ಬೆಂಗಳೂರು: ದೀಪಾವಳಿ ಹಬ್ಬದ (Diwali Festival) ಪ್ರಯುಕ್ತ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ನೈಋತ್ಯ ರೈಲ್ವೆಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಆಂಧ್ರ ಪ್ರದೇಶದ ವಿಶಾಖಪಟ್ಟಣಂಗೆ (Visakhapatnam) ಒಂದು-ಮಾರ್ಗದ ವಿಶೇಷ ರೈಲು ಸೇವೆ ಆರಂಭಿಸಲಿದೆ.
ಡೇಟಾ ಹಬ್ ನಿರ್ಮಾಣಕ್ಕೆ ಗೂಗಲ್ ಸುಮಾರು 1.33 ಲಕ್ಷ ಕೋಟಿ ರೂ. ಹೂಡಿಕೆ ಮಾಡುತ್ತಿದ್ದು ಮುಂದಿನ 5 ವರ್ಷಗಳಲ್ಲಿ ತಲೆ ಎತ್ತಲಿದೆ. ಅಮೆರಿಕದ ಹೊರಗೆ ಗೂಗಲ್ ನಿರ್ಮಿಸುತ್ತಿರುವ ಅತಿ ದೊಡ್ಡ ಹೂಡಿಕೆ ಇದಾಗಿದೆ.
ಈ ಕೇಂದ್ರವನ್ನು ಅಡಾನಿಕಾನೆಕ್ಸ್ (AdaniConneX) ಮತ್ತು ಏರ್‌ಟೆಲ್‌ನ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು. ಈ ಉಪಕ್ರಮದ ಭಾಗವಾಗಿ, ಗೂಗಲ್ ವಿಶಾಖಪಟ್ಟಣದಲ್ಲಿ ಹೊಸ ಅಂತರರಾಷ್ಟ್ರೀಯ ಸಬ್‌ಸೀ ಕೇಬಲ್‌ಗಳನ್ನು ನಿರ್ಮಿಸಲಿದೆ. ಇದು ಭಾರತದ ಇಂಟರ್ನೆಟ್ ಸಾಮರ್ಥ್ಯವನ್ನು ಸುಧಾರಿಸಲಿದೆ.
ನವದೆಹಲಿ: ಮೇಕ್ ಅಮೆರಿಕ ಗ್ರೇಟ್ ಅಗೇನ್ (MAGA) ಅಂತಿದ್ದ ಟ್ರಂಪ್‌ಗೆ ಗೂಗಲ್ (Google) ಸಿಇಓ ಸುಂದರ್ ಪಿಚೈ ಟಕ್ಕರ್ ಕೊಟ್ಟಿದ್ದಾರೆ. ಭಾರತದಲ್ಲಿ (India) ಮೊದಲ ಆರ್ಟಿಫಿಶಿಯಲ್ ಇಂಟಲಿಜೆನ್ಸ್ (Artificial Intelligence) ಹಬ್‌ಗಾಗಿ ಗೂಗಲ್ ಬರೋಬ್ಬರಿ 1500 ಕೋಟಿ ರೂ. ಡಾಲರ್ ಹೂಡಿಕೆ ಮಾಡುತ್ತಿದೆ.
ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ (Visakhapatnam) ನಿರ್ಮಾಣವಾಗಲಿರುವ ಎಐ ಹಬ್‌ಗಾಗಿ ಯೋಜನೆಗಳ ಬಗ್ಗೆ ಸುಂದರ್ ಪಿಚೈ ಪ್ರಧಾನಿ ಮೋದಿಗೆ (PM NarendraModi) ವಿವರಣೆ ಕೊಟ್ಟಿದ್ದಾರೆ. ದೆಹಲಿಯಲ್ಲಿ ನಡೆದ ಗೂಗಲ್ ಕಾರ್ಯಕ್ರಮದಲ್ಲಿ ಐಟಿ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಆಂಧ್ರಪ್ರದೇಶ ಸಿಎಂ ಎನ್ ಚಂದ್ರಬಾಬು ನಾಯ್ಡು, ಆಂಧ್ರಪ್ರದೇಶ ಐಟಿ ಸಚಿವ ಎನ್ ಲೋಕೇಶ್ ಸಮ್ಮುಖದಲ್ಲಿ ಗೂಗಲ್ ಈ ಘೋಷಣೆ ಮಾಡಿದೆ.
Delighted by the launch of the Google AI Hub in the dynamic city of Visakhapatnam, Andhra Pradesh.
This multi-faceted investment that includes gigawatt-scale data center infrastructure, aligns with our vision to build a Viksit Bharat. It will be a powerful force in… https://t.co/lbjO3OSyMy
ಕ್ಲೌಡ್ ಸೇವೆಗಳು ಮತ್ತು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು, ಬೃಹತ್ ಕಂಪ್ಯೂಟಿಂಗ್ ಶಕ್ತಿ ಮತ್ತು ಕಡಿಮೆ-ಲೇಟೆನ್ಸಿ ಸಂಪರ್ಕದ ಅಗತ್ಯವಿರುವುದರಿಂದ ಡೇಟಾ ಕೇಂದ್ರಗಳು ಹೆಚ್ಚು ನಿರ್ಣಾಯಕವಾಗುತ್ತಿವೆ.
ಐದು ವರ್ಷಗಳ ಯೋಜನೆಯು (2026–2030) 1 ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ ಎಂದು ನಾಗರಿಕ ವಿಮಾನಯಾನ ಸಚಿವ ಎನ್ ರಾಮ್ ಮೋಹನ್ ನಾಯ್ಡು ಹೇಳಿದ್ದಾರೆ.
ಈ ಕೇಂದ್ರ ಅಡಾನಿಕಾನೆಕ್ಸ್ ( daniConneX) ಮತ್ತು ಏರ್‌ಟೆಲ್‌ನ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು. ಈ ಉಪಕ್ರಮದ ಭಾಗವಾಗಿ, ಗೂಗಲ್ ವಿಶಾಖಪಟ್ಟಣದಲ್ಲಿ ಹೊಸ ಅಂತರರಾಷ್ಟ್ರೀಯ ಸಬ್‌ಸೀ ಕೇಬಲ್‌ಗಳನ್ನು ನಿರ್ಮಿಸಲಿದೆ. ಇದು ಭಾರತದ ಇಂಟರ್ನೆಟ್ ಸಾಮರ್ಥ್ಯವನ್ನು ಸುಧಾರಿಸಲಿದೆ. ಅಷ್ಟೇ ಅಲ್ಲದೇ ಮುಂಬೈ ಮತ್ತು ಚೆನ್ನೈನಲ್ಲಿ ಅಸ್ತಿತ್ವದಲ್ಲಿರುವ ಗೇಟ್‌ವೇಗಳಿಗೆ ಪೂರಕವಾಗಿರುತ್ತದೆ.
ಅಮರಾವತಿ: ಸಿಂಹಾದ್ರಿ ಅಪ್ಪಣ್ಣಸ್ವಾಮಿ ದೇವಸ್ಥಾನದ ಗೋಡೆ ಕುಸಿದು ಎಂಟು ಜನರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ (Andhra Pradesh) ವಿಶಾಖಪಟ್ಟಣದಲ್ಲಿರುವ ಸಿಂಹಾಚಲಂನಲ್ಲಿ ನಡೆದಿದೆ.
ದೇವಸ್ಥಾನದಲ್ಲಿ ನಡೆಯುತ್ತಿದ್ದ ಚಂದನೋತ್ಸವಂ ವೇಳೆ ಈ ಅವಘಡ ಸಂಭವಿಸಿದೆ. ಇಂದು ಬೆಳಗ್ಗೆ ಚಂದನೋತ್ಸವದಲ್ಲಿ ವರಾಹ ಲಕ್ಷ್ಮೀ ನರಸಿಂಹಸ್ವಾಮಿಯ ನಿಜರೂಪ ದರ್ಶನಕ್ಕಾಗಿ ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು. ಇದೇ ವೇಳೆ ದೇವಸ್ಥಾನದಲ್ಲಿ ಇತ್ತೀಚಿಗೆ ನಿರ್ಮಿಸಲಾಗಿದ್ದ 20 ಅಡಿ ಉದ್ದದ ಹೊಸ ಗೋಡೆಯೊಂದು ಕುಸಿದಿದೆ. ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.ಇದನ್ನೂ ಓದಿ: ಕೋಲ್ಕತ್ತಾ ಹೋಟೆಲ್‌ನಲ್ಲಿ ಬೆಂಕಿ ಅವಘಡ: 14 ಮಂದಿ ಸಾವು
ಸ್ಥಳಕ್ಕೆ ತಕ್ಷಣವೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ದೌಡಾಯಿಸಿ, ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದವು. ಅವಶೇಷಗಳಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯಲಾಗಿದ್ದು, ಗಾಯಾಳುಗಳನ್ನು ಕಿಂಗ್ ಜಾರ್ಜ್ ಆಸ್ಪತ್ರೆಗೆ ರವಾನಿಸಲಾಗಿದೆ.
ವರದಿಗಳ ಪ್ರಕಾರ, ಇಂದು ಬೆಳಗಿನ ಜಾವ 2:30 ರಿಂದ 3:30ರವರೆಗೆ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಭಾರೀ ಗಾಳಿ ಹಾಗೂ ದೇವಸ್ಥಾನದ ಬಳಿ ಹರಿಯುತ್ತಿದ್ದ ನೀರಿನ ಹರಿವು ಈ ಘಟನೆಗೆ ಕಾರಣ ಎನ್ನಲಾಗಿದೆ. ಗೋಡೆಯು ಮಣ್ಣಿನ ಹೊದಿಕೆಯನ್ನು ಹೊಂದಿದ್ದು, ಮಣ್ಣು ಸಡಿಲಗೊಂಡಿರಬಹುದು, ಜೊತೆಗೆ ಭಾರೀ ಗಾಳಿಯಿಂದಾಗಿ ಪೆಂಡಾಲ್‌ಗಳು ನೆಲಕ್ಕುರುಳಿದವು. ಇನ್ನೂ 20 ದಿನಗಳ ಹಿಂದೆಯಷ್ಟೇ ಈ ಗೋಡೆಯನ್ನು ನಿರ್ಮಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಅಮರಾವತಿ: ಗಂಡ-ಹೆಂಡತಿಯ ನಡುವೆ ಜಗಳ ನಡೆದು, ಪತಿ 8 ತಿಂಗಳ ಗರ್ಭಿಣಿ ಪತ್ನಿಯನ್ನು (Preganant Wife) ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಆಂಧ್ರಪ್ರದೇಶದ (Andhra Pradesh) ವಿಶಾಖಪಟ್ಟಣದಲ್ಲಿ ಸೋಮವಾರ ನಡೆದಿದೆ.
ಅನುಷಾ (27) ಮೃತ ಪತ್ನಿ. ಪತಿ ಜ್ಞಾನೇಶ್ವರ್ ಹಾಗೂ ಪತ್ನಿ ಅನುಷಾ ಸೋಮವಾರ ಬೆಳಗ್ಗೆ ಜಗಳವಾಡಿದ್ದು, ಈ ಜಗಳ ತಾರಕಕ್ಕೇರಿ ಜ್ಞಾನೇಶ್ವರ್ ತನ್ನ ಪತ್ನಿಯ ಕತ್ತು ಹಿಸುಕಿದ್ದಾನೆ. ಈ ಸಂದರ್ಭ ಅನುಷಾ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಕೂಡಲೇ ಪತಿ, ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಆದರೆ ಅಷ್ಟರಲ್ಲಾಗಲೇ ಆಕೆಯ ಪ್ರಾಣಪಕ್ಷಿ ಹಾರಿಹೋಗಿತ್ತು. ಇದನ್ನೂ ಓದಿ: ತುಮಕೂರು | ಬೀದಿ ದೀಪ ಆರಿಸಲು ಹೋಗಿ ವಿದ್ಯುತ್ ಸ್ಪರ್ಶಿಸಿ ಶಿಕ್ಷಕ ಸಾವು
ವಿಶಾಖಪಟ್ಟಣಂನ (Visakhapatnam) ಪಿಎಂ ಪಾಲೆಂನ ಉಡಾ ಕಾಲೋನಿಯಲ್ಲಿ ಘಟನೆ ನಡೆದಿದೆ. ಆರೋಪಿ ಪತಿ ನಗರದ ಸ್ಕೌಟ್ಸ್ ಮತ್ತು ಸಾಗರ್‌ನಗರ ವೀಕ್ಷಣಾ ಕೇಂದ್ರದ ಬಳಿ ಫಾಸ್ಟ್ ಫುಡ್ ಸೆಂಟರ್ ನಡೆಸುತ್ತಿದ್ದರು. ಕಳೆದ ಮೂರು ವರ್ಷಗಳ ಹಿಂದೆ ಅನುಷಾಳೊಂದಿಗೆ ಪ್ರೇಮ ವಿವಾಹವಾಗಿದ್ದರು. ಬಳಿಕ ಹಲವಾರು ವಿಷಯಗಳಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗಿ ದಂಪತಿ ಆಗಾಗ ಜಗಳವಾಡುತ್ತಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಸೆಂಚುರಿ ಬಾರಿಸಿದ್ದಕ್ಕೆ ಪಾಕ್ ಸೂಪರ್ ಲೀಗಲ್ಲಿ ಸಿಕ್ಕಿದ್ದು ಹೇರ್ ಡ್ರೈಯರ್!
ಹೈದರಾಬಾದ್: ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಪಲಾಸಾ ಬಳಿ ಇಂದು ಬೆಳಗ್ಗೆ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ವಿಶಾಖಪಟ್ಟಣಂ ಮಾರ್ಗವಾಗಿ ಪಶ್ಚಿಮ ಬಂಗಾಳದ ಶಾಲಿಮಾರ್‌ಗೆ ಪ್ರಯಾಣಿಸುತ್ತಿದ್ದ ಫಲಕ್‌ನುಮಾ ಎಕ್ಸ್‌ಪ್ರೆಸ್ ರೈಲು (Falaknuma Superfast Express) ಅನಿರೀಕ್ಷಿತವಾಗಿ ಬೇರ್ಪಟ್ಟಿದೆ (2 ತುಂಡಾಗಿ – Train Splits). ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸದೇ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ರೈಲ್ವೆ ಅಧಿಕಾರಿಗಳು (Railway Officials), ರೈಲಿನಲ್ಲಿ ಯಾವುದೇ ಅಲರ್ಟ್ ತಿಳಿಯದೇ ಏಕಾಏಕಿ ಎರಡು ಎಸಿ ಬೋಗಿಗಳು ಬೇರ್ಪಟ್ಟಿವೆ. ಕೂಡಲೇ ಎಚ್ಚೆತ್ತ ಚಾಲಕ ತಕ್ಷಣ ರೈಲನ್ನು ನಿಲ್ಲಿಸಿ, ದೊಡ್ಡ ಅನಾಹುತ ಆಗುವುದನ್ನು ತಪ್ಪಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಲಿ, ಸಾವು-ನೋವಿಗಳಾಗಲಿ ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.
ಬಳಿಕ ಏನಾಯ್ತು?
ವಿಷಯ ತಿಳಿಯುತ್ತಿದ್ದಂತೆ ರೈಲ್ವೇ ಸಿಬ್ಬಂದಿ ಘಟನಾ ಸ್ಥಳಕ್ಕೆ ತ್ವರಿತವಾಗಿ ಭೇಟಿ ನೀಡಿದ್ದಾರೆ. ಅಗತ್ಯ ರಿಪೇರಿ ಮಾಡಿ ಬೇರ್ಪಟ್ಟ ಬೋಗಿಗಳನ್ನು ಮತ್ತೆ ಜೋಡಿಸಿದ್ದಾರೆ. ಸುರಕ್ಷತೆಯ ಎಲ್ಲಾ ಪ್ರೋಟೋಕಾಲ್ (ಶಿಷ್ಟಾಚಾರ) ಪಾಲಿಸಿದ್ದು, ಯಾವುದೇ ಸಮಸ್ಯೆಗಳಿಲ್ಲ ಎಂದು ಖಚಿತಪಡಿಸಿಕೊಂಡ ಬಳಿಕ ರೈಲು ತನ್ನ ಪ್ರಯಾಣವನ್ನು ಪುನರಾರಂಭಿಸಿದೆ. ಆದಾಗ್ಯೂ ಏಕಾಏಕಿ ಬೋಗಿಗಳು ಬೇರ್ಪಡಲು ಕಾರಣವೇನು ಅನ್ನೋದರ ಕುರಿತು ರೈಲ್ವೇ ಅಧಿಕಾರಿಗಳು ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
ರೈಲು ಸಂಚಾರದ ಮೇಲೆ ಪರಿಣಾಮ
ಫಲಕ್‌ನುಮಾ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಬೇರ್ಪಟ್ಟ ಕಾರಣದಿಂದಾಗಿ ಬ್ರಹ್ಮಪುರ ಮತ್ತು ವಿಶಾಖಪಟ್ಟಣಂ ನಡುವಿನ ರೈಲು ಸೇವೆಗಳಲ್ಲಿ ತಾತ್ಕಾಲಿಕ ಅಡಚಣೆ ಉಂಟಾಗಿತ್ತು.
ಹೈದರಾಬಾದ್: ತಾನು ಲೈಂಗಿಕ ಕಿರುಕುಳಕ್ಕೊಳಗಾಗಿದ್ದು, ಆ ಫೋಟೋ ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಬೆದರಿಕೆ ಹಾಕುತ್ತಿದ್ದರು ಎಂದು ಪೋಷಕರಿಗೆ ಸಂದೇಶ ಕಳಿಸಿ 17 ವರ್ಷದ ವಿದ್ಯಾರ್ಥಿನಿಯೊಬ್ಬಳು (Student) ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಶಾಖಪಟ್ಟಣಂನಲ್ಲಿ (Visakhapatnam) ನಡೆದಿದೆ.
ಮೃತ ವಿದ್ಯಾರ್ಥಿನಿ ವಿಶಾಖಪಟ್ಟಣಂನ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಓದುತ್ತಿದ್ದು, ಆಕೆಯ ಕುಟುಂಬವು ನೆರೆಯ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ನೆಲೆಸಿದೆ ಎಂದು ಹೇಳಲಾಗಿದೆ.
ಮೃತ ಬಾಲಕಿ ಕಳುಹಿಸಿದ್ದ ಸಂದೇಶದಲ್ಲಿ, ತಾನು ಕಾಲೇಜಿನಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೇನೆ. ನನಗೆ ಕಿರುಕುಳ ನೀಡಿದ್ದನ್ನು ಫೋಟೋ ತೆಗೆದುಕೊಂಡು ಅವುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಇದರಿಂದ ಸಂಸ್ಥೆಯ ಅಧಿಕಾರಿಗಳು ಹಾಗೂ ಪೊಲೀಸರಿಗೆ ದೂರು ನೀಡಲು ಸಾಧ್ಯವಾಗಲಿಲ್ಲ ಎಂದು ಹೇಳಿಕೊಂಡಿದ್ದಾಳೆ. ಅಲ್ಲದೇ ಕಾಲೇಜಿನಲ್ಲಿ ಕೆಲ ಸಹ ವಿದ್ಯಾರ್ಥಿನಿಯರೂ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎಂದು ಸಂದೇಶ ಕಳುಹಿಸಿದ್ದಾಳೆ. ಹಾಗಾಗಿ ತನ್ನ ಅಕ್ಕನನ್ನು ಉದ್ದೇಶಿಸಿ, ಕ್ಷಮಿಸಿ ದೀದಿ, ನಾನು ಹೋಗಬೇಕು ಎಂದು ಭಾವುಕವಾಗಿ ಬರೆದಿದ್ದಾಳೆ.
ಶುಕ್ರವಾರ ಮಧ್ಯರಾತ್ರಿ 12:50ರ ಸುಮಾರಿಗೆ ಬಾಲಕಿ ಸಂದೇಶದಲ್ಲಿ, ಟೆನ್ಶನ್ ಆಗಬೇಡಿ, ನನ್ನ ಮಾತು ಕೇಳಿ, ನಾನು ಯಾಕೆ ಹೋಗುತ್ತಿದ್ದೇನೆ ಎಂದು ನಾನು ನಿಮಗೆ ಹೇಳಲಾರೆ. ನಾನು ಹೋದರೂ ನಿಮಗೆ ಅರ್ಥವಾಗುವುದಿಲ್ಲ. ದಯವಿಟ್ಟು ನನ್ನನ್ನು ಮರೆತುಬಿಡಿ, ನನ್ನನ್ನು ಕ್ಷಮಿಸಿ. ಅಮ್ಮ ಮತ್ತು ಅಪ್ಪ, ನೀವು ನನಗೆ ಜನ್ಮ ನೀಡಿ ನನ್ನನ್ನು ಬೆಳೆಸಿದ್ದಕ್ಕಾಗಿ ನಾನು ಕೃತಜ್ಞಳಾಗಿರಬೇಕು, ಆದರೆ ನನ್ನ ಅಧ್ಯಾಯವು ಕೊನೆಗೊಳ್ಳುತ್ತಿದೆ ಎಂದು ಆಕೆ ತೆಲುಗಿನಲ್ಲಿ ಬರೆದಿದ್ದಾಳೆ.
ತನ್ನ ತಂದೆಯನ್ನೂ ಉದ್ದೇಶಿಸಿ ಸಂದೇಶ ಕಳುಹಿಸಿರುವ ವಿದ್ಯಾರ್ಥಿನಿ, ಲೈಂಗಿಕ ಕಿರುಕುಳಕ್ಕೊಳಗಾದ ಕಾರಣ ನಾನು ಈ ನಿರ್ಧಾರ ಕೈಗೊಳ್ಳುತ್ತಿದ್ದೇನೆ. ನನ್ನ ಫೋಟೋಗಳನ್ನು ತೆಗೆದುಕೊಂಡಿದ್ದಾರೆ. ಅದನ್ನಿಟ್ಟುಕೊಂಡು ನನಗೆ ಬೆದರಿಕೆ ಹಾಕುತ್ತಿದ್ದಾರೆ. ನಾವು ಯಾರಿಗೂ ಹೇಳಲು ಸಾಧ್ಯವಿಲ್ಲ. ಇದರಿಂದ ಕಾಲೇಜಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನಾನು ಪೊಲೀಸ್ ದೂರು ದಾಖಲಿಸಿದರೆ ಅಥವಾ ಅಧಿಕಾರಿಗಳನ್ನು ಸಂಪರ್ಕಿಸಿದರೆ, ಅವರು ನನ್ನ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡುತ್ತಾರೆ ಎಂದು ಸಂದೇಶದಲ್ಲಿ ಹೇಳಿಕೊಂಡಿದ್ದಾಳೆ.
ಕೂಡಲೇ ಕುಟುಂಬಸ್ಥರು ಫೋನ್ ಮೂಲಕ ಬಾಲಕಿಯನ್ನು ಸಂಪರ್ಕಿಸಿ ದುಡುಕದಂತೆ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪೊಲೀಸರಿಗೂ ಮಾಹಿತಿ ರವಾನಿಸಿದೆ. ಅಷ್ಟರಲ್ಲಾಗಲೇ ಬಾಲಕಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಅಧ್ಯಾಪಕರು ಮತ್ತು ಇತರ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ ಮತ್ತು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್‌ಕೋಟ್: ಟೆಸ್ಟ್ ಇತಿಹಾಸದಲ್ಲಿ ಟೀಂ ಇಂಡಿಯಾ ಹೊಸ ದಾಖಲೆ ಬರೆದಿದೆ. ಭಾರತದ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತಿ ಹೆಚ್ಚು ರನ್ ಅಂತರದ ಗೆಲುವನ್ನು ಇಂಗ್ಲೆಂಡ್ ವಿರುದ್ಧ ದಾಖಲಿಸಿದೆ. ಈ ಗೆಲುವಿನ ಮೂಲಕ ಮತ್ತೊಂದು ವಿಶೇಷ ಸಾಧನೆಗೂ ಪಾತ್ರವಾಗಿದೆ.
ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-1 ಮುನ್ನಡೆ ಸಾಧಿಸುವ ಮೂಲಕ ಸರಣಿ ಗೆಲುವಿನ ವಿಶ್ವಾಸದಲ್ಲಿದೆ. 3ನೇ ಟೆಸ್ಟ್ ಪಂದ್ಯದಲ್ಲಿ 434 ರನ್‌ಗಳ ಗೆಲುವು ಸಾಧಿಸಿದ ಭಾರತ ಅತಿಹೆಚ್ಚು ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸಿದ ಟಾಪ್-10 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವೂ ಸ್ಥಾನ ಗಿಟ್ಟಿಸಿಕೊಂಡಿದೆ. ಇದನ್ನೂ ಓದಿ: ಟೀಂ ಇಂಡಿಯಾಗೆ 434 ರನ್‌ಗಳ ದಾಖಲೆ ಜಯ – ಭಾರತದ ಟಾಪ್-5 ಟೆಸ್ಟ್ ಲಿಸ್ಟ್!
ರೋಹಿತ್ ಶರ್ಮಾ ನಾಯಕದ ಟೀಂ ಇಂಡಿಯಾ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್‌ಗಳ ಅಂತರದಿಂದ ಗೆಲುವು ಸಾಧಿಸಿದ ಟಾಪ್-10 ಪಟ್ಟಿಯಲ್ಲಿ 8ನೇ ಸ್ಥಾನಕ್ಕೆ ಜಿಗಿದಿದೆ. ಅಲ್ಲದೇ ಭಾರತ ತಂಡ ಇದುವರೆಗೆ ಒಟ್ಟು 577 ಟೆಸ್ಟ್ ಪಂದ್ಯಗಳನ್ನಾಡಿದ್ದು, ಇಂಗ್ಲೆಂಡ್ ವಿರುದ್ಧ ಸಾಧಿಸಿದ ಈ ಗೆಲುವು ಭಾರತದ ಪಾಲಿಗೆ ಐತಿಹಾಸಿಕ ಸಾಧನೆಯಾಗಿದೆ. ಇದಕ್ಕೂ ಮುನ್ನ ಟೀಂ ಇಂಡಿಯಾ 2021ರಲ್ಲಿ ನ್ಯೂಜಿಲೆಂಡ್ ವಿರುದ್ಧ 372 ರನ್‌ಗಳಿಂದ ಗೆದ್ದಿದ್ದೇ ಇದುವರೆಗಿನ ಬೃಹತ್ ಅಂತರದ ಗೆಲುವಿನ ದಾಖಲೆಯಾಗಿತ್ತು. ಇದನ್ನೂ ಓದಿ: ಜೈಸ್ವಾಲ್, ಜಡೇಜಾ ಶೈನ್; ಆಂಗ್ಲರ ವಿರುದ್ಧ ಭಾರತಕ್ಕೆ 434 ರನ್ ಗೆಲುವು – ಟೆಸ್ಟ್ ಸರಣಿ ಕೈವಶಕ್ಕೆ ಇನ್ನೊಂದೇ ಹೆಜ್ಜೆ
ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್‌ಗಳ ಅಂತರದಲ್ಲಿ ಗೆದ್ದ ಟಾಪ್-10 ತಂಡಗಳ ಲಿಸ್ಟ್
1. ಇಂಗ್ಲೆಂಡ್ – 675 ರನ್‌ಗಳಿಂದ ಗೆಲುವು (1928 ರಲ್ಲಿ)
2. ಆಸ್ಟ್ರೇಲಿಯಾ – 562 ರನ್‌ಗಳಿಂದ ಗೆಲುವು (1934 ರಲ್ಲಿ)
3. ಬಾಂಗ್ಲಾದೇಶ – 546 ರನ್‌ಗಳಿಂದ ಗೆಲುವು (2023 ರಲ್ಲಿ)
4. ಆಸ್ಟ್ರೇಲಿಯಾ – 530 ರನ್‌ಗಳಿಂದ ಗೆಲುವು (1911 ರಲ್ಲಿ)
5. ದಕ್ಷಿಣ ಆಫ್ರಿಕಾ – 492 ರನ್‌ಗಳಿಂದ ಗೆಲುವು (2018 ರಲ್ಲಿ)
6. ಆಸ್ಟ್ರೇಲಿಯಾ – 491 ರನ್‌ಗಳಿಂದ ಗೆಲುವು (2004 ರಲ್ಲಿ)
7. ಶ್ರೀಲಂಕಾ – 465 ರನ್‌ಗಳಿಂದ ಗೆಲುವು (2009 ರಲ್ಲಿ)
8. ಭಾರತ – 434 ರನ್‌ಗಳಿಂದ ಗೆಲುವು – (2024 ರಲ್ಲಿ)
9. ವೆಸ್ಟ್ ಇಂಡೀಸ್ – 425 ರನ್‌ಗಳಿಂದ ಗೆಲುವು – (1976 ರಲ್ಲಿ)
10. ನ್ಯೂಜಿಲೆಂಡ್ – 423 ರನ್‌ಗಳಿಂದ ಗೆಲುವು – (2018 ರಲ್ಲಿ)
ಭಾರತದ ಟಾಪ್ 5 ಟೆಸ್ಟ್ ಗೆಲುವುಗಳು
1. 434 ರನ್ ಗೆಲುವು – ಇಂಗ್ಲೆಂಡ್ ವಿರುದ್ಧ – ರಾಜ್‌ಕೋಟ್ – 2024ರಲ್ಲಿ
2. 372 ರನ್ ಗೆಲುವು – ನ್ಯೂಜಿಲೆಂಡ್ ವಿರುದ್ಧ – ಮುಂಬೈ – 2021ರಲ್ಲಿ
3. 337 ರನ್ ಗೆಲುವು – ದಕ್ಷಿಣ ಆಫ್ರಿಕಾ ವಿರುದ್ಧ – ದೆಹಲಿ – 2015ರಲ್ಲಿ
4. 321 ರನ್ ಗೆಲುವು – ನ್ಯೂಜಿಲೆಂಡ್ ವಿರುದ್ಧ – ಇಂದೋರ್ – 2016ರಲ್ಲಿ
5. 320 ರನ್ ಗೆಲುವು – ಆಸ್ಟ್ರೇಲಿಯಾ ವಿರುದ್ಧ – ಮೊಹಾಲಿ – 2008ರಲ್ಲಿ
ರಾಜ್‌ಕೋಟ್: ಟೆಸ್ಟ್ ಇತಿಹಾಸದಲ್ಲಿ ಟೀಂ ಇಂಡಿಯಾ ಮತ್ತೊಂದು ದಾಖಲೆ ಬರೆದಿದೆ. ಭಾರತದ ಟೆಸ್ಟ್ ಕ್ರಿಕೆಟ್ ಇತಿಹಾಸದ ಅತಿ ಹೆಚ್ಚು ರನ್ ಅಂತರದ ಗೆಲುವನ್ನು ಇಂಗ್ಲೆಂಡ್ ವಿರುದ್ಧ ದಾಖಲಿಸಿದೆ.
ಭಾರತ ತಂಡ ಇದುವರೆಗೆ ಒಟ್ಟು 577 ಟೆಸ್ಟ್ ಪಂದ್ಯಗಳನ್ನಾಡಿದ್ದು ಇಂಗ್ಲೆಂಡ್ ವಿರುದ್ಧ ಇಂದು ನಡೆದ ಪಂದ್ಯವನ್ನು 434 ರನ್‌ಗಳಿಂದ ಗೆದ್ದಿದೆ. ಇದು ಭಾರತದ ಪಾಲಿಗೆ ಐತಿಹಾಸಿಕ ಸಾಧನೆಯಾಗಿದೆ.
ಇದಕ್ಕೂ ಮುನ್ನ ಟೀಂ ಇಂಡಿಯಾ 2021ರಲ್ಲಿ ನ್ಯೂಜಿಲೆಂಡ್ ವಿರುದ್ಧ 372 ರನ್‌ಗಳಿಂದ ಗೆದ್ದಿದ್ದೇ ಇದುವರೆಗಿನ ಬೃಹತ್ ಅಂತರದ ಗೆಲುವಿನ ದಾಖಲೆಯಾಗಿತ್ತು.
ಭಾರತದ ಟಾಪ್ 5 ಟೆಸ್ಟ್ ಗೆಲುವುಗಳು
1. 434 ರನ್ ಗೆಲುವು – ಇಂಗ್ಲೆಂಡ್ ವಿರುದ್ಧ – ರಾಜ್‌ಕೋಟ್ – 2024ರಲ್ಲಿ
2. 372 ರನ್ ಗೆಲುವು – ನ್ಯೂಜಿಲೆಂಡ್ ವಿರುದ್ಧ – ಮುಂಬೈ – 2021ರಲ್ಲಿ
3. 337 ರನ್ ಗೆಲುವು – ದಕ್ಷಿಣ ಆಫ್ರಿಕಾ ವಿರುದ್ಧ – ದೆಹಲಿ – 2015ರಲ್ಲಿ
4. 321 ರನ್ ಗೆಲುವು – ನ್ಯೂಜಿಲೆಂಡ್ ವಿರುದ್ಧ – ಇಂದೋರ್ – 2016ರಲ್ಲಿ
5. 320 ರನ್ ಗೆಲುವು – ಆಸ್ಟ್ರೇಲಿಯಾ ವಿರುದ್ಧ – ಮೊಹಾಲಿ – 2008ರಲ್ಲಿ
– ಭಾರತದ ಪರ ದ್ವಿಶತಕ ಸಿಡಿಸಿದ 3ನೇ ಕಿರಿಯ ಆಟಗಾರ
– 400 ರನ್‌ಗಳ ಗಡಿ ಸಮೀಪಿಸಿದ ಟೀಂ ಇಂಡಿಯಾ
ವಿಶಾಖಪಟ್ಟಣಂ: ಭಾರತ ಹಾಗೂ ಇಂಗ್ಲೆಂಡ್ ನಡುವಿನ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (Yashasvi Jaiswal) ಆಕರ್ಷಕ ದ್ವಿಶತಕ ಬಾರಿಸಿ ಮಿಂಚಿದ್ದಾರೆ.
Maiden DOUBLE HUNDRED for Yashasvi Jaiswal ????????
ಈವೆರೆಗೆ ರಣಜಿ ಟ್ರೋಫಿ, ದುಲೀಪ್ ಟ್ರೋಫಿ, ಇರಾನಿ ಕಪ್ ಟೂರ್ನಿಗಳಲ್ಲಿ ದ್ವಿಶತಕ ಸಿಡಿಸಿದ್ದ 22 ವರ್ಷ ವಯಸ್ಸಿನ ಯಶಸ್ವಿ ಜೈಸ್ವಾಲ್ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಲ್ಲಿ ಚೊಚ್ಚಲ ದ್ವಿಶತಕದ ಖಾತೆ ತೆರೆದಿದ್ದಾರೆ. 277 ಎಸೆತಗಳಲ್ಲಿ 200 ರನ್ (18 ಬೌಂಡರಿ, 7 ಸಿಕ್ಸರ್) ಬಾರಿಸಿದ್ದು, ಟೆಸ್ಟ್ ಕ್ರಿಕೆಟ್‌ನಲ್ಲಿ ಅತ್ಯಂತ ಕಿರಿಯ ವಯಸ್ಸಿಗೆ ಈ ಸಾಧನೆ ಮಾಡಿದ ಭಾರತದ (Team India) 3ನೇ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ. ಜೈಸ್ವಾಲ್ ಅದ್ಭುತ ಬ್ಯಾಟಿಂಗ್ ಪ್ರದರ್ಶನದಿಂದ ಟೀಂ ಇಂಡಿಯಾ 400 ರನ್‌ಗಳ ಗಡಿ ಸಮೀಪಿಸಿದೆ.
ವಿಶಾಖಪಟ್ಟಣಂನ ಡಾ. ವೈ.ಎಸ್.ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ (England) ವಿರುದ್ಧದ 2ನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟ ಆರಂಭಿಸಿದ ಜೈಸ್ವಾಲ್ 209 ರನ್ ಗಳಿಸಿ ಔಟಾದರು. ಮೊದಲ ದಿನದಾಟದಲ್ಲಿ 179 ರನ್ ಗಳಿಸಿದ ಜೈಸ್ವಾಲ್ 2ನೇ ದಿನದಾಟದಲ್ಲಿ 290 ಎಸೆತಗಳಲ್ಲಿ 209 ರನ್ ಬಾರಿಸಿ ಮಿಂಚಿದ್ದಾರೆ. ಇದನ್ನೂ ಓದಿ: ಆಂಗ್ಲರ ವಿರುದ್ಧ ಯಶಸ್ವಿ ಜೈಸ್ವಾಲ್ ಬೊಂಬಾಟ್ ಶತಕ – ಬೃಹತ್ ಮೊತ್ತದತ್ತ ಭಾರತ
ವಿಶೇಷ ಸಾಧನೆ ಮಾಡಿದ ಕಿರಿಯ ಆಟಗಾರ:
ಆಂಗ್ಲರ ವಿರುದ್ಧ ಬ್ಯಾಟಿಂಗ್ ಪ್ರಾಬಲ್ಯ ಮೆರೆದ ಯಶಸ್ವಿ ಜೈಸ್ವಾಲ್ ಟೆಸ್ಟ್ ಕ್ರಿಕೆಟ್‌ನಲ್ಲಿ (Test Cricket) ದ್ವಿಶತಕ ಸಿಡಿಸಿದ 3ನೇ ಕಿರಿಯ ಭಾರತೀಯ ಕ್ರಿಕೆಟಿಗ ಎಂಬ ವಿಶೇಷ ಸಾಧನೆಗೆ ಪಾತ್ರರಾಗಿದ್ದಾರೆ. 1993ರಲ್ಲಿ ವಾಂಖೆಡೆ ಮೈದಾನದಲ್ಲಿ ವಿನೋಂದ್ ಕಾಂಬ್ಳಿ (21 ವರ್ಷ, 32 ದಿನಗಳು), ನಂತರ ಸುನೀಲ್ ಗವಾಸ್ಕರ್ 21 ವರ್ಷ 277 ದಿನಗಳಿದ್ದಾಗ ಈ ಸಾಧನೆ ಮಾಡಿದ್ದರು. ಆದ್ರೆ ಟೆಸ್ಟ್ ಕ್ರಿಕೆಟ್‌ನ ಇತಿಹಾಸದಲ್ಲಿ ಅತ್ಯಂತ ಕಿರಿಯ ವಯಸ್ಸಿನಲ್ಲೇ ದ್ವಿಶತಕ ಬಾರಿಸಿದ ಸಾಧನೆ ಜಾವೇದ್ ಮಿಯಾಂದಾದ್ ಹೆಸರಿನಲ್ಲಿದೆ. ಜಾವೇದ್ 19 ವರ್ಷ, 140 ದಿನಗಳ ವಯಸ್ಸಿನಲ್ಲಿ ತಮ್ಮ ಸಾಧನೆ ಮಾಡಿದ್ದರು. ಇದನ್ನೂ ಓದಿ: ಮೊದಲ ದಿನವೇ ʻಯಶಸ್ವಿʼ ಶತಕದ ಹೋರಾಟ – ಭರ್ಜರಿ ಮೊತ್ತದತ್ತ ಭಾರತ
ದಿಗ್ಗಜರ ಎಲೈಟ್ ಪಟ್ಟಿಗೆ ಜೈಸ್ವಾಲ್:
ಟೆಸ್ಟ್ ಕ್ರಿಕೆಟ್‌ನಲ್ಲಿ ದ್ವಿಶತಕ ಸಿಡಿಸಿರುವ ಜೈಸ್ವಾಲ್ ಮೊದಲ ದಿನದ ಆಟದಲ್ಲೇ ಅತಿಹೆಚ್ಚು ರನ್‌ಗಳಿಸಿದ ದಿಗ್ಗಜರ ಎಲೈಟ್ ಪಟ್ಟಿ ಸಹ ಸೇರಿದ್ದಾರೆ.
* 228 ವಿರೇಂದ್ರ ಸೆಹ್ವಾಗ್ ವಿರುದ್ಧ ಪಾಕ್ ಮುಲ್ತಾನ್ – 2004
* 195 ವಿರೇಂದ್ರ ಸೆಹ್ವಾಗ್ ವಿರುದ್ಧ ಆಸ್ ಮೆಲ್ಬೋರ್ನ್ – 2003
* 192 ವಾಸಿಂ ಜಾಫರ್ ವಿರುದ್ಧ ಪಾಕ್ ಕೋಲ್ಕತ್ತಾ – 2007
* 190 ಶಿಖರ್ ಧವನ್ ವಿರುದ್ಧ ಎಸ್ಎಲ್ ಗಾಲೆ – 2017
* 180 ವೀರೇಂದ್ರ ಸೆಹ್ವಾಗ್ vs WI ಗ್ರೋಸ್ ಐಲೆಟ್ – 2006
* 179 ಯಶಸ್ವಿ ಜೈಸ್ವಾಲ್ ವಿರುದ್ಧ ಇಂಗ್ಲೆಂಡ್ ವೈಜಾಗ್ – 2024