Tag: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

  • ಜಾತ್ಯಾತೀತ ರಾಷ್ಟ್ರದಲ್ಲಿ ಜಾತಿ ಗಣತಿ ಯಾಕೆ? – ವಿಶ್ವಪ್ರಸನ್ನ ತೀರ್ಥ ಶ್ರೀ

    ಜಾತ್ಯಾತೀತ ರಾಷ್ಟ್ರದಲ್ಲಿ ಜಾತಿ ಗಣತಿ ಯಾಕೆ? – ವಿಶ್ವಪ್ರಸನ್ನ ತೀರ್ಥ ಶ್ರೀ

    ಶಿವಮೊಗ್ಗ: ಸರ್ಕಾರ ಹಣ ಖರ್ಚು ಮಾಡಿ ಜಾತಿ ಜನಗಣತಿ ಮಾಡಿ ಮುಚ್ಚಿಟ್ಟಿದೆ. ಜಾತ್ಯಾತೀತವಾಗಿರುವ ರಾಷ್ಟ್ರದಲ್ಲಿ ಜಾತಿ ಗಣತಿ ಯಾಕೇ? ಈ ಜಾತಿ ಗಣತಿ ಯಾಕೇ ಬೇಕು? ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Vishwaprasanna Tirtha Shri) ಪ್ರಶ್ನಿಸಿದ್ದಾರೆ.

    ಶಿವಮೊಗ್ಗದ (Shivamogga) ಮಲ್ಲೇಶ್ವರ ನಗರದಲ್ಲಿರುವ ಮಾಜಿ ಡಿಸಿಎಂ ಈಶ್ವರಪ್ಪ (K.S Eshwarappa) ಅವರ ಮನೆಗೆ ಶ್ರೀಗಳು ಭೇಟಿ ನೀಡಿದ್ದರು. ಈ ವೇಳೆ ಅವರು ಮಾತನಾಡಿದ ಅವರು, ಒಂದು ಕಡೆ ಜಾತಿ ಆಧಾರದಲ್ಲಿ ರಾಜೀಕಿಯ ಬೇಡ ಎನ್ನುತ್ತೀರಿ. ಇನ್ನೊಂದು ಕಡೆ ಜಾತಿಗಣತಿ ಎನ್ನುತ್ತೀರಿ. ಈ ಜಾತಿ ಗಣತಿ ಯಾಕೇ ಎನ್ನುವುದು ತಿಳಿಯುತ್ತಿಲ್ಲ ಎಂದಿದ್ದಾರೆ.

    ನಾನು ಅಯೋಧ್ಯೆಗೆ ಹೋಗಿ ಬಂದಿದ್ದು, ಅನೇಕ ಜನ ಭಕ್ತರು ರಾಮತಾರಕ ಹೋಮ ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರದ ಉಳಿದ ಕಾರ್ಯ ಭರದಿಂದ ನಡೆಯುತ್ತಿದೆ. ಇನ್ನೂ ಒಂದು ವರ್ಷದಲ್ಲಿ ಶ್ರೀರಾಮ ಮಂದಿರ ಪೂರ್ಣವಾಗಲಿದೆ. ರಾಮರಾಜ್ಯದ ಸ್ಥಾಪನೆಗಾಗಿ ನಮಗೆ ರಾಮ ಮಂದಿರ ಬೇಕು. ಇವತ್ತು ಪ್ರಜಾರಾಜ್ಯ ಇದೆ ಆದರೂ ರಾಮರಾಜ್ಯ ಹೇಗೆ ಎಂದರೆ ರಾಮನ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ನಮ್ಮ ಸುತ್ತಮುತ್ತಲಲ್ಲಿ ಇರುವ ದುಃಖಿತರಿಗೆ ಸೇವೆ ಮಾಡುವುದೇ ರಾಮನ ಸೇವೆ ಆಗುತ್ತದೆ ಎಂದು ಅವರು ಸಲಹೆ ನೀಡಿದ್ದಾರೆ.

    ಈಶ್ವರಪ್ಪ ದಂಪತಿ ಪೇಜಾವರ ಶ್ರೀಗಳ ಆಶೀರ್ವಾದ ಪಡೆದರು. ಬಳಿಕ ಮಾತನಾಡಿದ ಅವರು, ಈಶ್ವರಪ್ಪ, ಎವಿಬಿ ಉಡುಪಿ ಶ್ರೀ ಕೃಷ್ಣ ಮಠಕ್ಕೂ ನಮಗೂ ಕೃಷ್ಣ ಮತ್ತು ಕನಕದಾಸರ ಸಂಬಂಧ ಇದೆ. ಹೊಸಪೇಟೆಗೆ ಶ್ರೀಗಳು ಹೋಗುತ್ತಿದ್ದರಂತೆ, ಹಾಗಾಗಿ ಸೌಹಾರ್ದಯುತವಾಗಿ ನಮ್ಮ ಮನೆಗೆ ಬಂದಿದ್ದರು ಎಂದು ತಿಳಿಸಿದ್ದಾರೆ.

  • ಪೇಜಾವರ ಶ್ರೀಗಳಿಗೆ ಪಿತೃ ವಿಯೋಗ

    ಪೇಜಾವರ ಶ್ರೀಗಳಿಗೆ ಪಿತೃ ವಿಯೋಗ

    ಮಂಗಳೂರು: ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ (Vishawa Prasanna Theertha Swamij) ತಂದೆ ವಿಧಿವಶರಾಗಿದ್ದಾರೆ.

    ಪೂರ್ವಾಶ್ರಮದ ತಂದೆ ಅಂಗಡಿಮಾರು ಕೃಷ್ಣಭಟ್ಟ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಹಳೆಯಂಗಡಿ ಬಳಿಯ ಪಕ್ಷಿಕೆರೆಯಲ್ಲಿ ನಿಧನ ಹೊಂದಿದ್ದಾರೆ. ಇವರಿಗೆ 103 ವರ್ಷ ವಯಸ್ಸಾಗಿತ್ತು. ಇದನ್ನೂ ಓದಿ: ಬಾಗಿಲಿಲ್ಲದ ದೇವಾಲಯಕ್ಕೆ ನುಗ್ಗಿ ಕಾಣಿಕೆ ಡಬ್ಬಿ, 100 ಘಂಟೆಗಳನ್ನು ದೋಚಿದ ಕಳ್ಳರು

    ಹಿರಿಯ ವಿದ್ವಾಂಸ, ತುಳು ಲಿಪಿ ತುಳು ಸೌರ ಪಂಚಾಂಗ ಕರ್ತೃ. ಇವರು ಐವರು ಪುತ್ರರು, ಆರು ಪುತ್ರಿಯರು ಬಂಧುವರ್ಗವನ್ನು ಅಗಲಿದ್ದಾರೆ.

     

  • ಬಾವಿಗಿಳಿದು ಬೆಕ್ಕನ್ನು ರಕ್ಷಣೆ ಮಾಡಿದ ಪೇಜಾವರ ಶ್ರೀ

    ಬಾವಿಗಿಳಿದು ಬೆಕ್ಕನ್ನು ರಕ್ಷಣೆ ಮಾಡಿದ ಪೇಜಾವರ ಶ್ರೀ

    ಉಡುಪಿ: ಪೇಜಾವರ ಶ್ರೀ (Pejawar Sri) ಸುಮಾರು 40 ಅಡಿ ಆಳದ ಬಾವಿಗಿಳಿದು ಬೆಕ್ಕಿನ ಮರಿಯ (Cat) ರಕ್ಷಣೆ ಮಾಡಿದ ಘಟನೆ ಉಡುಪಿಯ (Udupi) ಮುಚ್ಲಕೋಡು ಬಳಿ ನಡೆದಿದೆ. ಸ್ವತಃ ಸ್ವಾಮೀಜಿ ಬಾವಿಗೆ ಇಳಿದಿರುವುದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.

    ಉಡುಪಿ ನಗರದ ಹೊರವಲಯದಲ್ಲಿರುವ ಮುಚ್ಲಕೋಡು ದೇವಸ್ಥಾನಕ್ಕೆ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Vishwaprasanna Theertha Swamiji) ತೆರಳಿದ್ದರು. ಈ ಸಂದರ್ಭದಲ್ಲಿ ಬೆಕ್ಕೊಂದು ಬಾವಿಗೆ ಬಿದ್ದ ವಿಷಯ ತಿಳಿದ ಸ್ವಾಮೀಜಿ, ತಾವೇ ಸ್ವತಃ ಬಾವಿಗಿಳಿದು ಬೆಕ್ಕನ್ನು ರಕ್ಷಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ನೆರವಿಗಾಗಿಯೇ ಕಾಂಗ್ರೆಸ್ ಗ್ಯಾರಂಟಿಗಳನ್ನ ತಂದಿದೆ: ದಿನೇಶ್ ಗುಂಡೂರಾವ್

    ಕೂಡಲೇ ಹಿಂದೆ ಮುಂದೆ ನೋಡದೆ ಹಗ್ಗದ ಸಹಾಯದಿಂದ ಸ್ವಾಮೀಜಿ ಬಾವಿಗಿಳಿದಿದ್ದಾರೆ. ಗೋವಿನ ರಕ್ಷಣೆಯಲ್ಲಿ ಈಗಾಗಲೇ ಮುಂಚೂಣಿಯಲ್ಲಿರುವ ಪೇಜಾವರ ಸ್ವಾಮೀಜಿ ಹಾವು, ಹದ್ದು ಹೀಗೆ ಸಕಲ ಪ್ರಾಣಿ ಪಕ್ಷಿಗಳ ರಕ್ಷಣೆ ಮಾಡುತ್ತಿರುತ್ತಾರೆ. ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳ ಈ ಪ್ರಾಣಿ ಪ್ರೀತಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಇದೀಗ ವೀಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇದನ್ನೂ ಓದಿ: ನನ್ನ ಲಿವರ್ ಏನು ಕಬ್ಬಿಣದ್ದಾ? ಹಗಲು ರಾತ್ರಿ ಮದ್ಯಪಾನ ಆರೋಪಕ್ಕೆ ಭಗವಂತ್ ಮಾನ್ ತಿರುಗೇಟು

  • ಮಠಗಳು, ರಾಜಕೀಯ ಪಕ್ಷಗಳು ಭೇದ ಮಾಡೋದನ್ನ ನಿಲ್ಲಿಸಬೇಕು – ಪೇಜಾವರ ಶ್ರೀ

    ಮಠಗಳು, ರಾಜಕೀಯ ಪಕ್ಷಗಳು ಭೇದ ಮಾಡೋದನ್ನ ನಿಲ್ಲಿಸಬೇಕು – ಪೇಜಾವರ ಶ್ರೀ

    ವಿಜಯಪುರ: ಕಾಲಕಾಲಕ್ಕೆ ಸಮಾಜ ಸ್ವಚ್ಛಗೊಳಿಸುವ ಕೆಲಸ ಆಗಬೇಕು. ಹಾಗಾಗಿ, ಮಠಗಳು, ರಾಜಕೀಯ ಪಕ್ಷಗಳು (Political Parties) ಭೇದ-ಭಾವ ಮಾಡೋದನ್ನು ನಿಲ್ಲಿಸಬೇಕು ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (VishwaPrasanna Tirtha Swamiji) ಕರೆ ನೀಡಿದ್ದಾರೆ.

    ನಗರಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಲಕಾಲಕ್ಕೆ ಸಮಾಜವನ್ನು ಸ್ವಚ್ಛಗೊಳಿಸಬೇಕು. ಮಠ, ರಾಜಕೀಯ ಪಕ್ಷಗಳು ಬೇಧ – ಭಾವ ಮಾಡಬಾರದು. ಸಂಬಂಧಗಳಲ್ಲಿ ದ್ರೋಹ ಬಗೆಯುವ ಕೆಲಸ ಆಗಬಾರದು. ನಾವು ಸರಿಯಾಗಿ ಇದ್ರೇ ಎಲ್ಲವೂ ಸರಿಯಾಗಿ ಇರುತ್ತೆ. ದೈವ ಭಕ್ತಿ, ದೇಶ ಭಕ್ತಿ ಒಂದೇ. ಶ್ರೀರಾಮನ ಹೆಸರಿನಲ್ಲಿ ಸೇವೆ ಮಾಡೋಣ, ಅದಕ್ಕಾಗಿ `ರಾಮನ (Lord Rama) ಸೇವೆಯೇ ದೇಶಸೇವೆ ಅನ್ನೋ ಅಭಿಯಾನ ಹಮ್ಮಿಕೊಳ್ಳೋಣ. ಮುಂದಿನ ರಾಮನವಮಿ ಒಳಗಾಗಿ ಈ ಅಭಿಯಾನ ಹಮ್ಮಿಕೊಳ್ಳಲು ಪ್ರಧಾನಿ ಮೋದಿಗೆ ಪತ್ರ ಬರೆಯುತ್ತೇವೆ ಎಂದು ಹೇಳಿದ್ದಾರೆ.

    ಒಂದು ಕಾಲದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ (RamMandir) ನಿರ್ಮಾಣ ಮಾಡುವುದು ಒಂದು ಕನಸು ಆಗಿತ್ತು. ಆದರೀಗ ಕೇವಲ ರಾಮಮಂದಿರ ನಿರ್ಮಾಣ ಅಷ್ಟೇ ಆಗಬಾರದು. ಬದಲಿಗೆ ರಾಮರಾಜ್ಯ ಕನಸು ನನಸು ಆಗಬೇಕು. ರಾಮಾಯಣ ಕುರಿತು ಅಧ್ಯಯನ ಮಾಡಬೇಕು ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ತಂದೆಯ ಹುಟ್ಟುಹಬ್ಬಕ್ಕೆ ವಿಶೇಷ ಫೋಟೋ ಹಂಚಿಕೊಂಡ ನಟಿ ರಾಧಿಕಾ ಪಂಡಿತ್

    ಚರ್ಚಿಸಿ ತೀರ್ಮಾನ ಕೈಗೊಳ್ಳಿ: ಶಾಲಾ ಪಠ್ಯಪುಸ್ತಕದಲ್ಲಿ ಲೈಂಗಿಕ ಶಿಕ್ಷಣ ಅಳವಡಿಸುವ ಬಗ್ಗೆ ಪ್ರತಿಕ್ರಿಯಿಸಿದ ಶ್ರೀಗಳು, ಶಿಕ್ಷಣ ತಜ್ಞರು ಹಾಗೂ ಮನಶಾಸ್ತ್ರಜ್ಞರು ಇದ್ದಾರೆ, ಅವರೊಂದಿಗೂ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕು. ಇದನ್ನ ಕೇವಲ ಒಬ್ಬರು ಮಾತ್ರ ತೀರ್ಮಾನ ಮಾಡಬಾರದು. ಇದರಿಂದ ಸಮಾಜದಲ್ಲಿ ಗೊಂದಲ ನಿರ್ಮಾಣ ಆಗುತ್ತದೆ. ಎಲ್ಲರೂ ಚರ್ಚಿಸಿ ತೀರ್ಮಾನ ಮಾಡಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: `ಈ ಇಬ್ಬರು ವೀರರನ್ನು ಸ್ಮರಿಸಲೇಬೇಕು’ – ರಿಷಬ್‌ ಪಂತ್ ಮೊದಲ ರಿಯಾಕ್ಷನ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹಿಂದೂ ಸಂಕೇತ ಬಳಸಿ, ಹಿಂದೂ ಸಮಾಜದ ಮೇಲೆ ದುಷ್ಕೃತ್ಯ – ಪೇಜಾವರ ಶ್ರೀ ಬೇಸರ

    ಹಿಂದೂ ಸಂಕೇತ ಬಳಸಿ, ಹಿಂದೂ ಸಮಾಜದ ಮೇಲೆ ದುಷ್ಕೃತ್ಯ – ಪೇಜಾವರ ಶ್ರೀ ಬೇಸರ

    ಉಡುಪಿ: ಹಿಂದೂ ಸಂಕೇತಗಳನ್ನು (Hindu Symbols) ಬಳಸಿ ಹಿಂದೂ ಸಮಾಜದ ಮೇಲೆ ದೃಷ್ಕೃತ್ಯಗಳನ್ನು ನಡೆಸಲಾಗುತ್ತಿದ್ದು, ಪ್ರತಿಯೊಬ್ಬರೂ ಸದಾ ಜಾಗೃತರಾಗಿಬೇಕು ಎಂದು ಉಡುಪಿ ಮಠದ (Udupi Mutt) ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ (Vishwaprasanna Teertha Swamiji) ಎಚ್ಚರಿದ್ದಾರೆ.

    ಉಡುಪಿ ಮಠದಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿರುವ ಅವರು, ಹಿಂದೂ ಸಮಾಜದ ಮೇಲೆ ದುಷ್ಕೃತ್ಯ ಹೇರುತ್ತಿದ್ದಾರೆ. ಮಂಗಳೂರು ಬಾಂಬರ್ (Mangaluru Bomb Blast) ಉಡುಪಿ ಮಠದ ಸುತ್ತಮುತ್ತ ಓಡಾಟ ನಡೆಸಿದ್ದಾನೆ ಅನ್ನೋ ಮಾಹಿತಿ ಇದೆ. ಕರಾವಳಿ ಭಾಗದ ಉಗ್ರ ಕೃತ್ಯಗಳು ಕುಕ್ಕರ್ ಬಾಂಬ್ ಸ್ಫೋಟದ ವೇಳೆ ಗೊತ್ತಾಗಿದೆ. ಆದ್ದರಿಂದ ಕರಾವಳಿ ಭಾಗದ ಜನರು ಸದಾ ಜಾಗೃತರಾಗಿರಬೇಕು. ಸಂದೇಹಾಸ್ಪದ ಚಟುವಟಿಕೆಗಳು ಕಂಡ ಕೂಡಲೇ ಎಚ್ಚೆತ್ತುಕೊಂಡು ಪೊಲೀಸರಿಗೆ ಮಾಹಿತಿ ನೀಡಬೇಕು. ಸರ್ಕಾರ ಸಂಬಂಧಿಸಿದ ಇಲಾಖೆಗೆ ಕೂಡಲೇ ಸೂಚನೆ ನೀಡಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಆಂಧ್ರ ಸಿಎಂ ಜಗನ್ ಸಹೋದರಿ ಅರೆಸ್ಟ್

    ಉತ್ಥಾನ ದ್ವಾದಶಿ ಬಳಿಕ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದೆ. ಯಕ್ಷಗಾನ, ಕೋಲ, ಉತ್ಸವ, ಕಂಬಳ, ದೀಪೋತ್ಸವ, ನಾಗಮಂಡಲದಂತಹ ಹಲವಾರು ಉತ್ಸವಗಳು ನಡೆಯುತ್ತಿವೆ. ಕಾರ್ಯಕ್ರಮಗಳಲ್ಲಿ ಜನಸಂದಣಿ ಹೆಚ್ಚಿರುತ್ತದೆ. ಅನಾಹುತ ನಡೆದಲ್ಲಿ ನಮ್ಮ ಸಮಾಜಕ್ಕೆ ದೊಡ್ಡ ಹಾನಿಯುಂಟಾಗುತ್ತದೆ. ಹಿಂದೂ ಸಮಾಜದ ಮೇಲೆ ದುಷ್ಕೃತ್ಯ ಹೇರುವಂತಹ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಪ್ರತಿಯೊಬ್ಬರೂ ಸದಾ ಜಾಗೃತರಾಗಿಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಲೇಖಕ ಚೇತನ್ ಭಗತ್, ನಟಿ ಉರ್ಫಿ ಜಾವೇದ್ ಜಟಾಪಟಿ: ಸ್ಕ್ರೀನ್ ಶಾಟ್ ಶೇರ್

    ಹಿಂದೂ ಸಂಕೇತ ಬಳಸಿ ಇಂತಹ ಕೃತ್ಯ ಮಾಡುವುದನ್ನು ನಾವು ನೋಡುತ್ತಿದ್ದೇವೆ. ಆದ್ದರಿಂದ ಮೊಬೈಲ್ (Mobile) ಹಾಗೂ ದಾಖಲೆಗಳು ಕಳೆದುಹೋದರೆ ಸಂಬಂಧಪಟ್ಟ ಇಲಾಖೆಗೆ ತಿಳಿಸಬೇಕು. ಇಲ್ಲವಾದರೆ, ಇಂತಹ ಸಂದರ್ಭದಲ್ಲಿ ಸಂದೇಹಕ್ಕೆ ಒಳಗಾಗಬೇಕಾಗುತ್ತದೆ ಎಂದು ತಿಳಿವಳಿಕೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವೈರಿ ದೇಶವನ್ನು ಪಕ್ಕದಲ್ಲೇ ಇರಿಸಿಕೊಂಡು ಪ್ರಧಾನಿಗೆ ದಿಗ್ಬಂಧನ: ಪೇಜಾವರಶ್ರೀ ಕಳವಳ

    ವೈರಿ ದೇಶವನ್ನು ಪಕ್ಕದಲ್ಲೇ ಇರಿಸಿಕೊಂಡು ಪ್ರಧಾನಿಗೆ ದಿಗ್ಬಂಧನ: ಪೇಜಾವರಶ್ರೀ ಕಳವಳ

    ಉಡುಪಿ: ಪ್ರಧಾನಿ ಮೋದಿ ಅವರ ಪಂಜಾಬ್ ಭೇಟಿಯ ವೇಳೆ ಉಂಟಾಗಿರುವ ಭದ್ರತಾ ವೈಫಲ್ಯಕ್ಕೆ ಪೇಜಾವರಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.

    ಪಂಜಾಬ್ ನಲ್ಲಿ ಫ್ಲೈಓವರ್ ಮೇಲೆ ಇಪ್ಪತ್ತು ನಿಮಿಷಗಳ ಕಾಲ ಮೋದಿ ಅವರು ಸಿಲುಕಿದ ಕುರಿತು ಮಾತನಾಡಿದ ಅವರು, ಇದು ಆಘಾತಕಾರಿ ವಿಚಾರವಾಗಿದೆ. ವೈರಿ ದೇಶವನ್ನು ಪಕ್ಕದಲ್ಲೇ ಇರಿಸಿಕೊಂಡು ಪ್ರಧಾನಿಗೆ ದಿಗ್ಬಂಧನ ಹಾಕಲಾಗಿದೆ. ರಾಜ ಯಾರೇ ಇರಲಿ ಈ ತರದ ಘಟನೆ ನಡೆಯಬಾರದು ಎಂದರು. ಇದನ್ನೂ ಓದಿ:  ನಾಯಿ ಹುಟ್ಟುಹಬ್ಬ ಆಚರಿಸಲು 11 ಲಕ್ಷ ರೂ. ಖರ್ಚು ಮಾಡಿದ ಮಹಿಳೆ

    ಅಧಿಕಾರದಲ್ಲಿರುವ ರಾಜನನ್ನು ಕಳೆದುಕೊಂಡರೆ ಉಂಟಾಗಬಹುದಾದ ದೊಂಬಿಗಳನ್ನು ಊಹಿಸಲು ಅಸಾಧ್ಯ. ಇಂತಹ ಘಟನೆ ಇನ್ನೊಮ್ಮೆ ಮರುಕಳಿಸಬಾರದು. ಶತ್ರು ದೇಶಗಳು ಇಂತಹ ಅವಕಾಶಕ್ಕೆ ಕಾಯುತ್ತಿರುತ್ತವೆ. ದೇಶದ ಒಳಗೂ ಅದೆಷ್ಟೋ ದೊಂಬಿಗಳು ನಡೆಯುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ನಮ್ಮ ದೇಶದಲ್ಲಿ ಈ ಹಿಂದೆಯೂ ಇಂತಹ ದುರ್ಘಟನೆಗಳು ಸಾಕಷ್ಟು ನಡೆದಿವೆ. ಆವಾಗೆಲ್ಲಾ ಏನೇನೋ ದೊಂಬಿಗಳಿಗೆ ಈ ದೇಶ ಸಾಕ್ಷಿಯಾಗಿದೆ. ಇಂತಹ ದುರ್ಘಟನೆಗಳು ನಡೆಯದಂತೆ ದೇವರಲ್ಲಿ ಮತ್ತು ಗುರುಗಳಾದ ವಿಶ್ವೇಶತೀರ್ಥರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಹೇಳಿದರು.

  • ಮೊಟ್ಟೆ ಹಂಚಿಕೆ ವಿಚಾರದಲ್ಲಿ ನನ್ನ ಹೇಳಿಕೆ ತಿರುಚಲಾಗಿದೆ: ಪೇಜಾವರ ಶ್ರೀ ಅಸಮಾಧಾನ

    ಮೊಟ್ಟೆ ಹಂಚಿಕೆ ವಿಚಾರದಲ್ಲಿ ನನ್ನ ಹೇಳಿಕೆ ತಿರುಚಲಾಗಿದೆ: ಪೇಜಾವರ ಶ್ರೀ ಅಸಮಾಧಾನ

    ಉಡುಪಿ: ಶಾಲೆಯಲ್ಲಿ ಮೊಟ್ಟೆ ನೀಡುವ ವಿಚಾರಕ್ಕೆ ಬಂಧಿಸಿದಂತೆ ನನ್ನ ಹೇಳಿಕೆಯನ್ನು ಕೆಲ ಮಾಧ್ಯಮಗಳು ತಿರುಚಿವೆ ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ.

    ಮಾಧ್ಯಮಗಳ ವರದಿಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ ಪೇಜಾವರ ಶ್ರೀಗಳು, ಮಾಧ್ಯಮಗಳು ಸಮಾಜದ ಸ್ವಾಸ್ಥ್ಯ ಕಾಪಾಡುವ ಜವಾಬ್ದಾರಿ ಹೊರಬೇಕು . ಸಮಾಜದ ಸ್ವಾಸ್ಥ್ಯ ಹಾಳುಮಾಡುವ ದುಸ್ಸಾಹಸಕ್ಕೆ ಯಾರೂ ಕೈಹಾಕಬಾರದು. ಕೆಲವು ಮಾಧ್ಯಮಗಳು ನನ್ನ ಹೇಳಿಕೆಯನ್ನು ತಿರುಚಿವೆ. ನನ್ನ ಅಭಿಪ್ರಾಯ ತಿರುಚಿ ನನ್ನ ವಿರುದ್ದ ಸಮಾಜವನ್ನು ಎತ್ತಿಕಟ್ಟುವ ಘಟನೆ ಕಂಡಿದ್ದೇವೆ ಎಂದು ಉಡುಪಿಯಲ್ಲಿ ಪೇಜಾವರ ವಿಶ್ವಪ್ರಸನ್ನ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿ ಮಠದ ವತಿಯಿಂದ ವೀಡಿಯೋವೊಂದನ್ನು ರಿಲೀಸ್ ಮಾಡಿದ್ದಾರೆ. ಇದನ್ನೂ ಓದಿ:  ಶಾಲೆಯಲ್ಲಿ ಮೊಟ್ಟೆ ವಿತರಣೆ ಪರ ಬ್ಯಾಟ್ ಬೀಸಿದ: ರಘುಪತಿ ಭಟ್

    ಶಾಲೆಯ ಮೊಟ್ಟೆ ವಿತರಣೆ ಕುರಿತಂತೆ ವಾಸ್ತವದಲ್ಲಿ ನನ್ನ ಅಭಿಪ್ರಾಯ ಪಡೆಯುವ ವೇಳೆ ನಮಗೆ ನೀಡಿದ ಮಾಹಿತಿಯೇ ತಪ್ಪು. ಶಾಲೆಯಲ್ಲಿ ಸಾಮೂಹಿಕವಾಗಿ ಎಲ್ಲರಿಗೂ ಮೊಟ್ಟೆ ವಿತರಿಸಲಾಗುತ್ತಿದೆ ಈ ಬಗ್ಗೆ ನನ್ನ ಅಭಿಪ್ರಾಯ ಕೇಳಲಾಗಿತ್ತು. ಆಹಾರದ ಹಕ್ಕು, ಸ್ವಾತಂತ್ರ್ಯ ಎಲ್ಲರಿಗೂ ಇದೆ. ಸಸ್ಯಾಹಾರಿಗಳಿಗೆ ಮೊಟ್ಟೆ ತಿನ್ನಿಸುವ ಕೆಲಸ ಅಗಬಾರದು. ಶಾಲೆಯಲ್ಲಿ ಕೆಲವರಿಗೆ ಮೊಟ್ಟೆ ವಿತರಣೆ, ಕೆಲವರಿಗೆ ನೀಡದಿರುವುದು ಮತಬೇದಕ್ಕೆ ಕಾರಣವಾಗುತ್ತದೆ. ಇದನ್ನೂ ಓದಿ: ನಾವು ಮಠಕ್ಕೆ ಬಂದು ಮೊಟ್ಟೆ ತಿಂತೀವಿ: ಮಠಾಧೀಶರಿಗೆ ವಿದ್ಯಾರ್ಥಿನಿ ಸವಾಲು

    ಶಾಲೆಯಲ್ಲಿ ಸಾಮೂಹಿಕವಾಗಿ ಮೊಟ್ಟೆ ನೀಡುವುದಕ್ಕೆ ಅಂದು ವಿರೋಧ ವ್ಯಕ್ತಪಡಿಸಿದ್ದೆ. ಮೊಟ್ಟೆ ತಿನ್ನುವವರಿಗೆ ಮೊಟ್ಟೆ ಕೊಡುತ್ತಾರೆ, ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ನೀಡುತ್ತಾರೆ. ಈ ವಿಚಾರ ನಮಗೆ ತಿಳಿಸದೆ ಮೊಟ್ಟೆ ಹಂಚುವ ಕುರಿತು ಅಭಿಪ್ರಾಯವೇನು ಎಂಬ ಅರ್ಧ ಸತ್ಯ ಕೇಳಲಾಗಿದೆ. ಸಮಾಜದ ಮುಂದೆ ನಮ್ಮ ಅಭಿಪ್ರಾಯ ಮುಂದಿಟ್ಟು ಶಾಲೆಯಲ್ಲಿ ಬಡ, ಆಶಕ್ತ, ದುರ್ಬಳ ಮಕ್ಕಳಿಗೆ ಮೊಟ್ಟೆ ಕೊಡುವುದನ್ನ ವಿರೋಧಿಸುತ್ತಿದ್ದಾರೆ.

    ತಮ್ಮ ಅಭಿಪ್ರಾಯ ಏನು ಎಂಬ ಜನಸಮೂಹವನ್ನ ಎತ್ತಿಕಟ್ಟುವ ಕೆಲಸ ನೆಡೆದಿದೆ. ಸಮಾಜ ಸಂಘಟಿಸುವ ಕಾರ್ಯ ನಡೆಯಬೇಕು ಹೊರತು ಸಮಾಜ ಒಡೆಯುವ ಕೆಲಸ ನಡೆಯಬಾರದು. ಒಂದು ವರ್ಗವನ್ನು ಹೀಯಾಳಿಸುವ ಕೆಲಸ ಮಾಡಬಾರದೆಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

  • ಸಕಲ ಸಂತ ಸಮುದಾಯಕ್ಕೆ ಸಿಕ್ಕ ಪದ್ಮ ವಿಭೂಷಣ: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

    ಸಕಲ ಸಂತ ಸಮುದಾಯಕ್ಕೆ ಸಿಕ್ಕ ಪದ್ಮ ವಿಭೂಷಣ: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

    ಉಡುಪಿ: ಉಡುಪಿ ಪೇಜಾವರ ಮಠಾಧೀಶ ವಿಶ್ವೇಶ ತೀರ್ಥ ಸ್ವಾಮೀಜಿಗೆ ಮರಣೋತ್ತರ ಪದ್ಮ ವಿಭೂಷಣ ಪ್ರಶಸ್ತಿ ಪ್ರಕಟವಾಗಿದ್ದು, ಇದು ಸಕಲ ಸಂತ ಸಮುದಾಯಕ್ಕೆ ಸಿಕ್ಕ ಮನ್ನಣೆ, ಗೌರವ ಅಂತ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಬಣ್ಣಿಸಿದ್ದಾರೆ.

    ಪ್ರಶಸ್ತಿ ಘೋಷಣೆಯಾದ ಹಿನ್ನೆಲೆಯಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ್ದು, ಗುರುಗಳಿಗೆ ಪ್ರಶಸ್ತಿ ಬಂದ ವಿಚಾರ ಕೇಳಿ ಸಂತೋಷವಾಗಿದೆ. ಗುರುಗಳು ಯಾವುದೇ ಬಗೆಯ ವಿಭೂಷಣವನ್ನು ಬದುಕಿನಲ್ಲಿ ಧರಿಸಿದವರಲ್ಲ. ಆದರೆ ಸರ್ಕಾರ ಇಂದು ವಿಭೂಷಣವನ್ನು ಸಮರ್ಪಿಸಿದೆ. ನಮಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿದರು.

    ಗುರುಗಳ ಜೀವಿತಾವಧಿಯಲ್ಲೇ ಈ ಸುಯೋಗ ಬಂದಿದ್ದರೆ ಮತ್ತಷ್ಟು ಸಂತೋಷ ಆಗುತ್ತಿತ್ತು. ಶ್ರೀ ಮಠ ಈ ಪ್ರಶಸ್ತಿಯನ್ನು ಸ್ವಾಗತಿಸುತ್ತದೆ. ಇದು ಸಂತ ಸಮಾಜಕ್ಕೆ ದೊರಕಿದ ಗೌರವ. ಈ ಪುರಸ್ಕಾರ ಸಂತ ಸಮಾಜದ ಜವಾಬ್ದಾರಿ ಹೆಚ್ಚಿಸಿದೆ ಎಂದರು.

    ಪ್ರಶಸ್ತಿ ಘೋಷಣೆಯಾಗುವಾಗ ಪೇಜಾವರ ಶ್ರೀಗಳು ಮುಳುಬಾಗಿಲಿನಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿದ್ದ ನೂರಾರು ಜನ ಜಯಘೋಷ ಕೂಗಿದರು.

    ಗಣತಂತ್ರದ ಮುನ್ನಾ ದಿನವಾದ ಶನಿವಾರ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟವಾಗಿದ್ದು, ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್, ಜಾರ್ಜ್ ಫರ್ನಾಂಡೀಸ್ ಮತ್ತು ಇತ್ತೀಚಿಗಷ್ಟೇ ಕೃಷ್ಣೈಕ್ಯರಾದ ಪೇಜಾವರ ಶ್ರೀಗಳಿಗೆ ಎರಡನೇ ಅತ್ಯುಚ್ಛ ಪುರಸ್ಕಾರ ಪದ್ಮವಿಭೂಷಣ (ಮರಣೋತ್ತರ) ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಬಾಕ್ಸಿಂಗ್ ತಾರೆ ಮೇರಿಕೂಮ್‍ಗೂ ಪದ್ಮವಿಭೂಷಣ ಪ್ರಶಸ್ತಿ ಪ್ರಕಟವಾಗಿದೆ. ಗೋವಾದ ಮಾಜಿ ಮುಖ್ಯಮಂತ್ರಿ, ಮಾಜಿ ರಕ್ಷಣಾ ಸಚಿವರಾಗಿದ್ದ ಮನೋಹರ್ ಪರಿಕ್ಕರ್, ಪಿವಿ ಸಿಂಧೂಗೆ ಪದ್ಮಭೂಷಣ ಘೋಷಣೆಯಾಗಿದೆ.

    ಪಬ್ಲಿಕ್ ಟಿವಿಯ `ಪಬ್ಲಿಕ್ ಹೀರೋ’ ಆಗಿದ್ದ ಉತ್ತರ ಕನ್ನಡ ಜಿಲ್ಲೆ ಆಂಕೋಲ ತಾಲೂಕಿನ ಹೊನ್ನಳ್ಳಿಯ ಅರಣ್ಯ ಪ್ರೇಮಿ ಹಾಲಕ್ಕಿ ಸಮುದಾಯದ ತುಳಸಿ ಗೌಡ, ಅಕ್ಷರ ಸಂತ ದಕ್ಷಿಣ ಕನ್ನಡದ ಅಕ್ಷರ ಸಂತ, ಕಿತ್ತಳೆ ಹಣ್ಣು ಮಾರಿ ಹರೇಕಳದ ನ್ಯೂಪಡ್ಪು ಗ್ರಾಮದಲ್ಲಿ ಶಾಲೆ ಕಟ್ಟಿಸಿದ ಹಾಜಬ್ಬ, ವಿಜಯ ಸಂಕೇಶ್ವರ್, ಕೆ ವಿ ಸಂಪತ್ ಕುಮಾರ್, ಕ್ರೀಡಾಪಟು ಎಂಪಿ ಗಣೇಶ್ ಸೇರಿ 118 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಪ್ರಕಟಿಸಲಾಗಿದೆ.

  • ಉತ್ಸವ-ಉರೂಸ್‍ನಲ್ಲಿ ಹಿಂದೂ ಮುಸ್ಲಿಮರು ಪಾಲ್ಗೊಳ್ಳುವಂತಾಗಲಿ- ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

    ಉತ್ಸವ-ಉರೂಸ್‍ನಲ್ಲಿ ಹಿಂದೂ ಮುಸ್ಲಿಮರು ಪಾಲ್ಗೊಳ್ಳುವಂತಾಗಲಿ- ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

    ಉಡುಪಿ: ಭಾರತದಲ್ಲಿ ಹಿಂದೂ ಮುಸಲ್ಮಾನರ ನಡುವೆ ಸಾಮರಸ್ಯ ಬೆಳೆಯಬೇಕು. ಎರಡೂ ಧರ್ಮಕ್ಕೆ ಶಾಂತಿ ಸಹೋದರತೆಯ ಆಕಾಂಕ್ಷೆ ಇದೆ. ಕೆಲ ವಿಚಾರಗಳು ಘಟನೆಗಳು ಎರಡು ಧರ್ಮವನ್ನು ದೂರ ಮಾಡುತ್ತಿವೆ ಎಂದು ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಎರಡೂ ಧರ್ಮಕ್ಕೆ ನೆಮ್ಮದಿ, ಶಾಂತಿ ಬೇಕಾಗಿದೆ. ದೇಶದಲ್ಲಿ ನಡೆಯುವ ಕೆಲ ಘಟನೆಗಳು ಎರಡು ಸಮುದಾಯವನ್ನು ದೇಶದಲ್ಲಿ ದೂರ ಮಾಡಲು ಕಾರಣವಾಗುತ್ತಿದೆ. ನಮ್ಮ ನಡುವೆ ಅಪನಂಬಿಕೆ ದೂರವಾಗಬೇಕು. ಪರಸ್ಪರ ಎರಡು ಧರ್ಮಗಳ ನಡುವೆ ಸೌಹಾರ್ದತೆ ಬೆಳೆಯಬೇಕು ಎಂದು ಹೇಳಿದರು.

    ನಮ್ಮ ಉತ್ಸವದಲ್ಲಿ ನೀವು, ನಿಮ್ಮ ಧಾರ್ಮಿಕ ಕಾರ್ಯಕ್ರಮ ಉರೂಸ್ ನಲ್ಲಿ ನಾವು ಪಾಲ್ಗೊಳ್ಳುವಂತಾಗಬೇಕು. ಒಬ್ಬರಿಬ್ಬರಿಂದ ಇಂತಹ ಬದಲಾವಣೆ ಅಸಾಧ್ಯ. ಇಡೀ ಸಮಾಜಕ್ಕೆ ಸಮಾಜ, ಊರಿಗೆ ಊರು ಶಾಂತಿ ಸಾಮರಸ್ಯ ಬಯಸುವ ಕಾಲ ಬರಬೇಕು ಎಂದರು. ಭಟ್ಕಳದ ಮುಸಲ್ಮಾನರು ಪೇಜಾವರ ಮಠಕ್ಕೆ ಬಂದು ಗುರುಗಳಿಗೆ ಶ್ರದ್ಧಾಂಜಲಿ ಅರ್ಪಿಸಿದ್ದನ್ನು ಕಿರಿಯಶ್ರೀಗಳು ಸ್ಮರಿಸಿ, ಬಂದವರಿಗೆ ಅಭಿನಂದನೆ ಸಲ್ಲಿಸಿದರು.

  • ಪೇಜಾವರ ಶ್ರೀಗಳು ನಾಳೆ ಮಠಕ್ಕೆ ಶಿಫ್ಟ್

    ಪೇಜಾವರ ಶ್ರೀಗಳು ನಾಳೆ ಮಠಕ್ಕೆ ಶಿಫ್ಟ್

    ಉಡುಪಿ: ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಅವರನ್ನು ಭಾನುವಾರ ಮಠಕ್ಕೆ ಶಿಫ್ಟ್ ಮಾಡಲಾಗುತ್ತದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಪೇಜಾವರ ಮಠದ ಕಿರಿಯ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಶ್ರೀಗಳ ಆರೋಗ್ಯ ಕ್ಷೀಣವಾಗುತ್ತಿದ್ದು, ಚೇತರಿಕೆಯ ಯಾವ ಲಕ್ಷಣ ಕಾಣುತ್ತಿಲ್ಲ. ಶ್ರೀಗಳನ್ನು ನಾಳೆ ಮಠಕ್ಕೆ ಸ್ಥಳಾಂತರ ಮಾಡುತ್ತೇವೆ. ಶ್ರೀಗಳ ಅಂತಿಮ ಆಸೆಯೂ ಅದೇ ಆಗಿತ್ತು. ವೈದ್ಯರನ್ನೊಳಗೊಂಡ ವೆಂಟಿಲೇಟರ್ ವ್ಯವಸ್ಥೆ ಮಠದಲ್ಲೇ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

    ಆಸ್ಪತ್ರೆಯವರ ಕೆಲ ಕಾರ್ಯವಿಧಾನಗಳು ಬಾಕಿಯಿದೆ. ತಯಾರಿ ನೋಡಿಕೊಂಡು ಮುಂದಿನ ಕ್ರಮ ಮಾಡುತ್ತೇವೆ. ಪೇಜಾವರ ಮಠಕ್ಕೆ ಭಕ್ತರ ಭೇಟಿ ಸದ್ಯ ಬೇಡ. ಎಲ್ಲರೂ ಇದ್ದಲ್ಲಿಂದ ಗುರುಗಳ ಆರೋಗ್ಯಕ್ಕಾಗಿ ಪ್ರಾರ್ಥಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪೂರ್ಣ ಸಹಕಾರ ಸಿಗುವ ವಿಶ್ವಾಸವಿದೆ ಎಂದು ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

    ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಅವರನ್ನು ಕಳೆದ ರಾತ್ರಿ ಎಂಆರ್‍ಐ ಸ್ಕ್ಯಾನ್‍ಗೆ ಒಳಪಡಿಸಲಾಗಿದೆ. ಕಳೆದ ಒಂಬತ್ತು ದಿನಗಳಿಂದ ಬೆಂಗಳೂರಿನಿಂದ ಆಗಮಿಸಿರುವ ಇಬ್ಬರು ತಜ್ಞ ವೈದ್ಯರು ಮತ್ತು ಕೆಎಂಸಿಯ ಏಳು ವೈದ್ಯರ ತಂಡ ಪೇಜಾವರಶ್ರೀಗಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.