Tag: ವಿಶ್ವವಿದ್ಯಾಲಯ

  • ಚಿತ್ರನಟ ದ್ವಾರಕೀಶ್ ಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರದಾನ

    ಚಿತ್ರನಟ ದ್ವಾರಕೀಶ್ ಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರದಾನ

    ರ್ನಾಟಕ ಕುಳ್ಳ ಖ್ಯಾತಿಯ ನಟ ದ್ವಾರಕೀಶ್ ಅವರಿಗೆ ಬೆಂಗಳೂರು ವಿಶ್ವ ವಿದ್ಯಾಲಯವು ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಇಂದು ನಡೆದ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. 57ನೇ ಘಟಿಕೋತ್ಸವ ಅದ್ದೂರಿಯಾಗಿ ನಡೆದಿದ್ದು, ಜ್ಞಾನಜ್ಯೋತಿ ಆಡಿಟೋರಿಯಂ ನಲ್ಲಿ ನಡೆದ ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಘಟಿಕೋತ್ಸವಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ವಿಶ್ವವಿದ್ಯಾಲಯದ ಅನುದಾನ ಆಯೋಗದ ಅಧ್ಯಕ್ಷ ಪ್ರೊ.ಎಂ.ಜಗದೀಶ್, ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಭಾಗವಹಿಸಿದ್ರು.

    ಘಟಿಕೋತ್ಸವದಲ್ಲಿ ಚಿತ್ರ ನಟ ದ್ವಾರಕೀಶ್, ಖ್ಯಾತ ಕಲಾವಿದ ಅಮರನಾಥ್ ಗೌಡ, ಸಮಾಜ ಸೇವಕ ಡಾ.ಟಿ. ಅನಿಲ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. 34337 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. 300 ಚಿನ್ನದ ಪದಕ, 73 ನಗದು ಬಹುಮಾನ, 267 ಅಭ್ಯರ್ಥಿಗಳಿಗೆ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಇದನ್ನೂ ಓದಿ: ಪ್ರೀ ವೆಡ್ಡಿಂಗ್ ಪಾರ್ಟಿಯಲ್ಲಿ ಮಿಂಚಿದ `ಬಿಂದಾಸ್’ ನಟಿ ಹನ್ಸಿಕಾ ಮೋಟ್ವಾನಿ

    ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಕೀರ್ತಿ ನೇಗಿನ್ಹಾಲ್ 7 ಚಿನ್ನದ ಪದಕ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿಜಯನಗರ. ಅರ್ಚನ 7 ಚಿನ್ನದ ಪದಕ, ರಸಾಯನಶಾಸ್ತ್ರ, ಬೆಂಗಳೂರು ವಿವಿ. ಮಯೂರ 6 ಚಿನ್ನದ ಪದಕ, ಸಂಸ್ಕೃತ ವಿಭಾಗ ಬೆಂಗಳೂರು ವಿಶ್ವವಿದ್ಯಾಲಯದಿಂದ ಅತಿ ಹೆಚ್ಚು ಚಿನ್ನದ ಪದಕ ಪಡೆದರು. ಸ್ನಾತಕ ಪದವಿ ವಿಭಾಗದಲ್ಲಿ, ರಾಮ್ ಕುಮಾರ್ ಬಿಎಸ್ಸಿ, 6 ಚಿನ್ನದ ಪದಕ, ಸೌಂದರ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ & ಸೈನ್ಸ್, ಸ್ಪೂರ್ತಿ 6 ಚಿನ್ನದ ಪದಕ, ಬಿಕಾಂ, ಜ್ಞಾನವಿಕಾಸ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ & ಕಾಮರ್ಸ್, ಧನುಷ 5 ಚಿನ್ನದ ಪದಕ, ಬಿಬಿಎ, ಸುರಾನ ಕಾಲೇಜು ಅತಿ ಹೆಚ್ಚು ಪದಕ ಬೇಟೆ ಆಡಿದರು.

    Live Tv
    [brid partner=56869869 player=32851 video=960834 autoplay=true]

  • ಪದವಿ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಧ್ಯಾನ – ಯುಜಿಸಿಯಿಂದ ಪತ್ರ

    ಪದವಿ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಧ್ಯಾನ – ಯುಜಿಸಿಯಿಂದ ಪತ್ರ

    ಬೆಂಗಳೂರು: ಕರ್ನಾಟಕ ಸರ್ಕಾರ ಶಾಲಾ-ಕಾಲೇಜುಗಳಲ್ಲಿ ಧ್ಯಾನ (Meditation) ಮಾಡಿಸುವ ಮಹತ್ವದ ನಿರ್ಧಾರ ತೆಗೆದುಕೊಂಡು ಬೆನ್ನಲ್ಲೇ ದೇಶದಾದ್ಯಂತ ಧ್ಯಾನ ಮಾಡಿಸುವ ಮಹತ್ವದ ನಿರ್ಧಾರಕ್ಕೆ ಕೇಂದ್ರ ಸರ್ಕಾರ (Central Government) ಬಂದಿದೆ.

    ಇನ್ಮುಂದೆ ದೇಶದ ವಿಶ್ವವಿದ್ಯಾಲಯಗಳು, ಪದವಿ ಕಾಲೇಜುಗಳಲ್ಲಿ ಧ್ಯಾನ ಮಾಡಿಸುವಂತೆ ಯುಜಿಸಿ ಎಲ್ಲಾ ವಿಶ್ವವಿದ್ಯಾಲಯಗಳು, ಪದವಿ ಕಾಲೇಜುಗಳು, ವಿದ್ಯಾಸಂಸ್ಥೆಗಳಿಗೆ ಸೂಚನೆ ನೀಡಿದೆ. ಇದನ್ನೂ ಓದಿ: ಕದ್ರಿ ದೇಗುಲಕ್ಕೆ IRCಯಿಂದ ಬೆದರಿಕೆ ಪತ್ರ – ದೇಗುಲದ ಮಂಡಳಿಯಿಂದ ದೂರು

    ಯುಜಿಸಿ ಕಾರ್ಯದರ್ಶಿ ಪ್ರೊ. ರಜನೀಶ್ ಜೈನ್‌ರಿಂದ ವಿಶ್ವವಿದ್ಯಾಲಯಗಳು, ಎಲ್ಲಾ ವಿದ್ಯಾಸಂಸ್ಥೆಗಳಿಗೆ ಪತ್ರ ಬರೆಯಲಾಗಿದೆ. 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ನೆನಪಿನಲ್ಲಿ ಈ ಮಹತ್ವದ ನಿರ್ಧಾರವನ್ನ ಕೇಂದ್ರ ಸರ್ಕಾರ ಮಾಡಿದೆ.

    ಧ್ಯಾನ ಮಾಡಿಸುವ ನಿಟ್ಟಿನಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಜೊತೆ ಕೇಂದ್ರ ಸಂಸ್ಕೃತಿ‌ ಇಲಾಖೆ ಒಪ್ಪಂದ ಮಾಡಿಕೊಂಡಿದೆ. ಬೆಂಗಳೂರಿನ ಅರ್ಟ್ ಆಫ್ ಲಿವಿಂಗ್ ಸಹಯೋಗದಲ್ಲಿ ವಿಶ್ವವಿದ್ಯಾಲಯಗಳು, ಪದವಿ ಕಾಲೇಜುಗಳಲ್ಲಿ ಹರ್ ಘರ್ ಧ್ಯಾನ್ ಅಭಿಯಾನ ನಡೆಸಲು ನಿರ್ಧಾರ ಮಾಡಲಾಗಿದೆ. ಇದನ್ನೂ ಓದಿ: ಹಾಸನ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಎ.ಎಚ್ ಲಕ್ಷ್ಮಣ್ ನೇಮಕ

    ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಅಭಿವೃದ್ಧಿಪಡಿಸಿರೋ ಧ್ಯಾನದ ಮಾದರಿಗಳನ್ನು ಅಳವಡಿಸಿಕೊಳ್ಳಲು‌ ಯುಜಿಸಿ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ. ಈ ಅಭಿಯಾನಕ್ಕೆ ಯಾವುದೇ ವಿಶ್ವವಿದ್ಯಾಲಯಗಳು, ಕಾಲೇಜುಗಳು ಶುಲ್ಕ ಭರಿಸುವಂತೆ ಇಲ್ಲ. ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಜೊತೆ ವಿಶ್ವವಿದ್ಯಾಲಯಗಳು, ಕಾಲೇಜುಗಳು ಸಂಪರ್ಕ ಇಟ್ಟುಕೊಂಡು ಅಭಿಯಾನ ನಡೆಸುವಂತೆ ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪರೀಕ್ಷಾ ನಿಯಮ ಪಾಲಿಸದ 2 ಪರೀಕ್ಷಾ ಕೇಂದ್ರ ರದ್ದು

    ಪರೀಕ್ಷಾ ನಿಯಮ ಪಾಲಿಸದ 2 ಪರೀಕ್ಷಾ ಕೇಂದ್ರ ರದ್ದು

    ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯದ (University) ಪದವಿ ಪರೀಕ್ಷೆಗಳು (Exam) ನಡೆಯುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ವಿ.ವಿ. ಕುಲಪತಿ ಪ್ರೊ. ದಯಾನಂದ್‌ ಅಗಸರ್ ಅವರು ಬೀದರ್‌ ನಗರದ ಪರೀಕ್ಷಾ ಕೇಂದ್ರಗಳಿಗೆ (Exam Center) ದಿಢೀರ್‌ ಭೇಟಿ ‌ನೀಡಿದ ಸಂದರ್ಭದಲ್ಲಿ ವಿ.ವಿ.ಯ ಪರೀಕ್ಷಾ ನಿಯಮ ಪಾಲಿಸದ 2 ಪರೀಕ್ಷಾ ಕೇಂದ್ರಗಳನ್ನು ರದ್ದುಗೊಳಿಸಿದ್ದಾರೆ.

    ಬೀದರಿನ‌ ಸನ್ ಶೈನ್ ಪದವಿ‌ ಮಹಾವಿದ್ಯಾಲಯಕ್ಕೆ‌ ಭೇಟಿ ನೀಡಿದಾಗ ಪರೀಕ್ಷಾ ಸಂದರ್ಭದಲ್ಲಿ ಸಿಸಿ ಟಿವಿ (CC TV) ಆಫ್ ಮಾಡಿರುವುದು ಮತ್ತು ಶಿಕ್ಷಕೇತರ ಸಿಬ್ಬಂದಿಯನ್ನು ಕೊಠಡಿ‌ ಮೇಲ್ವಿಚಾರಕರನ್ನಾಗಿ ನೇಮಿಸಿರುವುದನ್ನು‌ ಗಮನಿಸಲಾಗಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ವಿ.ವಿ. ನಿಯಮಾನುಸಾರ ಪರೀಕ್ಷೆ ಜರುಗಿಸದ ಕಾರಣ ಕಾಲೇಜಿನ ಪರೀಕ್ಷಾ ಕೇಂದ್ರವನ್ನು ತಕ್ಷಣದಿಂದ ರದ್ದುಪಡಿಸಿ, ವಿದ್ಯಾರ್ಥಿಗಳ (Student) ಹಿತದೃಷ್ಟಿಯಿಂದ ಮುಂದಿನ ಎಲ್ಲಾ ಪರೀಕ್ಷೆಗಳನ್ನು ಸಮೀಪದ ಕರ್ನಾಟಕ ಪದವಿ ಮಹಾವಿದ್ಯಾಲಯಕ್ಕೆ ವರ್ಗಾಯಿಸಲಾಗಿದೆ. ಇದನ್ನೂ ಓದಿ: ಸ್ಟೋನ್ ತೆಗೆಯುವ ನೆಪದಲ್ಲಿ ರೋಗಿಯ ಕಿಡ್ನಿಯನ್ನೇ ಎಗರಿಸಿದ್ರು

    ಅದೇ ರೀತಿ ಬೀದರ್‌ ನಗರದ ರಾಯಲ್ ಪದವಿ ಮಹಾವಿದ್ಯಾಲಯದ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಅನುಕ್ರಮವಾಗಿ ಆಸನಗಳನ್ನು ಜೋಡಿಸಿ ಕೂಡಿಸದೇ, ಗುಂಪು-ಗುಂಪಾಗಿ ಪರೀಕ್ಷೆಗಳು ನಡೆಸುತ್ತಿರುವುದು, ಒಬ್ಬ ವಿದ್ಯಾರ್ಥಿಗೆ ಪ್ರತ್ಯೇಕ ಕೋಣೆಯಲ್ಲಿ ಕೂಡಿಸಿ ಪರೀಕ್ಷೆ ಬರೆಸುತ್ತಿರುವುದು, ಸಿ.ಸಿ.ಟಿ.ವಿ ಕ್ಯಾಮೆರಾ ಆಫ್ ಮಾಡಿರುವುದರಿಂದ ಈ ಪರೀಕ್ಷಾ ಕೇಂದ್ರವನ್ನೂ ಸಹ ರದ್ದುಪಡಿಸಿ ಮುಂದಿನ ಪರೀಕ್ಷೆಗಳನ್ನು ಸಮೀಪದ ಬಿ.ವ್ಹಿ.ಬಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಬರೆಯಲು ಆದೇಶಿಸಲಾಗಿದೆ‌ ಎಂದು ವಿ.ವಿ. ಕುಲಸಚಿವ (ಮೌಲ್ಯಮಾಪನ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಗಂಡಸರ ಸುದ್ದಿ ನನಗೆ ಬೇಡಪ್ಪ – ಅಶ್ವಥ್ ನಾರಾಯಣಗೆ ಡಿಕೆಶಿ ತಿರುಗೇಟು

    Live Tv
    [brid partner=56869869 player=32851 video=960834 autoplay=true]

  • ಬುರ್ಖಾ ಹಾಕಿಲ್ಲ ಅಂತ ಅಫ್ಘನ್ ವಿವಿ ಹೊರಗಡೆ ವಿದ್ಯಾರ್ಥಿನಿಯರ ಮೇಲೆ ತಾಲಿಬಾನ್ ದಾಳಿ

    ಬುರ್ಖಾ ಹಾಕಿಲ್ಲ ಅಂತ ಅಫ್ಘನ್ ವಿವಿ ಹೊರಗಡೆ ವಿದ್ಯಾರ್ಥಿನಿಯರ ಮೇಲೆ ತಾಲಿಬಾನ್ ದಾಳಿ

    ಕಾಬೂಲ್: ವಿದ್ಯಾರ್ಥಿನಿಯರು (Students) ಬುರ್ಖಾ (Burkha) ಧರಿಸಿಲ್ಲ ಅಂತ ಅಫ್ಘಾನಿಸ್ತಾನದ (Afghanistan) ವಿಶ್ವವಿದ್ಯಾಲಯಕ್ಕೆ (University) ಪ್ರವೇಶ ನೀಡದ ತಾಲಿಬಾನ್ (Taliban) ವಿರುದ್ಧ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಈ ವೇಳೆ ತಾಲಿಬಾನ್ ಅಧಿಕಾರಿಯೊಬ್ಬರು ವಿದ್ಯಾರ್ಥಿನಿಯರಿಗೆ ಥಳಿಸಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.

    ವರದಿಗಳ ಪ್ರಕಾರ ಈ ಘಟನೆ ಈಶಾನ್ಯ ಅಫ್ಘಾನಿಸ್ತಾನದ ಬಡಾಕ್ಷನ್ ವಿಶ್ವವಿದ್ಯಾಲಯದ ಗೇಟ್ ಹೊರಗಡೆ ಭಾನುವಾರ ನಡೆದಿದೆ. ವೈರಲ್ ಆಗಿರುವ ವೀಡಿಯೋದಲ್ಲಿ ಹಲವು ವಿದ್ಯಾರ್ಥಿನಿಯರು ವಿವಿ ಪ್ರವೇಶಕ್ಕಾಗಿ ಗೇಟ್ ಹೊರಗಡೆ ಕಾದು ನಿಂತಿದ್ದಾರೆ. ಈ ವೇಳೆ ತಾಲಿಬಾನ್‌ನ ಸರ್ಕಾರಿ ಅಧಿಕಾರಿಯೊಬ್ಬರು ವಿದ್ಯಾರ್ಥಿಗಳನ್ನು ಸ್ಥಳದಿಂದ ಚದುರಿಸಲು ಚಾಟಿ ಬೀಸಿರುವುದು ಕಂಡುಬಂದಿದೆ. ಇದನ್ನೂ ಓದಿ: ಚಿತ್ರದುರ್ಗ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿಗೆ ಹನಿಟ್ರ್ಯಾಪ್ ಯತ್ನ!

    ಕಳೆದ ವರ್ಷ ಆಗಸ್ಟ್‌ನಲ್ಲಿ ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಅಧಿಕಾರ ವಹಿಸಿಕೊಂಡ ಬಳಿಕ ಅಲ್ಲಿನ ಮಹಿಳೆಯರ ಚಲನೆ, ವಾಕ್, ಅಭಿವ್ಯಕ್ತಿ, ಕೆಲಸದ ಅವಕಾಶಗಳು ಹಾಗೂ ಉಡುಪಿನ ಸ್ವಾತಂತ್ರ‍್ಯದ ಮೇಲೆ ತೀವ್ರ ನಿರ್ಬಂಧಗಳನ್ನು ಹಾಕಿದೆ. 6ನೇ ತರಗತಿಯಿಂದ ಹುಡುಗಿಯರು ಶಾಲೆಗೆ ಹೋಗುವುದನ್ನು ತಡೆಹಿಡಿಯಲಾಗಿದೆ. ಇದನ್ನೂ ಓದಿ: ವೈಫೈ ಪಾಸ್‍ವರ್ಡ್ ಹಂಚಿಕೊಳ್ಳದ್ದಕ್ಕೆ ನಡೆಯಿತು ಯುವಕನ ಭೀಕರ ಕೊಲೆ

    ತಾಲಿಬಾನ್ ಮಹಿಳೆಯರಿಗೆ ಸಾರ್ವಜನಿಕವಾಗಿ ಸರಿಯಾದ ಉಡುಪುಗಳನ್ನು ಧರಿಸಲು ಸೂಚಿಸಿದೆ. ನಿಖಾಬ್ (ಕಣ್ಣು ಹೊರತುಪಡಿಸಿ, ತಲೆ ಮತ್ತು ಮುಖವನ್ನು ಮುಚ್ಚುವ ಮುಸುಕು) ಅಥವಾ ಬುರ್ಖಾವನ್ನು ಮಹಿಳೆಯರು ಸಾರ್ವಜನಿಕ ಪ್ರದೇಶಗಳಲ್ಲಿ ಕಡ್ಡಾಯವಾಗಿ ಧರಿಸಬೇಕಿದೆ. ಆದರೆ ಈ ಆದೇಶದ ವಿರುದ್ಧ ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿರುವುದಾಗಿ ವರದಿಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಬಿಎಂಟಿಸಿ ಬಸ್ ಹರಿದು ಗಂಭೀರವಾಗಿ ಗಾಯಗೊಂಡಿದ್ದ ಬೆಂಗಳೂರು ವಿವಿ ವಿದ್ಯಾರ್ಥಿನಿ ಸಾವು

    ಬಿಎಂಟಿಸಿ ಬಸ್ ಹರಿದು ಗಂಭೀರವಾಗಿ ಗಾಯಗೊಂಡಿದ್ದ ಬೆಂಗಳೂರು ವಿವಿ ವಿದ್ಯಾರ್ಥಿನಿ ಸಾವು

    ಬೆಂಗಳೂರು: ಬಿಎಂಟಿಸಿ ಬಸ್ (BMTC Bus) ಹರಿದು ಗಂಭೀರವಾಗಿ ಗಾಯಗೊಂಡಿದ್ದ ಬೆಂಗಳೂರು (Bengaluru) ವಿವಿ ವಿದ್ಯಾರ್ಥಿನಿ (Student) ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ.

    ಶಿಲ್ಪಾ(22) ಮೃತ ವಿದ್ಯಾರ್ಥಿನಿ. ಕೋಲಾರ (Kolar) ಮೂಲದ ವಿದ್ಯಾರ್ಥಿನಿ ಶಿಲ್ಪಾ ಮೊದಲ ವರ್ಷದ ಉನ್ನತ ವ್ಯಾಸಾಂಗ ಮಾಡುತ್ತಿದ್ದಳು. ಬೆಂಗಳೂರಿನ ಜ್ಞಾನಭಾರತಿ ಯುನಿವರ್ಸಿಟಿ ಬಳಿ ಅಕ್ಟೋಬರ್ 10ರಂದು ಬಸ್ ಹತ್ತುವಾಗ ವಿದ್ಯಾರ್ಥಿನಿ ಶಿಲ್ಪಾ ಕೆಳಗೆ ಬಿದ್ದಿದ್ದಳು. ಈ ವೇಳೆ ಆಕೆಯ ಮೇಲೆ ಬಸ್ ಹತ್ತಿತ್ತು. ಇದರಿಂದಾಗಿ ತೀವ್ರವಾಗಿ ಗಾಯಗೊಂಡಿದ್ದ ಶಿಲ್ಪಾಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಬನ್ನೇರು ಘಟ್ಟದ ಪೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಇಂದು ಬೆಳಗಿನ ಜಾವ 4 ಘಂಟೆ ಸುಮಾರಿಗೆ ಚಿಕಿತ್ಸೆ ಫಲಕರಿಸದೇ ಶಿಲ್ಪಾಶ್ರೀ ಮೃತಪಟ್ಟಿದ್ದಾಳೆ. ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕೋಲಾರದ ಬಂಗಾರಪೇಟೆಗೆ ರವಾನೆ ಮಾಡಲಾಗಿದೆ. ಅಲ್ಲೇ ಅಂತ್ಯ ಸಂಸ್ಕಾರ ನಡೆಯಲಿದೆ. ಇದನ್ನೂ ಓದಿ: ಬೃಂದಾವನಕ್ಕೆ ಪ್ರವಾಸಿಗರ ನಿರ್ಬಂಧ – ಬೋನ್‍ನಲ್ಲಿ ನಾಯಿಯನ್ನು ಕಟ್ಟಿ ಹಾಕಿ ಕಾವಲು

    ವಿದ್ಯಾರ್ಥಿನಿ ಅಪಘಾತದ ಬಳಿಕ ಜ್ಞಾನಭಾರತಿ ಕ್ಯಾಂಪಸ್‍ನಲ್ಲಿ ವಿವಿ ವಿದ್ಯಾರ್ಥಿಗಳು ದೊಡ್ಡ ಮಟ್ಟದ ಪ್ರತಿಭಟನೆ ಮಾಡಿದ್ದರು. ಯೂನಿವರ್ಸಿಟಿಯ ಎಲ್ಲಾ ಗೇಟ್ ಗಳನ್ನು ಬೀಗ ಹಾಕಿ ಧರಣಿ ನಡೆಸಿದ್ದರು. ಶಿಲ್ಪಾ ನಿಧನದ ಹಿನ್ನೆಲೆಯಲ್ಲಿ ಸ್ಟೂಡೆಂಟ್ ಯೂನಿಯನ್ ನ ಚಂದ್ರುಪೆರಿಯರ್ ಮಾತನಾಡಿ, ಸರ್ಕಾರ ಮಾತು ಕೊಟ್ಟಿತ್ತು. ತಾತ್ಸರ ಮಾಡೋದು ಬೇಡ. ಶಿಲ್ಪಾಶ್ರೀಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ವೈದ್ಯಕೀಯ ಖರ್ಚು, ಹಾಗೂ ಕುಟುಂಬಕ್ಕೂ ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೆವು. ಆದರೆ ಸರ್ಕಾರ ತಾತ್ಸರ ಮಾಡಿದೆ. ಇವರೆಗೆ ವೈದ್ಯಕೀಯ ಖರ್ಚು ಬಿಎಂಟಿಸಿ ಆಡಳಿತ ನೋಡಿಕೊಂಡಿದೆ. ನಮ್ಮ ಭರವಸೆಗೆ ಸ್ಪಂದಿಸದಿದ್ದರೇ, ಹೋರಾಟಕ್ಕೆ ಇಳಿಯುತ್ತೇವೆ. ಟೀಚರ್ಸ್ ಯೂನಿಯನ್‍ಗಳ ಜೊತೆ ಮಾತುಕತೆ ನಡೆಸಿ ಹೋರಾಟದ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಬೆಂಗಳೂರಲ್ಲಿ ಮಹಿಳೆ ಅನುಮಾನಾಸ್ಪದ ಸಾವು

    Live Tv
    [brid partner=56869869 player=32851 video=960834 autoplay=true]

  • ನಮಾಜ್ ವಿಷಯಕ್ಕೆ ಗಲಾಟೆ – ವಿವಿಯಿಂದ ಹೊರನಡೆದ 60 ನೈಜೀರಿಯಾ ವಿದ್ಯಾರ್ಥಿಗಳು

    ನಮಾಜ್ ವಿಷಯಕ್ಕೆ ಗಲಾಟೆ – ವಿವಿಯಿಂದ ಹೊರನಡೆದ 60 ನೈಜೀರಿಯಾ ವಿದ್ಯಾರ್ಥಿಗಳು

    ಚಂಡೀಗಢ: ಭಾರತೀಯ ವಿದ್ಯಾರ್ಥಿಗಳು (Indian Students) ನಮ್ಮನ್ನು ಥಳಿಸಿದ್ದಾರೆ ಎಂದು ಆರೋಪಿಸಿದ ಸುಮಾರು 60 ನೈಜೀರಿಯಾದ ವಿದ್ಯಾರ್ಥಿಗಳು (Nigerian Students) ಕ್ಯಾಂಪಸ್‌ನಿಂದ ಹೊರನಡೆದಿರುವ ಘಟನೆ ಗುರುಗ್ರಾಮದ ಜಿಡಿ ಗೋಯೆಂಕಾ ವಿಶ್ವವಿದ್ಯಾಲಯದಲ್ಲಿ (Gurgaon University) ನಡೆದಿದೆ.

    ವರದಿಗಳ ಪ್ರಕಾರ ಆಟದ ಮೈದಾನದಲ್ಲಿ ನಮಾಜ್ (Namaz) ಮಾಡಿದ ವಿಷಯಕ್ಕೆ ಭಾರತೀಯ ವಿದ್ಯಾರ್ಥಿಗಳು ಅಸಮಾಧಾನಗೊಂಡಿದ್ದರು. ಬಳಿಕ ನೈಜೀರಿಯಾದ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್, ಕೊಠಡಿಯೊಳಗೆ ನಮಾಜ್ ಮಾಡುವಂತೆ ಕೇಳಿಕೊಂಡಿದ್ದಾರೆ. ಮೊದಲಿಗೆ ಸಮಸ್ಯೆಯನ್ನು ಸೌಹಾರ್ದಯುತವಾಗಿ ಪರಿಹರಿಸಲಾಗಿದೆ ಎಂದು ಪೊಲೀಸರು ಹಾಗೂ ವಿಶ್ವವಿದ್ಯಾಲಯದ ಆಡಳಿತ ತಿಳಿಸಿತ್ತು. ಆದರೆ ಇದೀಗ ತಮ್ಮ ಮೇಲೆ ಭಾರತೀಯ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವುದಾಗಿ ನೈಜೀರಿಯಾದ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

    ನಮಾಜ್ ವಿವಾದದ ಕೆಲ ದಿನಗಳ ಬಳಿಕ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿದೆ. ಭಾರತ ಹಾಗೂ ನೈಜೀರಿಯಾದ ವಿದ್ಯಾರ್ಥಿಗಳು ಮಿಶ್ರ ತಂಡಗಳಲ್ಲಿ ಒಟ್ಟಿಗೆ ಫುಟ್‌ಬಾಲ್ ಆಡಬೇಕಿತ್ತು. ಆದರೆ ಇದಕ್ಕೆ ತಂಡದ ನಾಯಕ ಆಕ್ಷೇಪ ವ್ಯಕ್ತಪಡಿಸಿದ್ದು, ಪಂದ್ಯವನ್ನೇ ರದ್ದುಗೊಳಿಸಲಾಯಿತು. ಪಂದ್ಯ ರದ್ದಾದ ಬಳಿಕವೂ ಕೆಲ ಸ್ಥಳೀಯ ವಿದ್ಯಾರ್ಥಿಗಳು ಮೈದಾನಕ್ಕೆ ನುಗ್ಗಿ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನೈಜೀರಿಯನ್ ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಇದನ್ನೂ ಓದಿ: ಚಾಲೆಂಜ್ ಸೋತ ಗಡ್ಕರಿ – ಎಂಪಿಗೆ ಕೊಡಬೇಕು 32 ಸಾವಿರ ಕೋಟಿ

    ನಮ್ಮ ಮೇಲೆ ದಾಳಿ ಮಾಡುವ ವೇಳೆ ಮುಂದೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಭಾರತೀಯ ವಿದ್ಯಾರ್ಥಿಗಳು ಬೆದರಿಕೆ ಹಾಕಿರುವುದಾಗಿ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ನೈಜೀರಿಯಾದ ವಿದ್ಯಾರ್ಥಿಗಳು ಘರ್ಷಣೆಯನ್ನು ಸರಿಪಡಿಸಲು ತಮ್ಮ ರಾಯಭಾರ ಕಚೇರಿಯನ್ನು ಮಧ್ಯ ಪ್ರವೇಶಿಸುವಂತೆ ಕೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ.

    ಪ್ರಕರಣದ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಅಮೆರಿಕದಲ್ಲಿ ಆತಂಕ ಸೃಷ್ಟಿಸಿರುವ ಓಮಿಕ್ರಾನ್ ಉಪತಳಿ BQ.1 ಭಾರತದಲ್ಲಿ ಪತ್ತೆ

    Live Tv
    [brid partner=56869869 player=32851 video=960834 autoplay=true]

  • ವಿಶ್ವವಿದ್ಯಾಲಯದಿಂದ ಎಡವಟ್ಟು- ಹಾಲ್ ಟಿಕೆಟ್‍ನಲ್ಲಿ ವಿದ್ಯಾರ್ಥಿನಿ ಫೋಟೋ ಬದಲು ಐಶ್ವರ್ಯಾ ರೈ ಫೋಟೋ

    ವಿಶ್ವವಿದ್ಯಾಲಯದಿಂದ ಎಡವಟ್ಟು- ಹಾಲ್ ಟಿಕೆಟ್‍ನಲ್ಲಿ ವಿದ್ಯಾರ್ಥಿನಿ ಫೋಟೋ ಬದಲು ಐಶ್ವರ್ಯಾ ರೈ ಫೋಟೋ

    ರಾಂಚಿ: ವಿಶ್ವವಿದ್ಯಾಲಯದ ಎಡವಟ್ಟಿನಿಂದಾಗಿ ಹಾಲ್ ಟಿಕೆಟ್‍ನಲ್ಲಿ ವಿದ್ಯಾರ್ಥಿನಿ (Student) ಫೋಟೋ ಬದಲು ಐಶ್ವರ್ಯಾ ರೈ (Aishwarya Rai) ಫೋಟೋ ಇರುವ ಘಟನೆ ಜಾರ್ಖಂಡ್‍ನಲ್ಲಿ ನಡೆದಿದೆ.

    ಜಾರ್ಖಂಡ್‍ನ ಧನ್‍ಬಾದ್‍ನ ಬಿನೋದ್ ಬಿಹಾರಿ ಮಹ್ತೋ ಕೊಯಲಾಂಚಲ್ ವಿಶ್ವವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ. ವಿಶ್ವವಿದ್ಯಾಲಯದ (University) ಎಡವಟ್ಟಿನಿಂದಾಗಿ ವಿದ್ಯಾರ್ಥಿನಿಯ ಬದಲು ನಟಿ ಐಶ್ವರ್ಯಾ ರೈ ಫೋಟೋವನ್ನು ಹಾಲ್ ಟಿಕೆಟ್‍ನಲ್ಲಿ ಹಾಕಿದ್ದರು.

    ಈ ಹಿನ್ನೆಲೆಯಲ್ಲಿ ದಂಗಾದ ವಿದ್ಯಾರ್ಥಿನಿಯು ಕುಲಪತಿ ಎಸ್.ಕೆ. ಬರನ್‍ವಾಲ್ ಬಳಿ ಪರಿಹಾರವನ್ನು ಕೇಳಿದ್ದಾಳೆ. ಆ ವೇಳೆ ಹಾಲ್ ಟಿಕೆಟ್‍ನ ಫೋಟೋ ಹಾಗೂ ಸಹಿಗಳನ್ನು ಅಪ್‍ಲೋಡ್ ಮಾಡುವುದು ವಿಶ್ವವಿದ್ಯಾಲಯದಿಂದ ಮಾಡುತ್ತಿಲ್ಲ ಎಂದ ಅವರು, ಇದು ವಿಶ್ವವಿದ್ಯಾಲಯದ ಗೌರವಕ್ಕೆ ಧಕ್ಕೆ ತರುವ ಸಂಚಾಗಿದೆ ಎಂದರು.

    ಕೊನೆಗೂ ಪರಿಶೀಲನೆ ನಡೆಸಿದ ನಂತರ ಅಭ್ಯರ್ಥಿಯು ಫಾರ್ಮ್‍ನ್ನು ಭರ್ತಿ ಮಾಡಿರುವುದು ತಿಳಿದು ಬಂದಿದೆ. ಇದರ ಆಧಾರದ ಮೇಲೆ ಹಾಲ್ ಟಿಕೆಟ್‍ನ್ನು ಪಡೆದಳು. ಘಟನೆಗೆ ಸಂಬಂಧಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

    ಈ ಬಗ್ಗೆ ಮಾತನಾಡಿದ ವಿದ್ಯಾರ್ಥಿನಿ, ಫಾರ್ಮ್ ಭರ್ತಿ ಮಾಡುವಾಗ ಸರಿಯಾಗಿ ಎಲ್ಲಾ ವಿವರವನ್ನು ನೀಡಿದ್ದೆ. ಆದರೆ ಆನ್‍ಲೈನ್‍ನಲ್ಲಿ ಹಾಲ್ ಟಿಕೆಟ್ ನೋಡುವಾಗ ಐಶ್ವರ್ಯ ರೈ ಫೋಟೋ ಇರುವುದು ನೋಡಿ ಆಶ್ಚರ್ಯವಾಗಿತ್ತು ಎಂದು ಹೇಳಿದರು. ಇದನ್ನೂ ಓದಿ: 856 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಉಜ್ಜಯಿನಿ ದೇಗುಲ ಇಂದು ಲೋಕಾರ್ಪಣೆ

    ವಿದ್ಯಾರ್ಥಿನಿಗೆ ತೊಂದರೆಯಾಗದಂತೆ ತಾಂತ್ರಿಕ ದೋಷ ಸರಿಪಡಿಸಲಾಗುವುದು ಎಂದು ವಿಶ್ವವಿದ್ಯಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ತಾಯಿಯ ಎದುರೇ ಬಾಲಕಿ ಮೇಲೆ ಗ್ಯಾಂಗ್ ರೇಪ್

    Live Tv
    [brid partner=56869869 player=32851 video=960834 autoplay=true]

  • ಜೊತೆಗಿದ್ದವಳಿಂದಲೇ 60 ವಿದ್ಯಾರ್ಥಿನಿಯರು ಸ್ನಾನ ಮಾಡ್ತಿರೋ ಖಾಸಗಿ ವೀಡಿಯೋ ಲೀಕ್ – ವಿವಿಯಲ್ಲಿ ಭುಗಿಲೆದ್ದ ಪ್ರತಿಭಟನೆ

    ಜೊತೆಗಿದ್ದವಳಿಂದಲೇ 60 ವಿದ್ಯಾರ್ಥಿನಿಯರು ಸ್ನಾನ ಮಾಡ್ತಿರೋ ಖಾಸಗಿ ವೀಡಿಯೋ ಲೀಕ್ – ವಿವಿಯಲ್ಲಿ ಭುಗಿಲೆದ್ದ ಪ್ರತಿಭಟನೆ

    ಚಂಡೀಗಢ: ಮೊಹಾಲಿಯ ಚಂಡೀಗಢ ವಿಶ್ವವಿದ್ಯಾಲಯದ (Chandigarh University) ಹಾಸ್ಟೆಲ್‌ನಲ್ಲಿ (Hostel) ವಿದ್ಯಾರ್ಥಿನಿಯೊಬ್ಬಳು (Student) ಇತರ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋಗಳನ್ನು ಸೋರಿಕೆ (Leaked Videos) ಮಾಡಿದ್ದು, ಇದರ ಹಿನ್ನೆಲೆ ವಿಶ್ವವಿದ್ಯಾಲಯದಲ್ಲಿ ಭಾರೀ ಪ್ರತಿಭಟನೆ ಭುಗಿಲೆದ್ದಿದೆ.

    ಸುಮಾರು 60 ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವೀಡಿಯೋವನ್ನು ವಿದ್ಯಾರ್ಥಿನಿಯೊಬ್ಬಳು ಸೆರೆಹಿಡಿದು, ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿರುವುದಾಗಿ ಆರೋಪಿಸಲಾಗಿದೆ. ಈ ವೀಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ವೀಡಿಯೋವನ್ನು ಹರಿಬಿಟ್ಟ ವಿದ್ಯಾರ್ಥಿನಿಯನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

    ಈ ಘಟನೆಯಿಂದಾಗಿ ನೊಂದ ಹಲವು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂದು ವದಂತಿಗಳು ಹಬ್ಬುತ್ತಿವೆ. ಆದರೆ ಈ ವದಂತಿಯನ್ನು ನಿರಾಕರಿಸಿದ ವಿಶ್ವವಿದ್ಯಾಲಯದ ಅಧಿಕಾರಿಗಳು, ವಿಷಯ ತಿಳಿಯುತ್ತಿದ್ದಂತೆ ವಿದ್ಯಾರ್ಥಿನಿಯೊಬ್ಬಳು ಪ್ರಜ್ಞೆ ತಪ್ಪಿ ಬಿದ್ದಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಯುಪಿ ಸಚಿವರಿಗೆ 500 ರೂ. ದಂಡ

    ಇದೀಗ ನಡೆಯುತ್ತಿರುವ ಭಾರೀ ಪ್ರತಿಭಟನೆಯ ಬಗ್ಗೆ ಶಾಂತಿ ಕಾಪಾಡುವಂತೆ ಪಂಜಾಬ್ ಶಿಕ್ಷಣ ಸಚಿವರು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಸಮಯದಲ್ಲಿ ಚಂಡೀಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಶಾಂತವಾಗಿರಬೇಕು. ನಾವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳುತ್ತೇವೆ. ಇದು ಅತ್ಯಂತ ಸೂಕ್ಷ್ಮ ವಿಚಾರ. ನಮ್ಮ ಸಹೋದರಿಯರು ಹಾಗೂ ಹೆಣ್ಣುಮಕ್ಕಳ ಘನತೆಗೆ ಸಂಬಂಧಿಸಿರುವುದಾಗಿದೆ. ಸಾಮಾಜಿಕ ಮಾಧ್ಯಮಗಳ ಬಗ್ಗೆ ನಾವು ತುಂಬಾ ಜಾಗರೂಕರಾಗಿರಬೇಕು ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಸ್ಮಾರ್ಟ್ ಫೋನ್ ಬಳಕೆದಾರರೇ ಎಚ್ಚರ! – ಎಂಟ್ರಿಕೊಟ್ಟಿದೆ ರಷ್ಯಾದ ಸೋವಾ-5.0 ವೈರಸ್

    Live Tv
    [brid partner=56869869 player=32851 video=960834 autoplay=true]

  • ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆಗೆ ಮುಂದಾದ ತುಮಕೂರು ವಿವಿ

    ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆಗೆ ಮುಂದಾದ ತುಮಕೂರು ವಿವಿ

    ತುಮಕೂರು: ವೀರ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆಗೆ ತುಮಕೂರು ವಿಶ್ವ ವಿದ್ಯಾಲಯ ಒಪ್ಪಿಗೆ ಸೂಚಿಸಿದೆ.

    ಪ್ರಸಕ್ತ ಸಾಲಿನ 6ನೇ ಸಿಂಡಿಕೇಟ್ ಸಭೆಯಲ್ಲಿ ಸಾವರ್ಕರ್ ಅಧ್ಯಯನ ಪೀಠಕ್ಕೆ ಒಪ್ಪಿಗೆ ನೀಡಲಾಗಿದ್ದು, ಆಂತರಿಕ ನಿಧಿ ಬಳಸಿಕೊಳ್ಳಲು ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಶುಕ್ರವಾರ ನಡೆದ ಸಭೆಯಲ್ಲಿ ವಿವಿ ಸಿಂಡಿಕೇಟ್ ಸದಸ್ಯ ವಿನಯ್ ಸಭೆಯ ಅಜೆಂಡಾದಲ್ಲಿ ಸಾವರ್ಕರ್ ಪೀಠ ಸ್ಥಾಪನೆಯ ವಿಷಯದ ಬಗ್ಗೆ ಪ್ರಸ್ತಾಪಿಸಿದ್ದರು. ಇದಕ್ಕೆ ಎಲ್ಲರೂ ಒಪ್ಪಿಗೆ ಸೂಚಿಸಿದ್ದಾರೆ.

    ಈ ವೇಳೆ ಸಾವರ್ಕರ್ ಪೀಠ ಸ್ಥಾಪನೆಗೆ ಸದಸ್ಯ ವಿನಯ್ 1 ಲಕ್ಷ ರೂ. ಮೂಲ ಠೇವಣಿಯನ್ನು ಇಟ್ಟಿದ್ದಾರೆ. ಸಾವರ್ಕರ್ ಪೀಠ ಸ್ಥಾಪನೆಗೆ ಅಗತ್ಯ ಇರುವ ಕರಡು ಪರಿನಿಯಮ ಸಿದ್ಧಗೊಂಡಿದ್ದು, ಪೀಠ ಕಾರ್ಯಾರಂಭಕ್ಕೆ ಬೇಕಾಗಿರುವ 25 ಲಕ್ಷ ರೂ. ದಾನಿಗಳಿಂದ ಸಂಗ್ರಹಿಸಲು ನಿರ್ಧಾರ ಮಾಡಿದ್ದಾರೆ. ಇದನ್ನೂ ಓದಿ: 8ನೇ ತರಗತಿ ಪಠ್ಯದಲ್ಲಿ ಸಾವರ್ಕರ್‌ ಪಾಠ

    ಈ ಬಗ್ಗೆ ಸಿಂಡಿಕೇಟ್ ಸದಸ್ಯ ವಿನಯ್ ಮಾತನಾಡಿ, ನಿನ್ನೆ ನಡೆದ ಸಿಂಡಿಕೇಟ್ ಸಭೆಯಲ್ಲಿ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆಗೆ ನಿರ್ಧರಿಸಲಾಗಿದೆ. ನಾನು ಅದರ ಪ್ರಸ್ತಾವನೆಯನ್ನು ಸಭೆ ಮುಂದಿಟ್ಟಿದ್ದೆ. ಸರ್ವಾನುಮತದಿಂದ ಅನುಮೋದನೆಗೊಂಡಿದೆ. ಆರಂಭಿಕವಾಗಿ ನಾನು 1 ಲಕ್ಷ ರೂ. ಠೇವಣಿ ಇಟ್ಟಿದ್ದೇನೆ. ಮುಂದಿನದ ದಿನದಲ್ಲಿ ಎಲ್ಲವೂ ಅನುಷ್ಠಾನ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಠ್ಯ, ಪುಸ್ತಕ ಪರಿಷ್ಕರಣೆಗೆ ಮುಂದುವರಿದ ವಿರೋಧ- ತಮ್ಮ ಕವಿತೆಯನ್ನು ಬಳಸಬೇಡಿ: ರೂಪಾ ಹಾಸನ

    Live Tv
    [brid partner=56869869 player=32851 video=960834 autoplay=true]

  • ರಾಜ್ಯದಲ್ಲಿ ಸ್ಥಾಪನೆಯಾಗಲಿದೆ 8 ವಿವಿ – ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟ ಒಪ್ಪಿಗೆ

    ರಾಜ್ಯದಲ್ಲಿ ಸ್ಥಾಪನೆಯಾಗಲಿದೆ 8 ವಿವಿ – ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟ ಒಪ್ಪಿಗೆ

    ಬೆಂಗಳೂರು: ಎಂಟು ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅನುವು ಮಾಡಿಕೊಡುವ ಉದ್ದೇಶದಿಂದ ಕರ್ನಾಟಕ ವಿವಿಗಳ ಕಾಯ್ದೆ 2000ಕ್ಕೆ ತಿದ್ದುಪಡಿ ತರಲು ಇಂದು ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

    ಈ ಕುರಿತು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಮಾಹಿತಿ ನೀಡಿದ್ದಾರೆ. ಕಾಯ್ದೆ ತಿದ್ದುಪಡಿಯಿಂದಾಗಿ ಚಾಮರಾಜನಗರ, ಹಾವೇರಿ, ಹಾಸನ, ಕೊಡಗು, ಕೊಪ್ಪಳ, ಬಾಗಲಕೋಟೆ, ಬೀದರ್ ಮತ್ತು ಮಂಡ್ಯ ವಿ.ವಿ.ಗಳ ಸ್ಥಾಪನೆ ಸುಗಮವಾಗಿ ನಡೆಯಲಿದೆ.

    ಹೊಸ ವಿವಿಗಳ ಪೈಕಿ ಕ್ರಮವಾಗಿ ಚಾಮರಾಜನಗರ ವಿವಿಯಲ್ಲಿ 18, ಹಾಸನ ವಿವಿಯಲ್ಲಿ 36, ಹಾವೇರಿ 40, ಬೀದರ್ 140, ಕೊಡಗು 24, ಕೊಪ್ಪಳ 40 ಮತ್ತು ಬಾಗಲಕೋಟೆ ವಿವಿಗಳು 71 ಕಾಲೇಜುಗಳನ್ನು ಹೊಂದಿರಲಿವೆ. ಇವುಗಳ ಜತೆಗೆ ಮಂಡ್ಯ ವಿವಿ ವ್ಯಾಪ್ತಿಗೆ ಆ ಜಿಲ್ಲೆಯ ಪ್ರಥಮ ದರ್ಜೆ ಕಾಲೇಜುಗಳು ಬರಲಿವೆ.

    ಮಂಡ್ಯ ವಿವಿ ಒಂದನ್ನು ಹೊರತುಪಡಿಸಿ ಮಿಕ್ಕ 7 ವಿವಿಗಳ ಆರಂಭವನ್ನು ಈ ವರ್ಷದ ಬಜೆಟ್‍ನಲ್ಲಿ ಘೋಷಿಸಲಾಗಿತ್ತು. ಇದಕ್ಕಾಗಿ ಈಗಾಗಲೇ ತಲಾ 2 ಕೋಟಿ ರೂ.ಗಳಂತೆ ಒಟ್ಟು 14 ಕೋಟಿ ರೂ. ಒದಗಿಸಲಾಗಿದೆ. ಏಕೀಕೃತ ವಿವಿಯಾಗಿದ್ದ ಮಂಡ್ಯದ ಸರ್ಕಾರಿ ಕಾಲೇಜನ್ನು ಪೂರ್ಣ ಪ್ರಮಾಣದ ವಿವಿಯಾಗಿ ಮಾಡುವ ತೀರ್ಮಾನವನ್ನು ಇತ್ತೀಚೆಗೆ ಕೈಗೊಳ್ಳಲಾಗಿತ್ತು.

    ASHWATH NARAYAN 1

    ಜಿಲ್ಲೆಗೊಂದು ವಿವಿ ಇರಬೇಕು ಎನ್ನುವುದು ಸರ್ಕಾರದ ತೀರ್ಮಾನವಾಗಿದೆ. ಈ ಮೂಲಕ ಶೈಕ್ಷಣಿಕ ಅಸಮತೋಲನ ನಿವಾರಣೆ ಮಾಡಲಾಗುವುದು. ಜೊತೆಗೆ, ಯುವಜನರಿಗೆ ಮನೆ ಬಾಗಿಲಲ್ಲೇ ಗುಣಮಟ್ಟದ ಶಿಕ್ಷಣ ನೀಡುವ ಸದಾಶಯ ಇದರ ಹಿಂದಿದೆ ಎಂದು ಸಚಿವರು ಹೇಳಿದರು. ಇದನ್ನೂ ಓದಿ: ಕುಡುಕ ಗಂಡನ ಮದ್ವೆಯಾಗಿದ್ದೇವೆ, ಡಿವೋರ್ಸ್ ಕೊಡೋಕೆ ಆಗ್ತಿಲ್ಲ: ಮುತಾಲಿಕ್

    ನೂತನ ವಿವಿಗಳ ಸ್ಥಾಪನೆಗೆ ಆರ್ಥಿಕ ಮತ್ತು ಯೋಜನಾ ಇಲಾಖೆಗಳು ಒಪ್ಪಿಗೆ ನೀಡಿವೆ. ಇವು ಕಡಿಮೆ ಸ್ಥಳ, ಕಡಿಮೆ ಸಿಬ್ಬಂದಿ ಮತ್ತು ಕಡಿಮೆ ವೆಚ್ಚದೊಂದಿಗೆ ಕಾರ್ಯ ಚಟುವಟಿಕೆ ನಡೆಸಲಿವೆ ಎಂದು ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಆಸ್ತಿಗಳಿಕೆ – ಡಿಕೆಶಿ ಆಪ್ತನಿಗೆ CBI ನೋಟಿಸ್

    Live Tv
    [brid partner=56869869 player=32851 video=960834 autoplay=true]