Tag: ವಿಲ್ಸನ್ ಗಾರ್ಡನ್

  • ವಿಲ್ಸನ್ ಗಾರ್ಡನ್ ನಿಗೂಢ ಬ್ಲಾಸ್ಟ್ – ಗಾಯಗೊಂಡಿದ್ದ ತಾಯಿ, ಮಗಳು ಸಾವು

    ವಿಲ್ಸನ್ ಗಾರ್ಡನ್ ನಿಗೂಢ ಬ್ಲಾಸ್ಟ್ – ಗಾಯಗೊಂಡಿದ್ದ ತಾಯಿ, ಮಗಳು ಸಾವು

    ಬೆಂಗಳೂರು: ನಗರದ ವಿಲ್ಸನ್ ಗಾರ್ಡನ್‌ನಲ್ಲಿ (Willson Garden) ಸಂಭವಿಸಿದ್ದ ನಿಗೂಢ ಬ್ಲಾಸ್ಟ್‌ನಲ್ಲಿ ಭೀಕರವಾಗಿ ಗಾಯಗೊಂಡಿದ್ದ ತಾಯಿ, ಮಗಳು ಸಾವನ್ನಪ್ಪಿದ್ದಾರೆ.

    ಮಗಳು ಖಯಾಲಾ (8) ಹಾಗೂ ತಾಯಿ ಕಸ್ತೂರಮ್ಮ (45) ಮೃತರು ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ದರ್ಶನ್ ಮುಡಿ ಕೊಟ್ಟ ರಹಸ್ಯ ರಿವೀಲ್!

    ಆ.15ರಂದು ವಿಲ್ಸನ್ ಗಾರ್ಡನ್ ಬಳಿಯ ಆಡುಗೋಡಿಯಲ್ಲಿ ನಿಗೂಢ ಸ್ಫೋಟ ಉಂಟಾಗಿತ್ತು. ಈ ವೇಳೆ ಬಾಲಕ ಮುಬಾರಕ್ ಸಾವನ್ನಪ್ಪಿದ್ದು, 8 ಜನರು ಗಾಯಗೊಂಡಿದ್ದರು. ಈ ಪೈಕಿ ಮುಖ ಹಾಗೂ ಎದೆ ಭಾಗದಲ್ಲಿ ಸುಟ್ಟು ಗಾಯಗೊಂಡಿದ್ದ ಮಗಳು ಹಾಗೂ ತಾಯಿ ಇಬ್ಬರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಸೋಮವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

    ಘಟನೆ ಏನು?
    ಆಡುಗೋಡಿಯ ತಿಮ್ಮರಾಜು ಎಂಬುವವರ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಆ ಮನೆ ಸಂಪೂರ್ಣ ಛಿದ್ರವಾಗಿತ್ತು. ಸ್ಫೋಟದಿಂದ ಅಕ್ಕಪಕ್ಕದ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿತ್ತು. ಗಾಯಾಳುಗಳು ಸಂಜಯ್ ಗಾಂಧಿ, ರಾಜೀವ್ ಗಾಂಧಿ ಆಸ್ಪತ್ರೆ ಸೇರಿದಂತೆ ಇತರೆ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ದಾಖಲಾಗಿದ್ದರು.

    ಸಿಲಿಂಡರ್ ಲೀಕ್ ಆಗಿ ಕೆಮಿಕಲ್ ರಿಯಾಕ್ಷನ್ ಆಗಿ ಈ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಘಟನಾ ಸ್ಥಳಕ್ಕೆ ಆಡುಗೊಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಡೀ ರಾತ್ರಿ ಗ್ಯಾಸ್ ಲೀಕ್ ಆಗಿ ಕೆಮಿಕಲ್ ರಿಯಾಕ್ಷನ್ ಆಗಿ ಸ್ಫೋಟ ಸಂಭವಿಸಿರಬಹುದು ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಪ್ರಾಥಮಿಕ ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ಟಾಕ್ಸಿಕ್‌ನಲ್ಲೂ ಇದ್ದಾರಾ ರುಕ್ಮಿಣಿ..?

  • ಬೆಂಗಳೂರು ಬಸ್‌ ನಿಲ್ದಾಣದಲ್ಲಿ ದಾಖಲೆ ಇಲ್ಲದ 76 ಲಕ್ಷ ರೂ. ವಶ

    ಬೆಂಗಳೂರು ಬಸ್‌ ನಿಲ್ದಾಣದಲ್ಲಿ ದಾಖಲೆ ಇಲ್ಲದ 76 ಲಕ್ಷ ರೂ. ವಶ

    ಬೆಂಗಳೂರು: ದಾಖಲೆಯಿಲ್ಲದ 76 ಲಕ್ಷ  ರೂ.ಹಣವನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಮಂಗಳವಾರ ರಾತ್ರಿ 76 ಲಕ್ಷ ರೂ. ನಗದಿನೊಂದಿಗೆ ಇಬ್ಬರು ವ್ಯಕ್ತಿಗಳು ಶಾಂತಿ ನಗರ ಬಸ್‌ ನಿಲ್ದಾಣದಲ್ಲಿ ನಿಂತಿದ್ದರು. ಖಚಿತ ಮಾಹಿತಿ ಅಧಾರಿಸಿ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಆಪ್ತನ ನೆನೆದು ಕಣ್ಣೀರಿಟ್ಟ ಬೊಮ್ಮಾಯಿ – ತಲೆ ಸವರಿ ಭಾವುಕರಾದ ಸಿಎಂ

    ವಿಲ್ಸನ್‌ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈಗ ಹಣದ ಮೂಲದ ಬಗ್ಗೆ ಇಬ್ಬರನ್ನು ವಿಚಾರಣೆ ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]