Tag: ವಿಶ್ವಕಪ್ ಟೂರ್ನಿ

  • ಲಂಕಾ ವಿರುದ್ಧ ಮೋಸದಾಟವಾಡಿತಾ ಪಾಕ್‌? – ಮತ್ತೆ ಮತ್ತೆ ಟೀಕೆಗೆ ಗುರಿಯಾಗ್ತಿರೋದೇಕೆ?

    ಲಂಕಾ ವಿರುದ್ಧ ಮೋಸದಾಟವಾಡಿತಾ ಪಾಕ್‌? – ಮತ್ತೆ ಮತ್ತೆ ಟೀಕೆಗೆ ಗುರಿಯಾಗ್ತಿರೋದೇಕೆ?

    ಹೈದರಾಬಾದ್‌: ಏಕದಿನ ವಿಶ್ವಕಪ್‌ (ODI World Cup) ಟೂರ್ನಿಯ ಆರಂಭಕ್ಕೂ ಮುನ್ನವೇ ಸುದ್ದಿಯಲ್ಲಿದ್ದ ಪಾಕಿಸ್ತಾನ (Pakistan) ತಂಡ ಇದೀಗ ಮತ್ತೆ ನೆಟ್ಟಿಗರ ಬಾಯಿಗೆ ಆಹಾರವಾಗಿದೆ. ವಿಶ್ವಕಪ್‌ ಟೂರ್ನಿಯ ಎರಡೂ ಅಭ್ಯಾಸ ಪಂದ್ಯಗಳಲ್ಲಿ 300ಕ್ಕೂ ಅಧಿಕ ರನ್‌ ಬಾರಿಸಿದರೂ ಸೋಲಿನಿಂದ ಕಂಗೆಟ್ಟಿದ್ದ‌ ಪಾಕ್‌ ತಂಡ ಇದೀಗ ಹೊಸ ವಿವಾದಕ್ಕೆ ಸಿಲುಕಿದೆ.

    ಹೌದು. ಹೈದರಾಬಾದ್‌ನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 345 ರನ್‌ಗಳ ಗುರಿ ತಲುಪುವ ಮೂಲಕ ವಿಶ್ವದಾಖಲೆಯ ಜಯಗಳಿಸಿದ ಪಾಕಿಸ್ತಾನ ಇದೀಗ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಪಂದ್ಯದ ವೇಳೆ ತಂಡದ ಆಟಗಾರರು ಬೌಂಡರಿ ಗೆರೆಯ ವಿಚಾರದಲ್ಲಿ ಕಳ್ಳಾಟವಾಡುತ್ತಿದ್ದಾರೆ ಅನ್ನೋ ಬಗ್ಗೆ ಜಾಲತಾಣದಲ್ಲಿ ಚರ್ಚೆಗಳು ಹುಟ್ಟಿಕೊಂಡಿವೆ.

    ಮಂಗಳವಾರ ಲಂಕಾ ವಿರುದ್ಧ ತನ್ನ 2ನೇ ಪಂದ್ಯವನ್ನಾಡಿದ ಪಾಕಿಸ್ತಾನ ತಂಡ ಬ್ಯಾಟಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್‌ ಮಾಡಿದ್ದ ಲಂಕಾ ತಂಡ ಪಾಕ್‌ ಬೌಲರ್‌ಗಳನ್ನ ಹಿಗ್ಗಾಮುಗ್ಗಾ ಚೆಂಡಾದಿದ್ದರು. ಲಂಕಾ ಪರ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕುಸಾಲ್‌ ಮೆಂಡೀಸ್‌ (Kusal Mendis) ಹಾಗೂ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಮರವಿಕ್ರಮ ಶತಕ ಸಿಡಿಸಿ ಮಿಂಚಿದರು. ಮೆಂಡಿಸ್‌ 77 ಎಸೆತಗಳಲ್ಲಿ 122 ರನ್‌ (6 ಸಿಕ್ಸರ್‌, 14 ಬೌಂಡರಿ) ಚಚ್ಚಿದರೆ, ಸಮರವಿಕ್ರಮ 2 ಸಿಕ್ಸರ್‌, 11 ಬೌಂಡರಿಗಳೊಂದಿಗೆ 89 ಎಸೆತಗಳಲ್ಲಿ 108 ರನ್‌ ಗಳಿಸಿ ಔಟಾದರು. ಇದರೊಂದಿಗೆ ಆರಂಭಿಕ ಆಟಗಾರ ಪಾತುಮ್‌ ನಿಸಾಂಕ ಸಹ 61 ಎಸೆತಗಳಲ್ಲಿ 51 ರನ್‌ ಬಾರಿಸಿದ್ದರು.

    ಕೇವಲ 65 ಎಸೆತಗಳಲ್ಲಿ ಶತಕ ಸಿಡಿಸಿ ಇನ್ನಷ್ಟು ಸ್ಫೋಟಕ ಇನ್ನಿಂಗ್ಸ್‌ ಆರಂಭಿಸಿದ್ದ ಕುಸಾಲ್‌ ಮೆಂಡೀಸ್‌, ಪಾಕ್‌ ಬೌಲರ್‌ಗಳನ್ನು ಕಂಗಲಾಗುವಂತೆ ಮಾಡಿದ್ದರು. ಆದ್ರೆ ಲಂಕಾ ಇನ್ನಿಂಗ್ಸ್​ನ 29ನೇ ಓವರ್​ನಲ್ಲಿ (28.5 ಓವರ್‌) ಹಸನ್ ಅಲಿ ಎಸೆತದಲ್ಲಿ ಸಿಕ್ಸರ್‌ ಬಾರಿಸಲು ಯತ್ನಿಸಿದಾಗ ಡೀಪ್ ಮಿಡ್ ವಿಕೆಟ್​ನ ಬೌಂಡರಿ ಲೈನ್ ಬಳಿ ಕ್ಯಾಚ್‌ ಆಗಿ, ಮೆಂಡೀಸ್‌ ಔಟಾದರು. ಫೀಲ್ಡಿಂಗ್‌ನಲ್ಲಿದ್ದ ಇಮಾಮ್ ಉಲ್ ಹಕ್ ( Imam-ul-Haq) ಈ ಕ್ಯಾಚ್ ಹಿಡಿದ ಬಳಿಕ ನೆಲಕ್ಕೆ ಉರುಳಿದರು, ಈ ಕುರಿತ ಫೋಟೋಗಳು ವೈರಲ್‌ ಆದ ಬಳಿಕ ಪಾಕ್‌ ವಿರುದ್ಧ ಟೀಕೆಗಳ ಅಲೆ ಎದ್ದಿದೆ. ಪಾಕಿಸ್ತಾನದ ಆಟಗಾರರು ಮೋಸದಾಟವಾಡಿ ಲಂಕಾವನ್ನೂ ಸೋಲಿಸಿತ್ತಾ ಅನ್ನೋ ಪ್ರಶ್ನೆಯೂ ಹುಟ್ಟುಕೊಂಡಿದೆ.

    ಏಕೆಂದರೆ ಇಮಾಮ್‌ ಕ್ಯಾಚ್‌ ಹಿಡಿದು ನೆಲಕ್ಕುರುಳಿದಾಗ ಅವರು ಬೌಂಡರಿ ಹಗ್ಗದ ಗುರುತನ್ನು ಸ್ಪರ್ಶಿಸಿರುವುದು ಸ್ಪಷ್ಟವಾಗಿ ಕಾಣಿಸಿದೆ. ಹೀಗಾಗಿ ಯಾರೋ ಬೌಂಡರಿ ಲೈನ್ ಅನ್ನು ಹಿಂದಕ್ಕೆ ಸರಿಸಿದಂತೆ ತೋರುತ್ತಿತ್ತು. ಆ ಬಳಿಕ ಇಮಾಮ್ ಹಿಡಿದ ಕ್ಯಾಚ್​ನ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಫೀಲ್ಡಿಂಗ್‌ನಲ್ಲಿ ಪಾಕಿಸ್ತಾನ ತಂಡ ಕಳ್ಳಾಟ ಆಡುತ್ತಿದ್ದೆ ಎಂದು ಕ್ರಿಕೆಟ್‌ ಅಭಿಮಾನಿಗಳು ಪ್ರಶ್ನಿಸಿದ್ದಾರೆ. ನೆದರ್ಲೆಂಡ್ಸ್‌ ವಿರುದ್ಧ ಮೊದಲ ಪಂದ್ಯವಾಡಿದಾಗಲೂ ಪಾಕ್‌ ತಂಡದ ವಿರುದ್ಧ ಇದೇ ಟೀಕೆಗಳು ಕೇಳಿಬಂದಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜಡೇಜಾಗೆ ಸಾಂತ್ವನ ಹೇಳಲು ನಮ್ಮಿಂದಾಗುತ್ತಿಲ್ಲ: ರಿವಾಬಾ ಜಡೇಜಾ

    ಜಡೇಜಾಗೆ ಸಾಂತ್ವನ ಹೇಳಲು ನಮ್ಮಿಂದಾಗುತ್ತಿಲ್ಲ: ರಿವಾಬಾ ಜಡೇಜಾ

    ನವದೆಹಲಿ: ವಿಶ್ವಕಪ್ ಟೂರ್ನಿಯಲ್ಲಿ ಸೆಮಿಪೈನಲ್‍ನಲ್ಲಿ ಆಲ್ ರೌಂಡರ್ ರವೀಂದ್ರ ಜಡೇಜಾ ಅವರ ವಿರೋಚಿತ ಹೋರಾಟದ ಹೊರತಾಗಿಯೂ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಸೋಲನುಭವಿಸಿತು. ಈ ಸೋಲಿನ ಆಘಾತದಿಂದ ಪತಿ ಹೊರ ಬಂದಿಲ್ಲ ಎಂದು ಜಡೇಜಾ ಪತ್ನಿ ರಿವಾಬಾ ಹೇಳಿದ್ದಾರೆ.

    ಸೋಲಿನ ವಿಚಾರವಾಗಿ ಮಾತನಾಡಿದ ರವೀಂದ್ರ ಜಡೇಜಾ, ನಾನು ವಿಕೆಟ್ ಒಪ್ಪಿಸಿ ಮೈದಾನದಿಂದ ಹೊರಬರದಿದ್ದರೆ ಗೆಲುವು ಸಾಧಿಸುತ್ತಿದ್ದೇವು. ಇನ್ನೇನು ಗೆಲುವು ಸಾಧಿಸುತ್ತೇವೆ ಎನ್ನುವ ಹಂತದಲ್ಲಿಯೇ ಸೋಲನುಭವಿಸಿದೇವು ಎಂದು ಹೇಳುತ್ತಲೇ ಇದ್ದರು. ಈ ಆಘಾತದಿಂದ ಅವರು ಇನ್ನೂ ಹೊರ ಬಂದಿಲ್ಲ. ಹೀಗಾಗಿ ಅವರಿಗೆ ಸಾಂತ್ವನ ಹೇಳಲು ನಮ್ಮಿಂದಾಗುತ್ತಿಲ್ಲ ಎಂದು ರಿವಾಬಾ ಜಡೇಜಾ ತಿಳಿಸಿದ್ದಾರೆ.

    ಪತಿ ಯಾವಾಗಲೂ ಸ್ಫೂರ್ತಿಯಿಂದ ಆಟವಾಗುತ್ತಾರೆ. ನೀವು ಅದನ್ನು ನೋಡಿರಬಹುದು. ಪಂದ್ಯಗಳಲ್ಲಿ ಆಲ್ ರೌಂಡರ್ ಆಗಿ ಮಿಂಚುತ್ತಾರೆ. 2013ರಲ್ಲಿ ಟೀಂ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಗೆಲುವು ಸಾಧಿಸಿದಾಗ ಫೈನಲ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು ಎಂದು ರಿಬಾವಾ ಜಡೇಜಾ ನೆನೆದರು.

    ಈ ಹಿಂದೆ ಭಾವನತ್ಮಾಕವಾಗಿ ಟ್ವೀಟ್ ಮಾಡಿದ್ದ ರವೀಂದ್ರ ಜಡೇಜಾ, “ಪ್ರತಿ ಸೋಲಿನ ನಂತರ ಗೆಲ್ಲುವುದನ್ನು ನನಗೆ ಕ್ರಿಕೆಟ್ ಕಲಿಸಿಕೊಟ್ಟಿದೆ. ಅದನ್ನು ನಾನು ಎಂದಿಗೂ ಬಿಡುವುದಿಲ್ಲ. ನನ್ನ ಪ್ರೀತಿಯ ಮೂಲವಾದ ನನ್ನ ಅಭಿಮಾನಿಗಳಿಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು. ನಿಮ್ಮೆಲ್ಲರ ಬೆಂಬಲಕ್ಕೆ ಧನ್ಯವಾದಗಳು. ನನಗೆ ಸದಾ ಸ್ಫೂರ್ತಿದಾಯಕವಾಗಿರಿ ಮತ್ತು ನನ್ನ ಕೊನೆಯ ಉಸಿರಿರುವವರೆಗೂ ನನ್ನ ಕೈಯಲ್ಲಿ ಅದಷ್ಟೂ ಅತ್ಯುತ್ತಮ ಆಟ ಆಡುತ್ತೇನೆ” ಎಂದು ಬರೆದುಕೊಂಡಿದ್ದರೆ.

    ಸೆಮಿಫೈನಲ್ ಪಂದ್ಯದಲ್ಲಿ ಉತ್ತಮವಾಗಿ ಆಟವಾಡಿ ರವೀಂದ್ರ ಜಡೇಜಾ ತಂಡವನ್ನು ಗೆಲುವಿನ ದಡದತ್ತ ತಂದಿದ್ದರು. ಆರಂಭದಲ್ಲಿ 5 ರನ್ ಗಳಿಗೆ ಮೂರು ವಿಕೆಟ್ ಕಳೆದುಕೊಂಡು 92 ರನ್‍ಗಳಿಗೆ 6 ವಿಕೆಟ್ ಉರುಳಿದಾಗ ನ್ಯೂಜಿಲೆಂಡ್ ಸುಲಭವಾಗಿ ಗೆಲ್ಲುವ ಸಾಧ್ಯತೆ ಇತ್ತು. ಈ ಸಂದರ್ಭದಲ್ಲಿ ಭಾರತಕ್ಕೆ 117 ಎಸೆತಗಳಲ್ಲಿ 148 ರನ್ ಗಳಿಸುವ ಅಗತ್ಯವಿತ್ತು. ಆದರೆ ಜಡೇಜಾ ಮತ್ತು ಧೋನಿ 7ನೇ ವಿಕೆಟಿಗೆ 116 ರನ್ ಜೊತೆಯಾಟವಾಡಿ ಭಾರತವನ್ನು ಗೆಲುವಿನ ಹತ್ತಿರ ತಂದಿಟ್ಟಿದ್ದರು. ಜಡೇಜಾ 39 ಎಸೆತಗಳಲ್ಲಿ 3 ಬೌಂಡರಿ, 3 ಸಿಕ್ಸರ್ ಗಳಿಂದ ಅರ್ಧ ಶತಕ ಪೂರ್ಣಗೊಳಿಸಿದರು. ಈ ಮೂಲಕ ವಿಶ್ವಕಪ್ ಟೂರ್ನಿಯ ಸೆಮಿ ಫೈನಲ್ ನಲ್ಲಿ ನಂ.8ರ ಕ್ರಮಾಂಕದಲ್ಲಿ ಬ್ಯಾಟಿಂಗ್ ಇಳಿದು ಅರ್ಧ ಶತಕ ಬ್ಯಾಟ್ಸ್ ಮನ್ ಸಿಡಿಸಿದ ಸಾಧನೆ ಮಾಡಿದರು. 5 ವರ್ಷಗಳ ಬಳಿಕ ಜಡೇಜಾ ಗಳಿಸಿದ ಏಕದಿನ ಅರ್ಧ ಶತಕ ಇದಾಗಿತ್ತು. ಅಂತಿಮ ಹಂತದಲ್ಲಿ ಸಿಕ್ಸರ್ ಸಿಡಿಸಲು ಯತ್ನಿಸಿದ ಜಡೇಜಾ 59 ಎಸೆತಗಳಲ್ಲಿ 77 ರನ್(4 ಬೌಂಡರಿ, 4 ಸಿಕ್ಸರ್) ಗಳಿಸಿ ಬೋಲ್ಟ್‍ಗೆ ವಿಕೆಟ್ ಒಪ್ಪಿಸಿದ್ದರು.

  • ಐಸ್‍ಲ್ಯಾಂಡ್ ಕ್ರಿಕೆಟಿನಿಂದ ಆಫರ್ ಬಂದ ಮರುದಿನ ರಾಯುಡು ನಿವೃತ್ತಿ

    ಐಸ್‍ಲ್ಯಾಂಡ್ ಕ್ರಿಕೆಟಿನಿಂದ ಆಫರ್ ಬಂದ ಮರುದಿನ ರಾಯುಡು ನಿವೃತ್ತಿ

    ನವದೆಹಲಿ: ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಪರ ಆಡಲು ಅವಕಾಶ ಪಡೆಯುವಲ್ಲಿ ವಿಫಲರಾದ ಅಂಬಟಿ ರಾಯುಡು ಅವರಿಗೆ ಐಸ್‍ಲ್ಯಾಂಡ್ ಕ್ರಿಕೆಟ್ ಆಫರ್ ನೀಡಿದೆ.

    ಆಂಧ್ರಪ್ರದೇಶದ ಮಧ್ಯಮ ಕ್ರಮಾಂಕದ ಬ್ಯಾಟ್ಸಮನ್ ಅಂಬಟಿ ರಾಯುಡು ವಿಶ್ವಕಪ್ ಟೂರ್ನಿಗೆ ಆಯ್ಕೆಯಾಗುತ್ತಾರೆ ಎಂಬ ನಿರೀಕ್ಷೆಯಿತ್ತು. ಆದರೆ ಟೀಂ ಇಂಡಿಯಾ 15ರ ಬಳಗದಲ್ಲಿ ರಾಯುಡು ಬದಲಿಗೆ ವಿಜಯ್ ಶಂಕರ್ ಅವರಿಗೆ ಸ್ಥಾನ ನೀಡಲಾಗಿತ್ತು. ಶಿಖರ್ ಧವನ್ ಹಾಗೂ ವಿಜಯ್ ಶಂಕರ್ ಗಾಯಗೊಂಡಾಗಲೂ ರಾಯುಡು ಅವರಿಗೆ ಬಿಸಿಸಿಐ ಮಣೆ ಹಾಕಲಿಲ್ಲ. ಈ ಮಧ್ಯೆ ಐಸ್‍ಲ್ಯಾಂಡ್ ಕ್ರಿಕೆಟ್ ಮಂಡಳಿ ಅಂಬಟಿ ರಾಯುಡು ಅವರಿಗೆ ಭರ್ಜರಿ ಆಫರ್ ನೀಡಿದೆ.

    ವಿಶ್ವಕಪ್ ಟೂರ್ನಿಯಲ್ಲಿ ಬಿಸಿಸಿಐ ರಾಯುಡು ಅವರನ್ನು ಕಡೆಗಣಿಸಿದ್ದನ್ನು ಅವಕಾಶವಾಗಿ ಪಡೆದ ಐಸ್‍ಲ್ಯಾಂಡ್ ಆಫರ್ ನೀಡಿದೆ. ಈ ಕುರಿತು ಟ್ವೀಟ್ ಮಾಡಿ, ಕ್ರಿಕೆಟ್ ಅಭಿಮಾನಿಗಳ ಟೀಕೆಗೆ ಗುರಿಯಾಗಿದೆ. ಟ್ವೀಟ್ ಬೆನ್ನಲ್ಲೇ ರಾಯುಡು ಅಂತರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

    ಮಯಾಂಕ್ ಅಗರ್ವಾಲ್ 3 ವಿಕೆಟ್ ಹೊಂದಿದ್ದಾರೆ. ಹೀಗಾಗಿ ಅಂಬಟಿ ರಾಯುಡು ನೀವು 3ಡಿ ಗ್ಲಾಸ್ ಪಕ್ಕಕ್ಕೆ ಇರಿಸಿ. ಸಾಮಾನ್ಯ ಕನ್ನಡಕ ಬಳಸಿ ಈ ದಾಖಲೆಗಳನ್ನು ಓದಿ. ನಮ್ಮ ಜೊತೆ ಬಂದು ಕೈ ಜೋಡಿಸಿ. ನಾವು ನಿಮ್ಮನ್ನು ಇಷ್ಟಪಡುತ್ತೇವೆ ಎಂದು ಐಸ್‍ಲ್ಯಾಂಡ್ ಕ್ರಿಕೆಟ್ ಮಂಡಳಿ ಟ್ವೀಟ್ ಮಾಡಿದೆ. ಟ್ವೀಟ್ ಜೊತೆಗೆ ಐಸ್‍ಲ್ಯಾಂಡ್ ಪೌರತ್ವ ಪಡೆಯಲು ಯಾವ ದಾಖಲೆಗಳನ್ನು ನೀಡಬೇಕು ಎಂದು ಕೂಡ ತಿಳಿಸಲಾಗಿದೆ.

    4ನೇ ಸ್ಥಾನಕ್ಕೆ ತ್ರಿ ಡೈಮೆನ್ಶನ್ ಪ್ಲೇಯರ್ ಅಗತ್ಯವಿತ್ತು. ಹೀಗಾಗಿ ಅಂಬಟಿ ರಾಯುಡು ಬದಲು ವಿಜಯ್ ಶಂಕರ್ ಗೆ ಸ್ಥಾನ ನೀಡಲಾಗಿತ್ತು ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಎಂ.ಎಸ್.ಕೆ ಪ್ರಸಾದ್ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು. ಪ್ರಸಾದ್ ಅವರ ಹೇಳಿಕೆ ರಾಯುಡು ಅವರನ್ನು ಕೆರಳಿಸಿತ್ತು. ಹೀಗಾಗಿ ರಾಯುಡು ‘3ಡಿ ಗ್ಲಾಸ್ (ತ್ರಿ ಡೈಮೆನ್ಶನ್) ಖರೀದಿಸಿ ವಿಶ್ವಕಪ್ ಪಂದ್ಯ ನೋಡುವುದಾಗಿ ಟ್ವೀಟ್ ಮಾಡಿದ್ದರು.

    ಅಂಬಾಟಿ ರಾಯುಡು ಟ್ವೀಟ್ ಸಖತ್ ಟ್ರೋಲ್ ಆಗಿತ್ತು. ಟೂರ್ನಿ ನಡುವೆ ವಿಜಯ್ ಶಂಕರ್ ಗಾಯಗೊಂಡಾಗ ರಾಯುಡು ಬದಲು ಮಯಾಂಕ್ ಅಗರ್ವಾಲ್‍ಗೆ ಅವಕಾಶ ನೀಡಲಾಯಿತು. ಈ ವೇಳೆ ಮತ್ತೆ ರಾಯುಡು 3ಡಿ ಗ್ಲಾಸ್ ವಿಚಾರ ಟ್ರೋಲ್ ಆಯಿತು. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಐಸ್‍ಲ್ಯಾಂಡ್ ಕ್ರಿಕೆಟ್ ಮಂಡಳಿ ಕೂಡ ಪರೋಕ್ಷವಾಗಿ ರಾಯುಡು ಕಾಲೆಳೆದಿದೆ.

    ಐಸ್‍ಲ್ಯಾಂಡ್ ಕ್ರಿಕೆಟ್ ಮಂಡಳಿ ಜುಲೈ 2 ರಂದು ಟ್ವೀಟ್ ಮಾಡಿದ್ದು, ಇದಕ್ಕೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜುಲೈ 3 ಮಧ್ಯಾಹ್ನದ ವೇಳೆಗೆ 402 ರೀ ಟ್ವೀಟ್ ಆಗಿದ್ದು, 1,400ಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ.

    ಐಸ್‍ಲ್ಯಾಂಡ್ ಕ್ರಿಕೆಟ್ ಮಂಡಳಿ ಈ ರೀತಿ ಟ್ವೀಟ್ ಮಾಡಬಾರದಿತ್ತು ಎಂದು ನೆಟ್ಟಿಗರು ಹೇಳಿದ್ದಾರೆ. ಐಸ್‍ಲ್ಯಾಂಡ್ ಕ್ರಿಕೆಟ್ ಮಂಡಳಿ ವಿದೇಶಿ ಆಟಗಾರರ ಕಾಲೆಳೆದಿದ್ದು ಇದೇ ಮೊದಲೇನಲ್ಲ. ಈ ಹಿಂದೆ ಅಫ್ಘಾನಿಸ್ತಾನದ ಬೌಲರ್ ರಶೀದ್ ಖಾನ್ ಬಗ್ಗೆ ವ್ಯಂಗ್ಯವಾಡಿ, ಕ್ಷಮೆ ಕೇಳಿತ್ತು. ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ರಶೀದ್ ಖಾನ್ 110 ರನ್ ಬಿಟ್ಟುಕೊಟ್ಟಿದ್ದರು. ಈ ಕುರಿತು ಟ್ವಿಟ್ಟರ್ ನಲ್ಲಿ ವ್ಯಂಗ್ಯವಾಡಿದ್ದ ಐಸ್‍ಲ್ಯಾಂಡ್ ಕ್ರಿಕೆಟ್ ಮಂಡಳಿ, ರಶೀದ್ ಖಾನ್ ಅಫ್ಘಾನಿಸ್ತಾನದ ಪರವಾಗಿ ಮೊದಲ ಶತಕ ಬಾರಿಸಿದ್ದಾರೆ ಎಂಬ ವಿಚಾರ ಈಗ ತಾನೇ ತಿಳಿಯಿತು. 56 ಎಸೆತಗಳಲ್ಲಿ 110 ರನ್‍ಗಳು! ಬೌಲರ್ ಒಬ್ಬರು ಇಷ್ಟು ಸ್ಕೋರ್ ಮಾಡಿದ್ದು ಇದೇ ಮೊದಲು. ಒಳ್ಳೆಯ ಬ್ಯಾಟಿಂಗ್ ಮಾಡಿದ್ದೀರಾ ಎಂದು ಹೇಳಿತ್ತು.

    ಐಸ್‍ಲ್ಯಾಂಡ್  ಕ್ರಿಕೆಟ್ ಮಂಡಳಿ ಟ್ವೀಟ್‍ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ದಿಗ್ಗಜ ಕ್ರಿಕೆಟಿಗರೂ ಕೂಡ ಅಸಮಾಧಾನ ಹೊರ ಹಾಕಿದ್ದರು. ಭಾರೀ ಟೀಕೆ ವ್ಯಕ್ತವಾಗಿದ್ದರಿಂದ ಐಸ್‍ಲೆಂಡ್ ಕ್ಷಮೆಯಾಚಿಸಿತ್ತು.

  • ವಿಶ್ವಕಪ್ ಟೂರ್ನಿಯಲ್ಲಿ ದಾಖಲೆ ಬರೆದ ಶಮಿ

    ವಿಶ್ವಕಪ್ ಟೂರ್ನಿಯಲ್ಲಿ ದಾಖಲೆ ಬರೆದ ಶಮಿ

    ಬರ್ಮಿಂಗ್ ಹ್ಯಾಮ್: ಟೀಂ ಇಂಡಿಯಾ ಬಲಗೈ ವೇಗಿ ಮೊಹಮ್ಮದ್ ಶಮಿ ಇಂಗ್ಲೆಂಡ್ ವಿರುದ್ಧ 5 ವಿಕೆಟ್ ಪಡೆಯುವ ಮೂಲಕ ವಿಶ್ವಕಪ್ ಟೂರ್ನಿನಲ್ಲಿ ದಾಖಲೆ ಬರೆದಿದ್ದಾರೆ.

    ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್ ಗಳನ್ನು ಕಾಡಿದ್ದ ಬೈರ್‌ಸ್ಟೋವ್ ಹಾಗೂ ನಾಯಕ ಇಯಾನ್ ಮಾರ್ಗನ್ (1 ರನ್) ವಿಕೆಟ್ ಕೀಳುವ ಮೂಲಕ ಮೊಹಮ್ಮದ್ ಶಮಿ ಮಿಂಚಿದ್ದಾರೆ. ಅಲ್ಲದೇ ಇನ್ನಿಂಗ್ಸ್ ನ 44 ಓವರ್ ನ ಮೊದಲ ಎಸೆತದಲ್ಲಿ 44 ರನ್ ಗಳಿಸಿದ್ದ ಜೋ ರೂಟ್ ವಿಕೆಟ್ ಪಡೆದರು.

    ಅಂತಿಮ ಅಂತದಲ್ಲಿ ಬಲ್ಟರ್ (20 ರನ್) ಹಾಗೂ ವೋಕ್ಸ್ (7 ರನ್) ವಿಕೆಟ್ ಪಡೆದು ಇಂಗ್ಲೆಂಡ್ ರನ್ ವೇಗಕ್ಕೆ ಕಡಿವಾಣ ಹಾಕಿದರು. 10 ಓವರ್ ಬೌಲ್ ಮಾಡಿದ ಶಮಿ 5 ವಿಕೆಟ್ ಪಡೆದು 69 ರನ್ ಬಿಟ್ಟುಕೊಟ್ಟರು. ಈ ಮೂಲಕ ವಿಶ್ವಕಪ್ ಟೂರ್ನಿಯಲ್ಲಿ 3 ಬಾರಿ 4 ಹಾಗೂ ಅದಕ್ಕಿಂತ ಹೆಚ್ಚು ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದಾರೆ.

    ವಿಶ್ವಕಪ್ ಟೂರ್ನಿಯಲ್ಲಿ ಸತತ 3 ಪಂದ್ಯಗಳಲ್ಲಿ 4 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಉರುಳಿಸಿದ ಭಾರತದ ಮೊಟ್ಟ ಮೊದಲ ವೇಗಿ ಎನ್ನುವ ಹೆಗ್ಗಳಿಕೆಗೆ ಮೊಹಮ್ಮದ್ ಶಮಿ ಪಾತ್ರರಾಗಿದ್ದಾರೆ. 2011ರ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ಶಾಹಿದ್ ಆಫ್ರಿದಿ ಈ ದಾಖಲೆ ಮಾಡಿದ್ದರು. ಹೀಗಾಗಿ ಸತತ 3 ಪಂದ್ಯಗಳಲ್ಲಿ 4 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ವಿಶ್ವದ 2ನೇ ಬೌಲರ್ ಎನ್ನುವ ಖ್ಯಾತಿಗೂ ಶಮಿ ಪಾತ್ರರಾಗಿದ್ದಾರೆ.

    ಟೀಂ ಇಂಡಿಯಾ ಬಲಗೈ ವೇಗಿ ಭುವನೇಶ್ವರ್ ಕುಮಾರ್ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದರು. ಹೀಗಾಗಿ ಅಫ್ಘಾನಿಸ್ತಾನ ವಿರುದ್ಧ ಪಂದ್ಯದಲ್ಲಿ ಭುವನೇಶ್ವರ್ ಸ್ಥಾನವನ್ನು ಮೊಹಮ್ಮದ್ ಶಮಿ ತುಂಬಿದರು. ದೊರೆತ ಅವಕಾಶವನ್ನು ಸಮರ್ಪಕ ಪ್ರದರ್ಶನ ನೀಡಿದ ಶಮಿ ಅಫ್ಘಾನಿಸ್ತಾನ ವಿರುದ್ಧ 4 ವಿಕೆಟ್, ವೆಸ್ಟ್ ಇಂಡೀಸ್ ವಿರುದ್ಧ 4 ವಿಕೆಟ್ ಹಾಗೂ ಭಾನುವಾರ ನಡೆದ ಇಂಗ್ಲೆಂಡ್ ವಿರುದ್ಧ 5 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಆಡಿರುವ ಮೂರು ಪಂದ್ಯಗಳಲ್ಲಿ 13 ವಿಕೆಟ್ ಸಾಧನೆ ಮಾಡಿದ್ದಾರೆ.

    ವಿಶ್ವಕಪ್ ಟೂರ್ನಿಯಲ್ಲಿ ಒಟ್ಟು 10 ಪಂದ್ಯ ಆಡಿರುವ ಶಮಿ 30 ವಿಕೆಟ್ ಪಡೆದಿದ್ದಾರೆ. ಈ ಮೂಲಕ ವಿಶ್ವಕಪ್ ಟೂರ್ನಿಯಲ್ಲಿ ಅತಿ ವೇಗವಾಗಿ 30 ವಿಕೆಟ್ ಪಡೆದ ಬೌಲರ್ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

    ಅಷ್ಟೇ ಅಲ್ಲದೆ ಶಮಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. 1987 ರ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾದ ಚೇತನ್ ಶರ್ಮಾ ಹ್ಯಾಟ್ರಿಕ್ ವಿಕೆಟ್ ಪಡೆದಿದ್ದರು. ನ್ಯೂಜಿಲೆಂಡ್ ವಿರುದ್ಧ ನಾಗ್ಪುರದಲ್ಲಿ ನಡೆದ ಪಂದ್ಯದಲ್ಲಿ ಶರ್ಮಾ ಹ್ಯಾಟ್ರಿಕ್ ಸಾಧನೆ ಮಾಡಿದ್ದರು. 32 ವರ್ಷಗಳ ಬಳಿಕ ಮತ್ತೆ ಮೊಹಮ್ಮದ್ ಶಮಿ ಹ್ಯಾಟ್ರಿಕ್ ಪಡೆದಿದ್ದಾರೆ. ಅಲ್ಲದೇ ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಹ್ಯಾಟ್ರಿಕ್ ಸಾಧನೆ ಮಾಡಿದ 10ನೇ ಬೌಲರ್ ಕೂಡ ಆಗಿದ್ದಾರೆ.