Tag: ವಿ.ಸೋಮಣ್ಣ

  • Loksabha Election: ಮಾಧುಸ್ವಾಮಿ ಬಳಿಕ ಮತ್ತೊಬ್ಬರಿಂದ ಸೋಮಣ್ಣ ಸ್ಪರ್ಧೆಗೆ ವಿರೋಧ!

    Loksabha Election: ಮಾಧುಸ್ವಾಮಿ ಬಳಿಕ ಮತ್ತೊಬ್ಬರಿಂದ ಸೋಮಣ್ಣ ಸ್ಪರ್ಧೆಗೆ ವಿರೋಧ!

    ತುಮಕೂರು: ಇಲ್ಲಿನ ಲೋಕಸಭಾ ಬಿಜೆಪಿ ಟಿಕೆಟ್ ಸಿಕ್ಕೇ ಬಿಡ್ತು ಎಂದು ಈಗಾಗಲೇ ಕ್ಷೇತ್ರ ಸಂಚಾರದಲ್ಲಿದ್ದ ವಿ.ಸೋಮಣ್ಣಗೆ (V Somanna) ಇನ್ನೊಂದು ತಡೆಗೋಡೆ ಎದುರಾಗಿದೆ. ಮಾಜಿ ಸಚಿವ ಮಾಧುಸ್ವಾಮಿ (Madhuswamy) ಬಳಿಕ ಇದೀಗ ಸ್ಥಳೀಯ ಪ್ರಭಾವಿ ಮುಖಂಡ ಮತ್ತೊಂದು ದಾಳ ಉರುಳಿಸಿದ್ದಾರೆ.

    ಹೌದು. ಸಿದ್ದಗಂಗಾ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರು, ಲಿಂಗಾಯತ ಸಮುದಾಯದ ಪ್ರಭಾವಿ ಮುಖಂಡ ಡಾ.ಪರಮೇಶ್ ಟಿಕೆಟ್‍ಗಾಗಿ ದೆಹಲಿ ಮಟ್ಟದಲ್ಲಿ ಲಾಬಿ ಶುರುಮಾಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಟಿಕೆಟ್ ಆಕಾಂಕ್ಷಿ ಡಾ.ಪರಮೇಶ್, ಸೋಮಣ್ಣಗೆ ಟಕೆಟ್ ಸಿಗಲ್ಲ.. ಹೈಕಮಾಂಡ್‍ಗೆ ಕಳುಹಿಸಿದ್ದ ನಾಲ್ವರ ಹೆಸರಲ್ಲಿ ನನ್ನ ಹೆಸರು ಮೊದಲಿದೆ ಎಂದು ಬಾಂಬ್ ಸಿಡಿಸಿದ್ದಾರೆ. ಅಲ್ಲದೇ ಹೊರಗಿನವರಿಗೆ ಟಿಕೆಟ್ ಕೊಡಬಾರದು ಎಂದು ಹೈಕಮಾಂಡ್‍ಗೆ ಪತ್ರ ಬರೆದಿದ್ದೇವೆ ಎಂದು ಡಾ.ಪರಮೇಶ್ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

    ಡಾ.ಪರಮೇಶ್‍ರವರ ತೀಕ್ಷ್ಣ ಮಾತುಗಳು ವಿ.ಸೋಮಣ್ಣರಿಗೆ ಕೊಂಚ ಗಲಿಬಿಲಿ ಮಾಡಿಸಿದೆ. ನಾನ್ಯಾಕೆ ವಲಸಿಗನಾಗ್ತೀನಿ, ಮೋದಿ ಅವರ ಕ್ಷೇತ್ರ ಗುಜರಾತ್ ಆದರೂ ವಾರಣಾಸಿಯಿಂದ ಸ್ಪರ್ಧೆ ಮಾಡಿಲ್ಲವೇ ಎಂದು ಪ್ರಶ್ನೆ ಹಾಕಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೋವಿಂದರಾಜು ನಗರ ಕ್ಷೇತ್ರದಲ್ಲಿ (Govindrajanagar Constituency) ನನಗೆ ಟಿಕೆಟ್ ಕೊಟ್ಟರೆ ನಾನ್ಯಾಕೆ ತುಮಕೂರಿಗೆ ಬರುತ್ತಿದ್ದೆ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಇದನ್ನೂ ಓದಿ: ಹಾಸನ ಕ್ಷೇತ್ರದಲ್ಲಿ ಪ್ರಜ್ವಲ್ ರೇವಣ್ಣ ಫುಲ್ ಆಕ್ಟೀವ್- ದಿಶಾ ಸಭೆಯಲ್ಲಿ ಸಂಸದ ಕ್ಷಮೆ

    ಒಟ್ಟಾರೆ ಜಿಲ್ಲೆಯ ಪ್ರಬಲ ಸಮುದಾಯಗಳಾದ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳ ಮತ ಬೇಟೆ ಆರಂಭಿಸಿದ್ದ ಸೋಮಣ್ಣಗೆ ಡಾ.ಪರಮೇಶ್ ಕೊಂಚ ಶಾಕ್ ಕೊಟ್ಟಿರೋದು ಸುಳ್ಳಲ್ಲ.

  • ನಾನು ಪಾರ್ಲಿಮೆಂಟ್‌ ಸದಸ್ಯತ್ವ ಕೇಳಿದ್ದೀನಿ: ವಿ ಸೋಮಣ್ಣ

    ನಾನು ಪಾರ್ಲಿಮೆಂಟ್‌ ಸದಸ್ಯತ್ವ ಕೇಳಿದ್ದೀನಿ: ವಿ ಸೋಮಣ್ಣ

    ಬೆಂಗಳೂರು: ನಾನು ಪಾರ್ಲಿಮೆಂಟ್‌ ಸದಸ್ಯತ್ವ ಕೇಳಿದ್ದೇನೆ ಎಂದು ಮಾಜಿ ಸಚಿವ ವಿ ಸೋಮಣ್ಣ (V Somanna) ಹೇಳಿದ್ದಾರೆ.

    ತುಮಕೂರು ಲೋಕಸಭಾ (Tumakuru Lok Sabha Election) ಕ್ಷೇತ್ರದ ಟಿಕೆಟ್‌ ಕೇಳಿದ್ದೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ, ನಾನು ತುಮಕೂರು ಕ್ಷೇತ್ರದ ಆಕಾಂಕ್ಷಿ ಎಂದು ಎಲ್ಲಿಯೂ ಹೇಳಿಲ್ಲ. ತುಮಕೂರು ಅಭಿವೃದ್ಧಿಗಾಗಿ ನಾನು ಶ್ರಮವಹಿಸಿದ್ದೇನೆ. ನಾನು ಯಾವುದೇ ಕ್ಷೇತ್ರವನ್ನು ಕೇಳಿಲ್ಲ ಎಂದು ಹೇಳಿದರು.  ಇದನ್ನೂ ಓದಿ: ಮನಮೋಹನ್‌ ಸಿಂಗ್‌ರನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ

    ಕಳೆದ ಬಾರಿ ನನಗೆ ಸೋಲಾಗಿದೆ. ಆದರೆ ನನ್ನ ಕಾರ್ಯವೈಖರಿ ನೋಡಿ ಹೈಕಮಂಡ್ ಯಾವ ಕ್ಷೇತ್ರ ನೀಡಿದರೂ ನನಗೆ ತೊಂದರೆಯಿಲ್ಲ. ವರಿಷ್ಠರ ಆದೇಶವನ್ನು ನಾನು ಮೀರುವುದಿಲ್ಲ. ಆದರೆ ಪಾರ್ಲಿಮೆಂಟ್ ಸದಸ್ಯತ್ವ ಕೇಳಿದ್ದೇನೆ. ರಾಜೀವ್ ಚಂದ್ರಶೇಖರ್ (Rajeev Chandrasekhar) ಅವರಿಗೆ ಪಾರ್ಲಿಮೆಂಟ್‌ ಸದಸ್ಯತ್ವ ಕೊಡದಿದ್ದರೆ ನನಗೆ ಕೊಡಿ ಎಂದಿದ್ದೇನೆ ಎಂದರು.

    ನಾನು ತುಮಕೂರಿನಲ್ಲಿ ಕೆಲಸ ಮಾಡಿರುವುದನ್ನು ನೋಡಿ ನನ್ನ ಹೆಸರು ಕೇಳಿ ಬರುತ್ತಿದೆ. ತುಮಕೂರಿನಲ್ಲಿ ಜೆ.ಸಿ.ಮಾಧುಸ್ವಾಮಿ ಅವರು ಆಕಾಂಕ್ಷಿ ಎಂದು ಕೇಳಿಕೊಂಡಿದ್ದಾರೆ. ಅದಕ್ಕೆ ನನ್ನ ವಿರೋಧವಿಲ್ಲ ಎಂದು ಸೋಮಣ್ಣ ಹೇಳಿದರು. ಇದನ್ನೂ ಓದಿ: ಮೀಸಲಾತಿ ಪಡೆದವರು ಅದರಿಂದ ಹೊರಬಂದು ಹಿಂದುಳಿದವರಿಗೆ ಅವಕಾಶ ಕೊಡಲಿ: ಸುಪ್ರೀಂ

     

  • ಲೋಕಸಭೆಗೆ ಅಲ್ಲ, ರಾಜ್ಯಸಭೆಗೆ ದೆಹಲಿಯಲ್ಲಿ ವಿ.ಸೋಮಣ್ಣ ಲಾಬಿ!

    ಲೋಕಸಭೆಗೆ ಅಲ್ಲ, ರಾಜ್ಯಸಭೆಗೆ ದೆಹಲಿಯಲ್ಲಿ ವಿ.ಸೋಮಣ್ಣ ಲಾಬಿ!

    ನವದೆಹಲಿ: ರಾಜ್ಯಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಲಾಬಿ ಶುರುವಾಗಿದ್ದು ಮಾಜಿ ಸಚಿವ ವಿ.ಸೋಮಣ್ಣ (v.Somanna)  ವರಿಷ್ಠರ ಭೇಟಿಗೆ ಪ್ರಯತ್ನ ಆರಂಭಿಸಿದ್ದಾರೆ. ಭಾನುವಾರವ ರಾತ್ರಿಯೇ ದೆಹಲಿಗೆ ಆಗಮಿಸಿರುವ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಪ್ರಮುಖ ನಾಯಕರ ಭೇಟಿಗೆ ಪ್ರಯತ್ನಿಸುತ್ತಿದ್ದಾರೆ.

    ರಾಜ್ಯದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಮೂರು ಸ್ಥಾನ ಕಾಂಗ್ರೆಸ್‌ಗೆ (Congress) ಲಭ್ಯವಾಗಲಿದೆ. ಉಳಿದ ಬಾಕಿ ಒಂದು ಸ್ಥಾನ ಆಯ್ಕೆ ಮಾಡಿಕೊಳ್ಳಲು ಬಿಜೆಪಿಗೆ (BJP) ಅವಕಾಶವಿರುತ್ತದೆ. ಈ ಹಿನ್ನಲೆಯಲ್ಲಿ ದೆಹಲಿಯಲ್ಲಿ ಠಿಕಾಣಿ ಹೂಡಿರುವ ಅವರು ಲೋಕಸಭೆ ಬದಲಿಗೆ ರಾಜ್ಯಸಭೆಗೆ ತಮ್ಮ ಹೆಸರು ಘೋಷಿಸುವಂತೆ ವರಿಷ್ಠರಿಗೆ ಮನವಿ ಮಾಡುತ್ತಿದ್ದಾರೆ. ಇದನ್ನೂ ಓದಿ:  ವಿಶ್ವಾಸಮತ ಗೆದ್ದ ಜಾರ್ಖಂಡ್‌ ನೂತನ ಸಿಎಂ ಚಂಪೈ ಸೊರೇನ್‌

    ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ವರಿಷ್ಠರಿಗೆ ನನ್ನ ಭಾವನೆ ವ್ಯಕ್ತಪಡಿಸಿದ್ದೇನೆ. ಯಾರಿಗೆ ಅವಕಾಶ ಕೊಡುತ್ತಾರೆ ಗೊತ್ತಿಲ್ಲ. ಒಂದು ವೇಳೆ ಕೊಟ್ಟರೆ ಒಳ್ಳೆ ರೀತಿಯಲ್ಲಿ ಕೆಲಸ ಮಾಡುತ್ತೇನೆ. ಕೊಡಲಿಲ್ಲ ಅಂದರೆ ಯಾವುದೇ ಬೇಸರ ಇಲ್ಲ ಎಂದಿದ್ದಾರೆ. ತುಮಕೂರು ಕ್ಷೇತ್ರಕ್ಕೆ ನಾನು ಸ್ಪರ್ಧಿಸಬೇಕು ಎನ್ನುವುದು ಹಾಲಿ ಸಂಸದ ಬಸವರಾಜು ಅವರ ಅಭಿಲಾಷೆ. ಸ್ಥಳೀಯ ನಾಯಕರೂ ಸಹ ಬೆಂಬಲ ನೀಡುತ್ತಿದ್ದಾರೆ. ಅಂತಿಮವಾಗಿ ಎಲ್ಲವೂ ಹೈಕಮಾಂಡ್ ನಿರ್ಧರ ಮಾಡಲಿದೆ. ಕೊಟ್ಟರೆ ಜವಾಬ್ದಾರಿ ನಿಭಾಯಿಸುತ್ತೇನೆ. ಇಲ್ಲ ಅಂದರೆ ಪಕ್ಷದ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನನ್ನ ರಾಮನನ್ನು ಬಿಜೆಪಿಗೆ ಬಿಟ್ಟುಕೊಡಲ್ಲ – ಶಶಿ ತರೂರ್‌

    ಮಾಜಿ ಸಿಎಂ ಹೆಚ್‌ಡಿ.ಕುಮಾರಸ್ವಾಮಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ ಪಕ್ಷ ಬೇರೆ ಇರಬಹುದು. ಆದರೆ ನಾವು ಮೊದಲಿನಿಂದ ಪರಿಚಯ. ಮೊನ್ನೆ ಅವರ ತೋಟದ ಮನೆಯಲ್ಲಿ ಭೇಟಿ ಆಗಿದ್ದೇನೆ. ಅವರು 2 ಬಾರಿ ಮುಖ್ಯಮಂತ್ರಿಯಾದವರು. ಹೀಗಾಗಿ ಸಹಜವಾಗಿ ಮಾತಾಡಿದ್ದೇವೆ ಅಷ್ಟೇ. ನಾವು ಹಿಂದು ಹಿಂಗೇ ಮಾತಾಡೋಕೆ ದೇವೇಗೌಡರು ಕಾರಣ. ಅವರ ಒಡನಾಟ ಮತ್ತು ಅವರು ಕೊಟ್ಟಿರುವ ಅನುಭವ ಮಹತ್ವ ಎಂದು ಮಾಜಿ ಪ್ರಧಾನಿ ದೇವೇಗೌಡರನ್ನು ಸೋಮಣ್ಣ ಹೋಗಳಿದ್ದಾರೆ. ಇದನ್ನೂ ಓದಿ: ಹಸಿವು ಎಂದು ಬೆಕ್ಕಿನ ಹಸಿಮಾಂಸ ತಿಂದ ಭೂಪ!

    ಸುಧಾರಕರ್‌ಗೆ ಚಿಕ್ಕಬಳ್ಳಾಪುರದಿಂದ ಭರವಸೆ ನೀಡಿದ್ದಾರಾ ಇಲ್ವಾ ಗೊತ್ತಿಲ್ಲ. ಅದರ ಮಾಹಿತಿ ಇಲ್ಲ ಮತ್ತು ಆ ಬಗ್ಗೆ ಮಾತನಾಡುವುದಿಲ್ಲ. ಸುಮಲತಾ ಸ್ಪರ್ಧಿಸುವುದರ ಬಗ್ಗೆ ಹೈಕಮಾಂಡ್ ನಿರ್ಧರ ಮಾಡಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಮಥುರಾದಲ್ಲಿ ಕೃಷ್ಣ ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ – ಭಾರತೀಯ ಪುರಾತತ್ವ ಇಲಾಖೆ

  • ತುಮಕೂರಿನಲ್ಲಿ ತೆರೆಮರೆಯಲ್ಲಿ ಪ್ರಚಾರ ಆರಂಭಿಸಿದ ವಿ. ಸೋಮಣ್ಣ!

    ತುಮಕೂರಿನಲ್ಲಿ ತೆರೆಮರೆಯಲ್ಲಿ ಪ್ರಚಾರ ಆರಂಭಿಸಿದ ವಿ. ಸೋಮಣ್ಣ!

    ತುಮಕೂರು: ನಾನು ಲೋಕಸಭಾ ಟಿಕೆಟ್ ಆಕಾಂಕ್ಷಿಯಲ್ಲ ಎನ್ನುತ್ತಲೇ ಮಾಜಿ ಸಚಿವ ವಿ.ಸೋಮಣ್ಣ (V Somanna) ಸೈಲೆಂಟಾಗಿ ತಯಾರಿ ನಡೆಸುತ್ತಿದ್ದಾರೆ. ತುಮಕೂರು ಲೋಕಸಭಾ ಟಿಕೆಟ್ ಮೇಲೆ ಕಣ್ಣಿಟ್ಟಿರುವ ಸೋಮಣ್ಣ ತೆರೆಯ ಮರೆಯಲ್ಲೇ ಮುಖಂಡರನ್ನು ಭೇಟಿಯಾಗಿ ಕೋಟೆ ಭದ್ರಗೊಳಿಸುತಿದ್ದಾರೆ.

    ವಿಧಾನಸಭಾ ಚುನಾವಣೆಯಲ್ಲಿ ಸೋತು, ಬಿಜೆಪಿ ರಾಜ್ಯ ನಾಯಕತ್ವದ ವಿರುದ್ಧ ಸೆಟೆದು ನಿಂತಿದ್ದ ಸೋಮಣ್ಣ ತುಮಕೂರು (Tumakuru) ಲೋಕಸಭಾ ಕ್ಷೇತ್ರದ ಮೇಲೆ ನೆಟ್ಟಿದ್ದ ದೃಷ್ಟಿ ಈಗ ಗಟ್ಟಿಯಾಗುತ್ತಿದೆ. ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಬಂದಿದ್ದ ವಿ.ಸೋಮಣ್ಣ ನಾನು ರಾಜ್ಯಸಭೆಗೆ ಸ್ಪರ್ಧಿಸುತ್ತಿದ್ದೇನೆ ಲೋಕಸಭೆಗೆ (Lok Sabha) ಆಕಾಂಕ್ಷಿ ಅಲ್ಲ ಎಂದಿದ್ದರು. ಇದನ್ನೂ ಓದಿ: 29 ರೂ.ಗೆ ಸಿಗಲಿಗೆ ʻಭಾರತ್‌ ಅಕ್ಕಿʼ – ಎಲ್ಲೆಲ್ಲಿ ಮಾರಾಟ?

    ಈ ಮಧ್ಯೆ ಮೈತ್ರಿ ಪಕ್ಷದ ವರಿಷ್ಠರಾದ ಎಚ್‌ಡಿ ದೇವೇಗೌಡರು, ಎಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತವನ್ನೂ ವ್ಯಕ್ತಪಡಿಸಿದ್ದಾರೆ. ಇದಕ್ಕೆ ದೊಡ್ಡಗೌಡರು (Devegowda) ಪರೋಕ್ಷವಾಗಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎನ್ನಲಾಗಿದೆ. ಈ ಹುರುಪಿನಿಂದ ತುಮಕೂರಿನತ್ತ ಸೋಮಣ್ಣ ಬಲವಾದ ಹೆಜ್ಜೆ ಇಟ್ಟಿದ್ದಾರೆ.

    ತುಮಕೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಮುದ್ದಹನುಮೇಗೌಡ ಕಾಂಗ್ರೆಸ್ ಸೇರುವುದು ಬಹುಪಾಲು ಖಚಿತ. ಇವರನ್ನು ಹೊರತುಪಡಿಸಿದ್ರೆ ಲಿಂಗಾಯತ ಸಮುದಾಯದ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ ಹಾಗೂ ಸಿದ್ದಗಂಗಾ ಆಸ್ಪತ್ರೆ ವೈದ್ಯ, ಸಂಘ ನಿಷ್ಠ ಡಾ.ಪರಮೇಶ್ವರ್ ಆಕಾಂಕ್ಷಿತರಲ್ಲಿ ಮುಂಚೂಣಿಯಲಿದ್ದಾರೆ. ಇವರನ್ನು ಹಿಂದಿಕ್ಕಿ ಸೋಮಣ್ಣ ಟಿಕೆಟ್‌ಗಾಗಿ ದುಂಬಾಲು ಬಿದ್ದಿದ್ದಾರೆ ಎನ್ನಲಾಗಿದೆ.  ಇದನ್ನೂ ಓದಿ: ನಿರ್ಮಲಾ ಸೀತಾರಾಮನ್‌ ಪಿಎ ಹೆಸರು ಹೇಳಿ ಧೋನಿ ಮ್ಯಾನೇಜರ್‌ಗೆ ಲಕ್ಷ ಲಕ್ಷ ವಂಚನೆ

    ಟಿಕೆಟ್ ಸಿಗುತ್ತೋ ಇಲ್ಲವೋ ಗೊತ್ತಿಲ್ಲ. ಆದರೆ ಜಿಲ್ಲೆಯಲ್ಲಿ ಸೋಮಣ್ಣ ಓಡಾಟ ಆರಂಭಿಸಿದ್ದಾರೆ. ತಿಪಟೂರಿನ ನೊಣವಿನಕೆರೆ ಮಠ, ಗುಬ್ಬಿಯ ಚೆನ್ನಕೇಶವ ದೇವಸ್ಥಾನ, ವಿವಿಧ ಸಮುದಾಯಗಳ ಮುಖಂಡರ ಮನೆಗೆ ಭೇಟಿಯಾಗುತ್ತಾ ತೆರೆಮರೆಯಲ್ಲಿ ತಯಾರಿ ಆರಂಭಿಸಿದ್ದಾರೆ.

    ಲಿಂಗಾಯತರ ಪ್ರಾಬಲ್ಯ ಇರುವ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ವಿ.ಸೋಮಣ್ಣ ಮತ್ತೊಮ್ಮೆ ನೆಲೆ ಕಂಡುಕೊಳ್ಳಲು ಮುಂದಾಗಿದ್ದಾರೆ. ಸೋಮಣ್ಣರ ಕನಸು ನನಸಾಗುತ್ತಾ? ಲೋಕಸಭಾ ಟಿಕೆಟ್‌ ಸಿಗುತ್ತಾ ಎನ್ನುವುದು ಕೆಲ ದಿನಗಳಲ್ಲಿ ತಿಳಿಯಲಿದೆ.

  • ಶೆಟ್ಟರ್, ಜೋಶಿ ಒಂದು ನಾಣ್ಯದ ಎರಡು ಮುಖದ ರೀತಿ ಕೆಲಸ ಮಾಡಿದ್ದಾರೆ: ವಿ ಸೋಮಣ್ಣ

    ಶೆಟ್ಟರ್, ಜೋಶಿ ಒಂದು ನಾಣ್ಯದ ಎರಡು ಮುಖದ ರೀತಿ ಕೆಲಸ ಮಾಡಿದ್ದಾರೆ: ವಿ ಸೋಮಣ್ಣ

    ಬೆಂಗಳೂರು: ವಿಶೇಷವಾಗಿ ಜಗದೀಶ್ ಶೆಟ್ಟರ್(Jagadish Shettar) ಮತ್ತು ಪ್ರಹ್ಲಾದ್ ಜೋಶಿ(Pralhad Joshi)  ಒಂದು ನಾಣ್ಯದ ಎರಡು ಮುಖದ ರೀತಿ ಕೆಲಸ ಮಾಡಿದ್ದಾರೆ ಎಂದು ಮಾಜಿ ಸಚಿವ ಸೋಮಣ್ಣ (V. Somanna)  ಹಾಡಿ ಹೊಗಳಿದ್ದಾರೆ.

    ಜಗದೀಶ್ ಶೆಟ್ಟರ್ ಬಿಜೆಪಿಗೆ ಸೇರ್ಪಡೆಯಾದ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ತೀರ್ಮಾನವನ್ನು ಸ್ವಾಗತ ಮಾಡುತ್ತೇನೆ. ಶೆಟ್ಟರ್ ಅವರು ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿಗಳು. ತೀರ್ಮಾನ ಮಾಡುವಾಗ ಒಂದೊಂದು ಸಾರಿ ಎಷ್ಟರ ಮಟ್ಟಿಗೆ ಅನ್ನೋದಕ್ಕಿಂತ, ಅವರ ಹಿರಿಯ ಅನುಭವ ಇಟ್ಟುಕೊಂಡು ಅಮಿತ್ ಶಾ, ನಡ್ಡಾಜೀ ಅವರು ಪ್ರಧಾನಿಗಳ ಸಲಹೆ ಮೇರೆಗೆ ಈ ಕೆಲಸ ಮಾಡಿದ್ದಾರೆ. ಇದನ್ನ ನಾನು ಸ್ವಾಗತ ಮಾಡುತ್ತೇನೆ.  ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಾಗ ರಾಜ್ಯಾದ್ಯಂತ ಓಡಾಡಿದ್ದಾರೆ. ಮೋದಿ ಅವರು ಮತ್ತೆ ಪ್ರಧಾನಿ ಆಗಲಿ ಅಂತಾ ದೇಶದ ಅಭಿವೃದ್ಧಿ ನೋಡಿಕೊಂಡು ಮತ್ತೆ ಬಿಜೆಪಿಗೆ ಬಂದಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 2030ರ ವೇಳೆಗೆ 30,000 ಭಾರತೀಯ ವಿದ್ಯಾರ್ಥಿಗಳನ್ನು ಫ್ರಾನ್ಸ್ ಸ್ವಾಗತಿಸಲಿದೆ: ಮ್ಯಾಕ್ರನ್

    ಇದೇ ವೇಳೆ ಚುನಾವಣೆಗೆ ನಿಲ್ಲುವ ಕುರಿತ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಹೈಕಮಾಂಡ್ ತೀರ್ಮಾನ ಮಾಡಿ ತುಮಕೂರಿಗೆ ಹೋಗಿ ನಿಂತುಕೊಳ್ಳಪ್ಪ ಅಂದರೆ ಅವರ ತೀರ್ಮಾನಕ್ಕೆ ಬದ್ಧ ಆಗಿರುತ್ತೀನಿ ಎಂದು ಹೇಳಿದ್ದಾರೆ. ಬಿಜೆಪಿಗೆ ಇನ್ನಷ್ಟು ನಾಯಕರು ಬರುವ ಬಗ್ಗೆ ಗೊತ್ತಿಲ್ಲ ನೋಡಬೇಕು ಎಂದಿದ್ದಾರೆ. ಜೊತೆಗೆ ಅವರ ಪುತ್ರನಿಗೆ ಟಿಕೆಟ್ ಕೇಳಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಸೋಮಣ್ಣ, ಆ ರೀತಿ ಇಲ್ಲ ಎಂದು ಪುತ್ರನ ಟಿಕೆಟ್ ವಿಚಾರಕ್ಕೆ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಕರ್ತವ್ಯ ಪಥದಲ್ಲಿ ಆಕರ್ಷಕ ಪಥಸಂಚಲನ – ಮೇಳೈಸಿದ ಸಾಂಸ್ಕೃತಿಕ ವೈಭವ, ಸೇನಾ ಶಕ್ತಿಪ್ರದರ್ಶನವೇ ರೋಚಕ!

  • ಅನಂತ್‍ಕುಮಾರ್ ಹೆಗಡೆ ಹೇಳಿಕೆ ವೈಯಕ್ತಿಕವಾಗಿ ಬೇಸರ ತಂದಿದೆ: ಸೋಮಣ್ಣ

    ಅನಂತ್‍ಕುಮಾರ್ ಹೆಗಡೆ ಹೇಳಿಕೆ ವೈಯಕ್ತಿಕವಾಗಿ ಬೇಸರ ತಂದಿದೆ: ಸೋಮಣ್ಣ

    ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗಳ ಬಗ್ಗೆ ಏಕವಚನದಲ್ಲಿ ಮಾತನಾಡಿದ ಸಂಸದ ಅನಂತ್‍ಕುಮಾರ್ ಹೆಗಡೆಯವರ ( AnanthKumar Hegade‌) ಹೇಳಿಕೆ ವೈಯಕ್ತಿಕವಾಗಿ ಬೇಸರ ತರಿಸಿದೆ ಎಂದು ಮಾಜಿ ಸಚಿವ ವಿ.ಸೋಮಣ್ಣ (V.Somanna) ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಅನಂತ್‍ಕುಮಾರ್ ಹೆಗಡೆಯವರ ಹೇಳಿಕೆಯನ್ನು ಗಮನಿಸಿದ್ದೇನೆ. ಅವರು ಪಕ್ಷದ ಹಿರಿಯ ನಾಯಕರು. ಅವರಿಗೆ ನಿಷ್ಕಲ್ಮಶ ಭಾವನೆ ಇದೆ. ಏನು ಬಾಯಿಗೆ ಬರುತ್ತೋ ಅದನ್ನು ಅವರು ನನ್ನ ಹಾಗೆ ಮಾತಾಡಿ ಬಿಡ್ತಾರೆ. ಹಿಂದೆ ಮುಂದೆ ನೋಡೋದೇ ಇಲ್ಲ. ಸಿದ್ದರಾಮಯ್ಯ ಕೇವಲ ಸಿದ್ದರಾಮಯ್ಯ ಅಲ್ಲ, ಈ ರಾಜ್ಯದ ಸಿಎಂ. ಸಿದ್ದರಾಮಯ್ಯ (Siddaramaiah) ಏನೋ ಮಾತಾಡ್ತಾರೆ ಎಂದು ನಾವ್ಯಾಕೆ ಚಿಕ್ಕವರಾಗಬೇಕು? ನಾವು ಚಿಕ್ಕವರಾಗೋದು ಬೇಡ ಎಂದಿದ್ದಾರೆ. ಇದನ್ನೂ ಓದಿ: ಬಾಬರಿ ಮಸೀದಿಯಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಿರ್ನಾಮ ಆಗುತ್ತೆ – ಅನಂತಕುಮಾರ್ ಹೆಗಡೆ ಎಚ್ಚರಿಕೆ

    ಅನಂತ್‍ಕುಮಾರ್ ಹೆಗಡೆಯವರು ಸುಸಂಸ್ಕೃತ ಕುಟುಂಬದಿಂದ ಬಂದವರು. ನಾವು ನಮ್ಮ ಭಾಷೆ ಹಿಡಿತದಲ್ಲಿ ಇಟ್ಕೋಬೇಕಾಗುತ್ತೆ. ಅವರ ಹೇಳಿಕೆ ವೈಯಕ್ತಿಕವಾಗಿ ನನಗೆ ಸ್ವಲ್ಪ ಬೇಸರ ತರಿಸಿದೆ ಎಂದು ಅವರು ಹೇಳಿದ್ದಾರೆ.

    ಅನಂತ್‍ಕುಮಾರ್ ಹೆಗಡೆಯವರ ಹೇಳಿಕೆಯಗೆ ನಯವಾಗಿಯೇ ವಿರೋಧಿಸಿದ ಅವರು, ಸಿದ್ದರಾಮಯ್ಯ ಭಾಷೆ ಏನು, ಹೇಗೆ ಎಂದು ನಮಗೆ ಬೇಡ. ಅವರು ಸಿಎಂ ಹೇಗೆ ಆದ್ರೂ ಅನ್ನೋದೂ ನಮಗೆ ಬೇಡ. ಸಿದ್ದರಾಮಯ್ಯ ನಡವಳಿಕೆ ಹೇಗಿರಬೇಕು ಅನ್ನೋದಕ್ಕಿಂತ, ನಮ್ಮ ನಡವಳಿಕೆ ವಿಭಿನ್ನವಾಗಿರಬೇಕು ಅಷ್ಟೇ ಎಂದು ಅನಂತ್‍ಕುಮಾರ್ ಹೆಗಡೆಯವರಿಗೆ ಕಿವಿಮಾತು ಹೇಳಿದ್ದಾರೆ. ಇದನ್ನೂ ಓದಿ: ಹಾವೇರಿ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸರ್ಕಾರದ ಉಡಾಫೆ, ತನಿಖೆಗೆ ಎಸ್‍ಐಟಿ ರಚಿಸಲಿ: ವಿಜಯೇಂದ್ರ ಆಗ್ರಹ

  • ರಾಜ್ಯಸಭೆಗೆ ಅವಕಾಶ ನೀಡಿ, ಲೋಕಸಭೆಯಲ್ಲಿ 3 ಕ್ಷೇತ್ರ ಗೆಲ್ಲಿಸುವೆ: ಅಮಿತ್ ಶಾ ಮುಂದೆ ಸೋಮಣ್ಣ ಮನವಿ

    ರಾಜ್ಯಸಭೆಗೆ ಅವಕಾಶ ನೀಡಿ, ಲೋಕಸಭೆಯಲ್ಲಿ 3 ಕ್ಷೇತ್ರ ಗೆಲ್ಲಿಸುವೆ: ಅಮಿತ್ ಶಾ ಮುಂದೆ ಸೋಮಣ್ಣ ಮನವಿ

    -ಚುನಾವಣಾ ರಾಜಕೀಯದಿಂದ ವಿಮುಖವಾಗುವ ಸುಳಿವು?

    ನವದೆಹಲಿ: ತುಮಕೂರಿನಿಂದ (Tumakuru) ಲೋಕಸಭೆ ಚುನಾವಣೆಗೆ (Lok Sabha Election) ಸ್ಪರ್ಧಿಸುವ ಲೆಕ್ಕಾಚಾರದಲ್ಲಿದ್ದ ಮಾಜಿ ಸಚಿವ, ಬಿಜೆಪಿ ನಾಯಕ ವಿ.ಸೋಮಣ್ಣ (V Somanna)ಈಗ ವರಸೆ ಬದಲಿಸಿದ್ದು, ರಾಜ್ಯಸಭೆಗೆ ಆಯ್ಕೆಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ.

    ದೆಹಲಿಯಲ್ಲಿ (New Delhi) ಹೈಕಮಾಂಡ್ ಭೇಟಿ ಬಳಿಕ ಮಾತನಾಡಿರುವ ಅವರು, ರಾಜ್ಯಸಭೆಗೆ ಆಯ್ಕೆ ಮಾಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ (Amit Shah) ಮನವಿ ಮಾಡಿದೆ ಎಂದು ಹೇಳಿದರು. ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಗೆ ತೆರಳಿದ್ದ ವಿ.ಸೋಮಣ್ಣ ಕಳೆದ ನಾಲ್ಕು ದಿನಗಳಿಂದ ಠಿಕಾಣಿ ಹೂಡಿದ್ದರು. ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ಭೇಟಿ ಮಾಡಿದ ಅವರು, ಅಮಿತ್ ಶಾ ಜೊತೆ ಅರ್ಧ ಗಂಟೆ ಮಾತುಕತೆ ನಡೆಸಿ ರಾಜ್ಯದ ಬೆಳವಣಿಗೆಗಳ ಬಗ್ಗೆ ತಮ್ಮ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಿಜಯೇಂದ್ರ ಜೊತೆಗೆ ಮಂಪರು ಪರೀಕ್ಷೆಗೆ ಒಳಪಡಿಸುವುದಾದ್ರೆ ನಾನು ಸಿದ್ಧ: ಬಿ.ಕೆ ಹರಿಪ್ರಸಾದ್

    ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ತಮ್ಮನ್ನು ಉದ್ದೇಶಪೂರ್ವಕವಾಗಿ ಸೋಲಿಸಲಾಗಿದೆ. ಹಿರಿತನಕ್ಕೆ ಆದ್ಯತೆ ನೀಡದೆ ಗೌರವಪೂರ್ವಕವಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಪರೋಕ್ಷವಾಗಿ ಬಿ.ಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಅತೃಪ್ತಿ ಹೊರ ಹಾಕಿದ್ದಾರೆ ಎನ್ನಲಾಗಿದೆ. ಅಲ್ಲದೇ ಚುನಾವಣೆ ರಾಜಕಾರಣದಿಂದ ವಿಮುಖವಾಗುವ ನಿಟ್ಟಿನಲ್ಲಿ ರಾಜ್ಯಸಭೆಗೆ ಅವಕಾಶ ನೀಡಬೇಕು. ಅಲ್ಲದೇ ಪುತ್ರನ ರಾಜಕೀಯ ಭವಿಷ್ಯದ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: 4 ಮಕ್ಕಳ ತಂದೆ, 5 ಮಕ್ಕಳಿದ್ದ ಅತ್ತಿಗೆಯೊಂದಿಗೆ ಜೂಟ್‌ – ಆರೋಪಿ ಪತ್ನಿ 5ನೇ ಬಾರಿಗೆ ಗರ್ಭಿಣಿ

    ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತು ಅಮಿತ್ ಶಾ ಮತ್ತು ನಡ್ಡಾ ಅವರನ್ನು ಭೇಟಿ ಮಾಡಿದೆ. ತುಂಬಾ ಚೆನ್ನಾಗಿ ಮಾತುಕತೆ ನಡೆಯಿತು. ಮುಖ್ಯವಾಹಿನಿಯಲ್ಲಿ ಇರಬೇಕು ಎಂದಿದ್ದಾರೆ. ರಾಜ್ಯಸಭೆಗೆ ಅವಕಾಶ ಮಾಡಿಕೊಡಿ ಎಂದು ಹೇಳಿದ್ದೇನೆ. ಅವಕಾಶ ನೀಡಿದಲ್ಲಿ ಯಾವುದಾದರೂ 3 ಕ್ಷೇತ್ರಗಳ ಕೆಲಸ ಕೊಡಿ, ಗೆಲ್ಲಿಸಿಕೊಂಡು ಬರುವುದಾಗಿ ಹೇಳಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಅಪಹರಣಕಾರರೆಂದು ಸಾಧುಗಳಿಗೆ ಹಿಗ್ಗಾಮುಗ್ಗ ಥಳಿತ – ಪಶ್ಚಿಮ ಬಂಗಾಳದ 12 ಮಂದಿ ಅರೆಸ್ಟ್‌

    ಕೆಲವೊಂದು ಪ್ರಮುಖ ವಿಚಾರಗಳನ್ನು ನಾನು ಚರ್ಚೆ ಮಾಡಿದ್ದೇನೆ. ಎಲ್ಲಾ ಮಾತುಕತೆಯ ಬಗ್ಗೆ ನಾನು ಬಹಿರಂಗವಾಗಿ ಹೇಳಲು ಆಗಲ್ಲ. ಅಮಿತ್ ಶಾ ಭೇಟಿ ಬಹಳ ಸಮಧಾನ ತಂದಿದೆ. ನಿಮ್ಮ ಸೇವೆಯನ್ನು ಬಳಸಿಕೊಳ್ಳುವುದಾಗಿ ಹೇಳಿದ್ದಾರೆ. ಈ ಹಿಂದೆ ಆದಂತೆ ಮುಂದೆ ಆಗಲು ಬಿಡುವುದಿಲ್ಲ. ನಾವು ಸೂಚನೆಗಳನ್ನು ಕೊಡುತ್ತೇವೆ ಎಂದಿದ್ದಾರೆ. ನಾನು ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿಲ್ಲ. ಲೋಕಸಭಾ ಸ್ಪರ್ಧೆಯ ಬಗ್ಗೆ ಹೈಕಮಾಂಡ್ ತೀರ್ಮಾನದಂತೆ ನಡೆಯುವೆ ಎಂದು ಹೇಳಿದರು. ಇದನ್ನೂ ಓದಿ: ಮನೆಯ ಮುಂದೆ ರಾಮಮಂದಿರದ ಪ್ರತಿಕೃತಿ ನಿರ್ಮಿಸಿದ ಎಂಜಿನಿಯರ್

  • ಸೋಮಣ್ಣ ಬಿಜೆಪಿ ಬಿಡಲ್ಲ, ಯತ್ನಾಳ್ ಬಗ್ಗೆ ಹೈಕಮಾಂಡ್ ನೋಡಿಕೊಳ್ಳುತ್ತೆ: ಅಶೋಕ್

    ಸೋಮಣ್ಣ ಬಿಜೆಪಿ ಬಿಡಲ್ಲ, ಯತ್ನಾಳ್ ಬಗ್ಗೆ ಹೈಕಮಾಂಡ್ ನೋಡಿಕೊಳ್ಳುತ್ತೆ: ಅಶೋಕ್

    ಬೆಂಗಳೂರು: ಮಾಜಿ ಸಚಿವ ವಿ.ಸೋಮಣ್ಣ (V Somanna) ಬಿಜೆಪಿ ಬಿಡಲ್ಲ. ಸೋಮಣ್ಣ ಅವರ ಜೊತೆ ದೂರವಾಣಿ ಜೊತೆ ಮಾತುಕತೆ ನಡೆಸಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R Ashok) ಹೇಳಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನವರಿ 4 ರಂದು ಸೋಮಣ್ಣ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ. ಅವತ್ತು ಎಲ್ಲವೂ ದಿ ಎಂಡ್ ಆಗಲಿದೆ. ಅಲ್ಲದೇ ಯತ್ನಾಳ್ (Basangouda Patil Yatnal) ಅಸಮಾಧಾನ ವಿಚಾರವನ್ನು ಹೈಕಮಾಂಡ್ ಅವರು ನೋಡಿಕೊಳ್ಳುತ್ತಾರೆ ಎಂದರು. ಇದನ್ನೂ ಓದಿ: ಅಂದು ಹೋರಾಡಿದ್ದಕ್ಕೆ ಈಗ ರಾಮಭಕ್ತರನ್ನು ಬಂಧಿಸ್ತಿದ್ದಾರೆ, ನನ್ನನ್ನೂ ಬಂಧಿಸ್ತಾರಾ? – ಆರ್.ಅಶೋಕ್ ಕಿಡಿ

    ಲೋಕಸಭೆ ಬಳಿಕ ಸಾಕಷ್ಟು ಬದಲಾವಣೆ ಆಗುತ್ತೆ. ಶಿಂಧೆ, ಪವಾರ್ ಇದ್ದಾರೆ. ಸರ್ಕಾರ ಇರಲ್ಲ ಎಂದು ಕುಮಾರಸ್ವಾಮಿ ಸಹ ಹೇಳಿದ್ದಾರೆ. ಅವರಿಗೂ ಹಲವು ಸಂಪರ್ಕ ಇದೆ. ಯಾರೋ ಜ್ಯೋತಿಷಿ ಸಹ ಈ ಸರ್ಕಾರ ಉಳಿಯಲ್ಲ, ಅಲ್ಲೋಲ ಕಲ್ಲೋಲ ಎಂದಿದ್ದಾರೆ. ಸರ್ಕಾರ ಎರಡು ಭಾಗ ಆಗುತ್ತೆ ಎಂದಿದ್ದಾರೆ. ಆದರೆ ನಾನು ಜ್ಯೋತಿಷ್ಯ ನಂಬಲ್ಲ. ಆದರೆ ನನಗೂ ಮಾಹಿತಿ ಇದೆ. ನಾನು ಎಲ್ಲಿ ಯಾವಾಗ ಹೇಳಬೇಕೋ ಆಗ ಹೇಳುವೆ. ಡಿಕೆಶಿ ಅವರೇ ಸುಳಿವು ಕೊಟ್ಟಿದ್ದಾರೆ ಎಂದು ಮಾರ್ಮಿಕವಾಗಿ ನುಡಿದರು. ಇದನ್ನೂ ಓದಿ: 2024ನೇ ವರ್ಷ ರಾಜ್ಯಕ್ಕೆ ಆಶಾದಾಯಕವಾಗಲಿದೆ – ಸಿದ್ದರಾಮಯ್ಯ

  • ಯಾರೋ ಮಾಟ ಮಾಡಿಸಿದ್ರೇನೋ, ನಾನೇ ಹೋಗಿ ನಾಲ್ಕೂವರೆ ಅಡಿ ಗುಂಡಿಗೆ ಬಿದ್ದೆ: ಸೋಮಣ್ಣ ಬೇಸರ

    ಯಾರೋ ಮಾಟ ಮಾಡಿಸಿದ್ರೇನೋ, ನಾನೇ ಹೋಗಿ ನಾಲ್ಕೂವರೆ ಅಡಿ ಗುಂಡಿಗೆ ಬಿದ್ದೆ: ಸೋಮಣ್ಣ ಬೇಸರ

    – ಜನವರಿ 9ಕ್ಕೆ ದೆಹಲಿಯಲ್ಲಿ ವರಿಷ್ಠರನ್ನ ಭೇಟಿ ಮಾಡ್ತೇನೆ
    – ನನಗೆ ಆದ ಅನ್ಯಾಯ ಬೇರೆ ಯಾರಿಗೂ ಆಗಬಾರದು
    – ಅನ್ಯಾಯ ಸರಿಪಡಿಸುವಂತೆ ಹೈಕಮಾಂಡ್‌ಗೆ ಕೇಳ್ತೀನಿ ಎಂದ ಸೋಮಣ್ಣ

    ಬೆಂಗಳೂರು: ಯಾರೋ ನನಗೆ ಮಾಟ ಮಾಡಿಸಿದ್ರೇನೋ, ನಾನೇ ಹೋಗಿ ನಾಲ್ಕೂವರೆ ಅಡಿ ಗುಂಡಿಗೆ ಬಿದ್ದೆ. ನನಗೆ ಆದ ಅನ್ಯಾಯ ಯಾರಿಗೂ ಆಗಬಾರದು ಎಂದು ಬಿಜೆಪಿ ಮಾಜಿ ಸಚಿವ ವಿ.ಸೋಮಣ್ಣ (V Somanna) ಸ್ವಪಕ್ಷೀಯರ ವಿರುದ್ಧ ಮತ್ತೆ ಬೇಸರ ಹೊರಹಾಕಿದ್ದಾರೆ.

    ಬೆಂಗಳೂರಿನಲ್ಲಿಂದು (Bengaluru) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನಗೆ ಅನ್ಯಾಯ ಆಗಿದೆ, ನಾನೇ ಹೋಗಿ ನಾಲ್ಕೂವರೆ ಅಡಿ ಗುಂಡಿಗೆ ಬಿದ್ದೆ. ಗೋವಿಂದರಾಜನಗರ ಕ್ಷೇತ್ರ ಬಿಡಬಾರದಿತ್ತು. ಆಗ ಯಾರಾದ್ರು ನನಗೆ ಮಾಟ ಮಂತ್ರ ಮಾಡಿಸಿದ್ದರೇನೋ, ಕ್ಷೇತ್ರ ಬಿಟ್ಟೆ. ನನಗೆ ಆದ ಅನ್ಯಾಯ ಯಾರಿಗೂ ಆಗಬಾರದು. ಜನವರಿ 9ಕ್ಕೆ ದೆಹಲಿಯಲ್ಲಿ (New Delhi) ವರಿಷ್ಠರ ಭೇಟಿ ಆಗುತ್ತೇನೆ, ನನಗೆ ಆದ ಅನ್ಯಾಯವನ್ನ ವರಿಷ್ಠರ ಬಳಿ ಹೇಳುತ್ತೇನೆ. ನರೇಂದ್ರ ಮೋದಿ (Narendra Modi) ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ಹೇಳಿದ್ದಾರೆ.

    ನನಗೆ ನೇರವಾಗಿ ತೊಂದರೆ ಆಗಿದೆ. ಯಾರು ಕಾರಣವೋ ಅವರನ್ನ ಕೂರಿಸಿ ಮಾತುಕತೆ ನಡೆಸಲಿ. ಇದನ್ನ ಸರಿಪಡಿಸಿ ಎಂದು ಹೈಕಮಾಂಡ್ ನಾಯಕರ ಬಳಿ ಕೇಳಿದ್ದೇನೆ. ಯಾರಿಂದ ತೊಂದರೆ ಆಗಿದೆಯೋ ಅವರನ್ನ ಕರೆಸಿ ಸೂಚನೆ ಕೊಡಿಸಬೇಕು. ಬಹುಶಃ ಜನವರಿ 10ರ ಒಳಗೆ ಎಲ್ಲವೂ ಬಗೆಹರಿಯಲಿದೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಫ್ರೀ ಬಸ್‌ ಹತ್ತಿ 33 ಗಂಟೆ ಸುತ್ತಾಟ – ಹಿಡಿದು ಪೋಷಕರಿಗೊಪ್ಪಿಸಿದ ಪೊಲೀಸರು!

    ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ವಿ.ಸೋಮಣ್ಣ, ರಾಷ್ಟ್ರೀಯ ವರಿಷ್ಠರ ಮಾತಿಗೆ ಬದ್ಧನಿದ್ದೇನೆ. ಒಟ್ಟಿನಲ್ಲಿ ನಮ್ಮ ಮೇಲೆ ಗದಾಪ್ರಹಾರ ಆಗದಂತೆ ಎಲ್ಲರಿಗೂ ಕಟ್ಟುನಿಟ್ಟಿನ ಸೂಚನೆ ಆಗಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬೆಳಗ್ಗೆ ಹೆರಿಗೆಯಾಗಿದ್ದ ಬಾಣಂತಿ ರಾತ್ರಿ ಹೊಟ್ಟೆನೋವಿನಿಂದ ನರಳಿ ಸಾವು; ವೈದ್ಯರ ನಿರ್ಲಕ್ಷ್ಯ ಆರೋಪ

    500 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಾಮಮಂದಿರ ಯೋಜನೆ ಸಾಕಾರವಾಗಿದೆ. ಈಗಷ್ಟೇ ಅಯೋಧ್ಯೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ್ದಾರೆ. ರಾಮಜನ್ಮಭೂಮಿ ಅನ್ನೋದು ಕೇವಲ ಹೇಳುವಂತದ್ದಲ್ಲ, ಮೋದಿ ಬರ್ತಾರೆ, ರಾಮಮಂದಿರ ಮಾಡ್ತಾರೆ ಅಂತಾ ಯಾರೂ ಅಂದುಕೊಂಡಿರಲಿಲ್ಲ. ಇದರಿಂದ ಭಾರತಕ್ಕೆ ಭವಿಷ್ಯ ಇದೆ. ರಾಮಮಂದಿರ ವಿರೋಧಿಸಿ ಅರ್ಜಿ ಕೊಟ್ಟವರೇ ಇವತ್ತು ರಾಮಮಂದಿರ ಉದ್ಘಾಟನೆಗೆ ಬರ್ತಿದ್ದಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಪತ್ನಿ ಮಾಡ್ರನ್‌ ಡ್ರೆಸ್‌ ಧರಿಸುತ್ತಿದ್ದಕ್ಕೆ ಕೆಂಡವಾದ ಪತಿ – ಕತ್ತು ಕೊಯ್ದು ಬರ್ಬರವಾಗಿ ಹತ್ಯೆ

  • ವಿಜಯೇಂದ್ರರನ್ನು ಸೋಲಿಸಲು ಸ್ವಪಕ್ಷದವರೇ ಷಡ್ಯಂತ್ರ ಮಾಡಿದ್ರು: ರೇಣುಕಾಚಾರ್ಯ

    ವಿಜಯೇಂದ್ರರನ್ನು ಸೋಲಿಸಲು ಸ್ವಪಕ್ಷದವರೇ ಷಡ್ಯಂತ್ರ ಮಾಡಿದ್ರು: ರೇಣುಕಾಚಾರ್ಯ

    ತುಮಕೂರು: ಶಿಕಾರಿಪುರ ಕ್ಷೇತ್ರದಲ್ಲಿ ಬಿವೈ ವಿಜಯೇಂದ್ರರನ್ನು (BY Vijayendra) ಸೋಲಿಸಲು ಸ್ವಪಕ್ಷದವರೇ ಷಡ್ಯಂತ್ರ ನಡೆಸಿದರು. ಆದರೆ ಶಿಕಾರಿಪುರದ (Shikaripura) ಜನರು ಆಶೀರ್ವಾದ ಮಾಡಿ ವಿಜಯೇಂದ್ರರನ್ನು ಗೆಲ್ಲಿಸಿದ್ದಾರೆ ಎಂದು ಮಾಜಿ ಸಚಿವ ರೇಣುಕಾಚಾರ್ಯ (MP Renukacharya) ಹೊಸ ಬಾಂಬ್ ಸಿಡಿಸಿದ್ದಾರೆ.

    ತುಮಕೂರಿನಲ್ಲಿ (Tumakuru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿ ಸೋಮಣ್ಣರ (V Somanna) ಸೋಲಿಗೆ ಹಾಗೂ ಪಕ್ಷದ ಸೋಲಿಗೆ ಯಡಿಯೂರಪ್ಪ ಆಗಲಿ ಅಥವಾ ವಿಜಯೇಂದ್ರ ಆಗಲಿ ಕಾರಣರಲ್ಲ. ಯಡಿಯೂರಪ್ಪರನ್ನು ಕೆಳಗಿಳಿಸಿದ್ದು ಕಾರಣ. ಯತ್ನಾಳರ ಆರೋಪಗಳು ಸತ್ಯಕ್ಕೆ ದೂರವಾದದ್ದು ಎಂದು ಖಂಡಿಸಿದರು. ಇದನ್ನೂ ಓದಿ: ಲೋಕಸಭೆಯಲ್ಲಿ ಸ್ಮೋಕ್ ಬಾಂಬ್- ಸಂಸತ್ತಿನ ಹೊರಗಡೆ ಪ್ರತಿಭಟಿಸುತ್ತಿದ್ದ ಇಬ್ಬರ ಬಂಧನ

    ಸೋಮಣ್ಣರ ಸೋಲಿಗೆ ಯಾರೂ ಪ್ರಯತ್ನ ಪಟ್ಟಿಲ್ಲ. ಬದಲಾಗಿ ವಿಜಯೇಂದ್ರ ದೊಡ್ಡ ನಾಯಕನಾಗಿ ಬೆಳೆಯುತ್ತಾರೆ ಎಂದು ಅವರನ್ನು ಸೋಲಿಸಲು ಸ್ವಪಕ್ಷದವರೇ ಪ್ರಯತ್ನಪಟ್ಟಿದ್ದರು. ಮುಂದಿನ ದಿನದಲ್ಲಿ ಅವರ ಹೆಸರನ್ನು ಬಹಿರಂಗಪಡಿಸುತ್ತೇನೆ. ಗೋವಿಂದರಾಜ ನಗರದಲ್ಲಿ ಫಲಿತಾಂಶ ತದ್ವಿರುದ್ಧ ಆಗುತ್ತದೆ ಎಂದು ವಿ ಸೋಮಣ್ಣರಿಗೆ ಮೊದಲೇ ಗೊತ್ತಿತ್ತು. ಹಾಗಾಗಿ ಸಿಎಂ ಆಗುವ ಹಗಲುಕನಸು ಕಂಡು ಮೈಸೂರಿಗೆ ಶಿಫ್ಟ್ ಆದರು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸರ್ಕಾರಿ ಜಮೀನು ರಕ್ಷಣೆಗೆ ಬೀಟ್ ಆ್ಯಪ್ ವ್ಯವಸ್ಥೆ ಜಾರಿ: ಕೃಷ್ಣಭೈರೇಗೌಡ