Tag: ವಿರೂಪಾಕ್ಷಪ್ಪ ಮಾಡಾಳ್‌

  • ಯಾರೇ ಕೈಮುಗಿದರೂ ಮೋದಿ ವಾಪಸ್ ಕೈಮುಗಿಯುತ್ತಾರೆ- ಕೋಟ ಶ್ರೀನಿವಾಸ ಪೂಜಾರಿ

    ಯಾರೇ ಕೈಮುಗಿದರೂ ಮೋದಿ ವಾಪಸ್ ಕೈಮುಗಿಯುತ್ತಾರೆ- ಕೋಟ ಶ್ರೀನಿವಾಸ ಪೂಜಾರಿ

    ಉಡುಪಿ: ಫೈಟರ್ ರವಿ (Fighter Ravi) ಹಾಗೂ ಪ್ರಧಾನಿ ನರೇಂದ್ರ ಮೋದಿ (Narendra Modi) ಪರಸ್ಪರ ನಮಸ್ಕಾರ ಮಾಡಿಕೊಂಡ ಫೋಟೊ ಬಹಳಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪರ ವಿರೋಧ ಅಭಿಪ್ರಾಯಗಳು ಕೇಳಿ ಬರುತ್ತಿದೆ. ಡಿ.ಕೆ.ಶಿವಕುಮಾರ್ (D.K.Shivakumar) ಮತ್ತು ಮನಮೋಹನ್ ಸಿಂಗ್ (Manmohan Singh) ಫೋಟೋವನ್ನು ಹೋಲಿಕೆ ಮಾಡಿ ಜನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಈ ಬೆಳವಣಿಗೆಗೆ ಸಂಬಂಧಪಟ್ಟಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಪ್ರತಿಕ್ರಿಯೆ ನೀಡಿದ್ದಾರೆ.

    ಮೋದಿಗೆ ಕೈ ಮುಗಿಯಬಾರದು ಎಂದು ನಾವು ಹೇಳಲು ಆಗುವುದಿಲ್ಲ. ರಾಜಕೀಯ ಪಕ್ಷದ ಕಾರ್ಯಕರ್ತನಾಗಿ ಪ್ರಧಾನ ಮಂತ್ರಿಗೆ ಕೈಮುಗಿಯುತ್ತಾರೆ. ಯಾರೇ ಕೈಮುಗಿದರೂ ವಾಪಾಸ್ ಕೈಮುಗಿಯುವುದು ಪ್ರಧಾನ ಮಂತ್ರಿಗಳು ಇಟ್ಟುಕೊಂಡ ಸಂಪ್ರದಾಯ. ಆತ ಯಾವ ವ್ಯಕ್ತಿ? ಆತನ ಹೆಸರೇನು? ಯಾವ ಸೀಟು ಎನ್ನುವುದು ಪ್ರಧಾನಿಗೆ ಗೊತ್ತಿರುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಅಪ್ಪು ಹೆಸರಿನಲ್ಲಿ ಜೆಡಿಎಸ್, ಕಾಂಗ್ರೆಸ್ ರಾಜಕೀಯ – PSI ಮೇಲೆ ಹಲ್ಲೆ 

    ಭಾರತೀಯನೊಬ್ಬ ಪ್ರಧಾನಿಗೆ ಕೈಮುಗಿದಿದ್ದಾನೆ. ಆತ ರೌಡಿಶೀಟರ್ ಆಗಿದ್ದರೆ ಯಾವ ರಕ್ಷಣೆಯೂ ಇಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಏನಾದರು ಅಪರಾಧ ಮಾಡಿದರೆ ಸಂವಿಧಾನದ ಪ್ರಕಾರ ಕ್ರಮ ಆಗುತ್ತದೆ. ಬಿಜೆಪಿ (BJP) ಪಕ್ಷದ ವಿಜಯ ಸಂಕಲ್ಪ ರಥಯಾತ್ರೆಗೆ (Vijaya Sankalpa Yatra) ಅಭೂತಪೂರ್ವ ಸ್ಪಂದನೆಯನ್ನು ಜನತೆ ನೀಡಿದ್ದಾರೆ. ಯುವಕರ ರಣೋತ್ಸವ, ಕಾಯಕರ್ತರ ಉತ್ಸಾಹದಿಂದಾಗಿ ಸಾವಿರಾರು ಜನರು ರಥಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಇದರ ಆಧಾರದಲ್ಲಿ ಬಿಜೆಪಿ ಪಕ್ಷವು ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸುತ್ತದೆ ಎಂದು ಕೋಟ ಶ್ರೀನಿವಾಸ ಪೂಜಾರಿ ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಗುಬ್ಬಿ ಶ್ರೀನಿವಾಸ್‌ಗೆ ಆಹ್ವಾನ – ಇಬ್ರಾಹಿಂ ವಿರುದ್ಧ ಹೆಚ್‌ಡಿಕೆ ಗರಂ

    ಹಳೇ ಮೈಸೂರು (Mysuru) ಭಾಗದಲ್ಲಿ ಅಭ್ಯರ್ಥಿಯ ಆಯ್ಕೆಗೂ ತಡಕಾಡುತ್ತಿದ್ದ ಕಾಲವಿತ್ತು. ಆದರೆ ಈಗ ನೂರಕ್ಕೆ ನೂರು ಶಕ್ತಿ ವೃದ್ಧಿಸಿದೆ. ಪ್ರಧಾನಿ ಮೋದಿಯವರ ಮಂಡ್ಯ (Mandya) ಭೇಟಿ ವೇಳೆ ಜನರು ತೋರಿದ ಪ್ರೀತಿಯೇ ಇದಕ್ಕೆ ಸಾಕ್ಷಿ ಎಂದರು. ಲೋಕಾಯುಕ್ತಕ್ಕೆ ಹಲ್ಲು ಕೊಟ್ಟದ್ದು ಬಿಜೆಪಿ ಸರ್ಕಾರ. ಶಾಸಕ ವಿರೂಪಾಕ್ಷಪ್ಪ ಮಾಡಾಳ್ (Madal Virupakshappa) ವಿರುದ್ಧ ದಾಖಲಾಗಿರುವ ಲೋಕಾಯುಕ್ತ ಪ್ರಕರಣವು ಚುನಾವಣಾ ಸನಿಹದಲ್ಲಿರುವುದರಿಂದ ಸ್ವಾಭಾವಿಕವಾಗಿ ಚರ್ಚೆಯಾಗುತ್ತದೆ. ಆದರೆ ಲೋಕಾಯುಕ್ತವನ್ನು ಸಂಪೂರ್ಣ ನಿಷ್ಕ್ರಿಯ ಮಾಡಿ, ಎಸಿಬಿ ರಚಿಸಿದ್ದು ಯಾರು ಎಂಬುದು ರಾಜ್ಯದ ಜನರಿಗೆ ತಿಳಿದಿದೆ. ಲೋಕಾಯುಕ್ತಕ್ಕೆ ಮರುಜೀವ ನೀಡಿ, ಶಕ್ತಿ ಕೊಟ್ಟು, ಹಲ್ಲು ಕೊಟ್ಟಿರುವುದು ಬೊಮ್ಮಾಯಿ (Basavaraj Bommai) ನೇತೃತ್ವದ ಬಿಜೆಪಿ ಸರ್ಕಾರ ಎಂದರು. ಇದನ್ನೂ ಓದಿ: ಬಡವರಿಗೆ ಮನೆ, ಅನಾಥಾಶ್ರಮಗಳಿಗೆ ಮಧ್ಯಾಹ್ನದ ಭೋಜನ – ಇದು ದಿನಗೂಲಿ ನೌಕರರಿಂದಲೇ ರಚನೆಯಾದ ಟ್ರಸ್ಟ್‌ 

    ಪಾರದರ್ಶಕ ಆಡಳಿತ ಮತ್ತು ಭ್ರಷ್ಟಾಚಾರ ನಿಯಂತ್ರಣಕ್ಕೆ ತರುವ ಸಲುವಾಗಿ ಲೋಕಾಯುಕ್ತವನ್ನು ಜಾರಿಗೆ ತಂದಿದೆ. ನಮ್ಮ ಸರ್ಕಾರ ಬಿಟ್ಟು ಬೇರೆ ಯಾವ ಸರ್ಕಾರ ಇದ್ದರೂ, ಆಡಳಿತ ಪಕ್ಷದ ಶಾಸಕನ ಮೇಲೆ ಪ್ರಕರಣ ದಾಖಲಾಗಲು ಸಾಧ್ಯವಿತ್ತೆ? ಆರೋಪವಿದೆ, ಅದಕ್ಕೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಸುದ್ದಿಗೋಷ್ಠಿಯಲ್ಲಿ ಸೋಮಣ್ಣ ಕಣ್ಣೀರು – ಬಿಜೆಪಿ ಬಿಡಲ್ಲ ಎಂದು ಸ್ಪಷ್ಟನೆ

  • ಶಾಸಕರ ದಾವಣಗೆರೆಯ ಮನೆ ಮೇಲೂ ರೇಡ್- ಇಂದು ಬೇನಾಮಿ ಆಸ್ತಿ ಮೇಲೂ ದಾಳಿ ಸಾಧ್ಯತೆ

    ಶಾಸಕರ ದಾವಣಗೆರೆಯ ಮನೆ ಮೇಲೂ ರೇಡ್- ಇಂದು ಬೇನಾಮಿ ಆಸ್ತಿ ಮೇಲೂ ದಾಳಿ ಸಾಧ್ಯತೆ

    ದಾವಣಗೆರೆ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಪುತ್ರ ಪ್ರಶಾಂತ್ (V Prashant Madal) ಲೋಕಾಯುಕ್ತ ದಾಳಿಗೊಳಗಾಗಿದ್ದು, ಮಾಡಾಳ್ ವಿರೂಪಾಕ್ಷಪ್ಪ ಸೇರಿದ ನಿವಾಸ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಶಾಸಕರ ನಿವಾಸ ಮಾಡಾಳ್ ಗ್ರಾಮದಲ್ಲಿರುವ ನಿವಾಸಕ್ಕೆ ಲೋಕಾಯುಕ್ತ ಅಧಿಕಾರಿಗಳು ಬೆಳಗ್ಗೆಯಿಂದ ಸತತ 11 ಗಂಟೆಗಳ ಕಾಲ ನಿರಂತರವಾಗಿ ತಲಾಶ್ ನಡೆಸಿದ್ದು, ಹತ್ತು ಲಕ್ಷಕ್ಕೂ ಹೆಚ್ಚು ನಗದು ಹಾಗೂ ಆಭರಣ ಸಿಕ್ಕಿವೆ. ಬೆಂಗಳೂರಿನಲ್ಲಿ ದಾಳಿ ನಡೆಸಿದ 17 ಗಂಟೆಗಳ ನಂತರ ಶಾಸಕರ ಸ್ವ ಗ್ರಾಮದಲ್ಲಿ ದಾಳಿ ನಡೆಸಿದ್ದು, ಬೆಟ್ಟ ಬಗೆದು ಹೆಗ್ಗಣ ಹಿಡಿದಂತಾಗಿದೆ. ಅಲ್ಲದೆ ಅಪಾರ ಪ್ರಾಮಾಣದ ಬೇನಾಮಿ ಆಸ್ತಿಯ ಬಗ್ಗೆ ಹೊಗೆಯಾಡುತ್ತಿದೆ.

    ಚನ್ನಗಿರಿ ಕ್ಷೇತ್ರ ಎಂದರೆ ಮಾಡಾಳ್ ವಿರೂಪಾಕ್ಷಪ್ಪ, ಮಾಡಾಳ್ ವಿರೂಪಾಕ್ಷಪ್ಪ ಎಂದರೆ ಬಿಜೆಪಿ (BJP) ಭದ್ರ ಕೋಟೆ. ಆದರೆ ಇದೀಗ ಚುನಾವಣೆ ಸಮೀಪದಲ್ಲೇ ಲೋಕಾಯುಕ್ತ (Lokayukta) ಶಾಕ್ ಕೊಟ್ಟಿದೆ. ಲಂಚ ಪಡೆಯುವಾಗಲೇ ಶಾಸಕರ ಪುತ್ರ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿರೋದು ಶಾಸಕರನ್ನು ಬುಡಮೇಲಾಗಿಸಿದೆ. ಸದ್ಯ ಈ ಎಲ್ಲಾ ಬೆಳವಣಿಗೆಗಳ ಬೆಂಗಳೂರಿನ ನಿವಾಸದಲ್ಲಿ ಕೋಟಿ ಕೋಟಿ ಹಣವನ್ನು ವಶಕ್ಕೆ ಪಡೆದ ಲೋಕಾಯುಕ್ತ ಅಧಿಕಾರಿಗಳು ದಾವಣಗೆರೆ (Davanagere) ಜಿಲ್ಲೆಯ ಚನ್ನಗಿರಿಯ ಮಾಡಾಳು ಗ್ರಾಮದಲ್ಲಿರುವ ಮಾಡಾಳ್ ವಿರೂಪಾಕ್ಷಪ್ಪರ ನಿವಾಸದಲ್ಲೂ ತಲಾಶ್ ನಡೆಸಿದರು.

    ಹಾವೇರಿ ಹಾಗೂ ದಾವಣಗೆರೆಯ ಲೋಕಾಯುಕ್ತ ಅಧಿಕಾರಿಗಳು ನಾಲ್ಕು ಕಾರುಗಳಲ್ಲಿ 20ಕ್ಕೂ ಹೆಚ್ಚು ಅಧಿಕಾರಿಗಳು ಬರೋಬ್ಬರಿ 11 ಗಂಟೆಗಳ ಕಾಲ ಇಡೀ ಮನೆಯನ್ನು ಶೋಧ ನಡೆಸಿದ್ದು, ಹಲವಾರು ದಾಖಲೆಗಳನ್ನು ಬ್ಯಾಂಕ್ ವಹಿವಾಟು ಕಡತಗನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದರು. ಅಲ್ಲದೆ ಇಡೀ ಮನೆ ಕಚೇರಿ, ಜಮೀನು ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಮಾಡಾಳ್ ಲಂಚ ಕೇಸ್‌- ಟೆಂಡರ್‌ನಲ್ಲಿ ಗೋಲ್ಮಾಲ್‌ ಹೇಗೆ? ಎಷ್ಟು ದುಬಾರಿ ದರ?

    ಸತತ 10-11 ಗಂಟೆಗಳ ಕಾಲ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಅಲ್ಲೂ ಅಪಾರ ಚಿನ್ನಾಭರಣ ಸಿಕ್ಕಿದೆ. ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮನೆಯಲ್ಲಿ 16.5 ಲಕ್ಷ ನಗದು, 2800 ಗ್ರಾಂ ಚಿನ್ನ ಹಾಗೂ 20 ಕೆ.ಜಿ ಬೆಳ್ಳಿ ಹಾಗೂ ಅಪಾರ ಪ್ರಮಾಣದ ಆಸ್ತಿ ದಾಖಲೆ ಪತ್ತೆಯಾಗಿದೆ. ಇದಕ್ಕೂ ಮೊದಲು ಚನ್ನಗಿರಿ ತಾಲೂಕಿನ ಮಾವಿನಹೊಳೆಯಲ್ಲಿನ ಮಾಡಾಳ್ ಕುಟುಂಬದ ಕ್ರಶರ್ ಕಚೇರಿ ಹಾಗೂ ಮಾವಿನಕಟ್ಟಿ ಬಳಿಯ ಮಾಡಾಳ್ ಕುಟುಂಬದ ತೋಟದ ಮತ್ತು ಖೇಣಿ ಮನೆಯಲ್ಲಿ ಶೋಧ ನಡೆಸಿದ ಅಧಿಕಾರಿಗಳು, ಮನೆಯಲ್ಲಿ ಇರುವ ಶಾಸಕ ಮಾಡಾಳ್ ಪತ್ನಿ ಲೀಲಾವತಿಗೆ ಪಟ್ಟಿಯ ಪ್ರತಿ ನೀಡಿ ಸಹಿ ಪಡೆದರು.

    ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬೇನಾಮಿ ಆಸ್ತಿಯನ್ನು ಹೊಂದಿರಬಹುದು ಎನ್ನುವ ಅನುಮಾನದಿಂದ ಇಂದು ಕೂಡ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಬಹುದಾದ ಸಂಭವವಿದೆ. ಒಟ್ಟಾರೆಯಾಗಿ ಮಾಡಾಳ್ ವಿರೂಪಾಕ್ಷಪ್ಪ ನಿವಾಸದ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಕೆಲ ನಗದು ಹಾಗೂ ಆಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಇಂದು ಕೂಡ ಬೇನಾಮಿ ಆಸ್ತಿ ಮೇಲೆ ಶೋಧ ನಡೆಸುವ ಸಾಧ್ಯತೆ ಇದೆ.

  • ಲೋಕಾಯುಕ್ತ ಭರ್ಜರಿ ಬೇಟೆ- 8.12 ಕೋಟಿ ಹಣ ಸೀಜ್

    ಲೋಕಾಯುಕ್ತ ಭರ್ಜರಿ ಬೇಟೆ- 8.12 ಕೋಟಿ ಹಣ ಸೀಜ್

    ಬೆಂಗಳೂರು/ದಾವಣಗೆರೆ: ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್ (Madal Virupakshappa) ಹಾಗೂ ಪುತ್ರನಿಂದ ಟೆಂಡರ್ ಡೀಲ್ ನಡೆದಿರುವುದು ಬಯಲಾಗಿದೆ.

    ಅಪ್ಪನ ಟೆಂಡರ್ ಡೀಲ್, ಮಗ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿದ್ದಾನೆ. ಶಾಸಕರ ಪುತ್ರ ಪ್ರಶಾಂತ್ (VPrashant Madal) ಮನೆಯಲ್ಲಿ 18 ಗಂಟೆ ಶೋಧ ನಡೆಸಿದ್ದು, ಸದ್ಯ 8.12 ಕೋಟಿ ಹಣ ಸೀಜ್ ಮಾಡಲಾಗಿದೆ. ಅಧಿಕಾರಿಗಳು ಪ್ರಶಾಂತ್ ಮನೆಯ ಮೂಲೆ ಮೂಲೆಯಲ್ಲಿಯೂ ಜಾಲಾಡಿದ್ದಾರೆ.

    ಲೋಕಾಯುಕ್ತ (Lokayukta) ಕಚೇರಿಗೆ ಸೀಜ್ ಮಾಡಿ 8 ಗುಟ್ಕಾ ಬ್ಯಾಗ್‍ಗಳಲ್ಲಿ 8.12 ಕೋಟಿ ಹಣ ಹಾಗೂ ಚಿನ್ನ ಶಿಫ್ಟ್ ಮಾಡಲಾಗಿದೆ. ಇತ್ತ ಈಗಾಗಲೇ ಪ್ರಕರಣ ಸಂಬಂಧ 14 ದಿನ ನ್ಯಾಯಾಂಗ ಬಂಧನದಲ್ಲಿ ಪ್ರಶಾಂತ್ ಮಾಡಾಳ್, ಟೆಂಡರ್ ಡೀಲ್ ಬಗ್ಗೆ ಲೋಕಾಯುಕ್ತ ಅಧಿಕಾರಿಳಿಂದ ವಿಚಾರಣೆ ನಡೆಯುತ್ತಿದೆ. ಇದನ್ನೂ ಓದಿ: ಕೋಟಿ-ಕೋಟಿ ವಿಚಾರ, ವಿರೂಪಾಕ್ಷಪ್ಪ ವಿಚಾರಣೆ ಬಳಿಕ ಸತ್ಯ ತಿಳಿಯಲಿದೆ: ಆರಗ ಜ್ಞಾನೇಂದ್ರ

    ವಿರೂಪಾಕ್ಷಪ್ಪ ಅವರ ದಾವಣಗೆರೆಯ ಚನ್ನಗಿರಿ ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. 4 ವಾಹನಗಳಲ್ಲಿ ಬಂದ 20ಕ್ಕೂ ಹೆಚ್ಚು ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಇನ್ನು ಬಹುಕೋಟಿ ಅಕ್ರಮ ಹಣ ಪತ್ತೆ ಬೆನ್ನಲ್ಲೇ ಮಾಡಾಳ್ ಪರಾರಿಯಾಗಿದ್ದಾರೆ.