Tag: ವಿಷ್ಣು ಮಂಚು

  • ‘ಕಣ್ಣಪ್ಪ’ ಸಿನಿಮಾದ ವಿಶೇಷ ಪಾತ್ರದಲ್ಲಿ ನಟ ಪ್ರಭಾಸ್

    ‘ಕಣ್ಣಪ್ಪ’ ಸಿನಿಮಾದ ವಿಶೇಷ ಪಾತ್ರದಲ್ಲಿ ನಟ ಪ್ರಭಾಸ್

    ಗಾಗಲೇ ಸ್ಟಾರ್‌ ಕಾಸ್ಟ್‌ ವಿಚಾರವಾಗಿಯೇ ಸಾಕಷ್ಟು ಸುದ್ದಿಯಲ್ಲಿದೆ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಕಣ್ಣಪ್ಪ (Kannappa) ಸಿನಿಮಾ. ಈಗ ಇದೇ ಸಿನಿಮಾ ತಂಡಕ್ಕೆ ಇನ್ನೊಬ್ಬ ಸ್ಟಾರ್‌ ನಟನ ಎಂಟ್ರಿಯಾಗಿದೆ. ಅದು ಬೇರಾರು ಅಲ್ಲ, ಪ್ಯಾನ್‌ ಇಂಡಿಯನ್‌ ಹೀರೋ ಪ್ರಭಾಸ್.

    ಈಗಾಗಲೇ ಅಕ್ಷಯ್‌ ಕುಮಾರ್‌, ಮೋಹನ್‌ ಬಾಬು, ಮೋಹನ್‌ ಲಾಲ್‌, ಶರತ್‌ಕುಮಾರ್‌, ಕಣ್ಣಪ್ಪ ಚಿತ್ರದ ತಾರಾಬಳಗದಲ್ಲಿದ್ದಾರೆ. ಈಗ ಈ ಸ್ಟಾರ್‌ ತಾರಾಬಳಗಕ್ಕೆ ಪ್ರಭಾಸ್‌ (Prabhas) ಅವರ ಎಂಟ್ರಿಯೂ ಆಗಿದೆ. ಈ ವಿಚಾರವನ್ನು ಸ್ವತಃ ಚಿತ್ರತಂಡವೇ ಅಧಿಕೃತವಾಗಿ ಘೋಷಣೆ ಮಾಡಿದೆ.

    ಮುಖೇಷ್‌ ಕುಮಾರ್‌ ಸಿಂಗ್‌ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಕಣ್ಣಪ್ಪ ಸಿನಿಮಾ, ಬಹುಭಾಷೆಗಳಲ್ಲಿ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗಲಿದೆ. ಬಹು ಕೋಟಿ ವೆಚ್ಚದಲ್ಲೂ ಈ ಸಿನಿಮಾ ಮೂಡಿಬರುತ್ತಿದೆ. ಶಿವನ ಪರಮ ಭಕ್ತ ಕಣ್ಣಪ್ಪನಾಗಿ ವಿಷ್ಣು ಮಂಚು ನಟಿಸಲಿದ್ದಾರೆ.

    ಕಳೆದ ಏಳು ವರ್ಷಗಳಿಂದ ಈ ಪ್ರಾಜೆಕ್ಟ್‌ ಸಲುವಾಗಿ ವಿಷ್ಣು ಮಂಚು ಶ್ರಮಿಸುತ್ತಿದ್ದಾರೆ. ಅಷ್ಟೇ ಅದ್ದೂರಿಯಾಗಿಯೇ ಅದನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ. ಅದರಂತೆ ಸ್ಟಾರ್‌ ಕಲಾವಿದರನ್ನೇ ಆಯ್ಕೆ ಮಾಡಿಕೊಳ್ಳುತ್ತ ಕುತೂಹಲ ಮೂಡಿಸುತ್ತಿದೆ. ಹಾಲಿವುಡ್‌ನ ಶೆಲ್ಡೋನ್‌ ಚಾವ್‌ ಅವರ ಛಾಯಾಗ್ರಹಣ, ಕೇಚ ಖಂಫಕದೀ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

  • ಅಕ್ಷಯ್ ಕುಮಾರ್ ಬಳಿಕ ‘ಕಣ್ಣಪ್ಪ’ ಸಿನಿಮಾದಲ್ಲಿ ಕಾಜಲ್ ಅಗರ್ವಾಲ್

    ಅಕ್ಷಯ್ ಕುಮಾರ್ ಬಳಿಕ ‘ಕಣ್ಣಪ್ಪ’ ಸಿನಿಮಾದಲ್ಲಿ ಕಾಜಲ್ ಅಗರ್ವಾಲ್

    ಟಾಲಿವುಡ್‌ನ ಬಿಗ್ ಬಜೆಟ್ ‘ಕಣ್ಣಪ್ಪ’ (Kanappa Film) ಸಿನಿಮಾ ತಾರಾಗಣ ದಿನದಿಂದ ದಿನಕ್ಕೆ ಹಿರಿದಾಗುತ್ತಿದೆ. ಪ್ರಭಾಸ್ (Prabhas), ಮೋಹನ್ ಲಾಲ್, ಅಕ್ಷಯ್ ಕುಮಾರ್ ಚಿತ್ರತಂಡಕ್ಕೆ ಸಾಥ್ ನೀಡಿದ ಬೆನ್ನಲ್ಲೇ ಮಗಧೀರ ಬೆಡಗಿ ಕಾಜಲ್ ಅಗರ್ವಾಲ್ (Kajal Aggarwal) ಕೂಡ ಕೈಜೋಡಿಸಿದ್ದಾರೆ.

    ಮಲ್ಟಿಸ್ಟಾರ್‌ಗಳಿರುವ ‘ಕಣ್ಣಪ್ಪ’ ಸಿನಿಮಾದಲ್ಲಿ ವಿಷ್ಣು ಮಂಚು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಕಾಜಲ್‌ಗೂ ಮುಖ್ಯ ಪಾತ್ರವೊಂದಕ್ಕೆ ನಟಿಸಲು ಚಿತ್ರತಂಡ ಸಂಪರ್ಕಿಸಿದೆ. ಆದರೆ ಸಿನಿಮಾತಂಡದಿಂದ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಒಂದೇ ವೇಳೆ, ಈ ಸುದ್ದಿ ನಿಜವೇ ಆಗಿದ್ದಲ್ಲಿ ಅಭಿಮಾನಿಗಳಿಗೆ ಮನರಂಜನೆ ಗ್ಯಾರಂಟಿ. ಇದನ್ನೂ ಓದಿ:ಚಿತ್ರರಂಗಕ್ಕೆ ದ್ವಾರಕೀಶ್ ಕೊಡುಗೆ ಅಪಾರ- ನರೇಂದ್ರ ಮೋದಿ ಸಂತಾಪ

    ಸ್ಟಾರ್ ಹೀರೋಗಳಿಗೆ ನಾಯಕಿಯಾಗಿ ಮಾತ್ರವಲ್ಲ. ಮಹಿಳಾ ಪ್ರಧಾನ ಸಿನಿಮಾಗಳಲ್ಲಿಯೂ ನಟಿಸುವ ಮೂಲಕ ಕಾಜಲ್ ಸೈ ಎನಿಸಿಕೊಂಡಿದ್ದಾರೆ. ಮದುವೆಯಾಗಿ ಒಂದು ಮಗುವಿನ ತಾಯಿಯಾದ್ಮೇಲೆಯೂ ಕಾಜಲ್ ತಮ್ಮ ಚಾರ್ಮ್ ಉಳಿಸಿಕೊಂಡಿದ್ದಾರೆ. ಅದಕ್ಕಾಗಿಯೇ ಈಗಲೂ ಕೂಡ ಚಿತ್ರರಂಗದಲ್ಲಿ ನಟಿಗೆ ಬೇಡಿಕೆ ಇದೆ. ಸದ್ಯ ‘ಕಣ್ಣಪ್ಪ’ ಚಿತ್ರದ ವಿಚಾರವಾಗಿ ನಟಿ ಸಖತ್ ಸುದ್ದಿಯಾಗುತ್ತಿದ್ದಾರೆ.

    ಸದ್ಯ ಕಾಜಲ್ ಕೈಯಲ್ಲಿ ತೆಲುಗು ಮತ್ತು ತಮಿಳು ಸೇರಿದಂತೆ ಹಲವು ಸಿನಿಮಾಗಳಿವೆ. ಒಂದಿಷ್ಟು ಕಥೆಗಳನ್ನು ಕೇಳುತ್ತಿದ್ದಾರೆ. ಕಳೆದ ವರ್ಷ ಅಂತ್ಯದಲ್ಲಿ ಬಾಲಯ್ಯಗೆ ಜೋಡಿಯಾಗಿ ಕಾಜಲ್ ನಟಿಸಿದ್ದರು. ಇವರ ಜೊತೆ ಶ್ರೀಲೀಲಾ ಕೂಡ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದರು. ಈ ಸಿನಿಮಾ ಗಲ್ಲಾಪಟ್ಟಿಗೆಯಲ್ಲಿ ಸಕ್ಸಸ್‌ ಕಂಡಿದೆ.

  • ತೆಲುಗಿನ ‘ಕಣ್ಣಪ್ಪ’ ಚಿತ್ರತಂಡ ಸೇರಿಕೊಂಡ ಅಕ್ಷಯ್ ಕುಮಾರ್

    ತೆಲುಗಿನ ‘ಕಣ್ಣಪ್ಪ’ ಚಿತ್ರತಂಡ ಸೇರಿಕೊಂಡ ಅಕ್ಷಯ್ ಕುಮಾರ್

    ಟಾಲಿವುಡ್‌ನ ಬಿಗ್ ಬಜೆಟ್ ‘ಕಣ್ಣಪ್ಪ’ (Kanappa) ಸಿನಿಮಾದ ಚಿತ್ರೀಕರಣ ಇದೀಗ ಭರದಿಂದ ಸಾಗುತ್ತಿದೆ. ಇದೀಗ ಬಾಲಿವುಡ್ (Bollywood) ಸೂಪರ್ ಸ್ಟಾರ್ ಅಕ್ಷಯ್ ಕುಮಾರ್ (Akshay Kumar) ತೆಲುಗು ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಅಕ್ಷಯ್ ಎಂಟ್ರಿ ಬಗ್ಗೆ ಅಧಿಕೃತ ಮಾಹಿತಿ ನೀಡಿದೆ ಚಿತ್ರತಂಡ.

    ಬಾಬಿ ಡಿಯೋಲ್, ಜಾನ್ವಿ ಕಪೂರ್, ಸಂಜಯ್ ದತ್ ಸೇರಿದಂತೆ ಅನೇಕ ಬಾಲಿವುಡ್ ನಟ-ನಟಿಯರು ಸೌತ್ ಸಿನಿಮಾಗಳತ್ತ ಮುಖ ಮಾಡಿದ್ದಾರೆ. ಈಗ ಅಕ್ಷಯ್ ಕುಮಾರ್ ಕೂಡ ‘ಕಣ್ಣಪ್ಪ’ ಚಿತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಹೊಸ ಜರ್ನಿ ಶುರು ಮಾಡಿದ್ದಾರೆ. ಇದನ್ನೂ ಓದಿ:‘ಗುಂಮ್ಟಿ’ ಸಿನಿಮಾಗೆ ಹೀರೋನೇ ನಿರ್ದೇಶಕ

     

    View this post on Instagram

     

    A post shared by Vishnu Manchu (@vishnumanchu)

    ಅಕ್ಷಯ್‌ ಕುಮಾರ್‌ ಅವರನ್ನು ಖುಷಿಯಿಂದ ಮೋಹನ್‌ ಬಾಬು ಮತ್ತು ವಿಷ್ಣು ಮಂಚು ಬರಮಾಡಿಕೊಳ್ಳುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆದರೆ ಈ ಸಿನಿಮಾದಲ್ಲಿ ಅವರು ಯಾವ ಪಾತ್ರ ಮಾಡ್ತಾರೆ ಎಂಬುದುನ್ನು ರಿವೀಲ್ ಮಾಡಿಲ್ಲ.

    ‘ಕಣ್ಣಪ್ಪ’ ಸಿನಿಮಾದಲ್ಲಿ ಸ್ಟಾರ್ ಕಲಾವಿದರ ದಂಡೇ ಇರಲಿದೆ. ಅನುಷ್ಕಾ ಶೆಟ್ಟಿ, ಶಿವಣ್ಣ, ಮೋಹನ್ ಲಾಲ್, ಪ್ರಭಾಸ್, ನಯನತಾರಾ ಸೇರಿದಂತೆ ಹಲವರು ಸಾಥ್‌ ನೀಡಿದ್ದಾರೆ.

  • ಟಾಲಿವುಡ್‌ನತ್ತ ಅಕ್ಷಯ್ ಕುಮಾರ್- ‘ಕಣ್ಣಪ್ಪ’ ಸಿನಿಮಾದಲ್ಲಿ ಕಿಲಾಡಿ

    ಟಾಲಿವುಡ್‌ನತ್ತ ಅಕ್ಷಯ್ ಕುಮಾರ್- ‘ಕಣ್ಣಪ್ಪ’ ಸಿನಿಮಾದಲ್ಲಿ ಕಿಲಾಡಿ

    ಬಾಲಿವುಡ್ (Bollywood) ಹೀರೋ ಅಕ್ಷಯ್ ಕುಮಾರ್‌ಗೆ (Akshay Kumar) ಹಿಂದಿ ಸಿನಿಮಾರಂಗದಲ್ಲೇ ಭಾರೀ ಬೇಡಿಕೆ ಇದೆ. ಇದರ ನಡುವೆ ಟಾಲಿವುಡ್‌ನಲ್ಲಿ ಅಕ್ಷಯ್ ಕುಮಾರ್ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಈಗ ವಿಷ್ಣು ಮಂಚು ನಟನೆಯ ‘ಕಣ್ಣಪ್ಪ’ ಸಿನಿಮಾಗೆ ಸಾಥ್‌ ನೀಡಲಿದ್ದಾರೆ. ಇದನ್ನೂ ಓದಿ:ಪಂಚ ಭಾಷೆಗಳಲ್ಲಿ ‘ಶಬರಿ’: ಸಿನಿಮಾ ರಿಲೀಸ್ ಡೇಟ್ ಫಿಕ್ಸ್

    ಇದೀಗ ಸಿನಿಮಾರಂಗದಲ್ಲಿ ಹೆಚ್ಚೆಚ್ಚು ಸಕ್ಸಸ್ ಕಾಣುತ್ತಿರುವ ಸಿನಿಮಾಗಳಂದ್ರೆ ದಕ್ಷಿಣದ ಸಿನಿಮಾಗಳು. ಅದಕ್ಕಾಗಿಯೇ ಈಗಾಗಲೇ ಮೃಣಾಲ್ ಠಾಕೂರ್ (Mrunal Thakur), ಜಾನ್ವಿ ಕಪೂರ್ (Janhvi Kapoor), ಬಾಬಿ ಡಿಯೋಲ್, ಸಂಜಯ್ ದತ್, ಸನ್ನಿ ಲಿಯೋನ್ ಹೀಗೆ ಅನೇಕರು ಬಾಲಿವುಡ್‌ನಿಂದ ಟಾಲಿವುಡ್‌ಗೆ ಬಂದು ಸಕ್ಸಸ್ ಕಂಡಿದ್ದಾರೆ. ಅದೇ ಹಾದಿಯಲ್ಲಿ ಅಕ್ಷಯ್ ಕುಮಾರ್ ಕೂಡ ಹೆಜ್ಜೆ ಇಡುತ್ತಿದ್ದಾರೆ.

    ಸದ್ಯ ವಿಷ್ಣು ಮಂಚು (Vishnu Manchu) ನಟನೆಯ ಸಿನಿಮಾ ಕಣ್ಣಪ್ಪ ಚಿತ್ರದಲ್ಲಿ ಪ್ರಭಾಸ್, ಮೋಹನ್ ಲಾಲ್, ಶರತ್ ಕುಮಾರ್ ಈಗಾಗಲೇ ಚಿತ್ರತಂಡವನ್ನು ಸೇರಿದ್ದಾರೆ. ಅಕ್ಷಯ್ ಕುಮಾರ್ ಕೂಡ ಈ ಪ್ರಾಜೆಕ್ಟ್‌ಗಳಲ್ಲಿ ನಟಿಸಲಿದ್ದಾರೆ. ಬಹುಮುಖ್ಯ ಪಾತ್ರಕ್ಕೆ ಜೀವ ತುಂಬಲಿದ್ದಾರೆ. ಪಾತ್ರದ ಕುರಿತು ಮುಂದಿನ ದಿನಗಳಲ್ಲಿ ತಂಡದ ಕಡೆಯಿಂದ ಮಾಹಿತಿ ಸಿಗಲಿದೆ.

    ಬಿಗ್ ಬಜೆಟ್‌ನಲ್ಲಿ ಕಣ್ಣಪ್ಪ ಸಿನಿಮಾ ಮೂಡಿ ಬರಲಿದೆ. ಮಲ್ಟಿ ಸ್ಟಾರ್‌ಗಳು ಈ ಸಿನಿಮಾದಲ್ಲಿ ನಟಿಸುತ್ತಿರುವ ಕಾರಣ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.

  • ಮಹಾಶಿವರಾತ್ರಿಗೆ ‘ಕಣ್ಣಪ್ಪ’ ಚಿತ್ರದ ಫಸ್ಟ್ ಲುಕ್ ರಿಲೀಸ್

    ಮಹಾಶಿವರಾತ್ರಿಗೆ ‘ಕಣ್ಣಪ್ಪ’ ಚಿತ್ರದ ಫಸ್ಟ್ ಲುಕ್ ರಿಲೀಸ್

    ಹುಭಾಷೆಗಳಲ್ಲಿ ಬಿಡುಗಡೆಯಾಗಲಿರುವ ‘ಕಣ್ಣಪ್ಪ (Kannappa); ದಿ ಗ್ರೇಟ್‍ ಎಪಿಕ್ ಇಂಡಿಯನ್‍ ಟೇಲ್‍’ ಸಿನಿಮಾ ಘೋಷಣೆ ಆದಾಗಿನಿಂದ ಒಂದಲ್ಲ ಒಂದು ರೀತಿ ಸದ್ದು ಮಾಡುತ್ತಲೇ ಇದೆ. ವಿಷ್ಣು ಮಂಚು ನಾಯಕನಾಗಿ ನಟಿಸುತ್ತಿರುವ ಈ ಸಿನಿಮಾದಲ್ಲಿ ಬಹುತಾರಾಗಣವೂ ಚಿತ್ರದ ಹೈಲೈಟ್. ಮುಕೇಶ್‍ ಕುಮಾರ್ ಸಿಂಗ್‍ ನಿರ್ದೇಶನದ ‘ಕಣ್ಣಪ್ಪ’ ಸಿನಿಮಾದ ಫಸ್ಟ್‌ ಲುಕ್‌ (First Look) ಈಗಾಗಲೇ ಕುತೂಹಲ ಮೂಡಿಸಿತ್ತು. ಈಗ ಮಹಾಶಿವರಾತ್ರಿ (Mahashivaratri) ಹಬ್ಬದ ಪ್ರಯುಕ್ತ ಮತ್ತೊಂದು ಹೊಸ ಲುಕ್‌ ಹೊರತಂದಿದೆ ಚಿತ್ರತಂಡ.

    ಫಸ್ಟ್ ಲುಕ್ ಪೋಸ್ಟರ್‌ನಲ್ಲಿ ತಮ್ಮ ಲುಕ್‌ ಮೂಲಕವೇ ಭಕ್ತ ಕಣ್ಣಪ್ಪನಾಗಿ ವಿಷ್ಣು ಮಂಚು ಮಿಂಚು ಹರಿಸಿದ್ದಾರೆ. ಬೆರಗುಗೊಳಿಸುವ ದೃಶ್ಯದಲ್ಲಿ, ಬಿಲ್ಲು ಮತ್ತು ಬಾಣದೊಂದಿಗೆ ಕಣ್ಣಪ್ಪನಾಗಿ ವಿಷ್ಣು ಮಂಚು  (Vishnu Manchu)ಎದುರಾಗಿದ್ದಾರೆ. ಜಲಪಾತದಿಂದ ಹೊರಹೊಮ್ಮುತ್ತ, ಇಟ್ಟ ಗುರಿಯತ್ತ ಬಾಣ ನೆಟ್ಟಿದ್ದಾನೆ ಕಣ್ಣಪ್ಪ. ಭಕ್ತಿಪ್ರಧಾನದ ಜತೆಗೆ ಆಕ್ಷನ್- ಪ್ಯಾಕ್ಡ್ ಸೀಕ್ವೆನ್ಸ್‌ಗಳೂ ಚಿತ್ರದಲ್ಲಿ ಭರ್ಜರಿಯಾಗಿ ಇರಲಿದೆ ಎಂಬುದನ್ನು ಸದ್ಯದ ಕಿರು ಝಲಕ್‌ನಲ್ಲಿ ಕಾಣಬಹುದಾಗಿದೆ.

    24 ಫ್ರೇಮ್ಸ್‌ ಫ್ಯಾಕ್ಟರಿ ಮತ್ತು AVA ಎಂಟರ್‌ಟೈನ್‌ಮೆಂಟ್‌ ಸಂಸ್ಥೆಗಳು ಜಂಟಿಯಾಗಿ ಈ ಸಿನಿಮಾ ನಿರ್ಮಾಣ ಮಾಡುತ್ತಿವೆ. ಬಿಗ್‌ ಬಜೆಟ್‌ನಲ್ಲಿ ಮೂಡಿಬರುತ್ತಿರುವ ಈ ಸಿನಿಮಾ ಬಹುತೇಕ ವಿದೇಶದಲ್ಲಿಯೇ ಶೂಟಿಂಗ್‌ ಮಾಡಿಕೊಳ್ಳುತ್ತಿದೆ. ನ್ಯೂಜಿಲೆಂಡ್‌ನ ಸುಂದರ ವಾತಾವರಣದಲ್ಲಿ ಭರ್ಜರಿಯಾಗಿಯೇ ಈ ಚಿತ್ರದ ಎರಡನೇ ಶೆಡ್ಯೂಲ್‌ ಚಿತ್ರೀಕರಣ ನಡೆಯುತ್ತಿದೆ. ಈ ಶೂಟಿಂಗ್‌ಲ್ಲಿ 600 ಮಂದಿ ಭಾಗವಹಿಸಿದ್ದು ವಿಶೇಷ. ಈಗ ಇದೇ ಕಣ್ಣಪ್ಪ ತಂಡದಿಂದ ಶಿವರಾತ್ರಿಗೆ ಬಿಗ್‌ ಸರ್ಪ್ರೈಸ್‌ ಹೊರಬಂದಿದೆ.

    ಟಾಲಿವುಡ್‌ನಲ್ಲಿ ನಟ ವಿಷ್ಣು ಮಂಚು ಅಭಿನಯದ ‘ಕಣ್ಣಪ್ಪ; ದಿ ಗ್ರೇಟ್‍ ಎಪಿಕ್ ಇಂಡಿಯನ್‍ ಟೇಲ್‍’ ಕುರಿತು ಈಗಾಗಲೇ ಪ್ರೇಕ್ಷಕರ ವಲಯದಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳಿವೆ ತಾರಾಗಣದ ವಿಚಾರವಾಗಿಯೂ ಈ ಸಿನಿಮಾ ಸದ್ದು ಮಾಡುತ್ತಿದೆ. ಸದ್ಯ ಟಾಲಿವುಡ್‌ನ ಪ್ಯಾನ್‍ ಇಂಡಿಯಾ ಸೂಪರ್ ಸ್ಟಾರ್ ಪ್ರಭಾಸ್‍ ಮತ್ತು ಮಲಯಾಳಂ ಚಿತ್ರರಂಗದ ಜನಪ್ರಿಯ ನಟ ಮೋಹನ್‍ ಲಾಲ್‍ ಮತ್ತು ಸ್ಯಾಂಡಲ್‌ವುಡ್‌ನ ಶಿವರಾಜಕುಮಾರ್ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಜತೆಗೆ ಮೋಹನ್‌ ಬಾಬು, ಶರತ್‌ ಕುಮಾರ್‌, ಬ್ರಹ್ಮಾನಂದಂ ಸಹ ಈ ಸಿನಿಮಾದಲ್ಲಿರಲಿದ್ದಾರೆ.

    ಈ ಸಿನಿಮಾ ಮೂಡಿಬರುತ್ತಿರುವ ರೀತಿಗೆ ಸ್ವತಃ ವಿಷ್ಣು ಮಂಚು ಥ್ರಿಲ್‌ ಆಗಿದ್ದಾರೆ. “ಕಣ್ಣಪ್ಪ ಸಿನಿಮಾ ಚಿತ್ರೀಕರಣ ಕೆಲಸಗಳು ಸಮರೋಪಾದಿಯಲ್ಲಿ ನಡೆಯುತ್ತಿದೆ. ಒಳ್ಳೆಯ ತಂಡದ ಜತೆಗೆ ನಿರೀಕ್ಷೆಗೂ ಮೀರಿ ಚಿತ್ರ ಮೂಡಿಬರುತ್ತಿರುವುದು ಖುಷಿ ನೀಡಿದೆ. ಕಣ್ಣಪ್ಪ ಇಲ್ಲಿ ಒಬ್ಬ ಶಿವನ ಭಕ್ತನಾಗಿ ಮಾತ್ರವಲ್ಲ, ಒಬ್ಬ ಯೋಧನಂತೆಯೂ ಕಾಣಿಸಲಿದ್ದಾನೆ. ಈ ಚಿತ್ರದ ಝಲಕ್‌ ಹೇಗಿರಲಿದೆ ಎಂಬುದನ್ನು ನಿಮ್ಮ ಮುಂದಿಡಲು ತುಂಬ ಉತ್ಸುಕನಾಗಿದ್ದೇನೆ” ಎಂದಿದ್ದಾರೆ ವಿಷ್ಣು ಮಂಚು.

  • ಹದಿನಾರು ವರ್ಷಗಳ ನಂತರ ಜೊತೆಯಾದ ಪ್ರಭಾಸ್ ಜೊತೆ ಕಂಗನಾ

    ಹದಿನಾರು ವರ್ಷಗಳ ನಂತರ ಜೊತೆಯಾದ ಪ್ರಭಾಸ್ ಜೊತೆ ಕಂಗನಾ

    ಡಾ.ರಾಜ್‌ಕುಮಾರ್‌ ನಟನೆಯ ‘ಬೇಡರ ಕಣ್ಣಪ್ಪ’ ಸಿನಿಮಾ ತೆಲುಗಿನಲ್ಲಿ ರಿಮೇಕ್ ಆಗುತ್ತಿದೆ. ಹೊಸ ರೂಪದಲ್ಲಿ ‘ಭಕ್ತ ಕಣ್ಣಪ್ಪ’ ಸಿನಿಮಾವಾಗಿ ಮೂಡಿ ಬರಲಿದ್ದು, ಬಾಹುಬಲಿ ಪ್ರಭಾಸ್ (Prabhas) ಪ್ರಮುಖ ಪಾತ್ರದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ಹೇಳಲಾಗಿತ್ತು. ಈ ಸಿನಿಮಾದಲ್ಲಿ ಪ್ರಭಾಸ್ ಶಿವನಾಗಿ ಕಾಣಿಸಿಕೊಳ್ಳಲಿದ್ಧಾರೆ.

    ಮತ್ತೊಂದು ಅಚ್ಚರಿಯ ಸಂಗತಿ ಅಂದರೆ, ಶಿವನ ಪಾತ್ರದಲ್ಲಿ ಪ್ರಭಾಸ್ ಕಾಣಿಸಿಕೊಂಡರೆ, ಪಾರ್ವತಿಯ ಪಾತ್ರಕ್ಕೆ ಕಂಗನಾ ರಣಾವತ್ (Kangana Ranaut) ಅವರನ್ನು ಆಯ್ಕೆ ಮಾಡಲಾಗಿದೆಯಂತೆ. 16 ವರ್ಷಗಳ ನಂತರ ಪ್ರಭಾಸ್ ಮತ್ತು ಕಂಗನಾ ಒಟ್ಟಾಗಿ ನಟಿಸಲಿದ್ದಾರೆ. ಈ ಹಿಂದೆ ಪ್ರಭಾಸ್ ನಟನೆಯ ಏಕ್ ನಿರಂಜನ್ ಹೆಸರಿನ ತೆಲುಗು ಚಿತ್ರದಲ್ಲಿ ನಟಿಸಿದ್ದರು.

    1952ರಲ್ಲಿ ಡಾ.ರಾಜ್‌ಕುಮಾರ್ ‘ಬೇಡರ ಕಣ್ಣಪ್ಪ’ ಸಿನಿಮಾದಲ್ಲಿ ನಟಿಸಿದ್ದರು. ಅಣ್ಣಾವ್ರು ಮಾಡಿದ್ದ ಪಾತ್ರವನ್ನೇ ಕೃಷ್ಣಂ ರಾಜು ಅವರು ನಟಿಸಿ ಸೈ ಎನಿಸಿಕೊಂಡಿದ್ದರು. ಈ ಸಿನಿಮಾ ಕೃಷ್ಣಂ ರಾಜು (Krishnam Raju) ಅವರ ವೃತ್ತಿರಂಗದಲ್ಲಿ ಬಿಗ್ ಬ್ರೇಕ್ ಕೊಟ್ಟಿತ್ತು. ಚಿತ್ರ ಸಕ್ಸಸ್‌ಫುಲ್ ಪ್ರದರ್ಶನ ಕಂಡಿತ್ತು. ಇದೇ ಸಿನಿಮಾವನ್ನು ಹೊಸ ವರ್ಷನ್‌ನಲ್ಲಿ ಪ್ರಭಾಸ್ ನಿರ್ಮಿಸುವ ಕನಸು ಅವರಿಗಿತ್ತು. ಆದರೆ ಕಳೆದ ವರ್ಷ ಅವರು ನಿಧನರಾದರು.

     

    ‘ಬೇಡರ ಕಣ್ಣಪ್ಪ’ (Bhakta Kannappa) ಸಿನಿಮಾವನ್ನು ಹೊಸ ರೂಪದಲ್ಲಿ ನಟ ಮಂಚು ವಿಷ್ಣು (Manchu Vishnu) ನಿರ್ಮಾಣ ಮಾಡುತ್ತಿದ್ದಾರೆ. ಕಣ್ಣಪ್ಪನ ಪಾತ್ರದಲ್ಲಿ ಮಂಚು ವಿಷ್ಣು ನಟಿಸುತ್ತಿದ್ದಾರೆ. 150 ಕೋಟಿ. ರೂ ಬಜೆಟ್‌ನಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಆಗಲೇ ಹಲವಾರು ಕಂತುಗಳನ್ನು ಚಿತ್ರೀಕರಣ ಕೂಡ ಆಗಿದೆ.

  • ‘ಕಣ್ಣಪ್ಪ’ಗಾಗಿ ನ್ಯೂಜಿಲ್ಯಾಂಡ್ ನಲ್ಲಿ 90 ದಿನ ಶೂಟಿಂಗ್

    ‘ಕಣ್ಣಪ್ಪ’ಗಾಗಿ ನ್ಯೂಜಿಲ್ಯಾಂಡ್ ನಲ್ಲಿ 90 ದಿನ ಶೂಟಿಂಗ್

    ಲವು ಭಾಷೆಗಳಲ್ಲಿ ಮೂಡಿ ಬರುತ್ತಿರುವ ಕಣ್ಣಪ್ಪ ಸಿನಿಮಾದ ಶೂಟಿಂಗ್ ನ್ಯೂಜಿಲ್ಯಾಂಡ್ (New Zealand) ನಲ್ಲೇ ಬರೋಬ್ಬರಿ 90 ದಿನಗಳ ಕಾಲ ನಡೆದಿದೆ. ಈ ಮಾಹಿತಿಯನ್ನು ಚಿತ್ರದ ನಿರ್ಮಾಪಕ ಹಾಗೂ ನಟ ಮಂಚು ಮೋಹನ್ ಬಾಬು ಅವರೇ ತಿಳಿಸಿದ್ದಾರೆ. ಅಷ್ಟೊಂದು ದಿನಗಳ ಕಾಲ ನಡೆದ ಶೂಟಿಂಗ್ ಅನುಭವವನ್ನೂ ಅವರು ಹಂಚಿಕೊಂಡಿದ್ದಾರೆ.

    ನಾನಾ ಕಾರಣಗಳಿಂದಾಗಿ ಈ ಸಿನಿಮಾ ನಿರೀಕ್ಷೆ ಹೆಚ್ಚಿಸಿದೆ. ಮೋಹನ್‍ ಬಾಬು, ಮೋಹನ್‍ ಲಾಲ್‍, ಶಿವರಾಜಕುಮಾರ್, ಪ್ರಭಾಸ್‍ ಮುಂತಾದ ಈ ದೇಶದ ಪ್ರತಿಭಾವಂತ ಕಲಾವಿದರ ನಡುವೆ ‘ಕಣ್ಣಪ್ಪ’ (Kannappa) ಚಿತ್ರದಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವವರು ಟಾಲಿವುಡ್‍ ನಟ ವಿಷ್ಣು ಮಂಚು (Vishnu Manchu). ಅವರ ಹುಟ್ಟು ಹಬ್ಬದಂದು ಚಿತ್ರತಂಡವು ಅವರ ಮೊದಲ ಪೋಸ್ಟರ್  (First Look) ಬಿಡುಗಡೆ ಮಾಡಿತ್ತು.  ಕ್ಯೂರಿಯಾಸಿಟಿಗೂ ಕಾರಣವಾಗಿತ್ತು.

    ಮುಕೇಶ್‍ ಕುಮಾರ್ ಸಿಂಗ್‍ (Mukesh Kumar Singh) ನಿರ್ದೇಶನದ ‘ಕಣ್ಣಪ್ಪ’ ಚಿತ್ರದ ಶೇ.80ರಷ್ಟು ಚಿತ್ರೀಕರಣ ನಡೆದಿದ್ದು, ಹಾಲಿವುಡ್‍ ಛಾಯಾಗ್ರಾಹಕ ಶೆಲ್ಡನ್‍ ಚಾವ್‍, ಈ ಸುಂದರ ಪರಿಸರವನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.

    ‘ಕಣ್ಣಪ್ಪ’ ಚಿತ್ರದ ಕುರಿತು ಮಾತನಾಡುವ ವಿಷ್ಣು ಮಂಚು, ‘ಈ ಚಿತ್ರವು ಬರೀ ಕನಸುಗಳಿಂದಲ್ಲ, ನಮ್ಮೆಲ್ಲರ ರಕ್ತ, ಬೆವರು ಮತ್ತು ಕಣ್ಣೀರಿನಿಂದ ನಿರ್ಮಾಣವಾಗುತ್ತಿದೆ. ಒಬ್ಬ ನಾಸ್ತಿಕ, ಶಿವನ ಅಪ್ರತಿಮ ಭಕ್ತನಾದ ಕಥೆ ಈ ಚಿತ್ರದಲ್ಲಿದೆ’ ಎನ್ನುತ್ತಾರೆ.

     

    ದೃಶ್ಯ ವೈವಿಧ್ಯತೆ, ಆಧುನಿಕ ತಂತ್ರಜ್ಞಾನ ಮತ್ತು ಮೈನವಿರೇಳಿಸುವ ಆ್ಯಕ್ಷನ್‍ ದೃಶ್ಯಗಳು ಈ ಚಿತ್ರದ ಹೈಲೈಟ್‍ ಆಗಿದ್ದು, ಸದ್ಯ ನ್ಯೂಜಿಲ್ಯಾಂಡ್‍ನಲ್ಲಿ ಚಿತ್ರೀಕರಣ ಪ್ರಗತಿಯಲ್ಲಿದೆ. ವಿಷ್ಣು ಮಂಚು ತಮ್ಮ ನಟನಾ ಸಾಮರ್ಥ್ಯ ಮತ್ತು ಸಮರ್ಪಣಾ ಭಾವವನ್ನು ಈ ಚಿತ್ರಕ್ಕಾಗಿ ಧಾರೆ ಎರೆದಿದ್ದು, ಪ್ರೇಕ್ಷಕರ ಪಾಲಿಗೆ ಇದೊಂದು ಅದ್ಭುತ ಸಿನಿಮೀಯ ಅನುಭವವಾಗಲಿದೆ.

  • ವಿಷ್ಣು ಮಂಚು ಹುಟ್ಟುಹಬ್ಬಕ್ಕೆ ‘ಕಣ್ಣಪ್ಪ’ ಚಿತ್ರದ  ಫಸ್ಟ್ ಲುಕ್

    ವಿಷ್ಣು ಮಂಚು ಹುಟ್ಟುಹಬ್ಬಕ್ಕೆ ‘ಕಣ್ಣಪ್ಪ’ ಚಿತ್ರದ ಫಸ್ಟ್ ಲುಕ್

    ಮೋಹನ್‍ ಬಾಬು, ಮೋಹನ್‍ ಲಾಲ್‍, ಶಿವರಾಜಕುಮಾರ್, ಪ್ರಭಾಸ್‍ ಮುಂತಾದ ಈ ದೇಶದ ಪ್ರತಿಭಾವಂತ ಕಲಾವಿದರ ನಡುವೆ ‘ಕಣ್ಣಪ್ಪ’ (Kannappa) ಚಿತ್ರದಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವವರು ಟಾಲಿವುಡ್‍ ನಟ ವಿಷ್ಣು ಮಂಚು (Vishnu Manchu). ಇಂದು ತಮ್ಮ ಹುಟ್ಟುಹಬ್ಬವನ್ನು (Birthday) ವಿಷ್ಣು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಚಿತ್ರತಂಡವು ಅವರ ಮೊದಲ ಪೋಸ್ಟರ್  (First Look)ಬಿಡುಗಡೆ ಮಾಡುವ ಮೂಲಕ ಹುಟ್ಟುಹಬ್ಬವನ್ನು ಇನ್ನಷ್ಟು ಅದ್ದೂರಿಯಾಗಿಸುವುದರ ಜೊತೆಗೆ ನೆನಪಿನಲ್ಲುಳಿಯುವಂತೆ ಮಾಡಿದೆ.

    ಮುಕೇಶ್‍ ಕುಮಾರ್ ಸಿಂಗ್‍ (Mukesh Kumar Singh) ನಿರ್ದೇಶನದ ‘ಕಣ್ಣಪ್ಪ’ ಚಿತ್ರದ ಶೇ.80ರಷ್ಟು ಚಿತ್ರೀಕರಣ ನ್ಯೂಜಿಲೆಂಡ್ಸ್‌ ರಮಣೀಯ ಪ್ರದೇಶಗಳಲ್ಲಿ ನಡೆದಿದ್ದು, ಹಾಲಿವುಡ್‍ ಛಾಯಾಗ್ರಾಹಕ ಶೆಲ್ಡನ್‍ ಚಾವ್‍, ಈ ಸುಂದರ ಪರಿಸರವನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.

    ‘ಕಣ್ಣಪ್ಪ’ ಚಿತ್ರದ ಕುರಿತು ಮಾತನಾಡುವ ವಿಷ್ಣು ಮಂಚು, ‘ಈ ಚಿತ್ರವು ಬರೀ ಕನಸುಗಳಿಂದಲ್ಲ, ನಮ್ಮೆಲ್ಲರ ರಕ್ತ, ಬೆವರು ಮತ್ತು ಕಣ್ಣೀರಿನಿಂದ ನಿರ್ಮಾಣವಾಗುತ್ತಿದೆ. ಒಬ್ಬ ನಾಸ್ತಿಕ, ಶಿವನ ಅಪ್ರತಿಮ ಭಕ್ತನಾದ ಕಥೆ ಈ ಚಿತ್ರದಲ್ಲಿದೆ’ ಎನ್ನುತ್ತಾರೆ.

     

    ದೃಶ್ಯ ವೈವಿಧ್ಯತೆ, ಆಧುನಿಕ ತಂತ್ರಜ್ಞಾನ ಮತ್ತು ಮೈನವಿರೇಳಿಸುವ ಆ್ಯಕ್ಷನ್‍ ದೃಶ್ಯಗಳು ಈ ಚಿತ್ರದ ಹೈಲೈಟ್‍ ಆಗಿದ್ದು, ಸದ್ಯ ನ್ಯೂಜಿಲ್ಯಾಂಡ್‍ನಲ್ಲಿ ಚಿತ್ರೀಕರಣ ಪ್ರಗತಿಯಲ್ಲಿದೆ. ವಿಷ್ಣು ಮಂಚು ತಮ್ಮ ನಟನಾ ಸಾಮರ್ಥ್ಯ ಮತ್ತು ಸಮರ್ಪಣಾ ಭಾವವನ್ನು ಈ ಚಿತ್ರಕ್ಕಾಗಿ ಧಾರೆ ಎರೆದಿದ್ದು, ಪ್ರೇಕ್ಷಕರ ಪಾಲಿಗೆ ಇದೊಂದು ಅದ್ಭುತ ಸಿನಿಮೀಯ ಅನುಭವವಾಗಲಿದೆ.

  • ಶೂಟಿಂಗ್ ನಲ್ಲಿ ಅಪಘಾತ: ನಟ ವಿಷ್ಣು ಮಂಚುಗೆ ಗಂಭೀರ ಗಾಯ

    ಶೂಟಿಂಗ್ ನಲ್ಲಿ ಅಪಘಾತ: ನಟ ವಿಷ್ಣು ಮಂಚುಗೆ ಗಂಭೀರ ಗಾಯ

    ಡ್ರೋನ್ (Drone) ಬಡಿದ ಪರಿಣಾಮ ನಟ ವಿಷ್ಣು ಮಂಚುಗೆ ಗಂಭೀರ ಗಾಯವಾಗಿದೆ. ಕೂಡಲೇ ಅವರನ್ನು ನ್ಯೂಜಿಲ್ಯಾಂಡ್ ಆಸ್ಪತ್ರೆಗೆ (Hospital) ದಾಖಲಿಸಲಾಗಿದೆ. ಸಾಹಸ ಸನ್ನಿವೇಶದಲ್ಲಿ ಈ  ಅವಘಡ ಸಂಭವಿಸಿದ್ದು, ತೀವ್ರ ಗಾಯವಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

    ವಿಷ್ಣು ಮಂಚು ಅಭಿನಯದ ‘ಕಣ್ಣಪ್ಪ’ (Kannappa) ಚಿತ್ರಕ್ಕೆ ನ್ಯೂಜಿಲ್ಯಾಂಡ್‍ (New Zealand) ನಲ್ಲಿ ಚಿತ್ರೀಕರಣ (Shooting) ಪ್ರಾರಂಭವಾಗಿತ್ತು. ಈ ಚಿತ್ರವು ವಿಷ್ಣು ಮಂಚು (Vishnu Manchu) ಅವರ ಮಹತ್ವಾಕಾಂಕ್ಷೆಯ ಚಿತ್ರವಾಗಿದ್ದು, ಇಂಥದ್ದೊಂದು ಪೌರಾಣಿಕ ಚಿತ್ರದ ಭಾಗವಾಗಬೇಕು ಎಂಬುದು ಅವರ ಏಳು ವರ್ಷಗಳ ಕನಸಾಗಿತ್ತು. ಅದು ಶಿವ-ಪಾರ್ವತಿಯರ ಆಶೀರ್ವಾದದಿಂದ ಕೊನೆಗೂ ನನಸಾಗಿದೆ ಎಂದು ವಿಷ್ಣು ಹೇಳಿಕೊಂಡಿದ್ದರು.

    ಇಂಥದ್ದೊಂದು ಬೃಹತ್‍ ಭಕ್ತಿಪ್ರಧಾನ ಚಿತ್ರದ ಕನಸನ್ನು ವಿಷ್ಣು ಅವರಲ್ಲಿ ಮೊದಲಿಗೆ ಬಿತ್ತಿದ್ದು ಖ್ಯಾತ ನಟ ಮತ್ತು ನಿರ್ದೇಶಕ ತನಿಕೆಲ್ಲ ಭರಣಿ. ಏಳು ವರ್ಷಗಳ ಹಿಂದೆ, ಭರಣಿ ಅವರು ವಿಷ್ಣುಗೆ ‘ಕಣ್ಣಪ್ಪ’ ಚಿತ್ರದ ಕಥೆ ಹೇಳಿದರಂತೆ. ಅಲ್ಲಿಂದ ಶುರುವಾದ ಪ್ರಯಾಣ, ಈಗ ಸಿನಿಮಾ ಪ್ರಾರಂಭವಾಗುವವರೆಗೂ ಬಂದು ನಿಂತಿದೆ.

    ಕಳೆದ ಎಂಟು ತಿಂಗಳುಗಳು ಮರೆಯಲಾರದ ಅನುಭವ ಎನ್ನುವ ವಿಷ್ಣು, ಕಣ್ಣಪ್ಪ ಚಿತ್ರತಂಡದವರಿಗೆ ಈ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ಒಂದು ಮರೆಯಲಾರದ ಅನುಭವ. ನಮ್ಮ ತಂಡದವರು ರಜೆ ಇಲ್ಲದೆ ಕೆಲಸ ಮಾಡಿದ್ದಾರೆ. ಹಬ್ಬಗಳನ್ನು ಮರೆತು ತಮ್ಮ ಜವಾಬ್ದಾರಿ ನಿರ್ವಹಿಸಿದ್ದಾರೆ. ದಿನಕ್ಕೆ ಐದು ಗಂಟೆಯಷ್ಟೇ ನಿದ್ದೇ ಮಾಡಿದ್ದಾರೆ. ಎಷ್ಟೇ ಒತ್ತಡಗಳಿದ್ದರೂ, ನಮ್ಮ ನಿರ್ಧಾರ ಮತ್ತು ನಂಬಿಕೆ ಅಚಲವಾಗಿತ್ತು. ಎಲ್ಲರ ಶ್ರಮದಿಂದಾಗಿ ಕಣ್ಣಪ್ಪ ಶೂಟಿಂಗ್ ಆಗುತ್ತಿದೆ. 600ಕ್ಕೂ ಹೆಚ್ಚು ಜನರ ತಂಡ ನ್ಯೂಜಿಲ್ಯಾಂಡ್‍ನಲ್ಲಿ ಬೀಡುಬಿಟ್ಟು, ನಮ್ಮ ಕನಸನ್ನು ನನಸಾಗಿಸುವುದಕ್ಕೆ ದುಡಿಯುತ್ತಿದೆ. ನಮ್ಮ ತಂದೆ ಮೋಹನ್‍ ಬಾಬು ಅವರ ಸಹಕಾರ, ಪ್ರೋತ್ಸಾಹವು ನಮ್ಮ ತಂಡಕ್ಕೆ ದೊಡ್ಡ ಸ್ಫೂರ್ತಿಯಾಗಿದೆ ಎಂದಿದ್ದರು.

     

    ಕಣ್ಣಪ್ಪ ಚಿತ್ರದಲ್ಲಿ ಈ ದೇಶದ ಪ್ರತಿಭಾವಂತ ನಟರ ದಂಡೇ ಇದೆಯಂತೆ. ಚಿತ್ರದಲ್ಲಿ ಯಾರು ಯಾರು ನಟಿಸುತ್ತಿದ್ದಾರೆ ಎಂಬ ವಿಷಯವನ್ನು ಮುಂದಿನ ದಿನಗಳಲ್ಲಿ ಹಂತಹಂತವಾಗಿ ತಿಳಿಸಲಾಗುತ್ತದಂತೆ. ಅದರ ಮಧ್ಯೆಯೂ ಸೋಷಿಯಲ್‍ ಮೀಡಿಯಾದಲ್ಲಿ ಚಿತ್ರದ ಕುರಿತು ಸುಳ್ಳುಸುದ್ದಿಗಳು ಹರಡುತ್ತಿರುವುದರಿಂದ, ಅದನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು ಎಂದು ವಿಷ್ಣು ಮನವಿ ಮಾಡಿಕೊಂಡಿದ್ದರು ವಿಷ್ಣು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮತ್ತೊಂದು ಪರಭಾಷಾ ಚಿತ್ರವನ್ನು ಒಪ್ಪಿಕೊಂಡ ಶಿವಣ್ಣ

    ಮತ್ತೊಂದು ಪರಭಾಷಾ ಚಿತ್ರವನ್ನು ಒಪ್ಪಿಕೊಂಡ ಶಿವಣ್ಣ

    ವಿಷ್ಣು ಮಂಚು ಅಭಿನಯದ ಮಹತ್ವಾಕಾಂಕ್ಷೆಯ ಚಿತ್ರವಾದ ‘ಕಣ್ಣಪ್ಪ (Kannappa) – ದಿ ಗ್ರೇಟ್‍ ಎಪಿಕ್ ಇಂಡಿಯನ್‍ ಟೇಲ್‍’ ಕುರಿತು ಈಗಾಗಲೇ ಪ್ರೇಕ್ಷಕರ ವಲಯದಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳಿವೆ. ಅದಕ್ಕೆ ಒಂದು ಪ್ರಮುಖ ಕಾರಣ ಚಿತ್ರದ ತಾರಾಗಣ. ‘ಪ್ಯಾನ್‍ ಇಂಡಿಯಾ ಸೂಪರ್ ಸ್ಟಾರ್ ಪ್ರಭಾಸ್‍ ಮತ್ತು ಮಲಯಾಳಂ ಚಿತ್ರರಂಗದ ಜನಪ್ರಿಯ ನಟ ಮೋಹನ್‍ ಲಾಲ್‍, ಈ ಚಿತ್ರದಲ್ಲಿ ನಟಿಸುತ್ತಿರುವುದು ಈಗಾಗಲೇ ಸುದ್ದಿಯಾಗಿದೆ. ಈಗ ನಮ್ಮ ಶಿವರಾಜಕುಮಾರ್ ಸಹ ಈ ಚಿತ್ರಕ್ಕೆ ಸೇರ್ಪಡೆಯಾಗಿದ್ದಾರೆ.

    ಶಿವರಾಜ್‍ಕುಮಾರ್ (Shivaraj Kumar) ಅವರಿಗೂ, ಕಣ್ಣಪ್ಪನಿಗೂ ಬಹಳ ಹಳೆಯ ನಂಟು. ಹಲವು ವರ್ಷಗಳ ಹಿಂದೆ ಶಿವರಾಜ್‍ಕುಮಾರ್ ಅವರು, ‘ಶಿವ ಮೆಚ್ಚಿದ ಕಣ್ಣಪ್ಪ’ ಚಿತ್ರದಲ್ಲಿ ಮೊದಲು ದಿಣ್ಣನಾಗಿ, ಆ ನಂತರ ಶಿವನ ಅನುಗ್ರಹಕ್ಕೆ ಪಾತ್ರವಾಗುವ ಕಣ್ಣಪ್ಪನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ಅದೇ ಪಾತ್ರವನ್ನು ತೆಲುಗಿನಲ್ಲಿ ವಿಷ್ಣು ಮಂಚು (Vishnu Manchu) ಮಾಡುತ್ತಿದ್ದಾರೆ ಎನ್ನುವುದು ವಿಶೇಷ.

    ‘ಕಣ್ಣಪ್ಪ’ ಚಿತ್ರದಲ್ಲಿ ಶಿವರಾಜ್‍ಕುಮಾರ್ ಅವರ ಪಾತ್ರವೇನು? ಎಂಬ ವಿಷಯವನ್ನು ಚಿತ್ರತಂಡ ಸದ್ಯಕ್ಕೆ ರಹಸ್ಯವಾಗಿಟ್ಟಿದೆ. ಆದರೆ, ಶಿವಣ್ಣ ಅವರ ಪಾತ್ರ ಇಡೀ ಚಿತ್ರದ ಹೈಲೈಟ್‍ ಆಗಲಿದ್ದು, ಅಭಿಮಾನಿಗಳಿಗೆ ಬಹಳ ಇಷ್ಟವಾಗಲಿದೆ ಎಂಬುದು ಚಿತ್ರತಂಡದ ಅಭಿಪ್ರಾಯ.

     

    ಈ ಹಿಂದೆ ಸ್ಟಾರ್ ಪ್ಲಸ್‍ ವಾಹಿನಿಗಾಗಿ ‘ಮಹಾಭಾರತ’ ಸರಣಿಯನ್ನು ನಿರ್ದೇಶಿಸಿದ್ದ ಮುಕೇಶ್‍ ಕುಮಾರ್ ‍ಸಿಂಗ್‍, ಈ ಪೌರಾಣಿಕ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಹಿರಿಯ ನಟ ಮತ್ತು ನಿರ್ಮಾಪಕ ಡಾ. ಮೋಹನ್‍ ಬಾಬು ನಿರ್ಮಿಸುತ್ತಿರುವ  ಶಿವನ ಅಚಲ ಭಕ್ತನಾದ ಕಣ್ಣಪ್ಪನ ಕಾಲಾತೀತ ಕಥೆಯ ಚಿತ್ರೀಕರಣ ಈಗಾಗಲೇ ನ್ಯೂಜಿಲ್ಯಾಂಡ್‍ನಲ್ಲಿ ಪ್ರಾರಂಭವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]