Tag: ವಿನೇಶ್‌ ಫೋಗಾಟ್‌

  • ವಿನೇಶ್ ಫೋಗಟ್, ಬಜರಂಗ್ ರಾಜೀನಾಮೆ ಅಂಗೀಕರಿಸಿದ ರೈಲ್ವೇ

    ವಿನೇಶ್ ಫೋಗಟ್, ಬಜರಂಗ್ ರಾಜೀನಾಮೆ ಅಂಗೀಕರಿಸಿದ ರೈಲ್ವೇ

    ನವದೆಹಲಿ: ಒಲಿಂಪಿಕ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ (Vinesh Phogat) ಹಾಗೂ ಬಜರಂಗ್ ಪುನಿಯಾ (Bajrang Punia) ಅವರ ರಾಜೀನಾಮೆಯನ್ನು ಭಾರತೀಯ ರೈಲ್ವೇ ಅಂಗೀಕರಿಸಿದೆ.

    ಕಾಂಗ್ರೆಸ್ ಸೇರ್ಪಡೆಗೂ ಮುನ್ನ ಭಾರತೀಯ ರೈಲ್ವೆಯಲ್ಲಿನ (Indian Railways) ತಮ್ಮ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ರಾಜೀನಾಮೆ ಅಂಗೀಕಾರಗೊಂಡಿದೆ.ಇದನ್ನೂ ಓದಿ: ‘ಭೂತ್ ಬಂಗ್ಲಾ’ ಕಥೆ ಹೇಳಲು ಸಜ್ಜಾದ ಅಕ್ಷಯ್ ಕುಮಾರ್

    ಇತ್ತೀಚಿಗಷ್ಟೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ನವದೆಹಲಿಯಲ್ಲಿ ಭೇಟಿಯಾದ ನಂತರ ಅವರ ರಾಜಕೀಯ ಪ್ರವೇಶದ ಬಗ್ಗೆ ಊಹಾಪೋಹಗಳು ವ್ಯಕ್ತವಾಗಿದ್ದವು. ಅದಾದ ಬಳಿಕ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು. ಸೇರ್ಪಡೆಯಾದ ಬಳಿಕ ಕುಸ್ತಿಪಟು ವಿನೇಶ್ ಫೋಗಟ್‌ಗೆ ಹರಿಯಾಣ ಚುನಾವಣೆಯಲ್ಲಿ (Hariyana) ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡಿತ್ತು.

    ಪಕ್ಷ ಸೇರ್ಪಡೆಗೂ ಮುನ್ನ ವಿನೇಶ್ ಫೋಗಟ್ ಹಾಗೂ ಬಜರಂಗ್ ಪುನಿಯಾ ಭಾರತೀಯ ರೈಲ್ವೆಯಲ್ಲಿರುವ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಭಾರತೀಯ ರೈಲ್ವೆಗೆ ಸೇವೆ ಸಲ್ಲಿಸುವುದು ನನ್ನ ಜೀವನದ ಸ್ಮರಣೀಯ ಮತ್ತು ಹೆಮ್ಮೆಯ ಸಮಯ. ನನ್ನ ಜೀವನದ ಈ ಹಂತದಲ್ಲಿ ನಾನು ರೈಲ್ವೆ ಸೇವೆಯಿಂದ ಹೊರಬರಲು ನಿರ್ಧರಿಸಿದೆ. ನನ್ನ ರಾಜೀನಾಮೆಯನ್ನು ಭಾರತೀಯ ರೈಲ್ವೆಯ ಸಮರ್ಥ ಅಧಿಕಾರಿಗಳಿಗೆ ಸಲ್ಲಿಸಿದ್ದೇನೆ. ರಾಷ್ಟ್ರದ ಸೇವೆಯಲ್ಲಿ ರೈಲ್ವೆ ನನಗೆ ನೀಡಿದ ಈ ಅವಕಾಶಕ್ಕಾಗಿ ನಾನು ಭಾರತೀಯ ರೈಲ್ವೆ ಕುಟುಂಬಕ್ಕೆ ಯಾವಾಗಲೂ ಕೃತಜ್ಞಳಾಗಿದ್ದೇನೆ ಎಂದು ಎಕ್ಸ್‌ನಲ್ಲಿ ಫೋಗಟ್ ಪೋಸ್ಟ್ ಹಾಕಿದ್ದರು.ಇದನ್ನೂ ಓದಿ: ಚಾರ್ಜ್‌ಶೀಟ್‌ನಲ್ಲಿ ಗೌಪ್ಯ ಮಾಹಿತಿ ಪ್ರಸಾರಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಿ: ಕೋರ್ಟ್‌ ಮೊರೆ ಹೋದ ದರ್ಶನ್‌

    ಹರಿಯಾಣದ ಜುಲಾನಾ (Julana) ಕ್ಷೇತ್ರದಿಂದ ವಿನೇಶ್ ಫೋಗಟ್ ಕಣಕ್ಕಿಳಿಯಲಿದ್ದಾರೆ. ಬಜರಂಗ್ ಪುನಿಯಾ ಅವರನ್ನು ಅಖಿಲ ಭಾರತ ಕಿಸಾನ್ ಕಾಂಗ್ರೆಸ್‌ನ (Indian Kisan Congress) ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

  • ಕೇಂದ್ರ ಸರ್ಕಾರ ಒಲಿಂಪಿಕ್ಸ್ ಮಂಡಳಿಯೊಂದಿಗೆ ಚರ್ಚಿಸಿ ಫೈನಲ್ ಆಡಲು ಅವಕಾಶ ಕಲ್ಪಿಸಿಕೊಡಬೇಕು: ಬೊಮ್ಮಾಯಿ

    ಕೇಂದ್ರ ಸರ್ಕಾರ ಒಲಿಂಪಿಕ್ಸ್ ಮಂಡಳಿಯೊಂದಿಗೆ ಚರ್ಚಿಸಿ ಫೈನಲ್ ಆಡಲು ಅವಕಾಶ ಕಲ್ಪಿಸಿಕೊಡಬೇಕು: ಬೊಮ್ಮಾಯಿ

    – ಒಲಿಂಪಿಕ್ಸ್‌ನಲ್ಲಿ ವಿನೇಶ್‌ ಫೋಗಟ್‌ಗೆ ಕುಸ್ತಿ ಫೈನಲ್ ಸ್ಪರ್ಧೆಗೆ ಅನರ್ಹಗೊಳಿಸಿರುವುದು ದೊಡ್ಡ ಅನ್ಯಾಯ

    ಬೆಂಗಳೂರು: ಅಂತಾರಾಷ್ಟ್ರೀಯ ಕುಸ್ತಿ ಪಟು ವಿನೇಶ್‌ ಫೋಗಟ್‌ (Vinesh Phogat) ಅವರಿಗೆ ಒಲಿಪಿಂಕ್ಸ್ ಕುಸ್ತಿ ಫೈನಲ್ ಪಂದ್ಯದ ಮೊದಲು ಅವರ ತೂಕ ಕೇವಲ 100 ಗ್ರಾಂ ಹೆಚ್ಚಳವಾಗಿದೆ ಎಂದು ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಿರುವುದು ದೊಡ್ಡ ಅನ್ಯಾಯ. ಒಲಿಂಪಿಕ್ಸ್ ಗೇಮ್‌ನ ಕಾನೂನು ಪುನರ್ ವಿಮರ್ಶೆ ಮಾಡುವುದು ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

    ಅಂತಾರಾಷ್ಟ್ರೀಯ ‌ಕುಸ್ತಿಪಟು ವಿನೇಶ್‌ ಫೋಗಾಟ್‌ ಅವರಿಗೆ ಒಲಿಂಪಿಕ್ ಫೈನಲ್‌ನಲ್ಲಿ ಅವಕಾಶ ತಪ್ಪಿರುವ ಕುರಿತು ಇಂದು ನವದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಸಾಮಾನ್ಯವಾಗಿ ಯಾವುದಾದರೂ ಆಟದ ಆರಂಭದಲ್ಲಿ ತೂಕ ಮತ್ತು ಇತರ ಅರ್ಹತೆಗಳನ್ನು ನೋಡುತ್ತಾರೆ. ಆದರೆ, ಪ್ರತಿಯೊಂದು ರೌಂಡ್‌ನಲ್ಲಿಯೂ ತೂಕ ನೋಡುವುದು ಬೇರೆ ಯಾವುದೇ ಆಟದಲ್ಲಿ ನೋಡಿಲ್ಲ. ಈ ಒಲಿಂಪಿಕ್ಸ್‌ನಲ್ಲಿ ತೂಕ ನೋಡಿರುವುದು ಪ್ರಶ್ನಾರ್ಹವಾಗಿದೆ. ಪ್ರತಿದಿನ ವ್ಯಕ್ತಿಯ ತೂಕದಲ್ಲಿ ನೂರರಿಂದ ಮುನ್ನೂರು ಗ್ರಾಂ ವ್ಯತ್ಯಾಸವಾಗುತ್ತಿರುತ್ತದೆ. ಅವರ ತೂಕದಲ್ಲಿ ನೂರು ಗ್ರಾಂ ಹೆಚ್ಚಾಗಿದೆ ಎಂದು ಸ್ಪರ್ಧೆಯಿಂದ ಅಮಾನತು ಮಾಡುವುದು ಸಮಂಜಸ ಅಲ್ಲ. ಪ್ರತಿದಿನ ಮನುಷ್ಯನ ದೇಹದ ತೂಕದಲ್ಲಿ ಹೆಚ್ಚಾಗುವುದು ಕಡಿಮೆಯಾಗುವುದು ತನ್ನದೇ ಆದ ನೈಸರ್ಗಿಕ ಮೆಟಾಬಲಿಕ್ ಪ್ರಕ್ರಿಯೆ. ಮೆಟಾಬೆಲಿಕ್ ಚಟುವಟಿಕೆಗಳು ಕಡಿಮೆ ಆದಾಗ ತೂಕ ಹೆಚ್ಚಾಗುತ್ತದೆ. ಮೆಟಾಬೆಲಿಕ್ ಚಟುವಟಿಕೆಗಳು ಹೆಚ್ಚಾದಾಗ ತೂಕ ಕಡಿಮೆ ಆಗುತ್ತದೆ. ಇದು ನೈಸರ್ಗಿಕ ಕ್ರಿಯೆ. ಹೀಗಾಗಿ ತೂಕ ಹೆಚ್ಚಳದ ಹಿನ್ನೆಲೆಯಲ್ಲಿ ಸ್ಪರ್ಧೆಗೆ ಅವಕಾಶ ನೀಡದಿರುವುದು ಬಹಳ ದೊಡ್ಡ ಅನ್ಯಾಯವಾದಂತಾಗಿದ್ದು, ಇದನ್ನು ಪುನರ್ ಪರಿಶೀಲನೆ ಮಾಡುವುದು ಅಗತ್ಯ ಎಂದು ಬೊಮ್ಮಾಯಿ ಆಗ್ರಹಿಸಿದರು. ಇದನ್ನೂ ಓದಿ: Paris Olympics 2024 | ಅನರ್ಹಗೊಂಡ ಕೆಲವೇ ನಿಮಿಷಗಳಲ್ಲಿ ವಿನೇಶ್‌ ಆಸ್ಪತ್ರೆಗೆ ದಾಖಲು

    ಒಲಿಂಪಿಕ್ಸ್ ಕ್ರೀಡಾಕೂಟ ಕ್ಲೀನ್ ಅಂತಾ ಏನಿಲ್ಲ. ಅಲ್ಲಿಯೂ ಕೂಡ ಕೆಲವು ಸಾರಿ ರಾಜಕೀಯ ನಡೆಯುತ್ತದೆ. ಕೆಲವರನ್ನು ಹೊರಗಿಡುವ ತಂತ್ರಗಾರಿಕೆ ನಡೆಯುತ್ತದೆ. ಆ ಹಿನ್ನೆಲೆಯಲ್ಲಿ ಕೆಲವರಿಗೆ ಶಿಕ್ಷೆ ಕೂಡ ಆಗಿದೆ. ಈ ಪ್ರಕರಣವನ್ನು ಕೇಂದ್ರ ಕ್ರೀಡಾ ಸಚಿವರು ಗಂಭೀರವಾಗಿ ತೆಗೆದುಕೊಂಡು ಒಲಿಂಪಿಕ್ಸ್ ಬೋರ್ಡ್‌ಗೆ ತೆಗೆದುಕೊಂಡು ಹೋಗಬೇಕು. ಯಾವುದೇ ಕಾರಣಕ್ಕೂ ವಿನೇಶ್‌ ಫೋಗಾಟ್ ಕುಸ್ತಿ ಫೈನಲ್ ಆಡುವುದರಿಂದ ವಂಚಿತರಾಗಬಾರದು. ಅವರಿಗೆ ಅವಕಾಶ ದೊರಕುವಂತೆ ನೋಡಿಕೊಳ್ಳಬೇಕು. ಇದು ಎಲ್ಲ ಭಾರತೀಯರ ಭಾವನೆಯಾಗಿದೆ ಎಂದು ಹೇಳಿದರು.

    ಕಳೆದ ಬಾರಿಯೂ ವಿನೇಶ್‌ ಫೋಗಾಟ್ ಸ್ಪರ್ಧೆಯಿಂದ ದೂರ ಉಳಿಯುವಂತಾಗಿತ್ತು. ಈ ಬಾರಿಯಂತೂ ದೊಡ್ಡ ಅನ್ಯಾಯವಾಗಿದ್ದು, ಈ ಅನ್ಯಾಯವನ್ನು ಸರಿಪಡಿಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಪ್ರಯತ್ನಗಳು ನಡೆಯಬೇಕು. ಅವರಿಗೆ ಅವಕಾಶ ದೊರೆಯಬೇಕು. ಅವರಿಗೆ ಫೈನಲ್‌ನಲ್ಲಿ ಅವಕಾಶ ದೊರೆತರೆ ಚಿನ್ನದ ಪದಕ ಗೆಲ್ಲುವ ವಿಶ್ವಾಸ ಇದೆ. ಒಲಿಂಪಿಕ್ಸ್‌ನಲ್ಲಿ ವಿನೇಶ್‌ ಫೋಗಾಟ್ ಚಿನ್ನದ ಪದಕ ತರುತ್ತಾರೆ ಎನ್ನುವ ವಿಶ್ವಾಸ ಎಲ್ಲರದ್ದಾಗಿದೆ. ಇಲ್ಲದಿದ್ದರೆ ಭಾರತಕ್ಕೆ ಚಿನ್ನದ ಪದಕ ಸಿಗುವುದು ಬಹಳ ಕಷ್ಟಕರ ಅನಿಸುತ್ತಿದೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಒಲಿಂಪಿಕ್ಸ್ ಮಂಡಳಿಯಲ್ಲಿ ಚರ್ಚಿಸಿ ತೀರ್ಮಾನ ಮಾಡುವ ಅಗತ್ಯವಿದೆ ಎಂದು ಹೇಳಿದರು. ಇದನ್ನೂ ಓದಿ: ನೀವು ಚಾಂಪಿಯನ್‌ಗಳಲ್ಲಿ ಚಾಂಪಿಯನ್: ವಿನೇಶ್‌ಗೆ ಸಮಾಧಾನ ಹೇಳಿದ ಮೋದಿ

  • ಇದು ಕುಸ್ತಿಪಟುಗಳ ಹೋರಾಟ.. ರಾಜಕೀಯ ಮಾಡ್ಬೇಡಿ: ಪ್ರತಿಭಟನೆಗೆ ಬಂದ ಸಿಪಿಐ ನಾಯಕಿಗೆ ತಡೆ

    ಇದು ಕುಸ್ತಿಪಟುಗಳ ಹೋರಾಟ.. ರಾಜಕೀಯ ಮಾಡ್ಬೇಡಿ: ಪ್ರತಿಭಟನೆಗೆ ಬಂದ ಸಿಪಿಐ ನಾಯಕಿಗೆ ತಡೆ

    ನವದೆಹಲಿ: “ಇದು ಕ್ರೀಡಾಪಟುಗಳ ಹೋರಾಟ. ಇದರಲ್ಲಿ ರಾಜಕೀಯ ಬೇಡ” ಎಂದು ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್‌ (Brinda Karat) ಅವರಿಗೆ ಪ್ರತಿಭಟನಾನಿರತ ಕುಸ್ತಿಪಟುಗಳು ಕೈಮುಗಿದು ವೇದಿಕೆಯಿಂದ ಕೆಳಗಿಳಿಸಿದ ಪ್ರಸಂಗ ಗುರುವಾರ ನವದೆಹಲಿಯಲ್ಲಿ ನಡೆಯಿತು.

    ಡಬ್ಲ್ಯೂಎಫ್‌ಐ ಅಧ್ಯಕ್ಷ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Charan Singh) ವಿರುದ್ಧ ಮಹಿಳಾ ಕುಸ್ತಿಪಟುಗಳು ಲೈಂಗಿಕ ದೌರ್ಜನ್ಯ ಆರೋಪ ಮಾಡಿ ನವದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ 200 ಕುಸ್ತಿಪಟುಗಳು ಪಾಲ್ಕೊಂಡಿದ್ದು, ಗುರುವಾರ ಎರಡನೇ ದಿನ ಪೂರೈಸಿದೆ. ಇದನ್ನೂ ಓದಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಶೋಷಣೆ ಆರೋಪ – WFI ಅಧ್ಯಕ್ಷ ಸ್ಥಾನಕ್ಕೆ ಬ್ರಿಜ್‌ ಭೂಷಣ್‌ ರಾಜೀನಾಮೆ ಸಾಧ್ಯತೆ

    ಸಿಂಗ್‌ ರಾಜೀನಾಮೆಗೆ ಕುಸ್ತಿಪಟುಗಳು ಪಟ್ಟು ಹಿಡಿದಿದ್ದಾರೆ. ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಲು ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್‌ ಸ್ಥಳಕ್ಕೆ ಬಂದಿದ್ದರು. ಆದರೆ ಇದಕ್ಕೆ ಕುಸ್ತಿಪಟುಗಳು ಒಪ್ಪಲಿಲ್ಲ. ಕುಸ್ತಿಪಟುಗಳ ಪ್ರತಿಭಟನೆಯಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಹೇಳಿದ್ದಾರೆ.

    “ಮೇಡಂ, ದಯವಿಟ್ಟು ಇದನ್ನು ರಾಜಕೀಯ ಮಾಡಬೇಡಿ ಎಂದು ನಾವು ವಿನಂತಿಸುತ್ತೇವೆ. ಇದು ಕ್ರೀಡಾಪಟುಗಳ ಪ್ರತಿಭಟನೆ” ಎಂದು ಟೋಕಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಬಜರಂಗ್ ಪುನಿಯಾ ಅವರು ಪ್ರತಿಭಟನೆಯ ಎರಡನೇ ದಿನದಂದು ಸ್ಥಳಕ್ಕೆ ಆಗಮಿಸಿದಾಗ ಕಾರಟ್‌ಗೆ ಮನವಿ ಮಾಡಿದರು. ಇದನ್ನೂ ಓದಿ: ರಾಷ್ಟ್ರೀಯ ತರಬೇತುದಾರರಿಂದ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ – ವಿನೇಶ್‌ ಫೋಗಟ್‌ ಗಂಭೀರ ಆರೋಪ

    ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಸಂಸದೆ ಕಾರಟ್‌ ಮಾತನಾಡಿ, “ನಾವು ಯಾವುದೇ ರೀತಿಯ ಲೈಂಗಿಕ ಕಿರುಕುಳದ ವಿರುದ್ಧ ಹೋರಾಟದಲ್ಲಿದ್ದೇವೆ. ಯಾವುದೇ ವರ್ಗದ ಮಹಿಳೆಯರನ್ನು ಅವಮಾನಿಸುವ ಯಾವುದೇ ವಿಷಯದ ವಿರುದ್ಧ ನಾವು ಹೋರಾಡುತ್ತೇವೆ. ಆದ್ದರಿಂದ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ತಿಳಿಸಿದ್ದಾರೆ.

    ಅವರು (ಕುಸ್ತಿಪಟುಗಳು) ಇಲ್ಲಿಗೆ ಬಂದು ಧರಣಿ ಕುಳಿತಿರುವುದು ಅತ್ಯಂತ ದುರದೃಷ್ಟಕರ. ಸರ್ಕಾರ ದೂರಿನ ಆಧಾರದ ಮೇಲೆ ಕ್ರಮ ಕೈಗೊಳ್ಳಬೇಕು. ವಿಚಾರಣೆಯು ಅಂತಿಮ ತೀರ್ಮಾನಕ್ಕೆ ಬರುವವರೆಗೆ ಆರೋಪಿಯನ್ನು ತೆಗೆದುಹಾಕಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಗ್ಲಾಸ್‍ನಲ್ಲಿ ಕೈ ಲಾಕ್ ಮಾಡಿ ಕಾರು ಓಡಿಸಿದ – ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆಗೆ ಕಿರುಕುಳ

    ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಜಯಿಸಿರುವ ಕುಸ್ತಿಪಟು ವಿನೇಶ್‌ ಫೋಗಟ್‌ (Vinesh Phogat) ನೇತೃತ್ವದಲ್ಲಿ ಬುಧವಾರದಿಂದ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. “ವೈಯಕ್ತಿಕವಾಗಿ ಇಂತಹ ದೌರ್ಜನ್ಯ ಎದುರಿಸಿಲ್ಲ. ಆದರೆ ಅನೇಕ ಕುಸ್ತಿಪಟುಗಳು ತಮಗಾಗಿ ಲೈಂಗಿಕ ಶೋಷಣೆ ಕುರಿತು ನನ್ನ ಬಳಿ ನೊಂದು ಮಾತನಾಡಿದ್ದಾರೆ. ಹೀಗಾಗಿ ನಾವು ಹೋರಾಟ ನಡೆಸುತ್ತಿದ್ದೇವೆ” ಫೋಗಟ್‌ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k