Tag: ವಿನು ವೆಂಕಟೇಶ್

  • ಪ್ರಭುದೇವ ನಟನೆಯ ‘wolf’ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಿದ ಶಿವರಾಜಕುಮಾರ್

    ಪ್ರಭುದೇವ ನಟನೆಯ ‘wolf’ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಿದ ಶಿವರಾಜಕುಮಾರ್

    ನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್ ನಿರ್ಮಿಸಿರುವ, ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ (Prabhudeva) ನಾಯಕರಾಗಿ ನಟಿಸಿರುವ ‘wolf’ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ.  ಕರುನಾಡ ಚಕ್ರವರ್ತಿ ಶಿವರಾಜಕುಮಾರ್  (Shivaraj Kumar) ಫಸ್ಟ್ ಲುಕ್ (First Look) ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

    ಬಹುಕೋಟಿ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ವಿನು ವೆಂಕಟೇಶ್ (Vinu Venkatesh) ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ.  ಪ್ರಭುದೇವ, ಅಂಜು ಕುರಿಯನ್, ಲಕ್ಷ್ಮೀ ರೈ, ಅನಸೂಯ(ಪುಷ್ಪ ಖ್ಯಾತಿ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ: ಮೂರು ಮದುವೆ ಗುಟ್ಟನ್ನು ಬಿಚ್ಚಿಟ್ಟ ನಟ ಪವನ್ ಕಲ್ಯಾಣ್

    ಅಂಬರೀಶ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಅರುಳ್ ವಿನ್ಸೆಂಟ್ ಅವರ ಛಾಯಾಗ್ರಹಣವಿದೆ. ಲಾರೆನ್ಸ್ ಕಿಶೋರ್ ಸಂಕಲನ, ಪ್ರದೀಪ್ ದಿನೇಶ್ ಸಾಹಸ ನಿರ್ದೇಶನ, ಮಣಿ ಮೌಳಿ ಕಲಾ ನಿರ್ದೇಶನ ಹಾಗೂ ಗಣೇಶ್, ಶ್ರೀಧರ್, ಭೂಪತಿ ರಾಜ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಪ್ತಸಾದ್ ನಿರ್ಮಾಣ ಮೇಲ್ವಿಚಾರಣೆ ಹಾಗೂ ಶಂಕರ್ ಲಿಂಗಂ, ಮೈಸೂರು ಸುರೇಶ್ ನಿರ್ಮಾಣ ನಿರ್ವಹಣೆ  ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪ್ರಭುದೇವ ಅಭಿನಯದ ‘wolf’ ಸಿನಿಮಾದ ಶೂಟಿಂಗ್ ಮುಕ್ತಾಯ

    ಪ್ರಭುದೇವ ಅಭಿನಯದ ‘wolf’ ಸಿನಿಮಾದ ಶೂಟಿಂಗ್ ಮುಕ್ತಾಯ

    ನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್(ಎಂ.ಎಲ್.ಸಿ)  ನಿರ್ಮಸಿರುವ, ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ (Prabhudeva) ನಾಯಕರಾಗಿ ನಟಿಸಿರುವ “wolf” ಚಿತ್ರದ ಚಿತ್ರೀಕರಣ (shooting) ಮುಕ್ತಾಯವಾಗಿದೆ. ಬಹುಕೋಟಿ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಪಾಂಡಿಚೇರಿ, ಚೆನೈ, ಬೆಂಗಳೂರು, ಅಂಡಮಾನ್, ನಿಕೋಬಾರ್ ಮುಂತಾದ ಕಡೆ 65 ದಿನಗಳ ಚಿತ್ರೀಕರಣ ನಡೆದಿದೆ.

    ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿನು ವೆಂಕಟೇಶ್ (Vinu Venkatesh) ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಪ್ರಭುದೇವ, ಅಂಜು ಕುರಿಯನ್, ಲಕ್ಷ್ಮೀ ರೈ, ಅನಸೂಯ(ಪುಷ್ಪ ಖ್ಯಾತಿ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ: ಬಾಯ್‌ಫ್ರೆಂಡ್ ಜಾಕಿ ಭಗ್ನಾನಿ ಬರ್ತ್‌ಡೇಗೆ ನಟಿ ರಾಕುಲ್ ಲವ್ಲಿ ವಿಶ್

    ಅಂಬರೀಶ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಅರುಳ್ ವಿನ್ಸೆಂಟ್ ಅವರ ಛಾಯಾಗ್ರಹಣವಿದೆ. ಲಾರೆನ್ಸ್ ಕಿಶೋರ್ ಸಂಕಲನ, ಪ್ರದೀಪ್ ದಿನೇಶ್ ಸಾಹಸ ನಿರ್ದೇಶನ, ಮಣಿ ಮೌಳಿ ಕಲಾ ನಿರ್ದೇಶನ ಹಾಗೂ ಗಣೇಶ್, ಶ್ರೀಧರ್, ಭೂಪತಿ ರಾಜ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಪ್ತಸಾದ್ ನಿರ್ಮಾಣ ಮೇಲ್ವಿಚಾರಣೆ ಹಾಗೂ ಶಂಕರ್ ಲಿಂಗಂ, ಮೈಸೂರು ಸುರೇಶ್ ನಿರ್ಮಾಣ ನಿರ್ವಹಣೆ “wolf” ಚಿತ್ರದ ನಿರ್ಮಾಣ ನಿರ್ವಾಹಕರು.

    Live Tv
    [brid partner=56869869 player=32851 video=960834 autoplay=true]