ಮಂಗಳೂರು: ರಾಜ್ಯದಲ್ಲಿ ಜನಿವಾರ ವಿವಾದದ ಬೆನ್ನಲ್ಲೇ ಇದೀಗ ಮತ್ತೊಂದು ವಾರ್ ಶುರುವಾಗಿದೆ. ರೈಲ್ವೆ ಇಲಾಖೆ ಪರೀಕ್ಷೆಗೆ ಹಾಜರಾಗಲು ಜನಿವಾರ, ಮಂಗಳಸೂತ್ರಕ್ಕೆ ನಿರ್ಬಂಧ ವಿಧಿಸಿರುವ ವಿಚಾರವಾಗಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ರೈಲ್ವೆ ಸಚಿವ ವಿ.ಸೋಮಣ್ಣ (V Somanna) ಮಂಗಳಸೂತ್ರ ಹಾಗೂ ಜನಿವಾರ ತೆಗೆಸದಂತೆ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Glad to inform that, as we brought it to his attention, our Union MoS Shri @VSOMANNA_BJP has intervened and instructed authorities not to indulge In any such practices that require those appearing for the examination for the post of Nursing Superintendent of Indian Railways to… pic.twitter.com/Ii3TXM01jf
ಮಂಗಳವಾರ ರೈಲ್ವೆ ಇಲಾಖೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆ ನಡೆಯಲ್ಲಿದ್ದು, ಈಗಾಗಲೇ ಪ್ರವೇಶ ಪತ್ರವು ಪರೀಕ್ಷಾರ್ಥಿಗಳ ಕೈ ಸೇರಿದೆ. ಪ್ರವೇಶ ಪತ್ರದಲ್ಲಿ ಜನಿವಾರ, ಮಂಗಳಸೂತ್ರ ತೆಗೆದು ಪರೀಕ್ಷೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಯುದ್ಧದ ಬಿಸಿಗೆ ಬೆದರಿ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರೆ ಪಾಕ್ ಸೈನಿಕರು!
ಈ ವಿವಾದದ ಬೆನ್ನಲ್ಲೇ ರೈಲ್ವೆ ಇಲಾಖೆಯ ಪರೀಕ್ಷೆಯ ಪ್ರವೇಶಪತ್ರದಲ್ಲಿನ ಸೂಚನೆಗಳ ಬಗ್ಗೆ ಎಕ್ಸ್ ಖಾತೆಯಲ್ಲಿ ಟ್ವೀಟ್‌ನ ಮೂಲಕ ರೈಲ್ವೆ ಸಚಿವರಿಗೆ ದಕ್ಷಿಣ ಕನ್ನಡದ ಸಂಸದ ಕ್ಯಾ.ಬ್ರಿಜೇಶ್ ಚೌಟ (Brijesh Chowta) ಮಾಹಿತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಸಚಿವ ವಿ.ಸೋಮಣ್ಣ ಮಂಗಳಸೂತ್ರ ಹಾಗೂ ಜನಿವಾರ ತೆಗೆಸದಂತೆ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಯುವತಿಯರ ಜೊತೆ ರಾಸಲೀಲೆ – ಮೊಬೈಲ್‌ನಲ್ಲಿ ವಿಡಿಯೋ ಅಲ್ಬಂ ಓಪನ್ ಮಾಡಿದ್ದ ಕಾಮುಕ ಅರೆಸ್ಟ್
ರೈಲ್ವೆ ಇಲಾಖೆಯ ಪರೀಕ್ಷೆಯ ಪ್ರವೇಶಪತ್ರದಲ್ಲಿನ ಸೂಚನೆಯು ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ರೈಲ್ವೆ ಇಲಾಖೆಯ ಈ ಸೂಚನೆಗೆ ವಿ.ಹೆಚ್.ಪಿ ಮುಖಂಡ ಶರಣ್ ಪಂಪುವೆಲ್ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದು, ಸೂಚನೆ ಕೈಬಿಡುವಂತೆ ಜಿಲ್ಲಾಧಿಕಾರಿ ಹಾಗೂ ಸಂಸದರಿಗೆ ಆಗ್ರಹಿಸಿದ್ದಾರೆ.
– ವರದಿ ಜಾರಿಯಾದ್ರೆ ರಾಜ್ಯದಲ್ಲಿ ಕೋಮುದಳ್ಳುರಿಗೆ ಸಿಎಂ ಕಾರಣ ಆಗ್ತಾರೆ ಎಂದ ಸಚಿವ
ಬೆಂಗಳೂರು: ಪ್ರಸ್ತುತ ಜಾತಿ ಜನಗಣತಿ (Caste Census) ವರದಿಯೇ ಸಿದ್ದರಾಮಯ್ಯಗೆ ಮರಣ ಶಾಸನ ಆಹಬಹುದು. ಏಕೆಂದರೆ ಅವರ ಪಕ್ಷದವರೇ ರಾಜಕೀಯವಾಗಿ ಕಾಲೆಳೆಯಲು ಪಿತೂರಿ ಮಾಡ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ (V Somanna) ಮಾರ್ಮಿಕವಾಗಿ ನುಡಿದಿದ್ದಾರೆ.
ಜಾತಿ ಜನಗಣತಿ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿ ವರದಿ ಕಾಗಕ್ಕ ಗೂಬಕ್ಕ ಕತೆ ಥರ ಇದೆ. ಈ ವರದಿ ಸಿದ್ದರಾಮಯ್ಯಗೇ (Siddaramaiah) ಮರಣ ಶಾಸನ ಆಗಬಹುದು. ಅವರ ಪಕ್ಷದವರೇ ಅವರನ್ನು ರಾಜಕೀಯವಾಗಿ ಕಾಲೆಳೆಯಲು ಪಿತೂರಿ ಮಾಡ್ತಿದ್ದಾರೆ. ಈ ವರದಿ ಜಾರಿಯಾದರೆ ಸಿದ್ದರಾಮಯ್ಯ ರಾಜ್ಯ ರಾಜಕೀಯ ಇತಿಹಾಸದಲ್ಲಿ ಒಬ್ಬ ಖಳನಾಯಕ ಆಗ್ತಾರೆ ಎಂದು ಲೇವಡಿ ಮಾಡಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಪೂರ್ಣ ಸತ್ಯ ಗೊತ್ತಿದೆ. ಆದ್ರೆ ಅವರು ಅವರ ಕುರ್ಚಿ ಉಳಿಸಿಕೊಳ್ಳಲು ವರದಿ ಜಾರಿಗೆ ಮುಂದಾಗಿದ್ದಾರೆ. ಮೊನ್ನೆ ಮೊನ್ನೆ ಅವರ ಹೈಕಮಾಂಡ್ ನಾಯಕರು ಅವರನ್ನು ಕರೆದು ಹೇಳಿದ್ದಾರೆ, ಸಿದ್ದರಾಮಯ್ಯ ಅವರ ಇವತ್ತಿನ ಪರಿಸ್ಥಿತಿ ನೋಡಿದ್ರೆ, ಈ ಮಟ್ಟಕ್ಕೂ ಅವರು ಬಂದಿದ್ದಾರಾ ಅನ್ನೋ ನೋವು ಕಾಡುತ್ತೆ ನನಗೆ ಎಂದು ಹೇಳಿದ್ದಾರೆ.
ವರದಿಯನ್ನ ಸಿದ್ದರಾಮಯ್ಯ ತಿರಸ್ಕರಿಸಲಿ:
ಪ್ರಸ್ತುತ ತಂದಿರುವ ಜಾತಿ ಜನಗಣತಿ ವರದಿಯನ್ನು ಸಿದ್ದರಾಮಯ್ಯ ಅವರು ತಿರಸ್ಕರಿಸಬೇಕು. ಮತ್ತೊಂದು ಸಮೀಕ್ಷೆಯನ್ನು ಮಾಡಿ, ಇನ್ನೂ ಮೂರು ವರ್ಷ ಸಮಯ ಇದೆ ಸಿದ್ದರಾಮಯ್ಯಗೆ. ಈ ಸಮೀಕ್ಷೆ ವೈಜ್ಞಾನಿಕವಾಗಿ ಮಾಡಿಲ್ಲ, ವರದಿ ಪಾರದರ್ಶಕ ಆಗಿಲ್ಲ. ಇದೊಂದು ಜೇನುಗೂಡಿಗೆ ಕೈ ಹಾಕಿದಂತೆ, ನಿಮ್ಮ ಪಕ್ಷದವರೇ ಏನೇನೋ ಹಿಡಿದು ತಿವೀತಿದ್ದಾರೆ. ಈ ವರದಿ ಜಾರಿ ಆದ್ರೆ ಸಾಮಾನ್ಯ ಜನರೂ ಸಿದ್ದರಾಮಯ್ಯಗೆ ಶಾಪ ಹಾಕ್ತಾರೆ. ವರದಿ ಜಾರಿಯಾದರೆ ಸಿದ್ದರಾಮಯ್ಯ ಒಂಟಿಯಾಗಿ ಹೋಗ್ತಾರೆ. ಆದ್ದರಿಂದ ಈ ವರದಿ ತಿರಸ್ಕರಿಸುವಂತೆ ವಿ. ಸೋಮಣ್ಣ ಮನವಿ ಮಾಡಿದ್ದಾರೆ.
ಜಾತಿ ಜನಗಣತಿ ವರದಿ ಸರಿಯಿಲ್ಲ ಅಂತ ಕಾಂಗ್ರೆಸ್‌ನ 50%-60% ನಾಯಕರು ಹೇಳ್ತಿದ್ದಾರೆ. ಹಲವು ಕಡೆ ಸಮೀಕ್ಷೆ ಮಾಡಿಲ್ಲ, ವರದಿಯಲ್ಲಿ ಮಕ್ಕಿ ಕಾ ಮಕ್ಕಿ ಆಗಿದೆ. ಹೊರೆಯಾದರೂ ಪರವಾಗಿಲ್ಲ ಮತ್ತೊಂದು ಸಮಿತಿ ಮಾಡಿ, ಒಂದು ವರ್ಷದಲ್ಲಿ ಹೊಸ ಸಮೀಕ್ಷೆ ಮಾಡಿಸಿ. ಈಗಿನ ವರದಿ ಜಾರಿಯಾದರೆ ರಾಜ್ಯದಲ್ಲಿ ಕೋಮುದಳ್ಳುರಿ ಆಗುತ್ತೆ, ಅದಕ್ಕೆ ಸಿದ್ದರಾಮಯ್ಯ ಅವರೇ ಕಾರಣ ಆಗ್ತಾರೆ. ಹೈಕಮಾಂಡ್ ನವ್ರು ಹೇಳಿದ್ರು ಅಂತ ಈ ವರದಿಯ ಜಾರಿ ಮಾಡಿದ್ರೆ ಅದೇ ಸಿದ್ದರಾಮಯ್ಯಗೆ ಮರಣ ಶಾಸಕ ಆಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಲೆ ಏರಿಕೆ ದಾಹ ಇಂಗಿಲ್ಲ:
ಇದೇ ವೇಳೆ ಬೆಲೆ ಏರಿಕೆ ಕುರಿತು ಮಾತನಾಡಿದ ಸಚಿವರು, ರಾಜ್ಯ ಸರ್ಕಾರ ಎಲ್ಲಾ ಪದಾರ್ಥಗಳಿಗೂ ದರ ಏರಿಕೆ ಮಾಡಿದೆ. ಕಾಂಗ್ರೆಸ್‌ನ ದರ ಏರಿಕೆ ದಾಹ ಇನ್ನೂ ಇಂಗಿಲ್ಲ. ಇದಲ್ಲದೇ ಬೆಂಗಳೂರಿನಲ್ಲಿ ಅಡಿಗೆ ನೂರು ರೂಪಾಯಿ ವಸೂಲಿ ಮಾಡ್ತಿದ್ದಾರೆ, ಕಸಕ್ಕೂ ಶುಲ್ಕ ಹಾಕಿದ್ದಾರೆ. ರಾಜ್ಯದ ಬೊಕ್ಕಸ ಖಾಲಿ ಮಾಡಿದ್ರಿ, ಜನರ ಮೇಲೆ ಅನಾವಶ್ಯಕ ಟ್ಯಾಕ್ಸ್ ಹಾಕ್ತಿದ್ದೀರಿ. ಸಿದ್ದರಾಮಯ್ಯ ಏನು ಭರವಸೆ ಕೊಟ್ಟಿದ್ದಾರೋ ಅದರಲ್ಲಿ 1 ಪರ್ಸೆಂಟ್ ಆದ್ರೂ ಈಡೇರಿಸಿ ಎಂದು ತಿವಿದಿದ್ದಾರೆ.
ನವದೆಹಲಿ: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಅವರ ಬದಲಾವಣೆಗೆ ಆಗ್ರಹ ಕೇಳಿ ಬರುತ್ತಿರುವ ಹೊತ್ತಲ್ಲೇ ಕೇಂದ್ರ ಸಚಿವ, ಹಿರಿಯ ನಾಯಕ ವಿ.ಸೋಮಣ್ಣ (V Somanna) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಭೇಟಿಯಾಗಿ ಕುತೂಹಲ ಮೂಡಿಸಿದ್ದಾರೆ.
ಸೋಮವಾರಷ್ಟೇ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಬಂಡಾಯ ಸಾರಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಗುಂಪು ಗೃಹಪ್ರವೇಶ ಪೂಜೆ ನೆಪದಲ್ಲಿ ವಿ.ಸೋಮಣ್ಣ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿತ್ತು. ಇದರ ಬೆನ್ನಲ್ಲೇ ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಲಿಂಗಾಯತ ನಾಯಕರು ವಿ.ಸೋಮಣ್ಣ ನಿವಾಸದಲ್ಲಿ ಸಭೆ ನಡೆಸಿದ್ದರು. ಇದನ್ನೂ ಓದಿ: ಖರ್ಗೆ, ವೇಣುಗೋಪಾಲ್ ಭೇಟಿಯಾದ ಸತೀಶ್ ಜಾರಕಿಹೊಳಿ
ಈ ಸರಣಿ ಸಭೆಗಳ ಬೆನ್ನಲ್ಲೇ ವಿ.ಸೋಮಣ್ಣ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಭೇಟಿ ವೇಳೆ ರಾಜ್ಯದಲ್ಲಿ ಅಧ್ಯಕ್ಷರ ವಿಚಾರದಲ್ಲಿ ನಡೆಯುತ್ತಿರುವ ಬೆಳವಣಿಗೆ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡೆ ಹಾಗೂ ಅವರಿಗೆ ಶೋಕಾಸ್ ನೋಟಿಸ್ ಕೊಟ್ಟಿರುವ ವಿಚಾರ ಹಾಗೂ ಬಿ.ವೈ ವಿಜಯೇಂದ್ರ ವರ್ತನೆಯ ಬಗ್ಗೆ ಹಿರಿಯ ನಾಯಕರಿಗಿರುವ ಅಸಮಧಾನದ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ನನ್ನ ಮದುವೆಗೆ ದರ್ಶನ್ ಅವ್ರು ಬಂದ್ರೆ ತುಂಬಾ ಸಂತೋಷ: ಡಾಲಿ ಧನಂಜಯ್
ಬಿ.ವೈ ವಿಜಯೇಂದ್ರ ವಿರುದ್ಧ ಯತ್ನಾಳ್ ಬಣ ವಿರೋಧ ವ್ಯಕ್ತಪಡಿಸುತ್ತಿರುವ ಹೊತ್ತಲ್ಲಿ ಲಿಂಗಾಯತ ನಾಯಕರ ವಲಯದಲ್ಲಿ ಕಿಡಿ ಹೊತ್ತಿರುವ ಬಗ್ಗೆ ವಿ.ಸೋಮಣ್ಣ ವಿವರಿಸಿದ್ದಾರೆ. ಇದೇ ವೇಳೆ ತಾವು ರಾಜ್ಯಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ. ಸೋಮಣ್ಣ ಮಾತು ಆಲಿಸಿರುವ ಅಮಿತ್ ಶಾ ಸೂಕ್ತ ನಿರ್ಧಾರದ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: RSSನ ವ್ಯಕ್ತಿ ಕೃತ್ಯ ಮಾಡಿದ್ದಾನೆ.. ಮುಸ್ಲಿಂ ಏರಿಯಾ ಠಾಣೆಯಲ್ಲಿ ಯಾಕೆ ಇಡಬೇಕಿತ್ತು?: ಪೊಲೀಸರ ನಡೆಗೆ ರಾಜಣ್ಣ ಗರಂ
ಕೊಪ್ಪಳ: ಅಂಜನಾದ್ರಿಯಿಂದ (Anjanadri) ಅಯೋಧ್ಯೆಗೆ (Ayodhya) ರೈಲು ಬಿಡುವ ಬಗ್ಗೆ ಚಿಂತನೆ ನಡೆಸುತ್ತೇವೆ, ಪ್ರಸ್ತಾವನೆ ತೆಗೆದುಕೊಂಡಿದ್ದೇನೆ. ಈ ಕುರಿತು ಪರಿಶೀಲನೆ ನಡೆಸುತ್ತೇವೆ ಎಂದು ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ (V Somanna) ಹೇಳಿದರು.
ಉದ್ಘಾಟಿಸಿ ಮಾತನಾಡಿದ ಅವರು, ಕೊಪ್ಪಳದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನ ಕೈಗೊಳ್ಳಲಾಗಿದೆ. ಕೊಪ್ಪಳ ಗಂಗಾವತಿ ಹಾಗೂ ಮುನಿರಾಬಾದ್ ರೈಲು ನಿಲ್ದಾಣದ ಉನ್ನತೀಕರಣಕ್ಕೆ ಅನುದಾನ ನೀಡಲಾಗಿದೆ. ರಾಜ್ಯ ಸರ್ಕಾರ 13 ಕೋಟಿ ರೂ. ಹಣವನ್ನ ನೀಡಿದೆ. ಅದರ ಹೊರತಾಗಿ ಉಳಿದ ಹಣವನ್ನ ಕೇಂದ್ರ ಸರ್ಕಾರ ನೀಡಿದೆ. ಮೇಲ್ಸೇತುವೆ ನಿರ್ಮಾಣ ಮಾಡಿ ಜನರಿಗೆ ಅನುಕೂಲ ಮಾಡಿ ಕೊಡಲಾಗಿದೆ. ಇನ್ನೂ ಅಂಜನಾದ್ರಿಯಿಂದ ಅಯೋಧ್ಯೆಗೆ ರೈಲು ಯೋಜನೆಗೆ ಪ್ರಸ್ತಾವನೆ ತೆಗೆದುಕೊಂಡಿದ್ದೇನೆ, ರೈಲು ಬಿಡುವ ಬಗ್ಗೆ ಚಿಂತನೆ ನಡೆಸುತ್ತೇವೆ. ಬಳಿಕ ಅದನ್ನ ಪರೀಶಿಲನೆ ಮಾಡುತ್ತೇನೆ ಎಂದು ಹೇಳಿದರು.
ಕೊಪ್ಪಳದ ಗವಿಸಿದ್ದೇಶ್ವರ ಮಠಕ್ಕ ಭೇಟಿ ನೀಡಿ, ಶ್ರೀ ಗವಿಸಿದ್ದೇಶ್ವರರ ಕರ್ತೃ ಗದ್ದುಗೆಗೆ ನಮನ ಸಲ್ಲಿಸಿ, ಪೂಜ್ಯ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿಗಳವರ ಆಶೀರ್ವಾದ ಪಡೆಯಲಾಯಿತು.
ಈ ಸಂದರ್ಭದಲ್ಲಿ, ಶಾಸಕರಾದ ಶ್ರೀ ದೊಡ್ಡನಗೌಡ ಹನುಮಗೌಡ ಪಾಟೀಲ್ ಅವರು, ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಹೇಮಲತಾ ನಾಯಕ್ ಅವರು, ಮುಖಂಡರಾದ… pic.twitter.com/hwh9BwS8sY
ಅಮೃತ ಯೋಜನೆಯಲ್ಲಿ ರಾಜ್ಯದ 61 ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ಮಾಡುತ್ತಿದ್ದೇವೆ. ಗದಗ-ವಾಡಿ ಹೊಸ ಲೈನ್ ಕಾಮಗಾರಿ ಆದಷ್ಟು ಬೇಗನೆ ಮುಗಿಸುತ್ತೇವೆ. ಮೇಲ್ಸೇತುವೆಗೆ ವ್ಯಕ್ತಿ ಹೆಸರು ಇಡುವ ನಿಯಮಗಳಿವೆ. ಅವೆಲ್ಲವುಗಳನ್ನು ಪಾಲನೆ ಮಾಡಬೇಕು. ರೈಲ್ವೆಯ ಟಿಕೆಟ್ ದರ ಶೇ.56ರಷ್ಟು ಕಡಿಮೆಯಿದೆ. ಗೂಡ್ಸ್ ರೈಲುಗಳ ಆದಾಯದಿಂದ ಟಿಕೆಟ್ ದರ ಹೊಂದಾಣಿಕೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.ಇದನ್ನೂ ಓದಿ: ಗಾಳಿಪಟ ಹಾರಿಸಿ ಸಂಕ್ರಾಂತಿ ಆಚರಿಸಿದ ಕೇಂದ್ರ ಸಚಿವ ಅಮಿತ್ ಶಾ
ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ (Upper Bhadra Project) ಈ ಹಿಂದೆ ಘೋಷಣೆ ಮಾಡಿದ್ದ 5,300 ಕೋಟಿ ರೂ. ಅನುದಾನ ಬಿಡುಗಡೆ ಸೇರಿದಂತೆ ಕರ್ನಾಟಕದ ನೀರಾವರಿ ಯೋಜನೆಗಳು ಹಾಗೂ ಪೆನ್ನಾರ್ ನದಿಯ ಉಪನದಿ ಮಾರ್ಕಂಡೇಯ ನದಿಗೆ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಎತ್ತಿರುವ ತಕರಾರಿನ ಕುರಿತು ಕೇಂದ್ರ ಸಚಿವ ವಿ.ಸೋಮಣ್ಣ ಅವರ ಜತೆ ಚರ್ಚೆ ನಡೆಸಲಾಯಿತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ತಿಳಿಸಿದರು.
ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ.ಸೋಮಣ್ಣ (V.Somanna) ಅವರ ಭೇಟಿ ಬಳಿಕ ದೆಹಲಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಶಿವಕುಮಾರ್ ಅವರು ಮಂಗಳವಾರ ಉತ್ತರಿಸಿದರು. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ್ದ ಹಣವನ್ನು ಕಡಿತಗೊಳಿಸಲಾಗುವುದು ಎನ್ನುವ ಸುದ್ದಿಯಿದೆ. ಇದರ ಬಗ್ಗೆ ಇನ್ನೂ ಸ್ಪಷ್ಟವಾದ ಮಾಹಿತಿಯಿಲ್ಲ. ಅನುದಾನ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಯೋಜನೆಯ ವಿವರಗಳನ್ನು ಕಳುಹಿಸಲಾಗಿದ್ದು, ಇದರ ಬಗ್ಗೆ ಹೆಚ್ಚಿನ ಗಮನ ಹರಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಭಾರತ್‌ಪೋಲ್ ಪೋರ್ಟಲ್ ಲೋಕಾರ್ಪಣೆ ಮಾಡಿದ ಅಮಿತ್ ಶಾ
ತಮಿಳುನಾಡಿನವರು ಪೆನ್ನಾರ್ ನದಿ ನೀರಿನ ವಿಚಾರವಾಗಿ ಕಳೆದ 2ನೇ ತಾರೀಕಿನಂದು ಅಫಿಡವಿಟ್ ಸಲ್ಲಿಸಿದ್ದಾರೆ. ಮೂರು ವಾರದಲ್ಲಿ ತೀರ್ಮಾನ ಮಾಡಬೇಕಿರುವ ಕಾರಣಕ್ಕೆ ಅಫಿಡವಿಟ್ ಸಲ್ಲಿಕೆ ಮಾಡಲು ತಿಳಿಸಿದ್ದರು. ವಿಧಾನಸಭೆ ಚಳಿಗಾಲದ ಅಧಿವೇಶನವಿದ್ದ ಕಾರಣಕ್ಕೆ ನಮ್ಮಿಂದ ವಿಳಂಬವಾಯಿತು. ನಾವು ದಿನಾಂಕ ವಿಸ್ತರಣೆ ಮಾಡಿ ಎಂದು ಮನವಿ ಮಾಡಿದ್ದೇವೆ ಎಂದರು.
ಎರಡು ರಾಜ್ಯಗಳ ಪ್ರತಿನಿಧಿಗಳನ್ನು ಸೇರಿಸಿ ಮಾತುಕತೆ ನಡೆಸಬೇಕಿರುವ ಕಾರಣಕ್ಕೆ ಶೀಘ್ರದಲ್ಲೇ ಸಭೆಗೆ ಒಂದು ದಿನಾಂಕವನ್ನು ಅಂತಿಮಗೊಳಿಸುವುದಾಗಿ ಹೇಳಿದ್ದಾರೆ. ಪೆನ್ನಾರ್ ನದಿ ನೀರಿನ ವಿಚಾರವಾಗಿ ನಿಮ್ಮಲ್ಲೇ ಚರ್ಚೆ ನಡೆಸಿ ಬಗೆಹರಿಸಿಕೊಳ್ಳಿ ಎನ್ನುವ ಸುಪ್ರೀಂ ಕೋರ್ಟ್ ನಿರ್ದೇಶನವಿದೆ ಎಂದರು.
ಈ ನದಿ ನೀರಿನ ವಿಚಾರದಲ್ಲಿ ತಮಿಳುನಾಡಿಗೆ ಯಾವುದೇ ತೊಂದರೆಯಾಗುವುದಿಲ್ಲ. ಅಲ್ಲದೇ ಕೋಲಾರದ ನೀರಿನ ಸಮಸ್ಯೆ ಬಗ್ಗೆ ಎಲ್ಲರಿಗೂ ಅರಿವಿದೆ. ಕೋಲಾರದ ಕೆರೆಗಳಿಗೆ ವೃಷಭಾವತಿ ಸೇರಿದಂತೆ ಕೆ.ಸಿ ವ್ಯಾಲಿ ಯೋಜನೆಯಿಂದ ಬಳಕೆಯಾದ ನೀರನ್ನು ಶುದ್ದೀಕರಿಸಿ ತುಂಬಿಸಲಾಗುತ್ತಿದೆ. ಈ ಯೋಜನೆಯ ಬಗ್ಗೆ ಈ ಹಿಂದೆ ಕೇಂದ್ರ ಸರ್ಕಾರವೂ ಮೆಚ್ಚುಗೆ ವ್ಯಕ್ತಪಡಿಸಿತ್ತು ಎಂದರು.
ಪೆನ್ನಾರ್ ನದಿ ನೀರಿನ ವಿವಾದ ಕುರಿತು ಟ್ರಿಬ್ಯೂನಲ್ ಮೂಲಕ ಹೋದರೆ ತಡವಾಗುತ್ತದೆ ಹಾಗೂ ಕೋರ್ಟ್ ಮತ್ತು ವಕೀಲರ ವೆಚ್ಚ ದುಬಾರಿಯಾಗುತ್ತದೆ. ಆದ ಕಾರಣಕ್ಕೆ ಸರ್ಕಾರದ ಮಟ್ಟದಲ್ಲೇ ಬಗೆಹರಿಸಿಕೊಳ್ಳಲು ನಾವು ನೋಡುತ್ತಿದ್ದೇವೆ. ಈಗಾಗಲೇ ಅರಣ್ಯ ಇಲಾಖೆಯವರು ಅನುಮತಿ ನೀಡುತ್ತೇವೆ ಎಂದು ಹೇಳಿದ್ದಾರೆ. ಈ ವಿಚಾರವಾಗಿ ಮಾತನಾಡಲು ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಬೇಕಿತ್ತು. ಅವರು ಲಭ್ಯವಿಲ್ಲ. ಇದರ ನಡುವೆ ಇತರೇ ಸಚಿವರನ್ನು ಇನ್ನೊಮ್ಮೆ ಬಂದು ಭೇಟಿಯಾಗುವೆ. ಇಲಾಖೆಯ ಬಜೆಟ್ ಕೆಲಸವಿರುವ ಕಾರಣಕ್ಕೆ ಕೇಂದ್ರ ಜಲಶಕ್ತಿ ಸಚಿವರೂ ಭೇಟಿಗೆ ಸಿಗಲಿಲ್ಲ ಎಂದು ಹೇಳಿದರು.
ಕರ್ನಾಟಕಕ್ಕೆ ಸಂಬಂಧಿಸಿದ ನೀರಾವರಿ ಕೆಲಸಗಳು ಹಾಗೂ ಕಡತಗಳು ಸಚಿವರಾದ ವಿ.ಸೋಮಣ್ಣ ಅವರ ಗಮನಕ್ಕೆ ತರಬೇಕು ಎನ್ನುವ ನಿರ್ದೇಶನವಿರುವ ಕಾರಣಕ್ಕೆ ಅವರನ್ನು ಭೇಟಿ ಮಾಡಿ ರಾಜ್ಯದ ನೀರಾವರಿ ಕೆಲಸಗಳ ಬಗ್ಗೆ ವಿವರಣೆ ನೀಡಿದೆ ಎಂದು ತಿಳಿಸಿದರು. ಮೇಕೆದಾಟು ವಿಚಾರ ಚರ್ಚೆಯಾಯಿತೆ ಎಂದು ಕೇಳಿದಾಗ, ‘ಅದರ ಬಗ್ಗೆ ಮಾಹಿತಿ ಬಹಿರಂಗಗೊಳಿಸಲು ಆಗುವುದಿಲ್ಲ’ ಎಂದರು.
ಸುಮಾರು 5-6 ಸಾವಿರ ಉಳಿತಾಯ
ದೆಹಲಿಯಲ್ಲಿ ಘೋಷಣೆ ಮಾಡಿರುವ ಪ್ಯಾರಿ ದೀದಿ ಯೋಜನೆ ಮೂಲಕ ಮಹಿಳೆಯರಿಗೆ 2,500 ನೀಡಲಾಗುವುದು ಎಂದು ಹೇಳಲಾಗಿದೆ. ಕಾಂಗ್ರೆಸ್ ಅಧಿಕಾರದಲ್ಲಿ ಇರುವ ರಾಜ್ಯದಲ್ಲಿ ಕೇವಲ 2 ಸಾವಿರ ನೀಡಲಾಗುತ್ತಿದೆ ಎನ್ನುವ ಚರ್ಚೆಯ ಬಗ್ಗೆ ಕೇಳಿದಾಗ, 2 ಸಾವಿರ ಎನ್ನವುದು ಕೇವಲವೇ? ದೆಹಲಿ ಹಾಗೂ ಕರ್ನಾಟಕದ ಆರ್ಥಿಕ ಪರಿಸ್ಥಿತಿ ಬೇರೆ, ಬೇರೆಯಿರುತ್ತದೆ. ದೆಹಲಿಯಲ್ಲಿ ಖರ್ಚು ಹೆಚ್ಚು, ಕರ್ನಾಟಕದಲ್ಲಿ ಕಡಿಮೆಯಿದೆ. ಅಲ್ಲದೇ ಕರ್ನಾಟಕದಲ್ಲಿ ಐದು ಗ್ಯಾರಂಟಿಗಳ ಮೂಲಕ ಸುಮಾರು 5-6 ಸಾವಿರ ಉಳಿತಾಯ ಪ್ರತಿ ಕುಟುಂಬಕ್ಕೆ ಆಗುತ್ತಿದೆ ಎಂದರು.
ಡಿನ್ನರ್ ರಾಜಕೀಯ ಮತ್ತು ಒಬ್ಬೊಬ್ಬರೇ ಸಚಿವರು ಔತಣಕೂಟ ಏರ್ಪಡಿಸುತ್ತಿರುವ ಬಗ್ಗೆ ಹಾಗೂ ಗೃಹಸಚಿವ ಪರಮೇಶ್ವರ್ ಅವರು ಬುಧವಾರ ಸಭೆ ಕರೆದಿರುವ ಬಗ್ಗೆ ಕೇಳಿದಾಗ, ‘ನಾನು ಹೊರದೇಶದಲ್ಲಿದ್ದ ಕಾರಣಕ್ಕೆ ನನಗೆ ಇದರ ಬಗ್ಗೆ ಮಾಹಿತಿಯಿಲ್ಲ. ಬೆಂಗಳೂರಿಗೆ ಹೋದ ನಂತರ ಇದರ ಬಗ್ಗೆ ತಿಳಿದುಕೊಳ್ಳಲು ನಾನು ಪ್ರಯತ್ನಿಸುತ್ತೇನೆ. ಪಕ್ಷದ ಕೆಲಸವಿದ್ದ ಕಾರಣಕ್ಕೆ ಹಾಗೂ ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸೋಮವಾರದಂದು ಕರ್ನಾಟಕದ ಗೃಹಲಕ್ಷ್ಮೀ ಯೋಜನೆ ಮಾದರಿಯ ಪ್ಯಾರಿ ದೀದಿ ಯೋಜನೆ ಪ್ರಕಟಣೆಗಾಗಿ ಬಂದಿದ್ದೆ’ ಎಂದು ಹೇಳಿದರು.
ಕುಮಾರಸ್ವಾಮಿ ಭಂಡಾರದಲ್ಲಿ ಏನೇನಿದೆ?
60 ಪರ್ಸೆಂಟ್ ಸರ್ಕಾರ ಎನ್ನುವ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ, ‘ಕುಮಾರಸ್ವಾಮಿ ಅವರ ಭಂಡಾರದಲ್ಲಿ ಏನೇನಿದೆ ಎನ್ನುವ ಬಗ್ಗೆ ಆನಂತರ ಮಾತನಾಡೋಣ. ಈಗ ಚರ್ಚೆ ಮಾಡುವುದು ಬೇಡ’ ಎಂದರು.
ಐಶ್ವರ್ಯ ಗೌಡ ವಂಚನೆ ಪ್ರಕರಣದಲ್ಲಿ ನನ್ನ ಹೆಸರನ್ನು ತಳುಕು ಹಾಕಿಸಿರುವುದರ ಹಿಂದೆ ಯಾರಿದ್ದಾರೆ ಎನ್ನುವುದು ತಿಳಿದಿದೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ನನಗೆ ಯಾವ ಐಶ್ವರ್ಯ ಗೌಡನೂ ಗೊತ್ತಿಲ್ಲ. ನನಗೆ ಸಂಬಂಧವಿಲ್ಲದ್ದು ಹಾಗೂ ಗೊತ್ತಿಲ್ಲದೇ ಇರುವ ಬಗ್ಗೆ ಮಾತನಾಡುವುದಿಲ್ಲ. ನನ್ನ ತಮ್ಮ ಡಿ.ಕೆ.ಸುರೇಶ್ ಅವರನ್ನು ಕೂಡ ಭೇಟಿಯಾಗಿಲ್ಲ. ಇದರ ಬಗ್ಗೆ ಕೇವಲ ಮಾಧ್ಯಮಗಳಲ್ಲಿ ಮಾತ್ರ ನೋಡಿದ್ದೇನೆ. ನನ್ನ ತಮ್ಮ ಇದರ ಬಗ್ಗೆ ನಿರ್ಲಕ್ಷ್ಯವಹಿಸಬೇಕಾಗಿತ್ತು. ಆತ ಕೂಡ ವಿದೇಶಕ್ಕೆ ಹೋಗಿದ್ದ ಕಾರಣಕ್ಕೆ ನಾನು ಮಾತನಾಡಲು ಸಾಧ್ಯವಾಗಿಲ್ಲ ಎಂದರು.
ನವದೆಹಲಿ: ರಾಹುಲ್ ಗಾಂಧಿ ರಾಷ್ಟ್ರೀಯ ಪಕ್ಷದ ನಾಯಕ. ಆದರೆ, ಎಳೆ ಮಕ್ಕಳ ರೀತಿ ವರ್ತಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಕಿಡಿಕಾರಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಇತಿಹಾಸ ಇರುವ ಕುಟುಂಬ ಅಂತಾ ಏನೇನೋ ಮಾಡಲು ಸಾಧ್ಯವಿಲ್ಲ. ಜನರು ಅದನ್ನು ಒಪ್ಪುವುದಿಲ್ಲ. ಸಂವಿಧಾನ ಮುಖ್ಯ ಎನ್ನುವುದಕ್ಕೆ ಎರಡು ದಿನ ಚರ್ಚೆಗೆ ಅವಕಾಶ ಮಾಡಿಕೊಡಲಾಗಿತ್ತು ಎಂದು ಕಾಂಗ್ರೆಸ್ ನಡೆಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಅಮಿತ್ ಶಾ ಅವರ ಹೇಳಿಕೆಯನ್ನು ತಿರುಚುವ ಕೆಲಸ ಮಾಡಿದೆ. ಅಂಬೇಡ್ಕರ್ ಅವರ ಜೊತೆಗೆ ಕಾಂಗ್ರೆಸ್ ಹೇಗೆ ನಡೆದುಕೊಂಡಿತ್ತು ಎಂದು ಎಲ್ಲರಿಗೂ ಗೊತ್ತಿದೆ. ಅಂಬೇಡ್ಕರ್ ಅವರನ್ನು ಹೀಯಾಳಿಸುವ ಕೆಲಸ ಆಗಿಲ್ಲ. ಬಿಜೆಪಿ ಅಪಾರವಾದ ಗೌರವ ಇಟ್ಟುಕೊಂಡಿದೆ ಎಂದು ಕೇಂದ್ರ ಗೃಹ ಸಚಿವರನ್ನು ಸಮರ್ಥಿಸಿಕೊಂಡಿದ್ದಾರೆ.
ಸಿದ್ದಗಂಗಾ ಮಠಕ್ಕೆ ವಿದ್ಯುತ್ ಬಿಲ್ ಕುರಿತು ಮಾತನಾಡಿ, ಮಠದಲ್ಲಿ 14,000 ಮಕ್ಕಳು ಓದುತ್ತಿದ್ದಾರೆ. ಈ ರೀತಿಯ ಘಟನೆ ನಡೆಯಬಾರದು. ನಾನು ಅಲ್ಲೇ ಹೋಗ್ತಿದ್ದೀನಿ, ನೋಡ್ತೀನಿ ಎಂದು ತಿಳಿಸಿದ್ದಾರೆ.
ಬೆಂಗಳೂರು: 40% ಕಮಿಷನ್ ಆರೋಪದಂತೆಯೇ ಕೋವಿಡ್ ಹಗರಣದ (Covid Scam) ಆರೋಪದಲ್ಲೂ ಬಿಜೆಪಿಗೆ (BJP) ಕ್ಲೀನ್ ಚಿಟ್ ಸಿಗಲಿದೆ ಎಂದು ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ವಿ ಸೋಮಣ್ಣ (V Somanna) ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೋವಿಡ್ ಹಗರಣದ ತನಿಖೆಗೆ ಎಸ್‌ಐಟಿ ರಚನೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, 40% ಕಮಿಷನ್ ಆರೋಪ ಏನ್ ಆಯ್ತು ಹೇಳಿ? ಕೋವಿಡ್ ಕೂಡಾ ಹಾಗೇ ಆಗುತ್ತದೆ. ಪದೇ ಪದೇ ಇಂತಹ ದ್ವೇಷ ರಾಜಕೀಯ ಮಾಡಬಾರದು. ಸಿದ್ದರಾಮಯ್ಯ (Siddaramaiah) ಅಂತವರ ಕಾಲದಲ್ಲಿ ಹೀಗೆ ಅಲ್ಲ ಆಗಬಾರದು. ತಪ್ಪಾಗಿದ್ರೆ ತಪ್ಪು ಮಾಡಿದವರು ನೀರು ಕುಡಿಯುತ್ತಾರೆ ಎಂದರು.
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ (BPL Card) ರದ್ದು ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾನು ಕೂಡಾ ಮಾಧ್ಯಮಗಳಲ್ಲಿ ಈ ವಿಷಯ ನೋಡಿದ್ದೇನೆ. ಅದರೆ ಹೀಗೆ ಆಗಬಾರದು. ಕಾರ್ಡ್ ರದ್ದು ಆಗುತ್ತಿರುವುದು ಸರಿಯಲ್ಲ ಎಂದರು.
ಆಪರೇಷನ್ ಕಮಲಕ್ಕೆ ಬಿಜೆಪಿಯಿಂದ 100 ಕೋಟಿ ಆಫರ್ ಮಾಡಿದ್ದಾರೆ ಎಂಬ ಕಾಂಗ್ರೆಸ್ ಶಾಸಕ ರವಿ ಗಣಿಗ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸೋಮಣ್ಣ, ಮೊದಲು ಅವರು ಶಾಸಕರಾಗಿ ಕೆಲಸ ಮಾಡಲಿ. ಇಲ್ಲ ಸಲ್ಲದ ಮಾತುಗಳನ್ನು ಶಾಸಕರು ಆಡುವುದು ಬೇಡ. ಶಾಸಕರಿಗೆ ಇದು ಗೌರವ ತರುವುದಿಲ್ಲ ಎಂದು ಸೋಮಣ್ಣ ಕಿಡಿಕಾರಿದರು.
ರಾಮನಗರ: ನಮ್ಮಪ್ಪನ ಆಣೆ ಡಿಸೆಂಬರ್‌ವರೆಗೆ ಮಾತ್ರ ಸಿದ್ದರಾಮಯ್ಯ (Siddaramaiah) ಸಿಎಂ ಆಗಿರುತ್ತಾರೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ (V Somanna) ಭವಿಷ್ಯ ನುಡಿದಿದ್ದಾರೆ.
ಚನ್ನಪಟ್ಟಣದ (Channapatna) ಹೊಟ್ಟಿಗನ ಹೊಸಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ಕೇಂದ್ರದ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ನೀವೆ ಹೊಣೆ ಅಂತ ಹೇಳಿದ್ದಾರೆ. ರಾಜ್ಯ ಸರ್ಕಾರದ ಭ್ರಷ್ಟಾಚಾರ ಇಡೀ ದೇಶದ ಮೇಲೆ ಪರಿಣಾಮ ಬೀರುತ್ತಿದೆ. ಈ ಕಾರಣಕ್ಕೆ ನಾವು ದೇಶದ ಎಲ್ಲಾ ಚುನಾವಣೆ ಗೆಲ್ಲುತ್ತೇವೆ. ಸಿದ್ದರಾಮಯ್ಯ ಅವರಿಗೆ ಶತ್ರುಗಳು ಅಂತಾ ಇದ್ದರೆ ಅದು ಕಾಂಗ್ರೆಸ್‌ನಲ್ಲೇ ಎಂದು ಕಿಡಿಕಾರಿದರು. ಇದನ್ನೂ ಓದಿ: ನರೇಂದ್ರ ಮೋದಿ ಸುಳ್ಳಿನ ಸರದಾರ – ಮಲ್ಲಿಕಾರ್ಜುನ ಖರ್ಗೆ ತೀವ್ರ ತರಾಟೆ
ಬಿಎಸ್ ಯಡಿಯೂರಪ್ಪ ಹಾಗೂ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯನವರೇ ಈ ಪಾಪದ ಕೆಲಸ ಮಾಡಬೇಡಿ. ಕೋವಿಡ್‌ನಲ್ಲಿ ನಾವೆಲ್ಲಾ ಪ್ರಾಣದ ಹಂಗು ತೊರೆದು ಕೆಲಸ ಮಾಡಿದ್ದೇವೆ. ಯಾವ ರೀತಿ ಕೆಲಸ ಮಾಡಿದ್ದೇವೆ ಎಂದು ಜಾರ್ಜ್ ಹಾಗೂ ಬೈರತಿ ಸುರೇಶ್‌ರನ್ನು ಕೇಳಿ. ನೀವು ಸಾವಿರಾರು ಕೋಟಿ ಹಗರಣ ಅಂತಾ ಹೇಳಿದ್ದೀರಿ. ಈಗ 14 ಕೋಟಿ ಅಂತಿದ್ದೀರಾ. ನಿಮ್ಮ 14 ಸೈಟ್ ಬಗ್ಗೆ ನೋಡಿ. ಈ ಬಗ್ಗೆ ನಿರ್ಣಯ ಕೈಗೊಳ್ಳುವಷ್ಟರಲ್ಲಿ ನಿಮ್ಮ ಸಚಿವ ಸಂಪುಟವೇ ಇರುವುದಿಲ್ಲ. ಸಿದ್ದರಾಮಯ್ಯ ತಮ್ಮ ತಪ್ಪು ಮುಚ್ಚಿಕೊಳ್ಳಲು ಡೈವರ್ಟ್ ಮಾಡಲು ಈ ರೀತಿ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಹೈಕೋರ್ಟ್ ತೀರ್ಪನ್ನು ಪೊಲಿಟಿಕಲ್ ಜಡ್ಜ್‌ಮೆಂಟ್ ಎಂದಿದ್ದ ಸಚಿವರಿಗೆ ಸಂಕಷ್ಟ – ಜಮೀರ್ ವಿರುದ್ಧ ಕ್ರಮಕ್ಕೆ ರಾಜ್ಯಪಾಲರ ಸೂಚನೆ
ಚನ್ನಪಟ್ಟಣ ಚುನಾವಣೆ ವಿಚಾರವಾಗಿ ಮಾತನಾಡಿ, ಚನ್ನಪಟ್ಟಣ ಜನ ಕೃತಜ್ಞತೆಗೆ ಮತ್ತೊಂದು ಹೆಸರು. ಭಗೀರಥ ಯಾರು ಅದು ಇದು ಅಂತಾ ನಾನು ಹೇಳಲ್ಲ. ಜನ ದೇವೇಗೌಡರನ್ನು ನೆನಪು ಮಾಡಿಕೊಳ್ಳುತ್ತಾರೆ. ದೇವೇಗೌಡರ ದೂರದೃಷ್ಟಿ ಕಾರಣದಿಂದ ಹದಿನಾಲ್ಕು ಕ್ಷೇತ್ರಗಳನ್ನು ಗೆದ್ದಿದ್ದೇವೆ. ಇನ್ನೆರಡು ದಿನಗಳಲ್ಲಿ ಇಲ್ಲಿ ಚಿತ್ರಣ ಬದಲಾಗಲಿದೆ. ಜೆಡಿಎಸ್ ಭದ್ರಕೋಟೆ ಚನ್ನಪಟ್ಟಣ. ಜನ ಪದೇಪದೇ ಯೋಗೇಶ್ವರ್ ಯಾಮಾರಿಸಲು ಆಗಲ್ಲ. ರಾತ್ರಿ ಕಂಡ ಬಾವಿಗೆ ಹಗಲು ಬಿದ್ದಿದ್ದೀರಾ ಅನ್ನೋ ಸಂದೇಶ ಜನ ನೀಡುತ್ತಾರೆ. ನಾಲ್ಕು ವರ್ಷ ಸುಮ್ಮನೆ ಕೂರುವಂತೆ ಮಾಡುತ್ತಾರೆ. ನಿಖಿಲ್ ಕುಮಾರಸ್ವಾಮಿ ಹೆಚ್ಚು ಮತಗಳಿಂದ ಗೆಲ್ಲುತ್ತಾರೆ. ಈ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಕೊಡಬೇಕು ಎಂದು ಜನ ಅರಿತಿದ್ದಾರೆ. ಆ ಕೆಲಸವನ್ನು ಚನ್ನಪಟ್ಟಣದ ಜನ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಭಾರತೀಯ ಜನತಾ ಪಾರ್ಟಿ ಅಲ್ಲಾ, ಭಾರತೀಯ ಜೂಟಾ ಪಾರ್ಟಿ: ಸಚಿವ ಖಂಡ್ರೆ
ಬೆಂಗಳೂರು: ವಕ್ಫ್ (Waqf) ವಿಚಾರ ನಿಲ್ಲಿಸದಿದ್ದರೆ ರಕ್ತಕ್ರಾಂತಿ ಆಗುತ್ತೆ. ಸಾಮಾನ್ಯರಿಗೆ ನೀವು ತೊಂದರೆ ಕೊಡಬೇಡಿ. ಕರ್ನಾಟಕದಲ್ಲಿ ಮುಂದೆ ಏನೇನಾಗುತ್ತೋ ಗೊತ್ತಿಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ (V Somanna) ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಲ್ಲಿ (Bengaluru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ನಿಂತ ನೀರಾಗಿದೆ. ಜನರನ್ನು ಬೇರೆ ಕಡೆ ಡೈವರ್ಟ್ ಮಾಡುತ್ತಿದ್ದಾರೆ. ಹಿಂದೆ ಸಿದ್ದರಾಮಯ್ಯ (Siddaramaiah) ಸರ್ಕಾರ ನಾನು ನೋಡಿದ್ದೆ. ಆದರೆ ಈಗಿನ ಒಂದೂವರೆ ವರ್ಷದ ಆಡಳಿತ ಎಷ್ಟು ಮಾಡಿದೆ. ಸಿದ್ದರಾಮಯ್ಯ ಪಂಜರದ ಗಿಳಿ ಆಗಿದ್ದಾರೆ. ಮುಖ್ಯಕಾರ್ಯದರ್ಶಿಗಳು ಹೇಗೆ ನೋಟಿಸ್ ಕೊಡುತ್ತಾರೆ? ವಕ್ಫ್ ಬೋರ್ಡ್ ಆಸ್ತಿ ಕ್ರಮಕ್ಕೆ ಹೇಗೆ ಆದೇಶ ಮಾಡುತ್ತಾರೆ? ಅವರಿಗೆ ಸಿಎಂ ಅಭಯ ಇರಬೇಕಲ್ಲ. ಇನ್ನು ಮೇಲಾದರೂ ವಾಸ್ತವಾಂಶಕ್ಕೆ ಆದ್ಯತೆ ಕೊಡಿ. ನಿಮ್ಮ ಬಾಲ ಬಡುಕರನ್ನು ದೂರವಿಡಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: Tumakuru| 214 ಕೋಟಿ ರೂ. ವೆಚ್ಚದ ಕಾಮಗಾರಿಗೆ ಅನುಮೋದನೆ: ಪರಮೇಶ್ವರ್
ಸಿಎಂ ಕಣ್ಣಿದ್ದೂ ಕುರುಡರಾಗಿದ್ದಾರೆ. ಕಿವಿ ಇದ್ದೂ ಇಲ್ಲದಂತಾಗಿದೆ. ಬಿಜೆಪಿಯ ವ್ಯವಸ್ಥಿತ ಪಿತೂರಿ ಎನ್ನುತ್ತಾರೆ. ಎಲ್ಲಿದೆ ರೀ ಪಿತೂರಿ? ಬಿಜೆಪಿ ಇಲ್ಲದಿದ್ದರೆ ಎಷ್ಟು ಜನ ಸಾಯುತ್ತಿದ್ದರೋ? ನೀವು ಕರ್ನಾಟಕವನ್ನು ಉಳಿಸ್ತೀರಾ? ಹಿಂದೂ ದೇಶ ಹಿಂದೂ ದೇಶವಾಗಿ ಇರುತ್ತಾ? ಕಾಂಗ್ರೆಸ್ ಬಂದರೆ ಪಾಪದ ಕೊಡ ತುಂಬುತ್ತೆ. ಕೇರಳದ ಸಿಎಂ ಫುಡ್‌ಕಿಟ್ ಕೊಡೋದು ಸರಿಯಲ್ಲ ಎನ್ನುತ್ತಾರೆ. ಜನರ ಬಗ್ಗೆ ಕಾಳಜಿ ಇದ್ದರೆ ನೀವು ಮೊದಲು ಮನುಷ್ಯರಾಗಿ. ಅಹಿಂದ ನಾಯಕ ಅಂತ ಯಾಕೆ ಹೇಳ್ತೀರಾ? ನಿಮಗೆ ಕಷ್ಟಬಂದಾಗ ಅಹಿಂದ ಅಂತೀರಾ? ಯಾವಾಗ ಖುಷಿಯಾಗುತ್ತೆ ಆಗ ತಲೆಮೇಲೆ ಕೈ ಇಡುತ್ತೀರೀ ಎಂದು ಹರಿಹಾಯ್ದರು. ಇದನ್ನೂ ಓದಿ: Chikkaballapur| ಸಚಿವ ಡಾ.ಎಂಸಿ ಸುಧಾಕರ್ ನಿವಾಸದ ಬಳಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು