Tag: ವಿಧ್ಯಾರ್ಥಿಗಳು

  • ಸೋಮವಾರ SSLC ಫಲಿತಾಂಶ ಪ್ರಕಟ: ಬಿ.ಸಿ ನಾಗೇಶ್

    ಸೋಮವಾರ SSLC ಫಲಿತಾಂಶ ಪ್ರಕಟ: ಬಿ.ಸಿ ನಾಗೇಶ್

    ಬೆಂಗಳೂರು: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ಸೋಮವಾರ ಪ್ರಕಟವಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.

    ಆಗಸ್ಟ್ 9 ರಂದು ಸೋಮವಾರ ಮಧ್ಯಾಹ್ನ 3.30ಕ್ಕೆ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಮೊಬೈಲ್ ಎಸ್‍ಎಂಎಸ್ ಮೂಲಕ ಫಲಿತಾಂಶವನ್ನು ಕಳುಹಿಸಿಕೊಡಲಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ಆಗಸ್ಟ್ 9, ಸೋಮವಾರ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟಿಸುವುದಾಗಿ ನೂತನ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದಾರೆ. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಈ ಮಾಹಿತಿಯನ್ನು ಖಚಿತಪಡಿಸಿದರು. ಸೋಮವಾರ ಸಂಜೆ 3.30ಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಿಗದಿಪಡಿಸಲಾಗಿದೆ ಎಂದು ಸಹ ಅವರು ತಿಳಿಸಿದರು.

    ಈಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ 99.65% ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಜೂನ್ 19, ಜೂನ್ 22ರಂದು 2 ದಿನ ಮಾತ್ರ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು. ಈಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ 99.65% ವಿದ್ಯಾರ್ಥಿಗಳು ಹಾಜರಾಗಿದ್ದರು. ಎಸ್​ಎಸ್​ಎಲ್​ಸಿ ರಿಸಲ್ಟ್ ವೀಕ್ಷಿಸಲು ಕರ್ನಾಟಕ ಸರ್ಕಾರದ ಅಧಿಕೃತ ವೆಬ್​ಸೈಟ್ sslc.karnataka.gov.in ಕ್ಲಿಕ್ ಮಾಡಿ

  • 2 ಬಾರಿ ಪದವಿ, ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ

    2 ಬಾರಿ ಪದವಿ, ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ

    ಧಾರವಾಡ: ಕಳೆದ ಒಂದು ವಾರದಿಂದ ಸಾರಿಗೆ ನೌಕರರ ಮುಷ್ಕರ ನಡೆಯುತ್ತಿರುವ ಹಿನ್ನೆಲೆ, ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನ ಮುಂದೂಡಿದೆ.

    ನಾಳೆಯಿಂದ ಏಪ್ರಿಲ್ 17ರವರೆಗೆ ನಡೆಯಬೇಕಿದ್ದ ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆಗಳನ್ನ ಮುಂದೂಡಲಾಗಿದೆ. ಈ ಬಗ್ಗೆ ಕರ್ನಾಟಕ ವಿಶ್ವವಿದ್ಯಾಲಯ ಕುಲಪತಿ ಕೆ ಬಿ ಗುಡಸಿ ಮಾಹಿತಿ ನೀಡಿದ್ದಾರೆ.

    ಸಾರಿಗೆ ಮುಷ್ಕರ ಹಿನ್ನೆಲೆ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಇಲ್ಲದ ಕಾರಣ ಪರೀಕ್ಷೆ ಮುಂದೂಡಿದ್ದೇವೆ. ಮುಂದೂಡಲಾದ ಪರೀಕ್ಷೆಯ ದಿನಾಂಕವನ್ನ ಮುಂದಿನ ದಿನಗಳಲ್ಲಿ ತಿಳಿಸುವುದಾಗಿ ಗುಡಸಿ ಹೇಳಿದರು.

    ಕಳೆದ ನಾಲ್ಕು ದಿನಗಳ ಹಿಂದೆ ಕೂಡಾ ಇದೇ ರೀತಿ ಬಸ್ ಇಲ್ಲದ ಹಿನ್ನೆಲೆ ಕರ್ನಾಟಕ ವಿಶ್ವವಿದ್ಯಾಲಯ ಸ್ನಾತಕೋತ್ತರ ಪರೀಕ್ಷೆಗಳನ್ನ ಮುಂದೂಡಿತ್ತು. ಇದು ಎರಡನೇ ಬಾರಿ ಪರೀಕ್ಷೆ ಮುಂದೂಡಿ ಆದೇಶ ಮಾಡಲಾಗಿದೆ ಎಂದಿದ್ದಾರೆ.

  • ವೈದ್ಯರ ಮುಷ್ಕರಕ್ಕೆ ವೈದ್ಯಕೀಯ ವಿದ್ಯಾರ್ಥಿಗಳ ಸಾಥ್

    ವೈದ್ಯರ ಮುಷ್ಕರಕ್ಕೆ ವೈದ್ಯಕೀಯ ವಿದ್ಯಾರ್ಥಿಗಳ ಸಾಥ್

    ಗದಗ: ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ಇಂದು ದೇಶಾದ್ಯಂತ ಖಾಸಗಿ ವೈದ್ಯರು ಕರೆ ನೀಡಿರುವ ಪ್ರತಿಭಟನೆಗೆ ಬೆಂಬಲವಾಗಿ ಗದಗ ಜಿಲ್ಲೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

    ಜೂನ್ 10 ರಂದು ಕೋಲ್ಕತ್ತಾದಲ್ಲಿ ಜೂನಿಯರ್ ಡಾಕ್ಟರ್ ಪರಿಭಾ ಮುಖರ್ಜಿ ಎಂಬವವರ ಮೇಲೆ ಮಾರಣಾಂತಿಕ ಹಲ್ಲೆಯಾಗಿತ್ತು. ಈ ಘಟನೆಯನ್ನು ಖಂಡಿಸಿ ಇಂದು ಗದಗಿನ ಜಿಮ್ಸ್ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿಗಳು ಹಣೆಗೆ ಪಟ್ಟಿ ಹಾಗೂ ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

    ಈ ವೇಳೆ ಕರ್ನಾಟಕ ವೈದ್ಯಕೀಯ ಸಂಘದ ರಾಜ್ಯಾಧ್ಯಕ್ಷ ಡಾ.ಅನ್ನದಾನಿ ಮೇಟಿ ಮಾತನಾಡಿ, ವೈದ್ಯರ ಮೇಲಿನ ಹಲ್ಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಅಲ್ಲದೆ ಈಗ ನಡೆದಿರೋ ಘಟನೆಯಲ್ಲಿ ಭಾಗಿಯಾದವರಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿದರು.