ಬೆಂಗಳೂರು: ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರದ ವಿರುದ್ಧ ಬಿಜೆಪಿ (BJP) ನಿಯೋಗವು ಇಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ಗೆ (Thawar Chand Gehlot) ಮನವಿ ಸಲ್ಲಿಸಿದೆ.
ವಿಧಾನಪರಿಷತ್ತಿನ ಸದಸ್ಯರಾದ ಎನ್.ರವಿಕುಮಾರ್, ಶಶೀಲ್ ನಮೋಶಿ, ಹನುಮಂತ ನಿರಾಣಿ, ಡಿ.ಎಸ್.ಅರುಣ್, ಶಿಕ್ಷಣ ಪ್ರಕೋಷ್ಠದ ರಾಜ್ಯ ಸಂಚಾಲಕ ಡಾ.ಸಿ.ಬಿ.ಶಶಿಧರ್, ರಾಜ್ಯ ಸಹ ಸಂಚಾಲಕರಾದ ಎಂ.ಜಿ.ಭಟ್, ಹರೀಶ್.ಕೆ, ಡಾ.ರಾಘವೇಂದ್ರ ಹಾಗೂ ಶ್ರೀಮತಿ ಅಶ್ವಿನಿ ಶಂಕರ್ ಅವರ ನಿಯೋಗವು ಈ ಮನವಿ ಸಲ್ಲಿಸಿತು. ಇದನ್ನೂ ಓದಿ: ಕಾಪು ಮಾರಿಗುಡಿಗೆ ಕಂಗನಾ ರಣಾವತ್ ಭೇಟಿ
-ನೀರಿಗಾಗಿ ಹೋರಾಡುವಂತೆ ವಿದ್ಯೆಗಾಗಿ ಹೋರಾಟ ಎಂದ ವಿಪಕ್ಷ ನಾಯಕ
ಬೆಂಗಳೂರು: ವಿಶ್ವವಿದ್ಯಾಲಯಗಳಿಂದ ಲಾಭ ಬರುತ್ತಿಲ್ಲ ಎಂಬ ಕಾರಣಕ್ಕೆ ಅವುಗಳನ್ನು ಮುಚ್ಚಲಾಗಿದೆ ಎಂದಿರುವ ಕಾಂಗ್ರೆಸ್ ಸರ್ಕಾರ ಭಿಕ್ಷೆ ಬೇಡುವ ಸ್ಥಿತಿಗೆ ಬಂದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ಆಕ್ರೋಶ ವ್ಯಕ್ತಪಡಿಸಿದರು.
ಮಂಡ್ಯದಲ್ಲಿ (Mandya) ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ಶಿಕ್ಷಣದಲ್ಲಿ ಹಿಂದುಳಿದಿದೆ. ಇದಕ್ಕಾಗಿ ಬಿಜೆಪಿ ಸರ್ಕಾರ ಹೊಸ 9 ವಿಶ್ವವಿದ್ಯಾಲಯಗಳನ್ನು ನೀಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಅದನ್ನು ಕಿತ್ತುಕೊಂಡಿದೆ. ವಿವಿಗಳನ್ನು ಮುಚ್ಚಲು ರೂಪಿಸಿದ ವರದಿಯಲ್ಲಿ ವಿವಿಗಳು ಲಾಭದಾಯಕವಾಗಿಲ್ಲ ಎಂದು ಉಲ್ಲೇಖಿಸಲಾಗಿದೆ. ಶಿಕ್ಷಣ ಸಂಸ್ಥೆಗಳಿಂದಲೂ ಆದಾಯ ಬರಬೇಕು ಎಂಬುದು ಸರ್ಕಾರದ ಉದ್ದೇಶ ಏಕೆಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಭಿಕ್ಷೆ ಬೇಡುತ್ತಿದ್ದಾರೆ. ಈ ಬಾರಿ 1 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ. ಹಿಂದಿನ ಎಲ್ಲ ಮುಖ್ಯಮಂತ್ರಿಗಳಿಗೆ ಹೋಲಿಸಿದರೆ ಸಿದ್ದರಾಮಯ್ಯ ಅವರೇ ಅತ್ಯಧಿಕ ಸಾಲ ಮಾಡಿದ್ದಾರೆ ಎಂದು ದೂರಿದರು.ಇದನ್ನೂ ಓದಿ: ಅಮಲಾ ಪೌಲ್ ಪ್ಯಾಂಟ್‌ಲೆಸ್ ಫೋಟೋಶೂಟ್ ನೋಡಿ ಕಾಲೆಳೆದ ನೆಟ್ಟಿಗರು
ಜಿಲ್ಲೆಗೆ ಒಂದು ವಿಶ್ವವಿದ್ಯಾಲಯವಿದ್ದರೆ ಆ ಜಿಲ್ಲೆ ಶಿಕ್ಷಣದಲ್ಲಿ ಸ್ವಾವಲಂಬಿಯಾಗುತ್ತದೆ:
ಶಿಕ್ಷಣ ಎಂದರೆ ವ್ಯಾಪಾರವಲ್ಲ, ಅದು ನಮ್ಮ ದೇಶದ ಆಸ್ತಿ. ಮುಚ್ಚಿರುವ ಬಾರ್‌ಗಳನ್ನು ತೆರೆದು, ವಿವಿಗಳನ್ನು ಮುಚ್ಚಲಾಗುತ್ತಿದೆ. ಎಲ್ಲ ವಿವಿಗಳನ್ನು ನಡೆಸಲು 252 ಕೋಟಿ ರೂ. ಇದ್ದರೆ ಸಾಕು. ಉಚಿತವಾಗಿ 2 ಸಾವಿರ ರೂ. ನೀಡಿ ವಿವಿಗಳನ್ನು ಮುಚ್ಚುತ್ತೇವೆ ಎಂದರೆ ಗ್ಯಾರಂಟಿಗೆ ಬೆಲೆ ಇರುವುದಿಲ್ಲ. ಬಿಜೆಪಿ ಸರ್ಕಾರ ವಿಶ್ವವಿದ್ಯಾಲಯಗಳನ್ನು ರೂಪಿಸಿದಾಗ ಹೊಸ ಹುದ್ದೆಗಳನ್ನು ಸೃಷ್ಟಿ ಮಾಡಿರಲಿಲ್ಲ. ಇರುವ ಸಿಬ್ಬಂದಿಯನ್ನೇ ನೇಮಕ ಮಾಡಲಾಗಿತ್ತು. ವಿಶ್ವವಿದ್ಯಾಲಯ ಮುಚ್ಚುವುದರಿಂದ ಲಾಭವಾಗುತ್ತದೆಯೋ? ನಷ್ಟವಾಗುತ್ತದೆಯೋ? ಎಂಬುದು ಬೇಕಿಲ್ಲ. ಇದರಿಂದ ಮಕ್ಕಳಿಗೆ ಏನು ತೊಂದರೆಯಾಗುತ್ತದೆ? ಎಂಬ ಬಗ್ಗೆ ಸರ್ಕಾರ ಸ್ಪಷ್ಟಪಡಿಸಲಿ. ನೀರಿಗಾಗಿ ಹೋರಾಟ ಮಾಡುವಂತೆಯೇ, ವಿದ್ಯೆಗಾಗಿ ಮಂಡ್ಯದ ಜನರು ಹೋರಾಟ ಮಾಡಲಿದ್ದಾರೆ. ಸರ್ಕಾರದ ಬಳಿ ಹಣವಿಲ್ಲವೆಂದರೆ ಅದನ್ನು ನೇರವಾಗಿ ಹೇಳಲಿ. ನಾವೆಲ್ಲರೂ ಹಣ ಸಂಗ್ರಹಿಸಿ ವಿಶ್ವವಿದ್ಯಾಲಯ ನಡೆಸುತ್ತೇವೆ ಎಂದರು.
ಆರ್ಥಿಕ ಪರಿಸ್ಥಿತಿ ನೆಪವೊಡ್ಡಿ ಮಂಡ್ಯ ವಿವಿ ಸೇರಿದಂತೆ ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ @INCKarnataka ಸರ್ಕಾರದ ನಡೆಯನ್ನು ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಜೊತೆಯಾಗಿ ಮಂಡ್ಯ ಜಿಲ್ಲೆಯ ಡಿಸಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪಾಪರ್ ಸರ್ಕಾರ
ಗ್ಯಾರಂಟಿಗಳಿಂದಾಗಿ ಪಾಪರ್ ಆಗಿರುವ ಸರ್ಕಾರ, ವಿವಿಗಳನ್ನು ಮುಚ್ಚಿದೆ. ಮಂಡ್ಯ, ಚಾಮರಾಜನಗರ ಮೊದಲಾದ ಜಿಲ್ಲೆಗಳು ಶಿಕ್ಷಣದಲ್ಲಿ ಮೇಲಕ್ಕೆ ಬರಬೇಕೆಂದು ವಿವಿಗಳನ್ನು ಆರಂಭಿಸಲಾಗಿತ್ತು. ಈಗ ವಿವಿಗಳನ್ನು ಮುಚ್ಚಿ ಅದೇ ಸ್ಥಳದಲ್ಲಿ ಬಾರ್‌ಗಳನ್ನು ಆರಂಭಿಸಬಹುದು. ಸರ್ಕಾರದ ಉದ್ದೇಶ ವಿದ್ಯೆ ನೀಡುವುದೋ ಅಥವಾ ಮದ್ಯ ಹಂಚುವುದೋ ಎಂದು ತಿಳಿಸಬೇಕು ಎಂದು ಹೇಳಿದರು.
ಸರ್ಕಾರ ಪಾಪರ್ ಆಗಿರುವುದಕ್ಕೆ ಇದಕ್ಕಿಂತ ಹೆಚ್ಚಿನ ಸಾಕ್ಷಿ ಬೇಡ. ವಿಶ್ವವಿದ್ಯಾಲಯ ಆರಂಭಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಅನುದಾನ ನೀಡಲಾಗುತ್ತದೆ. ಈಗ ರಾಜ್ಯದ ಪಾಲಿನ ಅನುದಾನ ನೀಡಲು ಇವರಿಗೆ ಸಾಧ್ಯವಾಗುತ್ತಿಲ್ಲ. ಹಿಂದಿನ ಬಿಜೆಪಿ ಸರ್ಕಾರ ಅನುದಾನ ನೀಡಿಲ್ಲವೆಂದಾದರೆ ಹೊಸ ಕಟ್ಟಡಗಳು ಎಲ್ಲಿಂದ ಬಂತು? ಮೂಲಸೌಕರ್ಯ ನೀಡಿಯೇ ವಿವಿಗಳನ್ನು ಆರಂಭಿಸಲಾಗಿತ್ತು. ಆದರೆ ಅದನ್ನು ಮುಂದುವರಿಸಲು ಈಗಿನ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತಿ ಸದನದಲ್ಲಿ ಈ ಕುರಿತು ಹೋರಾಟ ಮಾಡಲಾಗುವುದು ಎಂದರು.ಇದನ್ನೂ ಓದಿ: ಕೋಲ್ಕತ್ತಾ| ತಂದೆ, ಮಗಳು ನೇಣಿಗೆ ಶರಣು – ಮಗಳ ಅನಾರೋಗ್ಯಕ್ಕೆ ಬೇಸತ್ತು ಆತ್ಮಹತ್ಯೆ ಶಂಕೆ
– ಮದ್ವೆಯಲ್ಲಿ ಮರ್ಯಾದೆ ಕಾಪಾಡಿಕೊಳ್ಳಲು ನಕಲಿ ಅಂಕಪಟ್ಟಿ
– ವಾಟ್ಸಪ್‌ನಲ್ಲೇ ಡೀಲ್ ಕುದುರಿಸುತ್ತಿದ್ದ ಗ್ಯಾಂಗ್
– 422 ನಕಲಿ ಅಂಕಪಟ್ಟಿ ವಶಕ್ಕೆ
ಕಲಬುರಗಿ: ಇಲ್ಲಿನ ಸಿಇಎನ್ ಪೊಲೀಸ್ ಠಾಣೆಯ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆಯಿಂದ ದೇಶದ ವಿವಿಧ ವಿಶ್ವವಿದ್ಯಾಲಯಗಳ ಹೆಸರಿನಲ್ಲಿ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಕಲಬುರಗಿ ನಗರ ಪೊಲೀಸರು (Kalaburagi City Police) ಯಶಸ್ವಿಯಾಗಿದ್ದಾರೆ.
ದೇಶದ ವಿವಿಧ 28 ವಿಶ್ವವಿದ್ಯಾಲಯಗಳ (Universities) ನಕಲಿ ಅಂಕಪಟ್ಟಿ ತಯಾರಿಸುತ್ತಿದ್ದ ದೆಹಲಿ ಮೂಲದ ರಾಜೀವ್ ಸಿಂಗ್ ಅರೋರಾ ಎಂಬ ಅಂತರರಾಜ್ಯ ಆರೋಪಿಯನ್ನು ಬಂಧಿಸಿದ್ದು, ದೆಹಲಿಯಿಂದ ರಾಜ್ಯಕ್ಕೆ ಸರಬರಾಜು ಆಗುತ್ತಿದ್ದ ನಕಲಿ ಅಂಕಪಟ್ಟಿಗಳನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ರಸ್ತೆ ದಾಟುವಾಗ ಬಿಎಂಟಿಸಿ ಬಸ್ ಡಿಕ್ಕಿ – ಮಹಿಳೆ ಸಾವು
28 ವಿಶ್ವವಿದ್ಯಾಲಯಗಳ 522 ನಕಲಿ ಮಾರ್ಕ್ಸ್ ಕಾರ್ಡ್ (Fake Marks Card), 1,626 ಖಾಲಿ ಮಾರ್ಕ್ಸ್ ಕಾರ್ಡ್, 403 ಹೋಲೊಗ್ರಾಮ್, 122 ಸೀಲ್, 80 ಬ್ಯಾಂಕ್ ಪಾಸ್‌ಬುಕ್, 123 ನಕಲಿ ಐಡಿ ಕಾರ್ಡ್, 32 ಮೊಬೈಲ್ ಫೋನ್, ಲ್ಯಾಪ್‌ಟಾಪ್, ಪೇಮೆಂಟ್‌ಗಾಗಿ ಬಳಸುತ್ತಿದ್ದ ಸ್ವೈಪಿಂಗ್ ಮಷೀನ್ ಸೇರಿ 1,20,000 ರೂ.ಗಳ ನಗದು ಹಣ ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಮಾಹಿತಿ ನೀಡಿದರು. ಇದನ್ನೂ ಓದಿ: ʻಕೈʼಮುಖಂಡನ ಹತ್ಯೆ ಕೇಸ್ – ಶಿವಮೊಗ್ಗದಿಂದ ಗಡಿಪಾರಾಗಿದ್ದ ಆರೋಪಿಗಳಿಗೆ ಸುಪಾರಿ ಕೊಟ್ಟು ಕೊಲೆ
ಈ ಕುರಿತು ಗುರುವಾರ ನಗರದ ಪೊಲೀಸ್ ಆಯುಕ್ತಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೆನ್ ಪೊಲೀಸ್ ಠಾಣೆಯಲ್ಲಿ ನಕಲಿ ಅಂಕಪಟ್ಟಿ ಮಾರಾಟದ ಬಗ್ಗೆ ದೂರು ದಾಖಲಾಗಿತ್ತು. ನಗರದ ಏಷ್ಯನ್ ಮಾಲ್‌ನಲ್ಲಿ ʻಐ ಫಾರ್ ಯು ಗ್ಲ್ಯಾಮ್ ಚಾಯಿಸ್ʼ ಹೆಸರಿನ ಬಟ್ಟೆ ಅಂಗಡಿಯಲ್ಲಿ ಎಲೆಜೆನ್ಸ್ ಟೆಕ್ನಾಲಜಿ ಮತ್ತು ಪ್ಲೇಸ್ಮೆಂಟ್ ಬ್ಯೂರೋ ಎಂಬ ಹೆಸರಲ್ಲಿ ನಕಲಿ ಅಂಕಪಟ್ಟಿ ತಯಾರು ಮಾಡುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ತಾರ್ಫೈಲ್ ನಿವಾಸಿ ಮೊಹ್ಮದ್ ಖಾನ್ ನನ್ನು ನಕಲಿ ಅಂಕಪಟ್ಟಿ ಮಾರಾಟ ಮಾಡುತ್ತಿದ್ದ ಎಂಬ ಆರೋಪದಲ್ಲಿ ಬಂಧಿಸಲಾಗಿತ್ತು. ಈ ಪ್ರಕರಣದ ಜಾಡು ಬೆನ್ನುಹತ್ತಿದ ಪೊಲೀಸರು ಇದೀಗ ಇಡಿ ಜಾಲವನ್ನೇ ಪತ್ತೆ ಮಾಡಿ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಕಲಿ ಅಂಕಪಟ್ಟಿ ತಯಾರಿಕೆ ಪ್ರಕರಣದಲ್ಲಿ ದಾವಣಗೆರೆಯ ಹರಿಪ್ರಸಾದ್ ಹಾಗೂ ಬೆಂಗಳೂರಿನ ಜಗದೀಶ್ ಮಧ್ಯವರ್ಥಿಗಳಾಗಿ ಕೆಲಸ ಮಾಡುತ್ತಿದ್ದರು. ಇವರ ಮೂಲಕ ಪ್ರಕರಣದ ಪ್ರಮುಖ ಆರೋಪಿ ದೆಹಲಿಯ ರಾಜೀವ್ ಸಿಂಗ್ ಅರೋರಾ ನನ್ನು ಪತ್ತೆ ಹಚ್ಚಿ, ಈತನನ್ನು ದೆಹಲಿಯಲ್ಲಿ ಬಂಧಿಸಿ ಕಲಬುರಗಿಗೆ ಕರೆತರಲಾಗಿದೆ. ಕೇವಲ 15-20 ಸಾವಿರ ರೂ.ಗಳಿಗೆ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿಇ, ಬಿ.ಟೆಕ್ ಇನ್ನಿತರೆ ಪದವಿಯ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದರು. ಈ ಪ್ರಕರಣದಲ್ಲಿ ಇನ್ನೂ ಯಾರ‍್ಯಾರು ಭಾಗಿಯಾಗಿದ್ದಾರೆ ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಆಯುಕ್ತ ಡಾ. ಶರಣಪ್ಪ ತಿಳಿಸಿದರು.
ಇನ್ನೂ, ಅಂತರ ರಾಜ್ಯ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಅವರು ಪ್ರಶಂಸನಾ ಪತ್ರ ನೀಡಿ ಶ್ಲಾಘಿಸಿದರು. ಈ ಸಂದರ್ಭದಲ್ಲಿ ಡಿಸಿಪಿಗಳಾದ ಕನಿಕಾ ಸಿಕ್ರಿವಾಲ್, ಪ್ರವೀಣ್ ನಾಯ್ಕ್, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಇದ್ದರು. ಇದನ್ನೂ ಓದಿ: ನೇಪಾಳದಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪನ – ಭಾರತ, ಚೀನಾ ಗಡಿಯಲ್ಲೂ ಕಂಪಿಸಿದ ಭೂಮಿ
ವಾಟ್ಸಪ್‌ನಲ್ಲಿ ಆರ್ಡರ್ ಆರ್ಡರ್:
ಕಲಬುರಗಿಯ ಅಭ್ಯರ್ಥಿಗಳಿಗೆ ನಕಲಿ ಅಂಕಪಟ್ಟಿ ಬೇಕಾದರೆ, ಅವರು ರಾಜೀವ್ ಸಿಂಗ್ ಅರೋರಾನನ್ನು ಸಂಪರ್ಕಿಸಲು ಸಾಧ್ಯವಾಗುತ್ತಿರಲಿಲ್ಲ. ನೇರವಾಗಿ ವಾಸ್ಟಪ್ ಮೂಲಕವೇ ನಕಲಿ ಅಂಕಪಟ್ಟಿಗಾಗಿ ಆರ್ಡರ್ ನೀಡಬೇಕಾಗಿತ್ತು. ತಯಾರಾದ ಬಳಿಕ ವಾಟ್ಸಪ್ ಚಾಟ್ ಎಲ್ಲವೂ ಡಿಲೀಟ್ ಮಾಡುತ್ತಿದ್ದ, ಯಾವುದೇ ದಾಖಲೆಗಳನ್ನು ಉಳಿಸಿಕೊಳ್ಳುತ್ತಿರಲಿಲ್ಲ. ಹೀಗಾಗಿ, ಯಾರ‍್ಯಾರು ಅಂಕಪಟ್ಟಿ ಮಾಡಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ತನಿಖೆ ಮೂಲಕ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದರು.
ಮದುವೆ, ಖಾಸಗಿ ಕೆಲಸಕ್ಕೆ ಅಂಕಪಟ್ಟಿ ಬಳಕೆ:
ರಾಜೀವ್ ಸಿಂಗ್ ಅರೋರಾ ಬಳಿ ಯಾರೆಲ್ಲ ನಕಲಿ ಅಂಕಪಟ್ಟಿ ಪಡೆದು ಕೊಂಡಿದ್ದಾರೋ ಅದರಲ್ಲಿ ಬಹುತೇಕರು ಮದುವೆಯಲ್ಲಿ ಮರ್ಯಾದೆ ಕಾಪಾಡಿಕೊಳ್ಳಲು ಹಾಗೂ ಖಾಸಗಿ ಕಂಪನಿಗಳಲ್ಲಿ ಕೆಲಸ ಪಡೆದುಕೊಳ್ಳಲು ಅಂಕಪಟ್ಟಿ ಬಳಸಿಕೊಂಡಿದ್ದಾರೆ ಎನ್ನುವ ಪ್ರಾಥಮಿಕ ತನಿಖೆಯಿಂದ ಬಹಿರಂಗವಾಗಿದೆ. ಅಂಕಪಟ್ಟಿ ಬಳಸಿ ಸರಕಾರಿ ನೌಕರಿ ಪಡೆದಿರುವ ಬಗ್ಗೆ ಮಾಹಿತಿ ತಿಳಿದಿಲ್ಲ. ತನಿಖೆ ನಡೆಯುತ್ತಿದ್ದು, ಶೀಘ್ರವೇ ಎಲ್ಲವೂ ಬಹಿರಂಗಗೊಳ್ಳಲಿದೆ. ಸದ್ಯ ಆರ್ಡರ್ ಕೊಟ್ಟವರು ಹಾಗೂ ಆರ್ಡರ್ ಕೊಟ್ಟು ಅಂಕಪಟ್ಟಿ ತೆಗೆದುಕೊಂಡು ಹೋಗದವರ ನಕಲಿ ಅಂಕಪಟ್ಟಿ ಮಾತ್ರ ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ತಿಳಿಸಿದರು.
ಅಸ್ತಿತ್ವದಲ್ಲಿ ಇರದ ವಿವಿಯ ಹೆಸರಲ್ಲಿ ಅಂಕಪಟ್ಟಿ:
ನಕಲಿ ಅಂಕಪಟ್ಟಿ ತಯಾರಿಕ ಜಾಲವು ದೇಶದ ಸುಮಾರು 28 ವಿಶ್ವವಿದ್ಯಾಲಯಗಳ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡಿದ್ದು ಬೆಳಕಿಗೆ ಬಂದಿದೆ. ಇನ್ನು ಕೆಲವು ವಿಶ್ವವಿದ್ಯಾಲಯಗಳು ಅಸ್ತಿತ್ವದಲ್ಲೇ ಇಲ್ಲದಿದ್ದರೂ ಅಂತಹ ವಿವಿಗಳ ಹೆಸರಲ್ಲೂ ಸಹ ರಾಜೀವ್ ಸಿಂಗ್ ಅಂಕಪಟ್ಟಿ ನೀಡಿದ್ದಾನೆ. ಮಹಾರಾಷ್ಟ್ರದ ಸೌತ್ ವೆಸ್ಟ್ ಯೂನಿವರ್ಸಿಟಿ ಅಸ್ತಿತ್ವದಲ್ಲೇ ಇಲ್ಲ. ಆದರೂ ಇದರ ಹೆಸರಲ್ಲಿ ಅನೇಕರಿಗೆ ನಕಲಿ ಅಂಕಪಟ್ಟಿ ನೀಡಲಾಗಿದೆ.
ಕಳೆದ 7-8 ವರ್ಷಗಳಿಂದ ದೇಶದ 28ಕ್ಕೂ ಹೆಚ್ಚು ವಿವಿಗಳ ಹೆಸರಲ್ಲಿ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ ಹಚ್ಚಿದ್ದು, ಬೇರೆ ಬೇರೆ ವಿಶ್ವವಿದ್ಯಾಲಯಗಳ ಹೆಲೋಗ್ರಾಮ್ ಗಳನ್ನು ಆನ್ಲೈನ್ ಮೂಲಕವೇ ಪಡೆದು ಅಂಕಪಟ್ಟಿ ತಯಾರಿಸುತ್ತಿದ್ದರು. ಇಲ್ಲಿವರೆಗೂ ಕೋಟಿಗೊ ಅಧಿಕ ವಹಿವಾಟು ಪ್ರಮುಖ ಆರೋಪಿ ರಾಜೀವ್ ಸಿಂಗ್ ಅರೋರಾ ನಡೆಸಿದ್ದಾನೆ. ತನಿಖೆ ಬಳಿಕ ಹೆಚ್ಚಿನ ಮಾಹಿತಿ ತಿಳಿಯಲಿದೆ.
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿವಿಗಳನ್ನು ಮುಚ್ಚುವ ಸಾಧ್ಯತೆ ಇದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯ ಉಪ ಸಮಿತಿ ಈ ತೀರ್ಮಾನ ಕೈಗೊಂಡಿದೆ.
ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿಯ ಕುರಿತು ಪರಿಶೀಲನೆಗೆ ಸರ್ಕಾರ ಸಂಪುಟ ಉಪ ಸಮಿತಿ ರಚಿಸಿದೆ. ಬೀದರ್ ವಿಶ್ವವಿದ್ಯಾಲಯ ಹೊರತುಪಡಿಸಿ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ನೃಪತುಂಗ ವಿಶ್ವವಿದ್ಯಾಲಯ ಸೇರಿ ಎಲ್ಲಾ 9 ವಿವಿಗಳನ್ನು ಮುಚ್ಚಲು ತೀರ್ಮಾನಿಸಲಾಗಿದೆ.
ಬೀದರ್ ವಿಶ್ವವಿದ್ಯಾಲಯ 150 ಸಂಯೋಜಿತ ಕಾಲೇಜುಗಳನ್ನು ಹೊಂದಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಯಾವುದೇ ವಿಶ್ವವಿದ್ಯಾಲಯ ಸುಗಮವಾಗಿ ನಡೆಯಲು ಸಂಯೋಜಿತ ಕಾಲೇಜುಗಳ ಶುಲ್ಕ ಮುಖ್ಯ. ಆದ್ದರಿಂದ ಈ ವಿವಿಯನ್ನು ಉಳಿಸಿಕೊಳ್ಳಲು ನಿರ್ಧರಿಸಿದೆ.
ಬಹುತೇಕ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ವಾಹನ ಖರೀದಿಸಲು ಹಣಕಾಸಿನ ಕೊರತೆಯಿದೆ. ಹೊಸ ವಿವಿಗಳನ್ನು ನಡೆಸಲು ಸರ್ಕಾರ ದೊಡ್ಡ ಮೊತ್ತದ ಹಣ ನೀಡಬೇಕಿದೆ. ಹೊಸ ವಿವಿಗಳ ಸ್ಥಾಪನೆ ಮತ್ತು ಕಾರ್ಯಾಚರಣೆಗೆ 342 ಕೋಟಿ ಅಗತ್ಯವಿದೆ. ವಿಶ್ವವಿದ್ಯಾಲಯಗಳ ಸ್ಥಾಪನೆಗೆ 100 ರಿಂದ 200 ಎಕರೆ ಅಗತ್ಯವಿದೆ. ಬಹುತೇಕ ವಿವಿಗಳಿಗೆ ಅಷ್ಟು ಪ್ರಮಾಣದ ಜಮೀನು ಲಭ್ಯವಿಲ್ಲ.
342 ಕೋಟಿ ಮೊತ್ತ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ವೇತನ, ಮೂಲಸೌಕರ್ಯ, ಸಲಕರಣೆ, ವಾಹನ, ಪೀಠೋಪಕರಣ ಇತರೆ ವಸ್ತುಗಳ ಖರೀದಿ ಅಗತ್ಯವಿದೆ. ಹಾಸನ, ಚಾಮರಾಜನಗರ ಹಾವೇರಿ, ಕೊಡಗು, ಕೊಪ್ಪಳ, ಬಾಗಲಕೋಟೆ, ಮಹಾರಾಣಿ ಕ್ಲಸ್ಟರ್ ಮಂಡ್ಯ, ನೃಪತುಂಗ ಯೂನಿವರ್ಸಿಟಿಗೆ ಬೀಗ ಬೀಳುವ ಸಾಧ್ಯತೆ ಇದೆ.
ಕಲಬುರಗಿ: ರಾಜ್ಯದ ಎಲ್ಲಾ ವಿಶ್ವ ವಿದ್ಯಾಲಯಗಳಲ್ಲಿ ಬೋಧಕ, ಬೋಧಕೇತರ ಹುದ್ದೆಗಳು ಖಾಲಿಯಿದ್ದು, ಉನ್ನತ ಶಿಕ್ಷಣ ಪದ್ಧತಿ ಅವನತಿಯತ್ತ ಸಾಗುತ್ತಿದೆ. ಈ ಕುರಿತು ಕೆಲವೊಂದು ದಿನಪತ್ರಿಕೆಗಳಲ್ಲಿ ವರದಿಗಳು ಪ್ರಕಟವಾಗಿದ್ದು ಉನ್ನತ ಶಿಕ್ಷಣದ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿವೆ. ಖಾಲಿಯಾದ ಖಾಯಂ ಹುದ್ದೆಗಳ ಭರ್ತಿಗಾಗಿ ಈಗಾಗಲೇ ನಾನು ಸದನದಲ್ಲಿ ಸಂಭಂದಿಸಿದ ಸಚಿವರ ಗಮನ ಸೆಳೆದಿದ್ದೇನೆ ಎಂದು ಎಂಎಲ್‌ಸಿ ಶಶೀಲ್ ನಮೋಶಿ (Shashil Namoshi) ಹೇಳಿದರು.
ರಾಜ್ಯದಲ್ಲಿ ಉನ್ನತ ಶಿಕ್ಷಣ ಇಲಾಖೆಯಡಿ ಬರುವ 12 ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ ಬೋಧಕರ ಹುದ್ದೆಗಳು ಅತಿ ಹೆಚ್ಚು ಖಾಲಿ ಇದ್ದು ಸರ್ಕಾರ ಮಾತ್ರ ನೇಮಕಾತಿಗೆ ಮನಸ್ಸು ಮಾಡುತ್ತಿಲ್ಲ, ಇದರಿಂದ ವಿಶ್ವವಿದ್ಯಾಲಯಗಳಲ್ಲಿ ಬೋಧಕರಿಲ್ಲದೆ ಗುಣಮಟ್ಟದ ಶಿಕ್ಷಣಕ್ಕೆ ಪೆಟ್ಟು ಬೀಳುವಂತಾಗಿದೆ ಎಂದರು. ಇದನ್ನೂ ಓದಿ: ಕೋರ್ಟ್‌ನಲ್ಲಿ ಪವಿತ್ರಾ ಭಾವುಕ – ಬೆನ್ನುತಟ್ಟಿ ಸಂತೈಸಿದ ದರ್ಶನ್
ಒಟ್ಟು 2,723 ಬೋಧಕ ಹುದ್ದೆಗಳು ಖಾಲಿ:
ರಾಜ್ಯದ 32 ವಿಶ್ವವಿದ್ಯಾಲಯಗಳಲ್ಲಿ ಒಟ್ಟು 4,709 ಹುದ್ದೆಗಳು ಮಂಜೂರಾಗಿದ್ದರೆ, ಇದರಲ್ಲಿ 2,723 ಹುದ್ದೆಗಳು ಖಾಲಿ ಉಳಿದಿವೆ. ಪ್ರಸ್ತುತ ಎಲ್ಲ ವಿವಿಗಳಲ್ಲಿ ಕಾಯಂ ಕಾರ್ಯ ನಿರ್ವಹಿಸುವವರಿಗಿಂತ ಖಾಲಿ ಹುದ್ದೆಗಳು ಹೆಚ್ಚಿವೆ. ಈ ಹಿಂದೆ ನೇಮಕಗೊಂಡವರೂ ನಿವೃತ್ತಿಯಾಗಿದ್ದು ಕೆಲವರು ಮಾತ್ರ ಉಳಿದಿದ್ದು, ಇವರೂ ಕೆಲದೇ ವರ್ಷಗಳಲ್ಲಿ ನಿವೃತ್ತಿ ಆಗಲಿದ್ದಾರೆ ಎಂದರು.
ಬಾಗಲಕೋಟೆ: ವಿಶ್ವವಿದ್ಯಾಲಯದಿಂದ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಜಿಲ್ಲೆಯಾದ್ಯಂತ ವಾಣಿಜ್ಯ ವಿಭಾಗದ (Commerce Lecturer) ಡಿಗ್ರಿ ಕಾಲೇಜುಗಳ ಉಪನ್ಯಾಸಕರು ಕಪ್ಪು ಪಟ್ಟಿಯನ್ನು ಧರಿಸಿ ವಿದ್ಯಾರ್ಥಿಗಳಿಗೆ (Student) ಪಾಠ ಮಾಡಿದ್ದಾರೆ.
ವಾಣಿಜ್ಯ ವಿಭಾಗಕ್ಕೆ ಇರುವ ಫೈನಾನ್ಸಿಯಲ್ ಮ್ಯಾನೇಜಮೆಂಟ್ (Financial Management) ವಿಷಯವನ್ನು ಅರ್ಥಶಾಸ್ತ್ರ (Economics) ವಿಭಾಗದ ಉಪನ್ಯಾಸಕರು ಬೋಧನೆ ಮಾಡುವಂತೆ ಬಾಗಲಕೋಟೆ ವಿಶ್ವವಿದ್ಯಾಲಯ (Bagalkot University) ಸುತ್ತೋಲೆ ಹೊರಡಿಸಿದೆ. ಸುತ್ತೋಲೆಯನ್ನು ಖಂಡಿಸಿ ಇಳಕಲ್, ಮುಧೋಳ, ಬಾದಾಮಿ, ಗುಳೇದಗುಡ್ಡ ಸೇರಿದಂತೆ ಜಿಲ್ಲೆಯ ವಾಣಿಜ್ಯ ವಿಭಾಗದ ಉಪನ್ಯಾಸಕರು ಪ್ರತಿಭಟಿಸಿದ್ದಾರೆ. ಇದನ್ನೂ ಓದಿ: ಇವಿಎಂ ಮ್ಯಾನಿಪ್ಯುಲೆಟ್ ಆಗಿದೆ ಅನ್ನೋದಕ್ಕೆ ಸಾಕ್ಷಿಗಳಿಲ್ಲ – ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ
ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಿಗೆ ಫೈನಾನ್ಸಿಯಲ್ ಮ್ಯಾನೇಜ್ಮೆಂಟ್ ವಿಷಯದ ಬಗ್ಗೆ ಸಂಪೂರ್ಣ ಹಿಡಿತ ಇರುವುದಿಲ್ಲ ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುವುದಲ್ಲದೇ ವಾಣಿಜ್ಯ ವಿಭಾಗದ ಉಪನ್ಯಾಸಕರ ಹುದ್ದೆಗಳಿಗೂ ಕುತ್ತುಬರುವ ಸಾಧ್ಯತೆ ಇದೆ ಎಂದು ಹೇಳಿ ಕಪ್ಪು ಪಟ್ಟಿಧರಿಸಿ ಸಾಂಕೇತಿಕ ಪ್ರತಿಭಟನೆಗೆ (Protest) ಇಳಿದಿದ್ದಾರೆ.
ಕೂಡಲೇ ವಿಶ್ವವಿದ್ಯಾಲಯ ಈ ಆದೇಶವನ್ನು ಹಿಂಪಡೆಯದಿದ್ದರೆ ಮೌಲ್ಯಮಾಪನ ಸೇರಿದಂತೆ ಬೋಧನೆ (ಕ್ಲಾಸ್‌ಗಳನ್ನು) ಬಹಿಷ್ಕರಿಸಿ ವಿಶ್ವವಿದ್ಯಾಲಯದ ಮುಂದೆ ಪ್ರತಿಭಟನೆ ಮಾಡುವುದಾಗಿ ಬಾಗಲಕೋಟೆ ವಿಶ್ವವಿದ್ಯಾಲಯ ವಾಣಿಜ್ಯ ಮತ್ತು ವ್ಯವಸ್ಥಾಪನಾ ಪ್ರಾಧ್ಯಾಪಕರ ಸಂಘದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಕುರನಾಳ ಎಚ್ಚರಿಕೆ ನೀಡಿದ್ದಾರೆ.
ಅಬುದಾಭಿ: ಪದವಿ ಪ್ರದಾನ ಸಮಾರಂಭದಲ್ಲಿ ಫ್ರೀ ಪ್ಯಾಲೆಸ್ತೀನ್ (Free Palestine) ಘೋಷಣೆ ಕೂಗಿದ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯನ್ನು ಮುಸ್ಲಿಂ ರಾಷ್ಟ್ರ ಯುಎಇ (UAE) ದೇಶದಿಂದಲೇ ಗಡಿಪಾರು ಮಾಡಿದೆ.
ಮೇ ತಿಂಗಳಲ್ಲಿ ಅಬುಧಾಬಿಯಲ್ಲಿರುವ ನ್ಯೂಯಾರ್ಕ್ ವಿಶ್ವವಿದ್ಯಾನಿಲಯದ (New York University) ಪದವಿ ಪ್ರದಾನ ಸಮಾರಂಭದಲ್ಲಿ ಸಾಂಪ್ರದಾಯಿಕ ಪ್ಯಾಲೆಸ್ಟೀನಿಯನ್ ಕಪ್ಪು-ಬಿಳುಪು ಕೆಫಿಯೆಹ್ ಸ್ಕಾರ್ಫ್ ಅನ್ನು ಧರಿಸಿದ ವಿದ್ಯಾರ್ಥಿಯೊಬ್ಬ ಫ್ರೀ ಪ್ಯಾಲೆಸ್ತೀನ್ ಎಂದು ಘೋಷಣೆ ಕೂಗಿದ್ದ. ಇದನ್ನೂ ಓದಿ: ಚಾರ್ಮಾಡಿಯಲ್ಲಿ ಪ್ರವಾಸಿಗರ ಹುಚ್ಚಾಟ – ಬುದ್ಧಿ ಕಲಿಸಲು ಬಟ್ಟೆ ಹೊತ್ತೊಯ್ದ ಪೊಲೀಸರು
ಘೋಷಣೆ ಕೂಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತಂದ ಹಿನ್ನೆಲೆಯಲ್ಲಿ ಆತನನ್ನು ಯುಎಇಯಿಂದ ಗಡಿಪಾರು (Deported) ಮಾಡಲಾಗಿದೆ ಎಂದು ವರದಿಯಾಗಿದೆ. ಈ ವಿಚಾರಕ್ಕೆ ಯುಎಇ ಸರ್ಕಾರವನ್ನು ಸಂಪರ್ಕಿಸಿದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಮಾಧ್ಯಮ ತನ್ನ ವರದಿಯಲ್ಲಿ ತಿಳಿಸಿದೆ.
ಪದವಿ ಪ್ರದಾನ ಸಮಾರಂಭಕ್ಕೆ ಮೊದಲೇ ವಿದ್ಯಾರ್ಥಿಗಳಿಗೆ ಎಲ್ಲಾ ನಿಯಮಗಳನ್ನು ತಿಳಿಸಲಾಗಿತ್ತು. ಕ್ಯಾಂಪಸ್‌ನಲ್ಲಿ ಎಲ್ಲಿಯೂ ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶನಕ್ಕೆ ಅನುಮತಿ ನೀಡುವುದಿಲ್ಲ. ವಸತಿ ಕಟ್ಟಡಗಳಲ್ಲಿಯೂ ಸಹ ಧ್ವಜ ಹಾರಿಸುವಂತಿಲ್ಲ ಎಂದು ಕಟ್ಟುನಿಟ್ಟಾಗಿ ಸೂಚಿಸಲಾಗಿತ್ತು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾನೆ.
ಬೆಂಗಳೂರು: ರಾಜ್ಯ ಸರ್ಕಾರ ವಿದ್ಯುತ್ ಬಿಲ್ ಹಾಗೂ ನೀರಿನ ಬಿಲ್ ಹೆಚ್ಚಳ ಮಾಡಿದ ಬಳಿಕ ಪದವಿ ಶಿಕ್ಷಣ ಶುಲ್ಕವನ್ನು 10% ಹೆಚ್ಚಳ (College Fees Hike) ಮಾಡಿ ಜನರಿಗೆ ಶಾಕ್ ನೀಡಿದೆ.
ವಿಶ್ವವಿದ್ಯಾಲಯಗಳು ಸಲ್ಲಿಸಿದ್ದ ಶುಲ್ಕ ಹೆಚ್ಚಳ ಪ್ರಸ್ತಾವನೆಗೆ ಉನ್ನತ ಶಿಕ್ಷಣ ಇಲಾಖೆ (Karnataka Higher Education Council) ಒಪ್ಪಿಗೆ ಕೊಟ್ಟಿದೆ. ಇದರಿಂದ ವಿಶ್ವವಿದ್ಯಾಲಯಗಳು ಹಾಗೂ ಪದವಿ ಕಾಲೇಜ್‍ಗಳ ಶಿಕ್ಷಣ ಶುಲ್ಕವನ್ನು 10% ಹೆಚ್ಚಿಸಲು ಸರ್ಕಾರದಿಂದ ಅನುಮತಿ ಸಿಕ್ಕಂತಾಗಿದೆ. ಪ್ರಸ್ತುತ ವರ್ಷದಿಂದಲೇ ಶುಲ್ಕ ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ. ಇದನ್ನೂ ಓದಿ: ಸ್ವಯಂಪ್ರೇರಿತ ನಂಜನಗೂಡು ಬಂದ್‌ಗೆ ಭರ್ಜರಿ ಪ್ರತಿಕ್ರಿಯೆ – ಮೆಡಿಕಲ್ ಅಂಗಡಿ ಹೊರತು ಪಡಿಸಿ ಎಲ್ಲಾ ವ್ಯಾಪಾರ ಬಂದ್
ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ಏಕರೂಪ ಶುಲ್ಕ ತಜ್ಞರ ಸಮಿತಿ ನೀಡಿದ್ದ ವರದಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಯುವನಿಧಿಯಲ್ಲಿ ಕೊಡುತ್ತಿರುವ ಹಣ ಮತ್ತೊಂದು ರೀತಿಯಲ್ಲಿ ಸರ್ಕಾರ ವಾಪಸ್ ಪಡೆಯಲು ತೀರ್ಮಾನಿಸಿದಂತಿದೆ. ಇನ್ನು ಮುಂದೆ ರಾಜ್ಯದಲ್ಲಿ ಪದವಿ ಶಿಕ್ಷಣವೂ ದುಬಾರಿಯಾಗಲಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಇದನ್ನೂ ಓದಿ: ಮಸ್ಕ್‌ನ ಸ್ಪೇಸ್‍ಎಕ್ಸ್ ರಾಕೆಟ್‍ನಲ್ಲಿ ಶೀಘ್ರ ಇಸ್ರೋ ಉಪಗ್ರಹ ಉಡಾವಣೆ
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (UGC) ದೇಶದ ವಿಶ್ವವಿದ್ಯಾಲಯಗಳಿಗೆ (University) 2023-24ನೇ ಸಾಲಿನ ಎಂಫಿಲ್ (MPhil) ಕೋರ್ಸ್‌ಗೆ ಪ್ರವೇಶಾತಿ ತೆಗೆದುಕೊಳ್ಳುವುದನ್ನು ನಿಲ್ಲಿಸುವಂತೆ ಸೂಚಿಸಿದೆ. ಅಷ್ಟೇ ಅಲ್ಲದೇ ಇದು ಮಾನ್ಯತೆ ಪಡೆದ ಪದವಿ ಅಲ್ಲ ಎಂದು ಹೇಳಿದೆ.
“ಕೆಲವು ವಿಶ್ವವಿದ್ಯಾನಿಲಯಗಳು ಎಂಫಿಲ್ (Master of Philosophy) ಕಾರ್ಯಕ್ರಮಕ್ಕಾಗಿ ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸುತ್ತಿರುವುದು ಯುಜಿಸಿಯ ಗಮನಕ್ಕೆ ಬಂದಿದೆ. ಎಂಫಿಲ್ ಪದವಿಯು ಮಾನ್ಯತೆ ಪಡೆದ ಪದವಿಯಲ್ಲ ಎಂಬುದನ್ನು ಈ ಮೂಲಕ ಎಲ್ಲರ ಗಮನಕ್ಕೆ ತರಲಾಗುತ್ತಿದೆ” ಎಂದು ಯುಜಿಸಿ ಕಾರ್ಯದರ್ಶಿ ಮನೀಶ್ ಜೋಶಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ: ಮತ್ತೆ 500 ಕಾರ್ಮಿಕರಿಗೆ ಬುಲಾವ್, 4000 ಕಾರ್ಮಿಕರಿಂದ ಹಗಲಿರುಳು ಕೆಲಸ
ಯುಜಿಸಿಯ (ಪಿಎಚ್‌ಡಿ ಪದವಿ ಪ್ರದಾನ ಮಾಡಲು ಕನಿಷ್ಠ ಮಾನದಂಡಗಳು ಮತ್ತು ಕಾರ್ಯವಿಧಾನಗಳು) ನಿಯಮಗಳು 2022ರ ನಿಯಮಾವಳಿ 14ರ ಪ್ರಕಾರ, ಉನ್ನತ ಶಿಕ್ಷಣ ಸಂಸ್ಥೆಗಳು ಯಾವುದೇ ಎಂಫಿಲ್ ಕಾರ್ಯಕ್ರಮವನ್ನು ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: 39 ದಿನಗಳಲ್ಲಿ ಶಬರಿಮಲೆಗೆ 204 ಕೋಟಿ ರೂ. ಆದಾಯ- ಕಳೆದ ವರ್ಷ ಎಷ್ಟಿತ್ತು?
ಶಿಕ್ಷಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕಳೆದ ಐದು ವರ್ಷಗಳಲ್ಲಿ ಭಾರತದ ವಿವಿಧೆಡೆ 140 ಖಾಸಗಿ ವಿಶ್ವವಿದ್ಯಾಲಯಗಳು ಸ್ಥಾಪನೆಯಾಗಿವೆ. ಗುಜರಾತ್‌ನಲ್ಲಿ ಗರಿಷ್ಠ ಖಾಸಗಿ ವಿವಿಗಳು ಸ್ಥಾಪನೆಯಾಗಿವೆ. ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಗಳು ನಂತರದ ಸ್ಥಾನಗಳಲ್ಲಿವೆ. ಗುಜರಾತ್‌ನಲ್ಲಿ 28, ಮಹಾರಾಷ್ಟ್ರದಲ್ಲಿ 15, ಕರ್ನಾಟಕದಲ್ಲಿ 10 ಖಾಸಗಿ ವಿವಿಗಳು ಸ್ಥಾಪನೆಯಾಗಿವೆ.
ಶ್ರೀನಗರ: ವಿಶ್ವಕಪ್ ಕ್ರಿಕೆಟ್‌ನಲ್ಲಿ (World Cup Cricket) ಭಾರತ ಸೋತ ನಂತರ ಸಂಭ್ರಮಾಚರಣೆ ನಡೆಸಿದ 7 ಮಂದಿ ಕಾಶ್ಮೀರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ (Kashmir University Students) ವಿರುದ್ಧ ಯುಎಪಿಎ (UAPA) ಅಡಿ ಕೇಸ್ ದಾಖಲಾಗಿದೆ.
ಶೇರ್-ಎ-ಕಾಶ್ಮೀರ್ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ 7 ಮಂದಿ ವಿದ್ಯಾರ್ಥಿಗಳು ಭಾರತ ಸೋತ ನಂತರ ಪಾಕಿಸ್ತಾನ (Pakistan) ಪರ ಘೋಷಣೆ ಕೂಗಿದ್ದರು. ವಿಶ್ವವಿದ್ಯಾನಿಲಯದಲ್ಲಿ ಬಿವಿಎಸ್‌ಸಿ ಕೋರ್ಸ್ ಓದುತ್ತಿರುವ ಪಂಜಾಬ್ ನಿವಾಸಿ ಸಚಿನ್ ಬೈನ್ಸ್ ಅವರ ದೂರಿನ ಮೇರೆಗೆ ಕಾನೂನುಬಾಹಿರ ಚಟುವಟಿಕೆಗಳು(ತಡೆಗಟ್ಟುವಿಕೆ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 50 ವರ್ಷ ದಾಟಿದೆ, ಒಂಟಿತನ ನಿಮ್ಮನ್ನು ಕಾಡುತ್ತಿರಬಹುದು – ರಾಗಾ ಬಗ್ಗೆ ಓವೈಸಿ ವ್ಯಂಗ್ಯ
ಆಗಸ್ಟ್ 17ರಂದು ಭಾರತ ಸೋತ ನಂತರ ಪಾಕ್ ಪರ ಘೋಷಣೆ ಕೂಗಿದರು. ನಮ್ಮ ದೇಶದ ಬೆಂಬಲಿಗ ಎಂದು ಹೇಳಿ ನನ್ನನ್ನು ಗುರಿಯಾಗಿಸಿ ನಿಂದಿಸಲು ಪ್ರಾರಂಭಿಸಿದರು. ಪ್ರಶ್ನೆ ಮಾಡಿದ್ದಕ್ಕೆ ಸುಮ್ಮನಿರುವಂತೆ ಹೇಳಿದರು. ಸುಮ್ಮನಿರದಿದ್ದರೆ ಗುಂಡಿಕ್ಕಿ ಕೊಲ್ಲುತ್ತೇವೆ ಎಂದು ಬೆದರಿಸಿದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕಾಶ್ಮೀರ ಮೂಲದ ಏಳು ವಿದ್ಯಾರ್ಥಿಗಳ ಮೇಲೆ ಯುಎಪಿಎ ಸೆಕ್ಷನ್ 13 ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505 ಮತ್ತು 506 ಅಡಿಯಲ್ಲಿ ಗಂಡರ್‌ಬಾಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.