Tag: ವಿಷ್ಣುವರ್ಧನ್

  • ವಿಷ್ಣು ಸ್ಮಾರಕ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್: ಜನವರಿ 29ರಂದು ಸಿಎಂ ಉದ್ಘಾಟನೆ

    ವಿಷ್ಣು ಸ್ಮಾರಕ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್: ಜನವರಿ 29ರಂದು ಸಿಎಂ ಉದ್ಘಾಟನೆ

    ಸಾಹಸ ಸಿಂಹ ಡಾ.ವಿಷ್ಣುವರ್ಧನ್ (Vishnuvardhan) ಅವರ ಸ್ಮಾರಕ (Memorial) ಲೋಕಾರ್ಪಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಇದೇ ತಿಂಗಳ 29 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ (Basavaraja Bommai) ಭವ್ಯವಾದ ವಿಷ್ಣು ಸ್ಮಾರಕವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಮೈಸೂರಿನ (Mysore) ಎಚ್ಡಿ‌ ಕೋಟೆಯ ಅಲ್ಲಾಳು ಗ್ರಾಮದಲ್ಲಿ‌ ಐದು ಎಕರೆ ಜಾಗದಲ್ಲಿ ಸ್ಮಾರಕವನ್ನು ನಿರ್ಮಾಣ ಮಾಡಲಾಗಿದೆ. ವಿಷ್ಣುವರ್ಧನ್ ಅವರಿಗೆ ಸಂಬಂಧಿಸಿದ ಗ್ಯಾಲರಿ, ಆಡಿಟೋರಿಯಂ, ವಿಷ್ಣು ಪುತ್ಥಳಿ, ಕ್ಲಾಸ್ ರೂಮ್, ಕ್ಯಾಂಟೀನ್ ಏರಿಯಾ, ಹೀಗೆ ಈ ಸ್ಮಾರಕದಲ್ಲಿ ಹತ್ತು ಹಲವು ವಿಶೇಷತೆಗಳಿವೆ.

    ವಿಷ್ಣು ದಾದಾ ಅಗಲಿದ 13 ವರ್ಷಗಳ ಬಳಿಕ ಸ್ಮಾರಕ ನಿರ್ಮಾಣವಾಗಿದೆ. 2020 ರ ಸೆ‌.15 ರಂದು ಸ್ಮಾರಕಕ್ಕೆ ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸ್ಮಾರಕಕ್ಕೆ ಭೂಮಿ‌ ಪೂಜೆ ನೆರವೇರಿಸಿದ್ದರು. ಸ್ಮಾರಕ ನಿರ್ಮಾಣಕ್ಕೆ ಸರ್ಕಾರದಿಂದ ಆಗಲೇ 11 ಕೋಟಿ ರೂಪಾಯಿ ಮಂಜೂರು ಮಾಡಲಾಗಿತ್ತು. ಸುಮಾರು 13 ವರ್ಷಗಳ ಬಳಿಕ ಸ್ಮಾರಕ ಉದ್ಘಾಟನೆ ಆಗುತ್ತಿರುವುದು ಅಭಿಮಾನಿಗಳಲ್ಲಿ ಹರ್ಷ ತಂದಿದೆ. 2009ರ ಡಿ.30ರಂದು ಮೈಸೂರಿನಲ್ಲಿ ದಿಢೀರ್ ಆಗಿ ಮೃತಪಟ್ಟಿದ್ದರು. ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ಅವರ ಅಂತ್ಯಸಂಸ್ಕಾರ ನಡೆದರೂ ನಾನಾ ಕಾರಣಗಳಿಂದಾಗಿ ಅಲ್ಲಿ ಸ್ಮಾರಕ ನಿರ್ಮಿಸುವ ಕೆಲಸ ಕೈಗೂಡಲಿಲ್ಲ. ಇದನ್ನೂ ಓದಿ: ನಾನು ಆಡಿದ ಮಾತು ತಪ್ಪಾಗಿ ಅರ್ಥೈಸಿಕೊಳ್ಳಲಾಗುತ್ತಿದೆ: ವಿವಾದಗಳ ಬಗ್ಗೆ ರಶ್ಮಿಕಾ ಪ್ರತಿಕ್ರಿಯೆ

    ದಿಲ್ಲಿಯ ರಾಜಪಥದಲ್ಲಿ ಇತ್ತೀಚೆಗೆ ಅನಾವರಣಗೊಂಡ ನೇತಾಜಿ ಪ್ರತಿಮೆಯ ರೂವಾರಿ, ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೆತ್ತನೆಯಲ್ಲಿ ಆರು ಅಡಿ ಎತ್ತರದ ವಿಷ್ಣು ದಾದಾ ಪ್ರತಿಮೆ ಪ್ರತಿಷ್ಠಾಪನೆಗೆ ಸಿದ್ಧವಾಗಿದೆ. ಬೆಂಗಳೂರಿನ ಎಂ.9 ಕಂಪೆನಿಯ ನಿಶ್ಚಲ್ ಸ್ಮಾರಕದ ರೂಪುರೇಷೆ ಸಿದ್ಧಪಡಿಸಿದ್ದಾರೆ. ಕೃಷ್ಣ ಶಿಲೆಯಲ್ಲಿ ಕೆತ್ತಲಾದ ವಿಷ್ಣುವಿನ ಪ್ರತಿಮೆ ಸುತ್ತಲೂ ವೃತ್ತಾಕಾರದ ಫೋಟೋ ಗ್ಯಾಲರಿ, ಗ್ಯಾಲರಿಯ ಇಬ್ಬದಿಯಲ್ಲಿಯೂ ವಿಷ್ಣುವರ್ಧನ್ ಅಭಿನಯದ ಸಿನಿಮಾಗಳ ಡಿಜಿಟಲ್ ಪೋಸ್ಟರ್ ಪ್ರದರ್ಶನ ಇರಲಿದೆ.

    ಸ್ಮಾರಕ ಸ್ಥಳದಲ್ಲಿ ಮಲ್ಟಿಪ್ಲೆಕ್ಸ್ ಚಿತ್ರಮಂದಿರ ಮಾದರಿಯಲ್ಲಿ ಹವಾನಿಯಂತ್ರಿತ ಥಿಯೇಟರ್, ಪುರುಷ- ಮತ್ತು ಮಹಿಳಾ ಕಲಾವಿದರ ಡ್ರೆಸ್ಸಿಂಗ್ ಕೊಠಡಿ, ಸುಸಜ್ಜಿತ ಶೌಚಾಲಯ, ವಿಶಾಲವಾದ ವಾಹನ ಪಾರ್ಕಿಂಗ್ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗಿದೆ. ಸ್ಮಾರಕದ ಮುಂಭಾಗ ಸುಂದರವಾದ ಕಾರಂಜಿ ನಿರ್ಮಾಣವಾಗಿದೆ. ಸ್ಮಾರಕದ ಹೊರ ಆವರಣದಲ್ಲಿ ಸಸ್ಯೋದ್ಯಾನ ನಿರ್ಮಿಸಿ ವಿವಿಧ ಪ್ರಭೇದದ ಹೂವಿನ ಗಿಡಗಳನ್ನು ವೃತ್ತಾಕಾರದಲ್ಲಿ ನೆಟ್ಟು ಬೆಳೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮೈಸೂರಿನ ಮತ್ತೊಂದು ಪ್ರವಾಸಿತಾಣವಾಗಿ ಗುರುತಿಸಿಕೊಳ್ಳುವ ನಿರೀಕ್ಷೆ ಇದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಹೃದಯವಂತ ವಿಷ್ಣು’ ಹಾಡಿನ ಮೂಲಕ ವಿಷ್ಣುವರ್ಧನ್ ಅವರಿಗೆ ಗಾನನಮನ

    ‘ಹೃದಯವಂತ ವಿಷ್ಣು’ ಹಾಡಿನ ಮೂಲಕ ವಿಷ್ಣುವರ್ಧನ್ ಅವರಿಗೆ ಗಾನನಮನ

    ಡಿಯೋ ಕ್ಷೇತ್ರದಲ್ಲಿ ತನ್ನದೇ ಹೆಸರು ಮಾಡಿರುವ ಝೇಂಕಾರ ಮ್ಯೂಸಿಕ್ ಸಂಸ್ಥೆಯ ಮೇಲೆ  ಸಾಹಸಸಿಂಹ ವಿಷ್ಣುವರ್ಧನ್ ಅವರಿಗೆ ಅಪಾರ ಪ್ರೀತಿ. ಝೇಂಕಾರ ಮ್ಯೂಸಿಕ್ ಸಂಸ್ಥೆಗೂ ಅವರ ಬಗ್ಗೆ ಅಪಾರ ಗೌರವ. ವಿಷ್ಣುವರ್ಧನ್ ಅಭಿನಯಿಸಿರುವ ಅನೇಕ ಚಿತ್ರದ ಹಾಡುಗಳು ಝೇಂಕಾರ ಮ್ಯೂಸಿಕ್ ಬಳಿಯೇ ಇದೆ.  ಡಿಸೆಂಬರ್ 30ಕ್ಕೆ ವಿಷ್ಣುವರ್ಧನ್ ಅವರು ನಮ್ಮನಗಲಿ ಹದಿಮೂರು ವರ್ಷಗಳಾಗಿದೆ.

    ಈ ಸಂದರ್ಭದಲ್ಲಿ ಝೇಂಕಾರ ಸಂಸ್ಥೆ  ‘ಹೃದಯವಂತ ವಿಷ್ಣು’ ಎಂಬ ಹಾಡನ್ನು ಬಿಡುಗಡೆ ಮಾಡವ ಮೂಲಕ ವಿಷ್ಣುವರ್ಧನ್ ಅವರಿಗೆ ಗಾನನಮನ ಸಲ್ಲಿಸಿದೆ. ಸಿನಿಮಾ ರಂಗಕ್ಕೆ ವಿಷ್ಣುವರ್ಧನ್ ಬಂದು ಐವತ್ತು ವರ್ಷಗಳು ತುಂಬಿರುವ ಈ ಸಂದರ್ಭದಲ್ಲಿ ಇಂಥದ್ದೊಂದು ಹಾಡು ಬಂದಿರುವುದು ಮತ್ತೊಂದು ವಿಶೇಷ.  ಇದನ್ನೂ ಓದಿ: ಅದೃಷ್ಟದಿಂದಲೇ ಇಷ್ಟು ದಿನ ಬಿಗ್ ಬಾಸ್‌ನಲ್ಲಿದ್ದರು: ದಿವ್ಯಾಗೆ ಸಂಬರ್ಗಿ ಟಾಂಗ್

    ಖ್ಯಾತ ನಿರ್ದೇಶಕ, ನಟ, ಸಾಹಿತಿ, ಸಂಗೀತ ನಿರ್ದೇಶಕ ಎಸ್ ನಾರಾಯಣ್ ಈ “ಹೃದಯವಂತ ವಿಷ್ಣು” ಹಾಡನ್ನು ಬರೆದು, ಸಂಗೀತ ನೀಡಿದ್ದಾರೆ. ಈ ಹಿಂದೆ ಕೂಡ ಎಸ್ ನಾರಾಯಣ್ ಅವರು ರಚಿಸಿ, ಸಂಗೀತ ನೀಡಿರುವ ಅನೇಕ ಹಾಡುಗಳು ಝೇಂಕಾರ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿ ಜನಪ್ರಿಯವಾಗಿದೆ.  ಹಲವು ವರ್ಷಗಳ ನಂತರ ಮತ್ತೆ ಎಸ್ ನಾರಾಯಣ್ – ಝೇಂಕಾರ ಮ್ಯೂಸಿಕ್ ಕಾಂಬಿನೇಶನ್ ನಲ್ಲಿ ಉತ್ತಮ ಗೀತೆಯೊಂದು ಬಿಡುಗಡೆಯಾಗಿದೆ. ಖ್ಯಾತ ಗಾಯಕ ಅರ್ಫಜ್ ಉಲ್ಲಾಳ್ ಈ ಗೀತೆಯನ್ನು ಸುಮಧುರವಾಗಿ ಹಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಟ ವಿಷ್ಣುವರ್ಧನ್ ಅಭಿಮಾನಿಗಳ ಆದರ್ಶ ಯಾತ್ರೆ: ಆಸ್ಟ್ರೇಲಿಯಾ ವಾಸಿ ಬಲರಾಮ್ ನೇತೃತ್ವ

    ನಟ ವಿಷ್ಣುವರ್ಧನ್ ಅಭಿಮಾನಿಗಳ ಆದರ್ಶ ಯಾತ್ರೆ: ಆಸ್ಟ್ರೇಲಿಯಾ ವಾಸಿ ಬಲರಾಮ್ ನೇತೃತ್ವ

    ಆಸ್ಟ್ರೇಲಿಯಾದಲ್ಲಿ ವಾಸವಿರುವ ಅನಿವಾಸಿ ಭಾರತೀಯ ಬಲರಾಮ್ ತಮ್ಮ ನೆಚ್ಚಿನ ನಟ ವಿಷ್ಣುವರ್ಧನ್ ಅವರಿಗಾಗಿ ಮೈಸೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡುತ್ತಿದ್ದಾರೆ. ಈ ಪಾದಯಾತ್ರೆಗೆ ‘ಆದರ್ಶ ಯಾತ್ರೆ’ ಎಂದು ಹೆಸರಿಟ್ಟಿದ್ದು, ವಿಷ್ಣುವರ್ಧನ್ ಅವರ ಸಾಕಷ್ಟು ಅಭಿಮಾನಿಗಳು ಅವರೊಂದಿಗೆ ಹೆಜ್ಜೆ ಹಾಕಲಿದ್ದಾರೆ. ಬಲರಾಮ್ ಮೈಸೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಿದರೆ, ವಿಷ್ಣು ಅಭಿಮಾನಿಗಳು ರಾಜ್ಯದ ನಾನಾ ಭಾಗಗಳಿಂದ ಬೆಂಗಳೂರಿಗೆ ಬರಲಿದ್ದಾರೆ.

    ಈ ಕುರಿತು ಮಾಹಿತಿಯನ್ನು ಹಂಚಿಕೊಂಡಿರುವ ಡಾ.ವಿಷ್ಣುಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್, ‘ಡಾ.ವಿಷ್ಣುವರ್ಧನ್ ಹೆಸರಿನಲ್ಲಿ ಆದರ್ಶ ಯಾತ್ರೆ ಪ್ರಾರಂಭಿಸಿದ್ದು, ನಾಳೆ (ಡಿ.25) ಬೆಳಗ್ಗೆ ಏಳು ಗಂಟೆಗೆ ಮೈಸೂರಿನ ಕೋರ್ಟ್ ಆವರಣದಿಂದ ಯಾತ್ರೆ ಪ್ರಾರಂಭವಾಗುತ್ತದೆ. ಬಲರಾಮ್ ಅವರು ಇದರ ನೇತೃತ್ವವಹಿಸಿದ್ದಾರೆ. ಜೊತೆಗೆ ವಿಷ್ಣು ಸೇನಾನಿಗಳು ಕೂಡ ಜೊತೆಯಾಗುತ್ತಿದ್ದಾರೆ. ಇದು ಐದು ದಿನಗಳ ಕಾಲ ನಡೆಯುವ ಯಾತ್ರೆಯಾಗಿದ್ದು ಡಿ.29ಕ್ಕೆ ಬೆಂಗಳೂರಿನ ಅಭಿಮಾನ ಸ್ಟುಡಿಯೋದಲ್ಲಿರುವ ವಿಷ್ಣು ಅವರ ಪುಣ್ಯಭೂಮಿಯಲ್ಲಿ ಮುಕ್ತಾಯಗೊಳ್ಳಲಿದೆ. ಪ್ರತಿ ವರ್ಷವೂ ಇದನ್ನು ನಡೆಸುವ ಉದ್ದೇಶ ಹೊಂದಲಾಗಿದೆ’ ಎಂದರು. ಇದನ್ನೂ ಓದಿ: ‘ಪುಷ್ಪಾ 2’ ಟೀಮ್ ಸೇರಿಕೊಂಡ ನಟಿ ಸಾಯಿ ಪಲ್ಲವಿ: ರಶ್ಮಿಕಾ ಮಂದಣ್ಣ ಪಾತ್ರವೇನು?

    ಇಂಥದ್ದೊಂದು ಆದರ್ಶ ಯಾತ್ರೆ ಶುರು ಮಾಡುವುದಕ್ಕೆ ಕಾರಣವೂ ಇದೆ. ವಿಷ್ಣುವರ್ಧನ್ ಅವರು ಸಿನಿಮಾ ರಂಗಕ್ಕೆ ಬಂದು ಡಿ.30ಕ್ಕೆ ಐವತ್ತು ವರ್ಷಗಳು ತುಂಬುತ್ತಿವೆ. ಅಲ್ಲದೇ, ಅವತ್ತು ಅವರ ಪುಣ್ಯಸ್ಮರಣೆ ಕೂಡ. ನೆಚ್ಚಿನ ನಟನನ್ನು ಸ್ಮರಿಸುವ ಮೂಲಕ ಆರೋಗ್ಯವಂತ ಸಮಾಜವನ್ನು ನಿರ್ಮಿಸುವ ಉದ್ದೇಶ ಈ ಯಾತ್ರೆಯ ಹಿಂದಿದೆ ಎನ್ನುವುದು ವಿಷ್ಣು ಸೇನಾನಿಗಳ ಮಾತು. ಅಲ್ಲದೇ, ಪ್ರತಿ ವರ್ಷವೂ ವಿಷ್ಣುವರ್ಧನ್ ಅವರ ಹೆಸರಿನಲ್ಲಿ ಆರೋಗ್ಯಕ್ಕಾಗಿ ನಡೆಯಿರಿ ಎನ್ನುವ ಸಂಕಲ್ಪವನ್ನು ಇದು ಹೊಂದಿದೆಯಂತೆ.

    ಆದರ್ಶ ಯಾತ್ರೆಯನ್ನು ಯಶಸ್ವಿಗೊಳಿಸಲು ರಾಜ್ಯದ ನಾನಾ ಮೂಲೆಗಳಿಂದ ವಿಷ್ಣುವರ್ಧನ್ ಅಭಿಮಾನಿಗಳು ತಾವಿದ್ದ ಸ್ಥಳದಿಂದಲೇ ಯಾತ್ರೆಯನ್ನು ಆರಂಭಿಸುತ್ತಿದ್ದು, ಎಲ್ಲರೂ ಡಿಸೆಂಬರ್ 29 ರಂದೇ ಯಾತ್ರೆಯನ್ನು ಮುಗಿಸಲಿದ್ದಾರೆ. ಡಿ.30ಕ್ಕೆ ಪುಣ್ಯಭೂಮಿಯಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಆ ಕಾರ್ಯಕ್ರಮದಲ್ಲೂ ಅವರು ಭಾಗಿಯಾಗಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಷ್ಣುವರ್ಧನ್ ನೂತನ ಮನೆಗೆ ಯಶ್ ದಂಪತಿ, ಸುದೀಪ್ ಭೇಟಿ

    ವಿಷ್ಣುವರ್ಧನ್ ನೂತನ ಮನೆಗೆ ಯಶ್ ದಂಪತಿ, ಸುದೀಪ್ ಭೇಟಿ

    ವಿಷ್ಣುವರ್ಧನ್ (Vishnuvardhan) ಕನಸಿನ ಮನೆಗೆ ಭಾರತಿ ವಿಷ್ಣುವರ್ಧನ್ ಕುಟುಂಬ ಕಾಲಿಟ್ಟಿದ್ದಾರೆ. ನೂತನ ಮನೆಗೆ ಶುಭಹಾರೈಸಲು ಇದೀಗ ಯಶ್ ದಂಪತಿ ಮತ್ತು ಅಭಿನಯ ಚಕ್ರವರ್ತಿ ಸುದೀಪ್ ಕೂಡ ಭೇಟಿ ಕೊಟ್ಟಿದ್ದಾರೆ.

     

    View this post on Instagram

     

    A post shared by Aniruddha Jatkar (@aniruddhajatkar)

    ಸಾಹಸಸಿಂಹ ವಿಷ್ಣುವರ್ಧನ್ ಅವರ ಹೊಸ ಮನೆ ಗೃಹಪ್ರವೇಶ(House Warming) ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಜಯನಗರದಲ್ಲಿನ ಹಳೆಯ ಮನೆಗೆ ಹೊಸ ರೂಪ ಕೊಟ್ಟು, ವಿಷ್ಣು ಕುಟುಂಬ ಎಂಟ್ರಿ ಕೊಟ್ಟಿತ್ತು. `ವಲ್ಮೀಕ’ (Valmika) ಎಂದು ಮನೆಗೆ ಹೆಸರಿಡಲಾಗಿತ್ತು. ಈಗ ಹಿರಿಯ ನಟಿ ಭಾರತಿ ಕುಟುಂಬಕ್ಕೆ ಯಶ್, ರಾಧಿಕಾ ಪಂಡಿತ್ ದಂಪತಿ, ಸುದೀಪ್ ಭೇಟಿ ನೀಡಿದ್ದಾರೆ. ಇದನ್ನೂ ಓದಿ: ನಟಿ ಅಶು ರೆಡ್ಡಿ ಕಾಲು ಹಿಡಿದ ರಾಮ್ ಗೋಪಾಲ್ ವರ್ಮಾ: ನೆಟ್ಟಿಗರು ಶಾಕ್

     

    View this post on Instagram

     

    A post shared by Aniruddha Jatkar (@aniruddhajatkar)

    ಭಾರತಿ ಕುಟುಂಬದ ಜೊತೆ ಯಶ್, ರಾಧಿಕಾ ಪೋಸ್ ಕೊಟ್ಟಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ. ಹಾಗೆಯೇ ನಟ ಸುದೀಪ್ ಕೂಡ ಭೇಟಿ ನೀಡಿ, ಶುಭಹಾರೈಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಡಿಸೆಂಬರ್ ಒಳಗೆ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ – ಸಿಎಂ

    ಡಿಸೆಂಬರ್ ಒಳಗೆ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ – ಸಿಎಂ

    ಬೆಂಗಳೂರು: ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಸ್ಮಾರಕವನ್ನು (Vishnu Memorial) ಡಿಸೆಂಬರ್ ಒಳಗೆ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

    ಈ ಹಿಂದೆ ವಿಷ್ಣುವರ್ಧನ್ (Vishnuvardhan) ಅವರಿದ್ದ ಜಯನಗರದ ಮನೆಯ ಸ್ಥಳದಲ್ಲಿಯೇ ನೂತನವಾಗಿ ನಿರ್ಮಾಣವಾಗಿರುವ ಮನೆಯ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇದನ್ನೂ ಓದಿ: ಸಾಹಸ ಸಿಂಹ ವಿಷ್ಣುವರ್ಧನ್ ಮನೆ ಗೃಹಪ್ರವೇಶ: ನಾನಾ ಗಣ್ಯರು ಭಾಗಿ

    ಭಾರತಿಯವರು ಖುದ್ದಾಗಿ ಬಂದು ಗೃಹಪ್ರವೇಶಕ್ಕೆ ಆಹ್ವಾನ ನೀಡಿದ್ದರು. ವಿಷ್ಣುವರ್ಧನ್ ಅವರಿದ್ದ ಮನೆಯನ್ನು ಇನ್ನಷ್ಟು ಚಂದ ಮಾಡಿದ್ದಾರೆ. ನವೀಕರಣಗೊಂಡಿರುವ ವಿಷ್ಣುವರ್ಧನ್ ಅವರ ಮನೆಯ ಹಿಂದೆ ಭಾರತಿ ವಿಷ್ಣುವರ್ಧನ್ ಅವರ ಪ್ರಯತ್ನ ಹಾಗೂ ಶ್ರಮ ಎದ್ದು ಕಾಣುತ್ತಿದೆ. ವಿಷ್ಣುವರ್ಧನ್ ಅವರ ತ್ಯಾಗವನ್ನು ಅಳವಡಿಸಿದ್ದಾರೆ ಎನ್ನುವುದು ನನ್ನ ಭಾವನೆ. ಅವರಿಗೆ ಶುಭ ಕೋರಲು ಬಂದಿದ್ದೇನೆ ಎಂದರು.

    ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಪೂರ್ಣಗೊಳ್ಳುತ್ತಾ ಬಂದಿದೆ. ಡಿಸೆಂಬರ್ ಒಳಗೆ ಸ್ಮಾರಕದ ಉದ್ಘಾಟನೆಯನ್ನು ಅದ್ದೂರಿಯಾಗಿ ಮಾಡಲು ತೀರ್ಮಾನಿಸಲಾಗಿದೆ. ಹೆಚ್ಚಿನ ವಿವರಗಳನ್ನು ಅವರ ಕುಟುಂಬದವರೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು. ವಿಷ್ಣುವರ್ಧನ್ ಅವರ ಮೇರು ವ್ಯಕ್ತಿತ್ವ ಹಾಗೂ ಘನತೆಗೆ ತಕ್ಕ ಹಾಗೆ ಕಾರ್ಯಕ್ರಮವನ್ನು ವೈಭವಯುತವಾಗಿ ಆಯೋಜಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ನಟ ಡಾ. ವಿಷ್ಣುವರ್ಧನ್ ಮನೆ ಹೇಗಿದೆ? ‘ವಲ್ಮೀಕ’ ವಿಶೇಷ

    ಚುಕ್ಕಿ ರೋಗ ತಡೆಗೆ ಕ್ರಮ
    ಚಿಕ್ಕಮಗಳೂರಿನಲ್ಲಿ ಅಡಿಕೆಗೆ ಎಲೆ ಚುಕ್ಕಿ ರೋಗ ಬಂದಿದ್ದು, ವಿಜ್ಞಾನಿಗಳ ಸಂಶೋಧನೆ ಒಂದು ಹಂತಕ್ಕೆ ಬಂದಿದೆ. ಅದಕ್ಕೆ ಪರಿಹಾರ ನೀಡುವ ಹಾಗೂ ರೋಗ ಹರಡದಂತೆ ಅನುದಾನ ಬಿಡುಗಡೆಯಾಗಿದೆ. ಮಲೆನಾಡ ಭಾಗದಲ್ಲಿ ಆನೆ ಹಾವಳಿ ಹೆಚ್ವಿದ್ದು, ನಾಲ್ಕು ಜಿಲ್ಲೆಗಳಲ್ಲಿ ಅರಣ್ಯ ಪಡೆಗಳನ್ನು ರಚಿಸಿ, ವಾಹನ ಸಲಕರಣೆಗೆ ಅನುದಾನ ಬಿಡುಗಡೆಯಾಗುತ್ತಿದೆ ಎಂದು ತಿಳಿಸಿದರು.

    ಶೃಂಗೇರಿಯಲ್ಲಿ ಆಸ್ಪತ್ರೆ
    ಶೃಂಗೇರಿಯಲ್ಲಿ ಆಸ್ಪತ್ರೆ ನಿರ್ಮಿಸಲು ತೀರ್ಮಾನಿಸಲಾಗಿದೆ. ಸ್ಥಳದ ಸಮಸ್ಯೆಯಿದ್ದು, ಅದನ್ನು ಬಗೆಹರಿಸಿ ಆಸ್ಪತ್ರೆ ನಿರ್ಮಿಸಲಾಗುವುದು ಎಂದರು.

    Live Tv
    [brid partner=56869869 player=32851 video=960834 autoplay=true]

  • ನಟ ಡಾ. ವಿಷ್ಣುವರ್ಧನ್ ಮನೆ ಹೇಗಿದೆ? ‘ವಲ್ಮೀಕ’ ವಿಶೇಷ

    ನಟ ಡಾ. ವಿಷ್ಣುವರ್ಧನ್ ಮನೆ ಹೇಗಿದೆ? ‘ವಲ್ಮೀಕ’ ವಿಶೇಷ

    ಡಾ.ವಿಷ್ಣುವರ್ಧನ್ ಅವರ ಕನಸಿನ ಮನೆಗೆ ಇಂದು‌ ಗೃಹಪ್ರವೇಶ.  ಜಯನಗರದಲ್ಲಿ ನಿರ್ಮಾಣವಾಗಿರುವ ಆ‌ ಭವ್ಯ ಮನೆಯಲ್ಲಿ ಹಳೆಯ ನೆನಪುಗಳನ್ನೇ ಉಳಿಸಿಕೊಂಡು ಹೊಸ ಮನೆಯನ್ನು ನಿರ್ಮಾಣ ಮಾಡಿದ್ದಾರೆ ವಿಷ್ಣುವರ್ಧನ್ ಪತ್ನಿ ಭಾರತಿ ವಿಷ್ಣುವರ್ಧನ್. ಸಿಂಹ ನೆಲೆಸಿದ್ದ ಆ ಮನೆಯನ್ನು ಅವರ ಕುಟುಂಬ ಇದೀಗ ಹೊಸ ರೀತಿಯಲ್ಲಿ ಕಟ್ಟಿಸಲಾಗಿದೆ.

    ನವ ಗೃಹಕ್ಕೆ ಪ್ರವೇಶಿಸುವುದು ಹಲವರ ಕನಸು. ಇಂದು ಚಂದನವನದ ಮೇರುನಟ ದಿ. ವಿಷ್ಣುವರ್ಧನ್ ಅವರ ಕುಟುಂಬ ಇಂತಹದ್ದೇ ಸಂತಸದಲ್ಲಿದೆ. ಈ ಶುಭ ದಿನದಂದು ವಿಷ್ಣು ಅವರ ನೂತನ ನಿವಾಸದ ಗೃಹಪ್ರವೇಶಕ್ಕೆ ಸಜ್ಜಾಗಿದ್ದು, ವಿಷ್ಣು ಅವರು ಆಸೆ ಪಟ್ಟಂತೆಯೇ ಪತ್ನಿ ಭಾರತಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ಮನೆ ಗೃಹಪ್ರವೇಶ ನಡೆದಿದೆ‌. ಇದನ್ನೂ ಓದಿ: `ಗಾಲ್ವಾನ್ ಹಾಯ್’ ಎಂದ ನಟಿಗೆ ಚಳಿ ಬಿಡಿಸಿದ ಸಚಿವ – ಕಾನೂನು ಕ್ರಮಕ್ಕೆ ಚಿಂತನೆ

    ಸಾಹಸಸಿಂಹ ವಿಷ್ಣುವರ್ಧನ್ ಅವರ ಕನಸಿನ ಮನೆ ಇರುವುದು ಜಯನಗರದ ಟಿ ಬ್ಲಾಕ್ ನಲ್ಲಿ 90/90 ಚದರಡಿಯಲ್ಲಿ ಭವ್ಯವಾಗಿ ಈ ಮನೆ ನಿರ್ಮಾಣ ಮಾಡಲಾಗಿದೆ. ‘ವಲ್ಮೀಕ’ ಹೆಸರಿನಲ್ಲಿ, ಗೇಟ ಮೇಲೆ ಸಿಂಹದ ಮುಖದೊಂದಿಗೆ ವಿನ್ಯಾಸಗೊಳಿಸಲಾಗಿದೆ. ಇಂತಹ ಮನೆಗೆ ಇಂದು ವಿಷ್ಣು ಕುಟುಂಬ ಗೃಹ ಪ್ರವೇಶ ಮಾಡಿದ್ದು, ಸಿಎಂ‌ ಬಸವರಾಜ ಬೊಮ್ಮಾಯಿ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಆಗಮಿಸಿ ಶುಭ ಹಾರೈಸಿದ್ದಾರೆ.

    ವಲ್ಮೀಕ ಎಂದರೆ ಹಾವಿನ ಹುತ್ತ ಎಂದರ್ಥ. ನಾಗರಹಾವು ಚಿತ್ರದ ಯಶಸ್ಸಿನ‌ ನಂತರ ಇಲ್ಲೆ ಇದ್ದ ವಿಷ್ಣುವರ್ಧನ್ ಹಳೆಮನೆಗೆ ವಲ್ಮೀಕ ಎಂದು ಹೆಸರಿಟ್ಟಿದ್ದರು. 1976 ರಲ್ಲಿ ವಿಷ್ಣುವರ್ಧನ್ ಈ ಜಾಗ ಖರೀದಿ ಮಾಡಿದ್ದರಂತೆ. ಆದರೆ, ಇದು ನಮ್ಮ ಜಾಗ ಅಂತ ಅದರ ಮಾಲಿಕರು ಆಗ ಬಂದಿದ್ದರು. ವಿಷ್ಣುವರ್ಧನ್ ಇದನ್ನು ಇಷ್ಟ ಪಟ್ಟಿದ್ದಾರೆ ಅಂತ ಆ ಜಾಗದಲ್ಲಿ ಅರ್ಧ ಜಾಗ ಹಾಗೆಯೇ ಕೊಟ್ಟಿದ್ದರಂತೆ ಮಾಲೀಕರು. 6 ಬೆಡ್ ರೂಂನ ಈ ಮನೆ ಮುಂಭಾಗ‌ ಒಂದು ಕೃಷ್ಣನ ವಿಗ್ರಹವಿದೆ. ಅದನ್ನ ವಿಷ್ಣು ಅವ್ರೆ ಇಲ್ಲಿ‌ ಸ್ಥಾಪಿಸಿದ್ದರಂತೆ. ಅದನ್ನ ಹಾಗೆಯೆ ಇಟ್ಟು‌‌ ಕಲ್ಲಿನ ಮಂಟಪ ಮಾಡಿ ಮತ್ತೆ ಪ್ರತಿಷ್ಠಾಪನೆ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಸಾಹಸ ಸಿಂಹ ವಿಷ್ಣುವರ್ಧನ್ ಮನೆ ಗೃಹಪ್ರವೇಶ: ನಾನಾ ಗಣ್ಯರು ಭಾಗಿ

    ಸಾಹಸ ಸಿಂಹ ವಿಷ್ಣುವರ್ಧನ್ ಮನೆ ಗೃಹಪ್ರವೇಶ: ನಾನಾ ಗಣ್ಯರು ಭಾಗಿ

    ನ್ನಡದ ಹೆಸರಾಂತ ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಹೊಸ ಮನೆ ಗೃಹ ಪ್ರವೇಶ ಇಂದು ನಡೆಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದೆ ಸುಮಲತಾ ಅಂಬರೀಶ್, ನಟ ಜಗ್ಗೇಶ್ ಸೇರಿದಂತೆ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

    ಗೃಹ ಪ್ರವೇಶದ ಪೂಜೆಗೆ ಆಗಮಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ ಮಾಧ್ಯಮಗಳೊಂದಿಗೆ ಮಾತನಾಡಿ, ‘ಸಾಹಸಸಿಂಹ ನಮ್ಮ ಅಚ್ಚುಮೆಚ್ಚಿನ ನಟ. ವಿಷ್ಣುವರ್ಧನ್ ಮನೆ ತುಂಬಾ ಸುಂದರವಾಗಿದೆ. ಮೈಸೂರಿನಲ್ಲಿ ವಿಷ್ಣು ಸ್ಮಾರಕದ ಕೆಲಸಗಳು ನಡೀತಿವೆ. ಸದ್ಯದಲ್ಲೇ ವಿಷ್ಣು ಸ್ಮಾರಕದ ಉದ್ಘಾಟನೆ ಸಮಾರಂಭವಾಗುತ್ತೆ. ವಿಷ್ಣು ನಮ್ಮೆಲ್ಲರಿಗೂ ಮಾದರಿ ವ್ಯಕ್ತಿತ್ವ. ವಿಷ್ಣು ಘನತೆಯನ್ನ ಎತ್ತಿಹಿಡಿಯೋ ಮ್ಯೂಸಿಯಂ ಮಾಡ್ತೀವಿ’ ಎಂದರು. ಇದನ್ನೂ ಓದಿ: `ಗಾಲ್ವಾನ್ ಹಾಯ್’ ಎಂದ ನಟಿಗೆ ಚಳಿ ಬಿಡಿಸಿದ ಸಚಿವ – ಕಾನೂನು ಕ್ರಮಕ್ಕೆ ಚಿಂತನೆ

    ಜಗ್ಗೇಶ್ ಕೂಡ ಮಾತನಾಡಿ, ‘ವಿಷ್ಣುಮನೆಗೆ ಒಂದು ಬ್ಯುಟಿಫುಲ್ ಕಥೆಯಿದೆ. ವಿಷ್ಣು ಅವರಿಗೆ ಮೊದಲು ಯಾರೋ ಭಯ ಹುಟ್ಟಿಸಿದ್ರು. ಜಯನಗರದ ಮನೆ ವಿಷ್ಣು ಸರ್ ಗೆ ಪ್ರಿಯವಾದ ಜಾಗ. ಮನೆಯಲ್ಲಿ ಒಂದೊಂದು ಜಾಗವು ಕಾಡುತ್ತೆ. ಭಾವನೆಗಳನ್ನ ಕೆದಕುತ್ತೆ. ಇದು ಮನೆಯಲ್ಲ, ನಮ್ಮ ಪಾಲಿಗೆ ದೇವಸ್ಥಾನ. ಅನಿರುದ್ದ್ ವಿಷ್ಣುವರ್ಧನ್ ಮಗನ ಸಮಾನ. ಅನಿರುದ್ದ್ ಪರವಾಗಿ ಈಗಲೂ ನಿಲ್ಲಬೇಕು’ ಎಂದರು.

    ಗೃಹ ಪ್ರವೇಶದ ಸಮಾರಂಭಕ್ಕೆ ಸಿನಿಮಾ ರಂಗದ ಗಣ್ಯರು, ಅಭಿಮಾನಿಗಳು ಸೇರಿದಂತೆ ಅನೇಕರು ಹಾಜರಿದ್ದರು. ಬೆಳಗ್ಗೆಯಿಂದಲೇ ಪೂಜೆ, ಹೋಮ ಸೇರಿದಂತೆ ನಾನಾ ಧಾರ್ಮಿಕ ಕಾರ್ಯಗಳು ನಡೆದಿವೆ. ಮುಂದಿನ ತಿಂಗಳು ವಿಷ್ಣು ಸ್ಮಾರಕ ಕೂಡ ಉದ್ಘಾಟನೆ ಆಗಲಿದೆ.

    Live Tv
    [brid partner=56869869 player=32851 video=960834 autoplay=true]

  • ಡಾ.ವಿಷ್ಣು ಜನ್ಮದಿನಕ್ಕೆ ಅಭಿಮಾನಿಗಳ ಸಾಗರ: ಅಭಿಮಾನ ಸ್ಟುಡಿಯೋ ಮುಂದೆ 50 ಕಟೌಟ್ ಸಿಂಗಾರ

    ಡಾ.ವಿಷ್ಣು ಜನ್ಮದಿನಕ್ಕೆ ಅಭಿಮಾನಿಗಳ ಸಾಗರ: ಅಭಿಮಾನ ಸ್ಟುಡಿಯೋ ಮುಂದೆ 50 ಕಟೌಟ್ ಸಿಂಗಾರ

    ಸಾಹಸ ಸಿಂಹ ಡಾ.ವಿಷ್ಣುವರ್ಧನ್ (Vishnuvardhan) ಅವರ 72ನೇ ಜನ್ಮದಿನವನ್ನು ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸಿದ್ದಾರೆ. ಬೆಂಗಳೂರಿನ ಅಭಿಮಾನ ಸ್ಟುಡಿಯೋದಲ್ಲಿರುವ ವಿಷ್ಣು ಸಮಾಧಿಗೆ ಪೂಜೆ ಸಲ್ಲಿಸುವ ಮೂಲಕ ಜನ್ಮದಿನಕ್ಕೆ ಚಾಲನೆ ನೀಡಿದ್ದಾರೆ.  72ನೇ ಜನ್ಮದಿನಾಚರಣೆ (Birthday) ಹಿನ್ನೆಲೆ ಡಾ. ವಿಷ್ಣುವರ್ಧನ್ ಅಭಿನಯದ ಚಿತ್ರಗಳ ಐವತ್ತು ಕಟೌಟ್ ಗಳನ್ನು ಅಭಿಮಾನ ಸ್ಟುಡಿಯೋ ಮುಂದೆ ನಿಲ್ಲಿಸಲಾಗಿದೆ. ಅಲ್ಲದೇ ಅಭಿಮಾನಿಗಳ ಸಾಗರವೇ ಅಲ್ಲಿ ಹರಿದು ಬಂದಿದೆ.

    ಅಭಿಮಾನ್ ಸ್ಟುಡಿಯೋ (Abhiman Studio) ಬಳಿ ರಾರಾಜಿಸುತ್ತಿರುವ ಡಾ.ವಿಷ್ಣುವರ್ಧನ್ ಕಟೌಟ್ ಗಳು (Cutout) ಯಜಮಾನ, ಸಾಹಸ ಸಿಂಹ, ಕೃಷ್ಣ ನೀ ಬೇಗನೆ ಬಾ, ಜಯಸಿಂಹ, ವೀರಪ್ಪ ನಾಯಕ, ಜನ ನಾಯಕ, ದಾದ, ಕೃಷ್ಣ ರುಕ್ಮಿಣಿ, ಹೃದಯ ಗೀತೆ, ದೇವ, ಮತ್ತೆ ಹಾಡಿತು ಕೋಗಿಲೆ, ಲಯನ್ ಜಗಪತಿ ರಾವ್, ರಾಜಧೀರಾಜಾ, ರಾಯರು ಬಂದರು ಮಾವನ ಮನೆಗೆ, ಮಹಾಕ್ಷತ್ರಿಯ, ಮುತ್ತಿನ ಹಾರ, ದಣಿ, ಜನನಿ ಜನ್ಮಭೂಮಿ, ಸೂರ್ಯ ವಂಶ, ಸೂರಪ್ಪ, ದಿಗ್ಗಜರು, ಕೋಟಿಗೊಬ್ಬ, ಸಿಂಹಾದ್ರಿಯ ಸಿಂಹ, ರಾಜ ನರಸಿಂಹ, ಆಪ್ತಮಿತ್ರ, ಸಾಹುಕಾರ, ವರ್ಷ, ಕರ್ನಾಟಕ ಸುಪುತ್ರ, ಹಲೋ ಡ್ಯಾಡಿ, ಅಪ್ಪಾಜಿ, ಸ್ಕೂಲ್ ಮಾಸ್ಟರ್, ಆಪ್ತರಕ್ಷಕ, ಚಿನ್ನದಂತ ಮಗ, ವಿಷ್ಣುಸೇನಾ, ನಾಗರಹಾವು, ಗಂಧದ ಗುಡಿ, ಶುಭ ಮಿಲನ ಚಿತ್ರಗಳ ಕಟೌಟ್ ಗಳಾಗಿವೆ. ಇದನ್ನೂ ಓದಿ: ಶಕ್ತಿ, ಸ್ಫೂರ್ತಿ ಸದಾ ನಿಮ್ಮೊಂದಿಗಿರಲಿ: ಮೋದಿ ಹುಟ್ಟುಹಬ್ಬಕ್ಕೆ ರಮ್ಯಾ ವಿಶ್ 

    ಅಲ್ಲದೇ ಹುಟ್ಟುಹಬ್ಬಕ್ಕಾಗಿಯೇ ಅಭಿಮಾನಿಗಳು ಸ್ಟುಡಿಯೋ ಬಳಿ ರಕ್ತದಾನ, ಅನ್ನದಾನ, ನೇತ್ರದಾನ ಸೇರಿದಂತೆ ಹಲವು ಜನಪರ ಕೆಲಸಗಳನ್ನು ಹಮ್ಮಿಕೊಂಡಿದ್ದಾರೆ. ಬೆಳಗ್ಗೆಯಿಂದಲೇ ಅಭಿಮಾನ ಸ್ಟುಡಿಯೋಗೆ ಆಗಮಿಸಿರುವ ಅಭಿಮಾನಿಗಳು ನೆಚ್ಚಿನ ನಟನಿಗೆ ಪೂಜೆ ಸಲ್ಲಿಸಿದ್ದಾರೆ. ರಾಜ್ಯಾದ್ಯಂತ ಸಾವಿರಾರು ಅಭಿಮಾನಿಗಳು ಸಮಾಧಿ ಬಳಿ ಜಮಾಯಿಸಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಿದ್ದಾರೆ.

    ಇದೇ ಸಂದರ್ಭದಲ್ಲಿ ಕನ್ನಡದ ಹಿರಿಯ ನಟಿ ರಮೇಶ್ ಭಟ್ (Ramesh bhat) ಕೂಡ ಸಮಾಧಿಗೆ ಬಂದು ಪೂಜೆ ಸಲ್ಲಿಸಿದರು. ವಿಷ್ಟುವರ್ಧನ್ ಅವರ ಜೊತೆಗಿನ ಒಡನಾಟವನ್ನು ಹಂಚಿಕೊಂಡರು. ಪ್ರತಿ ವರ್ಷವೂ ರಮೇಶ್ ಭಟ್ ಸಮಾಧಿಗೆ ಬಂದು ಪೂಜೆ ಸಲ್ಲಿಸುತ್ತಾರೆ. ಕೆಲವು ಹೊತ್ತು ಅಭಿಮಾನಿಗಳ ಜೊತೆ ಬೆರೆಯುತ್ತಾರೆ. ಆದರೆ ಈ ಸ್ಮಾರಕದ ಬಳಿ ವಿಷ್ಣು ಕುಟುಂಬ ಬರದೇ ಮನೆಯಲ್ಲೇ ಅವರ ಹುಟ್ಟುಹಬ್ಬವನ್ನು ಆಚರಿಸುತ್ತಾರೆ.

    Live Tv
    [brid partner=56869869 player=32851 video=960834 autoplay=true]

  • ‘ಸಾಹಸಸಿಂಹ’ ಸಿನಿಮಾ ರಂಗಕ್ಕೆ ಬಂದು 50 ವರ್ಷ: ನೆಚ್ಚಿನ ನಟನ ಜನ್ಮದಿನಕ್ಕೆ ಡಾ.ವಿಷ್ಣು ಸೇನಾನಿಗಳಿಂದ 50 ಕಟೌಟ್ ಸಂಕಲ್ಪ

    ‘ಸಾಹಸಸಿಂಹ’ ಸಿನಿಮಾ ರಂಗಕ್ಕೆ ಬಂದು 50 ವರ್ಷ: ನೆಚ್ಚಿನ ನಟನ ಜನ್ಮದಿನಕ್ಕೆ ಡಾ.ವಿಷ್ಣು ಸೇನಾನಿಗಳಿಂದ 50 ಕಟೌಟ್ ಸಂಕಲ್ಪ

    ಸಾಹಸ ಸಿಂಹ ಡಾ.ವಿಷ್ಣುವರ್ಧನ್ (Vishnuvardhan) ಅವರ 72ನೇ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಲು ಡಾ.ವಿಷ್ಣು ಸೇನಾನಿಗಳು ( Dr. Vishnu Senani) ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದೇ ವರ್ಷ ಡಿಸೆಂಬರ್ 29ಕ್ಕೆ ವಿಷ್ಣುವರ್ಧನ್ ಅವರು ಸಿನಿಮಾ ರಂಗಕ್ಕೆ ಬಂದು 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಅವರ ಹುಟ್ಟು ಹಬ್ಬದ ದಿನದಂದು ಐವತ್ತು ಕಟೌಟ್ ನಿಲ್ಲಿಸಲು ಅಭಿಮಾನಿಗಳು ಸಂಕಲ್ಪ ಮಾಡಿದ್ದಾರೆ. ಪ್ರತಿ ವರ್ಷವೂ ನೆಚ್ಚಿನ ನಟನ ಹುಟ್ಟು ಹಬ್ಬ(Birthday)ವನ್ನು ನಾನಾ ರೀತಿಯಲ್ಲಿ ಆಚರಿಸಿಕೊಂಡು ಬಂದಿರುವ ಅಭಿಮಾನಿಗಳು ಈ ಸಲ ಕಟೌಟ್ ಮೂಲಕ ದಾಖಲೆ ಸೃಷ್ಟಿಸಲು ಹೊರಟಿದ್ದಾರೆ.

    ವಿಷ್ಣುವರ್ಧನ್ ಅವರು ಚಿತ್ರರಂಗಕ್ಕೆ ಬಂದು ಈ ಡಿಸೆಂಬರ್ 29ಕ್ಕೆ  ೫೦ (Fifty Years)ವರ್ಷಗಳಾಗಲಿವೆ. ಹಾಗಾಗಿ ಅವರ ಹುಟ್ಟು ಹಬ್ಬದ ದಿನದಂದು ಸುಮಾರು 50 ಕಟೌಟ್ ಗಳನ್ನು ಅಭಿಮಾನ್ ಸ್ಟುಡಿಯೋದಲ್ಲಿ ನಿಲ್ಲಿಸಲಾಗುತ್ತಿದೆ. ಆ ಪ್ರತಿ ಕಟೌಟ್ ಸಹ ಡಾ.ವಿಷ್ಣು ಅವರ ಒಂದೊಂದು ಯಶಸ್ವಿ ಚಿತ್ರದ್ದಾಗಿರಲಿದೆ. ಈ ಕಟೌಟ್ (Cutout) ಗಳನ್ನು ರಾಜ್ಯದ ಬೇರೆ ಬೇರೆ ಭಾಗದ ಸುಮಾರು 50 ಅಭಿಮಾನಿಗಳು ಸೇರಿ ನಿರ್ಮಿಸುತ್ತಿರುವುದು ವಿಶೇಷ. ಇದನ್ನೂ ಓದಿ:‘ಈ ಶನಿವಾರ ನಿನ್ನ ಮನೆಗೆ ಕಳಿಸ್ತಾರೆ’ ಎಂದು ಗುರೂಜಿಗೆ ಭವಿಷ್ಯ ನುಡಿದ ಸೋನು ಶ್ರೀನಿವಾಸ್ ಗೌಡ

    ಈ ಪ್ರಮಾಣದ ಕಟೌಟ್ ಗಳು ಇಡೀ ವಿಶ್ವದಲ್ಲಿಯೇ ಒಂದೇ ಸ್ಥಳದಲ್ಲಿ ಯಾವೊಬ್ಬ ಕಲಾವಿದನ ಹೆಸರಲ್ಲೂ ಆಗಿಲ್ಲವೆಂಬ ವಿಶ್ವದಾಖಲೆ ಕೂಡ ಆಗಲಿದೆ. ವಿಶ್ವ ದಾಖಲೆಗಾಗಿ ಈಗಾಗಲೇ ವಿಷ್ಣು ಸೇನಾನಿಗಳು ರಿಜಿಸ್ಟರ್ ಮಾಡುವಂತಹ ಕೆಲವು ಸಂಸ್ಥೆಗಳಿಗೆ ಮಾಹಿತಿ ಕೂಡ ಕೊಟ್ಟಿದ್ದಾರೆ. ಹಾಗಾಗಿ ಸೆಪ್ಟೆಂಬರ್ 18ರಂದು ಡಾ.ವಿಷ್ಣು ಪುಣ್ಯಭೂಮಿಯ ಬಳಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರುವ ನಿರೀಕ್ಷೆಯಿದೆ.

     

    ಈ ಕುರಿತಾಗಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಭಿಮಾನಿಗಳಾದ ಆನಂದ್ ರಾಚ್, ರಘು ಎಸ್, ತುಳಸೀಕೃಷ್ಣ, ರಾಧಾ ಗಂಗಾಧರ್, ವಿಜಯಲಕ್ಷ್ಮಿ, ರವಿಕುಮಾರ್ ದೇವರಮನಿ, ಸುಹಾಸ್ ಯಮಲೂರು, ಜಾನಕೀವರ್ಧನ್, ಸಿಂಹಘರ್ಜನೆ ಮಂಜು, ಮಲ್ಲಿಕಾರ್ಜುನ್ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಕೈ ಕುಯ್ದುಕೊಂಡ ಅನಿರುದ್ಧ್‌ ಅಭಿಮಾನಿ: ನಿಮ್ಮ ಅಭಿಮಾನಕ್ಕೆ ಚಿರಋಣಿ ಎಂದ ನಟ

    ಕೈ ಕುಯ್ದುಕೊಂಡ ಅನಿರುದ್ಧ್‌ ಅಭಿಮಾನಿ: ನಿಮ್ಮ ಅಭಿಮಾನಕ್ಕೆ ಚಿರಋಣಿ ಎಂದ ನಟ

    `ಜೊತೆ ಜೊತೆಯಲಿ’ ಕಿರುತೆರೆಯ ನಂಬರ್ ಒನ್ ಪಟ್ಟದಲ್ಲಿ ಮಿಂಚಿದ ಧಾರಾವಾಹಿಯಾಗಿದ್ದು, ಇತ್ತೀಚೆಗಷ್ಟೇ ನಾಯಕ ನಟ ಅನಿರುದ್ಧ ಕಿರಿಕ್‌ನಿಂದ ಸೀರಿಯಲ್ ತಂಡದಿಂದ ಔಟ್ ಆಗಿದ್ದರು. ಇದೀಗ ಅಭಿಮಾನಿಯೊಬ್ಬ ಅನಿರುದ್ಧ್ ವಾಪಸ್ ಆಗಬೇಕೆಂದು ಕೈ ಕುಯ್ದುಕೊಂಡಿದ್ದಾರೆ.

    ಸಿನಿಮಾಗಿಂತ ಕಿರುತೆರೆ ಅನಿರುದ್ಧ್ ಕೆರಿಯರ್‌ಗೆ ಕೈ ಹಿಡಿದಿತ್ತು. ಜೊತೆ ಜೊತೆಯಲಿ ಸೀರಿಯಲ್ ಕಿರುತೆರೆಯಲ್ಲಿ ಕ್ಲಿಕ್ ಆಗಿದ್ದೆ ತಡ ಟಿವಿ ಲೋಕದಲ್ಲಿ ನಂಬರ್ ಒನ್ ಸ್ಟಾರ್ ಆಗಿ ಮಿಂಚಿದ್ದರು. ಅನಿರುದ್ಧ ಮತ್ತು ಮೇಘಾ ಶೆಟ್ಟಿ ಜೋಡಿ, ಪ್ರೇಕ್ಷಕರಿಗೆ ಮೋಡಿ ಮಾಡ್ತು. ವಯಸ್ಸಿನ ಅಂತರವಿರುವ ಆರ್ಯವರ್ಧನ್ ಮತ್ತು ಅನು ಕಥೆಯನ್ನ ಪ್ರೇಕ್ಷಕರು ಅಪ್ಪಿ ಒಪ್ಪಿಕೊಂಡಿದ್ದರು. ಹೀಗಿರುವಾಗ ಸೀರಿಯಲ್ ತಂಡ ಮತ್ತು ಅನಿರುದ್ಧ್ ನಡುವೆ ವೈಮನಸ್ಸು ಉಂಟಾಗಿ ತಂಡದಿಂದ ಕಿಕ್ ಔಟ್ ಆಗಿದ್ದಾರೆ. ಹೀಗಿರುವಾಗ ಅಭಿಮಾನಿಯೊಬ್ಬ, ಅನಿರುದ್ಧ್ ಮತ್ತೆ ಸೀರಿಯಲ್ ವಾಪಸ್ ಆಗಬೇಕೆಂದು ಕೈ ಕುಯ್ದುಕೊಂಡಿದ್ದಾರೆ.

    ʻಜೊತೆ ಜೊತೆಯಲಿʼ ಧಾರಾವಾಹಿಯಿಂದ ಅನಿರುದ್ಧ್ ಔಟ್ ಆದ ಮೇಲೆ ವಾಹಿನಿಯವರು ಮತ್ತು ನಿರ್ದೇಶಕ ಆರೂರು ಜಗದೀಶ್ ಅವರು ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅನಿರುದ್ಧ್ ಮತ್ತೆ ಸೀರಿಯಲ್‌ನಲ್ಲಿ ಕಾಣಿಸಿಕೊಳ್ಳಲೇಬೇಕೆಂದು ಫ್ಯಾನ್ಸ್ ಏನೇನೋ ಹುಚ್ಚು ಸಾಹಸ ಮಾಡ್ತಿದ್ದಾರೆ. ಒರ್ವ ಅಭಿಮಾನಿಯೊಬ್ಬ ಕೈ ಕೊಯ್ದುಕೊಂಡಿದ್ದಾರೆ. ಅಭಿಮಾನಿಯ ವರ್ತನೆಗೆ ಅನಿರುದ್ಧ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:ಸೋನುಗೆ ಚೈತ್ರಾ ಚಪ್ಪಲಿ ಗಿಫ್ಟ್ ಕೊಟ್ಟಿದ್ಯಾಕೆ..?

    ನಿಮ್ಮ ಅಭಿಮಾನಕ್ಕೆ ಚಿರಋಣಿ ಆದರೆ ಈ ರೀತಿ ಮಾಡಬೇಡಿ ಎಂದು ನಟ ಅನಿರುದ್ಧ್ ಮನವಿ ಮಾಡಿದ್ದಾರೆ. ‌ʻಜೊತೆ ಜೊತೆಯಲಿʼ ಸೀರಿಯಲ್ ಮತ್ತು ಆರ್ಯವರ್ಧನ್ ಪಾತ್ರದ ಮೇಲಿರುವ ಕ್ರೇಜ್ ಫ್ಯಾನ್ಸ್‌ಗೆ ಕಮ್ಮಿಯಾಗಿಲ್ಲ.

    Live Tv
    [brid partner=56869869 player=32851 video=960834 autoplay=true]