Tag: ವಿಶೇಷ ನ್ಯಾಯಾಲಯ

  • 7 ತಿಂಗಳ ಮಗು ರೇಪ್ ಮಾಡಿದವನಿಗೆ ಗಲ್ಲು ಶಿಕ್ಷೆ – ಕೋಲ್ಕತ್ತಾ ವಿಶೇಷ ಕೋರ್ಟ್‌ನಿಂದ ತೀರ್ಪು

    7 ತಿಂಗಳ ಮಗು ರೇಪ್ ಮಾಡಿದವನಿಗೆ ಗಲ್ಲು ಶಿಕ್ಷೆ – ಕೋಲ್ಕತ್ತಾ ವಿಶೇಷ ಕೋರ್ಟ್‌ನಿಂದ ತೀರ್ಪು

    ಕೋಲ್ಕತ್ತಾ: 7 ತಿಂಗಳ ಮಗುವಿನ ಮೇಲೆ ಅತ್ಯಾಚಾರವೆಸಗಿದ ಕಾಮುಕನಿಗೆ ಕೋಲ್ಕತ್ತಾ (Kolkata) ವಿಶೇಷ ನ್ಯಾಯಾಲಯವು (Special Court) ಗಲ್ಲು ಶಿಕ್ಷೆ ವಿಧಿಸಿದೆ.

    ನಗರದ ಬರ್ತೊಲ್ಲಾ (Burtoll) ಪ್ರದೇಶದಿಂದ ಮಗುವಿನ ಅಪಹರಣ, ಅತ್ಯಾಚಾರ ಮತ್ತು ಕೊಲೆಗೆ ಯತ್ನಿಸಿದ ಆರೋಪದ ಮೇಲೆ ರಜೀಬ್ ಘೋಷ್‌ನನ್ನು ಪೊಲೀಸರು ಬಂಧಿಸಿದ್ದರು. ಬ್ಯಾಂಕ್‌ಶಾಲ್ ನ್ಯಾಯಾಲಯದ ಮಕ್ಕಳ ರಕ್ಷಣಾ ಕಾಯ್ದೆ (ಪೋಕ್ಸೊ) ನ್ಯಾಯಾಲಯವು ಸೋಮವಾರ ತೀರ್ಪು ಪ್ರಕಟಿಸಿದೆ. ಇದನ್ನೂ ಓದಿ: ದೆಹಲಿ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತ – ಮಹಿಳಾ ಸಿಎಂ ಬಿಜೆಪಿ ಮಣೆ; ನಾಳೆ ಪ್ರಮಾಣವಚನ

    `ಅಪರೂಪದಲ್ಲಿ ಅಪರೂಪದ’ ವರ್ಗಕ್ಕೆ ಈ ಪ್ರಕರಣ ಸೇರಿರುವುದರಿಂದ ಮರಣದಂಡನೆ ವಿಧಿಸಬೇಕೆಂದು ವಕೀಲರು ವಾದಿಸಿದ ಬಳಿಕ ಅಂತಿಮ ಸುತ್ತಿನ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದೆ. ಇದನ್ನೂ ಓದಿ: ಮುಡಾ ಕೇಸ್‌ನಲ್ಲಿ ಬಿ ರಿಪೋರ್ಟ್ ಲೋಕಾಯುಕ್ತದಿಂದ ಪೂರ್ವ ನಿಯೋಜಿತ: ಅಶೋಕ್ ಕೆಂಡ

    ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 65(2), 140(4), 137(2) ಮತ್ತು 118 ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ 6ರ ಅಡಿಯಲ್ಲಿ ರಜೀಬ್ ಘೋಷ್‌ಗೆ ನ್ಯಾಯಮೂರ್ತಿ ಇಂದ್ರಿಲಾ ಮುಖರ್ಜಿ ಶಿಕ್ಷೆ ವಿಧಿಸಿದ್ದಾರೆ. ಇದನ್ನೂ ಓದಿ: ಶೋಕಾಸ್ ನೋಟಿಸ್‌ಗೆ ಯತ್ನಾಳ್ ಕೊಟ್ಟ ಉತ್ತರ ಒಪ್ಪದ ಬಿಜೆಪಿ ಶಿಸ್ತು ಸಮಿತಿ

    ಕಳೆದ ವರ್ಷ ನವಂಬರ್ 30ರಂದು ರಜೀಬ್ ಘೋಷ್, ಮಗುವಿನ ಮೇಲೆ ಅತ್ಯಾಚಾರವೆಸಗಿದ್ದ. ಡಿ.5ರಂದು ಜಹರ್‌ಗ್ರಾಮ್ ಜಿಲ್ಲೆಯ ಗೋಪಿಬಲ್ಲವಪುರದ ನಿವಾಸದಲ್ಲಿ ರಜೀಬ್‌ನನ್ನು ಪೊಲೀಸರು ಬಂಧಿಸಿದ್ದರು. ಇದನ್ನೂ ಓದಿ: ಕಾರವಾರ | ಭೀಕರ ಅಪಘಾತ – ಒಂದೇ ಕುಟುಂಬದ ಮೂವರು ಸಾವು

    ರಸ್ತೆ ಬದಿಯ ಗುಡಿಸಲು ನಿವಾಸಿಯಾಗಿರುವ ಸಂತ್ರಸ್ತೆಯು, ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿಶೇಷ ಸರ್ಕಾರಿ ಅಭಿಯೋಜಕ ಬಿಭಾಸ್ ಚಟರ್ಜಿ ತಿಳಿಸಿದ್ದಾರೆ.

  • 21 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಅರುಣಾಚಲ ಪ್ರದೇಶದ ಹಾಸ್ಟೆಲ್ ವಾರ್ಡನ್‌ಗೆ ಗಲ್ಲು ಶಿಕ್ಷೆ

    21 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಅರುಣಾಚಲ ಪ್ರದೇಶದ ಹಾಸ್ಟೆಲ್ ವಾರ್ಡನ್‌ಗೆ ಗಲ್ಲು ಶಿಕ್ಷೆ

    – ಪೋಕ್ಸೋ ಕಾಯ್ದೆ ಅಡಿ ಮರಣದಂಡನೆ ಸಿಕ್ಕಿರುವ ಮೊದಲ ಪ್ರಕರಣ ಎಂದ ಲಾಯರ್

    ಗುವಾಹಟಿ: ಇಲ್ಲಿನ ಸರ್ಕಾರಿ ವಸತಿ ಶಾಲೆಯೊಂದರಲ್ಲಿ (Arunachal school hostel) 2014ರಿಂದ 2022ರ ವರೆಗೆ 21 ಮಕ್ಕಳ ಮೇಲೆ ಲೈಂಗಿಕ ದೌರ್ನಜ್ಯ ಎಸಗಿದ್ದ ಹಾಸ್ಟೆಲ್‌ ವಾರ್ಡನ್‌ (Hostel Warden) ಯುಮ್ಕೆನ್‌ ಬಾಗ್ರಾಗೆ ಅರುಣಾಚಲ ಪ್ರದೇಶದ ವಿಶೇಷ ನ್ಯಾಯಾಲಯ ಗುರುವಾರ ಗಲ್ಲು ಶಿಕ್ಷೆ ವಿಧಿಸಿದೆ.

    ಅಲ್ಲದೇ ಮಕ್ಕಳು ದೂರು ನೀಡಿದರೂ ಅಪರಾಧವನ್ನು ವರದಿ ಮಾಡುವಲ್ಲಿ ವಿಫಲರಾದ ಮಾಜಿ ಮುಖ್ಯಶಿಕ್ಷಕ ಸಿಂಗ್ತುಂಗ್ ಯೋರ್ಪೆನ್ ಮತ್ತು ಹಿಂದಿ ಶಿಕ್ಷಕಿ ಮಾರ್ಬೊಮ್ ನ್ಗೊಮ್ದಿರ್ ಅವರಿಗೆ ಪೋಕ್ಸೊ ಕಾಯ್ದೆ ಅಡಿ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ವಿಶೇಷ ನ್ಯಾಯಾಧೀಶರಾದ ಜಾವೆಪ್ಲು ಚೈ ತೀರ್ಪು ಪ್ರಕಟಿಸಿದ್ದಾರೆ. ಭಾರತೀಯ ದಂಡ ಸಂಹಿತೆ (IPC) ಮತ್ತು POCSO ಕಾಯ್ದೆ ಅಡಿಯಲ್ಲಿ ಮೂವರನ್ನು ದೋಷಿಗಳೆಂದು ಘೋಷಿಸಿದ್ದಾರೆ. ವಿದ್ಯಾರ್ಥಿಗಳು ದೂರು ನೀಡಿದರೂ ಸಹ ಶಾಲೆಯ ಖ್ಯಾತಿಗೆ ಧಕ್ಕೆಯಾಗುತ್ತದೆ ಎಂಬ ಕಾರಣಕ್ಕೆ ಮೌನವಾಗಿರುವಂತೆ ಕೇಳಿಕೊಂಡಿದ್ದರು ಎಂಬ ಕಾರಣಕ್ಕೆ ಶಿಕ್ಷೆ ವಿಧಿಸಲಾಗಿದೆ ಎಂದು ನ್ಯಾಯಾಧೀಶರು ಉಲ್ಲೇಖಿಸಿದ್ದಾರೆ.

    STOP RAPE

    ಈ ಕುರಿತು ಮಾತನಾಡಿರುವ 21 ಮಕ್ಕಳ ಪರ ವಕೀಲ ಓಯಾಮ್‌ ಬಿಂಗೆಪ್‌, ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿರುವುದು ಸಂತೋಷವಾಗಿದೆ. ಇದು ದೇಶದಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ನೀಡಲಾದ ಮೊದಲ ಮರಣದಂಡನೆ ಪ್ರಕರಣವಾಗಿದೆ. ಇದರಲ್ಲಿ ಸಂತ್ರಸ್ತರು ಸತ್ತಿಲ್ಲ, ದೌರ್ಜನ್ಯ ಎಸಗಿದವರು ಸಾಯುತ್ತಾರೆ ಎಂದು ಸಹ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮಹಿಳೆಯ ಭಯಾನಕ ಹತ್ಯೆ ಕೇಸ್ | ಮಹಾಲಕ್ಷ್ಮಿ ಮಗನನ್ನು ಟ್ರ್ಯಾಪ್ ಮಾಡಿದ್ದಳು: ಆರೋಪಿಯ ತಾಯಿ

    ಇನ್ನಿಬ್ಬರು ಆರೋಪಿಗಳಾದ ಅದೇ ಶಾಲೆಯ ಇನ್ನೋರ್ವ ಶಿಕ್ಷಕ ತಾಜಂಗ್ ಯೋರ್ಪೆನ್ ಮತ್ತು ಹಾಸ್ಟೆಲ್ ವಾರ್ಡನ್ ಪರಿಚಯಸ್ತ ಡೇನಿಯಲ್ ಪರ್ಟಿನ್ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ. ಇದನ್ನೂ ಓದಿ: ನಿರುದ್ಯೋಗ ಸಮಸ್ಯೆ, ಯುಜನರ ವಲಸೆಗೆ ಬಿಜೆಪಿ ಆಡಳಿತವೇ ಕಾರಣ – ರಾಹುಲ್‌ ಗಾಂಧಿ ಕಿಡಿ

    ಕೇಸ್‌ ಬೆಳಕಿಗೆ ಬಂದಿದ್ದು ಯಾವಾಗ?
    2022ರ ನವೆಂಬರ್‌ನಲ್ಲಿ ಪ್ರಕರಣ ಬೆಳಕಿಗೆ ಬಂದಿತ್ತು. ವಸತಿ ಶಾಲೆಯಲ್ಲಿ 12 ವರ್ಷದ ಅವಳಿ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ ಮತ್ತು ಅತ್ಯಾಚಾರಕ್ಕೆ ಯತ್ನಿಸಿದ್ದಕ್ಕಾಗಿ ಆರೋಪಿ ಬಾಗ್ರಾ ವಿರುದ್ಧ ವ್ಯಕ್ತಿಯೊಬ್ಬರು ದೂರು ದಾಖಲಿಸಿದ್ದರು. ಬಳಿಕ ವಿಶೇಷ ತನಿಖಾ ತಂಡ ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿತು. ಬಳಿಕ ಬ್ರಾಗ್ರಾ ಹಾಸ್ಟೆಲ್‌ ವಾರ್ಡನ್‌ ಆಗಿದ್ದ 2014-2022ರ ಅವಧಿಯಲ್ಲಿ 6 ರಿಂದ 14 ವರ್ಷ ವಯಸ್ಸಿನ 6 ಹುಡುಗರು ಸೇರಿದಂತೆ, 21 ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬುದನ್ನು ಪತ್ತೆ ಮಾಡಿತು.

    ಕಳೆದ ಜುಲೈನಲ್ಲಿ ಈ ಸಂಬಂಧ ಚಾರ್ಜ್‌ಶೀಟ್‌ ಸಹ ಸಲ್ಲಿಸಲಾಗಿತ್ತು. ಈ ಮಾಹಿತಿ ಅನುಸಾರ, ವಾರ್ಡನ್‌ ಮಾದಕ ದ್ರವ್ಯ ಸೇವಿಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದ. ಹಲ್ಲೆ ನಡೆಸಿರುವ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಕೂಡ ಹಾಕಿದ್ದ. ಇದರಿಂದ 6 ಮಕ್ಕಳು ಆತ್ಮಹತ್ಯೆಗೆ ಯತ್ನಿಸಿದ್ದರು ಎಂಬುದನ್ನು ಎಸ್‌ಐಟಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ಜಿತಿಯಾ ಪವಿತ್ರ ಸ್ನಾನದ ವೇಳೆ ಅವಘಡ – ಬಿಹಾರದಲ್ಲಿ 37 ಮಕ್ಕಳು ಸೇರಿ 46 ಮಂದಿ ನದಿಯಲ್ಲಿ ಮುಳುಗಿ ದುರ್ಮರಣ

    ನಂತರ ಆರೋಪಿ ಬಾಗ್ರಾ ವಿರುದ್ಧ ಐಪಿಸಿಯ ಸೆಕ್ಷನ್ 328, 292 ಮತ್ತು 506 ಮತ್ತು ಪೋಕ್ಸೋ ಕಾಯ್ದೆಯ ಸೆಕ್ಷನ್ 6, 10 ಮತ್ತು 12ರ ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಿತ್ತು. ಅಲ್ಲದೇ ಘಟನೆಯನ್ನು ವರದಿ ಮಾಡುವಲ್ಲಿ ವಿಫಲರಾದ ಮಹಿಳಾ ಶಿಕ್ಷಕಿ ನ್ಗೊಮ್ದಿರ್‌ಗೆ ಐಪಿಸಿ ಸೆಕ್ಷನ್ 506, ಪೋಕ್ಸೊ ಕಾಯ್ದೆಯ ಸೆಕ್ಷನ್ 17 ಮತ್ತು 21 (1)ರ ಅಡಿ ಶಿಕ್ಷೆ ವಿಧಿಸಲಾಗಿದೆ. ಇನ್ನೂ ಹಲ್ಲೆ ನಡೆಸಿದ ಸಂದರ್ಭದಲ್ಲಿ ಶಾಲೆಯ ಮುಖ್ಯಶಿಕ್ಷಕನಾಗಿದ್ದ ಯೋರ್ಪೆನ್‌ಗೆ ಐಪಿಸಿ ಸೆಕ್ಷನ್ 17, 21 (2), ಶಿಕ್ಷೆ ವಿಧಿಸಲಾಗಿದೆ.

  • ಡಿಕೆಶಿಗೆ ಸಂಕಷ್ಟ – ಜುಲೈ 1 ರಂದು ಹಾಜರಾಗುವಂತೆ ಕೋರ್ಟ್ ಸಮನ್ಸ್

    ಡಿಕೆಶಿಗೆ ಸಂಕಷ್ಟ – ಜುಲೈ 1 ರಂದು ಹಾಜರಾಗುವಂತೆ ಕೋರ್ಟ್ ಸಮನ್ಸ್

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಐದು ಮಂದಿಗೆ ದೆಹಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಜುಲೈ 1 ರಂದು ಕೋರ್ಟ್ ಮುಂದೆ ಹಾಜರಾಗುವಂತೆ ಸೂಚಿಸಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ ಶಿವಕುಮಾರ್ ಹಾಗೂ ಇತರೆ ಆರೋಪಿಗಳ ವಿರುದ್ಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದ್ದರು. ಚಾರ್ಜ್ ಶೀಟ್ ಅನ್ವಯ ಇತರೆ ಆರೋಪಿಗಳಾದ ಸಚಿನ್ ನಾರಯಣ್, ಸುನೀಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ, ರಾಜೇಂದ್ರಗೆ ಸಮನ್ಸ್ ಜಾರಿ ಮಾಡಲಾಗಿದೆ. ಇದನ್ನೂ ಓದಿ: ರಾಜ್‍ ಠಾಕ್ರೆ ಆಸ್ಪತ್ರೆಗೆ ದಾಖಲು- ನಾಳೆ ಶಸ್ತ್ರ ಚಿಕಿತ್ಸೆ

    ಕಳೆದ ಶುಕ್ರವಾರ ಪ್ರಕರಣ ವಿಚಾರಣೆ ನಡೆಸಿದ್ದ ಕೋರ್ಟ್, ಚಾರ್ಜ್‍ಶೀಟ್‍ನಲ್ಲಿ IPC 120B (ವ್ಯವಸ್ಥಿತ ಸಂಚು) ಸೇರ್ಪಡೆ ಬಗ್ಗೆ ಸ್ಪಷ್ಟನೆ ಕೇಳಿತ್ತು. ಇದಕ್ಕೆ ಇಡಿ ಪರ ವಾದ ಮಂಡಿಸಿದ್ದ ವಕೀಲರು, ಕರ್ನಾಟಕ ಸೇರಿದಂತೆ ಮೂರು ಹೈಕೋರ್ಟ್ ಆದೇಶಗಳನ್ನು ಉಲ್ಲೇಖಿಸಿ, 120B (ವ್ಯವಸ್ಥಿತ ಸಂಚು) ಇಡಿ ಪ್ರಕರಣಗಳಲ್ಲಿ ಸೇರಿಸಿ ವಿಚಾರಣೆ ನಡೆಸಬಹುದು ಎಂದು ಹೇಳಿದ್ದರು. ಈ ವಾದವನ್ನು ಪರಿಗಣಿಸಿರುವ ಕೋರ್ಟ್ ಬೇಸಿಗೆ ರಜೆಯ ಬಳಿಕ ವಿಚಾರಣೆ ನಡೆಸಲು ಸಮ್ಮತಿ ಸೂಚಿಸಿದೆ. ಇದನ್ನೂ ಓದಿ: ಪಠ್ಯ ಪುಸ್ತಕಗಳ ಮರು ಪರಿಷ್ಕರಣೆ ಮಾಡುವಂತೆ ಸಿಎಂಗೆ ರಮೇಶ್ ಕುಮಾರ್ ಪತ್ರ

  • ಮಧ್ಯಾಹ್ನದ ನಂತರ ಸೆಷನ್ಸ್ ಕೋರ್ಟ್‍ಗೆ ಶಶಿಕಲಾ ಶರಣು- ಪರಪ್ಪನ ಅಗ್ರಹಾರದಲ್ಲಿ ಟೈಟ್ ಸೆಕ್ಯೂರಿಟಿ

    ಮಧ್ಯಾಹ್ನದ ನಂತರ ಸೆಷನ್ಸ್ ಕೋರ್ಟ್‍ಗೆ ಶಶಿಕಲಾ ಶರಣು- ಪರಪ್ಪನ ಅಗ್ರಹಾರದಲ್ಲಿ ಟೈಟ್ ಸೆಕ್ಯೂರಿಟಿ

    ಬೆಂಗಳೂರು: ಅಕ್ರಮ ಅಸ್ತಿ ಗಳಿಕೆಯ ಹಿನ್ನೆಲೆಯಲ್ಲಿ ಶಿಕ್ಷೆಗೆ ಗುರಿಯಾಗಿರುವ ಶಶಿಕಲಾ ನಟರಾಜನ್, ಇಳವರಸಿ ಹಾಗೂ ಸುಧಾಕರನ್ ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ವಿಶೇಷ ಸತ್ತ್ರ ನ್ಯಾಯಾಲಯದಲ್ಲಿ ಹಾಜರಾಗಲಿದ್ದಾರೆ.

    ಸುಪ್ರೀಂ ಕೋರ್ಟ್‍ನಿಂದ ಶಿಕ್ಷೆ ಪ್ರಕಟಿಸಿ ಆದೇಶ ಹೊರಬೀಳುತ್ತಿದ್ದಂತೆ ಚೆನ್ನೈನಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆದಿದೆ. ಮಂಗಳವಾರವೇ ಬೆಂಗಳೂರಿಗೆ ಬಂದು ಶರಣಾಗಬೇಕಿದ್ದ ಶಶಿಕಲಾ ತಮ್ಮ ಬೆಂಬಲಿತ ಅಭ್ಯರ್ಥಿಯನ್ನು ಸಿಎಂ ಮಾಡುವ ಉದ್ದೇಶದಿಂದ ಚೆನ್ನೈನಲ್ಲಿ ಉಳಿದುಕೊಂಡಿದ್ದಾರೆ ಎನ್ನಲಾಗಿದೆ. ಶಶಿಕಲಾ ಶರಣಾಗಲಿರುವ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲಿ ವ್ಯವಸ್ಥೆಗಳು ಅರಂಭಗೊಂಡಿದೆ. ಈ ಹಿಂದೆ ಜಯಲಲಿತಾರನ್ನು ಇರಿಸಲಾಗಿದ್ದ ಮಹಿಳಾ ಬ್ಯಾರಕ್‍ನಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ.

    ಜಯಲಲಿತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿ ಸ್ಥಾಪಿಸಲಾಗಿದ್ದ ವಿಶೇಷ ಸತ್ತ್ರ ನ್ಯಾಯಾಲಯವನ್ನು ಮಂಗಳವಾರವೇ ಜೈಲು ಸಿಬ್ಬಂದಿ ಸ್ವಚ್ಚಗೊಳಿಸಿದ್ದಾರೆ. ವಿಶೇಷ ನ್ಯಾಯಾಧೀಶರಾಗಿ ಆಶ್ವಥ್ ನಾರಾಯಣ್ ರವರನ್ನು ನಿಯೋಜಿಸಲಾಗಿದೆ. ಶಶಿಕಲಾ ಕೋರ್ಟ್ ಗೆ ಹಾಜರಾಗಲಿದ್ದು, ಮುಂದಿನ ತೀರ್ಮಾನವನ್ನು 36 ನೇ ವಿಶೇಷ ಸತ್ತ್ರ ನ್ಯಾಯಾಲಯದ ನ್ಯಾಯಾಧೀಶರು ಕೈಗೊಳ್ಳಲಿದ್ದಾರೆ. ಕೋರ್ಟ್ ಸುತ್ತ ಮುತ್ತ ಪೆÇಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

    ಈ ಮಧ್ಯೆ ಶಶಿಕಲಾ ನಟರಾಜನ್ ತನ್ನ ಸಂಬಂಧಿ ದಿನಕರನ್‍ಗೆ ಎಐಎಡಿಎಂಕೆಯ ಉಪ ಪ್ರಧಾನ ಕಾರ್ಯದರ್ಶಿ ಪಟ್ಟಕಟ್ಟಿದ್ದಾರೆ. 2011ರಲ್ಲಿ ಜಯಲಲಿತಾ ದಿನಕರನ್‍ಗೆ ಪಕ್ಷದಿಂದ ಗೇಟ್‍ಪಾಸ್ ಕೊಟ್ಟಿದ್ದರು. ಆದ್ರೆ ಕಳೆದ ರಾತ್ರಿ ಕ್ಷಮಾಪಣಾ ಪತ್ರ ಬರೆಸಿಕೊಂಡು ಮತ್ತೆ ದಿನಕರನ್‍ರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ದಿನಕರನ್ ಜೊತೆ ಮತ್ತೋರ್ವ ಸಂಬಂಧಿ ಡಾ.ವೆಂಕಟೇಶ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.