Tag: ವಿಮಾನ

  • ಹವಾಮಾನ ವೈಪರೀತ್ಯ – 24 ಗಂಟೆಯಲ್ಲಿ 250ಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗಿತ!

    ಹವಾಮಾನ ವೈಪರೀತ್ಯ – 24 ಗಂಟೆಯಲ್ಲಿ 250ಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗಿತ!

    – 80 ಕಿಮೀ ವೇಗದಲ್ಲಿ ಬೀಸಿದ ಗಾಳಿ ರಭಸಕ್ಕೆ ಆಟಿಕೆಯಂತಾದ ವಿಮಾನ

    ವಾಷಿಂಗ್ಟನ್‌: ತೀವ್ರ ಹವಾಮಾನ ವೈಪರೀತ್ಯದಿಂದಾಗಿ (Severe Weather) ಡಲ್ಲಾಸ್ ಫೋರ್ಟ್ ವರ್ತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (DFW International Airport) ಕಳೆದ 24 ಗಂಟೆಯಲ್ಲಿ 250ಕ್ಕೂ ಹೆಚ್ಚಿನ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಿರುವ ಘಟನೆ ನಡೆದಿದೆ.

    ಟೆಕ್ಸಾಸ್‌ನತ್ತ ಬೀಸುತ್ತಿದ್ದ ಚಂಡಮಾರುತ ಹಾಗೂ ಬಿರುಗಾಳಿಯ ವಾತಾವರಣವು ಡಿಎಫ್‌ಡಬ್ಲ್ಯೂನ 700ಕ್ಕೂ ಹೆಚ್ಚು ವಿಮಾನಗಳ ಮೇಲೆ ಪರಿಣಾಮ ಬೀರಿದೆ. ಈ ಕುರಿತ ವೀಡಿಯೋವನ್ನು ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ವಿಮಾನಯಾನ ಸಂಸ್ಥೆ ಹಂಚಿಕೊಂಡಿದೆ. ಗಂಟೆಗೆ 80 ಕಿಮೀ ವೇಗದಲ್ಲಿ ಬೀಸುತ್ತಿದ್ದ ಗಾಳಿಯ ರಭಸಕ್ಕೆ ಅಮೇರಿಕನ್ ಏರ್‌ಲೈನ್ಸ್‌ನ (American Airlines) 737-800 ವಿಮಾನವು ಆಟಿಕೆಯಂತೆ ಆಡುತ್ತಿರುವುದು ಕಂಡುಬಂದಿದೆ.

    ವರದಿಗಳ ಪ್ರಕಾರ, ಡಲ್ಲಾಸ್-ಫೋರ್ಟ್ ವರ್ತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕಳೆದ 24 ಗಂಟೆಯಲ್ಲಿ ಸುಮಾರು 250 ವಿಮಾನಗಳ ಹಾರಾಟವನ್ನು ರದ್ದುಗೊಳಿಸಿದೆ. 500ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ವಿಳಂಬಗೊಳಿಸಿದೆ ಎಂದು ತಿಳಿದುಬಂದಿದೆ.

    ಹವಾಮಾನ ಪರಿಸ್ಥಿತಿ ಹೇಗಿದೆ?
    ಡಲ್ಲಾಸ್-ಫೋರ್ಟ್ ವರ್ತ್ ಮೂಲಕ ಪೂರ್ವ ಟೆಕ್ಸಾಸ್‌ನತ್ತ ತೀವ್ರ ಚಂಡಮಾರುತ ಸಂಭವಿಸಿದೆ ಸುಮಾರು 3 ಸೆ.ಮೀ ನಷ್ಟು ಆಲಿಕಲ್ಲು ಸಹಿತ ಮಳೆ ಉಂಟಾಗಿದೆ. ಮುಂದಿನ ಕೆಲ ಗಂಟೆಗಳ ಕಾಲ 2 ಸೆ.ಮೀ ನಷ್ಟು ಮಳೆಯಾಗುವ ಸಾಧ್ಯತೆಯಿದೆ. ಆದ್ದರಿಂದ ಭಾರೀ ಮಳೆಯು ಪ್ರವಾಹ ಸಮಸ್ಯೆಗಳನ್ನು ಉಂಟುಮಾಡಬಹುದು, ಮುನ್ನೆಚ್ಚರಿಕೆ ತೆಗೆದುಕೊಳ್ಳಿ, ಪ್ರವಾಹ ಪರಿಸ್ಥಿತಿಯಲ್ಲಿ ವಿಮಾನಗಳ ಹಾರಾಟ ನಡೆಸದಂತೆ ಎನ್‌ಡಬ್ಲ್ಯೂಎಸ್‌ ಫೋರ್ಟ್‌ ವರ್ತ್‌ ತನ್ನ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

    ಸದ್ಯ ಚಂಡಮಾರುತರಿಂದ ಟೆಕ್ಸಾಸ್‌ನಲ್ಲಿ ಸುಮಾರು 10 ಲಕ್ಷ ಜನರು ವಿದ್ಯುತ್‌ ಸಮಸ್ಯೆ ಅನುಭವಿಸುವಂತಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

  • ಸ್ಟೆಪ್‌ಲ್ಯಾಡರ್ ಎಡವಟ್ಟು- ವಿಮಾನದಿಂದ ಇಳಿಯಲು ಯತ್ನಿಸಿ ಕೆಳಗೆ ಬಿದ್ದ ಸಿಬ್ಬಂದಿ ವೀಡಿಯೋ ವೈರಲ್‌

    ಸ್ಟೆಪ್‌ಲ್ಯಾಡರ್ ಎಡವಟ್ಟು- ವಿಮಾನದಿಂದ ಇಳಿಯಲು ಯತ್ನಿಸಿ ಕೆಳಗೆ ಬಿದ್ದ ಸಿಬ್ಬಂದಿ ವೀಡಿಯೋ ವೈರಲ್‌

    ಜಕಾರ್ತ: ವಿಮಾನದಿಂದ ಇಳಿಯುತ್ತಿದ್ದ ಸಂದರ್ಭದಲ್ಲಿ ಸ್ಟೆಪ್‌ಲ್ಯಾಡರ್ (Stepladder) ಅನ್ನು ಮುಂದಕ್ಕೆ  ತಳ್ಳಿದ ಪರಿಣಾಮ ಸಿಬ್ಬಂದಿ‌ಯೊಬ್ಬರು ವಿಮಾನದಿಂದ ಕೆಳಗೆ ಬಿದ್ದ ಘಟನೆಯೊಂದು ಇಂಡೋನೇಷ್ಯಾದ ಜಕಾರ್ತ ವಿಮಾನ ನಿಲ್ದಾಣದಲ್ಲಿ  ನಡೆದಿದೆ.

    ಸಾಮಾನ್ಯವಾಗಿ ವಿಮಾನದಿಂದ ಇಳಿಯಲು ಹಾಗೂ ಹತ್ತಲು ಕೃತಕ ಏಣಿಯನ್ನು ಬಳಸುತ್ತಾರೆ. ಅಂತೆಯೇ ಇಲ್ಲಿಯೂ ಏಣಿಯನ್ನು ಇಡಲಾಗಿದ್ದು, ಕೆಲ ಹೊತ್ತಿನ ಬಳಿಕ ಸಿಬ್ಬಂದಿ ಅಲ್ಲಿಂದ ತೆಗೆದಿದ್ದಾರೆ. ಇದನ್ನು ಗಮನಿಸದ ವಿಮಾನದ ಒಳಗಡೆ ಇದ್ದ ಸಿಬ್ಬಂದಿ ಇಳಿಯಲು ಯತ್ನಿಸಿದ್ದಾರೆ. ಮೆಟ್ಟಿಲು ಇದೆ ಎಂದು ಭಾವಿಸಿ ಕಾಲಿಟ್ಟಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ.

    ಇಂಡೋನೇಷ್ಯಾದ ಟ್ರಾನ್ಸ್‌ನುಸಾ  ವಿಮಾನದಿಂದ (Indonesia’s Transnusa plane) ವ್ಯಕ್ತಿ ಹೊರಬರುತ್ತಿದ್ದಂತೆಯೇ ಕೆಳಗಡೆ ಇದ್ದ ಇತರ ಇಬ್ಬರು ಕಾರ್ಮಿಕರು ಸ್ಟೆಪ್‌ಲ್ಯಾಡರ್ ಅನ್ನು ಮುಂದಕ್ಕೆ ತಳ್ಳಿದ್ದಾರೆ. ಪರಿಣಾಮ ಈ ದುರ್ಘಟನೆ ನಡೆದಿದೆ. ಘಟನೆಯಿಂದ ಸಿಬ್ಬಂದಿಗೆ ಯಾವುದೇ ಗಾಯಗಳಾಗಿಲ್ಲ ಎಂಬುದಾಗಿ ವರದಿಯಾಗಿದೆ.

    ಈ ಸಿಬ್ಬಂದಿ ವಿಮಾನದಿಂದ ಕೆಳಕ್ಕೆ ಬೀಳುತ್ತಿರುವ ವೀಡಿಯೋವನ್ನು ವೈಮಾನಿಕ ಸಲಹೆಗಾರ ಸಂಜಯ್ ಲಾಜರ್ ಅವರು ತಮ್ಮ X ಖಾತೆಯಲ್ಲಿ ಹಂಚಿಕೊಂಡ ಬಳಿಕ ನೆಟ್ಟಿಗರ ಗಮನಸೆಳೆಯಿತು. ಅಲ್ಲದೇ ಕೂಡಲೇ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗಿದೆ. ವಿಡಿಯೋ ನೋಡಿದ ಜನ ಬೆಚ್ಚಿಬಿದ್ದಿದ್ದಾರೆ.

    ವೈರಲ್‌ ವೀಡಿಯೋದಲ್ಲೇನಿದೆ..?: ಹಸಿರು ಜಾಕೆಟ್ ಧರಿಸಿದ ಸಿಬ್ಬಂದಿ Airbus A320 ಒಳಗಡೆ ಇದ್ದವರ ಜೊತೆ ಮಾತನಾಡಿಕೊಂಡು ಹೊರಬರಲು ಪ್ರಯತ್ನಿಸುತ್ತಿರುತ್ತಾರೆ. ಇತ್ತ ವಿಮಾನದಿಂದ ಇಳಿಯಲು ಬಳಸುವ ಏಣಿಯನ್ನು ಇಬ್ಬರು ತಳ್ಳಿಕೊಂಡು ಹೋಗುತ್ತಿದ್ದು, ಇದೇ ಸಂದರ್ಭದಲ್ಲಿ ಸಿಬ್ಬಂದಿ ಇಳಿಯಲು ಯತ್ನಿಸಿ ಕೆಳಗೆ ಬೀಳುತ್ತಿರುವುದನ್ನು ಕಾಣಬಹುದಾಗಿದೆ. ಅಲ್ಲದೇ ಸಿಬ್ಬಂದಿ ಕೈಯಲ್ಲಿದ್ದ ಪೇಪರ್‌ಗಳು ಚೆಲ್ಲಾಪಿಲ್ಲಿಯಾಗಿ ಬೀಳುವುದನ್ನು ಕೂಡ ನಾವು ವೀಡಿಯೋದಲ್ಲಿ ಕಾಣಹುದಾಗಿದೆ.

    ವಿಮಾನದ ಬಾಗಿಲು ಹಾಕದೇ ಸ್ಟೆಪ್‌ಲ್ಯಾಡರ್ ಅನ್ನು ಹೇಗೆ ತೆಗೆದರು ಎಂದು ವೀಡಿಯೋ ನೋಡಿದ ನೆಟ್ಟಿಗರು ಪ್ರಶ್ನಿಸಿದ್ದಾರೆ. ಯಾವುದೇ ಸೂಚನೆಯಿಲ್ಲದೆ ಏಣಿಯನ್ನು ತೆಗೆದುಹಾಕಲಾಗಿದೆಯೇ? ಅವರು ಸುರಕ್ಷಿತವಾಗಿದ್ದಾರೆ ಎಂದು ಭಾವಿಸುವುದಾಗಿ ಇನ್ನೊಬ್ಬ ಬಳಕೆದಾರರು ಬರೆದುಕೊಂಡಿದ್ದಾರೆ.

    TransNusa ಜಕಾರ್ತದಲ್ಲಿ ಪ್ರಧಾನ ಕಛೇರಿಯನ್ನು ಹೊಂದಿರುವ ಕಡಿಮೆ-ವೆಚ್ಚದ ವಿಮಾನವಾಗಿದೆ. ದೇಶೀಯವಾಗಿ ಜೊತೆಗೆ ಚೀನಾ, ಮಲೇಷಿಯಾ ಮತ್ತು ಸಿಂಗಾಪುರಕ್ಕೆ ವಿಮಾನಗಳನ್ನು ಹೊಂದಿದೆ.

  • ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ಕಳಚಿಬಿತ್ತು ವಿಮಾನದ ಟೈರ್- 2 ಕಾರುಗಳು ಜಖಂ

    ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ಕಳಚಿಬಿತ್ತು ವಿಮಾನದ ಟೈರ್- 2 ಕಾರುಗಳು ಜಖಂ

    ಸ್ಯಾನ್ ಫ್ರಾನ್ಸಿಸ್ಕೋ: ಜಪಾನ್‌ಗೆ (japan) ಹೊರಟಿದ್ದ ಯುನೈಟೆಡ್ ಏರ್‌ಲೈನ್ಸ್ ಜೆಟ್‌ಲೈನರ್ ಸ್ಯಾನ್ ಫ್ರಾನ್ಸಿಸ್ಕೋದಿಂದ (San Francisco) ಟೇಕಾಫ್ ಆಗಿತ್ತು. ಹೀಗೆ ಟೇಕಾಫ್‌ ಆದ ಕೆಲವೇ ನಿಮಿಷಗಳಲ್ಲಿ ವಿಮಾನದ ಟೈರ್‌ ಕಳಚಿಬಿದ್ದಿದೆ. ಪರಿಣಾಮ 2 ಕಾರುಗಳು ಜಖಂಗೊಂಡಿವೆ.

    ವಿಮಾನ ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ಟೈರ್‌ ಕಳಚಿ ಬೀಳುತ್ತಿರುವ ವೀಡಿಯೋ ಸೆರೆಯಾಗಿದ್ದು, ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗುತ್ತಿದೆ. ಟೇಕ್‌ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ವಿಮಾನವು ತನ್ನ 6 ಟೈಯರ್‌ಗಳಲ್ಲಿ ಒಂದು ಕಳಚಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಮಾನವನ್ನು ಲಾಸ್ ಏಂಜಲೀಸ್‌ನಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ.

    ಈ ಸಂಬಂಧ ವಿಮಾನ ನಿಲ್ದಾಣದ ವಕ್ತಾರ ಡೌಗ್ ಯಾಕೆಲ್ ಅವರು, ಸ್ಯಾನ್ ಫ್ರಾನ್ಸಿಸ್ಕೊ ​​​​ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿದ್ದ ಕಾರುಗಳ ಮೇಲೆ ಟೈರ್‌ ಬಿದ್ದಿದೆ. ಪರಿಣಾಮ ಕಾರುಗಳು ಜಖಂಗೊಂಡಿವೆ. ಆದರೆ ಯಾರಿಗೂ ಹಾನಿಯಾಗಿಲ್ಲ. ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸೆಕ್ಸ್‌ಗೆ ನಿರಾಕರಿಸಿದ್ದ ವ್ಯಕ್ತಿ ಸ್ನೇಹಿತರಿಂದಲೇ ಹತ್ಯೆ – 9 ದಿನಗಳ ನಂತ್ರ ನೀರಿಲ್ಲದ ಕೊಳದಲ್ಲಿ ಶವ ಪತ್ತೆ

    ವಿಮಾನದಲ್ಲಿ 235 ಪ್ರಯಾಣಿಕರು ಮತ್ತು 14 ಸಿಬ್ಬಂದಿ ಇದ್ದರು. ಘಟನೆ ನಡೆದ ಕೂಡಲೇ ಅವರನ್ನು ಪ್ರಯಾಣಿಕರನ್ನು ಮತ್ತೊಂದು ವಿಮಾನಕ್ಕೆ ಸ್ಥಳಾಂತರಿಸಲಾಯಿತು ಎಂದು ಯುನೈಟೆಡ್ ತಿಳಿಸಿದೆ. ಬೋಯಿಂಗ್ 777ಗಳ ಎರಡು ಮುಖ್ಯ ಲ್ಯಾಂಡಿಂಗ್ ಗೇರ್‌ಗಳಲ್ಲಿ ತಲಾ 6 ಟೈರ್‌ಗಳನ್ನು ಹೊಂದಿವೆ. ಅವುಗಳಲ್ಲಿ ಒಂದು ಕಳಚಿಕೊಂಡಿದೆ ಎಂಬುದಾಗಿ ವರದಿಯಾಗಿದೆ.

    ವಿಮಾನಗಳು ಟೈರ್‌ಗಳನ್ನು ಕಳೆದುಕೊಳ್ಳುವುದು ಇದು ಅಪರೂಪದ ಘಟನೆಯಾಗಿದೆ ಎಂದು ವಾಯುಯಾನ ತಜ್ಞರು ಹೇಳಿದ್ದಾರೆ.

  • ಆಸನಗಳು ಬಹುತೇಕ ಭರ್ತಿ – ಬೆಂಗಳೂರು ಟು ಅಯೋಧ್ಯೆ ವಿಮಾನ ಪ್ರಯಾಣಕ್ಕೆ ಭರ್ಜರಿ ಸ್ಪಂದನೆ

    ಆಸನಗಳು ಬಹುತೇಕ ಭರ್ತಿ – ಬೆಂಗಳೂರು ಟು ಅಯೋಧ್ಯೆ ವಿಮಾನ ಪ್ರಯಾಣಕ್ಕೆ ಭರ್ಜರಿ ಸ್ಪಂದನೆ

    ಬೆಂಗಳೂರು: ರಾಮ ಮಂದಿರ (Ram Mandir) ಲೋಕಾರ್ಪಣೆಯಾದ ಬಳಿಕ ಬೆಂಗಳೂರು (Bengaluru) ಮತ್ತು ಅಯೋಧ್ಯೆ (Ayodhya) ನಡುವಿನ ವಿಮಾನ ಪ್ರಯಾಣದ (Flight Travel) ಬೇಡಿಕೆ ಹೆಚ್ಚಾಗುತ್ತಿದೆ.

    ಕಳೆದ ನಾಲ್ಕು ವಾರಗಳಿಂದ ಎರಡು ನಗರಗಳ ನಡುವೆ ಸಂಚರಿಸುವ ವಿಮಾನದಲ್ಲಿ ಆಸನಗಳು ಬಹುತೇಕ ಭರ್ತಿಯಾಗುತ್ತಿದ್ದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಟೆಂಪಲ್‌ ಟೂರಿಸಂಗೆ (Temple Tourism) ಭರ್ಜರಿ ಸ್ಪಂದನೆ ಸಿಕ್ಕಿದೆ.

    ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮತ್ತು ಸ್ಪೈಸ್‌ಜೆಟ್ ಈ ಮಾರ್ಗದಲ್ಲಿ ಪ್ರತಿದಿನ ವಿಮಾನ ಸೇವೆ ನೀಡುತ್ತಿವೆ. ಕಡಿಮೆ ಸೀಟ್ ಬುಕ್‌ ಆಗಿದೆ ಎಂಬ ಕಾರಣ ನೀಡಿ ಇಲ್ಲಿಯವರೆಗೆ ಒಂದು ದಿನವೂ ವಿಮಾನದ ಸೇವೆಯನ್ನು ರದ್ದು ಮಾಡಿಲ್ಲ ಎಂದು ಈ ಕಂಪನಿಗಳು ಮಾಧ್ಯಮಕ್ಕೆ ತಿಳಿಸಿವೆ.

    ಜನವರಿ 22ರ ಹಿಂದಿನ ಬೇಡಿಕೆಗೆ ಹೋಲಿಸಿದರೆ ಅಯೋಧ್ಯೆಗೆ ಬುಕ್ಕಿಂಗ್‌ ಮಾಡುವವರ ಪ್ರಮಾಣ 100% ಏರಿಕೆಯಾಗಿದೆ. ಏಕಮುಖ ಸಂಚಾರಕ್ಕೆ 7,000 ರಿಂದ 11,000 ರೂಪಾಯಿಗಳ ನಡುವೆ ದರವಿದ್ದರೂ ಭಾರೀ ಬೇಡಿಕೆ ವ್ಯಕ್ತವಾಗುತ್ತಿದೆ ಎಂದು ಉದ್ಯಮದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 100 ಸ್ಥಾನವನ್ನೂ ಗೆಲ್ಲಲ್ಲ: ಖರ್ಗೆ ಭವಿಷ್ಯ

    ತೀರ್ಥಯಾತ್ರೆಗಳು ಮತ್ತು ಧಾರ್ಮಿಕ ಪ್ರವಾಸಗಳಲ್ಲಿ ಆಸಕ್ತಿ ಹೊಂದಿರುವ ಪ್ರಯಾಣಿಕರಿಂದ ಉತ್ತಮ ಬೇಡಿಕೆ ವ್ಯಕ್ತವಾಗುತ್ತಿದೆ. ಇದು ಸ್ಥಿರವಾದ ಬೆಳವಣಿಗೆಯನ್ನು ಸೂಚಿಸುತ್ತದೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಕ್ತಾರರು ತಿಳಿಸಿದ್ದಾರೆ. ಜನವರಿ 17 ರಿಂದ ಏರ್‌ ಇಂಡಿಯಾ ಸೇವೆ ಆರಂಭವಾಗಿದ್ದು ಇಲ್ಲಿಯವರೆಗೆ ಕಡಿಮೆ ಪ್ರಯಾಣಿಕರ ಕೊರತೆಯನ್ನು ಅನುಭವಿಸಿಲ್ಲ.

    ನೇರ ವಿಮಾನಗಳ ಜೊತೆಗೆ ಗ್ರಾಹಕರು ಲಕ್ನೋದವರೆಗೆ ವಿಮಾನದಲ್ಲಿ ತೆರಳಿ ನಂತರ ಅಯೋಧ್ಯೆಗೆ ರಸ್ತೆಯ ಮೂಲಕ ತೆರಳುತ್ತಿದ್ದಾರೆ. ಗಮನಿಸಲೇಬೇಕಾದ ಸಂಗತಿಯೆನೆಂದರೆ ಈ ಬೇಡಿಕೆ ಹಿರಿಯರ ವಿಭಾಗಕ್ಕೆ ಮಾತ್ರ ಸೀಮಿತವಾಗಿಲ್ಲ. ಯುವ ಜನತೆಯೂ ಅಯೋಧ್ಯೆ ವಿಮಾನ ಹತ್ತುತ್ತಿದ್ದಾರೆಂದು ಥಾಮಸ್‌ ಕುಕ್‌ ಭಾರತದ ಮುಖ್ಯಸ್ಥ ರಾಜೀವ್ ಕಾಳೆ ಹೇಳಿದ್ದಾರೆ. ಇದನ್ನೂ ಓದಿ: ಶಾಲೆಯಲ್ಲಿ ಧರ್ಮ ಅವಹೇಳನ ಆರೋಪ- ಮೀಡಿಯಾಗೆ ಹೇಳಿಕೆ ಕೊಟ್ಟ ಶಿಕ್ಷಕಿ ವಜಾ, ವಿದೇಶದಿಂದ ಬೆದರಿಕೆ

    ಬೆಂಗಳೂರು ಮಾತ್ರವಲ್ಲದೇ ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ ಮತ್ತು ಬೆಳಗಾವಿಯಂತಹ ಇತರ ನಗರಗಳಲ್ಲಿ ಸಹ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಾಮನ ಜೀವನಕ್ಕೆ ಸಂಬಂಧಿಸಿದ ಸ್ಥಳಗಳಾದ ಹಂಪಿ, ರಾಮೇಶ್ವರಂ ಮತ್ತು ಮಧುರೈ ಸೇರಿದಂತೆ ಹಲವು ಧಾರ್ಮಿಕ ಕ್ಷೇತ್ರಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಈಗ ಹೆಚ್ಚಾಗುತ್ತಿದೆ.

     

  • ವಿಮಾನ ದುರಂತದಿಂದ ಕೂದಲೆಳೆ ಅಂತರದಲ್ಲಿ ಧ್ರುವ ಸರ್ಜಾ & ಮಾರ್ಟಿನ್ ಟೀಂ ಪಾರು!

    ವಿಮಾನ ದುರಂತದಿಂದ ಕೂದಲೆಳೆ ಅಂತರದಲ್ಲಿ ಧ್ರುವ ಸರ್ಜಾ & ಮಾರ್ಟಿನ್ ಟೀಂ ಪಾರು!

    – ಪುನರ್ಜನ್ಮ ಎಂದು ನಟ ಪೋಸ್ಟ್

    ಸ್ಯಾಂಡಲ್‍ವುಡ್ ನಾಯಕ ನಟ ಧ್ರುವ ಸರ್ಜಾ (Dhruva Sarja) ಸೇರಿದಂತೆ ಮಾರ್ಟಿನ್ ಚಿತ್ರ ತಂಡವಿದ್ದ (Martin Movie Team) ವಿಮಾನವು ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಸದ್ಯ ಚಿತ್ರತಂಡ ಸೇರಿದಂತೆ ವಿಮಾನ ಪ್ರಯಾಣಿಕರೆಲ್ಲಾ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದಾರೆ.

    ಅಂತಿಮ ಚಿತ್ರೀಕರಣದಲ್ಲಿದ್ದ ಮಾರ್ಟಿನ್ ಚಿತ್ರತಂಡವು ಸೋಮವಾರ ಸಂಜೆ ಸಾಂಗ್ ಶೂಟ್‍ಗಾಗಿ ದೆಹಲಿ ವಿಮಾನ ನಿಲ್ದಾಣದಿಂದ ಶ್ರೀನಗರ ವಿಮಾನ ನಿಲ್ದಾಣಕ್ಕೆಗೆ ಇಂಡಿಗೋ ವಿಮಾನದಲ್ಲಿ (Indigo Flight) ತೆರಳುತ್ತಿತ್ತು. ಈ ಸಂದರ್ಭದಲ್ಲಿ ಹವಾಮಾನ ವೈಪರೀತ್ಯದಿಂದ ವಿಮಾನವನ್ನು ಲ್ಯಾಂಡಿಂಗ್ ಮಾಡಲು ಸಾಧ್ಯವಾಗದೇ ಪೈಲಟ್ ಪರದಾಡಿದ್ದಾರೆ. ಇದನ್ನೂ ಓದಿ: ನಟಿ ರಶ್ಮಿಕಾ ಸಂಚರಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶ

    ಸೀಟ್‍ಗಳು ನಡುಗಿದೆ, ಪ್ರಯಾಣಿಕರು ಗಾಬರಿ ಆಗಿದ್ದಾರೆ. ಕೊನೆಗೆ ಪೈಲಟ್‍ನ ಸಮಯ ಪ್ರಜ್ಞೆಯಿಂದ ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಘಟನೆಯ ಬಳಿಕ ಮಾರ್ಟಿನ್ ಚಿತ್ರತಂಡವು ವಿಮಾನ ಇಳಿಯುವ ಸಂದರ್ಭದಲ್ಲಿಯೇ ವೀಡಿಯೋ ಮಾಡಿಕೊಂಡು ವಿಮಾನದಲ್ಲಿ ಎದುರಾಗಿದ್ದ ಕೆಟ್ಟ ಸಂದರ್ಭವನ್ನು ವಿವರಿಸಿ ಮರು ಜನ್ಮ ಸಿಕ್ಕಿದೆ ಎಂದಿದೆ. ನನ್ನ ಜೀವಮಾನದಲ್ಲಿಯೇ ವಿಮಾನದಲ್ಲಿ ಮೊದಲ ಬಾರಿ ಅತ್ಯಂತ ಕೆಟ್ಟ ಅನುಭವವಾಯಿತು. ಸದ್ಯ ನಾವು ಸುರಕ್ಷಿತವಾಗಿದ್ದೇವೆ. ಥ್ಯಾಂಕ್ ಗಾಡ್, ಜೈ ಆಂಜನೇಯ ಎಂದು ಧ್ರುವ ಸರ್ಜಾ ಹೇಳಿದ್ದು, ಇದಕ್ಕೆ ಮಾರ್ಟಿನ್‌ ತಂಡವೂ ದನಿಗೂಡಿಸಿದೆ.

     

    View this post on Instagram

     

    A post shared by Dhruva Sarja (@dhruva_sarjaa)

    ಈ ವಿಡಿಯೋದಲ್ಲಿ ಚಿತ್ರದ ನಿರ್ದೇಶಕ ಎ ಪಿ ಅರ್ಜುನ್, ನಾಯಕ ನಟಿ ಅನ್ವೇಶಿ ಜೈನ್, ನೃತ್ಯ ಸಂಯೋಜಕ ಇಮ್ರಾನ್ ಸರ್ಧಾರಿಯಾ ಸೇರಿದಂತೆ 15ಕ್ಕೂ ಹೆಚ್ಚು ಮಂದಿ ಇದ್ದಾರೆ. ಈ ಬಗ್ಗೆ ನಟ ಧ್ರುವ ಸರ್ಜಾ ಸಹ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಮೊದಲ ಬಾರಿಗೆ ಸಾವನ್ನು ಎದುರಿಸಿ ಮತ್ತೆ ಜೀವ ಸಿಕ್ಕಂತಾಗಿದೆ. ಇದು ನನ್ನ ತಂದೆ ತಾಯಿಯರ, ನನ್ನ ವಿಐಪಿಗಳ ಮತ್ತು ನನ್ನ ದೇವರು ಚಿರು ಅಣ್ಣನ ಅವರ ಸಂಪೂರ್ಣ ಆಶೀರ್ವಾದದ ಫಲ. ಇದು ಪುನರ್ಜನ್ಮವಾಗಿದೆ. ನಮಗೆಲ್ಲರಿಗೂ ಜೀವನವನ್ನು ಪೂರ್ಣವಾಗಿ ಬದುಕಲು ಅವಕಾಶ ಮತ್ತೆ ಸಿಕ್ಕಿದೆ. ಜೈ ಆಂಜನೇಯ ಎಂದು ಧ್ರುವ ಸರ್ಜಾ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ಪೋಸ್ಟ್ ಮಾಡಿದ್ದಾರೆ.

  • ಹುಬ್ಬಳ್ಳಿ-ಪುಣೆ-ಹುಬ್ಬಳ್ಳಿ: ವಾರದಲ್ಲಿ 4 ಬಾರಿ ವಿಮಾನ ಸಂಚಾರ ಆರಂಭ – ಜೋಶಿ ಮಾಹಿತಿ

    ಹುಬ್ಬಳ್ಳಿ-ಪುಣೆ-ಹುಬ್ಬಳ್ಳಿ: ವಾರದಲ್ಲಿ 4 ಬಾರಿ ವಿಮಾನ ಸಂಚಾರ ಆರಂಭ – ಜೋಶಿ ಮಾಹಿತಿ

    – ಫೆಬ್ರವರಿ 2ರಿಂದ ವಿಮಾನಯಾನ ಶುರು

    ಹುಬ್ಬಳ್ಳಿ: ಹುಬ್ಬಳ್ಳಿ- ಪುಣೆ- ಹುಬ್ಬಳ್ಳಿ ಮಾರ್ಗವಾಗಿ ಇನ್ನು ವಾರಕ್ಕೆ ನಾಲ್ಕು ವಿಮಾನಗಳು (Flight) ನಿರಂತರವಾಗಿ ಸಂಚರಿಸಲಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಮಾಹಿತಿ ನೀಡಿದ್ದಾರೆ.

    ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಅವರ ಪ್ರಸ್ತಾವನೆ ಮೇರೆಗೆ ಕೇಂದ್ರ ವಿಮಾನಯಾನ ಸಚಿವಾಲಯ ಹುಬ್ಬಳ್ಳಿ- ಪುಣೆ-ಹುಬ್ಬಳ್ಳಿ ಮಾರ್ಗವಾಗಿ ವಿಮಾನ ಸಂಚಾರ ಆರಂಭಕ್ಕೆ ಕ್ರಮ ಕೈಗೊಂಡಿದೆ. ಇದನ್ನೂ ಓದಿ: ಕೇರಳದ ಶ್ರೀಕೃಷ್ಣ ದೇವಾಲಯದಲ್ಲಿ ಪ್ರಧಾನಿ ಮೋದಿ ಪ್ರಾರ್ಥನೆ

    2024 ಫೆಬ್ರವರಿ 2ರಿಂದ ಈ ವಾಯು ಮಾರ್ಗದಲ್ಲಿ ನಾಲ್ಕು ವಿಮಾನಗಳು ಸಂಚಾರ ಪುನರಾರಂಭ ಮಾಡಲಿವೆ ಎಂದು ಸಚಿವ ಪ್ರಹ್ಲಾದ್ ಜೋಶಿ ಅವರು ಟ್ವೀಟ್ (Tweet) ಮಾಡಿದ್ದಾರೆ. ಇದನ್ನೂ ಓದಿ: ಶ್ರೀರಾಮನ ಶಕ್ತಿ, ಹನುಮನ ಭಕ್ತಿಯ ಕೆಣಕಿದ ರಾವಣನೇ ಉಳಿಯಲಿಲ್ಲ, ರಾಜಣ್ಣ ಯಾವ ಲೆಕ್ಕ? – ಬಿಜೆಪಿ ತಿರುಗೇಟು

    ತಮ್ಮ ಕೋರಿಕೆ- ಪ್ರಸ್ತಾವನೆ ಪರಿಗಣಿಸಿ ಹುಬ್ಬಳ್ಳಿ- ಪುಣೆ- ಹುಬ್ಬಳ್ಳಿ ಮಾರ್ಗವಾಗಿ ವಿಮಾನ ಸಂಚಾರ ಆರಂಭಿಸಿದ್ದಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಇಂಡಿಗೋ 6eಯ ಆಡಳಿತ ಮಂಡಳಿಗೆ ಸಚಿವ ಪ್ರಹ್ಲಾದ್ ಜೋಶಿ ಅವರು ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ: ಮುದ್ದಹನುಮೇಗೌಡ ಕಾಂಗ್ರೆಸ್ ‌ಸೇರ್ಪಡೆ ದಿನಾಂಕ ಹೈಕಮಾಂಡ್ ತೀರ್ಮಾನ ಮಾಡುತ್ತೆ: ಸಚಿವ ಪರಮೇಶ್ವರ್

  • ಹಾರಾಟದ ವೇಳೆ ಓಪನ್ ಆದ ವಿಮಾನದ ಡೋರ್!

    ಹಾರಾಟದ ವೇಳೆ ಓಪನ್ ಆದ ವಿಮಾನದ ಡೋರ್!

    ವಾಷಿಂಗ್ಟನ್: ವಿಮಾನವೊಂದು ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಅದರ ಬಾಗಿಲು ಆಕಾಶದಲ್ಲಿ ತೆರೆದುಕೊಂಡ ಘಟನೆ ಪೋರ್ಟ್‌ಲ್ಯಾಂಡ್‌ನಲ್ಲಿ (Portland) ನಡೆದಿದೆ.

    ಅಲಾಸ್ಕಾ ಏರ್‌ಲೈನ್ಸ್‌ನ (Alaska Airlines) ಬೋಯಿಂಗ್ 737-9 ಮ್ಯಾಕ್ಸ್ ವಿಮಾನ ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲಿ ಅದರ ಒಂದು ಬಾಗಿಲು ತೆರೆದುಕೊಂಡಿದೆ. ಕೂಡಲೇ ವಿಮಾನವನ್ನು ಪೋರ್ಟ್‌ಲ್ಯಾಂಡ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ತುರ್ತು ಭೂಸ್ಪರ್ಶ (Emergency Landing) ಮಾಡಲಾಗಿದೆ. ವಿಮಾನವು ಒರೆಗಾನ್‍ನ ಪೋರ್ಟ್‌ಲ್ಯಾಂಡ್‌ನಿಂದ ಕ್ಯಾಲಿಫೋರ್ನಿಯಾದ (California) ಒಂಟಾರಿಯೊಗೆ ತೆರಳುತ್ತಿತ್ತು. ಈ ವೇಳೆ ಈ ಅವಘಡ ಸಂಭವಿಸಿದೆ. ಇದನ್ನೂ ಓದಿ: ಇಸ್ರೋದಿಂದ ದಿಟ್ಟ ಹೆಜ್ಜೆ – ಇಂದು ನಿಗದಿತ ಕಕ್ಷೆಗೆ ಸೇರಲಿದೆ ಆದಿತ್ಯ ಎಲ್1

    ವಿಮಾನದಲ್ಲಿ 171 ಪ್ರಯಾಣಿಕರು ಮತ್ತು 6 ಸಿಬ್ಬಂದಿಗಳಿದ್ದರು. ಅವರರೆಲ್ಲ ಸುರಕ್ಷಿವಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಪ್ರಯಾಣಿಕರು ತೆಗೆದ ವೀಡಿಯೋಗಳಲ್ಲಿ ಮಧ್ಯ-ಕ್ಯಾಬಿನ್‍ನ ನಿರ್ಗಮನ ಬಾಗಿಲು ವಿಮಾನದಿಂದ ಸಂಪೂರ್ಣವಾಗಿ ಬೇರ್ಪಟ್ಟಿರುವುದು ಕಾಣಿಸುತ್ತದೆ. ಇದನ್ನೂ ಓದಿ: ಲಕ್ಷದ್ವೀಪಕ್ಕೆ ಮೋದಿ ಭೇಟಿ: ಮಾಲ್ಡೀವ್ಸ್‌ಗೆ ಬಿಗ್‌ ಶಾಕ್‌

  • ಜಪಾನ್‌ ವಿಮಾನ ಅವಘಡ- ಕೋಸ್ಟ್‌ ಗಾರ್ಡ್‌ನ ಐವರು ಸಿಬ್ಬಂದಿ ದುರ್ಮರಣ

    ಜಪಾನ್‌ ವಿಮಾನ ಅವಘಡ- ಕೋಸ್ಟ್‌ ಗಾರ್ಡ್‌ನ ಐವರು ಸಿಬ್ಬಂದಿ ದುರ್ಮರಣ

    ಟೋಕಿಯೋ: ಜಪಾನಿನ (Japan) ಟೋಕಿಯೋದಲ್ಲಿರುವ ಹನೆಡಾ ವಿಮಾನ ನಿಲ್ದಾಣದಲ್ಲಿ (Tokyo’s Haneda Airport) ನಡೆದ ದುರ್ಘಟನೆಯಲ್ಲಿ ಐವರು ಸಿಬ್ಬಂದಿ ಮೃತಪಟ್ಟಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಮಂಗಳವಾರ ಜಪಾನ್ ಏರ್‌ಲೈನ್ಸ್ ಜೆಟ್ ಕೋಸ್ಟ್ ಗಾರ್ಡ್ (Coast Guard aircraft) ವಿಮಾನಕ್ಕೆ ಪ್ರಯಾಣಿಕರ ವಿಮಾನ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ . ಪ್ರಯಾಣಿಕ ವಿಮಾನದಲ್ಲಿದ್ದ ಎಲ್ಲಾ 367 ಪ್ರಯಾಣಿಕರು ಮತ್ತು 12 ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಆದರೆ ಕೋಸ್ಟ್ ಗಾರ್ಡ್ ವಿಮಾನದಲ್ಲಿದ್ದ ಆರು ಸಿಬ್ಬಂದಿಯಲ್ಲಿ ಐವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

    ಹೊಕ್ಕೈಡೊದಿಂದ ಟೇಕಾಫ್‌ ಆದ JAL 516 ವಿಮಾನವು ಟೋಕಿಯೋದಲ್ಲಿರುವ ಹನೆಡಾ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಲ್ಯಾಂಡ್‌ ಆಗುತ್ತಿದ್ದಾಗ ಹೊತ್ತಿ ಉರಿದಿದೆ. ಸದ್ಯ ವಿಮಾನ ಡಿಕ್ಕಿಯ ಬಳಿಕ ಬೆಂಕಿ ಹೊತ್ತಿಕೊಳ್ಳುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗುತ್ತಿವೆ. ವೀಡಿಯೋದಲ್ಲಿ ಹೊಗೆ ತುಂಬಿದ ಕ್ಯಾಬಿನ್‌ನೊಳಗೆ ಪ್ರಯಾಣಿಕರು ಅಳುತ್ತಿರುವುದು ಹಾಗೂ ಕೆಮ್ಮುತ್ತಲೇ ವಿಮಾನದಿಂದ ಹೊರಗೆ ಓಡಿಕೊಂಡು ಬರುತ್ತಿರುವುದನ್ನು ಗಮನಿಸಬಹುದಾಗಿದೆ.  ಇದನ್ನೂ ಓದಿ: ಜಪಾನ್‌ ವಿಮಾನ ಅವಘಡ- ಕೋಸ್ಟ್‌ ಗಾರ್ಡ್‌ನ ಐವರು ಸಿಬ್ಬಂದಿ ದುರ್ಮರಣ

    ಕೋಸ್ಟ್ ಗಾರ್ಡ್ ವಿಮಾನದಲ್ಲಿ ಆರು ಸಿಬ್ಬಂದಿ ಇದ್ದರು. ಅವಘಡದಿಂದಾಗಿ ಐವರು ಸಿಬ್ಬಂದಿ ಮೃತಪಟ್ಟಿದ್ದಾರೆ. ವಿಮಾನದ ಕ್ಯಾಪ್ಟನ್ ಸ್ಥಿತಿ ಗಂಭೀರವಾಗಿದೆ ಎಂದು ಟೋಕಿಯೊದ ಪೊಲೀಸ್ ಇಲಾಖೆಯು ಜಪಾನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (NHK) ಗೆ ತಿಳಿಸಿದೆ. ಇನ್ನು ಈ ಸಂಬಂಧ ಸಾರಿಗೆ ಮತ್ತು ಪ್ರವಾಸೋದ್ಯಮ ಸಚಿವಾಲಯವು ಘಟನೆಯ ಕುರಿತು ತನಿಖೆ ನಡೆಸುತ್ತಿದೆ ಎಂದು ಎನ್‌ಎಚ್‌ಕೆ ವರದಿ ಮಾಡಿದೆ.

  • ರನ್‌ವೇಯಲ್ಲಿ ಹೊತ್ತಿ ಉರಿದ ಜಪಾನ್‌ ವಿಮಾನ – 367 ಮಂದಿ ಗ್ರೇಟ್‌ ಎಸ್ಕೇಪ್‌

    ರನ್‌ವೇಯಲ್ಲಿ ಹೊತ್ತಿ ಉರಿದ ಜಪಾನ್‌ ವಿಮಾನ – 367 ಮಂದಿ ಗ್ರೇಟ್‌ ಎಸ್ಕೇಪ್‌

    ಟೋಕಿಯೋ: ರನ್‌ವೇಯಲ್ಲಿ ಲ್ಯಾಂಡ್‌ ಆಗುತ್ತಿದ್ದಾಗ ವಿಮಾನವೊಂದು ಹೊತ್ತಿ ಉರಿದ ಘಟನೆ ಜಪಾನಿನ (Japan) ಟೋಕಿಯೋದಲ್ಲಿರುವ ಹನೆಡಾ ವಿಮಾನ ನಿಲ್ದಾಣದಲ್ಲಿ (Haneda Airport) ನಡೆದಿದೆ.

    ಈ ವಿಮಾನದಲ್ಲಿ ಒಟ್ಟು 387 ಮಂದಿ ಪ್ರಯಾಣಿಸುತ್ತಿದ್ದರು. ಎಲ್ಲಾ ಪ್ರಯಾಣಿಕರನ್ನು ರಕ್ಷಿಸಲಾಗಿದೆ ಎಂದು ಈಗ ವರದಿಯಾಗಿದೆ. JAL 516 ವಿಮಾನ ಹೊಕ್ಕೈಡೊದಿಂದ ಟೇಕಾಫ್‌ ಆಗಿತ್ತು.

     ಕೋಸ್ಟ್‌ ಗಾರ್ಡ್‌ ವಿಮಾನಕ್ಕೆ ಪ್ರಯಾಣಿಕರ ವಿಮಾನ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ.

     

  • ದೆಹಲಿಯಲ್ಲಿ ದಟ್ಟ ಮಂಜು- 80ಕ್ಕೂ ಹೆಚ್ಚು ವಿಮಾನಗಳು, ಹಲವಾರು ರೈಲುಗಳ ಸಂಚಾರದಲ್ಲಿ ವ್ಯತ್ಯಯ

    ದೆಹಲಿಯಲ್ಲಿ ದಟ್ಟ ಮಂಜು- 80ಕ್ಕೂ ಹೆಚ್ಚು ವಿಮಾನಗಳು, ಹಲವಾರು ರೈಲುಗಳ ಸಂಚಾರದಲ್ಲಿ ವ್ಯತ್ಯಯ

    ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ದಟ್ಟವಾದ ಮಂಜಿನ ಪರಿಣಾಮ 80ಕ್ಕೂ ಹೆಚ್ಚು ವಿಮಾನಗಳು (Flight) ಹಾಗೂ ಹಲವಾರು ರೈಲುಗಳ (Train) ಪ್ರಯಾಣದಲ್ಲಿ ವ್ಯತ್ಯಯವಾಗಿದೆ.

    ಇಂದು ದೆಹಲಿ-ಎನ್‌ಸಿಆರ್‌ನ (Delhi- NCR) ಹಲವು ಪ್ರದೇಶಗಳಲ್ಲಿ ಸಾಧಾರಣ ಮಂಜಿನ ಜೊತೆಗೆ ಶೀತ ಹವಾಮಾನ ಪರಿಸ್ಥಿತಿ ಎದುರಾಗಿದೆ. ದೆಹಲಿಯಲ್ಲಿ ಕನಿಷ್ಠ ತಾಪಮಾನ 10.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಉತ್ತರ ಭಾರತದಲ್ಲಿ ದಟ್ಟವಾದ ಮಂಜು (Fog) ಇರುವ ಕಾರಣ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್ ಘೋಷಿಸಿದೆ. ಇದನ್ನೂ ಓದಿ: 5 ಅಸ್ಥಿಪಂಜರ ಪತ್ತೆ ಪ್ರಕರಣ- ತಮ್ಮ ತಮ್ಮ ಮನೆಗಳಿಗೆ ಬೀಗ ಹಾಕಿ ತೆರಳಿದ ಅಕ್ಕಪಕ್ಕದ ನಿವಾಸಿಗಳು

    ಈ ಸಂಬಂಧ IMD ತನ್ನ ಎಕ್ಸ್‌ನಲ್ಲಿ ಪಂಜಾಬ್, ಹರಿಯಾಣ, ದೆಹಲಿ ಉತ್ತರ ಪ್ರದೇಶ, ಉತ್ತರ ರಾಜಸ್ಥಾನ ಮತ್ತು ಉತ್ತರ ಮಧ್ಯಪ್ರದೇಶದಲ್ಲಿ ದಟ್ಟವಾದ ಮಂಜು ಆವರಿಸಿದೆ. ಈ ಹಿನ್ನೆಲೆಯಲ್ಲಿ ವಾಹನ ಚಾಲಕರು ಜಾಗರೂಕತೆಯಿಂದ ವಾಹನ ಚಲಾಯಿಸಿ. ಅಲ್ಲದೆ ಚಾಲನೆಯ ವೇಳೆ ವಾಹನದ ಲೈಟ್‌ ಆನ್‌ ಮಾಡಿಕೊಳ್ಳಿ. ಇನ್ನು ನಿಮ್ಮ ಪ್ರಯಾಣಕ್ಕಾಗಿ ವಿಮಾನಯಾನ, ರೈಲ್ವೆ ಮತ್ತು ರಾಜ್ಯ ಸಾರಿಗೆಯೊಂದಿಗೆ ಸಂಪರ್ಕದಲ್ಲಿರಿ ಎಂದು ತಿಳಿಸಿದೆ.

    ಹವಾಮಾನ ವೈಪರೀತ್ಯದಿಂದಾಗಿ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Indira Gandhi International Airport in Delhi) ಇಂದು ಬೆಳಗ್ಗೆ 8.30 ರವರೆಗೆ 80 ಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿವೆ ಎಂದು ವರದಿಯಾಗಿದೆ. ಕಡಿಮೆ ಗೋಚರತೆಯಿಂದಾಗಿ ಮತ್ತೆ ವಿಮಾನಗಳು ಮತ್ತು ರೈಲು ಪ್ರಯಾಣದಲ್ಲಿ ವಿಳಂಬವಾಗಿದೆ. ದಟ್ಟ ಮಂಜಿನ ವಾತಾವರಣದಿಂದಾಗಿ ರಾಷ್ಟ್ರ ರಾಜಧಾನಿಗೆ ಪ್ರಯಾಣಿಸುವ ಮತ್ತು ಬರುವ ಪ್ರಯಾಣಿಕರು ಸಹ ತೊಂದರೆಗಳನ್ನು ಎದುರಿಸಿದರು.

    ಈ ಸಂಬಂಧ ದೆಹಲಿಯಿಂದ ಸಿಕ್ಕಿಂಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು , ಮಂಜು ಮತ್ತು ಹವಾಮಾನ ಪರಿಸ್ಥಿತಿಗಳಿಂದಾಗಿ ನಮ್ಮ ವಿಮಾನವು ಎರಡು ಗಂಟೆಗಳ ಕಾಲ ವಿಳಂಬವಾಗಿದೆ ಎಂದು ತಿಳಿಸಿದ್ದಾರೆ. ಇನ್ನು ನಿನ್ನೆಗೆ ಹೋಲಿಸಿದರೆ ಇಂದು ಮಂಜು ಸ್ವಲ್ಪ ಉತ್ತಮವಾಗಿದೆ ಎಂದು ಆಟೋ, ಕ್ಯಾಬ್ ಚಾಲಕರು ತಿಳಿಸಿದ್ದಾರೆ. ಈ ನಡುವೆ ದೆಹಲಿ-ಎನ್‌ಸಿಆರ್‌ನಾದ್ಯಂತ ಕಠಿಣ ಹವಾಮಾನ ಪರಿಸ್ಥಿತಿಗಳ ಮಧ್ಯೆ, ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದಲ್ಲಿ ಗಣರಾಜ್ಯೋತ್ಸವದ ಪರೇಡ್‌ಗೆ ಸಿದ್ಧತೆಗಳು ಭರದಿಂದ ಸಾಗಿವೆ.