ಮೇರುನಟ ವಿಷ್ಣುವರ್ಧನ್ (Vishnuvardhan) ಅವರ 14ನೇ ಪುಣ್ಯಸ್ಮರಣೆಯನ್ನು (Punyasmarane) ಅವರ ಅಭಿಮಾನಿಗಳು ರಾಜ್ಯಾದ್ಯಂತ ಮಾಡುತ್ತಿದ್ದಾರೆ. ಇಂದು ಬೆಳಗ್ಗೆಯಿಂದ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಅವರ ಅಭಿಮಾನಿಗಳು ಹಮ್ಮಿಕೊಂಡಿದ್ದಾರೆ. ರಕ್ತದಾನ, ಅನ್ನದಾನದಂತಹ ಶಿಬಿರಗಳನ್ನು ಆಯೋಜನೆ ಮಾಡಿದ್ದಾರೆ.
ನಿನ್ನೆ ರಾತ್ರಿ ಬೆಂಗಳೂರಿನ ಅಭಿಮಾನ ಸ್ಟುಡಿಯೋದಲ್ಲಿರುವ (Abhimana Studio) ವಿಷ್ಣು ಸಮಾಧಿ ಬಳಿ ಮಹಿಳಾ ಅಭಿಮಾನಿಗಳು ದೀಪೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಸಾವಿರಾರು ದೀಪಗಳನ್ನು ಹಚ್ಚುವ ಮೂಲಕ ಅಗಲಿದ ನಟನ ಸ್ಮರಣೆಯನ್ನು ಮಾಡಿದರು. ಇಂದು ಬೆಳಗ್ಗೆಯಿಂದ ಸಾವಿರಾರು ಅಭಿಮಾನಿಗಳು ಅಭಿಮಾನ ಸ್ಟುಡಿಯೋಗೆ ಹರಿದು ಬಂದಿದ್ದಾರೆ.
ಬೆಳಗ್ಗೆ ಹತ್ತು ಗಂಟೆಗೆ ಡಾ.ವಿಷ್ಣುಸೇನಾ ಸಮಿತಿಯ ವೀರಕಪುತ್ರ ಶ್ರೀನಿವಾಸ್ ಮತ್ತು ಅಭಿಮಾನಿಗಳು ಪೂಜೆ ಸಲ್ಲಿಸಿದರು. ಜೊತೆಗೆ ವಿಷ್ಣುವರ್ಧನ್ ನೆನಪಿನಲ್ಲಿ ಕ್ಯಾಲೆಂಡರ್ ಮತ್ತು ಮೇರುನಟ ಪುಸ್ತಕ ಬಿಡುಗಡೆ ಆದವು. ವಿಷ್ಣುವರ್ಧನ್ ಅವರ ನೆಚ್ಚಿನ ಗೀತೆಗಳನ್ನು ಹಾಡುವ ಮೂಲಕ ಗೀತ ನಮನ ಸಲ್ಲಿಸಲಾಗಿದೆ.
ಮೈಸೂರಿನಲ್ಲಿರುವ ವಿಷ್ಣು ಸ್ಮಾರಕದ ಬಳಿಯೂ ವಿಷ್ಣು ಕುಟುಂಬ ಪೂಜೆ ಸಲ್ಲಿಸಿದೆ. ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ ಸೇರಿದಂತೆ ಕುಟುಂಬದ ಹಲವು ಸದಸ್ಯರು ಭಾಗಿಯಾಗಿದ್ದಾರೆ.
ಕನ್ನಡದ ಹೆಸರಾಂತ ನಟ ವಿಷ್ಣುವರ್ಧನ್ (Vishnuvardhan) ಅವರ ಪುಣ್ಯ ಸ್ಮರಣೆ (Punya Smarane) ಕಾರ್ಯಕ್ರಮ ಮೈಸೂರು ಮತ್ತು ಬೆಂಗಳೂರಿನಲ್ಲಿ ನಡೆಯಲಿದೆ. ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣು ಸಮಾಧಿ ಬಳಿ ಅಭಿಮಾನಿಗಳು ಅನ್ನದಾನ, ರಕ್ತದಾನ ಶಿಬಿರವನ್ನು ಆಯೋಜಿಸುವ ಮೂಲಕ ವಿಷ್ಣುವನ್ನು ಸ್ಮರಿಸಲಿದ್ದಾರೆ.
ಅಭಿಮಾನ ಸ್ಟುಡಿಯೋದ (Abhimana Studio) ಮಾಲೀಕರಿಗೆ ಮತ್ತು ವಿಷ್ಣು ಅಭಿಮಾನಿಗಳ ಮಧ್ಯ ವಿವಾದ ಭುಗಿಲೆದ್ದಿದೆ. ವಿಷ್ಣು ಸಮಾಧಿಯನ್ನು ತೆಗೆದು ಹಾಕುವ ಕೆಲಸಕ್ಕೆ ಬಾಲಣ್ಣ ಮಕ್ಕಳು ಮಾಡುತ್ತಿದ್ದಾರೆ ಎಂದು ವಿಷ್ಣು ಅಭಿಮಾನಿಗಳು ಆರೋಪ ಮಾಡಿದ್ದರು. ಹತ್ತು ಗುಂಟೆ ಜಮೀನು ಕೊಡುತ್ತಿಲ್ಲ ಎಂದು ಹೋರಾಟ ಮಾಡಿದ್ದರು. ಈ ಬಾರಿ ಇದಕ್ಕೆಲ್ಲ ತೆರೆ ಬೀಳಲಿದೆ ಎಂದೇ ಅಂದಾಜಿಸಲಾಗಿತ್ತು. ಇನ್ನೂ ಈ ಸಮಸ್ಯೆ ಬಗೆ ಹರಿದಂತೆ ಕಾಣುತ್ತಿಲ್ಲ.
ಹಾಗಂತ ವಿಷ್ಣು ಸಮಾಧಿಯನ್ನು ಪೂಜೆ ಮಾಡಲು ನಾಳೆ ಬಾಲಣ್ಣನ ಮಕ್ಕಳು ಅವಕಾಶ ಕೊಡುವುದಿಲ್ಲವಾ? ಎನ್ನುವ ಪ್ರಶ್ನೆ ಉದ್ಭವಿಸಿದೆ. ಈ ಕುರಿತಂತೆ ಡಾ.ವಿಷ್ಣು ಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಅವರು ಫೇಸ್ ಬುಕ್ ಲೈವ್ ಗೆ ಬಂದು, ಎಂದಿನಂತೆ ಪೂಜೆ ಮಾಡಬಹುದು. ಸಾವಿರ ಸಾವಿರ ಸಂಖ್ಯೆಯಲ್ಲಿ ಅಭಿಮಾನಿಗಳು ಬನ್ನಿ ಎಂದು ಕರೆ ನೀಡಿದ್ದಾರೆ. ಬೆಳಗ್ಗೆಯಿಂದಲೇ ಪೂಜಾ ಕಾರ್ಯಗಳು ನಡೆಯಲಿವೆ ಎಂದು ಹೇಳಿದ್ದಾರೆ.
ಕನ್ನಡದ ಹೆಸರಾಂತ ನಟ ವಿಷ್ಣುವರ್ಧನ್ (Vishnuvardhan) ಅವರ ಪುಣ್ಯಭೂಮಿ (Punya Bhumi) ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ((D.K. Shivakumar)) ಜೊತೆ ಕಿಚ್ಚ ಸುದೀಪ್ (Sudeep) ಮಾತನಾಡಿದ್ದಾರೆ. ನಿನ್ನೆ ಡಿಕೆಶಿಯನ್ನು ಭೇಟಿ ಮಾಡಿದ್ದ ಸುದೀಪ್, ಅಭಿಮಾನ ಸ್ಟುಡಿಯೋದಲ್ಲಿರುವ ವಿಷ್ಣು ಪುಣ್ಯ ಭೂಮಿಯನ್ನು ಅಭಿಮಾನಿಗಳ ಕೋರಿಕೆಯ ಮೇರೆಗೆ ಹಾಗೆಯೇ ಉಳಿಸಿಕೊಳ್ಳಬೇಕು ಮತ್ತು ಹತ್ತು ಗುಂಟೆ ಜಮೀನನ್ನು ನೀಡಲು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ವಿಷ್ಣು ಸಮಾಧಿ ನೆಲಸಮದ ಆತಂಕ
ಕನ್ನಡ ಸಿನಿಮಾ ರಂಗದ ಮೇರುನಟ ಡಾ.ವಿಷ್ಣುವರ್ಧನ್ ಅವರ ಸಮಾಧಿ ನೆಲಸಮ ಆಗುತ್ತಾ? ಇಂತಹ ಆತಂಕದ ಮಾಹಿತಿಯನ್ನು ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಹೊರಹಾಕಿದ್ದಾರೆ. ಈ ಕುರಿತು ಅವರು ಈ ಹಿಂದೆ ವಿಡಿಯೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಯಾವುದೇ ಕಾರಣಕ್ಕೂ ಬೆಂಗಳೂರಿನ ಅಭಿಮಾನ ಸ್ಟುಡಿಯೋದಲ್ಲಿರುವ ಯಜಮಾನರ (ವಿಷ್ಣುವರ್ಧನ್) ಸಮಾಧಿಯನ್ನು ನೆಲಸಮ ಮಾಡುವುದಕ್ಕೆ ಬಿಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ.
ಅಭಿಮಾನ ಸ್ಟುಡಿಯೋದಲ್ಲಿರುವ ವಿಷ್ಣು ಸಮಾಧಿಯ ಜಾಗದ ಕುರಿತು ಕಳೆದ ಹದಿಮೂರು ವರ್ಷಗಳಿಂದ ವಿವಾದ ಕೋರ್ಟ್ ನಲ್ಲಿದೆ. ಹಾಗಾಗಿ ಹಿರಿಯ ನಟ ಬಾಲಣ್ಣ ಕುಟುಂಬ ಹಾಗೂ ವಿಷ್ಣು ಅಭಿಮಾನಿಗಳ ನಡುವೆ ತಿಕ್ಕಾಟವೂ ಹಲವು ವರ್ಷಗಳಿಂದ ನಡೆಯುತ್ತಾ ಬಂದಿದೆ. ಕೋರ್ಟ್ ನಲ್ಲಿರುವ ಕೇಸ್ ಅಂತಿಮ ಹಂತಕ್ಕೆ ತಲುಪಿದ್ದು, ಬಾಲಣ್ಣ ಕುಟುಂಬದವರು ವಿಷ್ಣು ಸಮಾಧಿಯನ್ನು ನೆಲಸಮ ಮಾಡುವಂತೆ ಮಾನ್ಯ ನ್ಯಾಯಾಲಯಕ್ಕೆ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವಿಷಯವನ್ನೇ ವೀರಕಪುತ್ರ ಶ್ರೀನಿವಾಸ್ ತಮ್ಮ ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ.
ವೀರಕಪುತ್ರ ಶ್ರೀನಿವಾಸ್ ವಿಡಿಯೋದಲ್ಲಿ ಹೇಳಿದಂತೆ, ‘ಬಾಲಣ್ಣ ಕುಟುಂಬದವರಾದ ಕಾರ್ತಿಕ್ ಯಜಮಾನರ ಪುಣ್ಯಭೂಮಿಗೆ ಸಾಕಷ್ಟು ತೊಂದರೆ ಕೊಡುತ್ತಿದ್ದಾರೆ. ವಿಷ್ಣುವರ್ಧನ್ ಕುಟುಂಬದವರಿಗೆ ಈ ಜಾಗವೇ ಇಷ್ಟವಿಲ್ಲವೆಂದು ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಅಭಿಮಾನಿಗಳು ಪುಣ್ಯಭೂಮಿಗೆ ಕಾಲಿಡದಂತೆ ಪೊಲೀಸ್ ಠಾಣೆಗೆ ದೂರು ನೀಡುತ್ತಾರೆ. ಇಲ್ಲಿಗೆ ನೂರು ಜನರೂ ಬರುವುದಿಲ್ಲ ಎಂದು ಸುಳ್ಳುಗಳನ್ನು ಹರಡುತ್ತಿದ್ದಾರೆ. ಹೀಗೆಯೇ ಸುಳ್ಳು ಹೇಳಿದರೆ, ನಾವೂ ಕೂಡ ಅವರಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ. ಹಾಗಂತ ಅಭಿಮಾನ ಸ್ಟುಡಿಯೋದ ಜಾಗ, ಅವರ ಪಿತ್ರಾರ್ಜಿತ ಆಸ್ತಿಲ್ಲ. ಸರಕಾರ ನೀಡಿದ್ದು. ಈ ಕುರಿತು ನಾವೂ ಹೋರಾಟ ಮಾಡುತ್ತೇವೆ’ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ.
ಮುಂದುವರೆದು ಮಾತನಾಡಿರುವ ಶ್ರೀನಿವಾಸ್, ‘ವಿಷ್ಣುವರ್ಧನ್ ಪುಣ್ಯಭೂಮಿಗೆ ಕೇಳುತ್ತಿರುವುದು ಕೇವಲ ಹತ್ತು ಗುಂಟೆ ಜಾಗ. ಈ ಹಿಂದೆ ಬಾಲಣ್ಣ ಕುಟುಂಬದವರು ಜಿಲ್ಲಾಧಿಕಾರಿಗಳ ಎದುರು ಹತ್ತು ಗುಂಟೆ ಜಾಗ ಕೊಡುವುದಾಗಿ ಹೇಳಿದ್ದರು. ಪತ್ರವನ್ನೂ ಕೊಟ್ಟಿದ್ದರು. ಈಗ ಬೇರೆ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ನಾವು ಪುಣ್ಯಭೂಮಿಯನ್ನು ಉಳಿಸಿಕೊಳ್ಳಲು ಎಂತಹ ಹೋರಾಟಕ್ಕೂ ಸಿದ್ಧ. ಈ ಕುರಿತು ಬೃಹತ್ ಪ್ರತಿಭಟನೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ’ ಎಂದು ಹೇಳಿದ್ದರು. ನಿನ್ನೆಯಷ್ಟೇ ಹೋರಾಟ ಕೂಡ ಮಾಡಿದ್ದಾರೆ.
ಕನ್ನಡದ ಅಭಿಜಾತ ಕಲಾವಿದ ಡಾ. ವಿಷ್ಣುವರ್ಧನ್ (Vishnuvardhan) ಅವರ ಅಂತ್ಯ ಸಂಸ್ಕಾರಗೊಂಡ ಸ್ಥಳ ಪುಣ್ಯಭೂಮಿ (Punyabhoomi) ಆಗಬೇಕೆಂಬ ವಿಷ್ಣು ಅಭಿಮಾನಿಗಳ ಬೇಡಿಕೆ ಕನ್ನಡಿಗರ ಅಪೇಕ್ಷೆಯ ಸಂಕೇತವಾಗಿದೆ. ಸರ್ಕಾರ ಸಕಾರತ್ಮಕವಾಗಿ ಮನಸ್ಸು ಮಾಡಿದರೆ ಈ ಬೇಡಿಕೆ ಈಡೇರಿಸುವುದು ದೊಡ್ಡ ವಿಷಯವೇನಲ್ಲ. ಈ ನಿಟ್ಟಿನಲ್ಲಿ ಕೂಡಲೇ ಗಮನ ಹರಿಸುವಂತೆ ಒತ್ತಾಯಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (Vijayendra) ಒತ್ತಾಯ ಮಾಡಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ 5 ಎಕರೆ ಜಾಗದಲ್ಲಿ 11 ಕೋಟಿ ವೆಚ್ಚದಲ್ಲಿ ವಿಷ್ಣುವರ್ಧನ್ ಅವರ ಇತಿಹಾಸ ಸಾರುವ ಸ್ಮಾರಕ ಲೋಕಾರ್ಪಣೆಗೊಳಿಸಿದ್ದನ್ನು (ಕಳೆದ ವರ್ಷ) ಈ ಸಂದರ್ಭದಲ್ಲಿ ಗೌರವ ಪೂರ್ವಕವಾಗಿ ಸ್ಮರಿಸಿರುವ ವಿಜಯೇಂದ್ರ, ಕೂಡಲೇ ಸರಕಾರ ಮಧ್ಯ ಪ್ರವೇಶಿಸಿ ಪುಣ್ಯಭೂಮಿಯ ಜಾಗವನ್ನು ಅಭಿಮಾನಿಗಳಿಗೆ ಹಸ್ತಾಂತರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಪುಣ್ಯಭೂಮಿ ಕುರಿತಾದ ಹೋರಾಟ ಇಂದು ಬೆಳಗಿನಿಂದಲೇ ಆರಂಭವಾಗಿತ್ತು. ರಾಜ್ಯದ ಮೂಲೆ ಮೂಲೆಗಳಿಂದ ವಿಷ್ಣು ಅಭಿಮಾನಿಗಳು ಬೆಂಗಳೂರಿಗೆ ಆಗಮಿಸಿದ್ದರು. ಜೊತೆಗೆ 42ಕ್ಕೂ ಹೆಚ್ಚು ಸಂಘಟನೆಗಳು ಈ ಹೋರಾಟಕ್ಕೆ ಬೆಂಬಲ ನೀಡಿದ್ದವು. ವಿಷ್ಣು ಸೇನಾ ಸಮಿತಿಯ ರಾಜ್ಯಾಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಈ ಎಲ್ಲ ಸಂಘಟನೆಗಳನ್ನು ಒಗ್ಗೂಡಿಸಿಕೊಂಡು ಹೋರಾಟಕ್ಕೆ ಇಳಿದಿದ್ದರು.
ಈ ಹೋರಾಟಕ್ಕೆ ಕಿಚ್ಚ ಸುದೀಪ್, ಡಾಲಿ ಧನಂಜಯ್, ವಸಿಷ್ಠ ಸಿಂಹ, ನೀನಾಸಂ ಸತೀಶ್ ಸೇರಿದಂತೆ ಹಲವು ನಟರು ಮತ್ತು ನಟಿಯರು ಹಾಗೂ ತಂತ್ರಜ್ಞರು ಬೆಂಬಲಿಸಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ವಿಷಯವಾಗಿ ಡಿ.ಕೆ. ಶಿವಕುಮಾರ್ ಅವರನ್ನು ಸುದೀಪ್ ಭೇಟಿ ಆಗಲಿದ್ದಾರೆ ಎನ್ನಲಾಗುತ್ತಿದೆ.
ಹೆಸರಾಂತ ನಟ ವಿಷ್ಣುವರ್ಧನ್ (Vishnuvardhan) ಪುಣ್ಯಭೂಮಿ (Punyabhoomi) ಹೋರಾಟಕ್ಕೆ ನಟ ಶ್ರೀಮುರಳಿ (Srimurali) ಕೂಡ ಬೆಂಬಲ ವ್ಯಕ್ತ ಪಡಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀಮುರಳಿ, ‘ವಿಷ್ಣುವರ್ಧನ್ ಅಭಿಮಾನಿಗಳ ಹೋರಾಟಕ್ಕೆ ನನ್ನ ಬೆಂಬಲ ಇದೆ. ಈಗಲಾದರೂ ಆ ವಿಚಾರಕ್ಕೆ ಒಂದು ಅಂತ್ಯ ಬೇಕು. ಅವರು ಕನ್ನಡದ ಸೂಪರ್ ಸ್ಟಾರ್. ವಿಷ್ಣು ಅಂಕಲ್ ಗೆ ಆ ಜಾಗ ಕೊಡ್ಲಿ. ಈ ವಿಚಾರಕ್ಕೆ ನನ್ನ ಬೆಂಬಲ ಪೂರ್ತಿಯಾಗಿದೆ’ ಎಂದಿದ್ದಾರೆ.
ಡಾಲಿ, ಸುದೀಪ್ ಸಾಥ್
ವಿಷ್ಣುವರ್ಧನ್ ಅಂತ್ಯ ಸಂಸ್ಕಾರವಾದ ಜಾಗದಲ್ಲಿ ಪುಣ್ಯಭೂಮಿ ಆಗಬೇಕು ಎಂದು ವಿಷ್ಣು ಅಭಿಮಾನಿಗಳು ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ. ವಿಷ್ಣುವರ್ಧನ್ ಅಭಿಮಾನಿಗಳೆಲ್ಲರೂ ಸೇರಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ವಿಷ್ಣು ಅಭಿಮಾನಿಗಳ ಹೋರಾಟಕ್ಕೆ ನಟ ಡಾಲಿ ಧನಂಜಯ ಬೆಂಬಲ ಸೂಚಿಸಿದ್ದಾರೆ.
ಕನ್ನಡ ಚಿತ್ರರಂಗದ ಮೇರು ನಟರು, ಹಿರಿಯಣ್ಣರಲ್ಲಿ ಒಬ್ಬರಾದ ಡಾ.ವಿಷ್ಣು ಸರ್ ಪುಣ್ಯಭೂಮಿಗೆ ರಾಜಧಾನಿಯಲ್ಲಿ ಅಂಗೈಯಗಲ ಜಾಗವಿಲ್ಲವೆಂಬುದು ಯಾಕೋ ಅರಗಿಸಿಕೊಳ್ಳಲಾಗುತ್ತಿಲ್ಲ. ಸರ್ಕಾರ ಕೂಡಲೇ ಡಾ.ವಿಷ್ಣು ಸರ್ ಪುಣ್ಯಭೂಮಿ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸುವೆ. ಅವರ ಅಭಿಮಾನಿಗಳ ಹೋರಾಟದಲ್ಲಿ ನಾನೂ ಇದ್ದೇನೆ. ಈ ವಿಷಯ ಬೇಗ ಸುಖಾಂತ್ಯ ಕಾಣಲಿ. ಎಂದು ಟ್ವೀಟ್ ಮಾಡುವ ಮೂಲಕ ತಮ್ಮ ಬೆಂಬಲ ಸೂಚಿಸಿದ್ದಾರೆ
ಸಾಹಸಸಿಂಹ ಡಾ.ವಿಷ್ಣುವರ್ಧನ್ ಪುಣ್ಯಭೂಮಿಗಾಗಿ ಅಭಿಮಾನಿಗಳು ಹೋರಾಟಕ್ಕೆ ಮುಂದಾಗಿದ್ದಾರೆ. ವಿಷ್ಣು ಅಭಿಮಾನಿಗಳ ಬೆಂಬಲಕ್ಕೆ ಕಿಚ್ಚ ಸುದೀಪ್ ನಿಂತಿದ್ದಾರೆ. ವಿಷ್ಣು ಸಮಾಧಿ, ಸ್ಮಾರಕ ವಿಚಾರವಾಗಿ ಕಿಚ್ಚ ಸುದೀಪ್ ತಡರಾತ್ರಿ ಟ್ವೀಟ್ ಮಾಡಿದ್ದಾರೆ.
ಡಾ.ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು-ಇಂದು ಒಂದೇ ನಿಲುವು. ಮೈಸೂರಿನಲ್ಲಿ ಸ್ಮಾರಕವಾದರೂ, ಅಂತ್ಯಸಂಸ್ಕಾರಗೊಂಡ ಸ್ಥಳದಲ್ಲಿಯೂ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ ನಿಮ್ಮಲ್ಲೊಬ್ಬ ಎಂದು ಭಾವಿಸಿ ನೀವು ಮುನ್ನಡೆಯಿರಿ. ನನ್ನಿಂದಾಗುವ ಎಲ್ಲವನ್ನೂ ಪುಣ್ಯಭೂಮಿಗಾಗಿ ಮಾಡುವೆ ಎಂದು ಎಕ್ಸ್‌ನಲ್ಲಿ ಸುದೀಪ್ ಪೋಸ್ಟ್ ಹಾಕಿದ್ದಾರೆ.
ವಿಷ್ಣುವರ್ಧನ್ (Vishnuvardhan) ಅಂತ್ಯ ಸಂಸ್ಕಾರವಾದ ಜಾಗದಲ್ಲಿ ಪುಣ್ಯಭೂಮಿ ಆಗಬೇಕು ಎಂದು ವಿಷ್ಣು ಅಭಿಮಾನಿಗಳು ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ. ವಿಷ್ಣುವರ್ಧನ್ ಅಭಿಮಾನಿಗಳೆಲ್ಲರೂ ಸೇರಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ (Protest) ಹಮ್ಮಿಕೊಂಡಿದ್ದಾರೆ. ವಿಷ್ಣು ಅಭಿಮಾನಿಗಳ ಹೋರಾಟಕ್ಕೆ ನಟ ಡಾಲಿ ಧನಂಜಯ (Dolly Dhananjay) ಬೆಂಬಲ ಸೂಚಿಸಿದ್ದಾರೆ.
ಕನ್ನಡ ಚಿತ್ರರಂಗದ ಮೇರು ನಟರು, ಹಿರಿಯಣ್ಣರಲ್ಲಿ ಒಬ್ಬರಾದ ಡಾ.ವಿಷ್ಣು ಸರ್ ಪುಣ್ಯಭೂಮಿಗೆ ರಾಜಧಾನಿಯಲ್ಲಿ ಅಂಗೈಯಗಲ ಜಾಗವಿಲ್ಲವೆಂಬುದು ಯಾಕೋ ಅರಗಿಸಿಕೊಳ್ಳಲಾಗುತ್ತಿಲ್ಲ. ಸರ್ಕಾರ ಕೂಡಲೇ ಡಾ.ವಿಷ್ಣು ಸರ್ ಪುಣ್ಯಭೂಮಿ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸುವೆ. ಅವರ ಅಭಿಮಾನಿಗಳ ಹೋರಾಟದಲ್ಲಿ ನಾನೂ ಇದ್ದೇನೆ. ಈ ವಿಷಯ ಬೇಗ ಸುಖಾಂತ್ಯ ಕಾಣಲಿ. ಎಂದು ಟ್ವೀಟ್ ಮಾಡುವ ಮೂಲಕ ತಮ್ಮ ಬೆಂಬಲ ಸೂಚಿಸಿದ್ದಾರೆ.
ಸುದೀಪ್ ಬೆಂಬಲ
ಸಾಹಸಸಿಂಹ ಡಾ.ವಿಷ್ಣುವರ್ಧನ್ ಪುಣ್ಯಭೂಮಿಗಾಗಿ ಅಭಿಮಾನಿಗಳು ಹೋರಾಟಕ್ಕೆ ಮುಂದಾಗಿದ್ದಾರೆ. ವಿಷ್ಣು ಅಭಿಮಾನಿಗಳ ಬೆಂಬಲಕ್ಕೆ ಕಿಚ್ಚ ಸುದೀಪ್ ನಿಂತಿದ್ದಾರೆ. ವಿಷ್ಣು ಸಮಾಧಿ, ಸ್ಮಾರಕ ವಿಚಾರವಾಗಿ ಕಿಚ್ಚ ಸುದೀಪ್ ತಡರಾತ್ರಿ ಟ್ವೀಟ್ ಮಾಡಿದ್ದಾರೆ.
ಡಾ.ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು-ಇಂದು ಒಂದೇ ನಿಲುವು. ಮೈಸೂರಿನಲ್ಲಿ ಸ್ಮಾರಕವಾದರೂ, ಅಂತ್ಯಸಂಸ್ಕಾರಗೊಂಡ ಸ್ಥಳದಲ್ಲಿಯೂ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ ನಿಮ್ಮಲ್ಲೊಬ್ಬ ಎಂದು ಭಾವಿಸಿ ನೀವು ಮುನ್ನಡೆಯಿರಿ. ನನ್ನಿಂದಾಗುವ ಎಲ್ಲವನ್ನೂ ಪುಣ್ಯಭೂಮಿಗಾಗಿ ಮಾಡುವೆ ಎಂದು ಎಕ್ಸ್‌ನಲ್ಲಿ ಸುದೀಪ್ ಪೋಸ್ಟ್ ಹಾಕಿದ್ದಾರೆ.
ಶನಿವಾರ ತಡರಾತ್ರಿ 12:40 ಕ್ಕೆ ಸುದೀಪ್ ಈ ಪೋಸ್ಟ್ ಹಾಕಿದ್ದಾರೆ. ಆ ಮೂಲಕ ವಿಷ್ಣುವರ್ಧನ್ ಅಭಿಮಾನಿಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ವಿಷ್ಣುವರ್ಧನ್ ಪುಣ್ಯಭೂಮಿ ವಿಚಾರವಾಗಿ ಮಾತನಾಡಲು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಗೂ ಸುದೀಪ್ ಮುಂದಾಗಿದ್ದಾರೆ ಎನ್ನಲಾಗಿದೆ.
ವಿಷ್ಣುವರ್ಧನ್ ಪುಣ್ಯಭೂಮಿಗಾಗಿ ಅಭಿಮಾನಿಗಳು ಹೋರಾಟಕ್ಕೆ ಮುಂದಾಗಿದ್ದಾರೆ. ವಿಷ್ಣುಸೇನಾ ಸಮಿತಿಯಿಂದ ಹೋರಾಟಕ್ಕೆ ಕರೆ ನೀಡಿದ್ದು, ಫ್ರೀಡಂ ಪಾರ್ಕ್‌ನಲ್ಲಿ 10 ಗಂಟೆಗೆ ವಿಷ್ಣು ಅಭಿಮಾನಿಗಳು ಒಟ್ಟಾಗಿ ಸೇರಿದ್ದಾರೆ.
ಸಾಹಸಸಿಂಹ ಡಾ.ವಿಷ್ಣುವರ್ಧನ್ ಪುಣ್ಯಭೂಮಿಗಾಗಿ ಅಭಿಮಾನಿಗಳು ಹೋರಾಟಕ್ಕೆ ಮುಂದಾಗಿದ್ದಾರೆ. ವಿಷ್ಣು ಅಭಿಮಾನಿಗಳ ಬೆಂಬಲಕ್ಕೆ ಕಿಚ್ಚ ಸುದೀಪ್ ನಿಂತಿದ್ದಾರೆ. ವಿಷ್ಣು ಸಮಾಧಿ, ಸ್ಮಾರಕ ವಿಚಾರವಾಗಿ ಕಿಚ್ಚ ಸುದೀಪ್ ತಡರಾತ್ರಿ ಟ್ವೀಟ್ ಮಾಡಿದ್ದಾರೆ.
ಡಾ.ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು-ಇಂದು ಒಂದೇ ನಿಲುವು. ಮೈಸೂರಿನಲ್ಲಿ ಸ್ಮಾರಕವಾದರೂ, ಅಂತ್ಯಸಂಸ್ಕಾರಗೊಂಡ ಸ್ಥಳದಲ್ಲಿಯೂ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ ನಿಮ್ಮಲ್ಲೊಬ್ಬ ಎಂದು ಭಾವಿಸಿ ನೀವು ಮುನ್ನಡೆಯಿರಿ. ನನ್ನಿಂದಾಗುವ ಎಲ್ಲವನ್ನೂ ಪುಣ್ಯಭೂಮಿಗಾಗಿ ಮಾಡುವೆ ಎಂದು ಎಕ್ಸ್‌ನಲ್ಲಿ ಸುದೀಪ್ ಪೋಸ್ಟ್ ಹಾಕಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ʻಕಾಟೇರʼ ಟ್ರೈಲರ್ ರಿಲೀಸ್ – ಡಿ-ಬಾಸ್ ಮಾಸ್ ಲುಕ್‌ಗೆ ಅಭಿಮಾನಿಗಳು ಫಿದಾ
ಡಾ.ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು -ಇಂದು ಒಂದೇ ನಿಲುವು. ಮೈಸೂರಿನಲ್ಲಿ ಸ್ಮಾರಕವಾದರೂ, ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲಿಯೂ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ ನಿಮ್ಮಲ್ಲೊಬ್ಬ ಎಂದು ಭಾವಿಸಿ ನೀವು ಮುನ್ನಡೆಯಿರಿ. ನನ್ನಿಂದಾಗುವ ಎಲ್ಲವನ್ನೂ ಪುಣ್ಯಭೂಮಿಗಾಗಿ ಮಾಡುವೆ.
ಶನಿವಾರ ತಡರಾತ್ರಿ 12:40 ಕ್ಕೆ ಸುದೀಪ್ ಈ ಪೋಸ್ಟ್ ಹಾಕಿದ್ದಾರೆ. ಆ ಮೂಲಕ ವಿಷ್ಣುವರ್ಧನ್ ಅಭಿಮಾನಿಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ವಿಷ್ಣುವರ್ಧನ್ ಪುಣ್ಯಭೂಮಿ ವಿಚಾರವಾಗಿ ಮಾತನಾಡಲು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಗೂ ಸುದೀಪ್ ಮುಂದಾಗಿದ್ದಾರೆ ಎನ್ನಲಾಗಿದೆ.
ವಿಷ್ಣುವರ್ಧನ್ ಪುಣ್ಯಭೂಮಿಗಾಗಿ ಅಭಿಮಾನಿಗಳು ಹೋರಾಟಕ್ಕೆ ಮುಂದಾಗಿದ್ದಾರೆ. ವಿಷ್ಣುಸೇನಾ ಸಮಿತಿಯಿಂದ ಹೋರಾಟಕ್ಕೆ ಕರೆ ನೀಡಿದ್ದು, ಫ್ರೀಡಂ ಪಾರ್ಕ್‌ನಲ್ಲಿ 10 ಗಂಟೆಗೆ ವಿಷ್ಣು ಅಭಿಮಾನಿಗಳು ಒಟ್ಟಾಗಿ ಸೇರಲಿದ್ದಾರೆ. ಇದನ್ನೂ ಓದಿ: ಆಯೆಷಾ ಖಾನ್ ಗೆ ವೈಲ್ಡ್ ಕಾರ್ಡ್ ಎಂಟ್ರಿ: ಕಾಮಿಡಿಯನ್ ಎದೆಯಲ್ಲಿ ಧಗಧಗ
ಸಾವಿರಾರು ಜನ ಸೇರುವ ನಿರೀಕ್ಷೆ ಇದೆ. ಸುಮಾರು 40 ಕನ್ನಡಪರ ಸಂಘಟನೆಗಳು ಜೊತೆಯಾಗಲಿದೆ. ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.
ಕನ್ನಡ ಸಿನಿಮಾ ರಂಗದ ಹೆಸರಾಂತ ನಟ ವಿಷ್ಣುವರ್ಧನ್ (Vishnuvardhan) ಅವರ ಸಮಾಧಿ ಜಾಗವನ್ನುಉಳಿಸಿಕೊಳ್ಳುವ ನಿಟ್ಟಿನಲ್ಲಿ ಡಾ.ವಿಷ್ಣು ಸೇನಾ ಸಮಿತಿಯು ವೀರಕಪುತ್ರ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಡಿ.17ರಂದು ಬೃಹತ್ ಹೋರಾಟವನ್ನು ಹಮ್ಮಿಕೊಂಡಿದೆ. ರಾಜ್ಯದ ಮೂಲೆ ಮೂಲೆಗಳಿಂದ ಅಂದು ಡಾ.ವಿಷ್ಣು ಸೇನಾ ಸಮಿತಿಯ ಸದಸ್ಯರು ಮತ್ತು ವಿಷ್ಣುವರ್ಧನ್ ಅವರ ಅಭಿಮಾನಿಗಳು ಹೋರಾಟದಲ್ಲಿ ಭಾಗಿಯಾಗಲಿದ್ದಾರೆ.
ಈ ಹೋರಾಟಕ್ಕೆ ಈಗಾಗಲೇ ಬಹುತೇಕ ಕನ್ನಡಪರ ಸಂಘಟನೆ ಬೆಂಬಲ ಸೂಚಿಸಿವೆ. ಜೊತೆಗೆ ನಾನಾ ಸಂಘಟನೆಗಳು ಕೈ ಜೋಡಿಸಿವೆ. ಇದೀಗ ಕಿಚ್ಚ ಸುದೀಪ್ ಕೂಡ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ ಎಂದು ವಿಷ್ಣುಸೇನಾ ಸಮಿತಿ ವೀರಕಪುತ್ರ ಶ್ರೀನಿವಾಸ್ (Veerakaputra Srinivas) ಅವರು ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ. ಹೋರಾಟಕ್ಕೆ ಕಿಚ್ಚ (Kiccha Sudeep) ಬೆಂಬಲ ನೀಡಿರುವುದಾಗಿ ತಿಳಿಸಿದ್ದಾರೆ.
ಪುಣ್ಯಭೂಮಿ ಉಳಿಸಿಕೊಳ್ಳಲು ಏನೆಲ್ಲಾ ಮಾಡಬಹುದೋ ಅದೆಲ್ಲವನ್ನೂ ಮಾಡುವೆ. ನಾನೂ ನಿಮ್ಮಲ್ಲೊಬ್ಬ ಎಂದು ಭಾವಿಸಿ ಮುನ್ನೆಡೆಯಿರಿ ಎಂದು ಸುದೀಪ್ ಹೇಳಿರುವುದಾಗಿ ವೀರಕಪುತ್ರ ಶ್ರೀನಿವಾಸ್ ಬರೆದುಕೊಂಡಿದ್ದಾರೆ. ನಮ್ಮ ಬೇಡಿಕೆ ನ್ಯಾಯವಿದ್ದಾಗ ಜಗವೂ ನ್ಯಾಯದ ಪರವೇ ನಿಲ್ಲುತ್ತದೆ ಎನ್ನುವ ಆತ್ಮವಿಶ್ವಾಸದ ಪದಗಳನ್ನು ಅವರು ಬರೆದುಕೊಂಡಿದ್ದಾರೆ.
ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಅವರ ಸಮಾಧಿಯನ್ನು ನೆಲಸಮ ಮಾಡುವ ಹುನ್ನಾರ ನಡೆದಿದೆ ಎಂದು ವಿಷ್ಣು ಸೇನಾ ಸಮಿತಿ ಆರೋಪಿಸಿದೆ. ಇದರ ವಿರುದ್ಧವೇ ಅವರು ಪ್ರತಿಭಟನೆಗೆ ಮುಂದಾಗಿದ್ದಾರೆ. ರವಿವಾರದಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನೂ ಹಮ್ಮಿಕೊಂಡಿದ್ದಾರೆ. ಈ ಮೂಲಕ ಸರಕಾರದ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಈ ಹೋರಾಟಕ್ಕೆ ಕಿಚ್ಚನ ಬೆಂಬಲ ಆನೆ ಬಲ ಬಂದಂತಾಗಿದೆ.
ಕನ್ನಡದ ಹೆಸರಾಂತ ನಟ ಡಾ.ವಿಷ್ಣುವರ್ಧನ್ (Vishnuvardhan) ಅವರ ಸಮಾಧಿ ವಿವಾದ ಮತ್ತಷ್ಟು ತಾರಕಕ್ಕೇರಿದೆ. ಮೈಸೂರಿಗೆ ಸ್ಮಾರಕವನ್ನು ಶಿಫ್ಟ್ ಮಾಡಿರುವ ಹಿನ್ನೆಲೆಯಲ್ಲಿ ಅವರ ಸಮಾಧಿ ಸ್ಥಳವನ್ನು ತೆರವು ಮಾಡಲು ನಿರ್ಧರಿಸಲಾಗಿತ್ತು. ಈ ವಿವಾದ ಕೋರ್ಟ್ ಮೆಟ್ಟಿಲು ಕೂಡ ಏರಿತ್ತು. ಈಗ ಮತ್ತೆ ಅಭಿಮಾನಿಗಳ ಮತ್ತು ಅಭಿಮಾನ ಸ್ಟುಡಿಯೋ ಮಾಲೀಕರ ನಡುವೆ ಮತ್ತೊಂದು ಸುತ್ತಿನ ಸಮರ ಶುರುವಾಗುತ್ತಿದೆ. ಈ ಕುರಿತಂತೆ ಅಭಿಮಾನಿಗಳು ಮೊನ್ನೆ ಸಭೆ ಸೇರಿ ಬೃಹತ್ ಪ್ರತಿಭಟನೆ (Protest) ಮಾಡಲು ನಿರ್ಧರಿಸಿದ್ದಾರೆ. ಈ ಕುರಿತಂತೆ ವಿಷ್ಣು ಸೇನಾ ಸಮಿತಿ ಅಧ್ಯಕ್ಷರಾದ ವೀರಕಪುತ್ರ ಶ್ರೀನಿವಾಸ್ (Veerakaputra Srinivas) ಅವರ ಬರೆದ ಪತ್ರ ಇಲ್ಲಿದೆ.
ಮೇರು ನಟ ಡಾ.ವಿಷ್ಣುವರ್ಧನ್ ಅವರು ಅಗಲಿ 14 ವರ್ಷಗಳಾದವು. ಆದರೆ ಇಂದಿಗೂ ಅವರ ಅಂತ್ಯಸಂಸ್ಕಾರಗೊಂಡ ಜಾಗವನ್ನು ಅಭಿವೃದ್ದಿಪಡಿಸುವ ಕೆಲಸವನ್ನು ಯಾವುದೇ ಸರ್ಕಾರ ಮಾಡಿಲ್ಲ. ವಾಸ್ತವದಲ್ಲಿ ಹಿರಿಯ ಕಲಾವಿದ ಬಾಲಕೃಷ್ಣ ಅವರಿಗೆ ಸರ್ಕಾರ ಅನುದಾನವಾಗಿ ನೀಡಿರುವ ಜಾಗವೇ ಅಭಿಮಾನ್ ಸ್ಟುಡಿಯೋ. ಕನ್ನಡಿಗರು ಚಿತ್ರರಂಗದ ಕೆಲಸಗಳಿಗೆ ಮದರಾಸಿಗೆ ಹೋಗುವುದನ್ನು ತಪ್ಪಿಸಬೇಕು ಎಂದು ಕನಸು ಹೊತ್ತು ಬಾಲಣ್ಣನವರು ಸರ್ಕಾರದ ಬಳಿ ಇಪ್ಪತ್ತು ಎಕರೆ ಜಾಗವನ್ನು 99 ವರುಷಕ್ಕೆ ಅನುದಾನವಾಗಿ ಪಡೆದು ಅಭಿಮಾನ್ ಸ್ಟುಡಿಯೋ ನಿರ್ಮಿಸಿದ್ದರು. ಆದರೆ ಅವರ ಅಗಲಿಕೆಯ ನಂತರ 2004 ರಲ್ಲಿ ಅವರ ಮಕ್ಕಳು ಅದರಲ್ಲಿ ಹತ್ತು ಎಕರೆ ಜಾಗವನ್ನು ಮಾರಾಟ ಮಾಡಿ, ಸರ್ಕಾರಿ ಜಮೀನನ್ನು ದುರುಪಯೋಗಪಡಿಸಿಕೊಂಡಿದ್ದರು. ಈ ಕಾರಣದಿಂದ ಹಿಂದಿನ ಜಿಲ್ಲಾಧಿಕಾರಿ ಶಂಕರ್ ಅವರು ಅಭಿಮಾನ್ ಸ್ಟುಡಿಯೋ ಮುಟ್ಟುಗೋಲಿಗೆ ಆದೇಶಿಸಿದ್ದರು. ಆಗ ಬಾಲಕೃಷ್ಣ ಅವರ ಕುಟುಂಬಸ್ಥರು ನ್ಯಾಯಾಲಯದಲ್ಲಿ ತಡೆಯಾಜ್ಞೆಯನ್ನು ತಂದಿದ್ದರು.
ಈ ನಡುವೆ, ಡಾ.ವಿಷ್ಣುವರ್ಧನ್ ಅವರ ಸ್ಮಾರಕವು ಮೈಸೂರಿಗೆ ಸ್ಥಳಾಂತರಗೊಂಡಿತು. ಆದರೆ ಅಭಿಮಾನಿಗಳು ಸ್ಮಾರಕ ಎಲ್ಲೇ ಆದರೂ ಅಂತ್ಯಸಂಸ್ಕಾರಗೊಂಡ ಜಾಗದಲ್ಲಿಯೇ ಪುಣ್ಯಭೂಮಿ ಇರಬೇಕು ಎಂದು ಹಠವಿಡಿದು, ಪ್ರತಿವರ್ಷದ ಹುಟ್ಟುಹಬ್ಬ ಮತ್ತು ಪುಣ್ಯಸ್ಮರಣೆಯನ್ನು ಅತ್ಯಂತ ಅದ್ದೂರಿಯಾಗಿ ಅಭಿಮಾನ್ ಸ್ಟುಡಿಯೋದ ಡಾ.ವಿಷ್ಣು ಪುಣ್ಯಭೂಮಿಯಲ್ಲಿ ಆಚರಿಸುತ್ತಾ ಬರುತ್ತಿದ್ದಾರೆ.
ಆದರೆ, ಈಗ ಅಭಿಮಾನ್ ಸ್ಟುಡಿಯೋದ ಮಾಲೀಕರು ಅಭಿಮಾನಿಗಳಿಗೆ ಒಳಪ್ರವೇಶಿಸಲು ನಿರ್ಬಂಧಗಳನ್ನು ವಿಧಿಸುವುದರ ಜೊತೆಗೆ, ಪ್ರತಿವರ್ಷದ ಹುಟ್ಟುಹಬ್ಬ ಮತ್ತು ಪುಣ್ಯಸ್ಮರಣೆಗೆ ಹಲವಾರು ತೊಂದರೆಗಳನ್ನು ನೀಡುತ್ತಿದ್ದಾರೆ. ಈ ಕುರಿತಾಗಿ ಮಾನ್ಯ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರನ್ನು ಭೇಟಿಮಾಡಿ ಅಹವಾಲನ್ನು ಸಲ್ಲಿಸಲಾಗಿದೆ. ಒಬ್ಬೇ ನಟನಿಗೆ ಎರಡೆರಡು ಕಡೆ ಸ್ಮಾರಕ, ಪುಣ್ಯಭೂಮಿ ಮಾಡುವುದು ಸರ್ಕಾರಕ್ಕೆ ಕಷ್ಟವಾದರೆ, ಆ ಜಮೀನಿಗೆ ತಗಲುವ ಮತ್ತು ಪುಣ್ಯಭೂಮಿ ಅಭಿವೃದ್ಧಿಗೆ ಬೇಕಾಗುವ ಹಣವನ್ನು ಅಭಿಮಾನಿಗಳೇ ನೀಡುವುದಾಗಿ ತಿಳಿಸಿರುತ್ತೇವೆ.
ಆದರೂ ಯಾವುದೇ ಸೂಕ್ತಪ್ರತಿಕ್ರಿಯೆಗಳು ಅವರಿಂದ ಬರದೇ ಇರುವುದರಿಂದ ಇದೇ ಡಿಸೆಂಬರ್ 17 ರಂದು ಡಾ.ವಿಷ್ಣುವರ್ಧನ್ ಅಭಿಮಾನಿ ಸಂಘಗಳ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನೆಯನ್ನು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೆಳಿಗ್ಗೆ ಹತ್ತರಿಂದ ಸಂಜೆ ಆರು ಗಂಟೆ ತನಕ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ನಾಡಿನ ಎಲ್ಲಾ ಕನ್ನಡಪರ ಸಂಘಟನೆಗಳು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಕಲಾವಿದರ ಸಂಘ ಆದಿಯಾಗಿ ಡಾ.ವಿಷ್ಣುವರ್ಧನ್ ಅವರ ಒಡನಾಡಿಗಳೆಲ್ಲರೂ ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ಅಂದು ಸುಮಾರು ಐವತ್ತು ಸಾವಿರ ಜನ ಸೇರುವ ನಿರೀಕ್ಷೆ ಇದೆ.
ಒಂದು ವೇಳೆ ಈ ಪ್ರತಿಭಟನೆಗೂ ಸರ್ಕಾರ ಸ್ಪಂದಿಸದೇ ಹೋದಲ್ಲಿ, ದೆಹಲಿಯಲ್ಲಿ ನಾವು ಹೋರಾಟವನ್ನು ಮುಂದುವರಿಸಲಿದ್ದೇವೆ ಜೊತೆಗೆ ಸರ್ಕಾರದ ಮಂತ್ರಿಗಳು ಭಾಗವಹಿಸುವ ಎಲ್ಲಾ ಕಾರ್ಯಕ್ರಮಗಳಲ್ಲಿ ಕಪ್ಪುಬಾವುಟ ಪ್ರದರ್ಶನಕ್ಕೆ ಮುಂದಾಗಲಿದ್ದೇವೆ ಎಂದು ವಿಷ್ಣು ಸೇನಾ ಸಮಿತಿ ಮಾಧ್ಯಮ ಪ್ರಕಟಣೆ ನೀಡಿದೆ. ಪ್ರತಿಭಟನೆ ಸಲುವಾಗಿ ಸಮಾಲೋಚನೆ ಸಭೆಯನ್ನು ಇದೇ ಭಾನುವಾರ ವೀರಕಪುತ್ರ ಶ್ರೀನಿವಾಸ ನೇತೃತ್ವದಲ್ಲಿ ಕರೆಯಲಾಗಿತ್ತು. ಈ ಸಭೆಗೆ ಐನೂರಕ್ಕೂ ಹೆಚ್ಚು ಸೇನಾನಿಗಳು ಹಾಜರಿದ್ದರು.
ಕನ್ನಡದ ಹೆಸರಾಂತ ನಟ ಡಾ.ವಿಷ್ಣುವರ್ಧನ್ (Vishnuvardhan) ಅವರ ಹೆಸರಿನಲ್ಲಿ ನಡೆಯುತ್ತಿರುವ ‘ಯಜಮಾನ ಪ್ರೀಮಿಯರ್ ಲೀಗ್ ಸೀಸನ್ 2’ ನಾಳೆಯಿಂದ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯುತ್ತಿದೆ. ಅಭಿಮಾನಿಗಳ ಜೊತೆ ಸಿನಿ ತಾರೆಯರು ಈ ಪಂದ್ಯದಲ್ಲಿ ಭಾಗವಹಿಸುತ್ತಿರುವುದು ವಿಶೇಷ. ಎರಡು ದಿನಗಳ ಕಾಲ ನಡೆಯುವ ಪಂದ್ಯಗಳಲ್ಲಿ ಅನೇಕ ಮಹತ್ವದ ಕಾರ್ಯಕ್ರಮಗಳನ್ನೂ ಆಯೋಜನೆ ಮಾಡಲಾಗಿದೆ.
ಸ್ಯಾಂಡಲ್ ವುಡ್ ನಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಶುರು ಮಾಡಿದ ಕೀರ್ತಿ ಡಾ.ವಿಷ್ಣುವರ್ಧನ್ ಅವರಿಗೆ ಸಲ್ಲುತ್ತದೆ. ಸಿನಿಮಾ ತಂಡಗಳನ್ನು ಕಟ್ಟಿಕೊಂಡು ವಿಷ್ಣು ಸದಾ ಕ್ರಿಕೆಟ್ ಆಡುತ್ತಿದ್ದರು. ವೃತ್ತಿಪರ ಕ್ರಿಕೆಟ್ ಆಟಗಾರರ ಜೊತೆಯೂ ಅವರು ಪಂದ್ಯಾವಳಿಗಳನ್ನು ಆಡಿದ್ದೂ ಇದೆ. ಆ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ನಿಟ್ಟಿನಲ್ಲಿ ಅವರ ಅಭಿಮಾನಿಗಳು ಕೂಡ ‘ಯಜಮಾನ ಪ್ರೀಮಿಯರ್ ಲೀಗ್’ (Yajamana Premier League) ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜನೆ ಮಾಡುತ್ತಾ ಬಂದಿದ್ದಾರೆ.
ಈ ಹಿಂದೆ ಜೂನ್ ನಲ್ಲಿಯೇ ಯಜಮಾನ ಪ್ರೀಮಿಯರ್ ಲೀಗ್ ಸೀಸನ್ 2 ಆಯೋಜನೆ ಆಗಿತ್ತು. ಮಳೆ ಮತ್ತು ಇತರ ಕಾರಣಗಳಿಂದಾಗಿ ಅದು ಮುಂದೂಡಲ್ಪಟ್ಟಿತ್ತು. ಇದೀಗ ಯಜಮಾನ ಪ್ರೀಮಿಯರ್ ಲೀಗ್ ಆಗಸ್ಟ್ 12 ಮತ್ತು 13ರಂದು ಬಿಐಸಿಸಿ ಇನ್ಫಿನಿಟಿ ಔಟ್ ಡೋರ್ ಗ್ರೌಂಡ್ ಮಾಗಡಿ ರಸ್ತೆ, ಬೆಂಗಳೂರಿನಲ್ಲಿ ನಡೆಯಲಿದೆ. ಇದನ್ನೂ ಓದಿ:ಬೆಂಗಳೂರಿನ ಮಿಂಚುಳ್ಳಿ, ಬಿಕಿನಿಯಲ್ಲಿ ಬಳುಕುವ ಬಳ್ಳಿ ವೈಭವಿ ಜಗದೀಶ್
ಡಾ.ವಿಷ್ಣು ಸೇನಾ ಸಮಿತಿಯು ಹಮ್ಮಿಕೊಂಡಿರುವ ಎರಡನೇ ಸೀಸನ್ ಇದಾಗಿದ್ದು, ವೀರಕಪುತ್ರ ಶ್ರೀನಿವಾಸ್ (Veerkaputra Srinivas) ನೇತೃತ್ವದಲ್ಲಿ ವಿಷ್ಣು ಸೇನಾನಿಗಳು ಪಂದ್ಯಗಳನ್ನು ಆಡಲಿದ್ದಾರೆ. ವಿಷ್ಣುವರ್ಧನ್ ಹೆಸರಿನಲ್ಲಿ ವೀರಕಪುತ್ರ ಶ್ರೀನಿವಾಸ್ ಅವರು ಹತ್ತಾರು ಕೆಲಸಗಳನ್ನು ಮಾಡುತ್ತಾ ಬಂದಿದ್ದು, ಅದಕ್ಕೆ ಸೇರ್ಪಡೆ ಈ ಯಜಮಾನ ಕಪ್ ಆಗಿದೆ. ಜನಪರ ಕೆಲಸಗಳ ಜೊತೆಗೆ ಕ್ರೀಡಾ ಲೋಕಕ್ಕೂ ಉತ್ತೇಜನ ಕೊಡುವ ನಿಟ್ಟಿನಲ್ಲಿ ಈ ಪಂದ್ಯಾವಳಿ ಆಯೋಜನೆಗೊಂಡಿದೆ.
ತಾರೆಗಳು ಸಾಥ್
ಎರಡು ದಿನಗಳ ಕಾಲ ನಡೆಯುವ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕನ್ನಡದ ಹೆಸರಾಂತ ನಟರಾದ ನೀನಾಸಂ ಸತೀಶ್, ವಸಿಷ್ಠ ಸಿಂಹ, ಡಾರ್ಲಿಂಗ್ ಕೃಷ್ಣ, ರವಿಶಂಕರ್ ಗೌಡ, ಧನ್ವೀರ್, ಬಾಲಾಜಿ, ನಟಿ ಮಿಲನಾ ನಾಗರಾಜ್ ಸೇರಿದಂತೆ ಹಲವಾರು ಕಲಾವಿದರು, ನಿರ್ಮಾಪಕರಾದ ಕೆ.ಮಂಜು, ನಿರ್ದೇಶಕರಾದ ರಾಜೇಂದ್ರ ಸಿಂಗ್ ಬಾಬು, ನಾಗೇಂದ್ರ ಪ್ರಸಾದ್, ಶಶಾಂಕ್, ನವೀನ್ ಕೃಷ್ಣ ಮತ್ತು ಇತರ ನಿರ್ದೇಶಕರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ ಹರೀಶ್ ಮತ್ತು ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.