ನವದೆಹಲಿ: ಶ್ರೀಲಂಕಾ ಎದುರಿನ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ತೋರಿದ್ದ ರಚಿನ್ ರವೀಂದ್ರ (Rachin Ravindra) ಬೆಂಗಳೂರಿನ (Bengaluru) ಬಗ್ಗೆ ಅಪಾರ ಒಲವು ಹೊಂದಿದ್ದಾರೆ. ಪಂದ್ಯದ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮತ್ತಷ್ಟು ಕ್ರಿಕೆಟ್ ಆಡುವ ಕನಸಿನ ಬಗ್ಗೆ ಹೇಳಿಕೊಂಡಿದ್ದಾರೆ.
Rachin Ravindra said, “Bengaluru and Chinnaswamy Stadium is very close to my heart, I hope I get to play a bit of more cricket here in future (smiles)”. pic.twitter.com/quFNcA4Yvd
ರಚಿನ್ ರವೀಂದ್ರ ಮುಂಬರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದಲ್ಲಿ ಆಡುವ ಹಂಬಲ ವ್ಯಕ್ತವಾಗಿದೆ. ಈ ಬಗ್ಗೆ ಅವರು ಮಾಡಿದ ಟ್ವೀಟ್ ಭಾರೀ ವೈರಲ್ ಆಗಿದೆ. ಇದನ್ನೂ ಓದಿ: ರಚಿನ್ ರವೀಂದ್ರಗೆ ದೃಷ್ಟಿ ತೆಗೆದ ಅಜ್ಜಿ – ವೀಡಿಯೋ ವೈರಲ್
2023ರ ಐಸಿಸಿ ಏಕದಿನ ವಿಶ್ವಕಪ್ (World Cup) ಟೂರ್ನಿಯ ಉದ್ಘಾಟನಾ ಪಂದ್ಯದಲ್ಲೇ ಶತಕ ಸಿಡಿಸುವ ಮೂಲಕ ಗಮನ ಸೆಳೆದಿದ್ದ ರಚಿನ್, ನಂತರವೂ ಉತ್ತಮ ಪ್ರದರ್ಶನ ನೀಡಿದ್ದಾರೆ. ಇದುವರೆಗೂ ನ್ಯೂಜಿಲೆಂಡ್ ಪರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಎಲ್ಲಾ 9 ಪಂದ್ಯಗಳನ್ನಾಡಿ ಮೂರು ಶತಕ ಸಹಿತ 565 ರನ್ ಸಿಡಿಸಿದ್ದಾರೆ.
ಬೆಂಗಳೂರು: ವಿಶ್ವಕಪ್ (World Cup) ಟೂರ್ನಿಯಲ್ಲಿ ಅದ್ಬುತ ಪ್ರದರ್ಶನದ ಮೂಲಕ ಅಭಿಮಾನಿಗಳ ಮನಸ್ಸು ಗೆದ್ದ ಕರ್ನಾಟಕ ಮೂಲದ ನ್ಯೂಜಿಲೆಂಡ್ ಆಟಗಾರ ರಚಿನ್ ರವೀಂದ್ರ (Rachin Ravindra) ಅವರ ಅಜ್ಜಿ ದೃಷ್ಟಿ ತೆಗೆಯುವ ವೀಡಿಯೋ ವೈರಲ್ ಆಗಿದೆ.
ಮೊದಲ ಬಾರಿಗೆ ವಿಶ್ವಕಪ್ ಆಡುತ್ತಿರುವ ರಚಿನ್ ಈ ಆವೃತ್ತಿಯಲ್ಲಿ ಒಟ್ಟು ಮೂರು ಶತಕ ಬಾರಿಸಿ ಕ್ರಿಕೆಟ್ ದಂತಕತೆ ದಿಗ್ಗಜ ಸಚಿನ್ ತೆಂಡೂಲ್ಕರ್ ಸೇರಿದಂತೆ ಅನೇಕ ಆಟಗಾರರ ದಾಖಲೆಯನ್ನು ಮುರಿದಿದ್ದಾರೆ. ಸದ್ಯ 565 ರನ್ ಗಳಿಸಿರುವ ಅವರು ಟೂರ್ನಿಯಲ್ಲಿ ಅತ್ಯಧಿಕ ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
ರಚಿನ್ ರವೀಂದ್ರ 1999 ರಲ್ಲಿ ಜನಿಸಿದರು. ಬೆಂಗಳೂರಿನವರಾದ (Bengaluru) ರಚಿನ್ ಅವರ ತಂದೆ ರಾಹುಲ್ ದ್ರಾವಿಡ್ ಮತ್ತು ಸಚಿನ್ ತೆಂಡೂಲ್ಕರ್ ಅವರ ದೊಡ್ಡ ಅಭಿಮಾನಿಯಾಗಿದ್ದು, ಇಬ್ಬರೂ ಆಟಗಾರರ ಹೆಸರಿನ ಅಕ್ಷರಗಳನ್ನು ಸೇರಿಸಿ ರಾಹುಲ್ ಹೆಸರಿಂದ `ರಾ’ ಮತ್ತು ಸಚಿನ್ ಹೆಸರಿಂದ `ಚಿನ್’ ತೆಗೆದುಕೊಂಡು ರಚಿನ್ ಎಂದು ನಾಮಕರಣ ಮಾಡಿದ್ದರು.
ಬೆಂಗಳೂರು: ಸಂಘಟಿತ ಬೌಲಿಂಗ್ ಮತ್ತು ಬ್ಯಾಟಿಂಗ್ ಪ್ರದರ್ಶನದಿಂದ ನ್ಯೂಜಿಲೆಂಡ್ (New Zealand) ತಂಡವು ಶ್ರೀಲಂಕಾ ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸಿ, ಸೆಮಿಫೈನಲ್ ಹಾದಿಯನ್ನು ಸುಲಭವಾಗಿಸಿಕೊಂಡಿದೆ. ಆದ್ರೆ ಪಾಕಿಸ್ತಾನ (Pakistan) ತಂಡಕ್ಕೆ ಇದು ನುಂಗಲಾರದ ತುತ್ತಾಗಿದೆ.
ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿರುವ ಪಾಕಿಸ್ತಾನ ತಂಡ 275+ ರನ್‌ಗಳ ಅಂತರದಿಂದ ಇಂಗ್ಲೆಂಡ್ (England) ತಂಡವನ್ನು ಸೋಲಿಸಬೇಕಿದೆ. ಅಥವಾ 2.3 ಓವರ್‌ಗಳಲ್ಲಿ ಇಂಗ್ಲೆಂಡ್ ಟಾರ್ಗೆಟ್ ಅನ್ನು ಚೇಸ್ ಮಾಡಬೇಕಿದೆ ಎಂದು ಕ್ರಿಕೆಟ್ ತಜ್ಞರು ಅಂದಾಜಿಸಿದ್ದಾರೆ. ಆದ್ರೆ ಇಂಗ್ಲೆಂಡ್ ತಂಡವನ್ನು ಅಷ್ಟು ಸುಲಭದಲ್ಲಿ ಸೋಲಿಸುವುದು ಪಾಕ್‌ಗೆ ಅಸಾಧ್ಯವಾಗಿದ್ದು, ಬಹುತೇಕ ಸೆಮಿ ಫೈನಲ್ ಕನಸು ಭಗ್ನ ಎಂದೇ ವಿಶ್ಲೇಷಿಸಲಾಗುತ್ತಿದೆ. ಇದನ್ನೂ ಓದಿ: ಆಸ್ಟ್ರೇಲಿಯಾ ಮುಡಿಗೆ 7 ವಿಶ್ವಕಪ್ ಏರಿಸಿದ್ದ ನಾಯಕಿ ಮೆಗ್ ಲ್ಯಾನಿಂಗ್ ಅಂತರಾಷ್ಟ್ರೀಯ ಕ್ರಿಕೆಟ್‍ಗೆ ವಿದಾಯ
ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್ ಸೋತು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಕಿವೀಸ್, ಬ್ಯಾಟಿಂಗ್ ಮಾಡುವ ಅವಕಾಶವನ್ನು ಶ್ರೀಲಂಕಾಗೆ (Sri Lanka) ಬಿಟ್ಟುಕೊಟ್ಟಿತು. ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 171 ರನ್‌ಗಳಿಗೆ ಸರ್ವಪತನ ಕಂಡಿತು. ಈ ಗುರಿ ಬೆನ್ನತ್ತಿದ್ದ ಕಿವೀಸ್ 23.2 ಓವರ್ಗಳಲ್ಲೇ 172 ರನ್ ಗಳಿಸಿ ಸೆಮಿಫೈನಲ್ ಹಾದಿಯನ್ನು ಸುಲಭವಾಗಿಸಿಕೊಂಡಿತು. ಇನ್ನೂ 2023ರ ಏಕದಿನ ವಿಶ್ವಕಪ್ ಆವೃತ್ತಿಯಲ್ಲಿ ಕೊನೆಯ ಲೀಗ್ ಪಂದ್ಯವನ್ನಾಡಿದ ಶ್ರೀಲಂಕಾ ಸೋಲಿನೊಂದಿಗೆ ವಿದಾಯ ಹೇಳಿತು. ಇದನ್ನೂ ಓದಿ: ಕ್ರಿಕೆಟ್ ಆಡಬೇಕಂದ್ರೆ ಕೀಳು ಮನಸ್ಥಿತಿಯಿಂದ ಹೊರಬನ್ನಿ – ಶಕೀಬ್ ವಿರುದ್ಧ ಮಾಥ್ಯೂಸ್ ಕೆಂಡ
ಕಿವೀಸ್ ಪರ ಕಣಕ್ಕಿಳಿದ ರಚಿನ್ ರವೀಂದ್ರ (Rachin Ravindra) ಹಾಗೂ ಡಿವೋನ್ ಕಾನ್ವೆ ಜೋಡಿ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು. ಮೊದಲ ವಿಕೆಟ್‌ಗೆ 12.2 ಓವರ್‌ಗಳಲ್ಲೇ ಈ ಜೋಡಿ 86 ರನ್ ಸಿಡಿಸಿತ್ತು. ಕಾನ್ವೆ 45 ರನ್ (42 ಎಸೆತ, 9 ಬೌಂಡರಿ), ರವೀಂದ್ರ 42 ರನ್ (34 ಎಸೆತ, 3 ಬೌಂಡರಿ, 3 ಸಿಕ್ಸರ್) ಬಾರಿಸಿ ಔಟಾದರು. ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಡೇರಿಲ್ ಮಿಚೆಲ್ 43 ರನ್ (31 ಎಸೆತ, 5 ಬೌಂಡರಿ, 2 ಸಿಕ್ಸರ್), ಕೇನ್ ವಿಲಿಯಮ್ಸನ್ (Kane Williamson) 14 ರನ್, ಮಾರ್ಕ್ ಚಾಪ್ಮನ್ 7 ರನ್‌ಗಳ ಕೊಡುಗೆ ನೀಡಿ ಔಟಾದರೆ, ಗ್ಲೇನ್ ಫಿಲಿಪ್ಸ್ 17 ರನ್, ಟಾಮ್ ಲ್ಯಾಥಮ್ 2 ರನ್ ಗಳಿಸಿ ಅಜೇಯರಾಗುಳಿದರು. ಲಂಕಾ ಪರ ಏಂಜಲೋ ಮ್ಯಾಥ್ಯೂಸ್ 2 ವಿಕೆಟ್ ಕಿತ್ತರೆ, ಮಹೀಶ್ ತೀಕ್ಷಣ ಮತ್ತು ದುಶ್ಮಂತ ಸಮೀರ ತಲಾ ಒಂದೊಂದು ವಿಕೆಟ್ ಪಡೆದರು.
ಇದಕ್ಕೂ ಬ್ಯಾಟಿಂಗ್ ಮಾಡಿದ ಲಂಕಾ ತಂಡ ಮತ್ತೊಮ್ಮೆ ಕಳಪೆ ಪ್ರದರ್ಶನ ತೋರಿತು. ಆರಂಭಿಕನಾಗಿ ಕಣಕ್ಕಿಳಿದ ಕುಸಾಲ್ ಪೆರೇರಾ 51 ರನ್ (28 ಎಸೆತ, 9 ಬೌಂಡರಿ, 2 ಸಿಕ್ಸರ್), ಕೊನೆಯಲ್ಲಿ ಮಹೀಶ್ ತೀಕ್ಷಣ 91 ಎಸೆತಗಳಲ್ಲಿ 3 ಬೌಂಡರಿಯೊಂದಿಗೆ 38 ರನ್ ಗಳಿಸಿದ್ದು ಬಿಟ್ಟರೆ, ಉಳಿದವರು ಅಲ್ಪಮೊತ್ತಕ್ಕೆ ವಿಕೆಟ್‌ಒಪ್ಪಿಸಿ ಪೆವಿಲಿಯನ್‌ಗೆ ಮರಳಿದರು. ಟೀಂ ಇಂಡಿಯಾ ವಿರುದ್ಧ ಹೀನಾಯ ಸೋಲನುಭವಿಸಿದ ಬಳಿಕ ಲಂಕಾಗೆ ಇದು ಮತ್ತೆ ಮುಖಭಂಗ ಉಂಟುಮಾಡಿತು. ಇದನ್ನೂ ಓದಿ: ಮ್ಯಾಕ್ಸಿ ಬೆಂಕಿ ಆಟಕ್ಕೆ ಹಲವು ದಾಖಲೆಗಳು ಭಸ್ಮ – ವಿಶ್ವದಾಖಲೆಯ ಪಟ್ಟಿ ಓದಿ
ಶ್ರೀಲಂಕಾ ಪರ ಪಾಥುಮ್ ನಿಸ್ಸಾಂಕ 2 ರನ್, ಕುಸಲ್ ಮೆಂಡಿಸ್ 6ರನ್, ಸದೀರ ಸಮರವಿಕ್ರಮ 1 ರನ್, ಚರಿತ್ ಅಸಲಂಕ 8 ರನ್, ಏಂಜೆಲೊ ಮ್ಯಾಥ್ಯೂಸ್ 16 ರನ್, ಧನಂಜಯ ಡಿ ಸಿಲ್ವಾ 19 ರನ್, ಚಮಿಕ ಕರುಣಾರತ್ನೆ 6 ರನ್, ದುಷ್ಮಂತ ಚಮೀರ 1 ರನ್, ದಿಲ್ಶನ್ ಮಧುಶಂಕ 19 ರನ್ ಗಳಿಸಿ ಔಟಾದರು.
ಕಿವೀಸ್ ಪರ ಮಾರಕ ಬೌಲಿಂಗ್ ದಾಳಿ ನಡೆಸಿದ ಟ್ರೆಂಟ್ ಬೌಲ್ಟ್ 10 ಓವರ್‌ಗಳಲ್ಲಿ 37 ರನ್ ಬಿಟ್ಟುಕೊಟ್ಟು 3 ವಿಕೆಟ್ ಕಬಳಿಸಿದರು. ಇನ್ನುಳಿದಂತೆ ಲಾಕಿ ಫರ್ಗುಸನ್, ಮಿಚೆಲ್ ಸ್ಯಾಂಟ್ನರ್ ಮತ್ತು ರಚಿನ್ ರವೀಂದ್ರ ತಲಾ 2 ವಿಕೆಟ್ ಹಾಗೂ ಟಿಮ್ ಸೌಥಿ ಒಂದು ವಿಕೆಟ್ ಪಡೆದು ಮಿಂಚಿದರು.
ಕ್ಯಾನ್ಬೆರಾ: ಆಸ್ಟ್ರೇಲಿಯಾಕ್ಕೆ (Australia) ಬರೋಬ್ಬರಿ 7 ವಿಶ್ವಕಪ್ (World Cup) ಟ್ರೋಫಿಗಳನ್ನು ಗೆದ್ದುಕೊಟ್ಟ ಮಹಿಳೆಯರ ಕ್ರಿಕೆಟ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ (Meg Lanning) ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ (International Cricket) ನಿವೃತ್ತಿ ಘೋಷಿಸಿದ್ದಾರೆ.
ತಮ್ಮ ಕ್ರಿಕೆಟ್ ಜೀವನದಲ್ಲಿ ದಾಖಲೆಯ 241 ಪಂದ್ಯಗಳನ್ನಾಡಿರುವ ಅವರು, ವೃತ್ತಿಬದುಕಿಗೆ ವಿದಾಯ ಹೇಳಿದ್ದಾರೆ. ಒಟ್ಟು ಆರು ಟೆಸ್ಟ್ ಪಂದ್ಯಗಳು, 103 ಏಕದಿನ ಪಂದ್ಯಗಳು ಮತ್ತು 132 ಟಿ20 ಪಂದ್ಯಗಳನ್ನು ಆಡಿರುವ ಲ್ಯಾನಿಂಗ್, ಸದ್ಯ ಅಂತಾರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳಿದ್ದಾರೆ. ದೇಶದ ಒಳಗೆ ಕ್ರಿಕೆಟ್ ಆಡುವುದನ್ನು ಮುಂದುವರಿಸಲಿದ್ದಾರೆ. ಆಸ್ಟ್ರೇಲಿಯಾದಲ್ಲಿ ಮಾತ್ರವಲ್ಲದೆ ಭಾರತದಲ್ಲಿ ನಡೆಯಲಿರುವ ಡಬ್ಲ್ಯೂಪಿಎಲ್ ಟೂರ್ನಿಯಲ್ಲೂ ಬಹುತೇಕ ಆಡಲಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಬಾಬರ್ ಇಳಿಸಿ ನಂ.1 ಪಟ್ಟ ಏರಿದ ಗಿಲ್
ಅಂತಾರಾಷ್ಟ್ರೀಯ ಕ್ರಿಕೆಟ್‍ನಿಂದ ಹೊರಗೆ ಹೋಗುವ ನಿರ್ಧಾರ ಕೈಗೊಳ್ಳುವಾಗ ಕಷ್ಟಕರವಾಗಿತ್ತು. 13 ವರ್ಷಗಳ ಸುದೀರ್ಘ ಅಂತಾರಾಷ್ಟ್ರೀಯ ವೃತ್ತಿಜೀವನವನ್ನು ಆನಂದಿಸಿರುವ ನಾನು ನಿಜಕ್ಕೂ ಅದೃಷ್ಟಶಾಲಿಯಾಗಿದ್ದೇನೆ. ನಿವೃತ್ತಿಗೆ ಇದು ಸೂಕ್ತ ಸಮಯ ಎಂದು ನಾನು ಭಾವಿಸುತ್ತೇನೆ ಎಂದು ಅವರು ಹೇಳಿಕೊಂಡಿದ್ದಾರೆ.
ಒಟ್ಟು ಎರಡು ಏಕದಿನ ವಿಶ್ವಕಪ್ ಮತ್ತು ಐದು ಟಿ20 ವಿಶ್ವಕಪ್‍ಗಳನ್ನು ಗೆದ್ದಿರುವ ಲ್ಯಾನಿಂಗ್, ಮಹಿಳೆಯರ ಕ್ರಿಕೆಟ್ ಇತಿಹಾಸದ ಅತ್ಯಂತ ಯಶಸ್ವಿ ನಾಯಕಿಯಾಗಿದ್ದಾರೆ. 2010ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಪದಾರ್ಪಣೆ ಮಾಡಿದ ಅವರು, ಈವರೆಗೆ ತಮ್ಮ ಖಾತೆಯಲ್ಲಿ ಒಟ್ಟು 8,352 ರನ್ ಗಳಿಸಿದ್ದಾರೆ. ಇದರಲ್ಲಿ 17 ಶತಕಗಳು ಮತ್ತು 38 ಅರ್ಧ ಶತಕಗಳು ಸೇರಿವೆ.
ತಾವಾಡಿದ ಎರಡನೇ ಏಕದಿನ ಪಂದ್ಯದಲ್ಲಿಯೇ ಇಂಗ್ಲೆಂಡ್ ವಿರುದ್ಧ ಅಜೇಯ 104 ರನ್ ಬಾರಿಸಿದ ಲ್ಯಾನಿಂಗ್, 18ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಶತಕ ಸಿಡಿಸಿದ ಅತ್ಯಂತ ಕಿರಿಯ ಆಸ್ಟ್ರೇಲಿಯನ್ ಆಟಗಾರ್ತಿ ಎನಿಸಿಕೊಂಡಿದ್ದರು. ಈವರೆಗೂ ಒಟ್ಟು 182 ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡವನ್ನು ಅವರು ಮುನ್ನಡೆಸಿದ್ದಾರೆ. ಇದು ಮಹಿಳಾ ನಾಯಕಿಯಾಗಿ ಇಷ್ಟು ಹೆಚ್ಚಿನ ಪಂದ್ಯ ಮುನ್ನೆಡೆಸಿರುವುದು ದಾಖಲೆಯಾಗಿದೆ. ಇದನ್ನೂ ಓದಿ: ಪತಿಯ ಆಟ ನೋಡಲು ಬೆಂಗಳೂರಿಗೆ ಬಂದಿಳಿದ ಅನುಷ್ಕಾ
ಬೆಂಗಳೂರು: ಶ್ರೀಲಂಕಾದ ಏಂಜಲೋ ಮಾಥ್ಯೂಸ್ (Angelo Mathews) ಮತ್ತು ಬಾಂಗ್ಲಾದೇಶ ಶಕಿಬ್ ಉಲ್ ಹಸನ್ (Shakib Al Hasan) ಕಿತ್ತಾಟದ ಮಧ್ಯೆ ವೀರೇಂದ್ರ ಸೆಹ್ವಾಗ್ ಸುದ್ದಿಯಾಗುತ್ತಿದ್ದಾರೆ.
ದೆಹಲಿಯಲ್ಲಿ ನಡೆದ ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಏಂಜಲೋ ಮಾಥ್ಯೂಸ್ ಒಂದು ಎಸೆತ ಎದುರಿಸದೇ ಟೈಮ್ಡ್ ಔಟ್‌ಗೆ (timed out) ಬಲಿಯಾಗಿದ್ದರು. ಈ ಮೂಲಕ ಟೈಮ್ಡ್ ಔಟ್‌ಗೆ ಬಲಿಯಾದ ವಿಶ್ವದ ಮೊದಲ ಬ್ಯಾಟರ್ ಎಂಬ ಕುಖ್ಯಾತಿಗೆ ಪಾತ್ರವಾಗಿದ್ದಾರೆ.
ಟೈಮ್ಡ್ ಔಟ್ ಮನವಿ ಮಾಡಿದ್ದಕ್ಕೆ ಶಕಿಬ್ ಉಲ್ ಹಸನ್ ಸೇರಿದಂತೆ ಬಾಂಗ್ಲಾ (Bangladesh) ತಂಡದ ಕ್ರೀಡಾ ಸ್ಪೂರ್ತಿಯ ಬಗ್ಗೆ ಹಲವು ಮಂದಿ ಪ್ರಶ್ನೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಭಾರತ ಕ್ರಿಕೆಟ್ (Team India) ಅಭಿಮಾನಿಗಳು 2010 ಪಂದ್ಯದಲ್ಲಿ ಸೆಹ್ವಾಗ್ (Virender sehwag) ಅವರ ಉದಾಹರಣೆ ನೀಡಿ ಶ್ರೀಲಂಕಾ ತಂಡದ ಕ್ರೀಡಾ ಸ್ಪೂರ್ತಿಯ ಬಗ್ಗೆ ಪ್ರಶ್ನೆ ಕೇಳುತ್ತಿದ್ದಾರೆ.
ಸುಲಭದ ಸವಾಲನ್ನು ಬೆನ್ನಟ್ಟಿದ ಭಾರತ 34 ಓವರ್‌ಗಳಲ್ಲಿ 166 ರನ್‌ಗಳಿಸಿತ್ತು. ಸೆಹ್ವಾಗ್ 99 ರನ್‌ಗಳಿಸಿದ್ದರೆ ಧೋನಿ 23 ರನ್‌ಗಳಿಸಿ ಕ್ರೀಸ್‌ನಲ್ಲಿದ್ದರು. ಭಾರತದ ಗೆಲುವಿಗೆ ಕೇವಲ 5 ರನ್ ಬೇಕಿತ್ತು.
ರಂದೀವ್ 35ನೇ ಓವರ್ ಎಸೆಯಲು ಬಂದಾಗ ಸೆಹ್ವಾಗ್ ಸ್ಟ್ರೈಕ್‌ನಲ್ಲಿದ್ದರು. ಮೊದಲ ಎಸೆತವನ್ನು ಸೆಹ್ವಾಗ್ ಬ್ಯಾಟಿನಿಂದ ತಡೆಯಲು ಯತ್ನಿಸಿದರು. ಆದರೆ ಬಾಲ್ ಬ್ಯಾಟಿಗೆ ಸಿಗಲಿಲ್ಲ. ಈ ಚೆಂಡನ್ನು ನಾಯಕನಾಗಿದ್ದ ಕುಮಾರ ಸಂಗಕ್ಕಾರ ಸಹ ಹಿಡಿಯದ ಕಾರಣ ಬೌಂಡರಿಗೆ ಹೋಗಿತ್ತು. ಬೈ ಮೂಲಕ ಇತರೇ 4 ರನ್ ಸೇರ್ಪಡೆಯಾದ ಕಾರಣ ಸ್ಕೋರ್ ಸಮವಾಗಿತ್ತು. ಹೀಗಿದ್ದರೂ ಸೆಹ್ವಾಗ್ 1 ರನ್ ಗಳಿಸಿ ಶತಕ ಹೊಡೆಯಬಹುದು ಎಂದು ಅಭಿಮಾನಿಗಳು ನಿರೀಕ್ಷಿಸಿದ್ದರು. ನಂತರ ಎರಡು ಎಸೆತದಲ್ಲಿ ಯಾವುದೇ ರನ್ ಬಂದಿರಲಿಲ್ಲ. 4ನೇ ಎಸೆತವನ್ನು ಸೆಹ್ವಾಗ್ ಲಾಂಗ್ ಅಫ್‌ನಲ್ಲಿ ಸಿಕ್ಸರ್‌ಗೆ ಅಟ್ಟಿದ್ದರು.
Where is Srilankan Team now here .. Have you seen the Spirit of the Game!
ಸೆಹ್ವಾಗ್ ಸಿಕ್ಸ್ ಸಿಡಿಸಿದ್ದರೂ ಶತಕ ಪೂರ್ಣಗೊಂಡಿರಲಿಲ್ಲ. ಯಾಕೆಂದರೆ ರಂದೀವ್ ನೋಬಾಲ್ ಎಸೆದಿದ್ದರು. ನೋಬಾಲ್‌ನಲ್ಲಿ ಗೇಮ್ ಕೊನೆಯಾದರೆ ಕೇವಲ ಒಂದು ರನ್ ಸಿಗುತ್ತದೆ ಹೊರತು ಬ್ಯಾಟರ್ ಖಾತೆಗೆ ಆ ರನ್ ಸೇರ್ಪಡೆಯಾಗುವುದಿಲ್ಲ. ಐಸಿಸಿಯ ಈ ನಿಯಮದಿಂದಾಗಿ ಸೆಹ್ವಾಗ್ ಶತಕ ಪೂರ್ಣಗೊಂಡಿರಲಿಲ್ಲ.
ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ನಂತರ ಪ್ರತಿಕ್ರಿಯಿಸಿದ ಸೆಹ್ವಾಗ್, ಒಬ್ಬ ಬ್ಯಾಟ್ಸ್‌ಮನ್ 99 ರನ್ ಗಳಿಸಿದ್ದಾಗ ಮತ್ತು ಸ್ಕೋರ್‌ಗಳು ಸಮವಾಗಿದ್ದಾಗ ಬೌಲರ್‌ಗಳು ನೋ-ಬಾಲ್‌ಗಳು ಮತ್ತು ವೈಡ್‌ಗಳನ್ನು ಎಸೆಯುವುದು ಸಾಮಾನ್ಯ ಎಂದು ಹೇಳಿ ಲಂಕಾ ತಂಡದ ಕ್ರೀಡಾ ಸ್ಫೂರ್ತಿಯ ಬಗ್ಗೆ ಮಾತನಾಡಿದ್ದರು.
ಈ ವಿಚಾರವನ್ನು ಮುಂದಿಟ್ಟುಕೊಂಡು ಟೀಂ ಇಂಡಿಯಾ ಅಭಿಮಾನಿಗಳು ಈಗ ಶ್ರೀಲಂಕಾ ತಂಡವನ್ನು ಪ್ರಶ್ನಿಸುತ್ತಿದ್ದಾರೆ. ಈಗ ನೀವು ಬಾಂಗ್ಲಾ ತಂಡದ ಕ್ರೀಡಾ ಸ್ಪೂರ್ತಿಯ ಬಗ್ಗೆ ಮಾತನಾಡುತ್ತಿದ್ದೀರಿ. ಆದರೆ ಅಂದು ಕುಮಾರ ಸಂಗಕ್ಕಾರ ಹಿಡಿಯಬಹುದಾದ ಚೆಂಡನ್ನು ಹಿಡಿಯದ ಕಾರಣ ಅದು ಬೌಂಡರಿಗೆ ಹೋಗಿತ್ತು. ಕೊನೆಗೆ ರಂದೀವ್ ಉದ್ದೇಶಪೂರ್ವಕವಾಗಿ ನೋಬಾಲ್ ಎಸೆದು ಸೆಹ್ವಾಗ್ ಶತಕವನ್ನು ತಡೆದಿದದ್ದು ಸರಿಯೇ ಎಂದು ಖಾರವಾಗಿ ಪ್ರಶ್ನಿಸಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ಕೊಲಂಬೊ: ಪ್ರಸ್ತುತ ನಡೆಯುತ್ತಿರುವ ಏಕದಿನ ವಿಶ್ವಕಪ್ (World Cup 2023) ಕ್ರಿಕೆಟ್ ಟೂರ್ನಿಯಲ್ಲಿ ಶ್ರೀಲಂಕಾ ತಂಡ ಟೀಂ ಇಂಡಿಯಾ (Team India) ವಿರುದ್ಧ ಹೀನಾಯ ಸೋಲನುಭವಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಕ್ರೀಡಾ ಸಚಿವ ರೋಶನ್ ರಣಸಿಂಘೆ (Roshan Ranasinghe) ಶ್ರೀಲಂಕಾದ ರಾಷ್ಟ್ರೀಯ ಕ್ರಿಕೆಟ್ ಮಂಡಳಿಯನ್ನೇ ವಜಾಗೊಳಿಸಿದ್ದಾರೆ.
ಕ್ರಿಕೆಟ್ ಮಂಡಳಿಯನ್ನು ವಜಾಗೊಳಿಸಿದ ನಂತರ 1996ರಲ್ಲಿ ಶ್ರೀಲಂಕಾ ತಂಡದ ನಾಯಕನಾಗಿ ಏಕದಿನ ವಿಶ್ವಕಪ್ ಗೆದ್ದುಕೊಟ್ಟಿದ್ದ ಅರ್ಜುನ ರಣತುಂಗ (Arjuna Ranatunga) ಅವರನ್ನ ಮಂಡಳಿಯ ಮಧ್ಯಂತರ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಇದನ್ನೂ ಓದಿ: 49th Century: ಅಭಿಮಾನಿಗಳ ʻವಿರಾಟೋತ್ಸವʼ – ಮುಗಿಲು ಮುಟ್ಟಿದ ಸಂಭ್ರಮ
ಇದೇ ತಿಂಗಳ ನವೆಂಬರ್ 2ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ 358 ರನ್‌ಗಳ ಬೃಹತ್ ಮೊತ್ತದ ಗುರಿ ನೀಡಿತ್ತು. ಆದ್ರೆ ಶ್ರೀಲಂಕಾ (Sri Lanka) ಕೇವಲ 55 ರನ್‌ಗಳಿಗೆ ಆಲೌಟ್ ಆಗಿ 302ರನ್ ಗಳ ಸೋಲು ಅನುಭವಿಸಿತ್ತು. ಪಾಕಿಸ್ತಾನ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ನಡೆದ ಏಕದಿನ ಏಷ್ಯಾಕಪ್ ಟೂರ್ನಿಯ ಫೈನಲ್‌ನಲ್ಲೂ ಶ್ರೀಲಂಕಾ ಕೇವಲ 50 ರನ್‌ಗಳಿಗೆ ಆಲೌಟ್ ಆಗಿ ತವರಿನಲ್ಲೇ ಮುಖಭಂಗ ಅನುಭವಿತ್ತು.
ಲಂಕಾದ ಈ ಸೋಲಿನಿಂದ ತೀವ್ರ ಸಿಟ್ಟಿಗೆದ್ದ ಕ್ರೀಡಾ ಸಚಿವ ರಣಸಿಂಘೆ, ಇದೊಂದು ದೊಡ್ಡ ಅವಮಾನ ಕೂಡಲೇ ಮಂಡಳಿ ಸದಸ್ಯರು ರಾಜೀನಾಮೆ ಕೊಟ್ಟು ಹೋಗಬೇಕು. ಆಟಗಾರರೂ ಸಹ ನೈತಿಕ ಹೊಣೆಹೊತ್ತು ಸ್ವಯಂ ಪ್ರೇರಿತ ರಾಜೀನಾಮೆ ಸಲ್ಲಿಸಬೇಕು. ಅಲ್ಲದೇ ಶ್ರೀಲಂಕಾ ಕ್ರಿಕೆಟ್ ಅಭಿಮಾನಿಗಳೂ ಸಹ ಈ ಸೋಲಿನ ವಿರುದ್ಧ ಪ್ರತಿಭಟಿಸಿದ್ದರು. ಆದರಿಂದು (ನ.6) ಅಧ್ಯಕ್ಷ ಶಮ್ಮಿ ಸಿಲ್ವಾ ನೇತೃತ್ವದ ರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಪದಾಧಿಕಾರಿಗಳನ್ನು ವಜಾಗೊಳಿಸಿ ಮಧ್ಯಂತರ ಅಧ್ಯಕ್ಷರನ್ನಾಗಿ ಅರ್ಜುನ ರಣತುಂಗ ಅವರಿಗೆ ಅಧಿಕಾರ ನೀಡಲಾಗಿದೆ. ಇದನ್ನೂ ಓದಿ: ಕೊಹ್ಲಿ 49ನೇ ಶತಕವನ್ನು ಚಪ್ಪಾಳೆಯೊಂದಿಗೆ ಸಂಭ್ರಮಿಸಿದ ರೋಹಿತ್ ಶರ್ಮಾ ಪತ್ನಿ ರಿತಿಕಾ
ಸದ್ಯ ಮಾಜಿ ನಾಯಕ ಅರ್ಜುನ ರಣತುಂಗ ಅವರನ್ನು ಮಂಡಳಿಯ ಹಂಗಾಮಿ ಅಧ್ಯಕ್ಷರಾಗಿ ನೇಮಿಸಿರುವುದಾಗಿ ಸಚಿವರು ಆದೇಶದಲ್ಲಿ ತಿಳಿಸಿದ್ದಾರೆ. ಹೊಸದಾಗಿ ರಚಿಸಲಾದ 7 ಸದಸ್ಯರ ಸಮಿತಿಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ನಿವೃತ್ತ ನ್ಯಾಯಾಧೀಶರು ಮತ್ತು ಮಂಡಳಿಯ ಮಾಜಿ ಅಧ್ಯಕ್ಷ ಉಪಾಲಿ ಧರ್ಮದಾಸ್ ಇದ್ದಾರೆ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.
ಕೋಲ್ಕತ್ತಾ: ಕ್ರಿಕೆಟ್ (Cricket) ದಂತಕತೆ ಸಚಿನ್ ತೆಂಡೂಲ್ಕರ್ (Sachin Tendulkar) ನನ್ನ ಹೀರೋ, ಎಂದಿಗೂ ನಾನು ಅವರಿಗೆ ಸಮನಲ್ಲ ಎಂದು ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ (Virat Kohli) ಹೇಳಿದ್ದಾರೆ. ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್‍ನಲ್ಲಿ 49ನೇ ಶತಕವನ್ನು ಸಿಡಿಸಿ ಸಚಿನ್ ದಾಖಲೆ ಸರಿಗಟ್ಟಿದ ಬಳಿಕ ಈ ರೀತಿ ಹೇಳಿಕೊಂಡಿದ್ದಾರೆ.
ನಾನು ತೆಂಡೂಲ್ಕರ್ ಬ್ಯಾಟಿಂಗ್ ನೋಡುತ್ತಾ ಬೆಳೆದಿದ್ದೇನೆ. ಅವರ ಬ್ಯಾಟಿಂಗ್ ಶೈಲಿ ಅತ್ಯುತ್ತಮವಾದದ್ದು. ನಾನು ಆ ಮಟ್ಟಕ್ಕೆ ಏರಲು ಸಾಧ್ಯವಿಲ್ಲ. ಏನೇ ಆದರೂ ಸಚಿನ್ ನನ್ನ ನಾಯಕರಾಗಿರುತ್ತಾರೆ ಎಂದು ಕೊಹ್ಲಿ ಹೇಳಿದ್ದಾರೆ.
ನಾನು ಎಲ್ಲಿಂದ ಬಂದಿದ್ದೇನೆ ಎಂದು ನನಗೆ ತಿಳಿದಿದೆ ಮತ್ತು ಇಲ್ಲಿ ನಿಂತು ಸಚಿನ್ ಅವರಿಂದ ಮೆಚ್ಚುಗೆಯನ್ನು ಪಡೆಯುವುದು ನನಗೆ ತುಂಬಾ ಖುಷಿಕೊಟ್ಟಿದೆ ಎಂದಿದ್ದಾರೆ.
ಭಾನುವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ 49ನೇ ಶತಕವನ್ನು ಕೊಹ್ಲಿ ಸಿಡಿಸಿದ್ದಾರೆ. ಅಂಗಳದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ಮಾಡಿದ ಅವರು 119 ಎಸೆತಗಳಲ್ಲಿ ಶತಕ ಸಿಡಿಸಿದ್ದು, ಸಚಿನ್ ದಾಖಲೆ ಮೀರಿಸಲು ಒಂದೇ ಸೆಂಚುರಿ ಬಾಕಿಯಿದೆ. ಇದು ಅವರಿಗೆ ವಿಶೇಷ ದಿನವಾಗಿತ್ತು, ಕೇವಲ ದಾಖಲೆಯಿಂದಾಗಿ ಮಾತ್ರವಲ್ಲದೆ ಅವರ ಜನ್ಮದಿನ ಕೂಡ ಆಗಿತ್ತು. ಸಚಿನ್ ತೆಂಡೂಲ್ಕರ್ 452 ಇನ್ನಿಂಗ್ಸ್‌ಗಳಲ್ಲಿ 49 ಶತಕಗಳನ್ನು ಸಿಡಿಸಿ ಸಾಧನೆ ಮಾಡಿದರೆ, ವಿರಾಟ್ ಕೊಹ್ಲಿ ಕೇವಲ 277 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ.
ನವದೆಹಲಿ: ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಟೀಂ ಇಂಡಿಯಾ (Team India) ಆಟಗಾರ ವಿರಾಟ್ ಕೊಹ್ಲಿ (Virat Kohli) ಅವರಿಗೆ ಇಂದು (ನ.5) 35ನೇ ಹುಟ್ಟುಹಬ್ಬದ ಸಂಭ್ರಮ. ಕೊಹ್ಲಿ ಅವರು ಅಪಾರ ದಾಖಲೆ ಮೂಲಕ ಕ್ರಿಕೆಟ್ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ದಾಖಲೆ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.
ವಿರಾಟ್ ಕೊಹ್ಲಿ ವೃತ್ತಿ ಜೀವನದಲ್ಲಿ 78 ಶತಕಗಳನ್ನ ಪೂರೈಸಿದ್ದಾರೆ. ಈ ಪೈಕಿ ಟೆಸ್ಟ್ ಕ್ರಿಕೆಟ್‌ನಲ್ಲಿ 29, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 1 ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ಒಟ್ಟು 48 ಶತಕ ಸಿಡಿಸಿದ್ದು, ಸದ್ಯದಲ್ಲೇ 49ನೇ ಶತಕ ಸಿಡಿಸಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಶತಕ ದಾಖಲೆಯನ್ನು ಸರಿಗಟ್ಟುವ ಸನಿಹದಲ್ಲಿದ್ದಾರೆ. ಟಿ20 ಕ್ರಿಕೆಟ್‍ನಲ್ಲಿ ಅತಿಹೆಚ್ಚು ರನ್ ಗಳಿಸಿರುವ ಹೆಗ್ಗಳಿಕೆ ವಿರಾಟ್ ಕೊಹ್ಲಿಗೆ ಇದ್ದು, 115 ಪಂದ್ಯ ಆಡಿ 4,008 ರನ್ ಗಳಿಸಿದ್ದಾರೆ. ಟೆಸ್ಟ್ ಕ್ರಿಕೆಟ್‍ನಲ್ಲಿ ಅತಿಹೆಚ್ಚು ದ್ವಿಶತಕ ಗಳಿಸಿದ ಆಟಗಾರರಲ್ಲಿ ವಿರಾಟ್ ಕೊಹ್ಲಿ 5ನೇ ಸ್ಥಾನದಲ್ಲಿದ್ದು, 7 ಬಾರಿ ದ್ವಿಶತಕ ಗಳಿಸಿದ್ದಾರೆ. ಏಕದಿನ ಕ್ರಿಕೆಟ್‍ನಲ್ಲಿ ವೇಗವಾಗಿ 10,000 ರನ್ ಗಳಿಸಿರುವ ಕೊಹ್ಲಿ ಕ್ರಿಕೆಟ್ ದಂತಕತೆ ಸಚಿನ್ ದಾಖಲೆ ಮುರಿದಿದ್ದಾರೆ. ಈ ಮೂಲಕ ಮೊದಲ ಸ್ಥಾನ ಪಡೆದಿದ್ದಾರೆ. ಇದನ್ನೂ ಓದಿ: ನಾನು, ಧೋನಿ ಆತ್ಮೀಯ ಸ್ನೇಹಿತರಲ್ಲ: ಯುವರಾಜ್ ಸಿಂಗ್
2018ರಲ್ಲಿ ಐಸಿಸಿ ನೀಡುವ ಮೂರು ವಿಭಾಗದ 3 ಪ್ರಶಸ್ತಿಗಳನ್ನು ಪಡೆದಿದ್ದಾರೆ. ಈ ದಾಖಲೆ ಮಾಡಿರುವುದು ಕೊಹ್ಲಿ ಮಾತ್ರ. ಭಾರತದ ಪರ ಒಟ್ಟು 514 ಪಂದ್ಯ ಆಡಿರುವ ಕೊಹ್ಲಿ ಈ ಪೈಕಿ ಭಾರತದ 308 ಗೆಲುವಿನಲ್ಲಿ ಸಾಕ್ಷಿಯಾಗಿದ್ದಾರೆ. ಟೆಸ್ಟ್‌ಗಳಲ್ಲಿ ನಾಯಕನಾಗಿ ವೇಗವಾಗಿ 4000 ರನ್ ಗಳಿಸಿರುವ ದಾಖಲೆ ಕೂಡ ಅವರ ಹೆಸರಿನಲ್ಲಿದೆ.
ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ 16 ಶತಕ ಸಿಡಿಸಿದ್ದಾರೆ. ಕೊಹ್ಲಿ ನಾಯಕನಾಗಿ ಭಾರತದ 71 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಮೊದಲ ಬಾರಿಗೆ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ ಗೆದ್ದುಕೊಂಡಿತ್ತು.
ಕೋಲ್ಕತ್ತಾ: ಈಡನ್ ಗಾರ್ಡನ್ಸ್‌ನಲ್ಲಿ (Eden Gardens) ಭಾನುವಾರ ನಡೆಯತ್ತಿರುವ ಭಾರತ (India) ಮತ್ತು ದಕ್ಷಿಣ ಆಫ್ರಿಕಾ (South Africa) ನಡುವಿನ ವಿಶ್ವಕಪ್ (World Cup) ಕ್ರಿಕೆಟ್ (Cricket) ಪಂದ್ಯದ ಟಿಕೆಟ್‌ಗಳನ್ನು ಬ್ಲ್ಯಾಕ್ ಮಾರ್ಕೆಟಿಂಗ್ ಮಾಡಿದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಈವೆಂಟ್‌ನ ಟಿಕೆಟ್ ಮಾರಾಟದ ಬಗ್ಗೆ ಮಾಹಿತಿ ನೀಡುವಂತೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ (Roger Binny) ಅವರಿಗೆ ನೋಟಿಸ್ (Notice) ನೀಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶನಿವಾರ ಸಂಜೆ ತಡವಾಗಿ ಹೊರಡಿಸಲಾದ ನೋಟಿಸ್‌ನಲ್ಲಿ, ಟಿಕೆಟ್‌ಗಳ ಬ್ಲ್ಯಾಕ್ ಮಾರ್ಕೆಟಿಂಗ್ (Black Marketing) ಕುರಿತು ದೂರುಗಳ ತನಿಖೆ ನಡೆಸುತ್ತಿರುವ ಮೈದಾನ ಪೊಲೀಸ್ ಠಾಣೆಯ ಅಧಿಕಾರಿಗೆ ದಾಖಲೆಗಳನ್ನು ಸಲ್ಲಿಸುವಂತೆ ಬಿಸಿಸಿಐ ಅಧ್ಯಕ್ಷರಿಗೆ ತಿಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ನಾನು, ಧೋನಿ ಆತ್ಮೀಯ ಸ್ನೇಹಿತರಲ್ಲ: ಯುವರಾಜ್ ಸಿಂಗ್
ಮಂಗಳವಾರದ ಕೆಲಸದ ಸಮಯದಲ್ಲಿ ಮೈದಾನ ಪಿಎಸ್‌ನ ತನಿಖಾಧಿಕಾರಿಗೆ ವೈಯಕ್ತಿಕವಾಗಿ ಅಥವಾ ಅವರ ಸಂಸ್ಥೆಯ ಯಾವುದೇ ಸಮರ್ಥ ವ್ಯಕ್ತಿಯ ಮೂಲಕ ಟಿಕೆಟ್‌ಗಳ ಮಾರಾಟಕ್ಕೆ ಸಂಬಂಧಿಸಿದ ದಾಖಲೆಗಳು ಮತ್ತು ಮಾಹಿತಿಯನ್ನು ಒದಗಿಸುವಂತೆ ಬಿಸಿಸಿಐ ಅಧ್ಯಕ್ಷರಿಗೆ ನೋಟಿಸ್ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವಕಪ್‌ನಿಂದ ಹೊರಗುಳಿದ ಪಾಂಡ್ಯ – ಉಪನಾಯಕನಾಗಿ ಕೆಎಲ್ ರಾಹುಲ್ ಆಯ್ಕೆ
ಬ್ಲ್ಯಾಕ್ ಮಾರ್ಕೆಟಿಂಗ್ ಕುರಿತು ಕೋಲ್ಕತ್ತಾ ಪೊಲೀಸರು ಇದುವರೆಗೆ 19 ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ 108 ಟಿಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಟಿಕೆಟ್‌ಗಳ ಬ್ಲ್ಯಾಕ್ ಮಾರ್ಕೆಟಿಂಗ್‌ಗೆ ಸಂಬಂಧಿಸಿದಂತೆ ಏಳು ಪ್ರಕರಣಗಳನ್ನು ದಾಖಲಿಸಿದ್ದಾರೆ. ಇದನ್ನೂ ಓದಿ: ವಿಶ್ವಕಪ್ ಟೂರ್ನಿಯಿಂದಲೇ ಪಾಂಡ್ಯ ಔಟ್ – ಬದಲಿ ಆಟಗಾರನಾಗಿ ಈ ಕನ್ನಡಿಗ ಆಯ್ಕೆ
ಬೆಂಗಳೂರು: ಸದ್ಯ ಟೀಂ ಇಂಡಿಯಾ ಸ್ಟಾರ್ ಪ್ಲೇಯರ್ ವಿರಾಟ್ ಕೊಹ್ಲಿ (Virat Kohli), ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ (Sachin Tendulkar) ಅವರ ಶತಕ ದಾಖಲೆ ಸರಿಗಟ್ಟುತ್ತಾರೆ ಎಂಬುದು ಚರ್ಚೆಯಲ್ಲಿರುವ ವಿಷಯ. ಆದ್ರೆ ಕೊಹ್ಲಿಗೂ ಮುನ್ನವೇ ನ್ಯೂಜಿಲೆಂಡ್ ಕ್ರಿಕೆಟಿಗ ರಚಿನ್ ರವೀಂದ್ರ (Rachin Ravindra) ತಾನು ಪ್ರವೇಶಿಸಿದ ಚೊಚ್ಚಲ ವಿಶ್ವಕಪ್ ಆವೃತ್ತಿಯಲ್ಲೇ ಸಚಿನ್ ತೆಂಡೂಲ್ಕರ್ ಅವರ ಶತಕ ದಾಖಲೆಯೊಂದನ್ನ ಮುರಿದಿದ್ದಾರೆ.
ಶನಿವಾರ (ನ.4) ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (M Chinnaswamy Stadium) ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ಪಾಕಿಸ್ತಾನದ ಎದುರು 50 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಭರ್ಜರಿ 401 ರನ್ ಬಾರಿಸಿತು. ಪಾಕ್ ವಿರುದ್ಧ ಆರಂಭಿಕನಾಗಿ ಕಣಕ್ಕಿಳಿದ ರಚಿನ್ ರವೀಂದ್ರ ಭರ್ಜರಿ ಶತಕ ಸಿಡಿಸುವ ಮೂಲಕ ಅಭಿಮಾನಿಗಳಿಗೆ ರಸದೌತಣ ನೀಡಿದರು. ಇದನ್ನೂ ಓದಿ: ವಿಶ್ವಕಪ್ ಟೂರ್ನಿಯಿಂದಲೇ ಪಾಂಡ್ಯ ಔಟ್ – ಬದಲಿ ಆಟಗಾರನಾಗಿ ಈ ಕನ್ನಡಿಗ ಆಯ್ಕೆ
ಈ ಪಂದ್ಯದಲ್ಲಿ ಪಾಕ್ ಬೌಲರ್‌ಗಳನ್ನ ಬೆಂಡೆತ್ತಿದ್ದ ರಚಿನ್ 88 ಎಸೆತಗಳಲ್ಲಿ 14 ಬೌಂಡರಿ, 1 ಸಿಕ್ಸರ್‌ನೊಂದಿಗೆ 100 ರನ್ ಬಾರಿಸಿದರು. ಒಟ್ಟು 94 ಎಸೆತಗಳನ್ನು ಎದುರಿಸಿದ ರವೀಂದ್ರ 15 ಬೌಂಡರಿ, 1 ಸಿಕ್ಸರ್ ಸೇರಿ 108 ರನ್ ಗಳಿಸಿದರು. ಈ ಶತಕದೊಂದಿಗೆ ಭಾರತದ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ವಿಶೇಷ ದಾಖಲೆಯೊಂದನ್ನ ಮುರಿದ ಸಾಧನೆ ಮಾಡಿದರು. ಆಸ್ಟ್ರೇಲಿಯಾ ವಿರುದ್ಧ ಧರ್ಮಶಾಲಾ ಕ್ರೀಡಾಂಗಣದಲ್ಲಿ 77 ಎಸೆತಗಳಲ್ಲಿ ಶತಕ ಸಿಡಿಸಿ ಸಚಿನ್ ದಾಖಲೆ ಸರಿಗಟ್ಟಿದ ರಚಿನ್, ಪ್ರಸಕ್ತ ವಿಶ್ವಕಪ್ ಆವೃತ್ತಿಯಲ್ಲಿ ಶತಕ ಸಿಡಿಸಿ ಸಚಿನ್ ದಾಖಲೆಯನ್ನ ಉಡೀಸ್ ಮಾಡಿದ್ದಾರೆ. ಜೊತೆಗೆ ಒಂದೇ ವಿಶ್ವಕಪ್ ಟೂರ್ನಿಯಲ್ಲಿ 3 ಶತಕ ಸಿಡಿಸಿದ ಕಿವೀಸ್ ಮೊದಲ ಆಟಗಾರ ಎಂಬ ಖ್ಯಾತಿಯನ್ನೂ ಗಳಿಸಿದ್ದಾರೆ.
24 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಏಕದಿನ ವಿಶ್ವಕಪ್ ಇತಿಹಾಸದಲ್ಲಿ 2 ಶತಕಗಳನ್ನು ಗಳಿಸಿದವರಲ್ಲಿ ಸಚಿನ್ ತೆಂಡೂಲ್ಕರ್ ಮೊದಲಿಗರಾಗಿದ್ದರು. ಸಚಿನ್ 23 ವರ್ಷದವರಾಗಿದ್ದಾಗ 1996ರ ವಿಶ್ವಕಪ್‌ನಲ್ಲಿ (World Cup) 2 ಶತಕ ಸಿಡಿಸಿದ್ದರು. ಇದೀಗ 23 ವರ್ಷ ವಯಸ್ಸಿನ ರಚಿನ್ ರವೀಂದ್ರ 2023ರ ವಿಶ್ವಕಪ್ ಟೂರ್ನಿಯಲ್ಲಿ 3 ಶತಕ ಸಿಡಿಸಿ ಸಚಿನ್ ದಾಖಲೆ ಮುರಿದಿದ್ದಾರೆ. ಇದನ್ನೂ ಓದಿ: World Cup 2023: ಶತಕ ಸಿಡಿಸಿ ಮೆರೆದಾಡಿದ ರಚಿನ್ – ಪಾಕಿಸ್ತಾನಕ್ಕೆ 402 ರನ್‌ಗಳ ಗುರಿ
ಕೊಹ್ಲಿಯನ್ನೂ ಹಿಂದಿಕ್ಕಿದ ರಚಿನ್: ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್‌ನಲ್ಲಿ 7 ಪಂದ್ಯಗಳಲ್ಲಿ ಬರೋಬ್ಬರಿ 4 ಶತಕ ಸಿಡಿಸಿರುವ ದಕ್ಷಿಣ ಆಫ್ರಿಕಾ ಆಟಗಾರ ಕ್ವಿಂಟನ್ ಡಿಕಾಕ್ 545 ರನ್ ಸಿಡಿಸಿ ವಿಶ್ವಕಪ್ ಟೂರ್ನಿಯ ಟಾಪ್ ಸ್ಕೋರರ್‌ಗಳಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಆದ್ರೆ ಕೊಹ್ಲಿಯನ್ನು ಹಿಂದಿಕ್ಕಿದ ರವೀಂದ್ರ 8 ಪಂದ್ಯಗಳಲ್ಲಿ 3 ಶತಕ ಸಿಡಿಸಿರುವ 523 ರನ್‌ಗಳೊಂದಿಗೆ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ. 442 ರನ್ ಬಾರಿಸಿರುವ ಕೊಹ್ಲಿ 3ನೇ ಸ್ಥಾನ, 428 ರನ್ ಗಳಿಸಿರುವ ಡೇವಿಡ್ ವಾರ್ನರ್ 4ನೇ ಸ್ಥಾನದಲ್ಲಿದ್ದರೆ, 402 ರನ್ ಬಾರಿಸಿರುವ ರೋಹಿತ್ ಶರ್ಮಾ 5ನೇ ಸ್ಥಾನದಲ್ಲಿದ್ದಾರೆ.
ರಚಿನ್ ರವೀಂದ್ರ ಯಾರು?
ರಚಿನ್ ರವೀಂದ್ರ ಅವರು ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿ ಜನಿಸಿದ್ದರೂ ಅವರ ಅಪ್ಪ-ಅಮ್ಮ ಮೂಲತಃ ಬೆಂಗಳೂರಿನವರು. ತಂದೆ ರವಿ ಕೃಷ್ಣಮೂರ್ತಿ ಹಾಗೂ ತಾಯಿ ದೀಪಾ ಕೃಷ್ಣಮೂರ್ತಿ ಅವರು ಸಾಫ್ಟ್‌ವೇರ್ ಎಂಜಿನಿಯರ್‌ಗಳಾಗಿದ್ದು, ಉದ್ಯೋಗ ಅರಸಿ 1990ರ ದಶಕದಲ್ಲಿ ಬೆಂಗಳೂರಿನಿಂದ ನ್ಯೂಜಿಲೆಂಡ್‌ಗೆ ತೆರಳಿದ್ದರು. ರಚಿನ್ ರವೀಂದ್ರ ಅವರ ತಂದೆ, ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದರೂ ಅಪ್ಪಟ ಕ್ರಿಕೆಟ್ ಅಭಿಮಾನಿ. ಅದರಲ್ಲೂ ರವಿ ಕೃಷ್ಣಮೂರ್ತಿ ಅವರು ಭಾರತೀಯ ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡೂಲ್ಕರ್ ಹಾಗೂ ರಾಹುಲ್ ದ್ರಾವಿಡ್ ಅವರ ಪಕ್ಕಾ ಫ್ಯಾನ್. ಈ ಕಾರಣದಿಂದಾಗಿ ರಾಹುಲ್ ದ್ರಾವಿಡ್ (Rahul Dravid) ಹೆಸರಿನಿಂದ ʻರʼ ಮತ್ತು ಸಚಿನ್ ತೆಂಡೂಲ್ಕರ್ (Sachin Tendulkar) ಹೆಸರಿನಿಂದ ʻಚಿನ್ʼ ಅಕ್ಷರಗಳನ್ನು ತೆಗೆದುಕೊಂಡು ತಮ್ಮ ಪುತ್ರನಿಗೆ ರಚಿನ್ ಎಂದು ಹೆಸರಿಟ್ಟಿದ್ದರು ಎಂಬುದು ವಿಶೇಷ.