Tag: ವಿಶ್ವಸುಂದರಿ

  • Miss World | ಥಾಯ್ಲೆಂಡ್‌ನ ಒಪಾಲ್ ಸುಚಾತಾಗೆ 72ನೇ ವಿಶ್ವ ಸುಂದರಿ ಕಿರೀಟ

    Miss World | ಥಾಯ್ಲೆಂಡ್‌ನ ಒಪಾಲ್ ಸುಚಾತಾಗೆ 72ನೇ ವಿಶ್ವ ಸುಂದರಿ ಕಿರೀಟ

    ಹೈದರಾಬಾದ್‌: ಥಾಯ್ಲೆಂಡ್‌ನ ಒಪಾಲ್ ಸುಚಾತಾ ಚೌಂಗಶ್ರೀ (Opal Suchata Chuangsri) ಅವರು 72ನೇ ಆವೃತ್ತಿಯ ವಿಶ್ವ ಸುಂದರಿ (Miss World) ಕಿರೀಟ ಮುಡಿಗೇರಿಸಿಕೊಂಡಿದ್ದು, ಇಥಿಯೋಪಿಯಾದ ಹಾಸೆಟ್ ಡೆರೆಜ್ ಅದ್ಮಾಸ್ಸು ‘ರನ್ನ‌ರ್ ಅಪ್’ ಆಗಿ ಹೊರಹೊಮ್ಮಿದ್ದಾರೆ.

    ಶನಿವಾರ ಸಂಜೆ ಹೈದರಾಬಾದ್‌ನ (Hyderabad) ಹೈಟೆಕ್‌ ಎಕ್ಸಿಬಿಷನ್ ಸೆಂಟರ್‌ನಲ್ಲಿ ನಡೆದ 72ನೇ ಆವೃತ್ತಿಯ ವಿಶ್ವಸುಂದರಿ ಸ್ಪರ್ಧೆಯ ಗ್ರಾಂಡ್ ಫಿನಾಲೆಯಲ್ಲಿ ಸುಚಾತಾ ಕಿರೀಟ ತಮ್ಮದಾಗಿಸಿಕೊಂಡರು. ಇನ್ನೂ ಭಾರತವನ್ನು ಪ್ರತಿನಿಧಿಸಿದ ನಂದಿನಿ ಗುಪ್ತಾ ಅವರು ಅಗ್ರ 8ರಲ್ಲಿ ಸ್ಥಾನ ಪಡೆಯುವ ಮುನ್ನವೇ ಹೊರಬಿದ್ದರು. ಇದನ್ನೂ ಓದಿ: ‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್

    ವಿಜೇತರಿಗೆ 1 ಮಿಲಿಯನ್ ಡಾಲರ್ ಅಂದರೆ ಸುಮಾರು 8 ಕೋಟಿ ರೂ. ಬೆಲೆ ಬಾಳುವ ವಜ್ರದ ಕಿರೀಟ ಅವರ ಮುಡಿಗೆ ಸಿಂಗರಿಸಲಾಯಿತು. ಇಥಿಯೋಪಿಯಾದ ಹಾಸೆಟ್ ಡೆರೆಜ್ ಅದ್ಮಾಸ್ಸು ಮೊದಲ ರನ್ನರಪ್‌ ಆದ್ರೆ, ಪೋಲೆಂಡಿನ ಪೊಲ್ಯಾಂಡ್‌ನ ಸುಂದರಿ 2ನೇ ರನ್ನರ್ ಅಪ್ ಹಾಗೂ ಕೆರೆಬಿಯನ್ ದ್ವೀಪದ ಸುಂದರಿ 3ನೇ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.

    ಈ ಬಾರಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ವಿವಿಧ ದೇಶಗಳಿಂದ ಒಟ್ಟು 108 ಸ್ಪರ್ಧಿಗಳು ಭಾಗವಹಿಸಿದ್ದರು. ಕಳೆದ ಒಂದು ತಿಂಗಳಿನಿಂದ ವಿವಿಧ ಸುತ್ತುಗಳಲ್ಲಿ ಈ ಸ್ಪರ್ಧಿಗಳು ಪಾಲ್ಗೊಂಡಿದ್ದರು. ಇದನ್ನೂ ಓದಿ: ಪಾಕ್ ದಾಳಿಯಿಂದ ನಮ್ಮ ಫೈಟರ್ ಜೆಟ್‌ಗಳಿಗೂ ಹಾನಿ? – ಮೊದಲ ಬಾರಿಗೆ ಸಿಡಿಎಸ್ ಪ್ರತಿಕ್ರಿಯೆ ಏನು?

    ಅಮೆರಿಕ ಮತ್ತು ಕೆರಿಬಿಯನ್, ಯುರೋಪ್, ಏಷ್ಯಾ ಹಾಗೂ ಓಸಿನಿಯಾ ಎಂಬ ನಾಲ್ಕು ವಿಭಾಗಗಳಲ್ಲಿ ನಡೆದ ಸ್ಪರ್ಧೆಗಳಿಂದ ಒಂದು ವಿಭಾಗದಿಂದ 10 ಜನರನ್ನು ಸೆಮಿಫೈನಲ್ಸ್‌ಗೆ ಆಯ್ಕೆ ಮಾಡಲಾಗಿತ್ತು. ನಂತರ ಒಂದು ವಿಭಾಗದಿಂದ 4 ಜನರಂತೆ 16 ಸ್ಪರ್ಧಿಗಳನ್ನು ಫೈನಲ್‌ಗೆ ಆಯ್ಕೆಮಾಡಲಾಗಿತ್ತು. ಅದರಲ್ಲಿ ಟಾಪ್ 8 ಹಾಗೂ ಫೈನಲ್ ನಡೆಯುತ್ತದೆ. ವಿಶ್ವ ಸುಂದರಿಯ ಜೊತೆಗೆ ಫೈನಲ್ ಪ್ರವೇಶಿಸಿದ ಮೂವರಿಗೆ ರನ್ನರ್ ಅಪ್ ಸ್ಥಾನ ಲಭಿಸಿದೆ.

    ಗ್ರಾಂಡ್ ಫಿನಾಲೆಯ ನಿರೂಪಣೆಯನ್ನು 2016ರ ವಿಶ್ವ ಸುಂದರಿ ಸ್ಪರ್ಧೆಯ ವಿಜೇತೆ ಸ್ಟೆಫನಿ ಡೆಲ್ ವ್ಯಾಲೆ ನಡೆಸಿಕೊಟ್ಟರು. ಅವರೊಂದಿಗೆ ಭಾರತದ ಸಚಿನ್ ಕುಂಬಾ‌ರ್ ಇದ್ದರು. ಕಾರ್ಯಕ್ರಮದಲ್ಲಿ 2017ರಲ್ಲಿ ವಿಶ್ವ ಸುಂದರಿಯಾಗಿದ್ದ ಮಾನುಶಿ ಚಿಲ್ಲ‌ರ್, ಬಾಲವುಡ್ ನಟ ಸೋನು ಸೂದ್ ಸೇರಿದಂತೆ ಹಲವು ನಟ – ನಟಿಯರು ಭಾಗವಹಿಸಿದ್ದರು.

  • 27 ವರ್ಷಗಳ ನಂತರ ಭಾರತದಲ್ಲಿ ವಿಶ್ವಸುಂದರಿ ಸ್ಪರ್ಧೆ: ಮೊದಲಾಗಿದ್ದು ಬೆಂಗಳೂರಿನಲ್ಲಿ

    27 ವರ್ಷಗಳ ನಂತರ ಭಾರತದಲ್ಲಿ ವಿಶ್ವಸುಂದರಿ ಸ್ಪರ್ಧೆ: ಮೊದಲಾಗಿದ್ದು ಬೆಂಗಳೂರಿನಲ್ಲಿ

    ವಿಶ್ವ ಸುಂದರಿ (Miss World) ಸ್ಪರ್ಧೆಯನ್ನು ಈ ಬಾರಿ ಭಾರತದಲ್ಲಿ ಆಯೋಜನೆ ಮಾಡಲಾಗುತ್ತಿದೆ. ಬರೋಬ್ಬರಿ 27 ವರ್ಷಗಳ ಬಳಿಕ ಭಾರತವು (India) ಇಂಥದ್ದೊಂದು ಅವಕಾಶ ಪಡೆದಿದೆ. ನಿನ್ನೆ ನಡೆದ ಸಭೆಯಲ್ಲಿ ಈ ಬಾರಿ ವಿಶ್ವ ಸುಂದರಿ ಸ್ಪರ್ಧೆಯನ್ನು ಭಾರತ ಆತಿಥ್ಯ ವಹಿಸಿಕೊಳ್ಳಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

    ವಿಶ್ವ ಸುಂದರಿ (Vishwasundari) ಸ್ಪರ್ಧೆಯನ್ನು ಆಯೋಜನೆ ಮಾಡಲು ಹಲವು ರಾಷ್ಟ್ರಗಳು ತುದಿಗಾಲಲ್ಲಿ ನಿಂತಿರುತ್ತವೆ. ಅದೊಂದು ಪ್ರತಿಷ್ಠಿತ ಸ್ಪರ್ಧೆ ಆಗಿರುವುದರಿಂದ ಆತಿಥ್ಯ ವಹಿಸಲು ಸಹಜವಾಗಿಯೇ ಪೈಪೋಟಿ ನಡೆದಿರುತ್ತದೆ. ಈ ಎಲ್ಲ ಪೈಪೋಟಿಯಾಚೆ ಈ ಬಾರಿ ಭಾರತದಲ್ಲಿ ಸ್ಪರ್ಧೆ ನಡೆಯಲಿದೆ.

    ಎರಡನೇ ಬಾರಿ ಭಾರತದಲ್ಲಿ ವಿಶ್ವ ಸುಂದರಿ ಸ್ಪರ್ಧೆ ನಡೆಯುತ್ತಿದ್ದು, ಮೊದಲ ಬಾರಿಗೆ ಬೆಂಗಳೂರಿನಲ್ಲಿ (Bangalore) ನಡೆದಿತ್ತು ಎನ್ನುವುದು ವಿಶೇಷ. 1996ರಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯನ್ನು ಭಾರತ ಆತಿಥ್ಯ ವಹಿಸಿಕೊಂಡಿತ್ತು. ಆ ಸ್ಪರ್ಧೆಯು ಬೆಂಗಳೂರಿನಲ್ಲಿ ಆಯೋಜನೆಗೊಂಡಿತ್ತು. ಅಮಿತಾಭ್ ಬಚ್ಚನ್ (Amitabh Bachchan) ಅದರ ನೇತೃತ್ವ ವಹಿಸಿಕೊಂಡಿದ್ದರು. ಇದನ್ನೂ ಓದಿ:ಲೂಸಿಯಾ ಪವನ್ ನಿರ್ದೇಶನದ ‘ಧೂಮಂ’ ಚಿತ್ರದಲ್ಲಿ ‘ಕೆಜಿಎಫ್’ ರಾಕಿಭಾಯ್ : ಟ್ರೈಲರ್ ರಿಲೀಸ್

    ಬೆಂಗಳೂರಿನಲ್ಲಿ ವಿಶ್ವ ಸುಂದರಿ ಸ್ಪರ್ಧೆ ನಡೆದಾಗ ಭಾರೀ ಪ್ರತಿರೋಧ ವ್ಯಕ್ತವಾಯಿತು. ಇದರ ವಿರುದ್ಧ ಮಹಿಳಾ ಸಂಘಟನೆಗಳು ಬೀದಿಗೆ ಇಳಿದು ಹೋರಾಟ ನಡೆಸಿದ್ದವು. ಆಗ ಮುಖ್ಯಮಂತ್ರಿಗಳಾಗಿ ಜೆ.ಎಚ್. ಪಟೇಲ್ ಅವರು ಅಧಿಕಾರ ವಹಿಸಿದ್ದರು. ಪ್ರತಿಭಟನೆ ಎಷ್ಟೇ ಜೋರಾಗಿದ್ದರೂ, ಪೊಲೀಸ್ ಭದ್ರತೆಯಲ್ಲಿ ಕಾರ್ಯಕ್ರಮ ನಡೆಸಲು ಪಟೇಲ್ (JH Patel) ಸೂಚಿಸಿದ್ದರು. ಈ ವೇಳೆಯಲ್ಲಿ ಅಮಿತಾಭ್ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಆಗ ನಟ ಅಂಬರೀಶ್ ಅವರು ಅಮಿತಾಭ್ ನೆರವಿಗೆ ಧಾವಿಸಿದ್ದರು.

    ವಿಶ್ವಸುಂದರಿ ಸ್ಪರ್ಧೆಯು ಒಂದು ತಿಂಗಳುಗಳ ಕಾಲ ನಡೆಯಲಿದ್ದು, ಈ ಬಾರಿ ಯಾವ ರಾಜ್ಯದಲ್ಲಿ ಇದನ್ನು ಆಯೋಜನೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿಲ್ಲ. ಆಯೋಜಕರು ಮುಂದಿನ ದಿನಗಳಲ್ಲಿ ತಿಳಿಸಬಹುದು. ಅಂದಹಾಗೆ ಈ ಬಾರಿ ಭಾರತದಿಂದ ನಂದಿತಾ ಗುಪ್ತಾ ಸೇರಿದಂತೆ ಹಲವರು ಸ್ಪರ್ಧೆಗೆ ಇಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

  • ನಟಿ ಸುಶ್ಮಿತಾ ಸೇನ್ ಗೆ ಹೃದಯಾಘಾತ: ಆತಂಕ ಬಿಚ್ಚಿಟ್ಟ ಭುವನಸುಂದರಿ

    ನಟಿ ಸುಶ್ಮಿತಾ ಸೇನ್ ಗೆ ಹೃದಯಾಘಾತ: ಆತಂಕ ಬಿಚ್ಚಿಟ್ಟ ಭುವನಸುಂದರಿ

    ‘ಹೃದಯಾಘಾತವಾದಾಗ (Heart Attack) ನನಗೂ ಆತಂಕವಾಗಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಾದೆ. ನನಗೆ ಆಗ ಆಂಜಿಯೋಪ್ಲ್ಯಾಸ್ಟಿ ಮಾಡಿ, ಸ್ಟಂಟ್ ಹಾಕಿದ್ದಾರೆ. ವೈದ್ಯರು ನನ್ನೊಂದಿಗೆ ಮಾತನಾಡುತ್ತಾ ನನ್ನ ಹೃದಯ ವಿಶಾಲವಾಗಿದೆ ಮತ್ತು ಪ್ರೀತಿಯಿಂದ ತುಂಬಿದೆ ಎಂದಿದ್ದಾರೆ. ಹಾಗಾಗಿ ನಾನು ನೆಮ್ಮದಿಯಿಂದ ಇದ್ದೇನೆ. ನನ್ನ ಆರೋಗ್ಯದ ಬಗ್ಗೆ ವಿಚಾರಿಸಿದ ಪ್ರತಿಯೊಬ್ಬರಿಗೂ ಧನ್ಯವಾದ’ ಎಂದಿದ್ದಾರೆ ಮಾಜಿ ಭುವನ ಸುಂದರಿ ಸುಶ್ಮಿತಾ ಸೇನ್.

    ಬಾಲಿವುಡ್ ನಟಿ, ಮಾಜಿ ವಿಶ್ವಸುಂದರಿಯೂ (Bhuvanasundari) ಆಗಿರುವ ಸುಶ್ಮಿತಾ ಸೇನ್ (Sushmita Sen) ಗೆ ಹೃದಯಾಘಾತ ಆಗಿರುವ ವಿಚಾರ ನಿನ್ನೆಯಷ್ಟೇ ತಿಳಿದಿತ್ತು. ಎರಡ್ಮೂರು ದಿನಗಳ ಹಿಂದೆಯೇ ಅವರಿಗೆ ಹಾರ್ಟ್ ಅಟ್ಯಾಕ್ ಆಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ವಿಷಯವನ್ನು ಸ್ವತಃ ಸುಶ್ಮಿತಾ ಅವರೇ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದರು.

    ಡೇಟಿಂಗ್, ಡಿವೋರ್ಸ್ ವಿಚಾರವಾಗಿ ಸದಾ ಸುದ್ದಿಯಲ್ಲಿರುತ್ತಿದ್ದ ಸುಶ್ಮಿತಾ, ಇಂಥದ್ದೊಂದು ವಿಷಯವನ್ನು ಹಂಚಿಕೊಂಡಾಗ ಅಭಿಮಾನಿಗಳಿಗೆ ಆತಂಕವಾಗಿದ್ದು ಸಹಜ. ಈಗ ನಿಮ್ಮ ಆರೋಗ್ಯ ಹೇಗಿದೆ ಎಂದು ಹಲವರು ಪ್ರಶ್ನೆ ಮಾಡಿದ್ದಾರೆ. ಹೃದಯಾಘಾತಕ್ಕೆ ಕಾರಣವನ್ನೂ ಹಲವರು ಕೇಳಿದ್ದಾರೆ. ತಡವಾಗಿ ಸುದ್ದಿ ಹಂಚಿಕೊಂಡಿದ್ದನ್ನೂ ಹಲವರು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಮಾರ್ಚ್ 4ಕ್ಕೆ ‘ಕಬ್ಜ’ ಸಿನಿಮಾ ಟ್ರೈಲರ್: ಕಾಯುತ್ತಿದ್ದ ಅಭಿಮಾನಿಗಳಲ್ಲಿ ಸಂಭ್ರಮ

    ಸುಶ್ಮಿತಾ ಅವರೇ ಹೇಳಿಕೊಂಡಂತೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಪಡೆದಿದ್ದಾರೆ. ಆರೋಗ್ಯದ ಬಗ್ಗೆ ಆತಂಕ ಪಡಬೇಕಿಲ್ಲ ಎಂದು ಅಭಿಮಾನಿಗಳಿಗೂ ಅವರು ಹೇಳಿದ್ದಾರೆ. ವೈದ್ಯರು ಸೂಕ್ತ ರೀತಿಯಲ್ಲಿ ಸ್ಪಂದಿಸಿ ಚಿಕಿತ್ಸೆ ನೀಡಿದ್ದರಿಂದ ಗುಣಮುಖರಾಗುತ್ತಿರುವ ವಿಚಾರವನ್ನೂ ಅವರು ತಿಳಿಸಿದ್ದಾರೆ.  ತಮ್ಮ ತಂದೆಯು ಈ ಸಮಯದಲ್ಲಿ ಧೈರ್ಯ ನೀಡಿದ್ದನ್ನೂ ಅವರು ಸ್ಮರಿಸಿಕೊಂಡಿದ್ದಾರೆ.

  • ಮಾಜಿ ಭುವನ ಸುಂದರಿ ಸುಶ್ಮಿತಾ ಸೇನ್ ಗೆ ಹೃದಯಾಘಾತ

    ಮಾಜಿ ಭುವನ ಸುಂದರಿ ಸುಶ್ಮಿತಾ ಸೇನ್ ಗೆ ಹೃದಯಾಘಾತ

    ಬಾಲಿವುಡ್ (Bollywood) ನಟಿ, ಮಾಜಿ ವಿಶ್ವಸುಂದರಿ ಸುಶ್ಮಿತಾ ಸೇನ್ ಗೆ (Sushmita Sen) ಹೃದಯಾಘಾತ (Heart Attack) ಆಗಿದೆ. ಎರಡ್ಮೂರು ದಿನಗಳ ಹಿಂದೆಯೇ ಅವರಿಗೆ ಹಾರ್ಟ್ ಅಟ್ಯಾಕ್ ಆಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ವಿಷಯವನ್ನು ಸ್ವತಃ ಸುಶ್ಮಿತಾ ಅವರೇ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ.

    ಡೇಟಿಂಗ್, ಡಿವೋರ್ಸ್ ವಿಚಾರವಾಗಿ ಸದಾ ಸುದ್ದಿಯಲ್ಲಿರುತ್ತಿದ್ದ ಸುಶ್ಮಿತಾ, ಇಂಥದ್ದೊಂದು ವಿಷಯವನ್ನು ಹಂಚಿಕೊಂಡಾಗ ಅಭಿಮಾನಿಗಳಿಗೆ ಆತಂಕವಾಗಿದ್ದು ಸಹಜ. ಈಗ ನಿಮ್ಮ ಆರೋಗ್ಯ ಹೇಗಿದೆ ಎಂದು ಹಲವರು ಪ್ರಶ್ನೆ ಮಾಡಿದ್ದಾರೆ. ಹೃದಯಾಘಾತಕ್ಕೆ ಕಾರಣವನ್ನೂ ಹಲವರು ಕೇಳಿದ್ದಾರೆ. ತಡವಾಗಿ ಸುದ್ದಿ ಹಂಚಿಕೊಂಡಿದ್ದನ್ನೂ ಹಲವರು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಮಾರ್ಚ್ 4ಕ್ಕೆ ‘ಕಬ್ಜ’ ಸಿನಿಮಾ ಟ್ರೈಲರ್: ಕಾಯುತ್ತಿದ್ದ ಅಭಿಮಾನಿಗಳಲ್ಲಿ ಸಂಭ್ರಮ

    ಸುಶ್ಮಿತಾ ಅವರೇ ಹೇಳಿಕೊಂಡಂತೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಪಡೆದಿದ್ದಾರೆ. ಆರೋಗ್ಯದ ಬಗ್ಗೆ ಆತಂಕ ಪಡಬೇಕಿಲ್ಲ ಎಂದು ಅಭಿಮಾನಿಗಳಿಗೂ ಅವರು ಹೇಳಿದ್ದಾರೆ. ವೈದ್ಯರು ಸೂಕ್ತ ರೀತಿಯಲ್ಲಿ ಸ್ಪಂದಿಸಿ ಚಿಕಿತ್ಸೆ ನೀಡಿದ್ದರಿಂದ ಗುಣಮುಖರಾಗುತ್ತಿರುವ ವಿಚಾರವನ್ನೂ ಅವರು ತಿಳಿಸಿದ್ದಾರೆ.

  • ಮಾಡೆಲ್ ಆಗಲು ಪೊಲೀಸ್ ಉದ್ಯೋಗ ಬಿಡಲ್ಲ ಎಂದ ವಿಶ್ವಸುಂದರಿ ಡಯಾನಾ

    ಮಾಡೆಲ್ ಆಗಲು ಪೊಲೀಸ್ ಉದ್ಯೋಗ ಬಿಡಲ್ಲ ಎಂದ ವಿಶ್ವಸುಂದರಿ ಡಯಾನಾ

    ಬೊಗೋಟಾ: ಕೊಲಂಬಿಯಾದ (Colombia) ಮಹಿಳಾ ಪೊಲೀಸ್ (Women Police) ಅಧಿಕಾರಿಯೊಬ್ಬರು ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ (Social Media) ಭಾರೀ ಸದ್ದು ಮಾಡ್ತಿದ್ದಾರೆ. ಈಕೆಯ ಮಾಡೆಲಿಂಗ್ (Model) ಫೋಟೋಗಳು ಹಾಗೂ ಚಟುವಟಿಕೆಗಳನ್ನು ನೋಡಿ, ಅಭಿಮಾನಿಗಳು ಈಕೆಯನ್ನ ವಿಶ್ವದ ಅತ್ಯಂತ ಸುಂದರ ಮಹಿಳಾ ಪೊಲೀಸ್ (World Beautiful Cop) ಎಂದು ಕರೆದಿದ್ದಾರೆ.

    ಆದ್ರೆ ಇಂದಿಗೂ ರಾಷ್ಟ್ರೀಯ ಪೊಲೀಸ್ ಪಡೆಗೆ ಸೇವೆ ಸಲ್ಲಿಸುವುದ್ನು ಗೌರವವೆಂದೇ ಪರಿಗಣಿಸುವ ಮಹಿಳಾ ಪೊಲೀಸ್ ಡಯಾನಾ ರಾಮಿರೆಜ್ (Diana Ramirez) ತನ್ನ ಇನ್ಸ್ಟಾಗ್ರಾಮ್‌ನಲ್ಲಿ 4 ಲಕ್ಷ ಫಾಲೋವರ್ಸ್ಗಳನ್ನ ಹೊಂದಿದ್ದಾರೆ. ಇದನ್ನೂ ಓದಿ: ಯಾರಿಗೂ ಭಯಪಡಬೇಡಿ, ದೇಶದಲ್ಲಿ ಪ್ರೀತಿ, ಭ್ರಾತೃತ್ವವನ್ನು ಹರಡಿ – ಯುವ ಜನತೆಗೆ ರಾಹುಲ್ ಸಂದೇಶ

    ಮಾಹಿತಿಗಳ ಪ್ರಕಾರ, ವಿಶ್ವದಲ್ಲೇ ಅತ್ಯಂತ ಅಪಾಯಕಾರಿ ನಗರವೆಂದು ಪರಿಗಣಿಸುವ ಕೊಲಂಬಿಯಾದ (Colombia) ಮೆಡಿಲಿನ್‌ನಲ್ಲಿ ಗಸ್ತು ತಿರುಗುವ ರಾಮಿರೇಜ್ ಆಗಾಗ್ಗೆ ಕೆಲವು ಮಾಡೆಲಿಂಗ್ ಚಟುವಟಿಗಳನ್ನೂ ಮಾಡುತ್ತಾ ಅದನ್ನು ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ. ಅಭಿಮಾನಿಗಳು ಈಕೆಯನ್ನು ಸಂಪೂರ್ಣ ಮಾಡೆಲಿಂಗ್ ಆಗಿ ಬದಲಾಗುವಂತೆ ಸಲಹೆಗಳು ಕೇಳಿ ಬರುತ್ತಿದ್ದಂತೆ ನಾನು ಮಾಡೆಲ್ ಆಗಲು ಅಥವಾ ಆನ್‌ಲೈನ್‌ನಲ್ಲಿ ಫೇಮಸ್ ಆಗಲು ನನ್ನ ಪೊಲೀಸ್ ಉದ್ಯೋಗ(Police Job) ಬಿಟ್ಟುಕೊಡುವುದಿಲ್ಲ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಮೋದಿಯಿಂದ ಏಷ್ಯಾದ ಮೊದಲ ಗಾರ್ಡನ್‌ ಟರ್ಮಿನಲ್‌ ಉದ್ಘಾಟನೆ – ವಿಶೇಷತೆ ಏನು?

    ನಾನು ಯಾವುದಕ್ಕೂ ಹಿಂಜರಿಯುವುದಿಲ್ಲ, ಏಕೆಂದರೆ ನನಗೆ ಮತ್ತೆ ಈ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವಿದೆ. ಆದರೂ ನಾನು ಪೊಲೀಸ್ ಅಧಿಕಾರಿಯಾಗಿ ಇರುತ್ತೇನೆ. ಏಕೆಂದರೆ ನಾನು ನಾನಾಗಿ ಇದ್ದೇನೆ, ಅದಕ್ಕಾಗಿ ನನ್ನ ಸಂಸ್ಥೆಗೆ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.

    ಹೆಚ್ಚಿನ ಡಿಜಿಟಲ್ ಫಾಲೋವರ್ಸ್ಗಳನ್ನು ಹೊಂದಿರುವ ಡಯಾನಾ ವರ್ಷದ ಅತ್ಯುತ್ತಮ ಪೊಲೀಸ್ ಅಥವಾ ಮಿಲಿಟರಿ ಪ್ರಭಾವಿ ಎಂದು ನಾಮನಿರ್ದೇಶನಗೊಂಡಿದ್ದಾರೆ. ಇದರೊಂದಿಗೆ ಪೊಲೀಸ್ ಪಡೆ ಪ್ರತಿನಿಧಿಸುವುದು ನನ್ನ ಗೌರವ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

    ಇದಕ್ಕೆ ಅಭಿಮಾನಿಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಡಯಾನಾ ರಾಮಿರೆಜ್ ಅತ್ಯಂತ ಸುಂದರ ಪೊಲೀಸ್ ಅಧಿಕಾರಿ, ಅಸಾಧಾರಣ ಸುಂದರಿ, ನಾನು ಅವರನ್ನು ಪ್ರೀತಿಸುತ್ತೇನೆ ಎಂದು ಅಭಿಮಾನಿಗಳು ಪ್ರತಿಕ್ರಿಯಿಸಿದ್ದಾರೆ. ಡಯಾನಾ ಅವರ ಅಭಿಪ್ರಾಯಗಳನ್ನು ಸಂತೋಷದಿಂದಲೇ ಸ್ವೀಕರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನನ್ನೂರಿನ ಕೋಮು ಸಾಮರಸ್ಯ ವಿಶ್ವಕ್ಕೆ ಮಾದರಿ: ಆಡ್ಲಿನ್ ಕ್ಯಾಸ್ಟಲಿನೋ

    ನನ್ನೂರಿನ ಕೋಮು ಸಾಮರಸ್ಯ ವಿಶ್ವಕ್ಕೆ ಮಾದರಿ: ಆಡ್ಲಿನ್ ಕ್ಯಾಸ್ಟಲಿನೋ

    ಉಡುಪಿ: ಲಿವಾ ಮಿಸ್ ದಿವಾ 2020 ವಿನ್ನರ್ ಆಡ್ಲಿನ್ ಕ್ಯಾಸ್ಟಲಿನೋ ಅವರನ್ನು ಉಡುಪಿಯ ಉದ್ಯಾವರ ಚರ್ಚ್ ನಲ್ಲಿ ಸನ್ಮಾನ ಮಾಡಲಾಗಿದೆ. ಸನ್ಮಾನ ಸ್ವೀಕರಿಸಿದ ಆಡ್ಲಿನ್ ಕೋಮು ಸಾಮರಸ್ಯದ ಬಗ್ಗೆ ಮಾತನಾಡಿ ಎಲ್ಲರ ಗಮನ ಸೆಳೆದಿದ್ದಾರೆ.

    ಕ್ಯಾಸ್ಟಲಿನೋ ಮನೆ ವ್ಯಾಪ್ತಿಯ ಉದ್ಯಾವರ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್ ಗೆ ಅವರನ್ನು ಬರಮಾಡಿಕೊಳ್ಳಲಾಯಿತು. ಚರ್ಚಿನ ಆಡಳಿತ ಮಂಡಳಿ, ಐಸಿವೈಎಂ ಸಂಘಟನೆ ಮತ್ತು ಸ್ಥಳೀಯರಿಂದ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಆಡ್ಲಿನ್‍ಗೆ ವಜ್ರ ಕಿರೀಟವನ್ನು ಮತ್ತೆ ತೊಡಿಸಿ ಸನ್ಮಾನ ಮಾಡಲಾಯಿತು. ಕಾಪು ಶಾಸಕ ಲಾಲಾಜಿ ಮೆಂಡನ್, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಉದ್ಯಾವರ ಚರ್ಚ್ ಧರ್ಮಗುರುಗಳು ಸ್ಥಳೀಯ ಸಂಸ್ಥೆಗಳ ಮುಖಂಡರು ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

    ಬಳಿಕ ಮಾತನಾಡಿದ ಆಡ್ಲಿನ್, ಹುಟ್ಟೂರಿನಲ್ಲಿ ಅದರಲ್ಲೂ ಚರ್ಚ್ ನಲ್ಲಿ ನನಗೆ ಸಿಗುತ್ತಿರುವ ಮೊದಲ ಸನ್ಮಾನ ಸ್ವೀಕರಿಸಿ ಮನಸ್ಸಿಗೆ ಬಹಳ ಖುಷಿಯಾಗಿದೆ. ಕೋಮು ಸಾಮರಸ್ಯದ ಕುರಿತು ನಾನು ವೇದಿಕೆಯಲ್ಲಿ ಮಾತನಾಡಿದಾಗ ಎಲ್ಲರೂ ನನ್ನನ್ನು ಅಭಿನಂದಿಸಿದರು. ನಿಜವಾಗಿ ಕೋಮು ಸಾಮರಸ್ಯದ ಬಗ್ಗೆ ನನಗೆ ಮಾತನಾಡಲು ಪ್ರೇರಣೆ ಸಿಕ್ಕಿದ್ದು ನನ್ನ ಹುಟ್ಟೂರು ಉಡುಪಿಯಿಂದ ಎಂಬುದು ನನಗೆ ಬಹಳ ಹೆಮ್ಮೆ. ಅದೇ ಕೋಮು ಸಾಮರಸ್ಯ ಇಂದಿನ ವೇದಿಕೆಯಲ್ಲಿ ಕೂಡ ನಾನು ಕಾಣುತ್ತಿದ್ದೇನೆ ಎಂದರು.

    ವಿಶ್ವಸುಂದರಿ ವೇದಿಕೆಯಲ್ಲಿ ನಾನು ನಿಂತಾಗ ನನ್ನ ಊರು, ನನ್ನ ರಾಜ್ಯ, ನನ್ನ ದೇಶವನ್ನು ನನ್ನ ಮನಸ್ಸಿಗೆ ನಾನು ತಂದುಕೊಳ್ಳುತ್ತೇನೆ. ನನ್ನ ಊರು ಉದ್ಯಾವರದ ಪ್ರೀತಿ ಆತ್ಮವಿಶ್ವಾಸ ಮತ್ತು ಆಶೀರ್ವಾದವನ್ನು ಕುವೈಟ್ ಗೆ ಕೊಂಡೊಯ್ಯಲಿದ್ದೇನೆ ಎಂದರು.

    ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಉನ್ನತ ಸ್ಥಾನದಲ್ಲಿದೆ. ಕಳೆದ ಬಾರಿಯ ಫಲಿತಾಂಶದಲ್ಲಿ ಕೂಡ ಉಡುಪಿ ನಂಬರ್ ಒನ್ ಸ್ಥಾನದಲ್ಲಿತ್ತು. ಕರಾವಳಿ ಭಾಗದಿಂದ ಸ್ಯಾಂಡಲ್ ವುಡ್ ಮತ್ತು ಬಾಲಿವುಡ್ ಗೂ ಅನೇಕ ಕಲಾವಿದರನ್ನು ಕಳುಹಿಸಿಕೊಡಲಾಗಿದೆ. ನಮ್ಮ ಊರಿನವರಾದ ಆಡ್ಲಿನ್ ನಮ್ಮ ಕ್ಷೇತ್ರದವರು ಎಂದು ಹೇಳಲು ಹೆಮ್ಮೆಯಾಗುತ್ತಿದೆ ಎಂದರು.