Tag: ವಿಷ ಆಹಾರ

  • ಗದಗ: ವಿಷ ಆಹಾರ ಸೇವಿಸಿ 15ಕ್ಕೂ ಹೆಚ್ಚು ಕುರಿಗಳು ಸಾವು

    ಗದಗ: ವಿಷ ಆಹಾರ ಸೇವಿಸಿ 15ಕ್ಕೂ ಹೆಚ್ಚು ಕುರಿಗಳು ಸಾವು

    ಗದಗ: ವಿಷ ಆಹಾರ ಸೇವಿಸಿ 15 ಕ್ಕೂ ಹೆಚ್ಚು ಕುರಿಗಳ ಸಾವನ್ನಪ್ಪಿರೋ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

    ಜಮೀನಿನಲ್ಲಿ ಅಲ್ಲಲ್ಲಿ ಕುರಿಗಳು ಸತ್ತು ಬಿದ್ದಿವೆ. ಜಮೀನಿನ ಬೆಳೆಗೆ ಸಿಂಪಡಿಸಿದ ವಿಷ ಆಹಾರ ಸೇವಿಸಿ ಕುರಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸಾವನ್ನಪ್ಪಿರುವ ಕುರಿಗಳು ದೇವಪ್ಪ ಕಂಬಳಿ ಎಂಬವರಿಗೆ ಸೇರಿದ್ದವಾಗಿವೆ.

    ಘಟನೆಯಲ್ಲಿ ಅನೇಕ ಕುರಿಗಳು ಅಸ್ವಸ್ಥತಗೊಂಡಿದ್ದು, ಸ್ಥಳಕ್ಕೆ ಪಶುವೈದ್ಯರು ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ. ಬರಗಾಲದಲ್ಲಿ 15 ಕುರಿಗಳನ್ನು ಕಳೆದುಕೊಂಡ ಮಾಲೀಕರ ಆಕ್ರಂದನ ಮುಗಿಲು ಮುಟ್ಟಿದೆ.

    ಈ ಕುರಿತು ಗದಗ ಜಿಲ್ಲೆಯ ಮುಂಡರಗಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

  • ತುಮಕೂರು ಹಾಸ್ಟೆಲ್ ಮಕ್ಕಳ ಸಾವು: ಶಾಲೆಯ ಮಾಜಿ ಪ್ರಾಂಶುಪಾಲ ವಶಕ್ಕೆ

    ತುಮಕೂರು ಹಾಸ್ಟೆಲ್ ಮಕ್ಕಳ ಸಾವು: ಶಾಲೆಯ ಮಾಜಿ ಪ್ರಾಂಶುಪಾಲ ವಶಕ್ಕೆ

    ತುಮಕೂರು: ಹಾಸ್ಟೆಲ್‍ನಲ್ಲಿ ವಿಷದೂಟ ಸೇವಿಸಿ ಮೂರು ಮಕ್ಕಳು ಮೃತರಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾವಾರಿಧಿ ಶಾಲೆಯ ಮಾಜಿ ಪ್ರಾಂಶುಪಾಲ ರವಿಕುಮಾರ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಮಾರ್ಚ್ 9 ರಂದು ಮಾಜಿ ಶಾಸಕ ಕಿರಣ್‍ಕುಮಾರ್ ಒಡೆತನದ ವಿದ್ಯಾವಾರಿಧಿ ಶಾಲೆಯ ಹಾಸ್ಟೆಲ್‍ನಲ್ಲಿ ಮಕ್ಕಳು ವಿಷಾಹಾರ ಸೇವನೆಯಿಂದ ಮೃತಪಟ್ಟಿದ್ದರು. ಇನ್ನೂ ವಿಷಾಹಾರ ಸೇವನೆಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸೆಕ್ಯೂರಿಟಿ ಗಾರ್ಡ್ ರಮೇಶ್ ಮಾರ್ಚ್ 11 ರಂದು ಸಾವನ್ನಪ್ಪಿದ್ದರು.

    ಇದನ್ನೂ ಓದಿ: ತುಮಕೂರು: ವಸತಿ ಶಾಲೆಯಲ್ಲಿ ಫುಡ್ ಪಾಯ್ಸನ್- 3 ವಿದ್ಯಾರ್ಥಿಗಳ ದುರ್ಮರಣ

    ವಿಷಾಹಾರ ಸೇವಿಸಿ ಸಾವನ್ನಪ್ಪಿದ್ದ ಮಕ್ಕಳ ಮರಣೋತ್ತರ ಪರೀಕ್ಷೆ ನಡೆದಿದ್ದು, ಮಕ್ಕಳ ದೇಹದಲ್ಲಿ ದ್ರವರೂಪದ ವಿಷಕಾರಿ ಅಂಶವಿರುವುದು ಪತ್ತೆಯಾಗಿತ್ತು. ವಿದ್ಯಾವಾರಿಧಿ ಶಾಲೆಯ ಮಾಜಿ ಪ್ರಾಂಶುಪಾಲ ರವಿಕುಮಾರ್ ಕೂಡ ಘಟನೆ ಬಳಿಕ ತಲೆ ಮರೆಸಿಕೊಂಡಿದ್ದರು.

    ಮಾರ್ಚ್ 8ರ ರಾತ್ರಿ ನಡೆದಿದ್ದೇನು?: ತುಮಕೂರು ಜಿಲ್ಲೆಯ ಚಿಕ್ಕನಾಯಕನ ಹಳ್ಳಿಯ ವಿದ್ಯಾವಾರಿಧಿ ಇಂಟರ್‍ನ್ಯಾಷನಲ್ ಬೋರ್ಡಿಂಗ್ ಶಾಲೆಯಲ್ಲಿ ವಿಷಯುಕ್ತ ಆಹಾರ ಸೇವಿಸಿ 15 ವರ್ಷದ ಶ್ರೇಯಸ್, ಆಕಾಂಕ್ಷ್ ಪಲ್ಲಕ್ಕಿ ಹಾಗೂ ಶಾಂತಮೂರ್ತಿ ಎಂಬ ಮೂವರು ಅಮಯಾಕ ಮಕ್ಕಳು ಸಾವನಪ್ಪಿದ್ದರು. ಈ ಶಾಲೆ ಬಿಜೆಪಿಯ ಮಾಜಿ ಶಾಸಕ ಕಿರಣ್ ಕುಮಾರ್ ಅವರಿಗೆ ಸೇರಿದ್ದಾಗಿದೆ.

    ಕಿರಣ್ ಅವರೊಂದಿಗಿನ ವೈಮನಸ್ಸಿನಿಂದ ರವಿ ಶಾಲೆಯಿಂದ ಹೋರಹೋಗಿದ್ದರು ಎಂದು ಹೇಳಲಾಗಿದೆ. ಪ್ರಕರಣದ ನಂತರ ನಾಪತ್ತೆಯಾಗಿದ್ದ ರವಿಕುಮಾರ್ ಅವರನ್ನು ವಶಕ್ಕೆ ಪಡೆದಿದ್ದು, ತಿಪಟೂರು ಡಿವೈಎಸ್‍ಪಿ ವೇಣುಗೋಪಾಲ್ ನೇತೃತ್ವದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

  • ತುಮಕೂರು ಶಾಲೆಯಲ್ಲಿ 3 ಮಕ್ಕಳ ಸಾವು ಪ್ರಕರಣ- ಮರಣೋತ್ತರ ಪರೀಕ್ಷೆಯಲ್ಲಿ ವಿಷದಂಶ ಪತ್ತೆ

    ತುಮಕೂರು ಶಾಲೆಯಲ್ಲಿ 3 ಮಕ್ಕಳ ಸಾವು ಪ್ರಕರಣ- ಮರಣೋತ್ತರ ಪರೀಕ್ಷೆಯಲ್ಲಿ ವಿಷದಂಶ ಪತ್ತೆ

    – ಪತ್ನಿ ಜೊತೆ ಮಾಜಿ ಶಾಸಕ ಕಿರಣ್ ಕುಮಾರ್ ನಾಪತ್ತೆ

    ತುಮಕೂರು: ಜಿಲ್ಲೆಯ ಬೋರ್ಡಿಂಗ್ ಶಾಲೆಯಲ್ಲಿ ವಿಷಾಹಾರ ಸೇವಿಸಿ ಸಾವನ್ನಪ್ಪಿದ್ದ ಮಕ್ಕಳ ಮರಣೋತ್ತರ ಪರೀಕ್ಷೆ ನಡೆದಿದ್ದು, ಮಕ್ಕಳ ದೇಹದಲ್ಲಿ ದ್ರವರೂಪದ ವಿಷಕಾರಿ ಅಂಶವಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

    ರಕ್ತದ ಮಾದರಿಯನ್ನು ಎಫ್‍ಎಸ್‍ಎಲ್‍ಗೆ ಕಳುಹಿಸಲಾಗಿದೆ. 15 ದಿನದೊಳಗೆ ಮರಣೋತ್ತರ ಪರೀಕ್ಷೆಯ ವರದಿ ಸಿಕ್ಕ ನಂತರ ಸತ್ಯಾಂಶ ಗೊತ್ತಾಗಲಿದೆ ಎಂದು ಮರಣೋತ್ತರ ಪರೀಕ್ಷೆ ನಡೆಸಿದ ಡಾ.ದಿನೇಶ್ ಹೇಳಿದ್ದಾರೆ.

                                         

    ಪ್ರಕರಣಕ್ಕೆ ಸಂಬಂಧಿಸಿಂತೆ ಪ್ರಮುಖ ಆರೋಪಿಗಳು ನಾಪತ್ತೆಯಾಗಿದ್ದು, ಅವರಿಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ತಿಪಟೂರು ಡಿವೈಎಸ್‍ಪಿ ವೇಣುಗೋಪಾಲ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಶಾಲಾ ಮಾಲೀಕರಾದ ಮಾಜಿ ಶಾಸಕ ಕಿರಣ್ ಕುಮಾರ್ ಹಾಗೂ ಪತ್ನಿ ಕವಿತಾಗಾಗಿ ತೀವ್ರ ಶೋಧ ನಡೆಯುತ್ತಿದೆ. ಶಾಲೆಯ ಮಾಲೀಕರು ಬೆಂಗಳೂರಿನಲ್ಲಿ ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಿರುವ ಎಸ್‍ಪಿ ಇಶಾ ಪಂತ್ ಅಲ್ಲಿಗೂ ತಂಡ ಕಳಿಹಿಸಿರುವುದಾಗಿ ಹೇಳಿದ್ರು. ಶಾಲೆಯಲ್ಲಿದ್ದ ಸಿಸಿಟಿವಿ ಡಿವಿಆರ್ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದೇವೆ. ಎಫ್‍ಎಸ್‍ಎಲ್ ವರದಿ ಬಂದ ಬಳಿಕ ಸಂಪೂರ್ಣ ಮಾಹಿತಿ ತಿಳಿಯಲಿದೆ ಅಂದ್ರು.

    ವಿದ್ಯಾವಾರಿಧಿ ಶಾಲೆಯ ಮಾಜಿ ಪ್ರಾಂಶುಪಾಲ ರವಿ ಕೂಡ ಘಟನೆ ಬಳಿಕ ತಲೆ ಮರೆಸಿಕೊಂಡಿದ್ದಾರೆ. ವಿಷ ಬೆರಕೆಯಲ್ಲಿ ರವಿ ಕೈವಾಡವಿಡುವ ಶಂಕೆಯಿದ್ದು ರವಿ ಪತ್ತೆಗಾಗಿ ಪೊಲೀಸರಿಂದ ಶೋಧ ನಡೆಯುತ್ತಿದೆ. ಅಗತ್ಯವಿದ್ದರೆ ರವಿ ವಿಚಾರಣೆ ಕೂಡ ನಡೆಯಲಿದೆ ಅಂತಾ ಎಸ್‍ಪಿ ಹೇಳಿದ್ದಾರೆ. ಕಿರಣ್ ಅವರೊಂದಿಗಿನ ವೈಮನಸ್ಸಿನಿಂದ ರವಿ ಶಾಲೆಯಿಂದ ಹೋರಹೋಗಿದ್ದರು ಎಂದು ಹೇಳಲಾಗಿದೆ.

    ವಿಷ ಆಹಾರ ಸೇವನೆಯಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೆಕ್ಯೂರಿಟಿಗಾರ್ಡ್ ರಮೇಶ್ ಘಟನೆ ಬಗ್ಗೆ ಮಾಹಿತಿ ನೀಡಲು ಹಾತೊರೆಯುತ್ತಿದ್ದಾರೆ. ಆದ್ರೆ ವೆಂಟಿಲಟರ್‍ನಲ್ಲಿ ಉಸಿರಾಡುತ್ತಿರುವುದರಿಂದ ಅವರು ಮಾತನಾಡಲಾಗದೆ ವೇದನೆ ಅನುಭವಿಸುತ್ತಿದ್ದಾರೆ.

    ನಡೆದಿದ್ದೇನು?: ತುಮಕೂರು ಜಿಲ್ಲೆಯ ಚಿಕ್ಕನಾಯಕನ ಹಳ್ಳಿಯ ವಿದ್ಯಾವಾರಿಧಿ ಇಂಟರ್‍ನ್ಯಾಷನಲ್ ಬೋರ್ಡಿಂಗ್ ಶಾಲೆಯಲ್ಲಿ ವಿಷಯುಕ್ತ ಆಹಾರ ಸೇವಿಸಿ 15 ವರ್ಷದ ಶ್ರೇಯಸ್, ಆಕಾಂಕ್ಷ್ ಪಲ್ಲಕ್ಕಿ ಹಾಗೂ ಶಾಂತಮೂರ್ತಿ ಎಂಬ ಮೂವರು ಅಮಯಾಕ ಮಕ್ಕಳು ಸಾವನಪ್ಪಿದ್ದರು. ಈ ಶಾಲೆ ಬಿಜೆಪಿಯ ಮಾಜಿ ಶಾಸಕ ಕಿರಣ್ ಕುಮಾರ್ ಅವರಿಗೆ ಸೇರಿದ್ದಾಗಿದೆ. ಘಟನೆ ಸಂಬಂಧ ಆರು ಮಂದಿ ವಿರುದ್ದ ಎಫ್.ಐ.ಆರ್ ದಾಖಲಾಗಿತ್ತು. ಇದರಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇದೀಗ ಕೋರ್ಟ್ ಇವರಿಗೆ ಜಾಮೀನು ನೀಡಿ ಬಿಡುಗಡೆಗೊಳಿಸಿದೆ.