ಮುಂಬೈ: ಅಹಮದಾಬಾದ್ ಏರ್ ಇಂಡಿಯಾ (Air India) ವಿಮಾನ ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವೇ ಮತ್ತೊಂದು ತನಿಖೆ ನಡೆಸಬೇಕೆಂದು ಮೃತ ಪೈಲಟ್ ಕ್ಯಾಪ್ಟನ್ ಸುಮೀತ್ ಸಭರ್ವಾಲ್ (Captain Sumeet Sabharwal) ಅವರ ತಂದೆ ಪುಷ್ಕರಾಜ್ ಸಭರ್ವಾಲ್ ಒತ್ತಾಯಿಸಿದ್ದಾರೆ.
ವಿಮಾನ ದುರಂತದ ಬಗ್ಗೆ ತನಿಖೆ ನಡೆಸಿದ ವಿಮಾನ ಅಪಘಾತ ತನಿಖಾ ಬ್ಯೂರೊದ (AAIB) ವರದಿ ಸೋರಿಕೆಯಾದ ಬೆನ್ನಲ್ಲೇ ನಾಗರಿಕ ವಿಮಾನಯಾನ ಕಾರ್ಯದರ್ಶಿ ಮತ್ತು AAIB ಮಹಾನಿರ್ದೇಶಕರಿಗೆ 91 ವರ್ಷದ ಪುಷ್ಕರಾಜ್ ಸಭರ್ವಾಲ್ ಪತ್ರ ಬರೆದಿದ್ದಾರೆ.
ನನ್ನ 56 ವರ್ಷದ ಪುತ್ರ ಮಾನಸಿಕ ಒತ್ತಡದಲ್ಲಿದ್ದ. ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸುತ್ತಿದ್ದ ಎಂಬ ಅಂಶಗಳು ಸೋರಿಕೆಯಾಗಿದ್ದು ಇದು ಹಲವು ಉಹಾಪೋಹಗಳಿಗೆ ಕಾರಣವಾಗಿದೆ. ವರದಿ ಸೋರಿಕೆಯಿಂದ ನನ್ನ ಮಗನ ಪ್ರತಿಷ್ಠೆಗೆ ಧಕ್ಕೆಯಾಗಿದ್ದು ಕೇಂದ್ರ ಸರ್ಕಾರ ಮತ್ತೊಂದು ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಸಭರ್ವಾಲ್ ಸುಮಾರು 15 ವರ್ಷಗಳ ಹಿಂದೆ ವಿಚ್ಛೇದನ ಪಡೆದಿದ್ದರೆ ತಾಯಿ 3 ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಈ ಎರಡು ಘಟನೆ ನಡೆದ ಬಳಿಕವೂ ಪುತ್ರ ಅಪಘಾತವಿಲ್ಲದೆ 100 ಕ್ಕೂ ಹೆಚ್ಚು ವಿಮಾನಗಳನ್ನು ನಿರ್ವಹಿಸಿದ್ದಾನೆ ಮತ್ತು ಯಾವುದೇ ಅಪಘಾತವನ್ನು ಮಾಡಿಲ್ಲ. ವಿಮಾನ ಹಾರಾಟ ಅನುಭವದಲ್ಲಿ ಉತ್ತಮ ಟ್ರ್ಯಾಕ್ ರೆಕಾರ್ಡ್ ಹೊಂದಿದ್ದಾನೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಏರ್ ಇಂಡಿಯಾ ವಿಮಾನ ದುರಂತ ತನಿಖೆಗೆ ಉನ್ನತ ಮಟ್ಟದ ಸಮಿತಿ – 3 ತಿಂಗಳ ಡೆಡ್‌ಲೈನ್: ಸಚಿವ ರಾಮಮೋಹನ್ ನಾಯ್ಡು
ಏರ್ ಇಂಡಿಯಾದ ಬೋಯಿಂಗ್ 787-8 ವಿಮಾನವು ಜೂನ್ 12 ರಂದು ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್‌ಗೆ ಹೋಗಲು ಟೇಕಾಫ್ ಆಗಿತ್ತು. ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡು ಸಮೀಪದದಲ್ಲಿದ್ದ ಮೆಡಿಕಲ್ ಕಾಲೇಜ್ ಹಾಸ್ಟೆಲಿನ ಮೆಸ್ ಮೇಲೆ ಬಿದ್ದಿತ್ತು. ಪರಿಣಾಮ ವಿಮಾನದಲ್ಲಿದ್ದ 241 ಪ್ರಯಾಣಿಕರು ಸೇರಿದಂತೆ ಒಟ್ಟು 260 ಜನರು ಮೃತಪಟ್ಟಿದ್ದರು.
ನಿಯಮ 12 ರ ಅಡಿಯಲ್ಲಿ ಕೇಂದ್ರ ಸರ್ಕಾರವು ಯಾವುದೇ ಭಾರತೀಯ-ನೋಂದಾಯಿತ ವಿಮಾನ ಅಪಘಾತದ ತನಿಖೆ ಅಗತ್ಯವೆಂದು ಭಾವಿಸಿದರೆ ಅದರ ಔಪಚಾರಿಕ ತನಿಖೆಗೆ ಆದೇಶಿಸಬಹುದು. ಈ ಪತ್ರದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ವಿಮಾನ ಅಪಘಾತ ತನಿಖಾ ಬ್ಯೂರೋದಿಂದ ತಕ್ಷಣದ ಯಾವುದೇ ಪ್ರತಿಕ್ರಿಯೆಗಳು ಬಂದಿಲ್ಲ.
ತನ್ನ ಪ್ರಾಥಮಿಕ ವರದಿಯನ್ನು ಜುಲೈ 12 ರಂದು ಬಿಡುಗಡೆ ಮಾಡಿದ ನಂತರ AAIB ದುರಂತಕ್ಕೆ ಯಾವುದೇ ನಿರ್ದಿಷ್ಟ ಕಾರಣ ನೀಡಿರಲಿಲ್ಲ. ತನಿಖೆ ಮುಂದುವರಿದಿದೆ ಎಂದಷ್ಟೇ ಹೇಳಿತ್ತು.
ಢಾಕಾ: ಬಾಂಗ್ಲಾದೇಶದ (Bangladesh) ವಾಯುಪಡೆಯ (Air Force) ಎಫ್-7 ಬಿಜಿಐ ತರಬೇತಿ ಜೆಟ್ ಪತನಗೊಂಡು ಶಾಲಾ ಕಟ್ಟಡಕ್ಕೆ ಅಪ್ಪಳಿದ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.
ಅಪಘಾತಕ್ಕೀಡಾದ ಎಫ್-7 ಬಿಜಿಐ ತರಬೇತಿ ವಿಮಾನವು ಬಾಂಗ್ಲಾದೇಶದ ನಿರ್ವಹಿಸುತ್ತಿರುವ 16 ವಿಮಾನಗಳಲ್ಲಿ ಒಂದಾಗಿದೆ. ಇದು ಚೀನಾದ ಜೆ-7 ಯುದ್ಧ ವಿಮಾನದ ಮುಂದುವರಿದ ಆವೃತ್ತಿಯ ವಿಮಾನವಾಗಿದೆ.
ಢಾಕಾ: ಬಾಂಗ್ಲಾದೇಶದ (Bangladesh) ವಾಯುಪಡೆಯ (Air Force) ಎಫ್-7 ಬಿಜಿಐ ತರಬೇತಿ ಜೆಟ್ ಪತನಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಘಡದಲ್ಲಿ ಪೈಲಟ್ ಸೇರಿ 16 ಜನ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ಸಹಾಯಕ ಪ್ರೊಫೆಸರ್ ಎಂಡಿ ಸಯದುರ್ ರೆಹಮಾನ್ ಮಾತನಾಡಿ, ಬಾಂಗ್ಲಾದೇಶದ ವಾಯುಪಡೆಯ ಎಫ್-7 ಬಿಜಿಐ ತರಬೇತಿ ಜೆಟ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ನಿಯಂತ್ರಣ ಕಳೆದುಕೊಂಡು ಢಾಕಾದ ಉತ್ತರದಲ್ಲಿರುವ ಮೈಲ್‌ಸ್ಟೋನ್ ಶಿಕ್ಷಣ ಸಂಸ್ಥೆಯ ಕಟ್ಟಡಕ್ಕೆ ಅಪ್ಪಳಿಸಿದೆ. ಪರಿಣಾಮ ಪೈಲಟ್ ಸೇರಿ 16 ಜನ ಮೃತಪಟ್ಟಿದ್ದು, 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ನಂಗೆ ಯಾರೂ ಬಾಯ್‌ಫ್ರೆಂಡ್ ಇಲ್ಲ, 4 ತಿಂಗಳು ನನ್ನ ಫೋನ್ ಪ್ರತೀಕ್ ಚೌಹಾಣ್ ಬಳಿ ಇತ್ತು: ಸಂತ್ರಸ್ತೆ
ಅಗ್ನಿಶಾಮಕ ದಳದ ಕರ್ತವ್ಯ ಅಧಿಕಾರಿ ಲಿಮಾ ಖಾನ್ ಮಾತನಾಡಿ, ತರಬೇತಿ ಜೆಟ್ ಪತನಗೊಂಡ ಸ್ವಲ್ಪ ಸಮಯದ ನಂತರ ಗಾಯಗೊಂಡವರನ್ನು ಸಿಎಂಹೆಚ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಬಾಂಗ್ಲಾದೇಶ ಸೇನೆಯ ಸಾರ್ವಜನಿಕ ಸಂಪರ್ಕ ಕಚೇರಿ ಬಿಡುಗಡೆಗೊಳಿಸಿದ ಹೇಳಿಕೆಯಲ್ಲಿ, ಪತನಗೊಂಡ ಎಫ್-7 ಬಿಜಿಐ ಜೆಟ್ ಬಾಂಗ್ಲಾದೇಶದ ವಾಯುಪಡೆಗೆ ಸೇರಿದ್ದು ಎಂದು ದೃಢಪಡಿಸಿದೆ. ಸದ್ಯ ಘಟನಾ ಸ್ಥಳದಲ್ಲಿ ಮೂರು ಅಗ್ನಿಶಾಮಕ ದಳದ ವಾಹನಗಳು ಕಾರ್ಯನಿರ್ವಹಿಸುತ್ತಿದ್ದು, ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ತೊಡಗಿಕೊಂಡಿದ್ದಾರೆ.
ಏನಿದು ಪ್ರಕರಣ?
ಸೋಮವಾರ ಮಧ್ಯಾಹ್ನ 1:06ರ ಸುಮಾರಿಗೆ ಬಾಂಗ್ಲಾದೇಶದ ವಾಯುಪಡೆಯ ಎಫ್-7 ಬಿಜಿಐ ತರಬೇತಿ ಜೆಟ್ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಢಾಕಾದ ಉತ್ತರದ ಮೈಲ್‌ಸ್ಟೋನ್ ಶಿಕ್ಷಣ ಸಂಸ್ಥೆಯ ಕ್ಯಾಂಟೀನ್ ಮೇಲೆ ಪತನಗೊಂಡಿತ್ತು.
ಅಪಘಾತಕ್ಕೀಡಾದ F-7BGI ತರಬೇತಿ ವಿಮಾನವು ಬಾಂಗ್ಲಾದೇಶದ ನಿರ್ವಹಿಸುತ್ತಿರುವ 16 (ಈಗ 15) ವಿಮಾನಗಳಲ್ಲಿ ಒಂದಾಗಿದೆ. ಇದು ಚೀನಾದ J-7 ಯುದ್ಧ ವಿಮಾನದ ಮುಂದುವರಿದ ಆವೃತ್ತಿಯ ವಿಮಾನವಾಗಿದೆ.ಇದನ್ನೂ ಓದಿ: ದೇವರಾಜ್ ಪುತ್ರ ಪ್ರಣಂ ಸಿನಿಮಾ ಹಾಡಿಗೆ ಸಂಜಿತ್ ಹೆಗ್ಡೆ ದನಿ
ನವದೆಹಲಿ: ಗುಜರಾತ್‌ನ (Gujarat) ಅಹಮದಾಬಾದ್‌ನಲ್ಲಿ (Ahmedabad) ನಡೆದಿದ್ದ ಏರ್ ಇಂಡಿಯಾ (Air India) ವಿಮಾನ ದುರಂತ ಸಂಬಂಧ ಇಂದು ಎಎಐಬಿ (AAIB) 2 ಪುಟಗಳ ಪ್ರಾಥಮಿಕ ತನಿಖಾ ವರದಿ ಸಲ್ಲಿಸಿದೆ.
ಜೂ.12ರಂದು ಏರ್ ಇಂಡಿಯಾ ವಿಮಾನ ಪತನಗೊಂಡ ಪರಿಣಾಮ ಸ್ಥಳೀಯರು, ಪ್ರಯಾಣಿಕರು ಸೇರಿ 260ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು. ಅವಶೇಷಗಳನ್ನು ತೆರವುಗೊಳಿಸುವ ವೇಳೆ ಬಿಜೆ ಮೆಡಿಕಲ್ ಹಾಸ್ಟೆಲಿನ ಮೇಲ್ಛಾವಣಿಯಲ್ಲಿ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿತ್ತು. ಇದನ್ನು ವಶಪಡಿಸಿಕೊಂಡಿದ್ದ ವಿಮಾನ ಅಪಘಾತ ತನಿಖಾ ಬ್ಯೂರೋ ತನಿಖೆ ಆರಂಭಿಸಿತ್ತು.ಇದನ್ನೂ ಓದಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಗೆ ಆ್ಯಸಿಡ್ ಎರಚಿ ತಾನೂ ಬೆಂಕಿ ಹಚ್ಚಿಕೊಂಡ ಸೋದರ ಮಾವ
ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಕ್ರ್ಯಾಶ್ ತನಿಖಾ ವಿಭಾಗದ ಅಡಿಯಲ್ಲಿ ಬರುವ ವಿಮಾನ ಅಪಘಾತ ತನಿಖಾ ಬ್ಯೂರೋ ಪ್ರಯೋಗಾಲಯದಲ್ಲಿ ಬ್ಲ್ಯಾಕ್ ಬಾಕ್ಸ್‌ನ ಮುಂಭಾಗದ ಕಪ್ಪು ಪೆಟ್ಟಿಗೆಯಿಂದ ಕ್ರ್ಯಾಶ್ ಪ್ರೊಟೆಕ್ಷನ್ ಮಾಡ್ಯೂಲ್‌ನ್ನು ರಿಕವರಿ ಮಾಡಿಕೊಂಡಿದ್ದರು. ಬಳಿಕ ಮೆಮೊರಿ ಮಾಡ್ಯೂಲ್‌ನಲ್ಲಿನ ಡೇಟಾವನ್ನು ಯಶಸ್ವಿಯಾಗಿ ಡೌನ್‌ಲೋಡ್ ಮಾಡಿದ್ದರು. ಸದ್ಯ ವಿಮಾನ ದುರಂತಕ್ಕೆ ಕಾರಣ ಏನು ಎಂಬುವುದರ ವರದಿ ಸಲ್ಲಿಸಿದೆ. ವಿಮಾನ ಅಪಘಾತಕ್ಕೆ ಕಾರಣ ಏನೆಂದು ಈ ವರದಿಯಲ್ಲಿ ಬಹಿರಂಗವಾಗುವ ಸಾಧ್ಯತೆಯಿದ್ದು, ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ. ಈ ತಿಂಗಳ ಕೊನೆಯ ವಾರದಲ್ಲಿ ಸಾರ್ವಜನಿಕರಿಗೆ ಈ ಕುರಿತು ಮಾಹಿತಿ ನೀಡುವ ಸಾಧ್ಯತೆಯಿದೆ.
ವಿಮಾನ ಅಪಘಾತವಾದ ಮರುದಿನವೇ ಅಂತಾರಾಷ್ಟ್ರೀಯ ಮಾನದಂಡ, ಶಿಷ್ಟಾಚಾರಗಳಿಗೆ ಅನುಗುಣವಾಗಿ ಜೂ.13ರಂದು ತನಿಖಾ ತಂಡ ರಚಿಸಲಾಗಿತ್ತು. ಎಎಐಬಿ ತಂಡವು ಜೂ.24ರಂದು ವಿಮಾನದ ಬ್ಲಾö್ಯಕ್ ಬಾಕ್ಸ್ ದಾಖಲೆ ಹೊರತೆಗೆಯುವ ಪ್ರಕ್ರಿಯೆ ಪ್ರಾರಂಭಿಸಿತ್ತು. ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ ಮತ್ತು ಫ್ಲೈಟ್ ಡೇಟಾ ರೆಕಾರ್ಡರ್‌ನ ವಿಶ್ಲೇಷಣೆಯನ್ನೂ ನಡೆಸಲಾಗಿತ್ತು.
ಇನ್ನು ವಿಮಾನಯಾನ ಸಂಸ್ಥೆಯಿಂದ ನಡೆದ ಮತ್ತೊಂದು ತನಿಖೆ ಪ್ರಕಾರ, ಡಬಲ್ ಎಂಜಿನ್ ವೈಫಲ್ಯದಿಂದಾಗಿ ಬೋಯಿಂಗ್ 787 ಡ್ರೀಮ್‌ಲೈನರ್ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಹೇಳಿದೆ.
ಏನಿದು ಬ್ಲ್ಯಾಕ್ ಬಾಕ್ಸ್?
ವಿಮಾನದಲ್ಲಿ ಧ್ವನಿಗ್ರಹಣಕ್ಕೆ ಬಳಸಲಾಗುವ ಎರಡು ಸಾಧನಗಳನ್ನು ತಾಂತ್ರಿಕ ಭಾಷೆಯಲ್ಲಿ ಬ್ಲ್ಯಾಕ್ ಬಾಕ್ಸ್ ಎಂದು ಕರೆಯಲಾಗುತ್ತದೆ. ಬ್ಲ್ಯಾಕ್ ಬಾಕ್ಸ್ ಅನ್ನು ಫ್ಲೈಟ್ ಡೇಟಾ ರೆಕಾರ್ಡರ್ ಎಂದೂ ಕರೆಯುತ್ತಾರೆ. ಬ್ಲ್ಯಾಕ್ ಬಾಕ್ಸ್ ಹಾರಾಟದ ಸಮಯದಲ್ಲಿನ ವಿಮಾನದ ಎಲ್ಲಾ ಚಟುವಟಿಕೆಗಳನ್ನು ದಾಖಲಿಸುತ್ತದೆ. ಎಲ್ಲ ರೀತಿಯ ವಿಮಾನಗಳಲ್ಲಿ ಬ್ಲ್ಯಾಕ್ ಬಾಕ್ಸ್ ಅನ್ನು ಕಡ್ಡಾಯವಾಗಿ ಅಳವಡಿಸಲಾಗುತ್ತದೆ.
ವಿಮಾನ ಅಪಘಾತವಾದಾಗ ಅದಕ್ಕೆ ಕಾರಣ ಪತ್ತೆ ಹಚ್ಚಲು ನೆರವಾಗಲೆಂದೇ 5 ಕೆಜಿ ತೂಕದ ರೆಕಾರ್ಡಿಂಗ್ ಸಾಧನವನ್ನು ಅಳವಡಿಸಲಾಗುತ್ತದೆ. ಭದ್ರತೆಯ ದೃಷ್ಟಿಯಿಂದ ಕಪ್ಪು ಪೆಟ್ಟಿಗೆಯನ್ನು ಸಾಮಾನ್ಯವಾಗಿ ವಿಮಾನದ ಹಿಂಭಾಗದಲ್ಲಿ ಇಡಲಾಗುತ್ತದೆ. ಈ ಪೆಟ್ಟಿಗೆಯನ್ನು ಟೈಟಾನಿಯಂ ಲೋಹದಿಂದ ಮಾಡಲಾಗಿದ್ದು, ಟೈಟಾನಿಯಂ ಪೆಟ್ಟಿಗೆಯಲ್ಲಿ ಸುತ್ತುವರಿಯಲಾಗಿದೆ. ಇದು ಎಷ್ಟು ಶಕ್ತಿಶಾಲಿಯೆಂದರೆ ಸಮುದ್ರದಲ್ಲಿ ಬಿದ್ದರೆ, ಸುತ್ತಲೂ ಬೆಂಕಿ ಇದ್ದರೂ ಅಥವಾ ಎತ್ತರದಿಂದ ಬಿದ್ದರೂ ಯಾವುದೇ ಹಾನಿಯಾಗುವುದಿಲ್ಲ.ಇದನ್ನೂ ಓದಿ: ಹರಿಯಾಣದ ರೈಲಿನಲ್ಲಿ ಗ್ಯಾಂಗ್ ರೇಪ್ - ಅತ್ಯಾಚಾರ ಬಳಿಕ ರೈಲ್ವೆ ಹಳಿಗಳ ಮೇಲೆ ಮಹಿಳೆ ಎಸೆದ ಪಾಪಿಗಳು
ಅಪಘಾತದ ಸಂಭವಿಸಿದಾಗ ಹಿಂಭಾಗದಲ್ಲಿ ಅದರಲ್ಲೂ ಬಾಲದ ಕಡೆ ಪೆಟ್ಟು ಬೀಳುವುದು ಕಡಿಮೆ. ಯಾಕೆಂದರೆ ಬಾಲ ಎತ್ತರದಲ್ಲಿರುತ್ತದೆ. ಈ ಕಾರಣಕ್ಕೆ ಬಾಲದಲ್ಲಿ ಅಳವಡಿಸಲಾಗಿರುತ್ತದೆ. ವಿಮಾನದ ಎಂಜಿನ್‌ಗೆ ಜೋಡಿಸಲಾದ ಜನರೇಟರ್ ನಿಂದ ಬ್ಲ್ಯಾಕ್ ಬಾಕ್ಸ್ ಚಾರ್ಜ್ ಆಗುತ್ತದೆ.
ಎರಡು ಪ್ರತ್ಯೇಕ ಪೆಟ್ಟಿಗೆಗಳಿವೆ
1. ಫ್ಲೈಟ್ ಡೇಟಾ ರೆಕಾರ್ಡರ್: ಈ ಪೆಟ್ಟಿಗೆಯಲ್ಲಿ ನಿರ್ದೇಶನ, ಎತ್ತರ, ಇಂಧನ, ವೇಗ, ಕ್ಯಾಬಿನ್ ತಾಪಮಾನ ಇತ್ಯಾದಿಗಳ ಬಗ್ಗೆ ಮಾಹಿತಿ ಇರುತ್ತದೆ. ಕೊನೆಯ 25 ಗಂಟೆಗಳ ಕಾಲದ ಒಟ್ಟು 88 ಮಾಹಿತಿಗಳ ಡೇಟಾವನ್ನು ಸಂಗ್ರಹಿಸುತ್ತದೆ. 1,100 ಡಿಗ್ರಿ ಸೆಲ್ಶಿಯಸ್ ತಾಪಮಾನ ಇದ್ದರೆ 1 ಗಂಟೆ, 260 ಡಿಗ್ರಿ ಸೆಲ್ಶಿಯಸ್ ತಾಪಮಾನ ಇದ್ದರೆ ಇದ್ದರೆ 10 ಗಂಟೆಗಳ ಕಾಲ ಡೇಟಾವನ್ನು ತಡೆದಿಟ್ಟುಕೊಳ್ಳಬಹುದು. ತನಿಖಾಧಿಕಾರಿಗಳಿಗೆ ಸುಲಭವಾಗಿ ಗುರುತಿಸಲು ಕೆಂಪು ಅಥವಾ ಗುಲಾಬಿ ಬಣ್ಣದಲ್ಲಿ ಈ ಪೆಟ್ಟಿಗೆಯನ್ನು ಮಾಡಲಾಗುತ್ತದೆ.
2. ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್: ಈ ಬಾಕ್ಸ್ ಕೊನೆಯ ಎರಡು ಗಂಟೆಗಳ ವಿಮಾನದ ಧ್ವನಿಯನ್ನು ದಾಖಲಿಸುತ್ತದೆ. ಯಾವುದೇ ಅಪಘಾತ ಸಂಭವಿಸುವ ಮೊದಲು ಎಂಜಿನ್, ತುರ್ತು ಎಚ್ಚರಿಕೆ, ಕ್ಯಾಬಿನ್ ಮತ್ತು ಕಾಕ್‌ಪಿಟ್ ಧ್ವನಿಯನ್ನು ದಾಖಲಿಸುತ್ತದೆ.
ಹೇಗೆ ಕಾರ್ಯನಿರ್ವಹಿಸುತ್ತದೆ?
ಯಾವುದೇ ವಿದ್ಯುತ್ ಇಲ್ಲದೆ 30 ದಿನಗಳವರೆಗೆ ಬ್ಲಾಕ್ ಬಾಕ್ಸ್ ಕೆಲಸ ಮಾಡಬಹುದು. ಪತ್ತೆ ಕಾರ್ಯ ಸುಲಭವಾಗಲು ಸುಮಾರು 30 ದಿನಗಳವರೆಗೆ ಸಿಗ್ನಲ್ ಹೊರಸೂಸುತ್ತಿರುತ್ತದೆ. ಈ ಧ್ವನಿಯನ್ನು ತನಿಖಾಧಿಕಾರಿಗಳು ಸುಮಾರು 2-3 ಕಿಲೋಮೀಟರ್ ದೂರದಿಂದ ಗುರುತಿಸಬಹುದು. 14 ಸಾವಿರ ಅಡಿ ಆಳದ ಸಮದ್ರದಲ್ಲಿದ್ದರೂ ಸಿಗ್ನಲ್ ಹೊರ ಸೂಸುತ್ತಿರುತ್ತದೆ.ಇದನ್ನೂ ಓದಿ: ರಕ್ಷಿತಾ ಪ್ರೇಮ್ ಸಹೋದರ ರಾಣಾ ನಟನೆಯ ಚಿತ್ರದ ಟೈಟಲ್ ಟೀಸರ್ ರಿಲೀಸ್
ನವದೆಹಲಿ: 270 ಜನರ ಸಾವಿಗೆ ಕಾರಣವಾದ ಅಹಮದಾಬಾದ್ ವಿಮಾನ ದುರಂತದ (Ahmedabad Plane Crash) ನಂತರದ ದಿನಗಳಲ್ಲಿ ಕರ್ತವ್ಯದ ಸ್ಥಳದಲ್ಲಿ ಪಾರ್ಟಿ ಮೂಡ್‌ನಲ್ಲಿದ್ದ ಏರ್ ಇಂಡಿಯಾ (Air India) ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಲಾಗಿದೆ.
ಅಹಮದಾಬಾದ್‌ನಲ್ಲಿ 270 ಜನರನ್ನು ಬಲಿತೆಗೆದುಕೊಂಡ ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್‌ಲೈನರ್ ಅಪಘಾತವಾಗಿ ಕೆಲ ದಿನಗಳೂ ಕಳೆದಿರಲಿಲ್ಲ. ಕರಾಳತೆ ಇನ್ನೂ ಮಾಸದಿದ್ದರೂ, ಗುರುಗ್ರಾಮ್‌ನ AISATS ಕಚೇರಿಯಲ್ಲಿ ಪಾರ್ಟಿಯನ್ನು ಆಯೋಜಿಸಲಾಗಿತ್ತು ಎಂದು ವರದಿಯಾಗಿದೆ.
ಏರ್ ಇಂಡಿಯಾ 171 ವಿಮಾನದ ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ಕುಟುಂಬಗಳೊಂದಿಗೆ ಕಂಪನಿಯು ನಿಲ್ಲುತ್ತದೆ ಎಂದು AISATS ವಕ್ತಾರರು ತಿಳಿಸಿದ್ದಾರೆ. ಅಲ್ಲದೇ, ತಮ್ಮದೇ ಸಿಬ್ಬಂದಿಯ ಈ ವರ್ತನೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಇಂತಹ ಸಂಭ್ರಮಕ್ಕೆ ಇದು ಸೂಕ್ತ ಸಮಯವಲ್ಲ ಎಂದು ನೆಟ್ಟಿಗರು ಕಾಮೆಂಟ್ ಮಾಡಿ ತರಾಟೆಗೆ ತೆಗೆದುಕೊಂಡಿದ್ದರು. ಇದನ್ನೂ ಓದಿ: ಮಧ್ಯಪ್ರದೇಶ ಸಿಎಂ ಬೆಂಗಾವಲು ಪಡೆಯ 19 ವಾಹನಗಳಿಗೆ ನೀರು ಮಿಶ್ರಿತ ಡೀಸೆಲ್ ತುಂಬಿದ ಬಂಕ್ ಸಿಬ್ಬಂದಿ!
ಇಂತಹ ನಡವಳಿಕೆಯು ನಮ್ಮ ಮೌಲ್ಯಗಳಿಗೆ ತಕ್ಕುದಲ್ಲ. ನಾವು ಸಹಾನುಭೂತಿ, ವೃತ್ತಿಪರತೆ ಮತ್ತು ಹೊಣೆಗಾರಿಕೆಗೆ ಬದ್ಧರಾಗಿದ್ದೇವೆ. ಈ ಲೋಪಕ್ಕೆ ಕಾರಣರಾದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ವಕ್ತಾರರು ಸ್ಪಷ್ಟಪಡಿಸಿದ್ದಾರೆ.
ಚಿಕ್ಕಬಳ್ಳಾಪುರ: ವಿಮಾನ ದುರಂತದಲ್ಲಿ ಪ್ರಧಾನಿಗಳ (Prime Minister) ಪಾತ್ರ ಏನಾದ್ರು ಇತ್ತಾ? ಪ್ರಧಾನಿ ಹೋಗಿ ಇಂಜಿನ್ ಚೆಕ್ ಮಾಡಲು ಸಾಧ್ಯನಾ..? ಅಂತ ಕುಡಚಿ ಕ್ಷೇತ್ರದ ಮಾಜಿ ಶಾಸಕ ಪಿ. ರಾಜೀವ್ (P Rajeev) ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.
PM visits a crash site of the AI-171 flight that met with an accident at Ahmedabad, in Gujarat on June 13, 2025.
ಅಮಹದಾಬಾದ್ ವಿಮಾನ ದುರಂತಕ್ಕೆ ಇಡೀ ರಾಷ್ಟ್ರ ಕಂಬನಿ ಮಿಡಿಯುತ್ತಿದೆ. ಎಲ್ಲರಿಗೂ ನೋವಿದೆ. ಬೆಂಗಳೂರಿನ ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರ, ಗೃಹ ಇಲಾಖೆ, ಇಂಟೆಲಿಜೆನ್ಸ್ ನಿರ್ಲಕ್ಷ್ಯ ಇದೆ. ಬಂದೋಬಸ್ತ್ ಹೇಗೆ ಮಾಡಬೇಕು ಎಂಬ ಪೊಲೀಸ್ ಗೈಡ್‌ಲೈನ್ಸ್ ಇದೆ. ವಿಮಾನ ದುರಂತದಲ್ಲಿ ಪ್ರಧಾನಿಗಳ ಪಾತ್ರ ಏನಾದ್ರೂ ಇತ್ತಾ? ಪ್ರಧಾನಿ ಹೋಗಿ ಇಂಜಿನ್ ಚೆಕ್ ಮಾಡಲು ಸಾಧ್ಯನಾ..? ಅಂತ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಹೆದರಿ ಬಂಕರ್‌ನಲ್ಲಿ ಕುಳಿತಿದ್ದೆವು, ರಸ್ತೆಗೆ ಇಳಿಯಲ್ಲ – ಇರಾನ್ ದಾಳಿಯ ಭೀಕರತೆ ಬಿಚ್ಚಿಟ್ಟ ಕರ್ನಾಟಕದ ಮಹಿಳೆ
ಕಾಂಗ್ರೆಸ್‌ನವರು ರಾಜಕೀಯ ಹೊಣೆಗಾರಿಕೆಗೂ ಟೆಕ್ನಿಕಲ್ ವಿಂಗ್‌ಗೂ ವ್ಯತ್ಯಾಸ ತಿಳ್ಕೋಬೇಕಲ್ವಾ? ಇಲ್ಲವಾದಲ್ಲಿ ಯಾವ ರೀತಿ ನಾವ್ ನಗಬೇಕು ಹೇಳಿ? ತಮ್ಮ ತಪ್ಪನ್ನ ಒಪ್ಪಿಕೊಳ್ಳುವ ಬದ್ಧತೆ ತೋರಿಸಿ ಎಂದು ವಿಪಕ್ಷಗಳಿಗೆ ಕುಟುಕಿದ್ದಾರೆ.
– ಗೃಹ ಸಚಿವರು ಅಪಘಾತಗಳು ನಡೆಯುತ್ತಿರುತ್ತವೆ ಎಂಬರ್ಥದಲ್ಲಿ ಮಾತನಾಡಿದ್ದಾರೆ: ಖರ್ಗೆ ಬೇಸರ
ಅಹಮದಾಬಾದ್: ಜೂನ್ 12ರಂದು ಏರ್ ಇಂಡಿಯಾ ವಿಮಾನ ದುರಂತ (Air India Plane Crash) ನಡೆದ ಅಹಮದಾಬಾದ್‌ನ ಮೇಘನಿ ನಗರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹಾಗೂ ಕರ್ನಾಟಕ ಡಿಸಿಎಂ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ನಾಯಕರೊಂದಿಗೆ ಭೇಟಿ ನೀಡಿದ್ದರು. ಇಲ್ಲಿನ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಿದ ಖರ್ಗೆ ಅವರು ದುರಂತದಲ್ಲಿ ಗಾಯಗೊಂಡವರ ಯೋಗಕ್ಷೇಮ ವಿಚಾರಿಸಿದರು. ಅಲ್ಲದೇ ಶೀಘ್ರ ಗುಣಮುಖರಾಗುವುದಾಗಿ ಗಾಯಾಳುಗಳಿಗೆ ಧೈರ್ಯತುಂಬಿದರು.
बड़े दुख के साथ कहना चाहता हूँ कि अहमदाबाद में बहुत बड़ा हादसा हुआ है, जो कि कभी भुलाया नहीं जा सकेगा। इस हादसे में बहुत से लोगों ने जान गंवाई है, उन सभी को मैं श्रद्धांजलि अर्पित करता हूँ।
इसके अलावा, मेडिकल कॉलेज के जिन छात्रों ने अपनी जान गँवाई है, उन्हें भी श्रद्धांजलि… pic.twitter.com/nGQZfkCOJD
ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಅಹಮದಾಬಾದ್ ಇತಿಹಾಸದಲ್ಲಿ ಮರೆಯಲಾಗದ ದುರ್ಘಟನೆ. ಹಲವಾರು ಜನ ಸಾವನ್ನಪ್ಪಿದ್ದಾರೆ. ಮೃತಪಟ್ಟ ಎಲ್ಲರಿಗೂ ಶ್ರದ್ಧಾಂಜಲಿ ಅರ್ಪಿಸುತ್ತೇನೆ. ಆಸ್ಪತ್ರೆ ವೈದ್ಯ ಡಾ. ವಿಠ್ಠಲ್ ಜೊತೆ ಚರ್ಚಿಸಿ ಗಾಯಾಳುಗಳ ಬಗ್ಗೆ ಮಾಹಿತಿ ಪಡೆದಿದ್ದೇನೆ. ಅವರ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದ್ದೇನೆ. ಈ ದುರಂತದಲ್ಲಿ ಏಕೈಕ ವ್ಯಕ್ತಿ ವಿಶ್ವಾಸ್ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ, ಅವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು. ಇದನ್ನೂ ಓದಿ: Ahmedabad Tragedy | ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಮಧ್ಯಂತರ ಪರಿಹಾರ ಘೋಷಿಸಿದ ಏರ್ ಇಂಡಿಯಾ
ಸರ್ಕಾರ ಗಂಭಿರವಾಗಿ ಪರಿಗಣಿಸಬೇಕು
ಮೃತರ ಕುಟುಂಬಗಳಿಗೆ ದೇವರು ದುಃಖ ಭರಿಸುವ ಶಕ್ತಿ ಕೊಡಲಿ. ದುರ್ಘಟನೆಯನ್ನ ಸರ್ಕಾರ ಗಂಭಿರವಾಗಿ ಪರಿಗಣಿಸಬೇಕು. ಇಂತಹದೆಲ್ಲ ನಡೆಯತ್ತವೆ ಎನ್ನುವಂತೆ ಹಗುವರಾಗಿ ಪರಿಗಣಿಸಬಾರದು. ನಮ್ಮ ಹಿರಿಯ ಮುಖಂಡರು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ದುರಂತಕ್ಕೂ ಮುನ್ನ ಇದೇ ವಿಮಾನ ಪ್ಯಾರಿಸ್‌ನಿಂದ ದೆಹಲಿಗೆ ಹಾರಾಟ ನಡೆಸಿತ್ತು!
ಕೇಂದ್ರ ಸರ್ಕಾರ ಯಾವುದನ್ನೂ ಲಘುವಾಗಿ ಪರಿಗಣಿಸಬಾರದು. ಗೃಹ ಸಚಿವರು ಅಪಘಾತಗಳು ನಡೆಯುತ್ತಿರುತ್ತವೆ, ತಪ್ಪಿಸಲಾಗಲ್ಲ ಎಂಬರ್ಥದಲ್ಲಿ ಮಾತಾಡಿದ್ದಾರೆ. ನಾವು ಈಗಲೇ ಏನು ಹೇಳಲು ಸಾಧ್ಯವಿಲ್ಲ. ಸುಮ್ಮನೆ ಆರೋಪ ಮಾಡೋದಕ್ಕೂ ಸಾಧ್ಯವಿಲ್ಲ. ಬ್ಲ್ಯಾಕ್‌ಬಾಕ್ಸ್‌ನಲ್ಲಿ ಏನಿದೆ ಅಂತ ಗೊತ್ತಾಗಬೇಕು. ಸೂಕ್ತ ತನಿಖೆ ನಂತರ ಯಾರು ಹೊಣೆಗಾರರು ಗೊತ್ತಾಗುತ್ತೆ ಎಂದು ವಿವರಿಸಿದರು. ಇದನ್ನೂ ಓದಿ: ಏರ್ ಇಂಡಿಯಾ ವಿಮಾನ ದುರಂತ ತನಿಖೆಗೆ ಉನ್ನತ ಮಟ್ಟದ ಸಮಿತಿ – 3 ತಿಂಗಳ ಡೆಡ್‌ಲೈನ್: ಸಚಿವ ರಾಮಮೋಹನ್ ನಾಯ್ಡು
ಆರೋಪ ಮಾಡುವ ಸಮಯವಲ್ಲ
ಇದೇ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಮಾತನಾಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದೇವೆ. ಘಟನೆಯಿಂದ ಬಹಳ ದುಃಖ ಆಗ್ತಿದೆ. ಯಾವುದೇ ದುರಂತ ಆಗಬಾರದು. ಟೆಕ್ನಿಕಲ್ ಸಮಸ್ಯೆಯೋ.. ಏನು ಅಂತಾ ಹೇಳಕ್ಕಾಗಲ್ಲ. ಬೇರೆ ಅವರ ಮೇಲೆ ಆರೋಪ ಮಾಡುವ ಸಮಯವೂ ಇದಲ್ಲ ಎಂದು ನುಡಿದರು. ಇದನ್ನೂ ಓದಿ: Plane Crash | ಇಂಜಿನಿಯರ್ ಆಗುವ ಕನಸು ಕಂಡಿದ್ದ ಆಟೋ ಚಾಲಕನ ಮಗಳ ದುರಂತ ಅಂತ್ಯ
ನವದೆಹಲಿ: ಅಹಮದಾಬಾದ್‌ನಲ್ಲಿ (Ahmedabad) ಪತನಗೊಂಡ ಏರ್ ಇಂಡಿಯಾ (Air India) ವಿಮಾನ ಅಪಘಾತಕ್ಕೂ ಮುನ್ನ ಪ್ಯಾರಿಸ್‌ನಿಂದ ದೆಹಲಿಗೆ (Delhi) ಹಾರಾಟ ನಡೆಸಿತ್ತು ಎಂದು ನಾಗರಿಕ ವಿಮಾನಯಾನ ಕಾರ್ಯದರ್ಶಿ ಸಮೀರ್ ಕುಮಾರ್ ಸಿನ್ಹಾ (Samir Kumar Sinha) ಮಾಹಿತಿ ನೀಡಿದ್ದಾರೆ.
ಏರ್ ಇಂಡಿಯಾ ವಿಮಾನ ದುರಂತ ನಡೆದ 48 ಗಂಟೆ ಬಳಿಕ ಮೊದಲ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜೂನ್ 12ರಂದು ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗುವ ಮುನ್ನ ಇದೇ ವಿಮಾನವು ಪ್ಯಾರಿಸ್‌ನಿಂದ (Paris) ದೆಹಲಿಗೆ ಹಾಗೂ ದೆಹಲಿಯಿಂದ ಅಹಮದಾಬಾದ್‌ಗೆ ಯಾವುದೇ ಸಮಸ್ಯೆಗಳಿಲ್ಲದೆ ಹಾರಾಟ ನಡೆಸಿತ್ತು ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಏರ್ ಇಂಡಿಯಾ ವಿಮಾನ ದುರಂತ ತನಿಖೆಗೆ ಉನ್ನತ ಮಟ್ಟದ ಸಮಿತಿ – 3 ತಿಂಗಳ ಡೆಡ್‌ಲೈನ್: ಸಚಿವ ರಾಮಮೋಹನ್ ನಾಯ್ಡು
ಇದೇ ವೇಳೆ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಮಾತನಾಡಿ, ಸದ್ಯ ಬ್ಲ್ಯಾಕ್‌ಬಾಕ್ಸ್‌ನ್ನು ಡಿಕೋಡ್ ಮಾಡಲಾಗುತ್ತಿದ್ದು, ದುರಂತಕ್ಕೂ ಮುನ್ನ ವಿಮಾನದಲ್ಲಿ ಆಗಿದ್ದಾದರೂ ಏನು ಎನ್ನುವ ಮಾಹಿತಿ ತಿಳಿದುಬರಲಿದೆ. ಶುಕ್ರವಾರ ಸಂಜೆ ಬ್ಲ್ಯಾಕ್‌ಬಾಕ್ಸ್ ಪತ್ತೆಯಾಗಿದ್ದು. ಅಪಘಾತಕ್ಕೆ ನಿಖರವಾದ ಕಾರಣ ಇದರಿಂದ ತಿಳಿದುಬರಲಿದೆ. ಎಎಐಬಿ ತನ್ನ ತನಿಖೆಯನ್ನು ಪೂರ್ಣಗೊಳಿಸಿದ ಬಳಿಕ ವರದಿ ನೀಡಲಿದ್ದು, ಏನಾಗಿದೆ ಎಂಬುದು ಗೊತ್ತಾಗಲಿದೆ. ಘಟನೆ ಬಗ್ಗೆ ಬ್ರಿಟನ್, ಅಮೆರಿಕ ಸೇರಿದಂತೆ ಕೇಂದ್ರದ ಉನ್ನತ ಮಟ್ಟದ ಸಮಿತಿ ಸಹ ತನಿಖೆ ನಡೆಸುತ್ತಿದೆ ಎಂದರು.
ಜೂನ್ 12ರಂದು ಅಹಮದಾಬಾದ್ ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟ ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತ್ತು. ಪರಿಣಾಮ ವಿಮಾನ ನಿಲ್ದಾಣದ ಸಮೀಪದ ಮೇಘನಿ ನಗರದ ಬಿಜೆ ಎಂಬಿಬಿಎಸ್ ಕಾಲೇಜಿನ ಹಾಸ್ಟೆಲ್ ಮೇಲೆ ಬಿದ್ದಿತ್ತು. ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್, ಒಬ್ಬ ಕೆನಡಾ ಮತ್ತು ಏಳು ಪೋರ್ಚುಗೀಸ್ ಪ್ರಜೆಗಳು 12 ಸಿಬ್ಬಂದಿ ಇದ್ದರು. ಈ ಪೈಕಿ 241 ಜನ ಸಾವನ್ನಪ್ಪಿದ್ದು, ಓರ್ವ ಪ್ರಯಾಣಿಕ ಪವಾಡ ಸದೃಶ್ಯ ಪಾರಾಗಿದ್ದಾರೆ. ಜೊತೆಗೆ ಬಿಜೆ ಮೆಡಿಕಲ್ ಕಾಲೇಜಿನ 5 ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು. ಇನ್ನೂ ಭಾರೀ ಬೆಂಕಿ ಹೊತ್ತಿಕೊಂಡ ಪರಿಣಾಮ ಅಲ್ಲಿದ್ದ 19 ಸ್ಥಳೀಯರು ಸಾವಿಗೀಡಾಗಿದ್ದರು.ಇದನ್ನೂ ಓದಿ: Plane Crash | ಇಂಜಿನಿಯರ್ ಆಗುವ ಕನಸು ಕಂಡಿದ್ದ ಆಟೋ ಚಾಲಕನ ಮಗಳ ದುರಂತ ಅಂತ್ಯ
ಅಹಮದಾಬಾದ್: ಏರ್ ಇಂಡಿಯಾ (Air India) ವಿಮಾನ ಅಪಘಾತದಲ್ಲಿ ನಗುಮೊಗದ ಗಗನಸಖಿ ಮನೀಷಾ ಥಾಪಾ (27) ದುರಂತ ಅಂತ್ಯ ಕಂಡಿದ್ದಾರೆ.
ಮನೀಷಾ ಥಾಪಾ (Manisha Thapa), ನೇಪಾಳ ಮೂಲದವರಾದರೂ, ಹುಟ್ಟಿ ಬೆಳೆದಿದ್ದೆಲ್ಲಾ ಪಾಟ್ನಾದಲ್ಲಿ. ಮೊದಲು ಇಂಡಿಗೋದಲ್ಲಿ ಗ್ರೌಂಡ್ ಸ್ಟಾಫ್ ಆಗಿ ವೃತ್ತಿಜೀವನ ಆರಂಭಿಸಿದ ಅವರು ಬಳಿಕ ಆಕಾಶ್ ಏರ್, ನಂತರ ಏರ್ ಇಂಡಿಯಾ ಸೇರಿದಲ್ಲಿ ಗಗನಸಖಿಯಾಗಿದ್ದರು. ಏರ್ ಇಂಡಿಯಾ ಸೇರಿದ ಬಳಿಕ ಹೆಚ್ಚಾಗಿ ಲಂಡನ್, ಆಸ್ಟ್ರೇಲಿಯಾ ಮಾರ್ಗದಲ್ಲಿ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ: ದುರಂತಕ್ಕೀಡಾದ ಏರ್ ಇಂಡಿಯಾ ವಿಮಾನದ 12ರಲ್ಲಿ 9 ಸಿಬ್ಬಂದಿ ಮುಂಬೈ ವಾಸಿಗಳು
ಏರ್ ಇಂಡಿಯಾ ಗಗನಸಖಿಯಾಗಿದ್ದ (Air Hostess) ಮನೀಷಾ ಸದಾ ಹಸನ್ಮುಖಿಯಾಗಿದ್ದರು. ಮನೀಷಾ ಕೋಪ ಮಾಡ್ಕೊಂಡಿದ್ದನ್ನು ನೋಡೇ ಇಲ್ಲ. ಎಲ್ಲದಕ್ಕೂ ನಗುವಿನ ಮೂಲಕವೇ ಉತ್ತರಿಸುತ್ತಿದ್ದಳು. ಅಲ್ಲದೇ ಕಲಿಕೆಯಲ್ಲಿಯೂ ಸದಾ ಮುಂದಿದ್ದರು ಎಂದು ಅವರ ಸ್ನೇಹಿತರು ಆಕೆಯನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಏರ್ ಇಂಡಿಯಾ ವಿಮಾನ ದುರಂತ – ಸಾವಿನ ಸಂಖ್ಯೆ 274ಕ್ಕೆ ಏರಿಕೆ
ಇದೀಗ ಮನೀಷಾ ಸಾವಿನ ವಿಚಾರ ಕೇಳಿ, ಆಕೆ ತಾಯಿಯ ಆರೋಗ್ಯದಲ್ಲಿ ಏರುಪೇರಾಗಿದ್ದು, ಸದ್ಯ ವೈದ್ಯರ ಆರೈಕೆಯಲ್ಲಿದ್ದಾರೆ. ಸದಾ ಆಗಸದಲ್ಲಿ ಹಾರಬೇಕೆಂದು ಕನಸುಕಂಡಿದ್ದ 10 ಗಗನಸಖಿರು ವಿಮಾನ ದುರಂತದಲ್ಲಿ ಬದುಕು ಅಂತ್ಯಗೊಳಿಸಿರುವುದು ಹೃದಯವಿದ್ರಾಕ ಸಂಗತಿಯಾಗಿದೆ. ಇದನ್ನೂ ಓದಿ: ಅಹಮದಾಬಾದ್ ವಿಮಾನ ಪತನ – 5 ತಂಡಗಳಿಂದ ತನಿಖೆ
ಏನಿದು ಘಟನೆ?
ಅಹಮದಾಬಾದ್ (Ahmedabad) ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟ ಏರ್‌ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತು. ಪರಿಣಾಮ ಅಹಮದಾಬಾದ್ ಸಮೀಪದ ಮೇಘನಿ ನಗರದ ಬಿಜೆ ಎಂಬಿಬಿಎಸ್ ಕಾಲೇಜು ಸಂಕೀರ್ಣಕ್ಕೆ ಡಿಕ್ಕಿ ಹೊಡೆದಿತ್ತು. ವಿಮಾನದಲ್ಲಿ ಪೈಲಟ್, ಸಿಬ್ಬಂದಿ ಸೇರಿ ಒಟ್ಟು 242 ಪ್ರಯಾಣಿಕರಿದ್ದರು. ಈ ಪೈಕಿ 241 ಜನ ಸಾವನ್ನಪ್ಪಿದ್ದು, ಓರ್ವ ಪ್ರಯಾಣಿಕ ಪವಾಡ ಸದೃಶವಾಗಿ ಪಾರಾಗಿದ್ದಾರೆ.
ಅಹಮದಾಬಾದ್: ತಾಂತ್ರಿಕ ದೋಷದಿಂದ ಅಹಮದಾಬಾದ್‌ನ (Ahmedabad) ಮೇಘಾನಿಯಲ್ಲಿ ಏರ್ ಇಂಡಿಯಾ ವಿಮಾನ (Air India Flight) ಪತನಗೊಂಡ ಪರಿಣಾಮ 12 ಸಿಬ್ಬಂದಿ ಹಾಗೂ 230 ಪ್ರಯಾಣಿಕರು ಮೃತಪಟ್ಟಿದ್ದಾರೆ. ಮೃತಪಟ್ಟ 12 ಸಿಬ್ಬಂದಿ ಪೈಕಿ 9 ಮಂದಿ ಸಿಬ್ಬಂದಿ ಮುಂಬೈ (Mumbai) ವಾಸಿಗಳಾಗಿದ್ದಾರೆ.
ಮೃತಪಟ್ಟ 12 ಸಿಬ್ಬಂದಿ ಪೈಕಿ 9 ಸಿಬ್ಬಂದಿ ಮುಂಬೈವಾಸಿಗಳಾಗಿದ್ದು, ಮುಂಬೈನಲ್ಲೇ ನೆಲೆಸಿದ್ದರು. ಇನ್ನುಳಿದ ಮೂವರು ಮಹಾರಾಷ್ಟ್ರ, ಬಿಹಾರ ಹಾಗೂ ಮಣಿಪುರದವರಾಗಿದ್ದಾರೆ. ಘಟನೆಯಲ್ಲಿ ಬಿಜೆ ಮೆಡಿಕಲ್ ಹಾಸ್ಪಿಟಲ್ ಎಂಬಿಬಿಎಸ್‌ನ 10 ವಿದ್ಯಾರ್ಥಿಗಳು ಸೇರಿದಂತೆ 274 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಇದನ್ನೂ ಓದಿ: 1.57 ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ ಕೇರ್ ಟೇಕರ್ ಲೇಡಿ ಅರೆಸ್ಟ್