Tag: ವಿಮಾನನಿಲ್ದಾಣ

  • ಜಮ್ಮು-ಕಾಶ್ಮೀರ | ವರ್ಷಪೂರ್ತಿ ಸಂಪರ್ಕ ಕಲ್ಪಿಸುವ ಝಡ್-ಮೋರ್ಹ್ ಸುರಂಗ ಮಾರ್ಗ ಉದ್ಘಾಟಿಸಿದ ಮೋದಿ

    ಜಮ್ಮು-ಕಾಶ್ಮೀರ | ವರ್ಷಪೂರ್ತಿ ಸಂಪರ್ಕ ಕಲ್ಪಿಸುವ ಝಡ್-ಮೋರ್ಹ್ ಸುರಂಗ ಮಾರ್ಗ ಉದ್ಘಾಟಿಸಿದ ಮೋದಿ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯಲ್ಲಿ ಮಹತ್ವದ ಮೂಲಸೌಕರ್ಯ ಯೋಜನೆಯಾದ ಝಡ್-ಮೋರ್ಹ್ ಸುರಂಗ ಮಾರ್ಗವನ್ನು (Z Morh Tunnel) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸೋಮವಾರ ಉದ್ಘಾಟಿಸಿದರು. 2024ರ ವಿಧಾನಸಭಾ ಚುನಾವಣೆ ಬಳಿಕ ಜಮ್ಮು ಕಾಶ್ಮೀರಕ್ಕೆ ಪ್ರಧಾನಿ ಮೋದಿ ಅವರ ಮೊದಲ ಭೇಟಿಯಾಗಿದೆ.

    ಇಂದು ಬೆಳಗ್ಗೆ ಶ್ರೀನಗರ ವಿಮಾನನಿಲ್ದಾಣದಲ್ಲಿ (Srinagar Airport) ಬಂದಿಳಿದ ಮೋದಿ, ಹೆಲಿಕಾಪ್ಟರ್ ಮೂಲಕ ತೆರಳಿ ಸುರಂಗ ಮಾರ್ಗ ಉದ್ಘಾಟಿಸಿದರು. ಮೋದಿ ಜೊತೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ (Omar Abdullah), ರಾಜ್ಯಪಾಲ ಮನೋಜ್ ಸಿನ್ಹಾ ಇತರ ನಾಯಕರು ಜೊತೆಗಿದ್ದರು. ಇದನ್ನೂ ಓದಿ: ಮಹಾ ಕುಂಭಮೇಳಕ್ಕೆ ವಿದ್ಯುಕ್ತ ಚಾಲನೆ – ಲಕ್ಷಾಂತರ ನಾಗ ಸಾಧುಗಳಿಂದ ಶಾಹಿ ಸ್ನಾನ

    ಉದ್ಘಾಟನೆ ಬಳಿಕ ಸುರಂಗದ ಒಳಗೆ ತೆರಳಿದ ಮೋದಿ, ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು. ಅತ್ಯಂತ ಕಠಿಣ ಹವಾಮಾನದಲ್ಲೂ ಶ್ರಮಪಟ್ಟು ಸುರಂಗ ನಿರ್ಮಿಸಿದ ಕಾರ್ಮಿಕರ ಜೊತೆಯೂ ಮಾತುಕತೆ ನಡೆಸಿದರು. ಮಧ್ಯ ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಗಗಾಂಗೀರ್ ಮತ್ತು ಸೋನಾಮಾರ್ಗ್ ನಡುವಿನ 6.5 ಕಿಮೀ ಉದ್ದದ 2 ಪಥದ ರಸ್ತೆ ಸುರಂಗದಲ್ಲಿ ತುರ್ತು ಪರಿಸ್ಥಿತಿಗಳಿಗಾಗಿ ಸಮಾನಾಂತರ 7.5 ಮೀಟ‌ರ್ ಎಸ್ಕೆಪ್ ಮಾರ್ಗವನ್ನು ನಿರ್ಮಿಸಲಾಗಿದೆ.

    ಸಮುದ್ರ ಮಟ್ಟದಿಂದ 8,650 ಅಡಿ ಎತ್ತರದಲ್ಲಿ ನಿರ್ಮಿಸಲಾಗಿರುವ ಈ ಸುರಂಗವು ಶ್ರೀನಗರ ಮತ್ತು ಸೋನಾಮಾರ್ಗ್ ನಡುವೆ ಲೇಹ್‌ಗೆ ಹೋಗುವ ಮಾರ್ಗದಲ್ಲಿ ಎಲ್ಲ ಋತುಮಾನದಲ್ಲೂ ಸಂಪರ್ಕ ಕಲ್ಪಿಸುತ್ತದೆ. ಹೆಚ್ಚಿನ ಭೂಕುಸಿತಗಳು ಮತ್ತು ಹಿಮಕುಸಿತಗಳ ಮಾರ್ಗಗಳನ್ನು ಬೈಪಾಸ್ ಮಾಡುತ್ತದೆ. ಇದನ್ನೂ ಓದಿ: ಮಹಾ ಕುಂಭಮೇಳ ವೈಭವ – ಇಂಚಿಂಚಿಗೂ ಹದ್ದಿನ ಕಣ್ಣು, 2,700 ಎಐ ಕ್ಯಾಮೆರಾ ಕಣ್ಗಾವಲು

    ಈ ಮೂಲಕ ಸೋನಾಮಾರ್ಗ್ ಪ್ರದೇಶವನ್ನು ಚಳಿಗಾಲದ ಕ್ರೀಡಾ ಕೇಂದ್ರವಾಗಿ ಅಭಿವೃದ್ಧಿಪಡಿಸಲು ನೆರವಾಗಲಿದೆ. ವಿಶೇಷವಾಗಿ ಸೋನಾಮಾರ್ಗ್ ಅಭಿವೃದ್ಧಿ ಪ್ರಾಧಿಕಾರ (ಎಸ್‌ಡಿಎ) ನಿರ್ಮಿಸಿರುವ ಅತ್ಯಾಧುನಿಕ ಐಸ್-ಸ್ಕೆಟಿಂಗ್ ರಿಂಕ್ ಚಳಿಗಾಲದ ಕ್ರೀಡಾ ಚಟುವಟಿಕೆಗಳನ್ನು ಉತ್ತೇಜಿಸುವ ಹೊಸ ಭರವಸೆ ಹುಟ್ಟುಹಾಕಿದೆ.

    ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಸೋನಾಮಾರ್ಗ್ ಬೇಸಿಗೆಯಲ್ಲಿ ಸ್ಥಳೀಯ ಮತ್ತು ಸ್ಥಳೀಯೇತರ ಪ್ರವಾಸಿಗರಿಂದ ತುಂಬಿ ತುಳುಕುತ್ತಿರುತ್ತದೆ. ಪ್ರತಿ ವರ್ಷ ಚಳಿಗಾಲದಲ್ಲಿ ಭಾರೀ ಹಿಮಪಾತದಿಂದಾಗಿ ಸಾರ್ವಜನಿಕರಿಗೆ ಮತ್ತು ಸಂಚಾರಕ್ಕೆ ಮುಚ್ಚಿರುತ್ತಿತ್ತು. ಆದ್ರೆ ಈಗ ವರ್ಷಪೂರ್ತಿ ಸಂಚಾರ ಮುಕ್ತವಾಗಿರಲಿದೆ. ಇದನ್ನೂ ಓದಿ: ಆ್ಯಪಲ್ ಸಹ ಸಂಸ್ಥಾಪಕ ಸ್ವೀವ್‌ ಜಾಬ್ಸ್‌ ಪತ್ನಿ ಲಾರೆನ್ ಇನ್ಮುಂದೆ ʻಕಮಲಾʼ – ಹಿಂದೂ ಹೆಸರು ನಾಮಕರಣ

  • ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡವೆಂದ ಬಿಎಸ್‌ವೈ

    ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡವೆಂದ ಬಿಎಸ್‌ವೈ

    ಶಿವಮೊಗ್ಗ: ಇಲ್ಲಿನ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೆಸರಿಡುವ ಘೋಷಣೆ ಕೇಳಿಬಂದ ಬೆನ್ನಲ್ಲೇ ತಮ್ಮ ಹೆಸರು ಇಡುವುದು ಬೇಡವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

    ಶಿವಮೊಗ್ಗ ಜಿಲ್ಲೆಯಲ್ಲಿ ಬಹುದಿನದ ಕನಸಾದ ವಿಮಾನ ನಿಲ್ದಾಣ ಸ್ಥಾಪನೆ ನನಸಾಗುತ್ತಿದೆ. ಇಲ್ಲಿನ ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲು ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದೀರಿ ಇದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ. ಇದನ್ನೂ ಓದಿ: ಪತಿ ಜೊತೆಗಿನ ಫೋಟೋ ಹಂಚಿಕೊಂಡ ಐಎಎಸ್ ಟಾಪರ್ ಟೀನಾ ದಾಬಿ

    BSY (2)

    ಈ ನಿಲ್ದಾಣಕ್ಕೆ ನನ್ನ ಹೆಸರನ್ನಿಡುವುದಾಗಿ ತಾವು ಘೋಷಿಸಿರುತ್ತೀರಿ. ತಮ್ಮ ಈ ವಿಶೇಷ ಪ್ರೀತಿ, ಅಭಿಮಾನಕ್ಕೆ ಧನ್ಯವಾದಗಳು. ಇದಕ್ಕಾಗಿ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಘಸಂಸ್ಥೆಗಳು ಹಾಗೂ ಎಲ್ಲ ಮುಖಂಡರಿಗೆ ನನ್ನ ಕೃತಜ್ಞತೆಗಳು. ದೇಶದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು ಹಾಗೂ ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದಾಗ ನನ್ನದೊಂದು ಅಳಿಲು ಸೇವೆ ಮಾತ್ರ. ನನ್ನನ್ನು ಸತತವಾಗಿ ಬೆಂಬಲಿಸಿ ಸಲುಹಿದ ಜಿಲ್ಲೆಯ ಜನತೆಗೆ ಸೇವೆ ಮಾಡಿದ್ದೇನೆಂಬ ಧನ್ಯತಾಭಾವ ನನ್ನದು. ಈ ಹಿನ್ನೆಲೆಯಲ್ಲಿ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮೋದಿಯನ್ನು ಭೇಟಿಯಾಗಿ ರುದ್ರಾಕ್ಷಿ ಮಾಲೆ ನೀಡಿದ ಅನುಪಮ್ ಖೇರ್

    bjp meeting bs yediyurppa basvaraj bommai nalin kumar kateel

    ಆದ್ದರಿಂದ ತಮ್ಮ ಈ ನಿರ್ಧಾರವನ್ನು ಪುನರ್ ಪರಿಶೀಲಿಸಿ, ಸೂಕ್ತ ವೇದಿಕೆಯಲ್ಲಿ ಚರ್ಚಿಸಿ, ರಾಷ್ಟ್ರದ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದಂತಹ ಮಹನೀಯರ ಹೆಸರನ್ನು ಈ ಹೊಸ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕೆಂದು ಕೋರುತ್ತೇನೆ ಮನವಿ ಮಾಡಿದ್ದಾರೆ.

  • ಸಿಗರೇಟ್, ಮದ್ಯ ಸೇವಿಸಲು ಬಿಡಲಿಲ್ಲವೆಂದು ಮನೆ ತೊರೆದು ವಿಮಾನ ನಿಲ್ದಾಣ ಸೇರಿದ ವ್ಯಕ್ತಿ!

    ಸಿಗರೇಟ್, ಮದ್ಯ ಸೇವಿಸಲು ಬಿಡಲಿಲ್ಲವೆಂದು ಮನೆ ತೊರೆದು ವಿಮಾನ ನಿಲ್ದಾಣ ಸೇರಿದ ವ್ಯಕ್ತಿ!

    ಬೀಜಿಂಗ್: ಬದುಕಿನ ಜಂಜಾಟ ಎಷ್ಟೋ ಜೀವಗಳ ನಡುವೆ ಭಿನ್ನಾಭಿಪ್ರಾಯ ಉಂಟುಮಾಡುತ್ತದೆ. ಸಹಿಸಲಾಗದ ಕೆಲವರು ತಮ್ಮ ಸ್ನೇಹಿತರಿಂದ ದೂರವಿರಲು ಪ್ರಯತ್ನಿಸಿದರೆ ಇನ್ನೂ ಕೆಲವರು ಕುಟುಂಬದಿಂದಲೇ ದೂರಾಗಬೇಕು ಎನ್ನುತ್ತಾರೆ. ಕೆಲವರು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗುತ್ತಾರೆ. ಜಗತ್ತಿನ ಗೇಟ್‌ವೇ ಸ್ಥಳಗಳು ಹಾಗೂ ಅಡಗು ತಾಣಗಳು ಇಂತಹ ಎಷ್ಟೋ ಜನರು ಪಾರಾಗಲು ಸಹಾಯ ಮಾಡುತ್ತವೆ.

    ಆದರೆ ವಿಮಾನ ನಿಲ್ದಾಣಗಳು ಖಂಡಿತವಾಗಿಯೂ ತಪ್ಪಿಸಿಕೊಳ್ಳುವ ಸ್ಥಳ ಅಥವಾ ಅಡಗುತಾಣವಾಗಿಲ್ಲ. ಬದಲಾಗಿ ಅವು ಶಾಶ್ವತವಾಗಿ ಪಾರು ಮಾಡಲು ಅಥವಾ ಗೇಟ್ ವೇ ವಿಹಾರಕ್ಕೆ ಅವಕಾಶ ಮಾಡಿಕೊಡುವ ನಿಲ್ದಾಣಗಳಾಗಿವೆ. ಈ ಸತ್ಯವನ್ನು ಅರಿತುಕೊಂಡ ವ್ಯಕ್ತಿಯೊಬ್ಬರು ಶಾಶ್ವತವಾಗಿ ಪಲಾಯನ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ರಾಜಕೀಯ ಪ್ರೇರಿತ ಟೀ ಶರ್ಟ್ ತೊಟ್ಟ ಅಭಿಮಾನಿಗಳು ಹೊರಕ್ಕೆ

    Airport

    ಇದೀಗ 60 ವರ್ಷದ ವೀ ಜಿಯಾಂಗುವೋ ಎಂಬ ಚೀನಿ ವ್ಯಕ್ತಿಯೊಬ್ಬರು ತಮ್ಮ ಕುಟುಂಬದಿಂದ ತಪ್ಪಿಸಿಕೊಳ್ಳಲು 14 ವರ್ಷಗಳ ಹಿಂದೆಯೇ ಬೀಜಿಂಗ್ ಕ್ಯಾಪಿಟಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ್ದರು. ಕುಟುಂಬದಲ್ಲಿದ್ದರೆ ಮದ್ಯ ಹಾಗೂ ಧೂಮಪಾನ ಮಾಡಲಾಗುವುದಿಲ್ಲ ಎಂಬ ಕಾರಣಕ್ಕೇ ಕುಟುಂಬದಿಂದಲೇ ದೂರವಾಗುವ ಪ್ರಯತ್ನಕ್ಕೆ ಮುಂದಾಗಿದ್ದರು. ಇದನ್ನೂ ಓದಿ: ವುಹಾನ್‌ ನಂತರ ಚೀನಾದಲ್ಲಿ ಅತಿದೊಡ್ಡ ಲಾಕ್‌ಡೌನ್: 2.6 ಕೋಟಿ ಜನ ಮನೆಯಲ್ಲೇ ಲಾಕ್

    2008 ರಿಂದಲೂ ವಿಮಾನ ನಿಲ್ದಾಣದ 2 ಟರ್ಮಿನಲ್‌ನಲ್ಲೇ ವಾಸಿಸುತ್ತಿದ್ದ ಅವರು, `ನನಗೆ ಕುಟುಂಬದಲ್ಲಿ ಸ್ವಾತಂತ್ರ‍್ಯವಿಲ್ಲ. ಹಾಗಾಗಿ ನಾನು ಮನೆಗೆ ಹಿಂದಿರುಗಲು ಸಾಧ್ಯವಿಲ್ಲ. ನಾನು ಉಳಿಯಲು ಬಯಸಿದರೆ, ಧೂಮಪಾನ ಮತ್ತು ಮದ್ಯ ಸೇವನೆ ಬಿಡಬೇಕು. ಇಲ್ಲವೇ ಮನೆಯವರಿಗೆ ಒಂದು ತಿಂಗಳ ವೇತನ 1,000 ಯೂರೋವನ್ನು (200 ಡಾಲರ್ ಅಥವಾ 11,923.51 ರೂ.) ನೀಡಬೇಕಾಗಿತ್ತು. ಈ ಹಣವನ್ನು ಅವರಿಗೇ ನೀಡಿದ್ದರೆ ನಾನು ಮದ್ಯ ಮತ್ತು ಸಿಗರೇಟ್ ಅನ್ನು ಹೇಗೆ ಖರೀದಿಸಲಿ. ಅದಕ್ಕಾಗಿ ನಾನು ಮನೆ ತೊರೆಯುವ ಪ್ರಯತ್ನ ಮಾಡಿದೆ ಎಂದು ಹೇಳಿಕೊಂಡಿದ್ದಾರೆ.

    BEEJING

    40ನೇ ವರ್ಷದಲ್ಲಿದ್ದಾಗಲೇ ಜಿಯಾಂಗುವೋ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು. ವಯಸ್ಸಾಗಿದೆ ಅಂದುಕೊಂಡಿದ್ದ ಅವರು, ಕೆಲಸ ಹುಡುಕುವುದನ್ನು ಬಿಟ್ಟಿದ್ದರು. ಇದೀಗ ಪೊಲೀಸರು ಅವರಿಗೆ ಭದ್ರತೆ ನೀಡಿದ್ದಾರೆ. ಜೊತೆಗೆ ವಾಂಗ್‌ಜಿಂಗ್‌ನಲ್ಲಿರುವ ತಮ್ಮ ಮನೆಗೆ ಆಗಾಗ್ಗೆ ಕರೆದೊಯ್ಯುತ್ತಿದ್ದಾರೆ.

    ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲಿ ದೀರ್ಘಕಾಲ ಉಳಿಯಲು ನಿರ್ವಹಿಸಿದ ವಿಶ್ವದ ಏಕೈಕ ವ್ಯಕ್ತಿ ಇವರೊಬ್ಬರೇ ಅಲ್ಲ. ಅವರಿಗಿಂತ ದೀರ್ಘಾವಧಿಯ ವಿಮಾನ ನಿಲ್ದಾಣದ ಟರ್ಮಿನಲ್ ಅಧಿಕಾರಾವಧಿ ಹೊಂದಿರುವವರೂ ಇದ್ದಾರೆ. ಬೈರಾಮ್ ಟೆಪೆಲಿ ಎಂಬವರೂ 1991 ರಲ್ಲಿ ಅಟಾತುರ್ಕ್ ವಿಮಾನ ನಿಲ್ದಾಣಕ್ಕೆ ತೆರಳಿ 27 ವರ್ಷಗಳ ಕಾಲ ಅಲ್ಲಿಯೇ ವಾಸಿಸುತ್ತಿದ್ದರು ಎನ್ನಲಾಗಿದೆ.

     

  • 2025ರ ವೇಳೆಗೆ ಭಾರತದಲ್ಲಿ ತಲೆ ಎತ್ತಲಿವೆ 220 ವಿಮಾನ ನಿಲ್ದಾಣ: ಸಿಂಧಿಯಾ

    2025ರ ವೇಳೆಗೆ ಭಾರತದಲ್ಲಿ ತಲೆ ಎತ್ತಲಿವೆ 220 ವಿಮಾನ ನಿಲ್ದಾಣ: ಸಿಂಧಿಯಾ

    ನವದೆಹಲಿ: ನಾಗರಿಕ ವಿಮಾನಯಾನ ಉದ್ಯಮವು ಆರ್ಥಿಕತೆಯ ಪ್ರಮುಖ ಭಾಗವಾಗಿದ್ದು, 2025ರ ವೇಳೆಗೆ ಕೇಂದ್ರ ಸರ್ಕಾರವು 220 ವಿಮಾನ ನಿಲ್ದಾಣಗಳನ್ನು ಸ್ಥಾಪಿಸುವ ಉದ್ದೇಶ ಹೊಂದಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಖಾತೆಯ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.

    ಈ ಕುರಿತು ಅಧಿವೇಶನದಲ್ಲಿ ಮಾತನಾಡಿರುವ ಅವರು, ಕೋವಿಡ್ ಸಮಯದಲ್ಲೂ ಭಾರತ ದೇಶ-ವಿದೇಶದ ಪ್ರಯಾಣದಲ್ಲಿ ಮುನ್ನಡೆ ಸಾಧಿಸಿದೆ. ಇದು ಆರ್ಥಿಕತೆಯ ಭಾಗವೂ ಆಗಿರುವುದರಿಂದ ಮುಂದಿನ ದಿನಗಳಲ್ಲಿ ಆರ್ಥಿಕತೆ ಬಲಪಡಿಸಲು 220 ವಿಮಾನ ನಿಲ್ದಾಣ ಸ್ಥಾಪನೆಯ ಗುರಿಯನ್ನು ಹೊಂದಲಾಗಿದೆ. ಜೊತೆಗೆ ಆಹಾರ ಪದಾರ್ಥಗಳ ಸಾಗಾಣಿಕೆಗೆ ಕಾರ್ಗೋ ವಿಮಾನಗಳ ಸಂಖ್ಯೆಯನ್ನು ಶೇ.30ರಷ್ಟು ಹೆಚ್ಚಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಾಲಿವುಡ್ ಗಲ್ಲಿ ಬಾಯ್ ಖ್ಯಾತಿಯ ರಾಪರ್ ಧರ್ಮೇಶ್ ಪರ್ಮಾರ್ ಇನ್ನಿಲ್ಲ

    ವಿಶ್ವದಾದ್ಯಂತ ಎಲ್ಲ ರಾಷ್ಟ್ರಗಳಲ್ಲಿ ಒಟ್ಟು ಪೈಲಟ್‍ಗಳಲ್ಲಿ ಶೇ.5 ರಷ್ಟು ಮಾತ್ರ ಮಹಿಳೆಯರಿದ್ದಾರೆ. ಆದರೆ, ಭಾರತದಲ್ಲಿ ಶೇ.15 ರಷ್ಟು ಮಹಿಳೆಯರಿದ್ದಾರೆ. ಕಳೆದ 20-25 ವರ್ಷಗಳಲ್ಲಿ ಹೀಗೆ ಸಾಕಷ್ಟು ಬೆಳವಣಿಗೆಗಳಾಗಿವೆ. ಇದು ಮಹಿಳಾ ಸಬಲೀಕರಣಕ್ಕೆ ಮತ್ತೊಂದು ಉದಾಹರಣೆಯಾಗಿದೆ. ಹಾಗಾಗಿ, ಕೇಂದ್ರ ಸರ್ಕಾರವು 33 ದೇಶಿಯ ಸರಕು ಟರ್ಮಿನಲ್‍ಗಳು, 15 ವಿಮಾನಯಾನ ತರಬೇತಿ ಶಾಲೆಗಳನ್ನು ಸ್ಥಾಪಿಸುವ ಮೂಲಕ ಮತ್ತಷ್ಟು ಉದ್ಯೋಗಾವಕಾಶ ಕಲ್ಪಿಸಲು ಮುಂದಾಗುತ್ತಿದೆ. ಇದನ್ನೂ ಓದಿ: ಕರ್ನಾಟಕದ ಗಣಿಗಾರಿಕೆ ಪ್ರಕರಣಗಳ ವಿಚಾರಣೆಗೆ ವಿಶೇಷ ಪೀಠ ರಚನೆ – ಸುಪ್ರೀಂಕೋರ್ಟ್

     

    2018-19ರಲ್ಲಿ ವಾರ್ಷಿಕ ಪ್ರಯಾಣಿಕರ ಸಂಖ್ಯೆ 34.5 ಕೋಟಿ ಇತ್ತು. 2023-24ರ ವೇಳೆಗೆ ಈ ಸಂಖ್ಯೆಯನ್ನು 40 ಕೋಟಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಈ ಎಲ್ಲ ಉದ್ದೇಶಗಳಿಂದಾಗಿ 220 ಇಮಾನ ನಿಲ್ದಾಣಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಮುಂದಾಗುತ್ತಿದೆ ಎಂದು ವಿವರಿಸಿದ್ದಾರೆ.

  • ಪತಿ ಜೊತೆ ಕ್ಯಾಮೆರಾ ಕಣ್ಣಿಗೆ ಬಿದ್ದ ನೇಹಾ ಕಕ್ಕರ್

    ಪತಿ ಜೊತೆ ಕ್ಯಾಮೆರಾ ಕಣ್ಣಿಗೆ ಬಿದ್ದ ನೇಹಾ ಕಕ್ಕರ್

    ಮುಂಬೈ: ಬಾಲಿವುಡ್‍ನಲ್ಲಿ ತಮ್ಮ ಗಾಯನ ಪ್ರತಿಭೆ ಹಾಗೂ ಸೌಂದರ್ಯದ ಮೂಲಕವೇ ಖ್ಯಾತಿ ಪಡೆದಿರುವ ನೇಹಾ ಕಕ್ಕರ್ ಪತಿ ಜೊತೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.

    neha-kakkar

    ಪತಿ ರೋಹನ್ ಪ್ರೀತ್ ಸಿಂಗ್ ಜೊತೆ ಕಾರಿನಿಂದ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದ ಅವರು ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಂಡರು.

    neha-kakkar

    ಪತಿ ಕೈ ಹಿಡಿದುಕೊಂಡು ವಿಮಾನ ನಿಲ್ದಾಣಕ್ಕೆ ಪ್ರವೇಶಿಸಿ ನೇಹಾ ಕಕ್ಕರ್ ಕ್ಯಾಮೆರಾಗೆ ಹಾಯ್ ಹೇಳಿದರು.  ಇದನ್ನೂ ಓದಿ: ನಿಮ್ಮ ಪ್ರೋತ್ಸಾಹ, ಬೆಂಬಲ ನನಗೆ ಶ್ರೀರಕ್ಷೆ : ಧ್ರುವ ಸರ್ಜಾ

    neha-kakkar

    ಈ ವೇಳೆ ರೋಹನ್ ಪ್ರೀತ್ ಸಿಂಗ್ ವೈಟ್ ಆ್ಯಂಡ್ ಡ್ರೆಸ್ ತೊಟ್ಟು, ಅದಕ್ಕೆ ಸೂಟ್ ಆಗುವಂತಹ ಬ್ಲ್ಯಾಕ್ ಕಲರ್ ಕ್ಯಾಪ್ ತೊಟ್ಟಿದ್ದರೆ, ನೇಹಾ ಪ್ಲಾಸಾ ಪ್ಯಾಂಟ್ ಮತ್ತು ಶಾರ್ಟ್ ಟಾಪ್, ಯೆಲ್ಲೋ ಕಲರ್ ಸ್ಲಿಪ್ಪರ್ ಧರಿಸಿದ್ದರು.

    ನೇಹಾ ಕಕ್ಕರ್ ಒಂದು ಕೈಯಲ್ಲಿ ಪುಟ್ಟ ಹ್ಯಾಂಡ್ ಬ್ಯಾಗ್ ಹಿಡಿದುಕೊಂಡಿದ್ದರೆ, ಮತ್ತೊಂದರಲ್ಲಿ ಪತಿ ಕೈ ಹಿಡಿದುಕೊಂಡು ವಿಮಾನ ನಿಲ್ದಾಣದಲ್ಲಿ ಸಾಗಿದರು.  ಇದನ್ನೂ ಓದಿ: ಡ್ರಗ್ಸ್, ಸಿಗರೇಟ್, ಸೆಕ್ಸ್‌ಗೆ ಮಗನಿಗೆ ಓಕೆ ಅಂದಿದ್ದೇನೆ: ಶಾರೂಖ್ ವೀಡಿಯೋ ವೈರಲ್

    neha kakkar

    ರಿಷಿಕೇಶ ಮೂಲದವರಾದ ನೇಹಾ ಕಕ್ಕರ್ ನಾಲ್ಕನೇ ವಯಸ್ಸಿನಲ್ಲಿಯೇ ವಿವಿಧ ಸಂಗೀತ ಕಾರ್ಯಕ್ರಮಗಳಲ್ಲಿ ಹಾಡಿದ್ದಾರೆ. ಅಲ್ಲದೇ ಇಂಡಿಯನ್ ಐಡಿಯಲ್ ಕಾರ್ಯಕ್ರಮದ ಮೂಲಕ ಜನಪ್ರಿಯತೆ ಗಳಿಸಿದರು. ಕಳೆದ ವರ್ಷ ನೇಹಾ ಕಕ್ಕರ್ ಪಂಜಾಬಿ ಗಾಯಕರಾಗಿರುವ ರೋಹನ್ ಪ್ರೀತ್ ಸಿಂಗ್‍ರನ್ನು ನವದೆಹಲಿಯ ಗುರುದ್ವಾರದಲ್ಲಿ ಸಪ್ತಪದಿ ತುಳಿದಿದ್ದರು.

    https://www.youtube.com/watch?v=k5fuj6IlK1Y

  • ಇನ್ನುಮುಂದೆ ಏರ್‌ಪೋರ್ಟ್‌ಗಳಲ್ಲಿ ಸ್ಥಳೀಯ ಭಾಷೆಯಲ್ಲೇ ಅನೌನ್ಸ್‌ಮೆಂಟ್‌

    ಇನ್ನುಮುಂದೆ ಏರ್‌ಪೋರ್ಟ್‌ಗಳಲ್ಲಿ ಸ್ಥಳೀಯ ಭಾಷೆಯಲ್ಲೇ ಅನೌನ್ಸ್‌ಮೆಂಟ್‌

    ನವದೆಹಲಿ: ದೇಶದಲ್ಲಿರುವ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಸ್ಥಳೀಯ ಭಾಷೆಯಲ್ಲೇ ಮಾಹಿತಿ ಪ್ರಕಟಿಸುವಂತೆ ಕೇಂದ್ರ ಸರ್ಕಾರ ಆದೇಶ ನೀಡಿದೆ.

    ದೇಶದಲ್ಲಿರುವ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಇಲ್ಲಿಯವರೆಗೂ ಕೇವಲ ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಮಾತ್ರ ವಿಮಾನಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತಿತ್ತು. ಆದರೆ ಇನ್ನುಮುಂದಿನ ದಿನಗಳಲ್ಲಿ ಆಯಾ ಪ್ರದೇಶಗಳ ಸ್ಥಳೀಯ ಭಾಷೆಗಳಲ್ಲಿ ಮಾಹಿತಿ ಹೊರಡಿಸುವಂತೆ ಕೇಂದ್ರ ವಿಮಾನಯಾನ ಸಚಿವಾಲಯ ಆದೇಶ ನೀಡಿದೆ.

    ನಾಗರೀಕ ವಿಮಾನಯಾನ ಸಚಿವ ಸುರೇಶ್ ಪ್ರಭುರವರ ಸೂಚನೆಯನ್ವಯ, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ(ಎಎಐ) ದೇಶದಲ್ಲಿರುವ ಎಲ್ಲಾ ವಿಮಾನ ನಿಲ್ದಾಣಗಳಿಗೆ ಈ ಬಗ್ಗೆ ಮಾಹಿತಿ ರವಾನಿಸಿದೆ. ಅಲ್ಲದೇ ನೂತನ ಆದೇಶವು ಸೈಲೆಂಟ್ ವಿಮಾನ ನಿಲ್ದಾಣಗಳಿಗೆ ಅನ್ವಯಿಸುವುದಿಲ್ಲವೆಂದು ತಿಳಿಸಿದೆ.

    ಶೀಘ್ರವೇ ವಿಮಾನ ಪ್ರಯಾಣ ಶುಲ್ಕ ಏರಿಕೆ ಸಾಧ್ಯತೆ?
    ವಿಮಾನ ಪ್ರಯಾಣ ಶುಲ್ಕವು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸದ್ಯ ಪ್ರಯಾಣಿಕ ಸೇವಾ ಶುಲ್ಕವನ್ನು(ಪಿಎಸ್‍ಎಫ್) 130 ರೂ.ನಿಂದ 170 ರೂ.ಗೆ ಏರಿಸಲು ಕೇಂದ್ರ ಸರ್ಕಾರ ಸಜ್ಜಾಗಿದ್ದು, ಸದ್ಯದಲ್ಲಿಯೇ ಜಾರಿಗೆ ಬರಲಿದೆ. ಭದ್ರತಾ ವ್ಯವಸ್ಥೆಗಳಿಗಾಗಿ ಶುಲ್ಕ ಹೆಚ್ಚಳ ಮಾಡಲು ಸರ್ಕಾರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಕೃತಿಗೆ ಮನಸೋತು ಫೋಟೋಗ್ರಾಫರ್ ಆದ್ರು ಪ್ರಧಾನಿ ಮೋದಿ!

    ಪ್ರಕೃತಿಗೆ ಮನಸೋತು ಫೋಟೋಗ್ರಾಫರ್ ಆದ್ರು ಪ್ರಧಾನಿ ಮೋದಿ!

    ನವದೆಹಲಿ: ಸಿಕ್ಕಿಂ ರಾಜ್ಯದ ರಾಜಧಾನಿ ಬಳಿಯಿರುವ ಪಾಕ್ಯೊಂಗ್ ವಿಮಾನ ನಿಲ್ದಾಣದ ಉದ್ಘಾಟನೆಗೆ ತೆರಳಿದ್ದ ಪ್ರಧಾನಿ ಮೋದಿ ಅಲ್ಲಿನ ಪ್ರಕೃತಿಯ ಸೌಂದರ್ಯಕ್ಕೆ ಮನಸೋತು ಫೋಟೋಗ್ರಾಫರ್ ಆಗಿದ್ದು, ರಮಣೀಯ ನಿಸರ್ಗದ ಫೋಟೋಗಳನ್ನು ತಮ್ಮ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ವೇಳೆ ಭಾರತದ ಪ್ರವಾಸೋದ್ಯಮ ಇಲಾಖೆಯ ಘೋಷಣೆಯಾದ ಇನ್‍ಕ್ರೆಡಿಬಲ್ ಇಂಡಿಯಾ ಎಂಬ ಹಣೆ ಬರಹವನ್ನು ಪ್ರಧಾನಿಗಳು ನೀಡಿದ್ದಾರೆ.


    ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮೋದಿ, ಈ ವಿಮಾನ ನಿಲ್ದಾಣ ರೂಪಿಸುವಲ್ಲಿ ಶ್ರಮವಹಿಸಿದ ಎಂಜಿನಿಯರ್ ಗಳನ್ನು ನಾನು ಅಭಿನಂದಿಸುತ್ತೇನೆ. ದೇಶದಲ್ಲಿ ಒಟ್ಟು 100 ವಿಮಾನ ನಿಲ್ದಾಣಗಳನ್ನು ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ 35 ವಿಮಾನ ನಿಲ್ದಾಣಗಳು ಕಳೆದ 4 ವರ್ಷದಲ್ಲಿ ನಿರ್ಮಾಣವಾಗಿದೆ ಎಂದು ತಿಳಿಸಿದರು.

    ಸಿಕ್ಕಿಂ ರಾಜಧಾನಿ ಗ್ಯಾಂಗ್ಟಾಕ್ ನಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಪಾಕ್ಯೊಂಗ್ ನಲ್ಲಿ ಸಿಕ್ಕಿಂ ರಾಜ್ಯದ ಪ್ರಪ್ರಥಮ ನ್ಯೂ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗಿದೆ. ಒಟ್ಟು 605.59 ಕೋಟಿ ರೂಪಾಯಿ ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣಗೊಂಡಿದೆ. ಈ ವಿಮಾನ ನಿಲ್ದಾಣವು ಈಗಾಗಲೇ ಸಿವಿಲ್ ಏವಿಯೇಷನ್ ಇಲಾಖೆಯ ವಾಣಿಜ್ಯ ಹಾರಾಟದ ಅನುಮತಿಯನ್ನು ಸಹ ಪಡೆದುಕೊಂಡಿದೆ. ಅಕ್ಟೋಬರ್ 4 ರಿಂದ ವಾಣಿಜ್ಯ ಬಳಕೆಯ ವಿಮಾನಗಳು ಅಧಿಕೃತವಾಗಿ ಹಾರಾಟ ನಡೆಸಲಿದೆ. ಇದನ್ನು ಓದಿ: ಸಿಕ್ಕಿಂನಲ್ಲಿ ಶತಕ ಸಂಭ್ರಮ – ಲೋಕಾರ್ಪಣೆಗೊಂಡಿತು ರಾಜ್ಯದ ಮೊದಲ ವಿಮಾನ ನಿಲ್ದಾಣ: ವಿಶೇಷತೆ ಏನು?

    2009ರಲ್ಲಿ ಕೇಂದ್ರ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಪಾಕ್ಯೊಂಗ್ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ್ದರು. ಕಾಮಗಾರಿ ಆರಂಭಗೊಂಡ ಬಳಿಕ ಸ್ಥಳಿಯ ನಿವಾಸಿಗಳು ಪರಿಹಾರ ನಿಧಿ ಮತ್ತು ಪುನರ್ವಸತಿ ಕಲ್ಪಿಸುವ ವಿಚಾರವಾಗಿ ಭಾರೀ ಪ್ರತಿಭಟನೆ ನಡೆಸಿದ ಕಾರಣ ನಿರ್ಮಾಣ ಕಾಮಗಾರಿ 2014ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. 2015ರಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಮತ್ತು ಸಿಕ್ಕಿಂ ರಾಜ್ಯ ಸರ್ಕಾರಗಳು ಪರಿಹಾರ ನಿಧಿ ವಿಚಾರವಾಗಿ ಒಡಂಬಡಿಕೆ ಪತ್ರ(ಎಂಒಯು) ಸಹಿ ಹಾಕಿದ ಬಳಿಕ ಕಾಮಗಾರಿ ಆರಂಭಗೊಂಡು 9 ವರ್ಷಗಳ ನಂತರ ಉದ್ಘಾಟನೆಯಾಗಿದೆ.

     

  • ಸಿಕ್ಕಿಂನಲ್ಲಿ ಶತಕ ಸಂಭ್ರಮ – ಲೋಕಾರ್ಪಣೆಗೊಂಡಿತು ರಾಜ್ಯದ ಮೊದಲ ವಿಮಾನ ನಿಲ್ದಾಣ: ವಿಶೇಷತೆ ಏನು?

    ಸಿಕ್ಕಿಂನಲ್ಲಿ ಶತಕ ಸಂಭ್ರಮ – ಲೋಕಾರ್ಪಣೆಗೊಂಡಿತು ರಾಜ್ಯದ ಮೊದಲ ವಿಮಾನ ನಿಲ್ದಾಣ: ವಿಶೇಷತೆ ಏನು?

    ಗ್ಯಾಂಗ್ಟಕ್: ಸಿಕ್ಕಿಂ ರಾಜ್ಯದ ರಾಜಧಾನಿ ಬಳಿಯಿರುವ ಪಾಕ್ಯೊಂಗ್ ನಲ್ಲಿ ರಾಜ್ಯದ ಪ್ರಪ್ರಥಮ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದ್ದಾರೆ.

    ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮೋದಿ, ಈ ವಿಮಾನ ನಿಲ್ದಾಣ ರೂಪಿಸುವಲ್ಲಿ ಶ್ರಮವಹಿಸಿದ ಎಂಜಿನಿಯರ್ ಗಳನ್ನು ನಾನು ಅಭಿನಂದಿಸುತ್ತೇನೆ. ದೇಶದಲ್ಲಿ ಒಟ್ಟು 100 ವಿಮಾನ ನಿಲ್ದಾಣಗಳನ್ನು ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ 35 ವಿಮಾನ ನಿಲ್ದಾಣಗಳು ಕಳೆದ 4 ವರ್ಷದಲ್ಲಿ ನಿರ್ಮಾಣವಾಗಿದೆ ಎಂದು ತಿಳಿಸಿದರು.

    ಸಿಕ್ಕಿಂ ರಾಜಧಾನಿ ಗ್ಯಾಂಗ್ಟಾಕ್ ನಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಪಾಕ್ಯೊಂಗ್ ನಲ್ಲಿ ಸಿಕ್ಕಿಂ ರಾಜ್ಯದ ಪ್ರಪ್ರಥಮ ನ್ಯೂ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗಿದೆ. ಒಟ್ಟು 605.59 ಕೋಟಿ ರೂಪಾಯಿ ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣಗೊಂಡಿದೆ. ಈ ವಿಮಾನ ನಿಲ್ದಾಣವು ಈಗಾಗಲೇ ಸಿವಿಲ್ ಏವಿಯೇಷನ್ ಇಲಾಖೆಯ ವಾಣಿಜ್ಯ ಹಾರಾಟದ ಅನುಮತಿಯನ್ನು ಸಹ ಪಡೆದುಕೊಂಡಿದೆ.

    ಗೋವಾದ ಬಳಿಕ ದೇಶದ ಎರಡನೇ ಸಣ್ಣ ರಾಜ್ಯವಾಗಿರುವ ಸಿಕ್ಕಿಂಗೆ ಯಾವುದೇ ರೈಲು ಸಂಪರ್ಕವಿಲ್ಲ. ಪಶ್ಚಿಮ ಬಂಗಾಳದ ಬಾಗ್ದೋಗ್ರ ವಿಮಾನ ನಿಲ್ದಾಣ 125 ಕಿ.ಮೀ. ದೂರದಲ್ಲಿದೆ. ಈ ನೂತನ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲಕ್ಕೆ ಸಹಾಯವಾಗಲಿದೆ. ಅಕ್ಟೋಬರ್ 4 ರಿಂದ ವಾಣಿಜ್ಯ ಬಳಕೆಯ ವಿಮಾನಗಳು ಅಧಿಕೃತವಾಗಿ ಹಾರಾಟ ನಡೆಸಲಿದೆ.

    ನ್ಯೂ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣದ ವಿಶೇಷತೆಗಳು ಏನು?

    1. ಸಮುದ್ರ ಮಟ್ಟದಿಂದ ಸುಮಾರು 4,500 ಅಡಿ ಈ ವಿಮಾನ ನಿಲ್ದಾಣವಿದ್ದು, ಟೇಬಲ್ ಟಾಪ್ ವಿಮಾನ ನಿಲ್ದಾಣ ಎಂದೇ ಹೆಸರು ಪಡೆದುಕೊಂಡಿದೆ.

    2. ಈಶಾನ್ಯ ಭಾರತದ 990 ಎಕರೆ ಅರಣ್ಯ ಪ್ರದೇಶದ ಮಧ್ಯೆ ಈ ವಿಮಾನ ನಿಲ್ದಾಣ ನಿರ್ಮಾಣವಾಗಿದ್ದು, ಸಿಕ್ಕಿಂ ರಾಜಧಾನಿ ಗ್ಯಾಂಗ್ಟಾಕ್‍ನಿಂದ 30 ಕಿ.ಮೀ. ದೂರದಲ್ಲಿದೆ.

    3. ದೇಶದ ವಿಮಾನಯಾನ ಇಲ್ಲದ ರಾಜ್ಯವಾಗಿದ್ದ ಸಿಕ್ಕಿಂನಲ್ಲಿ ಇಲ್ಲಿಯವರೆಗೂ ಯಾವುದೇ ವಿಮಾನ ನಿಲ್ದಾಣಗಳಿರಲಿಲ್ಲ. ವಿಮಾನಯಾನಕ್ಕಾಗಿ ಪ್ರಯಾಣಿಕರು 125 ಕಿ.ಮೀ ದೂರದ ಪಶ್ಚಿಮ ಬಂಗಾಳದ ಬಾಗ್ದೋಗ್ರ ವಿಮಾನ ನಿಲ್ದಾಣಕ್ಕೆ ತೆರಳಬೇಕಾಗಿತ್ತು.

    4. ಪ್ರಪ್ರಥಮ ಬಾರಿಗೆ ವಾಣಿಜ್ಯ ವಿಮಾನಯಾನ ಸಾರಿಗೆ ಸಂಸ್ಥೆಯಾದ ಸ್ಪೈಸ್‍ಜೆಟ್ 78 ಆಸನಗಳ ಕ್ಯೂ400 ವಿಮಾನವನ್ನು ಅಕ್ಟೋಬರ್ 4 ಹಾರಾಟ ಪ್ರಾರಂಭಿಸಲಿದ್ದು, ಪ್ರತಿನಿತ್ಯ  ಪಾಕ್ಯೊಂಗ್ ನಿಂದ ಕೋಲ್ಕತ್ತ, ದೆಹಲಿ ಮತ್ತು ಗುವಾಹಟಿಗೆ ಸಂಚರಿಸಲಿದೆ.

    5. ಅತ್ಯಾಧುನಿಕವಾದ ಎಟಿಸಿ(ಎರ್ ಟ್ರಾಫಿಕ್ ಕಂಟ್ರೋಲ್) ಹಾಗೂ ಫೈರ್ ಸ್ಟೇಷನ್ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರ ಟರ್ಮಿನಲ್, ಪ್ರಕಾಶಿತ ರನ್ ವೇ ಲೈಟ್ಸ್ ಗಳು ಹಾಗೂ 50 ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಹೊಂದಿದೆ.

    6. 80 ಮೀಟರ್ ಉದ್ದದ ತಡೆಗೋಡೆ ನಿರ್ಮಾಣಮಾಡಿದ್ದು, ಈ ಮೂಲಕ ವಿಶ್ವದ ಅತಿ ಎತ್ತರ ತಡೆಗೋಡೆಯನ್ನು ಹೊಂದಿರುವ ವಿಮಾನ ನಿಲ್ದಾಣಗಳ ಪಟ್ಟಿಗೆ ಸೇರ್ಪಡೆಯಾಗಿದೆ. ಪಾಕ್ಯೊಂಗ್ ಭಾರತ ಹಾಗೂ ಚೀನಾದ ಗಡಿಯಿಂದ 60 ಕಿ.ಮೀ ಅಂತರದಲ್ಲಿದೆ.

    7. ರನ್ ವೇ ಸುಮಾರು 1.75 ಕಿ.ಮೀ ಉದ್ದವಿದ್ದು, 30 ಮೀಟರ್ ಅಗಲವಿದೆ. ಹೀಗಾಗಿ ಈ ವಿಮಾನ ನಿಲ್ದಾಣದಲ್ಲಿ ಸುಮಾರು 116 ಮೀಟರ್ ಉದ್ದದ ವಿಮಾನ ಹಾಗೂ 106 ರಿಂದ 76 ಮೀಟರ್ ಉದ್ದದ ಎಟಿಆರ್-72 ವಿಮಾನಗಳನ್ನು ಸುಲಭವಾಗಿ ಇಳಿಸಬಹುದಾಗಿದೆ.

    8. ವಿಮಾನನಿಲ್ದಾಣ ಒಟ್ಟು 3,000 ಚದರ ಮೀಟರ್ ವ್ಯಾಪ್ತಿಯನ್ನು ಒಳಗೊಂಡಿದ್ದು, ಈ ವಿಮಾನ ನಿಲ್ದಾಣಕ್ಕೆ ಸಿಕ್ಕಿಂ ಪೊಲೀಸರು ಭದ್ರತೆ ನೀಡುತ್ತಾರೆ.

    9. ಪಾಕ್ಯೊಂಗ್ ವಿಮಾನ ನಿಲ್ದಾಣದ ಉದ್ಘಾಟನೆಯಿಂದ ಸಿಕ್ಕಿಂ ರಾಜ್ಯ ಪ್ರವಾಸೋದ್ಯಮ ಹಾಗೂ ಆರ್ಥಿಕವಾಗಿ ಬೆಳೆಯಲು ಸಹಾಯಕವಾಗಿದೆ.

    10. 2009 ರಲ್ಲಿ ಕೇಂದ್ರ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಪಾಕ್ಯೊಂಗ್ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ್ದರು. ಕಾಮಗಾರಿ ಆರಂಭಗೊಂಡ ಬಳಿಕ ಸ್ಥಳಿಯ ನಿವಾಸಿಗಳು ಪರಿಹಾರ ನಿಧಿ ಮತ್ತು ಪುನರ್ವಸತಿ ಕಲ್ಪಿಸುವ ವಿಚಾರವಾಗಿ ಭಾರೀ ಪ್ರತಿಭಟನೆ ನಡೆಸಿದ ಕಾರಣ ನಿರ್ಮಾಣ ಕಾಮಗಾರಿ 2014ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. 2015ರಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಮತ್ತು ಸಿಕ್ಕಿಂ ರಾಜ್ಯ ಸರ್ಕಾರಗಳು ಪರಿಹಾರ ನಿಧಿ ವಿಚಾರವಾಗಿ ಒಡಂಬಡಿಕೆ ಪತ್ರ(ಎಂಒಯು) ಸಹಿ ಹಾಕಿದ ಬಳಿಕ ಕಾಮಗಾರಿ ಆರಂಭಗೊಂಡು 9 ವರ್ಷಗಳ ನಂತರ ಉದ್ಘಾಟನೆಯಾಗಿದೆ.

    ಏನಿದು ಟೇಬಲ್ ಟಾಪ್ ವಿಮಾನ ನಿಲ್ದಾಣ?
    ಸುತ್ತಲೂ ಆಳ ಕಣಿವೆಯಿಂದ ಕೂಡಿ, ಬೆಟ್ಟದ ತುದಿಯಲ್ಲಿ ರನ್ ವೇ ಇರುವ ನಿಲ್ದಾಣಗಳನ್ನು ಟೇಬಲ್ ಟಾಪ್ ವಿಮಾನ ನಿಲ್ದಾಣ ಎಂದು ಗುರುತಿಸಲಾಗುತ್ತದೆ. ಮಂಗಳೂರು, ಕೇರಳದ ಕೋಝಿಕ್ಕೋಡು ಮಿಜೋರಾಂನ ಲೆಂಗ್‍ಪುಯಿನಲ್ಲಿ ಈ ರೀತಿಯ ವಿಮಾನ ನಿಲ್ದಾಣಗಳನ್ನು ಕಾಣಬಹುದು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೇರಳದಲ್ಲಿ ಮುಂದುವರಿದ ಮಳೆಯ ರೌದ್ರನರ್ತನ: ಮೃತರ ಸಂಖ್ಯೆ 97ಕ್ಕೆ ಏರಿಕೆ

    ಕೇರಳದಲ್ಲಿ ಮುಂದುವರಿದ ಮಳೆಯ ರೌದ್ರನರ್ತನ: ಮೃತರ ಸಂಖ್ಯೆ 97ಕ್ಕೆ ಏರಿಕೆ

    ತಿರುವನಂತಪುರ: ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬಹುತೇಕ ಎಲ್ಲಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಮಳೆಯಿಂದಾಗಿ ರಾಜ್ಯಾದ್ಯಂತ ಮೃತಪಟ್ಟವರ ಸಂಖ್ಯೆ 97ಕ್ಕೆ ಏರಿಕೆಯಾಗಿದೆ.

    ಗುರುವಾರ ಸುರಿದ ಮಳೆಯಿಂದಾಗಿ ರಾಜ್ಯಾದ್ಯಂತ 30 ಮಂದಿ ಮೃತಪಟ್ಟಿದ್ದು, ಇಲ್ಲಿಯವರೆಗೂ ಸುಮಾರು 97 ಮಂದಿ ಮಹಾಮಳೆಗೆ ಆಹುತಿಯಾಗಿದ್ದಾರೆ. ವರದಿಗಳ ಪ್ರಕಾರ ಅಧಿಕೃತವಾಗಿ ಸಾವನ್ನಪ್ಪಿರುವವರ ಸಂಖ್ಯೆ 97 ಆಗಿದೆ. ಆದರೆ ಅನಧಿಕೃತ ಮಾಹಿತಿಗಳ ಪ್ರಕಾರ ಸಾವಿನ ಸಂಖ್ಯೆ ಇನ್ನೂ ಜಾಸ್ತಿಯಾಗಿರುವ ಶಂಕೆ ವ್ಯಕ್ತವಾಗಿದೆ.

    ರಾಜ್ಯದಲ್ಲಿ ಕಂಡು ಕೇಳರಿಯದ ಮಳೆ ಸುರಿಯುತ್ತಿದ್ದು, ರಾಜ್ಯದ ಬಹುತೇಕ ನದಿಗಳು ತುಂಬಿದ ಪರಿಣಾಮ 26 ಜಲಾಶಯಗಳ ಪೈಕಿ 25 ಜಲಾಶಯಗಳಿಂದ ಭಾರೀ ಪ್ರಮಾಣ ನೀರನ್ನು ಹೊರಕ್ಕೆ ಬಿಡಲಾಗಿದೆ. ಸುರಿಯುತ್ತಿರುವ ಮಳೆಯಿಂದಾಗಿ ಕೊಚ್ಚಿ ಅಂತರಾಷ್ಟ್ರೀಯ ನಿಲ್ದಾಣವನ್ನು ಆಗಸ್ಟ್ 26ರವರೆಗೆ ಸಂಪೂರ್ಣ ಬಂದ್ ಮಾಡಲಾಗಿದೆ. ಅಲ್ಲದೇ ದಕ್ಷಿಣ ರೈಲ್ವೇ ಹಾಗೂ ಕೊಚ್ಚಿ ಮೆಟ್ರೋ ಸಂಚಾರವು ಸಹ ತಾತ್ಕಾಲಿಕವಾಗಿ ಬಂದ್ ಆಗಿದೆ. ಈ ಮಧ್ಯೆ ರಾಜ್ಯದಲ್ಲಿ ಓಣಂ ಹಾಗೂ ಪ್ರವಾಹದ ಕಾರಣದಿಂದ ಆಗಸ್ಟ್ 26ರವರೆಗೆ ಎಲ್ಲಾ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ ಘೋಷಣೆ ಮಾಡಿದೆ.

    ಗುರುವಾರದಿಂದಲೂ ಸರಾಸರಿ ಮಳೆಗಿಂತ ಸುಮಾರು 10 ಪಟ್ಟು ಮಳೆಯ ಪ್ರಮಾಣ ಹೆಚ್ಚಾಗಿದ್ದು, ಶುಕ್ರವಾರವೂ ಸಹ ಭಾರೀ ಮಳೆ ಸುರಿಯುತ್ತದೆಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದೇಶದಲ್ಲೇ ಮೊದಲು-ಯುಪಿ ವಿಮಾನನಿಲ್ದಾಣದ ರನ್‍ವೇ ಕೆಳಗಡೆ ಹೈವೇ!

    ದೇಶದಲ್ಲೇ ಮೊದಲು-ಯುಪಿ ವಿಮಾನನಿಲ್ದಾಣದ ರನ್‍ವೇ ಕೆಳಗಡೆ ಹೈವೇ!

    ವಾರಣಾಸಿ: ವಾರಣಾಸಿಯಿಂದ 26 ಕಿ.ಮಿ ದೂರದಲ್ಲಿರುವ ಬಾಬತ್‍ಪುರದ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ನು ಕೆಲವೇ ದಿನಗಳಲ್ಲಿ ತನ್ನ ರನ್‍ವೇ ಕೆಳಗಡೆ ರಾಷ್ಟ್ರೀಯ ಹೆದ್ದಾರಿಯನ್ನು ಹೊಂದಲಿದೆ.

    ಈ ಮೂಲಕ ರನ್‍ವೇ ಕೆಳಗೆ ಅಂಡರ್ ಪಾಸ್ ಹೈವೇ ಹೊಂದಿದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಕೀರ್ತಿಗೆ ಈ ವಿಮಾನ ನಿಲ್ದಾಣ ಪಾತ್ರವಾಗಲಿದೆ. ಅಂಡರ್‍ಪಾಸ್ ರಸ್ತೆ ನಿರ್ಮಾಣವು ವಿಮಾನಗಳ ರನ್‍ವೇಯನ್ನು, ವಿಮಾನಗಳ ನಿಲ್ದಾಣ ಪಥ ಹಾಗು ಹೆದ್ದಾರಿಯನ್ನು ನಾಲ್ಕು ರಸ್ತೆಗಳಾಗಿ ಪರಿವರ್ತಿಸುತ್ತದೆ.

    ಅಂಡರ್‍ಪಾಸ್ ರಸ್ತೆಗಳ ನಿರ್ಮಾಣ ಹಾಗೂ ವಿಮಾನಗಳ ರನ್‍ವೇ ವಿಸ್ತರಣೆ ಕಾರ್ಯ ವಾರಣಾಸಿ-ಲಖ್ನೋ ರಾಷ್ಟ್ರೀಯ ಹೆದ್ದಾರಿ 56 ರೊಂದಿಗೆ ಸಂಪರ್ಕ ಕಲ್ಪಿಸುತ್ತದೆ. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಈ ಕಾರ್ಯಕ್ಕೆ ಸಂತಸ ವ್ಯಕ್ತಪಡಿಸಿದೆ. ಈಗಿರುವ ರನ್‍ವೇ 2750 ಮೀ. ಗಳಾಗಿದ್ದು ಸರಕು ಸಾಗಾಣಿಕೆ ಹಾಗೂ ಬೋಯಿಂಗ್ ವಿಮಾನಗಳನ್ನು ಇಳಿಸಲು ಅನುಕೂಲವಾಗುವಂತೆ 4075ಮೀ ಗೆ ವಿಸ್ತರಿಸಬೇಕೆಂದು ಪ್ರಸ್ತಾಪಿಸಿದೆ. ಅದರಂತೆಯೇ ಈ ರನ್‍ವೇ ಹಾಗೂ ಅಂಡರ್‍ಪಾಸ್ ಕಾಮಗಾರಿಗಳೆರೆಡೂ ಏಕಕಾಲಕ್ಕೆ ಪ್ರಾರಂಭವಾಗಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಈ ಪ್ರಕ್ರಿಯೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯ ವಿಸ್ತರಣೆ ಕುರಿತಂತೆ ಇರುವ ದೀರ್ಘಾವಧಿ ಸಮಸ್ಯೆಗಳು ಪರಿಹಾರವಾಗಲಿವೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈಗಾಗಲೇ ಇರುವ ಹೆದ್ದಾರಿಗಳನ್ನು ದುರಸ್ತಿಗೊಳಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಡಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಎಸ್.ಬಿ ಸಿಂಗ್ ಹೇಳಿದ್ದಾರೆ.

    ರಾಷ್ಟ್ರೀಯ ಹೆದ್ದಾರಿ 56 ನ್ನು ನಾಲ್ಕು ಪಥದ ರಸ್ತೆಯನ್ನಾಗಿ ಮಾಡಲು ಉತ್ತರ ಪ್ರದೇಶ ಸರಕಾರ 2013 ರಲ್ಲಿ ಅನುಮತಿ ನೀಡಿದ್ದರೂ ಕಾಮಗಾರಿ ನೆನೆಗುದಿಗೆ ಬಿದ್ದಿತ್ತು. ಹೆದ್ದಾರಿ ಪ್ರಾಧಿಕಾರವೂ ವಾರಣಾಸಿ- ಸುಲ್ತಾನ್‍ಪುರ ಗಳಲ್ಲಿ ಕಾಮಗಾರಿ ಪ್ರಾರಂಭಿಸಿತ್ತಾದರೂ ಪೂರ್ಣಗೊಳಿಸಲಾಗಲಿಲ್ಲ.  2014ರಲ್ಲಿ ಕೇಂದ್ರದಲ್ಲಾದ ಸಿಬ್ಬಂದಿ ಬದಲಾವಣೆ, ಭೂಸ್ವಾಧೀನ ಪ್ರಕ್ರಿಯೆಗಳಿಂದಾಗಿ ಕಾಮಗಾರಿ ಭರದಿಂದ ಸಾಗಿದೆ.

    2014ರ ಮಾರ್ಚ್ 27 ರಂದು ನಾಗರಿಕ ವಿಮಾನಯಾನ ನಿರ್ದೇಶಕರು ಉತ್ತರ ಪ್ರದೇಶ ಸರಕಾರಕ್ಕೆ ಈ ಕುರಿತು ಪತ್ರವೊಂದನ್ನು ಕಳುಹಿಸಿದ್ದರು. ಆದರೆ ಅದನ್ನು ನಿರ್ಲಕ್ಷಿಸಲಾಗಿತ್ತು. 2017 ರಲ್ಲಿ ಪ್ರಾಧಿಕಾರವು ಕಾಮಗಾರಿಗೆ ಅಗತ್ಯ ಭೂಮಿಯನ್ನು ಗುರುತಿಸಿದ ನಂತರ ಈಗ ಕಾಮಗಾರಿ ವೇಗವನ್ನು ಪಡೆದಿದೆ.