Tag: ವಿಶ್ವ ಅಥ್ಲೇಟಿಕ್ಸ್‌ ಚಾಂಪಿಯನ್‍ಶಿಪ್‍

  • ದೇಶದ ಕ್ರೀಡಾ ಇತಿಹಾಸದಲ್ಲಿ ಇದೊಂದು ವಿಶೇಷ ಕ್ಷಣ – ನೀರಜ್ ಚೋಪ್ರಾಗೆ ಮೋದಿ ಸಹಿತ ಗಣ್ಯರಿಂದ ಅಭಿನಂದನೆ

    ದೇಶದ ಕ್ರೀಡಾ ಇತಿಹಾಸದಲ್ಲಿ ಇದೊಂದು ವಿಶೇಷ ಕ್ಷಣ – ನೀರಜ್ ಚೋಪ್ರಾಗೆ ಮೋದಿ ಸಹಿತ ಗಣ್ಯರಿಂದ ಅಭಿನಂದನೆ

    ನವದೆಹಲಿ: ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನ ಪುರುಷರ ಜಾವೆಲಿನ್ ಥ್ರೋನಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾಗೆ ಪ್ರಧಾನಿ ನರೇಂದ್ರ ಮೋದಿ ಸಹಿತ ಗಣ್ಯರು ಟ್ವಿಟ್ಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?:
    ನಮ್ಮ ಅತ್ಯಂತ ಪ್ರತಿಷ್ಠಿತ ಕ್ರೀಡಾಪಟುಗಳಲ್ಲಿ ಒಬ್ಬರಾಗಿರುವ ನೀರಜ್ ಚೋಪ್ರಾ ಉತ್ತಮ ಸಾಧನೆ ಮಾಡಿದ್ದಾರೆ. ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಐತಿಹಾಸಿಕ ಬೆಳ್ಳಿ ಪದಕವನ್ನು ಗೆದ್ದ ಮೇಲೆ. ಭಾರತೀಯ ಕ್ರೀಡೆಗೆ ಇದೊಂದು ವಿಶೇಷ ಕ್ಷಣ. ನೀರಜ್ ಅವರ ಮುಂಬರುವ ಪ್ರಯತ್ನಗಳಿಗೆ ಶುಭಾಶಯಗಳನ್ನು ಕೋರುತ್ತಿದ್ದೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: World Athletics Championship 2022 – ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ

    ಸಾಮಾಜಿಕ ಜಾಲತಾಣದಲ್ಲಿ ನೀರಜ್ ಚೋಪ್ರಾಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ಗೃಹ ಸಚಿವ ಅಮಿತ್ ಶಾ, ಕ್ರೀಡಾ ಸಚಿವ  ಅನುರಾಗ್ ಠಾಕೂರ್, ರಕ್ಷಣಾ ಸಚಿವ ರಜನಾಥ್‌ ಸಿಂಗ್, ಬಸವರಾಜ ಬೊಮ್ಮಾಯಿ, ಕೆ ಸುಧಾಕರ್ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಗಾಯಗೊಂಡ ರವೀಂದ್ರ ಜಡೇಜಾ – ನೆಟ್ಸ್‌ನಲ್ಲಿ ಬೌಲಿಂಗ್ ಮಾಡಿದ ಅಮಿರ್ ಅಲಿ

    ಫೈನಲ್‍ನಲ್ಲಿ ನೀರಜ್ ಚೋಪ್ರಾ 88.13 ಮೀ. ದೂರ ಎಸೆದು ಬೆಳ್ಳಿ ಪದಕ ಪಡೆದರು. ಈ ಮೂಲಕ 19 ವರ್ಷಗಳ ಬಳಿಕ ಭಾರತಕ್ಕೆ ಮತ್ತೊಂದು ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್ ಪದಕ ತಂದುಕೊಟ್ಟು ಇತಿಹಾಸ ನಿರ್ಮಿಸಿದರು. ನೀರಜ್ ಚೋಪ್ರಾ ಬೆಳ್ಳಿ ಪದಕದೊಂದಿಗೆ ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಪದಕ ಗೆದ್ದ ಮೊದಲ ಪುರುಷ ಸ್ಪರ್ಧಿ, ದೇಶದ ಎರಡನೇ ಕ್ರೀಡಾಪಟು ಎಂಬ ಹಗ್ಗಳಿಕೆ ಪಾತ್ರರಾಗಿದ್ದಾರೆ.

    ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಪಡೆದು ಇತಿಹಾಸ ನಿರ್ಮಿಸಿದ್ದ ನೀರಜ್ ಚೋಪ್ರಾ, ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ 88.39 ಮೀ. ಎಸೆದು ಫೈನಲ್‍ಗೆ ಎಂಟ್ರಿಕೊಟ್ಟಿದ್ದರು. ಫೈನಲ್‍ನಲ್ಲಿ ಬೆಳ್ಳಿಗೆದ್ದು 39 ವರ್ಷಗಳ ಇತಿಹಾಸ ಹೊಂದಿರುವ ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಭಾರತಕ್ಕೆ 2ನೇ ಪದಕ ತಂದುಕೊಟ್ಟರು. 2003ರಲ್ಲಿ ಪ್ಯಾರಿಸ್‍ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಲಾಂಗ್ ಜಂಪರ್ ಅಂಜು ಬಾಬಿ ಜಾರ್ಜ್ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದರು. ಆ ಬಳಿಕ ಇದೀಗ ನೀರಜ್ ಚೋಪ್ರಾ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • World Athletics Championship 2022  – ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ

    World Athletics Championship 2022 – ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ

    ವಾಷಿಂಗ್ಟನ್: ಅಮೆರಿಕದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನ ಪುರುಷರ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದು ಭಾರತಕ್ಕೆ ಮೊದಲ ಪದಕ ತಂದು ಕೊಟ್ಟಿದ್ದಾರೆ.

    ಫೈನಲ್‍ನಲ್ಲಿ ನೀರಜ್ ಚೋಪ್ರಾ 88.13 ಮೀ. ದೂರ ಎಸೆದು ಬೆಳ್ಳಿ ಪದಕ ಪಡೆದರು. ಈ ಮೂಲಕ 19 ವರ್ಷಗಳ ಬಳಿಕ ಭಾರತಕ್ಕೆ ಮತ್ತೊಂದು ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್ ಪದಕ ತಂದುಕೊಟ್ಟು ಇತಿಹಾಸ ನಿರ್ಮಿಸಿದರು. ಇದನ್ನೂ ಓದಿ: ರೈಟ್‍ಮೆನ್ ಪ್ರೀಮಿಯರ್ ಲೀಗ್ 2022 – ಪಬ್ಲಿಕ್ ಕ್ಯಾಪ್ಟನ್ ತಂಡ ಚಾಂಪಿಯನ್


    ಫೈನಲ್‍ನಲ್ಲಿ ಗ್ರೆನಡಾದ ಆಂಡರ್ಸನ್ ಪೀಟರ್ಸ್ ಸತತ ಮೂರು ಎಸೆತಗಳನ್ನು 90+ ಮೀ. ಎಸೆದು ಚಿನ್ನದ ಪದಕಕ್ಕೆ ಮುತ್ತಿಕ್ಕಿದರೆ, ನೀರಜ್ ಚೋಪ್ರಾ ಮೊದಲ ಎಸೆತ ಫೌಲ್ ಆಯಿತು. ಎರಡನೇ ಎಸೆತ 82.39 ಮೀ., ಮೂರನೇ ಎಸೆತ 86.37 ಮೀ. ಮತ್ತು ನಾಲ್ಕನೇ ಎಸೆತ 88.13 ಎಸೆದು ಬೆಳ್ಳಿ ಪದಕ ಗೆದ್ದರು. ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ವಿಜೇತ ಜಾಕುಬ್ ವಡ್ಲೆಜ್ ಮೂರನೇ ಸ್ಥಾನ ಪಡೆದು ಕಂಚಿನ ಪದಕ ಪಡೆದರು.

    ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಪಡೆದು ಇತಿಹಾಸ ನಿರ್ಮಿಸಿದ್ದ ನೀರಜ್ ಚೋಪ್ರಾ, ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ 88.39 ಮೀ. ಎಸೆದು ಫೈನಲ್‍ಗೆ ಎಂಟ್ರಿಕೊಟ್ಟಿದ್ದರು. ಫೈನಲ್‍ನಲ್ಲಿ ಬೆಳ್ಳಿಗೆದ್ದು 39 ವರ್ಷಗಳ ಇತಿಹಾಸ ಹೊಂದಿರುವ ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಭಾರತಕ್ಕೆ 2ನೇ ಪದಕ ತಂದುಕೊಟ್ಟರು. 2003ರಲ್ಲಿ ಪ್ಯಾರಿಸ್‍ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಲಾಂಗ್ ಜಂಪರ್ ಅಂಜು ಬಾಬಿ ಜಾರ್ಜ್ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದರು. ಆ ಬಳಿಕ ಇದೀಗ ನೀರಜ್ ಚೋಪ್ರಾ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ – ಫೈನಲ್‍ಗೆ ಲಗ್ಗೆ ಇಟ್ಟ ಎಲ್ದೋಸ್ ಪಾಲ್, ರೋಹಿತ್ ಯಾದವ್

    ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ – ಫೈನಲ್‍ಗೆ ಲಗ್ಗೆ ಇಟ್ಟ ಎಲ್ದೋಸ್ ಪಾಲ್, ರೋಹಿತ್ ಯಾದವ್

    ವಾಷಿಂಗ್ಟನ್: ಅಮೆರಿಕದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೇಟಿಕ್ಸ್‌ ಚಾಂಪಿಯನ್‍ಶಿಪ್‍ನಲ್ಲಿ ಭಾರತೀಯ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಪುರುಷರ ಟ್ರಿಪಲ್ ಜಂಪ್‍ನಲ್ಲಿ ಎಲ್ಡೋಸ್ ಪಾಲ್ ಮತ್ತು ಜಾವೆಲಿನ್ ಥ್ರೋನಲ್ಲಿ ರೋಹಿತ್ ಯಾದವ್ ಫೈನಲ್‍ಗೆ ಲಗ್ಗೆ ಇಟ್ಟಿದ್ದಾರೆ.

    ಟ್ರಿಪಲ್ ಜಂಪ್‍ನಲ್ಲಿ ಎಲ್ಡೋಸ್ ಪಾಲ್ 16.68 ಮೀ. ಹಾರುವ ಮೂಲಕ ಫೈನಲ್‍ಗೆ ಗ್ರೂಪ್ A ವಿಭಾಗದಲ್ಲಿ 6ನೇ ಸ್ಪರ್ಧಿಯಾಗಿ ಎಂಟ್ರಿಕೊಟ್ಟರೆ, ಜಾವಲಿನ್ ಥ್ರೋನಲ್ಲಿ ರೋಹಿತ್ ಯಾದವ್ 80.42 ಮೀ. ಎಸೆದು ಗ್ರೂಪ್ B ವಿಭಾಗದಲ್ಲಿ 6ನೇ ಸ್ಪರ್ಧಿಯಾಗಿ ಫೈನಲ್‍ಗೆ ತೇರ್ಗಡೆಗೊಂಡಿದ್ದಾರೆ. ಇದನ್ನೂ ಓದಿ: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್- ಫೈನಲ್‌ಗೆ ನೀರಜ್ ಚೋಪ್ರಾ

    ಈ ಮೊದಲು ಜಾವೆಲಿನ್ ಎಸೆತದಲ್ಲಿ ಒಲಿಂಪಿಕ್ಸ್‌ನ ಚಿನ್ನದ ಹುಡುಗ ನೀರಜ್ ಚೋಪ್ರಾ 88.39 ಮೀ. ಎಸೆದು ಕೂಟದ ಗ್ರೂಪ್ A ವಿಭಾಗದಲ್ಲಿ ಮೊದಲನೇ ಸ್ಪರ್ಧಿಯಾಗಿ ಫೈನಲ್‍ಗೆ ಎಂಟ್ರಿಕೊಟ್ಟಿದ್ದರು. ಈ ಮೂಲಕ ವಿಶ್ವ ಅಥ್ಲೇಟಿಕ್ಸ್‌ ಚಾಂಪಿಯನ್‍ಶಿಪ್‍ನಲ್ಲಿ ಒಂದೇ ದಿನ ಭಾರತದ ಮೂವರು ಆಟಗಾರರು ಫೈನಲ್‍ಗೆ ಲಗ್ಗೆ ಇಟ್ಟು ಪದಕ ನಿರೀಕ್ಷೆ ಹುಟ್ಟಿಸಿದ್ದಾರೆ. ಇದನ್ನೂ ಓದಿ: ರಾಹುಲ್‍ಗೆ ಕೊರೊನಾ ಪಾಸಿಟಿವ್ – ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಿಂದ ಔಟ್?

    39 ವರ್ಷಗಳ ಇತಿಹಾಸ ಹೊಂದಿರುವ ವಿಶ್ವ ಅಥ್ಲೇಟಿಕ್ಸ್‌ ಚಾಂಪಿಯನ್‍ಶಿಪ್‍ನಲ್ಲಿ ಭಾರತ ಪದಕ ಗೆದ್ದಿದ್ದು 1 ಬಾರಿ ಮಾತ್ರ 2003ರಲ್ಲಿ ಪ್ಯಾರಿಸ್‍ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಲಾಂಗ್ ಜಂಪರ್ ಅಂಜು ಬಾಬಿ ಜಾರ್ಜ್ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದರು. ಆ ಬಳಿಕ ಇದೀಗ ಮತ್ತೆ ಭಾರತದ ಕ್ರೀಡಾಪಟುಗಳು ವಿಶ್ವ ಅಥ್ಲೇಟಿಕ್ಸ್‌ ಚಾಂಪಿಯನ್‍ಶಿಪ್‍ನಲ್ಲಿ ಪದಕ ಗೆಲ್ಲುವ ನಿರೀಕ್ಷೆ ಮೂಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]