Tag: ವಿಶ್ವ ವಿದ್ಯಾಲಯ

  • ಡಿಗ್ರಿ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಇನ್ಮುಂದೆ  ಸಿಸಿಟಿವಿ ಕಣ್ಗಾವಲು

    ಡಿಗ್ರಿ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಇನ್ಮುಂದೆ ಸಿಸಿಟಿವಿ ಕಣ್ಗಾವಲು

    ಬೆಂಗಳೂರು: ಡಿಗ್ರಿ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಇನ್ನು ಮುಂದೆ ಸಿಸಿಟಿವಿ (CCTV) ಕಣ್ಗಾವಲು ಇರಲಿದೆ. ಉನ್ನತ ಶಿಕ್ಷಣ ಇಲಾಖೆಯಡಿ ಬರುವ ಎಲ್ಲಾ ಶಿಕ್ಷಣ ಸಂಸ್ಥೆಗಳು (Educational Institutions) ಕಡ್ಡಾಯವಾಗಿ ಕ್ಯಾಂಪಸ್‌ಗಳಲ್ಲಿ ಸಿಸಿಟಿವಿ ಅಳವಡಿಕೆಗೆ ಸರ್ಕಾರ (Congress) ಆದೇಶ ಮಾಡಿದೆ.

    ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ, ಅನುದಾನಿತ, ಖಾಸಗಿ ಕಾಲೇಜುಗಳು  ಮತ್ತು ವಿಶ್ವವಿದ್ಯಾಲಯಗಳು ಕಡ್ಡಾಯವಾಗಿ ಸಿಸಿಟಿವಿ ಅಳವಡಿಕೆ ಮಾಡುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕಾಲೇಜು, ವಿವಿ ಕ್ಯಾಂಪಸ್‌ಗಳಲ್ಲಿ ರ‍್ಯಾಗಿಂಗ್, ಡ್ರಗ್ಸ್ ಚಟುವಟಿಕೆಗಳು, ಲೈಂಗಿಕ ಕಿರುಕುಳ ಪ್ರಕರಣಗಳು ಜಾಸ್ತಿ ಆಗುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕೆ ಉನ್ನತ ಶಿಕ್ಷಣ ಇಲಾಖೆ ಈ ಮಹತ್ವದ ನಿರ್ಧಾರ ಮಾಡಿದೆ. ಇದನ್ನೂ ಓದಿ: Haveri | ಶಾಲಾ ಬಸ್ ಚಾಲನೆ ವೇಳೆ ಹೃದಯಾಘಾತ – ಚಾಲಕ ಸಾವು

    ಉನ್ನತ ಶಿಕ್ಷಣ ಇಲಾಖೆ ಆದೇಶ ಬೆನ್ನಲ್ಲೇ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಕೆ ಮಾಡುವಂತೆ ಕಾಲೇಜು ಶಿಕ್ಷಣ ಇಲಾಖೆ ಆದೇಶ ಮಾಡಿದೆ. ಕಾಲೇಜುಗಳಲ್ಲಿ ಲಭ್ಯ ಇರುವ ಅನುದಾನದಲ್ಲಿ ಸಿಸಿಟಿವಿ ಅಳವಡಿಕೆ ಮಾಡುವಂತೆ ಸೂಚನೆ ನೀಡಲಾಗಿದೆ. ಜುಲೈ 21ರ ಒಳಗೆ ಸಿಸಿಟಿವಿ ಅಳವಡಿಕೆ ಬಗ್ಗೆ ಇಲಾಖೆಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಬಿಜೆಪಿ ಶಾಸಕ ವಿ ಸುನಿಲ್ ಕುಮಾರ್‌ಗೆ ಪಿತೃ ವಿಯೋಗ

    ಸಿಸಿ ಟಿವಿ ಅಳವಡಿಕೆಗೆ ಕಾರಣ ಏನು?
    * ಕಾಲೇಜು, ವಿವಿಗಳಲ್ಲಿ ಇತ್ತೀಚೆಗೆ ರ‍್ಯಾಗಿಂಗ್ ಪ್ರಕರಣಗಳು ಜಾಸ್ತಿ ಆಗುತ್ತಿದೆ. ಇದನ್ನ ನಿಯಂತ್ರಣ ಮಾಡಲು.
    * ಕಾಲೇಜುಗಳಲ್ಲಿ ಮತ್ತು ವಿವಿ ಕ್ಯಾಂಪಸ್‌ಗಳಲ್ಲಿ ಡ್ರಗ್ಸ್ ಮಾರಾಟ ಆಗುತ್ತಿರುವುದು ಹಾಗೂ ವಿದ್ಯಾರ್ಥಿಗಳು ಡ್ರಗ್ಸ್ ವ್ಯಸನಕ್ಕೆ ತುತ್ತಾಗುತ್ತಿದ್ದಾರೆ. ಇದರ ಬಗ್ಗೆ ನಿಗಾ ಇಡಲು.
    * ಕಾಲೇಜು, ವಿವಿಗಳಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ವರದಿ ಆಗುತ್ತಿವೆ. ಇಂತಹ ಕೇಸ್‌ಗಳ ಮೇಲೆ ನಿಗಾ ಇಡಲು.
    * ವಿವಿ, ಕಾಲೇಜು ಕ್ಯಾಂಪಸ್‌ಗಳಲ್ಲಿ ಅಕ್ರಮ ಚಟುವಟಿಕೆ ಪ್ರಕರಣಗಳು ಜಾಸ್ತಿ ಆಗುತ್ತಿವೆ. ಇದನ್ನ ನಿಯಂತ್ರಣ ಮಾಡುವ ದೃಷ್ಟಿಯಿಂದ ಸಿಸಿಟಿವಿ ಅಳವಡಿಕೆಗೆ ನಿರ್ಧಾರ.

  • ಆ ಹುಡುಗಿಯ ಖಾಸಗಿ ವಿಡಿಯೋ ಹಂಚಬೇಡಿ ಎಂದು ಕೇಳಿಕೊಂಡ ನಟ ಸೋನು ಸೋದ್

    ಆ ಹುಡುಗಿಯ ಖಾಸಗಿ ವಿಡಿಯೋ ಹಂಚಬೇಡಿ ಎಂದು ಕೇಳಿಕೊಂಡ ನಟ ಸೋನು ಸೋದ್

    ಚಂಡೀಗಡ (Chandigarh) ವಿಶ್ವ ವಿದ್ಯಾಲಯದ ವಿದ್ಯಾರ್ಥಿನಿಲಯದಲ್ಲಿ ನಡೆದಿದೆ ಎನ್ನಲಾದ ತಲೆತಗ್ಗಿಸುವ ಕೆಲಸ, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ವಿಶ್ವ ವಿದ್ಯಾಲಯದ ಆವರಣದಲ್ಲಿ ಈ ಘಟನೆಯ ಕುರಿತು ಪ್ರತಿಭಟಿಸಲಾಗುತ್ತಿದ್ದು, ತಪ್ಪತಸ್ಥರನ್ನು ಕೂಡಲೇ ಬಂಧಿಸಿ, ಉಗ್ರ ಶಿಕ್ಷೆ ನೀಡುವಂತೆ ಮನವಿ ಮಾಡಿಕೊಳ್ಳಲಾಗುತ್ತಿದೆ. ಅಲ್ಲದೇ ಇನ್ನೂ 60 ಹುಡುಗಿಯರು ಈ ಸಂಕಷ್ಟಕ್ಕೆ ಸಿಲುಕೊಳ್ಳಲಿದ್ದಾರೆ ಎನ್ನುವುದು ಮತ್ತಷ್ಟು ಆತಂಕ್ಕೆ ಕಾರಣವಾಗಿದೆ.

    ಚಂಡೀಗಡ ವಿವಿಯ (University)  ಹಾಸ್ಟೇಲ್ ನಲ್ಲಿ ಹುಡುಗಿಯೊಬ್ಬಳು, ಬಾತ್ ರೂಮ್ ಗೆ ಹೋಗುವ ಹುಡುಗಿಯರ ಖಾಸಗಿ ವಿಡಿಯೋಗಳನ್ನು (Private Video) ಚಿತ್ರಿಸಿ, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾಳೆ. ಅಲ್ಲದೇ, 60ಕ್ಕೂ ಹೆಚ್ಚು ಇಂತಹ ವಿಡಿಯೋಗಳು ಇನ್ನೂ ಇವೆ ಎಂದು ಹೇಳಿದ್ದಾಳೆ ಎನ್ನಲಾಗುತ್ತಿದೆ. ಹಾಗಾಗಿ, ಯಾರದೆಲ್ಲ ವಿಡಿಯೋ ಆಚೆ ಬಂದು, ಇನ್ನೇನು ಆವಾಂತರ ಸೃಷ್ಟಿ ಆಗತ್ತೋ ಅನ್ನುವ ಆತಂಕ ವಿವಿ ಆವರಣದಲ್ಲಿರುವ ಹುಡುಗಿಯರದ್ದು. ಇದನ್ನೂ ಓದಿ:ಟಿವಿ ಬಿಗ್ ಬಾಸ್‌ಗೆ ಈ ಕಿರುತೆರೆ ನಟಿ ಬರೋದು ಪಕ್ಕಾ

    ಈ ವಿಷಯ ತಿಳಿಯುತ್ತಿದ್ದಂತೆಯೇ ನಟ ಸೋನು ಸೋದ್ (Sonu Sodh), ನೊಂದವರ ಬೆನ್ನಿಗೆ ನಿಂತಿದ್ದಾರೆ. ಅಲ್ಲದೇ, ಇಂತಹ ಯಾವುದೇ ವಿಡಿಯೋಗಳನ್ನು ನೋಡಬೇಡಿ ಮತ್ತು ಇತರರಿಗೆ ಕಳುಹಿಸಬೇಡಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ, ಈ ಕೃತ್ಯವನ್ನು ಖಂಡಿಸಿದ್ದಾರೆ. ಹೀನ ಮನಸ್ಥಿತಿಯವರನ್ನು ಸುಮ್ಮನೆ ಬಿಡಬೇಡಿ ಎಂದು ಮನವಿ ಮಾಡಿರುವ ಅವರು, ಹೆಣ್ಣು ಮಕ್ಕಳಿಗೆ ಗೌರವವನ್ನು ಕೊಡಿ ಎಂದು ವಿಶೇಷವಾಗಿ ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಣಿ ಚೆನ್ನಮ್ಮ ವಿವಿಯಿಂದ ನಟ ರಮೇಶ್ ಅರವಿಂದ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

    ರಾಣಿ ಚೆನ್ನಮ್ಮ ವಿವಿಯಿಂದ ನಟ ರಮೇಶ್ ಅರವಿಂದ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

    ನ್ನಡದ ಹೆಸರಾಂತ ನಟ, ಮೊನ್ನೆಯಷ್ಟೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿರುವ ರಮೇಶ್ ಅರವಿಂದ್ (Ramesh Aravind) ಸೇರಿ ಮೂವರಿಗೆ ರಾಣಿ ಚೆನ್ನಮ್ಮ (Rani Chennamma) ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್ (Honorary Doctorate) ಘೋಷಿಸಲಾಗಿದೆ. ಕನ್ನಡ ಚಿತ್ರರಂಗಕ್ಕೆ (Sandalwood) ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಮೇಶ್ ಅವರನ್ನು ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಲಾಗಿದೆ.

    ರಮೇಶ್ ಅರವಿಂದ್ ಅವರ ಜೊತೆ ಸಮಾಜ ಸೇವೆ ಕ್ಷೇತ್ರದಲ್ಲಿ ವಿ.ರವಿಚಂದರ್, ಧಾರ್ಮಿಕ ಕ್ಷೇತ್ರದಲ್ಲಿ ಸೇವೆಗೈದ ಮಾತೆ ಅಕ್ಕ ಅನ್ನಪೂರ್ಣ ‌ತಾಯಿಗೆ ಗೌರವ ಡಾಕ್ಟರೇಟ್ ಘೋಷಣೆಯಾಗಿದೆ. ಸೆ.14 ರಂದು ಮಧ್ಯಾಹ್ನ 12 ಕ್ಕೆ ಸುವರ್ಣಸೌಧದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ವಿ.ವಿ ತಿಳಿಸಿದೆ. ಇದನ್ನೂ ಓದಿ:ನಂದಿನಿ ಔಟ್ ಆದ್ಮೇಲೆ ಸಾನ್ಯ ಜೊತೆ ಜಶ್ವಂತ್ ಲವ್ವಿ-ಡವ್ವಿ: ರೂಪೇಶ್‌ಗೆ ಟೆನ್ಷನ್ ಶುರು

    ಘಟಿಕೋತ್ಸವದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರಚಂದ ಗೆಹ್ಲೋಟ್ ವಹಿಸಲಿದ್ದು, ಆಂಧ್ರದ ಕೇಂದ್ರಿಯ ಬುಡಕಟ್ಟು ವಿವಿ ಕುಲಪತಿ ಪ್ರೊ. ಟಿ.ವಿ ಕಟ್ಟಿಮನಿ ಅವರಿಂದ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.  ಉನ್ನತ ಶಿಕ್ಷಣ ‌ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ ಎಂದು ರಾಣಿ ‌ಚೆನ್ನಮ್ಮ ವಿವಿ ಕುಲಪತಿ ಪ್ರೊ. ರಾಮಚಂದ್ರೆಗೌಡ ಮಾಹಿತಿ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಪತ್ನಿ ಮನೆಯಲಿಲ್ಲ, ಬಂದು ಅಡುಗೆ ಮಾಡು’- ನಡುರಾತ್ರಿ ವಿದ್ಯಾರ್ಥಿನಿಗೆ ಪ್ರೊಫೆಸರ್ ಮೆಸೇಜ್

    ‘ಪತ್ನಿ ಮನೆಯಲಿಲ್ಲ, ಬಂದು ಅಡುಗೆ ಮಾಡು’- ನಡುರಾತ್ರಿ ವಿದ್ಯಾರ್ಥಿನಿಗೆ ಪ್ರೊಫೆಸರ್ ಮೆಸೇಜ್

    ಡೆಹ್ರಾಡೂನ್: ವಿದ್ಯಾರ್ಥಿನಿಗೆ ನಡುರಾತ್ರಿ ಸಂದೇಶ ರವಾನೆ ಮಾಡಿದ್ದ ಪ್ರೊಫೆಸರ್, ತನ್ನ ಪತ್ನಿ ಮನೆಯಲ್ಲಿ ಇಲ್ಲ. ಬಂದು ಅಡುಗೆ ಮಾಡಿಕೊಡು ಎಂದು ಮೆಸೇಜ್ ಮಾಡಿ ಕಿರುಕುಳ ನೀಡಿರುವ ಘಟನೆ ಉತ್ತರಖಂಡ್ ಪಂತ್ ವಿಶ್ವವಿದ್ಯಾಲಯದಲ್ಲಿ ನಡೆದಿದೆ.

    ಪ್ರೊಫೆಸರ್ ಕೆಟ್ಟ ಸಂದೇಶದ ಕುರಿತು ವಿದ್ಯಾರ್ಥಿನಿ ವಿಶ್ವವಿದ್ಯಾಲಯದ ವಿಸಿ ಅವರಿಗೆ ದೂರು ನೀಡಿದ್ದು, ಮಹಿಳಾ ವಿದ್ಯಾರ್ಥಿಗಳ ಹಾಸ್ಟೆಲ್ ವಾರ್ಡನ್ ಆಗಿ ಜವಾಬ್ದಾರಿ ವಹಿಸಿಕೊಂಡಿದ್ದ ಪ್ರೊಫೆಸರ್ ವಿರುದ್ಧ ಕ್ರಮಕ್ಕೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

    ಘಟನೆ ಸಂಬಂಧ ವಿದ್ಯಾರ್ಥಿನಿ ವಿಸಿ ಅವರಿಗೆ ಸಂದೇಶದ ಫೋಟೋವನ್ನು ಸಾಕ್ಷಿಯಾಗಿ ನೀಡಿದ್ದು, ವಿಶ್ವವಿದ್ಯಾಲಯ ಕಮಿಟಿ ಪ್ರೊಫೆಸರ್ ನನ್ನು ಹಾಸ್ಟೆಲ್ ವಾರ್ಡನ್ ಹುದ್ದೆಯಿಂದ ತೆರವು ಮಾಡಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಆದರೆ ಪ್ರೊಫೆಸರ್ ವಿರುದ್ಧ ಪೊಲೀಸ್ ದೂರು ದಾಖಲಾಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

    ಪ್ರಕರಣದ ಸಂಬಂಧ ಮಾಹಿತಿ ಪಡೆದಿರುವ ರಾಜ್ಯಪಾಲರು ಪ್ರೊಫೆಸರ್ ವಿರುದ್ಧ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದಾರೆ. ಅಲ್ಲದೇ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ನೀಡುವಂತೆ ತಿಳಿಸಿದ್ದಾರೆ. ಪ್ರಕರಣದ ಕುರಿತಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ವಿಶ್ವವಿದ್ಯಾಲಯ ರಿಜಿಸ್ಟ್ರಾರ್ ಎಪಿ ಶರ್ಮಾ, ರಾಜ್ಯಪಾಲರ ನಿರ್ದೇಶನದಂತೆ ವಾರ್ಡನ್ ಹುದ್ದೆಯಿಂದ ತೆಗೆದು ಹಾಕಲಾಗಿದ್ದು, ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದ್ದೇವೆ. ವಿಶ್ವವಿದ್ಯಾಲಯದಲ್ಲಿರುವ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಎದುರಾಗಂತೆ ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

  • ಕುಲಪತಿಗಳು, ವಿಶ್ರಾಂತ ಕುಲಪತಿಗಳು ಎಲ್ಲರು ನನಗೆ ಸಲಹೆಗಾರರು-ಪ್ರತ್ಯೇಕ ಹುದ್ದೆ ಏನೂ ಇಲ್ಲ: ಜಿಟಿಡಿ

    ಕುಲಪತಿಗಳು, ವಿಶ್ರಾಂತ ಕುಲಪತಿಗಳು ಎಲ್ಲರು ನನಗೆ ಸಲಹೆಗಾರರು-ಪ್ರತ್ಯೇಕ ಹುದ್ದೆ ಏನೂ ಇಲ್ಲ: ಜಿಟಿಡಿ

    ಮೈಸೂರು: ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಅವರು ಕುಟುಂಬ ಸಮೇತರಾಗಿ ಇಂದು ಮೈಸೂರು ಚಾಮುಂಡೇಶ್ವರಿ ದೇವಿ ಸೇರಿದಂತೆ ಉತ್ತನಹಳ್ಳಿಯ ತ್ರಿಪುರ ಸುಂದರಿ ದೇವಾಲಯ ಹಾಗೂ ನಂಜನಗೂಡಿನ ನಂಜುಂಡೇಶ್ವರನ ದೇವಾಲಯ, ನನ್ನೇಶ್ವರ ದೇಗುಲಕ್ಕೆ ಭೇಟಿ ನೀಡಿ ದರ್ಶನ ಪಡೆದರು.

    ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಕುಲಪತಿಗಳು ವಿಶ್ರಾಂತ ಕುಲಪತಿಗಳು ಎಲ್ಲರೂ ನನಗೆ ಸಲಹೆಗಾರರು. ಅದಕ್ಕೆಂದು ಪ್ರತ್ಯೇಕ ಹುದ್ದೆ ಏನೂ ಇಲ್ಲ ಎಂದು ಹೇಳುವ ಮೂಲಕ ಉನ್ನತ ಶಿಕ್ಷಣ ಇಲಾಖೆಗೆ ಸಲಹೆಗಾರ ಹುದ್ದೆ ಸೃಷ್ಟಿ ಇಲ್ಲ ಎಂದು ಸ್ಪಷ್ಟಪಡಿಸಿದರು.

    ಇದೇ ವೇಳೆ ಮೈಸೂರು ವಿವಿ ಕುಲಪತಿ ಹುದ್ದೆ ಸೇರಿದಂತೆ ಇತರೆ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ಕ್ರಮ ಕೈಗೊಳ್ಳುತ್ತೇನೆ. ಇಲಾಖೆಯನ್ನು ಬಡವರ ಬಳಿಗೆ ಗ್ರಾಮಾಂತರಕ್ಕೆ ಕೊಂಡೊಯ್ಯುತ್ತೇನೆ ಎಂದರು.

    ಗುರುವಾರ ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಮೈಸೂರು ಭಾಗದ ಜೆಡಿಎಸ್ ಮುಖಂಡರ ನಡುವೆ ಉಂಟಾದ ಅಸಮಾಧಾನ ವಿಚಾರದ ಪ್ರಶ್ನೆಗೆ ಉತ್ತರಿಸಿದ, ನಾನೂ ಆ ವೇಳೆ ಸಭೆಯಲ್ಲಿ ಇರಲಿಲ್ಲ. ಮೇಲ್ಮನೆ ಪ್ರಶ್ನೋತ್ತರ ಕಲಾಪದಲ್ಲಿ ಭಾಗಿಯಾಗಿದ್ದೆ. ಆ ವಿಚಾರ ನನಗೆ ಗೊತ್ತಿಲ್ಲ ಎಂದರು.

    ಕೆಆರ್‌ಎಸ್‌ ನಲ್ಲಿ ಬಾಗಿನ: ಜುಲೈ20ರ ಮೊದಲ ಆಷಾಢ ಶುಕ್ರವಾರಕ್ಕೆ ಮೈಸೂರಿಗೆ ಸಿಎಂ ಕುಮಾರಸ್ವಾಮಿ ಆಗಮಿಸುತ್ತಾರೆ. ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಲಿರುವ ಸಿಎಂ ಬಳಿಕ ಕೆಆರ್‍ರಸ್ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡುತ್ತಾರೆ. ತದನಂತರ ಕಬಿನಿ ಜಲಾಶಕ್ಕೂ ಬಾಗಿನ ಅರ್ಪಿಸಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.

  • ಶೆಟ್ಟಿಗೆರೆ ಗ್ರಾಮವನ್ನು ದತ್ತು ಪಡೆಯಲಿದೆ ರೇವಾ ವಿಶ್ವವಿದ್ಯಾಲಯ

    ಶೆಟ್ಟಿಗೆರೆ ಗ್ರಾಮವನ್ನು ದತ್ತು ಪಡೆಯಲಿದೆ ರೇವಾ ವಿಶ್ವವಿದ್ಯಾಲಯ

    ಬೆಂಗಳೂರು: ವಿಶ್ವ ಪರಿಸರ ದಿನಾಚಾರಣೆಯ ಅಂಗವಾಗಿ ರೇವಾ ವಿಶ್ವವಿದ್ಯಾಲಯ ತನ್ನ ವ್ಯಾಪ್ತಿಯಲ್ಲಿ ಬರುವ ಗ್ರಾಮವನ್ನು ದತ್ತು ತೆಗೆದುಕೊಳ್ಳಲು ಮುಂದಾಗಿದೆ.

    ಶನಿವಾರ ಬೆಳಗ್ಗೆ 11 ಗಂಟೆಗೆ ತನ್ನ ವ್ಯಾಪ್ತಿಯಲ್ಲಿ ಬರುವ ಶೆಟ್ಟಿಗೆರೆ ಗ್ರಾಮವನ್ನು ದತ್ತು ಪಡೆದು ಮಾದರಿ ಗ್ರಾಮವನ್ನಾಗಿ ಮಾಡಲು ರೇವಾ ವಿವಿ ಮುಂದಾಗಿದೆ.

    ಈ ಕಾರ್ಯಕ್ರಮದಲ್ಲಿ ರೇವಾ ವಿವಿಯ ಕುಲಾಧಿಪತಿ ಡಾ. ಪಿ. ಶ್ಯಾಮರಾಜು, ಕುಲಪತಿ ಡಾ.ಎಸ್. ವೈ ಕುಲಕರ್ಣಿ, ಶೆಟ್ಟಿಗರೆ ಗ್ರಾಮ ಪಂಚಾಯತ್ ಅಧ್ಯಕ್ಷ ಆನಂದ ಸೇರಿದಂತೆ ಹಲವು ಅತಿಥಿಗಳು ಭಾಗವಹಿಸಲಿದ್ದಾರೆ.

    ಮಾದರಿ ಗ್ರಾಮವನ್ನಾಗಿ ಹೇಗೆ ಮಾಡಲಾಗುತ್ತೆ?
    ಆರ್ಥಿಕ ಅಭಿವೃದ್ಧಿಗೋಸ್ಕರ ಕೌಶಲ್ಯ ತರಬೇತಿ, ಸಂಚಾರಿ ಆರೋಗ್ಯ ಘಟಕ, ಐಸಿಟಿ ಸೌಲಭ್ಯಗಳೊಂದಿಗೆ ಶಾಲೆ/ಉನ್ನತ ಶಿಕ್ಷಣವನ್ನು ಮೇಲ್ದರ್ಜೆಗೇರಿಸುವುದು, ಸ್ವಚ್ಛತೆ, ಶುದ್ಧ ಕುಡಿಯುವ ನೀರಿನ ಸೌಲಭ್ಯ, ಘನ ಮತ್ತು ಹಸಿ ತ್ಯಾಜ್ಯ ನಿರ್ವಹಣೆ ಗ್ರಾಮದಲ್ಲಿ ರಸ್ತೆ ಮತ್ತು ಚರಂಡಿ ವ್ಯವಸ್ಥೆ, ಬೀದಿ ದೀಪಗಳು, ರಸ್ತೆ ಸಂಪರ್ಕ, ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಸುಧಾರಣೆ, ಡಿಜಿಟಲ್ ಸಾಕ್ಷರತೆ, ಮಹಿಳಾ ಸಬಲೀಕರಣ, ಹೆಣ್ಣು ಮಕ್ಕಳ ಶಿಕ್ಷಣ, ಅಪೌಷ್ಟಿಕತೆ ರಹಿತ ಗ್ರಾಮ, ಮಾಲಿನ್ಯ ಮುಕ್ತ ಗ್ರಾಮ, ಪರಿಸರ ಸಂರಕ್ಷಣೆ:ಸಸಿ ನೆಡುವ ಕಾರ್ಯಕ್ರಮ, ಆರೋಗ್ಯ ಮತ್ತು ಮಕ್ಕಳ ಕಲ್ಯಾಣ, ಹಿಂದುಳಿದ ವರ್ಗದವರಿಗೆ ಉತ್ತೇಜನ ಮತ್ತು ಮಾಹಿತಿ.