Tag: ವೀಡಿಯೋ ಶೂಟ್

  • ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಪ್ರಿ-ವೆಡ್ಡಿಂಗ್ ಶೂಟ್!

    ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಪ್ರಿ-ವೆಡ್ಡಿಂಗ್ ಶೂಟ್!

    – ವೈದ್ಯ ಜೋಡಿ ವಿರುದ್ಧ ಭಾರೀ ಆಕ್ರೋಶ

    ಚಿತ್ರದುರ್ಗ: ಇತ್ತೀಚಿನ ದಿನಗಳಲ್ಲಿ ಪ್ರಿ-ವೆಡ್ಡಿಂಗ್ ಹಾಗೂ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್‍ಗಳು ವಿಭಿನ್ನ ರೀತಿಯಲ್ಲಿ ನಡೆಯುತ್ತವೆ. ಅಂತೆಯೇ ಚಿತ್ರದುರ್ಗದ (Chitradurga) ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೊಬ್ಬರು ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ ಮಾಡಿ ಎಡವಟ್ಟು ಮಾಡಿಕೊಂಡ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಭರಮಸಾಗರ ಮೂಲದ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ.ಅಭಿಷೇಕ್ ಎಡವಟ್ಟು ಮಾಡಿಕೊಂಡವರು. ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆಯನ್ನೇ ವೆಡ್ಡಿಂಗ್‌ ಶೂಟ್‌ (Pre-Wedding Shoot in Hospital) ಲೋಕೇಶನ್‌ ಮಾಡಿಕೊಂಡಿರುವ ಅಭಿಷೇಕ್‌, ರೋಗಿಯೊಬ್ಬರನ್ನು ಬೆಡ್‌ ಮೇಲೆ ಮಲಗಿಸಿ, ಆಪರೇಷನ್‌ ಮಾಡುವಂತೆ, ಇನ್ನೊಂದೆಡೆ ಭಾವಿ ಪತ್ನಿ ಅಭಿಷೇಕ್‌ಗೆ ಸಹಾಯ ಮಾಡುವಂತೆ ಚಿತ್ರೀಕರಿಸಿದ್ದಾರೆ. ಅಂತಿಮವಾಗಿ ಆಪರೇಷನ್‌ ಮುಗಿಯಿತು ಅಂದ ಬಳಿಕ ರೋಗಿ ಎದ್ದು ಕುಳಿತುಕೊಳ್ಳುತ್ತಾನೆ. ಈ ಎಲ್ಲಾ ದೃಶ್ಯಗಳನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.

    ಸದ್ಯ ಡಾ.ಅಭಿಷೇಕ್ ಜೋಡಿಯ ಪ್ರಿ-ವೆಡ್ಡಿಂಗ್ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಜೊತೆಗೆ ವೈದ್ಯರ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ದುರ್ಬಳಕೆ ಬಗ್ಗೆ ಜನ ಕಿಡಿಕಾರುತ್ತಿದ್ದಾರೆ. ಇದನ್ನೂ ಓದಿ: ಕೆರಗೋಡು ಬಂದ್‌ಗೆ ಉತ್ತಮ ಪ್ರತಿಕ್ರಿಯೆ – ಶಾಸಕ ಗಣಿಗ ರವಿ ಮನೆಗೆ ಭದ್ರತೆ ಹೆಚ್ಚಳ

  • ಇನ್‌ಸ್ಟಾಗ್ರಾಮ್‌ಗೆ ವೀಡಿಯೋ ಶೂಟ್ ಮಾಡುತ್ತಿದ್ದ ವೇಳೆ ರೈಲು ಹರಿದು ಮೂವರು ಸಾವು

    ಇನ್‌ಸ್ಟಾಗ್ರಾಮ್‌ಗೆ ವೀಡಿಯೋ ಶೂಟ್ ಮಾಡುತ್ತಿದ್ದ ವೇಳೆ ರೈಲು ಹರಿದು ಮೂವರು ಸಾವು

    ಚೆನ್ನೈ: ರೈಲ್ವೆ ಹಳಿಯ ಬಳಿ ವೀಡಿಯೋ ಶೂಟ್ ಮಾಡುತ್ತಿದ್ದ ಮೂವರ ಮೇಲೆ ವೇಗವಾಗಿ ಬರುತ್ತಿದ್ದ ರೈಲು ಹರಿದು, ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ.

    ಮೃತರನ್ನು ಕೆ.ಮೋಹನ್(17), ಪ್ರಕಾಶ್ (17) ಹಾಗೂ ಎಸ್.ಅಶೋಕ್(24) ಎಂದು ಗುರುತಿಸಲಾಗಿದೆ. ಚೆಂಗಲಪಟ್ಟು ಸಮೀಪದ ರೈಲ್ವೆ ಹಳಿ ಬಳಿ ವೀಡಿಯೋ ಶೂಟ್ ಮಾಡಲು ಪ್ರಯತ್ನಿಸುತ್ತಿದ್ದ ವೇಳೆ ವೇಗವಾಗಿ ಬರುತ್ತಿದ್ದ ಸ್ಥಳೀಯ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ಸ್ಥಳ ಪರಿಶೀಲನೆ ನಡೆಸಿದ ಚೆಂಗಾಲಪಟ್ಟು ರೈಲ್ವೆ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಜಾಮೀನು ಮಂಜೂರಾಗಿದ್ದರೂ ಕಾರಾಗೃಹದಲ್ಲಿ ಕೈದಿ ನೇಣಿಗೆ ಶರಣು

    insta

    ಘಟನೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಅವರು, ಈ ಮೂವರು ಸ್ನೇಹಿತರಾಗಿದ್ದು, ಚೆಂಗಲಪಟ್ಟು ಬಳಿಯ ಸಿಂಗಪೆರುಮಾಳ್ ಕೋಯಿಲ್ ಬಳಿಯ ಚೆಟ್ಟಿಪುನಯಂ ಪ್ರದೇಶಕ್ಕೆ ಸೇರಿದವರು. ಪ್ರತಿದಿನವೂ ಈ ಮೂವರು ರೈಲ್ವೇ ನಿಲ್ದಾಣದಲ್ಲಿ ಇಂತಹ ವೀಡಿಯೋಗಳನ್ನು ಚಿತ್ರೀಕರಿಸಿ ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡುತ್ತಿದ್ದರು ಎಂದಿದ್ದಾರೆ. ಇದನ್ನೂ ಓದಿ: 2 ಕೋಟಿ ದರೋಡೆ ಕೇಸ್ – ಪತ್ನಿ ಸಾಲ ತೀರಿಸಲು ಕನ್ನ ಹಾಕಿದ ಇಬ್ಬರು ಪತ್ನಿಯರ ಮುದ್ದಿನ ಗಂಡ

    ಚೆಂಗಲಪಟ್ಟು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಅಪಘಾತಕ್ಕೂ ಮುನ್ನ ಮೂವರು ರೈಲ್ವೆ ಹಳಿ ಬಳಿ ನಿಂತು ಶೂಟ್ ಮಾಡಿದ ಕೆಲವು ವೀಡಿಯೋಗಳನ್ನು ಅಪ್‌ಲೋಡ್ ಮಾಡಿದ್ದಾರೆ ಎಂದು ವರದಿಯಾಗಿದೆ. ಚೆಂಗಲಪಟ್ಟು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟರು.