Tag: ವಿಶ್ವ ಆರ್ಥಿಕ ಶೃಂಗಸಭೆ

  • ಸದ್ಗುರು ಜೊತೆ ಮಂಡಿ ನೋವಿನ ಬಗ್ಗೆ ಹೇಳಿಕೊಂಡ ಸಿಎಂ

    ಸದ್ಗುರು ಜೊತೆ ಮಂಡಿ ನೋವಿನ ಬಗ್ಗೆ ಹೇಳಿಕೊಂಡ ಸಿಎಂ

    ಬರ್ನ್: ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಬಸವರಾಜ ಬೊಮ್ಮಾಯಿ ತೆರಳಿದ್ದಾರೆ. ಈ ವೇಳೆ ಬೊಮ್ಮಾಯಿ ಸದ್ಗುರು ಜಗ್ಗಿ ವಾಸುದೇವ್ ಅವರನ್ನು ಭೇಟಿ ಮಾಡಿದರು.

    ಹವಾಮಾನ ಬದಲಾವಣೆ ಹಾಗೂ ಪರಿಸರ ಮಾಲಿನ್ಯ ಕುರಿತ ಗೋಷ್ಠಿಗೂ ಮುನ್ನ ಸದ್ಗುರು ಬೊಮ್ಮಾಯಿಯವರನ್ನು ಭೇಟಿ ಮಾಡಿದರು. ಸಿಎಂ ನಡೆದು ಬರುತ್ತಿದ್ದುದನ್ನು ನೋಡಿ ಸದ್ಗುರು ಏನಾಗಿದೆ ಎಂದು ವಿಚಾರಿಸಿದರು. ಈ ವೇಳೆ ಬೊಮ್ಮಾಯಿ ತಮ್ಮ ಮಂಡಿ ನೋವಿನ ಸಮಸ್ಯೆ ಬಗ್ಗೆ ಜಗ್ಗಿ ವಾಸುದೇವ್ ಬಳಿ ಹೇಳಿಕೊಂಡರು. ಇದನ್ನೂ ಓದಿ: ಪರಿಷತ್‌ ಚುನಾವಣೆ – ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ, ಕಾಂಗ್ರೆಸ್-ಬಿಜೆಪಿಯಲ್ಲಿ ಇನ್ನೂ ಅಂತಿಮವಾಗದ ಅಭ್ಯರ್ಥಿಗಳು

    ಶೃಂಗಸಭೆಯಲ್ಲಿ ಸಿಎಂ ಬೊಮ್ಮಾಯಿ ನೀಲಿ ಬಣ್ಣದ ಸೂಟ್ ಧರಿಸಿ ಮಿಂಚಿದ್ದಾರೆ. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೈಗಾರಿಕಾ ಇಲಾಖೆ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣ ರೆಡ್ಡಿ ಹಾಗೂ ಸಿಎಂ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಸಿಎಂಗೆ ಸಾತ್ ನೀಡಿದ್ದಾರೆ. ಇದನ್ನೂ ಓದಿ: ಕುವೆಂಪು, ನಾಡಗೀತೆಗೆ ಅವಮಾನ- ರೋಹಿತ್ ಚಕ್ರತೀರ್ಥರ ಮೇಲೆ ಮುಗಿಬಿದ್ದ ಕಾಂಗ್ರೆಸ್

    ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾರತವನ್ನು ಬಸವರಾಜ ಬೊಮ್ಮಾಯಿ ಪ್ರತಿನಿಧಿಸುತ್ತಿದ್ದಾರೆ. ಸಿಎಂ ಜೊತೆ 8 ಜನರ ತಂಡ ದಾವೋಸ್‌ಗೆ ತೆರಳಿದ್ದು, ಸಿಎಂ ಆದ ಬಳಿಕ ಬೊಮ್ಮಾಯಿಯವರಿಗೆ ಇದು ಮೊದಲ ವಿದೇಶ ಪ್ರವಾಸವಾಗಿದೆ.

  • ದಾವೋಸ್‍ನಲ್ಲಿ ವಿಶ್ವ ಆರ್ಥಿಕ ಶೃಂಗಸಭೆ ಉದ್ಘಾಟನೆ- ಮೊದಲ ದಿನದಲ್ಲೇ ಭರ್ಜರಿ ಹೂಡಿಕೆ ಮಾತುಕತೆಗೆ ಸಿಎಂ ಚಾಲನೆ

    ದಾವೋಸ್‍ನಲ್ಲಿ ವಿಶ್ವ ಆರ್ಥಿಕ ಶೃಂಗಸಭೆ ಉದ್ಘಾಟನೆ- ಮೊದಲ ದಿನದಲ್ಲೇ ಭರ್ಜರಿ ಹೂಡಿಕೆ ಮಾತುಕತೆಗೆ ಸಿಎಂ ಚಾಲನೆ

    ದಾಮೋಸ್: ಸ್ವಿಟ್ಜರ್ಲೆಂಡ್‍ನ ದಾವೋಸ್‍ನಲ್ಲಿ ಇಂದಿನಿಂದ 4 ದಿನಗಳ ವಿಶ್ವ ಆರ್ಥಿಕ ಶೃಂಗ ಸಭೆಗೆ ಚಾಲನೆ ಕೊಡಲಾಯ್ತು. ಕರ್ನಾಟಕದಿಂದ ಈ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನಿಯೋಗ ಮೊದಲ ದಿನದಿಂದಲೇ ಜಾಗತಿಕ ಮಟ್ಟದ ಉದ್ಯಮಿಗಳ ಜೊತೆ ಯಶಸ್ವಿಯಾಗಿ ಹೂಡಿಕೆ ಕುರಿತು ಮಾತುಕತೆ ಆರಂಭಿಸಿತು. ಕರ್ನಾಟಕದಲ್ಲಿ ಸೆಂಟರ್ ಫಾರ್ ಇಂಟರ್ ನೆಟ್ ಆಫ್ ಎಥಿಕಲ್ ಥಿಂಗ್ಸ್ ಪ್ರಾರಂಭಿಸಲು ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ರಾಜ್ಯದಲ್ಲಿ ಹೂಡಿಕೆದಾರರಿಗೆ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ನಮ್ಮ ರಾಜ್ಯದ ನಿಯೋಗ ಪ್ರಮುಖ ಹೆಜ್ಜೆಯಿಟ್ಟಿದೆ.

    ದಾವೋಸ್‍ನಲ್ಲೇ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ನಲ್ಲಿ ಕರ್ನಾಟಕ ಪೆವಿಲಿಯನ್ ಉದ್ಘಾಟನೆ ಮಾಡಲಾಯಿತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮೂರಟ್ ಸಾನ್ಮೆಝ್ ಅವರು ಮಾತನಾಡುತ್ತ, ವ್ಯಾಪಾರ ವಹಿವಾಟಿನಲ್ಲಿ ನೈತಿಕತೆಯು ಕಡಿಮೆಯಾಗುತ್ತಿರುವ ಕುರಿತು ಹೂಡಿಕೆದಾರರು ಕಳವಳ ಹೊಂದಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರಗಳು ಸೆಂಟರ್ ಫಾರ್ ಇಂಟರ್ ನೆಟ್ ಆಫ್ ಎಥಿಕಲ್ ಥಿಂಗ್ಸ್ ಅನ್ನು ಪ್ರಾರಂಭಿಸುವ ಅಗತ್ಯವಿದೆ. ಕೃತಕ ಬುದ್ಧಿಮತ್ತೆಯ ದುರುಪಯೋಗ ತಡೆಯಲು ಈ ಕೇಂದ್ರ ಸಹಕಾರಿ ಎಂದು ವಿವರಿಸಿದರು. ಕರ್ನಾಟಕ ರಾಜ್ಯವು ಹೆಚ್ಚಿನ ಹೂಡಿಕೆಯನ್ನು ನಿರೀಕ್ಷಿಸುವುದಾದರೆ, ಈ ಕೇಂದ್ರವನ್ನು ಕೂಡಲೇ ಸ್ಥಾಪಿಸುವಂತೆ ಸಲಹೆ ನೀಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಕೇಂದ್ರವನ್ನು ಸ್ಥಾಪಿಸುವ ಭರವಸೆ ನೀಡಿದರು.

    ಕರ್ನಾಟಕ ಪೆವಿಲಿಯನ್ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಯವರು ಸುಲಲಿತ ವಹಿವಾಟು ನಡೆಸಲು ಸರ್ಕಾರ ಹೂಡಿಕೆದಾರರಿಗೆ ಎಲ್ಲ ರೀತಿಯ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಅಭಿವೃದ್ಧಿಯ ಕಾರ್ಯಸೂಚಿಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ತೊಡಗಿಸಿಕೊಳ್ಳಲು ರಾಜ್ಯ ಸರ್ಕಾರ ಉತ್ಸುಕವಾಗಿದ್ದು, ಜಾಗತಿಕ ಮಟ್ಟದಲ್ಲಿ ಕರ್ನಾಟಕ ಮುಂಚೂಣಿಗೆ ಬರಲು ನೆರವಾಗುವ ಅಧ್ಯಯನಗಳನ್ನು ಕೈಗೊಳ್ಳಲು ಆಸಕ್ತಿ ವಹಿಸಿದೆ ಎಂದು ತಿಳಿಸಿದರು.

    ಸುಸ್ಥಿರ ಕೈಗಾರಿಕೆಗಳನ್ನು ರೂಪಿಸುವ ಮೂಲಕ ಕರ್ನಾಟಕ ರಾಜ್ಯವು ವರ್ಲ್ಡ್ ಎಕನಾಮಿಕ್ ಫೋರಂ 2020ರ ಗುರಿ ಸಾಧನೆಗೆ ಸಕ್ರೀಯವಾಗಿ ಶ್ರಮಿಸಲಿದೆ. ಭಾರತದ ಪ್ರಮುಖ ಕೈಗಾರಿಕಾ ರಾಜ್ಯವಾಗಿ ಹೊರಹೊಮ್ಮುವ ಮೂಲಕ ಜಾಗತಿಕ ಮಟ್ಟದಲ್ಲಿಯೂ ಕೈಗಾರಿಕೆಗಳ ಅಭಿವೃದ್ಧಿಯಲ್ಲಿ ರಾಜ್ಯ ಪ್ರಮುಖ ಪಾತ್ರ ವಹಿಸಲಿದೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.

    ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣ ರೆಡ್ಡಿ, ಭಾರತ ಮತ್ತು ಏಷ್ಯಾ ಅಜೆಂಡಾದ ಪ್ರಾದೇಶಿಕ ಮುಖ್ಯಸ್ಥ ವಿರಾಜ್ ಮೆಹ್ತಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.