Tag: ವಿಧಾನ ಸಭೆ

  • ಬಿಬಿಎಂಪಿಯ ಪಂಚ ಪಾಲಿಕೆಗೆ ಆಯುಕ್ತರ ನೇಮಕ – ಗ್ರೇಟರ್ ಬೆಂಗಳೂರು ತಿದ್ದುಪಡಿ ವಿಧೇಯಕ ಅಂಗೀಕಾರ

    ಬಿಬಿಎಂಪಿಯ ಪಂಚ ಪಾಲಿಕೆಗೆ ಆಯುಕ್ತರ ನೇಮಕ – ಗ್ರೇಟರ್ ಬೆಂಗಳೂರು ತಿದ್ದುಪಡಿ ವಿಧೇಯಕ ಅಂಗೀಕಾರ

    – ಬೆಂಗಳೂರು ವಿವಿಗೆ ಡಾ.ಮನಮೋಹನ್ ಸಿಂಗ್ ಹೆಸರು; ವಿಧೇಯಕ ಅಂಗೀಕಾರ

    ಬೆಂಗಳೂರು: ವಿಭಜಿತ ಬಿಬಿಎಂಪಿಯ (BBMP) ಪಂಚ ಪಾಲಿಕೆಗಳಿಗೆ ಆಯುಕ್ತರನ್ನು ನೇಮಿಸಲು ಅವಕಾಶ ಕೊಡುವ ಗ್ರೇಟರ್ ಬೆಂಗಳೂರು (Greater Bengaluru) ಆಡಳಿತ ತಿದ್ದುಪಡಿ  ವಿಧೇಯಕಕ್ಕೆ (Governance Amnedment Bill 2025) ವಿಧಾನಸಭೆಯಲ್ಲಿ (Legislative Assembly) ವಿಪಕ್ಷಗಳ ತೀವ್ರ ವಿರೋಧದ ಮಧ್ಯೆಯೂ ಅಂಗೀಕಾರ ಪಡೆದುಕೊಂಡಿತು.

    ವಿಧೇಯಕ ಬಗ್ಗೆ ಸದನದಲ್ಲಿ ವಿವರ ನೀಡಿದ ಡಿಸಿಎಂ ಡಿಕೆಶಿ, ಪಾಲಿಕೆಗಳಿಗೆ ಆಯುಕ್ತರನ್ನು ನೇಮಿಸಿ ಸಮನ್ವಯ ಸಮಿತಿಯಂತೆ ಐದೂ ಪಾಲಿಕೆಗಳು ಕೆಲಸ ಮಾಡಲು ತಿದ್ದುಪಡಿ ತರಲಾಗಿದೆ. ಐದೂ ಪಾಲಿಕೆಗಳ ಆಡಳಿತಾತ್ಮಕ ಹಾಗೂ ನೇಮಕಾತಿ ನಿಯಮಗಳ ರಚನೆ, ನೌಕರರ ನೇಮಕಾತಿ ಹೊಣೆ ಜಿಬಿಎಗೆ ಕೊಡಲು ಅವಕಾಶ ಇದೆ ಎಂದರು. ಇದನ್ನೂ ಓದಿ: ಫೋಟೋದಲ್ಲಿರುವವಳೇ ನನ್ನ ಮಗಳು: ಸುಜಾತ ಭಟ್ ಪ್ರತಿಕ್ರಿಯೆ

    ಆದರೆ ಈ ವಿಧೇಯಕ್ಕೆ ಬಿಜೆಪಿ ಸದಸ್ಯರು ತೀವ್ರವಾಗಿ ವಿರೋಧಿಸಿದರು. ಶಾಸಕ ಅಶ್ವಥ್ ನಾರಾಯಣ್ ಮಾತಾಡಿ, ಸ್ಥಳೀಯ ಸಂಸ್ಥೆಗಳ ಅಧಿಕಾರ ಕಿತ್ತುಕೊಳ್ತಿದ್ದೀರಿ ಎಂದರು. ವಿಪಕ್ಷ ನಾಯಕ ಆರ್ ಅಶೋಕ್ ಮಾತಾಡಿ, ಗ್ರೇಟರ್ ಬೆಂಗಳೂರು ಹೆಸರನ್ನು ಕನ್ನಡದಲ್ಲಿಡುವಂತೆ ಆಗ್ರಹಿಸಿದರು. ಆದರೆ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ಪರ ಬಿಜೆಪಿ ಉಚ್ಛಾಟಿತ ಶಾಸಕ ಎಸ್‌ಟಿ ಸೋಮಶೇಖರ್ ಬ್ಯಾಟಿಂಗ್ ನಡೆಸಿದರು. ಸದನದಲ್ಲೇ ಡಿಕೆಶಿಗೂ ಸೋಮಶೇಖರ್ ಶ್ಲಾಘನೆ ವ್ಯಕ್ತಪಡಿಸಿದರು. ಇದನ್ನೂ ಓದಿ: ವಿಷ್ಣು ಸಮಾಧಿ ತೆರವು; ಹೈಕೋರ್ಟ್‌ಗೆ ಪುನರ್‌ ಪರಿಶೀಲನಾ ಅರ್ಜಿ ಸಲ್ಲಿಕೆ

    ಈ ಮಧ್ಯೆ, ಬೆಂಗಳೂರು ನಗರ ವಿವಿಗೆ ಡಾ. ಮನಮೋಹನ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣಗೊಳ್ಳಲಿದೆ. ಈ ಸಂಬಂಧ ವಿಧಾನಸಭೆಯಲ್ಲಿ ಇಂದು ಬಿಜೆಪಿಯವರ ವಿರೋಧದ ಮಧ್ಯೆಯೂ ಕರ್ನಾಟಕ ರಾಜ್ಯ ವಿಶ್ವ ವಿದ್ಯಾನಿಲಯಗಳ ತಿದ್ದುಪಡಿ ವಿಧೇಯಕಕ್ಕೆ ಸರ್ಕಾರ ಅಂಗೀಕಾರ ಪಡೆದುಕೊಂಡಿತು. ಇದನ್ನೂ ಓದಿ: ಸುಜಾತಾ ಭಟ್‌ಗೆ ಮಗಳೇ ಇರಲಿಲ್ಲ ಎಂದ ನೆರೆಹೊರೆಯವರು

  • ಧರ್ಮಸ್ಥಳ ಹೆಸರಿಗೆ ಕೆಸರು ಎರಚುವ ಹುನ್ನಾರದಲ್ಲಿ ಸರ್ಕಾರವೂ ಶಾಮೀಲು: ಸುನಿಲ್ ಕುಮಾರ್

    ಧರ್ಮಸ್ಥಳ ಹೆಸರಿಗೆ ಕೆಸರು ಎರಚುವ ಹುನ್ನಾರದಲ್ಲಿ ಸರ್ಕಾರವೂ ಶಾಮೀಲು: ಸುನಿಲ್ ಕುಮಾರ್

    – ಇದರ ಹಿಂದೆ ಒಬ್ಬ ಮುಸುಕುಧಾರಿ ಇಲ್ಲ, ಹತ್ತಾರು ಮಂದಿ ಮುಸುಕುಧಾರಿಗಳಿದ್ದಾರೆ ಎಂದ ಬಿಜೆಪಿ ಶಾಸಕ
    – ವಿಧಾನಸಭೆ ಸದನದಲ್ಲಿ ಭಾರೀ ಗದ್ದಲ, ಕೋಲಾಹಲ

    ಬೆಂಗಳೂರು: ಧರ್ಮಸ್ಥಳ (Dharmasthala) ಹೆಸರಿಗೆ ಕೆಸರು ಎರಚುವ ಹುನ್ನಾರದಲ್ಲಿ ಸರ್ಕಾರವೂ (Congress) ಶಾಮೀಲಾಗಿದೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಸುನಿಲ್ ಕುಮಾರ್ (Sunil Kumar) ಗಂಭೀರ ಆರೋಪ ಮಾಡಿದ್ದಾರೆ. ಇದು ವಿಧಾನಸಭೆ ಸದನದಲ್ಲಿ ಭಾರೀ ಗದ್ದಲ ಕೋಲಾಹಲಕ್ಕೆ ಎಡೆಮಾಡಿಕೊಟ್ಟಿತು.

    ಪರಮೇಶ್ವರ್ (G Parameshwar) ಉತ್ತರಕ್ಕೆ ಸದನದಲ್ಲಿ ಆಕ್ಷೇಪ ವ್ಯಕ್ತಪಡಿಸಿದ ಅವರು, ಎಸ್‌ಐಟಿಗೆ (SIT) ನಮ್ಮ ವಿರೋಧ ಇಲ್ಲ. ಯೂಟ್ಯೂಬರ್‌ಗಳ ಮೂಲಕ ಅಪಪ್ರಚಾರ ನಡೀತಿದೆ, ಅವರ ಮೇಲೆ ಕ್ರಮ ಯಾಕಿಲ್ಲ ಅನ್ನೋದು ಮೊನ್ನೆ ಸದನದಲ್ಲಿ ಚರ್ಚೆ ಮಾಡಿದ್ದು. ಇದರ ಹಿಂದೆ ಒಬ್ಬ ಮುಸುಕುಧಾರಿ ಅಲ್ಲ, ಹತ್ತಾರು ಜನ ಮುಸುಕು ಹಾಕಿಕೊಂಡು ಇದರ ಹಿಂದೆ ಪಿತೂರಿ ಮಾಡಿದ್ದಾರೆ. ಅವರ ವಿರುದ್ಧ ಏನು ತನಿಖೆ? ಹಿಂದೆ ಯಾರಿದ್ದಾರೆ ಅವರನ್ನು ಬಯಲಿಗೆಳೆಯಿರಿ. ಧರ್ಮಸ್ಥಳ ಹೆಸರಿಗೆ ಕೆಸರು ಎರಚುವ ಹುನ್ನಾರ ನಡೀತಿದೆ. ಸತ್ಯ ಹೊರಗೆ ಬರೋದಕ್ಕಿಂತಲೂ ಧರ್ಮಸ್ಥಳ ಹೆಸರಿಗೆ ಕೆಸರು ಎರಚೋದೇ ಇವರಿಗೆ ಮುಖ್ಯವಾಗಿದೆ. ಸರ್ಕಾರದ ಉದ್ದೇಶವೂ ಅದೇ ಆಗಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಟ್ರಂಪ್ ಜೊತೆ ಅಲಾಸ್ಕ ಸಭೆ ಬಳಿಕ ಮೋದಿಗೆ ಫೋನ್ ಮಾಡಿದ ಪುಟಿನ್

    ಸುನಿಲ್ ಕುಮಾರ್ ಹೇಳಿಕೆಗೆ ಕಾಂಗ್ರೆಸ್ ಸದಸ್ಯರು ಕಿಡಿಕಾರಿದರು, ಅಲ್ಲದೇ ಕ್ಷಮೆಗೆ ಆಗ್ರಹಿಸಿದರು. ಆದರೆ ತಮ್ಮ ಆರೋಪ ಸಮರ್ಥಿಸಿಕೊಂಡ ಸುನಿಲ್ ಕುಮಾರ್, ನಿಮ್ಮ ಹೈಕಮಾಂಡ್ ಸೂಚನೆ ಮೇರೆಗೆ ಧರ್ಮಸ್ಥಳದ ಮೇಲೆ ಕಾಂಗ್ರೆಸ್‌ನಿಂದ ಅಪಪ್ರಚಾರ ಎಂದರು. ಇದು ಮತ್ತಷ್ಟು ವಾಗ್ವಾದಕ್ಕೆ ಕಾರಣವಾಯಿತು. ಸದನದ ಬಾವಿಗಿಳಿದು ಪ್ರತಿಭಟನೆ, ಕ್ಷಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿ, ಧಿಕ್ಕಾರ ಘೋಷಣೆ ಕೂಗಿದರು. ಸರ್ಕಾರವೇ ಹುನ್ನಾರ ಮಾಡಿದೆ ಎಂಬ ಪದ ತೆಗೆಯಿರಿ ಎಂದ ಸ್ಪೀಕರ್, ಗದ್ದಲ ಹಿನ್ನೆಲೆ ಕಲಾಪ ಹತ್ತು ನಿಮಿಷ ಮುಂದೂಡಿದರು. ಇದನ್ನೂ ಓದಿ: ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗಕ್ಕೆ ವಿಪಕ್ಷಗಳ ಸಿದ್ಧತೆ

  • ರೈತರ ಸಾಲಮನ್ನಾ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ: ಕೆಎನ್ ರಾಜಣ್ಣ

    ರೈತರ ಸಾಲಮನ್ನಾ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ: ಕೆಎನ್ ರಾಜಣ್ಣ

    ಬೆಂಗಳೂರು: ರೈತರ (Farmers) ಸಾಲಮನ್ನಾ (Loan waiver) ಆಗುವ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರ ನಿರಾಸೆ ಮೂಡಿಸಿದೆ. ರೈತರ ಸಾಲಮನ್ನಾ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ (KN Rajanna) ತಿಳಿಸಿದ್ದಾರೆ.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಸಿಟಿ ರವಿ (CT Ravi) ಪ್ರಶ್ನೆಗೆ ಉತ್ತರಿಸಿದ ಅವರು, ಸಾಲಮನ್ನಾ ಮಾಡುವ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: Union Budget 2024: ಬಿಹಾರ, ಆಂಧ್ರಪ್ರದೇಶಕ್ಕೆ ಬಜೆಟ್‌ನಲ್ಲಿ ಭರ್ಜರಿ ಅನುದಾನ

    ಸಿಟಿ ರವಿ ಮಾತನಾಡಿ, ಸಹಕಾರ ಸಂಘದಲ್ಲಿ ಸರಿಯಾಗಿ ಸಾಲ ಸೌಲಭ್ಯ ನೀಡುತ್ತಿಲ್ಲ. ಅಗತ್ಯವಾಗಿ ಸಾಲ ಬೇಕಾಗಿರುವವರಿಗೆ ಸಾಲ ಸಿಗುತ್ತಿಲ್ಲ. ತಮಗೆ ಬೇಕಾದವರಿಗೆ ಮಾತ್ರ ಸಾಲ ನೀಡುವ ವ್ಯವಸ್ಥೆ ಸಹಕಾರಿ ಬ್ಯಾಂಕುಗಳಲ್ಲಿ ಇವೆ. ಬಾಗಿಲು ಹಾಕಿಕೊಂಡು ಕಿಟಕಿಯಲ್ಲಿ ವ್ಯವಹಾರ ಮಾಡುವ ವ್ಯವಸ್ಥೆ ಸಹಕಾರಿ ಇಲಾಖೆಯಲ್ಲಿ ಇದೆ ಈ ಬಗ್ಗೆ ಸರ್ಕಾರ ಕ್ರಮವಹಿಸಬೇಕು. ರೈತರ ಸಾಲಮನ್ನಾ ಸರ್ಕಾರ ಮಾಡಬೇಕು. ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ 1 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ ಸರ್ಕಾರ ರೈತರ ನೆರವಿಗೆ ಬರಬೇಕು. 2023ರ ಭಾಷಣದಲ್ಲಿ ಈ ಸರ್ಕಾರ ರೈತರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದರು. ಹೀಗಾಗಿ ರೈತರ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಉದ್ಯೋಗಿಗಳಿಗೆ 17,500 ರೂ. ಉಳಿತಾಯ – ಮೊದಲು ತೆರಿಗೆ ಎಷ್ಟಿತ್ತು? ಈಗ ಏನು ಬದಲಾವಣೆಯಾಗಿದೆ?

    ಇದಕ್ಕೆ ಸಚಿವ ರಾಜಣ್ಣ ಉತ್ತರ ನೀಡಿ, 2024-25ರ ಸಾಲಿನಲ್ಲಿ ಜೂನ್ ಅಂತ್ಯದವರೆಗೆ ಸಹಕಾರಿ ಸಂಘಗಳು ಹೊಸದಾಗಿ ಅರ್ಜಿ ಸಲ್ಲಿಸಿದ 9,797 ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 93.49 ಕೋಟಿ ರೂ. ಬೆಳೆ ಸಾಲ ನೀಡಿದೆ. 2,815 ರೈತರಿಗೆ 138.36 ಕೋಟಿ ರೂ. ಮಧ್ಯಮ ಸಾಲ, ದೀರ್ಘಾವಧಿ ಸಾಲ ನೀಡಲಾಗಿದೆ. ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಸಾಲಮನ್ನಾ ಮಾಡಿದೆ. ರಾಜಕೀಯಗೋಸ್ಕರ ರೈತರನ್ನು ಬಳಕೆ ಮಾಡೋದು ಬೇಡ. ಬಿಜೆಪಿ ಅವರು ಸಾಲಮನ್ನಾ ಮಾಡಿ ಎನ್ನುವ ಬದಲು ರಾಷ್ಟ್ರೀಯ ಬ್ಯಾಂಕ್ ಸಾಲಮನ್ನಾ ಕೇಂದ್ರ ಮಾಡಲಿ. ಅದನ್ನು ನೋಡಿಕೊಂಡು ನಾವು ಬೇಕಾದರೆ ಮಾಡುತ್ತೇವೆ. ಹೆಚ್ಚು ಸಾಲಮನ್ನಾ ಮಾಡಿರೋದು ಕಾಂಗ್ರೆಸ್ ಸರ್ಕಾರ. ಇದರಲ್ಲಿ ಬಿಜೆಪಿ ರಾಜಕೀಯ ಮಾಡೋದು ಬೇಡ. ಹಣಕಾಸು ಇತಿಮಿತಿಯಲ್ಲಿ ಸಾಲ ನೀಡುವ ವ್ಯವಸ್ಥೆ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಹರೀಶ್ ಪೂಂಜಾ ಗೂಂಡಾ ಎಂದ ರಾಜೇಗೌಡ: ವಿಧಾನಸಭೆಯಲ್ಲಿ ಗದ್ದಲ

  • 31 ತಿಂಗಳ ನಂತರ ಈಡೇರಿತು ಪ್ರತಿಜ್ಞೆ- ಮುಖ್ಯಮಂತ್ರಿಯಾಗಿ ವಿಧಾನಸಭೆಗೆ ಕಾಲಿಟ್ಟ ಚಂದ್ರಬಾಬು ನಾಯ್ಡು

    31 ತಿಂಗಳ ನಂತರ ಈಡೇರಿತು ಪ್ರತಿಜ್ಞೆ- ಮುಖ್ಯಮಂತ್ರಿಯಾಗಿ ವಿಧಾನಸಭೆಗೆ ಕಾಲಿಟ್ಟ ಚಂದ್ರಬಾಬು ನಾಯ್ಡು

    ಅಮರಾವತಿ: ಬರೋಬ್ಬರಿ 31 ತಿಂಗಳ ನಂತರ ಟಿಡಿಪಿಯ (TDP) ಚಂದ್ರಬಾಬು ನಾಯ್ಡು (Chandrababu Naidu) ಮುಖ್ಯಮಂತ್ರಿಯಾಗಿಯೇ ವಿಧಾನಸಭೆ (Vidhana Sabha) ಪ್ರವೇಶಿಸುವ ಮೂಲಕ ಪ್ರತಿಜ್ಞೆ ಈಡೇರಿಸಿದ್ದಾರೆ.

    ವೈಎಸ್‌ಆರ್ ಪಕ್ಷದ ಮುಖಂಡರ ತೀವ್ರ ನಿಂದನೆಯಿಂದ ನೊಂದು ಕಣ್ಣೀರಿಟ್ಟಿದ್ದ ಚಂದ್ರಬಾಬು ನಾಯ್ಡು ಸಿಎಂ ಆಗಿಯೇ ಮತ್ತೆ ಆಂಧ್ರ ಪ್ರದೇಶ (Andhra Pradesh) ವಿಧಾನಸಭೆಗೆ ಕಾಲಿಡುವುದಾಗಿ 2021ರ ನವೆಂಬರ್‌ನಲ್ಲಿ ಶಪಥ ಮಾಡಿದ್ದರು. ಇದನ್ನೂ ಓದಿ: ಚಂದ್ರಬಾಬು ನಾಯ್ಡು ಅವರ ಸೂಪರ್‌ ಸಿಕ್ಸ್‌ ಗ್ಯಾರಂಟಿ ಘೋಷಣೆ ಜಾರಿಗೆ ಬೇಕು 60 ಸಾವಿರ ಕೋಟಿ!

    ಇಂದು ಅಧಿವೇಶನ ಆರಂಭಕ್ಕೆ ಮುನ್ನ ವಿಧಾನಸಭೆಯ ಮೆಟ್ಟಿಲುಗಳಿಗೆ ಸಿಎಂ ಚಂದ್ರಬಾಬು ನಮಸ್ಕಾರ ಮಾಡಿದರು. ಸದನ ಪ್ರವೇಶಿಸುತ್ತಿದ್ದಂತೆ ಆಡಳಿತ ಪಕ್ಷದ ಶಾಸಕರು ಎದ್ದು ನಿಂತು ಚಂದ್ರಬಾಬು ನಾಯ್ಡು ಅವರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸತ್ಯ ಗೆದ್ದಿದೆ. ಪ್ರಜಾಪ್ರಭುತ್ವ ಉಳಿದಿದೆ ಎಂದು ಟಿಡಿಪಿ ಶಾಸಕರು ಭಿತ್ತಿಪತ್ರ ಪ್ರದರ್ಶಿಸಿ ಸಂಭ್ರಮಿಸಿದರು.

    ಇನ್ನೊಂದು ಕಡೆ ಮಾಜಿ ಸಿಎಂ ವೈಎಸ್ ಜಗನ್‌ಮೋಹನ್‌ರೆಡ್ಡಿ (Jagan Mohan Reddy) ಹಿಂಬಾಗಿಲ ಮೂಲಕ ವಿಧಾನಸಭೆಗೆ ಕಾಲಿಟ್ಟದ್ದು ವಿಶೇಷವಾಗಿತ್ತು. ಇದನ್ನೂ ಓದಿ: ಇಂಡೋ-ಪಾಕ್ ಗಡಿಯಲ್ಲಿ ಸೈನಿಕರೊಂದಿಗೆ ಯೋಗ ಪ್ರದರ್ಶಿಸಿದ ಶ್ವಾನಗಳು

    2021ರಲ್ಲಿ ಆಗಿದ್ದು ಏನು?
    ನವೆಂಬರ್ 19 ರಂದು ಆಗಿನ ಆಡಳಿತದಲ್ಲಿದ್ದ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಸದಸ್ಯರು ತಮ್ಮ ಪತ್ನಿಯ ಬಗ್ಗೆ ಮಾಡಿದ ನಿಂದನೆಯ  ಹೇಳಿಕೆಯಿಂದ ಬೇಸರಗೊಂಡು ಸದನವನ್ನು ತೊರೆದಿದ್ದರು. ಮಹಿಳಾ ಸಬಲೀಕರಣದ ಚರ್ಚೆಯ ವೇಳೆ ವಿಧಾನಸಭೆಯಿಂದ ಹೊರನಡೆಯುವ ಮುನ್ನ ಚಂದ್ರಬಾಬು ನಾಯ್ಡು ಕಣ್ಣೀರು ಹಾಕಿದ್ದರು.

    ಇದು ಮಹಾಭಾರತದಲ್ಲಿ ದ್ರೌಪದಿಯನ್ನು ಅವಮಾನಿಸಿದ ಕೌರವರ ಸಭೆ ಎಂದು ಕಣ್ಣೀರು ಹಾಕಿದ್ದ ಚಂದ್ರಬಾಬು ನಾಯ್ಡು ಇನ್ನು ಮುಂದೆ ನಾನು ಈ ಸಭೆಗೆ ಹಾಜರಾಗುವುದಿಲ್ಲ. ನಾನು ಮುಖ್ಯಮಂತ್ರಿಯಾದ ನಂತರವೇ ಸದನಕ್ಕೆ ಮರಳುತ್ತೇನೆ ಪ್ರತಿಜ್ಞೆ ಮಾಡಿದ್ದರು.

    ಈ ಬಾರಿ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗೆ ಟಿಡಿಪಿ, ಜನಾಸೇನಾ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿತ್ತು. ಈ ಬಾರಿ ಒಟ್ಟು 175 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಟಿಡಿಪಿ 135, ಜನಸೇನಾ 21, ವೈಎಸ್‌ಆರ್‌ಸಿಪಿ 11, ಬಿಜೆಪಿ 8 ಸ್ಥಾನಗಳನ್ನು ಗೆದ್ದುಕೊಂಡಿತ್ತು. 2019ರ ಚುನಾವಣೆಯಲ್ಲಿ ಬಹಳಷ್ಟು ಸೊಷಿಯಲಿಸ್ಟ್‌, ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡಿದ್ದ ಪರಿಣಾಮ ಜಗನ್‌ ನೇತೃತ್ವದ ವೈಎಸ್‌ಅರ್‌ಸಿಪಿ ಕಾಂಗ್ರೆಸ್‌ 151, ಟಿಡಿಪಿ 23, ಜನಸೇನಾ 1 ಸ್ಥಾನವನ್ನು ಗೆದ್ದುಕೊಂಡಿತ್ತು.

     

  • ವಿಪಕ್ಷ ನಾಯಕನ ಆಯ್ಕೆಗೆ ಸೋಮವಾರ ರಾಜ್ಯಕ್ಕೆ ಬರಲಿದ್ದಾರೆ ವೀಕ್ಷಕರು

    ವಿಪಕ್ಷ ನಾಯಕನ ಆಯ್ಕೆಗೆ ಸೋಮವಾರ ರಾಜ್ಯಕ್ಕೆ ಬರಲಿದ್ದಾರೆ ವೀಕ್ಷಕರು

    ನವದೆಹಲಿ: ಸೋಮವಾರದಿಂದ ವಿಧಾನಮಂಡಲ (Karnataka Assembly Session) ಅಧಿವೇಶನ ಶುರುವಾಗುತ್ತಿದ್ದರೂ ಬಿಜೆಪಿ (BJP) ಈವರೆಗೂ ವಿಪಕ್ಷ ನಾಯಕನನ್ನು (Opposition Leader) ಆಯ್ಕೆ ಮಾಡಲು ಆಗಿಲ್ಲ. ಯಾರನ್ನು ಆಯ್ಕೆ ಮಾಡಿದರೆ ಚೆನ್ನಾಗಿರುತ್ತದೆ ಎಂಬ ಬಗ್ಗೆ ಎಂಬ ಬಗ್ಗೆ ಯಡಿಯೂರಪ್ಪ (Yediyurappa) ಅವರಿಂದ ಅಭಿಪ್ರಾಯ ಸಂಗ್ರಹಿಸಿದೆ.

    ಗೃಹ ಸಚಿವ ಅಮಿತ್‌ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ  ಜೊತೆ ಸಭೆ ನಡೆದ ಬಳಿಕ ಮಾತನಾಡಿದ ಯಡಿಯೂರಪ್ಪ, ಸೋಮವಾರ ಕೇಂದ್ರದ ವೀಕ್ಷಕರಾಗಿ ವಿನೋದ್ ತಾವ್ಡೆ ಮತ್ತು ಮನ್ಸುಖ್ ಮಂಡವಿಯಾ ಇಬ್ಬರು ಬರುತ್ತಿದ್ದಾರೆ. ಅವರು ರಾಜ್ಯ ಬಿಜೆಪಿ ಶಾಸಕರಿಂದ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷ ಆಯ್ಕೆಯ ಬಗ್ಗೆ ಮಾಹಿತಿ ಸಂಗ್ರಹ ಮಾಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಉದ್ಧವ್‌ 1 ನಿರ್ಧಾರದಿಂದ ಮಹಾರಾಷ್ಟ್ರದಲ್ಲಿ ಬಂತು ಟ್ರಿಪಲ್‌ ಎಂಜಿನ್‌ ಸರ್ಕಾರ – ವಿಪಕ್ಷ ನಾಯಕ ಈಗ ಡಿಸಿಎಂ!

     

    ವೀಕ್ಷಕರು ಕೇಂದ್ರ ನಾಯಕರಿಗೆ ವರದಿ ನೀಡಿದ ಬಳಿಕ ವಿಪಕ್ಷ ನಾಯಕ ಸ್ಥಾನಕ್ಕೆ ನೇಮಕ ಮಾಡಲಾಗುತ್ತದೆ. ನಾಳೆ ಅಧಿವೇಶನಕ್ಕೆ ಮುನ್ನ ವಿಪಕ್ಷ ನಾಯಕ ಸ್ಥಾನಕ್ಕೆ ಆಯ್ಕೆ ಇಲ್ಲ. ಸದ್ಯ ನಾನು ನನ್ನ ಅಭಿಪ್ರಾಯ ಹೇಳಿದ್ದೇನೆ. ಅಗತ್ಯ ಬಿದ್ದರೆ ಎರಡು ದಿನಗಳ ಬಳಿಕ ಮತ್ತೆ ಕರೆಯುತ್ತೇವೆ ಎಂದು ಹೇಳಿದ್ದಾರೆ ಎಂದು ಮಾಹಿತಿ ನೀಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾನು ಇವತ್ತೇ ಮದುವೆ ಗಂಡು ಆಗೋಕೆ ತಯಾರಿದ್ದೇನೆ: ಕೆ.ಎಸ್. ಈಶ್ವರಪ್ಪ

    ನಾನು ಇವತ್ತೇ ಮದುವೆ ಗಂಡು ಆಗೋಕೆ ತಯಾರಿದ್ದೇನೆ: ಕೆ.ಎಸ್. ಈಶ್ವರಪ್ಪ

    ಶಿವಮೊಗ್ಗ: ನಾನು ಇವತ್ತೇ ಮದುವೆ ಗಂಡು (Groom) ಆಗಲು ತಯಾರಾಗಿದ್ದೇನೆ ಎಂದು ಹೇಳುವ ಮೂಲಕ ತಾವು ಮಂತ್ರಿಯಾಗಲು(Minister) ಸಿದ್ಧರಿರುವುದಾಗಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ(KSEshwarappa) ಹೇಳಿದ್ದಾರೆ.

    Eshwarappa

    ಶಿವಮೊಗ್ಗದಲ್ಲಿ ಮಾಧ್ಯಮದವರು ಮಂತ್ರಿ ಸ್ಥಾನ ನೀಡದಿದ್ದಕ್ಕೆ ನೀವು ಅಸಮಾಧಾನಗೊಂಡಿದ್ದಾರಾ? ಇದಕ್ಕಾಗಿಯೇ ಸದನಕ್ಕೆ ಹಾಜರಾಗುತ್ತಿಲ್ಲವಾ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಈಶ್ವರಪ್ಪ ಅವರು, ಈ ಬಗ್ಗೆ ನಮ್ಮ ನಾಯಕರಾದ ಯಡಿಯೂರಪ್ಪ (Yediyurappa) ಹಾಗೂ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರನ್ನು ಕೇಳಬೇಕು. ನನ್ನನ್ನು ಕೇಳಿದರೆ ನಾನು ಏನು ಹೇಳುವುದಕ್ಕೆ ಆಗುತ್ತದೆ. ಇವತ್ತು ಬಂದು ಮಂತ್ರಿ ಆಗು ಅಂದರೆ ಇವತ್ತೆ ಆಗುತ್ತೇನೆ ಇದೆಲ್ಲಾ ನನ್ನ ಕೈಯಲ್ಲಿ ಇಲ್ಲ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ (Basavraj Bommai), ಯಡಿಯೂರಪ್ಪ, ಕಟೀಲ್ ಹಾಗೂ ಕೇಂದ್ರದ ನಾಯಕರು ಚರ್ಚೆ ಮಾಡಬೇಕು. ಆದರೆ ಏಕೆ ಅವರು ಯಾಕೆ ಹಿಂದೆ ಮುಂದೆ ನೋಡುತ್ತಿದ್ದಾರೆ ಗೊತ್ತಿಲ್ಲ ಎಂದಿದ್ದಾರೆ.

    ಎಷ್ಟು ಖಾಲಿ ಇದೆಯೋ ಅದೆಲ್ಲಾ ಭರ್ತಿ ಮಾಡಲಿ ಎನ್ನುವುದು ನನ್ನ ಅಪೇಕ್ಷೆ. ಆರೋಪ ಮುಕ್ತರಾದ ಮೇಲೆ ಅವಕಾಶ ಕೊಡುತ್ತೇವೆ ಅಂದಿದ್ದರು. ಹಾಗಾಗಿ ನೀವು ಈ ಪ್ರಶ್ನೆಯನ್ನು ಈಗ ಅವರಿಗೆ ಹೋಗಿ ಕೇಳಿ. ನಾನು ಇವತ್ತು ಮದುವೆ ಗಂಡು ಆಗುವುದಕ್ಕೆ ತಯಾರಿದ್ದೇನೆ. ತೀರ್ಮಾನ ಮಾಡಬೇಕಾದವರು ಹಿರಿಯರು. ಅವರೇನು ಮಾಡಲಿಲ್ಲ ಅಂದರೆ ನಾನೇನು ಮಾಡಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬ್ಯಾಂಕುಗಳಿಗೆ ಸ್ಥಳೀಯ ಭಾಷಿಕರನ್ನೇ ನೇಮಿಸಿ- ನಿರ್ಮಲಾ ಸೀತಾರಾಮನ್ ಸಲಹೆ

    ನನ್ನ ಮನೆ ದೇವರು ಚೌಡೇಶ್ವರಿ ಈ ಆರೋಪದಿಂದ ನನ್ನನ್ನು ಮುಕ್ತ ಮಾಡಿದ್ದಾಳೆ. ನಾನು ಆರೋಪ ಮುಕ್ತ ಆಗಿರುವುದರಿಂದ ಸಿಎಂ, ಯಡಿಯೂರಪ್ಪ, ಕಟೀಲ್ ಬೇಗ ತೀರ್ಮಾನ ತೆಗೆದುಕೊಳ್ಳಬೇಕು. ನನ್ನ ಪ್ರಕರಣವೇ ಬೇರೆ, ಬೇರೆಯವರ ಪ್ರಕರಣವೇ ಬೇರೆ ಹೀಗಾಗಿ ನಮ್ಮ ನಾಯಕರು ನಿರ್ಧರಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ನೇಪಾಳದಲ್ಲಿ ಭೂಕುಸಿತ – 14 ಸಾವು, 10 ಮಂದಿ ನಾಪತ್ತೆ

    Live Tv
    [brid partner=56869869 player=32851 video=960834 autoplay=true]

  • ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಆರ್ಥಿಕ ಇಲಾಖೆ ಕೊಕ್ಕೆ – ಸರ್ಕಾರದ ವಿರುದ್ಧ ಉತ್ತರ ಕನ್ನಡಿಗರಿಂದ ಭಾರೀ ಆಕ್ರೋಶ

    ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಆರ್ಥಿಕ ಇಲಾಖೆ ಕೊಕ್ಕೆ – ಸರ್ಕಾರದ ವಿರುದ್ಧ ಉತ್ತರ ಕನ್ನಡಿಗರಿಂದ ಭಾರೀ ಆಕ್ರೋಶ

    ಬೆಂಗಳೂರು: ಉತ್ತರ ಕನ್ನಡದ ಮಂದಿಗೆ ಮತ್ತೆ ನಿರಾಸೆಯಾಗಿದ್ದು, ಕನಸಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಆರ್ಥಿಕ ಇಲಾಖೆ ಕೊಕ್ಕೆ ಹಾಕಿದೆ. ಸರ್ಕಾರದಿಂದ ಈ ನಿರ್ಧಾರ ಪ್ರಕಟವಾಗುತ್ತಿದ್ದಂತೆ ಉತ್ತರ ಕನ್ನಡ ಮಂದಿ ಆಕ್ರೋಶಗೊಂಡು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

    ಉತ್ತರ ಕನ್ನಡ(Uttara Kannada) ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ(Super Specialty Hospital) ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಸದನದಲ್ಲಿ ಕಾರವಾರ(Karwar) ಶಾಸಕಿ ರೂಪಾಲಿ ನಾಯಕ್(Rupali Naik) ಯಾವಾಗ ಆಸ್ಪತ್ರೆ ಮಂಜೂರು ಮಾಡಿಕೊಡುತ್ತೀರಿ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಆರೋಗ್ಯ ಇಲಾಖೆಯು ಆಸ್ಪತ್ರೆ ಮಂಜೂರು ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿಲ್ಲ ಎಂದು ಉತ್ತರಿಸಿದೆ.

    ಇಂದಿನ ಸದನದಲ್ಲಿ(Session) ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂದು ರೂಪಾಲಿ ನಾಯಕ್ ಬೇಡಿಕೆ ಇಟ್ಟರು. ಅಷ್ಟೇ ಅಲ್ಲದೇ ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವಿಳಂಬ ಹಿನ್ನೆಲೆಯಲ್ಲಿ ಬೇಸರ ವ್ಯಕ್ತಪಡಿಸಿದರು. ಉತ್ತರ ಕನ್ನಡ ಜಿಲ್ಲೆಗೆ ಇನ್ನೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕೊಟ್ಟಿಲ್ಲ. ಜಿಲ್ಲೆಯ ಜನರು ಸೂಕ್ತ ಆಸ್ಪತ್ರೆಯಿಲ್ಲದೇ ಪರದಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ರೋಗಿಗಳಿಗೆ ತೊಂದರೆಯಾದಾಗಲೆಲ್ಲಾ ದೂರದ ಮಣಿಪಾಲ್, ಗೋವಾ, ಮಂಗಳೂರು ಮತ್ತಿತರ ಕಡೆ ಹೋಗಬೇಕು. ಇದರಿಂದಾಗಿ ತುಂಬಾ ಸಮಸ್ಯೆ ಆಗುತ್ತಿದೆ ಎಂದು ತಮ್ಮ ಜಿಲ್ಲೆಯ ಜನತೆ ಅನುಭವಿಸುತ್ತಿರುವ ಯಾತನೆಯನ್ನು ತೆರೆದಿಟ್ಟರು.

    ಆಸ್ಪತ್ರೆ ಮಂಜೂರಾತಿ ವಿಳಂಬ ಆಗುತ್ತಿದೆ. ಆದಷ್ಟು ಬೇಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡಿಕೊಡಿ ಎಂದು ರೂಪಾಲಿ ನಾಯಕ್ ಆಗ್ರಹಿಸಿದರು. ಈ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಆರೋಗ್ಯ ಸಚಿವರು ನಿಮ್ಮ ಪ್ರಶ್ನೆಗೆ ಉತ್ತರಿಸಬೇಕು. ಆದರೆ ಸಚಿವರಿಗೆ ಅನಾರೋಗ್ಯ ಹಿನ್ನೆಲೆ ಬಂದಿಲ್ಲ. ಸೋಮವಾರ ಉತ್ತರ ಕೊಡಿಸುವುದಾಗಿ ಸ್ಪೀಕರ್ ಭರವಸೆ ನೀಡಿದರು. ಇದರಿಂದ ಸಿಟ್ಟಾದ ರೂಪಾಲಿ ನಾಯಕ್ ಅವರು, ಆರೋಗ್ಯ ಸಚಿವರಿಗೆ ಆರೋಗ್ಯ ಸರಿ ಇಲ್ಲ ಅಂತ ಬಂದಿಲ್ಲ. ನಮ್ಮ ಜಿಲ್ಲೆಯ ಜನರಿಗೆ ಆರೋಗ್ಯ ಕೆಟ್ರೆ ಎಲ್ಲಿಗೆ ಹೋಗಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಕೆ ಹರಿಪ್ರಸಾದ್‌ ಕ್ರಿಶ್ಚಿಯನ್‌ ಆದ್ರೆ ನಮ್ಮದೇನೂ ತಕರಾರಿಲ್ಲ: ಮಾಧುಸ್ವಾಮಿ

    ಸದನದಲ್ಲಿ ಮಂಡನೆಯಾದ ಲಿಖಿತ ಉತ್ತರಲ್ಲಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ಕೊಟ್ಟಿಲ್ಲ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಜಾಗ, ಸಿಬ್ಬಂದಿ, ಉಪಕರಣ ಹಾಗೂ ಹಣಕಾಸು ವೆಚ್ಚದ ಬಗ್ಗೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆ ತಿರಸ್ಕರಿಸಿದೆ. ಹೀಗಾಗಿ ಮತ್ತೊಮ್ಮೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಆರ್ಥಿಕ ಇಲಾಖೆಯಿಂದ ಅನುಮತಿ ಸಿಕ್ಕಿದರೆ ಮಾತ್ರ ಜಿಲ್ಲೆಗೆ ಆಸ್ಪತ್ರೆ ಮಂಜೂರು ಮಾಡುತ್ತೇವೆ ಎಂದು ತಿಳಿಸಿದೆ.

    ಕಾರವಾರದಲ್ಲಿ ಹೊಸದಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡುವ ಬಗ್ಗೆ ಈ ಹಿಂದೆ ಸ್ವೀಕರಿಸಲಾದ ಪ್ರಸ್ತಾವನೆಗೆ ಸಂಬಧಿಸಿದಂತೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸೌಲಭ್ಯಕ್ಕಾಗಿ ಅಗತ್ಯವಿರುವ ಜಾಗ, ಸಿಬ್ಬಂದಿ, ಉಪಕರಣ ಹಾಗೂ ಇತ್ಯಾದಿ ಮೂಲ ಸೌಲಭ್ಯಗಳು ಹಾಗೂ ಅದಕ್ಕೆ ತಗಲುವ ಆರ್ಥಿಕ ಹೊರೆಯ ವಿವರಗಳನ್ನು ನಿರ್ದೇಶಕರು, ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಿಂದ ಪಡೆದು ಸದರಿ ಪ್ರಸ್ತಾವನೆಯ ಮಂಜೂರಾತಿಗಾಗಿ ಆರ್ಥಿಕ ಇಲಾಖೆಯ ಸಹಮತಿಯನ್ನು ಕೋರಲಾಗಿತ್ತು. ಆದರೆ, ಆರ್ಥಿಕ ಇಲಾಖೆಯು ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿಲ್ಲ. ಇದನ್ನೂ ಓದಿ: ಮತ್ತೆ ಮುಖ್ಯಮಂತ್ರಿಯಾಗಿ – ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ 70ಕ್ಕೂ ಹೆಚ್ಚು ಅರ್ಚಕರು

    Live Tv
    [brid partner=56869869 player=32851 video=960834 autoplay=true]

  • ಯಾವುದೇ ಮುಲಾಜಿಲ್ಲದೆ ರಾಜಕಾಲುವೆ ತೆರವು: ಬೊಮ್ಮಾಯಿ‌

    ಯಾವುದೇ ಮುಲಾಜಿಲ್ಲದೆ ರಾಜಕಾಲುವೆ ತೆರವು: ಬೊಮ್ಮಾಯಿ‌

    ಬೆಂಗಳೂರು: ಯಾವುದೇ ಮುಲಾಜಿಲ್ಲದೆ ಬೆಂಗಳೂರಿನ ರಾಜಕಾಲುವೆ ತೆರವು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಹೇಳಿದರು.

    ವಿಧಾನಸಭೆಯಲ್ಲಿ(Session) ಪ್ರಶ್ನೋತ್ತರ ವೇಳೆಯಲ್ಲಿ ಕೃಷ್ಣ ಭೈರೇಗೌಡ(Krishna Byre Gowda) ಪ್ರಸ್ತಾಪಕ್ಕೆ ಉತ್ತರ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ‌ ಮಳೆಯಿಂದ ಬೆಂಗಳೂರಿಗೆ(Benagaluru) ಆಗುವ ಅನಾಹುತ ತಪ್ಪಿಸಲು ರಾಜಕಾಲುವೆಗಳ ಸಮಗ್ರ ಅಭಿವೃದ್ಧಿ ಕೈಗೊಳ್ಳಲಾಗುತ್ತಿದ್ದು, ಕೆರೆಗಳಿಗೆ ಸ್ಟ್ಲೂಯೀಸ್ ಗೇಟ್‌ಗಳನ್ನು ಅಳವಡಿಸಲು ಆದೇಶಿಸಿದ್ದೇವೆ ಎಂದು ಹೇಳಿದರು. ರಾಜಕಾಲುವೆಗಳ ಮಾಸ್ಟರ್ ಪ್ಲಾನ್‌ನ್ನು ಮತ್ತೆ ಪರಿಷ್ಕರಿಸುತ್ತೇವೆ. ಕಾಲಮಿತಿಯೊಳಗೆ 1,800 ಕೋಟಿ ರೂ. ವೆಚ್ಚದಲ್ಲಿ ರಾಜ ಕಾಲುವೆ ಅಭಿವೃದ್ಧಿಪಡಿಸುತ್ತೇವೆ ಎಂದರು.

    ಬೆಂಗಳೂರು ನಗರದಲ್ಲಿ 859 ಕಿ.ಮೀ ರಾಜಕಾಲುವೆ ಇದೆ. ಈ ಪೈಕಿ 450 ಕಿ.ಮೀ ಅಭಿವೃದ್ಧಿಗೆ ಬಾಕಿಯಿದ್ದು, ಕಳೆದ ಬಾರಿ 1,500 ಕೋಟಿ ನೀಡಿದ್ದು, ಈ ಬಾರಿ ಮತ್ತೆ ಹೆಚ್ಚುವರಿಯಾಗಿ 300 ಕೋಟಿ ರೂ. ನೀಡುತ್ತೇವೆ. ಎರಡು ವರ್ಷದಲ್ಲಿ ನಾವು ಈ ಕಾಮಗಾರಿ ಮುಕ್ತಾಯಗೊಳಿಸುತ್ತೇವೆ ಎಂದು ವಿಧಾನಸಭೆಗೆ ತಿಳಿಸಿದರು.

    ಬೆಂಗಳೂರಿನ 8 ವಿಭಾಗಗಳ ಪೈಕಿ ಎರಡು ಕಡೆ ಮಾತ್ರ ರಾಜಕಾಲುವೆ ಸಮಸ್ಯೆ ಹೆಚ್ಚಿದೆ. ಅದರಲ್ಲೂ ಮಹಾದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಸಮಸ್ಯೆ ಹೆಚ್ಚಿದೆ. ರಾಜಕಾಲುವೆಗಳನ್ನು ಅಭಿವೃದ್ಧಿಪಡಿಸಲು ಅತಿಕ್ರಮಣ ಮಾಡಿರುವುದು ಅಡ್ಡಿಯಾಗಿವೆ. ಮೊದಲು ಕಟ್ಟಡ ಅತಿಕ್ರಮಣಗಳನ್ನು ತೆರವುಗೊಳಿಸಿ ರಾಜಕಾಲುವೆಗಳ ಅಭಿವೃದ್ಧಿ ಮಾಡಬೇಕಾಗುತ್ತದೆ. ಇದಕ್ಕೆಲ್ಲ ಸಮಯ ಬೇಕು. ಕಾಂಗ್ರೆಸ್ ಸರ್ಕಾರದಲ್ಲಿ ಆಗಿದ್ದ ಕಾಮಗಾರಿಗಳು ಈಗ ನಡೆಯುತ್ತಿವೆ. ಸಂಪೂರ್ಣ ರಾಜಕಾಲುವೆಗಳ ಅಭಿವೃದ್ಧಿಗೆ ಒಂದೂವರೆ ವರ್ಷವಾದರೂ ಬೇಕಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿಧಾನಸಭೆಗೆ ತಿಸಿಳಿದರು. ಇದನ್ನೂ ಓದಿ: ಗಾಯಾಳನ್ನು ಆಸ್ಪತ್ರೆಗೆ ಹೊತ್ತು ತಂದ ಬುಲ್ಡೋಜರ್

    ಇದಕ್ಕೂ ಮೊದಲು ಪ್ರಶ್ನೆ ಕೇಳಿದ ಶಾಸಕ ಕೃಷ್ಣ ಭೈರೇಗೌಡ ಅವರು, ಬೆಂಗಳೂರಿನಲ್ಲಿ ಭಾರೀ ಮಳೆಯಿಂದ ಉಂಟಾಗಿರುವ ಸಮಸ್ಯೆಗಳಿಂದ ಬ್ರ್ಯಾಂಡ್ ಬೆಂಗಳೂರಿಗೆ ಧಕ್ಕೆಯಾಗಿದೆ. ಸರ್ಕಾರ ಬೇರೆಯವರನ್ನು ದೂಷಿಸದೆ, ರಾಜಕಾಲುವೆಗಳ ಅಭಿವೃದ್ಧಿ ಮಾಡಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಮಹದೇವಪುರ ಶಾಸಕ‌ ಅರವಿಂದ ಲಿಂಬಾವಳಿ ಮಾತನಾಡಿ, ರಾಜಕಾಲುವೆ ಒತ್ತುವರಿ ತೆರವನ್ನು ಯಾವುದೇ ಕಾರಣಕ್ಕೂ ನಿಲ್ಲಿಸಬೇಡಿ ಎಂದು ಮನವಿ ಮಾಡಿಕೊಂಡರು. ಅಲ್ಲದೆ ಒತ್ತುವರಿ ತೆರವಿಗೆ ವಿರೋಧ ಪಕ್ಷದವರು ಸಹಕಾರ ಕೊಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ನಾನೇನು ಸ್ವಂತ ಬೋಟ್‌ನಲ್ಲಿ ಹೋಗಿದ್ನಾ; ಬೇಕಿದ್ರೆ ಲಿಂಬಾವಳಿ ಕೇಳಿ?: ಸಿದ್ದು ಬೋಟ್‌ ಪ್ರಸಂಗ

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿ ಸರ್ಕಾರದ ಹಗರಣ ಸದನದಲ್ಲಿ ಬಿಚ್ಚಿಡುತ್ತೇನೆ: ಕುಮಾರಸ್ವಾಮಿ

    ಬಿಜೆಪಿ ಸರ್ಕಾರದ ಹಗರಣ ಸದನದಲ್ಲಿ ಬಿಚ್ಚಿಡುತ್ತೇನೆ: ಕುಮಾರಸ್ವಾಮಿ

    ಬೆಂಗಳೂರು: ಸಾವಿರಾರು ಕೋಟಿ ರೂ. ಬೆಲೆ ಬಾಳುವ ಸರ್ಕಾರದ ಆಸ್ತಿಯನ್ನು ನುಂಗುವ ಮಹಾ ಹುನ್ನಾರವನ್ನು ಬಿಜೆಪಿ(BJP) ಮಾಡುತ್ತಿದೆ. ಸದನಲ್ಲಿ ಹಗರಣ ಬಿಚ್ಚಿಡುತ್ತೇನೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ(Kumaraswamy) ತಿಳಿಸಿದ್ದಾರೆ.

    ವಿಧಾನಸೌಧದಲ್ಲಿ ಇಂದು ನಡೆದ ಜೆಡಿಎಸ್(JDS) ಶಾಸಕಾಂಗ ಪಕ್ಷದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಭ್ರಷ್ಟಾಚಾರದ(Corruption) ಬಗ್ಗೆ ದಾಖಲೆಗಳನ್ನು ಕೊಡಿ ಎಂದು ಪದೇಪದೇ ನನ್ನನ್ನು ಕೆಣಕಿದ್ದಾರೆ. ಸಾವಿರಾರು ಕೋಟಿ ರೂ. ಬೆಲೆ ಬಾಳುವ ಸರ್ಕಾರಿ ಆಸ್ತಿಯನ್ನು ಅಕ್ರಮವಾಗಿ ಪರಭಾರೆ ಮಾಡಲು ಹೊರಟ ಅತಿದೊಡ್ಡ ಅಕ್ರಮದ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ತಿಳಿಸಿದರು.

    ಸದನದಲ್ಲಿ ಈ ವಿಚಾರದ ಬಗ್ಗೆ ಚರ್ಚೆ ಮಾಡಲು ಕಾಂಗ್ರೆಸ್ ಪಕ್ಷ ಸಹಕರಿಸಬೇಕು. ಈ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜನರಿಗೆ ಗೊತ್ತಾಗಬೇಕು. ನಾನು ಈ ದಾಖಲೆಗಳನ್ನು ಬಿಡುಗಡೆ ಮಾಡುತ್ತಿರುವುದು ಈ ಸರ್ಕಾರದ ಹಗರಣಗಳ ಒಂದು ಸ್ಯಾಂಪಲ್ ಮಾತ್ರ. ಇದನ್ನು ಬಿಜೆಪಿಯವರು ಅರಗಿಸಿಕೊಳ್ಳಲಿ ಸಾಕು ಎಂದು ಕುಮಾರಸ್ವಾಮಿ ಗುಡುಗಿದರು. ಇದನ್ನೂ ಓದಿ: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ- ಬಾಲಕಿಯರೇ‌ ಮೇಲುಗೈ

    ಇತ್ತೀಚೆಗೆ ನಾನು ಸದನದ ಕಲಾಪದಲ್ಲಿ ದೊಡ್ಡ ಮಟ್ಟದ ಚರ್ಚೆಯಲ್ಲಿ ಪಾಲ್ಗೊಂಡಿಲ್ಲ. ಯಾವುದಾದರೂ ಮುಖ್ಯ ವಿಚಾರ ಇದ್ದಾಗ ಭಾಗಿಯಾಗಿದ್ದೇನೆ. ನಾನು ಭಾಗಿಯಾದಾಗ ದಾಖಲೆ ಸಮೇತ ಮಾತನಾಡಿದ್ದೇನೆ. ಒಂದಿಷ್ಟು ಜನ ಹೇಳುತ್ತಿದ್ದಾರೆ. ಸದನದಲ್ಲಿ ಕುಮಾರಸ್ವಾಮಿ ಏನು ಮಾತಾಡಿ ಬಿಟ್ಟಾರು ಅಂತ. ಸುಖಾಸುಮ್ಮನೆ ಯಾರದೋ ಬಳಿ ನಾನು ಪಾಠ ಹೇಳಿಸಿಕೊಳ್ಳಬೇಕಿದೆ. ಒಂದಿಷ್ಟು ದಾಖಲೆಗಳನ್ನು ನಾನು ಸ್ಯಾಂಪಲ್ ಆಗಿ ಬಹಿರಂಗ ಮಾಡುತ್ತೇನೆ. ಇದನ್ನು ಒಂದು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇನೆ. ಸಾರ್ವಜನಿಕ ಆಸ್ತಿಯನ್ನು ಹಣಕ್ಕೋಸ್ಕರ ಮಾರಾಟಕ್ಕೆ ಇಡುತ್ತಿದ್ದಾರೆ. ಇದಕ್ಕೆ ತಡೆ ಹಾಕಬೇಕಿದೆ ಎಂದು ಅವರು ಹೇಳಿದರು.

    ರಾಜ್ಯದಲ್ಲಿ ಭ್ರಷ್ಟಾಚಾರ ಯಾವ ರೀತಿ ಇದೆ ಎನ್ನುವುದು ನಾಡಿನ ಜನತೆಗೆ ಹಾಗೂ ಪ್ರಧಾನಿ ಮೋದಿ ಅವರಿಗೂ ಗೊತ್ತಾಗಲಿ. ಅದಕ್ಕೇ ಎಲ್ಲದಕ್ಕೂ ದಾಖಲೆ ಇಟ್ಟು ಮಾತನಾಡುತ್ತೇನೆ. ಇದು ಭಾರೀ ಹಗರಣ. ಸರ್ಕಾರಕ್ಕೆ ಬರಬೇಕಾದ 8-10 ಸಾವಿರ ಕೋಟಿ ರೂ. ಕಬಳಿಸುವ ಹುನ್ನಾರ ನಡೆದಿದೆ. 1957ನೇ ಇಸವಿಯಿಂದ ವಿಷಯ ಇದೆ. ಈ ಸರ್ಕಾರಿ ಆಸ್ತಿಗೆ 2008-09ರಲ್ಲೇ 5 ಸಾವಿರ ಕೋಟಿ ಅಂತ ಅಂದಾಜು ಕಟ್ಟಿದ್ದರು. ಆದರೆ, ಈ ಬಗ್ಗೆ ಸರ್ಕಾರ ಮಾಡಿರುವ ಆದೇಶ ದಿಗ್ಭ್ರಮೆ ಉಂಟು ಮಾಡುವ ರೀತಿಯಲ್ಲಿದೆ ಎಂದು ಕುಮಾರಸ್ವಾಮಿ ತಿಳಿಸಿದರು. ಇದನ್ನೂ ಓದಿ: ಸದನದ ಸಮಯ ಹಾಳು ಮಾಡಲಾರೆ: ಹೆಚ್‌ಡಿಕೆ

    Live Tv
    [brid partner=56869869 player=32851 video=960834 autoplay=true]

  • ವಿಜಯೇಂದ್ರಗೆ ವಿಧಾನಸಭೆ ಚುನಾವಣೆಗೆ ಟಿಕೆಟ್ ಸಿಗುವ ಸುಳಿವು ನೀಡಿದ ಕಟೀಲ್

    ವಿಜಯೇಂದ್ರಗೆ ವಿಧಾನಸಭೆ ಚುನಾವಣೆಗೆ ಟಿಕೆಟ್ ಸಿಗುವ ಸುಳಿವು ನೀಡಿದ ಕಟೀಲ್

    ಬೆಂಗಳೂರು: ವಿಜಯೇಂದ್ರಗೆ ಮುಂದಿನ ವಿಧಾನಸಭೆ ಚುನಾವಣೆಗೆ ಟಿಕೆಟ್ ಸಿಗುವ ಸುಳಿವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ನೀಡಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‍ಗೆ ವಿಜಯೇಂದ್ರ ಹೆಸರೂ ಶಿಫಾರಸು ಮಾಡಲಾಗಿತ್ತು. ಆದರೆ ವಿಜಯೇಂದ್ರಗೆ ಬೇರೆ ಬೇರೆ ಅವಕಾಶಗಳು ಇರುವುದರಿಂದ ವಿಜಯೇಂದ್ರಗೆ ಟಿಕೆಟ್ ಮಿಸ್ ಆಗಿದೆ ಎಂದು ತಿಳಿಸಿದರು.

    ಇಂದು ವಿಧಾನ ಪರಿಷತ್‍ಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್ ಘೋಷಿಸಿದೆ. ಪರಿಷತ್ ಪ್ರವೇಶ ಪಡೆದು ಸಂಪುಟದಲ್ಲಿ ಅವಕಾಶ ಗಿಟ್ಟಿಸಿಕೊಳ್ಳಬೇಕೆಂಬ ಬಿ.ವೈ.ವಿಜಯೇಂದ್ರ ಅವರಿಗೆ ಅವಕಾಶ ದೊರೆತಿರಲಿಲ್ಲ. ಇದಕ್ಕೆ ಪ್ರತಿಕ್ರಿಯಿಸಿದ ಕಟಿಲ್, ವಿಜಯೇಂದ್ರಗೆ ಬೇರೆ ಬೇರೆ ಅವಕಾಶಗಳು ಇವೆ. ಅವರು ಪಕ್ಷದ ಉಪಾಧ್ಯಕ್ಷರು ಆಗಿದ್ದಾರೆ. ವಿಧಾನ ಪರಿಷತ್‍ಗೆ ಟಿಕೆಟ್ ಕೈತಪ್ಪಿರುವುದು ವರಿಷ್ಠರ ತೀರ್ಮಾನವಾಗಿದೆ ಎಂದು ಸಮರ್ಥಿಸಿಕೊಂಡರು. ಇದನ್ನೂ ಓದಿ: ಬಿಜೆಪಿ ಪರಿಷತ್‌ ಪಟ್ಟಿ ಪ್ರಕಟ – ಲಕ್ಷ್ಮಣ ಸವದಿಗೆ ಟಿಕೆಟ್

    ಲಿಂಗರಾಜ ಪಾಟೀಲ್, ಮಂಜುಳಾಗೆ ಟಿಕೆಟ್ ತಪ್ಪಿದ ವಿಚಾರವಾಗಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಅವರ ಹೆಸರನ್ನು ಪರಿಗಣಿಸಲಾಗುವುದು ಎಂದರು. ಇದನ್ನೂ ಓದಿ: ವಿಜಯೇಂದ್ರಗೆ ಶಾಕ್‌ – ಮೇ 20ರಂದೇ ಸುಳಿವು ನೀಡಿದ್ದ ಪ್ರಧಾನಿ ಮೋದಿ