Tag: ವಿಶ್ರಾಂತಿ

  • ಚುನಾವಣಾ ಪ್ರಚಾರ ಮುಗಿಸಿದ ಸಿಎಂ – ಉಡುಪಿ ಹೆಲ್ತ್ ರೆಸಾರ್ಟಿನಲ್ಲಿ ರಿಲಾಕ್ಸ್

    ಚುನಾವಣಾ ಪ್ರಚಾರ ಮುಗಿಸಿದ ಸಿಎಂ – ಉಡುಪಿ ಹೆಲ್ತ್ ರೆಸಾರ್ಟಿನಲ್ಲಿ ರಿಲಾಕ್ಸ್

    ಉಡುಪಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಿರಂತರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಸಿಎಂ ಕುಮಾರಸ್ವಾಮಿ ಇಂದು ಅಂತಿಮ ಹಂತದ ಚುನಾವಣಾ ಕಾರ್ಯ ಮುಗಿಸಿ ವಿಶ್ರಾಂತಿ ಪಡೆಯಲು ತೆರಳಿದ್ದಾರೆ.

    ಉಡುಪಿಯ ಹೆಲ್ತ್ ರೆಸಾರ್ಟ್ ಆಗಿರುವ ಕಾಪುವಿನ ಮೂಳೂರುನಲ್ಲಿರುವ ಸಾಯಿರಾಧಾ ರೆಸಾರ್ಟಿನಲ್ಲಿ ಸಿಎಂ ಎಚ್‍ಡಿಕೆ ಮೂರು ದಿನ ವಿಶ್ರಾಂತಿ ಪಡೆಯಲಿದ್ದಾರೆ. ಈ ಅವಧಿಯಲ್ಲಿ ಪಂಚಕರ್ಮ ಚಿಕಿತ್ಸೆ, ಧ್ಯಾನ, ಯೋಗದಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಎರಡನೇ ಹಂತದ ಮತದಾನ ವೇಳೆ ಮಂಡ್ಯ ಕ್ಷೇತ್ರ ಸೇರಿದಂತೆ ಹಲವು ಅಭ್ಯರ್ಥಿಗಳ ಪರ ಸಿಎಂ ಕುಮಾರಸ್ವಾಮಿ ಅವರು ಪ್ರಚಾರ ನಡೆಸಿದ್ದರು. ಅಲ್ಲದೇ 3ನೇ ಹಂತದ ಮತದಾನ ಏ.23 ರಂದು ನಡೆಯುವುದಿಂದ ಇಂದು ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಈ ಅವಧಿಯಲ್ಲಿ ಸಿಎಂ ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಸೇರಿದಂತೆ ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ನಿರಂತರ ಪ್ರಚಾರದಲ್ಲಿ ತೊಡಗಿದ್ದ ಪರಿಣಾಮ ಸಿಎಂ ಸದ್ಯ ವಿಶ್ರಾಂತಿಯ ಮೊರೆ ಹೋಗಿದ್ದಾರೆ.

  • ರೈತನ ಮನೆಯೊಳಗೆ ನುಗ್ಗಿ ವಿಶ್ರಾಂತಿ ಪಡೆದ ಸಿಂಹರಾಜ

    ರೈತನ ಮನೆಯೊಳಗೆ ನುಗ್ಗಿ ವಿಶ್ರಾಂತಿ ಪಡೆದ ಸಿಂಹರಾಜ

    ಅಹಮದಾಬಾದ್: ರೈತರೊಬ್ಬರ ಮನೆಗೆ ಸಿಂಹ ನುಗ್ಗಿ, ಮನೆಯಲ್ಲೇ ವಿಶ್ರಾಂತಿ ಪಡೆದ ಘಟನೆ ಗುಜರಾತ್‍ನ ಅಂರೇಲಿ ಜಿಲ್ಲೆಯ ಪಟ್ಲಾ ಎಂಬ ಹಳ್ಳಿಯಲ್ಲಿ ಭಾನುವಾರದಂದು ನಡೆದಿದ್ದು, ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಪಟ್ಲಾ ಹಳ್ಳಿಯು ಗಿರ್ ಅರಣ್ಯ ಪ್ರದೇಶದ ಗಡಿಭಾಗದಲ್ಲಿರುವ ಜಿಲುಬಾಯಿ ವಾಲಾ ಅವರ ಮನೆಗೆ ಸಿಂಹ ನುಗ್ಗಿತ್ತು. ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಮನೆಗೆ ಸಿಂಹ ನುಗ್ಗಿ, ಶೇಂಗಾ ತುಂಬಿಟ್ಟ ಕೋಣೆಯಲ್ಲಿ ಸೇರಿದಷ್ಟೇ ಅಲ್ಲದೆ ದಾರಿಯಲ್ಲಿ ಜಿಲುಬಾಯಿ ಅವರ ಒಂದು ಎಮ್ಮೆಯನ್ನು ಸಹ ಕೊಂದು ಹಾಕಿತ್ತು.

    ಅರಣ್ಯಾಧಿಕಾರಿಗಳಿಗೆ ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ. ಅರಣ್ಯ ಸಿಬ್ಬಂದಿ ಎರಡು ಗಂಟೆಗಳ ಸತತ ಪ್ರಯತ್ನ ಪಟ್ಟು ಬಳಿಕ ಸಿಂಹವನ್ನು ಸೆರೆಹಿಡಿದು, ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟಿದ್ದಾರೆ.

    ಈ ಅರಣ್ಯದಲ್ಲಿ ಏಷ್ಯಾಟಿಕ್ ತಳಿಯ ಸಿಂಹಗಳು ಹೆಚ್ಚಾಗಿ ಕಾಣಸಿಗುತ್ತದೆ. ಪಟ್ಲಾ ಹಳ್ಳಿಯು ಗಿರ್ ಅರಣ್ಯ ಪ್ರದೇಶಕ್ಕೆ ಸಮೀಪದಲ್ಲಿ ಇರುವುದರಿಂದ ಸಿಂಹಗಳು ಹೀಗೆ ಹಳ್ಳಿಗಳಿಗೆ ನುಗ್ಗುವುದು ಈ ಭಾಗದಲ್ಲಿ ಸಾಮಾನ್ಯವಾಗಿರುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ವಿಶ್ರಾಂತಿಯಲ್ಲಿರುವ ಅಪ್ಪನನ್ನು ನೋಡಲು ಬಂದ ಮಗ ನಿಖಿಲ್

    ವಿಶ್ರಾಂತಿಯಲ್ಲಿರುವ ಅಪ್ಪನನ್ನು ನೋಡಲು ಬಂದ ಮಗ ನಿಖಿಲ್

    ಮೈಸೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ವಿಶ್ರಾಂತಿಗಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಜಿಲ್ಲೆಯಲ್ಲಿ ವಾಸ್ತವ್ಯ ಹೂಡಿದ್ದಾರೆ.

    ಜಿಲ್ಲೆಯ ಎಚ್.ಡಿ.ಕೋಟೆ ಸಮೀಪದ ಕಬಿನಿ ಹಿನ್ನೀರು ಪ್ರದೇಶದಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ಟಿಪ್ಪು ಜಯಂತಿ ಗಲಾಟೆಯ ನಡುವೆ ವಿಶ್ರಾಂತಿ ಪಡೆಯುತ್ತಿದ್ದಾರೆ. ಸಿಎಂ ಕುಮಾರಸ್ವಾಮಿ ಅನಾರೋಗ್ಯದ ಹಿನ್ನೆಲೆಯಲ್ಲಿ ವೈದ್ಯರು ವಿಶ್ರಾಂತಿಗೆ ಸಲಹೆ ನೀಡಿದ್ದರು. ಆದ್ದರಿಂದ ಶನಿವಾರ ರಾತ್ರಿ ಮೈಸೂರಿನ ಎಚ್.ಡಿ.ಕೋಟೆಗೆ ಆಗಮಿಸಿದ್ದಾರೆ.

    ಈ ವೇಳೆ ಸಾರ್ವಜನಿಕರು ಮತ್ತು ಸ್ಥಳೀಯ ಮುಖಂಡರಿಂದಲೂ ಸಿಎಂ ಕುಮಾರಸ್ವಾಮಿ ಅಂತರವನ್ನು ಕಾಯ್ದುಕೊಂಡಿದ್ದಾರೆ. ಜೊತೆಗೆ ಯಾರಿಗೂ ಒಳ ಪ್ರವೇಶಿಸದಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಇಂದು ತಂದೆ ಕುಮಾರಸ್ವಾಮಿ ಅವರನ್ನು ನೋಡಲು ಮಗ ನಿಖಿಲ್ ಕುಮಾರಸ್ವಾಮಿ ಆಗಮಿಸಿದ್ದಾರೆ.

    ತಂದೆಯ ಆರೋಗ್ಯವನ್ನು ವಿಚಾರಿಸಲು ಭದ್ರತೆ ಸಮೇತವಾಗಿ ಕಬಿನಿ ಹಿನ್ನೀರಿಗೆ ನಿಖಿಲ್ ಆಗಮಿಸಿದ್ದು, ಬೋಟ್ ಏರಿ ರೆಸಾರ್ಟ್ ಗೆ ನಿಖಿಲ್ ತೆರಳಿದ್ದಾರೆ. ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಮೈಸೂರಿನಲ್ಲಿ ವಿಶ್ರಾಂತಿಯಲ್ಲಿದ್ದಾರೆ. ಬೆಂಗಳೂರು ಅಥವಾ ಮನೆಯಲ್ಲಿದ್ದರೆ ಸಾರ್ವಜನಿಕರು ಬರುವ ಸಾಧ್ಯತೆ ಇದ್ದ ಕಾರಣ ಸಿಎಂ ಕುಮಾರಸ್ವಾಮಿ ಅವರು ಹಿನ್ನೀರು ಪ್ರದೇಶದಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • 3 ದಿನ ಪಶ್ಚಿಮ ಘಟ್ಟದಲ್ಲಿ ಎಚ್‍ಡಿಕೆ ವಿಶ್ರಾಂತಿ

    3 ದಿನ ಪಶ್ಚಿಮ ಘಟ್ಟದಲ್ಲಿ ಎಚ್‍ಡಿಕೆ ವಿಶ್ರಾಂತಿ

    ಬೆಂಗಳೂರು: ರಾಜಕೀಯ ಜಂಜಾಟದಿಂದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಕೊಂಚ ಬಿಡುವು ಪಡೆದುಕೊಂಡಿದ್ದು, ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ.

    ಅರಣ್ಯ ಪ್ರದೇಶಕ್ಕೆ ತೆರಳಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚನೆ ನೀಡಿದ್ದಾರೆ. ವೈದ್ಯರ ಸಲಹೆ ಮೇರೆಗೆ ಸಿಎಂ ಅವರು 3 ದಿನ ವಿಶ್ರಾಂತಿಗೆ ತೆರಳಿದ್ದಾರೆ. ಪಶ್ಚಿಮ ಘಟ್ಟ ಅರಣ್ಯ ಪ್ರದೇಶದ ವಿಶ್ರಾಂತಿ ಗೃಹವೊಂದರಲ್ಲಿ 3 ದಿನ ವಾಸ್ತವ್ಯ ಹೂಡಲಿದ್ದಾರೆ. ಈಗಾಗಲೇ ಮುಖ್ಯಮಂತ್ರಿಯವರು ತಮ್ಮ ಪತ್ನಿ ಹಾಗೂ ಪುತ್ರ ನಿಖಿಲ್ ಜೊತೆ ಅಲ್ಲಿಗೆ ತೆರಳಿದ್ದಾರೆ. ವಿಶ್ರಾಂತಿ ಪಡೆದ ಬಳಿಕ ಅಂದರೆ ನವೆಂಬರ್ 11 ರ ಸಂಜೆ ರಾಜಧಾನಿಗೆ ವಾಪಸ್ಸಾಗಲಿದ್ದಾರೆ.

    ಅಕ್ಟೋಬರ್ ತಿಂಗಳಲ್ಲಿ ಎರೋಟಿಕ್ ವಾಲ್ವ್ ಅಳವಡಿಕೆ ಹಿನ್ನೆಲೆಯಲ್ಲಿ ಅಪೋಲೋ ಆಸ್ಪತ್ರೆಗೆ ದಾಖಲಾಗಿ, ಡಿಸ್ಚಾರ್ಜ್ ಆಗಿದ್ದರು. ಎಚ್‍ಡಿ ಕುಮಾರಸ್ವಾಮಿ ಹೃದಯ ಶಸ್ತ್ರ ಚಿಕಿತ್ಸೆ ಸಂಬಂಧ ಸೆಪ್ಟೆಂಬರ್ 23 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಡಾ. ಸತ್ಯಕೀ ಹಾಗೂ ಡಾ.ಮಂಜುನಾಥ್ ಅವರ ನೇತೃತ್ವದಲ್ಲಿ ಆಪರೇಷನ್ ನಡೆದಿತ್ತು ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಎಚ್‍ಡಿಕೆ ಗುಣಮುಖರಾಗಲೆಂದು ದೇವರ ಮೊರೆ ಹೋಗಿದ್ದ ಅಭಿಮಾನಿಗಳು, ಜೆಡಿಎಸ್ ಕಾರ್ಯಕರ್ತರು ದೇವಾಲಯ, ಚರ್ಚ್ ಹಾಗೂ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ನಾಟಿ ಕೋಳಿ, ಮಟನ್‍ನಿಂದ ಸಿದ್ದು ದೂರ – ಉಪ್ಪು ಖಾರ ಇಲ್ಲದ ಆಹಾರ ಸೇವನೆ

    ನಾಟಿ ಕೋಳಿ, ಮಟನ್‍ನಿಂದ ಸಿದ್ದು ದೂರ – ಉಪ್ಪು ಖಾರ ಇಲ್ಲದ ಆಹಾರ ಸೇವನೆ

    ಮಂಗಳೂರು: ಸದಾ ನಾಟಿ ಕೋಳಿ, ಮಟನ್ ಸಾರನ್ನೇ ನೆಚ್ಚಿಕೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಈಗ ಪಥ್ಯಾಹಾರದಲ್ಲಿ ತೊಡಗಿದ್ದಾರೆ.

    10 ದಿನಗಳ ಪ್ರಕೃತಿ ಚಿಕಿತ್ಸೆಗಾಗಿ ಧರ್ಮಸ್ಥಳದ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲಾಗಿರುವ ಸಿದ್ದರಾಮಯ್ಯ ಅಲ್ಲಿ ಎರಡು ದಿನಗಳನ್ನು ಕಳೆದಿದ್ದಾರೆ. ಸದಾ ತಿರುಗಾಟದಿಂದ ಶುಗರ್, ಬಿಪಿ ಹೆಚ್ಚಿಸಿಕೊಂಡಿದ್ದ 69ರ ಹರೆಯದ ಸಿದ್ದುಗೆ ಈಗ ಮಾಂಸಾಹಾರ ಸಂಪೂರ್ಣ ವರ್ಜ್ಯ.

    ಬೆಳಗ್ಗೆ 6 ಗಂಟೆಗೆ ಎದ್ದು ಯೋಗ, ಪ್ರಾಣಾಯಾಮ, 9 ಗಂಟೆಗೆ ರಾಗಿ ಗಂಜಿ. 11 ಗಂಟೆಗೆ ಹಸಿ ತರಕಾರಿಯೇ ಮಧ್ಯಾಹ್ನದ ಊಟ. ಹಸಿ ತರಕಾರಿ, ಮೊಳಕೆ ಕಾಳು, ಸಲಾಡ್ ಮತ್ತು ಮಜ್ಜಿಗೆ ಮಾತ್ರ. ಉಪ್ಪು, ಹುಳಿ, ಖಾರ ಇಲ್ಲ. ಅನ್ನವೂ ಇಲ್ಲದ ಊಟ. ಸಂಜೆ 6.30ಕ್ಕೆ ರಾತ್ರಿ ಊಟ. ಬೇಯಿಸಿದ ತರಕಾರಿ, ಎರಡು ಚಪಾತಿ, ಮಜ್ಜಿಗೆ, ಪಪ್ಪಾಯಿ ಅಷ್ಟೇ.

    ಇದರ ನಡುವೆ, ವಿಶ್ರಾಂತಿ, ಜಲ ಚಿಕಿತ್ಸೆ, ಹೈಡ್ರೋಥೆರಪಿ, ಮಸಾಜ್ ಇರುತ್ತದೆ. ಯಾರನ್ನೂ ಭೇಟಿಯಾಗಲಿಕ್ಕಿಲ್ಲ. ರಾತ್ರಿ ಹತ್ತು ಗಂಟೆಗೆ ನಿದ್ದೆ. ಸದಾ ಗಿಜಿಗುಡುತ್ತಿದ್ದ ಬೆಂಬಲಿಗರ ನಡುವಿದ್ದ ಸಿದ್ದರಾಮಯ್ಯ, ಸಂಪೂರ್ಣ ಬದಲಾಗಿದ್ದಾರೆ. ಕಳೆದ ವರ್ಷ ಮೀನು ತಿಂದು ಧರ್ಮಸ್ಥಳ ದೇವಸ್ಥಾನಕ್ಕೆ ಹೋದರೆಂಬ ಅಪವಾದ ಹೊತ್ತುಕೊಂಡಿದ್ದ ಸಿದ್ದು ಈಗ ಅದೇ ಧರ್ಮಸ್ಥಳ ಬಳಿಯ ಚಿಕಿತ್ಸಾಲಯದಲ್ಲಿ ದೇಹ ದಂಡನೆ ಮಾಡಿಕೊಳ್ತಿರೋದು ಕಾಕತಾಳೀಯ.