Tag: ವಿನಯ್ ಕುಲಕರ್ಣಿ

  • ಯೋಗೀಶ್‌ಗೌಡ ಕೊಲೆ ಸಾಕ್ಷ್ಯನಾಶ ಕೇಸ್- ಸುಪ್ರೀಂನಲ್ಲಿ ವಿನಯ್ ಕುಲಕರ್ಣಿಗೆ ಹಿನ್ನಡೆ

    ಯೋಗೀಶ್‌ಗೌಡ ಕೊಲೆ ಸಾಕ್ಷ್ಯನಾಶ ಕೇಸ್- ಸುಪ್ರೀಂನಲ್ಲಿ ವಿನಯ್ ಕುಲಕರ್ಣಿಗೆ ಹಿನ್ನಡೆ

    ಧಾರವಾಡ: ಯೋಗೀಶ್‌ಗೌಡ ಕೊಲೆ ಕೇಸ್‌ನಲ್ಲಿ ಶಾಸಕ ವಿನಯ್ ಕುಲಕರ್ಣಿಗೆ (Vinay Kulkarni) ಮತ್ತೆ ಸಂಕಷ್ಟ ಎದುರಾಗಿದೆ. ಸಾಕ್ಷ್ಯನಾಶ ಕೇಸ್‌ನಲ್ಲಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ (Supreme Court) ಪುರಸ್ಕರಿಸಿದೆ.

    2016ರಲ್ಲಿ ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಕೊಲೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಕೊಲೆಯ ಸಾಕ್ಷ್ಯನಾಶ ಮಾಡಲು ಪ್ರಯತ್ನ ಮಾಡಿದ್ದರು ಎಂದು ಧಾರವಾಡ ಶಾಸಕ ವಿನಯ್ ಕುಲಕರ್ಣಿ ಮೇಲೆ ಸಿಬಿಐ ಅಧಿಕಾರಿಗಳು ಸಾಕ್ಷಿ ನಾಶದ ಪ್ರಕರಣ ದಾಖಲಿಸಿಕೊಂಡಿದ್ದರು. ಇದನ್ನೂ ಓದಿ: ಪಲ್ಲಂಗದಾಟಕ್ಕೆ ಅಡ್ಡಿಯಾಗುತ್ತಿದ್ದಾಳೆಂದು ಮಗಳ ಹತ್ಯೆ – ಮಲತಂದೆ ಅರೆಸ್ಟ್


    ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ತಿಂಗಳ ಹಿಂದೆ ಹೈಕೋರ್ಟ್ ಸಾಕ್ಷ್ಯನಾಶದ ಅರ್ಜಿ ವಜಾ ಮಾಡಿತ್ತು. ಅರ್ಜಿ ವಜಾ ಪ್ರಶ್ನಿಸಿ, ಸಿಬಿಐ ಅಧಿಕಾರಿಗಳು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು. ಸದ್ಯ ಸುಪ್ರೀಂಕೋರ್ಟ್ ಸಿಬಿಐ ಅರ್ಜಿ ಪುರಸ್ಕರಿಸಿದ್ದು, ಶಾಸಕ ವಿನಯ್ ಕುಲಕರ್ಣಿಗೆ ಸಾಕ್ಷ್ಯನಾಶದ ಪ್ರಕರಣದಲ್ಲಿ ಹಿನ್ನಡೆಯಾಗಿದೆ.

    ಯೋಗೀಶ್‌ಗೌಡ ಕೊಲೆಯಾದ ನಂತರ ರಾಜ್ಯದಲ್ಲಿ 2019ರಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಇದನ್ನ ಸಿಬಿಐಗೆ ನೀಡಿತ್ತು. ಸದ್ಯ ಇದೇ ಪ್ರಕರಣದಲ್ಲಿ ವಿನಯ ಕುಲಕರ್ಣಿ ಜೈಲು ಸೇರಿದ್ದಾರೆ.

  • ರಾಜ್ಯದ 39 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಹೆಸರು ಅಂತಿಮ – ವಿನಯ್‌ ಕುಲಕರ್ಣಿ ಪತ್ನಿಗೂ ಸಿಕ್ತು ಪಟ್ಟ

    ರಾಜ್ಯದ 39 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಹೆಸರು ಅಂತಿಮ – ವಿನಯ್‌ ಕುಲಕರ್ಣಿ ಪತ್ನಿಗೂ ಸಿಕ್ತು ಪಟ್ಟ

    ನವದೆಹಲಿ: ಸಾಕಷ್ಟು ಹಗ್ಗಜಗ್ಗಾಟದ ನಂತರ ಬಾಕಿ ಉಳಿದಿದ್ದ ರಾಜ್ಯದ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಹೆಸರು ಅಂತಿಮಪಡಿಸಲಾಗಿದೆ.

    ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 2.5 ವರ್ಷ ತುಂಬುತ್ತಿರುವ ಹೊತ್ತಿನಲ್ಲಿ ರಾಜ್ಯದ ಒಟ್ಟು 39 ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕ ಪಟ್ಟಿಯನ್ನು ಎಐಸಿಸಿ ಬಿಡುಗಡೆ ಮಾಡಿದೆ.ಇದನ್ನೂ ಓದಿ: ಸೆ.26ರಿಂದ 5 ದಿನ ಕಾವೇರಿ ಆರತಿ – ಕೆಆರ್‌ಎಸ್‌ಗೆ ಭೇಟಿ ನೀಡಿ, ಸಿದ್ಧತೆ ವೀಕ್ಷಿಸಿದ ಡಿಕೆಶಿ

    39 ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕ ಮಾಡಿ ಎಐಸಿಸಿಯಿಂದ ರಾಜ್ಯಕ್ಕೆ ಪಟ್ಟಿ ರವಾನಿಸಿದೆ. ಶಾಸಕರಿಗೆ ಹೆಚ್ಚು ಮಣೆ ಹಾಕದೇ ಕಾರ್ಯಕರ್ತರಿಗೆ ಹೆಚ್ಚು ಅವಕಾಶ ಮಾಡಿ ಕೊಡಲಾಗಿದೆ. ಶಾಸಕ ವಿನಯ್ ಕುಲಕರ್ಣಿ ಕೊಲೆ ಪ್ರಕರಣವೊಂದರಲ್ಲಿ ಜೈಲು ಸೇರಿರುವ ಹಿನ್ನೆಲೆ ಪತ್ನಿ ಶಿವಲೀಲಾ ಕುಲಕರ್ಣಿಗೆ ಪತಿಗೆ ನೀಡಿದ್ದ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ.

    ಇನ್ನೂ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಹೆಸರು ಪ್ರಕಟವಾಗಿದೆ. ಅದಲ್ಲದೇ ಜಾತಿಗಳ ಅಭಿವೃದ್ಧಿ ನಿಗಮಗಳಿಗೂ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ನಂಜಯ್ಯನ ಮಠ್ ಹಾಗೂ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರಿಗೂ ನಿಗಮದ ಅಧ್ಯಕ್ಷ ಸ್ಥಾನ ಘೋಷಣೆ ಮಾಡಲಾಗಿದೆ. ಎಐಸಿಸಿಯಿಂದ ರಾಜ್ಯಕ್ಕೆ ಪಟ್ಟಿ ರವಾನೆ ಆಗಿದ್ದು, ಸರ್ಕಾರದಿಂದ ಅಧಿಕೃತ ಆದೇಶ ಒಂದೇ ಬಾಕಿ ಇದೆ.ಇದನ್ನೂ ಓದಿ: ಮೂರು ಮಕ್ಕಳ ತಾಯಿ ಲೀಲಾಳ ಲವ್ವರ್‌ಗೆ ಬಿಯರ್‌ ಬಾಟಲ್‌ನಿಂದ ಹೊಡೆದ ಪತಿ ಮಂಜುನಾಥ್‌

  • ಪುತ್ರನಿಗೆ ಶಸ್ತ್ರಚಿಕಿತ್ಸೆ – ಶಾಸಕ ವಿನಯ್‌ಗೆ 2 ದಿನಗಳ ಮಧ್ಯಂತರ ಜಾಮೀನು ಮಂಜೂರು

    ಪುತ್ರನಿಗೆ ಶಸ್ತ್ರಚಿಕಿತ್ಸೆ – ಶಾಸಕ ವಿನಯ್‌ಗೆ 2 ದಿನಗಳ ಮಧ್ಯಂತರ ಜಾಮೀನು ಮಂಜೂರು

    ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ಸಾಕ್ಷಿ ನಾಶದ ಆರೋಪದ ಮೇಲೆ ಸಿಬಿಐನಿಂದ ಬಂಧಿತರಾಗಿರುವ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎರಡು ದಿನಗಳ ಕಾಲ ಮಧ್ಯಂತರ ಜಾಮೀನು (Interim bail) ಮಂಜೂರು ಮಾಡಿದೆ.

    ಈ ಹಿಂದೆ ಸಿಬಿಐನಿಂದ ಬಂಧಿತರಾಗಿ ಸೆರೆವಾಸ ಅನುಭವಿಸಿದ್ದ ವಿನಯ್ ಕುಲಕರ್ಣಿ, ಜಾಮೀನಿನ ಮೇಲೆ ಹೊರ ಬಂದು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಶಾಸಕರಾಗಿಯೂ ಆಯ್ಕೆಯಾಗಿದ್ದರು. ಆದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂಬ ಆರೋಪದ ಮೇಲೆ ನ್ಯಾಯಾಲಯ ಇವರ ಜಾಮೀನು ರದ್ದು ಮಾಡಿದ್ದರಿಂದ ಮರಳಿ ಅವರು ಪರಪ್ಪನ ಅಗ್ರಹಾರ ಸೇರಬೇಕಾಯಿತು. ಈಗ ತಮ್ಮ ಮಗ ಹೇಮಂತ್ ಅವರಿಗೆ ಅಪಘಾತವಾಗಿದ್ದರಿಂದ ಆತನ ಕಾಲಿನ ಶಸ್ತ್ರಚಿಕಿತ್ಸೆ ಮಾಡಿಸುತ್ತಿರುವುದರಿಂದ ತಮಗೆ ಜಾಮೀನು ನೀಡಬೇಕು ಎಂದು ಕೋರಿ ಶಾಸಕ ವಿನಯ್ ಅವರು ಮರಳಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿ ಪುರಸ್ಕರಿಸಿರುವ ನ್ಯಾಯಾಲಯ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಕೇವಲ ಎರಡು ದಿನಗಳವರೆಗೆ ಮಾತ್ರ ಜಾಮೀನು ಮಂಜೂರು ಮಾಡಿದೆ. ಮರಳಿ ವಿನಯ್ ಕುಲಕರ್ಣಿ ಅವರು ಸೆ.11ರ ಸಂಜೆ 5ಕ್ಕೆ ಸಿಬಿಐ ಅಧಿಕಾರಿಗಳ ಎದುರು ಹಾಜರಾಗಿ ಮರಳಿ ಜೈಲು ಸೇರಬೇಕಿದೆ. ಇದನ್ನೂ ಓದಿ: ಈ ಜನ್ಮದಲ್ಲೇ ಮುಸ್ಲಿಂ ಧರ್ಮಕ್ಕೆ ಹೋಗಿಬಿಡಿ, ನಾವೇ ಹಾರ ಹಾಕಿ ಕಳುಹಿಸ್ತೇವೆ: ಶೋಭಾ ಕರಂದ್ಲಾಜೆ

    ಸದ್ಯ ಎರಡು ದಿನಗಳ ಕಾಲ ಜಾಮೀನು ಸಿಕ್ಕಿರುವ ವಿನಯ್ ಕುಲಕರ್ಣಿ ಅವರನ್ನು ಮಂಗಳವಾರ ಸಂಜೆಯೇ ಜೈಲಿನಿಂದ ಬಿಡುಗಡೆ ಮಾಡುವ ಸಾಧ್ಯತೆ ಇದೆ. ವಿನಯ್ ಕುಲಕರ್ಣಿ ಅವರ ಪುತ್ರ ಹೇಮಂತ್ ಅವರ ಕಾಲಿನ ಶಸ್ತ್ರ ಚಿಕಿತ್ಸೆ ಬೆಂಗಳೂರಿನಲ್ಲೇ ನಡೆಯುವುದರಿಂದ ವಿನಯ್ ಅವರು ಬೆಂಗಳೂರಿನಲ್ಲೇ ಉಳಿಯಬೇಕಾಗಿದೆ. ಜಾಮೀನು ಸಿಕ್ಕಿರುವ ಈ ಎರಡು ದಿನಗಳ ಅವಧಿಯಲ್ಲಿ ಯಾವುದೇ ಸಭೆ ಮಾಡುವಂತಿಲ್ಲ ಎಂದು ಶಾಸಕ ವಿನಯ್‌ಗೆ ನ್ಯಾಯಾಲಯ ಸೂಚನೆ ನೀಡಿದೆ. ಇದನ್ನೂ ಓದಿ: ಸರ್ಕಾರ ಬುಡಮೇಲು ಮಾಡಲು ಅಮಿತ್ ಶಾ ಸಲಹೆ – ಬಿಜೆಪಿ ನಾಯಕರ ದೆಹಲಿ ಭೇಟಿಗೆ ಹರಿಪ್ರಸಾದ್ ಲೇವಡಿ

  • ನ್ಯಾಯಾಧೀಶರ ಮುಂದೆ ಹಾಜರಾದ ವಿನಯ್ ಕುಲಕರ್ಣಿ – ಶಾಸಕನನ್ನು ವಶಕ್ಕೆ ಪಡೆದ ಸಿಬಿಐ

    ನ್ಯಾಯಾಧೀಶರ ಮುಂದೆ ಹಾಜರಾದ ವಿನಯ್ ಕುಲಕರ್ಣಿ – ಶಾಸಕನನ್ನು ವಶಕ್ಕೆ ಪಡೆದ ಸಿಬಿಐ

    – ಕೋರ್ಟ್ ಕಾರಿಡಾರ್‌ನಲ್ಲೇ ಎ9 ಆರೋಪಿಯಿಂದ ಮಹಿಳಾ ಸಾಕ್ಷಿಗೆ ಬೆದರಿಕೆ

    ಬೆಂಗಳೂರು: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಶುಕ್ರವಾರ ಕೋರ್ಟ್ನಲ್ಲಿ ಶರಣಾಗಿದ್ದಾರೆ. ಅವರನ್ನು ಸಿಬಿಐ (CBI) ವಶಕ್ಕೆ ಪಡೆದಿದೆ.

    ವಿನಯ್ ಕುಲಕರ್ಣಿ ಜಾಮೀನು ರದ್ದು ಮಾಡಿ ಶರಣಾಗತಿಗೆ ಸುಪ್ರೀಂ ಕೋರ್ಟ್ (Supreme Court) ಗಡುವು ನೀಡಿತ್ತು. ಒಂದು ವಾರದ ಗಡುವು ಹಿನ್ನೆಲೆ ಶಾಸಕ ಇಂದು ಜನಪ್ರತಿನಿಧಿ ವಿಶೇಷ ನ್ಯಾಯಾಲದ ಮುಂದೆ ಹಾಜರಾದರು. ಇದನ್ನೂ ಓದಿ: ಧಾರವಾಡ ಜಿಪಂ ಸದಸ್ಯನ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಜಾಮೀನು ರದ್ದು

    ವಿಚಾರಣೆ ಬಳಿಕ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ. ಕೋರ್ಟ್ ಸೂಚನೆಯ ಮೇರೆಗೆ ಸಿಬಿಐ ವಶಕ್ಕೆ ತೆಗೆದುಕೊಂಡಿದೆ. ಪರಪ್ಪನ ಅಗ್ರಹಾರಕ್ಕೆ ಶಾಸಕರನ್ನು ಶಿಫ್ಟ್ ಮಾಡಲಾಗುವುದು.

    ವಿನಯ್ ಕುಲಕರ್ಣಿ ಪರ ವಕೀಲರು ಶರಣಾಗಲು ಸಮಯ ವಿಸ್ತರಿಸುವಂತೆ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾ. ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ನ್ಯಾ. ಮನಮೋಹನ್ ಅವರಿದ್ದ ಪೀಠವು ಶರಣಾಗತಿಗೆ ಸಮಯ ನೀಡಲು ಕೋರ್ಟ್ ನಿರಾಕರಿಸಿದೆ. ಇದನ್ನೂ ಓದಿ: ಇಡೀ ವಿಮಾನ ಸುಟ್ಟು ಭಸ್ಮವಾದರೂ ಒಂದಿಷ್ಟೂ ಹಾನಿಯಾಗದ ಸ್ಥಿತಿಯಲ್ಲಿ ಸಿಕ್ತು ಭಗವದ್ಗೀತೆ ಪುಸ್ತಕ

    ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಹಿಳಾ ಸಾಕ್ಷಿಯೊಬ್ಬರಿಗೆ ಕೋರ್ಟ್ ಕಾರಿಡಾರ್‌ನಲ್ಲೇ ಬೆದರಿಕೆ ಹಾಕಿರುವ ಪ್ರಸಂಗ ನಡೆದಿದೆ. ಎ9 ಆರೋಪಿ ಅಶ್ವಥ್ ಗೌಡನಿಂದ ಬೆದರಿಕೆ ಹಾಕಲಾಗಿದೆ. ಆರೋಪಿ ಬೆದರಿಕೆ ಹಾಕಿರುವುದಾಗಿ ಕೋರ್ಟ್‌ಗೆ ಮಹಿಳೆ ಇ-ಮೇಲ್ ಮಾಡಿದ್ದಾರೆ. ಸಿಬಿಐ ಅಧಿಕಾರಿಗಳಿಗೂ ಇ-ಮೇಲ್ ಮಾಡಿ ಮಾಹಿತಿ ನೀಡಿದ್ದಾರೆ.

    ಮಹಿಳೆ ನೀಡಿದ್ದ ಮಾಹಿತಿ ಆಧರಿಸಿ ಎಸ್ಪಿಪಿ ಗಂಗಾಧರ್ ಶೆಟ್ಟಿ ಅವರಿಂದ ಮೆಮೋ ಸಲ್ಲಿಕೆಯಾಗಿದೆ. ವಿಚಾರಣೆ ನಡೆಸಿದ ಕೋರ್ಟ್ ತನಿಖೆಗೆ ಆದೇಶ ನೀಡಿದೆ. ಸಿಐಎಸ್‌ಎಫ್‌ನಿಂದ ತನಿಖೆಗೆ ಕೋರ್ಟ್ ಆದೇಶಿಸಿದೆ.

  • ಶುಕ್ರವಾರ ಶರಣಾಗುತ್ತೇನೆ – ವಿನಯ್ ಕುಲಕರ್ಣಿ ಸಭೆಯಲ್ಲಿ ಪತ್ನಿ ಹಾಜರ್‌

    ಶುಕ್ರವಾರ ಶರಣಾಗುತ್ತೇನೆ – ವಿನಯ್ ಕುಲಕರ್ಣಿ ಸಭೆಯಲ್ಲಿ ಪತ್ನಿ ಹಾಜರ್‌

    ಬೆಳಗಾವಿ: ಸುಪ್ರೀಂ ಕೋರ್ಟ್‌ (Suprme Court) ಸೂಚನೆಯಂತೆ ಶುಕ್ರವಾರ ನ್ಯಾಯಾಲಯಕ್ಕೆ (Court) ಶರಣಾಗುವುದಾಗಿ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಹೇಳಿದ್ದಾರೆ.

    ಇಂದು ವಿನಯ್ ಕುಲಕರ್ಣಿ ಬೆಳಗಾವಿಯ ಪ್ರವಾಸಿ ಮಂದಿರಲ್ಲಿ ಧಾರವಾಡ ಜಿಲ್ಲೆಯ ಅಧಿಕಾರಿಗಳ ಸಭೆಯನ್ನು ಕರೆದಿದ್ದರು. ಸಭೆಯಲ್ಲಿ ಅಚ್ಚರಿ ಎಂಬಂತೆ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಹಾಜರಾಗಿದ್ದರು. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ | ಸರ್ಕಾರದ ಕ್ರಮಗಳ ಬಗ್ಗೆ ವರಿಷ್ಠರಿಗೆ ವಿವರಿಸಿದ್ದೇನೆ – ಸಿದ್ದರಾಮಯ್ಯ

     

    ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜನರಿಗೆ ತೊಂದರೆ ಆಗುವುದು ಬೇಡ ಎಂಬ ಕಾರಣಕ್ಕೆ ಇಲ್ಲಿ ಸಭೆ ಮಾಡುತ್ತಿದ್ದೇನೆ. ಅಧಿಕಾರಿಗಳು ನನ್ನ ಪತ್ನಿಗೆ ಸಾಥ್ ನೀಡಿ ಎಂದು ಮನವಿ ಮಾಡಿಕೊಂಡರು.

    ಕ್ಷೇತ್ರದ ಜನರು ಯಾರು ಆತಂಕ ಪಡಬೇಕಿಲ್ಲ. ಇನ್ನು ಮುಂದೆ ಕ್ಷೇತ್ರವನ್ನು ನನ್ನ ಪತ್ನಿ ಮಗಳು ನೋಡಿಕೊಳ್ಳುತ್ತಾರೆ. ಅವರಿಗೆ ನಿಮ್ಮ ಸಹಕಾರ ನೀಡಬೇಕು. ಬುಧವಾರ ಕಿತ್ತೂರಿನಲ್ಲಿ ಸಭೆ ಮಾಡಿದ ಬಳಿಕ ಬೆಂಗಳೂರಿಗೆ ತೆರಳುತ್ತೇನೆ ಎಂದು ತಿಳಿಸಿದರು.

  • ಧಾರವಾಡ ಜಿಪಂ ಸದಸ್ಯನ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಜಾಮೀನು ರದ್ದು

    ಧಾರವಾಡ ಜಿಪಂ ಸದಸ್ಯನ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಜಾಮೀನು ರದ್ದು

    – ಇನ್ನೊಂದು ವಾರದಲ್ಲಿ ಶರಣಾಗುವಂತೆ ಸುಪ್ರೀಂ ಕೋರ್ಟ್‌ ಸೂಚನೆ

    ಧಾರವಾಡ: ಜಿಪಂ ಸದಸ್ಯನ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ (Supreme Court) ಶಾಸಕ ವಿನಯ್‌ ಕುಲಕರ್ಣಿ (Vinay Kulkarni) ಜಾಮೀನು ರದ್ದುಗೊಳಿಸಿದೆ.

    ಸಾಕ್ಷಿಗಳಿಗೆ ಹಣದ ಆಮಿಷ ಒಡ್ಡಿದ್ದು, ಒತ್ತಡ ಹೇರುತ್ತಿದ್ದಾರೆ. ಹೀಗಾಗಿ, ಜಾಮೀನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಸಿಬಿಐ ಮೇಲ್ಮನವಿ ಸಲ್ಲಿಸಿತ್ತು. ಇದನ್ನೂ ಓದಿ: ಬೆಂಗ್ಳೂರು ಕಾಲ್ತುಳಿತ ಕೇಸ್‌ – ಕೊಹ್ಲಿ ವಿರುದ್ಧ ದೂರು ದಾಖಲು

    ಜಾಮೀನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್‌, ಇನ್ನೊಂದು ವಾರದಲ್ಲಿ ಸಿಬಿಐ ಮುಂದೆ ಶರಣಾಗುವಂತೆ ವಿನಯ್‌ ಕುಲಕರ್ಣಿಗೆ ಸೂಚನೆ ನೀಡಿದೆ.

    ಶಾಸಕ ಈಗಾಗಲೇ ಜಾಮೀನಿನ ಮೇಲೆ ಹೊರಗಿದ್ದಾರೆ. ಈಗ ಮತ್ತೆ ಜೈಲು ಸೇರುವ ಭೀತಿ ಎದುರಾಗಿದೆ. ಇದನ್ನೂ ಓದಿ: ಬೆಂಗ್ಳೂರು ಕಾಲ್ತುಳಿತ ಪ್ರಕರಣ – ನಾಲ್ವರಿಗೆ 14 ದಿನ ನ್ಯಾಯಾಂಗ ಬಂಧನ

  • ಹನಿಟ್ರ‍್ಯಾಪ್ ಪ್ರಕರಣ ಸಿಬಿಐಗೆ ಕೊಡುವ ಅಗತ್ಯವಿಲ್ಲ: ವಿನಯ್ ಕುಲಕರ್ಣಿ

    ಹನಿಟ್ರ‍್ಯಾಪ್ ಪ್ರಕರಣ ಸಿಬಿಐಗೆ ಕೊಡುವ ಅಗತ್ಯವಿಲ್ಲ: ವಿನಯ್ ಕುಲಕರ್ಣಿ

    ಧಾರವಾಡ/ಬೆಳಗಾವಿ: ಹನಿಟ್ರ‍್ಯಾಪ್ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡುವ ಅಗತ್ಯವೇ ಇಲ್ಲ. ನಮ್ಮಲ್ಲೇ ಉತ್ತಮ ಅಧಿಕಾರಿಗಳಿದ್ದಾರೆ ಎಂದು ಶಾಸಕ ವಿನಯ್ ಕುಲಕರ್ಣಿ (Vinay Kulakarni) ಹೇಳಿದರು.

    ಬೆಳಗಾವಿಯ (Belagavi) ಕಿತ್ತೂರಿನಲ್ಲಿ (Kittur) ಮಾತನಾಡಿದ ಅವರು, ನಮ್ಮ ರಾಜ್ಯದಲ್ಲೇ ಹನಿಟ್ರ‍್ಯಾಪ್ ಪ್ರಕರಣವನ್ನು ಬೇಧಿಸುವಂತಹ ದಕ್ಷ ಅಧಿಕಾರಿಗಳಿದ್ದಾರೆ. ಹನಿಟ್ರ‍್ಯಾಪ್ ಮಾಡುವುದು ರಾಜಕಾರಣದಲ್ಲಿ ಅತ್ಯಂತ ಕೀಳುಮಟ್ಟದ ಕೆಲಸ. ಅದನ್ನು ಎಂದಿಗೂ ಮಾಡಬಾರದು ಎಂದರು. ಇದನ್ನೂ ಓದಿ: ಸಾಕು ನಾಯಿ ದಾಳಿ – ಮಹಿಳೆಯ ಮುಖಕ್ಕೆ ಬಿತ್ತು 20 ಸ್ಟಿಚ್

    ಫೋನ್ ಕದ್ದಾಲಿಕೆ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರೇ ಹೆಚ್ಚು ಫೋನ್ ಕದ್ದಾಲಿಕೆ ಮಾಡುತ್ತಾರೆ. ಇಂದಿಗೂ ಬಿಜೆಪಿಯರು ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆ. ಆರ್.ಅಶೋಕ್ (R Ashok) ಅವರ ಫೋನ್ ಕದ್ದಾಲಿಕೆ ಬಗ್ಗೆ ನನಗೆ ಗೊತ್ತಿಲ್ಲ. ನಾನು ಪ್ರವಾಸದಲ್ಲಿದ್ದೆ ಎಂದು ತಿಳಿಸಿದರು. ಇದನ್ನೂ ಓದಿ: ಹನಿಟ್ರ್ಯಾಪ್‌ ಕೇಸ್‌ – ಪರಮೇಶ್ವರ್‌ಗೆ ದೂರು ನೀಡದೇ ಮನವಿ ಕೊಟ್ಟ ರಾಜಣ್ಣ

    ಡಿ.ಕೆ.ಶಿವಕುಮಾರ್ (D K Shivakumar) ಅವರು ಸಂವಿಧಾನದ ಪರ ಇದ್ದವರು. ಅವರು ಸಂವಿಧಾನಕ್ಕೆ ಎಂದಿಗೂ ವಿರುದ್ಧ ಇಲ್ಲ. ಗಾಂಧಿ ಕಾರ್ಯಕ್ರಮದಲ್ಲಿ ಅವರು ಏನು ಮಾತನಾಡಿದ್ದಾರೆ ಎಂಬುದನ್ನು ನಾವು ನೋಡಿದ್ದೇವೆ. ಅಂತವರು ಸಂವಿಧಾನ ಬದಲಿಸುವ ಮಾತು ಹೇಳುತ್ತಾರಾ? ಅದು ಎಂದಿಗೂ ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ರೀಲ್ಸ್ ವಿವಾದ: ನಮಗೆ ಪೊಲೀಸರ ದಿಕ್ಕು ತಪ್ಪಿಸೋ ಉದ್ದೇಶವಿಲ್ಲ ಎಂದ ವಿನಯ್ ಗೌಡ

    ಶಾಸಕರಿಗೆ ಅನುದಾನದ ಕೊರತೆ ವಿಚಾರವಾಗಿ ಮಾತನಾಡಿ, ಬಜೆಟ್‌ನಲ್ಲಿ ಸ್ಪೆಷಲ್ ಗ್ರ‍್ಯಾಂಟ್ ಏನೂ ನಮಗೆ ಬಂದಿಲ್ಲ. ಇದನ್ನು ಸಿಎಂ ಜೊತೆ ನಾವು ಮಾತನಾಡುತ್ತೇವೆ. ಅವರೂ ಸಹ ನಮಗೆ ಹೆಚ್ಚು ಅನುದಾನ ಕೊಡುವ ಮಾತು ಹೇಳಿದ್ದಾರೆ. ನಮ್ಮ ಕಿತ್ತೂರು ಕರ್ನಾಟಕ ಭಾಗದ ಶಾಸಕರಿಗೆ ಹೆಚ್ಚಿನ ಅನುದಾನದ ಭರವಸೆ ಇದೆ. ಹೈದರಾಬಾದ್ ಕರ್ನಾಟಕದವರಿಗೆ 5 ಸಾವಿರ ಕೋಟಿ ರೂ. ಕೊಟ್ಟಿದ್ದಾರೆ ಎಂದು ನುಡಿದರು. ಇದನ್ನೂ ಓದಿ: ರೀಲ್ಸ್ ಮಾಡಿದ ಜಾಗದಲ್ಲಿ ವಿನಯ್‌, ರಜತ್‌ರನ್ನು ಸ್ಥಳ ಮಹಜರಿಗೆ ಕರೆತಂದ ಪೊಲೀಸರು

    ಹಲವು ಕಾರ್ಯಕ್ರಮ ಕೂಡ ಇಲ್ಲಿ ಮುಂದೂಡಲಾಗಿದೆ. ಇದು ಅನುದಾನದ ಕೊರತೆ ಎಂದು ನಮಗನಿಸುತ್ತಿದೆ. ಕಿತ್ತೂರು ಕರ್ನಾಟಕ ಭಾಗದ ಶಾಸಕರಿಗಾಗಿ 8 ಸಾವಿರ ಕೋಟಿ ರೂ. ಇಟ್ಟುಕೊಂಡಿದ್ದು, ನಾನು ಎಲ್ಲಾ ಬ್ಯಾಲನ್ಸ್ ಮಾಡಿ ಕೊಡುತ್ತೇನೆ ಎಂದು ಸಿಎಂ ಹೇಳಿದ್ದಾರೆ. ಧಾರವಾಡಕ್ಕೆ (Dharwada) ಪ್ರತ್ಯೇಕ ಪಾಲಿಕೆ ಮಾಡಿರುವುದರಿಂದ ನಾನು ನೂರು ಕೋಟಿ ರೂ. ಅನುದಾನ ಕೊಡಲು ಕೇಳಿದ್ದೇನೆ. ಸಿಎಂ 200 ಕೋಟಿ ರೂ. ಕೊಡಬಹುದು ಎಂದರು. ಇದನ್ನೂ ಓದಿ: ಡಿಕೆಶಿ ಪ್ರತಿಕೃತಿ ಸುಟ್ಟು 200ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

  • ವಿನಯ್ ಕುಲಕರ್ಣಿ ವರ್ಚಸ್ಸಿಗೆ ಧಕ್ಕೆ ತರುವ ಹುನ್ನಾರ ನಡೆದಿದೆ: ಏಗನಗೌಡರ

    ವಿನಯ್ ಕುಲಕರ್ಣಿ ವರ್ಚಸ್ಸಿಗೆ ಧಕ್ಕೆ ತರುವ ಹುನ್ನಾರ ನಡೆದಿದೆ: ಏಗನಗೌಡರ

    ಧಾರವಾಡ: 2022ರ ಕೇಸ್‌ನ್ನು ಈಗ ತೆಗೆದು ಆ ಮೂಲಕ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಅವರ ವರ್ಚಸ್ಸಿಗೆ ಧಕ್ಕೆ ತರುವ ಹುನ್ನಾರ ನಡೆಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಅರವಿಂದ ಏಗನಗೌಡರ (Aravind Eganagoudara) ಹೇಳಿದರು.

    ಈ ಬಗ್ಗೆ ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಅವರು ಧಾರವಾಡ (Dharawada) ಗ್ರಾಮೀಣ ಕ್ಷೇತ್ರದಲ್ಲಿ ಚಕ್ಕಡಿ ರಸ್ತೆ ನಿರ್ಮಿಸುವ ಮೂಲಕ ಮಾದರಿಯಾಗಿದ್ದಾರೆ. ಅವರು ಕ್ಷೇತ್ರದಲ್ಲಿ ಇಲ್ಲದೇ ಹೋದರೂ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆದಿವೆ. ಹೀಗಾಗಿ ಅವರ ವರ್ಚಸ್ಸಿಗೆ ಧಕ್ಕೆ ತರುವ ಹುನ್ನಾರ ನಡೆದಿದೆ ಎಂದರು. ಇದನ್ನೂ ಓದಿ: Valmiki Scam | ನಾಗೇಂದ್ರಗೆ ಬಿಗ್‌ ರಿಲೀಫ್‌ – ಜಾಮೀನು ಮಂಜೂರು

    ಮುನಿರತ್ನ ಹಾಗೂ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಬೇರೆ ಬೇರೆಯಾಗಿದೆ. ವಿನಯ್ ಕುಲಕರ್ಣಿ ಅವರ ಅತ್ಯಾಚಾರ ಕೇಸ್ ಬೇರೆಯಾಗಿದೆ. ಇಲ್ಲಿ ಮೊದಲು ವಿನಯ್ ಅವರೇ ತಮಗೆ ಸಾಕಷ್ಟು ತೊಂದರೆ ಕೊಡಲಾಗುತ್ತಿದೆ ಎಂದು ದೂರು ದಾಖಲಿಸಿದ್ದಾರೆ. ಈಗಾಗಲೇ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ. ಶಾಸಕ ಅರವಿಂದ ಬೆಲ್ಲದ ಮತ್ತು ಮಾಜಿ ಶಾಸಕ ಅಮೃತ ದೇಸಾಯಿ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಈ ಪ್ರಕರಣವನ್ನು ಸಿಬಿಐಗೆ ಕೊಡಿ ಎಂದು ಒತ್ತಾಯಿಸುತ್ತಿದ್ದಾರೆ. ನಮ್ಮ ನಾಡಿನ ಕಾನೂನಿನ ಬಗ್ಗೆ ಅವರಿಗೆ ನಂಬಿಕೆ ಇಲ್ಲವೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ದೆಹಲಿ ಸಿಎಂ ಅತಿಶಿ

    ಬಿಜೆಪಿಯವರು(BJP) ಸಣ್ಣ ಮಕ್ಕಳು ಜಗಳವಾಡಿದರೂ ಅದನ್ನು ಸಿಬಿಐಗೆ ಕೊಡಿ ಎನ್ನುವ ಹಂತಕ್ಕೆ ಬಂದು ನಿಂತಿದ್ದಾರೆ. ಈಗ ವಿನಯ್ ವಿರುದ್ಧ ಜೀವ ಬೆದರಿಕೆ, ಅತ್ಯಾಚಾರ ಆರೋಪದಡಿ ಪ್ರಕರಣ ರೈತ ಮಹಿಳೆ ನೀಡಿರುವ ದೂರು ದಾಖಲಾಗಿದ್ದು, ಅದರ ಬಗ್ಗೆ ಸಿಐಡಿ ತನಿಖೆ ನಡೆಸುತ್ತದೆ. ಪದೇ ಪದೇ ಈ ರೀತಿಯ ಆರೋಪಗಳನ್ನು ವಿನಯ್ ಕುಲಕರ್ಣಿ ಅವರ ಮೇಲೆ ಮಾಡುತ್ತಲೇ ಬರಲಾಗುತ್ತಿದೆ. ಇದೊಂದು ವ್ಯವಸ್ಥಿತ ಹುನ್ನಾರ. ವಿನಯ್ ಅವರ ಜೊತೆ ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಇದ್ದಾರೆ. ಅವರು ಈ ಎಲ್ಲ ಪ್ರಕರಣಗಳಿಂದ ಆರೋಪ ಮುಕ್ತರಾಗಿ ಬರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ದರ್ಶನ್‌, ಪವಿತ್ರಾಗೆ ಜೈಲೇಗತಿ – ಜಾಮೀನು ಅರ್ಜಿ ವಜಾ

  • 4 ವರ್ಷದ ಬಳಿಕ ಧಾರವಾಡಕ್ಕೆ ಬಂದು ಮತದಾನ ಮಾಡಿ ಹೋದ ಶಾಸಕ ವಿನಯ್ ಕುಲಕರ್ಣಿ

    4 ವರ್ಷದ ಬಳಿಕ ಧಾರವಾಡಕ್ಕೆ ಬಂದು ಮತದಾನ ಮಾಡಿ ಹೋದ ಶಾಸಕ ವಿನಯ್ ಕುಲಕರ್ಣಿ

    ಧಾರವಾಡ: ಕ್ಷೇತ್ರದ ಹೊರಗಿದ್ದುಕೊಂಡೇ ವಿಧಾನಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಶಾಸಕ ವಿನಯ್ ಕುಲಕರ್ಣಿ (Vinay Kulkarni) ನಾಲ್ಕು ವರ್ಷದ ಬಳಿಕ ಧಾರವಾಡಕ್ಕೆ (Dharawda) ಕಾಲಿಟ್ಟಿದ್ದಾರೆ.

    ಜಿಲ್ಲಾ‌ ಪಂಚಾಯತ್‌ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣಕ್ಕೆ(Yogesh Gowda Murder Case) ಸಂಬಂಧಿಸಿದಂತೆ ಜೈಲುವಾಸ ಅನುಭವಿಸಿ, ಜಾಮೀನಿನ ಮೇಲೆ ಹೊರಗಿರುವ ವಿನಯ್ ಕುಲಕರ್ಣಿ ಅವರು ಯಾವುದೇ ಕಾರಣಕ್ಕೂ ಧಾರವಾಡ ಜಿಲ್ಲಾ ಪ್ರವೇಶ ಮಾಡಬಾರದು ಎಂದು ಸುಪ್ರೀಂ ಕೋರ್ಟ್ (Supreme Court) ನಿರ್ಬಂಧ ಹೇರಿದೆ. ಹೀಗಿದ್ದರೂ ವಿನಯ್ ಕುಲಕರ್ಣಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ  ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದನ್ನೂ ಓದಿ: ಒಕ್ಕಲಿಗ ನಾಯಕತ್ವಕ್ಕಾಗಿ ಚಿಲ್ರೆ ಕೆಲ್ಸ ಮಾಡಿದ್ರೆ ಆಗಲ್ಲ: ಡಿವಿಎಸ್‌

    ಚುನಾವಣೆ ಬಳಿಕ ಹಲವು ಬಾರಿ ತಮಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ನ್ಯಾಯಾಲಯಕ್ಕೆ ಅವರು ಅರ್ಜಿ ಸಲ್ಲಿಸುತ್ತಲೇ ಬಂದಿದ್ದರೂ ನ್ಯಾಯಾಲಯ ಮಾತ್ರ ಅವರ ಅರ್ಜಿಯನ್ನು ತಿರಸ್ಕರಿಸುತ್ತಲೇ ಬಂದಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡುವ ಸಲುವಾಗಿ ಧಾರವಾಡಕ್ಕೆ ಹೋಗಲು ಅವಕಾಶ ನೀಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ನ್ಯಾಯಾಲಯ ಕೂಡ ಅವರ ಅರ್ಜಿ ತಿರಸ್ಕರಿಸಿದ ಕಾರಣ ಅವರು ಬೆಂಗಳೂರಿನ ಹೈಕೋರ್ಟ್ (High Court) ಮೊರೆ ಹೋಗಿದ್ದರು.

    ವಿನಯ್ ಕುಲಕರ್ಣಿ ಮನವಿಗೆ ಸ್ಪಂದಿಸಿದ ಹೈಕೋರ್ಟ್‌, ಲೋಕಸಭಾ ಚುನಾವಣೆಗೆ (Lok Sabha Election) ಮತದಾನ ಮಾಡಿ ಬರಬಹುದು. ಮತಗಟ್ಟೆಗೆ ತೆರಳಿ ಮತದಾನ ಮಾಡಿದ ಕೂಡಲೇ ಧಾರವಾಡ ಬಿಟ್ಟು ಮತ್ತೆ ಹೊರಡಬೇಕು ಎಂದು ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಧಾರವಾಡ ಸಪ್ತಾಪುರದಲ್ಲಿರುವ ಶಾರದಾ ಸ್ಕೂಲ್‌‌ನ ಮತಗಟ್ಟೆ 75ಕ್ಕೆ ಬಂದ ವಿನಯ್ ಕುಲಕರ್ಣಿ ತಮ್ಮ ಹಕ್ಕು ಚಲಾಯಿಸಿ ಮತ್ತೆ ಅಲ್ಲಿಂದ  ತೆರಳಿದ್ದಾರೆ. ಇದನ್ನೂ ಓದಿ: ಕಾಡಿನಲ್ಲಿ ಇರೋದು ಒಬ್ಬನೇ ವ್ಯಕ್ತಿ – ಕೇವಲ ಒಂದೇ ವೋಟ್‌ನಿಂದ 100% ಮತದಾನ

    ಧಾರವಾಡಕ್ಕೆ ಬರುತ್ತಿದ್ದಂತೆ  ಸೇರಿದ್ದ ವಿನಯ್ ಅವರ ಬೆಂಬಲಿಗರು ಅವರ ಪರ ಘೋಷಣೆಗಳನ್ನು ಕೂಗಿದರು. ಅವರ ಕೈ ಕುಲುಕಿ ಖುಷಿಪಟ್ಟರು. ವಿನಯ್ ಅವರು ಆಗಮಿಸುತ್ತಿದ್ದಂತೆ ಅವರ ಪತ್ನಿ ಶಿವಲೀಲಾ ಹಾಗೂ ಪುತ್ರಿ ವೈಶಾಲಿ ಕೂಡ ಹರ್ಷ ವ್ಯಕ್ತಪಡಿಸಿ ಅವರನ್ನು ಭೇಟಿಯಾದರು. ಅಲ್ಲದೇ ಕಾರ್ಯಕರ್ತರು ವಿನಯ್ ಅವರ ಕಾರಿನ ಮೇಲೆ ಹೂಮಳೆ ಸುರಿಸಿದರು.

    ವಿನಯ್ ಅವರಿಗೆ ಶಾಸಕ ಎನ್.ಎಚ್.ಕೋನರಡ್ಡಿ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಸಾಥ್ ನೀಡಿದರು.

     

  • ಬೆಂಗಳೂರಿನಲ್ಲಿ ಶಾಸಕ ಪುತ್ರನ ಬೈಕ್ ಅಪಘಾತ

    ಬೆಂಗಳೂರಿನಲ್ಲಿ ಶಾಸಕ ಪುತ್ರನ ಬೈಕ್ ಅಪಘಾತ

    ಬೆಂಗಳೂರು: ರಾಜಧಾನಿಯಲ್ಲಿ ಶಾಸಕ ವಿನಯ್‌ ಕುಲಕರ್ಣಿ (Vinay Kulakarni) ಪುತ್ರನ ಬೈಕ್‌ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಶಾಸಕನ ಪುತ್ರ ಗಾಯಗೊಂಡಿದ್ದಾರೆ.

    ಇಂದು (ಗುರುವಾರ) ಬೆಳಗ್ಗೆ ಬೆಳ್ಳಂದೂರು ಸಂಚಾರಿ ಠಾಣಾ ವ್ಯಾಪ್ತಿಯ ಔಟರ್ ರಿಂಗ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ್‌ ಕುಲಕರ್ಣಿ ಪುತ್ರ ಹೇಮಂತ್ (19)ಗೆ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಈಶ್ವರಪ್ಪ ಅಂದ್ರೆ ಯಾರು? ಆ ಹೆಸರಿನವ್ರು ಯಾರೂ ಗೊತ್ತಿಲ್ಲ: ರಾಧಾಮೋಹನ್ ದಾಸ್ ವ್ಯಂಗ್ಯ

    ಇಂದು ಬೆಳಗ್ಗೆ 5 ಗಂಟೆಗೆ ಬೈಕ್‌ನಲ್ಲಿ ಹೇಮಂತ್‌ ತೆರಳುತ್ತಿದ್ದರು. ಮಾರ್ಗ ಮಧ್ಯೆ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದ್ದಾರೆ. ಪರಿಣಾಮ ಹೇಮಂತ್ ಕಾಲಿಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಳ್ಳಂದೂರು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.