Tag: ವಿ.ಶ್ರೀನಿವಾಸ್ ಪ್ರಸಾದ್

  • ಬೌದ್ಧ ಧರ್ಮದ ವಿಧಿ-ವಿಧಾನದಂತೆ ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ

    ಬೌದ್ಧ ಧರ್ಮದ ವಿಧಿ-ವಿಧಾನದಂತೆ ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ

    ಮೈಸೂರು: ಅನಾರೋಗ್ಯದಿಂದ ಮೃತಪಟ್ಟ ಸಂಸದ ವಿ.ಶ್ರೀನಿವಾಸ್ ಪ್ರಸಾದ್ (Srinivasa Prasad) ಅವರ ಅಂತ್ಯಕ್ರಿಯೆ ಅಶೋಕಪುರಂನ ಡಾ.ಬಿ.ಆರ್ ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಬೌದ್ಧ ಧರ್ಮದ ವಿದಿ-ವಿಧಾನದಂತೆ ನೆರವೇರಿತು.

    ಅಂತ್ಯಕ್ರಿಯೆ (Srinivasa Prasad Funeral) ವೇಳೆ ಬೆಂಗಳೂರಿನ ಮಹಾಬೋಧಿಯ ಆನಂದ ಬಂತೇಜಿ, ಮೈಸೂರಿನ ವಿಶ್ವಮೈತ್ರಿ ಬುದ್ಧ ವಿಹಾರದ ಕಲ್ಯಾಣಸಿರಿ ಬಂತೇಜಿ ನೇತೃತ್ವದಲ್ಲಿ ವಿಧಿ-ವಿಧಾನಗಳು ನೆರವೇರಿತು. ಈ ವೇಳೆ ಸುಮಾರು 15ಕ್ಕೂ ಹೆಚ್ಚು ಬೌದ್ಧ ಬಿಕ್ಕುಗಳಿಂದ ಪ್ರಾರ್ಥನೆ ಸಲ್ಲಿಸಲಾಯಿತು. ಬೌದ್ಧ ಬಂತೇಜಿಗಳಿಗೆ ವಸ್ತ್ರದಾನ, ಹಣ್ಣುಗಳ ಅರ್ಪಣೆ, ಪುಣ್ಯಾನುಮೋದನೆ ಬಳಿಕ ಕುಟುಂಬಸ್ಥರು ಗೌರವ ಸಲ್ಲಿಸಿದ ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಯಿತು. ಇದನ್ನೂ ಓದಿ: ಮರೆಯಾದ ನಿಷ್ಕಳಂಕ ರಾಜಕಾರಣಿ – ಸಿಎಂ, ಡಿಸಿಎಂ ಸೇರಿದಂತೆ ಗಣ್ಯರಿಂದ ಶ್ರೀನಿವಾಸ್ ಪ್ರಸಾದ್ ಅಂತಿಮ ದರ್ಶನ

    ಅಂತ್ಯಕ್ರಿಯೆಗೂ ಮುನ್ನ ಅಶೋಕಪುರಂನ ಪ್ರಮುಖ ರಸ್ತೆಗಳಲ್ಲಿ ಮೃತರ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು. ಈ ವೇಳೆ ಸಾವಿರಾರು ಜನ ಸೇರಿದ್ದು, ಅಹಿತಕರ ಘಟನೆಗಳು ಜರುಗದಂತೆ ಪೊಲೀಸ್ ಇಲಾಖೆ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿತ್ತು. ಅಂತ್ಯಕ್ರಿಯೆಗೂ ಮುನ್ನ ಸಚಿವ ಮಹದೇವಪ್ಪ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೈಸೂರು – ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ವಡೆಯರ್, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಗಣ್ಯರು ಅಂತಿಮ ದರ್ಶನ ಪಡೆದಿದ್ದಾರೆ.

    ಮೈಸೂರಿನ ಅಶೋಕಪುರಂನ ಶ್ರೀನಿವಾಸ ಪ್ರಸಾದ್ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ನಂಜನಗೂಡು ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದರು. ಕೇಂದ್ರ ಮತ್ತು ರಾಜ್ಯದಲ್ಲಿ ಒಮ್ಮೆ ಸಚಿವರಾಗಿ ಕೆಲಸ ಮಾಡಿ ಕಳೆದ ತಿಂಗಳು ರಾಜಕೀಯ ನಿವೃತ್ತಿ ಪಡೆದು ವಿಶ್ರಾಂತಿ ಜೀವನ ಆರಂಭಿಸಿದ್ದರು. ಶ್ರೀನಿವಾಸ್ ಪ್ರಸಾದ್ ಅವರಿಗೆ ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳಿದ್ದಾರೆ. ಇದನ್ನೂ ಓದಿ: ಶ್ರೀನಿವಾಸ್‌ ಪ್ರಸಾದ್‌ ವಿಧಿವಶ – ಪ್ರಭಾವಿ ದಲಿತ ನಾಯಕನ ರಾಜಕೀಯ ಏಳು-ಬೀಳಿನ ಹಾದಿ ಹೇಗಿತ್ತು?

  • ಬೌದ್ಧ ಸಂಪ್ರದಾಯದಂತೆ ಇಂದು ಸಂಸದ ಶ್ರೀನಿವಾಸ್‌ ಪ್ರಸಾದ್‌ ಅಂತ್ಯಕ್ರಿಯೆ

    ಬೌದ್ಧ ಸಂಪ್ರದಾಯದಂತೆ ಇಂದು ಸಂಸದ ಶ್ರೀನಿವಾಸ್‌ ಪ್ರಸಾದ್‌ ಅಂತ್ಯಕ್ರಿಯೆ

    ಮೈಸೂರು: ಬಿಜೆಪಿ ಸಂಸದ, ದಲಿತ ನಾಯಕ ವಿ.ಶ್ರೀನಿವಾಸ್‌ ಪ್ರಸಾದ್‌ (Srinivas Prasad) ಅವರ ಅಂತ್ಯಕ್ರಿಯೆ ಬೌದ್ಧ ಧರ್ಮದ ವಿಧಿವಿಧಾನದಂತೆ ಮೈಸೂರಿನಲ್ಲಿ (Mysuru) ಇಂದು ನಡೆಯಲಿದೆ.

    ನಗರದ ಅಶೋಕಪುರಂ ಡಾ. ಬಿ.ಆರ್.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇದಕ್ಕೂ ಮುನ್ನ ಅಶೋಕಪುರಂನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಗುವುದು. ಇದನ್ನೂ ಓದಿ: ಮರೆಯಾದ ನಿಷ್ಕಳಂಕ ರಾಜಕಾರಣಿ – ಸಿಎಂ, ಡಿಸಿಎಂ ಸೇರಿದಂತೆ ಗಣ್ಯರಿಂದ ಶ್ರೀನಿವಾಸ್ ಪ್ರಸಾದ್ ಅಂತಿಮ ದರ್ಶನ

    ಇಂದು ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಹಿತಕರ ಘಟನೆ ಜರುಗದಂತೆ ಪೊಲೀಸ್ ಇಲಾಖೆ ಮುಂಜಾಗ್ರತೆ ಕ್ರಮವಹಿಸಿದೆ.

    ಬೆಂಗಳೂರಿನ ಮಹಾಬೋದಿಯ ಆನಂದ ಬಂತೇಜಿ, ಮೈಸೂರಿನ ವಿಶ್ವಮೈತ್ರಿ ಬುದ್ಧ ವಿಹಾರದ ಕಲ್ಯಾಣಸಿರಿ ಬಂತೇಜಿ ನೇತೃತ್ವದಲ್ಲಿ ವಿಧಿವಿಧಾನ ನಡೆಯಲಿದೆ. ಅಂತ್ಯಕ್ರಿಯೆ ವೇಳೆ ಸುಮಾರು 15ಕ್ಕೂ ಹೆಚ್ಚು ಬೌದ್ಧ ಬಿಕ್ಕುಗಳು ಪ್ರಾರ್ಥನೆ ಸಲ್ಲಿಸಲಿದ್ದಾರೆ. ಇದನ್ನೂ ಓದಿ: ಶ್ರೀನಿವಾಸ್‌ ಪ್ರಸಾದ್‌ ವಿಧಿವಶ – ಪ್ರಭಾವಿ ದಲಿತ ನಾಯಕನ ರಾಜಕೀಯ ಏಳು-ಬೀಳಿನ ಹಾದಿ ಹೇಗಿತ್ತು?

  • ಬಿಜೆಪಿ ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ

    ಬಿಜೆಪಿ ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ

    ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ (V.Srinivas Prasad) ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

    ಅನಾರೋಗ್ಯ ಕಾರಣಕ್ಕೆ ಶ್ರೀನಿವಾಸ್‌ ಪ್ರಸಾದ್‌ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಸದರ ಆರೋಗ್ಯ ಕುರಿತು ವೈದ್ಯ ಸುದರ್ಶನ್‌ ಬಲ್ಲಾಳ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಬೆಳಗಾವಿಗೆ ಬಂದಿಳಿದ ಪ್ರಧಾನಿ ಮೋದಿ

    ಸುದರ್ಶನ್‌ ಬಲ್ಲಾಳ ಮಾತನಾಡಿ, ಶ್ರೀನಿವಾಸ್‌ ಪ್ರಸಾದ್‌ ಅವರು 25 ವರ್ಷದಿಂದ ನಮ್ಮ ಬಳಿ ಚಿಕಿತ್ಸೆಗೆ ಬರ್ತಾ ಇದ್ದಾರೆ. ಎಪ್ರಿಲ್ 22 ರಂದು ಇನ್‌ಫೆಕ್ಷನ್‌ ಅಂತಾ ಬಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶುಗರ್, ಬಿಪಿ ವ್ಯತ್ಯಾಸ ಇರುವುದರಿಂದ ಐಸಿಯುನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

  • ಸಿಎಂ ಆಪರೇಷನ್ ಹಸ್ತ ಸಕ್ಸಸ್ – ಶ್ರೀನಿವಾಸ್ ಪ್ರಸಾದ್ ಅಳಿಯ ಧೀರಜ್ ಕಾಂಗ್ರೆಸ್ ಸೇರ್ಪಡೆ

    ಸಿಎಂ ಆಪರೇಷನ್ ಹಸ್ತ ಸಕ್ಸಸ್ – ಶ್ರೀನಿವಾಸ್ ಪ್ರಸಾದ್ ಅಳಿಯ ಧೀರಜ್ ಕಾಂಗ್ರೆಸ್ ಸೇರ್ಪಡೆ

    ಮೈಸೂರು: ಕೊನೆಗೂ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಆಪರೇಷನ್ ಹಸ್ತ ಸಕ್ಸಸ್ ಆಗಿದ್ದು, ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ (V Srinivas Prasad) ಅವರ ಅಳಿಯ ಧೀರಜ್ ಪ್ರಸಾದ್ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

    ಬೆಂಗಳೂರಿನಲ್ಲಿರುವ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದಲ್ಲಿ ಧೀರಜ್ (Dheeraj Prasad) ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಈ ವೇಳೆ ಡಿಕೆಶಿ ಅವರಿಗೆ ಹೂಗುಚ್ಛ ನೀಡಿ, ಹಾರ ಹಾಕಿ ಸನ್ಮಾನಿಸಿದ್ದಾರೆ. ಧೀರಜ್ ಬಿಜೆಪಿ ರಾಜ್ಯ ಯುವ ಮೋರ್ಚ ಉಪಾಧ್ಯಕ್ಷರಾಗಿದ್ದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಮತ್ತೊಂದು ಶಾಕ್‌ – ‘ಕೈ’ ನಾಯಕನ ಸೊಸೆ ಬಿಜೆಪಿ ಸೇರ್ಪಡೆ

    ತಮ್ಮ ಅಳಿಯನಿಗೆ ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವ ಶ್ರೀನಿವಾಸ್ ಪ್ರಸಾದ್ ಪ್ರಯತ್ನ ವಿಫಲವಾಗಿದೆ. ಹೀಗಾಗಿ ಪಕ್ಷದ ನಡೆಗೆ ಪ್ರಸಾದ್ ಬೇಸರಗೊಂಡಿದ್ದಾರೆ. ಮೈಸೂರು, ಚಾಮರಾಜನಗರ ಕ್ಷೇತ್ರಗಳನ್ನು ಗೆಲ್ಲಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್, ಇದನ್ನೇ ಬಂಡವಾಳ ಮಾಡಿಕೊಂಡಿದೆ ಎನ್ನಲಾಗಿದೆ. ಇದನ್ನೂ ಓದಿ: ಚುನಾವಣೆ ಬಂದ್ರೆ ಸಾಕು ಆಸ್ಪತ್ರೆ ಸೇರ್ತಾರೆ: ಹೆಚ್‌ಡಿಕೆ ಹೃದಯ ಶಸ್ತ್ರಚಿಕಿತ್ಸೆ ಬಗ್ಗೆ ‘ಕೈ’ ಶಾಸಕ ಅನುಮಾನ

    ಪ್ರಸಾದ್‌ ಕಟ್ಟಪ್ಪಣೆ: ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್‌ಗೆ ಬೆಂಬಲ ಕೊಡುವ ವಿಚಾರದಲ್ಲಿ ಸದ್ಯಕ್ಕೆ ಗೌಪ್ಯತೆ ಕಾಪಾಡಿ. 15 ದಿನ ಸುಮ್ಮನ್ನಿರಿ, ಮತದಾನದ ಕೊನೆ ವಾರದಲ್ಲಿ ನನ್ನ ನಿರ್ಧಾರವನ್ನ ನಮ್ಮ ಅಭಿಮಾನಿಗಳಿಗೆ ಖಚಿತವಾಗಿ ಹೇಳುತ್ತೇನೆ ಎಂದು ಪ್ರಸಾದ್ ಗುಟ್ಟು ಬಿಟ್ಟು ಕೊಡದಂತೆ ಕಾಂಗ್ರೆಸ್ ನಾಯಕರಿಗೆ ಕಟ್ಟಪಣೆ ಮಾಡಿದ್ದಾರೆ. ಶ್ರೀನಿವಾಸ ಪ್ರಸಾದ್ ಮಾತು ಕೇಳಿ ಕಾಂಗ್ರೆಸ್ ನಾಯಕರು ಖುಷಿಯಾಗಿದ್ದಾರೆ. ಪ್ರಸಾದ್ ಜೊತೆ ನಡೆದ ಎಲ್ಲಾ ಮಾತುಕತೆಗಳನ್ನ ಸ್ಥಳೀಯ ನಾಯಕರು ಸಿಎಂ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಆಫರ್‌ ನೀಡಿದ್ರಾ ಸಿಎಂ? ಮೈಸೂರು ಕ್ಷೇತ್ರದಲ್ಲಿ ತಾವೇ ಖುದ್ದು ಅಖಾಡಕ್ಕಿಳಿದಿದ್ದ ಸಿಎಂ ಕುಟುಂಬದವರೆಲ್ಲ ಪಕ್ಷ ಸೇರ್ಪಡೆಯಾಗಲಿ ಎಂದು ಆಹ್ವಾನ ನೀಡಿದರು. ಕುಟುಂಬದಲ್ಲಿ ಯಾರೆ ಸೇರ್ಪಡೆಯಾದರು ಎಲ್ಲರಿಗೂ ಪಕ್ಷದಲ್ಲಿ ಸ್ಥಾನಮಾನ ಕೊಡುವುದಾಗಿ ಭರವಸೆಯನ್ನೂ ನೀಡಿದ್ದರು. ಇದೀಗ ಧೀರಜ್ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಶೀಘ್ರದಲ್ಲೇ ಶ್ರೀನಿವಾಸ್ ಪ್ರಸಾದ್ ಸಹ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ.

  • ಮೋದಿ ಬಗ್ಗೆ ಟೀಕಿಸಲು ಕಾಂಗ್ರೆಸ್‍ಗೆ ಹಕ್ಕಿಲ್ಲ: ಶ್ರೀನಿವಾಸ್ ಪ್ರಸಾದ್

    ಮೋದಿ ಬಗ್ಗೆ ಟೀಕಿಸಲು ಕಾಂಗ್ರೆಸ್‍ಗೆ ಹಕ್ಕಿಲ್ಲ: ಶ್ರೀನಿವಾಸ್ ಪ್ರಸಾದ್

    ಚಾಮರಾಜನಗರ: ಪ್ರಧಾನಿ ಮೋದಿ ಬಗ್ಗೆ ಟೀಕಿಸಲು ಕಾಂಗ್ರೆಸ್‍ಗೆ ಹಕ್ಕೇನಿದೆ? ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ ಪಕ್ಷಕ್ಕೆ ಪ್ರಶ್ನೆ ಮಾಡಿದ್ದಾರೆ.

    ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಮಾತನಾಡಿದ ಅವರು, ಮೋದಿಯವರ ವಿರುದ್ಧ ಹೆಬ್ಬೆಟ್ ಗಿರಾಕಿ ಎಂಬ ಪದ ಬಳಸಿ ಮಾಡಿರುವ ಟ್ವೀಟ್‍ಗೆ ತಿರುಗೇಟನ್ನು ಕೊಟ್ಟರು.

    ಕಾಂಗ್ರೆಸ್ ಪಕ್ಷ ದಿವಾಳಿಯಾಗಿದೆ. ಪಕ್ಷದಲ್ಲಿ ಸರಿಯಾದ ನಾಯಕರಿಲ್ಲ. ಪಾರ್ಲಿಮೆಂಟ್ ಹಾಗೂ ಅಸೆಂಬ್ಲಿಗಳಲ್ಲಿ ಸರಿಯಾಗಿ ಮಾತನಾಡುವವರಿಲ್ಲ. ಪರಿಸ್ಥಿತಿ ಬಹಳ ಕೆಟ್ಟದಾಗಿದೆ. ಅದರ ಬಗ್ಗೆ ಆಲೋಚಿಸಬೇಕು. ಆ ಮೂಲಕ ಪಕ್ಷ ಸಂಘಟನೆಗೆ ಒತ್ತು ಕೊಡಲಿ ಅಂತಾ ತಾಕೀತು ಮಾಡಿದರು. ಇದನ್ನೂ ಓದಿ: ಹೆಬ್ಬೆಟ್‍ಗಿರಾಕಿ ಮೋದಿ ತನ್ನ ಹೆಸರನ್ನು ‘ಮೌನೇಂದ್ರ ಮೋದಿ’ ಎಂದು ಬದಲಿಸಿಕೊಳ್ಳಲಿ: ಕಾಂಗ್ರೆಸ್

    ವಾಸ್ತವಗಳ ಬಗ್ಗೆ ಮಾತನಾಡದ ಪ್ರಧಾನಿ ತಮ್ಮ ಹೆಸರನ್ನು ಮೌನೇಂದ್ರ ಮೋದಿ ಎಂದು ಬದಲಿಸಿಕೊಳ್ಳಲಿ.
    * ಬೆಲೆ ಏರಿಕೆಯ ಬಗ್ಗೆ -ಮೌನ
    * ಕಾಶ್ಮೀರದ ದಳ್ಳುರಿಗೆ -ಮೌನ
    * ಚೀನಾ ಅತಿಕ್ರಮಣಕ್ಕೆ -ಮೌನ
    * ರೈತರ ಹತ್ಯೆಗೆ -ಮೌನ
    * ಅದಾನಿ ಡ್ರಗ್ಸ್ ದಂಧೆಯ ಬಗ್ಗೆ -ಮೌನ
    * ನಿರುದ್ಯೋಗದ ಬಗ್ಗೆ -ಮೌನ
    * ಪತ್ರಿಕಾಗೋಷ್ಠಿಗೆ -ಮೌನ
    #ಹೆಬ್ಬೆಟ್ ಗಿರಾಕಿಮೋದಿ ಎಂದು ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿತ್ತು. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ನಿಲ್ಲದ ಪುಂಡರ ಕುಚೇಷ್ಟೆ – ಕಾರಿನಲ್ಲಿ ಹೋಗ್ತಿದ್ದ ದಂಪತಿಗೆ ಅಡ್ಡಗಟ್ಟಿ ಧಮ್ಕಿ

    ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಇಂದು ಪೆಟ್ರೋಲ್ 66, ಡೀಸೆಲ್ 55 ಕ್ಕೆ ದೊರಕುತ್ತಿತ್ತು. ಜನರನ್ನು ದೋಚಿ, ಉದ್ಯಮಿಗಳ ಹೊಟ್ಟೆ ತುಂಬಿಸುವ ಯೋಜನೆ ಹೊಂದಿರುವ ಬಿಜೆಪಿ ಸರ್ಕಾರದ ತೆರಿಗೆ ಭಯೋತ್ಪಾದನೆಯಿಂದ ಎಲ್ಲಾ ಅಗತ್ಯ ವಸ್ತುಗಳು ದುಬಾರಿಯಾಗಿವೆ. ಜನರ ಕಷ್ಟಗಳನ್ನು ತಿಳಿಯದ #ಹೆಬ್ಬೆಟ್ ಗಿರಾಕಿ ಮೋದಿಯಿಂದ ದೇಶ ನಲುಗುತ್ತಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.

  • ಜೈಲಿಂದ ಬಂದ್ಮೇಲೆ ಡಿಕೆಶಿ ಬುದ್ಧಿ ಸ್ಥಿಮಿತದಲ್ಲಿಲ್ಲ: ಸಂಸದ ಶ್ರೀನಿವಾಸ್ ಪ್ರಸಾದ್

    ಜೈಲಿಂದ ಬಂದ್ಮೇಲೆ ಡಿಕೆಶಿ ಬುದ್ಧಿ ಸ್ಥಿಮಿತದಲ್ಲಿಲ್ಲ: ಸಂಸದ ಶ್ರೀನಿವಾಸ್ ಪ್ರಸಾದ್

    – ಸೋತವರು, ಸತ್ತವರಿ ಮಂತ್ರಿಗಿರಿ ಇಲ್ಲ
    – ವಿಶ್ವನಾಥ್‍ಗೆ ಶ್ರೀನಿವಾಸ್ ಪ್ರಸಾದ್ ಟಾಂಗ್

    ಚಾಮರಾಜನಗರ: ಮಾಜಿ ಸಚಿವ, ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅವರು ಜೈಲಿಗೆ ಹೋಗಿ ಬಂದ ಬಳಿಕ ಬುದ್ಧಿ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

    ಯೇಸು ಪ್ರತಿಮೆ ನಿರ್ಮಾಣ ಕುರಿತು ಕೊಳ್ಳೇಗಾಲದಲ್ಲಿ ಮಾತನಾಡಿದ ಸಂಸದರು, ಡಿ.ಕೆ.ಶಿವಕುಮಾರ್ ಅವರು ನೀಡುತ್ತಿರುವ ಹೇಳಿಕೆಗಳಿಗೆ ಹಾಗೂ ಪ್ರತಿಮೆ ನಿರ್ಮಾಣದ ವಿಷಯಕ್ಕೆ ಸಂಬಂಧವೇ ಇಲ್ಲವಾಗಿದೆ. ಸಚಿವರು ಏನು ಹೇಳಲು ಹೊರಟಿದ್ದಾರೆ ಎನ್ನುವುದು ಅರ್ಥವಾಗುತ್ತಿಲ್ಲ ಎಂದು ಕಿಡಿಕಾರಿದರು.

    ಇದೇ ವೇಳೆ ದೇಶಾದ್ಯಂತ ಹಬ್ಬಿರುವ ಪೌರತ್ವ ತಿದ್ದುಪಡೆ ಕಾಯ್ದೆ ಕಿಚ್ಚಿನ ಕುರಿತು ಮಾತನಾಡಿದ ಅವರು, ಸಿಎಎ ಸಂವಿಧಾನ ವಿರೋಧಿಯಲ್ಲ. ಈ ಕಾಯ್ದೆಯ ಬಗ್ಗೆ ಸಂಸತ್ತಿನಲ್ಲಿ ಸುದೀರ್ಘವಾಗಿ ಚರ್ಚಿಸಲಾಗಿದೆ. ಲೋಕಸಭೆಯಲ್ಲೂ ಚರ್ಚಿಸಲಾಗಿದೆ. ರಾಷ್ಟ್ರಪತಿಗಳ ಅಂಕಿತವೂ ಬಿದ್ದಿದೆ. ಸಿಎಎ ಕಾಯ್ದೆಯಿಂದ ನಮ್ಮ ದೇಶದ ಮುಸ್ಲಿಂ ಮತ್ತು ದಲಿತ ಸಮುದಾಯಗಳಿಗೆ ಯಾವುದೇ ತೊಂದರೆ ಇಲ್ಲ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಬರುವ ವಲಸಿಗರಿಗೆ ಮಾತ್ರ ಸಿಮೀತವಾದದ್ದು ಎಂದು ಹೇಳಿದರು.

    ಪೌರತ್ವ ತಿದ್ದುಪಡೆ ಕಾಯ್ದೆಯಿಂದ ಭಾರತ ದೇಶದ ಯಾವುದೇ ಜನಾಂಗಕ್ಕೂ ಎಳ್ಳಷ್ಟು ಸಮಸ್ಯೆಯಿಲ್ಲ. ದೇಶದ ಭದ್ರತೆ ದೃಷ್ಟಿಯಿಂದ ಈ ಕಾಯ್ದೆ ಅನುಷ್ಠಾನ ಮಾಡಲಾಗುತ್ತಿದೆ. ಸಿಎಎ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್​ಸಿ) ಕಾಯ್ದೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಪರ ಮತ್ತು ವಿರೋಧವಾಗಿ ಮಾತನಾಡುವ ಹಕ್ಕು ಪ್ರಜೆಗಳಿಗೆ ಇದೆ. ಪ್ರತಿಭಟನೆ ಹಿಂಸಾತ್ಮಕ ಮಾರ್ಗ ಹಿಡಿಯಬಾರದು, ಶಾಂತಿಯೂತವಾಗಿ ಹೋರಾಟ ಮಾಡಬೇಕು ಎಂದರು.

    ದೇಶದ ಜನರು ಪ್ರಚೋದನಾತ್ಮಕ ಹೇಳಿಕೆಗಳಿಗೆ ಕಿವಿ ಕೊಡಬಾರದು. ಶಾಂತಿಯುತವಾಗಿ ಹೋರಾಟ ಮಾಡಬೇಕು. ಭಾರತ ದೇಶದಲ್ಲಿರುವ ಮುಸ್ಲಿಂ, ದಲಿತ ಹಾಗೂ ಇನ್ನಿತರೆ ಯಾವುದೇ ಧರ್ಮಕ್ಕೆ ಸಿಎಎಯಿಂದ ತೊಂದರೆಯಿಲ್ಲ ಎಂದು ತಿಳಿಸಿದರು.

    ವಿಶ್ವನಾಥ್‍ಗೆ ಟಾಂಗ್:
    ಉಪಚುನಾವಣೆಯಲ್ಲಿ ಗೆದ್ದವರಿಗೆಲ್ಲ ಮಂತ್ರಿ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈಗಾಗಲೇ ಹೇಳಿದ್ದಾರೆ. ಧನುರ್ಮಾಸ ಮುಗಿದ ಕೂಡಲೇ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಗೆದ್ದು ಶಾಸಕರಾದ ನಂತರವೇ ಮಂತ್ರಿಯಾಗಬೇಕು ಎಂದು ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಸ್ಪಷ್ಟವಾಗಿ ಹೇಳಿದೆ. ಹುಣಸೂರು ಉಪಚುನಾವಣೆಯಲ್ಲಿ ಎಚ್.ವಿಶ್ವನಾಥ್ ಅವರು ಸೋತಿದ್ದಾರೆ. ಹೀಗಾಗಿ ಗೆದ್ದವರು ಮಾತ್ರ ಮಂತ್ರಿಯಾಗುತ್ತಾರೆ. ಸೋತವರು, ಸತ್ತವರಿಗೆ ಮಂತ್ರಿಗಿರಿ ಇಲ್ಲ ಎಂದು ಹೇಳಿದರು.

  • ಸಿದ್ದರಾಮಯ್ಯ, ಹೆಚ್‍ಡಿಡಿ ಇಬ್ಬರು ಬೆನ್ನಿಗೆ ಚೂರಿ ಹಾಕುವವರೇ: ವಿ.ಶ್ರೀನಿವಾಸ್ ಪ್ರಸಾದ್

    ಸಿದ್ದರಾಮಯ್ಯ, ಹೆಚ್‍ಡಿಡಿ ಇಬ್ಬರು ಬೆನ್ನಿಗೆ ಚೂರಿ ಹಾಕುವವರೇ: ವಿ.ಶ್ರೀನಿವಾಸ್ ಪ್ರಸಾದ್

    – ಸಿದ್ದರಾಮಯ್ಯ ಬೆನ್ನಿಗೆ ಚೂರಿ ಹಾಕಿಯೇ ಮೇಲೆ ಬಂದಿದ್ದು

    ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಪ್ರಧಾನಿ ದೇವೇಗೌಡ ಇಬ್ಬರು ಬೆನ್ನಿಗೆ ಚೂರಿ ಹಾಕುವವರೇ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ಮಾಡಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಬೆನ್ನಿಗೆ ಚೂರಿ ಹಾಕಿಯೇ ಮೇಲೆ ಬಂದಿದ್ದು. ದೇವೇಗೌಡರು ಸಹ ಬೆನ್ನಿಗೆ ಚೂರಿ ಹಾಕಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಾಯಿಗೆ ಬಂದಂತೆ ಅಪ್ಪನಾಣೆ ಇಟ್ಟುಕೊಂಡು ಮಾತನಾಡಿದರು. ಆದರೆ ಲೋಕಸಭೆಯಲ್ಲಿ ಭಾಯಿ, ಭಾಯಿ ಎಂದು ಅಕ್ಕಪಕ್ಕದಲ್ಲಿ ಕುಳಿತುಕೊಂಡರು ಎಂದು ವ್ಯಂಗ್ಯವಾಡಿದರು.

    ಕಳೆದ ಮೂರು ದಿನದಿಂದ ಒಬ್ಬರ ಮೇಲೋಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಜನ ಎಲ್ಲವನ್ನು ನೋಡುತ್ತಿದ್ದಾರೆ. ಇವರನ್ನು ನೋಡಿ ಜನ ಅಸಹ್ಯ ಪಡುತ್ತಿದ್ದಾರೆ. ವಿರೋಧ ಪಕ್ಷದಲ್ಲಿದ್ದೀರಾ. ಈಗಲಾದರೂ ಗಂಭೀರವಾಗಿ ಇರುವುದನ್ನು ಕಲಿಯಿರಿ ಎಂದು ದೇವೇಗೌಡರು ಹಾಗೂ ಸಿದ್ದರಾಮಯ್ಯಗೆ ಹೆಸರನ್ನು ಹೇಳಿ ವಿ.ಶ್ರೀನಿವಾಸ್ ಪ್ರಸಾದ್ ಸಲಹೆ ನೀಡಿದರು.

    ಮಾನಸಿಕವಾಗಿ ಅವರು ಮೈತ್ರಿಯಾಗಿರಲಿಲ್ಲ. ದೈಹಿಕವಾಗಿ ಬಂದು ಒಟ್ಟಿಗೆ ಕುಳಿತುಕೊಳ್ಳುತ್ತಿದ್ದರು. ಸದನದಲ್ಲಿ ಪಾಯಿಂಟ್ ಆಫ್ ಆರ್ಡರ್ ಎತ್ತಿ ಆಗಿನ ಸಿಎಂ ಕುಮಾರಸ್ವಾಮಿಯನ್ನು ಸಮರ್ಥಿಸಿಕೊಂಡಿದ್ದು ಸಿದ್ದರಾಮಯ್ಯನೇ ಅಲ್ವಾ. ಈಗ ಏಕೆ ಅವರ ವಿರುದ್ಧ ಮಾತನಾಡುತ್ತಿದ್ದಾರೆ. ಇವರ ಹೇಳಿಕೆಗಳನ್ನು ನೋಡುತ್ತಿದ್ದರೆ ಜನರಿಗೆ ಅಸಹ್ಯವಾಗುತ್ತದೆ ಎಂದು ಕಿಡಿಕಾರಿದರು.

  • ಎಚ್‍ಡಿಡಿ ಬಗ್ಗೆ ಗೌರವವಿದೆ, ನಂಬಿಕೆ ಇಲ್ಲ: ವಿ.ಶ್ರೀನಿವಾಸ್ ಪ್ರಸಾದ್

    ಎಚ್‍ಡಿಡಿ ಬಗ್ಗೆ ಗೌರವವಿದೆ, ನಂಬಿಕೆ ಇಲ್ಲ: ವಿ.ಶ್ರೀನಿವಾಸ್ ಪ್ರಸಾದ್

    – ಐಟಿ ರೇಡ್ ಮತದಾರರ ಮೇಲೆ ಪರಿಣಾಮ ಬಿರಲ್ಲ

    ಮೈಸೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಬಗ್ಗೆ ತುಂಬಾ ಗೌರವವಿದೆ. ಆದರೆ ನಂಬಿಕೆ ಇಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳ ದಾಳಿ ವಿಚಾರವಾಗಿ ದೇವೇಗೌಡರು ನೀಡಿದ್ದ ಹೇಳಿಕೆಗೆ ತಿರುಗೇಟು ನೀಡಿದರು. ರಾಜಕೀಯವಾಗಿ ಅವರು ನಂಬಿಕೆ ಉಳಿಸಿಕೊಂಡಿಲ್ಲ. ಮಾಜಿ ಪ್ರಧಾನಿಯಾಗಿರುವ ಎಚ್.ಡಿ.ದೇವೇಗೌಡ ಅವರು ರಾಷ್ಟದ ಹಿರಿಯ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಆದರೆ ತಮ್ಮ ಸ್ಥಾನಕ್ಕೆ ತಕ್ಕಂತೆ ನಂಬಿಕೆ ಬರುವ ಹಾಗೆ ಜನರಲ್ಲಿ ಭಾವನೆ ಉಳಿಸಿಕೊಂಡಿಲ್ಲ ಎಂದರು.

    ಐಟಿ ಇಲಾಖೆಯ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ಕೇಂದ್ರ ಸಂಸ್ಥೆಯಾಗಿರುವ ಐಟಿ ಇಲಾಖೆ ತನ್ನದೇ ಆದ ಜವಬ್ದಾರಿ ಹೊಂದಿದೆ. ಐಟಿ ಅಧಿಕಾರಿಗಳು ಮಾಹಿತಿ ಆಧರಿಸಿ ದಾಳಿ ಮಾಡುತ್ತಾರೆ. ಅದನ್ನು ಪ್ರಶ್ನಿಸಿ ಕಚೇರಿ ಮುಂದೆ ಪ್ರತಿಭಟನೆ ಮಾಡುವುದು ಸರಿಯಲ್ಲ. ಅದರಲ್ಲೂ ಮುಖ್ಯಮಂತ್ರಿ ಸ್ಥಾನದಲ್ಲಿರುವ ಎಚ್.ಡಿ.ಕುಮಾರಸ್ವಾಮಿ ಪ್ರತಿಭಟನೆ ಮಾಡಿದ್ದು ಅಕ್ಷಮ್ಯ ಎಂದರು.

    ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷದ ನಾಯಕರು ಐಟಿ ದಾಳಿ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಬಹುದಿತ್ತು. ಅದನ್ನು ಬಿಟ್ಟು ಇಲಾಖೆಯ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ್ದು ಸೂಕ್ತವಲ್ಲ. ಐಟಿ ರೇಡ್ ಮತದಾರರ ಮೇಲೆ ಪರಿಣಾಮ ಬಿರುವುದಿಲ್ಲ ಎಂದು ವಿ.ಶ್ರೀನಿವಾಸ್ ಪ್ರಸಾದ್ ಹೇಳಿದರು.