Tag: ವಿಷ್ಣು ಮಂಚು

  • 5 ದಿನಕ್ಕೆ 10 ಕೋಟಿ – ಇದು ಅಕ್ಷಯ್‌ ಕುಮಾರ್‌ ಕಾಲ್‌ ಶೀಟ್!

    5 ದಿನಕ್ಕೆ 10 ಕೋಟಿ – ಇದು ಅಕ್ಷಯ್‌ ಕುಮಾರ್‌ ಕಾಲ್‌ ಶೀಟ್!

    ಮುಂಬೈ: ವಿಷ್ಣುಮಂಚು (Vishnu Manchu) ಅಭಿನಯದ ಕಣ್ಣಪ್ಪ (Kannappa) ಸಿನಿಮಾ ಬಹುಭಾಷೆಯಲ್ಲಿ ರಿಲೀಸ್ ಆಗಿದೆ ಈ ಚಿತ್ರದಲ್ಲಿ ಹಲವು ಭಾಷೆಯ ವಿವಿಧ ಖ್ಯಾತ ಕಲಾವಿದರು ನಟಿಸಿದ್ದು ಚಿತ್ರದ ಹೈಲೈಟ್‌ನಲ್ಲೊಂದು.

    ವಿಷ್ಣು ಮಂಚು ಕಣ್ಣಪ್ಪನಾಗಿ ಅಭಿನಯಿಸಿದರೆ ಅತಿಥಿ ಪಾತ್ರಗಳಲ್ಲಿ ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್‌ಲಾಲ್ ಅಭಿನಯಿಸಿದ್ದಾರೆ. ಗೆಸ್ಟ್ ಅಪೀಯರೆನ್ಸ್ ಮಾಡಿದ್ದ ಬೇರೆ ಭಾಷೆ ಕಲಾವಿದರು ಉಚಿತವಾಗಿಯೇ ಅಭಿನಯಿಸಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೀಗ ಅಕ್ಷಯ್ ಕುಮಾರ್ (Akshay Kumar) ಶಿವನ ಪಾತ್ರಕ್ಕಾಗಿ 10 ಕೋಟಿ ರೂ. ಸಂಭಾವನೆ ಪಡೆದು ಅಭಿನಯಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದನ್ನೂ ಓದಿ: ರಾಮ್‌ಚರಣ್‌ಗೆ ಕ್ಷಮೆ ಕೇಳಿದ `ಗೇಮ್ ಚೇಂಜರ್’ ಪ್ರೊಡ್ಯೂಸರ್

     

    ಶಿವನ ಪಾತ್ರ ಮಾಡಿದ್ದ ಅಕ್ಷಯ್ ಕುಮಾರ್ 5 ದಿನದ ಕಾಲ್‌ಶೀಟ್‌ಗಾಗಿ 10 ಕೋಟಿ ರೂ. ಸಂಭಾವನೆ ಪಡೆದಿದ್ದರು ಎನ್ನಲಾಗುತ್ತಿದೆ. ಆದರೆ ಪ್ರಭಾಸ್ ಹಾಗೂ ಮೋಹನ್‌ಲಾಲ್ ಮೋಹನ್‌ಬಾಬು ಮೇಲಿನ ಸ್ನೇಹ, ವಿಶ್ವಾಸದಿಂದ ರೆಮನ್ಯುರೇಶನ್ ಪಡೆಯದೇ ಅಭಿನಯಿಸಿದ್ದಾರೆ. ಆದರೆ ಐದೇ ದಿನದ ಕಾಲ್‌ಶೀಟ್‌ಗೆ ಅಕ್ಷಯ್ 10 ಕೋಟಿ ಪಡೆದುಕೊಂಡು ಹೋಗಿರುವುದು ಟಾಲಿವುಡ್ ವಲಯದಲ್ಲಿ ಬಹಳ ಚರ್ಚೆಯಾಗುತ್ತಿದೆ. ಇದನ್ನೂ ಓದಿ: ಓಂಪ್ರಕಾಶ್ ರಾವ್ ನಿರ್ದೇಶನದ 50ನೇ ಚಿತ್ರಕ್ಕೆ ಹಂಸಲೇಖ ಸಂಗೀತ

    ಅಕ್ಷಯ್ ದುರಾಸೆಯಿಂದ ಹಣ ಪಡೆದುಕೊಂಡು ಹೋಗಿದ್ದಾರೆ ಎಂದು ಚರ್ಚೆಯಾಗುತ್ತಿದೆ. ಆದರೆ ಅಕ್ಷಯ್ ಕೇಳಿದಷ್ಟು ಹಣಕ್ಕೆ ಒಪ್ಪಿಗೆಯಿಂದಲೇ ನಿರ್ಮಾಪಕರು ರೆಮನ್ಯುರೇಷನ್ ಕೊಟ್ಟಿರುತ್ತಾರೆ. ಹೀಗಾಗಿ ಅಕ್ಷಯ್ ಕುಮಾರ್ ಕೂಡ ಕಣ್ಣಪ್ಪ ಚಿತ್ರದ ಪ್ರಚಾರದಲ್ಲಿ ಭಾಗಿಯಾಗಿದ್ದು. ಆದರೆ ಮೋಹನ್‌ಲಾಲ್ ಆಗಲಿ ಪ್ರಭಾಸ್ ಆಗಲಿ ಭಾಗಿಯಾಗಿರಲಿಲ್ಲ. ಪ್ರಭಾಸ್ ಹಾಗೂ ಮೋಹನ್‌ಲಾಲ್ ಮುಂದೆ ಅಕ್ಷಯ್ ಸಣ್ಣವರಾದ್ರು ಅಷ್ಟೇ ಎನ್ನುತ್ತಿದ್ದಾರೆ ಪ್ರಭಾಸ್ ಫ್ಯಾನ್ಸ್.

  • `ಕಣ್ಣಪ್ಪ’ ನೋಡಿ ವಿಷ್ಣು ಮಂಚು ಮೆಚ್ಚಿದ ರಜನಿಕಾಂತ್

    `ಕಣ್ಣಪ್ಪ’ ನೋಡಿ ವಿಷ್ಣು ಮಂಚು ಮೆಚ್ಚಿದ ರಜನಿಕಾಂತ್

    ಳೆದ 30 ವರ್ಷಗಳ ಹಿಂದಿನ ಸ್ಮರಣೀಯ ಕ್ಷಣಗಳು ಮತ್ತು ಚಿತ್ರರಂಗದ ಸಂಭ್ರಮದ ನಡುವೆ, ಭಾರತೀಯ ಚಿತ್ರರಂಗದ ಇಬ್ಬರು ದಿಗ್ಗಜರಾದ ಸೂಪರ್‌ಸ್ಟಾರ್ ರಜನಿಕಾಂತ್ (Rajanikanth) ಹಾಗೂ ನಟ ಮೋಹನ್ ಬಾಬು (Mohan Babu) ಚೆನ್ನೈನಲ್ಲಿ ಮತ್ತೆ ಒಂದಾದರು. ಇದಕ್ಕೆ ಕಾರಣಕ್ಕೆ `ಪೆದರಾಯುಡು’ ಸಿನಿಮಾವು ಜೂನ್ 15, 1995ರಂದು ತೆರೆಕಂಡಿತ್ತು. ಇದೀಗ 30 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಬ್ಬರೂ ಸ್ಟಾರ್ ನಟರು, ವಿಷ್ಣು ಮಂಚು ನಟನೆಯ `ಕಣ್ಣಪ್ಪ’ (Kannappa) ಸಿನಿಮಾ ವೀಕ್ಷಿಸಿ ಹಳೇ ನೆನಪಿಗೆ ಹೊರಳಿದರು.

    ರವಿ ರಾಜ ಪಿನಿಸೆಟ್ಟಿ ನಿರ್ದೇಶನದಲ್ಲಿ ಮೂಡಿಬಂದ `ಪೆದರಾಯುಡು’ ಸಿನಿಮಾ, ಅಂದಿನ ಕಾಲದಲ್ಲಿ ಬ್ಲಾಕ್‌ಬಸ್ಟರ್ ಹಿಟ್ ಆಗಿತ್ತು. ಗಟ್ಟಿ ಕಥಾ ಶೈಲಿ ನೆನಪಿನಲ್ಲಿ ಉಳಿಯುವ ಅಭಿನಯಗಳು ಮತ್ತು ಅದ್ವಿತೀಯ ಮಾಸ್ ಆಕರ್ಷಣೆಯಿಂದ ತೆಲುಗು ಚಿತ್ರರಂಗದಲ್ಲಿ ಈ ಚಿತ್ರ ಶಾಶ್ವತವಾಗಿ ಉಳಿದಿದೆ. ಈ ಚಿತ್ರ 30 ವರ್ಷ ಪೂರೈಸಿದ ಬೆನ್ನಲ್ಲೇ ರಜನಿಕಾಂತ್ ಮತ್ತು ಮೋಹನ್ ಬಾಬು (Mohan Babu) ಒಂದೆಡೆ ಸೇರಿ ಕಣ್ಣಪ್ಪ ಚಿತ್ರ ವೀಕ್ಷಿಸಿದರು. ಇದನ್ನೂ ಓದಿ: ರಚಿತಾ ರಾಮ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ : ನಿರ್ದೇಶಕ ನಾಗಶೇಖರ್ ಒತ್ತಾಯ

    ಅಂದಹಾಗೆ ಜೂನ್ 27ರಂದು ಜಾಗತಿಕ ಮಟ್ಟದಲ್ಲಿ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಕಣ್ಣಪ್ಪ ಸಿನಿಮಾ ಬಿಡುಗಡೆಗೊಳ್ಳಲಿದೆ. ಈ ಚಿತ್ರದಲ್ಲಿ ಶಿವನ ಭಕ್ತರಾದ ಕಣ್ಣಪ್ಪನ ಕಥೆಯನ್ನು ವಿಶಿಷ್ಟವಾಗಿ ಆವರಿಸಿಕೊಂಡಿದ್ದಾರೆ. ಚಿತ್ರ ವೀಕ್ಷಿಸಿದ ಬಳಿಕ ರಜನಿಕಾಂತ್ ಕೊಂಚ ಭಾವುಕರಾಗಿದ್ದಾರೆ. ಇದನ್ನೂ ಓದಿ: ಪುರಿ ಜಗನ್ನಾಥ್ ನಿರ್ದೇಶನದ ಚಿತ್ರಕ್ಕೆ ಸಂಯುಕ್ತ ಮೆನನ್ ಎಂಟ್ರಿ

    `ಇದು ಅಸಾಧಾರಣ ಚಿತ್ರ. ಭಾವನೆ, ದೃಶ್ಯ ವೈಭವ ಮತ್ತು ಆಧ್ಯಾತ್ಮ- all extraordinary’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತ್ತ ರಜನಿಕಾಂತ್ ಬಗ್ಗೆಯೂ ಮಾತನಾಡಿದ ಮೋಹನ್ ಬಾಬು, `ಇವತ್ತು 22 ವರ್ಷಗಳಿಂದ ನಿರೀಕ್ಷಿಸುತ್ತಿದ್ದ ರಜನಿಕಾಂತ್ ಅವರ ಆಲಿಂಗನ ದೊರೆತಿದೆ. ಈಗ ನಾನು ಹೆದರುವುದಿಲ್ಲ. ನಾನು ಅಜೇಯ. ಕಣ್ಣಪ್ಪ ಬರುತ್ತಾನೆ!’ ಎಂದು ಸಂಭ್ರಮದಿಂದ ಹೇಳಿದ್ದಾರೆ. ಇದನ್ನೂ ಓದಿ: ಕನ್ನಡಿಗರಿಗೆ ಅಪಮಾನ ಪ್ರಕರಣ – ಹೇಳಿಕೆ ಕೊಡಲು ಪೊಲೀಸರನ್ನು ಸತಾಯಿಸುತ್ತಿರುವ ಸೋನು ನಿಗಮ್

    ಅಂದಹಾಗೆ ಕಣ್ಣಪ್ಪ ಚಿತ್ರವನ್ನು ಮುಖೇಶ್ ಕುಮಾರ್ ಸಿಂಗ್ ನಿರ್ದೇಶನ ಮಾಡಿದ್ದಾರೆ. ಪುತ್ರನ ಚಿತ್ರಕ್ಕೆ ಮೋಹನ್ ಬಾಬು ಬಂಡವಾಳ ಹೂಡಿ ನಿರ್ಮಾಪಕರಾಗಿದ್ದಾರೆ. ಬಹು ತಾರಾಗಣದ ಈ ಸಿನಿಮಾ ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಜೂನ್ ಕೊನೆಯ ವಾರದಲ್ಲಿ ಸಿನಿಮಾ ಬಿಡುಗಡೆ ಆಗಲಿದೆ.

  • ಮೋಹನ್ ಬಾಬು ನಿರ್ಮಾಣದ ‘ಕಣ್ಣಪ್ಪ’ ಚಿತ್ರದಲ್ಲಿ ನಟಿಸದಿರಲು ಕಾರಣ ಬಿಚ್ಚಿಟ್ಟ ಶಿವಣ್ಣ

    ಮೋಹನ್ ಬಾಬು ನಿರ್ಮಾಣದ ‘ಕಣ್ಣಪ್ಪ’ ಚಿತ್ರದಲ್ಲಿ ನಟಿಸದಿರಲು ಕಾರಣ ಬಿಚ್ಚಿಟ್ಟ ಶಿವಣ್ಣ

    ವಿಷ್ಣು ಮಂಚು ನಟನೆಯ ‘ಕಣ್ಣಪ್ಪ’ (Kannappa) ಚಿತ್ರ ಜೂನ್ 27ಕ್ಕೆ ಬಹುಭಾಷೆಗಳಲ್ಲಿ ರಿಲೀಸ್‌ಗೆ ಸಜ್ಜಾಗಿದೆ. ಈ ಚಿತ್ರದ ಪ್ರಚಾರಕ್ಕಾಗಿ ಮೋಹನ್ ಬಾಬು, ವಿಷ್ಣು ಮಂಚು ಬೆಂಗಳೂರಿಗೆ ಆಗಮಿಸಿದ್ದು, ಶಿವಣ್ಣ ಕೂಡ ಸಾಥ್ ನೀಡಿದ್ದಾರೆ. ಇದನ್ನೂ ಓದಿ:ಕ್ಷಮೆ ಕೇಳದ ಕಮಲ್ ಹಾಸನ್‌ಗೆ ಬ್ಯಾನ್ ಬಿಸಿ..!

    ಸುದ್ದಿಗೋಷ್ಠಿಯಲ್ಲಿ ಶಿವಣ್ಣ (Shivanna) ಮಾತನಾಡಿ, ‘ಕಣ್ಣಪ್ಪ’ ಚಿತ್ರ ಮಾಡಲು ಧೈರ್ಯ ಬೇಕು. ವಿಷ್ಣು ಮಂಚು ಅವರು ಭಕ್ತಿಯಿಂದ ಚಿತ್ರ ಮಾಡಿದ್ದಾರೆ. ಚಿತ್ರದ ಲುಕ್ ಅದ್ಭುತವಾಗಿ ಮೂಡಿ ಬಂದಿದೆ. ವಿಷ್ಣು ಈ ರೀತಿಯ ಸಿನಿಮಾ ಮಾಡಿದ್ದಕ್ಕೆ ಅವರ ಮೇಲಿನ ಗೌರವ ಹೆಚ್ಚಾಯ್ತು ಎಂದರು.

    ಮೋಹನ್ ಬಾಬು ಈ ತರ ಸಿನಿಮಾ ಒಪ್ಪಿ ಮಾಡಿದ್ದು ಗ್ರೇಟ್. ಜನ ಈ ತರ ಸಿನಿಮಾ ನೋಡಬೇಕು. ಕಾಳಹಸ್ತಿ ಅಂದರೆ ಏನು ತಿಳಿದುಕೊಳ್ಳಬೇಕು. ನ್ಯೂಜಿಲ್ಯಾಂಡ್‌ಗೆ ತೆರಳಿ ಶೂಟಿಂಗ್ ಮಾಡಿದ್ದಾರೆ. ನಿರ್ದೇಶಕರು ಆಸಕ್ತಿಯಿಂದ ಸಿನಿಮಾ ಮಾಡಿದ್ದಾರೆ. 100% ಈ ಚಿತ್ರ ಸೂಪರ್ ಡೂಪರ್ ಹಿಟ್ ಆಗುತ್ತದೆ ಎಂದಿದ್ದಾರೆ. ಶಿವನ ಲೀಲೆ ಯಾವಾಗಲೂ ಕಾಪಾಡುತ್ತದೆ ಎಂದು ಚಿತ್ರತಂಡಕ್ಕೆ ನಟ ಭರವಸೆ ತುಂಬಿದರು.

     

    View this post on Instagram

     

    A post shared by Vishnu Manchu (@vishnumanchu)

    ನಾನು ‘ಕಣ್ಣಪ್ಪ’ ಚಿತ್ರದಲ್ಲಿ ಶಿವನ ಪಾತ್ರದಲ್ಲಿ ನಟಿಸಬೇಕಿತ್ತು. ಆದರೆ ಡೇಟ್ ಹೊಂದಾಣಿಕೆ ಆಗದ ಕಾರಣ ನಟಿಸಲು ಆಗಲಿಲ್ಲ. ಸಂಭಾವನೆ ಕೊಡಲಿಲ್ಲ ಅಂದ್ರು ನಿಮ್ಮೊಂದಿಗೆ ನಟಿಸುತ್ತೇನೆ. ನಿಮ್ಮ ಜೊತೆ ನಟಿಸೋದೇ ಒಂದು ಖುಷಿ, ಅದಕ್ಕೆ ಸಂಭಾವನೆ ಬೇಕಿಲ್ಲ. ವಿಲನ್ ಆಗಿ ನಟಿಸಲ್ಲ, ಅದರ ಬದಲು ಒಂದೊಳ್ಳೆಯ ಪಾತ್ರ ಮಾಡೋಣ ಮೋಹನ್ ಅಂಕಲ್ ಎಂದರು ಶಿವಣ್ಣ. ಅವರ ಮಾತಿಗೆ ಮೋಹನ್ ಬಾಬು ಸಮ್ಮತಿ ಸೂಚಿಸಿದರು. ಅಲ್ಲದೇ ಈ ಚಿತ್ರವನ್ನು ಮೊದಲ ದಿನವೇ ನೋಡೋದಾಗಿ ಹೇಳಿದರು.

     

    View this post on Instagram

     

    A post shared by Vishnu Manchu (@vishnumanchu)

    ಈ ವೇಳೆ, ‘ಶಿವ ಮೆಚ್ಚಿದ ಕಣ್ಣಪ್ಪ’ ಚಿತ್ರದಲ್ಲಿ ನಟಿಸಿದ್ದರ ಬಗ್ಗೆ ಶಿವಣ್ಣ ಸ್ಮರಿಸಿ, ಇದರಲ್ಲಿ ನಟಿಸಲು ನನಗೆ ಭಯವಿತ್ತು. ಏಕೆಂದರೆ ಅಪ್ಪಾಜಿ ನಟಿಸಿದ ‘ಬೇಡರ ಕಣ್ಣಪ್ಪ’ ಸೂಪರ್ ಹಿಟ್ ಆಗಿತ್ತು. ಹೀಗಾಗಿ ನಾನು ಆ ಪಾತ್ರದಲ್ಲಿ ನಟಿಸಲ್ಲ ಎಂದಾಗ, ಅಮ್ಮ ಇದು ನನ್ನ ಆಸೆ ಈಡೇರಿಸು ಅಂದಿದ್ರು. ಅದರಂತೆ ಸಿನಿಮಾ ಮಾಡಿದೆ. ಅದು ಸೂಪರ್ ಹಿಟ್ ಆಯ್ತು ಎಂದರು.

     

    View this post on Instagram

     

    A post shared by Vishnu Manchu (@vishnumanchu)

    ಅಂದಹಾಗೆ, ಈ ಸಿನಿಮಾದಲ್ಲಿ ವಿಷ್ಣು ಮಂಚು ಜೊತೆ ಪ್ರಭಾಸ್, ‘ಮಗಧೀರ’ ನಟಿ ಕಾಜಲ್, ಅಕ್ಷಯ್ ಕುಮಾರ್, ಮೋಹನ್ ಲಾಲ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಜೂನ್ 27ಕ್ಕೆ ಚಿತ್ರ ರಿಲೀಸ್ ಆಗಲಿದೆ.

  • ‘ಕಣ್ಣಪ್ಪ’ ಟೀಸರ್‌ನಲ್ಲಿ ಮಲ್ಟಿ ಸ್ಟಾರ್‌ಗಳ ಅಬ್ಬರ- ಪ್ರಭಾಸ್ ಎಂಟ್ರಿಯೇ ಚಿಂದಿ

    ‘ಕಣ್ಣಪ್ಪ’ ಟೀಸರ್‌ನಲ್ಲಿ ಮಲ್ಟಿ ಸ್ಟಾರ್‌ಗಳ ಅಬ್ಬರ- ಪ್ರಭಾಸ್ ಎಂಟ್ರಿಯೇ ಚಿಂದಿ

    ಟಾಲಿವುಡ್ ನಟ ಮಂಚು ವಿಷ್ಣು (Manchu Vishnu) ನಟನೆಯ ‘ಕಣ್ಣಪ್ಪ’ (Kannappa) ಟೀಸರ್ ರಿಲೀಸ್ ಆಗಿದೆ. ಬಹುಭಾಷೆಗಳಲ್ಲಿ ರಿಲೀಸ್ ಆಗಿರೋ ‘ಕಣ್ಣಪ್ಪ’ ಟೀಸರ್‌ನಲ್ಲಿ ಮಲ್ಟಿ ಸ್ಟಾರ್ ಕಲಾವಿದರು ಮಿಂಚಿದ್ದಾರೆ. ಅದರಲ್ಲಿ ಪ್ರಭಾಸ್ (Prabhas) ಕಣ್ಣೇ ಹೈಲೈಟ್ ಆಗಿದೆ. ಪ್ರಭಾಸ್ ಲುಕ್‌ಗೆ ಫ್ಯಾನ್ಸ್ ಕಳೆದೋಗಿದ್ದಾರೆ. ಇದನ್ನೂ ಓದಿ:‘ಗುಡ್ ಬ್ಯಾಡ್ ಅಗ್ಲಿ’ ಅವತಾರವೆತ್ತಿದ ಅಜಿತ್ ಕುಮಾರ್- ಟೀಸರ್‌ಗೆ ಫ್ಯಾನ್ಸ್ ಮೆಚ್ಚುಗೆ

    ನಾಯಕನಾಗಿ ಮಂಚು ವಿಷ್ಣು, ಶಿವನಾಗಿ ಅಕ್ಷಯ್ ಕುಮಾರ್, ಪಾರ್ವತಿಯಾಗಿ ಕಾಜಲ್ ಕಾಣಿಸಿಕೊಂಡಿದ್ದಾರೆ. ಮೋಹನ್ ಬಾಬು ಜೊತೆ ಮೋಹನ್ ಲಾಲ್, ಶರತ್ ಕುಮಾರ್, ದೇವರಾಜ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಕೊನೆಯಲ್ಲಿ ಪ್ರಭಾಸ್ ಎಂಟ್ರಿ ಆಗುತ್ತಿದೆ. ಪ್ರಭಾಸ್ ನೋಡೋ ನೋಟಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ನಟನ ಎಂಟ್ರಿ ಚಿಂದಿ ಎಂದಿದ್ದಾರೆ.

    150 ಕೋಟಿ ರೂ. ಬಜೆಟ್‌ನಲ್ಲಿ ‘ಕಣ್ಣಪ್ಪ’ ಸಿನಿಮಾ ಮಾಡಲಾಗಿದೆ. ಟೀಸರ್ ಕೂಡ ಅದ್ಭುತವಾಗಿ ಮೂಡಿ ಬಂದಿದೆ. ಸದ್ಯದಲ್ಲೇ ಸಿನಿಮಾ ರಿಲೀಸ್ ಬಗ್ಗೆ ಅಪ್‌ಡೇಟ್ ಸಿಗಲಿದೆ.

    ಅಂದಹಾಗೆ, ಇತ್ತೀಚೆಗೆ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್‌ನಲ್ಲಿ ‘ಕಣ್ಣಪ್ಪ’ ಸಿನಿಮಾ ಹಾಡಿನ ಬಿಡುಗಡೆ ಕಾರ್ಯಕ್ರಮ ನಡೆಯಿತು. ತೆಲುಗು ಚಿತ್ರರಂಗದ ಹಿರಿಯ ನಟ ಮೋಹನ್ ಬಾಬು, ನಾಯಕ ನಟ ಮಂಚು ವಿಷ್ಣು, ನಟಿ ಸುಮಲತಾ ಅಂಬರೀಶ್, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ಭಾರತಿ ವಿಷ್ಣುವರ್ಧನ್ ಕೂಡ ಭಾಗಿಯಾಗಿದ್ದರು.

  • ಪ್ರಭಾಸ್ ಫೋಟೋ ವಿರುದ್ಧ ‘ಕಣ್ಣಪ್ಪ’ ಟೀಮ್ ಗರಂ

    ಪ್ರಭಾಸ್ ಫೋಟೋ ವಿರುದ್ಧ ‘ಕಣ್ಣಪ್ಪ’ ಟೀಮ್ ಗರಂ

    ಸಿನಿಮಾ ಶೂಟಿಂಗ್ ವೇಳೆ ಸಾಕಷ್ಟು ಗೌಪ್ಯತೆಯನ್ನು ಕಾಪಾಡಿಕೊಂಡರೂ, ದುರುಳರ ಕಾರಣದಿಂದಾಗಿ ಸಿಕ್ರೇಟ್ ಆಚೆ ಬರುತ್ತಿವೆ. ಕಣ್ಣಪ್ಪ ಸಿನಿಮಾ ಟೀಮ್ ನಲ್ಲೂ ಅಂಥದ್ದೊಂದು ಅಚಾತುರ್ಯ ನಡೆದಿದೆ. ಹಾಗಾಗಿ ಕಣ್ಣಪ್ಪ ಟೀಮ್ ಗರಂ ಆಗಿದೆ. ಈ ಸಿನಿಮಾದಲ್ಲಿ ಪ್ರಭಾಸ್ ನಟಿಸಿದ್ದು, ಪ್ರಭಾಸ್ (Prabhas) ಅವರ ಲುಕ್ ನ ಫೋಟೋವನ್ನು ಲೀಕ್ ಮಾಡಲಾಗಿದೆ. ಲೀಕ್ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೂ ಟೀಮ್ ಮುಂದಾಗಿದೆ.

    ದೊಡ್ಡ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿರುವ ಕಣ್ಣಪ್ಪ (Kannappa)  ಸಿನಿಮಾ ಇದೀಗ ವಿಶೇಷ ಕೈಂಕರ್ಯದಲ್ಲಿ ತೊಡಗಿಸಿಕೊಂಡಿದೆ. ಹಿರಿಯ ನಟ ಮೋಹನ್ ಬಾಬು, ವಿಷ್ಣು ಮಂಚು (Vishnu Manchu) ಮತ್ತು ಕಣ್ಣಪ್ಪ ಸಿನಿಮಾ ತಂಡ, ಕೇದಾರನಾಥ (Kedarnath), ಬದರಿನಾಥ್ ಮತ್ತು ಋಷಿಕೇಶಕ್ಕೆ ಭೇಟಿ ನೀಡಿದ್ದಾರೆ. ಈ ಮೂಲಕ 12 ಜ್ಯೋತಿರ್ಲಿಂಗಗಳ ದರ್ಶನಕ್ಕೆ ಮುಂದಾಗಿದ್ದಾರೆ.

    ನಟ ಮೋಹನ್ ಬಾಬು, ಅವರ ಪುತ್ರ ವಿಷ್ಣು ಮಂಚು, ನಿರ್ಮಾಪಕ ಮುಖೇಶ್ ಕುಮಾರ್ ಮತ್ತು ನಟ ಅರ್ಪಿತ್ ರಂಕಾ ಅವರ ಜತೆಗೆ ಕೇದಾರನಾಥ, ಬದರಿನಾಥ್ ಮತ್ತು ಋಷಿಕೇಶದ ಶಿವನ ದೇವಾಲಯಗಳಿಗೆ ಭೇಟಿ ನೀಡಿ, ಆಧ್ಯಾತ್ಮಿಕ ಯಾತ್ರೆಯನ್ನು ಕೈಗೊಂಡರು. ಭವ್ಯವಾದ ಹಿಮಾಲಯದ ನಡುವೆ ನೆಲೆಸಿರುವ ಶಿವನಿಗೆ ಸಮರ್ಪಿತವಾದ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥಕ್ಕೆ ತಂಡವು ಭೇಟಿ ನೀಡಿತು. ಬಳಿಕ ಬದರಿನಾಥದಲ್ಲಿ ಪ್ರಾರ್ಥನೆ ಸಲ್ಲಿಸಿ, ಋಷಿಕೇಶಕ್ಕೆ ಭೇಟಿ ನೀಡಿದರು.

    ಈ ಯಾತ್ರೆಯ ಬಗ್ಗೆ ಮಾತನಾಡಿರುವ ವಿಷ್ಣು ಮಂಚು, “ಕಣ್ಣಪ್ಪ ಸಿನಿಮಾ ಬಿಡುಗಡೆಗೂ ಮುನ್ನ ಎಲ್ಲ 12 ಜ್ಯೋತಿರ್ಲಿಂಗ ಪುಣ್ಯ ಕ್ಷೇತ್ರಗಳಿಗೆ ತೆರಳುವುದು ನಮ್ಮ ಗುರಿ. ಅದರಂತೆ ಮೊದಲಿಗೆ  ಕೇದಾರನಾಥನ ದರ್ಶನ ಪಡೆದಿದ್ದೇವೆ. ಮುಂಬರುವ ದಿನಗಳಲ್ಲಿ ಇನ್ನುಳಿದ 10 ಜ್ಯೋತಿರ್ಲಿಂಗಗಳನ್ನು ದರ್ಶನ ಮಾಡಲಿದ್ದೇವೆ. ಅದೇ ರೀತಿ ಶೀಘ್ರದಲ್ಲಿಯೇ ಈ ನಮ್ಮ ಸಿನಿಮಾ ರಿಲೀಸ್‌ ಆಗಲಿದೆ. ದಿ ಲಾರ್ಡ್ ಆಫ್ ದಿ ರಿಂಗ್ಸ್‌ನಂತಹ ಮಹಾಕಾವ್ಯ ಕಥೆಗಳಿಂದ ಸ್ಫೂರ್ತಿ ಪಡೆದ ಈ ಸಿನಿಮಾ, ದೃಶ್ಯವೈಭವದ ಮೂಲಕವೇ ಎಲ್ಲರನ್ನು ಬೆರಗುಗೊಳಿಸುತ್ತದೆ. ಹೆಸರಾಂತ ಹಾಲಿವುಡ್ ಛಾಯಾಗ್ರಾಹಕ ಶೆಲ್ಡನ್ ಚೌ ಅವರು ನ್ಯೂಜಿಲೆಂಡ್‌ನ ರಮಣೀಯ ಪ್ರದೇಶಗಳಲ್ಲಿ ದೃಶ್ಯಗಳನ್ನು ಸೆರೆಹಿಡಿದಿದ್ದಾರೆ.

     

    ಮುಖೇಶ್‌ ಕುಮಾರ್‌ ಸಿಂಗ್‌ ನಿರ್ದೇಶನದ ಈ ಚಿತ್ರದಲ್ಲಿ ಮೋಹನ್‌ಲಾಲ್, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಬಾಬು ಶರತ್‌ಕುಮಾರ್, ಬ್ರಹ್ಮಾನಂದಂ ಮತ್ತು ಕಾಜಲ್ ಅಗರ್ವಾಲ್ ಸೇರಿದಂತೆ ದೊಡ್ಡ ತಾರಾಗಣವಿದೆ. 24 ಫ್ರೇಮ್ಸ್ ಫ್ಯಾಕ್ಟರಿ ಮತ್ತು ಎವಿಎ ಎಂಟರ್‌ಟೈನ್‌ಮೆಂಟ್ ಬ್ಯಾನರ್‌ನಲ್ಲಿ ಕಣ್ಣಪ್ಪ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ಬಿಗ್‌ಬಜೆಟ್‌ನ ಈ ಸಿನಿಮಾದ ಬಹುಪಾಲು ಚಿತ್ರೀಕರಣವನ್ನು ನ್ಯೂಜಿಲೆಂಡ್‌ನಲ್ಲಿ ಶೂಟ್‌ ಮಾಡಲಾಗಿದೆ.

  • ಕೇದಾರನಾಥನ ಸನ್ನಿಧಾನದಲ್ಲಿ ‘ಕಣ್ಣಪ್ಪ’ ಸಿನಿಮಾ ಟೀಮ್

    ಕೇದಾರನಾಥನ ಸನ್ನಿಧಾನದಲ್ಲಿ ‘ಕಣ್ಣಪ್ಪ’ ಸಿನಿಮಾ ಟೀಮ್

    ದೊಡ್ಡ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿರುವ ಕಣ್ಣಪ್ಪ (Kannappa)  ಸಿನಿಮಾ ಇದೀಗ ವಿಶೇಷ ಕೈಂಕರ್ಯದಲ್ಲಿ ತೊಡಗಿಸಿಕೊಂಡಿದೆ. ಹಿರಿಯ ನಟ ಮೋಹನ್ ಬಾಬು, ವಿಷ್ಣು ಮಂಚು (Vishnu Manchu) ಮತ್ತು ಕಣ್ಣಪ್ಪ ಸಿನಿಮಾ ತಂಡ, ಕೇದಾರನಾಥ (Kedarnath), ಬದರಿನಾಥ್ ಮತ್ತು ಋಷಿಕೇಶಕ್ಕೆ ಭೇಟಿ ನೀಡಿದ್ದಾರೆ. ಈ ಮೂಲಕ 12 ಜ್ಯೋತಿರ್ಲಿಂಗಗಳ ದರ್ಶನಕ್ಕೆ ಮುಂದಾಗಿದ್ದಾರೆ.

    ನಟ ಮೋಹನ್ ಬಾಬು, ಅವರ ಪುತ್ರ ವಿಷ್ಣು ಮಂಚು, ನಿರ್ಮಾಪಕ ಮುಖೇಶ್ ಕುಮಾರ್ ಮತ್ತು ನಟ ಅರ್ಪಿತ್ ರಂಕಾ ಅವರ ಜತೆಗೆ ಕೇದಾರನಾಥ, ಬದರಿನಾಥ್ ಮತ್ತು ಋಷಿಕೇಶದ ಶಿವನ ದೇವಾಲಯಗಳಿಗೆ ಭೇಟಿ ನೀಡಿ, ಆಧ್ಯಾತ್ಮಿಕ ಯಾತ್ರೆಯನ್ನು ಕೈಗೊಂಡರು. ಭವ್ಯವಾದ ಹಿಮಾಲಯದ ನಡುವೆ ನೆಲೆಸಿರುವ ಶಿವನಿಗೆ ಸಮರ್ಪಿತವಾದ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥಕ್ಕೆ ತಂಡವು ಭೇಟಿ ನೀಡಿತು. ಬಳಿಕ ಬದರಿನಾಥದಲ್ಲಿ ಪ್ರಾರ್ಥನೆ ಸಲ್ಲಿಸಿ, ಋಷಿಕೇಶಕ್ಕೆ ಭೇಟಿ ನೀಡಿದರು.

    ಈ ಯಾತ್ರೆಯ ಬಗ್ಗೆ ಮಾತನಾಡಿರುವ ವಿಷ್ಣು ಮಂಚು, “ಕಣ್ಣಪ್ಪ ಸಿನಿಮಾ ಬಿಡುಗಡೆಗೂ ಮುನ್ನ ಎಲ್ಲ 12 ಜ್ಯೋತಿರ್ಲಿಂಗ ಪುಣ್ಯ ಕ್ಷೇತ್ರಗಳಿಗೆ ತೆರಳುವುದು ನಮ್ಮ ಗುರಿ. ಅದರಂತೆ ಮೊದಲಿಗೆ  ಕೇದಾರನಾಥನ ದರ್ಶನ ಪಡೆದಿದ್ದೇವೆ. ಮುಂಬರುವ ದಿನಗಳಲ್ಲಿ ಇನ್ನುಳಿದ 10 ಜ್ಯೋತಿರ್ಲಿಂಗಗಳನ್ನು ದರ್ಶನ ಮಾಡಲಿದ್ದೇವೆ. ಅದೇ ರೀತಿ ಶೀಘ್ರದಲ್ಲಿಯೇ ಈ ನಮ್ಮ ಸಿನಿಮಾ ರಿಲೀಸ್‌ ಆಗಲಿದೆ.

    ದಿ ಲಾರ್ಡ್ ಆಫ್ ದಿ ರಿಂಗ್ಸ್‌ನಂತಹ ಮಹಾಕಾವ್ಯ ಕಥೆಗಳಿಂದ ಸ್ಫೂರ್ತಿ ಪಡೆದ ಈ ಸಿನಿಮಾ, ದೃಶ್ಯವೈಭವದ ಮೂಲಕವೇ ಎಲ್ಲರನ್ನು ಬೆರಗುಗೊಳಿಸುತ್ತದೆ. ಹೆಸರಾಂತ ಹಾಲಿವುಡ್ ಛಾಯಾಗ್ರಾಹಕ ಶೆಲ್ಡನ್ ಚೌ ಅವರು ನ್ಯೂಜಿಲೆಂಡ್‌ನ ರಮಣೀಯ ಪ್ರದೇಶಗಳಲ್ಲಿ ದೃಶ್ಯಗಳನ್ನು ಸೆರೆಹಿಡಿದಿದ್ದಾರೆ.

    ಮುಖೇಶ್‌ ಕುಮಾರ್‌ ಸಿಂಗ್‌ ನಿರ್ದೇಶನದ ಈ ಚಿತ್ರದಲ್ಲಿ ಮೋಹನ್‌ಲಾಲ್, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಬಾಬು ಶರತ್‌ಕುಮಾರ್, ಬ್ರಹ್ಮಾನಂದಂ ಮತ್ತು ಕಾಜಲ್ ಅಗರ್ವಾಲ್ ಸೇರಿದಂತೆ ದೊಡ್ಡ ತಾರಾಗಣವಿದೆ. 24 ಫ್ರೇಮ್ಸ್ ಫ್ಯಾಕ್ಟರಿ ಮತ್ತು ಎವಿಎ ಎಂಟರ್‌ಟೈನ್‌ಮೆಂಟ್ ಬ್ಯಾನರ್‌ನಲ್ಲಿ ಕಣ್ಣಪ್ಪ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ಬಿಗ್‌ಬಜೆಟ್‌ನ ಈ ಸಿನಿಮಾದ ಬಹುಪಾಲು ಚಿತ್ರೀಕರಣವನ್ನು ನ್ಯೂಜಿಲೆಂಡ್‌ನಲ್ಲಿ ಶೂಟ್‌ ಮಾಡಲಾಗಿದೆ.

  • ವಿಷ್ಣು ಮಂಚು ನಟನೆಯ ‘ಕಣ್ಣಪ್ಪ ಚಿತ್ರದಲ್ಲಿ ಮಧುಬಾಲ- ಫಸ್ಟ್ ಲುಕ್ ರಿಲೀಸ್‌

    ವಿಷ್ಣು ಮಂಚು ನಟನೆಯ ‘ಕಣ್ಣಪ್ಪ ಚಿತ್ರದಲ್ಲಿ ಮಧುಬಾಲ- ಫಸ್ಟ್ ಲುಕ್ ರಿಲೀಸ್‌

    ಪಾತ್ರವರ್ಗದ ವಿಚಾರವಾಗಿಯೇ ಸಾಕಷ್ಟು ಸದ್ದು ಮಾಡುತ್ತಿದೆ ಟಾಲಿವುಡ್‌ನ ‘ಕಣ್ಣಪ್ಪ’ (Kanappa) ಸಿನಿಮಾ. ಈಗಾಗಲೇ ಸರಣಿ ಸ್ಟಾರ್ ಕಲಾವಿದರನ್ನೇ ಒಳಗೊಂಡಿರುವ ಕಣ್ಣಪ್ಪ ಸಿನಿಮಾ ಸದ್ಯ ಶೂಟಿಂಗ್ ಜೊತೆಗೆ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನೂ ಮುಂದುವರಿಸಿದೆ. ಜೊತೆಗೆ ಈಗಾಗಲೇ ಬಿಡುಗಡೆ ಆಗಿರುವ ಟೀಸರ್ ಸಹ ನೋಡುಗರ ಹುಬ್ಬೇರಿಸಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾದಲ್ಲಿ ವಿಷ್ಣು ಮಂಚು (Vishnu Manchu) ಕಣ್ಣಪ್ಪನಾಗಿ ತಮ್ಮ ಖದರ್ ತೋರಿಸಲಿದ್ದಾರೆ. ಇದೀಗ ಇದೇ ಸಿನಿಮಾದಲ್ಲಿ ನಟಿಸುತ್ತಿರುವ ನಟಿ ಮಧುಬಾಲ ಅವರ ಲುಕ್ ಅನಾವರಣ ಮಾಡಲಾಗಿದೆ.

    ನಟಿ ಮಧುಬಾಲಾ (Madhubala) ಕಣ್ಣಪ್ಪ ಸಿನಿಮಾದಲ್ಲಿ ನಟಿಸಿದ್ದಾರೆ ಎಂಬುದು ಈ ಹಿಂದೆಯೇ ಗೊತ್ತಿದ್ದ ವಿಚಾರ. ಆದರೆ, ಅವರ ಪಾತ್ರ ಹೇಗಿರಲಿದೆ ಎಂಬ ಬಗ್ಗೆ ಈ ವರೆಗೂ ಚಿತ್ರತಂಡ ಸುಳಿವು ಬಿಟ್ಟುಕೊಟ್ಟಿರಲಿಲ್ಲ. ಇದೀಗ ಮಧುಬಾಲ ಅವರ ಪಾತ್ರ ಪರಿಚಯದ ಫಸ್ಟ್ ಲುಕ್ ರಿಲೀಸ್ ಆಗಿದೆ. ಕಣ್ಣಪ್ಪ ಚಿತ್ರದಲ್ಲಿ ಪನ್ನಗ ಹೆಸರಿನ ಖಡಕ್ ಪಾತ್ರದಲ್ಲಿ ಮಧುಬಾಲ ಮಿಂಚು ಹರಿಸಲಿದ್ದಾರೆ. ಕೈಯಲ್ಲಿ ಕತ್ತಿ ಹಿಡಿದು ಶತ್ರುಗಳ ಸಂಹಾರಕ್ಕೆ ನಿಂತಂತಿದೆ ಮಧುಬಾಲಾ ಅವರ ಫಸ್ಟ್ ಲುಕ್.

    ಬೇಡ ಕುಲದ ನಾಯಕಿಯಾಗಿ ಮಧುಬಾಲಾ ಅವರ ಪಾತ್ರ ಕಣ್ಣಪ್ಪ ಚಿತ್ರದಲ್ಲಿ ಸಾಗಲಿದೆ. ತಮ್ಮ ಸಮುದಾಯದ ನಾಯಕಿ ಮಾತ್ರವಲ್ಲ, ಹೋರಾಟದಲ್ಲಿಯೂ ದಿಟ್ಟೆ, ಧೀರೆ. ಅಂದುಕೊಂಡಂತೆ ಮಧುಬಾಲ ಅವರ ಪಾತ್ರ ಮೂಡಿಬಂದಿದ್ದು, ನೋಡುಗರಿಗೆ ಇಷ್ಟವಾಗಲಿದೆ ಎಂಬುದು ಚಿತ್ರತಂಡ ಭರವಸೆಯ ಮಾತುಗಳು. ಇನ್ನು ಈಗಾಗಲೇ ಕಣ್ಣಪ್ಪ ಚಿತ್ರದ ಟೀಸರ್ ಜಾಗತಿಕ ಮಟ್ಟದಲ್ಲಿಯೂ ಕ್ರೇಜ್ ಸೃಷ್ಟಿಸಿದೆ. ಇತ್ತೀಚಿನ ಕಾನ್ ಸಿನಿಮೋತ್ಸವದಲ್ಲಿ ಈ ಚಿತ್ರದ ಟೀಸರ್ ಬಿಡುಗಡೆಯಾಗಿ, ಜಾಗತಿಕ ಪ್ರೇಕ್ಷಕರ ಗಮನ ಸೆಳೆದಿತ್ತು. ಇದನ್ನೂ ಓದಿ:ಶ್ರೀವಲ್ಲಿ ಫ್ಯಾನ್ಸ್‌ಗೆ ಗುಡ್ ನ್ಯೂಸ್- ಕಿರುತೆರೆಗೆ ಎಂಟ್ರಿ ಕೊಟ್ಟ ರಶ್ಮಿಕಾ ಮಂದಣ್ಣ

    ಕಣ್ಣಪ್ಪ ಸಿನಿಮಾ ಬರೀ ಇತಿಹಾಸವಲ್ಲ, ಇದು ಎರಡನೇ ಶತಮಾನದ ಚೋಳರ ಕಾಲದ ಕಥೆ ಎಂದು ಶಂಕರಾಚಾರ್ಯರು ಹೇಳಿದ್ದರು. 14 ನೇ ಶತಮಾನದಲ್ಲಿ ಕವಿ ಧೂರ್ಜಟಿ ಈ ಬಗ್ಗೆ ಬರೆದಿದ್ದಾರೆ. 18ನೇ ಶತಮಾನದಲ್ಲಿ ಬ್ರಿಟಿಷರೂ ಇಂಗ್ಲಿಷ್‌ನಲ್ಲಿ ಇದನ್ನು ಉಲ್ಲೇಖಿಸಿದ್ದಾರೆ. ಇದೆಲ್ಲವನ್ನು ಅಧ್ಯಯನ ನಡೆಸಿ ಈ ಸಿನಿಮಾ ಮಾಡಲಾಗಿದೆ ಎಂದು ಟೀಸರ್ ಬಿಡುಗಡೆ ಸಂದರ್ಭದಲ್ಲಿ ವಿಷ್ಣು ಮಂಚು ಹೇಳಿಕೊಂಡಿದ್ದರು. ಹಾಗಾಗಿಯೇ ಕುತೂಹಲ ದುಪ್ಪಟ್ಟಾಗಿದೆ.

    ಚಿತ್ರದಲ್ಲಿ ಮೋಹನ್ ಬಾಬು, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್, ಶರತ್‌ಕುಮಾರ್, ಮಧುಬಾಲ, ಕಾಜಲ್ ಅಗರ್‌ವಾಲ್ ಸೇರಿ ಬಹು ತಾರಾಗಣವೇ ಇದೆ. ಮಗನ ಚಿತ್ರವನ್ನು ಸ್ವತಃ ತಂದೆ ಮೋಹನ್ ಬಾಬು ನಿರ್ಮಿಸುತ್ತಿರುವ ಈ ಚಿತ್ರವನ್ನು ಮುಖೇಶ್ ಕುಮಾರ್ ಸಿಂಗ್ ನಿರ್ದೇಶನ ಮಾಡುತ್ತಿದ್ದಾರೆ. ತೆಲುಗು ಮಾತ್ರವಲ್ಲದೆ, ತಮಿಳು, ಕನ್ನಡ, ಮಲಯಾಳಂ, ಹಿಂದಿ ಸೇರಿ ಇನ್ನೂ ಹಲವು ಭಾರತೀಯ ಭಾಷೆಗಳಿಗೂ ಈ ಚಿತ್ರ ಡಬ್ ಆಗಿ ರಿಲೀಸ್ ಆಗಲಿದೆ. ಡಿಸೆಂಬರ್‌ನಲ್ಲಿ ‘ಕಣ್ಣಪ್ಪ’ ಚಿತ್ರವನ್ನು ವಿಶ್ವದಾದ್ಯಂತ ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಿದ್ದಾರೆ.

    ಎವಿಎ ಎಂಟರ್‌ಟೈನ್‌ಮೆಂಟ್ಸ್ ಮತ್ತು 24 ಫ್ರೇಮ್ಸ್ ಫ್ಯಾಕ್ಟರಿ ಬ್ಯಾನರ್‌ಗಳಲ್ಲಿ ನೂರಾರು ಕೋಟಿ ಬಜೆಟ್‌ನಲ್ಲಿ ದೊಡ್ಡ ಕ್ಯಾನ್ವಾಸ್‌ನೊಂದಿಗೆ ಮೂಡಿಬರುತ್ತಿರುವ ಈ ಸಿನಿಮಾದ ಶೂಟಿಂಗ್ ಬಹುತೇಕ ಮುಗಿದಿದ್ದು, ವಿಎಫ್‌ಎಕ್ಸ್ ಕೆಲಸಕ್ಕೆ ಇಡೀ ತಂಡ ಹೆಚ್ಚಿನ ಶ್ರಮ ಹಾಕುತ್ತಿದೆ.

  • ‘ಕಣ್ಣಪ್ಪ’ ಚಿತ್ರದ ಟೀಸರ್ ಬಿಡುಗಡೆ: ವಿಷ್ಣು ಮಂಚು ಸಿನಿಮಾದ ನಾಯಕ

    ‘ಕಣ್ಣಪ್ಪ’ ಚಿತ್ರದ ಟೀಸರ್ ಬಿಡುಗಡೆ: ವಿಷ್ಣು ಮಂಚು ಸಿನಿಮಾದ ನಾಯಕ

    ವಿಷ್ಣು ಮಂಚು (Vishnu Manchu) ಅವರ ಕನಸಿನ ಯೋಜನೆಯಾದ ‘ಕಣ್ಣಪ್ಪ’ (Kannappa) ಎವಿಎ ಎಂಟರ್‌ಟೈನ್‌ಮೆಂಟ್ಸ್ ಮತ್ತು 24 ಫ್ರೇಮ್ಸ್ ಫ್ಯಾಕ್ಟರಿ ಬ್ಯಾನರ್‌ಗಳಲ್ಲಿ ಅದ್ಧೂರಿಯಾಗಿ ಚಿತ್ರೀಕರಣಗೊಳ್ಳುತ್ತಿದೆ. ಈ ಚಿತ್ರವನ್ನು ಡಾ.ಮೋಹನ್ ಬಾಬು ನಿರ್ಮಿಸಿದ್ದಾರೆ ಮತ್ತು ಮುಖೇಶ್ ಕುಮಾರ್ ಸಿಂಗ್ ನಿರ್ದೇಶಿಸಿದ್ದಾರೆ. ಶುಕ್ರವಾರ ಈ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಟೀಸರ್‌ ಲಾಂಚ್ ಕಾರ್ಯಕ್ರಮವನ್ನು ಅಷ್ಟೇ ಅದ್ಧೂರಿಯಾಗಿ ಚಿತ್ರತಂಡ ಆಯೋಜಿಸಲಾಗಿತ್ತು.

    ಟೀಸರ್‌ ಲಾಂಚ್‌ ವೇಳೆ ಮಾತನಾಡಿದ ಮೋಹನ್ ಬಾಬು, ಪರಮೇಶ್ವರನ ಒಪ್ಪಿಗೆಯ ಮೇರೆಗೆ ನಾವು ಈ ಕಣ್ಣಪ್ಪ ಸಿನಿಮಾ ಮಾಡಿದ್ದೇವೆ. ಅಚ್ಚು ಕಟ್ಟಾಗಿ ಸಿನಿಮಾ ಮೂಡಿ ಬಂದಿದೆ. ಬಹುಭಾಷೆಯ ತಾರೆಯರು ನಮ್ಮ ಸಿನಿಮಾದಲ್ಲಿ ನಟಿಸಿದ್ದಾರೆ. ಅದ್ಧೂರಿಯಾಗಿ ಈ ಸಿನಿಮಾ ನಿರ್ಮಾಣ ಮಾಡಿದ್ದೇನೆ. ಇಡೀ ತಂಡಕ್ಕೆ ನಿಮ್ಮೆಲ್ಲರ ಆಶೀರ್ವಾದವಿರಲಿ ಎಂದರು.

    “ಮೊದಲ ದಿನದಿಂದ ಇಲ್ಲಿಯವರೆಗೆ ‘ಕಣ್ಣಪ್ಪ’ ಚಿತ್ರವನ್ನು ಪ್ರತಿಯೊಬ್ಬ ಪ್ರೇಕ್ಷಕ ಕುತೂಹಲದಿಂದಲೇ ನೋಡುತ್ತಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾಕ್ಕೆ ಸಿಗುತ್ತಿರುವ ಬೆಂಬಲ ನೋಡಿದ್ದೇನೆ. ಇದೀಗ ಆ ಕನಸು ನಿಮ್ಮೆಲ್ಲರ ಮುಂದೆ ತೆರೆದಿಡುವ ಹಂತಕ್ಕೆ ಬಂದಿದೆ. ಕಣ್ಣಪ್ಪ ಸಿನಿಮಾ ಪಯಣ 2014 -15ರಲ್ಲಿ ಶುರುವಾಗಿತ್ತು. ತಂದೆ ಮೋಹನ್ ಬಾಬು, ವಿನ್ನಿ ಮತ್ತು ಸಹೋದರ ವಿನಯ್ ಅವರ ಪ್ರೋತ್ಸಾಹದಿಂದಾಗಿ ಇದೀಗ ಅದು ಸಿದ್ಧವಾಗುತ್ತಿದೆ.  “ಕಣ್ಣಪ್ಪ ಸಿನಿಮಾ ಬರೀ ಇತಿಹಾಸವಲ್ಲ, ಇದು ಎರಡನೇ ಶತಮಾನದ ಚೋಳರ ಕಾಲದ ಕಥೆ ಎಂದು ಶಂಕರಾಚಾರ್ಯರು ಹೇಳಿದ್ದರು. 14 ನೇ ಶತಮಾನದಲ್ಲಿ ಕವಿ ಧೂರ್ಜಟಿ ಈ ಬಗ್ಗೆ ಬರೆದಿದ್ದಾರೆ. 18ನೇ ಶತಮಾನದಲ್ಲಿ ಬ್ರಿಟಿಷರೂ ಇಂಗ್ಲಿಷ್‌ನಲ್ಲಿ ಇದನ್ನು ಉಲ್ಲೇಖಿಸಿದ್ದಾರೆ. ಇದೆಲ್ಲವನ್ನು ಅಧ್ಯಯನ ನಡೆಸಿ ಈ ಸಿನಿಮಾ ಮಾಡಿದ್ದೇವೆ. ಅಷ್ಟೇ ಎಚ್ಚರಿಕೆಯಿಂದ ಈ ಸಿನಿಮಾ ಮಾಡಿದ್ದೇವೆ” ಎಂದರು ವಿಷ್ಣು ಮಂಚು.

    ನಿರ್ದೇಶಕ ಮುಕೇಶ್ ಕುಮಾರ್ ಸಿಂಗ್ ಮಾತನಾಡಿ, ಕಣ್ಣಪ್ಪ ಚಿತ್ರದ ನನ್ನ ಶಕ್ತಿಯೇ ನನ್ನ ಕಲಾವಿದರು. ವಿಷ್ಣು ಅವರ ನಟನೆ ಮತ್ತು ಅವರು ಎದುರಿಸಿದ ಕಷ್ಟಗಳ ಬಗ್ಗೆ ನಾನು ಹೇಳಲಾರೆ. ಕೊರೆಯುವ ಚಳಿಯಲ್ಲೂ ಇಡೀ ತಂಡ ಶ್ರಮಿಸಿದೆ. ವಿಷ್ಣು, ಶರತ್ ಕುಮಾರ್, ಮೋಹನ್ ಬಾಬು ನನ್ನ ನಿರೀಕ್ಷೆಗೂ ಮೀರಿದ ಬೆಂಬಲ ನೀಡಿದ್ದಾರೆ ಎಂದರು. ಶರತ್ ಕುಮಾರ್, ಕಣ್ಣಪ್ಪ ಕೇವಲ ಸಿನಿಮಾ ಅಲ್ಲ; ಇದು ನಮ್ಮ ಇತಿಹಾಸ. ಪ್ರತಿಯೊಬ್ಬರೂ ತಮ್ಮ ತಮ್ಮ ಪಾತ್ರಗಳನ್ನು ಜೀವಿಸಿದ್ದಾರೆ. ಈಗಲೂ ನಾವು ಆ ಪಾತ್ರಗಳಲ್ಲಿ ಉಳಿದಿದ್ದೇವೆ. ಅಷ್ಟೊಂದು ಅಚ್ಚುಕಟ್ಟಾಗಿ ಸಿನಿಮಾ ಮೂಡಿಬಂದಿದೆ. ಎಲ್ಲರೂ ಇತಿಹಾಸವನ್ನು ಮರೆಯುತ್ತಿದ್ದಾರೆ. ನಾವು ನಮ್ಮ ಇತಿಹಾಸವನ್ನು ಹೇಳಬೇಕು. ಎಲ್ಲರೂ ಕಣ್ಣಪ್ಪನನ್ನು ನೋಡಬೇಕು” ಎಂದು ಹೇಳಿದರು.

    ಮಧುಬಾಲಾ ಮಾತನಾಡಿ, “ಕಣ್ಣಪ್ಪನಂಥ ಪ್ರಾಜೆಕ್ಟ್‌ನಲ್ಲಿ ನಟಿಸಲು ನನಗೆ ಸಂತೋಷ ಮತ್ತು ಹೆಮ್ಮೆ ಇದೆ. ನನಗೆ ಇಂತಹ ಒಳ್ಳೆಯ ಅವಕಾಶ ನೀಡಿದ ಮೋಹನ್ ಬಾಬು ಮತ್ತು ವಿಷ್ಣು ಅವರಿಗೆ ಧನ್ಯವಾದಗಳು. ವಿಷ್ಣು ಮಂಚು ಅವರಿಗೆ ಸಿನಿಮಾ ನಿರ್ಮಾಣದಲ್ಲಿ ಸಾಕಷ್ಟು ಜ್ಞಾನವಿದೆ. ವಿಷ್ಣು ಅವರಂತಹವರು ಈ ಸಿನಿಮಾ ಮೂಲಕ ದೊಡ್ಡ ರಿಸ್ಕ್‌ ತೆಗೆದುಕೊಂಡಿದ್ದಾರೆ. ಒಂದು ದೊಡ್ಡ ಯಜ್ಞದಲ್ಲಿ ಪಾಲ್ಗೊಂಡಂತೆ ಭಾಸವಾಯಿತು” ಎಂದಿದ್ದಾರೆ. ಕಣ್ಣಪ್ಪ ಚಿತ್ರದಲ್ಲಿ ಅವಕಾಶ ನೀಡಿದ ಮೋಹನ್ ಬಾಬು, ವಿಷ್ಣು, ಮತ್ತು ಮುಖೇಶ್ ಸಿಂಗ್ ಅವರಿಗೆ ಧನ್ಯವಾದ. ಎಲ್ಲರೂ ಈ ಚಿತ್ರಕ್ಕೆ ತಮ್ಮ ಕೈಲಾದಷ್ಟು ಕೊಟ್ಟಿದ್ದಾರೆ. ಚಿತ್ರ ಎಲ್ಲರಿಗೂ ಇಷ್ಟವಾಗುತ್ತದೆ ಎಂದು ಭಾವಿಸುತ್ತೇನೆ ಎಂದರು ಪ್ರೀತಿ ಮುಖುಂದನ್.

  • ರೇವ್‌ ಪಾರ್ಟಿ ಪ್ರಕರಣ: ತೆಲುಗು ನಟಿ ಹೇಮಾ ಪರ ನಿಂತ ವಿಷ್ಣು ಮಂಚು

    ರೇವ್‌ ಪಾರ್ಟಿ ಪ್ರಕರಣ: ತೆಲುಗು ನಟಿ ಹೇಮಾ ಪರ ನಿಂತ ವಿಷ್ಣು ಮಂಚು

    ಚಿತ್ರರಂಗದಲ್ಲಿ ರೇವ್ ಪಾರ್ಟಿ (Rave Party) ಪ್ರಕರಣದ ಬಗ್ಗೆ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಬಳಿ ಫಾರ್ಮ್ ಹೌಸ್‌ನಲ್ಲಿ ರೇವ್ ಪಾರ್ಟಿಯಲ್ಲಿ ಸೇರಿದ್ದ ಅನೇಕರನ್ನು ಸಿಸಿಬಿ ವಶಕ್ಕೆ ಪಡೆದುಕೊಂಡಿದ್ದರು. ರೇವ್ ಪಾರ್ಟಿಯಲ್ಲಿ ಹೇಮಾ (Actress Hema) ಕೂಡ ಇದ್ದರು ಎಂದು ಪೊಲೀಸ್ ಕಮಿಷನರ್ ಕೂಡ ಸ್ಪಷ್ಟನೆ ನೀಡಿದ್ದರು. ತನಿಖೆ ಕೂಡ ಬಿರುಸಿನಿಂದ ನಡೆಯುತ್ತಿದೆ. ಇದರ ನಡುವೆ ನಟಿ ಹೇಮಾ ಪರವಾಗಿ ತೆಲುಗು ಕಲಾವಿದರ ಸಂಘದ ಅಧ್ಯಕ್ಷ ವಿಷ್ಣು ಮಂಚು (Vishnu Manchu) ನಿಂತಿದ್ದಾರೆ. ಇದನ್ನೂ ಓದಿ:‘ಮಾರ್ಟಿನ್’ ಬೆನ್ನಲ್ಲೇ ‘ಕೆಡಿ’ ಚಿತ್ರದ ಬಗ್ಗೆ ಸಿಹಿಸುದ್ದಿ ಕೊಟ್ಟ ಧ್ರುವ ಸರ್ಜಾ

    ಹೇಮಾರನ್ನು ಬೆಂಬಲಿಸಿ ಎಕ್ಸ್‌ನಲ್ಲಿ ವಿಷ್ಣು ಮಂಚು ಪೋಸ್ಟ್‌ವೊಂದು ಶೇರ್ ಮಾಡಿದ್ದಾರೆ. ಇತ್ತೀಚೆಗೆ ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಬಳಕೆಯಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ಮಾಧ್ಯಮಗಳು ನಟಿ ಹೇಮಾ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಿವೆ. ಯಾರೂ ಸಹ ಈಗಲೇ ನಿರ್ಧಾರಕ್ಕೆ ಬಂದು ಸತ್ಯವಲ್ಲದ ವರದಿಗಳನ್ನು ಇತರರಿಗೆ ಹಂಚಿಕೊಳ್ಳುವುದು ಬೇಡ ಎಂದು ನಾನು ಮನವಿ ಮಾಡಿದ್ದಾರೆ.

    ‘ಹೇಮಾ ಮೇಲಿನ ಆರೋಪಗಳು ಸಾಬೀತಾಗುವವರೆಗೂ ಅವರು ನಿರಪರಾಧಿ. ಆಕೆ ಒಬ್ಬ ತಾಯಿ, ಹೆಂಡತಿ ಹಾಗೂ ಮಹಿಳೆ ಅದರ ಬಗ್ಗೆಯೂ ನಾವು ಯೋಚಿಸಬೇಕಿದೆ. ಆಕೆಯ ವ್ಯಕ್ತಿತ್ವದ ಬಗ್ಗೆ ಕೆಲ ಹೇಳಿಕೆಗಳನ್ನು ಪಾಸ್ ಮಾಡುವುದು ಸೂಕ್ತವಲ್ಲ. ಮೂವಿ ಆರ್ಟಿಸ್ಟ್ ಅಸೋಸಿಯೇಷನ್ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳನ್ನು ವಿರೋಧಿಸುತ್ತದೆ. ಹೇಮಾ ಅವರ ವಿರುದ್ಧ ಪೊಲೀಸರು ಘನವಾದ ಸಾಕ್ಷಿಯನ್ನು ಸಾಭೀತುಪಡಿಸಿದರೆ ಕಲಾವಿದರ ಸಂಘವು ಹೇಮಾ ವಿರುದ್ಧ ಶಿಸ್ತು ಕ್ರಮವನ್ನು ಜರುಗಿಸಲಿದೆ. ಆದರೆ ಅಲ್ಲಿಯವರೆಗೆ ದಯವಿಟ್ಟು ಈ ವಿಷಯದ ಬಗ್ಗೆ ಚರ್ಚೆ ಬೇಡ ಎಂದಿದ್ದಾರೆ. ಈ ಮೂಲಕ ನಟಿ ಹೇಮಾ ಪರವಾಗಿ ವಿಷ್ಣು ಮಂಚು ಬೆಂಬಲಕ್ಕೆ ನಿಂತಿದ್ದಾರೆ.

    ಅಂದಹಾಗೆ, ಹೇಮಾ ಸುಮಾರು 250 ಚಿತ್ರಗಳಲ್ಲಿ ನಟಿಸಿದ್ದಾರೆ. ಸ್ಟಾರ್ ನಟರ ಚಿತ್ರಗಳಲ್ಲಿ ಖಾಯಂ ಪೋಷಕ ನಟಿಯಾಗಿ ಹೇಮಾ ಕೆಲಸ ಮಾಡಿದ್ದಾರೆ. ಕನ್ನಡದಲ್ಲೂ ಆಕ್ಟ್ ಮಾಡಿದ್ದ ಹೇಮಾ 2014ರಲ್ಲಿ ಪುನೀತ್ ರಾಜ್‌ಕುಮಾರ್ ನಟನೆಯ ‘ಪವರ್’ ಚಿತ್ರದಲ್ಲೂ ಕಾಣಿಸಿಕೊಂಡಿದ್ದರು. ವಿನಯ ವಿಧೇಯ ರಾಮ, ಸನ್ ಆಫ್ ಸತ್ಯಮೂರ್ತಿ, ಡಿಕ್ಟೇಟರ್, ಅತ್ತಾರಿಂಟಿಕಿ ದಾರೇದಿ, ಮಿರ್ಚಿ, ರಭಸ, ಬೃಂದಾವನಂ, ರೆಬೆಲ್, ಜುಲಾಯ್, ಮಗಧೀರ ಸೇರಿ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ.

  • ‘ಕಣ್ಣಪ್ಪ’ ಚಿತ್ರಕ್ಕೆ ಕಾಜಲ್ ಭರ್ಜರಿ ಎಂಟ್ರಿ

    ‘ಕಣ್ಣಪ್ಪ’ ಚಿತ್ರಕ್ಕೆ ಕಾಜಲ್ ಭರ್ಜರಿ ಎಂಟ್ರಿ

    ಪಾತ್ರವರ್ಗದ ವಿಚಾರವಾಗಿಯೇ ಸಾಕಷ್ಟು ಸದ್ದು ಮಾಡುತ್ತಿದೆ ತೆಲುಗಿನ ಕಣ್ಣಪ್ಪ (Kannappa) ಸಿನಿಮಾ. ಆಗೊಬ್ಬರು ಈಗೊಬ್ಬರು ಈ ಚಿತ್ರದ ತಾರಾಬಳಗ ಸೇರಿಕೊಳ್ಳುತ್ತಲೇ ಇದ್ದಾರೆ. ಇದೀಗ ಮತ್ತೋರ್ವ ಸ್ಟಾರ್‌ ಈ ತಂಡ ಸೇರಿಕೊಂಡಿದ್ದಾರೆ. ಅದು ಬೇರಾರು ಅಲ್ಲ, ನಟಿ ಕಾಜಲ್‌ ಅಗರ್‌ವಾಲ್ (Kajal Aggarwal). ವಿಷ್ಣು ಮಂಚು ಮತ್ತು ಕಾಜಲ್ ಅಗರ್ವಾಲ್ ಈ ಹಿಂದೆ ತೆಲುಗಿನ ಮೊಸಗಲ್ಲು ಚಿತ್ರದಲ್ಲಿ ಸಹೋದರ ಮತ್ತು ಸಹೋದರಿಯಾಗಿ ಕಾಣಿಸಿಕೊಂಡಿದ್ದರು. ಇದೀಗ ವಿಷ್ಣು ಮಂಚು ಅವರ ಬಹುನಿರೀಕ್ಷಿತ ಪ್ರಾಜೆಕ್ಟ್‌ ಕಣ್ಣಪ್ಪ ಚಿತ್ರಕ್ಕೂ ಆಗಮಿಸುವ ಮೂಲಕ ಎರಡನೇ ಸಲ ಒಂದಾಗುತ್ತಿದ್ದಾರೆ.

    ಹಾಗಾದರೆ, ಕಾಜಲ್‌ ಅಗರ್‌ವಾಲ್‌ ಪಾತ್ರವೇನು? ಸದ್ಯಕ್ಕೆ ಆ ಬಗ್ಗೆ ಚಿತ್ರತಂಡ ರಿವೀಲ್‌ ಮಾಡಿಲ್ಲ. ಬದಲಿಗೆ ವಿಶೇಷವಾದ ಪಾತ್ರವೊಂದರಲ್ಲಿ ಕಾಜಲ್‌ ನಟಿಸುವ ಮೂಲಕ ಕಣ್ಣಪ್ಪ ಸಿನಿಮಾದ ಭಾಗವಾಗಲಿದ್ದಾರೆ. ನೂರಾರು ಕೋಟಿ ಬಜೆಟ್‌ನಲ್ಲಿ ದೊಡ್ಡ ಕ್ಯಾನ್ವಾಸ್‌ನೊಂದಿಗೆ ಮೂಡಿಬರುತ್ತಿರುವ ಈ ಸಿನಿಮಾದ ಶೂಟಿಂಗ್‌ ಸಹ ಅಷ್ಟೇ ಬಿರುಸಾಗಿಯೇ ನಡೆಯುತ್ತಿದೆ.

    ಈ ಚಿತ್ರದಲ್ಲಿ ಮೋಹನ್ ಬಾಬು, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್ ಮತ್ತು ಶರತ್‌ಕುಮಾರ್ ಸೇರಿ ಬಹು ತಾರಾಗಣವೇ ಇದೆ. ಇತ್ತೀಚೆಗಷ್ಟೇ ಬಾಲಿವುಡ್‌ ನಟ ಅಕ್ಷಯ್ ಕುಮಾರ್ ಸಹ ಈ ಚಿತ್ರದ ಮೂಲಕ ಸೌತ್‌ ಕಡೆಗೆ ವಾಲಿದ್ದಾರೆ. ತಮ್ಮ ಭಾಗದ ಚಿತ್ರೀಕರಣವನ್ನೂ  ಪೂರ್ಣಗೊಳಿಸಿದ್ದಾರೆ. ಪ್ರಭಾಸ್ ಸಹ ಕೆಲವು ದಿನಗಳ ಹಿಂದೆ ಕಣ್ಣಪ್ಪ ತಂಡವನ್ನು ಸೇರಿಕೊಂಡರು. ಈಗ ಕಾಜಲ್‌ ಅಗರ್‌ವಾಲ್‌ ಸರದಿ.

    ಮೋಹನ್ ಬಾಬು ನಿರ್ಮಿಸುತ್ತಿರುವ ಕಣ್ಣಪ್ಪ ಚಿತ್ರವನ್ನು ಮುಖೇಶ್ ಕುಮಾರ್ ಸಿಂಗ್ ನಿರ್ದೇಶನ ಮಾಡುತ್ತಿದ್ದಾರೆ. ತೆಲುಗು ಮಾತ್ರವಲ್ಲದೆ, ತಮಿಳು, ಕನ್ನಡ, ಮಲಯಾಳಂ, ಹಿಂದಿ ಸೇರಿ ಇನ್ನೂ ಹಲವು ಭಾರತೀಯ ಭಾಷೆಗಳಿಗೂ ಈ ಚಿತ್ರ ಡಬ್‌ ಆಗಿ ರಿಲೀಸ್‌ ಆಗಲಿದೆ. ಅದೇ ರೀತಿ ಚಿತ್ರೀಕರಣದ ಮುಕ್ತಾಯದ ಹಂತಕ್ಕೂ ಬಂದು ನಿಂತಿರುವ ಈ ಸಿನಿಮಾ ಇನ್ನೇನು ಶೀಘ್ರದಲ್ಲಿ ಬಿಡುಗಡೆ ದಿನಾಂಕವೂ ಘೋಷಣೆ ಆಗಲಿದೆ.