Tag: ವಿರಾಜಪೇಟೆ

  • ಸುಳ್ಳು ವಯಸ್ಸಿನ ದಾಖಲೆ ನೀಡಿ ಸ್ಪರ್ಧೆ – ಬೋಪಯ್ಯ ವಿರುದ್ಧ ದೂರು

    ಸುಳ್ಳು ವಯಸ್ಸಿನ ದಾಖಲೆ ನೀಡಿ ಸ್ಪರ್ಧೆ – ಬೋಪಯ್ಯ ವಿರುದ್ಧ ದೂರು

    ಮಡಿಕೇರಿ: ಚುನಾವಣೆಗೆ ಸ್ಪರ್ಧಿಸಲು ವಯಸ್ಸಿನ ಸುಳ್ಳು ದಾಖಲೆ ನೀಡಿದ್ದರು ಎಂದು ಆರೋಪಿಸಿ ಶಾಸಕ ಹಾಗೂ ಮಾಜಿ ಸ್ಪೀಕರ್ (Former Speaker) ಕೆ.ಜಿ ಬೋಪಯ್ಯ (K.G Bopaiah) ವಿರುದ್ಧ ವ್ಯಕ್ತಿಯೊಬ್ಬರು ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಬೋಪಯ್ಯ ತಮ್ಮ ವಯಸ್ಸನ್ನು ತಿದ್ದಿ, ತಪ್ಪು ಮಾಹಿತಿ ನೀಡಿ ನಾಮಪತ್ರ ಸಲ್ಲಿಸಿದ್ದರು ಎಂದು ಪಿ.ಬಿ ತಿಮ್ಮಯ್ಯ ಎಂಬವರು ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಆತಂಕ ಸೃಷ್ಟಿಸಿರುವ H3N2ಗೆ ರಾಜ್ಯದಲ್ಲಿ ಮೊದಲಿ ಬಲಿ

    ದೂರಿನಲ್ಲಿ ವಿರಾಜಪೇಟೆ (Virajpet) ಕ್ಷೇತ್ರದ ವಿಧಾನಸಭಾ ಸದಸ್ಯರಾದ ಕೆ.ಜಿ ಬೋಪಯ್ಯ 1979ರ ಅಕ್ಟೋಬರ್‌ನಲ್ಲಿ ಬಾರ್ ಕೌನ್ಸಿಲ್ (Bar Council) ವಕೀಲರಾಗಿದ್ದರು. ಅವರು ಆಗ ತಮ್ಮ ಹುಟ್ಟಿದ ದಿನಾಂಕವನ್ನು 1951 ಅಕ್ಟೋಬರ್ 17 ಎಂದು ದಾಖಲಿಸಿದ್ದರು. ಆದರೆ ಬೋಪಯ್ಯನವರು 2004 ನೇ ಸಾಲಿನ ಚುನಾವಣೆ ಸಮಯದಲ್ಲಿ ಅವರ ವಯಸ್ಸು 53 ವರ್ಷ ಆಗಿತ್ತು. ಆದರೆ ಬೋಪಯ್ಯನವರು ತಮ್ಮ ವಯಸ್ಸನ್ನು 49 ವರ್ಷ ಎಂದು ಸುಳ್ಳು ಮಾಹಿತಿ ನೀಡಿದ್ದರು.

    2013ರ ಚುನಾವಣೆಯಲ್ಲಿ ಅವರ ವಯಸ್ಸು 61 ವರ್ಷ ಆಗಿತ್ತು. ಆದರೆ ಅವರು ಚುನಾವಣಾ ಆಯೋಗಕ್ಕೆ (Election Commission) 58 ವರ್ಷ ಎಂದು ಸುಳ್ಳು ಮಾಹಿತಿ ನೀಡಿದ್ದರು. ಮತ್ತು 2018ರ ಚುನಾವಣೆಯಲ್ಲಿ ಅವರ ವಯಸ್ಸು 67 ಆಗಿತ್ತು. ಆದರೆ ತಮ್ಮ ವಯಸ್ಸನ್ನು 65 ಎಂದು ಸುಳ್ಳು ಮಾಹಿತಿ ನೀಡಿದ್ದಾರೆಂದು ದೂರುದಾರ ತಿಮ್ಮಯ್ಯ ಆರೋಪಿಸಿದ್ದಾರೆ.

    ಇದು ಚುನಾವಣೆ ನೀತಿ ಸಂಹಿತೆ ಅನುಗುಣವಾಗಿ ಗಂಭೀರ ಅಪರಾಧವಾಗಿದೆ. ಇದರ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ದೂರು ದಾಖಲಿಸಿದ್ದಾರೆ.

    ಬೋಪಯ್ಯ ಸ್ಪಷ್ಟನೆ: ಪ್ರತೀ ಚುನಾವಣೆ ಬಂದಾಗ ನನ್ನ ವಿರುದ್ಧ ಇಂತಹ ಆರೋಪ ಮಾಡುವ ಗ್ಯಾಂಗ್ ಮಡಿಕೇರಿಯಲ್ಲಿದೆ. ವಯಸ್ಸಿನ ಬಗ್ಗೆ ಸುಳ್ಳು ದಾಖಲೆ ನೀಡಿದ ಆರೋಪದ ದೂರು ದಾಖಲಾಗಿರುವ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ನನ್ನ ತಂದೆ ಹೆಬ್ಬೆಟ್ಟು. ನನ್ನ ತಂದೆ ಕೊಟ್ಟಿರುವ ದಿನಾಂಕವನ್ನೇ ನಾನು ಫಾಲೋ ಮಾಡುತ್ತಾ ಬಂದಿದ್ದೇನೆ ಎಂದು ಬೋಪಯ್ಯ ಪ್ರತಿಕ್ರಿಯಿಸಿದ್ದಾರೆ.

    ನನ್ನ ವಿರುದ್ಧದ ಹಿಂದೆ ಸೋ ಕಾಲ್ಡ್ ಪರಿಸರವಾದಿಗಳು ಇದ್ದಾರೆ. ಅವರ ಈ ಸಣ್ಣತನಕ್ಕೆ ನಾನು ಸಣ್ಣತನ ಮಾಡಲ್ಲ. ನನ್ನ ಎಲ್ಲಾ ದಾಖಲೆಗಳಲ್ಲೂ ಒಂದೇ ಡೇಟ್ ಇದೆ. ಈ ಬಾರಿ ಚುನಾವಣೆ ಎದುರಿಸಲು ತನಗೆ ಪಕ್ಷದ ತೀರ್ಮಾನವಾಗಿದೆ. ಆರೋಪಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ. ಎರಡು ಕ್ಷೇತ್ರದ ಬಿಜೆಪಿ ಸ್ಥಾನಗಳನ್ನು ಕುಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಚರ್ಚ್ ಮೇಲೆ ಗುಂಡಿನ ದಾಳಿ 7 ಮಂದಿ ಸಾವು- ಹಲವರಿಗೆ ಗಾಯ

  • ಆರತಿ ಕೊಲೆ ಕೇಸ್‌ – ಹತ್ಯೆಗೈದ ಆರೋಪಿಯ ಶವ ಕೆರೆಯಲ್ಲಿ ಪತ್ತೆ

    ಆರತಿ ಕೊಲೆ ಕೇಸ್‌ – ಹತ್ಯೆಗೈದ ಆರೋಪಿಯ ಶವ ಕೆರೆಯಲ್ಲಿ ಪತ್ತೆ

    ಮಡಿಕೇರಿ: ಯುವತಿ ಆರತಿಯನ್ನು (Arathi) ಕೊಲೆಗೈದ ಆರೋಪಿ ತಿಮ್ಮಯ್ಯ (Thimmaiah) ಆತ್ಮಹತ್ಯೆಗೆ ಶರಣಾಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

    ವಿರಾಜಪೇಟೆ(Virajpet) ತಾಲ್ಲೂಕಿನ ಎರಡನೇ ರುದ್ರಗುಪ್ಪೆ ಗ್ರಾಮದಲ್ಲಿ ಇರುವ ತಿಮ್ಮಯ್ಯ ಅವರ ಮನೆ ಸಮೀಪದ ಕೆರೆಯಲ್ಲಿ ತಿಮ್ಮಯ್ಯನ ಮೃತದೇಹ ಪತ್ತೆಯಾಗಿದೆ.

    ಭಾನುವಾರ ಕತ್ತಿಯಿಂದ ಕಡಿದು ಆರತಿಯನ್ನು ಹತ್ಯೆ ಬಳಿಕ ಕೆರೆಗೆ ಹಾರಿ ತಿಮ್ಮಯ್ಯ ಆತ್ಮಹತ್ಯೆ ‌ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರದಿಂದ ತಿಮ್ಮಯ್ಯನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದರು.  ಇದನ್ನೂ ಓದಿ: ಬೆಂಗಳೂರಲ್ಲಿ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ

    ಎರಡು ದಿನಗಳಿಂದ ಕೆರೆಯಲ್ಲಿ ನಿರಂತರವಾಗಿ ಹುಡುಕಾಟ ನಡೆಸಿದರೂ ತಿಮ್ಮಯ್ಯನ ಮೃತದೇಹ ಪತ್ತೆಯಾಗಿರಲಿಲ್ಲ. ಮಂಗಳವಾರ ಮಧ್ಯಾಹ್ನದ ಬಳಿಕ ಕೆರೆಯ ನೀರನ್ನು ಪಂಪ್‌ನಿಂದ ಖಾಲಿ ಮಾಡುತ್ತಿದ್ದಾಗ ತಡರಾತ್ರಿ ಮೃತದೇಹ ಪತ್ತೆಯಾಗಿದೆ.

    ಕೆರೆಯಲ್ಲಿ ಹೆಚ್ಚಾಗಿ ಕೆಸರು ತುಂಬಿದ ಹಿನ್ನೆಲೆಯಲ್ಲಿ ‌ಮೃತದೇಹ ಶೋಧಕಾರ್ಯದ ವೇಳೆ ಸುಲಭವಾಗಿ ಪತ್ತೆಯಾಗಿರಲಿಲ್ಲ. ಈಗ ಮೃತ ತಿಮ್ಮಯ್ಯನ ಮೃತದೇಹವನ್ನು ವಿರಾಜಪೇಟೆ ಸರ್ಕಾರಿ ಅಸ್ಪತ್ರೆಗೆ ಮರಣೋತ್ತರ ಪರೀಕ್ಷೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ರವಾನಿಸಿದ್ದಾರೆ.

    ಆರತಿ ಕೊಲೆಯಾದ ಜಾಗದ ಸಮೀಪವೇ ತಿಮ್ಮಯ್ಯನ ಬೈಕ್‌, ಮೊಬೈಲ್, ಚಪ್ಪಲಿ ಪತ್ತೆಯಾಗಿತ್ತು. ಹತ್ಯೆ ಬಳಿಕ ತಿಮ್ಮಯ್ಯ ಕೂಡ ವಿಷ ಸೇವಿಸಿರುವ ಬಗ್ಗೆ ಅನುಮಾನ ಹುಟ್ಟಿತ್ತು. ಇದಕ್ಕೆ ಪುಷ್ಠಿ ನೀಡುವಂತೆ ಮೊಬೈಲ್ ದೊರೆತಿರುವ ಸ್ಥಳದಲ್ಲಿ ವಿಷದ ಬಾಟಲಿಯೂ ಸಿಕ್ಕಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕತ್ತಿಯಿಂದ ಕಡಿದು ಯುವತಿಯ ಬರ್ಬರ ಕೊಲೆ

    ಕತ್ತಿಯಿಂದ ಕಡಿದು ಯುವತಿಯ ಬರ್ಬರ ಕೊಲೆ

    ಮಡಿಕೇರಿ: ಕತ್ತಿಯಿಂದ ಕಡಿದು ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ಸಮೀಪದ ನಂಗಾಲ ಗ್ರಾಮದಲ್ಲಿ ನಡೆದಿದೆ.

    ಯುವತಿಯನ್ನು ಆರತಿ(24) ಎಂದು ಗುರುತಿಸಲಾಗಿದೆ. ಆರತಿ ಕೊಲೆಯಾದ ಸ್ಥಳದಲ್ಲಿ ವ್ಯಕ್ತಿಯ ಹೆಲ್ಮೆಟ್ ಪತ್ತೆಯಾಗಿದ್ದು, ತಮ್ಮಯ್ಯ ಎಂಬಾತನಿಗೆ ಸೇರಿದ್ದಾಗಿದೆ. ಕೊಲೆಯಾದ ಅನತಿ ದೂರದಲ್ಲಿ ಆತನ ಬೈಕ್ ಕೂಡ ಪತ್ತೆಯಾಗಿದೆ.

    ಮೂರು ದಿನಗಳಿಂದ ಆರತಿಗೆ ತಮ್ಮಯ್ಯ ಟಾರ್ಚರ್ (Torture) ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಭಾನುವಾರ ರಾತ್ರಿ ಆತನೇ ಹತ್ಯೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಇದನ್ನೂ ಓದಿ: ದೆಹಲಿ ವ್ಯಕ್ತಿಯ ದೇಹ 8 ಪೀಸ್ ಮಾಡಿ ವೀಡಿಯೋ ರೆಕಾರ್ಡ್ – ಪಾಕಿಸ್ತಾನಕ್ಕೆ ಶೇರ್

    ತಮ್ಮಯ್ಯನ ಮೊಬೈಲ್ (Mobile) ಹಾಗೂ ಚಪ್ಪಲಿ (Slipper) ಸ್ಥಳದಲ್ಲಿ ಪತ್ತೆಯಾಗಿದೆ. ಹತ್ಯೆ ಬಳಿಕ ತಮ್ಮಯ್ಯ ಕೂಡ ವಿಷ ಸೇವಿಸಿರುವ ಬಗ್ಗೆ ಅನುಮಾನ ಹುಟ್ಟಿದೆ. ಇದಕ್ಕೆ ಪುಷ್ಠಿ ನೀಡುವಂತೆ ಮೊಬೈಲ್ ದೊರೆತಿರುವ ಸ್ಥಳದಲ್ಲಿ ವಿಷದ ಬಾಟ್ಲಿ ಕೂಡ ಸಿಕ್ಕಿದೆ.

    ಆರೋಪಿಯ ಪತ್ತೆಗಾಗಿ ವಿರಾಜಪೇಟೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಾಲು ಜಾರಿ ಕೆರೆಗೆ ಬಿದ್ದು ಯುವತಿ ದುರ್ಮರಣ

    ಕಾಲು ಜಾರಿ ಕೆರೆಗೆ ಬಿದ್ದು ಯುವತಿ ದುರ್ಮರಣ

    ಮಡಿಕೇರಿ: ಯುವತಿಯೊಬ್ಬಳು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ (Virajapete) ತಾಲೂಕಿನ ಕೊಣಂಜಗೇರಿ ಪಾರಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರುಂದಾಡು ಗ್ರಾಮದಲ್ಲಿ ನಡೆದಿದೆ.

    ಪಾರಾಣೆ ಗ್ರಾ.ಪಂ ಸದಸ್ಯೆ ದಾಕ್ಷಾಯಿಣಿ ಹಾಗೂ ಕುಶಾಲಪ್ಪ ಅವರ ಪುತ್ರಿ ಚಸ್ಮಿಕಾ (20) ಮೃತ ದುರ್ದೈವಿ. ಮೂರ್ನಾಡು ಸರ್ಕಾರಿ ಅನುದಾನಿತ ಕಾಲೇಜಿನಲ್ಲಿ ಬಿ.ಕಾಂ. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಚಸ್ಮಿಕಾ ಇಂದು ಬೆಳಗ್ಗೆ ಗದ್ದೆಯಲ್ಲಿ ದನ ಕಟ್ಟಲು ಕೆರೆಯ ಪಕ್ಕದ ದಾರಿಯಲ್ಲಿ ಹೋಗುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು, ಸಾವನ್ನಪ್ಪಿರುವ ಬಗ್ಗೆ ತಿಳಿದು ಬಂದಿದೆ. ಇದನ್ನೂ ಓದಿ: ಬಂಡೆಮಠ ಸ್ವಾಮೀಜಿ ಆತ್ಮಹತ್ಯೆಗೆ ಟ್ವಿಸ್ಟ್- ಮಹಿಳೆಯ ಜೊತೆಗಿನ ವೀಡಿಯೋ ಕಾಲ್ ವೈರಲ್

    ಇದೀಗ ಮಗಳನ್ನು ಕಳೆದುಕೊಂಡ ತಂದೆ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಮೃತದೇಹವನ್ನು ಕೆರೆಯಿಂದ ಹೊರತೆಗೆಯಲು ನಾಪೋಕ್ಲುವಿನ ಗ್ರಾಮದ ಯುವಕರು ಅಬ್ದುಲ್ ರಜಾಕ್, ಅಬ್ದುಲ್ ಮಜೀದ್ ಹಾಗೂ ಶಮೀ ಸಹಕರಿಸಿದ್ದಾರೆ. ಘಟನೆ ಸಂಬಂಧಿಸಿದಂತೆ ನಾಪೋಕ್ಲು ಠಾಣಾಧಿಕಾರಿ ಸದಾಶಿವ ಹಾಗೂ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಪಟಾಕಿ ತಂದ ಆಪತ್ತು – ಮಕ್ಕಳ ಬಾಳಲ್ಲಿ ಕತ್ತಲೆ ತಂದ ಬೆಳಕಿನ ಹಬ್ಬ, 78 ಮಂದಿಗೆ ಗಾಯ

    Live Tv
    [brid partner=56869869 player=32851 video=960834 autoplay=true]

  • ಕರ್ತವ್ಯದಲ್ಲಿದ್ದ ಅರಣ್ಯ ವೀಕ್ಷಕ ನಾಪತ್ತೆ

    ಕರ್ತವ್ಯದಲ್ಲಿದ್ದ ಅರಣ್ಯ ವೀಕ್ಷಕ ನಾಪತ್ತೆ

    ಮಡಿಕೇರಿ: ವಿರಾಜಪೇಟೆ (Virajpet) ತಾಲೂಕಿನ ಮಾಕುಟ್ಟ ಅರಣ್ಯ ವ್ಯಾಪ್ತಿಯಲ್ಲಿ ಕರ್ತವ್ಯದಲ್ಲಿದ್ದ ಅರಣ್ಯ ವೀಕ್ಷಕ (Forest officer) ನಾಪತ್ತೆಯಾಗಿದ್ದಾರೆ.

    ಪವನ್ (23) ನಾಪತ್ತೆಯಾದ ಅರಣ್ಯ ವೀಕ್ಷಕ. ಮೂಲತಃ ಬಾಳೆಲೆ ಗ್ರಾಮದ ಪವನ್ ಮಾಕುಟ್ಟ ಅರಣ್ಯ ವ್ಯಾಪ್ತಿಯಲ್ಲಿ ಕರ್ತವ್ಯನಿರತರಾಗಿದ್ದ ವೇಳೆ ನಾಪತ್ತೆಯಾಗಿದ್ದಾರೆ. ಕಾಲು ಜಾರಿ ನದಿಗೆ ಬಿದ್ದಿರುವ ಶಂಕೆ ವ್ಯಕ್ತವಾಗುತ್ತಿದೆ.   ಇದನ್ನೂ ಓದಿ: ಬೆಲೆ ಮಿತಿ ನ್ಯಾಯುತವಾಗಿಲ್ಲದಿದ್ದರೇ ಜಾಗತಿಕ ಮಾರುಕಟ್ಟೆಗೆ ತೈಲ ಪೂರೈಕೆ ಬಂದ್ – ರಷ್ಯಾ

    ಇದೀಗ ಪೊನ್ನಂಪೇಟೆ ತಾಲೂಕಿನ ಬಾಳೆಲೆ ಗ್ರಾಮದಲ್ಲಿ ನಾಪತ್ತೆಯಾದ ಪವನ್ ಪತ್ತೆಗೆ ಅರಣ್ಯ ಇಲಾಖೆ ಸಿಬ್ಬಂದಿ (Forest Department Staff) ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮಂಗಳೂರು ಹಾಸ್ಟೆಲ್‌ನ ಕಿಟಕಿ ರಾಡ್ ಮುರಿದು ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ

    Live Tv
    [brid partner=56869869 player=32851 video=960834 autoplay=true]

  • ಮನೆಯ ಸುತ್ತ ಕಂದಕ ತೋಡಿ ಕಾರ್ಮಿಕನಿಗೆ ಹಿಂಸೆ – ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ

    ಮನೆಯ ಸುತ್ತ ಕಂದಕ ತೋಡಿ ಕಾರ್ಮಿಕನಿಗೆ ಹಿಂಸೆ – ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ

    ಮಡಿಕೇರಿ: ಮನೆಯ ಸುತ್ತಲೂ ಕಂದಕ ತೋಡಿ ಕಾರ್ಮಿಕನಿಗೆ ಹಿಂಸೆ ನೀಡುತ್ತಿರುವ ತೋಟದ ಮಾಲೀಕರ ಕ್ರಮದಿಂದ ಬೇಸತ್ತು ಕಾರ್ಮಿಕನ ಕುಟುಂಬದ ಸದಸ್ಯರು ದಯಾಮರಣ ನೀಡಬೇಕೆಂದು ರಾಷ್ಟ್ರಪತಿಗೆ ಪತ್ರ ಬರೆದಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.

    ಹೌದು, ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟ ಗ್ರಾಮದಲ್ಲಿ ದುಬಾರಿ ಗ್ರೂಪ್‌ಗೆ ಸೇರಿದ ಮಸ್ಕಲ್ ಕಾಫಿ ತೋಟದಲ್ಲಿ ವಾಸವಿರುವ ಕಾರ್ಮಿಕ ಸುಬ್ರಮಣಿ ಎಸ್ ಕಳೆದ 25 ವರ್ಷದಿಂದ ಚಾಲಕನಾಗಿ ಸೇವೆ ಸಲ್ಲಿಸುತ್ತಿದ್ದರು. 2016ರಲ್ಲಿ ಯಾವುದೇ ನೋಟೀಸ್ ನೀಡದೇ ತೋಟದ ಮಾಲೀಕರು ಸುಬ್ರಮಣಿಯನ್ನು ಕೆಲಸದಿಂದ ತೆಗೆದುಹಾಕಿದ್ದರು. ಈ ಬಗ್ಗೆ ಜಿಲ್ಲಾ ಕಾರ್ಮಿಕ ನ್ಯಾಯಾಲಯದಲ್ಲಿ ದೂರು ನೀಡಿದ್ದರು.

    ನ್ಯಾಯಾಲಯದ ತೀರ್ಪು ಬರುವವರೆಗೂ ಕಾಫಿ ತೋಟದ ಮನೆಯಲ್ಲೇ ವಾಸವಿದ್ದ ಸುಬ್ರಮಣಿ ಕುಟುಂಬಕ್ಕೆ ಇದೀಗ ಮಾಲೀಕರು ತೊಂದರೆ ನೀಡುತ್ತಿದ್ದಾರೆ. ತೋಟದ ಮನೆಯಿಂದ ಕಾರ್ಮಿಕ ಹಾಗೂ ಅವರ ಕುಟುಂಬ ಹೊರಬರದಂತೆ ಮನೆಯ ಸುತ್ತಲೂ ಕಂದಕ ತೋಡಿದ್ದಾರೆ. ಈ ಬಗ್ಗೆ ಸುಬ್ರಮಣಿ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಮನನೊಂದ ಕಾರ್ಮಿಕ ರಾಷ್ಟ್ರಪತಿಗೆ ದಯಾಮರಣ ಕೋರಿ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಸೇನಾ ಹೆಲಿಕಾಪ್ಟರ್ ಪತನ – ಪೈಲಟ್‌ಗಳ ಸ್ಥಿತಿ ಚಿಂತಾಜನಕ

    ಕಾರ್ಮಿಕ ಸುಬ್ರಮಣಿಗೆ ತೋಟದ ವತಿಯಿಂದ ನೀಡಿದ್ದ ಮನೆಯಲ್ಲಿ ಪತ್ನಿ, ಮಗಳೊಂದಿಗೆ ವಾಸವಾಗಿದ್ದಾರೆ. ಮೊದಲ ಮಹಡಿಯಲ್ಲಿ ಮನೆ ಇದ್ದು, ಕೆಳಭಾಗದಲ್ಲಿ ತೋಟದ ಸಾಮಗ್ರಿಗಳ ಕೊಠಡಿ ಇದೆ. ತೋಟದ ಮನೆಯನ್ನು ಬಿಟ್ಟು ತೆರಳಬೇಕೆಂದು ತೋಟದ ಮಾಲೀಕರು ಹಾಗೂ ವ್ಯವಸ್ಥಾಪಕರು ಆಗಿಂದಾಗ್ಗೆ ಕಿರುಕುಳ ನೀಡುತ್ತಿದ್ದರು ಎಂದು ಸುಬ್ರಮಣಿ ಆರೋಪಿಸಿದ್ದಾರೆ.

    ಸುಬ್ರಮಣಿ ಹಾಗೂ ಅವರ ಕುಟುಂಬ ಮನೆ ಖಾಲಿ ಮಾಡದ ಹಿನ್ನೆಲೆಯಲ್ಲಿ ಮಾಲೀಕರು 2 ಹಿಟಾಚಿ ಹಾಗೂ 2 ಜೆಸಿಬಿ ಬಳಸಿ ಮನೆಯ ಸುತ್ತಲೂ ಕಂದಕ ನಿರ್ಮಾಣ ಮಾಡಿದ್ದಾರೆ. ಇದೀಗ ಸುಬ್ರಮಣಿ ಮನೆಗೆ ತೆರಳುವ ರಸ್ತೆಯಲ್ಲಿ ಗುಂಡಿ ತೋಡಲಾಗಿದ್ದು, ಮನೆಯಿಂದ ಹೊರಬರಲು ಹಾಗೂ ಒಳಗೆ ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ. ಇದನ್ನೂ ಓದಿ: ಹೃದಯ ಸಂಬಂಧಿ ಸಮಸ್ಯೆಯಿಂದ ತೆಲಂಗಾಣ ಸಿಎಂ ಆಸ್ಪತ್ರೆಗೆ ದಾಖಲು

    ಈ ಬಗ್ಗೆ ಜಿಲ್ಲಾಧಿಕಾರಿ, ಮುಖ್ಯಮಂತ್ರಿ ಸೇರಿದಂತೆ ವಿವಿಧ ಅಧಿಕಾರಿಗಳಿಗೆ ಸುಬ್ರಮಣಿ ಮನವಿ ಸಲ್ಲಿಸಿದ್ದರು. ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ನೀಡಿದ ದೂರಿನನ್ವಯ ಜಿಲ್ಲಾ ನ್ಯಾಯಾಲಯದ ನ್ಯಾಯಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

    ಮನೆಯ ಸುಮಾರು 15 ಅಡಿ ಕೆಳಕ್ಕೆ ಕಂದಕ ನಿರ್ಮಾಣ ಮಾಡಿರುವ ಕಾರಣ ಮನೆಗೆ ತೆರಳಲು ಹಾಗೂ ಮನೆಯಿಂದ ಹೊರಹೋಗಲು ಸುಬ್ರಮಣಿ ಕುಟುಂಬಕ್ಕೆ ಸಾಧ್ಯವಾಗದೇ ಗೃಹಬಂಧನದಲ್ಲಿ ಇದ್ದಾರೆ. ಇದೀಗ ಏಣಿಯ ಸಹಾಯದಿಂದ ಸುಬ್ರಮಣಿ ಹಾಗೂ ಮಗಳು ಅಗತ್ಯ ಸಾಮಗ್ರಿಗಳ ಖರೀದಿಗೆ ತೆರಳುತ್ತಿದ್ದಾರೆ. ಆದರೆ ಗ್ಯಾಸ್ ಸೇರಿದಂತೆ ಭಾರವಾದ ವಸ್ತುಗಳನ್ನು ಮನೆಗೆ ಸಾಗಿಸುವುದು ಅಸಾಧ್ಯವಾಗಿದೆ. ಇದನ್ನೂ ಓದಿ: ಕೋವಿಡ್ ರೋಗಿಗಳಿಂದ ಪಡೆದ ಹೆಚ್ಚುವರಿ ಶುಲ್ಕ ಮರು ಪಾವತಿಗೆ ಜಿಲ್ಲಾಧಿಕಾರಿ ಆದೇಶ

    ಇನ್ನೂ ತನಗೆ ಸಿಗಬೇಕಾದ ಬೋನಸ್, ವೇತನ ಸೇರಿದಂತೆ ಅಂದಾಜು 19 ಲಕ್ಷ ರೂ. ಹಣ ತೋಟದ ಮಾಲೀಕರಿಂದ ಸಿಗಬೇಕು. ನ್ಯಾಯಾಲಯದಲ್ಲಿ ಈ ಬಗ್ಗೆ ದಾವೆ ಕೂಡ ಹೂಡಲಾಗಿದೆ. ಹೀಗಿರುವಾಗ ಏಕಾಏಕಿ ಮನೆಯ ಸುತ್ತಲೂ ಕಂದಕ ನಿರ್ಮಿಸಿ ನಿತ್ಯ ಕಿರುಕುಳ ನೀಡುತ್ತಿದ್ದಾರೆ. ಅನಾರೋಗ್ಯದಲ್ಲಿರುವ ಪತ್ನಿ, ಮಗಳ ಮುಖ ನೋಡಿ ಆತ್ಮಹತ್ಯೆಗೂ ಮನಸ್ಸು ಬರುತ್ತಿಲ್ಲ. ಹೀಗಾಗಿ ದಯಾಮರಣ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಈ ಕುಟುಂಬ ಮನವಿ ಮಾಡಿದೆ.

  • ವಾಮಾಚಾರ ನಡೆಸಿ ಮನೆಯ ಬೆಡ್ ರೂಂನ ಮಣ್ಣಿನಡಿಯಲ್ಲಿ ನಿಧಿಗಾಗಿ ಶೋಧ – ಇಬ್ಬರ ಬಂಧನ

    ವಾಮಾಚಾರ ನಡೆಸಿ ಮನೆಯ ಬೆಡ್ ರೂಂನ ಮಣ್ಣಿನಡಿಯಲ್ಲಿ ನಿಧಿಗಾಗಿ ಶೋಧ – ಇಬ್ಬರ ಬಂಧನ

    ಮಡಿಕೇರಿ: ಗ್ರಾಮವೊಂದರ ಮನೆಯಲ್ಲಿ ನಿಧಿ ಶೋಧಕ್ಕಾಗಿ ಮನೆ ಒಳಗೆ ವಾಮಾಚಾರ, ಬಲಿಪೂಜೆ ನಡೆಸಿ ಮನೆಯ ಬೇಡ್ ರೂಂ ನಲ್ಲೆ ಸುಮಾರು 15 ಅಡಿ ಗುಂಡಿ ತೆಗೆದು ಬಲಿ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ದೊಡ್ಡ ಬಲಿ ಕೊಡಲು ಸಂಚು ರೂಪಿಸಿದ ಆರೋಪಿಗಳನ್ನು ಬಂಧಿಸುವಲ್ಲಿ ಪೆÇಲೀಸರು ಯಶಸ್ವಿಯಾದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.

    ಕೊಡಗಿನ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಚೆನ್ನಯ್ಯನಕೋಟೆ ಹೊಳಮಾಳ ಗ್ರಾಮದ ಕೋಟೆ ಪೈಸಾರಿಯ ಎಂ.ಆರ್.ಗಣೇಶ್ ಹಾಗೂ ಉಡುಪಿ ಮೂಲದ ಸಾಧಿಕ್ ಎಂಬವರ ಮನೆಯ ಕೊಠಡಿಯಲ್ಲಿ ವಾಮಾಚಾರ, ಬಲಿಪೂಜೆ ನಡೆಸುತ್ತಿದ್ದಾರೆ ಎಂದು ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿದೆ. ಪರಿಣಾಮ ಇವರ ಮನೆಗೆ ಡಿಸಿಐಬಿ ಹಾಗೂ ಸಿದ್ದಾಪುರ ಪೊಲೀಸರು ಪರಿಶೀಲಿಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಡಿಕೆ ದಾಟಲಿಲ್ಲ, ಮೇಕೆಯಾದರೂ ದಾಟಲಿ: ಬಿಜೆಪಿ ವ್ಯಂಗ್ಯ

    ಆರೋಪಿಗಳಿಬ್ಬರು ಮಂಗಳೂರು ಹಾಗೂ ಕೇರಳ ಮೂಲದ ವಾಮಾಚಾರಿಗಳ ಬಲೆಗೆ ಬಿದ್ದಿದ್ದಾರೆ. ಇವರು ಮೌಢ್ಯತೆಯಿಂದ ಮನೆಯ ಬೆಡ್ ರೂಂನ ಮಣ್ಣಿನಡಿಯಲ್ಲಿ ನಿಧಿ ಇದೆಯೆಂದು 15 ಅಡಿಗಳಷ್ಟು ಮಣ್ಣು ತೆಗೆದು ಗುಂಡಿತೋಡಿ ವಾಮಾಚಾರ ನಡೆಸಿದ್ದಾರೆ.

    ನಿಧಿ ಶೋಧನೆಯ ಸಂಬಂಧ ಕೋಳಿ ಬಲಿ ಪೂಜೆ ನಡೆಸಿದ್ದು, ಮುಂದಿನ ದಿನಗಳಲ್ಲಿ ದೊಡ್ಡ ಬಲಿ ಪೂಜೆ ನಡೆಸಲು ನಿರ್ಧರಿಸಲಾಗಿತ್ತೆಂದು ಆರೋಪಿ ವ್ಯಕ್ತಿಗಳಿಂದ ತಿಳಿದುಬಂದಿದೆ. ಪ್ರಸ್ತುತ ಈ ಇಬ್ಬರನ್ನು ಬಂಧಿಸಿದ್ದರಿಂದ ಮುಂದೆ ನಡೆಯಬಹುದಾಗಿದ್ದ ಭಾರೀ ಅನಾಹುತವನ್ನು ಪೊಲೀಸರು ತಪ್ಪಿಸಿದಂತಾಗಿದೆ. ಅದು ಅಲ್ಲದೇ ಇವರು ಮೌಢ್ಯತೆಯಿಂದ ಇನ್ನೂ ಕೆಲವು ಅಡಿಗಳಷ್ಟು ಮಣ್ಣು ತೆಗೆದಿದಲ್ಲಿ ಮನೆ ಕುಸಿದು ಮನೆಯಲ್ಲಿದ್ದವರೆಲ್ಲ ಸಾವನ್ನಪ್ಪುವ ಸಾಧ್ಯತೆಯಿತ್ತು. ಇನ್ನೂ ಕೆಲವರು ತಲೆಮರೆಸಿಕೊಂಡಿದ್ದು, ಪೊಲೀಸರು ಆರೋಪಿಗಳ ಪತ್ತೆ ಕಾರ್ಯ ಮುಂದುವರಿಸಿದ್ದಾರೆ.

    ಬಂಧಿತ ಆರೋಪಿಗಳ ವಿವರ:
    1. ಎಂ.ಆರ್.ಗಣೇಶ್ ತಂದೆ ರಮೇಶ್, ಪ್ರಾಯ 23 ವರ್ಷ ಸೆಂಟ್ರಿಂಗ್ ಕೆಲಸ ಒಳಮಾಳ ಕೋಟೆ ಪೈಸಾರಿ ಚೆನ್ನಯ್ಯನಕೋಟೆ ಸಿದ್ದಾಪುರ ನಿವಾಸಿಯಾಗಿದ್ದಾನೆ. ಇದನ್ನೂ ಓದಿ:  ರೈತ ಗೀತೆ ಮೂಲಕ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್‌ ಚಾಲನೆ

    2. ಸಾಧಿಕ್.ಬಿ.ಕೆ ತಂದೆ ಲೇಟ್ ಅಬ್ದುಲ್ ರಹಿಮಾನ್ ಪ್ರಾಯ 42 ವರ್ಷ ಪಡುಬಿದ್ರಿ ಹಂಚಿನಡ್ಕ ಉಡುಪಿ ಜಿಲ್ಲೆ ನಿವಾಸಿಯಾಗಿದ್ದಾನೆ.

    ಆರೋಪಿಗಳ ವಿರುದ್ಧ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಾಮಾಚಾರಕ್ಕೆ ಬಳಸಿದ ಕೆಲವು ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಡಿಕೇರಿ ಉಪವಿಭಾಗದ ಪೆÇಲೀಸ್ ಉಪಾಧೀಕ್ಷಕರಾದ ಗಜೇಂದ್ರ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಅಪರಾಧ ಗುಪ್ತದಳ ಇನ್ಸ್ ಪೆಕ್ಟರ್ ಐ.ಪಿ.ಮೇದಪ್ಪ, ಮಡಿಕೇರಿ ನಗರ ವೃತ್ತ ನಿರೀಕ್ಷಕ ಪಿ.ವಿ.ಕಟೇಶ್ ಹಾಗೂ ಡಿಸಿಐಬಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

  • ಮನೆಗೆ ನುಗ್ಗಿ ಕಳ್ಳತನ ಮಾಡಿದ ಚೋರ 48 ಗಂಟೆಗಳಲ್ಲಿ ಪೊಲೀಸರ ಅತಿಥಿ

    ಮನೆಗೆ ನುಗ್ಗಿ ಕಳ್ಳತನ ಮಾಡಿದ ಚೋರ 48 ಗಂಟೆಗಳಲ್ಲಿ ಪೊಲೀಸರ ಅತಿಥಿ

    ಮಡಿಕೇರಿ: ವಿರಾಜಪೇಟೆ ಪಟ್ಟಣದ ಮನೆಯೊಂದಕ್ಕೆ ನುಗ್ಗಿ ಟಿವಿ ಹಾಗೂ ನಗದು ದೋಚಿದ್ದ ಚೋರನನ್ನು ಕಳ್ಳತನ ನಡೆದ 48 ಗಂಟೆಗಳಲ್ಲಿ ಬಂಧಿಸುವಲ್ಲಿ ಕೊಡಗಿನ ವಿರಾಜಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.

    ಕಲ್ಲುಬಾಣೆಯ ನಿವಾಸಿ ಕೂಲಿ ಕಾರ್ಮಿಕ ಕೆ.ಎಸ್.ನಿಖಿಲ್(22) ಬಂಧಿತ ಆರೋಪಿಯಾಗಿದ್ದು, ಆತನ ಬಳಿಯಿಂದ ಟಿವಿ ಹಾಗೂ ನಗದನ್ನು ವಶಪಡಿಸಿಕೊಳ್ಳಲಾಗಿದೆ. ವಿರಾಜಪೇಟೆ ಪಟ್ಟಣದ ನಿವಾಸಿ ಸುಬ್ಬಯ್ಯ ಎಂಬವರು ಅ.7 ರಂದು ಹೊಳೆನರಸೀಪುರಕ್ಕೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆಯನ್ನು ಗಮನಿಸಿ ಹಿಂಬಾಗಿಲನ್ನು ಮುರಿದು ಒಳ ನುಗ್ಗಿದ ನಿಖಿಲ್ ಟಿವಿ ಹಾಗೂ 1,400 ರೂ. ದೋಚಿ ಪರಾರಿಯಾಗಿದ್ದನು. ಇದನ್ನೂ ಓದಿ: ತಿರುಗುವ ಮನೆ ನಿರ್ಮಿಸಿ ಪತ್ನಿಗೆ ಗಿಫ್ಟ್ ಕೊಟ್ಟ 72ರ ಪತಿ

    ಅ.8 ರಂದು ಮನೆಗೆ ಬಂದ ಸುಬ್ಬಯ್ಯ ಅವರು ಕಳ್ಳತನವಾಗಿರುವುದು ತಿಳಿದು ಪೊಲೀಸರಿಗೆ ದೂರು ನೀಡಿದರು. ಶ್ವಾನದಳ ಮತ್ತು ಬೆರಳಚ್ಚು ತಜ್ಞರ ಸಹಕಾರದಿಂದ ತನಿಖೆ ಕೈಗೊಂಡ ಪೊಲೀಸರು ಅ.10 ರಂದು ಬೆಳಗ್ಗೆ ವಿರಾಜಪೇಟೆ ಖಾಸಗಿ ಬಸ್ ನಿಲ್ದಾಣದ ಬಳಿ ನಿಖಿಲ್ ನನ್ನು ಬಂಧಿಸಿದರು. ತಪ್ಪೊಪ್ಪಿಕೊಂಡ ಈತನಿಂದ ಟಿವಿ ಮತ್ತು 1,400 ರೂ. ನಗದನ್ನು ವಶಕ್ಕೆ ಪಡೆಯಲಾಯಿತು. ಇದನ್ನೂ ಓದಿ: ಕಾಲುವೆಗೆ ಬಿದ್ದು 10 ವರ್ಷದ ಮಗು ಸಾವು

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ ಮಾರ್ಗದರ್ಶನದಲ್ಲಿ ವಿರಾಜಪೇಟೆ ಉಪವಿಭಾಗದ ಡಿ.ವೈ.ಎಸ್‍ಪಿ ನಿರ್ದೇಶನದಲ್ಲಿ ವೃತ್ತ ನಿರೀಕ್ಷಕ ಬಿ.ಎಸ್.ಶ್ರೀಧರ್ ನೇತೃತ್ವದಲ್ಲಿ ವಿರಾಜಪೇಟೆ ನಗರ ಠಾಣೆಯ ಅಪರಾಧ ವಿಭಾಗದ ಉಪನಿರೀಕ್ಷಕ ಹೆಚ್.ಎಸ್.ಬೋಜಪ್ಪ, ನಗರ ಠಾಣಾಧಿಕಾರಿಗಳಾದ ಜಗದೀಶ್ ಧೂಳ್ ಶೆಟ್ಟಿ, ಜಿಲ್ಲಾ ಬೆರಳಚ್ಚು ವಿಭಾಗದ ಜಯಕುಮಾರ್, ಸಿಬ್ಬಂದಿಗಳಾದ ಪಿ.ಯು.ಮುನೀರ್, ರಂಜನ್ ಕುಮಾರ್, ಮಧು ಟಿ.ಟಿ. ಗೀತಾ, ಮೋಹನ್ ಟಿ.ಕೆ.ಸಾಗರ್, ಮಂಜುನಾಥ್ ಬಿ.ವಿ ಹಾಗೂ ಮಹಂತೇಶ್ ಎಂ.ಪಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

  • ಕಾಡಾನೆ ಕಂಡು ಗಾಬರಿಯಾಗಿ ಮರಕ್ಕೆ ಕಾರು ಡಿಕ್ಕಿ ಹೊಡೆದ.!

    ಕಾಡಾನೆ ಕಂಡು ಗಾಬರಿಯಾಗಿ ಮರಕ್ಕೆ ಕಾರು ಡಿಕ್ಕಿ ಹೊಡೆದ.!

    ಡಿಕೇರಿ: ರಸ್ತೆಯಲ್ಲಿ ಸಂಚರಿಸುವಾಗ ಮಾರ್ಗ ಮಧ್ಯದಲ್ಲಿ ಕಾಡಾನೆ ನೋಡಿ ಗಾಬರಿಗೊಂಡು, ಚಾಲಕ ಕಾರನ್ನು ಮರಕ್ಕೆ ಡಿಕ್ಕಿ ಹೊಡೆಸಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಹುಂಡಿ ಗ್ರಾಮದಲ್ಲಿ ನಡೆದಿದೆ.

    ಇಂದು ಬೆಳಗ್ಗೆ ಖಾಸಗಿ ಬ್ಯಾಂಕ್ ವ್ಯವಸ್ಥಾಪಕರೊಬ್ಬರು ಕಾರಿನಲ್ಲಿ ಪಾಲಿಬೆಟ್ಟದಿಂದ ಸಿದ್ದಾಪುರದತ್ತ ಬರುತ್ತಿದ್ದರು. ಈ ವೇಳೆ ಹುಂಡಿ ಎಂಬಲ್ಲಿ ದಿಢೀರಾಗಿ ಕಾಡಾನೆ ಎದುರಾಗಿದೆ. ಕಾಡಾನೆಯನ್ನು ನೋಡಿದ ತಕ್ಷಣ ಗಾಬರಿಗೊಂಡ ಅವರು ಕಾರಿನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ತೋಟದೊಳಗೆ ಕಾರನ್ನು ನುಗ್ಗಿಸಿದ್ದಾರೆ. ಇದರ ಪರಿಣಾಮ ಕಾರು ಆಲದ ಮರಕ್ಕೆ ಡಿಕ್ಕಿಯಾಗಿದೆ. ಇದನ್ನೂ ಓದಿ:ಫಾಲ್ಸ್‌ಗೆ ಬಿದ್ದು ಇಬ್ಬರು ಯುವಕರು ಸಾವು – ಶವ ಎತ್ತಿದ ಪಿಎಸ್‍ಐ

    ಕಾರು ಡಿಕ್ಕಿಯಾದ ರಭಸಕ್ಕೆ ಮರ ಎರಡು ಸೀಳಾಗಿದೆ. ಅದೃಷ್ಟವಶಾತ್ ಕಾರಿನ ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮರಕ್ಕೆ ಕಾರು ಅಪ್ಪಳಿಸಿದಾಗ ಉಂಟಾದ ಶಬ್ಧಕ್ಕೆ ಬೆದರಿದ ಕಾಡಾನೆ ಅಲ್ಲಿಂದ ಕಾಲ್ಕಿತ್ತಿದೆ. ಬಳಿಕ ಟ್ರ್ಯಾಕ್ಟರ್ ಸಹಾಯದಿಂದ ಕಾರನ್ನು ತೋಟದೊಳಗಿನಿಂದ ಹೊರಕ್ಕೆ ತರಲಾಗಿದ್ದು, ಸಿದ್ದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ:21 ಕೆಜಿಯ ಲಡ್ಡು 18.90 ಲಕ್ಷಕ್ಕೆ ಹರಾಜಾಯ್ತು!

  • ಹೀಗೊಂದು ವಿಚಿತ್ರ ಕೋಳಿ ಮೊಟ್ಟೆ – ಮನೆಯವರಿಗೆ ಅಚ್ಚರಿ

    ಹೀಗೊಂದು ವಿಚಿತ್ರ ಕೋಳಿ ಮೊಟ್ಟೆ – ಮನೆಯವರಿಗೆ ಅಚ್ಚರಿ

    ಮಡಿಕೇರಿ: ಈ ಚಿತ್ರವನ್ನು ನೋಡಿ ಇದಾವುದೋ ಆಮೆ ಮರಿ ಅಥವಾ ಮೊಲದ ಮರಿ ಇರಬಹುದೆಂದು ನೀವು ಊಹಿಸಿದ್ದರೆ ಅದು ತಪ್ಪು. ಮೊಟ್ಟೆ ಮೊದಲೋ ಅಥವಾ ಕೋಳಿ ಮೊದಲೋ ಎಂಬ ಪ್ರಶ್ನೆಗೆ ಇನ್ನೂ ಉತ್ತರಕ್ಕೆ ತಡಕಾಟ ನಡೆಯುತ್ತಲೇ ಇದೆ. ಆದರೆ ಇಲ್ಲೊಂದು ಮನೆಯಲ್ಲಿ ಸಾಕಿದ ಕೋಳಿಯು ವಿಚಿತ್ರ ಆಕಾರದ ಮೊಟ್ಟೆಯನ್ನಿಟ್ಟು ಮನೆಯವರಿಗೆ ಅಚ್ಚರಿ ಉಂಟು ಮಾಡಿದೆ.

    ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕಡಂಗ ಗ್ರಾಮದ ಕೋಲೆಯಂಡ ರೇಖಾ ಪ್ರಸನ್ನ ಅವರ ಕೋಳಿಯೊಂದು ವಿಚಿತ್ರ ಮೊಟ್ಟಿಯನ್ನು ಇಟ್ಟಿದೆ. ಪ್ರತಿನಿತ್ಯ ಕೋಳಿ ಎಂದಿನಂತೆ ಮೊಟ್ಟೆ ಇಡುತ್ತಿತ್ತು. ಆದರೆ ಇಂದು ಕೋಳಿ ಇಟ್ಟ ಮೊಟ್ಟೆಯನ್ನು ನೋಡಿದ ಮನೆಯವರು ಆಶ್ಚರ್ಯಚಕಿತಕ್ಕೊಳಗಾಗಿದ್ದಾರೆ. ಇದನ್ನೂ ಓದಿ: ಕೇರಳ ಸಂಪರ್ಕ – ಕೊಡಗಿನ ಗ್ರಾಮದಲ್ಲಿ 72 ಮಂದಿಗೆ ಸೋಂಕು

    ಮೊಟ್ಟೆಯು ಎಂದಿನಂತೆ ಇರದೇ ಅದು ವಿಚಿತ್ರ ಆಕೃತಿಯಲ್ಲಿ ಕಂಡುಬಂದಿದೆ. ಇದೀಗ ಈ ವಿಚಿತ್ರ ಕೋಳಿ ಮೊಟ್ಟೆ ಅಚ್ಚರಿಗೆ ಕಾರಣವಾಗಿದೆ. ಕೆಲವೊಮ್ಮೆ ಕೋಳಿಗೆ ಕ್ಯಾಲ್ಸಿಯಂ ಕೊರತೆಯಾದಾಗ ಈ ರೀತಿಯ ಮೊಟ್ಟೆ ಸೃಷ್ಟಿಯಾಗುತ್ತದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಅಪ್ಪಚ್ಚು ರಂಜನ್‍ಗೆ ಸಚಿವ ಸ್ಥಾನ ನೀಡಿ – ಬಿಜೆಪಿ ಕಾರ್ಯಕರ್ತರಿಂದ ಬೆಂಗಳೂರು ಚಲೋ