Tag: ವಿನು ಬಳಂಜ

  • ‘ಬೇರ’ ಮೂಲಕ ಹಿರಿತೆರೆಗೆ ಕಾಲಿಟ್ಟ ಕಿರುತೆರೆಯ ಫೇಮಸ್ ನಿರ್ದೇಶಕ ವಿನು ಬಳಂಜ

    ‘ಬೇರ’ ಮೂಲಕ ಹಿರಿತೆರೆಗೆ ಕಾಲಿಟ್ಟ ಕಿರುತೆರೆಯ ಫೇಮಸ್ ನಿರ್ದೇಶಕ ವಿನು ಬಳಂಜ

    ಕಿರುತೆರೆಯ ಸಾಕಷ್ಟು ಜನಪ್ರಿಯ ಧಾರಾವಾಹಿಗಳ ನಿರ್ದೇಶಕ ವಿನು ಬಳಂಜ (Vinu Balanja) ‘ಬೇರ’ (Bera) ಚಿತ್ರ ನಿರ್ದೇಶಿಸುವ  ಮೂಲಕ ಹಿರಿತೆರೆಗೆ ಪಾದಾರ್ಪಣೆ ಮಾಡಿದ್ದಾರೆ. ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ ದಿವಾಕರ ದಾಸ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆಯಾಯಿತು. ಚಿತ್ರತಂಡದ ಸದಸ್ಯರು “ಬೇರ” ಚಿತ್ರದ ಕುರಿತು ಮಾತನಾಡಿದರು.

    ಕಳೆದ ನಾಲ್ಕೈದು ವರ್ಷ ನಾನು ವೈಯಕ್ತಿಕ ಕಾರಣದಿಂದ ಕಿರುತೆರೆ ಹಾಗೂ ಹಿರಿತೆರೆಯಿಂದ ದೂರವಿದ್ದೆ. ಆನಂತರ ಒಂದು ಮ್ಯೂಸಿಯಂ ಗೆ ಹೋದೆ. ಅಲ್ಲೇ ಈ ಕಥೆ ಹುಟ್ಟಿದ್ದು. ಆನಂತರ ಮತ್ತೆ ನನ್ನನ್ನು ಸಿನಿಮಾ ಮಾಡಲು ಪ್ರೇರೇಪಿಸಿದ್ದು ನಿರ್ಮಾಪಕ ದಿವಾಕರ್. ತುಳುವಿನಲ್ಲಿ ‘ಬೇರ’ ಎಂದರೆ ಕನ್ನಡದಲ್ಲಿ ವ್ಯಾಪಾರ ಎಂದು ಅರ್ಥ. ಅಮಾಯಕರನ್ನು ಬಳಸಿಕೊಂಡು ಹೇಗೆ ನಾಯಕರಾಗುತ್ತಾರೆ ಹಾಗೂ ‘ಯಾವ ತಾಯಂದ್ರ ಮಕ್ಕಳೂ ಇನ್ನೊಬ್ರಿಂದಾಗಿ ಸಾಯ್ಬಾರ್ದು’ ಎಂಬುದೇ ಕಥಾಹಂದರ. ಈ ಚಿತ್ರದಲ್ಲಿ ನಾಯಕ, ನಾಯಕಿ ಅಂತ ಇಲ್ಲ. ಬರುವ ಎಲ್ಲಾ ಪಾತ್ರಗಳು ಮುಖ್ಯ ಪಾತ್ರಗಳಾಗಿರುತ್ತದೆ. ಸದ್ಯ ಟೀಸರ್ ಬಿಡುಗಡೆ ಮಾಡಿದ್ದೇವೆ. ಮೇ ಅಂತ್ಯಕ್ಕೆ ಚಿತ್ರವನ್ನು ತೆರೆಗೆ ತರುವ ಯೋಜನೆ ಇದೆ ಎಂದು ನಿರ್ದೇಶಕ ವಿನು ಬಳಂಜ ತಿಳಿಸಿದರು.

    ಕೇವಲ ಮೂರು ಜನ ಕೆಲಸಗಾರರಿಂದ ಶುರುವಾದ ಎಸ್ ಎಲ್ ವಿ ಸಂಸ್ಥೆಯಲ್ಲಿ ಇಂದು ನೂರೈವತ್ತು ಜನ ಕೆಲಸಗಾರರಿದ್ದಾರೆ. ಈಗ ಎಸ್ ಎಲ್ ವಿ ಕಲರ್ಸ್  ಲಾಂಛನದಲ್ಲಿ “ಬೇರ” ಎಂಬ ಮೊದಲ ಚಿತ್ರ ನಿರ್ಮಾಣ ಮಾಡಿದ್ದೇವೆ. ಈ ಚಿತ್ರಕ್ಕೆ ನಿಮ್ಮ ಹಾರೈಕೆ ಇರಲಿ ಎಂದರು ನಿರ್ಮಾಪಕ ದಿವಾಕರ ದಾಸ. ಇದನ್ನೂ ಓದಿ:ಬಿಗ್ ಆಫರ್ ನೀಡಿದ ಕಿರಣ್ ರಾಥೋಡ್ : ಫೋಟೋ, ವಿಡಿಯೋಗೆ ಇಂತಿಷ್ಟು ರೇಟು

    ವಿನು ಬಳಂಜ ಅವರ ನಿರ್ದೇಶನದಲ್ಲಿ ಕೆಲಸ ಮಾಡಿದ್ದ ಖುಷಿಯಿದೆ.  ನಮ್ಮ ಪಾತ್ರ ಕೂಡ ಚೆನ್ನಾಗಿದೆ ಎಂದರು ಚಿತ್ರದಲ್ಲಿ ನಟಿಸಿರುವ ದತ್ತಣ್ಣ (Duttanna), ಯಶ್ ಶೆಟ್ಟಿ (Yash Shetty), ಹರ್ಷಿಕಾ ಪೂಣಚ್ಛ (Harshika), ಅಶ್ವಿನ್ ಹಾಸನ್, ಚಿತ್ಕಲ ಬಿರಾದಾರ್, ಮಂಜುನಾಥ್ ಹೆಗಡೆ, ಗುರು ಹೆಗಡೆ, ರಾಕೇಶ್ ಮಯ್ಯ, ಧವಳ್ ದೀಪಕ್  ಮುಂತಾದವರು. ಛಾಯಾಗ್ರಹಕ ರಾಜಶೇಖರ್ ಹಾಗೂ ಕಾರ್ಯಕಾರಿ ನಿರ್ಮಾಪಕ ರಾಮದಾಸ ಶೆಟ್ಟಿ ಕೂಡ ‘ಬೇರ’ ಚಿತ್ರದ ಕುರಿತು ಮಾತನಾಡಿದರು.

  • ಆಟಿಸಂ ಸಮಸ್ಯೆ ಕುರಿತಾದ ಕನ್ನಡದ ಮೊದಲ ಸಿನಿಮಾ ‘ವರ್ಣಪಟಲ’

    ಆಟಿಸಂ ಸಮಸ್ಯೆ ಕುರಿತಾದ ಕನ್ನಡದ ಮೊದಲ ಸಿನಿಮಾ ‘ವರ್ಣಪಟಲ’

    ತುಳು ಸಿನಿಮಾದ ನಿರ್ದೇಶನಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದಿರುವ ಚೇತನ್ ಮುಂಡಾಡಿ ಇದೀಗ ಮತ್ತೊಂದು ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ನೈಜಘಟನೆಯನ್ನು ಆಧರಿಸಿದ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅದು ಆಟಿಸಂ ಸಮಸ್ಯೆಯ ಕುರಿತಾದ ಚಿತ್ರ ಎನ್ನುವುದು ವಿಶೇಷ. ಇದನ್ನೂ ಓದಿ : ಸ್ಸಾರಿ.. ಈ ಬಾರಿ ಹುಟ್ಟು ಹಬ್ಬ ಆಚರಿಸಲ್ಲ : ಜಗ್ಗೇಶ್

    ಚಿತ್ರಕ್ಕೆ ವರ್ಣಪಟಲ ಎಂದು ಹೆಸರಿಟ್ಟಿದ್ದು, ಈಗಾಗಲೇ ಈ ಸಿನಿಮಾ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ವರ್ಲ್ಡ್ ಪ್ರೀಮಿಯರ್ ಫಿಲ್ಮ್‌  ಪ್ರಶಸ್ತಿ, ಲಂಡನ್ ಇಂಡಿಪೆಂಡೆಂಟ್‌ ಫಿಲ್ಮ್ ಅವಾರ್ಡ್‌ನಲ್ಲಿ ಬೆಸ್ಟ್ ಫಾರಿನ್ ಫೀಚರ್ ಫಿಲ್ಮ್ ಪ್ರಶಸ್ತಿ ಜೊತೆಗೆ ಹಲವು ಪುರಸ್ಕಾರಗಳನ್ನು ಪಡೆದಿದೆ. ಇದನ್ನೂ ಓದಿ : ಟ್ರೋಲಿಗರ ಚಳಿ ಬಿಡಿಸಿದ ಸನ್ನಿ ಲಿಯೋನ್

    ‘ಎಲ್ಲರ ಅಮ್ಮಂದಿರ ತರಹ ನಾನು ಅಮ್ಮ ಅಲ್ಲ. ಎಲ್ಲರ ಮಕ್ಕಳಂತೆ ನನ್ನ ಮಗಳಲ್ಲ..’ ಎಂಬ ಭಾವನಾತ್ಮಕ ಲೈನ್ ಗಳ ಮೂಲಕ ಈಗಾಗಲೇ ಚಿತ್ರದ ಟ್ರೇಲರ್ ಗಮನ ಸೆಳೆದದ್ದು, ತಮ್ಮ ಸಿನಿಮಾದ ಬಗ್ಗೆ ನಿರ್ದೇಶಕರು ಹೇಳಿದ್ದು ಹೀಗೆ, “ನಿತ್ಯಾ ತಾನು ಪ್ರೀತಿಸಿದ ಹುಡುಗ ಮೈಕಲ್ ನನ್ನು ಮದುವೆಯಗ್ತಾಳೆ . ಮದುವೆಯ ಬಳಿಕ ಹೆಣ್ಣು ಮಗುವಿಗೆ ನಿತ್ಯ ತಾಯಿ ಆಗ್ತಾಳೆ.  ಆ ಮಗುವೇ ಮೈನಾ. ಆದ್ರೆ ಎಲ್ಲಾ ಸರಿಯಿದ್ದ ನಿತ್ಯಾಳ ಬದುಕಲ್ಲಿ ಮೈನಾ ಅನ್ನೋ ಮಗಳಿಂದ ಜೀವನವೇ ಬದಲಾಗಿ ಹೋಗುತ್ತೆ. ಮೈನಾ ಆಟಿಸಂ ಅನ್ನೋ ಖಾಯಿಲೆಯಿಂದ ಬಳಲುತ್ತಿರುತ್ತಾಳೆ. ಇದರಿಂದ ನಿತ್ಯಾ ಸಾಕಷ್ಟು ತೊಂದರೆ ಅನುಭವಿಸುತ್ತಾಳೆ. ಆ ಖಾಯಿಲೆಯಿಂದ ಮೈನಾಳನ್ನು ನಿತ್ಯಾ ಹೇಗೆ ಹೊರ ತರುತ್ತಾರೆ ಅನ್ನೋದು ಚಿತ್ರಕಥೆ” ಎಂದರು. ಇದನ್ನೂ ಓದಿ : ಹರೀಶ್ ವಯಸ್ಸು 36 ಹಾಸ್ಯ ಸಿನಿಮಾಗಾಗಿ ಟೈಟಲ್ ಸಾಂಗ್ ಹಾಡಿದ ಪುನೀತ್

    ನಿತ್ಯಾ ಪಾತ್ರಕ್ಕೆ ಕಿರುತೆರೆಯ ಖ್ಯಾತ ನಟಿ ಜ್ಯೋತಿ ರೈ ನಾಯಕಿಯಾಗಿ ನಟಿಸಿದ್ದು, ತುಳು ಸಿನಿಮಾಗಳಿಂದ ಖ್ಯಾತಿ ಗಳಿಸಿರುವ ಅನೂಪ್ ಸಾಗರ್ ನಾಯಕನಾಗಿ ನಟಿಸಿದ್ದಾರೆ. ಖ್ಯಾತ ಬಹುಭಾಷಾ ನಟಿ ಸುಹಾಸಿನಿ ಈ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಕಿರುತೆರೆಯ ಖ್ಯಾತ ನಿರ್ದೇಶಕ ವಿನು ಬಳಂಜ ಚಿತ್ರಕ್ಕೆ ಸಂಭಾಷಣೆ ಬರೆದಿದ್ದರೆ, ಗಣೇಶ್ ಹೆಗ್ಡೆ ಛಾಯಾಗ್ರಾಹಕರರು.

  • ಎಟಿಎಂನಿಂದ ಹೀರೋ ಆದರು ವಿನಯ್ ಗೌಡ!

    ಎಟಿಎಂನಿಂದ ಹೀರೋ ಆದರು ವಿನಯ್ ಗೌಡ!

    ಬೆಂಗಳೂರು: ವಿನಯ್ ಗೌಡ ಗೊತ್ತಲ್ಲ. ಕನ್ನಡದ ಅನೇಕ ಸೀರಿಯಲ್‍ಗಳಲ್ಲಿ ನಟಿಸಿ ಹೆಸರು ಮಾಡಿದವರು. ಬಹುಶಃ ವಿನಯ್ ಅಂದರೆ ತಕ್ಷಣಕ್ಕೆ ಗುರುತು ಹತ್ತೋದು ಕಷ್ಟ. ಯಾಕೆಂದರೆ, ಅವರು ಬೇರೆ ಬೇರೆ ಪಾತ್ರಗಳ ಮೂಲಕವೇ ಪ್ರೇಕ್ಷಕರ ಮನಸಲ್ಲಿ ನೆಲೆಯೂರಿದ್ದಾರೆ. ಇಂಥಾ ವಿನಯ್ ಗೌಡ ಎಟಿಎಂ ಸಿನಿಮಾದ ಮೂಲಕ ಹೀರೋ ಆಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಹಾಸನ ವಿನಯ್ ಅವರ ಊರು. ಅಲ್ಲಿನ ದುದ್ದ ಹೋಬಳಿಯ ಹೆರಗು ವಿನಯ್ ಅವರ ಸ್ವಂತ ಊರು. ಆದರೆ ಓದಿ ಬೆಳೆದಿದ್ದೆಲ್ಲವೂ ಬೆಂಗಳೂರಿನಲ್ಲಿಯೇ. ಓದಿಗೂ ಇವರ ಆಸಕ್ತಿಗೂ ಎತ್ತಣಿಂದೆತ್ತ ಸಂಬಂಧವೂ ಇಲ್ಲ. ಹೇಳಿಕೊಳ್ಳುವಂಥಾ ಕಲೆಯ ವಾತಾವರಣ ಇರದಿದ್ದ ಕುಟುಂಬವೊಂದರಿಂದ ಬಂದಿರುವ ವಿನಯ್ ನಟನಾಗಿ ರೂಪುಗೊಂಡಿದ್ದೇ ಒಂದು ಅಚ್ಚರಿ. ಕೆಎಲ್‍ಇ ಕಾಲೇಜಿನಲ್ಲಿ ಪದವಿ ಮುಗಿಸಿಕೊಂಡು, ದಯಾನಂದ ಸಾಗರ್ ಕಾಲೇಜಿನಲ್ಲಿ ಎಂಬಿಎ ಮುಗಿಸಿಕೊಂಡ ವಿನಯ್ ಕಾಲೇಜು ದಿನಗಳಲ್ಲಿಯೇ ಮಾಡೆಲಿಂಗ್‍ನಲ್ಲಿ ಮಿಂಚಿದ್ದರು. ಓದೆಲ್ಲ ಮುಗಿಯುವ ಹೊತ್ತಿಗೆ ಅವರು ಆಕರ್ಷಿತರಾಗಿದ್ದು ರಂಗಭೂಮಿಯತ್ತ.

    ಜಯದೇವ್ ಅವರ ತ್ರಿಶಂಕು ತಂಡದ ಮೂಲಕ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದ ವಿನಯ್ ಅವರು ದುನಿಯಾ ವಿಜಯ್ ಮುಂತಾದ ನಟರೊಂದಿಗೇ ರಂಗ ತಾಲೀಮು ನಡೆಸಿದ್ದರು. ಹೀಗೆ ತರಬೇತಿ ಹೊಂದಿದ ವಿನಯ್ ಮೊದಲು ನಟಿಸಿದ ನಾಟಕ `ತ್ರಿಶಂಕು?. ಆ ಮೂಲಕ ನಟನೆಗೆ ಅಡಿಯಿರಿಸಿದ ವಿನಯ್ ಆ ನಂತರ ಹತ್ತಾರು ನಾಟಕಗಳಲ್ಲಿ ಅಭಿನಯಿಸಿದ್ದರು. ಅದರ ಬಲದಿಂದಲೇ ಮೊದಲ ಸಲ ವಿನು ಬಳಂಜ ನಿರ್ದೇಶನದ ಸೂಪರ್ ಹಿಟ್ ಧಾರಾವಾಹಿ ಜೋಗುಳದಲ್ಲಿಯೂ ಗಮನಾರ್ಹ ಪಾತ್ರದಲ್ಲಿ ನಟಿಸಿ ಸೈ ಅನ್ನಿಸಿಕೊಂಡಿದ್ದರು. ಆ ನಂತರ ನಿನ್ನೊಲುಮೆಯಿಂದಲೇ, ಮುಕ್ತ ಮುಕ್ತ ಮುಂತಾದ ಧಾರಾವಾಹಿಗಳ ಮೂಲಕ ಕಿರುತೆರೆ ಜಗತ್ತಿನಲ್ಲಿ ನೆಲೆ ನಿಂತಿದ್ದರು. ಈ ನಡುವೆ ಮತ್ತೆ ಮುಂಗಾರು ಚಿತ್ರದಲ್ಲಿಯೂ ಗಮನಾರ್ಹ ಪಾತ್ರವೊಂದರಲ್ಲಿ ವಿನಯ್ ಕಾಣಿಸಿಕೊಂಡಿದ್ದರು. ತಾನೊಬ್ಬ ಪರಿಪೂರ್ಣ ನಟನಾಗಿ ರೂಪುಗೊಳ್ಳಬೇಕೆಂಬ ಹಂಬಲ ಹೊಂದಿದ್ದ ವಿನಯ್ ನಾಯಕ ನಟನಾಗಲು ಒಂದೊಳ್ಳೆ ಕಥೆಯ ತಲಾಷಿನಲ್ಲಿದ್ದರು. ಅದೀಗ ಎಟಿಎಂ ಚಿತ್ರದ ಮೂಲಕ ಸಾಕಾರಗೊಂಡಿದೆ.

    ಎಟಿಎಂ ಚಿತ್ರದಲ್ಲಿ ವಿನಯ್ ಬಯಸಿದ್ದಂಥಾದ್ದೇ ಖಡಕ್ ಪೊಲೀಸ್ ಅಧಿಕಾರಿಯ ನಾಯಕನ ಪಾತ್ರ ಸಿಕ್ಕಿದೆ. ಇದುವೇ ಚಿತ್ರರಂಗದಲ್ಲಿ ಮತ್ತಷ್ಟು ಅವಕಾಶಗಳನ್ನು ಸೃಷ್ಟಿಸುತ್ತದೆ ಎಂಬ ಭರವಸೆಯೂ ವಿನಯ್ ಅವರಿಗಿದೆ. ರಗಡ್ ಲುಕ್ಕಿನ ಖಡಕ್ ಪಾತ್ರಗಳನ್ನು ಮಾಡುವ ಇರಾದೆ ಹೊಂದಿರುವ ಅವರು ಪೌರಾಣಿಕ ಪಾತ್ರಗಳನ್ನು ಮಾಡುವ ಕನಸನ್ನೂ ಹೊಂದಿದ್ದಾರೆ. ಪಾತ್ರ ಯಾವುದಾದರೇನು ನಟಿಸುವ ಛಾತಿ ಇರುವ ವಿನಯ್ ಕನ್ನಡ ಚಿತ್ರರಂಗದ ಪಾಲಿಗೆ ಉತ್ತಮ ಕಲಾವಿದನಾಗೋದಂತೂ ನಿಜ.