Tag: ವಿವಾದಾತ್ಮಕ ಪೋಸ್ಟ್

  • ಸತೀಶ್ ಜಾರಕಿಹೊಳಿ ಹೆಸರಲ್ಲಿ ವಿವಾದಾತ್ಮಕ ಪೋಸ್ಟ್ – ಆರೋಪಿಗಳ ವಿರುದ್ಧ ದೂರು

    ಸತೀಶ್ ಜಾರಕಿಹೊಳಿ ಹೆಸರಲ್ಲಿ ವಿವಾದಾತ್ಮಕ ಪೋಸ್ಟ್ – ಆರೋಪಿಗಳ ವಿರುದ್ಧ ದೂರು

    ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಹೆಸರಿನಲ್ಲಿ ಸೋಶಿಯಲ್ ಮೀಡಿಯಾದಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದ್ದವರ ವಿರುದ್ಧ ಬೆಳಗಾವಿ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಸತೀಶ್ ಜಾರಕಿಹೊಳಿ ಅವರ ಹೆಸರಿನಲ್ಲಿ ರಾಮ ಮಂದಿರ ಹೋರಾಟದಲ್ಲಿ ಸತ್ತ ಹೆಚ್ಚಿನವರು ಓಬಿಸಿಗಳು, ಒಬ್ಬನೇ ಒಬ್ಬ ಬ್ರಾಹ್ಮಣ ಸಾಯಲಿಲ್ಲ. ಆದರೆ, ಈಗ ಮಂದಿರದ ಟ್ರಸ್ಟ್‌ನ ಪದಾಧಿಕಾರಿಗಳೆಲ್ಲ ಬ್ರಾಹ್ಮಣರು, ಒಬ್ಬನು ಓಬಿಸಿ ಇಲ್ಲ” ಎಂದು ಕೀಡಿಗೇಡಿಗಳು ಪೋಸ್ಟ್ ಮಾಡಿದ್ದಾರೆ. ಇದು ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಕೆಡಿಸಲು ಹುನ್ನಾರ ಮಾಡಲಾಗಿದೆ. ಈ ಪೋಸ್ಟ್ ಮಾಡಿದವರ ಕುರಿತು ಸೂಕ್ತ ತನಿಖೆ ನಡೆಸಬೇಕು ಅಂತಾ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ರಾಜ್ಯಾಧ್ಯಕ್ಷ ವಿಜಯ ಬಸಪ್ಪ ತಳವಾರ ಬೆಳಗಾವಿ ಸಿಇಎನ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಅವರಿಗೆ 72ರ ಸಂಭ್ರಮ – ನಮೀಬಿಯಾದಿಂದ ಭಾರತಕ್ಕೆ 8 ಚಿರತೆಗಳು

    ಸಮಾಜ ಸೇವಕನಾಗಿರುವ ನಾನು ಕಳೆದ 10 ವರ್ಷಗಳಿಂದ ಸತೀಶ್ ಜಾರಕಿಹೊಳಿ ಅವರ ಜೊತೆಗೆ ಒಡನಾಟ ಹೊಂದಿದ್ದೇನೆ. ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಕೆಡಿಸುವ ದುರುದ್ದೇಶದಿಂದ ವಾಟ್ಸಪ್, ಫೇಸ್‍ಬುಕ್‍ನಲ್ಲಿ ಕಿಡಿಗೇಡಿಗಳು ಅವರ ಹೆಸರಿನಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ಹರಿಬಿಡುತ್ತಿದ್ದಾರೆ. ಇಂತಹ ಕಿಡಿಗೇಡಿಗಳ ವಿರುದ್ಧ ತನಿಖೆ ನಡೆಸಿ, ಅಂತಹವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮಹಾಗಣಪತಿ ವಿಸರ್ಜನೆ – ಶಾಲಾ-ಕಾಲೇಜ್‍ಗಳಿಗೆ ರಜೆ, 4 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ

    Live Tv
    [brid partner=56869869 player=32851 video=960834 autoplay=true]