Tag: ವಿನಯ್ ಮೋಹನ್ ಕ್ವಾತ್ರಾ

  • ಅಮೆರಿಕದಲ್ಲಿ ಭಾರತದ ರಾಯಭಾರಿಯಾಗಿ ವಿನಯ್ ಮೋಹನ್ ಕ್ವಾತ್ರಾ ಅಧಿಕಾರ ಸ್ವೀಕಾರ

    ಅಮೆರಿಕದಲ್ಲಿ ಭಾರತದ ರಾಯಭಾರಿಯಾಗಿ ವಿನಯ್ ಮೋಹನ್ ಕ್ವಾತ್ರಾ ಅಧಿಕಾರ ಸ್ವೀಕಾರ

    ವಾಷಿಂಗ್ಟನ್: ಅಮೆರಿಕದಲ್ಲಿ ಭಾರತದ ರಾಯಭಾರಿಯಾಗಿ (Indian Ambassador) ವಿನಯ್ ಮೋಹನ್ ಕ್ವಾತ್ರಾ (Vinay Mohan Kwatra) ಅಧಿಕಾರ ಸ್ವೀಕರಿಸಿದ್ದು, ಹರ್ಷ ವ್ಯಕ್ತಪಡಿಸಿದ್ದಾರೆ.

    61 ವರ್ಷ ವಯಸ್ಸಿನ ಕ್ವಾತ್ರಾ ಅವರು ಇತ್ತೀಚಿನವರೆಗೂ ಭಾರತದ ವಿದೇಶಾಂಗ ಕಾರ್ಯದರ್ಶಿಯಾಗಿ (Foreign Secretary) ಕೆಲಸ ನಿರ್ವಹಿಸಿದ್ದರು. ಇದಕ್ಕೂ ಮುನ್ನ ಕ್ವಾತ್ರಾ ಅವರು ಫ್ರಾನ್ಸ್ ಮತ್ತು ನೇಪಾಳಕ್ಕೆ ಭಾರತದ ರಾಯಭಾರಿಯಾಗಿದ್ದರು, ನಂತರ ಅವರನ್ನು ವಿದೇಶಾಂಗ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು. ಕಳೆದ ಜುಲೈ 14 ರಂದು ವಿದೇಶಾಂಗ ಸೇವೆಯಿಂದ ನಿವೃತ್ತರಾಗಿದ್ದರು. ಇದನ್ನೂ ಓದಿ: Bengaluru | ಆಗಸ್ಟ್‌ 15ರ ವರೆಗೆ ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

    ಕ್ವಾತ್ರಾ ಅವರು ತರಂಜಿತ್ ಸಿಂಗ್ ಸಂಧು ಅವರ ಉತ್ತರಾಧಿಕಾರಿಯಾಗಿದ್ದಾರೆ. ಈ ವರ್ಷಾರಂಭದಲ್ಲಿ ವಿದೇಶಿ ಸೇವೆಯಿಂದ ನಿವೃತ್ತರಾದ ಕ್ವಾತ್ರಾ 2020 ರಿಂದ 2024ರ ಅವಧಿಗೆ ಯುಎಸ್‌ನಲ್ಲಿ (US) ಭಾರತದ ಉನ್ನತ ರಾಜತಾಂತ್ರಿಕರಾಗಿ ಸೇವೆ ಸಲ್ಲಿಸಿದ್ದರು. ಇದೀಗ ಅಮೆರಿಕದಲ್ಲಿ ಭಾರತದ ನೂತನ ರಾಯಭಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

    ಈ ನಡುವೆ ಅಮೆರಿಕಗೆ ಭಾರತದ ಹೊಸ ರಾಯಭಾರಿಯಾಗಿ ಕ್ವಾತ್ರಾ ಅವರನ್ನು ಸ್ವಾಗತಿಸಲು ನಮಗೆ ಸಂತೋಷವಾಗಿದೆ. ನಾವೆಲ್ಲರೂ (ಭಾರತೀಯ ರಾಯಭಾರ ಕಚೇರಿಯಲ್ಲಿ) ಅವರ ನಾಯಕತ್ವದಲ್ಲಿ ಕೆಲಸ ಮಾಡಲು ಉತ್ಸುಕರಾಗಿದ್ದೇವೆ ಎಂದು ಚಾರ್ಜ್ ಡಿ ಅಫೇರ್ಸ್ ಶ್ರೀಪ್ರಿಯಾ ರಂಗನಾಥನ್ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮೈಸೂರು ದಸರಾ 2024: ಜಂಬೂಸವಾರಿ ಆನೆಗಳ ಪಟ್ಟಿ ರಿಲೀಸ್‌ – ಈ ಬಾರಿಯೂ ಅಭಿಮನ್ಯು ʻಕ್ಯಾಪ್ಟನ್‌ʼ

    ಹೊಸ ಭಾರತೀಯ ರಾಯಭಾರಿಯನ್ನು ಸ್ವಾಗತಿಸಲು ಗ್ರೇಟರ್ ವಾಷಿಂಗ್ಟನ್ ಡಿಸಿ ಪ್ರದೇಶದ ಪ್ರಖ್ಯಾತ ಭಾರತೀಯ ಅಮೆರಿಕನ್ನರ ಗುಂಪು ಡಲ್ಲೆಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಮಾಯಿಸಿತ್ತು. ಆದರೆ, ಅವರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ.

  • ಅಲ್-ಹಕೀಮ್ ಮಸೀದಿಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ

    ಅಲ್-ಹಕೀಮ್ ಮಸೀದಿಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ತಮ್ಮ ಮೊದಲ ಈಜಿಪ್ಟ್ ಪ್ರವಾಸದಲ್ಲಿ 11ನೇ ಶತಮಾನದಲ್ಲಿ ನಿರ್ಮಾಣವಾದ ಅಲ್-ಹಕೀಮ್ ಮಸೀದಿಗೆ (Al-Hakim Mosque) ಭೇಟಿ ನೀಡಲಿದ್ದಾರೆ. ಮತ್ತು ಮೊದಲ ವಿಶ್ವ ಯುದ್ಧದ ಅವಧಿಯಲ್ಲಿ ಈಜಿಪ್ಟ್‌ಗಾಗಿ ಹೋರಾಡಿ ಮಡಿದ ಭಾರತೀಯ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ (Vinay Mohan Kwatra) ಸೋಮವಾರ ಹೇಳಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅಮೆರಿಕ, ಈಜಿಪ್ಟ್ ಪ್ರವಾಸ (USA, Egypt Tour) ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಜೂನ್ 24 ಮತ್ತು 25 ರಂದು ಈಜಿಪ್ಟ್‌ಗೆ ಭೇಟಿ ನೀಡಲಿದ್ದಾರೆ. ಇದು ಈಜಿಪ್ಟ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಭೇಟಿಯಾಗಿದ್ದು, 1997ರ ಬಳಿಕ ಈಜಿಪ್ಟ್‌ಗೆ ತೆರಳಿ ದ್ವಿಪಕ್ಷೀಯ ಮಾತುಕತೆ ನಡೆಸುತ್ತಿರುವ ಮೊದಲ ಪ್ರಧಾನಿಯೂ ಆಗಿದ್ದಾರೆ ಎಂದರು.

    ಈ ವರ್ಷದ ಗಣರಾಜೋತ್ಸವದಲ್ಲಿ ಈಜಿಪ್ಟ್ ಪ್ರಧಾನಿ ವಿಶೇಷ ಅತಿಥಿಯಾಗಿ ಭಾಗಿಯಾಗಿದ್ದರು, ಆನಂತರ ಎರಡು ದೇಶಗಳ ನಡುವಿನ ಒಡನಾಟ ಹೆಚ್ಚಿದೆ. ಭಾರತದ ವಿದೇಶಾಂಗ ಸಚಿವ ಜೈಶಂಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈಜಿಪ್ಟ್‌ಗೆ ಭೇಟಿ ನೀಡಿದ್ದರು. ಈಜಿಪ್ಟ್‌ನ ಮೂರ್ನಾಲ್ಕು ಮಂದಿ ಸಚಿವರು ತಮ್ಮ ನಿಯೋಗದೊಂದಿಗೆ ಭಾರತಕ್ಕೆ ಬಂದಿದ್ದರು. ಇದನ್ನೂ ಓದಿ: ಒಡಿಶಾ ರೈಲು ಅಪಘಾತದ ಬಳಿಕ ಎಚ್ಚೆತ್ತ ರೈಲ್ವೆ ಇಲಾಖೆ- ಟ್ರ್ಯಾಕ್‌ಗಳ ಡೀಪ್ ಸ್ಕ್ರೀನಿಂಗ್‌ಗೆ ನಿರ್ಧಾರ

    ಕೈರೋ ತಲುಪಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಮೊದಲು ಭಾರತದ ಘಟಕದೊಂದಿಗೆ ಸಂವಾದ ನಡೆಸಲಿದ್ದಾರೆ, ನಂತರ ಈಜಿಪ್ಟ್‌ನಲ್ಲಿರುವ ಸಣ್ಣ ಭಾರತೀಯ ಸಮುದಾಯದೊಂದಿಗೆ ಸಭೆ ನಡೆಸಲಿದ್ದಾರೆ. ಈಜಿಪ್ಟ್‌ನ ಕೆಲವು ಪ್ರಮುಖ ಗಣ್ಯರನ್ನ ಭೇಟಿ ಮಾಡಿದ ಬಳಿಕ ಅವರು ಅಲ್-ಹಕೀಮ್ ಮಸೀದಿಗೆ ಭೇಟಿ ನೀಡಲಿದ್ದಾರೆ.

    ಅಲ್-ಹಕೀಮ್ ಮಸೀದಿ (Al-Hakim Mosque) 11ನೇ ಶತಮಾನದಲ್ಲಿ ನಿರ್ಮಾಣವಾಗಿದ್ದು ಸದ್ಯ ಮತ್ತು ಬೊಹ್ರಾ ಸಮುದಾಯದಿಂದ ನವೀಕರಿಸಲಾಗಿದೆ. ಅಲ್-ಹಕೀಮ್ ಮಸೀದಿಗೆ ಭೇಟಿ ನೀಡಿದ ಬಳಿಕ ಹೆಲಿಯೊಪೊಲಿಸ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಮೊದಲ ಮಹಾಯುದ್ಧದಲ್ಲಿ (World War) ಈಜಿಪ್ಟ್‌ಗಾಗಿ ಹೋರಾಡಿ ಸರ್ವೋಚ್ಚ ತ್ಯಾಗ ಮಾಡಿದ ಭಾರತೀಯ ಸೈನಿಕರಿಗೆ ಗೌರವ ಸಲ್ಲಿಸಲಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಜೊತೆ ಕೈ ಜೋಡಿಸಲು ಹಿಂದೇಟು – ಲೋಕಸಭೆ ಚುನಾವಣೆಗೆ ವಿಪಕ್ಷಗಳ ಮೈತ್ರಿ ಅನುಮಾನ

    ಬಳಿಕ ಪ್ರಧಾನಿ ಮೋದಿ ಈಜಿಪ್ಟ್ ಅಧ್ಯಕ್ಷರನ್ನ ಭೇಟಿ ಮಾಡಲಿದ್ದಾರೆ. ಇಲ್ಲಿ ಈಜಿಪ್ಟ್ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಮಾತುಕತೆಗಳು, ವಿವಿಧ ಎಂಒಯುಗಳು ಮತ್ತು ಒಪ್ಪಂದಗಳಿಗೆ ಸಹಿ ಹಾಕಲಾಗುವುದು. ಈ ಒಪ್ಪಂದ ಎರಡು ದೇಶಗಳ‌ ನಡುವಿನ ವ್ಯಾಪಾರ, ಆರ್ಥಿಕತೆಗೆ ಶಕ್ತಿ ತುಂಬಲಿದೆ ಎಂದು ಕ್ವಾತ್ರಾ ಹೇಳಿದರು.

  • ಗಲ್ಫ್ ರಾಷ್ಟ್ರಗಳು ಪ್ರವಾದಿ ವಿವಾದದಲ್ಲಿ ಭಾರತದ ನಿಲುವನ್ನು ಅರ್ಥಮಾಡಿಕೊಂಡಿವೆ: ವಿದೇಶಾಂಗ ಕಾರ್ಯದರ್ಶಿ

    ಗಲ್ಫ್ ರಾಷ್ಟ್ರಗಳು ಪ್ರವಾದಿ ವಿವಾದದಲ್ಲಿ ಭಾರತದ ನಿಲುವನ್ನು ಅರ್ಥಮಾಡಿಕೊಂಡಿವೆ: ವಿದೇಶಾಂಗ ಕಾರ್ಯದರ್ಶಿ

    ನವದೆಹಲಿ: ಪಿಎಂ ನರೇಂದ್ರ ಮೋದಿ ಅವರ ಯುಎಇ ಭೇಟಿಗೆ ಮುನ್ನ ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ ಅವರು ಪ್ರವಾದಿಯ ವಿಷಯದಲ್ಲಿ ಭಾರತದ ನಿಲುವಿನ ಬಗ್ಗೆ ಗಲ್ಫ್ ರಾಷ್ಟ್ರಗಳಿಗೆ ತಿಳಿವಳಿಕೆ ಇದೆ ಎಂದು ತಿಳಿಸಿದರು.

    ವಿನಯ್ ಮೋಹನ್ ಕ್ವಾತ್ರಾ ಅವರು ಶುಕ್ರವಾರ ಪ್ರವಾದಿ ಮೊಹಮ್ಮದ್ ವಿವಾದಾತ್ಮಕ ಹೇಳಿಕೆಗಳ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಭಾರತವು ತನ್ನ ನಿಲುವನ್ನು ವಿವಿಧ ವೇದಿಕೆಗಳಲ್ಲಿ ತಿಳಿಸಿದೆ. ಬಹುತೇಕ ಎಲ್ಲ ಗಲ್ಫ್ ರಾಷ್ಟ್ರಗಳು ಭಾರತದ ನಿಲುವಿನ ಬಗ್ಗೆ ತಿಳಿವಳಿಕೆಯನ್ನು ಹೊಂದಿವೆ. ನಾವು ವಿವಿಧ ವೇದಿಕೆಗಳಲ್ಲಿ ನಮ್ಮ ನಿಲುವನ್ನು ತಿಳಿಸಿದ್ದೇವೆ. ಅದನ್ನು ಇನ್ನೂ ಮುಂದೆಯೂ ಮಾತನಾಡುವುದು ಸರಿಯಲ್ಲ ಎಂದು ನಾನು ಭಾವಿಸುತ್ತೇನೆ ಎಂದರು. ಇದನ್ನೂ ಓದಿ: ನಾನು ಕಲಿತ ಶಾಲೆಯನ್ನ ದತ್ತು ಪಡೆದು ಮಾದರಿ ಶಾಲೆ ಮಾಡುತ್ತೇನೆ: ಪ್ರಮೋದ್ ಮುತಾಲಿಕ್ 

    ಮೋದಿ ಅವರ ಜರ್ಮನಿ ಮತ್ತು ಯುಎಇ ಭೇಟಿಯ ಕುರಿತು ವಿಶೇಷ ಮಾಹಿತಿ ನೀಡುವ ಸಂದರ್ಭದಲ್ಲಿ ಅವರು ಈ ಹೇಳಿಕೆಗಳನ್ನು ನೀಡಿದರು. ನಂತರ ಮೋದಿ ಅವರ ಮೊದಲ ಯುಎಇ ಭೇಟಿಯ ಕುರಿತು ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ಯುಎಇ ಭೇಟಿಯು ಎರಡು ಪ್ರಮುಖ ವಿಷಯಗಳ ಮೇಲೆ ಕೇಂದ್ರೀಕರಿಸುತ್ತದೆ. ಮೊದಲು ಯುಎಇ ಮಾಜಿ ಅಧ್ಯಕ್ಷ ಮತ್ತು ಅಬುಧಾಬಿ ಆಡಳಿತಗಾರ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ಅವರ ನಿಧನಕ್ಕೆ ಸಂತಾಪ ಸೂಚಿಸಲು. ಎರಡನೆಯದು ಯುಎಇ ಅಧ್ಯಕ್ಷರಾಗಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಅಭಿನಂದಿಸುವುದು ಎಂದು ವಿವರಿಸಿದರು.

    ಯುಎಇಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಶೇಖ್ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರನ್ನು ಪ್ರಧಾನಿಯವರ ಮೊದಲ ಭೇಟಿ ಇದಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಪಾಸ್‍ಪೋರ್ಟ್ ಸುಟ್ಟುಹಾಕಿದ್ದಕ್ಕೆ ಪತ್ನಿ ಕತ್ತು ಸೀಳಿದ – ಆಕೆ ಕೈ ಹಿಡಿದು ಇಷ್ಟವಾದ ಹಾಡು ನುಡಿಸಿದ ಪಾಗಲ್ 

    ಜೂನ್ 26-27 ರಂದು ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಭಾಗವಹಿಸಲು ಮೋದಿ ಜರ್ಮನಿಗೆ ಭೇಟಿ ನೀಡಲಿದ್ದಾರೆ. ಜರ್ಮನಿಯಲ್ಲಿ ಜಿ7 ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ, ಮೋದಿ ಜೂನ್ 28 ರಂದು ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ಗೆ ಪ್ರಯಾಣಿಸಲಿದ್ದಾರೆ.

    Live Tv