Tag: ವಿಷಾನಿಲ

  • ಗುಜರಿ ಗೋಡೌನ್‍ನಲ್ಲಿ ವಿಷಾನಿಲ ಸೋರಿಕೆ- 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಐವರ ಸ್ಥಿತಿ ಗಂಭೀರ

    ಗುಜರಿ ಗೋಡೌನ್‍ನಲ್ಲಿ ವಿಷಾನಿಲ ಸೋರಿಕೆ- 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಐವರ ಸ್ಥಿತಿ ಗಂಭೀರ

    ಮೈಸೂರು: ವಿಷಾನಿಲ ಸೋರಿಕೆಯಿಂದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಪ್ರಕರಣ ಮೈಸೂರಿನ (Mysuru) ಹಳೆ ಕೆಸರೆಯ ಗುಜರಿಯಲ್ಲಿ ನಡೆದಿದೆ.

    ಗುಜರಿಯ ಗೋಡೌನ್‍ನಲ್ಲಿ ವಿಷಕಾರಿ ಅನಿಲ್ ಸೋರಿಕೆಯಾಗಿದ್ದು, ಸುತ್ತಮುತ್ತಲ ಜನರಿಗೆ ಕೆಮ್ಮು, ಉಸಿರಾಟ ತೊಂದರೆ ಕಾಣಿಸಿಕೊಂಡಿದೆ. ಸುಮಾರು 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಗುಜರಿಯಲ್ಲಿ ಕೆಲಸ ಮಾಡುತ್ತಿದ್ದ ಐವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದನ್ನೂ ಓದಿ: ಸಮಾಜವಾದಿ ಪಕ್ಷದ ಶಾಸಕ ಇರ್ಫಾನ್‌ಗೆ 7 ವರ್ಷ ಜೈಲು ಶಿಕ್ಷೆ

  • ಮಂಗಳೂರಿನ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ – ಮೂವರು ಕಾರ್ಮಿಕರ ಸಾವು

    ಮಂಗಳೂರಿನ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ – ಮೂವರು ಕಾರ್ಮಿಕರ ಸಾವು

    ಮಂಗಳೂರು: ಫ್ಯಾಕ್ಟರಿಯೊಂದರಲ್ಲಿ ವಿಷಾನಿಲ ಸೋರಿಕೆಯಾಗಿ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಎಸ್‌ಇಝೆಡ್ ವ್ಯಾಪ್ತಿಯ ಮೀನಿನ ಫ್ಯಾಕ್ಟರಿಯಲ್ಲಿ ನಡೆದಿದೆ.

    ಭಾನುವಾರ ರಾತ್ರಿ ಕಾರ್ಮಿಕರು ಟ್ಯಾಂಕ್ ಶುಚಿಗೊಳಿಸುತ್ತಿದ್ದ ಸಂದರ್ಭದಲ್ಲಿ ವಿಷಾನಿಲ ಸೋರಿಕೆಯಾಗಿದೆ. ಘಟನೆಯಲ್ಲಿ ಪಶ್ಚಿಮ ಬಂಗಾಳ ಮೂಲದ ಸಮಿರುಲ್ಲ ಇಸ್ಲಾಂ, ಉಮರ್ ಫಾರೂಕ್, ನಿಜಾಮುದ್ದೀನ್ ಸಾಜ್ ಮೃತಪಟ್ಟಿದ್ದಾರೆ. ಮಿರಾಜುಲ್ಲ್ ಇಸ್ಲಾಂ, ಸರಾಫತ್ ಆಲಿ, ಅಜನ್ ಆಲಿ, ಕರೀಬುಲ್ಲ, ಅಫ್ತಲ್ ಮಲ್ಲಿಕ್ ಸೇರಿದಂತೆ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ. ಇದನ್ನೂ ಓದಿ: ಮಳೆಯಬ್ಬರಕ್ಕೆ ಮಾವು ಸೇರಿದಂತೆ ವಿವಿಧ ಬೆಳೆಗಳು ನಾಶ

    POLICE JEEP

    ಭಾನುವಾರ ರಾತ್ರಿ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕನ್ನು ಶುಚಿಗೊಳಿಸಲು ಕೆಳಗಿಳಿದಿದ್ದ. ಈ ವೇಳೆ ಏಕಾಏಕಿ ಅಸ್ವಸ್ಥಗೊಂಡು ಬಿದ್ದಿದ್ದಾನೆ. ಕೂಡಲೇ ಆತನನ್ನು ರಕ್ಷಿಸಲು 8 ಮಂದಿ ಕಾರ್ಮಿಕರು ಹೋಗಿದ್ದು, ಅವರೆಲ್ಲರ ಉಸಿರಾಟದಲ್ಲಿ ಏರುಪೇರು ಉಂಟಾಗಿ ಅಸ್ವಸ್ಥಗೊಂಡಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಹಿಂಸಾಚಾರ ಪೂರ್ವನಿಯೋಜಿತ ಸಂಚು: ಬಿರುಗಾಳಿ ಎಬ್ಬಿಸಿದ ವಾಟ್ಸಪ್‌ ಆಡಿಯೋ

    ಅಸ್ವಸ್ಥಗೊಂಡ ಎಲ್ಲಾ ಕಾರ್ಮಿಕರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಡಿಸಿಪಿ ಹರಿರಾಂ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ಕಾರ್ಖಾನೆಯಲ್ಲಿ ವಿಷಾನಿಲ ಲೀಕ್- ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

    ಕಾರ್ಖಾನೆಯಲ್ಲಿ ವಿಷಾನಿಲ ಲೀಕ್- ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

    ಮುಂಬೈ: ವಿಷಾನಿಲ ಸೇವಿಸಿ ಓರ್ವ ಸಾವನ್ನಪ್ಪಿದ್ದು, ಇನ್ನಿಬ್ಬರು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಈ ಘಟನೆ ಬರ್ಬನ್ ಘಾಟ್ ಕೋಪರ್ ಕೈಗಾರಿಕಾ ಪ್ರದೇಶದಲ್ಲಿ ಇಂದು ನಡೆದಿದೆ.

    ರಾಮ್ ನಿವಾಸ್ ಸರೋದ್ (36)ಮೃತರಾಗಿದ್ದಾರೆ. ರೂಬಿನ್ ಸೋಲ್ಕರ್, ಸವಾರ್ಂಶ್ ಸೋನಾವನೆ ತೀವ್ರ ಅಸ್ವಸ್ಥರಾಗಿದ್ದು, ಬಿಎಂಸಿಯ ರಾಜವಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಖಾನೆಯಲ್ಲಿ ವಿಷಾನಿಲ ಲೀಕ್ ಆಗಿರುವುದು ಈ ಅವಘಡಕ್ಕೆ ಕಾರಣವಾಗಿದೆ.

    ಈಶಾನ್ಯ ಮುಂಬೈನ ಕುರ್ಲಾ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಬೆಳಗ್ಗೆ 8 ಗಂಟೆಗೆ ಮೆಥನಾಲ್ ಮತ್ತು ಸೈನೂರಿಕ್ ಕ್ಲೋರೈಡ್ ಅನಿಲ ಸೋರಿಕೆಯಾಗಿದೆ. ಈ ವೇಳೆ ಅಲ್ಲಿಯೇ ಇದ್ದ ರಾಮ್ ನಿವಾಸ್ ಸರೋದ್ ವಿಷಕಾರಿ ಅನಿಲವನ್ನು ಸೇವಿಸಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರೂಬಿನ್ ಸೋಲ್ಕರ್, ಸರ್ವಾಂಶ್ ಸೋನಾವನೆ ತೀವ್ರ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ.ಇದನ್ನೂ ಓದಿ: ಕೋವಿಡ್‌ ಟೆಸ್ಟ್‌ ಮಾಡಿಸಿಕೊಳ್ಳಿ ಎಂದ ಆರೋಗ್ಯ ಅಧಿಕಾರಿ ವಿರುದ್ಧ ಡಿಕೆಶಿ ಗರಂ

    ಅನಿಲ ಸೋರಿಕೆಗೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನನ್ನು ನೋಡಿದ್ರೆ ಕೊರೊನಾ ಇದೆ ಅಂತ ಅನ್ನಿಸುತ್ತಾ?: ಡಿ.ಕೆ. ಶಿವಕುಮಾರ್

  • ಲಾಕ್‍ಡೌನ್ ಬಳಿಕ ತೆರೆದ ಕಾರ್ಖಾನೆಯಲ್ಲಿ ಗ್ಯಾಸ್ ಸೋರಿಕೆ- ಸಾವಿನ ಸಂಖ್ಯೆ 8ಕ್ಕೆ ಏರಿಕೆ

    ಲಾಕ್‍ಡೌನ್ ಬಳಿಕ ತೆರೆದ ಕಾರ್ಖಾನೆಯಲ್ಲಿ ಗ್ಯಾಸ್ ಸೋರಿಕೆ- ಸಾವಿನ ಸಂಖ್ಯೆ 8ಕ್ಕೆ ಏರಿಕೆ

    – ಆಂಧ್ರದ ವಿಶಾಖಪಟ್ಟಣಂನಲ್ಲಿ ದುರಂತ
    – ರಸ್ತೆಯಲ್ಲಿ ಕುಸಿದು ಬೀಳುತ್ತಿರೋ ಜನರು

    ಹೈದರಾಬಾದ್: ಆಂಧ್ರ ಪ್ರದೇಶದ ವಿಶಾಖಪಟ್ಟಣದ ಬಹುರಾಷ್ಟ್ರೀಯ ಸಂಸ್ಥೆಯ ರಾಸಾಯನಿಕ ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆಯಾದ ಪರಿಣಾಮ ಮಗು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ 200ಕ್ಕೂ ಅಧಿಕ ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಇಂದು ಮುಂಜಾನೆ ಜಿಲ್ಲೆಯ ಆರ್.ಆರ್.ವೆಂಕಟಪುರಂನ ಎಲ್.ಜಿ. ಪಾಲಿಮರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನ ರಾಸಾಯನಿಕ ಅನಿಲ ಕಾಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿದ್ದು, ಗಾಳಿಯಲ್ಲಿ ವಿಷಾನಿಲ ಸುತ್ತಮುತ್ತಲಿನ ಪ್ರದೇಶಗಳಿಗೆ ಹರಡಿದೆ. ಪರಿಣಾಮ ಬೆಳಗ್ಗೆ ವಾಕಿಂಗ್ ಮತ್ತು ಇತರೆ ಕೆಲಸಗಳಿಗೆ ಬಂದಿದ್ದ ಜನರು ವಿಷಾನಿಲ ಸೇವಿಸಿ ಕೂಡಲೇ ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಈ ದುರ್ಘಟನೆಯಲ್ಲಿ ಇದುವರೆಗೂ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮಾಹಿತಿ ತಿಳಿದ ತಕ್ಷಣ ಅಂಬುನೆಲ್ಸ್, ಅಗ್ನಿಶಾಮಕ ದಳ ಮತ್ತು ಪೊಲೀಸರು ರಾಸಾಯನಿಕ ಕಾರ್ಖಾನೆಯತ್ತ ದೌಡಾಯಿಸಿದ್ದು, ಜನರನ್ನು ರಕ್ಷಿಸುವಲ್ಲಿ ನಿರತರಾಗಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ವಿಶಾಖಪಟ್ಟಣಂ ಮಹಾನಗರ ಪಾಲಿಕೆ “ಗೋಪಾಲಪಟ್ಟಣದಲ್ಲಿ ಎಲ್‍ಜಿ ಪಾಲಿಮರ್ಸ್ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯನ್ನು ಗುರುತಿಸಲಾಗಿದೆ. ಹೀಗಾಗಿ ಸುರಕ್ಷತಾ ಮುನ್ನೆಚ್ಚರಿಕೆಗಾಗಿ ಸುತ್ತಮುತ್ತಲಿನ ನಾಗರಿಕರು ಮನೆಗಳಿಂದ ಹೊರಬರದಂತೆ” ಮನವಿ ಮಾಡಿಕೊಂಡಿದೆ.

    ಈ ಘಟನೆಯ ಬಗ್ಗೆ ಕೆಲವರು ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಅದರಲ್ಲಿ ರಸ್ತೆಯಲ್ಲಿ ನಿಂತಿದ್ದ, ವಾಕಿಂಗ್ ಮಾಡುತ್ತಿದ್ದವರು ಇದ್ದಕ್ಕಿದ್ದಂತೆ ವಿಷಾನಿಲ ಸೇವಿಸಿ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ಜೊತೆಗೆ ಉಸಿರಾಡಲು ತೊಂದರೆ ಪಡುತ್ತಿರುವ ಜನರನ್ನು ಮಾಸ್ಕ್ ಧರಿಸಿರುವವರು ರಕ್ಷಿಸಿ ಅಂಬುಲೆನ್ಸ್ ಬರುವವರೆಗೂ ರಸ್ತೆಯ ಡಿವೈಡರ್ ಮೇಲೆ ಕೂರಿಸುತ್ತಿರುವುದನ್ನು ಕಾಣಬಹುದಾಗಿದೆ.

    ಇತ್ತ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, ”ವಿಶಾಖಪಟ್ಟಣಂನಲ್ಲಿ ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

  • ವಿಷಕಾರಿ ಅನಿಲ ಸೋರಿಕೆಯಿಂದಾಗಿ 6 ಜನ ಕಾರ್ಮಿಕರು ದುರ್ಮರಣ

    ವಿಷಕಾರಿ ಅನಿಲ ಸೋರಿಕೆಯಿಂದಾಗಿ 6 ಜನ ಕಾರ್ಮಿಕರು ದುರ್ಮರಣ

    ಹೈದರಾಬಾದ್: ಖಾಸಗಿ ಸ್ಟೀಲ್ ಮಿಲ್ ರೋಲಿಂಗ್ ಘಟಕದಲ್ಲಿ ವಿಷಕಾರಿ ಅನಿಲ ಸೋರಿಕೆಯಾದ ಪರಿಣಾಮ ಆರು ಜನ ಕಾರ್ಮಿಕರು ಮೃತಪಟ್ಟಿರುವ ಘಟನೆ ತೆಲಂಗಾಣದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ.

    ತಡಿಪತ್ರಿ ಪ್ರದೇಶದಲ್ಲಿದ್ದ ಸ್ಟೀಲ್ ಮಿಲ್ ಘಟಕದಲ್ಲಿ ನಿರ್ವಹಣೆ ಕಾರ್ಯ ಮುಗಿದ ನಂತರ ಪರೀಕ್ಷೆ ನಡೆಸುತ್ತಿದ್ದ ವೇಳೆ ಅನಿಲ ಸೋರಿಕೆಯಾಗಿದ್ದರಿಂದ ಅವಘಢ ಸಂಭವಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಅಶೋಕ್ ಕುಮಾರ್ ತಿಳಿಸಿದ್ದಾರೆ.

    ಪ್ರಾಥಮಿಕ ಮಾಹಿತಿ ಪ್ರಕಾರ, ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾರ್ಬನ್ ಮೊನಾಕ್ಸೈಡ್ ಸೋರಿಕೆಯೇ ಅವಘಡಕ್ಕೆ ಕಾರಣವಾಗಿದೆ. ಸದ್ಯಕ್ಕೆ ರಕ್ಷಣಾಕಾರ್ಯ ಮುಂದುವರೆದಿದ್ದು, ಇನ್ನು ಎಷ್ಟು ಜನ ಗಾಯಗೊಂಡಿದ್ದಾರೆ ಎನ್ನುವುದು ತಿಳಿದುಬಂದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ತಡಿಪತ್ರಿಯ ಸ್ಟೀಲ್ ಘಟಕವು ಬ್ರೆಜಿಲಿಯನ್ ನ ಗೇರ್ಡಾ ಸಂಸ್ಥೆಗೆ ಸೇರಿದ್ದು, ಅತಿ ಹೆಚ್ಚು ಸ್ಟೀಲ್ ಅನ್ನು ಉತ್ಪಾದಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಎನ್. ಚೀನಾ ರಾಜಪ್ಪ ಮೃತರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

  • ರಾಯಚೂರು: ಜನರೇಟರ್ ವಿಷಾನಿಲಕ್ಕೆ ನಾಲ್ವರು ಯುವಕರು ಬಲಿ

    ರಾಯಚೂರು: ಜನರೇಟರ್ ವಿಷಾನಿಲಕ್ಕೆ ನಾಲ್ವರು ಯುವಕರು ಬಲಿ

    ರಾಯಚೂರು: ಜಲ್ಲೆಯ ಲಿಂಗಸುಗೂರಿನಲ್ಲಿ ವಿಷಾನಿಲ ಸೇವನೆಯಿಂದ ನಾಲ್ಕು ಜನ ಸಾವನ್ನಪ್ಪಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ. ಪಟ್ಟಣದ ಚೇತನ ಸೌಂಡ್ ಸರ್ವಿಸ್ ಅಂಗಡಿಯಲ್ಲಿ ಘಟನೆ ನಡೆದಿದ್ದು, ಜನರೇಟರ್ ನಿಂದ ಹೊರಬರುವ ಕಾರ್ಬನ್ ಮೊನಾಕ್ಸೈಡ್ ನಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

    ಆದಪ್ಪ, ಮೌಲಾಲಿ, ಮಂಜುನಾಥ್, ಶಶಿಕುಮಾರ್ ಮೃತ ದುರ್ದೈವಿಗಳು. ಘಟನೆಯಿಂದಾಗಿ ಸುರೇಶ್ ಎಂಬವನ ಸ್ಥಿತಿ ಗಂಭೀರವಾಗಿದ್ದು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಮೃತರೆಲ್ಲರು 18 ರಿಂದ 20 ವರ್ಷದ ಯುವಕರಾಗಿದ್ದು ಕರಡಕಲ್ ಗ್ರಾಮದಿಂದ ನಿತ್ಯ ಕೆಲಸಕ್ಕೆ ಬರುತ್ತಿದ್ದರು. ಗುರುವಾರ ರಾತ್ರಿ ಆನೆಹೊಸರು ಗ್ರಾಮದ ಶಾಲೆಯೊಂದರ ಕಾರ್ಯಕ್ರಮ ಮುಗಿಸಿ ಬರುವಾಗ ತಡರಾತ್ರಿಯಾಗಿದ್ದರಿಂದ ಕಚೇರಿಯಲ್ಲಿ ಮಲಗಿದ್ದರು. ವಿದ್ಯುತ್ ಇಲ್ಲದ ಹಿನ್ನೆಲೆಯಲ್ಲಿ ಡೀಸೆಲ್ ಜನರೇಟರ್ ಬಳಸಿದ್ದರು. ಹೀಗಾಗಿ ಜನರೇಟರ್‍ನಿಂದ ಬಿಡುಗಡೆಯಾದ ಅನಿಲದಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

    ಘಟನೆ ಹಿನ್ನೆಲೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2014ರ ಅಕ್ಟೋಬರ್ 14 ರಂದು ಸಹ ಇದೇ ರೀತಿ ಘಟನೆ ರಾಯಚೂರಿನ ಕರ್ನಾಟಕ ಬ್ಯಾಂಕ್‍ನಲ್ಲಿ ನಡೆದಿತ್ತು. ಜನರೇಟರ್ ವಿಷಾನಿಲದಿಂದ ಮ್ಯಾನೇಜರ್ ಸುಂದರಂ ಹಾಗೂ ಸಿಬ್ಬಂದಿ ಶರತ್ ಸಾವನ್ನಪ್ಪಿದ್ದರು.