನ್ನ ಹಣೆ ಬರಹವೇ ಸರಿ ಇಲ್ಲ- ಜಾಮೀನು ಅರ್ಜಿ ವಜಾ ಆಗುತ್ತಿದ್ದಂತೆ ಜೈಲಿನಲ್ಲಿ ಗೋಳಾಡಿದ ನಲಪಾಡ್

    ಬೆಂಗಳೂರು: ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಾಮೀನು ಅರ್ಜಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಜೈಲಿನ ಅಧೀಕ್ಷಕರ ಕೊಠಡಿಯಲ್ಲಿ ಟಿವಿ ನೋಡುತ್ತಿದ್ದ ನಲಪಾಡ್ ಅಲ್ಲಿಯೇ ಕುಸಿದು ಬಿದ್ದಿದ್ದಾನೆ. ಅಲ್ಲದೇ ಜೊತೆಯಲ್ಲಿದ್ದ ಸ್ನೇಹಿತರ ಮುಂದೆಯೇ ಜೋರಾಗಿ ಕೂಗಾಡಿದ್ದಾನೆ ಎಂದು ಜೈಲಿನ ಮೂಲಗಳಿಂದ ತಿಳಿದುಬಂದಿದೆ.

    ನನ್ನ ಹಣೆ ಬರಹವೇ ಸರಿ ಇಲ್ಲ ಎಂದು ಗೋಳಾಡುತ್ತಿರುವ ನಲಪಾಡ್, ಬೇಸರ ವ್ಯಕ್ತಪಡಿಸಿದ್ದಾನೆ ಎನ್ನಲಾಗಿದೆ. ಅರ್ಜಿ ವಿಚಾರಣೆ ತೀರ್ಪು ಹೊರಬೀಳುತ್ತಿದ್ದಂತೆಯೇ ಕೋರ್ಟ್ ಆವರಣದಲ್ಲಿದ್ದ ನಲಪಾಡ್ ಬೆಂಬಲಿಗರು ನಿರಾಶೆಯಿಂದ ಹಿಂದಿರುಗಿದ್ದಾರೆ. ಆದ್ರೆ ಈ ಕುರಿತು ನಲಪಾಡ್ ತಂದೆ ಇದೂವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

    ಪ್ರಕರಣ ಸಂಬಂಧ ಇತರೆ 6 ಜನ ಆರೋಪಿಗಳ ಜಾಮೀನು ಅರ್ಜಿಯನ್ನು ಕೂಡ ಕೋರ್ಟ್ ವಜಾಗೊಳಿಸಿದೆ. ಇದೊಂದು ಗಂಭೀರವಾರ ಪ್ರಕರಣವಾಗಿದ್ದು ಕೇಸ್ ವಿಚಾರಣೆ ತನಿಖಾ ಹಂತದಲ್ಲಿದೆ. ಹಲ್ಲೆಯ ಬಳಿಕ ಆರೋಪಿ ಆಸ್ಪತ್ರೆವರೆಗೂ ಹಿಂಬಾಲಿಸಿ ದುವರ್ತನೆ ತೋರಿರುವುದನ್ನು ಗಮನಿಸಲಾಗಿದೆ ಎಂದು ನ್ಯಾಯಾಧೀಶ ಪರಮೇಶ್ವರ ಪ್ರಸನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಪ್ರಕರಣ ಸಂಬಂಧ ಜಾಮೀನು ಅರ್ಜಿ ವಿಚಾರವಾಗಿ ಜೈಲಿನಲ್ಲಿ ಫುಲ್ ಟೆನ್ಷನ್ ಆಗಿರುವ ನಲಪಾಡ್, ಇಂದು ಬೆಳಗ್ಗೆ ಜಾಮೀನು ಕೊಡಿಸಲು ನಿನ್ನಿಂದ ಆಗುತ್ತಾ ಇಲ್ವಾ ಹೇಳು ಎಂದು ತಂದೆಗೆ ಆವಾಜ್ ಹಾಕಿದ್ದ ಎಂದು ಜೈಲಿನ ಮುಲಗಳಿಂದ ತಿಳಿದುಬಂದಿತ್ತು. ಒಂದು ವೇಳೆ ಜಾಮೀನು ಕೊಡಿಸಲು ಆಗದಿದ್ದರೆ ಹೊರಗಡೆ ನನ್ನ ಹುಡುಗರಿದ್ದಾರೆ. ಅವರಿಂದ ನಾನು ಜಾಮೀನು ತರಿಸಿಕೊಳ್ಳುತ್ತೇನೆ ಎಂದು ನಲಪಾಡ್ ತಂದೆಯನ್ನು ತರಾಟೆಗೆ ತಗೊಂಡಿದ್ದಾನೆ ಎನ್ನಲಾಗಿದೆ. ಜೈಲಿಗೆ ಬಂದು ಇಷ್ಟು ದಿನ ಆಯ್ತು. ಒಂದು ದಿನವೂ ಕೂಡ ನನ್ನನ್ನು ನೋಡಲು ಬಂದಿಲ್ಲ. ನಾನು ಜೈಲಿನಿಂದ ಹೊರ ಬಂದ ಮೇಲೆ ನಿಂಗೆ ಇದೆ ನೋಡು. ಇವತ್ತು ಜೈಲಿಗೆ ಬಂದು ನನ್ನ ನೋಡ್ಲೆಬೇಕು ಎಂದು ತನ್ನ ತಂದೆಯೊಂದಿಗೆ ಉರ್ದು ಭಾಷೆಯಲ್ಲಿ ಹೇಳಿ ಹಠ ಹಿಡಿದಿದ್ದಾನೆ ಎಂದು ತಿಳಿದುಬಂದಿತ್ತು.

  • ಜಾಮೀನು ಅರ್ಜಿ ತಿರಸ್ಕೃತ- ನಲಪಾಡ್ ಗೆ ಜೈಲೇ ಗತಿ

    ಜಾಮೀನು ಅರ್ಜಿ ತಿರಸ್ಕೃತ- ನಲಪಾಡ್ ಗೆ ಜೈಲೇ ಗತಿ

    ಬೆಂಗಳೂರು: ವಿದ್ವತ್ ಮೇಲೆ ಹಲ್ಲೆ ನಡೆಸಿ ಜೈಲು ಪಾಲಾಗಿರುವ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.

    ಅರ್ಜಿ ವಿಚಾರಣೆ ನಡೆಸಿದ 63ನೇ ಸಿಸಿಎಚ್ ನ್ಯಾಯಾಲಯ ನಲಪಾಡ್ ಮತ್ತು ತಂಡದ ಜಾಮೀನು ಅರ್ಜಿ ವಜಾ ಮಾಡಿದೆ. ಹೀಗಾಗಿ ನಲಪಾಡ್ ಗಳಗಳನೆ ಅಳಲು ಶುರುಮಾಡಿದ್ದಾನೆ ಎಂದು ತಿಳಿದುಬಂದಿದೆ. ನಲಪಾಡ್ ಮತ್ತು ಗ್ಯಾಂಗ್ ಜೈಲಿನಲ್ಲೇ ಕಾಲ ಕಳೆಯಬೇಕಿದೆ. ಸೆಷನ್ಸ್ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

    ನಲಪಾಡ್‍ನಿಂದ ಹೆಲ್ಲೆಗೊಳಗಾದ ವಿದ್ವತ್ ಇನ್ನೂ ಪೊಲೀಸರ ಮುಂದೆ ಹೇಳಿಕೆ ನೀಡಲು ಸಾಧ್ಯವಾಗಿಲ್ಲ. ವಿದ್ವತ್ ಆರೋಗ್ಯ ಸ್ಥಿತಿ ಇನ್ನೂ ಸುಧಾರಿಸಿಲ್ಲ ಎಂಬ ಅಂಶವನ್ನು ಪರಿಗಣಿಸಿ ಜಾಮೀನು ಅರ್ಜಿ ತಿರಸ್ಕರಿಸಲಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಜೈಲಿಂದ ಹೊರಬಂದ ಮೇಲೆ ನಿಂಗೆ ಇದೆ ನೋಡು- ತಂದೆ ಹ್ಯಾರಿಸ್ ಗೆ ಫೋನ್ ಮಾಡಿ ನಲಪಾಡ್ ಕ್ಲಾಸ್

    ನನ್ನ ಕಕ್ಷಿದಾರ (ನಲಪಾಡ್) ಅಮಾಯಕ. ಅವರ ಮೇಲೆ ರಾಜಕೀಯ ಒತ್ತಡಕ್ಕೆ ಇಲ್ಲಸಲ್ಲದ ಕೇಸ್ ಗಳನ್ನು ಹಾಕಿದ್ದಾರೆ. ಹೀಗಾಗಿ ಅವರಿಗೆ ಜಾಮೀನು ನೀಡಿ ಅಂತ ನಲಪಾಡ್ ಪರ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಿದ್ದರು. ಇದಕ್ಕೆ ಪ್ರತಿಯಾಗಿ ವಾದಿಸಿದ್ದ ವಿಶೇಷ ಅಭಿಯೋಜಕರಾದ ಶ್ಯಾಮ್ ಸುಂದರ್, ಈ ಪ್ರಕರಣ ದೇಶದ ಗಮನ ಸೆಳೆದಿದೆ. ಆರೋಪಿ ಪ್ರಬಲನಾಗಿರುವುದರಿಂದ ಸಾಕ್ಷಿ ನಾಶವಾಗುವ ಸಂಭವ ಇದೆ. ಹೀಗಾಗಿ ಜಾಮೀನು ನೀಡಬಾರದು ಅಂತ ವಾದ ಮಂಡಿಸಿದ್ದರು. ಇದನ್ನೂ ಓದಿ: ನಲಪಾಡ್‍ಗೆ ಜೈಲೇ ಗತಿ: ಆರೋಪಿಯ ಪರ ವಕೀಲರ ವಾದ ಏನಿತ್ತು? ಕೋರ್ಟ್ ಕಲಾಪದ ಡಿಟೇಲ್ ಇಲ್ಲಿದೆ

    ಪ್ರಕರಣ ಸಂಬಂಧ ಜಾಮೀನು ಅರ್ಜಿ ವಿಚಾರವಾಗಿ ಜೈಲಿನಲ್ಲಿ ಫುಲ್ ಟೆನ್ಷನ್ ಆಗಿರುವ ನಲಪಾಡ್, ಇಂದು ಬೆಳಗ್ಗೆ ಜಾಮೀನು ಕೊಡಿಸಲು ನಿನ್ನಿಂದ ಆಗುತ್ತಾ ಇಲ್ವಾ ಹೇಳು ಎಂದು ತಂದೆಗೆ ಆವಾಜ್ ಹಾಕಿದ್ದ ಎಂದು ಜೈಲಿನ ಮುಲಗಳಿಂದ ತಿಳಿದುಬಂದಿತ್ತು. ಒಂದು ವೇಳೆ ಜಾಮೀನು ಕೊಡಿಸಲು ಆಗದಿದ್ದರೆ ಹೊರಗಡೆ ನನ್ನ ಹುಡುಗರಿದ್ದಾರೆ. ಅವರಿಂದ ನಾನು ಜಾಮೀನು ತರಿಸಿಕೊಳ್ಳುತ್ತೇನೆ ಎಂದು ನಲಪಾಡ್ ತಂದೆಯನ್ನು ತರಾಟೆಗೆ ತಗೊಂಡಿದ್ದಾನೆ ಎನ್ನಲಾಗಿದೆ. ಜೈಲಿಗೆ ಬಂದು ಇಷ್ಟು ದಿನ ಆಯ್ತು. ಒಂದು ದಿನವೂ ಕೂಡ ನನ್ನನ್ನು ನೋಡಲು ಬಂದಿಲ್ಲ. ನಾನು ಜೈಲಿನಿಂದ ಹೊರ ಬಂದ ಮೇಲೆ ನಿಂಗೆ ಇದೆ ನೋಡು. ಇವತ್ತು ಜೈಲಿಗೆ ಬಂದು ನನ್ನ ನೋಡ್ಲೆಬೇಕು ಎಂದು ತನ್ನ ತಂದೆಯೊಂದಿಗೆ ಉರ್ದು ಭಾಷೆಯಲ್ಲಿ ಹೇಳಿ ಹಠ ಹಿಡಿದಿದ್ದಾನೆ ಎಂದು ತಿಳಿದುಬಂದಿತ್ತು.

     

  • ಜೈಲಿಂದ ಹೊರಬಂದ ಮೇಲೆ ನಿಂಗೆ ಇದೆ ನೋಡು- ತಂದೆ ಹ್ಯಾರಿಸ್ ಗೆ ಫೋನ್ ಮಾಡಿ ನಲಪಾಡ್ ಕ್ಲಾಸ್

    ಜೈಲಿಂದ ಹೊರಬಂದ ಮೇಲೆ ನಿಂಗೆ ಇದೆ ನೋಡು- ತಂದೆ ಹ್ಯಾರಿಸ್ ಗೆ ಫೋನ್ ಮಾಡಿ ನಲಪಾಡ್ ಕ್ಲಾಸ್

    ಬೆಂಗಳೂರು: ವಿದ್ವತ್ ಮೇಲೆ ಹಲ್ಲೆ ಮಾಡಿ ಸದ್ಯ ಜೈಲು ಸೇರಿರೋ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ತನ್ನ ತಂದೆ ಹ್ಯಾರಿಸ್ ಅವರಿಗೆ ಕರೆ ಮಾಡಿ ಕ್ಲಾಸ್ ತೆಗೆದುಕೊಂಡಿದ್ದಾನೆ ಎಂಬುದಾಗಿ ಪರಪ್ಪನ ಅಗ್ರಹಾರದ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಇಂದು ರೌಡಿ ನಲಪಾಡ್ ಭವಿಷ್ಯ- ಜಾಮೀನು ಅರ್ಜಿ ಕುರಿತು ಆದೇಶ

    ಪ್ರಕರಣ ಸಂಬಂಧ ಈಗಾಗಲೇ ಜಾಮೀನು ಅರ್ಜಿ ವಿಚಾರವಾಗಿ ಜೈಲಿನಲ್ಲಿ ಫುಲ್ ಟೆನ್ಷನ್ ಆಗಿರುವ ನಲಪಾಡ್, ಜಾಮಿನು ಕೊಡಿಸಲು ನಿನ್ನಿಂದ ಆಗುತ್ತಾ ಇಲ್ವಾ ಹೇಳು ಎಂದು ತಂದೆಗೆ ಆವಾಜ್ ಹಾಕಿದ್ದಾನೆ. ಒಂದು ವೇಳೆ ಜಾಮೀನು ಕೊಡಿಸಲು ಆಗದಿದ್ದರೆ ಹೊರಗಡೆ ನನ್ನ ಹುಡುಗರಿದ್ದಾರೆ. ಅವರಿಂದ ನಾನು ಜಾಮೀನು ತರಿಸಿಕೊಳ್ಳುತ್ತೇನೆ ಎಂದು ತಂದೆಯನ್ನು ತರಾಟೆಗೆ ತಗೊಂಡಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ನಲಪಾಡ್‍ಗೆ ಜೈಲೇ ಗತಿ: ಆರೋಪಿಯ ಪರ ವಕೀಲರ ವಾದ ಏನಿತ್ತು? ಕೋರ್ಟ್ ಕಲಾಪದ ಡಿಟೇಲ್ ಇಲ್ಲಿದೆ

    ಜೈಲಿಗೆ ಬಂದು ಇಷ್ಟು ದಿನ ಆಯ್ತು. ಒಂದು ದಿನವೂ ಕೂಡ ನನ್ನನ್ನು ನೋಡಲು ಬಂದಿಲ್ಲ. ನಾನು ಜೈಲಿನಿಂದ ಹೊರ ಬಂದ ಮೇಲೆ ನಿಂಗೆ ಇದೆ ನೋಡು. ಇವತ್ತು ಜೈಲಿಗೆ ಬಂದು ನನ್ನ ನೋಡ್ಲೆ ಬೇಕು ಎಂದು ತನ್ನ ತಂದೆಯೊಂದಿಗೆ ಉರ್ದು ಭಾಷೆಯಲ್ಲಿ ಹೇಳಿ ಹಠ ಹಿಡಿದಿದ್ದಾನೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮೈಮೇಲೆ ಕುರ್ಚಿಗಳನ್ನು ಎಸೆದ್ರು, sorry ಎಂದರೂ ಬಿಯರ್ ಬಾಟಲಿಯಿಂದ ಬಾಯಿಗೆ ಹೊಡೆದ್ರು- ನಲಪಾಡ್ ದಾಳಿ ಬಗ್ಗೆ ವಿದ್ವತ್ Exclusive ಮಾತು

    https://www.youtube.com/watch?v=oHsWb25A2VM