Tag: ವಿನಯ್ ಕುಲಕರ್ಣಿ

  • ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಶಾಕ್

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಶಾಕ್

    ಧಾರವಾಡ: ಬಿಜೆಪಿ ಮುಖಂಡ ಯೋಗೀಶ್ ಗೌಡನ (Yogesh Gowda) ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ (Vinay Kulakarni) ಜನಪ್ರತಿನಿಧಿಗಳ ನ್ಯಾಯಾಲಯ (Representatives Court) ಮತ್ತೆ ಶಾಕ್ ಕೊಟ್ಟಿದೆ.

    ಜಿಲ್ಲಾ ಪಂಚಾಯಿತಿ ಸದಸ್ಯನಾಗಿದ್ದ ಬಿಜೆಪಿ ಮುಖಂಡ ಯೋಗೀಶ್ ಗೌಡನ ಕೊಲೆ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವಿನಯ್ ಕುಲಕರ್ಣಿ ಧಾರವಾಡ (Dharwad) ಜಿಲ್ಲೆ ಭೇಟಿಗೆ ಕೋರ್ಟ್ ಅನುಮತಿ ನಿರಾಕರಿಸಿದೆ. ಇದನ್ನೂ ಓದಿ: ಹಣ ಪಾವತಿಸದ ವಿಮಾ ಕಂಪನಿಗೆ ಗ್ರಾಹಕರ ಆಯೋಗದಿಂದ 35 ಸಾವಿರ ರೂ. ದಂಡ

    ಹುಬ್ಬಳ್ಳಿ-ಧಾರವಾಡ ಪಾಲಿಕೆ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ (Hubballi-Dharwad Mayoral Elections) ಜೂನ್ 20 ರಂದು ಧಾರವಾಡಕ್ಕೆ ತೆರಳಿ ಮತದಾನ ಮಾಡುವುದಕ್ಕೆ ಅನುಮತಿ ಕೋರಿದ್ದರು. ಆದರೆ ಕೋರ್ಟ್ ಅನುಮತಿ ನಿರಾಕರಿಸಿದೆ. ಈ ಹಿಂದೆಯೂ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿತ್ತು.

    ಕೊಲೆ ಪ್ರಕರಣದ ಸಾಕ್ಷಿಯ ತಾಯಿ ನಗರ ಪಾಲಿಕೆ ಸದಸ್ಯರು, ಆದ್ರೆ ಶಾಸಕರಾದ ಮೇಲೆ ವಿನಯ್ ಕುಲಕರ್ಣಿ ಮತ್ತಷ್ಟು ಪ್ರಭಾವಿಯಾಗಿದ್ದಾರೆ. ಆದ್ದರಿಂದ ಅನುಮತಿ ನೀಡದಂತೆ CBI ಎಸ್‌ಪಿಪಿ ಗಂಗಾಧರ ಶೆಟ್ಟಿ ವಾದ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ನಂತರ ನ್ಯಾಯಾಧೀಶ ಬಿ. ಜಯಂತಕುಮಾರ್ ಅನುಮತಿ ನಿರಾಕರಿಸಿ ಆದೇಶ ಪ್ರಕಟಿಸಿದರು. ಇದನ್ನೂ ಓದಿ: ಹುಬ್ಬಳ್ಳಿ ಧಾರವಾಡ ಮೇಯರ್‌ ಚುನಾವಣೆ – ಗದ್ದುಗೆ ಹಿಡಿಯಲು ಕೈ ಕಸರತ್ತು, ಬೆಂಗಳೂರಿನಲ್ಲಿ ಸಭೆ

    ಅರ್ಜಿ ಹಾಕಿದ್ದು ಯಾಕೆ?
    ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿಯಾಗಿರುವ ವಿನಯ್ ಕುಲಕರ್ಣಿಯನ್ನು ಸಿಬಿಐ ಬಂಧಿಸಿತ್ತು. ಜಾಮೀನು ಮಂಜೂರು ಮಾಡುವಾಗ ಧಾರವಾಡ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್ ಷರತ್ತು ವಿಧಿಸಿತ್ತು. ಆದರೆ ಅನಿವಾರ್ಯ ಇದ್ದಾಗ ಮಾತ್ರ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಿತ್ತು. ಆದರೆ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಗೆದ್ದಿದ್ದ ವಿನಯ್ ಕುಲಕರ್ಣಿ ಮೇಯರ್ ಚುನಾವಣೆಯಲ್ಲಿ ಮತದಾನ ಮಾಡಲು ಅನುಮತಿ ಕೋರಿ ಅರ್ಜಿ ಸಲ್ಲಿಸಿ ಪ್ರವೇಶಕ್ಕೆ ಮನವಿ ಮಾಡಿದ್ದರು.

    ಏನಿದು ಕೇಸ್?
    2017ರ ಜೂನ್ 15ರಂದು ಬಿಜೆಪಿ ಮುಖಂಡ ಯೋಗೇಶ್ ಗೌಡನ ಕೊಲೆಯಾಗಿತ್ತು. ಅಂದು ಬೆಳಗ್ಗೆ ಧಾರವಾಡ ನಗರದ ಸಪ್ತಾಪುರ ಜಿಮ್‌ಗೆ ಎಂಟ್ರಿ ಕೊಟ್ಟಿದ್ದ ದುಷ್ಕರ್ಮಿಗಳು ಯೋಗೇಶ್ ಗೌಡನನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆಗೈದಿದ್ದರು. ಈ ದೃಶ್ಯವು ಜಿಮ್ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳನ್ನಾಧರಿಸಿ ಪೊಲೀಸರು ಮಾಜಿ ಸಚಿವ, ಸ್ಥಳೀಯ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಐವರನ್ನು ಬಂಧಿಸಿದ್ದರು. ಹೀಗಾಗಿ ಕೊಲೆಯ ಹಿಂದೆ ವಿನಯ್ ಕುಲಕರ್ಣಿ ಅವರ ಕೈವಾಡವಿದೆ ಎಂಬ ಆರೋಪ ಕೇಳಿ ಬಂದಿತ್ತು.

    ಪ್ರಕರಣದಲ್ಲಿ ವಿನಯ್ ಕುಲಕರ್ಣಿಯವರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಆರೋಪಿಗಳು ಯೋಗಿಶ್ ಗೌಡನ ಸಹೋದರನ ಜೊತೆ ರಾಜಿ ಮಾಡಿಕೊಳ್ಳಲು ಮುಂದಾಗಿದ್ದರು. ಇತ್ತ ವಿನಯ್ ಕುಲಕರ್ಣಿಯವರ ಹೆಸರನ್ನು ಕೈ ಬಿಡಲು ಅಧಿಕಾರಿಗಳು ಪ್ಲ್ಯಾನ್ ಮಾಡಿಕೊಳ್ಳುತ್ತಿದ್ದಾರೆ ಎಂದು ಯೋಗೇಶ್ ಗೌಡ ತಾಯಿ ಆರೋಪಿಸಿದ್ದರು.

    ಅಂದಿನ ರಾಜ್ಯ ಸರ್ಕಾರ 2019 ಸೆಪ್ಟೆಂಬರ್ 9ರಂದು ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆಯನ್ನು ಅಧಿಕೃತವಾಗಿ ಸಿಬಿಐಗೆ ಹಸ್ತಾಂತರಿಸಿತ್ತು. ತನಿಖೆ ಆರಂಭಿಸಿರುವ ಸಿಬಿಐ ಪ್ರಕರಣದ ಆರೋಪಿಗಳಾದ ಬಸವರಾಜ ಶಿವಪ್ಪ, ವಿಕ್ರಮ್ ಬಳ್ಳಾರಿ, ಕೀರ್ತಿ ಕುಮಾರ್ ಕುರಹಟ್ಟಿ, ಸಂದೀಪ್ ಸೌದತ್ತಿ, ವಿನಾಯಕ ಕಾಟಗಿ ಹಾಗೂ ಮಹಾಬಲೇಶ್ವರ ಹೊನಗಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿತ್ತು.

  • ಬಿಜೆಪಿಯವರು ಯಾರೂ ಮನೆಯಲ್ಲಿ ಒಂದು ಆಕಳು ಕಟ್ಟಿಲ್ಲ, ಮಾತಾಡ್ತಾರೆ ಅಷ್ಟೇ: ವಿನಯ್ ಕುಲಕರ್ಣಿ

    ಬಿಜೆಪಿಯವರು ಯಾರೂ ಮನೆಯಲ್ಲಿ ಒಂದು ಆಕಳು ಕಟ್ಟಿಲ್ಲ, ಮಾತಾಡ್ತಾರೆ ಅಷ್ಟೇ: ವಿನಯ್ ಕುಲಕರ್ಣಿ

    ಬೆಳಗಾವಿ: ಗೋಹತ್ಯೆ (Cow Slaughter) ನಿಷೇಧ ಕಾಯ್ದೆ ರದ್ದು ಮಾಡಿದ್ರೆ ಹೋರಾಟ ಮಾಡುತ್ತೇವೆ ಎಂಬ ಬಿಜೆಪಿ (BJP) ನಾಯಕರ ಹೇಳಿಕೆ ವಿಚಾರಕ್ಕೆ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಪ್ರತಿಕ್ರಿಯೆ ನೀಡಿದ್ದು ಬಿಜೆಪಿಯವರು ಯಾರೂ ಮನೆಯಲ್ಲಿ ಒಂದು ಆಕಳು ಕಟ್ಟಿಲ್ಲ, ಮಾತನಾಡುತ್ತಾರೆ ಅಷ್ಟೇ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋಪೂಜೆ ಮಾಡುವಾಗ ಪ್ಲಾಸ್ಟಿಕ್ ಆಕಳು ಪೂಜೆ ಮಾಡ್ತಾರೆ. ಇಷ್ಟು ಮಾತನಾಡೋರು ಮನೆಯಲ್ಲಿ ಆಕಳು ಕಟ್ಟಿ ಪೂಜೆ ಮಾಡಲು ಹೇಳಿ. ಮನೆಯಲ್ಲಿ ನಾಲ್ಕು ಆಕಳು ಕಟ್ಟೋಕೆ ಹೇಳಿ ಎಂದು ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸವಾಲು ಹಾಕಿದರು.

    ನಾವೆಲ್ಲ ಡೈರಿ ಫಾರ್ಮರ್ಸ್, ಇಡೀ ರಾಜ್ಯದಲ್ಲಿ ನಾನು ಅತಿ ಹೆಚ್ಚು ದನ ಸಾಕಿದವನು. ಉತ್ತರಪ್ರದೇಶ, ಗುಜರಾತ್, ಹರಿಯಾಣ, ಪಂಜಾಬ್‌ನಲ್ಲಿ ಗೋಹತ್ಯೆ ನಿಷೇಧ ಮಾಡಿದರು. ನನ್ನ ಬಳಿ 1,600 ಆಕಳು ಇವೆ. ಅರ್ಧ ಹೋರಿ, ಅರ್ಧ ಹಸು ಹುಟ್ಟುತ್ತವೆ. ಹೆಚ್‌ಎಫ್ ತಳಿಯ ಹೋರಿ ಏನು ಮಾಡಲು ಸಾಧ್ಯ? ಫ್ರೀ ಕೊಡುತ್ತೇವೆ ಎಂದರೂ ಯಾರೂ ತಗೊಳ್ಳಲ್ಲ. ಯಾರೂ ರೈತರು ಕೃಷಿ ಚಟುವಟಿಕೆಯಲ್ಲಿ ಎತ್ತು ಬಳಕೆ ಮಾಡುತ್ತಿಲ್ಲ. ಯಂತ್ರೋಪಕರಣ ಬಂದಿವೆ. ನಮಗೆ ಮೇವು ಸಿಗಲ್ಲ. ಇವರೆಲ್ಲ ಮಾತನಾಡಿ ಜನರ ದಾರಿ ತಪ್ಪಿಸಬಹುದು. ಪ್ರ‍್ಯಾಕ್ಟಿಕಲ್ ಆಗಿ ಸರ್ಕಾರ ಮೇವು ಕೊಡಿಸಿ ಕೊಡಲಿ ನೋಡೋಣ ಎಂದರು.

    ದೇಶಿಯ ತಳಿ ಉಳಿಸಿಕೊಳ್ಳಲು, ಬೆಳೆಸಲು ಸರ್ಕಾರ ಯೋಜನೆ ಹಾಕಿ ಅವುಗಳಿಗೆ ರಕ್ಷಣೆ ಕೊಡಿ. ಹೆಚ್‌ಎಫ್ ವಿದೇಶಿ ತಳಿಗೆ ನಿರ್ಬಂಧ ಹೇರುತ್ತೇವೆ. ಯಾರಿಂದಾದರೂ ದುಡ್ಡು ಪಡೆದು ಗೋಶಾಲೆ ಮಾಡೋದು ಬೇರೆ. ಕೋಟಿ ಕೋಟಿ ಸಾಲ ಮಾಡಿ ಡೈರಿ ನಡೆಸುತ್ತಿರುತ್ತೇವೆ. ಆಕಳು ಗರ್ಭಧಾರಣೆ ಮಾಡದಿದ್ದರೆ  ಅದನ್ನು ಇಟ್ಟುಕೊಂಡು ಏನು ಮಾಡಲಿ? ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ಆಗಲಿ, ಚರ್ಚೆ ಆಗಲಿ. ನಮ್ಮಂತಹ ರೈತರನ್ನು ಕರೆದು ಚರ್ಚೆ ಮಾಡಬೇಕು. ರಾಜಕಾರಣಿಗಳು, ಜಾತಿವಾದ ಮಾಡುವರನ್ನು ಕರೆಯುವ ಅವಶ್ಯಕತೆ ಇಲ್ಲ ಎಂದರು. ಇದನ್ನೂ ಓದಿ: ಸಚಿವ ವೆಂಕಟೇಶ್‌ ಯಾರ ಓಲೈಕೆಗೆ ಈ ಹೇಳಿಕೆ ನೀಡಿದ್ದಾರೆ : ಬೊಮ್ಮಾಯಿ ಪ್ರಶ್ನೆ

    ದನ ಎಂದರೆ ಅವರಿಗೆ ಗೊತ್ತಿಲ್ಲ. ಅದಕ್ಕೆ ಕಾಲು ಎಷ್ಟು, ಹಾಲು ಎಲ್ಲಿಂದ ಬರುತ್ತೆ ಗೊತ್ತಿಲ್ಲ. ರೈತರನ್ನು ಕರೆಯಿರಿ, ಡೈರಿ ಫಾರ್ಮರ್ಸ್ ಕರೆದು ಚರ್ಚೆ ಮಾಡಬೇಕು. ಇದರಿಂದ ರೈತರಿಗೆ ಎಷ್ಟು ದೊಡ್ಡ ಹೊಡೆತ ಬಿದ್ದಿದೆ. ಕಾಲು ಮುರಿದ ಎತ್ತಿನಿಂದ ಕೃಷಿ ಕೆಲಸ ಮಾಡಲು ಆಗುತ್ತಾ? ಕೋವಿಡ್ ವೇಳೆ 7-8 ಕೋಟಿ ರೂ. ಲಾಸ್ ಆದ್ವಿ. ಯಾರಾದರೂ ಸಹಾಯ ಮಾಡಲು ಮುಂದೆ ಬಂದ್ರಾ? ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಯಾವನೂ ಬೇಕಾದರೂ ಡಿಬೇಟ್ ಕರೆದರೂ ಹೋಗಲು ನಾನು ಸಿದ್ಧನಿದ್ದೇನೆ ಎಂದು ವಿನಯ್ ಕುಲಕರ್ಣಿ ಹೇಳಿದರು. ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಚರ್ಚಿಸಲು ಸದನವಿದೆ : ಸತೀಶ್ ಜಾರಕಿಹೊಳಿ

  • ವಿನಯ್ ಕುಲಕರ್ಣಿಗೆ ಉಪಮುಖ್ಯಮಂತ್ರಿ ಸ್ಥಾನ ಕೊಡುವಂತೆ ಮುರುಘಾಮಠದ ಶ್ರೀಗಳ ಒತ್ತಾಯ

    ವಿನಯ್ ಕುಲಕರ್ಣಿಗೆ ಉಪಮುಖ್ಯಮಂತ್ರಿ ಸ್ಥಾನ ಕೊಡುವಂತೆ ಮುರುಘಾಮಠದ ಶ್ರೀಗಳ ಒತ್ತಾಯ

    ಧಾರವಾಡ: ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿರುವ ವಿನಯ್ ಕುಲಕರ್ಣಿಯವರಿಗೆ (Vinay Kulkarni) ಉಪಮುಖ್ಯಮಂತ್ರಿ (Deputy Chief Minister) ಸ್ಥಾನ ನೀಡಬೇಕು ಎಂದು ಮುರುಘಾಮಠದ ಡಾ.ಮಲ್ಲಿಕಾರ್ಜುನ ಸ್ವಾಮೀಜಿ ಒತ್ತಾಯಿಸಿದ್ದಾರೆ.

    ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಜನಪ್ರಿಯ ಶಾಸಕರು. ಉತ್ತರ ಕರ್ನಾಟಕದ ಪ್ರಬಲ ನಾಯಕರು. ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿದರೆ ಚೆನ್ನಾಗಿರುತ್ತದೆ. ಇದು ನನ್ನ ಸ್ವಂತ ವಿಚಾರ. ಸಾಮಾಜಿಕವಾಗಿ ನಾನು ನನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: 135 ಶಾಸಕರು ನಮ್ಮವರೇ, ಹೈಕಮಾಂಡ್ ಪಾದಕ್ಕೆ ಹಾಕಿದ್ದೀವಿ: ಡಿಕೆ ಶಿವಕುಮಾರ್

    ವಿನಯ್ ಕುಲಕರ್ಣಿ ಮುರುಘಾಮಠದ (Murugamata) ಕಾರ್ಯಾಧ್ಯಕ್ಷರು. ಅವರ ಜೊತೆ ಉಳಿದ ಲಿಂಗಾಯತ ಶಾಸಕರಿಗೂ ಒಳ್ಳೆಯ ಸ್ಥಾನಮಾನ ಕೊಡಬೇಕು. ವಿನಯ್ ಕುಲಕರ್ಣಿ ಈ ಹಿಂದೆಯೂ ಸಚಿವರಾಗಿ ಕೆಲಸ ಮಾಡಿದ್ದಾರೆ. ಅವರಿಗೆ ಡಿಸಿಎಂ ಸ್ಥಾನ ಕೊಟ್ಟಿದ್ದೇ ಆದಲ್ಲಿ ಅವರು ಇನ್ನೂ ಎತ್ತರಕ್ಕೆ ಬೆಳೆಯಲು ಪುಷ್ಠಿ ನೀಡಿದಂತಾಗುತ್ತದೆ. ಅವರು ನಮ್ಮ ಮಠದ ಕಾರ್ಯಾಧ್ಯಕ್ಷರಾಗಿರುವುದರಿಂದ ಇದರಲ್ಲೂ ನಮ್ಮ ಸ್ವಾರ್ಥ ಇದೆ ಎಂದಿದ್ದಾರೆ. ಇದನ್ನೂ ಓದಿ: ಕಜಕಿಸ್ತಾನದಿಂದ ಬೆದರಿಕೆ ಕರೆ – ಪೊಲೀಸರಿಗೆ ದೂರು ನೀಡಿದ ಈಶ್ವರಪ್ಪ

  • ನನ್ನ ಆತ್ಮೀಯರ ಮೇಲೆ ಐಟಿ ರೇಡ್ ಮಾಡುವ ಹುನ್ನಾರ ನಡೆದಿದೆ: ವಿನಯ್ ಕುಲಕರ್ಣಿ

    ನನ್ನ ಆತ್ಮೀಯರ ಮೇಲೆ ಐಟಿ ರೇಡ್ ಮಾಡುವ ಹುನ್ನಾರ ನಡೆದಿದೆ: ವಿನಯ್ ಕುಲಕರ್ಣಿ

    ಬೆಳಗಾವಿ: ಇವತ್ತು ಕೋರ್ಟ್ ನನಗೆ ಧಾರವಾಡ (Dharwad) ಜಿಲ್ಲಾ ಪ್ರವೇಶಕ್ಕೆ ಅನುಮತಿ ಕೊಟ್ಟಿಲ್ಲ. ಹೊರಗಡೆ ಇದ್ದುಕೊಂಡೇ ನಾನು ಚುನಾವಣೆ ಮಾಡುತ್ತಿದ್ದೇನೆ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ (Vinay Kulkarni) ಹೇಳಿದರು.

    ಬೆಳಗಾವಿ (Belagavi)  ಜಿಲ್ಲೆಯ ಕಿತ್ತೂರಿನಲ್ಲಿ ಮನೆ ಮಾಡಿಕೊಂಡು ಇರುವ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ (Congress) ಅಭ್ಯರ್ಥಿ ವಿನಯ್ ಕುಲಕರ್ಣಿ, ಕ್ಷೇತ್ರದ ಜನ ಇದೀಗ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಮರಳಿ ನನಗೆ ಅವಕಾಶ ಕೊಡಲು ಉತ್ಸುಕರಾಗಿದ್ದಾರೆ ಎಂದು ತಿಳಿಸಿದರು.

    ನನ್ನ ಮೇಲೆ ಬಿಜೆಪಿ (BJP) ಷಡ್ಯಂತ್ರ ನಡೆಸಿದೆ ಎಂಬ ಹೇಳಿಕೆಗೆ ನಾನು ಈಗಲೂ ಬದ್ಧನಿದ್ದೇನೆ. ಏಕೆಂದರೆ ಕೋರ್ಟ್‌ನಲ್ಲಿ ಯರ‍್ಯಾರು ಬಂದು ಕುಳಿತಿರುತ್ತಾರೆ ಎಂಬುದನ್ನು ನೀವು ನೋಡಿದರೆ ನಿಮಗೇ ಗೊತ್ತಾಗುತ್ತದೆ. ನಾನು ಅಷ್ಟೇ ಅಲ್ಲ ರಾಜ್ಯದ ಅನೇಕ ನಾಯಕರ ಮೇಲೆ ಬಿಜೆಪಿ ಷಡ್ಯಂತ್ರ ನಡೆಸಿದೆ. ಇಂದಿಗೂ ಅನೇಕರ ಮೇಲೆ ಐಟಿ ರೇಡ್ ಮಾಡಿಸಲಾಗುತ್ತಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿಯವರು ನಮ್ಮ ಪಿಎ ಮನೆಗಳ ಮೇಲೆ ಐಟಿ ದಾಳಿ ನಡೆಸಿ ಅವರು ಹೊರಗಡೆ ಬರದಂತೆ ಮಾಡಿದರು ಎಂದು ಆರೋಪಿಸಿದರು.

    ನನ್ನ ಅವಧಿಯಲ್ಲಿ ಆದಂತಹ ಕೆಲಸಗಳನ್ನು ಮುಂದಿಟ್ಟುಕೊಂಡು ನನ್ನ ಪತ್ನಿ ಹಾಗೂ ಕಾರ್ಯಕರ್ತರು ಮತ ಕೇಳುತ್ತಿದ್ದಾರೆ. ರೈತರಿಗೆ, ವಿದ್ಯಾರ್ಥಿಗಳಿಗೆ, ಯುವಕರಿಗೆ ನಾವು ಕೊಟ್ಟಂತಹ ಯೋಜನೆಗಳು ಇಂದು ನನ್ನ ಕೈ ಹಿಡಿಯುತ್ತಿವೆ. ಕಳೆದ 5 ವರ್ಷಗಳ ಅವಧಿಯಲ್ಲಿ ಬಿಜೆಪಿ ಶಾಸಕರು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನೇ ಮಾಡಿಲ್ಲ. ಒಂದೂ ಜನಸಂಪರ್ಕ ಸಭೆ ನಡೆಸಿಲ್ಲ. ಕಾಂಗ್ರೆಸ್‌ಗೆ ಬೆಂಬಲ ನೀಡಿದಂತಹವರಿಗೆ ಕಿರುಕುಳ ನೀಡುವ ಕೆಲಸ ಮಾಡಿದ್ದಾರೆ. 1 ಲಕ್ಷ ರೂ. ಕೊಟ್ಟವರಿಗೆ ಮಾತ್ರ ಮನೆ ಹಾಕಿಸಿಕೊಟ್ಟಿದ್ದಾರೆ ಎಂದರು.

    ವಿನಯ್ ಕುಲಕರ್ಣಿ ಯಾರು ಎಂಬುದು ನನ್ನ ಕ್ಷೇತ್ರದ ಜನರಿಗೆ ಗೊತ್ತಿದೆ. ನ್ಯಾಯಾಂಗದ ಮೇಲೆ ನನಗೆ ಭರವಸೆ ಇದೆ. ಸತ್ಯಕ್ಕೆ ಜಯ ಸಿಕ್ಕೇ ಸಿಗುತ್ತದೆ. ಬಿಜೆಪಿಯವರು ಹಾಲಿನಲ್ಲಿ ಹರಳು ಒಗೆಯುವ ಕೆಲಸ ಮಾಡಿದ್ದಾರೆ. ಇಂದು ಕ್ಷೇತ್ರದಲ್ಲಿ ನನ್ನ ಪತ್ನಿಗೆ ಒಳ್ಳೆಯ ಸ್ಪಂದನೆ ಸಿಗುತ್ತಿದೆ. ಎಲ್ಲರೂ ಆಕೆಯನ್ನು ಮನೆಯ ಮಗಳಂತೆ ಕಾಣುತ್ತಿದ್ದಾರೆ. ನಾನು ಜಿಲ್ಲೆಯ ಹೊರಗಿದ್ದರೂ ಕೆಲಸ ಮಾಡುತ್ತೇನೆ. ಈ ಬಾರಿ ನನ್ನ ಕ್ಷೇತ್ರ ಮಾತ್ರವಲ್ಲ ಇಡೀ ರಾಜ್ಯದಲ್ಲೇ ಕಾಂಗ್ರೆಸ್ ಪರ ಅಲೆ ಇದೆ ಎಂದು ಹೇಳಿದರು. ಇದನ್ನೂ ಓದಿ: ಪ್ರಧಾನಿ ಮೋದಿ ನಾಲಾಯಕ್‌ ಹೇಳಿಕೆ – ಪ್ರಿಯಾಂಕ್‌ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ BJP ದೂರು

    ಈಗಿನ ಸರ್ಕಾರ ಮಾಡಿದಷ್ಟು ಭ್ರಷ್ಟಾಚಾರವನ್ನು ಯಾವ ಸರ್ಕಾರವೂ ಮಾಡಿಲ್ಲ. ನಾನು ಮಾಡಿದ ಕೆರೆಗೆ ನೀರು ತುಂಬಿಸುವ ಕೆಲಸ, ಮಂದಿರ ನಿರ್ಮಾಣ ಸೇರಿದಂತೆ ಇತ್ಯಾದಿ ಕೆಲಸಗಳಿಗೆ ಬಿಜೆಪಿ ಶಾಸಕರು ತಮ್ಮ ಹೆಸರು ಹಾಕಿಸಿಕೊಳ್ಳುವ ಕೆಲಸ ಮಾಡಿದ್ದಾರೆ. ನನ್ನ ಕ್ಷೇತ್ರಕ್ಕೆ ಯಾವುದೇ ಸ್ಟಾರ್ ಪ್ರಚಾರಕರ ಅವಶ್ಯಕತೆ ಇಲ್ಲ. ನನ್ನ ಕಾರ್ಯಕರ್ತರೇ ನನ್ನ ಸ್ಟಾರ್ ಪ್ರಚಾರಕರು. ಸಿದ್ದರಾಮಯ್ಯ ಒಬ್ಬರು ನನ್ನ ಕ್ಷೇತ್ರಕ್ಕೆ ಬರುತ್ತೇನೆ ಎಂದಿದ್ದಾರೆ. ದುಂದುವೆಚ್ಚ ಮಾಡುವವನು ನಾನಲ್ಲ ಎಂದರು.

    ಸುದೀಪ್ ಅವರು ಕರೆಕ್ಟ್ ಆಗಿಯೇ ಹೇಳಿದ್ದಾರೆ. ಅಭಿವೃದ್ಧಿ ಯಾರು ಮಾಡುತ್ತಾರೋ ಅವರಿಗೆ ಮತ ಹಾಕಿ ಎಂದಿದ್ದಾರೆ. ಅದು ಕರೆಕ್ಟ್ ಆಗಿಯೇ ಇದೆ. ಇಂದಿಗೂ ನಮ್ಮ ಫೋನ್‌ಗಳನ್ನು ಟ್ಯಾಪ್ ಮಾಡಲಾಗುತ್ತಿದೆ. ಕಾಲ್ ರೆಕಾರ್ಡ್ ಮಾಡಲಾಗುತ್ತಿದೆ. ನಾವು ಏನಾದರೂ ಮಾತನಾಡಿದರೆ ಅದು 10 ನಿಮಿಷಕ್ಕೆ ಬಿಜೆಪಿಯವರಿಗೆ ಮಾಹಿತಿ ಮುಟ್ಟುತ್ತದೆ. ಈ ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ಆಗುತ್ತಿದೆ. ಆದ್ದರಿಂದ ಪ್ರಜಾಪ್ರಭುತ್ವದ ಉಳಿವಿಗೆ ಕಾಂಗ್ರೆಸ್ ಅವಶ್ಯವಿದೆ. ಈ ಬಾರಿ ನಾವು 146 ಸೀಟುಗಳನ್ನು ಗೆಲ್ಲುತ್ತೇವೆ ಎಂದರು. ಇದನ್ನೂ ಓದಿ: ನನ್ನ ಸೋಲಿಸೋಕೆ ಇದು ಗುಜರಾತ್ ಅಲ್ಲ, ಇದು ಕರ್ನಾಟಕ: ಜಗದೀಶ್ ಶೆಟ್ಟರ್ ಗುಡುಗು

  • ಸುಪ್ರೀಂ ಆದೇಶ ಗೊತ್ತಿದ್ದರೂ ಹೈಕಮಾಂಡ್ ನಿಮಗೆ ಅಲ್ಲಿ ಟಿಕೆಟ್ ನೀಡಿದ್ಯಾ – ವಿನಯ್ ಕುಲಕರ್ಣಿ ಪರ ವಕೀಲರಿಗೆ ಹೈಕೋರ್ಟ್ ಚಾಟಿ

    ಸುಪ್ರೀಂ ಆದೇಶ ಗೊತ್ತಿದ್ದರೂ ಹೈಕಮಾಂಡ್ ನಿಮಗೆ ಅಲ್ಲಿ ಟಿಕೆಟ್ ನೀಡಿದ್ಯಾ – ವಿನಯ್ ಕುಲಕರ್ಣಿ ಪರ ವಕೀಲರಿಗೆ ಹೈಕೋರ್ಟ್ ಚಾಟಿ

    ಬೆಂಗಳೂರು: ಧಾರವಾಡಕ್ಕೆ (Dharwad) ಪ್ರವೇಶ ನೀಡಬಾರದು ಎಂಬ ಸುಪ್ರೀಂ ಕೋರ್ಟ್ (Supreme Court) ಆದೇಶ ಗೊತ್ತಿದ್ದರೂ ಹೈಕಮಾಂಡ್ ಅಲ್ಲಿಂದ ಚುನಾವಣೆಗೆ (Election) ಸ್ಪರ್ಧಿಸುವಂತೆ ನಿಮ್ಮ ಕಕ್ಷಿದಾರರಿಗೆ ಟಿಕೆಟ್ ಕೊಟ್ಟಿದ್ಯಾ ಎಂದು ವಿನಯ್ ಕುಲಕರ್ಣಿ (Vinay Kulkarni) ಪರ ವಕೀಲರಿಗೆ ಹೈಕೋರ್ಟ್ (High Court) ಪ್ರಶ್ನಿಸಿ ಚಾಟಿ ಬೀಸಿದೆ.

    ಧಾರವಾಡ ಪ್ರವೇಶಕ್ಕೆ ನಿರಾಕರಿಸಿದ ಜನಪ್ರತಿನಿಧಿಗಳ ಕೋರ್ಟ್ ಆದೇಶವನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್ ಧಾರವಾಡ ಪ್ರವೇಶಿಸದಂತೆ ಸೂಚಿಸಿದೆ. ಇದನ್ನೂ ಓದಿ: ಕಾಂಗ್ರೆಸ್‌ನ 224 ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಿ: ಕರಂದ್ಲಾಜೆ ದೂರು

    ವಿನಯ್ ಕುಲಕರ್ಣಿ ಕಾಂಗ್ರೆಸ್ ಟಿಕೆಟ್ ಪಡೆದಿದ್ದು ಧಾರವಾಡದಿಂದ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ. ಆದರೆ ಪ್ರಕರಣವೊಂದರಲ್ಲಿ ಆರೋಪಿಯಾಗಿರುವ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಧಾರವಾಡ ಪ್ರವೇಶಿಸದಂತೆ ಈ ಹಿಂದೆ ಆದೇಶ ನೀಡಿತ್ತು. ಈಗ ಚುನಾವಣಾ ಪ್ರಚಾರಕ್ಕೆ ಅನುಕೂಲವಾಗುವಂತೆ ಧಾರವಾಡಕ್ಕೆ ಪ್ರವೇಶಿಸಲು ಅವಕಾಶ ನೀಡಬೇಕು ಎಂದು ಹೈಕೋರ್ಟ್‍ಗೆ ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸುವ ವೇಳೆ ಕೋರ್ಟ್ ಕುಲಕರ್ಣಿ ಪರ ವಕೀಲರನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದೆ.

    karnataka highcourt

    ಧಾರವಾಡದ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಆರೋಪಿಯಾಗಿರುವ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಏ.15 ರಂದು ವಿನಯ್ ಕುಲಕರ್ಣಿ ಅವರ ಅರ್ಜಿಯ ವಿಚಾರಣೆಯನ್ನು ಪೂರ್ಣ ಮಾಡಿದ್ದ ಕೋರ್ಟ್ ಏಪ್ರಿಲ್ 18 ರಂದು ಧಾರವಾಡ ಪ್ರವೇಶಿಸದಂತೆ ಆದೇಶ ನೀಡಿತ್ತು.

    ಯೋಗೇಶ್ ಗೌಡ ಪ್ರಕರಣದ 120 ಸಾಕ್ಷಿಗಳ ಪೈಕಿ 90 ಮಂದಿ ಧಾರವಾಡದವರೇ ಆಗಿದ್ದಾರೆ. ವಿನಯ್ ಕುಲಕರ್ಣಿಗೆ ಕ್ಷೇತ್ರಕ್ಕೆ ಪ್ರವೇಶ ನೀಡಿದರೆ ಆದೇಶ ದುರುಪಯೋಗವಾಗಬಹುದು. ಮುಂದೆ ವಿಚಾರಣೆಗೆ ಸಮಸ್ಯೆಯಾಗಬಹುದು. ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆಯಿದೆ. ಯಾವುದೇ ಕಾರಣಕ್ಕೂ ಪ್ರವೇಶಕ್ಕೆ ಅನುಮತಿ ನೀಡಬಾರದು ಎಂದು ಸಿಬಿಐ ಪರ ವಕೀಲರು ಬಲವಾದ ವಾದ ಮಂಡಿಸಿದ್ದರು.

    ಸುಪ್ರೀಂ ಷರತ್ತು
    ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿಯಾಗಿರುವ ವಿನಯ್ ಕುಲಕರ್ಣಿಯನ್ನು ಸಿಬಿಐ ಬಂಧಿಸಿತ್ತು. ಜಾಮೀನು ಮಂಜೂರು ಮಾಡುವಾಗ ಧಾರವಾಡ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್ ಷರತ್ತು ವಿಧಿಸಿತ್ತು. ಆದರೆ ಅನಿವಾರ್ಯ ಇದ್ದಾಗ ಮಾತ್ರ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಿತ್ತು. ಆದರೆ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದ ಕಾರಣ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿ ಪ್ರವೇಶಕ್ಕೆ ಮನವಿ ಮಾಡಿದ್ದರು. ಇದನ್ನೂ ಓದಿ: ಹಿರಿಯೂರಲ್ಲಿ ಡಿಕೆಶಿ ಆಪ್ತ ಸುಧಾಕರ್, ಬಿಎಸ್‌ವೈ ದತ್ತು ಪುತ್ರಿ ಪೂರ್ಣಿಮಾ ಮಧ್ಯೆ ಜಟಾಪಟಿ

  • ಕಾಂಗ್ರೆಸ್‌ಗೆ ಬಿಗ್‌ ಶಾಕ್‌ – ವಿನಯ್‌ ಕುಲಕರ್ಣಿ ಧಾರವಾಡ ಪ್ರವೇಶಿಸುವಂತಿಲ್ಲ

    ಕಾಂಗ್ರೆಸ್‌ಗೆ ಬಿಗ್‌ ಶಾಕ್‌ – ವಿನಯ್‌ ಕುಲಕರ್ಣಿ ಧಾರವಾಡ ಪ್ರವೇಶಿಸುವಂತಿಲ್ಲ

    – ಜನಪ್ರತಿನಿಧಿಗಳ ಕೋರ್ಟ್‌ನಿಂದ ಮಹತ್ವದ ಆದೇಶ
    – ವಿನಯ್‌ ಕುಲಕರ್ಣಿ ಧಾರವಾಡ ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ

    ಬೆಂಗಳೂರು: ವಿಧಾನಸಭಾ ಚುನಾವಣೆಯ (Karnataka Election) ಸಮಯದಲ್ಲಿ ಧಾರವಾಡಕ್ಕೆ ತೆರಳಲು ಅನುಮತಿ ಕೋರಿ ಮಾಜಿ ಸಚಿವ ವಿನಯ್‌ ಕುಲಕರ್ಣಿ (Vinay Kulkarni) ಸಲ್ಲಿಸಿದ್ದ ಅರ್ಜಿ ವಜಾಗೊಂಡಿದ್ದು ಕಾಂಗ್ರೆಸ್‌ಗೆ (Congress) ಹಿನ್ನಡೆಯಾಗಿದೆ.

    ಧಾರವಾಡ  ಬಿಜೆಪಿ ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣ (Yogesh Gowda Murder Case) ಸಂಬಂಧ ಧಾರವಾಡ ಪ್ರವೇಶಕ್ಕೆ (Dharwad Entry) ಅನುಮತಿ ಕೋರಿ ವಿನಯ್ ಕುಲಕರ್ಣಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಲ್ಲಿ ಅರ್ಜಿ ಸಲ್ಲಿಸಿದ್ದರು. ಏಪ್ರಿಲ್‌ 15 ರಂದು ವಿನಯ್‌ ಕುಲಕರ್ಣಿ ಅವರ ಅರ್ಜಿಯ ವಿಚಾರಣೆಯನ್ನು ಪೂರ್ಣ ಮಾಡಿದ್ದ ಕೋರ್ಟ್‌ ಏಪ್ರಿಲ್‌ 18ಕ್ಕೆ ತೀರ್ಪು ಕಾಯ್ದಿರಿಸಿತ್ತು.

    ಸಿಬಿಐ ವಾದ ಏನಿತ್ತು?
    ಯೋಗೇಶ್‌ ಗೌಡ ಪ್ರಕರಣದ 120 ಸಾಕ್ಷಿಗಳ ಪೈಕಿ 90 ಮಂದಿ ಧಾರವಾಡದವರೇ ಆಗಿದ್ದಾರೆ. ವಿನಯ್‌ ಕುಲಕರ್ಣಿಗೆ ಕ್ಷೇತ್ರಕ್ಕೆ ಪ್ರವೇಶ ನೀಡಿದರೆ ಆದೇಶ ದುರುಪಯೋಗವಾಗಬಹುದು. ಮುಂದೆ ವಿಚಾರಣೆಗೆ ಸಮಸ್ಯೆಯಾಗಬಹುದು. ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆಯಿದೆ. ಯಾವುದೇ ಕಾರಣಕ್ಕೂ ಪ್ರವೇಶಕ್ಕೆ ಅನುಮತಿ ನೀಡಬಾರದು ಎಂದು ಸಿಬಿಐ ಪರ ವಕೀಲರು ಬಲವಾದ ವಾದ ಮಂಡಿಸಿದ್ದರು.

    ಅರ್ಜಿ ಹಾಕಿದ್ದು ಯಾಕೆ?
    ಯೋಗೇಶ್‌ ಗೌಡ ಕೊಲೆ ಪ್ರಕರಣದ ಆರೋಪಿಯಾಗಿರುವ ವಿನಯ್‌ ಕುಲಕರ್ಣಿಯನ್ನು ಸಿಬಿಐ (CBI) ಬಂಧಿಸಿತ್ತು. ಜಾಮೀನು ಮಂಜೂರು ಮಾಡುವಾಗ ಧಾರವಾಡ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್‌ ಷರತ್ತು ವಿಧಿಸಿತ್ತು. ಆದರೆ ಅನಿವಾರ್ಯ ಇದ್ದಾಗ ಮಾತ್ರ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಿತ್ತು. ಆದರೆ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದ ಕಾರಣ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿ ಪ್ರವೇಶಕ್ಕೆ ಮನವಿ ಮಾಡಿದ್ದರು.

    ಕಾಂಗ್ರೆಸ್‌ಗೆ ಶಾಕ್‌ ಯಾಕೆ?
    ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಟಿಕೆಟ್‌ ನೀಡಿದೆ. ವಿನಯ್‌ ಕುಲಕರ್ಣಿ ಈಗ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡದ ಕಾರಣ ಕಾಂಗ್ರೆಸ್‌ ಮುಂದೆ ಏನು ನಿರ್ಧಾರ ತೆಗೆದುಕೊಳ್ಳಲಿದೆ ಎಂಬ ಕುತೂಹಲ ಹೆಚ್ಚಾಗಿದೆ.

    ಧಾರವಾಡ ಪ್ರವೇಶ ಸಿಗದಿದ್ದರೆ ವಿನಯ್‌ ಕುಲಕರ್ಣಿ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂಬ ಮಾತು ಈ ಹಿಂದೆಯೇ ಕೇಳಿ ಬಂದಿತ್ತು. ಒಂದು ವೇಳೆ ಕಾಂಗ್ರೆಸ್‌ ವಿನಯ್‌ ಕುಲಕರ್ಣಿ ಹೆಸರನ್ನು ಅಂತಿಮಗೊಳಿಸಿದರೆ ಸಿಎಂ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಬೇಕಾಗುತ್ತದೆ.

  • ಶಿಗ್ಗಾಂವಿಯಲ್ಲಿ ಸಿಎಂ ವಿರುದ್ಧ ಸ್ಪರ್ಧೆ ನನ್ನ ಅಪೇಕ್ಷೆಯಲ್ಲ, ಅದು ಹೈಕಮಾಂಡ್ ನಿರ್ಧಾರ: ವಿನಯ್ ಕುಲಕರ್ಣಿ

    ಶಿಗ್ಗಾಂವಿಯಲ್ಲಿ ಸಿಎಂ ವಿರುದ್ಧ ಸ್ಪರ್ಧೆ ನನ್ನ ಅಪೇಕ್ಷೆಯಲ್ಲ, ಅದು ಹೈಕಮಾಂಡ್ ನಿರ್ಧಾರ: ವಿನಯ್ ಕುಲಕರ್ಣಿ

    ಬೆಳಗಾವಿ: ಶಿಗ್ಗಾಂವಿಯಿಂದ (Shiggaavi) ಸ್ಪರ್ಧೆ ವಿಚಾರ ನನ್ನದಲ್ಲ. ಹೈಕಮಾಂಡ್ ನಾಯಕರು ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ. ಹಲವು ಬಾರಿ ನಮ್ಮ ನಾಯಕರು ಈ ವಿಚಾರ ಹೇಳಿದ್ದಾರೆ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ (Vinay Kulkarni) ಹೇಳಿದರು.

    ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ಶಿಗ್ಗಾಂವಿಯಿಂದ ಸ್ಪರ್ಧೆ ವಿಚಾರಕ್ಕೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ವಿನಯ್ ಕುಲಕರ್ಣಿ, ಶಿಗ್ಗಾಂವಿಯಿಂದ ಸ್ಪರ್ಧೆ ವಿಚಾರ ನನ್ನದಲ್ಲ. ಹೈಕಮಾಂಡ್ ನಾಯಕರು ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ. ಹಲವು ಬಾರಿ ನಮ್ಮ ನಾಯಕರು ಈ ವಿಚಾರ ಹೇಳಿದ್ದಾರೆ. ನನಗೆ ಧಾರವಾಡ ಪ್ರವೇಶಕ್ಕೆ ಕುತಂತ್ರದಿಂದ ಅವಕಾಶ ನೀಡುತ್ತಿಲ್ಲ. ಸ್ಪರ್ಧೆ ನನ್ನ ಅಪೇಕ್ಷೆಯಲ್ಲ, ಅದು ಹೈಕಮಾಂಡ್ ನಿರ್ಧಾರ ಎಂದರು. ಇದನ್ನೂ ಓದಿ: ರಾಜ್ಯ ರಾಜಕಾರಣಕ್ಕೆ ರಮ್ಯಾ ವಾಪಸ್‌ – ಬೆಂಗಳೂರಿನಿಂದ ಕಣಕ್ಕೆ?

    ಶಿಗ್ಗಾಂವಿಯಲ್ಲೂ ಹಲವು ಆಕಾಂಕ್ಷಿಗಳಿದ್ದಾರೆ. ಅವರಿಗೆ ನೋವು ಮಾಡಿ ಸ್ಪರ್ಧೆ ಮಾಡುವ ಅವಶ್ಯಕತೆ ಇಲ್ಲ. ಪಕ್ಷದ ವರಿಷ್ಠರ ತೀರ್ಮಾನ ಏನು ಆಗಿರುತ್ತದೋ ಅದರಂತೆಯೇ ನಡೆಯುತ್ತೇನೆ. ಸ್ಪರ್ಧೆ ಮಾಡದಂತೆ ಹೇಳಿದರೂ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಲು ಸಿದ್ಧನಾಗಿದ್ದೇನೆ. ಧಾರವಾಡದಿಂದ ಸ್ಪರ್ಧೆ ಮಾಡಬೇಡಿ ಎಂದರೂ ಮಾಡುವುದಿಲ್ಲ ಎಂದು ವಿನಯ್ ಕುಲಕರ್ಣಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯ ವಾಟ್ಸಪ್ ಯುನಿವರ್ಸಿಟಿ ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ- ಡಿಕೆಶಿ

  • ಧಾರವಾಡ ಐಐಟಿ ಆಗಲು ಕಾಂಗ್ರೆಸ್ ಕಾರಣ: ಮಾಜಿ ಸಚಿವ ವಿನಯ್ ಕುಲಕರ್ಣಿ

    ಧಾರವಾಡ ಐಐಟಿ ಆಗಲು ಕಾಂಗ್ರೆಸ್ ಕಾರಣ: ಮಾಜಿ ಸಚಿವ ವಿನಯ್ ಕುಲಕರ್ಣಿ

    ಧಾರವಾಡ: ಧಾರವಾಡದಲ್ಲಿ ಐಐಟಿ (IIT) ಆಗಲು ಕಾರಣವೇ ಕಾಂಗ್ರೆಸ್ (Congress) ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ (Vinay Kulkarni) ವೀಡಿಯೋ ಮೂಲಕ ಹೇಳಿದ್ದಾರೆ.

    ಧಾರವಾಡದಲ್ಲಿ (Dharwad) ಐಐಟಿ ಉದ್ಘಾಟನೆ ಆಗುತ್ತಿರುವುದು ಖುಷಿ ತಂದಿದೆ. ಯಾಕೆಂದರೆ ಧಾರವಾಡ ವಿದ್ಯಾಕಾಶಿ ಎಂದೇ ಖ್ಯಾತಿಯಾಗಿದೆ. ಹಿಂದಿನಿಂದಲೂ ಧಾರವಾಡ ಎಂದರೆ ವಿದ್ಯಾರ್ಥಿಗಳ ಶಿಕ್ಷಣದ ಕೇಂದ್ರ. ಇದು ಉದ್ಘಾಟನೆ ಆಗುತ್ತಿರುವ ಹಿಂದೆ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯನವರ (Siddaramaiah) ದೊಡ್ಡ ಪಾತ್ರವಿದೆ. ಕರ್ನಾಟಕದಲ್ಲಿ ಐಐಟಿ ಸ್ಥಾಪನೆ ವೇಳೆ ರಾಯಚೂರಿಗೆ (Raichur) ಹೋಗಬೇಕು ಎಂದು ಸರ್ಕಾರ ನಿರ್ಧಾರ ಮಾಡಿತ್ತು. ಆಗ ನಾವೆಲ್ಲಾ ಮುಖಂಡರು ಹೋಗಿ ಧಾರವಾಡಕ್ಕೆ ಐಐಟಿ ಬರಬೇಕೆಂದು ಸಿದ್ದರಾಮಯ್ಯನವರ ಬಳಿ ಮನವಿ ಮಾಡಿದಾಗ ಸಿದ್ದರಾಮಯ್ಯನವರು ಅದನ್ನು ಮೈಸೂರಿಗೆ (Mysuru) ಶಿಫ್ಟ್ ಮಾಡಿದರು. ಅದನ್ನು ಮೈಸೂರಿನಿಂದ ಧಾರವಾಡಕ್ಕೆ ಬರುವಂತೆ ಮಾಡಲು ನಾವು ಬಹಳ ದೊಡ್ಡ ಹೋರಾಟ ಮಾಡಬೇಕಾಯಿತು. ಈ ಹೋರಾಟದ ಪ್ರತಿಫಲ ಧಾರವಾಡದಲ್ಲಿ ಐಐಟಿ ಉದ್ಘಾಟನೆಗೊಳ್ಳಲಿದೆ. ಇದು ನಮಗೆಲ್ಲರಿಗೂ ಸಂತಸವನ್ನು ತಂದಿದೆ ಎಂದರು. ಇದನ್ನೂ ಓದಿ: ವಧುದಕ್ಷಿಣೆ ಕಡಿಮೆ ಆಯ್ತು ಅಂತಾ ಮದುವೆ ಬೇಡವೆಂದ ಯುವತಿ – ಪ್ರಕರಣ ದಾಖಲಿಸದ ಪೊಲೀಸರು

    ನಂತರ ಅದರ ಸ್ಥಾಪನೆಗಾಗಿ ಐದೂವರೆ ಎಕರೆ ಜಮೀನನ್ನು ಕೇಳಿದರು. ಇದಕ್ಕಾಗಿ ನಾವು ಅವತ್ತಿನ ಕೈಗಾರಿಕಾ ಸಚಿವರಾದ ಆರ್.ವಿ.ದೇಶಪಾಂಡೆ (R.V.Deshpande) ಬಳಿ ಹೋದೆವು. ಅವರ ಜೊತೆಗೆ ಸಿದ್ದರಾಮಯ್ಯನವರು ಕೂಡಾ ನಮ್ಮ ಜೊತೆ ಬೆಂಬಲವಾಗಿ ನಿಂತರು. ಐದೂವರೆ ಎಕರೆ ಜಮೀನನ್ನು ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ನಮಗೆ ನೀಡಿತು. ನಂತರದ ದಿನಗಳಲ್ಲಿ ಉನ್ನತ ಶಿಕ್ಷಣ ಸಚಿವರಾದ ಬಸವರಾಜ್ ರಾಯರೆಡ್ಡಿ (Basavaraj Rayareddy) ಅವರು ಕೂಡಾ ಪ್ರಮುಖ ಪಾತ್ರ ವಹಿಸಿದ್ದಾರೆ. ಅಲ್ಲದೇ ಇದರಲ್ಲಿ ಹಲವಾರು ಬಿಜೆಪಿ (BJP) ನಾಯಕರು ಕೂಡಾ ಕೈಜೋಡಿಸಿದ್ದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಖ್ಯಾತ ನಟ ಸತೀಶ್ ಕೌಶಿಕ್ ಸಾವು: ತನಿಖೆ ಕೈಗೊಂಡ ಪೊಲೀಸ್

    ವಿನಯ್ ಕುಲಕರ್ಣಿ

    ಈ ಐಐಟಿ ಫೌಂಡೇಶನ್ ವೇಳೆ ಇದರಲ್ಲಿ ಶೇ.25ರಷ್ಟು ಕರ್ನಾಟಕದ ವಿದ್ಯಾರ್ಥಿಗಳಿಗೆ ನೀಡಬೇಕು ಎಂದು ಬೇಡಿಕೆಯನ್ನು ಇಟ್ಟಿದ್ದೆವು. ಅಷ್ಟೇ ಅಲ್ಲದೇ ಐದೂವರೆ ಎಕರೆ ಭೂಮಿ ನೀಡಿದ ರೈತರ ಮಕ್ಕಳಿಗೆ ಇದರಲ್ಲಿ ಉದ್ಯೋಗ ನೀಡಬೇಕಾಗಿ ಕೇಳಿದ್ದೆವು. ಇವೆರಡೂ ಕೂಡಾ ಯಶಸ್ವಿಯಾಗಲಿಲ್ಲ. ನಾಳೆ ನಡೆಯುವ ಉದ್ಘಾಟನೆ ವೇಳೆ ಇದನ್ನು ಘೋಷಿಸಿ ತಾವು ನೀಡಿದ ವಚನವನ್ನು ಉಳಿಸಿಕೊಳ್ಳಬೇಕು. ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಡಿ ದರ್ಜೆಯ ಶಾಶ್ವತ ಕೆಲಸವನ್ನು ಮಾಡಿಕೊಡಬೇಕು ಎಂದು ಎಲ್ಲಾ ಮುಖಂಡರಲ್ಲಿ ವಿನಂತಿ ಮಾಡಿಕೊಂಡರು. ಇದನ್ನೂ ಓದಿ: ಮಿಥುನ್ ರೈ ವಿವಾದ : ಬಕೆಟ್ ಅಲ್ಲ, ಟ್ಯಾಂಕ್ ಹಿಡೀತಿನಿ ಎಂದ ರಕ್ಷಿತ್ ಶೆಟ್ಟಿ

  • ಬಿಜೆಪಿಯವರು ನನ್ನನ್ನು ಕ್ರಿಮಿನಲ್ ಮಾಡಿದ್ದಾರೆ: ಡಿಕೆಶಿ

    ಬಿಜೆಪಿಯವರು ನನ್ನನ್ನು ಕ್ರಿಮಿನಲ್ ಮಾಡಿದ್ದಾರೆ: ಡಿಕೆಶಿ

    ಬೆಳಗಾವಿ: ಬಿಜೆಪಿಯವರು (BJP) ನನ್ನನ್ನು ಕ್ರಿಮಿನಲ್ (Criminal) ಮಾಡಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿಯನ್ನೂ ಸಹ ಕ್ರಿಮಿನಲ್ ಮಾಡಿದ್ದಾರೆ. ರಾಜಕೀಯವಾಗಿ ಯಾರು ಯಾರು ಬೆಳೆಯುತ್ತಾರೆ, ಪ್ರಬಲವಾಗಿ ಇರುವವರನ್ನು ಕ್ರಿಮಿನಲ್ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಹೇಳಿದರು.

    ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ (Vinay Kulkarni) ಹುಟ್ಟುಹಬ್ಬದ (Birthday) ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆ ದೃಷ್ಠಿಯಿಂದ ನಾಯಕರು, ಅವರ ಅಭಿಮಾನಿಗಳು, ಕಾರ್ಯಕರ್ತರು ಹುಟ್ಟುಹಬ್ಬ ಮಾಡುತ್ತಿದ್ದಾರೆ. ಧಾರವಾಡಕ್ಕೆ ಹೋಗಲು ಕೋರ್ಟ್ ನಿರ್ಬಂಧ ಹೇರಿದೆ. ಹೀಗಾಗಿ ಪಕ್ಕದ ಕ್ಷೇತ್ರದಲ್ಲಿ ಅವರ ಕಾರ್ಯಕ್ರಮ ಮಾಡುತ್ತಿದ್ದಾರೆ. ಹುಟ್ಟುಹಬ್ಬ ಆಚರಣೆಯಲ್ಲಿ ಒಬ್ಬೊಬ್ಬರದ್ದು ಒಂದೊಂದು ಶೈಲಿ ಇರುತ್ತದೆ. ನಾನು ಕೇದಾರನಾಥಕ್ಕೆ ಹೋಗಿದ್ದೆ. ಕೆಲವರು ಆಸ್ಪತ್ರೆಗೆ ಹೋಗಿ ಹಣ್ಣು ಹಂಪಲು ಕೊಟ್ಟು ಆಚರಿಸುತ್ತಾರೆ. ಆಗಸ್ಟ್ 3 ರಂದು ಸಿದ್ದರಾಮಯ್ಯನವರ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಆಚರಿಸಿದರು. ವಿನಯ್ ಕುಲಕರ್ಣಿ 2-3 ಬಾರಿ ಶಾಸಕರಾಗಿದ್ದವರು. ಕಾರ್ಯಕರ್ತರ ಭಾವನೆಗೆ ಅನುಗುಣವಾಗಿ ಹುಟ್ಟುಹಬ್ಬ ಆಚರಣೆ ಮಾಡಲಾಗುತ್ತದೆ. ಅವರಿಗೆ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ, ಬೆಳಗಾವಿ ಜಿಲ್ಲೆ ಜವಾಬ್ದಾರಿ ಕೊಟ್ಟಿದ್ದೇವೆ ಎಂದರು.

    ಕೊಲೆ ಆರೋಪಿ, ಕ್ರಿಮಿನಲ್ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದಾರೆ ಎಂಬ ಬಿಜೆಪಿಯವರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ನನ್ನನ್ನೂ ಕ್ರಿಮಿನಲ್ ಮಾಡಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿಯನ್ನೂ ಸಹ ಕ್ರಿಮಿನಲ್ ಮಾಡಿದ್ದಾರೆ. ರಾಜಕೀಯವಾಗಿ ಯಾರು ಯಾರು ಬೆಳೆಯುತ್ತಾರೋ ಪ್ರಬಲವಾಗಿ ಇರುವವರನ್ನು ಕ್ರಿಮಿನಲ್ ಮಾಡಿದ್ದಾರೆ. ಯಾರನ್ನು ಕಂಡರೆ ಅವರಿಗೆ ಭಯ ಇರುತ್ತೋ ಅವರ ಮೇಲೆ ಕೇಸ್‌ಗಳನ್ನು ಹಾಕುವುದು, ತೊಂದರೆ ಕೊಡುವುದು ಮಾಡುತ್ತಾರೆ ಎಂದು ದೂರಿದರು.

    ವಿನಯ್ ಕುಲಕರ್ಣಿ ಮೇಲೆ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದನ್ನು ರಾಜಕೀಯ ಉದ್ದೇಶದಿಂದ ಬಿಜೆಪಿಯವರು ಪ್ರಭಾವ ಬೀರಿ ಸಿಬಿಐಗೆ ವಹಿಸಿದ್ದಾರೆ. ಸಿಬಿಐ ಯಾವ ರೀತಿ ಕೆಲಸ ಮಾಡುತ್ತಿದೆ ಎಂಬುದನ್ನು ನಾನು ಬಿಡಿಸಿ ಹೇಳಬೇಕಾಗಿಲ್ಲ. ವಿನಯ್‌ಗೆ ಧಾರವಾಡಕ್ಕೆ ನಿರ್ಬಂಧದ ನ್ಯಾಯಾಲಯದ ಹಕ್ಕನ್ನು ನಾನು ಪ್ರಶ್ನಿಸುವುದಿಲ್ಲ ಎಂದರು. ಇದನ್ನೂ ಓದಿ: ಬಾದಾಮಿಯಲ್ಲಿ ಸ್ಪರ್ಧಿಸದಿದ್ರೆ ಹೆಣ್ಮಕ್ಕಳು ಧರಣಿಗೆ ಕೂರ್ತಿವಿ ಅಂದಿದ್ದಾರೆ: ಸಿದ್ದರಾಮಯ್ಯ

    ಡಿಕೆಶಿ ಇಂಧನ ಸಚಿವರಿದ್ದಾಗ ನಡೆದ ಭ್ರಷ್ಟಾಚಾರ ಬಗ್ಗೆ ತನಿಖೆ ಮಾಡುತ್ತೇವೆ ಎಂಬ ಸಿಎಂ ಹೇಳಿಕೆ ವಿಚಾರಕ್ಕೆ, ಮುಖ್ಯಮಂತ್ರಿಗಳ ಕ್ರಮ ಸ್ವಾಗತ ಮಾಡುತ್ತೇನೆ. ನಾನೇನೂ ಕಣ್ಣು ಮುಚ್ಚಿ ಕುಳಿತುಕೊಂಡಿಲ್ಲ. ಇಂಧನ ಸಚಿವರು, ಜಲಸಂಪನ್ಮೂಲ ಸಚಿವರು ಬಿಜೆಪಿ ಆಡಳಿತದಲ್ಲಿ ಏನೇನೋ ಗುತ್ತಿಗೆ ಕೊಟ್ಟಿದ್ದಾರೆ. 1,000 ಕೋಟಿ ಇರೋದನ್ನು 1,300 ಕೋಟಿ ಮಾಡಿದ್ದಾರೆ. 300 ಕೋಟಿ ಇರೋದನ್ನು 700 ಕೋಟಿ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲೂ ಇದರ ಬಗ್ಗೆ ಸಾಕಷ್ಟು ಉದಾಹರಣೆಗಳಿವೆ. ನಾನೇನೂ ಕಣ್ಣು ಮುಚ್ಚಿಕೊಂಡು ರಾಜಕಾರಣ ಮಾಡುತ್ತಿಲ್ಲ. ಸಮಯ ಬಂದಾಗ ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದರು.

    ಜನಾರ್ದನ ರೆಡ್ಡಿ ಕಾಂಗ್ರೆಸ್ ಪಕ್ಷಕ್ಕೆ ಬರುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ನನ್ನ ಹತ್ರ ಯಾವ ಸಂಪರ್ಕವೂ ಮಾಡಿಲ್ಲ. ಬೇರೆಯವರು ಬಹಳ ಜನ ಸಂಪರ್ಕದಲ್ಲಿದ್ದಾರೆ. ಕೆಲವರೆಲ್ಲರೂ ಪಕ್ಷಕ್ಕೆ ಅರ್ಜಿ ಹಾಕುವವರಿದ್ದಾರೆ, ಬಂದಾಗ ಜಿಲ್ಲಾವಾರು ಲಿಸ್ಟ್ ಬಿಡುಗಡೆ ಮಾಡುತ್ತೇವೆ. ಕಾಂಗ್ರೆಸ್ ಪಕ್ಷಕ್ಕೆ ಯರ‍್ಯಾರು ನಮ್ಮ ತತ್ವ ಸಿದ್ಧಾಂತದಲ್ಲಿ ನಂಬಿಕೆ ಇದ್ದವರು ಅರ್ಜಿ ಹಾಕಲಿ ಆಮೇಲೆ ನೋಡೋಣ ಎಂದರು. ಇದನ್ನೂ ಓದಿ: ರಾಹುಲ್ ಬಾರಾಮುಲ್ಲಾಕ್ಕೆ ಹೋದ್ರೆ ಜನ ಹಿಡ್ಕೊಂಡು ಹೊಡೀತಾರೆ: ಶೋಭಾ ಕರಂದ್ಲಾಜೆ

    Live Tv
    [brid partner=56869869 player=32851 video=960834 autoplay=true]

  • ಜಿಲ್ಲೆಯಿಂದ ಬಹಿಷ್ಕಾರ ಹಾಕಲು ನಾನೇನು ಉಗ್ರನೇ: ವಿನಯ್‌ ಕುಲಕರ್ಣಿ

    ಜಿಲ್ಲೆಯಿಂದ ಬಹಿಷ್ಕಾರ ಹಾಕಲು ನಾನೇನು ಉಗ್ರನೇ: ವಿನಯ್‌ ಕುಲಕರ್ಣಿ

    ಬೆಳಗಾವಿ: ನಾನೊಬ್ಬ ರಾಜಕಾರಣಿ ಅಷ್ಟೇ ಅಲ್ಲ, ನಾನೊಬ್ಬ ರೈತ, ನನ್ನ ಫಾರ್ಮ್‌ನಲ್ಲಿ ಐದು ಸಾವಿರ ಜಾನುವಾರುಗಳಿವೆ. ನನ್ನ ಮಕ್ಕಳಿಗಿಂತ ಹೆಚ್ಚು ಕಾಳಜಿಯಿಂದ ನಾನು ಅವುಗಳನ್ನು ಸಾಕಿದ್ದೇನೆ ಎಂದು ಧಾರಾವಾಡದ (Dharwad) ತಮ್ಮ ಫಾರ್ಮ್‌ನಲ್ಲಿರುವ ಹಸುಗಳನ್ನು ನೆನೆದು ಮಾಜಿ ಸಚಿವ ವಿನಯ್‌ ಕುಲಕರ್ಣಿ (Vinay Kulkarni) ಭಾವುಕರಾದರು.

    ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಅವರು, ನನ್ನ ಮಕ್ಕಳಿಗಿಂತ ಹೆಚ್ಚು ಕಾಳಜಿಯಿಂದ ನಾನು ಹಸುಗಳನ್ನು ಸಾಕಿದ್ದೇನೆ. ಧಾರವಾಡದಲ್ಲಿದ್ದಾಗ ಪ್ರತಿದಿನ ಬೆಳಗ್ಗೆ ಐದು ಗಂಟೆಗೆ ಫಾರ್ಮ್‌ಗೆ ಹೋಗುತ್ತಿದ್ದೆ. ಬೆಂಗಳೂರು ಪ್ರವಾಸದಲ್ಲಿದ್ದಾಗ ಮಾತ್ರ ನನ್ನ ಫಾರ್ಮ್‌ಗೆ ಹೋಗಲು ಸಾಧ್ಯವಾಗುತ್ತಿರಲಿಲ್ಲ. ಧಾರವಾಡದಲ್ಲಿದ್ದಾಗ ಪ್ರತಿದಿನ ತಪ್ಪದೇ ಫಾರ್ಮ್‌ಗೆ ಹೋಗಿ ಹಸುಗಳ ಆರೈಕೆ ಮಾಡ್ತಿದ್ದೆ. ಇಷ್ಟು ದಿನ ಫಾರ್ಮ್‌ಗೆ ಹೋಗದೇ ಇರುವುದು ತುಂಬಾ ನೋವು ತರಿಸಿದೆ ಎಂದು ಭಾವುಕರಾದರು.

    ಇದಲ್ಲದೇ ರಾಜ್ಯ, ಜಿಲ್ಲೆಯಿಂದ ಬಹಿಷ್ಕಾರ ಹಾಕಲು ನಾನೇನು ಉಗ್ರನಾ? ಸದ್ಯ ಜಾನುವಾರುಗಳನ್ನು ನನ್ನ 22 ವರ್ಷದ ಪುತ್ರಿ ನೋಡಿಕೊಳ್ಳುತ್ತಿದ್ದಾಳೆ. ಎರಡು, ಮೂರು ಹಸು ಕಟ್ಟಿದ ರೈತರೇ ಒಂದು ದಿನ ಮನೆ ಬಿಟ್ಟು ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಅಂತಹದ್ರಲ್ಲಿ ಸಾವಿರಾರು ಹಸುಗಳನ್ನು ಕಟ್ಟಿದ ನಾನು ಮನೆಗೆ ಹೋಗದಿದ್ದರೇ ಮುಖ ಪ್ರಾಣಿಗಳ ಕಥೆ ಏನಾಗಬೇಕು ಎಂದು ತನ್ನ ಫಾರ್ಮ್‌ನಲ್ಲಿರುವ ಜಾನುವಾರುಗಳನ್ನು ನೆನೆದು ಬಾವುಕರಾದರು‌. ಇದನ್ನೂ ಓದಿ: ಹಣ ನೀಡಲಿಲ್ಲವೆಂದು ವೃದ್ಧ ತಂದೆಯನ್ನೇ ಕೊಲೆ ಮಾಡಿದ ಪಾಪಿ ಮಗ- ತಾಯಿ ಸ್ಥಿತಿ ಗಂಭೀರ

    ಯೋಗೇಶ್‌ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ನಾನು ಈ ದೇಶದ ಕಾನೂನಿಗೆ ಗೌರವಿಸುತ್ತೇನೆ. ಕಾನೂನು ಹೋರಾಟ ಮುಂದುವರಿಸುತ್ತೇನೆ. ಬರುವ ದಿನಗಳಲ್ಲಿ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡುವ ವಿಶ್ವಾಸವಿದೆ‌. ಧಾರವಾಡ ಗ್ರಾಮೀಣ ಕ್ಷೇತ್ರದಿಂದಲೇ ಮುಂಬರುವ 2023ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ‌. ವಿನಯ್ ಕುಲಕರ್ಣಿ ಕ್ಷೇತ್ರ ಬದಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಧಾರವಾಡ ಪ್ರವೇಶಕ್ಕೆ ‌ಅನುಮತಿ ಸಿಗದಿದ್ದರೂ ಹೊರಗೆ ಇದ್ದೇ ಕಣಕ್ಕಿಳಿಯುತ್ತೇನೆ. ಯಾವುದೇ ಕಾರಣಕ್ಕೂ ಧಾರವಾಡ ಗ್ರಾಮೀಣ ಕ್ಷೇತ್ರ ಬದಲಿಸುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: `ಕೆಲವೇ ಕ್ಷಣಗಳಲ್ಲಿ ವಿಧಾನಸೌಧ ಬ್ಲಾಸ್ಟ್’ – ಬೆದರಿಕೆ ಕರೆ ಮಾಡಿದ್ದ ಟೆಕ್ಕಿ ಅರೆಸ್ಟ್

    Live Tv
    [brid partner=56869869 player=32851 video=960834 autoplay=true]