Tag: ವಿಪಕ್ಷ ನಾಯಕರು

  • ವಿಪಕ್ಷ ನಾಯಕರ ಮೊಬೈಲ್‌ಗೆ ಹ್ಯಾಕಿಂಗ್ ಎಚ್ಚರಿಕೆ – ಆಪಲ್ ಅಧಿಕಾರಿಗಳ ವಿಚಾರಣೆಗೆ ಸಂಸದೀಯ ಸ್ಥಾಯಿ ಸಮಿತಿ ನಿರ್ಧಾರ

    ವಿಪಕ್ಷ ನಾಯಕರ ಮೊಬೈಲ್‌ಗೆ ಹ್ಯಾಕಿಂಗ್ ಎಚ್ಚರಿಕೆ – ಆಪಲ್ ಅಧಿಕಾರಿಗಳ ವಿಚಾರಣೆಗೆ ಸಂಸದೀಯ ಸ್ಥಾಯಿ ಸಮಿತಿ ನಿರ್ಧಾರ

    ನವದೆಹಲಿ: ವಿರೋಧ ಪಕ್ಷದ ನಾಯಕರ (Opposition Leader) ಐಫೋನ್‌ಗೆ (Iphone) ಹ್ಯಾಕಿಂಗ್ (Hacking) ಎಚ್ಚರಿಕೆ ಸಂದೇಶ ಬಂದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ ಬೆನ್ನಲ್ಲೇ ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿಯು (IT) ಮುಂಬರುವ ಸಭೆಯಲ್ಲಿ ಆಪಲ್ ಅಧಿಕಾರಿಗಳನ್ನು ಕರೆಸಿಕೊಂಡು ಮಾಹಿತಿ ಪಡೆಯಲು ನಿರ್ಧರಿಸಿದೆ.

    ಸಂಸದರ ಫೋನ್‌ಗೆ ಬಂದ ಇತ್ತೀಚಿನ ಎಚ್ಚರಿಕೆ ಬಗ್ಗೆ ಸಮಿತಿಯ ಕಾರ್ಯದರ್ಶಿ ಆಳವಾದ ಕಳವಳ ವ್ಯಕ್ತಪಡಿಸಿದ್ದು, ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಹೇಳಿದ್ದಾರೆ. ಮಂಗಳವಾರ ಹಲವು ವಿರೋಧ ಪಕ್ಷದ ನಾಯಕರು, ಸಂಸದರು ತಮ್ಮ ಐಫೋನ್‌ಗಳನ್ನು ರಾಜಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿರುವ ‘ರಾಜ್ಯ ಪ್ರಾಯೋಜಿತ ದಾಳಿಕೋರರು’ ಕುರಿತು ಆಪಲ್‌ನಿಂದ ಅಧಿಸೂಚನೆಗಳನ್ನು ಸ್ವೀಕರಿಸಿದ್ದೇವೆ ಎಂದು ಹೇಳಿದಾಗ ವಿವಾದ ಭುಗಿಲೆದ್ದಿತು. ಸರ್ಕಾರ ಹ್ಯಾಕಿಂಗ್ ಮಾಡಲು ಪ್ರಯತ್ನಿಸಿದೆ ಎಂದು ಆರೋಪಿಸಿದರು. ಆದರೆ ಈ ಆರೋಪವನ್ನು ನಿರಾಕರಿಸಿದ ಸರ್ಕಾರ, ಈ ವಿಷಯದ ಬಗ್ಗೆ ಕೂಲಂಕುಷ ತನಿಖೆ ನಡೆಸಲಾಗುವುದು ಎಂದು ಹೇಳಿದೆ. ಇದನ್ನೂ ಓದಿ: ಬುದ್ಧಿವಂತ.. ಗಲ್ಫ್‌ ರಾಷ್ಟ್ರದಲ್ಲಿ ಒಳ್ಳೆ ಸಂಬಳದ ಕೆಲಸ ಬಿಟ್ಟು ಬಾಂಬ್‌ ಸ್ಫೋಟಿಸಿದ್ಯಾಕೆ; ತಲೆ ಕೆಡಿಸಿಕೊಂಡ ಪೊಲೀಸರು

    ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ಶಶಿ ತರೂರ್, ಪವನ್ ಖೇರಾ, ಕೆ.ಸಿ ವೇಣುಗೋಪಾಲ್, ಸುಪ್ರಿಯಾ ಶ್ರಿನಾಟೆ, ಟಿಎಸ್ ಸಿಂಘ್ದೇವ್ ಮತ್ತು ಭೂಪಿಂದರ್ ಸಿಂಗ್ ಹೂಡಾ ಸೇರಿದ್ದಾರೆ. ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ, ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಈ ರೀತಿಯ ಎಚ್ಚರಿಕೆ ಸಂದೇಶ ಸ್ವೀಕರಿಸಿದ್ದಾರೆ. ಇದನ್ನೂ ಓದಿ: ಹಿಂದೂ ಸಂಪ್ರದಾಯದಂತೆ ಉಪವಾಸ ಆಚರಿಸಿದ ಪಾಕ್‌ ಮಹಿಳೆ ಸೀಮಾ – ಕಾರಣ ಗೊತ್ತಾ.?

    ಶಿವಸೇನಾ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ, ಆಮ್ ಆದ್ಮಿ ಪಕ್ಷದ (ಎಎಪಿ) ರಾಘವ್ ಚಡ್ಡಾ, ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಕೆಲವು ಸಹಾಯಕರು ಕೂಡ ಆಪಲ್‌ನಿಂದ ಸಂದೇಶವನ್ನು ಸ್ವೀಕರಿಸಿದ್ದಾರೆ. ವಿವಾದ ಹೆಚ್ಚಾಗುತ್ತಿದ್ದಂತೆ ಆಪಲ್ ಸಂಸ್ಥೆ ಹೇಳಿಕೆ ಬಿಡುಗಡೆ ಮಾಡಿದ್ದು, ಯಾವುದೇ ನಿರ್ದಿಷ್ಟ ರಾಜ್ಯ ಪ್ರಾಯೋಜಿತ ದಾಳಿಕೋರ ಬೆದರಿಕೆ ಸೂಚನೆಗಳನ್ನು ನೀಡಿಲ್ಲ. ಇಂತಹ ಸಂದೇಶ ಸುಳ್ಳು ಎಚ್ಚರಿಕೆಗಳಾಗಿರಬಹುದು ಎಂದು ಹೇಳಿದೆ. ಇದನ್ನೂ ಓದಿ: ಚಿನ್ನ ಲೇಪಿತ ಅಮೃತಶಿಲೆಯ ಸಿಂಹಾಸನದ ಮೇಲೆ ತಲೆ ಎತ್ತಲಿದೆ ಶ್ರೀರಾಮನ ಮೂರ್ತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಪಕ್ಷ ನಾಯಕರು 20 ಲಕ್ಷ ಕೋಟಿ ಹಗರಣದ ಗ್ಯಾರಂಟಿ ಕೊಡುತ್ತಿದ್ದಾರೆ – ವಿರೋಧ ಪಕ್ಷದ ವಿರುದ್ಧ ಮೋದಿ ಕಿಡಿ

    ವಿಪಕ್ಷ ನಾಯಕರು 20 ಲಕ್ಷ ಕೋಟಿ ಹಗರಣದ ಗ್ಯಾರಂಟಿ ಕೊಡುತ್ತಿದ್ದಾರೆ – ವಿರೋಧ ಪಕ್ಷದ ವಿರುದ್ಧ ಮೋದಿ ಕಿಡಿ

    ಭೋಪಾಲ್: ವಿಪಕ್ಷದ ಪ್ರತಿ ನಾಯಕರು (Opposition Leaders) 20 ಲಕ್ಷ ಕೋಟಿ ಹಗರಣದ ಗ್ಯಾರಂಟಿ ಕೊಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಿರೋಧ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಜೂನ್ 23ರಂದು ಪಾಟ್ನಾದಲ್ಲಿ (Patna) ಬಿಹಾರ (Bihar) ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅಯೋಜಿಸಿದ್ದ ಸಭೆಯಲ್ಲಿ ಭಾಗಿಯಾಗಿದ್ದ ವಿರೋಧ ಪಕ್ಷದ ನಾಯಕರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಟೀಕೆ ಮಾಡಿದ್ದು, ವಿಪಕ್ಷದ ಪ್ರತಿ ನಾಯಕರು 20 ಲಕ್ಷ ಕೋಟಿ ಹಗರಣದ ಗ್ಯಾರಂಟಿ ಕೊಡುತ್ತಾರೆ ಎಂದು ವ್ಯಂಗ್ಯವಾಡಿದರು. ಬೂತ್ (Booth) ಮಟ್ಟದ ಕಾರ್ಯಕರ್ತರ ಜೊತೆಗೆ ಸಂವಾದ ನಡೆಸಿದ ಅವರು, ಗ್ಯಾರಂಟಿ (Guarantee) ಎನ್ನುವ ಪದ ಇತ್ತಿಚೀನ ದಿನಗಳಲ್ಲಿ ಜನಪ್ರಿಯವಾಗುತ್ತಿದೆ. ಇದು ಭ್ರಷ್ಟಾಚಾರದ (Corruption) ಗ್ಯಾರಂಟಿ ಎಂದು ನಾಗರಿಕರಿಗೆ ತಿಳಿಸುವುದು ಬಿಜೆಪಿ (BJP) ಕಾರ್ಯಕರ್ತರ ಜವಾಬ್ದಾರಿಯಾಗಿದೆ ಎಂದು ಕೊಂಕು ನುಡಿದರು. ಇದನ್ನೂ ಓದಿ: 5 ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

    ವಿರೋಧ ಪಕ್ಷದ ನಾಯಕರು ಇತ್ತೀಚೆಗೆ ಸಭೆ ನಡೆಸಿದ್ದರು. ಈ ಫೋಟೊವನ್ನು ನೋಡಿದಾಗ ಪ್ರತಿ ನಾಯಕರು 20 ಲಕ್ಷ ಕೋಟಿ ಹಗರಣದ ಗ್ಯಾರಂಟಿ ಕೊಡುತ್ತಾರೆ ಎಂದು ನಿಮಗೆ ಅರ್ಥವಾಗುತ್ತದೆ. ಇದನ್ನು ಜನರಿಗೆ ಮನವರಿಕೆ ಮಾಡುವುದು ಕಾರ್ಯಕರ್ತರ ಜವಾಬ್ದಾರಿ ಎಂದು ಹೇಳಿದರು. ಎಸಿ ಕೊಠಡಿಗಳಲ್ಲಿ ಕುಳಿತು ಪಕ್ಷವನ್ನು ನಡೆಸುವವರು ಬಿಜೆಪಿ ಕಾರ್ಯಕರ್ತರಲ್ಲ. ಬಿಸಿಲು, ಚಳಿ, ಎಡೆಬಿಡದ ಮಳೆಯಲ್ಲೂ ಕೆಲಸ ಮಾಡಲು ದೂರದ ಪ್ರದೇಶಗಳಿಗೆ ನಾವು ಹೋಗುತ್ತೇವೆ. ಬಿಜೆಪಿ ಕಾರ್ಯಕರ್ತರು ಬಿಜೆಪಿಯಷ್ಟೇ ಅಲ್ಲದೇ ದೇಶದ ಸಂಕಲ್ಪಗಳನ್ನು ಸಾಧಿಸುವ ಬಲಿಷ್ಠ ಸೈನಿಕರು. ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತನಿಗೆ ದೇಶದ ಹಿತಾಸಕ್ತಿ ಮುಖ್ಯ. ಪಕ್ಷಕ್ಕಿಂತ ದೇಶ ದೊಡ್ಡದು ಎನ್ನುವ ಶ್ರಮಜೀವಿಗಳು ಎಂದರು. ಇದನ್ನೂ ಓದಿ: ಶಾಲು ಹಾಕಲು ಬಂದ ಕಾರ್ಯಕರ್ತನನ್ನು ದೂಡಿದ ಓವೈಸಿ ವೀಡಿಯೋ ವೈರಲ್

    ಬೂತ್ ಬಹಳ ದೊಡ್ಡ ಘಟಕವಾಗಿದೆ. ಈ ಬೂತ್ ಘಟಕವನ್ನು ನಾವು ಎಂದಿಗೂ ಕಡಿಮೆ ಎಂದು ಭಾವಿಸಬಾರದು. ಬೂತ್‌ನಲ್ಲಿ ಸ್ಥಳೀಯ ಪ್ರತಿಕ್ರಿಯೆ ಬಹಳ ಮುಖ್ಯ ನಮ್ಮ ಬೂತ್‌ಮೇಟ್‌ಗಳು ಇದರಲ್ಲಿ ದೊಡ್ಡ ಪಾತ್ರವನ್ನು ವಹಿಸುತ್ತಾರೆ. ಪ್ರಧಾನಿ ಮತ್ತು ಮುಖ್ಯಮಂತ್ರಿಗಳು ಯಶಸ್ವಿ ನೀತಿಯನ್ನು ರೂಪಿಸಿದರೆ ಅದರಲ್ಲಿ ಬೂತ್ ಮಟ್ಟದ ಮಾಹಿತಿಯ ದೊಡ್ಡ ಶಕ್ತಿ ಇದೆ ಎಂದು ಬೂತ್ ಕಾರ್ಯಕರ್ತರನ್ನು ಶ್ಲಾಘಿಸಿದರು. ಇದನ್ನೂ ಓದಿ: 2,000 ನೋಟು ರದ್ದು ಆರ್ಥಿಕತೆ ಮೇಲೆ ನಕಾರಾತ್ಮಕ ಪರಿಣಾಮ ಬೀರುವುದಿಲ್ಲ: ಶಕ್ತಿಕಾಂತ್ ದಾಸ್

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಸಾಕ್ಷಿ ಕೇಳುವವರನ್ನು ಏರ್ ಸ್ಟ್ರೈಕ್ ನಡೆದ ಸ್ಥಳಕ್ಕೆ ಒಯ್ದು ಒಗೆಯಿರಿ: ಯತ್ನಾಳ್ ಕಿಡಿ

    ಸಾಕ್ಷಿ ಕೇಳುವವರನ್ನು ಏರ್ ಸ್ಟ್ರೈಕ್ ನಡೆದ ಸ್ಥಳಕ್ಕೆ ಒಯ್ದು ಒಗೆಯಿರಿ: ಯತ್ನಾಳ್ ಕಿಡಿ

    ವಿಜಯಪುರ: ಪಾಕಿಸ್ತಾನದ ಉಗ್ರರ ಕ್ಯಾಂಪ್ ಮೇಲೆ ಏರ್ ಸ್ಟ್ರೈಕ್ ಮಾಡಿರುವುದಕ್ಕೆ ಸಾಕ್ಷಿ ಕೇಳುತ್ತಿರುವ ಪ್ರತಿಪಕ್ಷ ನಾಯಕರನ್ನು ಹೆಲಿಕಾಪ್ಟರ್ ನಲ್ಲಿ ಕರೆದೊಯ್ದು, ದಾಳಿ ನಡೆದ ಸ್ಥಳಕ್ಕೆ ಬಿಟ್ಟುಬನ್ನಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಪಕ್ಷ ನಾಯಕರಿಗೆ ಟಾಂಗ್ ನೀಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೋದಿ ಹಾಗೂ ಭಾರತೀಯ ವಾಯುಪಡೆಯು ಒಂದು ದಿಟ್ಟ ನಿರ್ಧಾರ ತೆಗೆದುಕೊಂಡು ಸರ್ಜಿಕಲ್ ಸ್ಟ್ರೈಕ್ ಮಾಡಿದೆ. ಆದ್ರೆ ಈ ಏರ್ ಸ್ಟ್ರೈಕ್‍ಗೆ ಸಾಕ್ಷಿ ಕೇಳುವವರನ್ನು ದಾಳಿ ನಡೆದ ಸ್ಥಳದಲ್ಲಿ ಒಯ್ದು ಒಗೆಯಿರಿ. ಅವರು ಅಲ್ಲಿಯೇ ಭಾರತೀಯ ಸೇನೆಯ ಪರಾಕ್ರಮ ವೀಕ್ಷಿಸಲಿ. ಅಲ್ಲಿಯೇ ಎಷ್ಟು ಜನ ಮೃತಪಟ್ಟರು, ಯಾವ ಬಾಂಬ್ ಹಾಕಲಾಗಿದೆ ಅಂತ ನೋಡಿ ಬರಲಿ ಎಂದು ಏರ್ ಸ್ಟ್ರೈಕ್ ಬಗ್ಗೆ ಪ್ರಶ್ನಿಸಿದ ದೆಹಲಿ ಸಿಎಂ ಕೇಜ್ರೀವಾಲ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಾಗೂ ಬಿಎಸ್‍ಪಿ ನಾಯಕಿ ಮಾಯಾವತಿ ಹೆಸರು ಹೇಳಿ ಪ್ರತಿಪಕ್ಷ ನಾಯಕರ ವಿರುದ್ಧ ಯತ್ನಾಳ ವಾಗ್ದಾಳಿ ನಡೆಸಿದ್ದಾರೆ.

    ಸರ್ಜಿಕಲ್ ಸ್ಟ್ರೈಕ್ ಸಂಭ್ರಮಾಚರಣೆ ಕುರಿತು ಸಿಎಂ ಹೇಳಿಕೆ ವಿಚಾರ ಪ್ರತಿಕ್ರಿಯಿಸಿ, ಭಾರತೀಯರು ಆಟದಲ್ಲಿ ಗೆದ್ದಾಗ ಅಥವಾ ಸರ್ಜಿಕಲ್ ಸ್ಟ್ರೈಕ್ ನಡೆಸಿದಾಗ ಸಂಭ್ರಮಿಸಬಾರದಾ? ಸೀತಾರಾಮ ಕಲ್ಯಾಣ ಸಿನಿಮಾ ನೋಡಿ ಸಂಭ್ರಮಿಸಬೇಕಾ? ಎಂದು ಸಿಎಂಗೆ ತಿರುಗೇಟು ನೀಡಿದರು.

    ಈಗ ಉಮೇಶ್ ಜಾಧವ್ ರಾಜೀನಾಮೆ ನೀಡಿದ್ದಾರೆ. ಅವರು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸಲಿದ್ದಾರೆ. ನೋಡುತ್ತಿರಿ ಕಾಂಗ್ರೆಸ್ ಜೆಡಿಎಸ್ ಮನೆ ಖಾಲಿಯಾಗಲಿವೆ ಎಂದು ಮೈತ್ರಿ ಸರ್ಕಾರದ ಬಗ್ಗೆ ಯತ್ನಾಳ್ ವ್ಯಂಗ್ಯವಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv