Tag: ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್

  • ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

    ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

    ಲಂಡನ್‌: ಐತಿಹಾಸಿಕ ಲಾರ್ಡ್ಸ್‌ ಕ್ರಿಕೆಟ್‌ ಅಂಗಳದಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್‌ (WTC 2025) ಫೈನಲ್‌ ಪಂದ್ಯದಲ್ಲಿ ಆಸೀಸ್‌ ವಿರುದ್ಧ ಗೆದ್ದು ದಕ್ಷಿಣ ಆಫ್ರಿಕಾ (South Africa) ತಂಡ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಈ ಮೂಲಕ 27 ವರ್ಷಗಳ ಬಳಿಕ ಚೋಕರ್ಸ್‌ ಹಣೆಪಟ್ಟ ಕಳಚಿದ್ದು, ಐಸಿಸಿ ಟ್ರೋಫಿ ಬರ ನೀಗಿಸಿಕೊಂಡಿದೆ. ಇದರೊಂದಿಗೆ ಐಸಿಸಿ (ICC) ಟೂರ್ನಿಯ ಫೈನಲ್‌ ಪಂದ್ಯಗಳಲ್ಲಿ ಸೋಲೇ ನೋಡದ ಸರದಾರರಿಗೂ ʻಲಾರ್ಡ್ಸ್‌ ಬವುಮಾʼ ತಂಡ ಸೋಲಿನ ರುಚಿ ತೋರಿಸಿದೆ.

    ಹೌದು. ಕಳೆದ ಒಂದು ದಶಕದಿಂದ ಫೈನಲ್​ನಲ್ಲಿ ಸೋಲು ಕಾಣದ ಜೋಶ್ ಹೇಜಲ್ವುಡ್‌ (Josh Hazlewood) ಹಾಗೂ ಮಿಚೆಲ್‌ ಸ್ಟಾರ್ಕ್‌ ಗೆಲುವಿನ ನಾಗಾಲೋಟಕ್ಕೆ ಕೊನೆಗೂ ಬ್ರೇಕ್‌ ಬಿದ್ದಿದೆ. ಇದನ್ನೂ ಓದಿ: ದ. ಆಫ್ರಿಕಾ ಈಗ ʻವಿಶ್ವ ಟೆಸ್ಟ್‌ ಚಾಂಪಿಯನ್‌ʼ – 27 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರ ನೀಗಿಸಿಕೊಂಡ ಹರಿಣರು

    ಹೇಜಲ್ವುಡ್‌ 2012ರಿಂದಲೂ ಫೈನಲ್‌ನಲ್ಲಿ ಒಂದೇ ಒಂದು ಬಾರಿಯೂ ಸೋತಿರಲಿಲ್ಲ ಅನ್ನೋದು ಗಮನಾರ್ಹ. 2012ರ ಚಾಂಪಿಯನ್ಸ್ ಲೀಗ್ ಟಿ20 ಟೂರ್ನಿಯಲ್ಲಿ ಸಿಡ್ನಿ ಸಿಕ್ಸರ್ಸ್ ಪರ ಫೈನಲ್ ಆಡಿದ್ದ ಹೇಜಲ್ವುಡ್‌ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ್ದರು. ಇದಾದ ಬಳಿಕ 2015 ರಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್​ ಫೈನಲ್​ನಲ್ಲಿ ಕಣಕ್ಕಿಳಿದಿದ್ದ ಜೋಶ್‌ ಆಸ್ಟ್ರೇಲಿಯಾ ತಂಡಕ್ಕೆ ಚಾಂಪಿಯನ್ ಪಟ್ಟ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

    ಇನ್ನೂ 2020ರ ಬಿಗ್ ಬ್ಯಾಷ್ ಲೀಗ್​ನಲ್ಲಿ ಸಿಡ್ನಿ ಸಿಕ್ಸರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದಾಗಲೂ ಜೋಶ್ ತಂಡದಲ್ಲಿದ್ದರು. ಹಾಗೆಯೇ 2021 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಐಪಿಎಲ್​ ಟ್ರೋಫಿ ಮುಡಿಗೇರಿಸಿದಾಗಲೂ ಹೇಝಲ್​ವುಡ್ ಪ್ಲೇಯಿಂಗ್‌-11ನಲ್ಲಿದ್ದರು. ಅದಾದ ಬಳಿಕ ಅದೇ ವರ್ಷ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ತಂಡ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಜೋಶ್ ಹೇಝಲ್​ವುಡ್ ಪ್ರಮುಖ ಪಾತ್ರವಹಿಸಿದ್ದರು. ಇದನ್ನೂ ಓದಿ: `ಬನ್ನಿ ಹಾಪ್ ಕ್ಯಾಚ್’ ರೂಲ್ಸ್‌ಗೆ ಐಸಿಸಿ ಬ್ರೇಕ್ – ಶೀಘ್ರವೇ ಹೊಸ ರೂಲ್ಸ್

    ಇನ್ನೂ 2023 ರಲ್ಲಿ ಆಸ್ಟ್ರೇಲಿಯಾ ತಂಡದ ಏಕದಿನ ವಿಶ್ವಕಪ್ ಗೆಲ್ಲುವಲ್ಲಿಯೂ ಹೇಜಲ್ವುಡ್‌ ಪಾತ್ರ ಅಪಾರವಾಗಿತ್ತು. ಅಷ್ಟೇ ಅಲ್ಲ 18 ವರ್ಷಗಳ ಬಳಿಕ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಚಾಂಪಿಯನ್‌ ಪಟ್ಟಕ್ಕೇರಿಸುವಲ್ಲಿ ಜೋಶ್‌ ನಿರ್ಣಾಯಕ ಪಾತ್ರ ವಹಿಸಿದ್ದರು. ಆರ್‌ಸಿಬಿ ಪರ ಅತಿಹೆಚ್ಚು ಹಾಗೂ ಟೂರ್ನಿಯಲ್ಲಿ ಅತಿಹೆಚ್ಚು ವಿಕೆಟ್‌ ಪಡೆದ 2ನೇ ಆಟಗಾರನಾಗಿದ್ದರು.

    ಹೀಗೆ ಕಳೆದ 1 ದಶಕದಿಂದ ಜೋಶ್ ಹೇಜಲ್ವುಡ್‌ ಫೈನಲ್‌ ಪಂದ್ಯಗಳಲ್ಲಿ ಸೋಲಿನ ರುಚಿ ನೋಡಿಯೇ ಇರಲಿಲ್ಲ. ಹೀಗಾಗಿಯೇ ಹೇಝಲ್​ವುಡ್ ಅವರನ್ನು ಅಂತಿಮ ಪಂದ್ಯದ ಲಕ್ಕಿ ಚಾರ್ಮ್​ ಎಂದು ಪರಿಗಣಿಸಲಾಗಿತ್ತು. ಅಲ್ಲದೇ ಮಿಚೆಲ್‌ ಸ್ಟಾರ್ಕ್‌ ಕೂಡ ಫೈನಲ್‌ ಪಂದ್ಯದಲ್ಲಿ ಸೋಲೇ ನೋಡದಿರುವುದು ಮತ್ತೊಂದು ವಿಶೇಷ ಎನಿಸಿತ್ತು. ಆದ್ರೆ ಈ ಬಾರಿ ಫೈನಲ್ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಬಿದ್ದಿದೆ. ಟೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫಿಕ್ರಾ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ ಕಿರೀಟಕ್ಕೆ ಮುತ್ತಿಟ್ಟಿದೆ.

    ಫೈನಲ್‌ ಪಂದ್ಯದಲ್ಲಿ ಗೆಲವಿಗೆ 282 ರನ್‌ ಗುರಿ ಪಡೆದ ಆಫ್ರಿಕಾ 5 ವಿಕೆಟ್‌ಗಳ ಗೆಲುವು ಸಾಧಿಸಿದೆ. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಆರ್‌ಸಿಬಿ ಮಾರ್ಕೆಟಿಂಗ್‌ ಹೆಡ್‌ ಸೇರಿ ನಾಲ್ವರಿಗೆ ಷರತ್ತುಬದ್ಧ ಜಾಮೀನು

  • ಪಾಕ್‌ ವಿರುದ್ಧ ರೋಚಕ ಜಯ – WTC ಫೈನಲ್‌ಗೆ ದ.ಆಫ್ರಿಕಾ, ಭಾರತಕ್ಕೆ ಗೆಲುವೊಂದೇ ದಾರಿ

    ಪಾಕ್‌ ವಿರುದ್ಧ ರೋಚಕ ಜಯ – WTC ಫೈನಲ್‌ಗೆ ದ.ಆಫ್ರಿಕಾ, ಭಾರತಕ್ಕೆ ಗೆಲುವೊಂದೇ ದಾರಿ

    ಸೆಂಚುರಿಯನ್: ಇಲ್ಲಿ ನಡೆಯುತ್ತಿರುವ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲೇ ಪಾಕಿಸ್ತಾನ ಕ್ರಿಕೆಟ್‌ ತಂಡದ ವಿರುದ್ಧ 2 ವಿಕೆಟ್‌ಗಳ ರೋಚಕ ಗೆಲುವು ಸಾಧಿಸುವ ಮೂಲಕ ದಕ್ಷಿಣ ಆಫ್ರಿಕಾ (South Africa) 3ನೇ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ ಫೈನಲ್‌ಗೆ (WTC Final) ಅಧಿಕೃತವಾಗಿ ಪ್ರವೇಶಿಸಿದೆ.

    ಇನ್ನೂ 2ನೇ ತಂಡವಾಗಿ ಫೈನಲ್‌ ಪ್ರವೇಶಿಸಲು ಭಾರತ, ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇದನ್ನೂ ಓದಿ: ಐಸಿಸಿ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿ – ರೇಸ್‌ನಲ್ಲಿರುವ ನಾಲ್ವರ ಪೈಕಿ ಭಾರತದ ಅರ್ಷ್‌ದೀಪ್‌ಗೆ ಸ್ಥಾನ!

    ಎರಡು ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ 148 ರನ್‌ಗಳ ಸಾಧಾರಣ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 8 ವಿಕೆಟ್ ಕಳೆದುಕೊಂಡು ರೋಚಕ ಜಯ ದಾಖಲಿಸಿದೆ. ಈ ಮೂಲಕ ಫೈನಲ್‌ಗೆ ನೇರವಾಗಿ ಪ್ರವೇಶ ಪಡೆಯಿತು.

    ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಆವೃತ್ತಿಯಲ್ಲಿ ದಕ್ಷಿಣ ಆಫ್ರಿಕಾ ಈವರೆಗೆ 11 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಏಳು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಮೂರು ಪಂದ್ಯಗಳಲ್ಲಿ ಸೋತಿದೆ. ಒಂದು ಪಂದ್ಯ ಡ್ರಾ ಅಂತ್ಯವಾಗಿದೆ. ಇದನ್ನೂ ಓದಿ: ದಿನದ ಕೊನೇ ಓವರ್‌ನಲ್ಲಿ ನೋಬಾಲ್‌ ಎಡವಟ್ಟು – ರೋಚಕ ಘಟಕ್ಕೆ ಬಾಕ್ಸಿಂಗ್‌ ಡೇ ಟೆಸ್ಟ್‌; ಆಸೀಸ್‌ಗೆ 333 ರನ್‌ ಮುನ್ನಡೆ

    ಇದೀಗ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಸರಾಸರಿ 66.67 ಅಂಕದೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಇನ್ನುಳಿದಂತೆ ಆಸ್ಟ್ರೇಲಿಯಾ 58.89 ಹಾಗೂ ಭಾರತ 55.88 ಸರಾಸರಿ ಅಂಕಗಳೊಂದಿಗೆ ಕ್ರಮವಾಗಿ 2 ಮತ್ತು 3ನೇ ಸ್ಥಾನಗಳಲ್ಲಿವೆ. ಟೀಂ ಇಂಡಿಯಾ ಡಬ್ಲ್ಯೂಟಿಸಿ ಫೈನಲ್‌ ಪಂದ್ಯವನ್ನು ಪ್ರವೇಶಿಸಲು ಆಸೀಸ್‌ ವಿರುದ್ಧ ಗೆಲುವು ನಿರ್ಣಾಯಕವಾಗಿದೆ.

    ಮುಂದಿನ ವರ್ಷ ಇಂಗ್ಲೆಂಡ್‌ನ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಇದನ್ನೂ ಓದಿ: ಟೆಸ್ಟ್‌ ಕ್ರಿಕೆಟ್‌ನಲ್ಲಿ 200 ವಿಕೆಟ್‌ ಕಬಳಿಸಿ ಹೊಸ ದಾಖಲೆ ಬರೆದ ಬೂಮ್ರಾ

    ದಕ್ಷಿಣ ಆಫ್ರಿಕಾ ಸಾಧನೆ
    2023ರಲ್ಲಿ ಮಹಿಳಾ ಟಿ20 ವಿಶ್ವಕಪ್- ಫೈನಲ್.
    2023ರಲ್ಲಿ ಪುರುಷರ ವಿಶ್ವಕಪ್ – ಸೆಮಿಫೈನಲ್.
    2024ರಲ್ಲಿ ಪುರುಷರ T20 ವಿಶ್ವಕಪ್ – ಫೈನಲ್.
    2024ರಲ್ಲಿ ಮಹಿಳಾ T20 ವಿಶ್ವಕಪ್ – ಫೈನಲ್.
    2025ರಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ – ಫೈನಲ್

  • ಭಾರತ-ಬಾಂಗ್ಲಾ ಟೆಸ್ಟ್ ಸರಣಿ: 5 ದಾಖಲೆಗಳನ್ನು ಮುರಿದು ಹೊಸ ದಾಖಲೆ ನಿರ್ಮಿಸ್ತಾರಾ ಅಶ್ವಿನ್?

    ಭಾರತ-ಬಾಂಗ್ಲಾ ಟೆಸ್ಟ್ ಸರಣಿ: 5 ದಾಖಲೆಗಳನ್ನು ಮುರಿದು ಹೊಸ ದಾಖಲೆ ನಿರ್ಮಿಸ್ತಾರಾ ಅಶ್ವಿನ್?

    ಚೆನ್ನೈ: ಸೆ.19ರಂದು ಪ್ರಾರಂಭವಾಗಲಿರುವ ಬಾಂಗ್ಲಾ-ಭಾರತ ನಡುವಿನ ಟೆಸ್ಟ್ ಚಾಂಪಿಯನ್‌ಶಿಪ್‌ನ (Test Championship) ಎರಡು ಪಂದ್ಯಗಳಲ್ಲಿ ಅದೃಷ್ಟ ಇದ್ದರೆ ವಿಶ್ವದ ನಂ.1 ಟೆಸ್ಟ್ ಬೌಲರ್ ಆರ್.ಅಶ್ವಿನ್ (R.Ashwin) 5 ದಾಖಲೆ ನಿರ್ಮಿಸಬಹುದು.

    ಮೊದಲ ಪಂದ್ಯ ಅಶ್ವಿನ್ ತವರೂರಾದ ಚೆನ್ನೈನ ಎಮ್‌ಎ ಚಿದಂಬರಂ ಕ್ರೀಡಾಂಗಣದಲ್ಲಿ (MA Chidambaram Stadium) ನಡೆಯಲಿದ್ದರೆ, ಎರಡನೇ ಪಂದ್ಯ ಸೆ.27ರಂದು ಉತ್ತರಪ್ರದೇಶದ ಕಾನ್ಪುರದ ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ (Green Park Stadium) ನಡೆಯಲಿದೆ.

    ಸೆ.17ರಂದು ತಮ್ಮ 38ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿರುವ ಅಶ್ವಿನ್, ಈ ವರ್ಷದ ಆರಂಭದಲ್ಲಿ ಇಂಗ್ಲೆಂಡ್ ವಿರುದ್ಧ ಆಡಿದ ಪಂದ್ಯದಲ್ಲಿ ಅಶ್ವಿನ್ ಅತೀ ಹೆಚ್ಚು ವಿಕೆಟ್ ಪಡೆದುಕೊಂಡಿದ್ದರು.ಇದನ್ನೂ ಓದಿ: Fifth And Final Call | ಮಾತುಕತೆಗಾಗಿ ಪ್ರತಿಭಟನಾನಿರತ ವೈದ್ಯರಿಗೆ ಅಂತಿಮ ಆಹ್ವಾನ ಕೊಟ್ಟ ದೀದಿ

    ಆ ಐದು ದಾಖಲೆಗಳೇನು?
    1. ಡಬ್ಲ್ಯೂಟಿಸಿಯಲ್ಲಿ ಅತೀ ಹೆಚ್ಚು ವಿಕೆಟ್:
    ಸದ್ಯ ಅಶ್ವಿನ್ ತಮ್ಮ ಹೆಸರಲ್ಲಿ 174 ವಿಕೆಟ್‌ಗಳನ್ನು ಹೊಂದಿದ್ದಾರೆ. ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ನಥಾನ್ ಲಿಯಾನ್‌ರವರ (Nathan Lyon) ಹೆಸರಿನಲ್ಲಿ 187 ವಿಕೆಟ್‌ಗಳಿವೆ. ಅಶ್ವಿನ್ 14 ವಿಕೆಟ್‌ಗಳನ್ನು ಈ ಎರಡು ಪಂದ್ಯಗಳಲ್ಲಿ ಪಡೆದರೆ ಡಬ್ಲ್ಯೂಟಿಸಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ ಎನಿಸಿಕೊಳ್ಳಲಿದ್ದಾರೆ.

    2. 2023-25ರವರೆಗೆ ನಡೆಯಲಿರುವ ಡಬ್ಲ್ಯೂಟಿಸಿಯಲ್ಲಿ ಅತೀ ಹೆಚ್ಚು ವಿಕೆಟ್
    ಆಸ್ಟ್ರೇಲಿಯಾದ ಜೋಶ್ ಹೇಜಲ್‌ವುಡ್ (Josh Hazlewood) 51 ವಿಕೆಟ್‌ಗಳನ್ನು ಪಡೆದಿದ್ದು ಅಶ್ವಿನ್ 42 ವಿಕೆಟ್‌ಗಳನ್ನು ಹೊಂದಿದ್ದಾರೆ. ಈ ಎರಡು ಪಂದ್ಯದಲ್ಲಿ 10 ವಿಕೆಟ್ ತಮ್ಮದಾಗಿಸಿಕೊಂಡರೆ ಅಗ್ರ ಸ್ಥಾನಕ್ಕೇರಲಿದ್ದಾರೆ.

    3. ಅತಿಹೆಚ್ಚು ಬಾರಿ 5 ವಿಕೆಟ್ ದಾಖಲೆಗೆ ಒಂದೇ ಹೆಜ್ಜೆ:
    ಅಶ್ವಿನ್ ಈವರೆಗೆ ಆಡಿರುವ 34 ಪಂದ್ಯಗಳಲ್ಲಿ 10 ಬಾರಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಅಲ್ಲದೇ ಆಸೀಸ್ ಕ್ರಿಕೆಟಿಗ ನಥಾನ್ ಲಿಯಾನ್ ಸಹ ಇದೇ ಸಾಧನೆ ಮಾಡಿದ್ದು, ಜಂಟಿಯಾಗಿ ಇಬ್ಬರೂ ಮೊದಲ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಸದ್ಯ ಬಾಂಗ್ಲಾದೇಶದ ವಿರುದ್ಧ ನಡೆಯಲಿರುವ 2 ಟೆಸ್ಟ್ ಪಂದ್ಯಗಳ ಪೈಕಿ ಕನಿಷ್ಠ 1 ಇನ್ನಿಂಗ್ಸ್ನಲ್ಲಿ 5 ವಿಕೆಟ್ ಪಡೆದರೆ, ಅತಿಹೆಚ್ಚು ಬಾರಿ 5 ವಿಕೆಟ್ ಗೊಂಚಲು ಪಡೆದ ಆಟಗಾರನಾಗಿ ಹೊರಹೊಮ್ಮಲಿದ್ದಾರೆ.

    4.ಭಾರತ-ಬಾಂಗ್ಲಾ ನಡುವೆ ಅತಿ ಹೆಚ್ಚು ವಿಕೆಟ್:
    ಇಲ್ಲಿಯವರೆಗೂ ಬಾಂಗ್ಲಾ ವಿರುದ್ಧದ 6 ವಿಶ್ಚ ಟೆಸ್ಟ್ ಸರಣಿಯಲ್ಲಿ ಒಟ್ಟು 23 ವಿಕೆಟ್‌ಗಳನ್ನು ಪಡೆದಿರುವ ಅಶ್ವಿನ್, 31 ವಿಕೆಟ್ ಪಡೆದಿರುವ ಜಹೀರ್ ಖಾನ್ ಅವರ ದಾಖಲೆ ಮುರಿಯಲು 9 ವಿಕೆಟ್‌ಗಳ ಅಗತ್ಯವಿದೆ.ಇದನ್ನೂ ಓದಿ: ಬ್ರೇಕ್ ಫೇಲ್ ಆಗಿ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ – ಓರ್ವ ಸಾವು, ಮತ್ತೊಬ್ಬ ಗಂಭೀರ

    5. ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಆಟಗಾರ:
    126 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಇಲ್ಲಿಯವಗೂ ಅಶ್ವಿನ್ ಒಟ್ಟು 455 ವಿಕೆಟ್‌ಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 476 ವಿಕೆಟ್ ಗಳಿಸುವ ಮೂಲಕ ಅಗ್ರ ಸ್ಥಾನದಲ್ಲಿರುವ ಅನಿಲ್ ಕುಂಬ್ಳೆ (Anil Kumble) ಅವರ ದಾಖಲೆ ಮುರಿಯಲು ಅಶ್ವಿನ್ 22 ವಿಕೆಟ್ ಅಗತ್ಯವಿದೆ.

  • WTC ಅಂಕಪಟ್ಟಿಯಲ್ಲಿ ಭಾರತ ಮತ್ತೆ ನಂ.1 – 2ನೇ ಸ್ಥಾನಕ್ಕೆ ಕುಸಿದ ಆಸೀಸ್‌

    WTC ಅಂಕಪಟ್ಟಿಯಲ್ಲಿ ಭಾರತ ಮತ್ತೆ ನಂ.1 – 2ನೇ ಸ್ಥಾನಕ್ಕೆ ಕುಸಿದ ಆಸೀಸ್‌

    ಮುಂಬೈ: ರೋಹಿತ್‌ ಶರ್ಮಾ ನಾಯಕತ್ವದ ಟೀಂ ಇಂಡಿಯಾ (Team India) ಮತ್ತೊಮ್ಮೆ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ (WTC) ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಜಿಗಿದಿದೆ. ಬಲಿಷ್ಠ ಆಸ್ಟ್ರೇಲಿಯಾ (Australia) ತಂಡವನ್ನು ಹಿಂದಿಕ್ಕಿ ನಂ.1 ಪಟ್ಟ ಗಿಟ್ಟಿಸಿಕೊಂಡಿದೆ.

    ಕಳೆದ ಮಾರ್ಚ್‌ನಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್‌ (England) ವಿರುದ್ಧ 5 ಪಂದ್ಯಗಳ ಟೆಸ್ಟ್‌ ಸರಣಿಯನ್ನು 4-1 ಅಂತರದಲ್ಲಿ ಗೆದ್ದುಕೊಂಡಿತ್ತು. ಆ ಬಳಿಕ ಯಾವುದೇ ಟೆಸ್ಟ್‌ ಸರಣಿ ಆಡದಿದ್ದರೂ ಭಾರತ ನಂ.1 ಪಟ್ಟಕ್ಕೇರಿದೆ. ಇದನ್ನೂ ಓದಿ: ದ್ರಾವಿಡ್ ಪುತ್ರನ ಸಿಕ್ಸ್ – ವಿಡಿಯೋ ವೈರಲ್‌, ಅಭಿಮಾನಿಗಳ ಮೆಚ್ಚುಗೆ

    2023-25ನೇ ಆವೃತ್ತಿಯ ವಿಶ್ವಟೆಸ್ಟ್‌ ಚಾಂಪಿಯನ್‌ ಶಿಪ್‌ ಆವೃತ್ತಿಯಲ್ಲಿ ಭಾರತ ಆಡಿರುವ 9 ಪಂದ್ಯಗಳಲ್ಲಿ 6ರಲ್ಲಿ ಗೆಲುವು ಸಾಧಿಸಿ 74 ಅಂಕ ಗಳಿಸಿದೆ. ಆಸೀಸ್‌ ತಂಡ 12 ಪಂದ್ಯಗಳ ಪೈಕಿ 8 ರಲ್ಲಿ ಗೆಲುವು ಸಾಧಿಸಿ 90 ಅಂಕ ಗಳಿಸಿದ್ದರೂ 62.50 ಪಿಟಿಸಿ (Percentage Of Points Earned) ಇರುವುದರಿಂದ 2ನೇ ಸ್ಥಾನಕ್ಕೆ ಕುಸಿದಿದೆ. ಇನ್ನುಳಿದಂತೆ ನ್ಯೂಜಿಲೆಂಡ್‌ (50 ಪಿಟಿಸಿ), ಶ್ರೀಲಂಕಾ (50 ಪಿಟಿಸಿ), ದಕ್ಷಿಣ ಆಫ್ರಿಕಾ (38.89 ಪಿಟಿಸಿ) ಕ್ರಮವಾಗಿ 3, 4 ಮತ್ತು 5ನೇ ಸ್ಥಾನಗಳಲ್ಲಿವೆ.

    WTC ಅಂಕಪಟ್ಟಿಯ ಟಾಪ್‌-5 ತಂಡಗಳು ಯಾವುವು?
    ಭಾರತ – 68.51 ಪಿಟಿಸಿ
    ಆಸ್ಟ್ರೇಲಿಯಾ – 62.50 ಪಿಟಿಸಿ
    ನ್ಯೂಜಿಲೆಂಡ್‌ – 50 ಪಿಟಿಸಿ
    ಶ್ರೀಲಂಕಾ – 50 ಪಿಟಿಸಿ
    ದಕ್ಷಿಣ ಆಫ್ರಿಕಾ – 38.89 ಪಿಟಿಸಿ

    ಐಸಿಸಿ ಟೀಂ ರ‍್ಯಾಂಕಿಂಗ್‌ನಲ್ಲಿ ಏರಿಳಿತ:
    ಕಳೆದ ವರ್ಷ ಐಸಿಸಿ ಟೆಸ್ಟ್‌, ಏಕದಿನ ಹಾಗೂ ಟಿ20 ರ‍್ಯಾಂಕಿಂಗ್‌ನಲ್ಲಿ ಮೂರು ಮಾದರಿಗಳಲ್ಲೂ ನಂ.1 ಸ್ಥಾನದಲ್ಲಿದ್ದ ಭಾರತ ಪ್ರಸಕ್ತ ವರ್ಷದಲ್ಲಿ ಏರಿಳಿತ ಕಂಡಿದೆ. ಐಸಿಸಿ ಟೆಸ್ಟ್‌ ರ‍್ಯಾಂಕಿಂಗ್‌ನಲ್ಲಿ 120 ಅಂಕ ಗಳಿಸಿ 2ನೇ ಸ್ಥಾನದಲ್ಲಿದ್ದರೆ, ಏಕದಿನ ಹಾಗೂ ಟಿ20 ಮಾದರಿಯಲ್ಲಿ ಕ್ರಮವಾಗಿ 118 ಹಾಗೂ 267 ಅಂಕ ಗಳಿಸಿ ಮೊದಲ ಸ್ಥಾನದಲ್ಲಿದೆ. ಇದನ್ನೂ ಓದಿ: ಭಾರತಕ್ಕೆ ಮರಳಿದ ವಿನೇಶ್‌ ಫೋಗಟ್‌ಗೆ ಅದ್ಧೂರಿ ಸ್ವಾಗತ

    ಸತತ 2 ಬಾರಿ ಫೈನಲ್‌ನಲ್ಲಿ ಭಾರತಕ್ಕೆ ಸೋಲು:
    2019ರಲ್ಲಿ ಆರಂಭಗೊಂಡ ವಿಶ್ವಟೆಸ್ಟ್‌ ಚಾಂಪಿಯನ್‌ಶಿಪ್‌ನ ಮೊದಲ ಆವೃತ್ತಿಯಲ್ಲೇ ನ್ಯೂಜಿಲೆಂಡ್‌ (New Zealand) ತಂಡ ಭಾರತದ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. 2ನೇ ಆವೃತ್ತಿಯಲ್ಲಿ ಆಸೀಸ್‌ ಬೌಲರ್‌ಗಳ ದಾಳಿಗೆ ತುತ್ತಾದ ಭಾರತ ಮತ್ತೊಮ್ಮೆ 209 ರನ್‌ಗಳ ಹೀನಾಯ ಸೋಲನುಭವಿಸಿತ್ತು. ಈ ಮೂಲಕ ಸತತ 2 ಆವೃತ್ತಿಗಳಲ್ಲೂ ಭಾರತ ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು. ಇದನ್ನೂ ಓದಿ: ಫ್ಯಾನ್ಸ್‌ಗೆ ಶಾಕ್ ಕೊಟ್ಟ ಆರ್‌ಸಿಬಿ – ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್ ಔಟ್?

    2023ರ WTC ಫೈನಲ್‌ ಪಂದ್ಯದ ಸಂಕ್ಷಿಪ್ತ ಸ್ಕೋರ್‌
    ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌: 469/10
    ಭಾರತ ಮೊದಲ ಇನ್ನಿಂಗ್ಸ್‌: 296/10
    ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್‌: 270/8d
    ಭಾರತ ಎರಡನೇ ಇನ್ನಿಂಗ್ಸ್‌: 234/10

  • ವಿಶ್ವಟೆಸ್ಟ್‌ ಚಾಂಪಿಯನ್‌ಶಿಪ್‌ ಪಾಯಿಂಟ್ಸ್‌ ಪಟ್ಟಿಯಲ್ಲಿ ನಂ.1 ಪಟ್ಟಕ್ಕೇರಿದ ಭಾರತ!

    ವಿಶ್ವಟೆಸ್ಟ್‌ ಚಾಂಪಿಯನ್‌ಶಿಪ್‌ ಪಾಯಿಂಟ್ಸ್‌ ಪಟ್ಟಿಯಲ್ಲಿ ನಂ.1 ಪಟ್ಟಕ್ಕೇರಿದ ಭಾರತ!

    ಕೇಪ್‌ಟೌನ್‌: ದಕ್ಷಿಣ ಆಫ್ರಿಕಾ (South Africa) ವಿರುದ್ಧ ಗುರುವಾರ ನಡೆದ ಅಂತಿಮ ಟೆಸ್ಟ್‌ ಪಂದ್ಯದ ಬಳಿಕ ಟೀಂ ಇಂಡಿಯಾ ವಿಶ್ವಟೆಸ್ಟ್‌ ಚಾಂಪಿಯನ್‌ಶಿಪ್‌ನ ಪಾಯಿಂಟ್ಸ್‌ (WTC Points) ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಜಿಗಿದಿದೆ.

    2019-2023ರ ಆವೃತ್ತಿಯ ಫೈನಲ್‌ ಪಂದ್ಯದಲ್ಲಿ ಆಸೀಸ್‌ ವಿರುದ್ಧ ಹೀನಾಯವಾಗಿ ಸೋತಿದ್ದ ಭಾರತ (Team India) ಸತತ 2ನೇ ಬಾರಿಗೆ ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು. ಇದೀಗ 3ನೇ ಆವೃತ್ತಿಗೆ ಸಜ್ಜಾಗಿರುವ ಭಾರತ ಈಗಾಗಲೇ ನಂ.1ಪಟ್ಟಕ್ಕೆ ಜಿಗಿದಿದೆ. ಅಂತಿಮವಾಗಿ ಮೊದಲ ಎರಡು ಸ್ಥಾನಗಳಲ್ಲಿ ಬರುವ ತಂಡಗಳು ಫೈನಲ್ ‌ಪ್ರವೇಶಿಸಲಿವೆ. ಇದನ್ನೂ ಓದಿ: ಎರಡೇ ದಿನಗಳಿಗೆ 33 ವಿಕೆಟ್‌ ಉಡೀಸ್‌; ಹರಿಣರ ನೆಲದಲ್ಲಿ ಭಾರತಕ್ಕೆ ಐತಿಹಾಸಿಕ ಜಯ – ಸರಣಿ ಸಮಬಲ

    ಕಳೆದ ವರ್ಷ ವೆಸ್ಟ್‌ ಇಂಡೀಸ್‌ ವಿರುದ್ಧ 2 ಪಂದ್ಯಗಳ ಟೆಸ್ಟ್‌ ಸರಣಿಯನ್ನಾಡುವ ಮೂಲಕ ತನ್ನ ಸರದಿ ಆರಂಭಿಸಿತು. ವೆಸ್ಟ್‌ ಇಂಡೀಸ್‌ ವಿರುದ್ಧ 2 ಟೆಸ್ಟ್‌ನಲ್ಲಿ ಗೆಲುವು ಸಾಧಿಸಿ ಸರಣಿ ಕೈವಶ ಮಾಡಿಕೊಂಡಿದ್ದ ಭಾರತ ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಗೆಲುವನ್ನು ಹಂಚಿಕೊಂಡಿದೆ. ಈ ಮೂಲಕ 26 ಅಂಕಗಳು 54.16 ಪಿಸಿಟಿಯೊಂದಿಗೆ (Percentage Of Points Earned) ಅಗ್ರಸ್ಥಾನಕ್ಕೆ ಜಿಗಿದಿದೆ. ಇದನ್ನೂ ಓದಿ: ಪಂದ್ಯದ ವೇಳೆ ರಾಮ್ ಸಿಯಾ ರಾಮ್ ಹಾಡಿಗೆ ರಾಮನಂತೆ ಬಿಲ್ಲು ಹಿಡಿದ ಕೊಹ್ಲಿ ವೀಡಿಯೋ ವೈರಲ್

    ಇನ್ನುಳಿದಂತೆ ತಲಾ 12 ಅಂಕಗಳೊಂದಿಗೆ 50 ಪಿಸಿಟಿ ಹೊಂದಿರುವ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್‌ ಕ್ರಮವಾಗಿ ಎರಡು & 3ನೇ ಸ್ಥಾನಗಳಲ್ಲಿವೆ. 42 ಅಂಕಗಳೊಂದಿಗೆ 50 ಪಿಸಿಟಿ ಹೊಂದಿರುವ ಆಸೀಸ್‌, 12 ಅಂಕಗಳೊಂದಿಗೆ 50 ಪಿಸಿಟಿ ಹೊಂದಿರುವ ಬಾಂಗ್ಲಾದೇಶ, 22 ಅಂಕಗಳೊಂದಿಗೆ 45.83 ಪಿಸಿಟಿ ಹೊಂದಿರುವ ಪಾಕಿಸ್ತಾನ, 4 ಅಂಕಗಳೊಂದಿಗೆ 16.67 ಪಿಸಿಟಿ ಹೊಂದಿರುವ ವೆಸ್ಟ್‌ ಇಂಡೀಸ್‌, 9 ಅಂಕಗಳೊಂದಿಗೆ 15 ಪಿಸಿಟಿ ಹೊಂದಿರುವ ಇಂಗ್ಲೆಂಡ್‌ ಹಾಗೂ ಶೂನ್ಯ ಅಂಕ, ಶೂನ್ಯ ಪಿಸಿಟಿ ಹೊಂದಿರುವ ಶ್ರೀಲಂಕಾ ತಂಡ ಕ್ರಮವಾಗಿ 4 ರಿಂದ 9ನೇ ಸ್ಥಾನಗಳಲ್ಲಿವೆ.

    ದಕ್ಷಿಣ ಆಫ್ರಿಕಾ ವಿರುದ್ಧ ಗುರುವಾರ ನಡೆದ ಅಂತಿಮ ಹಾಗೂ ದ್ವಿತೀಯ ಟೆಸ್ಟ್‌ ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಸರಣಿ ಸಮಬಲವಾಗಿಸಿಕೊಂಡಿತು. ಕೇವಲ ಒಂದೂವರೆ ದಿನಗಳಲ್ಲಿ ಮುಕ್ತಾಯಗೊಂಡ ಈ ಪಂದ್ಯವು ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲೇ ಅತ್ಯಂತ ಚುಟುಕು ಪಂದ್ಯ ಎನಿಸಿಕೊಂಡಿತು. ಇತ್ತಂಡಗಳ ಇನ್ನಿಂಗ್ಸ್‌ಗಳಿಂದ ಒಟ್ಟು 642 ಎಸೆತಗಳು ದಾಖಲಾದವು. 1932ರಂದು ಮೆಲ್ಬರ್ನ್‌ನಲ್ಲಿ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯದಲ್ಲಿ 656 ಎಸೆತಗಳು ಹಾಗೂ 1935ರಲ್ಲಿ ‌ಬ್ರಿಡ್ಜ್‌ಟೌನ್‌ನಲ್ಲಿ ವೆಸ್ಟ್‌ ಇಂಡೀಸ್‌ ಮತ್ತು ಇಂಗ್ಲೆಂಡ್‌ ನಡುವಿನ ಪಂದ್ಯದಲ್ಲಿ 672 ಎಸೆತಗಳು ದಾಖಲಾಗಿದ್ದು, ಈವರೆಗಿನ ಸಾಧನೆಯಾಗಿತ್ತು.

  • Test Cricketː ನಂ.1 ಪಟ್ಟ ಕಳೆದುಕೊಳ್ಳುವ ಭೀತಿಯಲ್ಲಿ ಭಾರತ!

    Test Cricketː ನಂ.1 ಪಟ್ಟ ಕಳೆದುಕೊಳ್ಳುವ ಭೀತಿಯಲ್ಲಿ ಭಾರತ!

    ಡೊಮಿನಿಕಾ: 2023-25ನೇ ಸಾಲಿನ 3ನೇ ಆವೃತ್ತಿಯ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ (WTC) ಟೂರ್ನಿಯ ಆರಂಭದಲ್ಲೇ ಭಾರತ ಶುಭಾರಂಭ ಕಂಡಿದೆ. ವೆಸ್ಟ್‌ ಇಂಡೀಸ್‌ (West Indies) ವಿರುದ್ಧ ನಡೆಯುತ್ತಿರುವ 2 ಪಂದ್ಯಗಳ ಟೆಸ್ಟ್‌ ಸರಣಿಯ ಮೊದಲ ಪದ್ಯದಲ್ಲೇ 141 ರನ್‌ಗಳ ಭರ್ಜರಿ ಜಯ ಸಾಧಿಸಿದೆ. 2ನೇ ಪಂದ್ಯದಲ್ಲೂ ಅದ್ಭುತ ಜಯದೊಂದಿಗೆ ತವರಿನಲ್ಲೇ ವೆಸ್ಟ್‌ ಇಂಡೀಸ್‌ ತಂಡವನ್ನ ವೈಟ್‌ವಾಶ್‌ ಮಾಡುವ ಉತ್ಸಾಹದಲ್ಲಿದೆ.

    ಗೆಲುವಿನ ಹಾದಿಯಲ್ಲಿ ಮುನ್ನುಗ್ಗುತ್ತಿರುವ ಭಾರತಕ್ಕೆ (Team India) ಈಗ ಟೆಸ್ಟ್‌ ಕ್ರಿಕೆಟ್‌ನಲ್ಲಿ ನಂ.1 ಸ್ಥಾನ ಕಳೆದುಕೊಳ್ಳುವ ಭೀತಿ ಎದುರಾಗಿದ್ದು, ಹಾಲಿ ಟೆಸ್ಟ್‌ ಚಾಂಪಿಯನ್ಸ್‌ ಆಸ್ಟ್ರೇಲಿಯಾ ನಂ.1 ಸ್ಥಾನಕ್ಕೇರುವ ಸಾಧ್ಯತೆಗಳಿವೆ. ಇಂಗ್ಲೆಂಡ್‌ ವಿರುದ್ಧ ನಡೆಯುತ್ತಿರುವ ಆಶಸ್‌ ಟೂರ್ನಿಯಲ್ಲಿ ಆಸ್ಟ್ರೇಲಿಯಾ (Australia) 3 ಪಂದ್ಯಗಳ ಅಂತ್ಯಕ್ಕೆ 2-1 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನುಳಿದ 2 ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿದರೆ ಟೀಂ ಇಂಡಿಯಾ ಟೆಸ್ಟ್‌ ಕ್ರಿಕೆಟ್‌ನಲ್ಲಿ ನಂ.1 ಸ್ಥಾನ ಕಳೆದುಕೊಳ್ಳಲಿದೆ. ಇದನ್ನೂ ಓದಿ: IND vs WI: ಅಪ್ಪ, ಮಗನನ್ನು ಔಟ್ ಮಾಡಿ ದಾಖಲೆ ಬರೆದ ಅಶ್ವಿನ್

    ಒಂದು ವೇಳೆ ವಿಂಡೀಸ್‌ ವಿರುದ್ಧದ 2ನೇ ಟೆಸ್ಟ್‌ನಲ್ಲಿ ಭಾರತ ಸೋತರೆ ಅಥವಾ ಮಳೆಯಿಂದ ಪಂದ್ಯ ರದ್ದಾದರೆ, ಭಾರತ 1-0 ಅಂತರದಲ್ಲಿ ಸರಣಿ ಗೆದ್ದುಕೊಳ್ಳಲಿದೆ. ಆಗ ಆಸ್ಟ್ರೇಲಿಯಾ ಆಶಸ್‌ನಲ್ಲಿ 3-1 ಅಂತರದಲ್ಲಿ ಗೆಲುವು ದಾಖಲಿಸಬೇಕಾಗುತ್ತದೆ. ಸರಣಿಯ ಅಂತಿಮ ಎರಡೂ ಪಂದ್ಯಗಳು ಡ್ರಾ ಆದರೂ ಆಸ್ಟ್ರೇಲಿಯಾ 2-1 ಅಂತರದಲ್ಲಿ ಸರಣಿ ಜಯ ದಾಖಲಿಸಲಿದೆ. ಇದನ್ನೂ ಓದಿ: ಒಂದೇ ಮ್ಯಾಚ್‌ನಲ್ಲಿ 12 ವಿಕೆಟ್‌ ಪಡೆದು ಅಶ್ವಿನ್‌ ಸಾಧನೆ – ವಿಂಡೀಸ್ ವಿರುದ್ಧ ಭಾರತಕ್ಕೆ ಜಯದ ಮುನ್ನಡೆ

    ಉಳಿದ ಎರಡು ಪಂದ್ಯಗಳಲ್ಲಿ ಒಂದು ಪಂದ್ಯ ಸೋತು ಮತ್ತೊಂದು ಪಂದ್ಯ ಗೆದ್ದರೆ ಆಸ್ಟ್ರೇಲಿಯಾ ತಂಡ 3-2 ಅಂತರದಲ್ಲಿ ಪ್ರಸಕ್ತ ಸಾಲಿನ ಆಷಸ್‌ ಸರಣಿಯನ್ನು ಗೆದ್ದುಕೊಳ್ಳಲಿದೆ. ಈ ಅಂತರದಲ್ಲಿ ಸರಣಿ ಗೆದ್ದು ವಿಶ್ವದ ನಂ.1 ಪಟ್ಟ ಕೂಡ ಪಡೆಯಬೇಕಾದರೆ, ಟೀಂ ಇಂಡಿಯಾ ತನ್ನ ಮುಂದಿನ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ಸೋಲಬೇಕು. ಇಲ್ಲವಾದರೆ ಟೀಂ ಇಂಡಿಯಾದ ನಂ.1 ಸ್ಥಾನದಲ್ಲಿ ಮುಂದುವರಿಯಲಿದೆ.

    2015ರ ಬಳಿಕ ಟೆಸ್ಟ್‌ ಕ್ರಿಕೆಟ್‌ನಲ್ಲಿ ಸ್ಥಿರತೆ ಕಾಯ್ದುಕೊಂಡಿರುವ ಭಾರತ ಹೆಚ್ಚಿನ ಸಮಯ ಅಗ್ರಸ್ಥಾನದಲ್ಲಿ ಉಳಿದಿದೆ. ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ನ ಮೊದಲ ಎರಡು ಆವೃತ್ತಿಯಲ್ಲಿ ರನ್ನರ್‌ ಅಪ್‌ ಪಡೆದುಕೊಂಡಿರುವ ಭಾರತ 3ನೇ ಆವೃತ್ತಿಯಲ್ಲಿ ಟೆಸ್ಟ್‌ ಚಾಂಪಿಯನ್‌ಶಿಪ್‌ ಪಟ್ಟ ಗೆಲ್ಲುವ ವಿಶ್ವಾಸ ಹೊಂದಿದೆ. ಒಂದು ವೇಳೆ ಭಾರತ ಗೆದ್ದರೆ ಟಿ20, ಏಕದಿನ ಹಾಗೂ ಟೆಸ್ಟ್‌ ಕ್ರಿಕೆಟ್‌ ಮೂರು ಆವೃತ್ತಿಗಳಲ್ಲೂ ಚಾಂಪಿಯನ್‌ ಆಗಿ ಹೊರಹೊಮ್ಮಿದ 2ನೇ ತಂಡವಾಗಲಿದೆ. ಭಾರತ ಎಂ.ಎಸ್‌ ಧೋನಿ ನಾಯಕತ್ವದಲ್ಲಿ 2007ರಲ್ಲಿ ಟಿ20 ವಿಶ್ವಕಪ್‌ ಹಾಗೂ 2011ರಲ್ಲಿ ಏಕದಿನ ವಿಶ್ವಕಪ್‌ ಟೂರ್ನಿಗಳಲ್ಲಿ ಜಯ ಸಾಧಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟೀಂ ಇಂಡಿಯಾಕ್ಕೆ ಗಾಯದ ಮೇಲೆ ಬರೆ – ಶುಭಮನ್‌ ಗಿಲ್ಲ್‌ಗೆ 115% ದಂಡǃ

    ಟೀಂ ಇಂಡಿಯಾಕ್ಕೆ ಗಾಯದ ಮೇಲೆ ಬರೆ – ಶುಭಮನ್‌ ಗಿಲ್ಲ್‌ಗೆ 115% ದಂಡǃ

    ಲಂಡನ್‌: ವಿಶ್ವಟೆಸ್ಟ್‌ ಚಾಂಪಿಯನ್‌ ಶಿಪ್‌ (WTC) ಫೈನಲ್‌ ಪಂದ್ಯದ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ICC) ಟೀಂ ಇಂಡಿಯಾಕ್ಕೆ ಶೇ.100 ರಷ್ಟು ದಂಡ ವಿಧಿಸಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ಅಲ್ಲದೇ ಟೀಂ ಇಂಡಿಯಾ (Team India) ಯುವ ಆರಂಭಿಕ ಆಟಗಾರ ಶುಭಮನ್‌ ಗಿಲ್‌ (Shubman Gill) ಅವರಿಗೆ ಹೆಚ್ಚುವರಿಯಾಗಿ ಶೇ.15 ರಷ್ಟು ದಂಡ ವಿಧಿಸಿದೆ.

    ಹೌದು. ವಿಶ್ವಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್‌ ಕಾಯ್ದುಕೊಂಡಿದ್ದಕ್ಕಾಗಿ ಭಾರತ ತಂಡಕ್ಕೆ ಡಬ್ಲ್ಯೂಟಿಸಿ ಫೈನಲ್‌ ಪಂದ್ಯದ ಶೇ.100 ರಷ್ಟು ದಂಡ ವಿಧಿಸಿದೆ. ಇನ್ನೂ ಅಂಪೈರ್‌ಗಳ ವಿರುದ್ಧ ಅಸಮಾಧಾನ ತೋರಿದ್ದಕ್ಕಾಗಿ ಶುಭಮನ್‌ ಗಿಲ್‌ಗೆ ಹೆಚ್ಚುವರಿಯಾಗಿ ಪಂದ್ಯದ 15% ಶುಲ್ಕವನ್ನು ದಂಡ ವಿಧಿಸಿರುವುದಾಗಿ ಐಸಿಸಿ ತಿಳಿಸಿದೆ. ಇದನ್ನೂ ಓದಿ: ಮೋದಿ ಕ್ರೀಡಾಂಗಣದಲ್ಲಿ ಇಂಡೋ ಪಾಕ್ ಕದನ – ರಣರೋಚಕ ಪಂದ್ಯಕ್ಕಾಗಿ ಕಾಯ್ತಿದ್ದಾರೆ ಫ್ಯಾನ್ಸ್

    ನಿಗದಿತ ಸಮಯಕ್ಕೆ ಪೂರ್ಣಗೊಳಿಸಬೇಕಿದ್ದ ಓವರ್‌ಗಳಿಗಿಂತಲೂ ಭಾರತ 5 ಓವರ್‌ ಹಿಂದೆ ಬಿದ್ದ ಪರಿಣಾಮ ರೋಹಿತ್ (Rohit Sharma) ಪಡೆಗೆ 100% ದಂಡ ವಿಧಿಸಿದೆ. ಅತ್ತ ಆಸ್ಟ್ರೇಲಿಯಾ ಕೂಡ ನಾಲ್ಕು ಓವರ್‌ಗಳ ಕೊರತೆ ಎದುರಿಸಿದ್ದು, ಪಂದ್ಯದ 80% ಶುಲ್ಕವನ್ನು ದಂಡ‌ ತೆರಬೇಕಾಗಿದೆ. ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.22ರ ಪ್ರಕಾರ, ಯಾವುದೇ ತಂಡದ ಆಟಗಾರರು ನಿಗದಿತ ಸಮಯದಲ್ಲಿ ಬೌಲಿಂಗ್ ಮಾಡಲು ವಿಫಲವಾದ ಪ್ರತಿ ಓವರ್‌ಗೆ ಅವರ ಒಟ್ಟು ಪಂದ್ಯ ಶುಲ್ಕದ 20 ಪ್ರತಿಶತದಷ್ಟು ದಂಡ ವಿಧಿಸಬೇಕಾಗುತ್ತದೆ. ಅದರಂತೆಯೇ 1 ಓವರ್‌ಗಳಿಗೆ 20% ನಂತೆ 5 ಓವರ್‌ಗಳಿಗೆ ಭಾರತವು 100% ದಂಡ ತೆರಬೇಕಾಗಿದೆ. ಇದನ್ನೂ ಓದಿ: ಇಷ್ಟಕ್ಕೆ ಮುಗಿದಿಲ್ಲ – ವಿಶ್ವಟೆಸ್ಟ್ ಚಾಂಪಿಯನ್ ಶಿಪ್ ಸೋಲಿನ ಬಳಿಕ ಗಿಲ್ ಖಡಕ್ ರಿಯಾಕ್ಷನ್

    ಗಿಲ್‌ಗೆ ಹೆಚ್ಚುವರಿ 15% ದಂಡ:
    ಡಬ್ಲ್ಯೂಟಿಸಿ ಫೈನಲ್‌ ಪಂದ್ಯದ ವೇಳೆ ಅಂಪೈರ್‌ಗಳ ವಿರುದ್ಧ ಅಸಮಾಧಾನ ತೋರಿದ್ದಕ್ಕಾಗಿ ಶುಭಮನ್‌ ಗಿಲ್‌ಗೆ ಹೆಚ್ಚುವರಿಯಾಗಿ 15% ದಂಡ ವಿಧಿಸಲಾಗಿದೆ. ಆಸ್ಟ್ರೇಲಿಯಾ ವಿರುದ್ಧ 2ನೇ ಇನ್ನಿಂಗ್ಸ್‌ನಲ್ಲಿ ಶುಭಮನ್‌ ಗಿಲ್‌ ಅವರ ಕ್ಯಾಚ್‌ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಭಾರತ ಸೇರಿದಂತೆ ವಿದೇಶದ ಹಿರಿಯ ಕ್ರಿಕೆಟಿಗರು ಕೂಡ ಅದು ನಾಟೌಟ್‌ ಎಂದೇ ಅಭಿಪ್ರಾಯ ಹೊರಹಾಕಿದ್ದರು. ಆದ್ರೆ ಮೈದಾನದಲ್ಲಿ ಔಟ್‌ ಎಂದು ಅಂಪೈರ್‌ ತಿಳಿಸಿದ ನಿರ್ಧಾರದಿಂದ ಅಸಮಾಧಾನಗೊಂಡ ಗಿಲ್, ಮೈದಾನದಲ್ಲೇ ಸಿಟ್ಟನ್ನು ಹೊರಹಾಕಿದ್ದರು. ಇದು ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.7 ಉಲ್ಲಂಘನೆಯಾದ್ದರಿಂದ ಗಿಲ್‌ ಅವರಿಗೆ ಹೆಚ್ಚುವರಿ ದಂಡ ವಿಧಿಸಲಾಗಿದೆ. ಅಂದರೆ, ಗಿಲ್‌ ತಮ್ಮ ಪಂದ್ಯ ಶುಲ್ಕದ ಒಟ್ಟು 115% ಶುಲ್ಕವನ್ನು ದಂಡವಾಗಿ ತೆರಬೇಕಿದೆ ಎಂದು ಐಸಿಸಿ ಹೇಳಿದೆ.

  • ಇಷ್ಟಕ್ಕೆ ಮುಗಿದಿಲ್ಲ – ವಿಶ್ವಟೆಸ್ಟ್ ಚಾಂಪಿಯನ್ ಶಿಪ್ ಸೋಲಿನ ಬಳಿಕ ಗಿಲ್ ಖಡಕ್ ರಿಯಾಕ್ಷನ್

    ಇಷ್ಟಕ್ಕೆ ಮುಗಿದಿಲ್ಲ – ವಿಶ್ವಟೆಸ್ಟ್ ಚಾಂಪಿಯನ್ ಶಿಪ್ ಸೋಲಿನ ಬಳಿಕ ಗಿಲ್ ಖಡಕ್ ರಿಯಾಕ್ಷನ್

    ಲಂಡನ್: 2023ರ ವಿಶ್ವಟೆಸ್ಟ್ ಚಾಂಪಿಯನ್‌ಶಿಪ್ (WTC) 2ನೇ ಆವೃತ್ತಿಯಲ್ಲಿ ಆಸ್ಟ್ರೇಲಿಯಾ (Australia) ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ.

    ಭಾರತದ ವಿರುದ್ಧ 209 ರನ್‌ಗಳ ಅಂತರದಿಂದ ಗೆಲುವು ಸಾಧಿಸಿದ ಆಸ್ಟ್ರೇಲಿಯಾ, T20 ವಿಶ್ವಕಪ್, ಚಾಂಪಿಯನ್ ಟ್ರೋಫಿ ಹಾಗೂ ಟೆಸ್ಟ್ ಚಾಂಪಿಯನ್ ಶಿಪ್ ಮೂರು ಫಾರ್ಮ್ಯಾಟ್‌ನಲ್ಲೂ ಚಾಂಪಿಯನ್ ಪಟ್ಟ ಗೆದ್ದ ಏಕೈಕ ತಂಡವಾಗಿ ಹೊರಹೊಮ್ಮಿದೆ. ಇದನ್ನೂ ಓದಿ: WTC: ಭಾರತಕ್ಕೆ ಹೀನಾಯ ಸೋಲು – 209 ರನ್‌ಗಳ ಭರ್ಜರಿ ಜಯ, ಆಸೀಸ್‌ಗೆ ಚೊಚ್ಚಲ ಟ್ರೋಫಿ

    ವಿಶ್ವ ಚಾಂಪಿಯನ್ ಆದ ಆಸೀಸ್ ಐಸಿಸಿಯಿಂದ (ICC) ಬೃಹತ್ ಮೊತ್ತದ ಬಹುಮಾನ ಪಡೆದುಕೊಂಡಿದೆ. ಡಬ್ಲ್ಯೂಟಿಸಿ ಫೈನಲ್‌ನಲ್ಲಿ ಭಾರತವನ್ನು ಮಣಿಸಿದ ಆಸೀಸ್ ಬರೋಬ್ಬರಿ 13.2 ಕೋಟಿ ರೂ. ಬಹುಮಾನ ಬಾಚಿಕೊಂಡಿದೆ. ಸತತ 2ನೇ ಬಾರಿಗೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಸೋತು ಸತತ 2ನೇ ಬಾರಿಗೆ ರನ್ನರ್ ಅಪ್‌ಗೆ ತೃಪ್ತಿಪಟ್ಟುಕೊಂಡಿರುವ ಟೀಂ ಇಂಡಿಯಾ (Team India) 6.5 ಕೋಟಿ ರೂ. ಬಹುಮಾನ ಪಡೆದಿದೆ.

    ಸೋಲಿನ ನಿರಾಸೆ ಅನುಭವಿಸಿದ ಬಳಿಕ ಟೀಂ ಇಂಡಿಯಾ ಆರಂಭಿಕ ಆಟಗಾರ ಶುಭಮನ್ ಗಿಲ್ (Shubman Gill), ಇಷ್ಟಕ್ಕೆ ಮುಗಿದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮೊಬೈಲ್ ಆ್ಯಪ್ ಬಳಕೆದಾರರಿಗೆ ಗುಡ್‌ನ್ಯೂಸ್ ಕೊಟ್ಟ Hotstar – ವಿಶ್ವಕಪ್, ಏಷ್ಯಾಕಪ್ ಟೂರ್ನಿ ವೀಕ್ಷಣೆ ಫ್ರೀ

    2023 ಐಪಿಎಲ್‌ನಲ್ಲಿ ಸೂಪರ್ ಹೀರೋ ಆಗಿ ಗುರುತಿಸಿಕೊಂಡಿದ್ದ ಶುಭಮನ್ ಗಿಲ್ 17 ಪಂದ್ಯಗಳಿಂದ ಬರೋಬ್ಬರಿ 890 ರನ್ ಗಳಿಸಿ ಮಿಂಚಿದರು. ಈ ಮೂಲಕ ವಿರಾಟ್ ಕೊಹ್ಲಿ ನಂತರ ಟಾಪ್-2 ಬ್ಯಾಟರ್ ಆಗಿ ಗುರುತಿಸಿಕೊಂಡಿದ್ದಾರೆ. ಆ ಬಳಿಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದ ಮೊದಲ ಪಂದ್ಯದಲ್ಲಿ 15 ಎಸೆತಗಳಲ್ಲಿ ಕೇವಲ 13 ರನ್ ರನ್ ಗಳಿಸಿ ಔಟಾಗಿದ್ದರು. ಅಲ್ಪ ಮೊತ್ತಕ್ಕೆ ಔಟಾದ ಕಾರಣಕ್ಕೆ ಟೀಂ ಇಂಡಿಯಾ ಅಭಿಮಾನಿಗಳಿಂದ ‘ಐಪಿಎಲ್ ಹೀರೋ, ಟೀಂ ಇಂಡಿಯಾದಲ್ಲಿ ಜೀರೋ’ ಅಂತಾ ಟ್ರೋಲ್‌ಗೆ ಗುರಿಯಾಗಿದ್ದರು. 2ನೇ ಇನ್ನಿಂಗ್ಸ್‌ನಲ್ಲಿ 19 ಎಸೆತಗಳಲ್ಲಿ 18 ರನ್ ಗಳಿಸಿ ಉತ್ತಮ ಆರಂಭ ಪಡೆದಿದ್ದ ಶುಭಮನ್ ಗಿಲ್ 3ನೇ ಅಂಪೈರ್ ತೀರ್ಪಿನಿಂದ ಔಟ್ ಆಗಿ ಬೇಸರದೊಂದಿಗೆ ಪೆವಿಲಿಯನ್‌ಗೆ ತೆರಳಿದ್ದರು.

    ಆಸೀಸ್ ಮಾರಕ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಶುಭಮನ್ ಗಿಲ್, 19 ಎಸೆತಗಳಲ್ಲಿ 2 ಬೌಂಡರಿಗಳೊಂದಿಗೆ 18 ರನ್ ಗಳಿಸಿದ್ದರು. ಆ ಮೂಲಕ ಉತ್ತಮ ಫಾರ್ಮ್ ಹೊಂದಿದ್ದ ಗಿಲ್, ದೊಡ್ಡ ಮೊತ್ತ ಕಲೆಹಾಕುವ ವಿಶ್ವಾಸ ಮೂಡಿಸಿದ್ದರು. ಆದರೆ 8ನೇ ಓವರ್ ಮೊದಲ ಎಸೆತದಲ್ಲಿ ಸ್ಕಾಟ್ ಬೋಲೆಂಡ್‌ಗೆ ಶುಭಮನ್ ಗಿಲ್ ಡಿಫೆನ್ಸ್ ಆಡಿದರು. ಆದರೆ ಚೆಂಡು ಬ್ಯಾಟ್ ತುದಿಗೆ ತಗುಲಿ ಸ್ಲಿಪ್ ಕಡೆ ಹಾರಿತು. ಸ್ಲಿಪ್‌ನಲ್ಲಿದ್ದ ಕ್ಯಾಮರೂನ್ ಗ್ರೀನ್ ಎಡಗೈನಲ್ಲಿ ಚೆಂಡನ್ನು ಹಿಡಿದರು. ಆದರೆ, ಚೆಂಡನ್ನು ಮೇಲೆತ್ತುವ ಸಮಯದಲ್ಲಿ ನೆಲಕ್ಕೆ ತಾಕಿಸಿದ್ದು ರಿವೀವ್‌ನಲ್ಲಿ ಸ್ಪಷ್ಟವಾಗಿ ಕಾಣುತ್ತಿತ್ತು. 3ನೇ ಅಂಪೈರ್ 5-6 ಬಾರಿ ವಿಡಿಯೋ ರೀಪ್ಲೇ ವೀಕ್ಷಿಸಿದರೂ ಅಂತಿಮವಾಗಿ ಔಟ್ ತೀರ್ಮಾನ ಪ್ರಕಟಿಸಿದರು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಯಿತು, ಪ್ರಮುಖ ಕ್ರಿಕೆಟ್ ಆಟಗಾರರು 3ನೇ ಅಂಪೈರ್ ತೀರ್ಪಿಗೆ ಖಂಡನೆ ವ್ಯಕ್ತಪಡಿಸಿದರು.

    ಇದೀಗ ಎರಡೇ ಪದಗಳಲ್ಲಿ ಟ್ವೀಟ್ ಮಾಡಿರುವ ಗೀಲ್, ನಾಟ್ ಫಿನಿಷ್ಡ್ (ಇಷ್ಟಕ್ಕೆ ಮುಗಿದಿಲ್ಲ) ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಇಂಡಿಯಾ ಫ್ಲ್ಯಾಗ್ ಎಮೋಜಿಯೊಂದಿಗೆ ಟೀಂ ಇಂಡಿಯಾ ಗ್ರೂಪ್ ಫೋಟೋವನ್ನೂ ಹಂಚಿಕೊಂಡಿದ್ದಾರೆ.

  • WTC: ಭಾರತಕ್ಕೆ ಹೀನಾಯ ಸೋಲು – 209 ರನ್‌ಗಳ ಭರ್ಜರಿ ಜಯ, ಆಸೀಸ್‌ಗೆ ಚೊಚ್ಚಲ ಟ್ರೋಫಿ

    WTC: ಭಾರತಕ್ಕೆ ಹೀನಾಯ ಸೋಲು – 209 ರನ್‌ಗಳ ಭರ್ಜರಿ ಜಯ, ಆಸೀಸ್‌ಗೆ ಚೊಚ್ಚಲ ಟ್ರೋಫಿ

    ಲಂಡನ್‌: ವಿಶ್ವಟೆಸ್ಟ್‌ ಚಾಂಪಿಯನ್‌ಶಿಪ್‌ನ (WTC) 2ನೇ ಆವೃತ್ತಿಯಲ್ಲಿ ಮೊದಲಬಾರಿಗೆ ಆಸ್ಟ್ರೇಲಿಯಾ (Australia) ಚಾಂಪಿಯನ್‌ ಪಟ್ಟಕೇರಿದೆ. ಅಗ್ರಕ್ರಮಾಂಕದ ಬ್ಯಾಟರ್‌ಗಳ ಕಳಪೆ ಪ್ರದರ್ಶನದಿಂದಾಗಿ ಭಾರತ (Team India) ಸತತ ಎರಡನೇ ಬಾರಿ ಫೈನಲ್‌ನಲ್ಲಿ ಸೋತು ರನ್ನರ್‌ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದೆ.

    2019ರಲ್ಲಿ ಆರಂಭಗೊಂಡ ವಿಶ್ವಟೆಸ್ಟ್‌ ಚಾಂಪಿಯನ್‌ಶಿಪ್‌ನ ಮೊದಲ ಆವೃತ್ತಿಯಲ್ಲೇ ನ್ಯೂಜಿಲೆಂಡ್‌ (New Zealand) ತಂಡ ಭಾರತದ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. 2ನೇ ಆವೃತ್ತಿಯಲ್ಲಿ ಆಸೀಸ್‌ ಬೌಲರ್‌ಗಳ ದಾಳಿಗೆ ತುತ್ತಾದ ಭಾರತ ಮತ್ತೊಮ್ಮೆ ಹೀನಾಯ ಸೋಲನುಭವಿಸಿ ಹೊರನಡೆದಿದೆ.

    2ನೇ ಇನ್ನಿಂಗ್ಸ್‌ನಲ್ಲಿ 444 ರನ್‌ಗಳ ಗುರಿ ಬೆನ್ನಟ್ಟಿದ ಭಾರತ 4ನೇ ದಿನದ ಅಂತ್ಯಕ್ಕೆ 40 ಓವರ್‌ಗಳಲ್ಲಿ 164 ರನ್‌ ಗಳಿಸಿ ಪ್ರಮುಖ 3 ವಿಕೆಟ್‌ ಕಳೆದುಕೊಂಡಿತ್ತು. ಕೊನೆಯ ದಿನದಂದು ಭಾರತದ ಗೆಲುವಿಗೆ 280‌ ರನ್‌ಗಳ ಅಗತ್ಯವಿತ್ತು. ಆದರೆ ಇಂದು 22.3 ಓವರ್‌ಗಳಲ್ಲಿ 70 ರನ್‌ ಗಳಿಸಿದ ಭಾರತ ಅಂತಿಮವಾಗಿ 63.3 ಓವರ್‌ಗಳಲ್ಲಿ 234 ರನ್‌ ಗಳಿಗೆ ಸರ್ವಪತನ ಕಂಡಿತು. 209 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಆಸೀಸ್‌ ಮೊದಲ ಬಾರಿಗೆ ಚಾಂಪಿಯನ್‌ಶಿಪ್‌ ಜಯಿಸಿತು.

    5ನೇ ದಿನದ ಇನ್ನಿಂಗ್ಸ್‌ನಲ್ಲಿ ವಿರಾಟ್‌ ಕೊಹ್ಲಿ (Virat Kohli) ಹಾಗೂ ಅಜಿಂಕ್ಯಾ ರಹಾನೆ (Ajinkya Rahane) ಅವರ ವಿಕೆಟ್‌ ಕಳೆದುಕೊಳ್ಳುವುದರೊಂದಿಗೆ ಭಾರತದ ಪತನ ಆರಂಭವಾಯಿತು. ಕೊನೆಯ ದಿನ 22.3 ಓವರ್‌ಗಲ್ಲಿ 70 ರನ್‌ ಗಳಿಸುವಷ್ಟರಲ್ಲೇ ಉಳಿದ 7 ವಿಕೆಟ್‌ಗಳನ್ನು ಕಳೆದುಕೊಂಡು ಭಾರತ ಹೀನಾಯ ಸೋಲನುಭವಿಸಿತು.

    173 ರನ್‌ಗಳ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡ 4ನೇ ದಿನದಾಟದಲ್ಲಿ 8 ವಿಕೆಟ್‌ಗೆ 270 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಉಳಿದ ಒಂದೂವರೆ ದಿನದಲ್ಲಿ ಭಾರತಕ್ಕೆ ಗೆಲ್ಲಲು 444 ರನ್‌ಗಳ ಬೃಹತ್ ಗುರಿ ನೀಡಿತು. ಭಾರತ 4ನೇ ದಿನದ ಅಂತ್ಯಕ್ಕೆ ಪ್ರಮುಖ 3 ವಿಕೆಟ್‌ ಕಳೆದುಕೊಂಡು 164 ರನ್‌ ಗಳಿಸಿತ್ತು.

    ನಾಲ್ಕನೇ ದಿನದಾಟದಲ್ಲಿ ಭಾರತದ ಪರ ಶುಭಮನ್‌ ಗಿಲ್‌ (Shubman Gill) ಹಾಗೂ ನಾಯಕ ರೋಹಿತ್‌ ಶರ್ಮಾ (Rohit Sharma) ಜೋಡಿ ಮೊದಲ ವಿಕೆಟ್‌ಗೆ 41 ರನ್‌ ಜೊತೆಯಾಟವಾಡಿದರೆ, ರೋಹಿತ್‌ ಹಾಗೂ ಚೇತೇಶ್ವರ್ ಪೂಜಾರಾ ಜೋಡಿ 2ನೇ ವಿಕೆಟ್‌ಗೆ 51 ರನ್‌ ಜೊತೆಯಾಟವಾಡಿತು. ನಂತರ ಜೊತೆಗೂಡಿದ ರಹಾನೆ ಹಾಗೂ ವಿರಾಟ್‌ ಕೊಹ್ಲಿ ಜೋಡಿ ಮುರಿಯದ 4ನೇ ವಿಕೆಟ್‌ಗೆ 71 ರನ್‌ ಜೊತೆಯಾಟ ನೀಡಿತು.

    ಭಾನುವಾರ ಕೊನೆಯದಿನದ ಇನ್ನಿಂಗ್ಸ್‌ ಆರಂಭಿಸಿದ ಭಾರತ ಆಸೀಸ್‌ ಬೌಲರ್‌ಗಳ ದಾಳಿ ಎದುರಿಸುವಲ್ಲಿ ವಿಫಲವಾಯಿತು. ವಿರಾಟ್‌ ಕೊಹ್ಲಿ ಹಾಗೂ‌ ಅಜಿಂಕ್ಯಾ ರಹಾನೆ ಜೋಡಿ ಔಟಾಗುತ್ತಿದ್ದಂತೆ ತಂಡದ ಒಂದೊಂದೆ ವಿಕೆಟ್‌ ಪತನಗೊಂಡಿತು. ಅಂತಿಮವಾಗಿ ಭಾರತ 234 ರನ್‌ಗಳಿಗೆ ಸರ್ವಪತನಕಂಡಿತು. ವಿರಾಟ್‌ ಕೊಹ್ಲಿ 49 ರನ್‌ (78 ಎಸೆತ, 7 ಬೌಂಡರಿ), ಅಜಿಂಕ್ಯಾ ರಹಾನೆ 46 ರನ್‌ (108 ಎಸೆತ, 7 ಬೌಂಡರಿ), ಶ್ರೀಕಾರ್‌ ಭರತ್‌ 23 ರನ್‌, ಮೊಹಮ್ಮದ್‌ ಶಮಿ 13 ರನ್‌ ಗಳಿಸಿದರು.

    ಆಸೀಸ್ ಪರ ಸ್ಪಿನ್‌ ದಾಳಿ ನಡೆಸಿದ ನಥಾನ್‌ ಲಿಯಾನ್‌ 4 ವಿಕೆಟ್‌ ಪಡೆದರೆ, ಸ್ಕಾಟ್ ಬೋಲ್ಯಾಂಡ್ 3 ವಿಕೆಟ್‌, ಮಿಚೆಲ್‌ ಸ್ಟಾರ್ಕ್‌ 2 ವಿಕೆಟ್‌ ಹಾಗೂ ಪ್ಯಾಟ್‌ ಕಮ್ಮಿನ್ಸ್‌ 1 ವಿಕೆಟ್‌ ಪಡೆದು ಮಿಂಚಿದರು.

    ಸಂಕ್ಷಿಪ್ತ ಸ್ಕೋರ್‌
    ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌: 469/10
    ಭಾರತ ಮೊದಲ ಇನ್ನಿಂಗ್ಸ್‌: 296/10
    ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್‌: 270/8d
    ಭಾರತ ಎರಡನೇ ಇನ್ನಿಂಗ್ಸ್‌: 234/10

  • WTC Final: 3ನೇ ದಿನದಲ್ಲಿ ಜಡೇಜಾ ಜಾದು – ಆಸ್ಟ್ರೇಲಿಯಾಕ್ಕೆ 296 ರನ್‌ಗಳ ಮುನ್ನಡೆ

    WTC Final: 3ನೇ ದಿನದಲ್ಲಿ ಜಡೇಜಾ ಜಾದು – ಆಸ್ಟ್ರೇಲಿಯಾಕ್ಕೆ 296 ರನ್‌ಗಳ ಮುನ್ನಡೆ

    ಲಂಡನ್‌: ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ (WTC Final) ಪಂದ್ಯದ 3ನೇ ದಿನದಾಟದಲ್ಲಿ ಭಾರತದ ಬೌಲರ್‌ಗಳು ಹಿಡಿತ ಸಾಧಿಸಿದ್ದಾರೆ. ರವೀಂದ್ರ ಜಡೇಜಾ (Ravindra Jadeja), ಉಮೇಶ್‌ ಯಾದವ್‌ ಹಾಗೂ ಮೊಹಮ್ಮದ್‌ ಸಿರಾಜ್‌ ಬೌಲಿಂಗ್‌ ಕಮಾಲ್‌ನಿಂದಾಗಿ ಆಸ್ಟ್ರೇಲಿಯಾದ (Australia) ಟಾಪ್‌ ಬ್ಯಾಟ್ಸ್‌ಮ್ಯಾನ್‌ಗಳು ನೆಲ ಕಚ್ಚಿದ್ದಾರೆ. ಇದರ ಹೊರತಾಗಿಯೂ ಭಾರತ 296 ರನ್‌ಗಳ ಹಿನ್ನಡೆಯಲ್ಲಿದೆ.

    2ನೇ ದಿನದ ಅಂತ್ಯಕ್ಕೆ 38 ಓವರ್‌ಗಳಲ್ಲಿ 151 ರನ್‌ ಗಳಿಗೆ 5 ವಿಕೆಟ್‌ ಕಳೆದುಕೊಂಡಿದ್ದ ಭಾರತ 3ನೇ ದಿನ ಅಜಿಂಕ್ಯಾ ರಹಾನೆ ಹಾಗೂ ಆಲ್‌ರೌಂಡರ್‌ ಶಾರ್ದೂಲ್‌ ಬ್ಯಾಟಿಂಗ್‌ ನೆರವಿನಿಂದ 296 ರನ್‌ ಗಳಿಸುಲ್ಲಿ ಯಶಸ್ವಿಯಾಯಿತು. ಇದನ್ನೂ ಓದಿ: ಆಸೀಸ್‌ ಮಾರಕ ಬೌಲಿಂಗ್‌ಗೆ ಟಾಪ್‌ ಬ್ಯಾಟರ್‌ಗಳು ಪಲ್ಟಿ – 318 ರನ್‌ಗಳ ಹಿನ್ನಡೆಯಲ್ಲಿ ಭಾರತ

    3ನೇ ದಿನದ ಇನ್ನಿಂಗ್ಸ್‌ ಆರಂಭಿಸಿದ ಅಜಿಂಕ್ಯಾ ರಹಾನೆ (Ajinkya Rahane) ಹಾಗೂ ಶ್ರೀಕಾರ್‌ ಭರತ್‌ ಜೋಡಿ ಉತ್ತಮ ರನ್‌ ಕಲೆಹಾಕುವಲ್ಲಿ ವಿಫಲವಾಯಿತು. ಭರತ್‌ 5 ರನ್‌ ಗಳಿಸಿ ಔಟಾದರು. ನಂತರ ಜೊತೆಗೂಡಿದ ಶಾರ್ದೂಲ್‌ ಠಾಕೂರ್‌ (Shardul Thakur) ಹಾಗೂ ರಹಾನೆ ಜೋಡಿ 7ನೇ ವಿಕೆಟ್‌ಗೆ 145 ಎಸೆತಗಳಲ್ಲಿ 109 ರನ್‌ ಜೊತೆಯಾಟವಾಡಿ ತಂಡಕ್ಕೆ ಚೇತರಿಕೆ ನೀಡಿದರು. ರಹಾನೆ 89 ರನ್‌ (129 ಎಸೆತ, 11 ಬೌಂಡರಿ, 1 ಸಿಕ್ಸರ್‌), ಶಾರ್ದೂಲ್‌ ಠಾಕೂರ್‌ 51 ರನ್‌ (109 ಎಸೆತ, 6 ಬೌಂಡರಿ) ಗಳಿಸಿ ಔಟಾದರು. ಕೊನೆಯಲ್ಲಿ ಬೌಲರ್‌ಗಳ ಉತ್ತಮ ಪ್ರದರ್ಶನವಿಲ್ಲದೇ ಭಾರತ 69.4 ಓವರ್‌ಗಳಲ್ಲಿ 296 ರನ್‌ಗಳಿಗೆ ಆಲೌಟ್‌ ಆಯಿತು.

    ಇನ್ನೂ ತನ್ನ 2ನೇ ಇನ್ನಿಂಗ್ಸ್‌ ಆರಂಭಿಸಿದ ಆಸ್ಟ್ರೇಲಿಯಾದ ಟಾಪ್‌ ಬ್ಯಾಟರ್‌ಗಳು ಭಾರತೀಯ ಬೌಲರ್‌ಗಳ ದಾಳಿಗೆ ಮಕಾಡೆ ಮಲಗಿದರು. ಮೊದಲ ಇನ್ನಿಂಗ್ಸ್‌ನಲ್ಲಿ ಅಬ್ಬರಿಸಿದ ಸ್ಟೀವ್‌ ಸ್ಮಿತ್‌ ಹಾಗೂ ಟ್ರಾವಿಸ್‌ ಹೆಡ್‌ ಜಡೇಜಾ ಸ್ಪಿನ್‌ ದಾಳಿಗೆ ವಿಕೆಟ್‌ ಒಪ್ಪಿಸಿದರು. ಅಂತಿಮವಾಗಿ 3ನೇ ದಿನದ ಅಂತ್ಯಕ್ಕೆ ಆಸ್ಟ್ರೇಲಿಯಾ 44 ಓವರ್‌ಗಳಲ್ಲಿ 4 ಪ್ರಮುಖ ವಿಕೆಟ್‌ ಕಳೆದುಕೊಂಡು 123 ರನ್‌ ಗಳಿಸಿದೆ.

    ಉಸ್ಮಾನ್‌ ಖವಾಜ 13 ರನ್‌, ಸ್ಟೀವ್‌ ಸ್ಮಿತ್‌ (Steve Smith) 34 ರನ್‌, ಟ್ರಾವಿಸ್‌ ಹೆಡ್‌ (Travis Head) 18 ರನ್‌ ಹಾಗೂ ಡೇವಿಡ್‌ ವಾರ್ನರ್‌ ಕೇವಲ 1 ರನ್‌ ಗಳಿಸಿ ಔಟಾದರು. ಮಾರ್ಕಸ್‌ ಲಾಬುಶೇನ್‌ 41 ರನ್‌ (118 ಎಸೆತ, 3 ಬೌಂಡರಿ), ಕ್ಯಾಮರೂನ್‌ ಗ್ರೀನ್‌ 7 ರನ್‌ ಗಳಿಸಿ ಕ್ರೀಸ್‌ನಲ್ಲಿದ್ದು, ಶನಿವಾರ ಬ್ಯಾಟಿಂಗ್‌ ಮುಂದುವರಿಸಲಿದ್ದಾರೆ. ಇದನ್ನೂ ಓದಿ: ಮೊಬೈಲ್ ಆ್ಯಪ್ ಬಳಕೆದಾರರಿಗೆ ಗುಡ್‌ನ್ಯೂಸ್ ಕೊಟ್ಟ Hotstar – ವಿಶ್ವಕಪ್, ಏಷ್ಯಾಕಪ್ ಟೂರ್ನಿ ವೀಕ್ಷಣೆ ಫ್ರೀ

    2ನೇ ಇನ್ನಿಂಗ್ಸ್‌ನಲ್ಲಿ ಉತ್ತಮ ಬೌಲಿಂಗ್‌ ಪ್ರದರ್ಶಿಸಿದ ರವೀಂದ್ರ ಜಡೇಜಾ 2 ಪ್ರಮುಖ ವಿಕೆಟ್‌ ಕಿತ್ತರೆ, ಸಿರಾಜ್‌ ಹಾಗೂ ಉಮೇಶ್‌ ಯಾದವ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

    ಸಂಕ್ಷಿಪ್ತ ಸ್ಕೋರ್‌
    ಮೊದಲ ಇನ್ನಿಂಗ್ಸ್‌ ಆಸ್ಟ್ರೇಲಿಯಾ – 469/10
    ಮೊದಲ ಇನ್ನಿಂಗ್ಸ್‌ ಭಾರತ – 296/10