Tag: ವಿಶ್ವಕಪ್

  • ಟೀಂ ಇಂಡಿಯಾದ ಉಪನಾಯಕ ಹಾರ್ದಿಕ್‌ ಪಾಂಡ್ಯ ಈಗ ಎಲ್ಲಿದ್ದಾರೆ?

    ಟೀಂ ಇಂಡಿಯಾದ ಉಪನಾಯಕ ಹಾರ್ದಿಕ್‌ ಪಾಂಡ್ಯ ಈಗ ಎಲ್ಲಿದ್ದಾರೆ?

    ಮುಂಬೈ: ಟೀಂ ಇಂಡಿಯಾದ (Team India) ಖ್ಯಾತ ಆಲ್‌ರೌಂಡರ್‌, ಮುಂಬೈ ಇಂಡಿಯನ್ಸ್‌ ತಂಡದ ನಾಯಕ ಹಾರ್ದಿಕ್‌ ಪಾಂಡ್ಯ (Hardik Pandya) ಎಲ್ಲಿದ್ದಾರೆ ಎಂಬ ಪ್ರಶ್ನೆ ಈಗ ಜೋರಾಗಿ ಚರ್ಚೆ ಆಗುತ್ತಿದೆ.

    ಟೀಂ ಇಂಡಿಯಾದ ಮೊದಲ ಬ್ಯಾಚ್‌ ಈಗಾಗಲೇ ಅಮೆರಿಕದ ವಿಮಾನವನ್ನು ಹತ್ತಿದೆ. ಈ ವಿಮಾನವನ್ನು ಹಾರ್ದಿಕ್‌ ಪಾಂಡ್ಯ ಹತ್ತಬೇಕಿತ್ತು. ಆದರೆ ಈ ಬ್ಯಾಚ್‌ನಲ್ಲಿ ಹಾರ್ದಿಕ್‌ ಪಾಂಡ್ಯ ಕಾಣಿಸದ ಕಾರಣ ಎಲ್ಲಿದ್ದಾರೆ ಎಂಬ ಚರ್ಚೆ ಆರಂಭವಾಗಿದೆ.

    ಸರ್ಬಿಯಾ ಮೂಲದ ಮಾಡೆಲ್‌, ನಟಿ ನತಾಶಾ ಸ್ಟಾಂಕೋವಿಕ್‌ (Natasa Stankovic) ಡೈವೋರ್ಸ್‌ ವರದಿ ಬೆನ್ನಲ್ಲೇ ಹಾರ್ದಿಕ್‌ ಪಾಂಡ್ಯ ಎಲ್ಲಿಯೂ ಕಾಣಿಸುತ್ತಿಲ್ಲ.

    ಮುಂಬೈ ಇಂಡಿಯನ್ಸ್‌ (Mumbai Indians) ತಂಡ ಲೀಗ್‌ನಲ್ಲೇ ಐಪಿಎಲ್‌ನಿಂದ (IPL) ಹೊರ ಬಿದ್ದ ಕಾರಣ ಬಿಸಿಸಿಐ (BCCI) ನಿಯಮದ ಪ್ರಕಾರ ಮೊದಲ ಬ್ಯಾಚ್‌ನಲ್ಲಿ ಹಾರ್ದಿಕ್‌ ಪಾಂಡ್ಯ ಅಮೆರಿಕದ ನ್ಯೂಯಾರ್ಕ್‌ಗೆ ತೆರಳಬೇಕಿತ್ತು. ಮಂಬೈ ಇಂಡಿಯನ್ಸ್‌ ಆಟಗಾರರಾರದ ರೋಹಿತ್‌ ಶರ್ಮಾ (Rohit Sharma), ಜಸ್‌ಪ್ರೀತ್‌ ಬುಮ್ರಾ, ಸೂರ್ಯಕುಮಾರ್‌ ಯಾದವ್‌ ಅವರು ಈಗಾಗಲೇ ತೆರಳಿದ್ದಾರೆ.

    ಪಾಂಡ್ಯ ಗೈರು ಹಾಜರಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮೊದಲನೇಯದಾಗಿ ಪಾಂಡ್ಯ ಕೇವಲ ಆಟಗಾರ ಮಾತ್ರವಲ್ಲ ಅವರು ಉಪನಾಯಕನಾಗಿದ್ದಾರೆ. ಹೀಗಾಗಿ ನಾಯಕ ರೋಹಿತ್‌ ಶರ್ಮಾ, ಕೋಚ್‌ ದ್ರಾವಿಡ್‌, ಬ್ಯಾಟಿಂಗ್‌ ಕೋಚ್‌ ವಿಕ್ರಂ ರಾಥೋರ್‌ ಜೊತೆ ಪ್ರಯಾಣ ಬೆಳೆಸಬೇಕಿತ್ತು. ಇದನ್ನೂ ಓದಿ: Divorce Rumours: ಪತ್ನಿ ನತಾಶಾಗೆ ವಿಚ್ಛೇದನ ನೀಡಿದ್ರೆ 70% ಕರಗಲಿದೆ ಪಾಂಡ್ಯ ಸಂಪತ್ತು!

    ಎರಡನೇಯದ್ದಾಗಿ ನತಾಶಾ ಸ್ಟಾಂಕೋವಿಕ್‌ ಡೈವೋರ್ಸ್‌ ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಳ ಚರ್ಚೆ ಆಗುತ್ತಿದೆ. ಈ ಪೈಕಿ ಪಾಂಡ್ಯ ಅವರ ಆಸ್ತಿಯ 70% ಪಾಲನ್ನು ನತಾಶಾಗೆ ನೀಡಬೇಕು ಎಂಬ ವಿಚಾರ ಹರಿದಾಡುತ್ತಿದೆ. ಈ ಮಧ್ಯೆ ನತಾಶಾ ಅವರು ಇನ್‌ಸ್ಟಾದಲ್ಲಿ “ಯಾರೋ ಒಬ್ಬರು ಬೀದಿಗೆ ಬರಲಿದ್ದಾರೆ” ಎಂದು ಸ್ಟೋರಿ ಪೋಸ್ಟ್‌ ಮಾಡಿದ್ದಾರೆ. ಈ ಕಾರಣಕ್ಕೆ ಪಾಂಡ್ಯ ಗೈರು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

    ಹಾರ್ದಿಕ್‌ ಪಾಂಡ್ಯ ಗೈರಿನ ಬಗ್ಗೆ ಬಿಸಿಸಿಐ ಆಗಲಿ ಅಥವಾ ಹಾರ್ದಿಕ್‌ ಪಾಂಡ್ಯ ಇಲ್ಲಿಯವರೆಗೂ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

     

  • ಕ್ರಿಕೆಟಿಗ ಯುವರಾಜ್‌ ಸಿಂಗ್‌ ಗುರುದಾಸ್‌ಪುರದ ಬಿಜೆಪಿ ಅಭ್ಯರ್ಥಿ?

    ಕ್ರಿಕೆಟಿಗ ಯುವರಾಜ್‌ ಸಿಂಗ್‌ ಗುರುದಾಸ್‌ಪುರದ ಬಿಜೆಪಿ ಅಭ್ಯರ್ಥಿ?

    ನವದೆಹಲಿ: ಭಾರತ ಕ್ರಿಕೆಟ್ (Team India) ತಂಡದ ಮಾಜಿ ಆಲ್‌ರೌಂಡರ್‌ ಆಟಗಾರ ಯುವರಾಜ್ ಸಿಂಗ್ (Yuvraj Singh) ಅವರು ಶೀಘ್ರವೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಯೊಂದು ಹರಿದಾಡಲು ಆರಂಭವಾಗಿದೆ.

    ಯುವರಾಜ್ ಇತ್ತೀಚೆಗೆ ಕೇಂದ್ರ ಸಾರಿಗೆ ಖಾತೆಯ ಸಚಿವ ನಿತಿನ್ ಗಡ್ಕರಿ (Nitin Gadkari) ಅವರನ್ನು ಭೇಟಿಯಾಗಿದ್ದರು. ಈ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: 1,078 ತಂಡಗಳು, 16,100 ಆಟಗಾರರು – ಮೋದಿ ತವರಲ್ಲಿ ʻಲೋಕಸಭಾ ಪ್ರೀಮಿಯರ್‌ ಲೀಗ್‌ʼಗೆ ಚಾಲನೆ

     

    ಪಂಜಾಬ್‌ನ (Punjab) ಗುರುದಾಸ್‌ಪುರ ಕ್ಷೇತ್ರದಲ್ಲಿ ಬಿಜೆಪಿಯಿಂದ (BJP) ಲೋಕಸಭೆಗೆ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ಇಲ್ಲಿಯವರೆಗೆ ಯುವರಾಜ್‌ ಸಿಂಗ್‌ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ನಟ ಸನ್ನಿ ಡಿಯೋಲ್ ಹಾಲಿ ಗುರುದಾಸ್‌ಪುರ ಕ್ಷೇತ್ರದ ಸಂಸದರಾಗಿದ್ದಾರೆ. ಇದನ್ನೂ ಓದಿ: ಅಯೋಧ್ಯೆಗೆ ಹೊರಟಿದ್ದ ವಿಶೇಷ ರೈಲಿಗೆ ಕಲ್ಲು ತೂರಾಟ

    ಪಂಜಾಬ್‌ನಲ್ಲಿ ಒಟ್ಟು 13 ಲೋಕಸಭಾ ಕ್ಷೇತ್ರಗಳಿದೆ. 2019ರ ಚುನಾವಣೆಯಲ್ಲಿ ಕಾಂಗ್ರೆಸ್‌ 8 , ಬಿಜೆಪಿ 2, ಶಿರೋಮಣಿ ಅಕಾಲಿ ದಳ 2, ಆಪ್‌ 1 ಸ್ಥಾನವನ್ನು ಗೆದ್ದುಕೊಂಡಿತ್ತು. ಪಂಜಾಬ್‌ನಲ್ಲಿ ಬಿಜೆಪಿ ದೊಡ್ಡ ಮಟ್ಟದ ಸಾಧನೆ ಮಾಡಿಲ್ಲ. ಈ ಕಾರಣಕ್ಕೆ ಬಿಜೆಪಿ ಯುವರಾಜ್‌ ಸಿಂಗ್‌ ಅವರನ್ನು ಕಣಕ್ಕೆ ಇಳಿಸುವ ಸಾಧ್ಯತೆಯಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

  • 8 ತಿಂಗಳಲ್ಲಿ ಆಸ್ಟ್ರೇಲಿಯಾ ವಿರುದ್ಧವೇ 3 ವಿಶ್ವಕಪ್‌ ಟ್ರೋಫಿ ಕಳೆದುಕೊಂಡ ಭಾರತ!

    8 ತಿಂಗಳಲ್ಲಿ ಆಸ್ಟ್ರೇಲಿಯಾ ವಿರುದ್ಧವೇ 3 ವಿಶ್ವಕಪ್‌ ಟ್ರೋಫಿ ಕಳೆದುಕೊಂಡ ಭಾರತ!

    – ಪದೇ ಪದೇ ಭಾರತಕ್ಕೆ ಮುಳುವಾಗ್ತಿದೆ ಆಸೀಸ್‌

    ನವದೆಹಲಿ: ಐಸಿಸಿ ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯಗಳಲ್ಲಿ ದೈತ್ಯ ಆಸ್ಟ್ರೇಲಿಯಾ ತಂಡ ಪದೇ ಪದೇ ಭಾರತಕ್ಕೆ ಮುಳುವಾಗುತ್ತಿರೋದು ಸಾಬೀತಾಗುತ್ತಿದೆ. ಕಳೆದ 8 ತಿಂಗಳಲ್ಲಿ ಟೀಂ ಇಂಡಿಯಾ, ಆಸ್ಟ್ರೇಲಿಯಾ ವಿರುದ್ಧವೇ ಮೂರು ವಿಶ್ವಕಪ್‌ ಟ್ರೋಫಿ ಕಳೆದುಕೊಂಡಿರುವುದೇ ಇದಕ್ಕೆ ಉದಾಹರಣೆಯಾಗಿದೆ.

    ಹೌದು. 2023ರಲ್ಲಿ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌, ಏಕದಿನ ವಿಶ್ವಕಪ್‌ ಟ್ರೋಫಿ ಕಳೆದುಕೊಂಡಿದ್ದ ಭಾರತ 2024ರ ವರ್ಷಾರಂಭದಲ್ಲೇ ಆಸೀಸ್‌ ವಿರುದ್ಧ ಅಂಡರ್‌ 19 ವಿಶ್ವಕಪ್‌ನಲ್ಲೂ ಸೋತು ನಿರಾಸೆ ಅನುಭವಿಸಿದೆ. ಅಲ್ಲದೇ ಆಸ್ಟ್ರೇಲಿಯಾ ತಂಡ ಸೀನಿಯರ್‌ ಮತ್ತು ಅಂಡರ್‌ 19 ವಿಭಾಗದಲ್ಲಿ ಅತಿಹೆಚ್ಚು ಟ್ರೋಫಿಗಳನ್ನು ಗೆದ್ದ ಮೊದಲ ತಂಡ ಎನಿಸಿಕೊಂಡಿದೆ.

    WTCನಲ್ಲಿ ಹೀನಾಯ ಸೋಲು:
    2023ರ ಜೂನ್‌ 11ರಂದು ರೋಹಿತ್‌ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಆಸ್ಟ್ರೇಲಿಯಾ ತಂಡದ ವಿರುದ್ಧ ವಿಶ್ವಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಪಂದ್ಯದ 2ನೇ ಆವೃತ್ತಿಯಲ್ಲಿ ಹೀನಾಯ ಸೋಲು ಅನುಭವಿಸಿತ್ತು. ಅಗ್ರ ಕ್ರಮಾಂಕ ಬ್ಯಾಟರ್‌ಗಳ ವೈಫಲ್ಯದಿಂದಾಗಿ ಟೀಂ ಇಂಡಿಯಾ ಅಂದು 209 ರನ್‌ಗಳ ಅಂತರದಿಂದ ಸೋಲು ಕಂಡಿತ್ತು.

    ಏಕದಿನ ವಿಶ್ವಕಪ್‌ನಲ್ಲೂ ಸೋಲು:
    ಭಾರತದ ಆತಿಥ್ಯದಲ್ಲಿ ಆಯೋಜನೆಗೊಂಡಿದ್ದ 2023ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲೂ ಭಾರತ ಫೈನಲ್‌ನಲ್ಲಿ ಆಸೀಸ್‌ ವಿರುದ್ಧವೇ ಸೋತಿತ್ತು. ನವೆಂಬರ್‌ 19ರಂದು ನಡೆದ ಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾ ಆಸೀಸ್‌ ವಿರುದ್ಧ 6 ವಿಕೆಟ್‍ಗಳ ಸೋಲು ಕಂಡಿತು.

    U-19 ವಿಶ್ವಕಪ್‌ನಲ್ಲೂ ಸೋಲು:
    ಆಸ್ಟ್ರೇಲಿಯಾದ ಅಡಿಲೇಟ್‌ ಓವೆಲ್‌ ಕ್ರೀಡಾಂಗಣದಲ್ಲಿ ಭಾನುವಾರ (ಫೆ.11) ನಡೆದ 19 ವರ್ಷದೊಳಗಿನವರ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿಯೂ ಸಹ ಭಾರತ ಆಸೀಸ್‌ ವಿರುದ್ಧವೇ ಸೋತಿದೆ. ಭಾನುವಾರ ಇಲ್ಲಿನ ಬೆನೋನಿಯಲ್ಲಿರುವ ವಿಲೋಮೂರ್ ಪಾರ್ಕ್ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ತಂಡ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 253 ರನ್ ಗಳಿಸಿ, ಭಾರತಕ್ಕೆ 254 ರನ್‌ಗಳ ಗುರಿ ನೀಡಿತ್ತು. ಆದ್ರೆ ಆಸೀಸ್‌ ಬೌಲಿಂಗ್‌ ದಾಳಿಗೆ ತತ್ತರಿಸಿದ ಭಾರತ ತಂಡ 43.5 ಓವರ್‌ಗಳಲ್ಲಿ ಕೇಲವ 174 ರನ್‌ಗಳಿಗೆ ಆಲೌಟ್‌ ಆಯಿತು. ಈ ಗೆಲುವಿನೊಂದಿಗೆ ಆಸೀಸ್‌ ತಂಡ 4ನೇ ಬಾರಿಗೆ ಐಸಿಸಿ ಅಂಡರ್‌ 19 ವಿಶ್ವಕಪ್‌ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.

  • ಅರ್ಜುನ ಪ್ರಶಸ್ತಿ ಪಡೆದ ಬೆಂಕಿ ಬೌಲರ್‌ ಮೊಹಮ್ಮದ್‌ ಶಮಿ – ಇನ್ಯಾರಿಗೆಲ್ಲಾ ಸಿಕ್ತು ಪ್ರಶಸ್ತಿ?

    ಅರ್ಜುನ ಪ್ರಶಸ್ತಿ ಪಡೆದ ಬೆಂಕಿ ಬೌಲರ್‌ ಮೊಹಮ್ಮದ್‌ ಶಮಿ – ಇನ್ಯಾರಿಗೆಲ್ಲಾ ಸಿಕ್ತು ಪ್ರಶಸ್ತಿ?

    ನವದೆಹಲಿ: ಟೀಂ ಇಂಡಿಯಾದ ವೇಗಿ ಮೊಹಮ್ಮದ್‌ ಶಮಿ (Mohammed Shami) ದೇಶದ 2ನೇ ಅತ್ಯುನ್ನತ ಕ್ರೀಡಾ ಗೌರವವಾದ ಅರ್ಜುನ ಪ್ರಶಸ್ತಿ (Arjuna Award) ಸ್ವೀಕರಿಸಿದ್ದಾರೆ.

    ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಂದ ಶಮಿ ಅರ್ಜುನ ಪ್ರಶಸ್ತಿ ಸ್ವೀಕರಿಸಿದರು. ಇದರೊಂದಿಗೆ ಅನೇಕ ಕ್ರೀಡಾತಾರೆಗಳು ಅರ್ಜುನ ಪ್ರಶಸ್ತಿ ಪಡೆದು ಸಂತಸಪಟ್ಟರು. ಇದನ್ನೂ ಓದಿ: ಶಮಿ ಹೊಸ ದಾಖಲೆ – ODI ವಿಶ್ವಕಪ್‌ ಇತಿಹಾಸದಲ್ಲೇ 2 ಬಾರಿ ಐದು ವಿಕೆಟ್‌ ಕಬಳಿಸಿದ ಮೊದಲ ಭಾರತೀಯ

    ಶಮಿ ಸೇರಿದಂತೆ ಇತರ ಕ್ರೀಡಾಪಟುಗಳು ತೋರಿದ್ದ ಅದ್ಭುತ ಪ್ರದರ್ಶನಕ್ಕಾಗಿ 2023ರಲ್ಲಿ ಕೇಂದ್ರ ಸರ್ಕಾರ ಪ್ರಶಸ್ತಿ ಘೋಷಣೆ ಮಾಡಿತ್ತು. ಹಿಂದಿನ 4 ವರ್ಷಗಳ ಅವಧಿಯಲ್ಲಿ ತೋರಿದ ಪ್ರದರ್ಶನ, ನಾಯಕತ್ವದ ಬೆಳವಣಿಗೆ, ಕ್ರೀಡಾ ಮನೋಭಾವ, ಶಿಸ್ತಿನ ಪ್ರಜ್ಞೆ ಈ ಮಾನದಂಡಗಳ ಆಧಾರದದಲ್ಲಿ ಪ್ರಶಸ್ತಿಗೆ ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿತ್ತು.

    ಕಳೆದ ವರ್ಷ ಭಾರತದ ಆತಿಥ್ಯದಲ್ಲಿ ನಡೆದ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ (World Cup 2023) ಟೂರ್ನಿಯಲ್ಲಿ ಶಮಿ ಅದ್ಭುತ ಸಾಧನೆ ಮಾಡಿದ್ದರು. 7 ಪಂದ್ಯಗಳನ್ನಾಡಿದರೂ 24 ವಿಕೆಟ್‌ಗಳನ್ನು ಪಡೆಯುವ ಮೂಲಕ 2023ರ ಆವೃತ್ತಿಯಲ್ಲಿ ಅತಿಹೆಚ್ಚು ವಿಕೆಟ್‌ ಪಡೆದ ಸಾಧನೆ ಮಾಡಿದರು. ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ 50 ವಿಕೆಟ್‌ ಪಡೆದ ಭಾರತದ ಮೊದಲ ಬೌಲರ್‌ ಮೈಲುಗಲ್ಲನ್ನೂ ಸ್ಥಾಪಿಸಿದರು.

    ಅರ್ಜುನ್ ಪ್ರಶಸ್ತಿ ಪುರಸ್ಕೃತರ ಪಟ್ಟಿ: ಅಜಯ್ ರೆಡ್ಡಿ (ಅಂಧರ ಕ್ರಿಕೆಟ್), ಓಜಸ್ ಪ್ರವೀಣ್ ಡಿಯೋಟಾಲೆ (ಆರ್ಚರಿ), ಅದಿತಿ ಗೋಪಿಚಂದ್ ಸ್ವಾಮಿ (ಆರ್ಚರಿ), ಶೀತಲ್ ದೇವಿ (ಪ್ಯಾರಾ ಆರ್ಚರಿ), ಪಾರುಲ್ ಚೌಧರಿ ಮತ್ತು ಮುರಳಿ ಶ್ರೀಶಂಕರ್ (ಅಥ್ಲೆಟಿಕ್ಸ್), ಮೊಹಮ್ಮದ್ ಹುಸಾಮುದ್ದೀನ್ (ಬಾಕ್ಸಿಂಗ್), ಆರ್. ವೈಶಾಲಿ (ಚೆಸ್), ದಿವ್ಯಾಕೃತಿ ಸಿಂಗ್ ಮತ್ತು ಅನುಷ್ ಅಗರ್ವಾಲಾ (ಈಕ್ವೆಸ್ಟ್ರಿಯನ್), ದೀಕ್ಷಾ ದಾಗರ್ (ಗಾಲ್ಫ್), ಕ್ರಿಶನ್ ಬಹದ್ದೂರ್ ಪಾಠಕ್ (ಹಾಕಿ), ಸುಶೀಲಾ ಚಾನು (ಹಾಕಿ), ಪಿಂಕಿ (ಲಾನ್ ಬಾಲ್), ಐಶ್ವರಿ ಪ್ರತಾಪ್ ಸಿಂಗ್ ತೋಮರ್ (ಶೂಟಿಂಗ್), ಅಂತಿಮ್ ಪಂಘಲ್ (ಕುಸ್ತಿ), ಐಹಿಕಾ ಮುಖರ್ಜಿ (ಟೇಬಲ್ ಟೆನಿಸ್). ಇದನ್ನೂ ಓದಿ: World Cup Semifinal: 48 ವರ್ಷಗಳ ವಿಶ್ವಕಪ್‌ ಇತಿಹಾಸದಲ್ಲಿ ಹೊಸ ಮೈಲುಗಲ್ಲು‌ ಸ್ಥಾಪಿಸಿದ ಶಮಿ.!

  • ವಿಶ್ವಕಪ್‌ ಸೋತ ಬಳಿಕ ಬೇಸರ ಹೊರಹಾಕಿದ್ದ ಕೊಹ್ಲಿಯ ವಿಡಿಯೋ ವೈರಲ್‌

    ವಿಶ್ವಕಪ್‌ ಸೋತ ಬಳಿಕ ಬೇಸರ ಹೊರಹಾಕಿದ್ದ ಕೊಹ್ಲಿಯ ವಿಡಿಯೋ ವೈರಲ್‌

    ಬೆಂಗಳೂರು: ವಿಶ್ವಕಪ್‌ ಕ್ರಿಕೆಟ್‌ ಪಂದ್ಯದಲ್ಲಿ (World Cup Cricket Final) ಆಸ್ಟ್ರೇಲಿಯಾ (Australia) ವಿರುದ್ಧ ಭಾರತ (Team India) ಸೋತ ಬಳಿಕ ವಿರಾಟ್‌ ಕೊಹ್ಲಿ (Virat Kohli) ಬೇಸರಗೊಂಡ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

    ಆಸ್ಟ್ರೇಲಿಯಾ ಆಟಗಾರರು ಮೈದಾನದಲ್ಲಿ ಸಂಭ್ರಮಿಸುತ್ತಿದ್ದರೆ ಕೊಹ್ಲಿ ತಲೆ ಕೆಳಗೆ ಹಾಕಿ ಕೈಯಲ್ಲಿದ್ದ ಹ್ಯಾಟ್‌ನಿಂದ ವಿಕೆಟ್‌ ಬೇಲ್ಸ್‌ ಬೀಳಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಸತತ 10 ಪಂದ್ಯಗಳನ್ನು ಗೆದ್ದಿದ್ದ ಭಾರತ ವಿಶ್ವಕಪ್‌ ಗೆಲ್ಲುವ ನೆಚ್ಚಿನ ತಂಡವಾಗಿತ್ತು. ಫೈನಲ್‌ ಪಂದ್ಯದಲ್ಲಿ ಟಾಸ್‌ ಸೋತ ಭಾರತ ಬ್ಯಾಟಿಂಗ್‌ ಆರಂಭಿಸಿತು. ಇದನ್ನೂ ಓದಿ: ಬೆಂಗಳೂರಲ್ಲಿ ಕೆಳಗೆ ಬಿದ್ದ ಮೊಬೈಲ್‌ ಎತ್ತಿಕೊಳ್ಳಲು ಮೆಟ್ರೋ ಟ್ರ್ಯಾಕ್‌ಗೆ ಜಿಗಿದ ಮಹಿಳೆ

    ಬ್ಯಾಟ್ಸ್‌ಮನ್‌ಗಳು ನಿರೀಕ್ಷಿತ ಮಟ್ಟದ ಬ್ಯಾಟಿಂಗ್‌ ನೀಡದ ಕಾರಣ ಭಾರತ 50 ಓವರ್‌ಗಳಲ್ಲಿ 240 ರನ್‌ ಹೊಡೆಯಿತು. ರೋಹಿತ್‌ ಶರ್ಮಾ (Rohit Sharma) 47 ರನ್‌, ವಿರಾಟ್‌ ಕೊಹ್ಲಿ 54 ರನ್‌, ಕೆಎಲ್‌ ರಾಹುಲ್‌ 66 ರನ್‌ ಹೊಡೆದು ಔಟಾದರು.

    ಸುಲಭ ಸವಾಲನ್ನು ಬೆನ್ನಟ್ಟಿದ ಆಸ್ಟೇಲಿಯಾ 43 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 241 ರನ್‌ ಹೊಡೆದು 6 ವಿಕೆಟ್‌ಗಳ ಜಯ ಸಂಪಾದಿಸಿತು.

    ಆರಂಭಿಕ ಆಟಗಾರ ಟ್ರಾವಿಸ್‌ ಹೆಡ್‌ 137 ರನ್‌ ಹೊಡೆದು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ 765 ರನ್‌ ಹೊಡೆದ ವಿರಾಟ್‌ ಕೊಹ್ಲಿ ಅರ್ಹವಾಗಿಯೇ ಸರಣಿ ಶ್ರೇಷ್ಠ ಗೌರವಕ್ಕೆ ಪಾತ್ರವಾದರು.

     

  • ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಮ್‍ಗೆ ತೆರಳಿ ಸಂತೈಸಿದ ಮೋದಿ ನಡೆಗೆ ರವಿಶಾಸ್ತ್ರಿ ಮೆಚ್ಚುಗೆ

    ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಮ್‍ಗೆ ತೆರಳಿ ಸಂತೈಸಿದ ಮೋದಿ ನಡೆಗೆ ರವಿಶಾಸ್ತ್ರಿ ಮೆಚ್ಚುಗೆ

    ನವದೆಹಲಿ: ಏಕದಿನ ವಿಶ್ವಕಪ್  (World Cup) ಫೈನಲ್‍ನಲ್ಲಿ ಟೀಂ ಇಂಡಿಯಾ ಸೋತಾಗ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಡ್ರೆಸ್ಸಿಂಗ್ ರೂಮಿಗೆ ತೆರಳಿ ಆಟಗಾರರಿಗೆ ಧೈರ್ಯ ತುಂಬಿದ್ದರ ಬಗ್ಗೆ ಭಾರತ ತಂಡದ (Team India) ಮಾಜಿ ಕೋಚ್ ರವಿಶಾಸ್ತ್ರಿ (Ravi Shastri) ಸಂತಸ ವ್ಯಕ್ತಪಡಿಸಿದ್ದಾರೆ.

    ನಾನು ಕೋಚ್ ಆಗಿ ಏಳು ವರ್ಷಗಳ ಕಾಲ ಇದ್ದೆ. ಒಂದು ತಂಡ ಸರಣಿ ಅಥವಾ ಪ್ರಮುಖ ಟೂರ್ನಿ ಸೋತ ಬಳಿಕ ಪರಿಸ್ಥಿತಿ ಹೇಗಿರಲಿದೆ ಎಂಬುದು ನನಗೆ ಚೆನ್ನಾಗಿ ತಿಳಿದಿದೆ. ಈ ಕಾರಣದಿಂದ ಇದು ಅತ್ಯಂತ ಮಹತ್ವದ ವಿಚಾರ ಎಂದು ನನಗೆ ಅನಿಸುತ್ತದೆ. ಇದನ್ನೂ ಓದಿ: ಹುತಾತ್ಮ ಯೋಧ ಪ್ರಾಂಜಲ್ ಪಾರ್ಥಿವ ಶರೀರ ಬೆಂಗಳೂರಿಗೆ ಆಗಮನ

    ಸೋತು ಕಂಗೆಟ್ಟಿರುವಾಗ ಅದೊಂದು ವಿಚಿತ್ರ ಛಾಯೆ ಆವರಿಸಿರುತ್ತದೆ. ಇಂತಹ ಸಯಮದಲ್ಲಿ ಡ್ರೆಸ್ಸಿಂಗ್ ರೂಮ್‍ಗೆ ದೇಶದ ಪ್ರಧಾನಿಯಾದಂತವರು ಭೇಟಿ ನೀಡಿದಾಗ, ಅದು ದೊಡ್ಡ ವಿಚಾರವಾಗುತ್ತದೆ. ಇದು ಆಟಗಾರರ ಉತ್ಸಾಹವನ್ನು ಹೆಚ್ಚಿಸುತ್ತದೆ ಎಂದು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಮ್‍ಗೆ ಭೇಟಿ ನೀಡಿದ್ದಕ್ಕೆ ಕೆಲ ದಿನಗಳ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಟೀಕಿಸಿದ್ದರು. ಇದನ್ನೂ ಓದಿ: ಸುರಂಗದಲ್ಲಿ ಸಿಲುಕಿರೋ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ವಿಳಂಬ

  • ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟ ಮಿಚೆಲ್ ವಿರುದ್ಧ ದೂರು ದಾಖಲು

    ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟ ಮಿಚೆಲ್ ವಿರುದ್ಧ ದೂರು ದಾಖಲು

    ಲಕ್ನೋ: ವಿಶ್ವಕಪ್ (World Cup) ಟ್ರೋಫಿ ಮೇಲೆ ಕಾಲಿಟ್ಟಿದ್ದ ಅಸ್ಟ್ರೇಲಿಯಾ ಕ್ರಿಕೆಟ್ ತಂಡದ ಆಟಗಾರ ಮಿಚೆಲ್ ಮಾರ್ಷ್ (Mitchell Marsh) ವಿರುದ್ಧ ಉತ್ತರ ಪ್ರದೇಶದ ಆಲಿಗಢದಲ್ಲಿ ದೂರು ದಾಖಲಾಗಿದೆ.

    ಆರ್‍ಟಿಐ ಕಾರ್ಯಕರ್ತ ಪಂಡಿತ್ ಕೇಶವ್ ಅವರು ಮಿಚೆಲ್ ಮಾರ್ಷ್ ವಿರುದ್ಧ ದೂರು ದಾಖಲಿಸಿದ್ದಾರೆ. ವಿಶ್ವಕಪ್ ಗೆದ್ದ ಬಳಿಕ ಮಿಚೆಲ್ ಮಾರ್ಷ್ ತಮ್ಮ ಕಾಲುಗಳನ್ನು ವಿಶ್ವಕಪ್ ಟ್ರೋಫಿ ಮೇಲೆ ಇಟ್ಟಿದ್ದರು. ಈ ಚಿತ್ರ ಕ್ರಿಕೆಟ್ ಅಭಿಮಾನಿಗಳ ಭಾವನೆಗೆ ಧಕ್ಕೆ ಉಂಟುಮಾಡಿದೆ ಎಂದು ಪಂಡಿತ್ ಕೇಶವ್ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಲೆಕ್ಕಕ್ಕಿಲ್ಲ ರಿಂಕು ಸಿಕ್ಸರ್‌ – ಕೊನೇ ಎಸೆತದಲ್ಲಿ 7 ರನ್‌ ಗಳಿಸಿದ್ರೂ ಭಾರತಕ್ಕೆ ಸಿಕ್ಕಿದ್ದು 1 ರನ್‌, ಏಕೆ ಗೊತ್ತೇ?

    ನ.19 ರಂದು ಅಹಮದಾಬಾದ್‍ನ ನರೇಂದ್ರ ಮೋದಿ (Narendra Modi) ಸ್ಟೇಡಿಯಂನಲ್ಲಿ ನಡೆದ 2023ರ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 6 ವಿಕೆಟ್‍ಗಳಿಂದ ಭಾರತ ತಂಡವನ್ನು ಮಣಿಸಿತ್ತು. ಈ ಮೂಲಕ ವಿಶ್ವ ಚಾಂಪಿಯನ್ ಆಗಿ ಹೊರ ಹೊಮ್ಮಿತ್ತು. ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾ ಸತತ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿತ್ತು.

    ಗೆಲುವಿನ ನಂತರ ಸಂಭ್ರಮ ಆಚರಿಸಿಕೊಂಡಿದ್ದ ಆಸೀಸ್ ಪಡೆ, ಚಿತ್ರಗಳನ್ನು ಸಾಮಾಜಿಕ ಜಾಲಾತಾಣಗಳಲ್ಲಿ ಹಂಚಿಕೊಂಡಿತ್ತು. ಚಿತ್ರವೊಂದರಲ್ಲಿ ಮಿಚೆಲ್ ಮಾರ್ಷ್ ಟ್ರೋಫಿಯ ಮೇಲೆ ಕಾಲಿಟ್ಟು ಪೋಸ್ ಕೊಟ್ಟಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು. ಕೆಲವರು ಮಿಚೆಲ್ ಪರವಾಗಿಯೂ ವಾದಿಸಿದ್ದರು.

    ದೂರು ದಾಖಲಿಸಿರುವ ಪಂಡಿತ್ ಕೇಶವ್ ಒಂದು ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೂ ಕಳುಹಿಸಿಕೊಟ್ಟಿದ್ದಾರೆ. ಮಿಚೆಲ್ ಮಾರ್ಷ್ ಭಾರತದಲ್ಲಿ ಕ್ರಿಕೆಟ್ ಆಡುವುದನ್ನು ನಿಲ್ಲಿಸುವಂತೆ ನಿಷೇಧಿಸಬೇಕು ಎಂದು ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ. ಇದನ್ನೂ ಓದಿ: T20 ಕದನಕ್ಕೆ ವಿಶ್ವಕಪ್‌ ದಾಖಲೆ ಉಡೀಸ್‌ – ಏಕಕಾಲಕ್ಕೆ ಕರ್ನಾಟಕದ ಜನಸಂಖ್ಯೆಗಿಂತಲೂ ಅಧಿಕ ಮಂದಿ ವೀಕ್ಷಣೆ

  • ಇಂದಿನಿಂದ ಭಾರತ-ಆಸೀಸ್‌ T20 ಸರಣಿ – ODI ನಲ್ಲಿ ಫ್ಲಾಪ್‌ ಆದ್ರೂ T20ಯಲ್ಲಿ ಅಬ್ಬರಿಸ್ತಾರಾ ಸೂರ್ಯ?

    ಇಂದಿನಿಂದ ಭಾರತ-ಆಸೀಸ್‌ T20 ಸರಣಿ – ODI ನಲ್ಲಿ ಫ್ಲಾಪ್‌ ಆದ್ರೂ T20ಯಲ್ಲಿ ಅಬ್ಬರಿಸ್ತಾರಾ ಸೂರ್ಯ?

    ಬೆಂಗಳೂರು: ಏಕದಿನ ವಿಶ್ವಕಪ್‌ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ವಿಶ್ವಕಪ್‌ ಮುಗಿದ ನಾಲ್ಕೇ ದಿನಗಳಲ್ಲಿ ಭಾರತ ತಂಡವು ಆಸ್ಟ್ರೇಲಿಯಾ (Australia) ವಿರುದ್ಧ 5 ಪಂದ್ಯಗಳ ಟಿ20 ಸರಣಿಗೆ ಸಜ್ಜಾಗಿದೆ. ಇದು ಈ ವರ್ಷದಲ್ಲಿ ಆಸೀಸ್‌ ವಿರುದ್ಧವೇ ಆಡುತ್ತಿರುವ 4ನೇ ದ್ವಿಪಕ್ಷೀಯ ಸರಣಿಯಾಗಿದೆ. ನ.23 ರಂದು (ಇಂದು) ಮೊದಲ ಟಿ20 ಸರಣಿಯಲ್ಲಿ ಮುಖಾಮುಖಿಯಾಗಲಿದೆ.

    ವಿಶಾಖಪಟ್ಟಣದಲ್ಲಿರುವ (Visakhapatnam) ಆಂಧ್ರಪ್ರದೇಶ ಕ್ರಿಕೆಟ್‌ ಅಸೋಸಿಯೇಷನ್‌ ಮೈದಾನದಲ್ಲಿ ಮೊದಲ ಪಂದ್ಯ ನಡೆಯಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಈವರೆಗೆ 26 ಅಂತಾರಾಷ್ಟ್ರೀಯ T20 ಪಂದ್ಯಗಳು ನಡೆದಿದ್ದು, ಭಾರತ 15 ರಲ್ಲಿ ಮತ್ತು ಆಸ್ಟ್ರೇಲಿಯಾ 10ರಲ್ಲಿ ಗೆಲುವು ಸಾಧಿಸಿದೆ. 1 ಪಂದ್ಯ ಫಲಿತಾಂಶವಿಲ್ಲದೇ ರದ್ದಾಗಿದೆ. ಇದನ್ನೂ ಓದಿ: ಟಿ20-ಐಗೆ ರೋಹಿತ್ ಶರ್ಮಾ ನಿವೃತ್ತಿ? ಬಿಸಿಸಿಐ ಜೊತೆ ಚರ್ಚೆ

    ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್​ ಯಾದವ್​ (Suryakumar Yadav) ತಂಡದ ನಾಯಕರಾಗಿದ್ದು, ವಿಶ್ವಕಪ್ ಆಡಿರುವ ಭಾರತ ತಂಡದ ಎಲ್ಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಆದ್ರೆ ಸೂರ್ಯಕುಮಾರ್‌ ಯಾದವ್‌ ಜೊತೆಗೆ ಇಶಾನ್‌ ಕಿಶನ್‌ ಮತ್ತು ಕನ್ನಡಿಗ ಪ್ರಸಿದ್ಧ್​ ಕೃಷ್ಣಗೆ ಸ್ಥಾನ ಸಿಕ್ಕಿದೆ. ಶ್ರೇಯಸ್‌ ಅಯ್ಯರ್‌ (Shreyas Iyer) ಕೊನೆಯ ಎರಡು ಪಂದ್ಯ ಆಡಲಿದ್ದು, ಈ ಅವಧಿಯಲ್ಲಿ ಉಪನಾಯಕನ ಸ್ಥಾನ ತುಂಬಲಿದ್ದಾರೆ. ಮೊದಲ 3 ಪಂದ್ಯಗಳಿಗೆ ಏಷ್ಯನ್ ಗೇಮ್ಸ್​ನ ಕ್ರಿಕೆಟ್​ ತಂಡದ ನಾಯಕತ್ವ ವಹಿಸಿದ್ದ ಋತುರಾಜ್ ಗಾಯಕ್ವಾಡ್​ಗೆ ಉಪನಾಯಕನ ಸ್ಥಾನ ನೀಡಲಾಗಿದೆ.

    ಈ ಸರಣಿಗೆ ಭಾರತದ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ (VVS Laxman) ಅವರನ್ನು ಮುಖ್ಯ ಕೋಚ್ ಆಗಿ ನೇಮಿಸಲಾಗಿದೆ. ಐರ್ಲೆಂಡ್ ಸರಣಿ ಆಡಿದ ಬಹುಪಾಲು ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಸದ್ಯ ಏಕದಿನ ಕ್ರಿಕೆಟ್‌ನಲ್ಲಿ ಸಂಪೂರ್ಣ ಫ್ಲಾಪ್‌ ಪ್ರದರ್ಶನ ಮುಂದುವರಿಸಿದ ಸೂರ್ಯಕುಮಾರ್‌ ಯಾದವ್‌ ಟಿ20 ಕ್ರಿಕೆಟ್‌ನಲ್ಲಿ ಯಾವ ರೀತಿ ಅಬ್ಬರಿಸುತ್ತಾರೆ ಎಂಬುದು ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದೆ. ಇದನ್ನೂ ಓದಿ: ಆಸ್ಟ್ರೇಲಿಯಾಗೆ ಬಂದಿಳಿದ ಚಾಂಪಿಯನ್ ಪ್ಯಾಟ್ ಕಮ್ಮಿನ್ಸ್- ಸ್ವಾಗತಿಸಲು ಜನವೇ ಇಲ್ಲ

    ಭಾರತ ತಂಡ:
    ಸೂರ್ಯಕುಮಾರ್ ಯಾದವ್ (ನಾಯಕ), ಋತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಶ್​ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್

    ಆಸೀಸ್‌ ತಂಡ:
    ಸ್ವೀವ್‌ ಸ್ಮಿತ್‌, ಶಾರ್ಟ್‌, ಆರೋನ್‌ ಹಾರ್ಡಿ, ಜೋಸ್‌ ಇಂಗ್ಲಿಸ್‌, ಮಾರ್ಕಸ್‌ ಸ್ಟೋಯ್ನಿಸ್‌, ಡೇವಿಡ್‌, ಮ್ಯಾಥ್ಯೂ ವೇಡ್‌ (ನಾಯಕ), ಶಾನ್‌ ಅಬ್ಬಾಟ್‌, ಎಲ್ಲೀಸ್‌, ಬೆಹ್ರೆನ್‌ ಡಾರ್ಫ್‌, ತನ್ವೀರ್‌ ಸಂಘ.

    ಯಾವ ದಿನ-ಎಲ್ಲಿ ಪಂದ್ಯ?
    ನ.23 – ವಿಶಾಖಪಟ್ಟಣ
    ನ.26 – ತಿರುವನಂತಪುರಂ
    ನ.28 – ಗುವಾಹಟಿ
    ಡಿ.1 – ರಾಯ್‌ಪುರ
    ಡಿ.3 – ಬೆಂಗಳೂರು

  • ಟಿ20-ಐಗೆ ರೋಹಿತ್ ಶರ್ಮಾ ನಿವೃತ್ತಿ? ಬಿಸಿಸಿಐ ಜೊತೆ ಚರ್ಚೆ

    ಟಿ20-ಐಗೆ ರೋಹಿತ್ ಶರ್ಮಾ ನಿವೃತ್ತಿ? ಬಿಸಿಸಿಐ ಜೊತೆ ಚರ್ಚೆ

    ನವದೆಹಲಿ: 2023ರ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ  (World Cup) ಭಾರತ ಸೋತು ವಾರ ಕಳೆಯುವ ಮೊದಲೇ ರೋಹಿತ್ ಶರ್ಮಾ (Rohit Sharma) ಅವರ ನಿವೃತ್ತಿ ಬಗ್ಗೆ ಭಾರೀ ಚರ್ಚೆ ಆರಂಭವಾಗಿದೆ. ರೋಹಿತ್ ನಿವೃತ್ತಿ ಬಗ್ಗೆ ಬಿಸಿಸಿಐ (BCCI) ಬಳಿ ಈಗಾಗಲೇ ಮಾತಾಡಿದ್ದಾರೆ ಎಂದು ವರದಿಯಾಗಿದೆ.

    ಟೀಂ ಇಂಡಿಯಾದ ಉತ್ತಮ ಬ್ಯಾಟರ್‌ಗಳಲ್ಲಿ ಒಬ್ಬರಾದ ರೋಹಿತ್, ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‍ನಲ್ಲಿ ಮುಂದುವರಿಯುದಿಲ್ಲ ಎಂಬ ಮಾತುಗಳು ಕೇಳಿ ಬಂದಿವೆ. ಅಲ್ಲದೇ ಟೀಂ ಇಂಡಿಯಾದ ಟಿ20 ತಂಡಕ್ಕೆ ಪರಿಗಣಿಸದೇ ಇದ್ದರೂ ಸಮಸ್ಯೆ ಇಲ್ಲ ಎಂದು ರೋಹಿತ್ ಹೇಳಿಕೊಂಡಿದ್ದಾಗಿ ವರದಿಯಾಗಿದೆ. 2021ರಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‍ನಲ್ಲಿ ಭಾರತ ತಂಡದ ನಾಯಕತ್ವ ವಹಿಸಿಕೊಂಡಿದ್ದ ರೋಹಿತ್ ಶರ್ಮಾ 2023ರ ಏಷ್ಯಾ ಕಪ್‍ನಲ್ಲಿ ಮಾತ್ರ ಗೆಲುವು ಸಾಧಿಸಿದ್ದರು. ಇದನ್ನೂ ಓದಿ: ಆಸ್ಟ್ರೇಲಿಯಾಗೆ ಬಂದಿಳಿದ ಚಾಂಪಿಯನ್ ಪ್ಯಾಟ್ ಕಮ್ಮಿನ್ಸ್- ಸ್ವಾಗತಿಸಲು ಜನವೇ ಇಲ್ಲ

    ಸದ್ಯಕ್ಕೆ ರೋಹಿತ್ ಟೆಸ್ಟ್ ಕ್ರಿಕೆಟ್ ಕಡೆಗೆ ತಮ್ಮ ಗಮನ ನೀಡುವ ಸಾಧ್ಯತೆ ಹೆಚ್ಚಿದೆ. 3ನೇ ಆವೃತ್ತಿಯ ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್‍ಷಿಪ್ ಟೂರ್ನಿಯ ಫೈನಲ್ ಕೂಡ 2025ರಲ್ಲೇ ನಡೆಯಲಿದೆ. ಹೀಗಾಗಿ ತಂಡದಲ್ಲಿ ಇದ್ದು, ಭವಿಷ್ಯದ ಕ್ಯಾಪ್ಟನ್‍ನ ಬೆಳೆಸುವ ಜವಾಬ್ದಾರಿ ರೋಹಿತ್ ಮೇಲಿರಲಿದೆ. ರೋಹಿತ್ ಶರ್ಮಾ ಗಾಯದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದೇ ಕಾರಣಕ್ಕೆ ಹೊಸ ನಾಯಕನ ಆಯ್ಕೆಗೆ ಸಿದ್ಧತೆ ನಡೆದಿದೆ ಎನ್ನಲಾಗಿದೆ.

    ಈ ವಿಶ್ವಕಪ್‍ನಲ್ಲಿ ಬೌಲರ್‌ಗಳ ಸರಾಸರಿ ಬೌಲಿಂಗ್ ರ‍್ಯಾಂಕ್‌ನಲ್ಲಿ ರೋಹಿತ್ ಶರ್ಮಾ ಮೊದಲ ಸ್ಥಾನ ಪಡೆದಿದ್ದಾರೆ. ರೋಹಿತ್ ಶರ್ಮಾ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನೆದರ್‍ಲ್ಯಾಂಡ್ರ್ಸ್ ವಿರುದ್ಧ 1 ಓವರ್ ಎಸೆದು 7 ರನ್ ಬಿಟ್ಟುಕೊಟ್ಟು 1 ವಿಕೆಟ್ ಪಡೆದಿದ್ದರು. ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪೈಕಿ ವಿರಾಟ್ ಕೊಹ್ಲಿ 765 ರನ್ ಹೊಡೆದು ಮೊದಲ ಸ್ಥಾನ ಪಡೆದರೆ 597 ರನ್ ಹೊಡೆಯುವ ಮೂಲಕ ರೋಹಿತ್ ಶರ್ಮಾ ಎರಡನೇ ಸ್ಥಾನ ಪಡೆದಿದ್ದಾರೆ. ಇದನ್ನೂ ಓದಿ: ಲಕ್ನೋ ಬಿಟ್ಟು ಕೋಲ್ಕತ್ತ ಸೇರಿದ ಗಂಭೀರ್‌

  • ಫೈನಲ್‌ ನೋಡುವಾಗ ಟಿವಿ ಸ್ವಿಚ್‌ ಆಫ್‌ – ಸಿಟ್ಟಾಗಿ ತಂದೆಯಿಂದಲೇ ಮಗನ ಕೊಲೆ

    ಫೈನಲ್‌ ನೋಡುವಾಗ ಟಿವಿ ಸ್ವಿಚ್‌ ಆಫ್‌ – ಸಿಟ್ಟಾಗಿ ತಂದೆಯಿಂದಲೇ ಮಗನ ಕೊಲೆ

    ಲಕ್ನೋ: ಭಾರತ (India) ಆಸ್ಟ್ರೇಲಿಯಾ (Australia) ನಡುವಿನ ವಿಶ್ವಕಪ್‌ (World Cup Cricket Final) ಪಂದ್ಯದ ವೇಳೆ ಟಿವಿ ಸ್ವಿಚ್‌ ಆಫ್‌ ಮಾಡಿದ್ದಕ್ಕೆ ತಂದೆಯೇ ಮಗನನ್ನು ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

    ಫೈನಲ್‌ ಪಂದ್ಯವನ್ನು ತಂದೆ ಗಣೇಶ್‌ ಪ್ರಸಾದ್‌ ಟಿವಿಯಲ್ಲಿ ವೀಕ್ಷಿಸುತ್ತಿದ್ದ. ಈ ವೇಳೆ ಪುತ್ರ ದೀಪಕ್‌ ರಾತ್ರಿಯ ಊಟಕ್ಕೆ ಆಹಾರ ಸಿದ್ಧಪಡಿಸುವಂತೆ ಹೇಳಿದ್ದಾನೆ.


    ಮಗನ ಮಾತಿಗೆ ಗಣೇಶ್‌ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ ಮತ್ತು ಕ್ರಿಕೆಟ್‌ ನೋಡುವುದರಲ್ಲಿ ಮಗ್ನನಾಗಿದ್ದ. ತನ್ನ ಮಾತಿಗೆ ಸ್ಪಂದಿಸದ್ದಕ್ಕೆ ಸಿಟ್ಟಾದ ಮಗ ಟಿವಿಯನ್ನೇ ಸ್ವಿಚ್‌ ಆಫ್‌ ಮಾಡಿದ್ದಾನೆ. ಸ್ವಿಚ್‌ ಆಫ್‌ ಮಾಡಿದ ನಂತರ ತಂದೆ ಮತ್ತು ಮಗನ ಮಧ್ಯೆ ಜಗಳ ನಡೆದಿದೆ.

    ಜಗಳ ವಿಕೋಪಕ್ಕೆ ಹೋಗಿದ್ದು ತಂದೆ ಎಲೆಕ್ಟ್ರಿಕ್‌ ಕೇಬಲ್‌ ವಯರ್‌ನಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ನಂತರ ಸ್ಥಳದಿಂದ ಪರಾರಿಯಾಗಿದ್ದ. ಖಚಿತ ಮಾಹಿತಿ ಪಡೆದ ಪೊಲೀಸರು ಗಣೇಶ್‌ ಪ್ರಸಾದ್‌ನನ್ನು ಬಂಧಿಸಿದ್ದಾರೆ.

    ರೈತ ಗಣೇಶ ಪ್ರಸಾದ್‌ ಮದ್ಯವ್ಯಸನಿಯಾಗಿದ್ದ. ಈ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಮತ್ತು ಮಗನ ಮಧ್ಯೆ ಜಗಳ ನಡೆಯುತ್ತಲೇ ಇತ್ತು. ಫೈನಲ್‌ ಕ್ರಿಕೆಟ್‌ ಪಂದ್ಯ ನೋಡುವಾಗ ನಡೆದ ಜಗಳದಿಂದ ಈ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.