ಮುಂಬೈ: ಏಕದಿನ ವಿಶ್ವಕಪ್‍ನಲ್ಲಿ (World Cup) ರನ್‍ಗಳ ಮಳೆ ಸುರಿಸುತ್ತಿರುವ ವಿರಾಟ್ ಕೊಹ್ಲಿ ದಾಖಲೆಗಳ ಕುದುರೆಯ ಬೆನ್ನೇರಿದ್ದಾರೆ. ಈ ಬಾರಿ ಈಗಾಗಲೇ 5 ಅರ್ಧಶತಕ ಮತ್ತು 2 ಶತಕ ಬಾರಿಸಿ, ಹಲವು ದಾಖಲೆಗಳನ್ನ ಬದಿಗಿರಿಸಿದ್ದಾರೆ. ಇಂದಿನ ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್‍ನಲ್ಲೂ ಹಲವು ದಾಖಲೆಗಳನ್ನು ಮುರಿಯಲು ಕೊಹ್ಲಿ ಸಜ್ಜಾಗಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಸೆಂಚುರಿ ಸಿಡಿಸಲು ವಿಫಲರಾಗಿದ್ದರು. ಈ ವೇಳೆ ತೆಂಡೂಲ್ಕರ್ (Sachin Tendulkar) ಅವರ ಶತಕಗಳ ದಾಖಲೆಯನ್ನ ಮುರಿಯುತ್ತಾರೆ ಎಂಬ ಅಭಿಮಾನಿಗಳ ನಿರೀಕ್ಷೆಗೆ ತಣ್ಣೀರು ಬಿದ್ದಿತ್ತು. ಪಂದ್ಯದಲ್ಲಿ ಕೊಹ್ಲಿ ಅರ್ಧಶತಕ ಬಾರಿಸಿ ಅಂಗಳ ತೊರೆದಿದ್ದರು. ಇದನ್ನೂ ಓದಿ: India Vs New Zealand – ಕೊಹ್ಲಿ, ಕೇನ್ ವಿಲಿಯಮ್ಸನ್ ವಿಶೇಷ ಸಾಧನೆ
ಇಂದಿನ ಪಂದ್ಯದಲ್ಲಿ ಕೊಹ್ಲಿ ಶತಕ ಸಿಡಿಸಿದರೆ ಏಕದಿನ ಕ್ರಿಕೆಟ್‍ನಲ್ಲಿ 50 ಶತಕಗಳ ದಾಖಲೆ ನಿರ್ಮಿಸಲಿದ್ದಾರೆ. ಸಚಿನ್ ತವರಲ್ಲೇ ಅವರ ದಾಖಲೆಯನ್ನು ಕೊಹ್ಲಿ ಮುರಿಯಲಿದ್ದಾರೆ.
ಸಚಿನ್ ಶತಕಗಳ ಜೊತೆಗೆ ಅವರ ವಿಶ್ವಕಪ್ ಟೂರ್ನಿ ಒಂದರಲ್ಲಿ ಅತೀ ಹೆಚ್ಚು ರನ್ ಗಳಿಸುವ ಅವಕಾಶ ಕೊಹ್ಲಿಗಿದೆ. 2003ರ ವಿಶ್ವಕಪ್‍ನಲ್ಲಿ ಸಚಿನ್ 673 ರನ್ಗಳಿಸಿದ್ದರು. ಈ ಮೂಲಕ ವಿಶ್ವಕಪ್ ಟೂರ್ನಿಯೊಂದರಲ್ಲಿ ಅತಿಹೆಚ್ಚು ರನ್ ದಾಖಲಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. 20 ವರ್ಷ ಕಳೆದರೂ ಈ ದಾಖಲೆ ಇನ್ನೂ ಸಚಿನ್ ಹೆಸರಿನಲ್ಲೇ ಇದೆ.
ಕೊಹ್ಲಿಗೆ ಮಾಸ್ಟರ್ ಬ್ಲಾಸ್ಟರ್‍ನ ಈ ದಾಖಲೆ ಬ್ರೇಕ್ ಮಾಡಲು ಕೇವಲ 80 ರನ್ ಬೇಕಾಗಿದೆ. ಈ ವಿಶ್ವಕಪ್ ಕೊಹ್ಲಿ ಈವರೆಗೂ ಆಡಿರೋ 9 ಪಂದ್ಯಗಳಿಂದ 594 ರನ್ ಕಲೆಹಾಕಿದ್ದಾರೆ. ಆ ಮೂಲಕ ಟೂರ್ನಿಯಲ್ಲಿ ಅತೀ ಹೆಚ್ಚು ರನ್ ಗಳಿಸಿರೋ ಬ್ಯಾಟ್ಸ್‍ಮನ್‍ಗಳ ಪಟ್ಟಿಯಲ್ಲಿ ನಂಬರ್ ಒನ್ ಪಟ್ಟದಲ್ಲಿದ್ದಾರೆ. ಇದನ್ನೂ ಓದಿ: ಸೆಮಿ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾ ಭಾರತ?
ಮುಂಬೈ: ಈ ಬಾರಿಯ ವಿಶ್ವಕಪ್‌ನ ಹಾಟ್ ಫೇವರೇಟ್ ಭಾರತ ತಂಡ (Team India) ಇಂದು ವಿಶ್ವಕಪ್‌ನ (World Cup) ಮೊದಲ ಸೆಮಿ ಫೈನಲ್‌ನಲ್ಲಿ (Semi Final) ನ್ಯೂಜಿಲೆಂಡ್ (New Zealand) ತಂಡವನ್ನು ಎದುರಿಸಲಿದೆ. ಕಳೆದ ಬಾರಿಯ ವಿಶ್ವಕಪ್ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲುವ ಮೂಲಕ ನಿರಾಸೆ ಅನುಭವಿಸಿದ್ದ ಭಾರತ ತಂಡ, ಈ ಬಾರಿ ಅದೇ ತಂಡದ ವಿರುದ್ದ ಸೆಮಿಫೈನಲ್ ಆಡುತ್ತಿದ್ದು, ಈ ಬಾರಿ ಗೆಲುವಿನ ಮೂಲಕ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.
ಏಕದಿನ ವಿಶ್ವಕಪ್ ಮಹಾ ಸಂಗ್ರಾಮ ಉಪಾಂತ್ಯಕ್ಕೆ ಬಂದಾಗಿದೆ. ಬಲಿಷ್ಠ ನಾಲ್ಕು ತಂಡಗಳ ಕಾದಾಟಕ್ಕೆ ರಣಾಂಗಣ ಕೂಡ ಸಜ್ಜಾಗಿದೆ. ಆದರೆ, ಈ ಬಾರಿಯ ಸೆಮಿಫೈನಲ್‌ನ ಮೊದಲ ಪಂದ್ಯ ಕೇವಲ ಪಂದ್ಯವಾಗಿ ಉಳಿದಿಲ್ಲ. ಬದಲಾಗಿ ಕಿವೀಸ್ ಪಡೆಯ ವಿರುದ್ಧ ಭಾರತ ತಂಡದ ಸೇಡಿನ ಸಮರವಾಗಿದೆ. ಐಸಿಸಿ (ICC) ಟೂರ್ನಿಯಲ್ಲಿ ಭಾರತ ತಂಡಕ್ಕೆ ಕಿವೀಸ್ ನೀಡಿದ ಆ ಎರಡು ಬ್ಯಾಕ್ ಟು ಬ್ಯಾಕ್ ಶಾಕ್ ಇನ್ನೂ ಕೂಡ ಭಾರತೀಯ ಕ್ರಿಕೆಟ್ ಪ್ರೇಮಿಗಳ ಮನದಲ್ಲಿ ಅಚ್ಚಾಗಿ ಉಳಿದಿದ್ದು, ಈ ಬಾರಿಯ ವಿಶ್ವಕಪ್ ಸೆಮಿಸ್‌ನಲ್ಲಿ ಮುಯ್ಯಿ ತೀರಿಸಿಕೊಳ್ಳುವ ಮೂಲಕ ಟೀಂ ಇಂಡಿಯಾ ಕೂಡ ಹಳೇ ನೋವು ಮರೆಸುವ ನಿಟ್ಟಿನಲ್ಲಿ ಸಜ್ಜಾಗಿದೆ. ಇದನ್ನೂ ಓದಿ: ಅಭಿಮಾನಿಯ ಹೃದಯ ಬಡಿತ ನಿಲ್ಲಿಸಿತ್ತು, ವಿಶ್ವಕಪ್ ಕನಸನ್ನೇ ಭಗ್ನಗೊಳಿಸಿತ್ತು ಆ ಒಂದು ರನೌಟ್..!
2019ರ ವಿಶ್ವಕಪ್ ಸೆಮಿಫೈನಲ್ ಪಂದ್ಯ ಭಾರತೀಯರು ಇಂದಿಗೂ ಆ ಸೋಲಿನ ನೋವು ಮರೆತಿಲ್ಲ. 2019ರಲ್ಲಿ ಇಂಗ್ಲೆಂಡ್ ನೆಲದಲ್ಲಿ ಟೀಮ್ ಇಂಡಿಯಾವನ್ನು ಮಣಿಸಿದ್ದ ನ್ಯೂಜಿಲೆಂಡ್, ಕೋಟ್ಯಂತರ ಅಭಿಮಾನಿಗಳ ಕನಸು ನುಚ್ಚುನೂರು ಮಾಡಿತ್ತು. ಇದಕ್ಕೆಲ್ಲಾ ಕಾರಣ ಧೋನಿಯ (MS Dhoni) ಆ ಒಂದೇ ಒಂದು ರನೌಟ್. ಆ ಪಂದ್ಯದಲ್ಲಿ ಕೊನೆಯ ಓವರ್‌ಗಳಲ್ಲಿ ಎಡವಿದ್ದ ಭಾರತ ತಂಡ ಸೆಮಿಸ್‌ನಲ್ಲಿ ಸೋಲುವ ಮೂಲಕ ಮೂರನೇ ಬಾರಿ ಪ್ರಶಸ್ತಿ ಗೆಲ್ಲುವ ಕನಸು ಕನಸಾಗೇ ಉಳಿದಿತ್ತು. ಕ್ರಿಕೆಟ್ ಪ್ರೇಮಿಗಳಿಗೆ ಈ ನೋವು ಮಾಸುವ ಮುನ್ನವೇ ಟೆಸ್ಟ್ ಚಾಂಪಿಯನ್ ಶಿಪ್‌ನಲ್ಲೂ ಕೂಡ ಭಾರತಕ್ಕೆ ನ್ಯೂಜಿಲೆಂಡ್ ಶಾಕ್ ನೀಡಿ ಚಾಂಪಿಯನ್ ಆಗಿ ಗೆದ್ದು ಬೀಗಿತ್ತು. ಆ ಎರಡು ಸೋಲುಗಳಿಗೆ ಇಂದು ಮುಯ್ಯಿ ತೀರಿಸಿಕೊಳ್ಳುವ ಸಮಯ ಬಂದಿದ್ದು, ಟೀ ಇಂಡಿಯಾ ಕೂಡ ಭರ್ಜರಿ ತಯಾರಿ ನಡೆಸಿದೆ. ಇದನ್ನೂ ಓದಿ: 1,20,000 ರೂ.ಗೆ ಭಾರತ-ನ್ಯೂಜಿಲೆಂಡ್ ಸೆಮಿಫೈನಲ್ ಟಿಕೆಟ್ ಮಾರಾಟ – ಓರ್ವ ಅರೆಸ್ಟ್
ಇನ್ನೂ ಐಸಿಸಿ ವಿಶ್ವಕಪ್ 2023ರಲ್ಲಿ ನ್ಯೂಜಿಲೆಂಡ್ ತಂಡಕ್ಕೆ ಹೋಲಿಸಿದರೆ ಭಾರತ ಬಲಿಷ್ಠ ತಂಡವೇ ಆಗಿದೆ. ಆದರೆ ಉಭಯ ತಂಡಗಳ ವಿಶ್ವಕಪ್ ಮುಖಾಮುಖಿಯಲ್ಲಿ ಕಿವೀಸ್ ಬಲಿಷ್ಠವಾಗಿದೆ. 2003ರ ವಿಶ್ವಕಪ್‌ನಲ್ಲಿ ಕಿವೀಸ್ ವಿರುದ್ಧ ಭಾರತ ಕೊನೆಯ ಬಾರಿಗೆ ಜಯ ಸಾಧಿಸಿತ್ತು. ಆ ಬಳಿಕ 2007, 2011 ಮತ್ತು 2015ರ ವಿಶ್ವಕಪ್ ಆವೃತ್ತಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಆಡಿರಲಿಲ್ಲ. ಒಟ್ಟು 10 ಪಂದ್ಯಗಳಲ್ಲಿ ನ್ಯೂಜಿಲೆಂಡ್ ಐದು ಪಂದ್ಯಗಳನ್ನು ಗೆದ್ದರೆ ಭಾರತ ನಾಲ್ಕು ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಟೈ ಆಗಿದೆ. ಆದರೆ ಕ್ರಿಕೆಟ್ ಪಂಡಿತರ ಪ್ರಕಾರ ಈ ಅಂಕಿ ಅಂಶ ಈ ಬಾರಿ ದೊಡ್ಡ ಮಟ್ಟಿಗೆ ವರ್ಕೌಟ್ ಆಗಿಲ್ಲ ಅನ್ನೋದು ಅವರ ಲೆಕ್ಕಾಚಾರ. ಇದನ್ನೂ ಓದಿ: ನನ್ನ ಮಗನ ಹೆಸರಿಗೂ ದ್ರಾವಿಡ್-ಸಚಿನ್ ಹೆಸರಿಗೂ ಸಂಬಂಧವಿಲ್ಲ: ಕ್ರಿಕೆಟಿಗ ರಚಿನ್ ತಂದೆ
ಇನ್ನೂ ಈಗಾಗಲೇ ಅಜೇಯವಾಗಿ ಉಪಾಂತ್ಯಕ್ಕೆ ತಲುಪಿರೋ ಟೀ ಇಂಡಿಯಾ ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ಮೂರು ವಿಭಾಗದಲ್ಲೂ ಬಲಿಷ್ಠವಾಗಿಯೇ ಇದೆ. ಜೊತೆಗೆ ಈಗಾಗಲೇ ಕಳೆದ ಪಂದ್ಯಗಳಲ್ಲಿ ಆಡಿದ್ದ 11ರ ಬಳಗದಲ್ಲಿ ಕಾಣಿಸಿಕೊಂಡಿದ್ದ ಆಟಗಾರರು ಉತ್ತಮ ಪ್ರದರ್ಶನ ನೀಡಿದ್ದು, ಹೀಗಾಗಿ ಇವತ್ತಿನ ಪಂದ್ಯದಲ್ಲಿ ಆಡುವ 11ರ ಬಳಗದಲ್ಲಿ ಬಹುತೇಕ ಬದಲಾವಣೆ ಸಾಧ್ಯತೆ ಕಡಿಮೆ ಇದೆ. ಇತ್ತ ನ್ಯೂಜಿಲೆಂಡ್ ಕೂಡ ಲೀಗ್ ಹಂತದ ಕೊನೆಯ ಪಂದ್ಯಗಳಲ್ಲಿ ಕೊಂಚ ಎಡವಿತ್ತು. ಆದರೆ ಸೆಮಿಸ್‌ಗೆ ಬರುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಇಂದು ಮುಂಬೈನ (Mumbai) ವಾಂಖೆಡೆ ಸ್ಟೇಡಿಯಂನಲ್ಲಿ (Wankhede Stadium) ನಡೆಯಲಿರುವ ಪಂದ್ಯದಲ್ಲಿ ಬಲಿಷ್ಠ ಭಾರತವನ್ನು ಎದುರಿಸಲು ಕಿವೀಸ್ ಕೂಡ ಉತ್ತಮ ಸ್ಟ್ರಾಟಜಿಯೊಂದಿಗೆ ಕಣಕ್ಕಿಳಿಯಲಿದೆ. ಇದನ್ನೂ ಓದಿ: World Cup: ಈ ದಾಖಲೆ ಬರೆದ ಭಾರತದ ಮೊದಲ ಕ್ಯಾಪ್ಟನ್ ರೋಹಿತ್ ಶರ್ಮಾ
ಬೆಂಗಳೂರು: 2019ರ ಜುಲೈ 9 ರಂದು ನ್ಯೂಜಿಲೆಂಡ್ (New Zealand) ವಿರುದ್ಧ ನಡೆದ ವಿಶ್ವಕಪ್ (World Cup) ಸೆಮಿಫೈನಲ್ (Semi-Final) ಪಂದ್ಯದಲ್ಲಿ ಎಂ.ಎಸ್ ಧೋನಿ (MS Dhoni) ಕೊನೆಯ ಕ್ಷಣದಲ್ಲಿ ರನೌಟ್‌ಗೆ ತುತ್ತಾದರು. ಈ ರನೌಟ್ ಇಡೀ ವಿಶ್ವಕಪ್ ಗೆಲ್ಲುವ ಕನಸನ್ನೇ ನುಚ್ಚುನೂರು ಮಾಡಿತ್ತು. ಕೋಟ್ಯಂತರ ಅಭಿಮಾನಿಗಳಲ್ಲೂ ನೋವುಂಟುಮಾಡಿತ್ತು. ಮೊಬೈಲ್‌ನಲ್ಲಿ ಈ ದೃಶ್ಯ ನೋಡುತ್ತಿದ್ದಂತೆ ಕೋಲ್ಕತ್ತಾದಲ್ಲಿ (Kolkata) ಕ್ರಿಕೆಟ್ ಅಭಿಮಾನಿಯೊಬ್ಬ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದರು.
ಅಂದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ ತಂಡ 8 ವಿಕೆಟ್ ನಷ್ಟಕ್ಕೆ 239 ರನ್ ಗಳಿಸಿತ್ತು. ನೆರೆದಿದ್ದ ಅಭಿಮಾನಿಗಳು ಗೆಲುವು ಟೀಂ ಇಂಡಿಯಾದ್ದೇ (India) ಎಂದು ಬೀಗುತ್ತಿದ್ದರು. ಗೆಲ್ಲಲು 240 ರನ್ ಗಳ ಗುರಿಯನ್ನು ಪಡೆದ ಭಾರತ 49.3 ಓವರ್ ಗಳಲ್ಲಿ 221 ರನ್ ಗಳಿಗೆ ಆಲೌಟ್ ಆಗಿ ಸೋಲನ್ನು ಒಪ್ಪಿಕೊಂಡಿತು. ಆರಂಭದಲ್ಲಿ 5 ರನ್ ಗಳಿಗೆ ಮೂರು ವಿಕೆಟ್ ಕಳೆದುಕೊಂಡು 92 ರನ್‌ಗಳಿಗೆ 6 ವಿಕೆಟ್ ಉರುಳಿದಾಗ ನ್ಯೂಜಿಲೆಂಡ್ ಸುಲಭವಾಗಿ ಗೆಲ್ಲುವ ಸಾಧ್ಯತೆ ಇತ್ತು. ಆದರೆ ಜಡೇಜಾ ಮತ್ತು ಧೋನಿ 7ನೇ ವಿಕೆಟಿಗೆ 116 ರನ್ ಜೊತೆಯಾಟವಾಡಿ ಭಾರತವನ್ನು ಗೆಲುವಿನ ಸನಿಹಕ್ಕೆ ತಂದಿಟ್ಟಿದ್ದರು. ಇದನ್ನೂ ಓದಿ: ನನ್ನ ಮಗನ ಹೆಸರಿಗೂ ದ್ರಾವಿಡ್-ಸಚಿನ್ ಹೆಸರಿಗೂ ಸಂಬಂಧವಿಲ್ಲ: ಕ್ರಿಕೆಟಿಗ ರಚಿನ್ ತಂದೆ
5 ಓವರ್ ಗಳಲ್ಲಿ 52 ರನ್ ಗಳಿಸುವ ಒತ್ತಡದಲ್ಲಿ ಸಿಲುಕಿದ್ದ ಸಂದರ್ಭದಲ್ಲಿ ಜಡೇಜಾ ತಂಡವನ್ನು ಗೆಲುವಿನ ಸನಿಹ ಕೊಂಡ್ಯೊಯುವ ಪ್ರಯತ್ನ ನಡೆಸಿದರು. 46ನೇ ಓವರಿನಲ್ಲಿ ಬೌಂಡರಿ ಸಮೇತ 10 ರನ್ ಗಳಿಸಿದ ಈ ಜೋಡಿ 7ನೇ ವಿಕೆಟ್‌ಗೆ ಶತಕದ ಜೊತೆಯಾಟ ನೀಡಿದರು. 122 ಎಸೆತಗಳಲ್ಲಿ ಈ ಜೋಡಿ 116 ರನ್ ಗಳಿಸಿತು. ಆದರೆ ಅಂತಿಮ ಹಂತದಲ್ಲಿ ಸಿಕ್ಸರ್ ಸಿಡಿಸಲು ಯತ್ನಿಸಿದ ಜಡೇಜಾ 59 ಎಸೆತಗಳಲ್ಲಿ 77 ರನ್ (4 ಬೌಂಡರಿ, 4 ಸಿಕ್ಸರ್) ಗಳಿಸಿ ಟ್ರೆಂಟ್ ಬೋಲ್ಟ್ ಗೆ ವಿಕೆಟ್ ಒಪ್ಪಿಸಿದರು. ಇತ್ತ ಜಡೇಜಾ ನಿರ್ಗಮನದೊಂದಿಗೆ ತಂಡದ ಗೆಲುವಿನ ಆಸರೆಯಾಗಿದ್ದ ಧೋನಿ 50 ರನ್ (72 ಎಸೆತ, 1 ಬೌಂಡರಿ, 1ಸಿಕ್ಸರ್) ಸಿಡಿಸಿ ರನೌಟ್ ಆದರು. ಇದನ್ನೂ ಓದಿ: ಹೀನಾಯ ಸೋಲಿನ ಬೆನ್ನಲ್ಲೇ ಪಾಕ್‌ಗೆ ಮತ್ತೆ ಶಾಕ್ – ಗುಡ್‌ಬೈ ಹೇಳಿದ ಬೌಲಿಂಗ್ ಕೋಚ್
ಸೆಮಿಫೈನಲ್ ಪಂದ್ಯದಲ್ಲಿ ಕೊನೆಯ 10 ಎಸೆತಗಳಲ್ಲಿ 25 ರನ್ ಬೇಕಿದ್ದಾಗ 48ನೇ ಓವರ್‌ನ 3ನೇ ಎಸೆತದಲ್ಲಿ ಧೋನಿ 2 ರನ್ ಕದಿಯಲು ಪ್ರಯತ್ನಿಸಿದರು. ಆದ್ರೆ ಫೀಲ್ಡಿಂಗ್‌ನಲ್ಲಿದ್ದ ಮಾರ್ಟಿನ್ ಗಪ್ಟಿಲ್ ಎಸೆದ ಡೈರೆಕ್ಟ್ ವಿಕೆಟ್ ಥ್ರೋ ಗೆ ಧೋನಿ ರನೌಟ್ ಆಗಿದ್ದರು. ಈ ಮೂಲಕ ಭಾರತದ ವಿಶ್ವಕಪ್ ಕನಸು ಭಗ್ನಗೊಂಡಿತ್ತು. ಅಲ್ಲದೇ ಅದು ಧೋನಿ ಅವರ ಕ್ರಿಕೆಟ್ ವೃತ್ತಿ ಜೀವನದ ಕೊನೆಯ ವಿಶ್ವಕಪ್ ಟೂರ್ನಿಯೂ ಆಗಿತ್ತು. ಇದನ್ನೂ ಓದಿ: World Cup: ಈ ದಾಖಲೆ ಬರೆದ ಭಾರತದ ಮೊದಲ ಕ್ಯಾಪ್ಟನ್ ರೋಹಿತ್ ಶರ್ಮಾ
ಇದೇ ಆವೃತ್ತಿಯಲ್ಲಿ ಧರ್ಮಶಾಲಾ ಕ್ರೀಡಾಂಗಣದಲ್ಲಿ ಕಿವೀಸ್ ನೀಡಿದ್ದ 274 ರನ್‌ಗಳ ಗುರಿ ಬೆನ್ನಟ್ಟಿ ಭಾರತ ಜಯ ಸಾಧಿಸಿತ್ತು. ಪ್ರಸ್ತುತ ವಿಶ್ವಕಪ್ ಟೂರ್ನಿಯಲ್ಲಿ ಸೋಲಿನ ಮುಖವನ್ನೇ ನೋಡದ ಟೀಂ ಇಂಡಿಯಾ ಇನ್ನೆರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ರೆ ವಿಶ್ವ ಏಕದಿನ ಕ್ರಿಕೆಟ್‌ಗೆ ಸಾಮ್ರಾಟನಾಗಲಿದೆ. ಕೋಟ್ಯಂತರ ಅಭಿಮಾನಿಗಳ ಆಶಯವೂ ಇದೇ ಆಗಿದೆ. ಇದನ್ನೂ ಓದಿ: World Cup 2023: ವಿಶ್ವದ ನಂ.1 T20 ಬ್ಯಾಟರ್‌ಗೆ ಬೆಸ್ಟ್ ಫೀಲ್ಡರ್ ಪ್ರಶಸ್ತಿ
ಮುಂಬೈ: ಭಾರತ (India) ಮತ್ತು ನ್ಯೂಜಿಲೆಂಡ್ (New Zealand) ನಡುವಿನ ವಿಶ್ವಕಪ್ (World Cup) ಸೆಮಿಫೈನಲ್ (Semi-Final) ಪಂದ್ಯದ ಟಿಕೆಟ್‌ಗಳನ್ನು (Ticket) ಬ್ಲ್ಯಾಕ್ ಮಾರ್ಕೆಟಿಂಗ್ ಮಾಡಿದ ಆರೋಪದ ಮೇಲೆ ಮುಂಬೈನಲ್ಲಿ (Mumbai) ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.
ರೋಷನ್ ಗುರುಬಕ್ಷನಿ ತಲಾ 1,20,000 ರೂ.ಗಳಿಗೆ ಟಿಕೆಟ್‌ಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತನಿಂದ ಎರಡು ಟಿಕೆಟ್ ವಶಪಡಿಸಿಕೊಳ್ಳಲಾಗಿದೆ. ರೋಷನ್ ಗುರುಬಕ್ಷನಿ ಮತ್ತು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟಿಕೆಟ್‌ಗಳ ಬ್ಲ್ಯಾಕ್ ಮಾರ್ಕೆಟಿಂಗ್‌ನಲ್ಲಿ ಭಾಗಿಯಾಗಿರುವ ಎರಡನೇ ಆರೋಪಿಯನ್ನು ಪತ್ತೆಹಚ್ಚಲು ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವಯನಾಡಿನಲ್ಲಿ ನಕ್ಸಲರು ಪೊಲೀಸರ ನಡುವೆ ಗುಂಡಿನ ಚಕಮಕಿ – ಕೊಡಗಿನಲ್ಲಿ ಹೈ ಅಲರ್ಟ್
ಮುಂಬೈನ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ ಪ್ರವೀಣ್ ಮುಂಢೆ ಅವರು ಕ್ರಿಕೆಟ್ ಅಭಿಮಾನಿಗಳು ವಿಶ್ವಕಪ್ ಪಂದ್ಯದ ಟಿಕೆಟ್‌ಗಳನ್ನು ಖರೀದಿಸುವಾಗ ಎಚ್ಚರಿಕೆ ವಹಿಸುವಂತೆ ಕೇಳಿಕೊಂಡಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಾಳೆ ನಡೆಯಲಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2023ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತವು ನ್ಯೂಜಿಲೆಂಡ್ ವಿರುದ್ಧ ಸೆಣಸಾಡಲಿದೆ.ಇದನ್ನೂ ಓದಿ: ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!
ಇಸ್ಲಾಮಾಬಾದ್: 2023ರ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಹೀನಾಯ ಸೋಲಿನೊಂದಿಗೆ ತವರಿಗೆ ಮರಳಿದ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ತಂಡದ ಮಾಜಿ ವೇಗಿ ಹಾಗೂ ಪಾಕ್ ತಂಡಕ್ಕೆ ಬೌಲಿಂಗ್ ಕೋಚ್ ಆಗಿದ್ದ ಮೊರ್ನೆ ಮೊರ್ಕೆಲ್ (Morne Morkel) ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಪ್ರಕಟಿಸಿದೆ.
ದಕ್ಷಿಣ ಆಫ್ರಿಕಾ ತಂಡದ ಮಾಜಿ ವೇಗಿಯೂ ಆಗಿದ್ದ ಮೊರ್ಕೆಲ್ ಪ್ರಸಕ್ತ ವರ್ಷದ ಜೂನ್ ತಿಂಗಳಲ್ಲಿ 6 ತಿಂಗಳ ಒಪ್ಪಂದದ ಮೇರೆಗೆ ಪಾಕಿಸ್ತಾನ ತಂಡಕ್ಕೆ ಬೌಲಿಂಗ್ ಕೋಚ್ (Pakistans Bowling Coach) ಆಗಿ ನೇಮಕಗೊಂಡಿದ್ದರು. ಶೀಘ್ರದಲ್ಲೇ ಮೊರ್ಕೆಲ್ ಸ್ಥಾನಕ್ಕೆ ಬದಲಿ ಕೋಚ್ ನೇಮಿಸುವುದಾಗಿ ಮಂಡಳಿ ತಿಳಿಸಿದೆ. ಇದನ್ನೂ ಓದಿ: Six In Six – ಒಂದೇ ಓವರ್‌ನಲ್ಲಿ 6 ವಿಕೆಟ್ ಕಿತ್ತು ಇತಿಹಾಸ ಸೃಷ್ಟಿಸಿದ ಆಸೀಸ್ ಕ್ರಿಕೆಟಿಗ
ಪಾಕಿಸ್ತಾನ ತಂಡವು ಇದೇ ವರ್ಷದ ಡಿಸೆಂಬರ್ 14 ರಿಂದ 2024ರ ಜನವರಿ 7ರ ವರೆಗೆ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ. ಅಷ್ಟರಲ್ಲಿ ಬದಲಿ ಕೋಚ್ ನೇಮಕ ಮಾಡುವುದಾಗಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: World Cup: ಈ ದಾಖಲೆ ಬರೆದ ಭಾರತದ ಮೊದಲ ಕ್ಯಾಪ್ಟನ್ ರೋಹಿತ್ ಶರ್ಮಾ
ಮೊರ್ಕೆಲ್ ಬೌಲಿಂಗ್ ಕೋಚ್ ಆಗಿ ನಿಯೋಜನೆಗೊಂಡ ಬಳಿಕ ಶ್ರೀಲಂಕಾ ವಿರುದ್ಧ ನಡೆದ 2 ಟೆಸ್ಟ್ ಸರಣಿಗೆ ಕೋಚ್ ಆಗಿದ್ದರು. ಆಗ ಪಾಕಿಸ್ತಾನ 2-0 ಅಂತರದಲ್ಲಿ ಲಂಕಾ ವಿರುದ್ಧ ಸರಣಿ ಗೆದ್ದುಕೊಂಡಿತ್ತು. ಆ ನಂತರ ಅಫ್ಘಾನಿಸ್ತಾನ ವಿರುದ್ಧ ನಡೆದ ಏಕದಿನ ಸರಣಿಯಲ್ಲೂ ತವರಿನಲ್ಲೇ ವೈಟ್‌ವಾಶ್ ಮಾಡಿತ್ತು. ಆ ಬಳಿಕ ಮೊರ್ಕೆಲ್ ಏಕದಿನ ಏಷ್ಯಾಕಪ್ ಸಂದರ್ಭದಲ್ಲೂ ಕೋಚ್ ಆಗಿದ್ದರು. ಆದ್ರೆ ಪಾಕ್ ಏಷ್ಯಾಕಪ್‌ನಲ್ಲಿ ಸೂಪರ್ ಫೋರ್ ಹಂತದಲ್ಲಿ ಶ್ರೀಲಂಕಾ ವಿರುದ್ಧ ಸೋತು ಫೈನಲ್ ಪ್ರವೇಶಿಸದೇ ಹಿಂದಿರುಗಿತ್ತು. ಇದೀಗ ವಿಶ್ವಕಪ್ ಟೂರ್ನಿಯಲ್ಲಿ ಲೀಗ್ ಹಂತದಲ್ಲೇ ಟೂರ್ನಿಯಿಂದ ಹೊರಬಿದ್ದಿದೆ.
ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) 2023 ರ ಕ್ರಿಕೆಟ್ ವಿಶ್ವಕಪ್‌ನಲ್ಲಿ (World Cup) ಮತ್ತೊಂದು ದಾಖಲೆ ಬರೆದಿದ್ದಾರೆ. ಒಂದೇ ವಿಶ್ವಕಪ್ ಆವೃತ್ತಿಯಲ್ಲಿ 500 ಕ್ಕಿಂತ ಹೆಚ್ಚು ರನ್ ಗಳಿಸಿದ ಮೊದಲ ಭಾರತೀಯ ನಾಯಕನಾಗಿ ಹೊರಹೊಮ್ಮಿದ್ದಾರೆ.
36 ವರ್ಷ ವಯಸ್ಸಿನ ರೋಹಿತ್ ಶರ್ಮಾ ಒಂದೇ ವಿಶ್ವಕಪ್ ಆವೃತ್ತಿಯಲ್ಲಿ 500 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ಮೊದಲ ಭಾರತೀಯ ನಾಯಕನಾಗಿ ದಾಖಲೆ ಮಾಡಿದ್ದಾರೆ. ಆ ಮೂಲಕ ಸೌರವ್ ಗಂಗೂಲಿ ಅವರನ್ನು ಹಿಂದಿಕ್ಕಿ ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ ಹೆಚ್ಚು ರನ್ ಗಳಿಸಿದ ಭಾರತೀಯ ನಾಯಕನಾಗಿ ರೆಕಾರ್ಡ್ ಮಾಡಿದ್ದಾರೆ. ಗಂಗೂಲಿ ಭಾರತ ತಂಡದ ನಾಯಕನಾಗಿದ್ದ ಸಂದರ್ಭದಲ್ಲಿ 2003 ವಿಶ್ವಕಪ್‌ನಲ್ಲಿ 465 ರನ್ ಗಳಿಸಿ ಇದುವರೆಗೆ ಅಗ್ರಸ್ಥಾನದಲ್ಲಿದ್ದರು.
ಒಂದೇ ವಿಶ್ವಕಪ್ ಆವೃತ್ತಿಯಲ್ಲಿ ಅತಿಹೆಚ್ಚು ರನ್ ಗಳಿಸಿದ ಭಾರತದ ನಾಯಕರ ಪಟ್ಟಿಯಲ್ಲಿ ರೋಹಿತ್ ಮೊದಲ ಸ್ಥಾನದಲ್ಲಿದ್ದರೆ, ಎರಡನೇ ಸ್ಥಾನದಲ್ಲಿ ಗಂಗೂಲಿ ಇದ್ದಾರೆ. ಇವರ ನಂತರದ ಸ್ಥಾನದಲ್ಲಿ ವಿರಾಟ್ ಕೊಹ್ಲಿ (2019 ರಲ್ಲಿ 443 ರನ್), ಮೊಹಮ್ಮದ್ ಅಜರುದ್ದೀನ್ (1992 ರಲ್ಲಿ 332 ರನ್) ಮತ್ತು ಕಪಿಲ್ ದೇವ್ (1983 ರಲ್ಲಿ 303 ರನ್) ಇದ್ದಾರೆ. ಇದನ್ನೂ ಓದಿ: World Cup 2023: ಭಾರತಕ್ಕೆ ಗೆಲುವಿನ ʻಶ್ರೇಯಸ್ಸುʼ – ಡಚ್ಚರ ವಿರುದ್ಧ 160 ರನ್‌ಗಳ ಭರ್ಜರಿ ಜಯ..!
ಭಾನುವಾರ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆದರ್ಲೆಂಡ್ಸ್ ವಿರುದ್ಧ 54 ಎಸೆತಗಳಲ್ಲಿ 61 ರನ್ ಗಳಿಸುವ ಮೂಲಕ ರೋಹಿತ್ ಈ ಸಾಧನೆ ಮಾಡಿದ್ದಾರೆ. ಅವರು ನಾಕ್ ಸಮಯದಲ್ಲಿ ಒಟ್ಟು ಎರಡು ಸಿಕ್ಸರ್‌ಗಳು ಮತ್ತು ಎಂಟು ಬೌಂಡರಿಗಳನ್ನು ಬಾರಿಸಿದ್ದರು.
ನವದೆಹಲಿ: ದಾಖಲೆಗಳ ರೇಸ್‍ನಲ್ಲಿರುವ ಕೊಹ್ಲಿ (Virat Kohli) ವಿಚಾರವಾಗಿ ಹಗುರವಾಗಿ ಮಾತಾಡಿದ್ದ ಲಂಕಾ ನಾಯಕ ಕುಸಾಲ್ ಮೆಂಡಿಸ್ (Kusal Mendis), ಸಚಿನ್ (Sachin Tendulkar) ದಾಖಲೆ ಸರಿಗಟ್ಟಿದ ವಿಚಾರ ತಿಳಿದ ನಂತರ ಕೊಹ್ಲಿಯ ಕ್ಷಮೆಯಾಚಿಸಿದ್ದಾರೆ.
ಕೊಹ್ಲಿ 49ನೇ ಶತಕ ಗಳಿಸಿದ್ದ ವಿಚಾರ ನನಗೆ ತಿಳಿದಿರಲಿಲ್ಲ. ಪತ್ರಕರ್ತರು ತಕ್ಷಣ ಕೇಳಿದಾಗ, ಏನು ಹೇಳಬೇಕೆಂದು ನನಗೆ ತಿಳಿಯಲಿಲ್ಲ ಮತ್ತು ನನಗೆ ಪ್ರಶ್ನೆ ಅರ್ಥವಾಗಲಿಲ್ಲ. 49 ಶತಕಗಳನ್ನು ಗಳಿಸುವುದು ಸುಲಭವಲ್ಲ ಎಂದಿದ್ದೆ. ನಾನು ಹೇಳಿದ್ದು ತಪ್ಪು, ನಾನು ಅದಕ್ಕಾಗಿ ಕ್ಷಮೆ ಕೋರುತ್ತೇನೆ ಎಂದು ಮೆಂಡಿಸ್ ಹೇಳಿದ್ದಾರೆ. ಇದನ್ನೂ ಓದಿ: World Cup Semi Final: ಮಳೆ ಬಂದು ಮ್ಯಾಚ್ ನಡೆಯದಿದ್ದರೆ ಏನಾಗುತ್ತೆ..?
ಬಾಂಗ್ಲಾದೇಶ ವಿರುದ್ಧದ ಶ್ರೀಲಂಕಾದ ಪಂದ್ಯಕ್ಕೂ ಮೊದಲು ಪತ್ರಿಕಾಗೋಷ್ಠಿಯಲ್ಲಿ, ಮೆಂಡಿಸ್ ಅವರನ್ನು ಪತ್ರಕರ್ತರೊಬ್ಬರು ಪ್ರಶ್ನಿಸಿದ್ದರು. ಟೀಂ ಇಂಡಿಯಾ ಆಟಗಾರ ಕೊಹ್ಲಿಯನ್ನು ಅಭಿನಂದಿಸಲು ಬಯಸುತ್ತೀರಾ? ಎಂಬ ಪ್ರಶ್ನೆಗೆ ನಾನೇಕೆ ಅವರನ್ನು ಅಭಿನಂದಿಸಬೇಕು ಎಂದಿದ್ದರು. ಈಗ ಅವರು ನನ್ನ ಆ ಹೇಳಿಕೆಗಾಗಿ ವಿಷಾದಿಸುತ್ತೇನೆ. ನನಗೆ ಆ ಪ್ರಶ್ನೆ ಅರ್ಥವಾಗಿರಲಿಲ್ಲ ಎಂದಿದ್ದಾರೆ.
ವಿಶ್ವಕಪ್ (World Cup) ಪಂದ್ಯಗಳಲ್ಲಿ ಲಂಕಾ ತಂಡದ ಕಳಪೆ ಪ್ರದರ್ಶನಕ್ಕಾಗಿ ತಂಡದ ಅಭಿಮಾನಿಗಳಲ್ಲಿ ಕ್ಷಮೆಯಾಚಿಸಲು ಶ್ರೀಲಂಕಾ ನಾಯಕ ಪತ್ರಿಕಾಗೋಷ್ಠಿ ಕರೆದಿದ್ದರು. ಈ ವೇಳೆ ಅವರು ಕೊಹ್ಲಿಯ ಕ್ಷಮೆಯನ್ನೂ ಕೋರಿದ್ದಾರೆ. ತಂಡವು ತಮ್ಮ ಯೋಜನೆಗಳನ್ನು ಕಾರ್ಯಗತಗೊಳಿಸುವಲ್ಲಿ ವಿಫಲವಾಗಿದೆ. ಅನುಭವದಿಂದ ಕಲಿಯಲು ನಮ್ಮ ಆಟಗಾರರು ಸಿದ್ಧರಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ICC World Cup: ಟೀಂ ಇಂಡಿಯಾ ಸತತ `ನವ’ಜಯ!
ಬೆಂಗಳೂರು: ವಿಶ್ವಕಪ್ ನಲ್ಲಿ ಇದುವರೆಗೆ ಆಡಿದ 9 ಪಂದ್ಯಗಳನ್ನು ಸತತವಾಗಿ ಗೆಲ್ಲುವ ಮೂಲಕ ಭಾರತ ದಾಖಲೆ ಬರೆದಿದೆ. ಟೀಂ ಇಂಡಿಯಾ ಸತತ 8 ಗೆಲುವು ಸಾಧಿಸಿದ್ದೇ ಇದುವರೆಗಿನ ವಿಶ್ವಕಪ್ ಪಂದ್ಯಾವಳಿಯ ಗೆಲುವಿನ ದಾಖಲೆಯಾಗಿತ್ತು.
2003ರಲ್ಲಿ ನಡೆದ ವಿಶ್ವಕಪ್ ನಲ್ಲಿ ಭಾರತ ಸತತ 8 ಪಂದ್ಯಗಳನ್ನು ಗೆದ್ದು ದಾಖಲೆ ಮಾಡಿತ್ತು. ಈ ಬಾರಿಯ ವಿಶ್ವಕಪ್ ಪಂದ್ಯಾವಳಿಯಲ್ಲಿ ಟೀಂ ಇಂಡಿಯಾ ಇದುವರೆಗೆ 9 ಪಂದ್ಯಗಳನ್ನು ಆಡಿದ್ದು, 9 ಪಂದ್ಯಗಳನ್ನು ಗೆದ್ದು ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ.
ವಿಶ್ವಕಪ್ ನಲ್ಲಿ ಇಂಡಿಯಾ ಟಾಪ್ 5 ಆಟಗಾರರ 50 ಪ್ಲಸ್ ದಾಖಲೆ!: ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾದ ಟಾಪ್ 5 ಆಟಗಾರರು 50 ಪ್ಲಸ್ ಸ್ಕೋರ್ ಬಾರಿಸಿದರು. ವಿಶ್ವಕಪ್ ಪಂದ್ಯಾವಳಿಯಲ್ಲಿ ಇದು ಮೊದಲ ಬಾರಿಯ ದಾಖಲೆ ಆಗಿದ್ದರೆ, ಏಕದಿನ ಇತಿಹಾಸದಲ್ಲಿ ಇದು 3ನೇ ಬಾರಿ ನಡೆದಿದೆ. ಈ ಹಿಂದೆ 2 ಬಾರಿ ಆಸ್ಟ್ರೇಲಿಯಾ ತಂಡವು ಟೀಂ ಇಂಡಿಯಾ ವಿರುದ್ಧ ಈ ದಾಖಲೆ ಮಾಡಿತ್ತು. 2013ರಲ್ಲಿ ಜೈಪುರದಲ್ಲಿ ಹಾಗೂ 2020ರಲ್ಲಿ ಸಿಡ್ನಿಯಲ್ಲಿ ಆಸ್ಟ್ರೇಲಿಯಾದ ಟಾಪ್ 5 ಆಟಗಾರರು 50 ಪ್ಲಸ್ ರನ್ ಪೇರಿಸಿದ್ದರು.
ಬೆಂಗಳೂರು: 2023ನೇ ಸಾಲಿನಲ್ಲಿ ಭಾರತ 8 ಬಾರಿ 350ಕ್ಕಿಂತ ಹೆಚ್ಚು ರನ್ ಗಳಿಸಿ ದಾಖಲೆ ಬರೆದಿದೆ. 2019ರಲ್ಲಿ ಇಂಗ್ಲೆಂಡ್ (England) ತಂಡ 7 ಬಾರಿ 350 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ್ದೇ ಇದುವರೆಗಿನ ವರ್ಷದ ಗರಿಷ್ಠ ಸ್ಕೋರ್ ದಾಖಲೆಯಾಗಿತ್ತು. ಈ ದಾಖಲೆಯನ್ನು ಈಗ ಟೀಂ ಇಂಡಿಯಾ (Team India) ತನ್ನ ಹೆಸರಿಗೆ ಬರೆದುಕೊಂಡಿದೆ.
ನೆದರ್ಲೆಂಡ್ ವಿರುದ್ಧ 50 ಓವರ್ ಗಳಲ್ಲಿ 410/4 (ಬೆಂಗಳೂರು)
ಶ್ರೀಲಂಕಾ ವಿರುದ್ಧ 50 ಓವರ್ ಗಳಲ್ಲಿ 357/8 (ಮುಂಬೈ)
ಆಸ್ಟ್ರೇಲಿಯಾ ವಿರುದ್ಧ 50 ಓವರ್ ಗಳಲ್ಲಿ 399/5 (ಇಂದೋರ್)
ಪಾಕಿಸ್ತಾನ ವಿರುದ್ಧ 50 ಓವರ್ ಗಳಲ್ಲಿ 356/2 (ಕೊಲಂಬೊ)
ವೆಸ್ಟ್ ಇಂಡೀಸ್ ವಿರುದ್ಧ 50 ಓವರ್ ಗಳಲ್ಲಿ 351/5 (ತರೌಬ)
ನ್ಯೂಜಿಲೆಂಡ್ ವಿರುದ್ಧ 50 ಓವರ್ ಗಳಲ್ಲಿ 385/9 (ಇಂದೋರ್)
ಶ್ರೀಲಂಕಾ ವಿರುದ್ಧ 50 ಓವರ್ ಗಳಲ್ಲಿ 390/5 (ತಿರುವನಂತಪುರಂ)
ಶ್ರೀಲಂಕಾ ವಿರುದ್ಧ 50 ಓವರ್ ಗಳಲ್ಲಿ 373/7 (ಗುವಾಹಟಿ)
ಬೆಂಗಳೂರು: ಅಗ್ರಕ್ರಮಾಂಕದ ಬ್ಯಾಟರ್‌ಗಳ ಸ್ಪೋಟಕ ಬ್ಯಾಟಿಂಗ್, ಸಂಘಟಿತ ಬೌಲಿಂಗ್ ದಾಳಿ ನೆರವಿನೊಂದಿಗೆ ಟೀಂ ಇಂಡಿಯಾ (Team India), ನೆದರ್ಲೆಂಡ್ಸ್ ವಿರುದ್ಧ 160 ರನ್‌ಗಳ ಭರ್ಜರಿ ಜಯ ಸಾಧಿಸಿತು.
ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 2023ರ ವಿಶ್ವಕಪ್ ಟೂರ್ನಿಯಲ್ಲಿ ಕೊನೆಯ ಲೀಗ್ ಪಂದ್ಯವು ಟೀಂ ಇಂಡಿಯಾದ ಹಲವು ದಾಖಲೆಗಳಿಗೆ ಸಾಕ್ಷಿಯಾಯಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 50 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 410 ರನ್ ಬಾರಿಸಿತ್ತು. ಈ ಗುರಿ ಬೆನ್ನತ್ತಿದ್ದ ನೆದರ್ಲೆಂಡ್ಸ್ (Netherlands) 47.5 ಓವರ್‌ಗಳಲ್ಲೇ 250 ರನ್‌ಗಳಿಗೆ ಸರ್ವಪತನ ಕಂಡಿತು. ಈ ಮೂಲಕ 2023ರ ವಿಶ್ವಕಪ್‌ಗೆ ಸೋಲಿನೊಂದಿಗೆ ಭಾವುಕ ವಿದಾಯ ಹೇಳಿತು.
India post their 2nd highest World Cup score in history.
ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯವು ಟೀಂ ಇಂಡಿಯಾದ ಹಲವು ದಾಖಲೆಗಳಿಗೆ ಸಾಕ್ಷಿಯಾಯಿತು. 2023ನೇ ಸಾಲಿನಲ್ಲಿ ಭಾರತ 8 ಬಾರಿ 350ಕ್ಕಿಂತ ಹೆಚ್ಚು ರನ್ ಗಳಿಸಿ ದಾಖಲೆ ಬರೆಯಿತು. ಅಲ್ಲದೇ ಇದು ಟೀಂ ಇಂಡಿಯಾ ವಿಶ್ವಕಪ್ ಟೂರ್ನಿಯಲ್ಲಿ ಗಳಿಸಿದ 2ನೇ ಗರಿಷ್ಠ ಸ್ಕೋರ್ (2nd Highest World Cup Score in History) ಸಹ ಆಗಿದೆ. 2007ರ ವಿಶ್ವಕಪ್‌ನಲ್ಲಿ ಭಾರತ ಬರ್ಮುಡಾ ವಿರುದ್ಧ 5 ವಿಕೆಟ್ ನಷ್ಟಕ್ಕೆ 413 ರನ್ ಗಳಿಸಿದ್ದು, ವಿಶ್ವಕಪ್‌ನಲ್ಲಿ ಗರಿಷ್ಠ ಸ್ಕೋರ್ ಆಗಿದೆ. ಅಷ್ಟೇ ಅಲ್ಲದೇ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿಯೇ ಆರಂಭಿಕನಾಗಿಯೇ 14 ಸಾವಿರ ರನ್ ಪೂರೈಸಿದ ಸಾಧನೆ ಮಾಡಿದರು. ಒಟ್ಟು 60 ಸಿಕ್ಸರ್ ಸಿಡಿಸುವ ಮೂಲಕ ಕ್ಯಾಲೆಂಡರ್ ವರ್ಷದಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ವಿಶ್ವದ ನಂ.1 ಆಟಗಾರ ಸಹ ಎನಿಸಿಕೊಂಡರು. ಅಷ್ಟೇ ಅಲ್ಲದೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ಅರ್ಧಶತಕಗಳನ್ನ ಪೂರೈಸಿದರು. ಇನ್ನೂ ಕೆ.ಎಲ್ ರಾಹುಲ್ 62 ಎಸೆತಗಳಲ್ಲೇ ಶತಕ ಸಿಡಿಸಿ ವೇಗದ ಶತಕ ಸಿಡಿಸಿದ ಟಾಪ್-1 ದಿಗ್ಗಜರ ಎಲೈಟ್ ಪಟ್ಟಿ ಸೇರಿದರು.
ಚೇಸಿಂಗ್ ಆರಂಭಿಸಿದ ನೆದರ್ಲೆಂಡ್ಸ್ ಬ್ಯಾಟರ್‌ಗಳು ಆರಂಭದಲ್ಲೇ ಭಾರತದ ಬೌಲರ್‌ಗಳ ದಾಳಿಗೆ ತುತ್ತಾದರು. ಇದರ ಹೊರತಾಗಿಯೂ ಟೀಂ ಇಂಡಿಯಾ ವಿರುದ್ಧ ಕೊನೆಯವರೆಗೂ ಹೋರಾಡಿದರು. ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ತೇಜ ನಿಡಮನೂರು 39 ಎಸೆತಗಳಲ್ಲಿ 54 ರನ್ (6 ಸಿಕ್ಸರ್, 1 ಬೌಂಡರಿ) ಗಳಿಸಿದ್ರೆ, ಸೈಬ್ರಾಂಡ್ ಎಂಗಲ್‌ಬ್ರೆಕ್ಟ್ 45 ರನ್ (4 ಬೌಂಡರಿ, 80 ಎಸೆತ, ಕಾಲಿನ್ ಅಕರ್ಮನ್ 35 ರನ್ (32 ಎಸೆತ, 6 ಬೌಂಡರಿ) ಗಳಿಸಿದ್ದು ಬಿಟ್ಟರೆ ಉಳಿದ ಯಾರೋಬ್ಬರು ಹೆಚ್ಚುಹೊತ್ತು ಕ್ರೀಸ್‌ನಲ್ಲಿ ಉಳಿಯದ ಕಾರಣ ಟೀಂ ಇಂಡಿಯಾ ಸುಲಭವಾಗಿ 160 ರನ್‌ಗಳ ಜಯ ಸಾಧಿಸಿತು.
ನೆದರ್ಲೆಂಡ್ಸ್ ಪರ ವೆಸ್ಲಿ ಬ್ಯಾರೆಸಿ, 4 ರನ್, ಮ್ಯಾಕ್ಸ್ ಒ’ಡೌಡ್ 30 ರನ್, ಸ್ಕಾಟ್ ಎಡ್ವರ್ಡ್ಸ್ 17 ರನ್, ಬಾಸ್ ಡಿ ಲೀಡೆ 12 ರನ್, ಲೋಗನ್ ವ್ಯಾನ್ ಬೀಕ್ 16 ರನ್, ರೋಲೋಫ್ ವ್ಯಾನ್ ಡೆರ್ ಮೆರ್ವೆ 16 ರನ್, ಆರ್ಯನ್ ದತ್ 5 ರನ್ ಗಳಿಸಿದ್ರೆ, ಪಾಲ್ ವ್ಯಾನ್ ಮೀಕೆರೆನ್ 3 ರನ್ ಗಳಿಸಿ ಕ್ರೀಸ್‌ನಲ್ಲಿ ಉಳಿದರು.
ಟೀಂ ಇಂಡಿಯಾ ಪರ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ ತಲಾ 2 ವಿಕೆಟ್ ಪಡೆದರೆ, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.
ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 40 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 284 ರನ್ ಗಳಿಸಿತ್ತು. ಆದ್ರೆ ಕೆ.ಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಅಬ್ಬರಕ್ಕೆ ಕೊನೆಯ 10 ಓವರ್‌ಗಳಲ್ಲಿ 125 ರನ್ ದಾಖಲಾಯಿತು.
ಆರಂಭದಲ್ಲೇ ಸ್ಫೋಟಕ ಇನ್ನಿಂಗ್ಸ್ ಕಟ್ಟಿದ್ದ ರೋಹಿತ್ ಶರ್ಮಾ (Rohit Sharma) ಮತ್ತು ಶುಭಮನ್ ಗಿಲ್ (Shubman Gill) ಜೋಡಿ ಮೊದಲ ವಿಕೆಟ್‌ಗೆ 71 ಎಸೆತಗಳಲ್ಲಿ 100 ರನ್ ಬಾರಿಸಿತ್ತು. ಈ ಜೋಡಿ ವಿಕೆಟ್ ಬೀಳುತ್ತಿದ್ದಂತೆ 3ನೇ ವಿಕೆಟ್‌ಗೆ ಶ್ರೇಯಸ್ ಅಯ್ಯರ್ ಮತ್ತು ಕೊಹ್ಲಿ (Virat Kohli) 66 ಎಸೆತಗಳಲ್ಲಿ 71 ರನ್‌ಗಳ ಜೊತೆಯಾಟ ನೀಡಿದ್ರು. ಬಳಿಕ ದ್ವಿಶತಕ ಜೊತೆಯಾಟ ನೀಡಿದ ಕೆ.ಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಜೋಡಿ 128 ಎಸೆತಗಳಲ್ಲಿ ಬರೋಬ್ಬರಿ 208 ರನ್ ಬಾರಿಸಿತ್ತು. ಇದರಿಂದ ತಂಡದ ಮೊತ್ತ 400 ರನ್‌ಗಳ ಗಡಿ ದಾಟಲು ನೆರವಾಯಿತು. ಅಂತಿಮವಾಗಿ ಭಾರತ 4 ವಿಕೆಟ್ ನಷ್ಟಕ್ಕೆ 410 ರನ್ ಬಾರಿಸಿತು.
ಭಾರತದ ಪರ ಶ್ರೇಯಸ್ ಅಯ್ಯರ್ 128 ರನ್ (94 ಎಸೆತ, 10 ಬೌಂಡರಿ, 5 ಸಿಕ್ಸರ್), ಕೆ.ಎಲ್ ರಾಹುಲ್ 102 ರನ್ (64 ಎಸೆತ, 11 ಬೌಂಡರಿ, 4 ಸಿಕ್ಸರ್), ರೋಹಿತ್ ಶರ್ಮಾ 61 ರನ್ (54 ಎಸೆತ, 8 ಬೌಂಡರಿ, 2 ಸಿಕ್ಸರ್), ಶುಭಮನ್ ಗಿಲ್ 51 ರನ್ (32 ಎಸೆತ, 4 ಸಿಕ್ಸರ್, 3 ಬೌಂಡರಿ), ವಿರಾಟ್ ಕೊಹ್ಲಿ 51 ರನ್ (5 ಬೌಂಡರಿ, 1 ಸಿಕ್ಸರ್) ಚಚ್ಚಿದರೆ, ಸೂರ್ಯಕುಮಾರ್ ಯಾದವ್ 2 ರನ್ ಗಳಿಸಿ ಕ್ರೀಸ್‌ನಲ್ಲಿ ಉಳಿದರು.
ನೆದರ್ಲೆಂಡ್ಸ್ ಪರ ಬಾಸ್ ಡಿ ಲೀಡೆ 10 ಓವರ್‌ಗಳಲ್ಲಿ 82 ರನ್ ಬಿಟ್ಟುಕೊಟ್ಟು 2 ವಿಕೆಟ್ ಕಿತ್ತರೆ, ಪಾಲ್ ವ್ಯಾನ್ ಮೀಕೆರೆನ್ ಮತ್ತು ರೋಲೋಫ್ ವ್ಯಾನ್ ಡೆರ್ ಮೆರ್ವೆ ತಲಾ ಒಂದೊಂದು ವಿಕೆಟ್ ಪಡೆದರು.