Tag: ವಿಶ್ವವಿದ್ಯಾಲಯಗಳು

  • ವಿವಿಗಳನ್ನ ಮುಚ್ಚೋದು ಕೈಯಲ್ಲಾಗದ ಹೇಡಿಗಳು ಮೈ ಪರಚಿಕೊಳ್ಳೋ‌ ಹಾಗೆ – ಮಾಜಿ ಡಿಸಿಎಂ ಅಶ್ವಥ್‌ ನಾರಾಯಣ ಲೇವಡಿ

    ವಿವಿಗಳನ್ನ ಮುಚ್ಚೋದು ಕೈಯಲ್ಲಾಗದ ಹೇಡಿಗಳು ಮೈ ಪರಚಿಕೊಳ್ಳೋ‌ ಹಾಗೆ – ಮಾಜಿ ಡಿಸಿಎಂ ಅಶ್ವಥ್‌ ನಾರಾಯಣ ಲೇವಡಿ

    ಬೆಂಗಳೂರು: ಕೈಯಲ್ಲಾಗದ ಹೇಡಿಗಳು ಮೈ ಪರಚಿಕೊಳ್ಳೋ‌ ಹಾಗೆ ವಿವಿಗಳನ್ನು (Universities) ಮುಚ್ಚಿ ಯುವಕರನ್ನು ಶಿಕ್ಷಣದಿಂದ ವಂಚಿತರಾಗಿ‌ ಮಾಡ್ತಿದ್ದಾರೆ ಎಂದು ಮಾಜಿ ಡಿಸಿಎಂ ಡಾ.ಸಿ.ಎನ್‌ ಅಶ್ವಥ್‌ ನಾರಾಯಣ (Ashwath Narayan) ಆರೋಪಿಸಿದರು.

    ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ವಿವಿಗಳನ್ನು ಮುಚ್ಚಿ ಯುವಕರನ್ನು ಶಿಕ್ಷಣದಿಂದ ವಂಚಿತರಾಗಿ‌ ಮಾಡ್ತಿದ್ದಾರೆ. ಸರ್ಕಾರ ವಿವಿಗಳನ್ನು ಮುಚ್ತಿರೋದು ರಾಜ್ಯದ ಪ್ರಗತಿಗೆ ಮಾರಕ. ಮಲತಾಯಿ ಧೋರಣೆ ಇಟ್ಕೊಂಡು ಸರ್ಕಾರ ಈ ತೀರ್ಮಾನ ಮಾಡಿದೆ. ಇದು ಶಿಕ್ಷಣ ವಿರೋಧಿ ನಡೆ, ನಾವು ತೀವ್ರವಾಗಿ ಖಂಡಿಸ್ತೇವೆ ಅಂದ್ರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಆರಂಭವಾಗಲಿದೆ ಮೊಬೈಲ್ ತಯಾರಿಕಾ ಘಟಕ, ಸಿಗಲಿದೆ 50 ಸಾವಿರ ಜನರಿಗೆ ಉದ್ಯೋಗ: ಅಶ್ವಿನಿ ವೈಷ್ಣವ್‌

    8 ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸರ್ಕಾರ ನಿರ್ಧಾರದಿಂದ ಪ್ರಗತಿಗೆ ಹಿನ್ನಡೆಯಾಗಲಿದೆ. ಕಾಂಗ್ರೆಸ್‌ನಿಂದ ಎಲ್ಲ ಕ್ಷೇತ್ರಗಳಲ್ಲಿ ಹಿನ್ನಡೆಯಾಗಿದೆ. ಈ ತೀರ್ಮಾನದಿಂದ ಯುವಜನರ ಶೈಕ್ಷಣಿಕ ಪ್ರಗತಿಗೆ ತೊಂದರೆಯಾಗಲಿದೆ. ಸಿಎಂ ಸಿದ್ದರಾಮಯ್ಯನವರು ಬಜೆಟ್‌ ಮಂಡಿಸುವಾಗ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಸಂವಿಧಾನದ ಆಶಯ, ವಚನಕಾರರ ಮಾತುಗಳನ್ನು ಹೇಳಿದ್ದರು. ಆದರೆ ಈಗ ವಿವಿಗಳನ್ನು ಮುಚ್ಚಲಾಗುತ್ತಿದೆ. ಯುವಜನರಿಗೆ ಸಮಾನ ಅವಕಾಶ ದೊರೆಯಲು ಗುಣಮಟ್ಟದ ಶಿಕ್ಷಣ ನೀಡಬೇಕು. ಜಿಲ್ಲೆಗಳು ರೂಪುಗೊಂಡು ಹಲವಾರು ವರ್ಷಗಳಾದರೂ ಅಲ್ಲಿ ಪ್ರತ್ಯೇಕ ವಿವಿಗಳಿಲ್ಲ. ಹಣ ಇಲ್ಲ ಎಂಬ ನೆಪವೊಡ್ಡಿ ವಿವಿಗಳನ್ನು ಮುಚ್ಚಲಾಗುತ್ತಿದೆ. ಬಿಜೆಪಿ ಸರ್ಕಾರದಲ್ಲಿ ವಿವಿಗಳನ್ನು ರೂಪಿಸುವಾಗ, ಹೊಸ ಹುದ್ದೆಗಳನ್ನು ಸೃಷ್ಟಿಸಿಲ್ಲ. ಇರುವ ಹುದ್ದೆಗಳನ್ನೇ ವರ್ಗಾಯಿಸಲಾಗಿದೆ ಎಂದು ವಿವರಿಸಿದರು.

    2021ರ ಅಂಕಿ ಅಂಶಗಳ ಪ್ರಕಾರ, ಕಾಲೇಜುಗಳ ಪ್ರವೇಶಾತಿ ಪ್ರಮಾಣ ಸರಾಸರಿ ಶೇ.33 ಇದೆ. ಚಾಮರಾಜನಗರದಲ್ಲಿ ಶೇ.10, ಮಂಡ್ಯದಲ್ಲಿ ಶೇ.15, ಬಾಗಲಕೋಟೆಯಲ್ಲಿ ಶೇ.16 ಇದೆ. ಇಂತಹ ಸ್ಥಿತಿಯಲ್ಲಿ ಯುವಜನರನ್ನು ಶಿಕ್ಷಣ ವಂಚಿತರನ್ನಾಗಿ ಮಾಡಲಾಗುತ್ತಿದೆ. ವಿವಿಗಳಿಂದ ಆದಾಯ ಬರಲು ಇದು ಅಂಗಡಿಗಳಲ್ಲ. ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯ. ಈ ಕ್ರಮ ಕೈಗೊಳ್ಳುವ ಮುನ್ನ ಸರ್ಕಾರ ಯಾವುದೇ ಪರಿಶೀಲನೆ ಮಾಡಿ ವರದಿ ರೂಪಿಸಿಲ್ಲ. ಬಿಜೆಪಿ ಅವಧಿಯಲ್ಲಿ ರೂಸಾ ಯೋಜನೆಯಡಿ ಅನುದಾನ ಪಡೆದು ಮಹಾರಾಣಿ ಕ್ಲಸ್ಟರ್‌, ಮಂಡ್ಯ ವಿವಿ ರೂಪಿಸಲಾಗಿದೆ. ಇದು ರಾಜಕೀಯ ಪ್ರೇರಿತ ಎಂದು ದೂರಿದರು.  ಇದನ್ನೂ ಓದಿ: ಜಲಜೀವನ್ ಮಿಷನ್‌ಗೆ ರಾಜ್ಯಕ್ಕೆ ಘೋಷಿಸಿದ ಹಣ ಬಿಡುಗಡೆ ಮಾಡದೇ ಕೇಂದ್ರ ದ್ರೋಹ: ಸಿಎಂ

    ಇದು ರಿಯಲ್‌ ಎಸ್ಟೇಟ್‌ ಸರ್ಕಾರ ಎಂದ ಛಲವಾದಿ:
    ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಬಾಬಾ ಸಾಹೇಬ್‌ ಅಂಬೇಡ್ಕರ್‌ ಮೊದಲು ಒತ್ತು ನೀಡಿದ್ದು ಶಿಕ್ಷಣಕ್ಕೆ. ಕಾಂಗ್ರೆಸ್‌ ಸರ್ಕಾರ ಅಕ್ಕಿ ನೀಡುವ ಮೊದಲು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು. 4 ಲಕ್ಷ ಕೋಟಿ ರೂ. ಬಜೆಟ್‌ ಮಂಡಿಸುವ ಸರ್ಕಾರಕ್ಕೆ 350 ಕೋಟಿ ರೂ. ಅನುದಾನ ನೀಡಲು ಆಗಲ್ಲ. ಕೇಂದ್ರ ಸರ್ಕಾರ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಆದರೆ ಕಾಂಗ್ರೆಸ್‌ ಸರ್ಕಾರಕ್ಕೆ ಶಿಕ್ಷಣಕ್ಕಿಂತ ರಿಯಲ್‌ ಎಸ್ಟೇಟ್‌ ಮುಖ್ಯ ಎಂದರು.  ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಅನುಮತಿ ಕೊಡಿ ಅಂತ ನಾನೇ ಕೇಂದ್ರಕ್ಕೆ ಪತ್ರ ಬರೆದಿದ್ದೇನೆ: ಹೆಚ್‌ಡಿಡಿ

    ಕೇಂದ್ರ ಸರ್ಕಾರ ಜನ ಔಷಧಿ ಕೇಂದ್ರಗಳನ್ನು ನೀಡಿದರೆ, ಅದನ್ನು ಕೂಡ ಸರ್ಕಾರ ಮುಚ್ಚುತ್ತಿದೆ. ಕೇಂದ್ರ ಸರ್ಕಾರದಿಂದ 40 ಸಾವಿರ ಕಿ.ಮೀ. ರೈಲ್ವೆ ಮಾರ್ಗ ಹೆಚ್ಚಾಗಿದೆ. ರೈಲುಗಳ ಸಂಖ್ಯೆ ಹೆಚ್ಚಿದೆ. ರಾಜ್ಯ ಬಿಜೆಪಿಯಿಂದ ಹತ್ತು ವಿವಿಗಳನ್ನು ರೂಪಿಸಿದಾಗ, ಇನ್ನಷ್ಟು ಹೆಚ್ಚು ವಿವಿಗಳನ್ನು ಮಾಡುತ್ತೇವೆಂದು ಕಾಂಗ್ರೆಸ್‌ ಹೇಳಬೇಕಿತ್ತು. ಅದನ್ನು ಬಿಟ್ಟು ಬಿಜೆಪಿ ಕಟ್ಟಿದ ಮನೆಯನ್ನು ಒಡೆದು ಹಾಕಲು ಕಾಂಗ್ರೆಸ್‌ ಮುಂದಾಗಿದೆ. ಶಿಕ್ಷಣ ಹಾಗೂ ಆರೋಗ್ಯ ವಲಯದಲ್ಲಿ ಆದಾಯವನ್ನು ನೋಡಬಾರದು ಎಂದರು.

    ನಿಮ್ಮ ಗ್ಯಾರಂಟಿಗಳನ್ನು ನಿಮ್ಮ ನಾಯಕರೇ ವಿರೋಧಿಸುತ್ತಿದ್ದಾರೆ. 5 ವರ್ಷದಲ್ಲಿ ಎಷ್ಟು ಲೂಟಿ ಮಾಡಬಹುದೆಂದು ಎಲ್ಲರೂ ನೋಡುತ್ತಿದ್ದಾರೆ. ಬೆಂಗಳೂರಿನಲ್ಲಿ ಹುಡುಕಿದರೂ ಜಾಗ ಸಿಗದಷ್ಟು ಅಗ್ರಿಮೆಂಟ್‌ಗಳನ್ನು ಮಾಡಲಾಗುತ್ತಿದೆ. ಇದು ಲ್ಯಾಂಡ್‌ ಗ್ರ್ಯಾಬಿಂಗ್‌, ಲೂಟಿಯ ಸರ್ಕಾರ ಎಂದರು.  ಇದನ್ನೂ ಓದಿ: ಗೋದಾವರಿ-ಕೃಷ್ಣ-ಕಾವೇರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 TMC ನೀರು ಕೊಡಬೇಕು: ಹೆಚ್.ಡಿ.ದೇವೇಗೌಡ

  • ಕರ್ನಾಟಕ, ಜಮ್ಮು- ಕಾಶ್ಮೀರ ಸೇರಿ ದೇಶದ ವಿವಿಗಳ ಅಭಿವೃದ್ಧಿಗೆ 3600 ಕೋಟಿ ರೂ. ಬಿಡುಗಡೆ

    ಕರ್ನಾಟಕ, ಜಮ್ಮು- ಕಾಶ್ಮೀರ ಸೇರಿ ದೇಶದ ವಿವಿಗಳ ಅಭಿವೃದ್ಧಿಗೆ 3600 ಕೋಟಿ ರೂ. ಬಿಡುಗಡೆ

    – ಬೆಳಗಾವಿ ರಾಣಿ ಚನ್ನಮ್ಮ, ಧಾರವಾಡ, ಗುಲ್ಬರ್ಗ ವಿವಿಗಳಿಗೆ ಅನುದಾನ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

    – ಜಮ್ಮುವಿನಲ್ಲಿ ಪ್ರಧಾನಮಂತ್ರಿ ಉಷಾ ಯೋಜನೆಗೆ ಚಾಲನೆ; ನೇರ ಪ್ರಸಾರದಲ್ಲಿ ಸಚಿವ ಪ್ರಹ್ಲಾದ್‌ ಜೋಶಿ, ಸಂಸದೆ ಮಂಗಳಾ ಅಂಗಡಿ ಭಾಗಿ

    ಬೆಳಗಾವಿ: ಕರ್ನಾಟಕ (Karnataka), ಜಮ್ಮು-ಕಾಶ್ಮೀರ (Jammu and Kashmir) ಸೇರಿದಂತೆ ದೇಶದ ಅನೇಕ ವಿಶ್ವವಿದ್ಯಾಲಯಗಳಿಗೆ (University) ಕೇಂದ್ರ ಸರ್ಕಾರ 3600 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ತಿಳಿಸಿದ್ದಾರೆ.

    ಬೆಳಗಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ಉಷಾ ಯೋಜನೆಯಡಿ 78 ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಅನುದಾನ ನೀಡಿದ್ದಾರೆ. ಇಂದು ಅದರ ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: 2013ರ ಸಿದ್ದರಾಮಯ್ಯ ಬೇರೆ, 2024 ಸಿದ್ದರಾಮಯ್ಯ ಬೇರೆ: ಎನ್.ಹೆಚ್ ಶಿವಶಂಕರ ರೆಡ್ಡಿ

    ಉಷಾ ಯೋಜನೆಯಡಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂ. ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ 20 ಕೋಟಿ ರೂ. ಹಾಗೂ ಧಾರವಾಡ ವಿಶ್ವವಿದ್ಯಾಲಯಕ್ಕೆ 20 ಕೋಟಿ ರೂ. ದೊರೆಯಲಿದೆ. ಜಮ್ಮು- ಕಾಶ್ಮೀರ ಸೇರಿದಂತೆ ದೇಶದ ಹಲವಾರು ವಿಶ್ವವಿದ್ಯಾಲಯಗಳ ಅಭಿವೃದ್ಧಿಗಾಗಿ ಪ್ರಧಾನಮಂತ್ರಿ ಈ ಅನುದಾನ ಬಿಡುಗಡೆ ಮಾಡಿದ್ದಾರೆ. ಸಾಕ್ಷರತೆಯಿಂದ ಮಾತ್ರ ದೇಶದ ನೈಜ ವಿಕಾಸ ಸಾಧ್ಯವೆಂದು ನಂಬಿರುವ ಮೋದಿಯವರು ದೇಶದ ವಿಶ್ವವಿದ್ಯಾಲಯಗಳಿಗೆ ಹೊಸ ಜೀವ ತುಂಬಲು ಈ ಮಹತ್ತರವಾದ ಯೋಜನೆಗೆ ಚಾಲನೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.

    ಭಾರತದ ಯುವ ಜನತೆಗೆ ಶಿಕ್ಷಣ ಮತ್ತು ಮೂಲಸೌಕರ್ಯವನ್ನು ಅಭಿವೃದ್ಧಿಗೊಳಿಸಿ ಭಾರತವನ್ನು ವಿಶ್ವಗುರು ಮಾಡುವ ಧ್ಯೇಯ ಪ್ರಧಾನಿಯವರದ್ದಾಗಿದೆ. ಈ ನಿಟ್ಟಿನಲ್ಲಿ ಪ್ರಾಥಮಿಕ ಶಿಕ್ಷಣದಿಂದಲೇ ವಿದ್ಯಾರ್ಥಿಗಳ ಅಮೂಲ್ಯ ಜೀವನ ರೂಪಿಸಲು ಪ್ರಧಾನಿ ಹೊಸ ಹೊಸ ಯೋಜನೆಗಳನ್ನು ಹಾಕಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

    ಜಮ್ಮು ಅಭಿವೃದ್ಧಿಗೆ ಐತಿಹಾಸಿಕ ಕ್ರಮ ಜಮ್ಮು- ಕಾಶ್ಮೀರ ಎಂದರೆ ಹಿಂಸಾಚಾರ, ಭಯೋತ್ಪಾದನೆಯೇ ಎಲ್ಲರ ಮನದಲ್ಲಿ ಹಾದು ಹೋಗುತ್ತಿತ್ತು. ಈಗ ಅದು ಸಂಪೂರ್ಣ ಬದಲಾಗಿದೆ. ಅಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಿದೆ. ವಿಶ್ವವಿದ್ಯಾಲಯಗಳ ಅನುದಾನ ಬಿಡುಗಡೆ ಸೇರಿದಂತೆ ಜಮ್ಮುವಿನ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಮೋದಿಯವರು ಇಂದು ಅಲ್ಲಿಂದಲೇ ಚಾಲನೆ ನೀಡಲಿದ್ದಾರೆ. ನಾನು ಮತ್ತು ಸಂಸದೆ ಮಂಗಳಾ ಅಂಗಡಿ ಅವರು ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ನಡೆದ ನೇರಪ್ರಸಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇವೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಕಮಲ್‌ನಾಥ್‌ ಇಂದು, ಎಂದೆಂದಿಗೂ ಕಾಂಗ್ರೆಸ್‌ನಲ್ಲೇ ಇರುತ್ತಾರೆ: ದಿಗ್ವಿಜಯ್‌ ಸಿಂಗ್‌

  • ರಾಜ್ಯದ ಎಲ್ಲಾ ವಿವಿಗಳಲ್ಲಿ ಏಕರೂಪದ ಅಂಕ ಮತ್ತು ಗ್ರೇಡಿಂಗ್ ವ್ಯವಸ್ಥೆ ಜಾರಿ: ಸುಧಾಕರ್

    ರಾಜ್ಯದ ಎಲ್ಲಾ ವಿವಿಗಳಲ್ಲಿ ಏಕರೂಪದ ಅಂಕ ಮತ್ತು ಗ್ರೇಡಿಂಗ್ ವ್ಯವಸ್ಥೆ ಜಾರಿ: ಸುಧಾಕರ್

    ಬೆಂಗಳೂರು: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ಅಂಕ ವ್ಯವಸ್ಥೆ, ಗ್ರೇಡ್ ವ್ಯವಸ್ಥೆ ಜಾರಿಗೆ ತರಲಾಗುತ್ತದೆ ಅಂತ ಉನ್ನತ ಶಿಕ್ಷಣ ಸಚಿವ ಸುಧಾಕರ್ (MC Sudhakar) ತಿಳಿಸಿದ್ದಾರೆ.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್‌ನ (Congress) ಮಂಜುನಾಥ್ ಭಂಡಾರಿ ಪ್ರಶ್ನೆ ಕೇಳಿದರು. ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ (Karnataka Universities) ಅಂಕಗಳು ನೀಡುವ ವ್ಯವಸ್ಥೆ ಒಂದೊಂದು ವಿವಿಗೆ ಒಂದೊಂದು ವ್ಯವಸ್ಥೆ ಇದೆ. ವಿವಿಗಳಲ್ಲಿ ಮೌಲ್ಯಮಾಪನ ವ್ಯವಸ್ಥೆ ಭಿನ್ನವಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಅನ್ಯಾಯ ಆಗ್ತಿದೆ. ಹೀಗಾಗಿ ಏಕರೂಪದ ಮೌಲ್ಯಮಾಪನ ವ್ಯವಸ್ಥೆ ಜಾರಿ ಮಾಡಬೇಕು. ಫೇಕ್ ಡಾಕ್ಟರೇಟ್ ಕೊಡುವ ವಿವಿಗಳು ಜಾಸ್ತಿ ಆಗಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳು ಪದವಿ ಪಡೆದ ಮೇಲೆ ಪದವಿಯನ್ನ ರಿಜಿಸ್ಟರ್ ಮಾಡಿಸುವ ವ್ಯವಸ್ಥೆ ಜಾರಿ ಮಾಡಬೇಕು. ನಮ್ಮ ಸರ್ಕಾರಿ ವಿವಿಗಳಲ್ಲಿ ಅಂಕಗಳು ನೀಡುವ ವ್ಯವಸ್ಥೆ ಬದಲಾಗಿ ಗ್ರೇಡ್ ವ್ಯವಸ್ಥೆ ವಿವಿಗಳಲ್ಲಿ‌ ಜಾರಿ ಮಾಡಬೇಕು‌ ಅಂತ ಒತ್ತಾಯಿಸಿದರು.

    ಇದಕ್ಕೆ ಸಚಿವ ಸುಧಾಕರ್ ಉತ್ತರ ನೀಡಿ,‌ ರಾಜ್ಯದಲ್ಲಿ 30 ಖಾಸಗಿ ವಿವಿಗಳು ಇವೆ. ಖಾಸಗಿ ವಿವಿಗಳಲ್ಲಿ ಗ್ರೇಡಿಂಗ್ ಸಿಸ್ಟಮ್, ಅಂಕ ವ್ಯವಸ್ಥೆ ಬೇರೆ ಬೇರೆ ಇದೆ. ನಮ್ಮ ಸರ್ಕಾರ ವಿವಿಗಳ ವ್ಯವಸ್ಥೆ ಬೇರೆ ‌ಇದೆ. ಇದರಿಂದ ಸಮಸ್ಯೆ ಆಗ್ತಿದೆ. ಇತ್ತೀಚೆಗೆ ಒಬ್ಬ ವಿದ್ಯಾರ್ಥಿ ಸಹ ಅಂಕ ಕಡಿಮೆ ಬಂತು ಅಂತ ಆತ್ಮಹತ್ಯೆ ಮಾಡಿಕೊಂಡ. ಇದರಿಂದಾಗಿ‌ ಅಂಕ ಮಾದರಿ ಅಧ್ಯಯನಕ್ಕೆ ಒಂದು ಸಮಿತಿ ಮಾಡಿದ್ವಿ. ಸಮಿತಿ ಎಲ್ಲಾ ವಿವಿಗಳಲ್ಲಿ ಅಂಕ ಮಾದರಿ, ಗ್ರೇಡ್ ಮಾದರಿ ಏಕರೂಪವಾಗಿ ಮಾಡಬೇಕು ಅಂತ ವರದಿ ಕೊಟ್ಟಿದೆ. ಕರ್ನಾಟಕ ಉನ್ನತ ಶಿಕ್ಷಣ ಪರಿಷತ್‌ನಲ್ಲಿ ಇದನ್ನು ಇಟ್ಟು ನಿರ್ಧಾರ ಮಾಡ್ತೀವಿ. ಖಾಸಗಿ, ಸರ್ಕಾರ ವಿವಿಗಳಿಗೆ ಏಕರೂಪದ ಅಂಕ, ಗ್ರೇಡ್ ವ್ಯವಸ್ಥೆ ಜಾರಿ ಮಾಡ್ತೀವಿ ಎಂದರು. ಇದನ್ನೂ ಓದಿ: ಧೈರ್ಯವಾಗಿ ಪ್ರಶ್ನಿಸಿ ಅಂದಿದ್ದು ತಪ್ಪಿಲ್ಲ- ಕುವೆಂಪು ಬರಹ ಬದಲಿಕೆಗೆ ಪ್ರಿಯಾಂಕ್ ಖರ್ಗೆ ಸಮರ್ಥನೆ

    ಡಾಕ್ಟರೇಟ್ ಪದವಿಗಳ ಬಗ್ಗೆ ಸ್ವಲ್ಪ ಗೊಂದಲ‌ ಇದೆ. ಸುಪ್ರೀಂ ಕೋರ್ಟ್ ಆದೇಶದ ಮೇಲೆ ನಾವು ಇದನ್ನ ಜಾರಿ ಮಾಡ್ತೀವಿ. ಖಾಸಗಿ ವಿವಿಗಳು ಡಾಕ್ಟರೇಟ್ ಕೊಡುವ ವ್ಯವಸ್ಥೆ ಮಾಡುತ್ತಿವೆ. ಹೀಗಾಗಿ ಎಲ್ಲಾ ವಿವಿಗಳಲ್ಲಿ ಏಕರೂಪದ ಡಾಕ್ಟರೇಟ್ ವ್ಯವಸ್ಥೆ ತರುವ ನಿಟ್ಟಿನಲ್ಲಿ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ತೀವಿ ಅಂತ ತಿಳಿಸಿದರು. ಇದನ್ನೂ ಓದಿ: ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ: ಸರ್ಕಾರದ ಮುಟ್ಟಾಳತನ: ಜೋಶಿ ಆಕ್ರೋಶ

    ಪದವಿ ವಿದ್ಯಾರ್ಥಿಗಳು ಪದವಿ ಪಡೆದ ಮೇಲೆ ರಿಜಿಸ್ಟರ್ ಮಾಡುವ ವ್ಯವಸ್ಥೆ ನಮ್ಮಲ್ಲಿ ಇಲ್ಲ. ಎಂಜಿನಿಯರಿಂಗ್ ಸೇರಿ ಹಲವು ಪದವಿಗಳ ರಿಜಿಸ್ಟರ್ ಮಾಡೋ ವ್ಯವಸ್ಥೆ ಇದೆ. ಈ ವಿಚಾರವಾಗಿ ಏಕರೂಪದ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ತೀವಿ ಅಂತ ಭರವಸೆ ನೀಡಿದರು. ಇದನ್ನೂ ಓದಿ: ವಿಧಾನಸೌಧದಲ್ಲೇ ಶಾಸಕರಿಗೆ ಮಧ್ಯಾಹ್ನದ ಬಿಸಿಯೂಟ- ಖಾದರ್ ಘೋಷಣೆ

  • 9 ಹೊಸ ವಿಶ್ವವಿದ್ಯಾಲಯ ಉದ್ಘಾಟಿಸಿದ ಸಿಎಂ

    9 ಹೊಸ ವಿಶ್ವವಿದ್ಯಾಲಯ ಉದ್ಘಾಟಿಸಿದ ಸಿಎಂ

    – ವಿಶ್ವವಿದ್ಯಾಲಯಗಳು ಮುಂದಿನ ಭವಿಷ್ಯ ಬರೆಯುವ ಕೇಂದ್ರಗಳು: ಬೊಮ್ಮಾಯಿ

    ಬೆಂಗಳೂರು: ಮಂಗಳವಾರ ಆರಂಭಿಸಿರುವ ಎಲ್ಲ ವಿಶ್ವವಿದ್ಯಾಲಯಗಳು (University) ಮುಂದಿನ ಭವಿಷ್ಯ ಬರೆಯುವ ಕೇಂದ್ರಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

    ಜ್ಞಾನಜ್ಯೋತಿ ಸಭಾಂಗಣದಲ್ಲಿ ಒಂಭತ್ತು ನೂತನ ವಿಶ್ವವಿದ್ಯಾಲಯಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿದೆ. ಶಿಕ್ಷಣ ಬೆಳವಣಿಗೆ ಆಗಬೇಕು. ಈ ರೀತಿಯ ವಿಶ್ವವಿದ್ಯಾಲಯಗಳು ದೇಶದಲ್ಲಿಯೇ ಪ್ರಥಮವಾಗಿ ಪ್ರಾರಂಭವಾಗಿವೆ. ಮುಂದಿನ ದಿನಗಳಲ್ಲಿ ಎಲ್ಲರೂ ಕರ್ನಾಟಕದ ಮಾದರಿ ಅಳವಡಿಸಿಕೊಳ್ಳುವಂತಾಗಬೇಕು ಎಂದರು.

    ದೇಶದಲ್ಲಿ ಉನ್ನತ ಶಿಕ್ಷಣ ಅಂದರೆ ಐಐಟಿ. ಅದಕ್ಕೆ ಸಿಇಟಿ ಮೂಲಕ ಆಯ್ಕೆ ಆಗಬೇಕು. ನಮ್ಮ ಮಕ್ಕಳೂ ಐಐಟಿ ಮಾದರಿಯಲ್ಲಿ ಶಿಕ್ಷಣ ಪಡೆಯಬೇಕು ಎಂದು ಕೆಐಟಿ ಸ್ಥಾಪನೆ ಮಾಡಲಾಗಿದೆ. ಮುಂದಿನ 5 ವರ್ಷಗಳಲ್ಲಿ ಎಲ್ಲಾ ಸಂಸ್ಥೆಗಳು ಐಐಟಿ ಮಾದರಿಯಲ್ಲಿ ಇರಲಿವೆ. ಐಐಟಿ ಹುಡುಕಿಕೊಂಡು ಹೋಗುವ ಬದಲು ಇಲ್ಲಿಯೇ ಐಐಟಿ ಸೃಷ್ಟಿಸುತ್ತಿದ್ದೇವೆ. ಜಗತ್ತಿನ ಉನ್ನತ ವಿವಿಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

    ವಿದ್ಯಾರ್ಥಿಗಳು ನಾಡಿನ ಭವಿಷ್ಯ. ಈಗ 21ನೇ ಶತಮಾನ ಜ್ಞಾನದ ಶತಮಾನ. ಮುಂದಿನ ದಿನಗಳಲ್ಲಿ ಭಾರತ ವಿಶ್ವ ಗುರುವಾಗಲಿದೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ನಾಯಕರಾಗಿ ಹೊರ ಹೊಮ್ಮಿದ್ದಾರೆ. ಪಾಕಿಸ್ತಾನದ ಪ್ರಜೆಗಳು ಮೋದಿಯಂಥ ಪ್ರಧಾನಿ ಬೇಕು ಅಂತ ಹೇಳುತ್ತಿದ್ದಾರೆ. ಚೀನಾ ಕೂಡ ಭಾರತ ಕೊರೊನಾ ನಿಯಂತ್ರಣ ಮಾಡಿದ್ದನ್ನು ಮೆಚ್ಚಿಕೊಂಡಿದೆ ಎಂದರು. ಶಿಕ್ಷಣ ಸಂಸ್ಥೆ ಅಂದರೆ ಪಾವಿತ್ರ್ಯತೆ. ಸಂಸ್ಥೆಗಳು ಸರಸ್ವತಿಯ ವಾಹನ ಪರಮಹಂಸ ಕೂಡ ಪವಿತ್ರವಾಗಿದ್ದು, ವಿದ್ಯಾರ್ಥಿಗಳು ಅಷ್ಟೇ ಎತ್ತರಕ್ಕೆ ಬೆಳೆಯಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಆಕ್ರಮಣ ಮತ್ತಷ್ಟು ಕಠಿಣವಾಗಲಿದೆ, ಎದುರಿಸಲು ನಾವು ಸಿದ್ಧವಿರಬೇಕು: ಸಂಸದರಿಗೆ ಮೋದಿ ಕರೆ

    9 ನೂತನ ವಿವಿಗಳು: ಚಾಮರಾಜನಗರ ವಿವಿ, ಹಾಸನ ವಿವಿ, ಮಂಡ್ಯ ವಿವಿ, ಬೀದರ್ ವಿವಿ, ಕೊಡಗು ವಿವಿ, ಕೊಪ್ಪಳ ವಿವಿ, ಬಾಗಲಕೋಟೆ ವಿವಿ, ಹಾವೇರಿ ವಿವಿ, ರಾಯಚೂರು ವಿವಿಗಳಾಗಿವೆ.

    ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್, ಸಚಿವ ಮುರುಗೇಶ್ ನಿರಾಣಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಉಪಸ್ಥಿತರಿದ್ದರು. ಇದನ್ನೂ ಓದಿ: ಬಂಜಾರಾ, ಕೊರಚ, ಕೊರಮ, ಬೋವಿ ಶಾಶ್ವತವಾಗಿ ಎಸ್‌ಸಿ ಪಟ್ಟಿಯಲ್ಲಿರುತ್ತದೆ- ಪಿ.ರಾಜೀವ್

  • ವಿವಿಗಳಲ್ಲಿ ಇ-ಆಫೀಸ್ ಕಡ್ಡಾಯ, ಮಾರ್ಚ್ 1ರವರೆಗೆ ಡೆಡ್‍ಲೈನ್: ಅಶ್ವತ್ಥ ನಾರಾಯಣ

    ವಿವಿಗಳಲ್ಲಿ ಇ-ಆಫೀಸ್ ಕಡ್ಡಾಯ, ಮಾರ್ಚ್ 1ರವರೆಗೆ ಡೆಡ್‍ಲೈನ್: ಅಶ್ವತ್ಥ ನಾರಾಯಣ

    ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ವಿಶ್ವವಿದ್ಯಾಲಯಗಳು ಮಾರ್ಚ್ 1ರಿಂದ ತನ್ನ ಎಲ್ಲ ಕಡತಗಳನ್ನು ಇ-ಕಚೇರಿ ಮೂಲಕವೇ ಅನ್‍ಲೈನ್‍ನಲ್ಲಿ ಕಳುಹಿಸುವುದನ್ನು ಕಡ್ಡಾಯ ಮಾಡಲಾಗಿದೆ. ಈ ಗಡುವಿನ ನಂತರ ಭೌತಿಕವಾಗಿ ಬರುವ ಎಲ್ಲ ಕಡತಗಳನ್ನು ವಾಪಸ್ ಕಳುಹಿಸುವಂತೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಅವರು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಈ ಬಗ್ಗೆ ತಮ್ಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ಇ-ಆಫೀಸ್ ತಂತ್ರಾಂಶದ ಮೂಲಕವೇ ಕಡತಗಳನ್ನು ಕಳುಹಿಸಲು ವಿ.ವಿ.ಗಳಿಗೆ ಈ ಹಿಂದೆಯೇ ಸೂಚಿಸಲಾಗಿತ್ತು. ಆದರೂ ಕೆಲ ವಿ.ವಿ.ಗಳಲ್ಲಿ ಈ ಕೆಲಸ ಆಗಿಲ್ಲದಿರುವುದು ತಮ್ಮ ಗಮನಕ್ಕೆ ಬಂದಿದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ:  ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್‌ಗೆ ಉಕ್ರೇನ್ ಕರೆ!

    ತಮ್ಮ ಕಚೇರಿಯು ಈಗಾಗಲೇ ಸಂಪೂರ್ಣವಾಗಿ ಇ-ಆಫೀಸ್ ತಂತ್ರಾಂಶದ ಮೇಲೆಯೇ ಕೆಲಸ ಮಾಡುತ್ತಿದೆ. ಆದರೆ ಇಲಾಖೆಗೆ ವಿ.ವಿ.ಗಳಿಂದ ಎಲ್ಲ ಪತ್ರಗಳು, ಕಡತಗಳು ಮತ್ತು ಪ್ರಸ್ತಾವನೆಗಳು ಭೌತಿಕ ರೂಪದಲ್ಲಿ ಬರುತ್ತಿವೆ. ಇದರಿಂದಾಗಿ ಇ-ಆಫೀಸ್ ತಂತ್ರಾಂಶ ಅಳವಡಿಕೆಯ ಮೂಲ ಉದ್ದೇಶವೇ ವಿಫಲವಾದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:  ಉಕ್ರೇನ್‍ನಲ್ಲಿ ಸಿಲುಕಿದ್ದಾರೆ 10 ಮಂದಿ ಕರ್ನಾಟಕ ವಿದ್ಯಾರ್ಥಿಗಳು!

    ವಿ.ವಿ.ಗಳ ಆಡಳಿತವೂ ಸೇರಿದಂತೆ ಪ್ರತಿಯೊಂದು ಕೆಲಸವೂ ತ್ವರಿತವಾಗಿ ಮತ್ತು ಪಾರದರ್ಶಕವಾಗಿ ನಡೆಯುವಂತೆ ಮಾಡಬೇಕೆನ್ನುವುದು ಇ-ಆಫೀಸ್ ತಂತ್ರಾಂಶದ ಗುರಿಯಾಗಿದೆ. ವಿ.ವಿ.ಗಳು ಸಮಕಾಲೀನ ಶೈಲಿಯನ್ನು ಅಳವಡಿಸಿಕೊಳ್ಳದಿದ್ದರೆ ಅಪ್ರಸ್ತುತವಾಗಲಿವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

    ಎನ್‍ಇಪಿ ಅನುಸಾರ ವಿ.ವಿ.ಗಳಲ್ಲಿ ನಡೆಯುತ್ತಿರುವ ಡಿಜಿಟಲೀಕರಣ, ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಅಳವಡಿಕೆ, ರಾಷ್ಟ್ರೀಯ ಶೈಕ್ಷಣಿಕ ಕೋಶ (ಎನ್‍ಎಡಿ), ಇ-ಆಫೀಸ್ ಬಳಕೆಗೆ ವಿ.ವಿ.ಗಳಲ್ಲಿನ ಸಿಬ್ಬಂದಿಯನ್ನು ಹೇಗೆ ಸಿದ್ಧಗೊಳಿಸಲಾಗಿದೆ ಎನ್ನುವುದನ್ನು ಪರಿಶೀಲಿಸಲು ಒಂದು ಸಮಿತಿಯನ್ನು ರಚಿಸಿ, 15 ದಿನಗಳಲ್ಲಿ ತಮಗೆ ವರದಿ ನೀಡುವಂತೆಯೂ ಸೂಚಿಸಿದ್ದಾರೆ.