ಬೆಂಗಳೂರು: ತುಳು ಭಾಷೆಯನ್ನು (Tulu language) 2ನೇ ಹೆಚ್ಚುವರಿ ಭಾಷೆಯಾಗಿ ಘೋಷಿಸಿ ಎಂದು ಕಾಂಗ್ರೆಸ್ ಶಾಸಕ ಅಶೋಕ್ ರೈ ವಿಧಾನಸಭೆಯಲ್ಲಿ ಒತ್ತಾಯಿಸಿದರು. ತುಳುವಿನಲ್ಲೇ ಮಾತನಾಡಿ ಅಶೋಕ್ ರೈ (Ashok Kumar Rai) ಮನವಿ ಮಾಡಿದರು. ಅತ್ತ ಸ್ಪೀಕರ್ ಯು.ಟಿ ಖಾದರ್ (UT Khader) ಸಹ ತುಳುವಿನಲ್ಲೇ ಸ್ಪಷ್ಟನೆ ನೀಡಿದರು.
ಈ ವೇಳೆ ನೀವಿಬ್ಬರೇ ಮಾತನಾಡಿದ್ರೆ ಹೇಗೆ? ನಮಗೆ ನಿಮ್ಮ ಭಾಷೆ ಹೇಗೆ ಗೊತ್ತಾಗಬೇಕು? ಅಂತ ಹಲವು ಶಾಸಕರು ತಮಾಷೆಗೆಳೆದ ಪ್ರಸಂಗವೂ ಸದನದಲ್ಲಿ ನಡೆಯಿತು. ನೀವು ಏನು ಹೇಳಿದ್ರಿ ನಮಗೆ ಗೊತ್ತಾಗಲಿಲ್ಲ. ನಾವೇನು ಮಂಗಳೂರಿನ (Mangaluru) ಅಧಿವೇಶನದಲ್ಲಿ ಇದ್ದೇವಾ? ಅಂತಾ ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashoka) ಜೋರಾಗಿ ನಕ್ಕು, ಕನ್ನಡದಲ್ಲಿ ಮಾತನಾಡಿ ಎಂದರು.
ಇದರಿಂದ ತಂಗಡಗಿ ಅನುಪಸ್ಥಿತಿಯಲ್ಲಿ ಪ್ರಿಯಾಂಕ್ ಖರ್ಗೆ ಉತ್ತರ ನೀಡಿ, ಬೇರೆ ರಾಜ್ಯಗಳಲ್ಲಿ ಎರಡು ಭಾಷೆಗಳಿವೆ. ಬಿಹಾರದಲ್ಲೂ ಎರಡು ಭಾಷೆಗಳಿವೆ, ಸ್ವಂತ ಖರ್ಚಿನಲ್ಲಿ ಅಧ್ಯಯನ ಮಾಡಿ ತಂದಿದ್ದಾರೆ. ತುಳು ಭಾಷೆಯ ಪ್ರಾಚೀನತೆ ಇತಿಹಾಸ ಗಮನಕ್ಕಿದೆ. ನನ್ನ ಬಾಲ್ಯ ಸ್ನೇಹಿತ ಶ್ರವಣ್ ಅನ್ನುವವರಿದ್ದರು. ಅವರಿಗೆ ಅವರ ತಾಯಿ ತುಳುವಿನಲ್ಲೇ ಬೈಯ್ಯುತ್ತಿದ್ರು. ಹಾಗಾಗಿ ನೀವೇನು ಹೇಳಿದ್ರಿ ನನಗೂ ಅರ್ಥವಾಗಿದೆ. ನಾನು ಇದರ ಪರವಾಗಿದ್ದೇನೆ. ನಾಳೆಯೇ ಸಚಿವರ ಗಮನಕ್ಕೆ ತರುತ್ತೇನೆ. ಸಭೆ ಮಾಡಿ ನಿರ್ಧಾರ ಮಾಡ್ತೇವೆ, ಅಂತ ಸದನಕ್ಕೆ ಪ್ರಿಯಾಂಕ್ ಖರ್ಗೆ ಉತ್ತರ ನೀಡಿದರು.
ಬೆಂಗಳೂರು: ಇದೇ ಜುಲೈ 15ರಿಂದ ಜು.26ರ ವರೆಗೆ 16ನೇ ವಿಧಾನಸಭೆಯ 4ನೇ ಅಧಿವೇಶನ (Karnataka Assembly Session) ನಡೆಯಲಿದೆ. ಒಟ್ಟು 9 ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಸರ್ಕಾರದಿಂದ ಸ್ವೀಕರಿಸಲಾಗುವ ವಿಧೇಯಕಗಳನ್ನ ಪರ್ಯಾಯಾಲೋಚನೆಗೆ ಒಳಪಡಿಸುವುದು ಹಾಗೂ ಅಂಗೀಕಾರಕ್ಕೆ ತೆಗೆದುಕೊಳ್ಳುವುದಾಗಿ ವಿಧಾನಸಭೆ ಸಭಾಧ್ಯಕ್ಷ ಯು.ಟಿ ಖಾದರ್ (UT Khader) ತಿಳಿಸಿದ್ದಾರೆ.
ವಿಧಾನಸೌಧದಲ್ಲಿಂದು (Vidhana Soudha) ಮಾತನಾಡಿದ ಅವರು, 9 ದಿನಗಳ ಕಾಲ ಪ್ರಶ್ನೋತ್ತರ ಕಲಾಪ ನಿಗದಿಪಡಿಸಲಾಗಿದೆ. ಇದರೊಂದಿಗೆ ಗಮನ ಸೆಳೆಯುವ ಸೂಚನೆ, ಶೂನ್ಯವೇಳೆ, ನಿಲುವಳಿ ಸೂಚನೆ, ನಿಯಮ 69ರ ಸೂಚನೆಗಳು, ಖಾಸಗಿ ಸದಸ್ಯರ ಕಾರ್ಯಕಲಾಪಗಳನ್ನ ನಡೆಸಲಾಗುವುದು. ಅಲ್ಲದೇ 2024-24ನೇ ಸಾಲಿನ ವಿಧಾನ ಮಂಡಲ ಅಥವಾ ವಿಧಾನಸಭೆಯ ಸ್ಥಾಯಿ ಸಮಿತಿಗಳ ಅವಧಿ ಆಗಸ್ಟ್ 8ಕ್ಕೆ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ 2024-25ನೇ ಸಾಲಿಗೆ ಹೊಸದಾಗಿ ಸಮಿತಿಗಳನ್ನ ರಚಿಸುವ ಸಂಬಂಧ ಚುನಾವಣಾ ಪ್ರಸ್ತಾವವನ್ನ ಮಂಡಿಸಿ, ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪೀಕರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅದಿರು ಕೊರತೆ ಆಗದಿರಲಿ; NMDC ಅಧಿಕಾರಿಗಳಿಗೆ ಕೇಂದ್ರ ಸಚಿವ ಹೆಚ್‌ಡಿಕೆ ನಿರ್ದೇಶನ
ಮುಂದುವರಿದು ಮಾತನಾಡಿ, `ಅತ್ಯುತ್ತಮ ಶಾಸಕ ಪ್ರಶಸ್ತಿ ಆಯ್ಕೆ ಸಮಿತಿ’ ರಚನೆಯಾಗಿದೆ. ಈ ಬಾರಿ ಅತ್ಯುತ್ತಮ ಶಾಸಕರಿಗೆ ಪ್ರಶಸ್ತಿ ನೀಡುತ್ತಿದ್ದೇವೆ. ಸಭೆಗೆ ಬೇಗ ಹಾಜರಾಗುವ ಶಾಸಕರಿಗೆ ಟೀ ಕಪ್ ವಿತರಿಸಲಾಗುತ್ತದೆ. ಕಳೆದ ಬಾರೀ ನೀಡಿದ ಅವಕಾಶವನ್ನು ಶಾಸಕರಿಗೆ ಈ ಬಾರಿಯೂ ನೀಡಲಾಗುತ್ತದೆ. ಇಡೀ ದಿನ ಇರುವ ಸದಸ್ಯರಿಗೆ ವಿಶೇಷ ಅವಕಾಶ ನೀಡಲಾಗುತ್ತೆ. ಅವರು ಎಷ್ಟೊತ್ತಿಗೆ ಬರುತ್ತಾರೆ, ಹೋಗುತ್ತಾರೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಕಾಲಾವಕಾಶ ನೀಡುತ್ತೇವೆ. ಕಲಾಪ ವೀಕ್ಷಣೆಗೆ ಬರುವ ಮಕ್ಕಳು, ವಿದ್ಯಾರ್ಥಿಗಳಿಗೆ ಎಂದಿನಂತೆ ವ್ಯವಸ್ಥೆ ಇರಲಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ:
ಇದೇ ವೇಳೆ ವಿಧಾನ ಪರಿಷತ್‌ನ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಮಾತನಾಡಿ, 2022-23ನೇ ಸಾಲಿನ ಅತ್ಯುತ್ತಮ ಶಾಸಕರ ಪ್ರಶಸ್ತಿ ಬಹುತೇಕ ಆಯ್ಕೆ ಆಗಿದೆ. ಮೊದಲ ದಿನದ ಅಧಿವೇಶನ ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದೆ. ವರ್ಷಕ್ಕೆ 60 ದಿನ ಅಧಿವೇಶನ ನಡೆಯಬೇಕು, ಆದರೆ ಇತ್ತೀಚಿನ ದಿನಗಳಲ್ಲಿ ಆಗುತ್ತಿಲ್ಲ. ಸಿಎಂ ಬಳಿ ಈ ಬಗ್ಗೆ ಚರ್ಚೆ ಮಾಡ್ತೀವಿ, ಸಭೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ. ಇದನ್ನೂ ಓದಿ:
ಇನ್ನೂ ಸಚಿವರಿಂದ ಕೊಠಡಿ ನವೀಕರಣ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ವಿಧಾನಸೌಧದಲ್ಲಿರೋ ಸಚಿವರ ಕೊಠಡಿಗಳಿಗೆ ಅನುಮತಿ ಪಡೆದು ಸುಣ್ಣ-ಬಣ್ಣ ಬಳಿಸಲು ಅವಕಾಶ ಇದೆ. ಆದ್ರೆ ಹೇಗೆ ಬೇಕೋ ಹಾಗೆ ನವೀಕರಣ ಮಾಡಲು ಅವಕಾಶವಿಲ್ಲ. ವಿಧಾನಸೌಧ ವಾಸ್ತು ಪ್ರಕಾರವಾಗಿಯೇ ನಿರ್ಮಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
– ಕೇಂದ್ರ ಸರ್ಕಾರ, ಬಿಜೆಪಿ ನಾಯಕರ ವಿರುದ್ಧ ಜಿ.ಟಿ. ದೇವೇಗೌಡ ವಾಗ್ದಾಳಿ
ಬೆಂಗಳೂರು: ಕೆಲ ದಿನಗಳ ಹಿಂದೆ ವಿಧಾನಸಭೆ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ (H.D.Kumaraswamy) ಪರಸ್ಪರ ವಾಗ್ಯುದ್ಧವನ್ನೇ ನಡೆಸಿದ್ದರು. ಆದರೆ ಜೆಡಿಎಸ್ (JDS) ಕೆಲ ನಾಯಕರು, ಕಾಂಗ್ರೆಸ್ (Congress) ಹಾಗೂ ಸಿದ್ದರಾಮಯ್ಯ ವಿಚಾರದಲ್ಲಿ ಸಾಫ್ಟ್‌ಕಾರ್ನರ್ ಹೊಂದಿದಂತೆ ಕಾಣುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ (G.T.Devegowda) ಅವರು ಸದನದಲ್ಲಿ ಕಾಂಗ್ರೆಸ್ ಸರ್ಕಾರ, ಸಿಎಂ ಸಿದ್ದರಾಮಯ್ಯ ಹಾಗೂ ಗ್ಯಾರಂಟಿಗಳ ಪರವಾಗಿ ಬ್ಯಾಟಿಂಗ್ ಮಾಡಿದರು.
ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಚರ್ಚೆ ಮೇಲೆ ಮಾತನಾಡಿದ ಜಿ.ಟಿ. ದೇವೇಗೌಡ, ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಬೆಂಬಲಿಸಬೇಕಿತ್ತು. ಕೇಂದ್ರ ಅಕ್ಕಿ ಕೊಡಬೇಕಿತ್ತು, ಆದರೆ ಕೊಡಲಿಲ್ಲ. ರಾಜ್ಯ ಸರ್ಕಾರದ ತೆರಿಗೆ ಸಂಗ್ರಹದಿಂದ ಕೇಂದ್ರ ಸರ್ಕಾರ ನಡೆಯುತ್ತಿದೆ. ಅನ್ನಭಾಗ್ಯಕ್ಕೆ ಕೇಂದ್ರ ಬೆಂಬಲ ನೀಡದೆ ಇರುವುದು ಖಂಡನೀಯ. ಐದು ಗ್ಯಾರಂಟಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಲು ಬಿಜೆಪಿಗೆ ಅಧಿಕಾರ ಇಲ್ಲ ಎಂದು ಕೇಂದ್ರ ಸರ್ಕಾರ ಹಾಗೂ ರಾಜ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೇ, ಸರ್ಕಾರ ಐದು ಗ್ಯಾರಂಟಿ ಜಾರಿಗೆ ತಂದಿದೆ. ತಿಂಗಳಿಗೆ ಒಂದೊಂದು ಮಾಡಲಿ. ಎಲ್ಲಾ ಕಾರ್ಯಕ್ರಮ ಜಾರಿಗೆ ತರಲಿ ಎಂದು ಆಶಯ ವ್ಯಕ್ತಪಡಿಸಿದರು. ಇದನ್ನೂ ಓದಿ: ವಿರೋಧ ಪಕ್ಷದ ನಾಯಕ ಕುಮಾರಸ್ವಾಮಿ? – ಸದನದಲ್ಲಿ ಸ್ವಾರಸ್ಯಕರ ಚರ್ಚೆ
ಸಿಎಂ ಸಿದ್ದರಾಮಯ್ಯ ಪರವಾಗಿಯೂ ಜಿ.ಟಿ.ದೇವೇಗೌಡರು ಮಾತನಾಡಿದ್ದಾರೆ. ಅನ್ನಭಾಗ್ಯ ಯೋಜನೆ ಪರವಾಗಿ ಮಾತನಾಡುವಾಗ ಜಿಟಿಡಿ, ಅನ್ನಭಾಗ್ಯ ಯೋಜನೆಯ ಹಿಂದೆ ಸಿದ್ದರಾಮಯ್ಯ ಅವರ ಅನುಭವ ಇದೆ. ಬಡತನದ ಹಿನ್ನೆಲೆಯ ಸಿದ್ದರಾಮಯ್ಯ ಕುಟುಂಬದ ಬಗ್ಗೆ ನನಗೆ ಗೊತ್ತಿದೆ. ಆ ಕಾರಣಕ್ಕೆ ಸಿದ್ದರಾಮಯ್ಯ ಅನ್ನಭಾಗ್ಯ ತಂದಿದ್ದಾರೆ. ಅದಕ್ಕಾಗಿ ನಾನು ಸಿದ್ದರಾಮಯ್ಯ ಅವರನ್ನು ಅಭಿನಂದಿಸುತ್ತೇನೆ. ಸಿದ್ದರಾಮಯ್ಯ ಅವರ ಕುಟುಂಬ, ಹೊಲ, ಗದ್ದೆ ನನಗೆ ಗೊತ್ತು. ಅವರ ತುಂಬು ಕುಟುಂಬದ ಬಗ್ಗೆಯೂ ನನಗೆ ಗೊತ್ತು ಎಂದು ಹೇಳಿದರು.
ಬೆಂಗಳೂರು: ವಿಧಾನಸಭೆ ಕಲಾಪದಲ್ಲಿಂದು ನಾಗಮಂಗಲದ ಚಾಲಕ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣ ಭಾರೀ ಗದ್ದಲ, ಕೋಲಾಹಲಕ್ಕೆ ವೇದಿಕೆ ಒದಗಿಸಿತ್ತು. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಮತ್ತು ಸಿಎಂ ಸಿದ್ದರಾಮಯ್ಯ (Siddaramaiah) ನಡುವೆ ತೀವ್ರ ವಾಕ್ಸಮರ ನಡೆಯಿತು.
ನಾಗಮಂಗಲ ಕೆಎಸ್‌ಆರ್‌ಟಿಸಿ ಡಿಪೋ ಚಾಲಕ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣದಲ್ಲಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ತನಿಖೆ ನಡೆಸುವಂತೆ, ಸಚಿವರ ರಾಜೀನಾಮೆ ಪಡೆಯುವಂತೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸದನದಲ್ಲಿ ಜಂಟಿ ಹೋರಾಟ ನಡೆಸಿದರು. ಇದನ್ನೂ ಓದಿ: ಹೆಚ್‌ಡಿಕೆಯ ವರ್ಗಾವಣೆ ಬಾಂಬ್‌ಗೆ ‘ದ್ವೇಷ’ದ ಪಂಚ್ ಕೊಟ್ಟ ಸಿದ್ದರಾಮಯ್ಯ
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮೊದಲು ಪ್ರಕರಣದ ಬಗ್ಗೆ ಪ್ರಸ್ತಾಪಿಸಿ, ಪ್ರಕರಣದ ಸಮಗ್ರ ತನಿಖೆ ನಡೆಸಬೇಕು. ತನಿಖೆ ಮುಗಿಯೋವರೆಗೂ ಸಚಿವ ಚೆಲುವರಾಯಸ್ವಾಮಿ ರಾಜೀನಾಮೆ ಕೊಡಬೇಕು ಅಂತ ಆಗ್ರಹಿಸಿದರು. ಬಳಿಕ ಮಧ್ಯ ಪ್ರವೇಶಿಸಿದ ಹೆಚ್‌ಡಿಕೆ ಸಚಿವ ಚೆಲುವರಾಯಸ್ವಾಮಿ ವಿರುದ್ಧ ತೀಕ್ಷ್ಣವಾಗಿಯೇ ವಾಗ್ದಾಳಿ ನಡೆಸಿದರು. ಈ ವೇಳೆ ಪರಸ್ಪರ ನಡುವೆ ವಾಕ್ಸಮರ ನಡೆಯಿತು. ಜಗದೀಶ್ ಆತ್ಮಹತ್ಯೆ ಯತ್ನಕ್ಕೆ ಚೆಲುವರಾಯಸ್ವಾಮಿ ಕಾರಣ ಅಂತ ಹೆಚ್‌ಡಿಕೆ ಆರೋಪಿಸಿದರು. ಇತ್ತ, ಮೈಸೂರು ಆಸ್ಪತ್ರೆಗೆ ಜಗದೀಶ್ ದಾಖಲು ತಡೆದಿದ್ದು ಹೆಚ್‌ಡಿಕೆ, ಆತನಿಗೆ ಹೆಚ್ಚು ಕಡಿಮೆ ಆದ್ರೆ ಹೆಚ್‌ಡಿಕೆ ಕಾರಣ ಅಂತ ಚೆಲುವರಾಯಸ್ವಾಮಿ ಕಿಡಿಕಾರಿದರು. ಒಂದು ಹಂತದಲ್ಲಿ ಇಬ್ಬರೂ ಸಹನೆ ಕಳೆದುಕೊಂಡು ಏಕವಚನದಲ್ಲೇ ಬೈದಾಡಿಕೊಂಡರು.
ಇದೇ ವೇಳೆ ಸಚಿವ ಕೆ.ಜೆ ಜಾರ್ಜ್, ಚೆಲುವರಾಯಸ್ವಾಮಿ ಪರ ರಕ್ಷಣೆಗೆ ಬಂದು ಹೆಚ್‌ಡಿಕೆ ವಿರುದ್ಧ ಮುಗಿಬಿದ್ದರು. ಜಾರ್ಜ್ ಮತ್ತು ಹೆಚ್‌ಡಿಕೆ ಮಧ್ಯೆಯೂ ಸಾಕಷ್ಟು ಜಟಾಪಟಿ ನಡೆಯಿತು. ತಾಕತ್ ಇದ್ರೆ ನಿಮ್ಮ ಬಳಿ ಇರೋ ಪೆನ್‌ಡ್ರೈವ್ ಕೊಡಿ ತನಿಖೆ ಮಾಡ್ತೀವಿ ಅಂತ ಜಾರ್ಜ್ ಸವಾಲು ಹಾಕಿದರು. ಇದಕ್ಕೆ ಹೆಚ್‌ಡಿಕೆ, ಇಲ್ಲೇ ಆಡಿಯೋ ವ್ಯವಸ್ಥೆ ಮಾಡಿ 224 ಶಾಸಕರಿಗೂ ಪೆನ್‌ಡ್ರೈವ್ ಆಡಿಯೋ ಕೇಳಿಸ್ತೀನಿ ಅಂತ ಪ್ರತಿ ಸವಾಲೊಡ್ಡಿದರು. ಇನ್ನೂ ಪೆನ್‌ಡ್ರೈವ್‌ನಲ್ಲಿರುವ ಸಚಿವರ ಹೆಸರೇ ಹೇಳಿಲ್ಲ. ನೀವ್ಯಾಕೆ ಮೈಪರಚಿಕೊಳ್ತೀರ ಅಂತ ಜಾರ್ಜ್‌ಗೆ ಹೆಚ್‌ಡಿಕೆ ಟಾಂಗ್ ಕೊಟ್ಟರು. ಇದನ್ನೂ ಓದಿ: ನಾನು ವರ್ಗಾವಣೆ ದಂಧೆ ನಡೆಸಿದ್ದೇನೆ ಅಂತ ಒಂದು ಪ್ರಕರಣ ತೋರಿಸಿದ್ರೆ ರಾಜಕೀಯ ನಿವೃತ್ತಿ: ಹೆಚ್‌ಡಿಕೆ
ಮಾತಾಡುವಾಗ ಸಿಎಂ ಸಿದ್ದರಾಮಯ್ಯರನ್ನೂ ಹೆಚ್‌ಡಿಕೆ ಕೆಣಕಿದರು. ಇಂದು ಬೆಳಗ್ಗೆ ಸಿದ್ದರಾಮಯ್ಯರ ಮಾಧ್ಯಮ ಹೇಳಿಕೆ ಬಗ್ಗೆ ಉಲ್ಲೇಖಿಸಿದ ಹೆಚ್‌ಡಿಕೆ, ಸಿದ್ದರಾಮಯ್ಯನವರು ಮಾಧ್ಯಮಗಳ ಎದುರು ದೇವೇಗೌಡರು ಕುಟುಂಬದ ಬಗ್ಗೆ ಮಾತಾಡಿದ್ದಾರೆ. ಮುಖ್ಯಮಂತ್ರಿಗಳು ಭಾರೀ ಉತ್ತರ ಕೊಟ್ಟುಬಿಟ್ಟಿದ್ದಾರೆ ಅಂತ ಕೆಲವರು ಅವರಿಗೆ ಶೇಕ್ ಹ್ಯಾಂಡ್ ಕೊಟ್ಟರು. ಇದನ್ನೆಲ್ಲ ನಾನು ಗಮನಿಸಿದ್ದೇನೆ. ದೇವೇಗೌಡರನ್ನು ನೀವು ಕುತ್ತಿಗೆ ಕುಯ್ದ್ರಿ. ಜೆಡಿಎಸ್‌ನ ಬಿಜೆಪಿ ‘ಬಿ’ ಟೀಮ್ ಅಂದ್ರಿ. ಈಶ್ವರಪ್ಪರಿಂದ ಸಣ್ಣ ವಿಷಯಕ್ಕೆ ರಾಜೀನಾಮೆ ತಗೊಂಡ್ರಲ್ಲ. ಈಗ ಯಾಕೆ ಚೆಲುವರಾಯಸ್ವಾಮಿ ರಾಜೀನಾಮೆ ಕೊಡ್ತಿಲ್ಲ ಅಂತ ಸಿದ್ದರಾಮಯ್ಯಗೆ ಠಕ್ಕರ್ ಕೊಟ್ಟರು. ಹೆಚ್‌ಡಿಕೆ ಮಾತಿಗೆ ಸಿಟ್ಟಾದ ಸಿಎಂ, ನಿಮಗೆ ಯಾರು ಹೆದರುಕೊಳ್ಳುವುದಿಲ್ಲ ಕುಮಾರಸ್ವಾಮಿಯವರೇ. ನನಗೂ ಇದಕ್ಕೂ ಏನ್ರೀ ಸಂಬಂಧ. ನನಗೆ ಇದರ ಬಗ್ಗೆ ಗೊತ್ತೇ ಇಲ್ಲ. ಯಾರಿಗೆ ನೀವು ಹೆದರಿಸ್ತೀರಿ. ನಾನು ಹೆದರಿಕೊಂಡು ರಾಜಕಾರಣ ಮಾಡಿಲ್ಲ ಅಂತ ತಿರುಗೇಟು ನೀಡಿದರು.
ಸಿಎಂ vs ಮಾಜಿ ಸಿಎಂ ಜಟಾಪಟಿ
ಮಾಜಿ ಸಿಎಂ ಹೆಚ್‌ಡಿಕೆ ಮಾತನಾಡಿವಾಗ, ಬಹಳ ಚೆನ್ನಾಗಿ ಉತ್ತರ ಕೊಟ್ಟಿದ್ದೀರ ಅಂತ ನಮ್ಮ ಮುಖ್ಯಮಂತ್ರಿಗಳಿಗೆ ಶೇಕ್ ಹ್ಯಾಂಡ್ ಬೇರೆ ಕೊಟ್ರು. ರೀ.. ನಾವು ಇದಕ್ಕೆಲ್ಲ ಕೇರ್ ಮಾಡಲ್ಲ. ಇದನ್ನೆಲ್ಲ ಗಮನಿಸುತ್ತಿರುತ್ತೇವೆ. ಇಂಥದ್ದನ್ನೆಲ್ಲ ಬಹಳ ನೋಡಿಬಿಟ್ಟಿದ್ದೀವಿ. ಈ ಥರದ ರಾಜಕಾರಣ ಯಾರಿಗೂ ಶಾಶ್ವತ ಅಲ್ಲ ಎಂದು ಸಿಎಂ ಸಿದ್ದುಗೆ ಟಾಂಗ್ ಕೊಟ್ಟರು.
ಇದಕ್ಕೆ ಪ್ರತಿಯಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಿಮಗೆಲ್ಲ ಹೆದರಿಕೊಳ್ತೀವೇನ್ರಿ ನಾವು. ನೀವು ಕೇರ್ ಮಾಡಿದ್ರೆ, ನಾವು ಕೇರ್ ಮಾಡ್ತೀವಿ. ಕೇರ್ ಮಾಡಲ್ಲ ಅಂದ್ರೆ.. ನಾವು ಕೇರ್ ಮಾಡಲ್ಲ. ಯಾರ್ರೀ ಹೆದರಿಕೊಳ್ತಾರೆ ನಿಮಗೆ? ನಾನು ಸುಮ್ನೆ ಕುಲುಕಿದ್ದೇನೆ. ಅವರು ಬಂದು ಕೈ ಕುಲುಕಿದ್ರೆ.. ಚೆನ್ನಾಗಿ ಉತ್ತರ ಕೊಟ್ಟಿದ್ದಾರೆ ಅಂತ ಕೈ ಕುಲುಕಿದ್ರು ಅಂತ ಹೇಳಿದ್ರೆ? ನನಗೂ ಇದ್ದಕ್ಕೂ ಸಂಬಂಧವೇ ಇಲ್ಲ ಎಂದು ಹೆಚ್‌ಡಿಕೆ ವಿರುದ್ಧ ಗರಂ ಆದರು. ಇದನ್ನೂ ಓದಿ: ಯತೀಂದ್ರ ನಮ್ಮ ಮನೆಯಲ್ಲಿದ್ದಾರೆ ಅಂತ ಆರೋಪ ಮಾಡೋದು ಸರಿಯಲ್ಲ – HDK ವಿರುದ್ಧ ಸಿಎಂ ವಾಗ್ದಾಳಿ
ಈ ವೇಳೆ, ನಾವು ಕೂಡ ಕೇರ್ ಮಾಡಲ್ಲ ಅಂತ ಹೆಚ್‌ಡಿಕೆ ಪ್ರತಿ ವಾಗ್ದಾಳಿ ನಡೆಸಿದರು. ಆಗ ಸಿಎಂ ಸಿದ್ದರಾಮಯ್ಯ ಮಾತನಾಡಿ, ನೀವು ಕೇರ್ ಮಾಡಲ್ಲ ಅಂದ್ರೆ.. ಅದರ ಅಪ್ಪನಷ್ಟು ನಾವು ಕೇರ್ ಮಾಡಲ್ಲ. ಹೇಯ್.. ಹೋಗ್ರಿ ಕೇರ್ ಮಾಡದೇ ಇದ್ರೆ ನೀವು. ಇಂಥವರನ್ನ ಬಹಳ ಜನರನ್ನ ನೋಡಿಬಿಟ್ಟಿದ್ದೀನಿ ಎಂದು ಜೋರು ಧ್ವನಿಯಲ್ಲೇ ಮಾತನಾಡಿದರು.
ಬೆಂಗಳೂರು: ವಿಧಾನಸಭೆಯ ಅಧಿವೇಶನದಲ್ಲೂ (Assembly Session) ದೈವಾರಾಧನೆ (Daivaradhane) ವಿಚಾರ ಸದ್ದು ಮಾಡಿದೆ. ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿದ್ದ ಶಿಕ್ಷಣ ಇಲಾಖೆ ವಿರುದ್ಧ ಶಾಸಕ ಸುನೀಲ್ ಕುಮಾರ್ (Sunil Kumar) ಗರಂ ಆದರು.
ಅಧಿವೇಶನದ ಶೂನ್ಯ ವೇಳೆಯಲ್ಲಿ ದೈವಾರಾಧನೆ ಬಗ್ಗೆ ಪ್ರಸ್ತಾಪಿಸಿದ ಸುನೀಲ್ ಕುಮಾರ್, ದಕ್ಷಿಣ ಕನ್ನಡ ಸೇರಿದಂತೆ ಮೂರ್ನಾಲ್ಕು ಜಿಲ್ಲೆಗಳಲ್ಲಿ ದೈವಾರಾಧನೆ ಪದ್ಧತಿ ಇದೆ. ಶಿಕ್ಷಣ ಇಲಾಖೆಯು ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿದೆ. ಜನಪದ ನೃತ್ಯಗಳ ಜೊತೆಗೆ ದೈವಾರಾಧನೆ ಕೂಡ ಸೇರಿಸಲಾಗಿದೆ. ದೈವಾರಾಧನೆ ಪ್ರದರ್ಶನದ ವಸ್ತು ಅಲ್ಲ ಎಂದು ಗುಡುಗಿದರು. ಇದನ್ನೂ ಓದಿ: ನನ್ನ ಕನ್ನಡ ಹೆಚ್ಚು ಕಡಿಮೆ ಇರ್ಬೋದು, ಆದ್ರೆ ಪ್ರೀತಿಯ ಭಾಷೆ: ಖಾದರ್
ಶಿಕ್ಷಣ ಇಲಾಖೆ ಕೂಡಲೇ ಈ ಆದೇಶದಲ್ಲಿ ದೈವಾರಾಧನೆ, ಕೋಲ ಕೈಬಿಡಬೇಕು ಎಂದು ಒತ್ತಾಯ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa), ಆದೇಶದಲ್ಲಿ ಬದಲಾವಣೆ ಮಾಡುವುದಾಗಿ ಭರವಸೆ ನೀಡಿದರು.
ದೈವಾರಾಧನೆಯು ತುಳುನಾಡಿನ ಆರಾಧನೆಯಲ್ಲಿ ಪ್ರಮುಖವಾದದ್ದು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ದೈವಾರಾಧನೆ ಸಂಪ್ರದಾಯ ಆಚರಣೆಯಲ್ಲಿದೆ. ರಿಷಬ್ ಶೆಟ್ಟಿಯ ‘ಕಾಂತಾರ’ ಸಿನಿಮಾ ಬಂದ ನಂತರ ದೈವಾರಾಧನೆ ಸಂಸ್ಕೃತಿ ದೇಶ-ವಿದೇಶಗಳಲ್ಲಿ ಹೆಚ್ಚು ಚಿರಪರಿಚಿತವಾಯಿತು. ಇದನ್ನೂ ಓದಿ: ಕುಮಾರಸ್ವಾಮಿ ಯಾವತ್ತೂ ಹಿಟ್ & ರನ್ ಕೇಸ್ – ಸಿಎಂ ತಿರುಗೇಟು
ಸಿನಿಮಾದಿಂದ ಪ್ರೇರೇಪಿತರಾದ ಅನೇಕರು ದೈವಾರಾಧನೆಯನ್ನು ಅನುಕರಿಸಲು ಶುರು ಮಾಡಿದ್ದರು. ಕೆಲವರು ಇದನ್ನೇ ಧಂದೆ ಮಾಡಿಕೊಂಡಿದ್ದರು. ದೈವಾರಾಧನೆ ಮಹತ್ವದ ಬಗ್ಗೆ ತಿಳಿಸಿದ ಬಳಿಕ ಅನುಕರಣೆ, ಧಂದೆ ನಿಯಂತ್ರಣಕ್ಕೆ ಬಂತು. ಆದರೂ ಒಂದಲ್ಲಾ ಒಂದು ವಿಚಾರವಾಗಿ ದೈವಾರಾಧನೆ ಸುದ್ದಿಯಾಗುತ್ತಲೇ ಇದೆ.
ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಸಿ.ಅಶ್ವಥ್ ನಾರಾಯಣ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಈ ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ.
ಈ ಕುರಿತು ಟ್ವೀಟ್ ಮಾಡುವ ಮೂಲಕ ಸ್ವತಃ ಅವರೇ ಸ್ಪಷ್ಟಪಡಿಸಿದ್ದು, ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.
ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ.
ಸೆಪ್ಟೆಂಬರ್ 21ರಿಂದ ವಿಧಾನಸಭೆ ಅಧಿವೇಶನ ನಡೆಯುತ್ತಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅಧಿವೇಶನದಲ್ಲಿ ಭಾಗವಹಿಸುವ ಎಲ್ಲ ಶಾಸಕರು ಹಾಗೂ ಅಧಿಕಾರಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ಈ ಹಿನ್ನೆಲೆ ಹಲವರು ಕೊರೊನಾ ಪರೀಕ್ಷೆಗೆ ಒಳಗಾಗುತ್ತಿದ್ದಾರೆ. ಅದರಂತೆ ಡಿಸಿಎಂ ಅಶ್ವಥ್ ನಾರಾಯಣ್ ಸಹ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದು, ಈ ವೇಳೆ ಪಾಸಿಟಿವ್ ಇರುವುದು ಪತ್ತೆಯಾಗಿದೆ.
– ಕಾಂಗ್ರೆಸ್ ಅವಧಿಯಲ್ಲಿ ವಿರೋಧಿಸಿದ್ದ ಬಿಜೆಪಿ
– ಸ್ಪೀಕರ್ ಕಾಗೇರಿ ನಡೆಗೆ ಸಿಎಂ ಅಸಮಾಧಾನ
ಬೆಂಗಳೂರು: ವಿಧಾನಸಭೆ ಅಧಿವೇಶನಕ್ಕೆ ಖಾಸಗಿ ದೃಶ್ಯ ಮಾಧ್ಯಮಗಳಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಿರ್ಬಂಧ ಹೇರಿದ್ದಾರೆ.
ವಿಧಾನಸೌಧದಲ್ಲಿ ಗುರುವಾರದಿಂದ 3 ದಿನ ಅಧಿವೇಶನ ನಡೆಯಲಿದೆ. ಅಧಿವೇಶನಕ್ಕೆ ಕೇವಲ ಒಂದು ದಿನ ಬಾಕಿ ಇರುವಾಗಲೇ ಖಾಸಗಿ ದೃಶ್ಯ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿ ಸ್ಪೀಕರ್ ಕಾಗೇರಿ ಆದೇಶ ಹೊರಡಿಸಿದ್ದಾರೆ. ಸ್ಪೀಕರ್ ಅವರ ಈ ನಿರ್ಧಾರಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಇದೇ ಮೊದಲ ಬಾರಿಗೆ ಬಿಜೆಪಿ ಅಧಿವೇಶನ ನಡೆಸುತ್ತಿದೆ. ಬೆಳಗಾವಿಯಲ್ಲಿ ನಡೆಸಬೇಕಾದ ಅಧಿವೇಶನವನ್ನು ಪ್ರವಾಹದ ನೆಪವೊಡ್ಡಿ ಬೆಂಗಳೂರಿನಲ್ಲಿ ನಡೆಸಲಾಗುತ್ತಿದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗುತ್ತಿದ್ದ ಪ್ರತಿಪಕ್ಷಗಳಿಗೆ ಈಗ ಮತ್ತೊಂದು ಅಸ್ತ್ರ ಸಿಕ್ಕಿದೆ.
ಜನಪ್ರತಿನಿಧಿಗಳ ಸೋಮಾರಿತನ ಬಯಲುಮಾಡುವುದೇ ತಪ್ಪಾ? ಕಲಾಪದ ವೇಳೆ ನಿದ್ರೆ ಮಾಡುವುದನ್ನು ತೋರಿಸುವುದೆ ತಪ್ಪಾ? ಸದನದಲ್ಲಿ ಬ್ಲೂ ಫಿಲ್ಮ್ ನೋಡಿದ್ದನ್ನು ಹಾಗೂ ಕಿತ್ತಾಡೋದನ್ನು ತೋರಿಸಿದ್ದೇ ತಪ್ಪಾ? ಮಾಧ್ಯಮಗಳ ಮೇಲ್ಯಾಕೆ ಸ್ಪೀಕರ್‌ಗೆ ಈ ಕೋಪ ಎನ್ನುವ ಪ್ರಶ್ನೆ ಎದ್ದಿದೆ.
ಈ ಹಿಂದೆಯೂ ಕೂಡ ಬಿಜೆಪಿ ಸರ್ಕಾರ ಆಡಳಿತ ಅವಧಿಯಲ್ಲಿ ವಿಧಾನಸೌಧ ಕಲಾಪದಲ್ಲಿ ದೃಶ್ಯ ಮಾಧ್ಯಮ ನಿರ್ಬಂಧಕ್ಕೆ ಚಿಂತನೆ ನಡೆಸಲಾಗಿತ್ತು. ಆದರೆ ಅಂದು ಕೂಡ ವಿರೋಧ ಪಕ್ಷ ಹಾಗೂ ಮಾಧ್ಯಮಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಚಿಂತನೆಯನ್ನು ಕೈಬಿಡಲಾಗಿತ್ತು. ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿಧಾನಸೌಧ ಕಲಾಪದಲ್ಲಿ ದೃಶ್ಯ ಮಾಧ್ಯಮ ನಿರ್ಬಂಧಕ್ಕೆ ಚಿಂತನೆ ನಡೆಸಲಾಗಿತ್ತು. ಆದರೆ ಬಿಜೆಪಿ ನಾಯಕರು ಇದಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನಕ್ಕೆ ದೃಶ್ಯ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಲಾಗಿದೆ.
ನಮ್ಮವರಿಗೆ ನಾನು ಅಧಿಕಾರ ನಡೆಸುವುದು ಇಷ್ಟ ಇಲ್ಲವಾ? ನಮ್ಮವರೇ ನಮ್ಮ ಮೇಲೆ ಸಮಸ್ಯೆ ಹುಟ್ಟು ಹಾಕುತ್ತಿದ್ದಾರೆ. ಮಾಜಿ ಸಿಂ ಸಿದ್ದರಾಮಯ್ಯ ಸರ್ಕಾರ ಅವಧಿಯಲ್ಲಿ ಮಾಧ್ಯಮ ನಿರ್ಬಂಧ ಪ್ರಸ್ತಾವನೆಯನ್ನು ಬಿಜೆಪಿ ವಿರೋಧಿಸಿತ್ತು. ಈಗ ಬಹಳಷ್ಟು ಸಮಸ್ಯೆಗಳು ಇವೆ. ಈ ಸಂದರ್ಭದಲ್ಲಿ ಮಾಧ್ಯಮಗಳ ಮೇಲೆ ನಮ್ಮ ಸವಾರಿ ಬೇಕೇ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗರಂ ಆಗಿದ್ದಾರೆ ಎನ್ನಲಾಗಿದೆ.
ನಾವು ವಿರೋಧ ಪಕ್ಷಗಳ ಎದುರಿಸಬೇಕು, ಆ ಕಡೆ ಗಮನ ಕೊಡಬೇಕು. ಅದನ್ನು ಬಿಟ್ಟು ನಮ್ಮ ಸರ್ಕಾರದ ಅವಧಿಯಲ್ಲೇ ಬದಲಾವಣೆ ಹೆಸರಿನಲ್ಲಿ ನಿರ್ಬಂಧ ಸರಿಯಿಲ್ಲ ಎಂದು ಸಿಎಂ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಪಕ್ಷದ ಕೆಲ ಹಿರಿಯ ನಾಯಕರ ವಿರುದ್ಧವೂ ಅಸಮಾಧಾನ ಹೊರಹಾಕಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.