Tag: ವಿಶ್ವ ಮಹಿಳಾ ದಿನ

  • ಪುರುಷರಿಗೆ ಮಹಿಳೆಯರೇ ಸ್ಪೂರ್ತಿ, ಅವರಿಂದಲೇ ನಾವು: ಫಿಡಿಲಿಟಸ್ ಕಾರ್ಪ್ ಸಂಸ್ಥಾಪಕ

    ಪುರುಷರಿಗೆ ಮಹಿಳೆಯರೇ ಸ್ಪೂರ್ತಿ, ಅವರಿಂದಲೇ ನಾವು: ಫಿಡಿಲಿಟಸ್ ಕಾರ್ಪ್ ಸಂಸ್ಥಾಪಕ

    ಬೆಂಗಳೂರು: ಪುರುಷರಿಗೆ ಮಹಿಳೆಯರೇ ಸ್ಪೂರ್ತಿ, ಅವರಿಂದಲೇ ನಾವು. ಮಹಿಳೆಯರು ತಮ್ಮ ಜೀವನದಲ್ಲಿ ಅನೇಕ ಪಾತ್ರಗಳನ್ನು ನಿಭಾಯಿಸುತ್ತಾರೆ. ಆ ಎಲ್ಲಾ ಪಾತ್ರಗಳನ್ನು ಅವರು ಅಚ್ಚುಕಟ್ಟಾಗಿ ನಿರ್ವಸುತ್ತಾರೆ ಎಂದು ಫಿಡಿಲಿಟಸ್ ಕಾರ್ಪ್ ಸಂಸ್ಥಾಪಕ ಅಚ್ಚುತ್ ಗೌಡ ವಿಶ್ವ ಮಹಿಳಾ ದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಹೇಳಿದರು.

    ಈ ಒಂದು ದಿನಕ್ಕೆ ಮಾತ್ರ ಮಹಿಳಾ ದಿನಾಚರಣೆಯನ್ನು ಮೀಸಲಿಡಬಾರದು. ಪ್ರತಿನಿತ್ಯ ಅವರ ದಿನವನ್ನ ಸಂಭ್ರಮಿಸಬೇಕು. ನಾನು ಕೂಡ ಈ ಮಟ್ಟಕ್ಕೆ ಬೆಳೆಯಲು ನನ್ನ ಜೀವನದಲ್ಲಿರುವ ನನ್ನ ತಾಯಿ, ನನ್ನ ಮಡದಿ ಹಾಗೂ ನನ್ನ ಮಗಳು ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದಾರೆ ಎಂದರು.

    ಬನಶಂಕರಿಯ ಫಿಡಿಲಿಟಿಸ್ ಸಂಸ್ಥೆಯ ಪುರುಷರು ಮಹಿಳೆಯರನ್ನು ಕಛೇರಿಯೊಳಗೆ ವಿಭಿನ್ನವಾಗಿ ಸ್ವಾಗತಿಸಲಾಯಿತು. ಪ್ರತಿಯೊಬ್ಬ ಮಹಿಳಾ ಉದ್ಯೋಗಿಗಳನ್ನು ಕುದುರೆ ಸಾರೋಟಿನ ಮೂಲಕ ಸ್ವಾಗತಿಸಿದ್ದು, ಮಹಿಳೆಯರು ಪಲ್ಲಕ್ಕಿಯ ಮೇಲೆ ಕುಳಿತು ಆಗಮಿಸುತ್ತಿದ್ದಂತೆ ಪುರುಷರು ಡೋಲು ಬಾರಿಸಿ, ಕುಣಿದು ಕುಪ್ಪಳಿಸಿ ಮಹಿಳೆಯರನ್ನು ಕಛೇರಿಗೆ ಬರ ಮಾಡಿಕೊಂಡರು. ಇದನ್ನೂ ಓದಿ: ಮತ್ತೆ 4 ಸಾವಿರ ಉದ್ಯೋಗಿಗಳನ್ನು ವಜಾ ಮಾಡಲಿದ್ದಾರಾ ವಿಶಾಲ್ ಗಾರ್ಗ್?

    ಸಂಸ್ಥೆಯ ಮಹಿಳೆಯರು ಶ್ವೇತ ವರ್ಣದ ಉಡುಪುಗಳಲ್ಲಿ ಕಂಗೊಳಿಸಿದ್ದು, ಅವರಿಗಾಗಿಯೇ ರ‍್ಯಾಂಪ್ ವಾಕ್ ಆಯೋಜಿಸಲಾಗಿತ್ತು. ರ‍್ಯಾಂಪ್ ಮೇಲೆ ಮಹಿಳೆಯರು ಹೆಜ್ಜೆ ಹಾಕಿ, ಕೇಕ್ ಕತ್ತರಿಸುವ ಮೂಲಕ ಮಹಿಳಾ ದಿನಾಚರಣೆಯನ್ನ ಅದ್ದೂರಿಯಾಗಿ ಆಚರಿಸಿದರು. ಇದನ್ನೂ ಓದಿ: ಊಟಕ್ಕೆ ಹೊರಗೆ ಹೋದರೆ ವಾಪಸ್ ಬದುಕಿ ಬರುವ ನಂಬಿಕೆ ಇರಲಿಲ್ಲ: ಹಾಸನದ ವಿದ್ಯಾರ್ಥಿ

    ಮಹಿಳೆಯ ಹೋರಾಟ ಇಂದು-ನಿನ್ನೆಯದಲ್ಲ. ಸದಾ ತನ್ನ ಹಕ್ಕಿಗಾಗಿ ಮಹಿಳೆ ಕಾದಾಡುತ್ತಿದ್ದಾಳೆ. ಪ್ರಪಂಚ ಇಷ್ಟು ಮುಂದುವರೆದಿದ್ದರೂ ಮಹಿಳೆಗೆ ಸಿಗಬೇಕಾದ ಸ್ಥಾನ ಇನ್ನೂ ಸಂಪೂರ್ಣವಾಗಿ ಸಿಕ್ಕಿಲ್ಲ. ಇಷ್ಟರ ಮಧ್ಯೆಯೂ ತುಳಿತಕ್ಕೊಳಗಾಗುತ್ತಿರುವ, ಕೌಟುಂಬಿಕ ದೌರ್ಜನ್ಯಕ್ಕೆ ಬಲಿಯಾಗುತ್ತಿರುವ ಅನೇಕ ಮಹಿಳೆಯರು ನಮ್ಮಲ್ಲಿದ್ದಾರೆ. ಅವರಿಗೆ ಧೈರ್ಯ ನೀಡಿ, ಮಹಿಳೆಗೆ ತನ್ನ ಹಕ್ಕಿನ ಪರಿಚಯ ಮಾಡಿಸಿ, ಆಕೆಯನ್ನು ಸ್ವಾವಲಂಬಿ ಮಾಡುವ ಉದ್ದೇಶದಿಂದ, ಆಕೆಯ ಜೀವನವನ್ನು ಸುಂದರ ಸಶಕ್ತಗೊಳಿಸುವ ಉದ್ದೇಶದಿಂದ ಪ್ರತಿ ವರ್ಷ ಮಾರ್ಚ್ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ.

  • ಮನ್ ಕಿ ಬಾತ್ ನಾರಿ ಶಕ್ತಿ ಸಂಭ್ರಮದ ವೀಡಿಯೋ ಶೇರ್ ಮಾಡಿದ ಮೋದಿ

    ಮನ್ ಕಿ ಬಾತ್ ನಾರಿ ಶಕ್ತಿ ಸಂಭ್ರಮದ ವೀಡಿಯೋ ಶೇರ್ ಮಾಡಿದ ಮೋದಿ

    ನವದೆಹಲಿ: ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಹಿಳೆಯರನ್ನು ಶ್ಲಾಘಿಸುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ.

    ಅಂತರಾಷ್ಟ್ರೀಯ ಮಹಿಳಾ ದಿನದಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್‌ನಲ್ಲಿ ಮಹಿಳೆಯರ ಸ್ಪೂರ್ತಿದಾಯಕ ಹಾಗೂ ಸಾಧನೆಯನ್ನು ಎತ್ತಿ ತೋರಿಸುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮಹಿಳಾ ದಿನಾಚರಣೆ ಪ್ರಯುಕ್ತ ಕೇರಳದಲ್ಲಿ ಮಹಿಳೆಯರಿಗೆ ಮೆಟ್ರೋದಲ್ಲಿ ಉಚಿತ ಪ್ರಯಾಣ

    ಮನ್ ಕಿ ಬಾತ್ ಕಾರ್ಯಕ್ರಮದ ವಿವಿಧ ಸಂಚಿಕೆಗಳಲ್ಲಿ ನಾವು ಮಹಿಳಾ ಸಬಲೀಕರಣದ ವಿವಿಧ ಅಂಶಗಳನ್ನು ತೋರಿಸಿದ್ದೇವೆ. ತಳಮಟ್ಟದಿಂದ ಮಹಿಳೆಯರನ್ನು ಪ್ರೇರೇಪಿಸುವ ಜೀವನ ಪಯಣವನ್ನು ಪ್ರದರ್ಶಿಸಿದ್ದೇವೆ. ಮನ್ ಕಿ ಬಾತ್ ಕಾರ್ಯಕ್ರಮ ನಾರಿ ಶಕ್ತಿಯ ಸಂಭ್ರಮವನ್ನು ಆಚರಿಸಿರುವ ವೀಡಿಯೋ ಇಲ್ಲಿದೆ ಎಂದು ಮೋದಿ ಟ್ವಿಟ್ಟರ್‌ನಲ್ಲಿ ಬರೆದಿದ್ದಾರೆ.

    ನಮ್ಮ ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿದೆ. ಇದಕ್ಕಾಗಿ ಮಹಿಳೆಯರಿಗೆ ಘನತೆ ಹಾಗೂ ಅವಕಾಶಗಳನ್ನೂ ನೀಡಿದೆ ಎಂದಿದ್ದಾರೆ. ಇದನ್ನೂ ಓದಿ:ವಿಶ್ವ ಯುದ್ಧ ನಂತ್ರ ಫಸ್ಟ್ ಟೈಂ ಏಸುಕ್ರಿಸ್ತನ ಶಿಲ್ಪ ಸ್ಥಳಾಂತರ

    ಮಹಿಳಾ ದಿನದಂದು ನಮ್ಮ ನಾರಿ ಶಕ್ತಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವ ಮಹಿಳೆಯರಿಗೆ ನಾನು ವಂದಿಸುತ್ತೇನೆ. ಆರ್ಥಿಕ ಸೇರ್ಪಡೆಯಿಂದ ಸಾಮಾಜಿಕ ಭದ್ರತೆ, ಗುಣಮಟ್ಟದ ಆರೋಗ್ಯ ಸೇವೆಯಿಂದ ವಸತಿ, ಶಿಕ್ಷಣದಿಂದ ಉದ್ಯಮಶೀಲತೆಗೆ ನಾರಿ ಶಕ್ತಿ ಭಾರತವನ್ನು ಮುಂಚೂಣಿಯಲ್ಲಿಡಲು ಹಲವು ಪ್ರಯತ್ನಗಳನ್ನು ಮಾಡಿದೆ. ಮುಂದಿನ ದಿನಗಳಲ್ಲಿ ಈ ಪ್ರಯತ್ನಗಳು ಇನ್ನೂ ಹೆಚ್ಚಿನ ಹುರುಪಿನೊಂದಿಗೆ ಮುಂದುವರಿಯಲಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

  • ಎಸ್‍ಡಿಸಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಗುತ್ತಿಗೆದಾರನಿಗೆ ಬಿತ್ತು ಗೂಸಾ

    ಎಸ್‍ಡಿಸಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಗುತ್ತಿಗೆದಾರನಿಗೆ ಬಿತ್ತು ಗೂಸಾ

    ಕಾರವಾರ: ವಿಶ್ವ ಮಹಿಳಾ ದಿನದಂದೇ ಸರ್ಕಾರಿ ಉದ್ಯೋಗಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಹೋಗಿ ಗುತ್ತಿಗೆದಾರನೊಬ್ಬ ಗೂಸಾ ತಿಂದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ನಡೆದಿದೆ.

    ಮುಂಡಗೋಡದ ನಿವಾಸಿ ಪ್ರಕಾಶ್ ಅಜ್ಜಮ್ಮನವರ್ ಲೈಂಗಿಕ ಕಿರುಕುಳ ನೀಡಲು ಹೋಗಿ ಗೂಸಾ ತಿಂದ ಗುತ್ತಿಗೆದಾರ. ಮುಂಡುಗೋಡದ ತಹಶೀಲ್ದಾರ್ ಕಚೇರಿಯ ಬಳಿಯೇ ಮಹಿಳೆಯ ಸಂಬಂಧಿಕರು, ಸ್ಥಳೀಯರು ಸೇರಿ ಪ್ರಕಾಶ್‍ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

    ಆಗಿದ್ದೇನು?:
    ತಹಶೀಲ್ದಾರ್ ಕಚೇರಿಯಲ್ಲಿ ಮಹಿಳೆ ಎಸ್‍ಡಿಸಿ ಆಗಿ ಕೆಲಸ ಮಾಡುತ್ತಿದ್ದಾರೆ. ಪ್ರಕಾಶ್ ಕಳೆದ ಒಂದು ವರ್ಷದಿಂದ ಮಹಿಳೆಗೆ ಪತ್ರ ಬರೆದು, ಇಲ್ಲವೇ ಕಚೇರಿಗೆ ಬಂದು ಲೈಂಗಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಮಹಿಳೆಗೆ ಕಚೇರಿಯ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವಾಗ ಹಿಂಬಾಲಿಸುತ್ತಿದ್ದ.

    ಪ್ರಕಾಶ್ ನಿಂದ ಉಂಟಾಗುತ್ತಿದ್ದ ಸಮಸ್ಯೆಯ ಕುರಿತು ಮಹಿಳೆ ಮನೆಯಲ್ಲಿ ಹೇಳಿಕೊಂಡಿದ್ದರು. ಪ್ರಕಾಶ್ ಇಂದು ಕಚೇರಿಗೆ ಬಂದಿರುವ ವಿಚಾರವನ್ನು ತಮ್ಮ ಮಗನಿಗೆ ತಿಳಿಸಿದ್ದಾರೆ. ತಕ್ಷಣವೇ ಕಚೇರಿಗೆ ಬಂದ ಮಹಿಳೆಯ ಮಗ ಪ್ರಕಾಶ್ ಕೊರಳುಪಟ್ಟಿ ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಈ ವೇಳೆ ಮಹಿಳೆ ಕೂಡ ಪ್ರಕಾಶ್ ಕೆನ್ನೆಗೆ ಬಾರಿಸಿದ್ದಾರೆ. ಬಳಿಕ ಎಲ್ಲರೂ ಸೇರಿ ಪ್ರಕಾಶ್‍ನನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

    ಗುತ್ತಿಗೆದಾರ ಪ್ರಕಾಶ್ 2018 ಮಾರ್ಚ್ ನಲ್ಲಿ ಜಾತಿ ಪ್ರಮಾಣಪತ್ರ ಮಾಡಿಸಿಕೊಡುವ ನೆಪದಲ್ಲಿ ವಿದ್ಯಾರ್ಥಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ ಸಿಕ್ಕಿಹಾಕಿಕೊಂಡಿದ್ದ. ಬಸ್ ನಿಲ್ದಾಣದಲ್ಲಿಯೇ ಸ್ಥಳೀಯರು ಪ್ರಕಾಶ್‍ನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv