Tag: ವಿಧಾನ ಮಂಡಲ

  • ವಿಧಾನ ಮಂಡಲದಲ್ಲಿಯ ಆರೋಗ್ಯಪೂರ್ಣ ಚರ್ಚೆಗಳೇ ಪ್ರಜಾಪ್ರಭುತ್ವದ ಯಶಸ್ಸಿನ ಮೂಲಾಧಾರ: ಬಸವರಾಜ ಹೊರಟ್ಟಿ

    ವಿಧಾನ ಮಂಡಲದಲ್ಲಿಯ ಆರೋಗ್ಯಪೂರ್ಣ ಚರ್ಚೆಗಳೇ ಪ್ರಜಾಪ್ರಭುತ್ವದ ಯಶಸ್ಸಿನ ಮೂಲಾಧಾರ: ಬಸವರಾಜ ಹೊರಟ್ಟಿ

    ಬೆಂಗಳೂರು: ವಿಧಾನ ಮಂಡಲಗಳಲ್ಲಿ (Legislative Assembly) ನಡೆಯುವ ಸಮಾಜಮುಖಿ ಹಾಗೂ ಆರೋಗ್ಯಪೂರ್ಣ ಚರ್ಚೆಗಳೇ ಪ್ರಜಾಪ್ರಭುತ್ವದ ಯಶಸ್ಸಿಗೆ ಮೂಲಾಧಾರವಾಗಿವೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಅಭಿಮತ ವ್ಯಕ್ತಪಡಿಸಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ನಡೆಯುತ್ತಿರುವ 11ನೇ ಕಾಮನ್ ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನದಲ್ಲಿ ವಿಧಾನ ಮಂಡಲದ ಚರ್ಚೆಗಳು ಜನರ ವಿಶ್ವಾಸಗಳಿಸುವುದರೊಂದಿಗೆ ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿಯ ಪಾತ್ರ ಕುರಿತ ವಿಚಾರ ಮಂಡಿಸಿದ ಬಸವರಾಜ ಹೊರಟ್ಟಿ, ಚುನಾಯಿತ ಪ್ರತಿನಿಧಿಗಳು ಸಾರ್ವಜನಿಕ ಕಾಳಜಿಗಳನ್ನು ಚರ್ಚಿಸಲು ಸರ್ಕಾರಿ ನೀತಿಗಳನ್ನು ಪರಿಶೀಲಿಸಲು ಮತ್ತು ಕಾನೂನು ರಚನೆಯ ಪ್ರಕ್ರಿಯೆಯಲ್ಲಿ ಭಾಗವಹಿಸಲು ವಿಧಾನ ಮಂಡಲ ಪರಿಣಾಮಕಾರಿ ವೇದಿಕೆಯಾಗಿದ್ದು, ಅದನ್ನು ಸಮರ್ಥವಾಗಿ ಬಳಸಿಕೊಳ್ಳಲು ಜನಪ್ರತಿನಿಧಿಗಳು ಮುಂದಾಗಬೇಕು ಎಂದರು. ಇದನ್ನೂ ಓದಿ: ಹಾಸನ ಟ್ರಕ್ ದುರಂತಕ್ಕೆ 10 ಬಲಿ – ಗಾಯಾಳುಗಳ ಆರೋಗ್ಯ ವಿಚಾರಿಸಲು ವ್ಹೀಲ್‌ಚೇರ್‌ನಲ್ಲೇ ಆಸ್ಪತ್ರೆಗೆ ಬಂದ ಹೆಚ್‌ಡಿಡಿ

    ಸದನವು ಕ್ರಮಬದ್ಧವಾಗಿಲ್ಲದಿದ್ದಾಗ ಮತ್ತು ಅರ್ಥಪೂರ್ಣ ಚರ್ಚೆಯಿಲ್ಲದೆ ಕಾನೂನುಗಳನ್ನು ಅಂಗೀಕರಿಸಿದಾಗ ನಮ್ಮ ಮೇಲಿನ ಜನರ ನಂಬಿಕೆಗಳು ಕ್ಷೀಣಿಸುವ ಸಂದರ್ಭ ಬರಬಹುದೆನ್ನುವ ಎಚ್ಚರಿಕೆ ಜನಪ್ರತಿನಿಧಿಗಳಿಗಿರಬೇಕು ಎಂದು ಹೇಳಿದರು. ಇದನ್ನೂ ಓದಿ: ಶಿವಮೊಗ್ಗದಲ್ಲಿ ಯಾವನಿಗೂ ಬಾಲ ಬಿಚ್ಚೋಕೆ ಬಿಡಲ್ಲ: ಮಧು ಬಂಗಾರಪ್ಪ

    ಸದನ ಕಲಾಪಗಳ ಪ್ರಧಾನ ಅಂಶಗಳಾದ ಪ್ರಶ್ನೋತ್ತರ ಅವಧಿ, ಶೂನ್ಯವೇಳೆ ಚರ್ಚೆ, ಅರ್ಧಗಂಟೆಯ ಚರ್ಚೆ, ಕಿರುಸೂಚನೆ ಪ್ರಶ್ನೆಗಳು ಮತ್ತು ಸದನದ ಗಮನ ಸೆಳೆಯುವ ಪ್ರಸ್ತಾವಗಳ ಮೂಲಕ ಪ್ರತಿಯೊಬ್ಬ ಸದಸ್ಯರು ಸದನದಲ್ಲಿನ ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಅನುವು ಮಾಡಿಕೊಡುವ ಮೂಲಕ ಸುಗಮ ಮತ್ತು ರಾಜತಾಂತ್ರಿಕ ಮಾರ್ಗಗಳನ್ನು ಪ್ರತಿನಿಧಿಗಳು ಯಾವಾಗಲೂ ಆಯ್ಕೆ ಮಾಡಿಕೊಳ್ಳಬೇಕು ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ಇದನ್ನೂ ಓದಿ: ಭಾರತ-ಪಾಕ್‌ ಪಂದ್ಯ ಬಾಯ್ಕಾಟ್‌ಗೆ ಕರೆ – ಪಾಕ್‌ ಜೆರ್ಸಿ ಇರುವ ಪ್ರತಿಕೃತಿ ದಹಿಸಿ ಎಎಪಿ ಪ್ರತಿಭಟನೆ

    ಶಾಸಕಾಂಗ ಸದನಗಳಲ್ಲಿ ನನ್ನ 45 ವರ್ಷಗಳ ಅವಧಿಯಲ್ಲಿ ವಿಧಾನ ಪರಿಷತ್ತಿನ ಸಭಾಪತಿಯಾಗಿ 3ನೇ ಬಾರಿಗೆ ಪಡೆದ ಅನುಭವದ ಮೂಲಕ ಹೇಳುವುದಾದರೆ, ಸಾರ್ವಜನಿಕ ಪ್ರತಿನಿಧಿಗಳು ಜನಪರ ಮಹತ್ವದ ವಿಷಯಗಳಿಗೆ ಮಹತ್ವ ನೀಡುವುದರ ಮೂಲಕ ತಮ್ಮ ಜವಾಬ್ದಾರಿ ನಿಭಾಯಿಸಬೇಕು ಎಂದು ನುಡಿದರು. ಇದನ್ನೂ ಓದಿ: ಧಾರವಾಡ ಕೃಷಿ ವಿವಿಯ ಮೇಳದಲ್ಲಿ ಟ್ರ‍್ಯಾಕ್ಟರ್ ಮೈಮೇಲೆ ಬಿದ್ದು ವ್ಯಕ್ತಿ ಸಾವು

  • ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್ ದರ ಏರಿಕೆ: ಹೆಚ್‍ಡಿಕೆ

    ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್ ದರ ಏರಿಕೆ: ಹೆಚ್‍ಡಿಕೆ

    ಬೆಂಗಳೂರು: ವಿಧಾನಮಂಡಲ ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್ (Electricity) ದರ ಏರಿಕೆ ಆಗಿದೆ. ಏನೀ ಹುನ್ನಾರ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಸರ್ಕಾರಕ್ಕೆ ಪ್ರಶ್ನೆ ಮಾಡಿದರು.

    ಈ ಕುರಿತು ಟ್ವೀಟ್ ಮಾಡಿರುವ ಅವರು, ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರ್ಕಾರ, ಕರೆಂಟ್ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ. ಪ್ರತಿ ಯೂನಿಟ್‍ಗೆ 24 ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ ಮತ್ತು ಖಂಡನೀಯ ಎಂದರು.

    bjP

    ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಬಿಜೆಪಿ (BJP) ಸರ್ಕಾರ ವಿದ್ಯುತ್ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್ ದರವನ್ನು ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿವೆ. ವಿದ್ಯುತ್ ಉತ್ಪಾದನೆ ಉತ್ತಮವಾಗಿದೆ. ಆದರೂ ಖರೀದಿ ವೆಚ್ಚದಲ್ಲಿ 1,244 ಕೋಟಿ ರೂ. ಹೆಚ್ಚಳ ಆಗಿದೆ ಎನ್ನುವ ಲೆಕ್ಕವನ್ನು ನಂಬುವ ರೀತಿಯಲ್ಲಿಲ್ಲ. ಇಂಧನ ವಲಯದ ಕೆಲ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಎಸ್ಕಾಂಗಳ ಭುಜದ ಮೇಲೆ ಗುಂಡಿಟ್ಟು, ಜನರಿಗೆ ಹೊಡೆಯುವ ಕೆಲಸ ಆಗುತ್ತಿದೆ ಎಂದು ಕಿಡಿಕಾರಿದರು.

    ರಾಜ್ಯ ಬಿಜೆಪಿ ಸರ್ಕಾರ ಜನರ ಪರ ಇಲ್ಲ ಎನ್ನುವುದು ಸತ್ಯ. ಜಾಗತಿಕ ಪೇಟೆಯಲ್ಲಿ ಕಚ್ಚಾತೈಲದ ಬೆಲೆ ನಿರಂತರವಾಗಿ ಇಳಿದರೂ ದೇಶದಲ್ಲಿ ತೈಲಬೆಲೆ ಇಳಿಸದ ಕೇಂದ್ರದ ಸರ್ಕಾರದ ಹಾದಿಯಲ್ಲೇ ರಾಜ್ಯ ಸರಕಾರವೂ ಸಾಗಿದೆ. ವಿದ್ಯುತ್ ದರದ ನಿರಂತರ ಏರಿಕೆ ಬಗ್ಗೆ ಗಂಭೀರ ಅನುಮಾನಗಳಿವೆ ಎಂದು ಅವರು ದೂರಿದರು. ಇದನ್ನೂ ಓದಿ: ಶಾಲೆ ಕ್ಲೋಸ್ ಮಾಡಿರುವ ಬಗ್ಗೆ ಯಾವುದೇ ಮಾಹಿತಿಯಿಲ್ಲ: ಬಿ.ಸಿ ನಾಗೇಶ್

    ವಿದ್ಯುತ್ ಸೋರಿಕೆ, ಕಳವು ತಡೆಯಲಾಗದ, ನವೀನ ತಂತ್ರಜ್ಞಾನ ಅಳವಡಿಸಿಕೊಳ್ಳದ ಬಿಜೆಪಿ ಸರ್ಕಾರ ಅದಕ್ಷತೆಯ ಆಡಂಬೋಲ. ಬಡವರನ್ನು ಸುಲಿದು ಬಿಸ್ನೆಸ್ ಕ್ಲಾಸಿನ ಜನರ ಜೇಬು ತುಂಬು ಎನ್ನುವುದು ಬಿಜೆಪಿ ತತ್ತ್ವ. ಅದನ್ನೇ ಕರ್ನಾಟಕದಲ್ಲೂ ಎಗ್ಗಿಲ್ಲದೆ ಮಾಡುತ್ತಿದೆ ಎಂದು ಹೆಚ್‍ಡಿಕೆ ಟೀಕಿಸಿದರು. ಇದನ್ನೂ ಓದಿ: ಆಪ್ ಸರ್ಕಾರದ ವಿರುದ್ಧ ಎಲ್‍ಜಿ ವಾರ್ – ಮನೀಷ್ ಸಿಸೋಡಿಯಾ ವಿರುದ್ಧ ತನಿಖೆಗೆ ಸೂಚನೆ

    Live Tv
    [brid partner=56869869 player=32851 video=960834 autoplay=true]