Tag: ವಿ.ಕೆ ಸಕ್ಸೇನಾ

  • ಕೇಜ್ರಿವಾಲ್ ಜೈಲಿನಲ್ಲಿ ಕಡಿಮೆ ಕ್ಯಾಲರಿ ಆಹಾರ ಸೇವಿಸುತ್ತಿದ್ದಾರೆ: ದೆಹಲಿ ಸಿಎಸ್‌ಗೆ ಲೆಫ್ಟಿನೆಂಟ್ ಗರ್ವನರ್ ವಿ.ಕೆ ಸಕ್ಸೇನಾ ಪತ್ರ

    ಕೇಜ್ರಿವಾಲ್ ಜೈಲಿನಲ್ಲಿ ಕಡಿಮೆ ಕ್ಯಾಲರಿ ಆಹಾರ ಸೇವಿಸುತ್ತಿದ್ದಾರೆ: ದೆಹಲಿ ಸಿಎಸ್‌ಗೆ ಲೆಫ್ಟಿನೆಂಟ್ ಗರ್ವನರ್ ವಿ.ಕೆ ಸಕ್ಸೇನಾ ಪತ್ರ

    ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಉದ್ದೇಶಪೂರ್ವಕವಾಗಿ ಜೈಲಿನಲ್ಲಿ ಕಡಿಮೆ ಕ್ಯಾಲರಿ ಇರುವ ಆಹಾರವನ್ನು ಸೇವಿಸುತ್ತಿದ್ದಾರೆ ಎಂದು ಲೆಫ್ಟಿನೆಂಟ್ ಗರ್ವನರ್ ವಿ.ಕೆ ಸಕ್ಸೇನಾ (V.K.Saxena) ಹೇಳಿದ್ದಾರೆ.

    ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರ ಪ್ರಧಾನ ಕಾರ್ಯದರ್ಶಿ ದೆಹಲಿಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಇದರಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯದ ಬಗ್ಗೆ ಪ್ರಸ್ತಾಪಿಸಲಾಗಿದೆ. ತೂಕ ಕಳೆದುಕೊಳ್ಳಲು ಕಾರಣಗಳೇನು ಎಂದು ವಿವರಿಸಲಾಗಿದೆ. ಕಡಿಮೆ ಕ್ಯಾಲರಿಗಳ ಕಾರಣದಿಂದಾಗಿ ಕೇಜ್ರಿವಾಲ್ ಅವರು ತೂಕವನ್ನು ಕಳೆದುಕೊಳ್ಳುತ್ತಾರೆ. ಜೂನ್ 6 ರಿಂದ ಜುಲೈ 13 ರ ನಡುವೆ ಅವರು ಸರಿಯಾದ ಆಹಾರ ಸೇವಿಸಿಲ್ಲ. ಇದರಿಂದಾಗಿ ತೂಕ ಕಳೆದುಕೊಂಡಿದ್ದಾರೆ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ದೆಹಲಿ ಸಿಎಂ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು – ಆದರೂ ಇಲ್ಲ ಬಿಡುಗಡೆ ಭಾಗ್ಯ

    ಪತ್ರದಲ್ಲಿ ಜೈಲು ಅಧೀಕ್ಷಕರ ವರದಿಯನ್ನು ಉಲ್ಲೇಖಿಸಿದ್ದು, ಮುಖ್ಯಮಂತ್ರಿಗಳು ವೈದ್ಯರು ಸೂಚಿಸಿದ ಆಹಾರ ಮತ್ತು ಔಷಧಿಗಳನ್ನು ಸೇವಿಸದಿರುವ ಬಗ್ಗೆ ಎಲ್‌ಜಿ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಬರೆಯಲಾಗಿದೆ. ಕೇಜ್ರಿವಾಲ್ ಅವರು ಉದ್ದೇಶಪೂರ್ವಕವಾಗಿ ಕಡಿಮೆ ಕ್ಯಾಲರಿ ಆಹಾರವನ್ನು ಸೇವಿಸುತ್ತಿದ್ದಾರೆ ಎಂದು ವರದಿ ಹೇಳುತ್ತದೆ. ವೈದ್ಯರು ನೀಡುವ ಡಯಟ್ ಚಾರ್ಟ್ ಪಾಲಿಸುತ್ತಿಲ್ಲ ಎಂದು ಆರೋಪಿಸಲಾಗಿದೆ.

    ಎಲ್‌ಜಿ ಕಚೇರಿ ಬರೆದಿರುವ ಪತ್ರಕ್ಕೆ ಆಮ್ ಆದ್ಮಿ ಪಕ್ಷ ಆಕ್ಷೇಪ ವ್ಯಕ್ತಪಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯಸಭಾ ಸಂಸದ ಸಂಜಯ್ ಸಿಂಗ್, ಇದೇನು ತಮಾಷೆ ಎಲ್‌ಜಿ ಸಾಹೇಬರೇ! ಯಾರಾದರೂ ರಾತ್ರಿಯಲ್ಲಿ ಸಕ್ಕರೆಯನ್ನು ಕಡಿಮೆ ಮಾಡುತ್ತಾರೆಯೇ? ಯಾವುದು ತುಂಬಾ ಅಪಾಯಕಾರಿ. ಎಲ್ಜಿ ಸರ್, ನಿಮಗೆ ಕಾಯಿಲೆಯ ಬಗ್ಗೆ ತಿಳಿದಿಲ್ಲದಿದ್ದರೆ. ನೀವು ಅಂತಹ ಪತ್ರವನ್ನು ಬರೆಯಬಾರದು ಎಂದು ಕುಟುಕಿದ್ದಾರೆ.

    ದೆಹಲಿ ಸರ್ಕಾರದ ಸಚಿವೆ ಅತಿಶಿ ಮಾತನಾಡಿ, ಬಿಜೆಪಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲ್ಲಲು ಸಂಚು ರೂಪಿಸುತ್ತಿದೆ. ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಸಕ್ಕರೆ ಮಟ್ಟ ಎಂಟು ಬಾರಿ 50ಕ್ಕಿಂತ ಕಡಿಮೆಯಾಗಿದೆ. ಕೋಮಾಕ್ಕೆ ಹೋಗಬಹುದು ಅಂತಹ ಪರಿಸ್ಥಿತಿಯಲ್ಲಿ, ಮಿದುಳಿನ ಸ್ಟ್ರೋಕ್ ಅಪಾಯವೂ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಬಕಾರಿ ನೀತಿ ಪ್ರಕರಣ – ಅರವಿಂದ್ ಕೇಜ್ರಿವಾಲ್‍ಗೆ ಮಧ್ಯಂತರ ಜಾಮೀನು

    ಈ ಬಗ್ಗೆ ಬಿಜೆಪಿ ನಾಯಕ ವೀರೇಂದ್ರ ಸಚ್‌ದೇವ್ ಪ್ರತಿಕ್ರಿಯಿಸಿ, ತಿಹಾರ್ ಜೈಲಿನ ಅಧೀಕ್ಷಕರ ಪತ್ರ ಸಾರ್ವಜನಿಕವಾಗಿದೆ. ನ್ಯಾಯಾಲಯದ ಆದೇಶದ ನಂತರ ಅರವಿಂದ್ ಕೇಜ್ರಿವಾಲ್ ಅವರಿಗೆ ಮನೆಯಲ್ಲೇ ತಯಾರಿಸಿದ ಆಹಾರವನ್ನು ನೀಡಲಾಗುತ್ತದೆ. ಜೂನ್ 6 ಮತ್ತು ಜುಲೈ 13 ರ ನಡುವೆ ಉದ್ದೇಶಪೂರ್ವಕವಾಗಿ ಕಡಿಮೆ ಕ್ಯಾಲರಿ ಆಹಾರ ಸೇವಿಸಿದ್ದಾರೆ. ಇದರಿಂದ ಅವರ ತೂಕ ಕಡಿಮೆಯಾಗುತ್ತದೆ. ಸಹಾನುಭೂತಿಗಾಗಿ ಅವರು ಜೈಲಿನಲ್ಲಿ ತೂಕವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

  • AAP ನಾಯಕರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ದೆಹಲಿ ಲೆಫ್ಟಿನೆಂಟ್ ಗವರ್ನರ್

    AAP ನಾಯಕರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ದೆಹಲಿ ಲೆಫ್ಟಿನೆಂಟ್ ಗವರ್ನರ್

    ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ತಮ್ಮ ವಿರುದ್ಧದ ಸುಳ್ಳು ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ಎಎಪಿ ನಾಯಕರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

    ಎಎಪಿ ಶಾಸಕರಾದ ಅತಿಶಿ, ಸೌರಭ್ ಭಾರದ್ವಾಜ್ ಮತ್ತು ದುರ್ಗೇಶ್ ಪಾಠಕ್ ಸೇರಿದಂತೆ ಇತರ ಎಎಪಿ ನಾಯಕರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ. ಸಕ್ಸೆನಾ 2016ರಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಅಧ್ಯಕ್ಷರಾಗಿದ್ದಾಗ 1,400 ಕೋಟಿ ರೂ. ಭ್ರಷ್ಟಾಚಾರ ಮಾಡಿದ್ದಾರೆ ಎಂದು ಎಎಪಿ ನಾಯಕರು ಆರೋಪಿಸಿದ್ದರು. ಈ ಆರೋಪವನ್ನು ವಿ.ಕೆ ಸಕ್ಸೇನಾ ತಳ್ಳಿಹಾಕಿದ್ದಾರೆ. ಇದನ್ನೂ ಓದಿ: ಲಕ್ಷ್ಮೀನಾರಾಯಣ ಕಾಂಗ್ರೆಸ್‌ಗೆ ರಾಜೀನಾಮೆ- ಬಿಜೆಪಿ ಸೇರಲು ಸಿದ್ಧ

    ಕಳೆದ ತಿಂಗಳು ಕೇಜ್ರಿವಾಲ್ ಸರ್ಕಾರದ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಬಗ್ಗೆ ಸಿಬಿಐ ತನಿಖೆಗೆ ಸಕ್ಸೆನಾ ಶಿಫಾರಸು ಮಾಡಿದ ಬಳಿಕ ಆಡಳಿತ ಪಕ್ಷ ಮತ್ತು ಲೆಫ್ಟಿನೆಂಟ್ ಗವರ್ನರ್ ನಡುವೆ ಜಿದ್ದಾಜಿದ್ದಿ ಆರಂಭವಾಗಿತ್ತು. ಆ ಬಳಿಕ ಲೆಫ್ಟಿನೆಂಟ್ ಗವರ್ನರ್ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಇದೀಗ ಎಎಪಿ ಶಾಸಕರು ಸೇರಿದಂತೆ ದೆಹಲಿಯ ಸಂವಾದ ಮತ್ತು ಅಭಿವೃದ್ಧಿ ಆಯೋಗದ ಉಪಾಧ್ಯಕ್ಷರಾಗಿರುವ ಜಾಸ್ಮಿನ್ ಶಾ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇದೀಗ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಏಪ್ರಿಲ್‌- ಜೂನ್‌ GDP ಬೆಳವಣಿಗೆ 13.5% ರಷ್ಟು ಏರಿಕೆ

    Live Tv
    [brid partner=56869869 player=32851 video=960834 autoplay=true]

  • ಸಿಂಗಾಪುರ ಭೇಟಿಗೆ ಕೇಜ್ರಿವಾಲ್‌ಗೆ ಅನುಮತಿ ನಿರಾಕರಿಸಿದ ಲೆಫ್ಟಿನೆಂಟ್ ಗವರ್ನರ್

    ಸಿಂಗಾಪುರ ಭೇಟಿಗೆ ಕೇಜ್ರಿವಾಲ್‌ಗೆ ಅನುಮತಿ ನಿರಾಕರಿಸಿದ ಲೆಫ್ಟಿನೆಂಟ್ ಗವರ್ನರ್

    ನವದೆಹಲಿ: ಆಗಸ್ಟ್ 1 ರಂದು ಸಿಂಗಾಪುರದಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೋರಿದ ಅನುಮತಿಯನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್(ಎಲ್‌ಜಿ) ವಿ.ಕೆ ಸಕ್ಸೇನಾ ಗುರುವಾರ ತಿರಸ್ಕರಿಸಿದ್ದಾರೆ.

    ಸಿಂಗಾಪುರದಲ್ಲಿ ನಡೆಯಲಿರುವ ಶೃಂಗಸಭೆ ಮೇಯರ್‌ಗಳಿಗೆ ಮೀಸಲಾಗಿದ್ದು, ಆ ಕಾರ್ಯಕ್ರಮದಲ್ಲಿ ಸಿಎಂ ಹಾಜರಾಗುವುದು ಸರಿಯಲ್ಲ ಎಂದು ಸಕ್ಸೇನಾ ಹೇಳಿದ್ದಾರೆ.

    ಲೆಫ್ಟಿನೆಂಟ್ ಗವರ್ನರ್ ಶೃಂಗಸಭೆಯ ಭೇಟಿಗೆ ಅನುಮತಿ ನೀಡದಿದ್ದರೂ ಕೇಜ್ರಿವಾಲ್ ಸಿಂಗಾಪುರಕ್ಕೆ ಭೇಟಿ ನೀಡುವುದಾಗಿ ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಕೈ ಕೊಟ್ಟ ಮೋದಿ ಪ್ಲಾನ್ – ಕಾಡುಗಳ್ಳರ ಪತ್ತೆ ಹಚ್ಚಲು ವಿಫಲವಾಯ್ತು ಮುಧೋಳ ತಳಿಯ ಶ್ವಾನ

    ಅನುಮತಿ ನಿರಾಕರಣೆಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, ನಮ್ಮ ದೇಶದ ಪ್ರತಿಯೊಂದು ಸಾಂವಿಧಾನಿಕ ಪ್ರಾಧಿಕಾರದ ಭೇಟಿಯನ್ನು ಆ ಪ್ರಾಧಿಕಾರದ ವ್ಯಾಪ್ತಿಯೊಳಗೆ ಬರುವ ವಿಷಯಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ನಿಮ್ಮ ಮಾತಿನಂತೆ ನಡೆಯುವುದಾದರೆ, ಪ್ರಧಾನಿ ನರೇಂದ್ರ ಮೋದಿಯವರು ಯಾವುದೇ ವಿದೇಶಿ ಭೇಟಿಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿರಲಿಲ್ಲ. ಅವರು ಹೆಚ್ಚಿನ ಭೇಟಿಗಳಲ್ಲಿ ರಾಜ್ಯದ ಪಟ್ಟಿಯಲ್ಲಿ ಹಾಗೂ ಅಧಿಕಾರದ ವ್ಯಾಪ್ತಿಯಲ್ಲಿ ಬಾರದ ವಿಷಯಗಳನ್ನೇ ಚರ್ಚಿಸುತ್ತಾರೆ ಎಂದಿದ್ದಾರೆ.

    ಕೇಜ್ರಿವಾಲ್ ಅವರನ್ನು ಜೂನ್‌ನಲ್ಲಿ ಸಿಂಗಾಪುರದ ಹೈ ಕಮಿಷನರ್ ಸೈಮನ್ ವಾಂಗ್ ಅವರು ಶೃಂಗಸಭೆಗೆ ಆಹ್ವಾನಿಸಿದ್ದರು. ಈ ಬಗ್ಗೆ ಕಳೆದ ವಾರ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಸಿಂಗಾಪುರ ಭೇಟಿಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ

    ಕೇಂದ್ರ ತನಗೆ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅನುಮತಿ ನೀಡದೇ ಹೋದಾಗ ಕೇಜ್ರಿವಾಲ್ ಅಸಮಾಧಾನ ವ್ಯಕ್ತಪಡಿಸಿ, ನಾನು ಅಪರಾಧಿಯಲ್ಲ, ದೆಹಲಿಯ ಚುನಾಯಿತ ಮುಖ್ಯಮಂತ್ರಿ. ಸಿಂಗಾಪುರದಲ್ಲಿ ನಡೆಯುತ್ತಿರುವ ಜಾಗತಿಕ ಶೃಂಗಸಭೆಯಲ್ಲಿ ಭಾಗವಹಿಸುವುದು ಹೆಮ್ಮೆಯ ವಿಚಾರ. ಆದರೆ ಕೇಂದ್ರ ನನಗೆ ಭೇಟಿಗೆ ಅನುಮತಿ ನೀಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದರು.

    Live Tv
    [brid partner=56869869 player=32851 video=960834 autoplay=true]