Tag: ವಿಶ್ವಕಪ್

  • ಬೀಫ್‌ ನೀಡಲ್ಲ ಅಂದ BCCI; ಚಿಕನ್‌, ಮಟನ್‌, ಫಿಶ್‌ ಔತಣಕ್ಕೆ ಪಾಕ್‌ ಆಟಗಾರರು ಫಿದಾ

    ಬೀಫ್‌ ನೀಡಲ್ಲ ಅಂದ BCCI; ಚಿಕನ್‌, ಮಟನ್‌, ಫಿಶ್‌ ಔತಣಕ್ಕೆ ಪಾಕ್‌ ಆಟಗಾರರು ಫಿದಾ

    ಹೈದರಾಬಾದ್: ಇದೇ ಅಕ್ಟೋಬರ್ 5 ರಿಂದ ನಡೆಯಲಿರುವ ಏಕದಿನ ವಿಶ್ವಕಪ್ (ICC WorldCup) ಟೂರ್ನಿಯನ್ನಾಡಲು ಪಾಕಿಸ್ತಾನ ಕ್ರಿಕೆಟ್ ತಂಡ ಹೈದರಾಬಾದ್‌ನಲ್ಲಿ (Hyderabad) ವಾಸ್ತವ್ಯ ಹೂಡಿದೆ. ಪಾಕಿಸ್ತಾನ ತಂಡದ ಆಟಗಾರರಿಗೆ ಸಾಂಪ್ರದಾಯಿಕ ಸ್ವಾಗತ ಕೋರಿದ್ದು, ಇದೀಗ ಅದ್ಧೂರಿ ಔತಣವನ್ನೂ ನೀಡಲಾಗಿದೆ. ಈ ಕುರಿತ ವೀಡಿಯೋ ತುಣುಕನ್ನು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB) ತನ್ನ ಟ್ವಿಟ್ಟರ್‌ (X) ಖಾತೆಯಲ್ಲಿ ಹಂಚಿಕೊಂಡಿದೆ.

    ನ್ಯೂಜಿಲೆಂಡ್‌ ವಿರುದ್ಧ ಮೊದಲ ಅಭ್ಯಾಸ ಪಂದ್ಯದ ಬಳಿಕ ಪಾಕಿಸ್ತಾನ ತಂಡ ಹೈದರಾಬಾದ್‌ನ ಪ್ರತಿಷ್ಠಿತ ಹೋಟೆಲ್‌ನಲ್ಲಿ (Hotel) ವಾಸ್ತವ್ಯ ಹೂಡಿದ್ದು, ವಿವಿಧ ಮಾಂಸಾಹಾರ (Nonveg) ಖಾದ್ಯಗಳ ಔತಣ ನೀಡಲಾಗಿದೆ. ಪಾಕ್‌ ತಂಡದ ನಾಯಕ ಬಾಬರ್‌ ಆಜಂ (Babar Azam), ಮೊಹಮ್ಮದ್‌ ರಿಜ್ವಾನ್‌, ಶಾಹೀನ್‌ ಶಾ ಅಫ್ರಿದಿ ಮೊದಲಾದವರು ಈ ಖುಷಿಯನ್ನ ತಮ್ಮ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ವಿಶ್ವಕಪ್‌ ಅಭ್ಯಾಸ ಪಂದ್ಯದಲ್ಲೇ ಪಾಕ್‌ಗೆ ಸೋಲಿನ ರುಚಿ – ಕಿವೀಸ್‌ಗೆ 5 ವಿಕೆಟ್‌ಗಳ ಜಯ

    ಪಾಕಿಸ್ತಾನದಲ್ಲಿ ನಮ್ಮ ಅಭಿಮಾನಿಗಳು ನಮ್ಮನ್ನು ಹೇಗೆ ಪ್ರೀತಿಸುತ್ತಾರೋ ಹಾಗೆಯೇ ಭಾರತೀಯ ಪ್ರೇಕ್ಷಕರೂ ಸಾಕಷ್ಟು ಪ್ರೀತಿ ತೋರಿಸುತ್ತಿದ್ದಾರೆ ಎಂದು ಮೊಹಮ್ಮದ್‌ ರಿಜ್ವಾನ್‌ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಹೈದರಾಬಾದ್‌ ಬಿರಿಯಾನಿ, ಬಟರ್‌ ಚಿಕನ್‌, ಲ್ಯಾಂಬ್‌ ಚಾಪ್ಸ್; ಭಾರತದಲ್ಲಿ ಪಾಕ್‌ ಕ್ರಿಕೆಟಿಗರಿಗೆ ಭರ್ಜರಿ ಬಾಡೂಟದ ಆತಿಥ್ಯ

    ಏನೆಲ್ಲಾ ಸ್ಪೆಷಲ್‌ ಫುಡ್‌ ಇದೆ ಗೊತ್ತಾ?
    ವಿಶ್ವಕಪ್ ಟೂರ್ನಿಯಲ್ಲಿ ಭಾರತ ಸೇರಿ ಪಾಲ್ಗೊಳ್ಳುವ ಕ್ರಿಕೆಟ್‌ ತಂಡಗಳಿಗೆ ಗೋಮಾಂಸ (ಬೀಫ್‌) ನಿಷೇಧಿಸಲಾಗಿದೆ. ಆದ್ದರಿಂದ ಪಾಕಿಸ್ತಾನ ತಂಡಕ್ಕೆ ದೈನಂದಿನ ಪ್ರೋಟೀನ್‌ಯುಕ್ತ ಆಹಾರವಾಗಿ ಚಿಕನ್‌, ಮಟನ್‌ ಹಾಗೂ ಫಿಶ್‌ ಮಾಂಸಾಹಾರ ಖಾದ್ಯಗಳನ್ನು ನೀಡಲಾಗುತ್ತಿದೆ. ಡಯಟ್ ಚಾರ್ಟ್‌ನಲ್ಲಿ ಗ್ರಿಲ್ಡ್ ಲ್ಯಾಂಬ್ ಚಾಪ್ಸ್, ಮಟನ್ ಕರಿ, ಹೈದರಾಬಾದ್‌ನಲ್ಲಿ ಬಹುಬೇಡಿಕೆಯ ಬಟರ್ ಚಿಕನ್ ಮತ್ತು ಗ್ರಿಲ್ಡ್ ಫಿಶ್ ನೀಡಲಾಗುತ್ತಿದೆ. ಇದನ್ನೂ ಓದಿ: ವಿಶ್ವಕಪ್‌ ಕ್ರಿಕೆಟ್‌ ಅಲ್ಲ, ವಿಶ್ವ ಟೆರರ್‌ ಕಪ್‌ ಮಾಡ್ತೀವಿ – ಖಲಿಸ್ತಾನ್‌ ಉಗ್ರನಿಂದ ಬೆದರಿಕೆ

    ಬಿರಿಯಾನಿಯಂತಹ ಆಹಾರ ಪದಾರ್ಥಗಳನ್ನ ತಯಾರಿಸಲು ಸ್ಟೀಮ್ಡ್ ಬಾಸುಮತಿ ರೈಸ್ ಅನ್ನು ಬಳಸಲಾಗುತ್ತಿದೆ. ಅಷ್ಟೇ ಅಲ್ಲದೇ ಬೊಲೊಗ್ನೀಸ್ ಸಾಸ್‌ನಲ್ಲಿರುವ ಸ್ಪಾಗೆಟ್ಟಿ, ಶೇನ್ ವಾರ್ನ್ ಚಿಕನ್ ಹಾಗೂ ವೆಜ್ ಪಲಾವ್ ಎಲ್ಲದಕ್ಕಿಂತ ಮುಖ್ಯವಾಗಿ ಹೈದರಾಬಾದ್ ಬಿರಿಯಾನಿ ಕಡ್ಡಾಯವಾಗಿದೆ. ಒಟ್ಟಿನಲ್ಲಿ ಭಾರತದಲ್ಲಿ ನೀಡುತ್ತಿರುವ ಆತಿಥ್ಯಕ್ಕೆ ಪಾಕ್‌ ಆಟಗಾರರು ಫಿದಾ ಆಗಿದ್ದಾರೆ. ಇದನ್ನೂ ಓದಿ: Asian Games 2023: ಅಥ್ಲೆಟಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ – ಕಂಚು ಗೆದ್ದು ಕಿರಣ್‌ ಮಿಂಚು

    ನ್ಯೂಜಿಲೆಂಡ್‌ ವಿರುದ್ಧ ಶುಕ್ರವಾರ ಪಾಕಿಸ್ತಾನ ಅಭ್ಯಾಸ ಪಂದ್ಯದಲ್ಲಿ ಉತ್ತಮ ರನ್‌ ಕಲೆಹಾಕಿದರೂ ಸೋಲನ್ನು ಅನುಭವಿಸಿತು. ಈ ಪಂದ್ಯದ ಕುರಿತು ಮಾತನಾಡಿರುವ ಮೊಹಮ್ಮದ್‌ ರಿಜ್ವಾನ್‌, ಅಭ್ಯಾಸ ಪಂದ್ಯದಲ್ಲಿ ಸೆಂಚುರಿ ಬಾರಿಸಿದ್ದು ನನಗೆ ತುಂಬಾ ಸಂತೋಷವಾಗಿದೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ 6 ಅಥವಾ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡುತ್ತಿದ್ದೆ. ಏಕದಿನ ಕ್ರಿಕೆಟ್‌ನಲ್ಲಿ 4ನೇ ಕ್ರಮಾಂಕದಲ್ಲಿ ಆಡುತ್ತೇನೆ. ಅವಶ್ಯಕತೆಗಳಿಗೆ ಅನುಗುಣವಾಗಿ ಬ್ಯಾಟ್‌ ಬೀಸುತ್ತೇನೆ ಎಂದು ತಿಳಿಸಿದ್ದಾರೆ.

    ಮೊದಲ ಅಭ್ಯಾಸ ಪಂದ್ಯದ ಬಳಿಕ ಹೈದರಾಬಾದ್‌ ಪಿಚ್‌ ಬಗ್ಗೆ ಅರಿತಿರುವ ಪಾಕ್‌ ತಂಡ ಅಕ್ಟೋಬರ್ 3 ರಂದು ಆಸ್ಟ್ರೇಲಿಯಾ ವಿರುದ್ಧ ಕೊನೆಯ ಅಭ್ಯಾಸ ಪಂದ್ಯವನ್ನಾಡಲಿದೆ. ಆ ನಂತರ ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿದೆ.

    ಅಕ್ಟೋಬರ್ 14 ರಂದು ಹೈವೋಲ್ಟೇಜ್ ಕದನ: ಅ.5ರಿಂದ ನ.19ರ ವರೆಗೆ ಭಾರತದ ವಿವಿಧ ಕ್ರೀಡಾಂಗಣದಲ್ಲಿ ವಿಶ್ವಕಪ್ ಟೂರ್ನಿ ನಡೆಯಲಿದೆ. ಭಾರತ ಮತ್ತು ಪಾಕ್ ನಡುವಿನ ಹೈವೋಲ್ಟೇಜ್ ಕದನ ಅಕ್ಟೋಬರ್ 14ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ಕಣ್ತುಂಬಿಕೊಳ್ಳಲು ಕ್ರಿಕೆಟ್ಅ ಭಿಮಾನಿಗಳು ಕಾತರದಿಂದ ಕಾಯ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಶ್ವಕಪ್‌ ಕ್ರಿಕೆಟ್‌ – ಸೂಪರ್‌ ಓವರ್‌ ಟೈ ಆದ್ರೆ ಬೌಂಡರಿಯನ್ನು ಪರಿಗಣಿಸಲಾಗುತ್ತಾ? 2019ರಲ್ಲಿ ಏನಾಗಿತ್ತು?

    ವಿಶ್ವಕಪ್‌ ಕ್ರಿಕೆಟ್‌ – ಸೂಪರ್‌ ಓವರ್‌ ಟೈ ಆದ್ರೆ ಬೌಂಡರಿಯನ್ನು ಪರಿಗಣಿಸಲಾಗುತ್ತಾ? 2019ರಲ್ಲಿ ಏನಾಗಿತ್ತು?

    ಅಹಮಾದಾಬಾದ್‌: ವಿಶ್ವಕಪ್‌ ಕ್ರಿಕೆಟ್‌ (World Cup Cricket) ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ತಂಡಗಳು ಅ‍ಭ್ಯಾಸ ಪಂದ್ಯವನ್ನು ಆಡುತ್ತಿದೆ. ಭಾರತದಲ್ಲಿ (India) ಈ ಟೂರ್ನಿ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೂಪರ್‌ ಓವರ್‌ನಲ್ಲಿ (Super Over) ಟೈ ಆದರೆ ಫಲಿತಾಂಶವನ್ನು ಹೇಗೆ ನಿರ್ಧಾರ ಮಾಡಲಾಗುತ್ತದೆ? ಬೌಂಡರಿಯನ್ನು ಪರಿಗಣನೆ ಮಾಡಲಾಗುತ್ತಾ? – ಈ ರೀತಿಯ ಪ್ರಶ್ನೆ ಅಭಿಮಾನಿಗಳಲ್ಲಿ ಹುಟ್ಟುವುದು ಸಹಜ.

    ಈ ಪ್ರಶ್ನೆ ಹುಟ್ಟಲು ಕಾರಣವಿದೆ. ಇಂಗ್ಲೆಂಡ್‌ (England) ಮತ್ತು ನ್ಯೂಜಿಲೆಂಡ್‌ (New Zealand) ನಡುವೆ 2019ರಲ್ಲಿ ನಡೆದ ಫೈನಲ್‌ ಪಂದ್ಯ ಟೈ ಆಗಿತ್ತು. ನಂತರ ಸೂಪರ್‌ ಓವರ್‌ನಲ್ಲೂ ಪಂದ್ಯ ಟೈ ಆಯ್ತು. ಟೈನಲ್ಲಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಬೌಂಡರಿ ಆಧಾರದ ಮೇಲೆ ಇಂಗ್ಲೆಂಡ್‌ ತಂಡವನ್ನು ವಿಜಯಿ ಎಂದು ಘೋಷಿಸಲಾಯಿತು.

    ಐಸಿಸಿಯ ಈ ನಿಯಮ ಬಹಳ ಚರ್ಚೆಗೆ ಗ್ರಾಸವಾಗಿತ್ತು. ನೆಟ್ಟಿಗರ ತರಾಟೆಯ ನಂತರ ಎಚ್ಚೆತ್ತುಕೊಂಡ ಐಸಿಸಿ ನಿಯಮ ಬದಲಾವಣೆ ಮಾಡಿದ್ದು ಸೂಪರ್‌ ಓವರ್‌ ಪಂದ್ಯ ಟೈ ಆದರೂ ಮತ್ತೆ ಸೂಪರ್‌ ಓವರ್‌ ಆಡಿಸಲಾಗುತ್ತದೆ. ಆ ಸೂಪರ್‌ ಓವರ್‌ ಟೈ ಆದರೂ ಮತ್ತೆ ಆಡಿಸಲಾಗುತ್ತದೆ. ಅಂತಿಮ ಫಲಿತಾಂಶ ಬರುವರೆಗೂ ಸೂಪರ್‌ ಓವರ್‌ ನಡೆಯುತ್ತಲೇ ಇರುತ್ತದೆ. ಯಾವುದೇ ಕಾರಣಕ್ಕೂ ಬೌಂಡರಿಯನ್ನು ಪರಿಗಣಿಸಿ ಫಲಿತಾಂಶ ಪ್ರಕಟವಾಗುವುದಿಲ್ಲ.  ಇದನ್ನೂ ಓದಿ: ವಿಶ್ವಕಪ್‌ ಕ್ರಿಕೆಟ್‌ ಅಲ್ಲ, ವಿಶ್ವ ಟೆರರ್‌ ಕಪ್‌ ಮಾಡ್ತೀವಿ – ಖಲಿಸ್ತಾನ್‌ ಉಗ್ರನಿಂದ ಬೆದರಿಕೆ

     

    2019ರಲ್ಲಿ ಏನಾಗಿತ್ತು?
    ಇಂಗ್ಲೆಂಡಿನ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಜುಲೈ 14 ರಂದು ನಡೆದ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ನ್ಯೂಜಿಲೆಂಡ್ ತಂಡ ಬ್ಯಾಟಿಂಗ್ ಮಾಡಿತು. ನಿಗದಿತ 50 ಓವರ್‌ಗಳಲ್ಲಿ ಇಂಗ್ಲೆಂಡ್‍ಗೆ 241 ರನ್‍ಗಳ ಗುರಿ ನೀಡಿತು. ಆದರೆ ಈ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ಪರ ಕೊನೆಯ ಓವರಿನ ಮೂರನೇ ಎಸೆತದಲ್ಲಿ  ಬೆನ್‌ ಸ್ಟೋಕ್ಸ್‌ ಸಿಕ್ಸ್‌ ಹೊಡೆದರೆ 4ನೇ ಎಸೆತದಲ್ಲೂ 6ರನ್‌ ಬಂದಿತ್ತು. ಎರಡನೇ ರನ್‌ ಓಡುವ ವೇಳೆ  ಚೆಂಡು ಬೆನ್‌ ಸ್ಟೋಕ್ಸ್‌ ಬ್ಯಾಟ್‌ಗೆ ತಾಗಿ ಬೌಂಡರಿಗೆ ಹೋಗಿತ್ತು. ಇದು ಬಹಳ ವಿವಾದಕ್ಕೆ ಕಾರಣವಾಗಿತ್ತು. ಕೊನೆಯ ಎರಡು ಎಸೆತದಲ್ಲಿ ಸಿಂಗಲ್‌ ರನ್‌ ಬಂದ ಕಾರಣ ಪಂದ್ಯ ಟೈ ಆಗಿತ್ತು.

    ಟೈ ಆದ ಕಾರಣ ಐಸಿಸಿ ನಿಯಮದಂತೆ ಸೂಪರ್ ಓವರ್ ಆಡಿಸಲು ತೀರ್ಮಾನ ಮಾಡಲಾಯಿತು. ಸೂಪರ್ ಓವರ್‌ನಲ್ಲಿ ಮೊದಲ ಬ್ಯಾಟ್ ಮಾಡಿದ ಇಂಗ್ಲೆಂಡ್ ಬಟ್ಲರ್ ಮತ್ತು ಸ್ಟೋಕ್ಸ್ ಅವರು ತಲಾ ಒಂದೊಂದು ಬೌಡರಿ ಸಿಡಿಸಿ ನ್ಯೂಜಿಲೆಂಡ್ ತಂಡಕ್ಕೆ 15 ರನ್‍ಗಳ ಗುರಿ ನೀಡಿದರು. ಇದನ್ನು ಬೆನ್ನಟ್ಟಿದ ಕೀವೀಸ್ ಆಟಗಾರರಾದ ಜಿಮ್ಮಿ ನೀಶಮ್ ಮತ್ತು ಮಾರ್ಟಿನ್ ಗುಪ್ಟಿಲ್ ಜೋಫ್ರಾ ಆರ್ಚರ್ ಅವರ ಬೌಲಿಂಗ್‌ ಭರ್ಜರಿ ಬ್ಯಾಟ್ ಬೀಸಿದರು. ನೀಶಮ್ ಅವರು ಒಂದು ಸಿಕ್ಸರ್ ಸಿಡಿಸಿ ಗೆಲ್ಲುವ ಭರವಸೆ ಮೂಡಿಸಿದರು.

     

    ಕೊನೆಯ ಎಸೆತದಲ್ಲಿ ಗೆಲ್ಲಲು ನ್ಯೂಜಿಲೆಂಡ್‍ಗೆ 2 ರನ್ ಬೇಕಿತ್ತು. ಆಗ ಸ್ಟ್ರೈಕ್‍ನಲ್ಲಿ ಇದ್ದ ಅನುಭವಿ ಆಟಗಾರ ಮಾರ್ಟಿನ್ ಗುಪ್ಟಿಲ್ ಜೋಫ್ರಾ ಆರ್ಚರ್ ಎಸೆದ ಎಸೆತದಲ್ಲಿ 2 ರನ್ ಕದಿಯಲು ವಿಫಲರಾದರು. ಜೋಫ್ರಾ ಅವರ ಎಸೆತವನ್ನು ಮಿಡ್ ವಿಕೆಟ್ ಕಡೆಗೆ ತಳ್ಳಿದ ಗುಪ್ಟಿಲ್ ಎರಡು ರನ್ ಕದಿಯುವಲ್ಲಿ ಯಶಸ್ವಿಯಾಗಲಿಲ್ಲ. ರಾಯ್ ಅವರು ಎಸೆದ ಉತ್ತಮ ಥ್ರೋವನ್ನು ಬಟ್ಲರ್ ಹಿಡಿದು ರನೌಟ್‌ ಮಾಡಿದರು. ಈ ಮೂಲಕ ಸೂಪರ್ ಓವರ್ ಕೂಡ ಟೈ ಆಯ್ತು.

    ಫೈನಲ್‍ನಲ್ಲಿ ಸೂಪರ್ ಓವರ್ ಕೂಡ ಟೈ ಆದ ಕಾರಣ ಐಸಿಸಿ ನಿಯಮದಂತೆ ಹೆಚ್ಚು ಬೌಂಡರಿ ಸಿಡಿಸಿದ ತಂಡಕ್ಕೆ ಗೆಲುವು ಎಂದು ಘೋಷಣೆ ಮಾಡಲಾಯಿತು. ಪಂದ್ಯದಲ್ಲಿ ಹೆಚ್ಚು ಬೌಂಡರಿ ಹೊಡೆದಿದ್ದ ಇಂಗ್ಲೆಂಡ್ ಗೆಲುವು ಸಾಧಿಸಿತು. ಈ ಮೂಲಕ ಮೊದಲ ಬಾರಿಗೆ ಇಂಗ್ಲೆಂಡ್ ವಿಶ್ವಕಪ್ ಮುತ್ತಿಕ್ಕಿತು. ಸತತ ಎರಡನೇ ಬಾರಿ ಫೈನಲ್‍ನಲ್ಲಿ ಸೋತ ನ್ಯೂಜಿಲೆಂಡ್ ದ್ವಿತೀಯಸ್ಥಾನಿಯಾಗಿ ನಿರ್ಗಮಿಸಿತು. ಈ ಪಂದ್ಯದಲ್ಲಿ ಇಂಗ್ಲೆಂಡ್‌ 26 ಬೌಂಡರಿ ಹೊಡೆದಿದ್ದರೆ ನ್ಯೂಜಿಲೆಂಡ್‌ 17 ಬೌಂಡರಿ ಹೊಡೆದಿತ್ತು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಶ್ವಕಪ್‌ ಅಭ್ಯಾಸ ಪಂದ್ಯದಲ್ಲೇ ಪಾಕ್‌ಗೆ ಸೋಲಿನ ರುಚಿ – ಕಿವೀಸ್‌ಗೆ 5 ವಿಕೆಟ್‌ಗಳ ಜಯ

    ವಿಶ್ವಕಪ್‌ ಅಭ್ಯಾಸ ಪಂದ್ಯದಲ್ಲೇ ಪಾಕ್‌ಗೆ ಸೋಲಿನ ರುಚಿ – ಕಿವೀಸ್‌ಗೆ 5 ವಿಕೆಟ್‌ಗಳ ಜಯ

    ಹೈದರಾಬಾದ್‌: ಇಲ್ಲಿನ ರಾಜೀವ್‌ಗಾಂಧಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್‌ (World Cup) ಟೂರ್ನಿಯ ಅಭ್ಯಾಸ ಪಂದ್ಯದಲ್ಲೇ ಪಾಕಿಸ್ತಾನ (Pakistan) ಕ್ರಿಕೆಟ್‌ ತಂಡಕ್ಕೆ ನ್ಯೂಜಿಲೆಂಡ್‌ (New Zealand) ತಂಡ ಸೋಲಿನ ರುಚಿ ತೋರಿಸಿದೆ.

    ಮೊದಲ ಅಭ್ಯಾಸ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ ತಂಡ 50 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 345 ರನ್‌ ಗಳಿಸಿತ್ತು. ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಕಿವೀಸ್‌ ಪಡೆ 43.4 ಓವರ್‌ಗಳಲ್ಲೇ 346 ರನ್‌ ಬಾರಿಸಿ 5 ವಿಕೆಟ್‌ಗಳ ಜಯ ಸಾಧಿಸಿತು. ಇದನ್ನೂ ಓದಿ: Asian Games 2023: ಅಥ್ಲೆಟಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ – ಕಂಚು ಗೆದ್ದು ಕಿರಣ್‌ ಮಿಂಚು

    ಚೇಸಿಂಗ್‌ ಆರಂಭಿಸಿದ ಕಿವೀಸ್‌ ಪಡೆ ಪಾಕ್‌ ತಂಡದ ಬೌಲರ್‌ಗಳನ್ನು ಆರಂಭದಿಂದಲೇ ಪಾಕ್‌ ಬೌಲರ್‌ಗಳನ್ನು ಹಿಗ್ಗಾಮುಗ್ಗ ಬೆಂಡೆತ್ತಲು ಶುರು ಮಾಡಿತು. ಆರಂಭಿಕರಾಗಿ ಕಣಕ್ಕಿಳಿದ ರಚಿನ್ ರವೀಂದ್ರ 72 ಎಸೆತಗಳಲ್ಲಿ 97 ರನ್‌ (16 ಬೌಂಡರಿ, 1 ಸಿಕ್ಸರ್‌), ಕೇನ್ ವಿಲಿಯಮ್ಸನ್ 50 ಎಸೆತಗಳಲ್ಲಿ 8 ಬೌಂಡರಿಗಳೊಂದಿಗೆ 54 ರನ್‌, ಡೇರಿಲ್‌ ಮಿಚೆಲ್‌ 57 ಎಸೆತಗಳಲ್ಲಿ 59 ರನ್‌ (2 ಸಿಕ್ಸರ್‌, 3 ಬೌಂಡರಿ) ಗಳಿಸಿದ್ರೆ ಕೊನೆಯಲ್ಲಿ 41 ಎಸೆತಗಳಲ್ಲಿ 65 ರನ್‌ (6 ಬೌಂಡರಿ, 3 ಸಿಕ್ಸರ್‌) ಹಾಗೂ ಜೇಮ್ಸ್‌ ನಿಶಮ್‌ 21 ಎಸೆತಗಳಲ್ಲಿ 3 ಬೌಂಡರಿ, 2 ಸಿಕ್ಸರ್‌ ಸಿಡಿಸುವುದರೊಂದಿಗೆ 33 ರನ್‌ ಚಚ್ಚಿ ಗೆಲುವಿನ ದಡ ಸೇರಿಸಿದರು. ಇದನ್ನೂ ಓದಿ: ಹೈದರಾಬಾದ್‌ ಬಿರಿಯಾನಿ, ಬಟರ್‌ ಚಿಕನ್‌, ಲ್ಯಾಂಬ್‌ ಚಾಪ್ಸ್; ಭಾರತದಲ್ಲಿ ಪಾಕ್‌ ಕ್ರಿಕೆಟಿಗರಿಗೆ ಭರ್ಜರಿ ಬಾಡೂಟದ ಆತಿಥ್ಯ

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ ತಂಡ ಕೂಡ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿತು. ಪಾಕಿಸ್ತಾನ ಆರಂಭದಲ್ಲಿ ವಿಕೆಟ್‌ ಕಳೆದುಕೊಂಡರೂ ಬಳಿಕ ಬಾಬರ್‌ ಆಜಂ 80 ರನ್‌ (84 ಎಸೆತ, 8 ಬೌಂಡರಿ, 2 ಸಿಕ್ಸರ್‌), ಮೊಹಮ್ಮದ್‌ ರಿಜ್ವಾನ್‌ 103 ರನ್‌ (94 ಎಸೆತ, 9 ಬೌಂಡರಿ, 2 ಸಿಕ್ಸರ್‌), ಸೌದ್‌ ಶಾಕೀಲ್‌ 75 ರನ್‌ (53 ಎಸೆತ, 5 ಬೌಂಡರಿ, 4 ಸಿಕ್ಸರ್‌) ಹಾಗೂ ಅಘಾ ಸಲ್ಮಾನ್‌ 33 ರನ್‌ಗಳ ನೆರವಿನಿಂದ 300 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು. ಅಂತಿಮವಾಗಿ 50 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 345 ರನ್‌ ಕಲೆಹಾಕಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರತವನ್ನು ಶತ್ರು ರಾಷ್ಟ್ರವೆಂದು ನಾಲಿಗೆ ಹರಿಬಿಟ್ಟ ಪಾಕ್‌ ಕ್ರಿಕೆಟ್‌ ಮಂಡಳಿ ಅಧ್ಯಕ್ಷ

    ಭಾರತವನ್ನು ಶತ್ರು ರಾಷ್ಟ್ರವೆಂದು ನಾಲಿಗೆ ಹರಿಬಿಟ್ಟ ಪಾಕ್‌ ಕ್ರಿಕೆಟ್‌ ಮಂಡಳಿ ಅಧ್ಯಕ್ಷ

    ಇಸ್ಲಾಮಾಬಾದ್‌: ಇದೇ ಮೊದಲಬಾರಿಗೆ ಭಾರತದ ಸಂಪೂರ್ಣ ಆತಿಥ್ಯದಲ್ಲಿ ಭಾರತದಲ್ಲಿ ವಿಶ್ವಕಪ್‌ ಟೂರ್ನಿ (ICC WorldCup) ಆಯೋಜನೆಗೊಂಡಿದ್ದು, ಪಾಕಿಸ್ತಾನ ಕ್ರಿಕೆಟ್‌ ತಂಡ 7 ವರ್ಷಗಳ ಬಳಿಕ ಭಾರತಕ್ಕೆ ಎಂಟ್ರಿ ಕೊಟ್ಟಿದೆ. ಇಂತಹ ಹೊತ್ತಿನಲ್ಲೇ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB) ಅಧ್ಯಕ್ಷ ಝಾಕಾ ಅಶ್ರಫ್ (Zaka Ashraf) ಭಾರತವನ್ನು ಶತ್ರುಗಳ ದೇಶ ಎಂದು ಹೇಳುವ ಮೂಲಕ ನಾಲಿಗೆ ಹರಿಬಿಟ್ಟಿದ್ದಾರೆ.

    ನಾಯಕ ಬಾಬರ್ ಆಜಂ (Babar Azam) ನೇತೃತ್ವದ ತಂಡ ಸೆಪ್ಟೆಂಬರ್ 27ರ ಬುಧವಾರ ರಾತ್ರಿ ಹೈದರಾಬಾದ್​ಗೆ (Hyderabad) ಬಂದಿಳಿದಿದೆ. ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರತೀಯ ಕ್ರಿಕೆಟ್ ಉತ್ಸಾಹಿಗಳು ಅವರನ್ನು ಸಾಂಪ್ರದಾಯಿಕವಾಗಿ ಶಾಲು ಹಾಕಿ ಸ್ವಾಗತಿಸಿದ್ದಾರೆ. ಬಾಬರ್ ಮತ್ತು ಶಾಹೀನ್ ಶಾ ಅಫ್ರಿದಿ (Shaheen Afridi) ಇನ್ನೂ ಮೊದಲಾದ ಆಟಗಾರರು ತಮ್ಮ ಜಾಲತಾಣ ಖಾತೆಗಳಲ್ಲಿ ಭಾರತದಲ್ಲಿ ತಮಗೆ ಸಿಕ್ಕ ಸ್ವಾಗತವನ್ನು ಶ್ಲಾಘಿಸಿದ್ದಾರೆ. ಇಂತಹ ಹೊತ್ತಿನಲ್ಲಿ ಪಿಸಿಬಿ ಅಧ್ಯಕ್ಷ ನಾಲಿಗೆ ಹರಿಬಿಟ್ಟಿದ್ದಾರೆ.

    ಪಾಕ್‌ ಆಟಗಾರರು ವಿಶ್ವಕಪ್‌ ಟೂರ್ನಿಯನ್ನಾಡಲು ಭಾರತಕ್ಕೆ ಭೇಟಿ ನೀಡಿದ ದಿನವೇ ಪಿಸಿಬಿ ತನ್ನ ಆಟಗಾರರಿಗೆ ವೇತನ ಹೆಚ್ಚಳ ಘೋಷಣೆ ಮಾಡಿತು. ಈ ಲಾಭದಾಯಕ ಒಪ್ಪಂದದ ಕುರಿತು ಅಶ್ರಫ್‌ ಮಾತನಾಡುತ್ತಿದ್ದ ವೇಳೆ, ʻದುಷ್ಮನ್ ಮುಲ್ಕ್’ ಗೆ (ಶತ್ರುಗಳ ದೇಶಕ್ಕೆ) ನಮ್ಮ ಆಟಗಾರರು ಪ್ರಯಾಣಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ವೀಡಿಯೋ ತುಣುಕು ಈಗ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಭಾರತಕ್ಕೆ ಬಂದ ಪಾಕ್‌ ತಂಡಕ್ಕೆ ಕೇಸರಿ ಶಾಲು ಹಾಕಿ ಸ್ವಾಗತ – ಬಾಬರ್‌ ಆಜಂ ಬಿಜೆಪಿ ಯುವನಾಯಕ ಎಂದು ಟ್ರೋಲ್‌

    ಈ ವೀಡಿಯೋದಲ್ಲಿ ಅಶ್ರಫ್‌, ನಾವು ಈ ಒಪ್ಪಂದಗಳನ್ನು ನಮ್ಮ ಆಟಗಾರರಿಗೆ ಪ್ರೀತಿ ಮತ್ತು ವಾತ್ಸಲ್ಯದಿಂದ ನೀಡಿದ್ದೇವೆ. ಪಾಕಿಸ್ತಾನದ ಇತಿಹಾಸದಲ್ಲಿ ಆಟಗಾರರಿಗೆ ಇಷ್ಟು ಹಣವನ್ನು ನೀಡಿರಲಿಲ್ಲ. ಪಿಸಿಬಿಯ ಈ ಕ್ರಮದಿಂದಾಗಿ ವಿಶ್ವಕಪ್‌ಗಾಗಿ ಶತ್ರು ದೇಶಕ್ಕೆ (Dushman Mulk) ಹೋಗುವಾಗ ಆಟಗಾರರ ನೈತಿಕ ಸ್ಥೈರ್ಯ ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ. ಅಶ್ರಫ್‌ ಹೇಳಿಕೆಗೆ ಭಾರತ ಮಾತ್ರವಲ್ಲದೇ ಪಾಕಿಸ್ತಾನದ ಕ್ರಿಕೆಟ್‌ ಅಭಿಮಾನಿಗಳಿಂದಲೂ ಸಾಕಷ್ಟು ಟೀಕೆಗಳು‌ ವ್ಯಕ್ತವಾಗಿವೆ.

    ಪಾಕಿಸ್ತಾನ ತಂಡವು (Pakistan Cricket Team) ಕೊನೆಯ ಬಾರಿ 2016ರಲ್ಲಿ ನಡೆದ ಟಿ20 ವಿಶ್ವಕಪ್​ಗಾಗಿ ಭಾರತಕ್ಕೆ ಆಗಮಿಸಿತ್ತು. ಇದಾದ 7 ವರ್ಷಗಳ ಬಳಿಕ ಮತ್ತೆ ಭಾರತದ ನೆಲಕ್ಕೆ ಪಾಕ್​ ತಂಡ ಕಾಲಿಟ್ಟಿದೆ. ಈ ಬಾರಿ ಪಾಕಿಸ್ತಾನ ತಂಡವು ಹೈದರಾಬಾದ್‌, ಬೆಂಗಳೂರು, ಚೆನ್ನೈ, ಅಹಮದಾಬಾದ್‌ ಹಾಗೂ ಕೋಲ್ಕತ್ತಾ ಮೈದಾನಗಳಲ್ಲಿ ತನ್ನ ವಿಶ್ವಕಪ್‌ ಪಂದ್ಯಗಳನ್ನ ಆಡಲಿದೆ. ಅಕ್ಟೋಬರ್‌ 3 ರಂದು ಆಸ್ಟ್ರೇಲಿಯಾ ವಿರುದ್ಧ ಕೊನೆಯ ಅಭ್ಯಾಸ ಪಂದ್ಯಗಳನ್ನಾಡಲಿದೆ.  ಇದನ್ನೂ ಓದಿ: ಹೈದರಾಬಾದ್‌ ಬಿರಿಯಾನಿ, ಬಟರ್‌ ಚಿಕನ್‌, ಲ್ಯಾಂಬ್‌ ಚಾಪ್ಸ್; ಭಾರತದಲ್ಲಿ ಪಾಕ್‌ ಕ್ರಿಕೆಟಿಗರಿಗೆ ಭರ್ಜರಿ ಬಾಡೂಟದ ಆತಿಥ್ಯ

    ಭಾರತದಲ್ಲಿ ಪಾಕ್‌ ತಂಡದ ವೇಳಾಪಟ್ಟಿ ಹೀಗಿದೆ…
    ಪಾಕಿಸ್ತಾನ vs ಕ್ವಾಲಿಫೈಯರ್ 1, ಅಕ್ಟೋಬರ್ 6 – ಹೈದರಾಬಾದ್
    ಪಾಕಿಸ್ತಾನ vs ಕ್ವಾಲಿಫೈಯರ್ 2, ಅಕ್ಟೋಬರ್ 12 – ಹೈದರಾಬಾದ್
    ಪಾಕಿಸ್ತಾನ vs ಭಾರತ, ಅಕ್ಟೋಬರ್ 15 – ಅಹಮದಾಬಾದ್
    ಪಾಕಿಸ್ತಾನ vs ಆಸ್ಟ್ರೇಲಿಯಾ, ಅಕ್ಟೋಬರ್ 20 – ಬೆಂಗಳೂರು
    ಪಾಕಿಸ್ತಾನ vs ಅಫ್ಘಾನಿಸ್ತಾನ, ಅಕ್ಟೋಬರ್ 23- ಚೆನ್ನೈ
    ಪಾಕಿಸ್ತಾನ vs ದಕ್ಷಿಣ ಆಫ್ರಿಕಾ, ಅಕ್ಟೋಬರ್ 27- ಚೆನ್ನೈ
    ಪಾಕಿಸ್ತಾನ vs ಬಾಂಗ್ಲಾದೇಶ, ಅಕ್ಟೋಬರ್ 31 – ಕೋಲ್ಕತ್ತಾ
    ಪಾಕಿಸ್ತಾನ vs ನ್ಯೂಜಿಲೆಂಡ್, ನವೆಂಬರ್ 4 – ಬೆಂಗಳೂರು
    ಪಾಕಿಸ್ತಾನ vs ಇಂಗ್ಲೆಂಡ್, ನವೆಂಬರ್ 12- ಕೋಲ್ಕತ್ತಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೈದರಾಬಾದ್‌ ಬಿರಿಯಾನಿ, ಬಟರ್‌ ಚಿಕನ್‌, ಲ್ಯಾಂಬ್‌ ಚಾಪ್ಸ್; ಭಾರತದಲ್ಲಿ ಪಾಕ್‌ ಕ್ರಿಕೆಟಿಗರಿಗೆ ಭರ್ಜರಿ ಬಾಡೂಟದ ಆತಿಥ್ಯ

    ಹೈದರಾಬಾದ್‌ ಬಿರಿಯಾನಿ, ಬಟರ್‌ ಚಿಕನ್‌, ಲ್ಯಾಂಬ್‌ ಚಾಪ್ಸ್; ಭಾರತದಲ್ಲಿ ಪಾಕ್‌ ಕ್ರಿಕೆಟಿಗರಿಗೆ ಭರ್ಜರಿ ಬಾಡೂಟದ ಆತಿಥ್ಯ

    ಹೈದರಾಬಾದ್‌: ಭಾರತದ ಆತಿಥ್ಯದಲ್ಲಿ ಇದೇ ಅಕ್ಟೋಬರ್‌ 5 ರಿಂದ ನಡೆಯಲಿರುವ ಏಕದಿನ ವಿಶ್ವಕಪ್‌ ಟೂರ್ನಿಯನ್ನಾಡಲು ಬಾಬರ್‌ ಆಜಂ (Babar Azam) ಪಾಕಿಸ್ತಾನ ಕ್ರಿಕೆಟ್​ ತಂಡ ಹೈದರಾಬಾದ್‌ನಲ್ಲಿ ವಾಸ್ತವ್ಯ ಹೂಡಿದೆ. ಪಾಕಿಸ್ತಾನ ತಂಡದ (Pakistan Team) ಆಟಗಾರರು ಬರುತ್ತಿದ್ದಂತೆ ವಿವಿಧ ರೀತಿಯ ಶಾಲುಗಳನ್ನ ಹೊದಿಸಿ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಗಿದೆ. ಇದರೊಂದಿಗೆ ಊಟೋಪಚಾರ ವಿಷಯಗಳಲ್ಲೂ ಅಷ್ಟೇ ಕಾಳಜಿ ವಹಿಸಲಾಗಿದೆ.

    ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ಸೇರಿ ಪಾಲ್ಗೊಳ್ಳುವ 10 ತಂಡಗಳಿಗಳಿಗೆ ಗೋಮಾಂಸ ನಿಷೇಧಿಸಲಾಗಿದೆ. ಆದ್ದರಿಂದ ಪಾಕಿಸ್ತಾನ ತಂಡಕ್ಕೆ ದೈನಂದಿನ ಪ್ರೋಟೀನ್‌ಯುಕ್ತ ಆಹಾರಕ್ಕಾಗಿ ಕೋಳಿ (Chicken), ಕುರಿ ಹಾಗೂ ಮೀನು ಆಹಾರ ಪದಾರ್ಥಗಳ ಮೆನು ನೀಡಲಾಗಿದೆ. ಡಯಟ್‌ ಚಾರ್ಚ್‌ನಲ್ಲಿ ಗ್ರಿಲ್ಡ್‌ ಲ್ಯಾಂಬ್‌ ಚಾಪ್ಸ್ (Grilled Lamb Chops), ಮಟನ್‌ ಕರಿ, ಹೈದರಾಬಾದ್‌ನಲ್ಲಿ ಬಹುಬೇಡಿಕೆಯ ಬಟರ್‌ ಚಿಕನ್‌ ಮತ್ತು ಗ್ರಿಲ್ಡ್‌ ಫಿಶ್‌ (Grilled Fish) ನೀಡಲಾಗುತ್ತಿದೆ.

    ಬಿರಿಯಾನಿಯಂತಹ ಆಹಾರ ಪದಾರ್ಥಗಳನ್ನ ತಯಾರಿಸಲು ಸ್ಟೀಮ್ಡ್‌ ಬಾಸುಮತಿ ರೈಸ್‌ ಅನ್ನು ಬಳಸಲಾಗುತ್ತಿದೆ. ಅಷ್ಟೇ ಅಲ್ಲದೇ ಬೊಲೊಗ್ನೀಸ್ ಸಾಸ್‌ನಲ್ಲಿರುವ ಸ್ಪಾಗೆಟ್ಟಿ, ಶೇನ್ ವಾರ್ನ್‌ ಚಿಕನ್‌ ಹಾಗೂ ವೆಜ್‌ ಪಲಾವ್‌ ಎಲ್ಲದಕ್ಕಿಂತ ಮುಖ್ಯವಾಗಿ ಹೈದರಾಬಾದ್‌ ಬಿರಿಯಾನಿ ಮೆನುವನ್ನು ಸಿದ್ಧಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಶುಕ್ರವಾರ ನ್ಯೂಜಿಲೆಂಡ್‌ ವಿರುದ್ಧ ಅಭ್ಯಾಸ ಪಂದ್ಯವನ್ನಾಡಲಿರುವ ಪಾಕಿಸ್ತಾನ ತಂಡ ಗುರುವಾರ ಮೈದಾನ ವೀಕ್ಷಣೆ ಮಾಡಿದೆ. ಇದೇ ವೇಳೆ ಪಾಕ್‌ ತಂಡದ ನಾಯಯ ಬಾಬರ್‌ ಆಜಂ ಪಿಚ್‌ ಬಗ್ಗೆ ಮಾಹಿತಿಯನ್ನೂ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಬಂದ ಪಾಕ್‌ ತಂಡಕ್ಕೆ ಕೇಸರಿ ಶಾಲು ಹಾಕಿ ಸ್ವಾಗತ – ಬಾಬರ್‌ ಆಜಂ ಬಿಜೆಪಿ ಯುವನಾಯಕ ಎಂದು ಟ್ರೋಲ್‌

    ವಿಶ್ವಕಪ್ ಟೂರ್ನಿಗೂ ಮುನ್ನ ಪಾಕಿಸ್ತಾನವು ಸೆಪ್ಟೆಂಬರ್ 29ರಂದು ನ್ಯೂಜಿಲೆಂಡ್ ವಿರುದ್ಧ ಹೈದರಾಬಾದ್‌ನಲ್ಲಿ ಅಭ್ಯಾಸ ಪಂದ್ಯವನ್ನಾಡಲಿದೆ. ಅಕ್ಟೋಬರ್ 3 ರಂದು ಆಸ್ಟ್ರೇಲಿಯಾ ವಿರುದ್ಧ ಕೊನೆಯದ್ದಾಗಿ ಅಭ್ಯಾಸ ಪಂದ್ಯಗಳನ್ನಾಡಲಿದೆ. ಆ ನಂತರ ವಿಶ್ವಕಪ್‌ ಟೂರ್ನಿಯಲ್ಲಿ ಪಾಲ್ಗೊಳ್ಳಲಿದೆ. ಇದನ್ನೂ ಓದಿ: Asian Games 2023: ಈಕ್ವೆಸ್ಟ್ರೀಯನ್‌ನಲ್ಲಿ ಭಾರತಕ್ಕೆ ಕಂಚು – ಇತಿಹಾಸ ನಿರ್ಮಿಸಿದ ಅನುಷ್‌

    ಅಕ್ಟೋಬರ್‌ 14 ರಂದು ಹೈವೋಲ್ಟೇಜ್‌ ಕದನ: ಅ.5ರಿಂದ ನ.19ರ ವರೆಗೆ ಭಾರತದ ವಿವಿಧ ಕ್ರೀಡಾಂಗಣದಲ್ಲಿ ವಿಶ್ವಕಪ್‌ ಟೂರ್ನಿ ನಡೆಯಲಿದೆ. ಭಾರತ ಮತ್ತು ಪಾಕ್​ ನಡುವಿನ ಹೈವೋಲ್ಟೇಜ್​ ಕದನ ಅಕ್ಟೋಬರ್​ 14ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ಕಣ್ತುಂಬಿಕೊಳ್ಳಲು ಕ್ರಿಕೆಟ್​ ಅಭಿಮಾನಿಗಳು ಕಾತರದಿಂದ ಕಾಯ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಶ್ವಕಪ್ ಬಳಿಕ ಏಕದಿನ ಪಂದ್ಯಕ್ಕೆ ನಿವೃತ್ತಿ ಘೋಷಿಸಿದ ನವೀನ್

    ವಿಶ್ವಕಪ್ ಬಳಿಕ ಏಕದಿನ ಪಂದ್ಯಕ್ಕೆ ನಿವೃತ್ತಿ ಘೋಷಿಸಿದ ನವೀನ್

    ಕಾಬುಲ್: ಕ್ರಿಕೆಟ್ ವಿಶ್ವಕಪ್ 2023 (Cricket World Cup 2023) ಅಫ್ಘಾನಿಸ್ತಾನದ (Afghanistan) ಕ್ರಿಕೆಟಿಗ ನವೀನ್-ಉಲ್-ಹಕ್ (Naveen-ul-Haq) ಅವರು ಭಾರತದಲ್ಲಿ ನಡೆಯುವ ವಿಶ್ವಕಪ್ ತನ್ನ ಕೊನೆಯ ಏಕದಿನ ಕ್ರಿಕೆಟ್ ಎಂದು ಘೋಷಿಸಿದ್ದಾರೆ. ಈ ಮೂಲಕ ತಮ್ಮ 24ನೇ ವಯಸ್ಸಿಲ್ಲಿಯೇ ಅವರು ಏಕದಿನ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದಾರೆ.

    ವಿಶ್ವಕಪ್ ಪಂದ್ಯದಲ್ಲಿ ನನ್ನ ದೇಶವನ್ನು ಪ್ರತಿನಿಧಿಸುತ್ತಿರುವುದು ವಿಶಿಷ್ಟ ಗೌರವವಾಗಿದೆ. ಈ ವಿಶ್ವಕಪ್‍ನ ಬಳಿಕ ಟಿ20 ಕ್ರಿಕೆಟ್‍ನಲ್ಲಿ ಮುಂದುವರಿಸುತ್ತೇನೆ ಎಂದು ಇನ್ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಬಂದ ಪಾಕ್‌ ತಂಡಕ್ಕೆ ಕೇಸರಿ ಶಾಲು ಹಾಕಿ ಸ್ವಾಗತ – ಬಾಬರ್‌ ಆಜಂ ಬಿಜೆಪಿ ಯುವನಾಯಕ ಎಂದು ಟ್ರೋಲ್‌

    2023ರ ಐಸಿಸಿ ವಿಶ್ವಕಪ್‍ನಲ್ಲಿ ಭಾರತ ಹಾಗೂ ಅಫ್ಘಾನ್ ನಡುವಿನ ಪಂದ್ಯಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಕಪ್‍ನಲ್ಲಿ ನವೀನ್ ಅವರನ್ನು ತಂಡದಿಂದ ಕೈಬಿಡಲಾಗಿತ್ತು. ಇದೀಗ ವಿಶ್ವಕಪ್‍ನಲ್ಲಿ ಅವರ ಹೆಸರನ್ನು ಪ್ರಕಟಿಸಲಾಗಿದೆ.

    ಅಫ್ಘಾನ್ ವಿಶ್ವಕಪ್ ತಂಡ
    ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮತ್ ಷಾ, ರಹಮಾನುಲ್ಲಾ ಗುರ್ಬಾಜ್, ಇಕ್ರಮ್ ಅಲಿಖಿಲ್, ರಿಯಾಜ್ ಹಸನ್, ಇಬ್ರಾಹಿಂ ಝದ್ರಾನ್, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಶಾಹಿದುಲ್ಲಾ ಕಮಾಲ್, ರಶೀದ್ ಖಾನ್, ಅಜ್ಮತುಲ್ಲಾ ಒಮರ್ಜಾಯ್, ಮುಜೀಬ್ ಉರ್ ರಹಕ್ಮಾನ್, ಫಜಲ್ ರಹಕ್ಮಾನ್, ಫಜಲ್ಹರ್ಖ್, ಅಬ್ದುಲ್ ರೆಹಮಾನ್, ವಫಾದರ್ ಮೊಮಂಡ್, ಸಲೀಮ್ ಸಫಿ ಮತ್ತು ಸೈಯದ್ ಅಹ್ಮದ್ ಶಿರ್ಜಾದ್. ಇದನ್ನೂ ಓದಿ: Asian Games: ಮಹಿಳೆಯರ 60 ಕೆ.ಜಿ ವುಶು ಫೈನಲ್‍ನಲ್ಲಿ ಭಾರತಕ್ಕೆ ಬೆಳ್ಳಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರತಕ್ಕೆ ಬಂದ ಪಾಕ್‌ ತಂಡಕ್ಕೆ ಕೇಸರಿ ಶಾಲು ಹಾಕಿ ಸ್ವಾಗತ – ಬಾಬರ್‌ ಆಜಂ ಬಿಜೆಪಿ ಯುವನಾಯಕ ಎಂದು ಟ್ರೋಲ್‌

    ಭಾರತಕ್ಕೆ ಬಂದ ಪಾಕ್‌ ತಂಡಕ್ಕೆ ಕೇಸರಿ ಶಾಲು ಹಾಕಿ ಸ್ವಾಗತ – ಬಾಬರ್‌ ಆಜಂ ಬಿಜೆಪಿ ಯುವನಾಯಕ ಎಂದು ಟ್ರೋಲ್‌

    ಹೈದರಾಬಾದ್‌: ಭಾರತದ ಆತಿಥ್ಯದಲ್ಲಿ ಇದೇ ಅಕ್ಟೋಬರ್‌ 5 ರಿಂದ ನಡೆಯಲಿರುವ ಏಕದಿನ ವಿಶ್ವಕಪ್‌ ಟೂರ್ನಿಯನ್ನಾಡಲು ಪಾಕಿಸ್ತಾನ ಕ್ರಿಕೆಟ್​ ತಂಡ ಬುಧವಾರ ತಡರಾತ್ರಿ ಹೈದರಾಬಾದ್​ಗೆ ಬಂದಿಳಿದಿದೆ. ಈ ವೇಳೆ ಪಾಕಿಸ್ತಾನ ತಂಡದ ಆಟಗಾರರಿಗೆ ವಿವಿಧ ರೀತಿಯ ಶಾಲುಗಳನ್ನ ಹೊದಿಸಿ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಗಿದೆ.

    ಈ ನಡುವೆ ಪಾಕಿಸ್ತಾನ ಕ್ರಿಕೆಟ್‌ ತಂಡದ ನಾಯಕ ಬಾಬರ್‌ ಆಜಂ ಸೇರಿದಂತೆ ಕೆಲವು ಆಟಗಾರರಿಗೆ ಕೇಸರಿ ಶಾಲು ಹಾಕಿ ಸ್ವಾಗತಿಸಿದ್ದು, ಇದೀಗ ಟ್ವಿಟರ್​ನಲ್ಲಿ ಸಖತ್‌ ಟ್ರೆಂಡ್​ ಆಗಿದೆ. ಹೈದರಾಬಾದ್​ ವಿಮಾನ ನಿಲ್ದಾಣಕ್ಕೆ ಬಂದ ಪಾಕಿಸ್ತಾನ ತಂಡದ ಆಟಗಾರರಿಗೆ ಕೇಸರಿ ಸಾಲು ಹಾಕಿ ಭವ್ಯ ಸ್ವಾಗತ ಕೋರಿ ಬರಮಾಡಿಕೊಳ್ಳಲಾಯಿತು. ಈ ವೇಳೆ ಭಾರೀ ಬಿಗಿ ಭದ್ರತೆಯನ್ನೂ ನಿಯೋಜನೆ ಮಾಡಲಾಗಿತ್ತು. ಇದನ್ನೂ ಓದಿ: Asian Games: ಮಹಿಳೆಯರ 60 ಕೆ.ಜಿ ವುಶು ಫೈನಲ್‍ನಲ್ಲಿ ಭಾರತಕ್ಕೆ ಬೆಳ್ಳಿ

    ವಿಶ್ವಕಪ್ ಟೂರ್ನಿಗೂ ಮುನ್ನ ಪಾಕಿಸ್ತಾನವು ಸೆಪ್ಟೆಂಬರ್ 29ರಂದು ನ್ಯೂಜಿಲೆಂಡ್ ವಿರುದ್ಧ ಹೈದರಾಬಾದ್‌ನಲ್ಲಿ ಅಭ್ಯಾಸ ಪಂದ್ಯವನ್ನಾಡಲಿದೆ. ಅಕ್ಟೋಬರ್ 3 ರಂದು ಆಸ್ಟ್ರೇಲಿಯಾ ವಿರುದ್ಧ ಕೊನೆಯದ್ದಾಗಿ ಅಭ್ಯಾಸ ಪಂದ್ಯಗಳನ್ನಾಡಲಿದೆ. ಆ ನಂತರ ವಿಶ್ವಕಪ್‌ ಟೂರ್ನಿಯಲ್ಲಿ ಪಾಲ್ಗೊಳ್ಳಲಿದೆ. ಅದಕ್ಕಾಗಿ ಪಾಕ್‌ ತಂಡ ಸೆ.27ರ ತಡರಾತ್ರಿ ಹೈದರಾಬಾದ್‌ಗೆ ಬಂದಿಳಿದಿದೆ.

    ಪಾಕ್​ ಆಟಗಾರರು ಕೇಸರಿ ಶಾಲು ಧರಿಸಿದ ಫೋಟೊ ಮತ್ತು ವೀಡಿಯೋ ಇದೀಗ ಜಾಲತಾಣದಲ್ಲಿ ಸಖತ್‌ ಸದ್ದು ಮಾಡುತ್ತಿದೆ. ಪಾಕ್​ ತಂಡದ ನಾಯಕ ಬಾಬರ್​ ಆಜಂ ಅವರನ್ನ ನೆಟ್ಟಿಗರು ತೆಲಂಗಾಣದ ಬಿಜೆಪಿ ಯುವ ಘಟಕದ ನಾಯಕ ಎಂದು ಟ್ರೋಲ್​ ಮಾಡಿದ್ದಾರೆ. ಇದನ್ನೂ ಓದಿ: ಬ್ಯಾಟಿಂಗ್‌ನಲ್ಲಿ ಕೈಕೊಟ್ಟರೂ ಬೌಲಿಂಗ್‌ನಲ್ಲಿ ಕೈಹಿಡಿದ ಮ್ಯಾಕ್ಸಿ – ಪಂದ್ಯ ಸೋತು ಸರಣಿ ಗೆದ್ದ ಭಾರತ

    ಪಾಕಿಸ್ತಾನ ತಂಡ ಕೆಲವು ದಿನಗಳ ಹಿಂದೆಯೇ ಭಾರತಕ್ಕೆ ಬರಬೇಕಿತ್ತು. ಆದರೆ ವೀಸಾ ಸಮಸ್ಯೆಯಿಂದ ಪ್ರಯಾಣ ಅಸಾಧ್ಯವಾಗಿತ್ತು. ಇದೇ ವಿಚಾರವಾಗಿ ಪಾಕ್​ ಕ್ರಿಕೆಟ್​ ಮಂಡಳಿ ವಿಶ್ವಕಪ್​ಗೆ ಪೂರ್ವ ತಯಾರಿ ನಡೆಸಲು ಸರಿಯಾದ ವ್ಯವಸ್ಥೆ ಇಲ್ಲವೆಂದು ಜಾಗತಿಕ ಸಂಸ್ಥೆಯೊಂದಿಗೆ ಕಳವಳ ವ್ಯಕ್ತಪಡಿಸಿತ್ತು. ಕೊನೆಗೆ ಐಸಿಸಿ ಮಧ್ಯಪ್ರವೇಶಿಸಿ ಈ ಸಮಸ್ಯೆಯನ್ನು ಬಗೆಹರಿಸಿ ಪಾಕಿಸ್ತಾನ ಕ್ರಿಕೆಟ್ ತಂಡದ ಸದಸ್ಯರಿಗೆ ಭಾರತೀಯ ವೀಸಾಗಳನ್ನು ನೀಡುವ ವ್ಯವಸ್ಥೆ ಮಾಡಿತ್ತು.

    7 ವರ್ಷಗಳ ಬಳಿಕ ಭಾರತಕ್ಕೆ ಕಾಲಿಟ್ಟ ಪಾಕ್‌:
    ಪಾಕಿಸ್ತಾನ ಕ್ರಿಕೆಟ್‌ ತಂಡ 7 ವರ್ಷಗಳ ಬಳಿಕ ಭಾರತಕ್ಕೆ ಕಾಲಿಟ್ಟಿದೆ. 2008ರಲ್ಲಿ ನಡೆದ ಮುಂಬೈ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನ ದ್ವಿಪಕ್ಷೀಯ ಸರಣಿ ಆಡುವುದನ್ನೇ ನಿಲ್ಲಿಸಿದೆ. ಆದ್ರೆ 2016ರಲ್ಲಿ ನಡೆದಿದ್ದ ಟಿ20 ವಿಶ್ವಕಪ್​ ಟೂರ್ನಿ ಆಡಲು ಕೊನೆಯ ಬಾರಿ ಪಾಕ್​ ತಂಡ ಭಾರತಕ್ಕೆ ಬಂದಿತ್ತು. ಅದಾದ ನಂತರ ಐಸಿಸಿ ಟೂರ್ನಿಯಲ್ಲಿ ಮಾತ್ರವೇ ಕಾಣಿಸಿಕೊಳ್ಳುತ್ತಿದ್ದವು. ಇದೀಗ 7 ವರ್ಷಗಳ ಬಳಿಕ ಪಾಕಿಸ್ತಾನ ತಂಡ ಭಾರತಕ್ಕೆ ಭೇಟಿ ನೀಡಿದೆ.

    ಅಕ್ಟೋಬರ್‌ 14 ರಂದು ಹೈವೋಲ್ಟೇಜ್‌ ಕದನ:
    ಅ.5ರಿಂದ ನ.19ರ ವರೆಗೆ ಭಾರತದ ವಿವಿಧ ಕ್ರೀಡಾಂಗಣದಲ್ಲಿ ವಿಶ್ವಕಪ್‌ ಟೂರ್ನಿ ನಡೆಯಲಿದೆ. ಭಾರತ ಮತ್ತು ಪಾಕ್​ ನಡುವಿನ ಹೈವೋಲ್ಟೇಜ್​ ಕದನ ಅಕ್ಟೋಬರ್​ 14ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ಕಣ್ತುಂಬಿಕೊಳ್ಳಲು ಕ್ರಿಕೆಟ್​ ಅಭಿಮಾನಿಗಳು ಕಾತರದಿಂದ ಕಾಯ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಶ್ವಕಪ್ ಕ್ರಿಕೆಟ್ ಗೀತೆಗೆ ಬಾಲಿವುಡ್ ನಟ ರಣವೀರ್ ಸಿಂಗ್ ಜೊತೆ ಕುಣಿದ ಚಹಲ್ ಪತ್ನಿ

    ವಿಶ್ವಕಪ್ ಕ್ರಿಕೆಟ್ ಗೀತೆಗೆ ಬಾಲಿವುಡ್ ನಟ ರಣವೀರ್ ಸಿಂಗ್ ಜೊತೆ ಕುಣಿದ ಚಹಲ್ ಪತ್ನಿ

    ಕ್ಟೋಬರ್ 5 ರಿಂದ ಆರಂಭವಾಗಲಿರುವ ವಿಶ್ವಕಪ್ (World Cup)  ಕ್ರಿಕೆಟ್ ಏಕದಿನದ ಪಂದ್ಯಕ್ಕಾಗಿ ತಯಾರಿಸಲಾದ ವಿಶ್ವಕಪ್ ಗೀತೆಯು (Song) ರಿಲೀಸ್ ಆಗಿದ್ದು, ಈ ಹಾಡಿನಲ್ಲಿ ಬಾಲಿವುಡ್ ಖ್ಯಾತ ನಟ ರಣವೀರ್ ಸಿಂಗ್ ಮತ್ತು ಸಂಗಡಿಗರು ಕಾಣಿಸಿಕೊಂಡಿದ್ದಾರೆ. ಐಸಿಸಿ ತನ್ನ ಅಧಿಕೃತ ಖಾತೆಯಲ್ಲಿ ಈ ಹಾಡನ್ನು ರಿಲೀಸ್ ಮಾಡಿದ್ದು ಸಾಕಷ್ಟು ಜನರು ಹಾಡಿಗೆ ಪ್ರತಿಕ್ರಿಯೆ ನೀಡಿದ್ದಾರೆ.

    ರಣವೀರ್ ಸಿಂಗ್ (Ranveer Singh) ನೃತ್ಯಕ್ಕೆ ಕೆಲವರು ಹಾಡಿ ಹೊಗಳಿದ್ದರೆ, ಇನ್ನೂ ಕೆಲವರು ಇದೊಂದು ಐಟಂ ಸಾಂಗ್ ರೀತಿಯಲ್ಲಿದೆ ಎಂದು ಕಾಲೆಳೆದಿದ್ದಾರೆ. ವಿಶ್ವಕಪ್ ಅನ್ನು ಉತ್ತೇಜಿಸುವುದಕ್ಕಾಗಿ ಈ ಗೀತೆಯನ್ನು ರೆಡಿ ಮಾಡಿದ್ದು, ಭಾರತ ಕ್ರಿಕೆಟ್ ತಂಡದ ಆಟಗಾರ ಯುಜವೇಂದ್ರ ಚಹಲ್ ಪತ್ನಿ ಧನಶ್ರೀ ವರ್ಮಾ ಕೂಡ ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.  ಇದನ್ನೂ ಓದಿ:ಸಲ್ಮಾನ್ ಖಾನ್ ಚಿತ್ರಕ್ಕೆ ಸಮಂತಾ ನಾಯಕಿನಾ? ಸ್ಯಾಮ್ ಕಡೆಯಿಂದ ಸಿಕ್ತು ಉತ್ತರ

    ಮುಂದಿನ ತಿಂಗಳಿನಿಂದ ಪ್ರಾರಂಭವಾಗುವ ಐಸಿಸಿ ವಿಶ್ವಕಪ್ 2023 ವೀಕ್ಷಿಸಲು ರಜನಿಕಾಂತ್ ಅವರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯು ಗೋಲ್ಡನ್ ಟಿಕೆಟ್ ನೀಡಿ ಗೌರವಿಸಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ರಜನಿಯನ್ನು ಭೇಟಿ ಮಾಡಿ ಈ ಗೌರವದ ಟಿಕೆಟ್ ಅನ್ನು ನೀಡಿದ್ದಾರೆ.

    ಟಿಕೆಟ್ ಪಡೆದ ನಂತರ ಸೋಷಿಯಲ್ ಮೀಡಿಯಾ ಮೂಲಕ ಕೃತಜ್ಞತೆಯನ್ನು ಸಲ್ಲಿಸಿರುವ ರಜನಿಕಾಂತ್, ಇಂಥದ್ದೊಂದು ಗೌರವ ಸಿಕ್ಕಿದು ಖುಷಿಯಾಗಿದೆ ಎಂದು ಹೇಳಿದ್ದಾರೆ. ಕ್ರಿಕೆಟ್ ಕುರಿತಾಗಿಯೂ ಅವರು ಮಾತನಾಡಿದ್ದಾರೆ. ಬಿಡುವು ಮಾಡಿಕೊಂಡು ಕ್ರಿಕೆಟ್ ನೋಡುವುದಾಗಿಯೂ ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಏಕದಿನ ವಿಶ್ವಕಪ್‌ ಟೂರ್ನಿಯಿಂದಲೂ ಸಂಜು ಸ್ಯಾಮ್ಸನ್‌ ಔಟ್‌?

    ಏಕದಿನ ವಿಶ್ವಕಪ್‌ ಟೂರ್ನಿಯಿಂದಲೂ ಸಂಜು ಸ್ಯಾಮ್ಸನ್‌ ಔಟ್‌?

    ಮುಂಬೈ: ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಸಂಜು ಸ್ಯಾಮ್ಸನ್‌ (Sanju Samson), ಮುಂಬರುವ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಟೀಂ ಇಂಡಿಯಾ (Team India) ಪರ ಆಡಲು ಕಂಡಿದ್ದ ಕನಸು ಭಗ್ನವಾದಂತೆ ಕಾಣ್ತಿದೆ.

    ಈಗಾಗಲೇ ಆರಂಭಗೊಂಡಿರುವ ಏಷ್ಯಾಕಪ್‌ ಟೂರ್ನಿಯಲ್ಲೂ ಸಂಜು ಸ್ಯಾಮ್ಸನ್‌ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದುಕೊಳ್ಳದೇ ಬ್ಯಾಕಪ್‌ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಇದೀಗ ಕೆ.ಎಲ್‌ ರಾಹುಲ್‌ ಆಗಮನದಿಂದ ಸಂಜು ಸ್ಯಾಮ್ಸನ್‌ಗೆ ವಿಶ್ವಕಪ್‌ ಟೂರ್ನಿಯಲ್ಲಿ ಟೀಂ ಇಂಡಿಯಾ ಸ್ಥಾನ ಕೈತಪ್ಪಿದೆ ಎಂದು ತಿಳಿದುಬಂದಿದೆ.

    ಅಕ್ಟೋಬರ್‌ 5 ರಿಂದ ಸೆಪ್ಟೆಂಬರ್‌ 30ರ ವರೆಗೆ ನಡೆಯಲಿರುವ ಏಕದಿನ ವಿಶ್ವಕಪ್‌ ಟೂರ್ನಿಗೆ ಭಾನುವಾರ (ಇಂದು) ಬಿಸಿಸಿಐ ಟೀಂ ಇಂಡಿಯಾ ಬಲಿಷ್ಠ ತಂಡ ಪ್ರಕಟಿಸುವ ಸಾಧ್ಯತೆಗಳಿವೆ. ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್‌ ಅಗರ್ಕರ್‌ ಈಗಾಗಲೇ ಶ್ರೀಲಂಕಾಕ್ಕೆ ತೆರಳಿ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ತಂಡವನ್ನ ಅಂತಿಮಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬ್ಯಾಕಪ್‌ ಪಟ್ಟಿ ಸೇರಿದ ಟೀಂ ಇಂಡಿಯಾ ಸ್ಟಾರ್‌ – ವಿಶ್ವಕಪ್‌ ಆಡುವ ಸಂಜು ಸ್ಯಾಮ್ಸನ್‌ ಕನಸು ಭಗ್ನ?

    ಏಷ್ಯಾಕಪ್‌ ಟೂರ್ನಿಯಲ್ಲಿ ಒಂದು ತಂಡ 17 ಜನರನ್ನು ಒಳಗೊಳ್ಳುವುದರಿಂದ ಸಂಜು ಸ್ಯಾಮ್ಸನ್‌ಗೆ ಬ್ಯಾಕಪ್‌ ಪಟ್ಟಿಯಲ್ಲಿ ಸ್ಥಾನ ನೀಡಲಾಗಿತ್ತು. ಆದರೆ ವಿಶ್ವಕಪ್‌ ಟೂರ್ನಿಯಲ್ಲಿ 15 ಜನರಿಗೆ ಮಾತ್ರ ಅವಕಾಶ ಇರುವುದರಿಂದ ಇಬ್ಬರನ್ನು ತೆಗೆದುಹಾಕಬೇಕಾಗುತ್ತದೆ. ಕೆ.ಎಲ್‌ ರಾಹುಲ್‌ ಸಂಪೂರ್ಣ ಫಿಟ್‌ ಆಗಿರುವುದರಿಂದ ಸಂಜು ಸ್ಯಾಮ್ಸನ್‌ಗೆ ವಿಶ್ವಕಪ್‌ ತಂಡದಲ್ಲಿ ಸ್ಥಾನ ಕೈತಪ್ಪಲಿದೆ ಎಂದು ತಿಳಿದುಬಂದಿದೆ. ಅಲ್ಲದೇ ಕನ್ನಡಿಗ ಪ್ರಸಿದ್ಧ್‌ ಕೃಷ್ಣ ಹಾಗೂ ಇತ್ತೀಚೆಗಷ್ಟೇ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದ ಯುವ ಆಟಗಾರ ತಿಲಕ್‌ ವರ್ಮಾ ಅವರು ಹೊರಗುಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: Hockey 5s Asia Cup 2023- ಪೆನಾಲ್ಟಿ ಶೂಟೌಟ್‌ನಲ್ಲಿ ಪಾಕಿಸ್ತಾನ ಮಣಿಸಿ ಭಾರತ ಚಾಂಪಿಯನ್

    ವಿಶ್ವಕಪ್‌ಗೆ ಟೀಂ ಇಂಡಿಯಾ ಸಂಭಾವ್ಯ ಪಟ್ಟಿ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆ.ಎಲ್‌ ರಾಹುಲ್ (ವಿಕೆಟ್‌ ಕೀಪರ್‌), ವಿರಾಟ್ ಕೊಹ್ಲಿ, ಶುಭಮನ್ ಗಿಲ್, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಇಶಾನ್ ಕಿಶನ್ (ವಿಕೆಟ್‌ ಕೀಪರ್‌), ಶಾರ್ದೂಲ್ ಠಾಕೂರ್, ಕುಲ್‌ದೀಪ್‌ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಜಸ್ಪ್ರೀತ್ ಬುಮ್ರಾ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಾಕ್‌ ವಿರುದ್ಧ ಸ್ಮರಣೀಯ ದಾಖಲೆ ಬರೆದ ಟಾಪ್‌-5 ಟೀಂ ಇಂಡಿಯಾ ಬ್ಯಾಟರ್‌ಗಳು ಇವರೇ

    ಪಾಕ್‌ ವಿರುದ್ಧ ಸ್ಮರಣೀಯ ದಾಖಲೆ ಬರೆದ ಟಾಪ್‌-5 ಟೀಂ ಇಂಡಿಯಾ ಬ್ಯಾಟರ್‌ಗಳು ಇವರೇ

    ಕ್ಯಾಂಡಿ: ಏಷ್ಯಾಕಪ್‌ (Asia Cup 2023) ಟೂರ್ನಿ ಆರಂಭವಾಗಿದ್ದು ಬಹುನಿರೀಕ್ಷಿತ ಇಂಡೋ-ಪಾಕ್‌ (Ind vs Pak) ಪಂದ್ಯ ಶುರುವಾಗಿದೆ. ಅಭಿಮಾನಿಗಳು ಈ ರಣರೋಚಕ ಪಂದ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದಂತೆ ಮಳೆಕೂಡ ಕೋಟ್ಯಂತರ ಅಭಿಮಾನಿಗಳ ಆಸೆಗೆ ತಣ್ಣೀರು ಎರಚಿತ್ತು. ಮಳೆಯಿಂದಾಗಿ ಸುಮಾರು 20 ನಿಮಿಷಗಳ ಕಾಲ ಪಂದ್ಯಕ್ಕೆ ಅಡಚಣೆಯಾಗಿತ್ತು, ನಂತರ ಮಳೆ ನಿಂತ ಬಳಿಕ ಪಂದ್ಯ ಮುಂದುವರಿಯಿತು.

    ಭಾರತ ಮತ್ತು ಪಾಕಿಸ್ತಾನ (India Vs Pakistan) ಇತ್ತಂಡಗಳ ನಡುವಿನ ಪಂದ್ಯವು ಯಾವಾಗಲೂ ರೋಚಕತೆಯಿಂದ ಕೂಡಿರುತ್ತದೆ. ಆದ್ರೆ ಈವರೆಗೆ ನಡೆದಿರುವ ಪಂದ್ಯಗಳಲ್ಲಿ ಭಾರತವೇ ಪಾಕ್‌ ವಿರುದ್ಧ ಮೇಲುಗೈ ಸಾಧಿಸಿದೆ. ಇತ್ತಂಡಗಳ ನಡುವಿನ ಪಂದ್ಯಗಳಲ್ಲಿ ಟೀಂ ಇಂಡಿಯಾದ ಹಲವು ದಿಗ್ಗಜರು ಸ್ಮರಣೀಯ ದಾಖಲೆಗಳನ್ನ ನಿರ್ಮಿಸಿದ್ದಾರೆ. ಅವುಗಳಲ್ಲಿ ಟಾಪ್‌-5 ಬ್ಯಾಟ್ಸ್‌ಮ್ಯಾನ್‌ಗಳ ಪಟ್ಟಿ ಇಲ್ಲಿದೆ.

    ನವಜೋತ್ ಸಿಂಗ್ ಸಿಧು:
    1996ರಲ್ಲಿ ಬೆಂಗಳೂರಿನಲ್ಲಿ ನಡೆದ ವಿಶ್ವಕಪ್‌ ಟೂರ್ನಿಯ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ಟೀಂ ಇಂಡಿಯಾ ಪರ ನವಜೋತ್‌ ಸಿಂಗ್‌ ಸಿಧು 11 ಬೌಂಡರಿಗಳ ನೆರವಿನೊಂದಿಗೆ 115 ಎಸೆತಗಳಲ್ಲಿ 93 ರನ್‌ ಚಚ್ಚಿದ್ದರು. ಇದರ ಪರಿಣಾಮ 8‌ ವಿಕೆಟ್‌ ನಷ್ಟಕ್ಕೆ 287 ರನ್‌ ಗಳಿಸಿದ ಟೀಂ ಇಂಡಿಯಾ ಪಾಕ್‌ ವಿರುದ್ಧ 39 ರನ್‌ಗಳ ಭರ್ಜರಿ ಜಯ ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಇದನ್ನೂ ಓದಿ: ಕಿಂಗ್‌ ಕೊಹ್ಲಿ ಕಟ್ಟಿಹಾಕಲು ಬಾಬರ್‌ ಬಳಿ ಇದೆಯಾ ಮಾಸ್ಟರ್‌ ಪ್ಲ್ಯಾನ್‌? – ಇಬ್ಬರಲ್ಲಿ ಯಾರು ಬೆಸ್ಟ್‌?

    ಶತಕ ವಂಚಿತ ಸಚಿನ್‌:
    2003ರ ವಿಶ್ವಕಪ್‌ ಟೂರ್ನಿಯಲ್ಲಿ ಪಾಕಿಸ್ತಾನ ಟೀಂ ಇಂಡಿಯಾಕ್ಕೆ 274 ರನ್‌ಗಳ ಗುರಿ ನೀಡಿತ್ತು. ಈ ವೇಳೆ ಟೀಂ ಇಂಡಿಯಾ ಪರ ಬ್ಯಾಟಿಂಗ್‌ ಮಾಡಿದ್ದ ಸಚಿನ್‌ ತೆಂಡೂಲ್ಕರ್‌ 75 ಎಸೆತಗಳಲ್ಲಿ 98 ರನ್‌ (12 ಬೌಂಡರಿ, 1 ಸಿಕ್ಸರ್) ಚಚ್ಚಿ ಟೀಂ ಇಂಡಿಯಾ ಗೆಲುವಿಗೆ ನೆರವಾಗಿದ್ದರು. ಪಾಕಿಸ್ತಾನ ನೀಡಿದ್ದ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಭಾರತ 45.4 ಓವರ್‌ಗಳಲ್ಲೇ 4 ವಿಕೆಟ್‌ ನಷ್ಟಕ್ಕೆ 276 ರನ್‌ ಬಾರಿಸಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.

    ಮ್ಯಾಜಿಕ್‌ ಮಹಿಯ ಅಬ್ಬರ:
    2005ರಲ್ಲಿ ಸೌರವ್‌ ಗಂಗೂಲಿ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತೆರಳಿದ್ದ ಭಾರತ ತಂಡ ತವರಿನಲ್ಲೇ ಪಾಕಿಸ್ತಾನವನ್ನ ಬಗ್ಗುಬಡಿದಿತ್ತು. 2005ರ ಏಪ್ರಿಲ್‌ 5ರಂದು ನಡೆದಿದ್ದ 2ನೇ ಏಕದಿನ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದಿದ್ದ ಎಂ.ಎಸ್‌ ಧೋನಿ (MS Dhoni) 123 ಎಸೆತಗಳಲ್ಲಿ ಭರ್ಜರಿ 148 ರನ್‌ ಸಿಡಿಸಿದ್ದರು. ಇದರ ಪರಿಣಾಮ‌ ಭಾರತಕ್ಕೆ 58 ರನ್‌ಗಳ ಜಯ ಸಿಕ್ಕಿತ್ತು. ಇದನ್ನೂ ಓದಿ: AsiaCup 2023: ಟೀಂ ಇಂಡಿಯಾ ವಿರುದ್ಧ ಹೊಸ ದಾಖಲೆ ಬರೆಯಲು ಕಾಯ್ತಿದ್ದಾರೆ ಬಾಬರ್ ಆಜಂ

    ಚೇಸ್‌ ಮಾಸ್ಟರ್‌ ಕೊಹ್ಲಿ ಶತಕದಾಟ:
    2012ರಲ್ಲಿ ಮಣಿಪುರದಲ್ಲಿ ನಡೆದ ಏಕದಿನ ಏಷ್ಯಾಕಪ್‌ ಟೂರ್ನಿಯಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ಪಾಕಿಸ್ತಾನ 330 ರನ್‌ಗಳ ಬೃಹತ್‌ ಮೊತ್ತದ ಗುರಿ ನೀಡಿತ್ತು. ಆದ್ರೆ ವಿರಾಟ್‌ ಕೊಹ್ಲಿ ಅವರ ಶತಕದ ಅಬ್ಬರಕ್ಕೆ ಭಾರತ 47.5 ಓವರ್‌ಗಳಲ್ಲೇ 330 ರನ್‌ಗಳ ಗುರಿ ತಲುಪಿತ್ತು. ಇನ್ನೂ 13 ಎಸೆತಗಳು ಬಾಕಿ ಇರುವಾಗಲೇ ರನ್‌ ಪೂರೈಸಿ 6 ವಿಕೆಟ್‌ಗಳ ಜಯ ಸಾಧಿಸಿತ್ತು. ಇದು ಏಕದಿನ ಕ್ರಿಕೆಟ್‌ನಲ್ಲಿ ವಿರಾಟ್‌ ಕೊಹ್ಲಿ ಅವರ ಗರಿಷ್ಠ ಸ್ಕೋರ್‌ ಆಗಿದೆ.

    ಹಿಟ್‌ ಮ್ಯಾನ್‌ ಬ್ಯಾಟಿಂಗ್‌ ಕಮಾಲ್‌:
    2019ರ ವಿಶ್ವಕಪ್‌ ಟೂರ್ನಿಯಲ್ಲಿ‌ ರೋಹಿತ್‌ ಶರ್ಮಾ 113 ಎಸೆತಗಳಲ್ಲಿ 14 ಬೌಂಡರಿ, 3 ಸಿಕ್ಸರ್‌ಗಳೊಂದಿಗೆ 140 ರನ್‌ ಚಚ್ಚಿದ್ದರು. ಇದು ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್‌ ಶರ್ಮಾ ಪಾಕ್‌ ವಿರುದ್ಧ ಸಿಡಿಸಿರುವ ಗರಿಷ್ಠ ಸ್ಕೋರ್‌ ಕೂಡ ಆಗಿದೆ. ಅಂದು ವಿರಾಟ್‌ ಕೊಹ್ಲಿ ನಾಯಕತ್ವದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ಟೀಂ ಇಂಡಿಯಾ 50 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 336 ರನ್‌ ಗಳಿಸಿತ್ತು. ಆದ್ರೆ ಮಳೆ ಅಡ್ಡಿಯಾಗಿದ್ದರಿಂದ ಪಾಕಿಸ್ತಾನಕ್ಕೆ 40 ಓವರ್‌ಗಳಲ್ಲಿ 301 ರನ್‌ಗಳ ಗುರಿ ನೀಡಲಾಯಿತು. ಈ ಗುರಿ ಬೆನ್ನತ್ತಿದ ಪಾಕಿಸ್ತಾನ 40 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 212 ರನ್‌ ಗಳಿಸಲಷ್ಟೇ ಸಾಧ್ಯವಾಗಿ ಭಾರತದ ಎದುರು ಮಂಡಿಯೂರಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]