Tag: ವಿಶ್ವ ಹಿಂದೂ ಪರಿಷತ್

  • ಹಾವೇರಿ | ಹಿಂದೂ ಯುವತಿ ಸ್ವಾತಿ ಹತ್ಯೆ ಖಂಡಿಸಿ ಮಾ.17 ರಂದು ಮಾಸೂರು ಬಂದ್‌ಗೆ ಕರೆ

    ಹಾವೇರಿ | ಹಿಂದೂ ಯುವತಿ ಸ್ವಾತಿ ಹತ್ಯೆ ಖಂಡಿಸಿ ಮಾ.17 ರಂದು ಮಾಸೂರು ಬಂದ್‌ಗೆ ಕರೆ

    ಹಾವೇರಿ: ಹಿಂದೂ ಯುವತಿ ಸ್ವಾತಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಮಾ.17 ರಂದು ಮಾಸೂರು (Masur) ಪಟ್ಟಣ ಬಂದ್‌ಗೆ ಕರೆ ನೀಡಿದೆ.

    ಅಮಾಯಕ ಯುವತಿಯನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡು ನಂತರ ಅಮಾನವೀಯವಾಗಿ ಕೊಲೆ ಮಾಡಿದ್ದಾರೆ. ಇವರಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳು ನಾಳೆ (ಮಾ.17) ಜಿಲ್ಲೆಯಾದ್ಯಂತ ಪ್ರತಿಭಟನೆ ಹಾಗೂ ಮಾಸೂರು ಬಂದ್‌ಗೆ ಕರೆ ಕೊಟ್ಟಿವೆ. ಅಲ್ಲದೇ ಮಾಲೀಕರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟನ್ನು ಮುಚ್ಚಿ ಬಂದ್‌ಗೆ ಬೆಂಬಲ ನೀಡುವಂತೆ ಮನವಿ ಮಾಡಿವೆ. ಇದನ್ನೂ ಓದಿ: ‘ಜಗದೋದ್ಧಾರನಾ ಆಡಿಸಿದಳು ಯಶೋಧೆ’ ಹಾಡು ಹಾಡಿದ ಸಂಸದ ತೇಜಸ್ವಿ ಸೂರ್ಯ ಪತ್ನಿ

    ಇತ್ತೀಚೆಗೆ ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿಕೊಂಡು, ಪ್ರೀತಿಯ ಬಲೆಗೆ ಬೀಳಿಸಿ ಜೀವ ತೆಗೆಯುತ್ತಿದ್ದಾರೆ. ಇನ್ನಾದರೂ ಹಿಂದೂಗಳು ಎಚ್ಚೆತ್ತುಕೊಂಡು ಸ್ವಾತಿಯಂತಹ ಅಮಾಯಕ ಹೆಣ್ಣುಮಕ್ಕಳಿಗಾಗುತ್ತಿರುವ ಅನ್ಯಾಯವನ್ನು ತಡೆಯಬೇಕು. ಹುಬ್ಬಳ್ಳಿಯ ನೇಹಾ, ಮಾಸೂರಿನ ಸ್ವಾತಿಗೆ ಆದ ಅನ್ಯಾಯ ನಮ್ಮ ಮನೆಯ ಮಕ್ಕಳಿಗೆ ಆಗಬಾರದೆಂದರೆ, ನಾವು ಜಾಗೃತರಾಗಬೇಕು ಎಂದು ವಿಹೆಚ್‌ಪಿ ಮುಖಂಡರು ಒತ್ತಾಯಿಸಿದರು. ಇದನ್ನೂ ಓದಿ: ಸಿನಿಮಾ ಮೂಲಕ ಪುನೀತ್ ಜೀವಂತವಾಗಿದ್ದಾರೆ: ‘ಅಪ್ಪು’ ಸಿನಿಮಾ ಬಗ್ಗೆ ರಮ್ಯಾ ಮಾತು

    ಹುಬ್ಬಳ್ಳಿ ನೇಹಾ ಹಿರೇಮಠ್ ಸಾವಿನ ಕಹಿ ನೆನೆಪು ಮಾಸುವ ಮುನ್ನವೇ ಲವ್ ಜಿಹಾದ್‌ಗೆ ಹಾವೇರಿಯಲ್ಲಿ ಮತ್ತೊಂದು ಬಲಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ದುರುಳರಿಗೆ ಗಲ್ಲು ಶಿಕ್ಷೆಯಾಗಬೇಕು. ಹಾಗಿದ್ದರೆ ಮಾತ್ರ ಇಂಥಾ ಕೃತ್ಯ ಮಾಡುವವರಿಗೆ ಭಯ ಹುಟ್ಟುತ್ತದೆ. ಹೀಗಾಗಿ ಸ್ವಾತಿ ಹತ್ಯೆ ಮಾಡಿದ ಮೂವರಿಗೂ ಗಲ್ಲು ಶಿಕ್ಷೆಯಾಗಬೇಕು ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಒತ್ತಾಯಿಸಿದರು. ಇದನ್ನೂ ಓದಿ: ಮಂಗಳೂರು ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆ

  • ಪೇಜಾವರ ಶ್ರೀ ಅಪಮಾನಿಸಿದ್ದು ಹಿಂದೂ ಸಮಾಜಕ್ಕೆ ಮಾಡಿದ ಅವಮಾನ: ಸಿಎಂ ವಿರುದ್ಧ ವಿಹೆಚ್‌ಪಿ ಕಿಡಿ

    ಪೇಜಾವರ ಶ್ರೀ ಅಪಮಾನಿಸಿದ್ದು ಹಿಂದೂ ಸಮಾಜಕ್ಕೆ ಮಾಡಿದ ಅವಮಾನ: ಸಿಎಂ ವಿರುದ್ಧ ವಿಹೆಚ್‌ಪಿ ಕಿಡಿ

    – ಸಂವಿಧಾನದ ಬಗ್ಗೆ ಪೇಜಾವರ ಶ್ರೀಗಳು ಹೇಳಿಕೆ ನೀಡಿಲ್ಲ ಎಂದ ಎಂ.ಬಿ.ಪುರಾಣಿಕ್‌

    ಉಡುಪಿ: ಸಂವಿಧಾನ ಕುರಿತ ಪೇಜಾವರ ಶ್ರೀ (Pejawar Swamiji) ನೀಡಿದ್ದಾರೆ ಎನ್ನಲಾದ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ನಾನು ಸಂವಿಧಾನ ಕುರಿತು ಮಾತನಾಡಿಲ್ಲ ಎಂದು ಪೇಜಾವರ ಶ್ರೀಗಳು ಸ್ಪಷ್ಟಪಡಿಸಿದರೂ ರಾಜ್ಯಾದ್ಯಂತ ಟೀಕೆ ವ್ಯಕ್ತವಾಗುತ್ತಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ವಿಶ್ವಹಿಂದೂ ಪರಿಷತ್ (Vishwa Hindu Parishad) ಮುಂದಾಗಿದೆ.

    ಉಡುಪಿಯಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಮುಖಂಡರು, ಪೇಜಾವರ ಶ್ರೀ ದೀನ-ದಲಿತ ಹಿಂದೂಗಳ ಸೇವೆ ಮಾಡುತ್ತಿದ್ದಾರೆ. ಶ್ರೀಗಳಿಗೆ ಮಾಡಿದ ಅವಮಾನ ಹಿಂದೂ ಸಮಾಜಕ್ಕೆ ಮಾಡಿದ ಅವಮಾನ. ಅವರಿಗೆ ನೋವಾದರೆ ಇಡೀ ಹಿಂದೂ ಸಮಾಜಕ್ಕೆ ನೋವಾದಂತೆ. ಮಠಗಳು ಹಿಂದೂ ಸಮಾಜದ ಅವಿಭಾಜ್ಯ ಅಂಗ. ಪೇಜಾವರ ಶ್ರೀಗಳ ಮಾತುಗಳನ್ನು ತಿರುಚಲಾಗಿದೆ, ಇದಕ್ಕೆ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯಿಂದ ಕನ್ನಡಿಗರಿಗೆ ದ್ರೋಹ: ರಾಜ್ಯಸಭೆ ಸಂಸದ ಜಿ.ಸಿ ಚಂದ್ರಶೇಖರ್ ಆಕ್ರೋಶ

    ಶ್ರೀಗಳು ಸಂವಿಧಾನ ಬದಲು ಮಾಡುವ ಹೇಳಿಕೆ ನೀಡಿದ್ದಾಗಿ ಸಿದ್ದರಾಮಯ್ಯ ಹೇಳಿದ್ದಾರೆ, ಇದರಿಂದ ರಾಜ್ಯಾದ್ಯಂತ ಸಂಚಲನ ಉಂಟಾಗಿದೆ. ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸುತ್ತೇವೆ. ಹಿಂದು ನಾಯಕರು ಮಾತನಾಡಿದರೆ ಸುಮೋಟೊ ಕೇಸು ದಾಖಲಿಸುತ್ತೀರಿ. ಬಿಜಾಪುರದ ಹೋರಾಟ ಸೇರಿದಂತೆ ರಾಜ್ಯಾದ್ಯಂತ ಶ್ರೀಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಲಾಗಿದೆ. ಹಿಂದುಗಳ ಬಗ್ಗೆ ತಾರತಮ್ಯ ಮಾಡುತ್ತಿದ್ದೀರಿ ಎಂದು ಬೇಸರ ಹೊರಹಾಕಿದ್ದಾರೆ.

    ಶ್ರೀಗಳ ಬಗ್ಗೆ ಅಪಚಾರ ಮಾಡುವವರ ವಿರುದ್ಧ ತಕ್ಷಣ ಕಾನೂನು ಕ್ರಮ ಆಗಬೇಕು. ಸ್ವಾಮಿಗಳನ್ನು ಟಾರ್ಗೆಟ್ ಮಾಡುವ ವ್ಯವಸ್ಥಿತ ಸಂಚು ನಡೆಯುತ್ತಿದೆ. ಪೇಜಾವರ ಶ್ರೀಗಳಿಗೆ ಅವಮಾನ ಆದರೂ ಸರ್ಕಾರ ಸುಮ್ಮನೆ ಕುಳಿತಿದೆ. ಈಗಾಗಲೇ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನು ಭೇಟಿಯಾಗಿದ್ದೇವೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೂ ಮನವಿ ಕೊಟ್ಟಿದ್ದೇವೆ. ಕಾನೂನು ತಜ್ಞರ ಸಂಪರ್ಕದಲ್ಲಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಸಂಸತ್‌ ಭವನ ಮೇಲಿನ ದಾಳಿಗೆ 23 ವರ್ಷ – ಹುತಾತ್ಮಕರಿಗೆ ಮೋದಿ ಸೇರಿ ಗಣ್ಯರಿಂದ ನಮನ

  • ಮುಸ್ಲಿಂ ಯುವಕರ ಬೈಕ್‌ ರ‍್ಯಾಲಿಗೆ ಅನುಮತಿ – ಬಿ.ಸಿ ರೋಡ್‌ನಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ

    ಮುಸ್ಲಿಂ ಯುವಕರ ಬೈಕ್‌ ರ‍್ಯಾಲಿಗೆ ಅನುಮತಿ – ಬಿ.ಸಿ ರೋಡ್‌ನಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ

    – ಬೈಕ್ ರ‍್ಯಾಲಿ ವೇಳೆ ಹಸಿರು ಬಾವುಟ ಪ್ರದರ್ಶನ – ಬಜರಂಗದಳ, ವಿಹೆಚ್‌ಪಿ ಆಕ್ರೋಶ

    ಮಂಗಳೂರು: ಈದ್ ಮಿಲಾದ್ (Eid Milad) ಹಿನ್ನೆಲೆ ಮುಸ್ಲಿಂ ಯುವಕರಿಗೆ ಬೈಕ್ ರ‍್ಯಾಲಿಗೆ (Bike Rally) ಪೊಲೀಸರು ಅನುಮತಿ ನೀಡಿದ ಬಳಿಕ ಬಂಟ್ವಾಳ (Bantwal) ತಾಲೂಕಿನ ಬಿ.ಸಿ ರೋಡ್‌ನಲ್ಲಿ (B C Road) ಮತ್ತೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

    ಪೊಲೀಸರ ಬಿಗಿ ಬಂದೋಬಸ್ತ್‌ನಲ್ಲಿ ಬಿ.ಸಿ ರೋಡ್ ಚಲೋ ಹಾಗೂ ಈದ್ ಮಿಲಾದ್ ಮೆರವಣಿಗೆ ಶಾಂತಿಯುತವಾಗಿ ನಡೆದಿತ್ತು. ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ಬಳಿಕ ಪೊಲೀಸರು ಈದ್ ಮಿಲಾದ್ ಹಿನ್ನೆಲೆ ಮುಸ್ಲಿಂ ಯುವಕರಿಗೆ ಬೈಕ್ ರ‍್ಯಾಲಿ ಅನುಮತಿ ನೀಡಿದ್ದರು. ಈ ವೇಳೆ ಬೈಕ್ ರ‍್ಯಾಲಿ ಮಾಡುತ್ತಾ ಯುವಕರು ಹಸಿರು ಧ್ವಜವನ್ನು ಹಾರಿಸಿದರು. ಇದನ್ನು ಕಂಡ ಹಿಂದೂ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರ‍್ಯಾಲಿ ವಿರೋಧಿಸಿ ಬಜರಂಗದಳ ಹಾಗೂ ವಿಹೆಚ್‌ಪಿ ಹಿಂದೂ ಸಂಘಟನೆಗಳು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.ಇದನ್ನೂ ಓದಿ: ಈದ್‌ ಮೆರವಣಿಗೆಗೆ ಪ್ರತಿಯಾಗಿ ಬಜರಂಗದಳ-ವಿಹೆಚ್‌ಪಿಯಿಂದ ಬಿ.ಸಿ ರೋಡ್ ಚಲೋಗೆ ಕರೆ

    ಅಲ್ಲದೇ ಹಿಂದೂ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ತಳ್ಳಾಟ ನೂಕಾಟ ನಡೆದಿದೆ. ಬಳಿಕ ಎಚ್ಚೆತ್ತ ಪೊಲೀಸರು ಮುಸ್ಲಿಂ ಯುವಕರಿಂದ ಹಸಿರು ಧ್ವಜ ಹಾಗೂ ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

    ಏನಿದರ ಹಿನ್ನೆಲೆ?
    ಬಜರಂಗದಳ (Bajarangadala) ಹಾಗೂ ವಿಹೆಚ್‌ಪಿಯಿಂದ (VHP) ಬಿ.ಸಿ ರೋಡ್ ಚಲೋ ಕರೆ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್‌ನಲ್ಲಿ ಜಮಾಯಿಸಿದ್ದರು. ಬಜರಂಗದಳ ಹಾಗೂ ವಿಹೆಚ್‌ಪಿಯ ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ ನಡೆದಿತ್ತು.ಇದನ್ನೂ ಓದಿ: ಈದ್ ಮಿಲಾದ್, ಹಿಂದೂ ಸಂಘಟನೆ ಮೆರವಣಿಗೆಗಳು ಶಾಂತಿಯುತವಾಗಿ ನಡೆದಿದೆ: ದ.ಕ ಎಸ್ಪಿ

    ಪೊಲೀಸರು ಬಿಗಿ ಬಂದೋಬಸ್ತ್‌ನಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಗೊಳಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಇದೀಗ ಮುಸ್ಲಿಂ ಯುವಕರ ಬೈಕ್ ರ‍್ಯಾಲಿಗೆ ಅನುಮತಿ ನೀಡಿದ್ದು, ಬೈಕ್ ರ‍್ಯಾಲಿ ವೇಳೆ ಮುಸ್ಲಿಂ ಯುವಕರು ಹಸಿರು ಬಾವುಟ ಹಾರಿಸಿರುವುದು ತ್ರೀವ ಆಕ್ರೋಶ ಉಂಟಾಗಿದೆ. ಮತ್ತೆ ಉದ್ವಿಗ್ನ ಪರಿಸ್ಥಿತಿ ತಲುಪಿದೆ.

  • ಈದ್ ಮಿಲಾದ್, ಹಿಂದೂ ಸಂಘಟನೆ ಮೆರವಣಿಗೆಗಳು ಶಾಂತಿಯುತವಾಗಿ ನಡೆದಿದೆ: ದ.ಕ ಎಸ್ಪಿ

    ಈದ್ ಮಿಲಾದ್, ಹಿಂದೂ ಸಂಘಟನೆ ಮೆರವಣಿಗೆಗಳು ಶಾಂತಿಯುತವಾಗಿ ನಡೆದಿದೆ: ದ.ಕ ಎಸ್ಪಿ

    ಮಂಗಳೂರು: ಪೊಲೀಸರ ಬಿಗಿ ಬಂದೋಬಸ್ತ್‌ನಲ್ಲಿ ಬಿ.ಸಿ ರೋಡ್ ಚಲೋ ಹಾಗೂ ಈದ್ ಮಿಲಾದ್ ಮೆರವಣಿಗೆ ಶಾಂತಿಯುತವಾಗಿ ನಡೆದಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಗಿರೀಶ್.ಎನ್  (Girish.N) ತಿಳಿಸಿದ್ದಾರೆ.

    ಬಜರಂಗದಳ ಹಾಗೂ ವಿಹೆಚ್‌ಪಿಯಿಂದ ಬಿ.ಸಿ ರೋಡ್ (B C Road) ಚಲೋ ಕರೆ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್‌ನಲ್ಲಿ ಜಮಾಯಿಸಿದ್ದರು. ಬಜರಂಗದಳ ಹಾಗೂ ವಿಹೆಚ್‌ಪಿಯ ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ ನಡೆದಿತ್ತು. ಕೊನೆಗೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.ಇದನ್ನೂ ಓದಿ: ಈದ್‌ ಮೆರವಣಿಗೆಗೆ ಪ್ರತಿಯಾಗಿ ಬಜರಂಗದಳ-ವಿಹೆಚ್‌ಪಿಯಿಂದ ಬಿ.ಸಿ ರೋಡ್ ಚಲೋಗೆ ಕರೆ

    ಪೊಲೀಸರ ಬಿಗಿ ಬಂದೋಬಸ್ತಿನಿಂದಾಗಿ ಬಿ.ಸಿ ರೋಡ್ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿರುವ ಕುರಿತು ದ.ಕ ಎಸ್ಪಿ ಎನ್. ಯತೀಶ್ (N. Yatish) ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಎನ್.ಯತೀಶ್ ಮಾತನಾಡಿ, ಬಂಟ್ವಾಳದ ಬಿ.ಸಿ ರೋಡ್ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ದ.ಕ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಕೈಕಂಬ ಮಸೀದಿಯ ಈದ್ ಮಿಲಾದ್ ಮೆರವಣಿಗೆ ರೂಟ್ ಬದಲಾವಣೆ ನಾವು ಮಾಡಿಲ್ಲ. ಹಿಂದೂ ಸಂಘಟನೆಯವರು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತೇವೆ ಎಂದಿದ್ದರು. ಹಾಗಾಗಿ ಬಿ.ಸಿ ರೋಡ್ ಜಂಕ್ಷನ್‌ನಲ್ಲಿ ಅವಕಾಶ ನೀಡಿದ್ದೇವು. ಏನಾದರೂ ಸಮಸ್ಯೆಯಾದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದೇವೆ ಅಷ್ಟೇ ಎಂದು ತಿಳಿಸಿದರು.

    ಪ್ರಚೋದನಾಕಾರಿ ಆಡಿಯೋ ಹರಿಬಿಟ್ಟ ಇಬ್ಬರ ಮೇಲೆಯೂ ಕ್ರಮವಾಗಿದೆ. ಶರೀಫ್ ಹಾಗೂ ಹಸೀನಾರ್ ಇಬ್ಬರನ್ನು ಬಂಧಿಸಿದ್ದೇವೆ. ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಮುನ್ನವೇ ಶಾಂತಿ ಸಭೆ ಮಾಡಿದ್ದೇವೆ. ಈವರೆಗೂ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಮುಂದೆಯೂ ಅಹಿತಕರ ಘಟನೆಗಳು ಜರುಗದಂತೆ ಕ್ರಮ ಕೈಗೊಳ್ಳುತ್ತೇವೆ. ಪರಿಸ್ಥಿತಿಗೆ ಅನುಗುಣವಾಗಿ ಬಿ.ಸಿ ರೋಡಿನಲ್ಲಿ ಬಂದೋಬಸ್ತ್ ಮುಂದುವರೆಸುತ್ತೇವೆ ಎಂದು ತಿಳಿಸಿದ್ದಾರೆ.

    ಮತ್ತೋರ್ವ ಅಧಿಕಾರಿ ಗಿರೀಶ್.ಎನ್ ಮಾತನಾಡಿ, ಹಿಂದೂ ಸಂಘಟನೆಗಳು ಕರೆ ನೀಡಿದ್ದ ಬಿ.ಸಿ.ರೋಡ್ ಚಲೋ ಹಾಗೂ ಈದ್ ಮಿಲಾದ್ ಶಾಂತಿಯುತವಾಗಿ ನಡೆದಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಭಾರೀ ಪೊಲೀಸ್ ಬಂದೋಬಸ್ತ್ ನಡೆಸಲಾಗಿದೆ. ಘಟನೆಗೆ ಕಾರಣವಾದ ಆಡಿಯೋ ಹರಿಬಿಟ್ಟಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ಅವರ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದಿದ್ದಾರೆ.ಇದನ್ನೂ ಓದಿ: ಹದಿಹರೆಯದ ಹುಡುಗಿಯರ ಮಿದುಳಿಗೆ ಬೇಗ ವಯಸ್ಸಾಗ್ತಿದೆಯಂತೆ; ಯಾಕೆ ಗೊತ್ತಾ? – ಅಧ್ಯಯನ ಹೇಳೋದೇನು?

  • ಈದ್‌ ಮೆರವಣಿಗೆಗೆ ಪ್ರತಿಯಾಗಿ ಬಜರಂಗದಳ-ವಿಹೆಚ್‌ಪಿಯಿಂದ ಬಿ.ಸಿ ರೋಡ್ ಚಲೋಗೆ ಕರೆ

    ಈದ್‌ ಮೆರವಣಿಗೆಗೆ ಪ್ರತಿಯಾಗಿ ಬಜರಂಗದಳ-ವಿಹೆಚ್‌ಪಿಯಿಂದ ಬಿ.ಸಿ ರೋಡ್ ಚಲೋಗೆ ಕರೆ

    – ಖಾಕಿ ಪಡೆ ಕಣ್ಗಾವಲು; ಹಿಂದೂ ಕಾರ್ಯಕರ್ತರು, ಪೊಲೀಸರ ನಡುವೆ ತಳ್ಳಾಟ ನೂಕಾಟ

    ಮಂಗಳೂರು: ಬಜರಂಗದಳ ಹಾಗೂ ವಿಹೆಚ್‌ಪಿಯಿಂದ ಬಿ.ಸಿ ರೋಡ್ ಚಲೋ ಕರೆ ಹಿನ್ನಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್‌ನಲ್ಲಿ ಜಮಾಯಿಸಿದ್ದಾರೆ.

    ಬಿ.ಸಿ.ರೋಡ್ ಚಲೋ ಕರೆ ಹಿನ್ನೆಲೆ ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಎಸ್ಪಿ ಯತೀಶ್ ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಿದ್ದಾರೆ. ಈದ್ ಮಿಲಾದ್ ಮೆರವಣಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಬಿ.ಸಿ.ರೋಡ್‌ಗೆ ಬರದಂತೆ ಮುಂಜಾಗ್ರತಾ ಕ್ರಮವಾಗಿ ಕೈಕಂಬ ಮಸೀದಿ ಪಕ್ಕದಲ್ಲೇ ಮೆರವಣಿಗೆ ಪೊಲೀಸರು ರಸ್ತೆ ಬದಲಾವಣೆ ಮಾಡಿದ್ದಾರೆ. ಇದನ್ನೂ ಓದಿ: Mandya | ನಾಗಮಂಗಲದಲ್ಲಿ ಖಾಕಿ ಹೈ ಅಲರ್ಟ್ – ಈದ್ ಮಿಲಾದ್ ಹಿನ್ನೆಲೆ ಪೊಲೀಸ್ ಸರ್ಪಗಾವಲು

    ಭಾರೀ ಸಂಖ್ಯೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಬಿ.ಸಿ ರೋಡ್‌ನ ರಕ್ತೇಶ್ವರಿ ದೇವಸ್ಥಾನದ ಜಮಾಯಿಸಿದ್ದಾರೆ. ವಿಎಚ್‌ಪಿ ಮುಖಂಡ ಶರಣ್ ಪಂಪ್ ವೆಲ್, ಬಜರಂಗದಳ ಮುಖಂಡ ಪುನೀತ್ ಅತ್ತಾವರ ಸ್ಥಳಕ್ಕೆ ಆಗಮಿಸಿದ್ದಾರೆ. ಕೆಎಸ್‌ಆರ್‌ಪಿ ತುಕಡಿಗಳು, ಆರ್ಮ್ ರಿಸರ್ವ್ ಫೋರ್ಸ್ ಸೇರಿದಂತೆ ವಿವಿಧ ತುಕಡಿಗಳ ಮೊಕ್ಕಾಂ ಹೂಡಿವೆ. ಜೊತೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ಇದನ್ನೂ ಓದಿ: ಕಲಬುರಗಿಯಲ್ಲಿ ದಶಕದ ಬಳಿಕ ಸಚಿವ ಸಂಪುಟ ಸಭೆ – ಮಿನಿವಿಧಾನಸೌಧದಲ್ಲಿ ಸರ್ಕಾರದಿಂದ ಭರ್ಜರಿ ಸಿದ್ಧತೆ!

    ವಿಎಚ್‌ಪಿಯ ಬಂಟ್ವಾಳ ಪ್ರಖಂಡ ಅಧ್ಯಕ್ಷ ಪ್ರಸಾದ್ ಕುಮಾರ್ ಮಾತನಾಡಿ, ಭಜರಂಗದಳ ಹಾಗೂ ವಿಎಚ್‌ಪಿಯಿಂದ ಬಿ.ಸಿ.ರೋಡ್ ಚಲೋ ಕರೆ ಹಿನ್ನಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಬಿ.ಸಿ.ರೋಡ್ ನಲ್ಲಿ ಜಮಾಯಿಸಿದ್ದಾರೆ. ಬಿ.ಸಿ.ರೋಡ್‌ನ ರಕ್ತೇಶ್ವರಿ ದೇವಸ್ಥಾನದ ಎದುರು ಸೇರಿದ ಕಾರ್ಯಕರ್ತರು ನಾವು ಸವಾಲು ಸ್ವೀಕರಿಸಿ ಬಂದಿದ್ದೇವೆ. ನಮ್ಮ ಮುಖಂಡ ಶರಣ್ ಪಂಪ್ ವೆಲ್ ಬರುತ್ತಾರೆ ಅವರಿಗೆ ಸ್ವಾಗತ ಕೋರಲು ಬಂದಿರೋದಾಗಿ ಹೇಳಿಕೊಂಡಿದ್ದಾರೆ. ಈ ನಡುವೆ ಪೊಲೀಸರು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರ ನಡುವೆ ತಳ್ಳಾಟ-ನೂಕಾಟವೂ ನಡೆದೆ. ಇದನ್ನೂ ಓದಿ:  ಟ್ರಂಪ್‌ ಮೇಲೆ ಮತ್ತೆ ಗುಂಡಿನ ದಾಳಿ – ಆತಂಕ ಹೆಚ್ಚಿಸಿದ ಆ ಒಂದು ರೈಫಲ್‌, ದಾಳಿಕೋರ ಸಿಕ್ಕಿದ್ದು ಹೇಗೆ?

  • ನಾಗಮಂಗಲದ ಕೋಮು ಗಲಭೆಗೆ ಕೇರಳ ಲಿಂಕ್ – ಕೇರಳ ಮುಸ್ಲಿಮರ ಕೈವಾಡ ಇದ್ಯಾ? – ವಿಶ್ವ ಹಿಂದೂ ಪರಿಷತ್‌ ಆರೋಪ ಏನು?

    ನಾಗಮಂಗಲದ ಕೋಮು ಗಲಭೆಗೆ ಕೇರಳ ಲಿಂಕ್ – ಕೇರಳ ಮುಸ್ಲಿಮರ ಕೈವಾಡ ಇದ್ಯಾ? – ವಿಶ್ವ ಹಿಂದೂ ಪರಿಷತ್‌ ಆರೋಪ ಏನು?

    – FIRನಲ್ಲಿರೋ 74 ಆರೋಪಿಗಳ ಪೈಕಿ ಇಬ್ಬರು ಕೇರಳದವರು!

    ಮಂಡ್ಯ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟದಿಂದ (Nagamangala Violence) ನಿಗಿನಿಗಿ ಕೆಂಡವಾಗಿದ್ದ ನಾಗಮಂಗಲ ಈಗ ಸಹಜ ಸ್ಥಿತಿಗೆ ಮರಳಿದೆ. ಸಚಿವ ಚಲುವನಾರಾಯಣಸ್ವಾಮಿ ನೇತೃತ್ವದಲ್ಲಿ ನಡೆದ ಶಾಂತಿಸಭೆ ಯಶಸ್ವಿಯಾಗಿದೆ. ಅಲ್ಲದೇ ಭಾನುವಾರ (ಇಂದು) ನಿಷೇಧಾಜ್ಞೆ ತೆರವಾಗಿದೆ. ಈ ನಡುವೆ ಕೋಮು ಗಲಭೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯಲ್ಲಿ ಸ್ಫೋಟಕ ವಿಚಾರಗಳು ಬೆಳಿಗೆ ಬಂದಿದೆ.

    ನಾಗಮಂಗಲದ ಕೋಮು ಗಲಭೆಗೆ ಕೇರಳ ಲಿಂಕ್ (Kerala Link) ಇರೋದು ಮೇಲ್ನೋಟಕ್ಕೆ ಕಂಡುಬಂದಿದೆ. ಅಲ್ಲದೇ ನಿಷೇಧಿತ ಪಿಎಫ್‌ಐ (PFI) ಸಂಘಟನೆ ಸದಸ್ಯರೂ ಈ ಗಲಭೆ ಹಿಂದಿದ್ದಾರೆ, ಕೃತ್ಯಕ್ಕೆ ಮೊದಲೇ ಪ್ಲ್ಯಾನ್‌ ಮಾಡಿದ್ದರು ಎಂಬ ಶಂಕೆಯೂ ವ್ಯಕ್ತವಾಗಿದೆ. ಇದನ್ನೂ ಓದಿ: ಭಾನುವಾರದ ಬಾಡೂಟ; ಆಂಧ್ರ ಶೈಲಿಯ ತಲೆಮಾಂಸದ ಸಾಂಬಾರ್ ಮಾಡೋದು ಹೇಗೆ?

    ಈ ಅನುಮಾನಕ್ಕೆ ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿರುವ ಆ ಎರಡು ಹೆಸರುಗಳು ಕಾರಣವಾಗಿದೆ. ಹೌದು. ಎಫ್‌ಐಆರ್‌ನಲ್ಲಿರುವ 74 ಆರೋಪಿಗಳ ಪೈಕಿ ಇಬ್ಬರು ಕೇರಳದವರಾಗಿದ್ದಾರೆ. ಪ್ರಕರಣದ 44ನೇ ಆರೋಪಿ ಯೂಸೂಫ್‌, 61ನೇ ಆರೋಪಿ ನಾಸೀರ್‌ ಇಬ್ಬರೂ ಕೇರಳ ರಾಜ್ಯದ ಮಲ್ಲಪುರಂ ನಿವಾಸಿಗಳು ಎಂದು ತಿಳಿದುಬಂದಿದೆ. ಇದನ್ನೂ ಓದಿ: Kolkata Horror | ಸಾಕ್ಷಿ ನಾಶ, FIR ದಾಖಲಿಸಲು ವಿಳಂಬ; ಸಂದೀಪ್‌ ಘೋಷ್‌ ಸೇರಿ ಸಿಬಿಐನಿಂದ ಇಬ್ಬರ ಬಂಧನ

    ಈ ನಡುವೆ ಆರೋಪಿಗಳಿಬ್ಬರೂ ನಿಷೇಧಿತ ಪಿಎಫ್‌ಐ ಸಂಘಟನೆ ಸದಸ್ಯರು ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ. ಗಲಭೆ ನಡೆಸಲು ಪೂರ್ವ ತಯಾರಿ ನಡೆದಿದೆ. ಗಲಾಟೆ ನಡೆದ ದಿನ ಮೆಡಿಕಲ್‌ನಲ್ಲಿ 200 ಮಾಸ್ಕ್ ಖರೀದಿ ಮಾಡಲಾಗಿದೆ. ಪೆಟ್ರೋಲ್ ಬಾಂಬ್ ಬಳಕೆಯಲ್ಲೂ ಕೇರಳ ಮುಸ್ಲಿಮರ ಕೈವಾಡದ ಇದೆ. ಆದ್ದರಿಂದ ಈ ಪ್ರಕರಣದ ತನಿಖೆಯನ್ನ ಎನ್‌ಐಎ ನಡೆಸಬೇಕು ಎಂದು ವಿಹೆಚ್‌ಪಿ ಆಗ್ರಹಿಸಿದೆ. ಇದನ್ನೂ ಓದಿ: ಪ್ರಧಾನಿ ಹುದ್ದೆಗೆ ಬೆಂಬಲಿಸುವ ಆಫರ್‌ ಬಂದಿತ್ತು, ನಾನೇ ತಿರಸ್ಕರಿಸಿದೆ: ನಿತಿನ್‌ ಗಡ್ಕರಿ

  • ಬಕ್ರೀದ್‌ ಹಬ್ಬಕ್ಕೆ ಗೋವುಗಳು ಕುರ್ಬಾನಿಯಾಗದಂತೆ ಕ್ರಮ ವಹಿಸಿ – ಬಜರಂಗದಳ ಆಗ್ರಹ

    ಬಕ್ರೀದ್‌ ಹಬ್ಬಕ್ಕೆ ಗೋವುಗಳು ಕುರ್ಬಾನಿಯಾಗದಂತೆ ಕ್ರಮ ವಹಿಸಿ – ಬಜರಂಗದಳ ಆಗ್ರಹ

    ಧಾರವಾಡ: ಮುಸ್ಲಿಮರ ಪವಿತ್ರ ಹಬ್ಬಗಳಲ್ಲಿ ಒಂದಾದ ಬಕ್ರೀದ್‌ ಹಬ್ಬ ಸಮೀಪಿಸುತ್ತಿದ್ದು, ಪ್ರಾಣಿಯನ್ನು ಕೊಯ್ದು ಮಾಂಸ ವಿತರಿಸುವ ಕುರ್ಬಾನಿ ನಡೆಸಲು ಸಿದ್ಧತೆ ಎಲ್ಲೆಡೆ ನಡೆದಿದೆ. ಬಕ್ರೀದ್‌ ಹಬ್ಬದ (Bakrid Festival) ದಿನ ಸೇರಿದಂತೆ ಮೂರು ದಿನಗಳಲ್ಲಿ ಆಡು, ಟಗರು ಮೊದಲಾದ ಪ್ರಾಣಿಗಳನ್ನು ಕೊಂದು ಮಾಂಸ ಮಾಡಿ, ಸಂಬಂಧಿಕರು, ನೆರೆಹೊರೆಯವರು, ಬಡವರಿಗೆ ಹಂಚುವುದು ಸಂಪ್ರದಾಯ. ಇದಕ್ಕಾಗಿಯೇ ಕೆಲ ವ್ಯಾಪಾರಿಗಳು ಹೊರ ರಾಜ್ಯಗಳಿಂದಲೂ ಪ್ರಾಣಿಗಳನ್ನ ತಂದು ದುಬಾರಿ ಬೆಲೆಗೆ ಮಾರಾಟ ಮಾಡುತ್ತಾರೆ.

    ಈ ಬಾರಿ ಬಕ್ರೀದ್‌ ಹಬ್ಬದಂದು ರಾಜ್ಯದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯ್ದೆ-2020 ಹಾಗೂ ಕರ್ನಾಟಕ ಪ್ರಾಣಿ ಬಲಿ ನಿಷೇಧ-1959 ಕಾಯ್ದೆ ಅಡಿಯಲ್ಲಿ ಪ್ರಾಣಿ ಬಲಿಯನ್ನು ನಿಷೇಧಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ (VHP) ಮತ್ತು ಬಜರಂಗದಳದ (Bajarangadala) ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್: ತಪ್ಪಿತಸ್ಥರಿಗೆ ಶಿಕ್ಷೆಯಾಗೋವರೆಗೂ ಪ್ರಾಮಾಣಿಕ ತನಿಖೆ ನಡೆಸಬೇಕು: ಬೊಮ್ಮಾಯಿ

    ಯಾವುದೇ ಗೋವುಗಳ (Cows) ಕುರ್ಬಾನಿ ಮಾಡುವುದನ್ನು ನಿಷೇಧಿಸಬೇಕು, ಇತರೇ ಪ್ರಾಣಿಗಳ ಬಲಿಯನ್ನು ನಿಲ್ಲಿಸಬೇಕು ಹಾಗೂ ಅಕ್ರಮ ಗೋವುಗಳ ಸಾಗಾಟ ಆಗದಂತೆ ಕ್ರಮ ಕೈಗೊಳ್ಳಬೇಕು. ಜೊತೆಗೆ ಗೋವು ಸಾಕಾಣಿಕೆ ಮಾಡುವವರ ಮನೆಗಳಿಂದ, ಬೀದಿಗಳಿಂದ, ಗುಡ್ಡಗಳಿಂದ ಗೋವುಗಳ ಕಳ್ಳತನವಾಗದಂತೆ ನೋಡಿಕೊಳ್ಳಬೇಕು ಎಂದು ಬಜರಂಗದಳದ ಕಾರ್ಯಕರ್ತರು ಆಗ್ರಹಿಸಿದ್ದಾರೆ.

    ಪೊಲೀಸರು ಅಹೋರಾತ್ರಿ ಗಸ್ತು ಹಾಗೂ ಅಗತ್ಯ ಇರುವ ಕಡೆ ನಾಕಾಬಂದಿ ಹಾಕಬೇಕು. ಜೂನ್ 18ರ ತನಕ ಯಾರೂ ಸಹ ಖಾಲಿ ಜಾಗದಲ್ಲಿ ಅಥವಾ ಮನೆಯ ಅಂಗಳದಲ್ಲಿ ಗೋವಂಶವನ್ನು ತಂದು ಕಟ್ಟಿ ಹಾಕಿ ಶೇಖರಿಸದಂತೆ ಎಚ್ಚರಿಕೆ ವಹಿಸಬೇಕು. ಯಾರಾದರೂ ಗೋ ವಧೆ ಮಾಡಿದ್ದು ಕಂಡುಬಂದಲ್ಲಿ ಅವರ ಮೇಲೆ ಗೋ ಹತ್ಯೆ ನಿಷೇಧ ಕಾಯ್ದೆ-2020ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಿಂದ ಮಾಂಜ್ರಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ; ಬೀದರ್‌ ರೈತರ ಜಮೀನುಗಳಿಗೆ ನುಗ್ಗಿದ ನೀರು

  • ಕಾಫಿನಾಡಲ್ಲಿ ಡಿ.17 ರಿಂದ 26ರವರೆಗೆ ದತ್ತ ಜಯಂತಿ ಸಂಭ್ರಮ

    ಕಾಫಿನಾಡಲ್ಲಿ ಡಿ.17 ರಿಂದ 26ರವರೆಗೆ ದತ್ತ ಜಯಂತಿ ಸಂಭ್ರಮ

    ಚಿಕ್ಕಮಗಳೂರು: ಪ್ರತಿ ವರ್ಷದಂತೆ ಈ ವರ್ಷವೂ ವಿಶ್ವ ಹಿಂದೂ ಪರಿಷತ್ (VHP) ಮತ್ತು ಬಜರಂಗದಳದ (Bajarang Dal) ವತಿಯಿಂದ ಡಿ.17 ರಿಂದ ಡಿ.26ರವರೆಗೆ ದತ್ತ ಜಯಂತಿ (Datta Jayanti) ಕಾರ್ಯಕ್ರಮವನ್ನು ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ ಎಂದು ಬಜರಂಗದಳ ದಕ್ಷಿಣ ಕರ್ನಾಟಕ ಪ್ರಾಂತ ಸಂಯೋಜಕ ಕೆ.ಆರ್.ಸುನೀಲ್ ತಿಳಿಸಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ನಿರಂತರ ಹೋರಾಟದಿಂದ ದತ್ತಪೀಠದಲ್ಲಿ ಈಗಾಗಲೇ ತ್ರಿಕಾಲ ಪೂಜೆ ನಡೆಯುತ್ತಿದೆ. 2023ರಲ್ಲಿ ದತ್ತ ಜಯಂತಿಯನ್ನು ಕರ್ನಾಟಕ ನಾಡ ಉತ್ಸವದಂತೆ ಆಚರಿಸಲು ಸಂಘಟನೆ ತೀರ್ಮಾನಿಸಿದೆ. ಈ ಹಿನ್ನಲೆಯಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು. ಇದನ್ನೂ ಓದಿ: ಒಂದಲ್ಲ ಮೂರು ಬಾರಿ ಮನೋರಂಜನ್‌ಗೆ ಪ್ರತಾಪ್‌ ಸಿಂಹ ಕಚೇರಿಯಿಂದ ಸಿಕ್ಕಿತ್ತು ಪಾಸ್‌!

    ಈ ಬಾರಿಯ ದತ್ತಜಯಂತಿಗೆ ರಾಜ್ಯದ ವಿವಿಧ ಭಾಗಗಳಿಂದ 30 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವ ನಿರೀಕ್ಷೆಯಿದೆ. ಡಿ.17ರಂದು ನಗರದ ಕಾಮಧೇನು ಗಣಪತಿ ದೇವಸ್ಥಾನದಲ್ಲಿ ದತ್ತಮಾಲಾಧಾರಣೆ ನಡೆಯಲಿದೆ. ಡಿ.24ರಂದು ಅನುಸೂಯ ಜಯಂತಿ ನಡೆಯಲಿದ್ದು, ಆ ದಿನ ಬೆಳಗ್ಗೆ 9:30ಕ್ಕೆ ಮಹಿಳೆಯರಿಂದ ಸಂಕೀರ್ತನಾ ಯಾತ್ರೆ ನಡೆಯಲಿದೆ. ದತ್ತಪೀಠದಲ್ಲಿ ಗಣಪತಿ ಪೂಜೆ, ಪುಣ್ಯಹವಾಚನ, ಪಂಚಗವ್ಯ ಶುದ್ಧಿ, ಗಣಪತಿ ಹೋಮ, ದುರ್ಗಾಹೋಮ, ಕಲಶಾಭಿಷೇಕ, ಹಾಗೂ ಮಹಾಪೂಜೆ ಜರುಗಲಿದೆ. ಸಂಜೆ ಪಾದುಕಾಶುದ್ಧಿ, ಪ್ರಕಾರ ಶುದ್ಧಿ, ಸುದರ್ಶನ ಹೋಮ, ಕಲಶಾಭಿಷೇಕ ಮಹಾಪೂಜೆ ನಡೆಯಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸಂಸತ್‍ನಲ್ಲಿ ಸ್ಮೋಕ್ ಬಾಂಬ್ ಎಸೆದಿದ್ದ ಮನೋರಂಜನ್ ಯಾರು?, ಈತನ ಹಿನ್ನೆಲೆಯೇನು?

    ಡಿ.25ರಂದು ಚಿಕ್ಕಮಗಳೂರು ನಗರದಲ್ಲಿ ಬೃಹತ್ ಶೋಭಾಯಾತ್ರೆ ಹಾಗೂ ಆಜಾದ್ ಪಾರ್ಕ್ ವೃತ್ತದಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಸಾಧು-ಸಂತರು, ಸ್ವಾಮೀಜಿಗಳು ಹಾಗೂ ವಿಶ್ವ ಹಿಂದೂ ಪರಿಷತ್ ಅಖಿಲ ಭಾರತೀಯ ಸಹಕಾರ್ಯದರ್ಶಿ ಶಂಕರ್ ಗಾಯ್ಕರ್ ಭಾಗವಹಿಸಲಿದ್ದಾರೆ. ಅಂದು ದತ್ತಪೀಠದಲ್ಲಿ ನವಕಲಶ ಕಲಾವಾಹನಂ, ಕಲಾತತ್ವಾದಿವಾಸ ಪೂಜೆ, ಕಲಾಹೋಮ, ರುದ್ರಹೋಮ, ಕಲಶಾಭೀಷೇಕ ಮಹಾಪೂಜೆ ನಡೆಸಲು ಸಂಘಟನೆ ತೀರ್ಮಾನಿಸಿದೆ. ಡಿ.26ರಂದು ದತ್ತಪೀಠದಲ್ಲಿ ದತ್ತಜಯಂತಿ ಪ್ರಯುಕ್ತ ದತ್ತಭಕ್ತರು ದತ್ತಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ ಪಡೆಯುವರು. ಅಲ್ಲಿ ದತ್ತಾತ್ರೇಯ ಮಹಾಮಂತ್ರ, ಮಹಾಯಾಗ, ಕಲಶಾಭಿಷೇಕ, ಮಹಾಪೂಜೆ, ತಂತ್ರಿಗಳಿಂದ ಆಶೀರ್ವಚನಾ, ಬ್ರಹ್ಮಭೋಜನ, ಪ್ರಸಾದ ವಿನಿಯೋಗ ನಡೆಯಲಿದೆ. ದತ್ತಜಯಂತಿಯನ್ನು ವಿಜೃಂಭಣೆಯಿಂದ ನಡೆಸಲು ನಿರ್ಧರಿಸಿದ್ದು, ಜಿಲ್ಲಾಡಳಿತ ಹೈಕೋರ್ಟ್ ಆದೇಶದಂತೆ ಸೌಕರ್ಯವನ್ನು ಒದಗಿಸಬೇಕೆಂದು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.  ಇದನ್ನೂ ಓದಿ: ಸಾಗರ್ ಶರ್ಮಾ ಇ-ರಿಕ್ಷಾ ಓಡಿಸುತ್ತಿದ್ದ: ಆರೋಪಿ ಮಗನ ಬಗ್ಗೆ ತಾಯಿ ಹೇಳಿದ್ದೇನು?

  • ಡಿ.17-26 ರವರೆಗೆ ದತ್ತಜಯಂತಿ- ಆಗಮಿಸಲಿದ್ದಾರೆ 20 ಸಾವಿರ ಭಕ್ತರು

    ಡಿ.17-26 ರವರೆಗೆ ದತ್ತಜಯಂತಿ- ಆಗಮಿಸಲಿದ್ದಾರೆ 20 ಸಾವಿರ ಭಕ್ತರು

    ಚಿಕ್ಕಮಗಳೂರು: ತಾಲೂಕಿನ ಚಂದ್ರದ್ರೋನ ಪರ್ವತಗಳ ಸಾಲು ಮುಳ್ಳಯ್ಯನಗಿರಿ (Mullayanagiri) ತಪ್ಪಲಿನ ದತ್ತಪೀಠದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಡಿಸೆಂಬರ್ 26 ರಂದು ದತ್ತಜಯಂತಿ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ರಂಗನಾಥ ತಿಳಿಸಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ ದತ್ತ ಜಯಂತಿಯನ್ನು (Datta Jayanti 2023) ನಾಡ ಉತ್ಸವನ್ನಾಗಿ ಆಚರಿಸಲಾಗುವುದು. ಡಿಸೆಂಬರ್ 17 ರಂದು ಸ್ಕಂದ ಪಂಚಮಿ ದಿನ ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ದತ್ತಮಾಲಾ ಧಾರಣೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಗ್ರಹಣ ಮೋಕ್ಷದ ನಂತರ ಶುದ್ಧೀಕರಣ- ಬಹುತೇಕ ದೇಗುಲಗಳು ಓಪನ್

     

    ಜಿಲ್ಲಾದ್ಯಂತ ಡಿ. 24 ರಿಂದ 26ರವರೆಗೆ ದತ್ತಜಯಂತಿ ಉತ್ಸವ ನಡೆಯಲಿದ್ದು, ಈ ವರ್ಷ ದತ್ತಜಯಂತಿ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ತೀರ್ಮಾನಿಸಿದೆ. ದತ್ತಜಯಂತಿ ಉತ್ಸವ ಪ್ರಯುಕ್ತ ಡಿ.24 ರಂದು ದತ್ತಪೀಠದಲ್ಲಿ ಅನಸೂಯ ಜಯಂತಿ ನಡೆಯಲಿದೆ. ಜಯಂತಿ ಅಂಗವಾಗಿ ಅಂದು ಬೆಳಗ್ಗೆ 9.30ಕ್ಕೆ ಸಾವಿರಾರು ಮಹಿಳೆಯರು ನಗರದಲ್ಲಿ ಸಂಕೀರ್ತನಾ ಯಾತ್ರೆ ನಡೆಸಲಿದ್ದಾರೆ. ನಗರದ ಬೋಳರಾಮೇಶ್ವರ ದೇವಾಲಯದಿಂದ ಮೆರವಣಿಗೆ ಹೊರಟು ಮುಖ್ಯ ರಸ್ತೆಯಲ್ಲಿ ಸಾಗಿ ಪಾಲಿಟೆಕ್ನಿಕ್ ವೃತ್ತದಿಂದ ವಾಹನಗಳಲ್ಲಿ ದತ್ತಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ ಪಡೆಯಲಿದ್ದಾರೆ ಎಂದು ಹೇಳಿದರು.

    ಮರುದಿನ ಡಿಸೆಂಬರ್ 25ರ ಬೆಳಗ್ಗೆ ದತ್ತಪೀಠದಲ್ಲಿ ದತ್ತ ಹೋಮ, ರುದ್ರ ಹೋಮ ನಡೆಯಲಿದೆ. ಇದೇ ದಿನ ಮಧ್ಯಾಹ್ನ ನಗರದಲ್ಲಿ ಭವ್ಯ ಶೋಭಾಯಾತ್ರೆ ನಡೆಯುವುದು. ನಗರದ ಕಾಮಧೇನು ಗಣಪತಿ ದೇವಾಲಯ ಆವರಣದಿಂದ ಆರಂಭವಾಗುವ ಯಾತ್ರೆ ಮುಖ್ಯರಸ್ತೆಯಲ್ಲಿ ಸಾಗಿ, ಸಂಜೆ ಆಜಾದ್ ವೃತ್ತದಲ್ಲಿ ಧಾರ್ಮಿಕ ಸಭೆ ನಡೆಯಲಿದೆ ಎಂದರು.

    ದತ್ತಪೀಠದಲ್ಲಿ ಡಿ.26 ರಂದು ದತ್ತಜಯಂತಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 20 ಸಾವಿರ ಭಕ್ತರು ಆಗಮಿಸಿ ದತ್ತಪಾದುಕೆಗಳ ದರ್ಶನ ಪಡೆಯಲಿದ್ದಾರೆ ಎಂದು ರಂಗನಾಥ ವಿವರಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಿಂದೂಗಳ ಅಂಗಡಿಗಳಲ್ಲೇ ವ್ಯಾಪಾರ ಮಾಡಿ- ವಿಹಿಂಪ, ಬಜರಂಗದಳ ಮನವಿ

    ಹಿಂದೂಗಳ ಅಂಗಡಿಗಳಲ್ಲೇ ವ್ಯಾಪಾರ ಮಾಡಿ- ವಿಹಿಂಪ, ಬಜರಂಗದಳ ಮನವಿ

    – ಹಿಂದೂ ಅಂಗಡಿಗಳ ಮುಂದೆ ಭಗವಾಧ್ವಜ

    ಮಂಗಳೂರು: ಮಂಗಳಾದೇವಿ ದೇವಸ್ಥಾನದ (Mangaladevi Temple) ನವರಾತ್ರಿ ಉತ್ಸವದಲ್ಲಿ ಧರ್ಮ ದಂಗಲ್ ಆರಂಭವಾಗಿದೆ.

    ಹಿಂದೂ ಸಂಘಟನೆಗಳ ವಿರೋಧದ ನಡುವೆಯೂ ಮುಸ್ಲಿಂ ವ್ಯಾಪಾರಿಗಳಿಗೆ ದ.ಕ ಜಿಲ್ಲಾಡಳಿತ ಅವಕಾಶ ನೀಡಿದೆ. ಹೀಗಾಗಿ ಹಿಂದೂಗಳ ಅಂಗಡಿಗಳಲ್ಲೇ ವ್ಯಾಪಾರ ಮಾಡುವಂತೆ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಹಿಂದೂ ಸಂಘಟನೆಗಳು ಮನವಿ ಮಾಡಿವೆ. ಇದನ್ನೂ ಓದಿ: ಒರಿಜಿನಲ್ ಅಂತ ಸಿಎಂ ಇಬ್ರಾಹಿಂ ಬೋರ್ಡ್ ಹಾಕಿಕೊಳ್ಳಲಿ: ಹೆಚ್‍ಡಿಕೆ

    ಜಾತ್ರೋತ್ಸವದಲ್ಲಿ ವಿಶ್ವಹಿಂದೂಪರಿಷತ್-ಬಜರಂಗದಳ ಕಾರ್ಯಕರ್ತರು ಹಿಂದೂ ವ್ಯಾಪಾರಿಗಳ ಅಂಗಡಿಗಳ ಮುಂದೆ ಭಗವಾಧ್ವಜ ಅಳವಡಿಸಿದ್ದಾರೆ. ವಿಎಚ್‍ಪಿ ಮುಖಂಡ ಶರಣ್ ಪಂಪ್‍ವೆಲ್ ನೇತೃತ್ವದಲ್ಲಿ ಹಿಂದೂ ವ್ಯಾಪಾರಿಗಳ ಅಂಗಡಿ ಗುರುತುಗಾಗಿ ಭಗವಾಧ್ವಜ ಹಾಕಿದ್ದಾರೆ.

    ದೇವಸ್ಥಾನದ ಆಸು-ಪಾಸಿನಲ್ಲಿ ಹಿಂದೂಗಳಿಗೆ ಅವಕಾಶ ನೀಡಬೇಕು. ಹಿಂದೂ ದೇವರನ್ನು ನಂಬದ, ಮೂರ್ತಿ ಪೂಜೆ ವಿರೋಧಿಗಳಿಗೆ ನಮ್ಮ ಉತ್ಸವದಲ್ಲಿ ಅವಕಾಶ ಇಲ್ಲ. ನಮ್ಮ ದೇವಸ್ಥಾನದಲ್ಲಿ ವ್ಯಾಪಾರ ಮಾಡೋದು ಹಿಂದೂ ವ್ಯಾಪಾರಿಗಳ ಹಕ್ಕು. ಮುಸ್ಲಿಂ ವ್ಯಾಪಾರಿಗಳೂ ಈಗ ಕೈಗೆ ನೂಲು, ಶಾಲು ಹಾಕಿ ವ್ಯಾಪಾರ ಮಾಡುತ್ತಾರೆ. ಅದಕ್ಕಾಗಿ ಗುರುತಿಗಾಗಿ ಹಿಂದೂ ವ್ಯಾಪಾರಸ್ಥರ ಅಂಗಡಿಗಳ ಮುಂದೆ ಭಗವಾಧ್ವಜ ಹಾಕಿದ್ದೇವೆ ಎಂದು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]